Tag: ಸೈಕಲ್ ಭಾಗ್ಯ

  • ಇಂದಿನಿಂದ ಶಾಲೆ ಆರಂಭ – ಈ ವರ್ಷವೂ ಮಕ್ಕಳಿಗಿಲ್ಲ ಸೈಕಲ್ ಭಾಗ್ಯ

    ಇಂದಿನಿಂದ ಶಾಲೆ ಆರಂಭ – ಈ ವರ್ಷವೂ ಮಕ್ಕಳಿಗಿಲ್ಲ ಸೈಕಲ್ ಭಾಗ್ಯ

    ಬೆಂಗಳೂರು: ಇಂದಿನಿಂದ 2022-23ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲೆಗಳು ಪ್ರಾರಂಭವಾಗಿದ್ದು, ಈ ಹೊತ್ತಿನಲ್ಲಿಯೇ ಮಕ್ಕಳಿಗೆ ಈ ಬಾರಿ ಸರ್ಕಾರ ಸೈಕಲ್ ಭಾಗ್ಯ ಯೋಜನೆಯನ್ನು ನಿಲ್ಲಿಸಿದೆ ಎನ್ನಲಾಗುತ್ತಿದೆ.

    ಶಾಲೆ ಪ್ರಾರಂಭಕ್ಕೆ ಶಿಕ್ಷಣ ಇಲಾಖೆ ಸಕಲ ಸಿದ್ದತೆ ಮಾಡಿಕೊಂಡಿದ್ದು, ಮೊದಲ 15 ದಿನ ಮಕ್ಕಳಿಗೆ ಆಟದ ಜೊತೆ ಪಾಠವೂ ಇರಲಿದೆ. ಎರಡು ವರ್ಷ ಕೊರೊನಾದಿಂದಾದ ಕಲಿಕಾ ನಷ್ಟವನ್ನು ತುಂಬಲು ಈ ಬಾರಿ 15 ದಿನ ಮುಂಚಿತವಾಗಿ ತರಗತಿಗಳನ್ನು ಪ್ರಾರಂಭ ಮಾಡಲಾಗಿದೆ. ವಿದ್ಯಾರ್ಥಿಗಳನ್ನು ಸ್ವಾಗತಿಸಲು ಶಾಲೆಗಳನ್ನು ತಳಿರು-ತೋರಣಗಳಿಂದ ಅಲಂಕರಿಸಲಾಗಿದೆ. ಇದನ್ನೂ ಓದಿ: ಕಂಗೆಟ್ಟ ಶ್ರೀಲಂಕಾಕ್ಕೆ ಎಲ್‌ಟಿಟಿಇ ದಾಳಿಯ ಭೀತಿ – ಹೈ ಅಲರ್ಟ್

    ಈ ಎಲ್ಲದರ ಮಧ್ಯೆ ಶಾಲೆಗಳ ಆರಂಭವಾಗುತ್ತಿರುವ ಸಂದರ್ಭದಲ್ಲಿಯೇ ವಿದ್ಯಾರ್ಥಿಗಳಿಗೆ ಸರ್ಕಾರ ಶಾಕಿಂಗ್ ನ್ಯೂಸ್ ಕೊಟ್ಟಿದೆ. ಈ ಬಾರಿಯೂ ರಾಜ್ಯದ ಮಕ್ಕಳಿಗೆ ಸೈಕಲ್ ಭಾಗ್ಯ ಇಲ್ಲ. ಸಿಎಂ, ಸಚಿವರ, ಶಾಸಕರ ಸಂಬಳ, ಚರ್ಚೆ ಆಗದ ಅಧಿವೇಶನಕ್ಕೆ ಕೋಟಿ, ಕೋಟಿ ಖರ್ಚು ಮಾಡಿರುವ ಸರ್ಕಾರ, ಬಡ ವಿದ್ಯಾರ್ಥಿಗಳಿಗೆ ಸೈಕಲ್ ನೀಡಲು ಕುಂಟು ನೆಪವನ್ನು ಹೇಳುತ್ತಿದೆ.

    ಬಜೆಟ್‍ನಲ್ಲಿ ಅನುದಾನ ಮೀಸಲಿಡದ ಕಾರಣ 2022-23ನೇ ಸಾಲಿನ ಮಕ್ಕಳಿಗೆ ಸೈಕಲ್ ವಿತರಿಸುತ್ತಿಲ್ಲ. ಆರ್ಥಿಕ ಕೊರತೆಯ ನೆಪವೊಡ್ಡಿ ಸೈಕಲ್ ಯೋಜನೆಗೆ ಸರ್ಕಾರ ಬ್ರೇಕ್ ಹಾಕಿದೆ. ಸೈಕಲ್ ವಿತರಿಸಲು ಕುಂಟು ನೆಪ ಹೇಳುತ್ತಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಥಾಮಸ್ ಕಪ್ ಗೆದ್ದ ಭಾರತ ತಂಡದೊಂದಿಗೆ ಇಡೀ ದೇಶವೇ ಸಂಭ್ರಮಿಸಿದೆ: ಮೋದಿ

    ಈ ಕುರಿತಂತೆ ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು, ಈ ಬಾರಿ ನಾವು ಶಿಕ್ಷಣಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದೇವೆ. ಅಕ್ಟೋಬರ್‌ನಲ್ಲಿ ನೇಮಿಸಲಾಗುವ ಅತಿಥಿ ಶಿಕ್ಷಕರನ್ನು ಈಗಿನಿಂದಲೇ ತೆಗೆದುಕೊಳ್ಳುತ್ತಿದ್ದೇವೆ. ಅದರಲ್ಲೂ ಈ ಬಾರಿ ೧೫,೦೦ ಶಿಕ್ಷಕರನ್ನು ತೆಗೆದುಕೊಳ್ಳಲು ನಿರ್ಧರಿಸಿದ್ದೇವೆ ಎಂದು ತಿಳಿಸಿದ್ದಾರೆ.

  • ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಮತ್ತೆ ಸೈಕಲ್ ಭಾಗ್ಯ: ಸಚಿವ ಸಂಪುಟದಲ್ಲಿ ನಿರ್ಧಾರ

    ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಮತ್ತೆ ಸೈಕಲ್ ಭಾಗ್ಯ: ಸಚಿವ ಸಂಪುಟದಲ್ಲಿ ನಿರ್ಧಾರ

    – ಪೊಲೀಸ್ ಸೇವೆಯಲ್ಲಿ ಮಹಿಳೆಯರ ಪ್ರಮಾಣ ಶೇ 25 ರಷ್ಟು ಏರಿಕೆ ತೀರ್ಮಾನ

    ಬೆಂಗಳೂರು: ಸರ್ಕಾರಿ ಹಾಗೂ ಅನುದಾನಿತ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮತ್ತೆ ಸೈಕಲ್ ಭಾಗ್ಯ ಸಿಕ್ಕಿದ್ದು, ಈ ಮೂಲಕ 5 ಲಕ್ಷ ಶಾಲಾ ಮಕ್ಕಳಿಗೆ ಸೈಕಲ್ ವಿತರಣೆ ಮಾಡಲು ರಾಜ್ಯ ಸರ್ಕಾರ ಸಚಿವ ಸಂಪುಟದಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

    ವಿಧಾನಸೌಧದಲ್ಲಿ ಸಿಎಂ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಇಂದು ಸಂಪುಟ ಸಭೆ ನಡೆಯಿತು. ಈ ವೇಳೆ ಸೈಕಲ್ ವಿತರಣೆ ಸೇರಿದಂತೆ ಅನೇಕ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.

    ಸಂಪುಟ ಸಭೆ ಬಳಿಕ ಮಾತನಾಡಿದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ಯ ಸಚಿವ ಕೃಷ್ಣ ಭೈರೇಗೌಡ ಅವರು, 189 ಕೋಟಿ ರೂ. ವೆಚ್ಚದಲ್ಲಿ 2019-20ನೇ ಸಾಲಿನ 5 ಲಕ್ಷ ಶಾಲಾ ಮಕ್ಕಳಿಗೆ ಸೈಕಲ್ ವಿತರಣೆ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಅಷ್ಟೇ ಅಲ್ಲದೆ ಪೊಲೀಸ್ ಸೇವೆಯಲ್ಲಿ ಮಹಿಳೆಯರ ಪ್ರಮಾಣವನ್ನು ಶೇ 25 ರಷ್ಟು ಏರಿಸಲು ನಿರ್ಧಾರ ಮಾಡಲಾಗಿದೆ. ಅದರಲ್ಲಿ ಶೇ 25 ರಷ್ಟು ಮೀಸಲಾತಿ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

    ಮುಂದಿನ ಐದು ವರ್ಷಗಳಲ್ಲಿ ಹಂತ ಹಂತವಾಗಿ ಶೇ 25 ರಷ್ಟು ನೇಮಕಾತಿ ಮಾಡಲಾಗುವುದು. ನೇರ ನೇಮಕಾತಿ ಅಡಿ ಎಲ್ಲಾ ಹುದ್ದೆ ನೇಮಕಾತಿಗೆ ಸರ್ಕಾರ ತೀರ್ಮಾನಿಸಿದೆ. ಸರೋಜಿನಿ ಮಹಿಷಿ ವರದಿಯನ್ವಯ ಕನ್ನಡಿಗರಿಗೆ ಉದ್ಯೋಗ ನೀಡಲು ಕಾಯ್ದೆ ಮಾಡಲಾಗಿದೆ ಎಂದರು.

    2018ರ ಕರ್ನಾಟಕ ಔದ್ಯೋಗಿಕ ಕೈಗಾರಿಕಾ ಉದ್ಯೋಗಗಳ ನಿಯಮಾವಳಿ ತಿದ್ದುಪಡಿ ವಿಧೇಯಕ ಜಾರಿಗೆ ಅನುಮೋದನೆ ಸಿಕ್ಕಿದೆ. ಸರ್ಕಾರದಿಂದ ಸಹಾಯ, ರಿಯಾಯಿತಿ ಪಡೆಯುವ ಖಾಸಗಿ ಕಾರ್ಖಾನೆಯಲ್ಲಿ ಸಿ ಮತ್ತು ಡಿ ದರ್ಜೆ ಹುದ್ದೆಗಳಲ್ಲಿ ಕನ್ನಡಿಗರಿಗೆ ಆದ್ಯತೆ ಮೇರೆಗೆ ಉದ್ಯೋಗ ನೀಡಬೇಕು ಎನ್ನುವ ನಿರ್ಣಯ ಕೈಗೊಳ್ಳಲಾಗಿದೆ ಎಂದರು.

     

    ಬಳ್ಳಾರಿಯ ವಿಜಯನಗರ ಮೆಡಿಕಲ್ ಸಂಸ್ಥೆಯಲ್ಲಿ ಹಾಸ್ಟೆಲ್ ಮತ್ತು ಸಲಕರಣೆಗೆ 65 ಕೋಟಿ ರೂ. ನೀಡಲು ಸಂಪುಟ ಒಪ್ಪಿಗೆ ನೀಡಿದೆ. ವಿಕಲಚೇತನ ಹಕ್ಕುಗಳ ಕರಡು ಅಧಿನಿಯಮ 2019ರ ಅಡಿ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಶೇ 5 ವಸತಿ ವ್ಯವಸ್ಥೆ, ಶೇ 5 ರಷ್ಟು ಸರ್ಕಾರಿ ಸವಲತ್ತು. ಶೇ 4ರಷ್ಟು ಸರ್ಕಾರಿ ನೇಮಕಾತಿ ಅವಕಾಶ ನೀಡುವ ನಿಯಮಗಳಿಗೆ ಸಂಪುಟ ಒಪ್ಪಿಗೆ ಸೂಚಿಸಿದೆ. ಚಾಮರಾಜನಗರದಲ್ಲಿ ಸರ್ಕಾರಿ ಕಾನೂನು ವಿದ್ಯಾಲಯ ಸ್ಥಾಪನೆಗೆ ಅನುಮತಿ ದೊರಕಿದೆ ಎಂದು ಮಾಹಿತಿ ನೀಡಿದರು.

    ಉನ್ನತ ವ್ಯಾಸಂಗ, ಸಂಶೋಧಕ ವಿದ್ಯಾರ್ಥಿಗಳು ಸರ್ಕಾರದ ಹಲವು ಇಲಾಖೆಗಳಲ್ಲಿ ಇಂಟರ್ನ್‍ಶಿಪ್ ಮಾಡಬಹುದು. ಈ ನಿಟ್ಟಿನಲ್ಲಿ 27 ವಿಷಯಗಳನ್ನು ನಿಗದಿ ಮಾಡಲಾಗಿದೆ. ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಸ್ಥಾಪನೆಗೆ ಅನುಮೋದನೆ. ಬ್ರಾಹ್ಮಣ ಅಭಿವೃದ್ದಿ ಮಂಡಳಿಗೆ 25 ಕೋಟಿ ರೂ.ಅನುದಾನ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.

    ಬಳ್ಳಾರಿ ಅಕ್ರಮ ಗಣಿಗಾರಿಕೆ ಅಕ್ರಮ ಕುರಿತು ಎಸ್‍ಐಟಿ ನಡೆದುತ್ತಿದ್ದ ತನಿಖೆಯ ಅವಧಿಯನ್ನು ಒಂದು ವರ್ಷದ ಮಟ್ಟಿಗೆ ಹೆಚ್ಚುವರಿಯಾಗಿ ವಿಸ್ತರಣೆ ಮಾಡಲಾಗಿದೆ ಎಂದ ಅವರು, ಆಪರೇಷನ್ ಕಮಲ ಆಡಿಯೋ ಸಿಡಿ ಪ್ರಕರಣ ಎಸ್‍ಐಟಿ ತನಿಖೆ ಸಂಬಂಧ ಸಚಿವ ಸಂಪುಟದಲ್ಲಿ ಚರ್ಚೆಯಾಗಿಲ್ಲ. ಸಿಎಂ ಕುಮಾರಸ್ವಾಮಿ ಅವರು ಎಸ್‍ಐಟಿ ತಂಡ ರಚನೆಯ ಪೂರ್ಣಾಧಿಕಾರ ಹೊಂದಿದ್ದಾರೆ. ಇದರಿಂದಾಗಿ ಅದನ್ನು ಸಚಿವ ಸಂಪುಟದ ಗಮನಕ್ಕೆ ತರಲೇಬೇಕು ಎಂಬ ಕಡ್ಡಾಯ ನಿಯಮವೇನಿಲ್ಲ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಯಡಿಯೂರಪ್ಪ ಸರ್ಕಾರದ ಯೋಜನೆ ಕೈ ಬಿಟ್ಟ ಎಚ್‌ಡಿಕೆ..!

    ಯಡಿಯೂರಪ್ಪ ಸರ್ಕಾರದ ಯೋಜನೆ ಕೈ ಬಿಟ್ಟ ಎಚ್‌ಡಿಕೆ..!

    ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸರ್ಕಾರದ ಯೋಜನೆಯನ್ನು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕೈ ಬಿಟ್ಟಿದ್ದಾರೆ.

    ಹೌದು. ಇನ್ಮುಂದೆ ಗ್ರಾಮೀಣ ಭಾಗದ ಮಕ್ಕಳು ಶಾಲೆಗೆ ನಡೆದುಕೊಂಡೇ ಹೋಗ್ಬೇಕು. ಯಾಕಂದ್ರೆ ಶಾಲಾ ಮಕ್ಕಳಿಗೆ ಇನ್ಮುಂದೆ ಸರ್ಕಾರದಿಂದ ಸೈಕಲ್ ಸಿಗಲ್ಲ. ಈ ಮೂಲಕ ಎಚ್ ಡಿಕೆ ಅವರು ಬಿಎಸ್‍ವೈ ಸರ್ಕಾರದ ಒಂದು ಯೋಜನೆಗೆ ಇತಿಶ್ರೀ ಹಾಡಿದ್ದಾರೆ.

    ಸೈಕಲ್ ವಿತರಣೆಯಲ್ಲಿ ಅಕ್ರಮ ನಡೆದಿದೆ. ಹೀಗಾಗಿ ಮಕ್ಕಳಿಗೆ ಸೈಕಲ್ ವಿತರಣೆ ಮಾಡುವುದನ್ನು ನಿಲ್ಲಿಸಿದ್ದೇವೆ. ಅಲ್ಲದೇ ಅಕ್ರಮದ ಕುರಿತು ತನಿಖೆಗೆ ಆದೇಶಿಸಿದ್ದೇನೆ ಅಂತ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಆದ್ರೆ ಇದೀಗ ಯಡಿಯೂರಪ್ಪ ಅವರ ವಿರುದ್ಧ ಕುಮಾರಸ್ವಾಮಿ ಸರ್ಕಾರ ಈ ಮೂಲಕ ದ್ವೇಷ ಸಾಧಿಸುತ್ತಿದ್ದಾರೆ ಅಂತ ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ.

    ಗ್ರಾಮೀಣ ಭಾಗದಲ್ಲಿ ಕಳೆದ 2, 3 ವರ್ಷಗಳಿಂದ ಕಳಪೆ ಗುಣಮಟ್ಟದ ಸೈಕಲ್ ವಿತರಣೆಯಾಗುತ್ತಿದೆ ಅನ್ನೋ ಆರೋಪ ಪ್ರಬಲವಾಗಿ ಕೇಳಿಬಂದಿತ್ತು. ಈ ಕುರಿತಾಗಿ ಮಕ್ಕಳು, ಪೋಷಕರು ಹಾಗೂ ಶಾಲಾ ಮುಖ್ಯ ಶಿಕ್ಷಕರು ಶಿಕ್ಷಣ ಇಲಾಖೆಗೆ ದೂರು ಕೂಡ ನೀಡಿದ್ದರು.

    ಗುತ್ತಿಗೆದಾರರು ಹಾಗೂ ಪೂರೈಕೆದಾರರು ಕಳಪೆ ಮಟ್ಟದ ಸೈಕಲ್ ತಂದುಕೊಡುತ್ತಾರೆ. ಸೈಕಲ್ ತಂದ ಬಳಿಕ ಅದನ್ನು ಮತ್ತೆ ರಿಪೇರಿ ಮಾಡಿಸಬೇಕಿತ್ತು. ಹೀಗಾಗಿ ಈ ಕುರಿತು ವ್ಯಾಪಕವಾಗಿ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ 2 ಸಮಿತಿಗಳನ್ನು ಮಾಡಿ ತನಿಖೆಗೆ ಆದೇಶ ಮಾಡಿದೆ. ಸಮಿತಿಯಲ್ಲಿ ಕೂಡ ಕಳಪೆ ಮಟ್ಟದ ಸೈಕಲ್ ವಿತರಣೆಯಾಗುತ್ತಿರುವ ಆರೋಪ ಸಾಬೀತಾಗಿತ್ತು. ಈ ಹಿನ್ನೆಲೆಯಲ್ಲಿ ಇದೀಗ ರಾಜ್ಯ ಸರ್ಕಾರ ಸೈಕಲ್ ವಿತರಣೆಯನ್ನು ಸ್ಥಗಿತಗೊಳಿಸಿ, ತನಿಖೆಗೆ ಆದೇಶಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv