Tag: ಸೈಕ್ಲೋನ್

  • ರಾಜ್ಯದಲ್ಲಿ ಒಂದ್ಕಡೆ ಸೈಕ್ಲೋನ್, ಮತ್ತೊಂದು ಕಡೆ ಮುಂಗಾರು- ವರುಣನ ಆರ್ಭಟ

    ರಾಜ್ಯದಲ್ಲಿ ಒಂದ್ಕಡೆ ಸೈಕ್ಲೋನ್, ಮತ್ತೊಂದು ಕಡೆ ಮುಂಗಾರು- ವರುಣನ ಆರ್ಭಟ

    ಬೆಂಗಳೂರು: ರಾಜ್ಯದ ಉತ್ತರ ಒಳನಾಡು, ಕರಾವಳಿ ಭಾಗದಲ್ಲಿ 3 ದಿನ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ. ಈಗಾಗಲೇ ಕರಾವಳಿ ಭಾಗದಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ನಿನ್ನೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ವರ್ಷಧಾರೆಯಾಗಿದೆ. ಅರಬ್ಬಿ ಸಮುದ್ರದಲ್ಲಿ ಎದ್ದಿರುವ ನಿಸರ್ಗ ಚಂಡಮಾರುತ ಮತ್ತಷ್ಟು ಆತಂಕ ಸೃಷ್ಟಿಸುತ್ತಾ ಅನ್ನೋ ಆತಂಕ ಮನೆ ಮಾಡಿದೆ.

    ದಾವಣಗೆರೆಯ ಹರಿಹರ ಸೇರಿ ಹಲವೆಡೆ ವರುಣನ ಆರ್ಭಟ ಜೋರಾಗಿತ್ತು. ದಾವಣಗೆರೆಯ ಹೆಮ್ಮನಬೇತೂರು ಗ್ರಾಮದ ರಸ್ತೆಗಳಲ್ಲಿ ನದಿಯಂತೆ ನೀರು ಹರಿಯಿತು. ಕಾರು ಅರ್ಧದಷ್ಟು ಮುಳುಗಿತ್ತು. ಮನೆಗಳಿಗೆ ನೀರು ನುಗ್ಗಿ ವಸ್ತುಗಳೆಲ್ಲಾ ನೀರುಪಾಲಾಯ್ತು. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ವಿವಿಧೆಡೆ ಧಾರಾಕಾರ ಮಳೆಯಾಗಿದೆ. ಮಳೆಯಿಂದ ವಾಹನ ಸವಾರರು ಪರದಾಡಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಮುಂಗಾರು ಬಿತ್ತನೆಗೆ ರೈತರು ಸಜ್ಜಾಗಿದ್ದಾರೆ. ಹುಕ್ಕೇರಿ ತಾಲೂಕಿನ ಸುತಗಟ್ಟಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸುರಿದ ಧಾರಾಕಾರ ಮಳೆಯಿಂದ ರಸ್ತೆಗೆ ನೀರು ನುಗ್ಗಿದ್ದು, ರಸ್ತೆಗಳು ಕೆರೆಯಂತಾಗಿವೆ.

    ಸೋಮವಾರದ ಭಾರೀ ಮಳೆಯಿಂದಾಗಿ ಚಿಕ್ಕೋಡಿಯ ಸುತಗಟ್ಟಿ ಘಾಟ್‍ನಲ್ಲಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿತ್ತು. ರಸ್ತೆಯಲ್ಲಿ ವಾಹನಗಳು ತಗ್ಲಾಕೊಂಡವು. ಒಂದು ಗಂಟೆಗೂ ಕಾಲ ಹೆಚ್ಚು ಸುರಿದ ಮಳೆಯಿಂದ ಪ್ರಯಾಣಿಕರ ಪರದಾಟ ನಡೆಸಿದರು.

    ಬಾಗಲಕೋಟೆ ಜಿಲ್ಲೆ ಬಾದಾಮಿ ಪಟ್ಟಣದಲ್ಲಿ ಗುಡುಗು, ಸಿಡಿಲು ಗಾಳಿ ಸಹಿತ ಭಾರೀ ಮಳೆಯಾಗಿದೆ. ಸತತ ಅರ್ಧಗಂಟೆಯಿಂದ ಸುರಿದ ಮಳೆಯಿಂದಾಗಿ ಅಗಸ್ತ್ಯ ತೀರ್ಥ ಹೊಂಡ ಮೈತುಂಬಿ ನಿಂತಿದೆ. ಅಕ್ಕ ತಂಗಿ ಜಲಪಾತದಲ್ಲಿ ನೀರು ಬೋರ್ಗರೆಯುತ್ತಿದೆ. ಮತ್ತೊಂದೆಡೆ ನವನಗರ ಮೂರ್ನಾಲ್ಕು ಮನೆಗಳಿಗೆ ನೀರು ನುಗ್ಗಿದೆ. ಬೀಳಗಿಯ ಗಾಂಧಿನಗರದಲ್ಲಿ ತೆಂಗಿನ ಮರಕ್ಕೆ ಸಿಡಿಲು ಬಡಿದು ಹೊತ್ತಿ ಉರಿದಿದೆ. ಬೆಳಗಾವಿ, ಹಾವೇರಿ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

  • ಅರಬ್ಬೀ ಸಮುದ್ರದಲ್ಲಿ ಎದ್ದಿದೆ ಕ್ಯಾರ್ ಚಂಡಮಾರುತ – ಮುಂದಿನ 24 ಗಂಟೆಗಳಲ್ಲಿ ಕರಾವಳಿಗೆ ತಟ್ಟಲಿದೆ ಸೈಕ್ಲೋನ್

    ಅರಬ್ಬೀ ಸಮುದ್ರದಲ್ಲಿ ಎದ್ದಿದೆ ಕ್ಯಾರ್ ಚಂಡಮಾರುತ – ಮುಂದಿನ 24 ಗಂಟೆಗಳಲ್ಲಿ ಕರಾವಳಿಗೆ ತಟ್ಟಲಿದೆ ಸೈಕ್ಲೋನ್

    ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಮತ್ತೆ ವಾಯುಭಾರ ಕುಸಿತ ಕಾಣಿಸಿಕೊಂಡಿದ್ದು ಕರಾವಳಿ ಭಾಗಕ್ಕೆ ಚಂಡಮಾರುತ ಅಪ್ಪಳಿಸುವ ಎಚ್ಚರಿಕೆ ನೀಡಲಾಗಿದೆ. ಕರ್ನಾಟಕ ಕರಾವಳಿ, ಗೋವಾ ಮತ್ತು ಮಹಾರಾಷ್ಟ್ರ ಭಾಗದಲ್ಲಿ ತೀವ್ರ ಕಟ್ಟೆಚ್ಚರ ಘೋಷಿಸಲಾಗಿದ್ದು, ಎಲ್ಲ ಬಂದರುಗಳಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿದೆ.

    ಅತ್ತ ಉತ್ತರ ಕರ್ನಾಟಕದ ಜನ ಮಳೆ, ಪ್ರವಾಹದಿಂದ ತತ್ತರಿಸಿರುವಾಗಲೇ ರಾಜ್ಯದ ಕರಾವಳಿ ಭಾಗಕ್ಕೆ ಚಂಡಮಾರುತ ಅಪ್ಪಳಿಸುವ ಎಚ್ಚರಿಕೆ ನೀಡಲಾಗಿದೆ. ಮಹಾರಾಷ್ಟ್ರದ ರತ್ನಗಿರಿಯಿಂದ 360 ಕಿಮೀ ದೂರದ ಅರಬ್ಬೀ ಸಮುದ್ರದ ಮಧ್ಯೆ ತೀವ್ರ ವಾಯುಭಾರ ಕುಸಿತ ಕಾಣಿಸಿಕೊಂಡಿದ್ದು, ಮಾರುತಗಳು ಸುಂಟರಗಾಳಿಯಾಗಿ ಮಾರ್ಪಡುವ ಬಗ್ಗೆ ಮುನ್ಸೂಚನೆ ನೀಡಲಾಗಿದೆ. ಈ ಮಾರುತಗಳು ದಕ್ಷಿಣದಿಂದ ಈಶಾನ್ಯ ಭಾಗ ಎಂದರೆ, ಕರ್ನಾಟಕದ ಕರಾವಳಿ ಮತ್ತು ಗೋವಾ ಭಾಗದತ್ತ ಬರುತ್ತಿದ್ದು, ತೀವ್ರ ಗಾಳಿ ಮತ್ತು ಮಳೆಯೊಂದಿಗೆ ಕರಾವಳಿಗೆ ಅಪ್ಪಳಿಸಲಿದೆ. ಮುಂದಿನ 24 ಗಂಟೆಗಳಲ್ಲಿ ಯಾವುದೇ ಕ್ಷಣದಲ್ಲಿ ಈ ಮಾರುತಗಳ ಹೊಡೆತ ಕರಾವಳಿಗೆ ತಟ್ಟಲಿದೆ ಎನ್ನುವ ಎಚ್ಚರಿಕೆ ನೀಡಲಾಗಿದೆ.

    ಯಾವುದೇ ಕ್ಷಣದಲ್ಲಿ ಮಲಯ ಮಾರುತಗಳು ಸುಂಟರ ಗಾಳಿಯೊಂದಿಗೆ ಕರಾವಳಿ ಭಾಗಕ್ಕೆ ಅಪ್ಪಳಿಸುವ ಸಾಧ್ಯತೆ ಇರುವುದರಿಂದ ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರದ ಎಲ್ಲ ಬಂದರುಗಳಲ್ಲಿ ಕಟ್ಟೆಚ್ಚರಕ್ಕೆ ಸೂಚಿಸಲಾಗಿದೆ. ಜೊತೆಗೆ ಮೀನುಗಾರಿಕೆ ಮತ್ತು ಹಡಗುಗಳ ಸಂಚಾರವನ್ನೂ ನಿರ್ಬಂಧಿಸಲಾಗಿದೆ. ಜೊತೆಗೆ ಕಡಲಿನ ಅಲೆಗಳು 3ರಿಂದ 4 ಮೀಟರ್ ಎತ್ತರಕ್ಕೆ ತೀರಕ್ಕೆ ಅಪ್ಪಳಿಸುವ ಸಾಧ್ಯತೆಯಿದ್ದು, ಯಾರು ಕಡಲಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ. ಕರ್ನಾಟಕ, ಗೋವಾ ಪ್ರದೇಶದಲ್ಲಿ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಬಿರುಗಾಳಿ ಕಾಣಿಸಿಕೊಳ್ಳುವ ಬಗ್ಗೆಯೂ ಮುನ್ನೆಚ್ಚರಿಕೆ ನೀಡಲಾಗಿದೆ.

    ಈಗಾಗಲೇ ಕರಾವಳಿ ಜಿಲ್ಲೆಗಳು ಸೇರಿದಂತೆ ಮಲೆನಾಡು ಭಾಗದಲ್ಲಿ ಮಳೆಯಾಗುತ್ತಿದ್ದು, ಮುಂದಿನ 24 ಗಂಟೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆಯಿದೆ. ಹೀಗಾಗಿ ಆಯಾ ಭಾಗದ ಜಿಲ್ಲಾಡಳಿತಗಳು ತೀವ್ರ ಕಟ್ಟೆಚ್ಚರ ವಹಿಸುವಂತೆ ರಾಜ್ಯ ಹವಾಮಾನ ಇಲಾಖೆ ಮತ್ತು ವಿಪತ್ತು ನಿರ್ವಹಣಾ ತಂಡವು ಸೂಚನೆ ನೀಡಿದೆ.

  • ಕರಾವಳಿ ಭಾಗದಲ್ಲಿ ಭರ್ಜರಿ ಮಳೆ – ತುಂಬಿ ಹರಿದ ನೇತ್ರಾವತಿಯಿಂದ ಧರ್ಮಸ್ಥಳಕ್ಕೆ ಕಳೆ

    ಕರಾವಳಿ ಭಾಗದಲ್ಲಿ ಭರ್ಜರಿ ಮಳೆ – ತುಂಬಿ ಹರಿದ ನೇತ್ರಾವತಿಯಿಂದ ಧರ್ಮಸ್ಥಳಕ್ಕೆ ಕಳೆ

    ಬೆಂಗಳೂರು: ರಾಜ್ಯಕ್ಕೆ ಅಧಿಕೃತವಾಗಿ ಇನ್ನೂ ಮುಂಗಾರು ಪ್ರವೇಶ ಮಾಡದಿದ್ದರೂ ಕರಾವಳಿಯಲ್ಲಿ ಮಳೆ ಅಬ್ಬರಿಸುತ್ತಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಹೀಗಾಗಿ ನೀರಿಲ್ಲದೆ ಬತ್ತಿಹೋಗಿದ್ದ ನೇತ್ರಾವತಿ ನದಿಯಲ್ಲಿ ಮತ್ತೆ ನೀರು ತುಂಬಿದೆ.

    ರಾಜ್ಯದ ಕರಾವಳಿಯಲ್ಲಿ ಸದ್ಯಕ್ಕೆ ಉತ್ತಮ ಮಳೆಯಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಮಡಿಕೇರಿ ಭಾಗದಲ್ಲಿ ನೀರಿನ ಮೂಲಗಳು ಭರ್ತಿಯಾಗಿವೆ. ನೇತ್ರಾವತಿ ನದಿ ಜೀವ ಪಡೆದಿದ್ದು, ಧರ್ಮಸ್ಥಳದ ಸ್ನಾನಘಟ್ಟಕ್ಕೆ ನೀರು ಬಂದಿದೆ.

    ಮಡಿಕೇರಿಯಲ್ಲೂ ಮಳೆ ಆಗುತ್ತಿದೆ. ಪಶ್ಚಿಮ ಘಟ್ಟಗಳ ವ್ಯಾಪ್ತಿಯಲ್ಲಿ ಭಾರೀ ಮಳೆ ಆಗುತ್ತಿರುವುದರಿಂದ ಚಾರ್ಮಾಡಿ ಘಾಟ್‍ನಲ್ಲಿ ಮತ್ತೆ ಗುಡ್ಡ ಕುಸಿತದ ಭೀತಿ ಎದುರಾಗಿದೆ. ಪ್ರಬಲ ಶಕ್ತಿಯೊಂದಿಗೆ ಗುಜರಾತ್‍ಗೆ ಅಪ್ಪಳಿಸಲಿದೆ ಎಂದು ಮುನ್ಸೂಚನೆ ನೀಡಿದ ವಾಯು ಸೈಕ್ಲೋನ್ ಕೊನೆಗೂ ಯಾವುದೇ ಸದ್ದಿಲ್ಲದೇ ಗುಜರಾತ್‍ನಿಂದ ಒಮನ್‍ನತ್ತ ಸಾಗಿದೆ.

    ಆದರೂ, ಗುಜರಾತ್‍ನಲ್ಲಿ ಮುಂದಿನ 24 ಗಂಟೆ ಅಲರ್ಟ್ ಘೋಷಿಸಲಾಗಿದೆ. ಸೌರಾಷ್ಟ್ರ, ಕಚ್‍ನ ಕಡಲ ತೀರಪ್ರದೇಶಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ದಕ್ಷಿಣ ಗೋವಾದಲ್ಲಿ ಅಚಾನಕ್ಕಾಗಿ ಬಂಡೆಯಿಂದ ಜಾರಿ ಸಮುದ್ರದಲ್ಲಿ ಪಾಲಾಗುತ್ತಿದ್ದ ಸೇನಾ ಸಿಬ್ಬಂದಿಯನ್ನು ಕೋಸ್ಟಲ್ ಗಾರ್ಡ್ ಹೆಲಿಕಾಪ್ಟರ್‍ನಿಂದ ರಕ್ಷಣೆ ಮಾಡಲಾಗಿದೆ.

  • ರಾಜ್ಯಕ್ಕೆ ಮುಂಗಾರು ಮಳೆ ಎಂಟ್ರಿಗೆ ಚಂಡಮಾರುತ ಅಡ್ಡಿ

    ರಾಜ್ಯಕ್ಕೆ ಮುಂಗಾರು ಮಳೆ ಎಂಟ್ರಿಗೆ ಚಂಡಮಾರುತ ಅಡ್ಡಿ

    ಬೆಂಗಳೂರು: ಕೇರಳಕ್ಕೆ ಮುಂಗಾರು ಎಂಟ್ರಿಯಾದ ಒಂದೆರಡು ದಿನದ ಬಳಿಕವಾದ್ರೂ ರಾಜ್ಯಕ್ಕೆ ಮುಂಗಾರು ಆಗಮನವಾಗಬೇಕಾಗಿತ್ತು. ಆದರೆ ಅರೇಬಿಯನ್ ಸಮುದ್ರದಲ್ಲಿ ಚಂಡಮಾರುತ ಸೃಷ್ಟಿಯಿಂದಾಗಿ ಮುಂಗಾರು ವಿಳಂಬವಾಗುತ್ತಿದೆ.

    ರಾಜ್ಯಕ್ಕೆ ಮುಂಗಾರು ಕಾಲಿಡಲು ಸತಾಯಿಸುತ್ತಿದೆ ಎಂದು ಹವಾಮಾನ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಇನ್ನು 12ರಂದು ಅಂದರೆ ಬುಧವಾರ ಮುಂಗಾರು ಎಂಟ್ರಿಯಾಗಬಹುದು ಎನ್ನುವ ನಿರೀಕ್ಷೆಯಿದೆ. ಇಂದು ಮುಂಗಾರು ರಾಜ್ಯಕ್ಕೆ ಪ್ರವೇಶ ಯಾವಾಗ ಆಗಬಹುದು ಅನ್ನುವ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಮಾಹಿತಿ ಕೊಡುವ ಸಾಧ್ಯತೆ ಇದೆ. ರೈತರು ಕಣ್ಣುಬಾಯಿ ಬಿಟ್ಟು ಮುಂಗಾರಿಗೆ ಕಾಯುತ್ತಿದ್ದು ಬಾಯರಿದ ಡ್ಯಾಂಗಳು ಕೂಡ ವರುಣಾನಗಮನಕ್ಕೆ ಕಾದು ಕೂತಿದೆ.

    ಇತ್ತ ಮುಂಬೈನಲ್ಲಿ ಮಳೆ ಆರ್ಭಟ ಮುಂದುವರಿದಿದ್ದು ರೈಲು ಸಂಚಾರ, ವಿಮಾನಯಾನ, ಸಾರಿಗೆ ವ್ಯವಸ್ಥೆ ಅಸ್ತವ್ಯಸ್ತಗೊಂಡಿದೆ ಭಾರೀ ಮಳೆಯಿಂದಾಗಿ ಮುಂಬೈನಲ್ಲಿ ಇಳಿಯಬೇಕಾಗಿದ್ದ 11 ವಿಮಾನಗಳನ್ನು ಬೇರೆ ವಿಮಾನ ನಿಲ್ದಾಣಗಳಲ್ಲಿ ಇಳಿಸಲಾಗಿದೆ. ಅಲ್ಲದೇ ಕೆಲವು ವಿಮಾನಯಾನ ಸಂಚಾರವನ್ನು ರದ್ದು ಮಾಡಲಾಗಿದೆ. ಇದರ ಮಧ್ಯೆ ಉತ್ತರ ಭಾರತ ಸೇರಿ ದೆಹಲಿಯಲ್ಲಿ ಬಿಸಿಲಿನ ತಾಪ ಹೆಚ್ಚಿದೆ. ದೆಹಲಿಯಲ್ಲಿ ಬಿಸಿಲಿನ ತಾಪ 48 ಡಿಗ್ರಿ ಸೆಲ್ಸಿಯಸ್ ತಲುಪಿದೆ.

  • ಸೈಕ್ಲೋನ್ ಶಾಕ್ – ತಿಂಗಳ ಅಂತ್ಯಕ್ಕೆ ರಾಜ್ಯಕ್ಕೆ ಅಪ್ಪಳಿಸಲಿದೆ ಚಂಡಮಾರುತ

    ಸೈಕ್ಲೋನ್ ಶಾಕ್ – ತಿಂಗಳ ಅಂತ್ಯಕ್ಕೆ ರಾಜ್ಯಕ್ಕೆ ಅಪ್ಪಳಿಸಲಿದೆ ಚಂಡಮಾರುತ

    ಬೆಂಗಳೂರು: ಏಪ್ರಿಲ್ ತಿಂಗಳ ಅಂತ್ಯಕ್ಕೆ ರಾಜ್ಯಕ್ಕೆ ಚಂಡಮಾರುತದ ಎಫೆಕ್ಟ್ ಭಾರೀ ಮಳೆಯ ಎಚ್ಚರಿಕೆಯನ್ನು ಪ್ರಾಕೃತಿಕ ವಿಕೋಪ ನಿರ್ವಹಣಾ ಕೇಂದ್ರ ನೀಡಿದೆ.

    ರಾಜ್ಯದಲ್ಲಿ ಅದರಲ್ಲೂ ಬೆಂಗಳೂರಿಗೆ ಮಹಾ ಮಳೆಗೆ ಮಹೂರ್ತ ಫಿಕ್ಸ್ ಆಗಿದೆ. ಏಪ್ರಿಲ್ 30 ರಿಂದ ಮೂರು ದಿನಗಳ ಕಾಲ ಸತತ ಮಳೆ ಆಗಲಿದೆ ಎಂದು ಹೇಳಲಾಗುತ್ತಿದೆ. ಬೆಂಗಳೂರು, ಮೈಸೂರು, ಮಂಡ್ಯ, ತುಮಕೂರು, ಮಲೆನಾಡು ಭಾಗದಲ್ಲಿ ಸೈಕ್ಲೋನ್ ಎಫೆಕ್ಟ್ ನಿಂದ ಭಾರೀ ಮಳೆ ಬರುವ ಸಾಧ್ಯತೆ ಇದೆ. ಇನ್ನು ಚೆನ್ನೈ ತಮಿಳುನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ ಸೃಷ್ಟಿಯಾಗಿದ್ದು ಆತಂಕಕ್ಕೆ ಕಾರಣವಾಗಿದೆ.

    ಈ ಬಗ್ಗೆ ಮಾತನಾಡಿದ ಪ್ರಾಕೃತಿಕ ವಿಕೋಪ ನಿರ್ವಹಣಾ ಕೇಂದ್ರ ಅಧ್ಯಕ್ಷ, ಶ್ರೀನಿವಾಸ್ ಅವರು, ಬಂಗಾಳಕೊಲ್ಲಿಯ ಎಂಡ್‍ನಲ್ಲಿ ಅಂದರೆ ಶ್ರೀಲಂಕಾ ಮೇಲೆ ಟ್ರಫ್ (ಮೋಡಗಳ ಸಾಲು) ನಿರ್ಮಾಣವಾಗಿದೆ. ಈ ಟ್ರಫ್ ಮುಂದಿನ ಎರಡು ದಿನದಲ್ಲಿ ಸೈಕ್ಲೋನ್ ಆಗುವ ಸಾಧ್ಯತೆ ಇದೆ ಎಂಬ ಮುನ್ಸೂಚನೆ ಇದೆ. ಅರಬ್ಬಿ ಸಮುದ್ರದಲ್ಲಿ ಒಂದು ಟ್ರಫ್ ಇದೆ. ಈ ಟ್ರಫ್ ಮಹಾರಾಷ್ಟ್ರದವರೆಗೂ ಇದೆ. ಇಲ್ಲಿ ಸೈಕ್ಲೋನ್ ಶುರುವಾದಾಗ ಟ್ರಫ್ ಕೂಡ ಆಕ್ಟೀವ್ ಆಗುತ್ತದೆ. ಆಗ ಮಲೆನಾಡಿನಲ್ಲಿ ಹೆಚ್ಚು ಮಳೆ ಆಗುವ ಸಾಧ್ಯತೆ ಇದೆ. ಈ ಟ್ರಫ್ ಅರಬ್ಬಿ ಸಮುದ್ರಕ್ಕೆ ಹೊಂದಿಕೊಂಡ ಭಾಗದಲ್ಲಿ ಹೆಚ್ಚಿನ ಮಳೆ ಬರುವ ಸಾಧ್ಯತೆ ಇದೆ. ಏ. 30 ಹಾಗೂ ಮೇ 1ರಂದು ಬೆಂಗಳೂರಿನಲ್ಲಿ ಮಳೆ ಆಗುವ ಸಾಧ್ಯತೆ ಇದೆ.