Tag: ಸೈದಾಬಾದ್

  • 6 ವರ್ಷದ ಬಾಲಕಿಯನ್ನು ರೇಪ್‍ಗೈದ ಆರೋಪಿ ರೈಲ್ವೇ ಹಳಿಯಲ್ಲಿ ಶವವಾಗಿ ಪತ್ತೆ

    6 ವರ್ಷದ ಬಾಲಕಿಯನ್ನು ರೇಪ್‍ಗೈದ ಆರೋಪಿ ರೈಲ್ವೇ ಹಳಿಯಲ್ಲಿ ಶವವಾಗಿ ಪತ್ತೆ

    ಹೈದರಾಬಾದ್: 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿದ್ದ ವ್ಯಕ್ತಿಯೋರ್ವ ರೈಲ್ವೇ ಹಳಿ ಮೇಲೆ ಶವವಾಗಿ ಪತ್ತೆಯಾಗಿದ್ದಾನೆ.

    ಸೈದಾಬಾದ್‍ನಲ್ಲಿ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಆಕೆಯನ್ನು ಕೊಲೆ ಮಾಡಿದ್ದ ಬಗ್ಗೆ ತೆಲಂಗಾಣ ಮತ್ತು ಆಂಧ್ರ ಪ್ರದೇಶದ ಸೇರಿದಂತೆ ದೇಶಾದ್ಯಂತ ಸುದ್ದಿ ಮಾಡಿತ್ತು. ಬಳಿಕ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ನಿರತರಾಗಿದ್ದರು. ಆದರೆ ಇದೀಗ ಈ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಪಲ್ಲಂಕೊಂಡ ರಾಜು ಎಂಬಾತ ಶವವಾಗಿ ರೈಲ್ವೇ ಹಳಿ ಮೇಲೆ ಪತ್ತೆಯಾಗಿದ್ದಾನೆ. ಇದನ್ನೂ ಓದಿ: ಮಹಿಳಾ ಅಧಿಕಾರಿಗಳು ಅನ್ನೋದೆ ಕೆಲವರಿಗೆ ಅಡ್ವಾಂಟೇಜ್ : ಸಾ.ರಾ ಮಹೇಶ್

    ಸೈದಾಬಾದ್‍ನಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಆರೋಪಿ ಪಲ್ಲಂಕೊಂಡ ರಾಜು ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಉನ್ನತ ಮೂಲಗಳಿಂದ ತಿಳಿದುಬಂದಿದ್ದು, ರೈಲಿಗೆ ತಲೆಕೊಟ್ಟು ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ. ಆತನ ಕೈ ಮತ್ತು ಶರೀರದ ಮೇಲಿದ್ದ ಹಚ್ಚೆಯ ಆಧಾರದ ಮೇಲೆ ಆತ ರಾಜು ಎಂದು ಗುರುತಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಬೆಲೆ ಏರಿಕೆ ಅನಿವಾರ್ಯ, ಖಜಾನೆ ತುಂಬಲು ಬೆಲೆ ಹೆಚ್ಚಳ ಮಾಡಲೇಬೇಕಾಗುತ್ತೆ: ಎಚ್‍ಡಿಕೆ

    ಹೈದರಾಬಾದ್‍ನ ಸಮೀಪದ ಸೈದಾಬಾದ್‍ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಆಕೆಯನ್ನು ಭೀಕರವಾಗಿ ಹತ್ಯೆ ಮಾಡಿದ್ದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿ ಬಾಲಕಿಯನ್ನು ಕೊಲೆಗೈದು ಆ ಬಳಿಕ ಕಾಣೆಯಾಗಿದ್ದ. ಪೊಲೀಸರು ಆತನ ಪತ್ತೆಗಾಗಿ ಹುಡುಕಾಟದಲ್ಲಿದ್ದರು ಆದರೂ ಆತನ ಪತ್ತೆ ಸಾಧ್ಯವಾಗಿರಲಿಲ್ಲ. ಪೊಲೀಸರು ಈತನ ಸುಳಿವು ನೀಡಿದವರಿಗೆ 10 ಲಕ್ಷ ರೂಪಾಯಿ ಬಹುಮಾನವನ್ನೂ ಘೋಷಿಸಿದ್ದರು. ಅದಲ್ಲದೆ ತೆಲಂಗಾಣ ಗೃಹ ಸಚಿವರು ಆರೋಪಿಯನ್ನು ಎನ್‍ಕೌಂಟರ್ ಮಾಡುವುದಾಗಿ ಎಚ್ಚರಿಕೆ ನೀಡಿದ್ದರು. ಆದರೆ ಇದೀಗ ಆರೋಪಿ ಶವವಾಗಿ ಪತ್ತೆಯಾಗಿದ್ದಾನೆ.