ಖ್ಯಾತ ನಿರ್ದೇಶಕ ಪ್ರಿಯದರ್ಶನ್ ಹೊಸ ಸಿನಿಮಾದಲ್ಲಿ ಅಕ್ಷಯ್ ಕುಮಾರ್ ಮತ್ತು ಸೈಫ್ ಜೊತೆಯಾಗಿ ನಟಿಸುತ್ತಿದ್ದಾರೆ. ವಿಭಿನ್ನ ಕಥಾಹಂದರ ಹೊಂದಿರುವ ಥ್ರಿಲ್ಲರ್ ಚಿತ್ರವೊಂದಕ್ಕೆ ನಟಿಸಲು ಇಬ್ಬರೂ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಈ ಚಿತ್ರ ಮುಂದಿನ ವರ್ಷ ರಿಲೀಸ್ ಆಗಲಿದೆ. ಇದನ್ನೂ ಓದಿ:‘ಕಾಲನಾಗಿಣಿ’ ಚಿತ್ರದ ಪೋಸ್ಟರ್ ರಿಲೀಸ್ ಮಾಡಿದ ಅಶ್ವಿನಿ ಪುನೀತ್ ರಾಜ್‌ಕುಮಾರ್
17 ವರ್ಷಗಳ ಹಿಂದೆ ‘ತಶನ್’ ಚಿತ್ರದಲ್ಲಿ (Tashan) ಅಕ್ಷಯ್ ಕುಮಾರ್ ಹಾಗೂ ಸೈಫ್ ಅಲಿ ಖಾನ್ ಜೊತೆಯಾಗಿ ನಟಿಸಿದ್ದರು. ಈ ಚಿತ್ರದಲ್ಲಿ ಕರೀನಾ ಕಪೂರ್, ಅನಿಲ್ ಕಪೂರ್ ಕೂಡ ಬಣ್ಣ ಹಚ್ಚಿದ್ದರು. ವಿಜಯ್ ಕೃಷ್ಣ ಆಚಾರ್ಯ ನಿರ್ದೇಶನ ಹಾಗೂ ಆದಿತ್ಯಾ ಚೋಪ್ರಾ ನಿರ್ಮಾಣ ಮಾಡಿದ್ದರು.
ಬಾಲಿವುಡ್‌ನಲ್ಲಿ ಈಗಾಗಲೇ ಬಯೋಪಿಕ್‌ಗಳ ಹಾವಳಿ ಹೆಚ್ಚಾಗಿದೆ. ಇದೀಗ ದೇಶದ ಮೊದಲ ಚುನಾವಣಾ ಆಯುಕ್ತರಾಗಿ ಕಾರ್ಯ ನಿರ್ವಹಿಸಿದ ಸುಕುಮಾರ್ ಸೇನ್ (Sukumar Sen) ಅವರ ಜೀವನ ಚರಿತ್ರೆ ಸಿನಿಮಾ ರೂಪದಲ್ಲಿ ಬರಲಿದೆ. ಈ ಚಿತ್ರದಲ್ಲಿ ಸೈಫ್ ಅಲಿ ಖಾನ್ (Saif Ali Khan) ಪ್ರಮುಖ ಪಾತ್ರದಲ್ಲಿ ಅವರು ಕಾಣಿಸಿಕೊಳ್ತಿದ್ದಾರೆ. ಇದನ್ನೂ ಓದಿ:ಮುಂದಿನ ಜನ್ಮದಲ್ಲಿ ಪ್ರಭಾಸ್ ನನ್ನ ಮಗನಾಗಬೇಕು: ಹಿರಿಯ ನಟಿ ಜರೀನಾ ವಹಾಬ್
ಬಾಲಿವುಡ್ ನಟ ಸೈಫ್ ಅಲಿ ಖಾನ್ (Saif Ali Khan) ಮೇಲೆ ಜ.16ರಂದು ಮಾರಣಾಂತಿಕ ದಾಳಿ ನಡೆದಿತ್ತು. ಈ ಹಿನ್ನೆಲೆ ಇದೀಗ ಕರೀನಾ ಕಪೂರ್ (Kareena Kapoor) ದಂಪತಿ ದಿಟ್ಟ ನಿರ್ಧಾರವೊಂದನ್ನು ಕೈಗೊಂಡಿದ್ದಾರೆ. ಮಕ್ಕಳ ಫೋಟೋ ಕ್ಲಿಕ್ಕಿಸದಂತೆ ಪಾಪರಾಜಿಗಳಿಗೆ ಮನವಿ ಮಾಡಿದ್ದಾರೆ. ಇದನ್ನೂ ಓದಿ:ಯಶ್ ನನ್ನ ಗೆಳೆಯ – ದುಬೈ ಅಭಿಮಾನಿಗಳ ಮುಂದೆ ಶಾರುಖ್ ಖಾನ್ ಮಾತು
ನಿನ್ನೆ (ಜ.28) ಸುದ್ದಿಗೋಷ್ಠಿಯಲ್ಲಿ ಸೈಫ್ ಹಾಗೂ ಕರೀನಾ ಮಾತನಾಡಿ, ಮಕ್ಕಳಾದ ಜೆಹ್ ಹಾಗೂ ತೈಮೂರ್ ಫೋಟೋ ಮಾತ್ರವಲ್ಲ. ಜೊತೆಗೆ ಕುಟುಂಬಸ್ಥರ ಫೋಟೋಗಳನ್ನು ಕ್ಲಿಕಿಸಬೇಡಿ ಎಂದು ಪಾಪರಾಜಿಗಳಿಗೆ ಹೇಳಿದ್ದಾರೆ. ಇನ್ನೂ ಕುಟುಂಬಕ್ಕೆ ಹೆಚ್ಚಿನ ಭದ್ರತೆ ಹಿನ್ನೆಲೆ ಈ ದಿಟ್ಟ ನಿರ್ಧಾರವನ್ನು ಸೈಫ್ ದಂಪತಿ ಕೈಗೊಂಡಿದ್ದಾರೆ.
ಇದೀಗ ಚಿಕಿತ್ಸೆಯ ಬಳಿಕ ಸೈಫ್ ಅಲಿ ಖಾನ್ ಅವರು ಚೇತರಿಸಿಕೊಂಡಿದ್ದಾರೆ. ಚಾಕು ಇರಿತದ ಪ್ರಕರಣ ನಂತರ ನಟನ ಮನೆಗೆ ಹೆಚ್ಚಿನ ಭದ್ರತೆ ನೀಡಲಾಗಿದೆ.
ಮುಂಬೈ: ಸೈಫ್ ಅಲಿ ಖಾನ್ (Saif Ali Khan) ಮೇಲೆ ಚಾಕು ಇರಿತ ದಾಳಿ ನಡೆದಿದ್ದು ನಿಜವೇ ಅಥವಾ 54 ವರ್ಷದ ನಟನ ನಟನೆಯೇ ಅಂತ ಬಿಜೆಪಿ ಮಹಾರಾಷ್ಟ್ರದ ಮೀನುಗಾರಿಕೆ ಸಚಿವರೂ ಆಗಿರುವ ಬಿಜೆಪಿ ನಾಯಕ ನಿತೇಶ್ ರಾಣೆ (Nitesh Rane) ಪ್ರಶ್ನೆ ಮಾಡಿದ್ದಾರೆ.
ಚಾಕು ಇರಿತದಿಂದ (stabbed) ಚೇತರಿಸಿಕೊಂಡು 5 ದಿನಗಳ ಬಳಿಕ ಆಸ್ಪತ್ರೆಯಿಂದ ಮನೆಗೆ ವಾಪಾಸ್ಸಾಗಿರುವ ಬಾಲಿವುಡ್ ನಟ ಸೈಫ್ ಅಲಿ ಖಾನ್ ವಿರುದ್ಧ ರಾಣೆ ವಾಗ್ದಾಳಿ ನಡೆಸಿದ್ದಾರೆ. ಪುಣೆಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ನಿತೇಶ್ ರಾಣೆ, ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲಿನ ದಾಳಿಯನ್ನು ಪ್ರಶ್ನಿಸಿದ್ದಾರೆ. ಸೈಫ್ ಅಲಿ ಖಾನ್ ಮೇಲಿನ ದಾಳಿ ನಿಜವೇ ಅಥವಾ 54 ವರ್ಷದ ನಟನ ʻಕೇವಲ ನಟನೆಯೇʼ ಎಂದು ಪ್ರಶ್ನೆ ಮಾಡಿದ್ದಾರೆ.
ಮುಂದುವರಿದು, ಶಾರುಖ್ ಖಾನ್, ಸೈಫ್ ಅಲಿ ಖಾನ್ ಅವರಂತಹ ‘ಖಾನ್’ಗಳು ಗಾಯಗೊಂಡಾಗ ಎಲ್ಲರೂ ಅದರ ಬಗ್ಗೆ ಮಾತನಾಡಲು ಪ್ರಾರಂಭಿಸುತ್ತಾರೆ. ಸುಶಾಂತ್ ಸಿಂಗ್ ರಜಪೂತ್ ಅವರಂತಹ ಹಿಂದೂ ನಟ ಚಿತ್ರಹಿಂಸೆಗೊಳಗಾದಾಗ ಯಾರೂ ಏನನ್ನೂ ಹೇಳಲು ಮುಂದೆ ಬರುವುದಿಲ್ಲ ಎಂದು ಕಿಡಿಕಾರಿದ್ದಾರೆ.
ಹಿಂದೂ ಕಲಾವಿದರ ಬಗ್ಗೆ ಆ ಮುಂಬ್ರಾದ ಜೀತುದ್ದೀನ್ (ಜಿತೇಂದ್ರ ಅವ್ವಾದ್), ಬಾರಾಮತಿಯ ತಾಯಿ (ಸುಪ್ರಿಯಾ ಸುಳೆ) ಎಂದಾದರೂ ಚಿಂತಿಸುವುದನ್ನು ನೋಡಿದ್ದೀರಾ? ಅವರಿಗೆ ಸೈಫ್ ಅಲಿ ಖಾನ್, ಶಾರುಖ್ ಖಾನ್ ಮಗ ಮತ್ತು ನವಾಬ್ ಮಲಿಕ್ ಬಗ್ಗೆ ಮಾತ್ರ ಚಿಂತೆಯಿದೆ. ಈ ಎಲ್ಲಾ ವಿಷಯಗಳ ಬಗ್ಗೆ ಹಿಂದೂಗಳು ಗಮನಹರಿಸಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ಸಾರ್ವಜನಿಕವಾಗಿ ಹಸು ಕೊಂದು ಅಡುಗೆ ಮಾಡಿದ ವೀಡಿಯೋ ಹರಿಬಿಟ್ರು – ಅಸ್ಸಾಂನಲ್ಲಿ 6 ಮಂದಿ ಬಂಧನ
ಸೈಫ್ ಅಲಿಖಾನ್ ಮನೆಗೆ ನುಗ್ಗಿದ ವ್ಯಕ್ತಿಯನ್ನು ಬಾಂಗ್ಲಾದೇಶಿ ಮೂಲದವನು ಎಂದು ಗುರುತಿಸಲಾಗಿದೆ. ಈ ಮೊದಲು ಬಾಂಗ್ಲಾದೇಶಿಗಳು ಮುಂಬೈ ಬಂದರಿನಲ್ಲಿ ತಂಗುತ್ತಿದ್ದರು. ಈಗ ಪರಿಸ್ಥಿತಿ ನೋಡಿ… ಮನೆಗಳಿಗೇ ನುಗ್ಗಲು ಪ್ರಾರಂಭಿಸಿದ್ದಾರೆ. ಬಹುಶಃ ಆ ಸಮಯದಲ್ಲಿ ನಟನನ್ನು ಕರೆದುಕೊಂಡು ಹೋಗಲು ಬಂದಿರಬಹುದು ಎಂದೂ ಹೇಳಿದ್ದಾರೆ.
ನಟ ಸೈಫ್ ಅಲಿ ಖಾನ್ (Saif Ali Khan) ಮೇಲೆ ಹಲ್ಲೆ ಆಗಿದ್ದ ಸಂದರ್ಭದಲ್ಲಿ ಸರಿಯಾದ ಸಮಯಕ್ಕೆ ಜೀವ ಉಳಿಸಿದ ಆಟೋ ಚಾಲಕನಿಗೆ ಧನ್ಯವಾದ ತಿಳಿಸಿದ್ದಾರೆ. ಆಟೋ ಚಾಲಕ ಮತ್ತು ಸೈಫ್ ಭೇಟಿಯ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಇದನ್ನೂ ಓದಿ:ಹಸಿರು ಡ್ರೆಸ್ ಧರಿಸಿ ಪೋಸ್ ಕೊಟ್ಟ ದರ್ಶನ್ ಪತ್ನಿ
ನಿನ್ನೆ (ಜ.21) ಲೀಲಾವತಿ ಆಸ್ಪತ್ರೆಯಿಂದ ಡಿಸ್ಚಾಜ್ ಆಗುವ ಮುನ್ನ ಆಟೋ ಚಾಲಕ ಭಜನ್ ಸಿಂಗ್‌ರನ್ನು ಸೈಫ್ ಭೇಟಿಯಾಗಿ ಥ್ಯಾಂಕ್ಯೂ ಹೇಳಿದ್ದಾರೆ. ಗಾಯಗೊಂಡಿದ್ದ ತಮ್ಮನ್ನು ಆಸ್ಪತ್ರೆಗೆ ಸೇರಿಸಿದ ಆಟೋ ಚಾಲಕನನ್ನು (Auto Driver) ಕರೆಸಿ ಧನ್ಯವಾದ ತಿಳಿಸಿದ್ದಲ್ಲದೇ, ಮುಂದೆ ನಿಮಗೆ ಏನೇ ಸಹಾಯ ಬೇಕೆಂದರು ತಮ್ಮನ್ನು ಸಂಪರ್ಕಿಸುವಂತೆ ಸೈಫ್ ತಿಳಿಸಿದ್ದಾರಂತೆ.
ಅಂದಹಾಗೆ, ಜ.16ರ ಬೆಳಗಿನ ಜಾವ ಸೈಫ್ ಅಲಿ ಖಾನ್ ಮೇಲೆ ಚಾಕುವಿನಿಂದ ದಾಳಿ ನಡೆಸಲಾಗಿತ್ತು. ಮನೆಯಲ್ಲಿ ಯಾವುದೇ ಕಾರ್ ಲಭ್ಯವಿರದ ಕಾರಣ, ಗಾಯಗೊಂಡಿದ್ದ ನಟನನ್ನು ಆಟೋ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ, ಆಟೋ ಚಾಲಕ ಯಾವುದೇ ಶುಲ್ಕ ಪಡೆಯದೇ ಹಿಂದಿರುಗಿದ್ದರು.
ಇನ್ನೂ 6 ದಿನಗಳ ಬಳಿಕ ಜ.21ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವ ಸೈಫ್ ಅಲಿ ಖಾನ್ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಅವರ ಮನೆಗೆ ಹೆಚ್ಚಿನ ಭದ್ರತೆ ನೀಡಲಾಗಿದೆ.
ಭೋಪಾಲ್: ಬಾಲಿವುಡ್ ನಟ ಸೈಫ್ ಅಲಿ ಖಾನ್ (Saif Ali Khan) ಅವರ ಪಟೌಡಿ ಕುಟುಂಬಕ್ಕೆ ಸೇರಿದ 15 ಸಾವಿರ ಕೋಟಿ ರೂ. ಮೌಲ್ಯದ ಆಸ್ತಿಗಳು ಶೀಘ್ರವೇ ಕೇಂದ್ರ ಸರ್ಕಾರದ ನಿಯಂತ್ರಣಕ್ಕೆ ಬರುವ ಸಾಧ್ಯತೆ ಹೆಚ್ಚಾಗಿದೆ.
ಈ ಆಸ್ತಿಗಳ ಮೇಲೆ 2015 ರಲ್ಲಿ ವಿಧಿಸಲಾಗಿದ್ದ ತಡೆಯಾಜ್ಞೆಯನ್ನು ಮಧ್ಯಪ್ರದೇಶ ಹೈಕೋರ್ಟ್ (Madhya Pradesh High Court) ತೆಗೆದುಹಾಕಿದೆ. ಇದರಿಂದಾಗಿ 1968ರ ಶತ್ರು ಆಸ್ತಿ ಕಾಯ್ದೆಯ ಅಡಿಯಲ್ಲಿ ಅವುಗಳನ್ನು ಸ್ವಾಧೀನಪಡಿಸಿಕೊಳ್ಳಲು ದಾರಿ ಮಾಡಿಕೊಟ್ಟಿದೆ.
ಈ ಪ್ರಕರಣದ ವಿಚಾರಣೆ ನಡೆಸಿದ್ದ ಕೋರ್ಟ್ ಡಿ. 13 ರಂದು, 2017ರ ತಿದ್ದುಪಡಿ ಮಾಡಿದ ಶತ್ರು ಆಸ್ತಿ ಕಾಯ್ದೆ (Enemy Property Act) ಅಡಿ ಶಾಸನಬದ್ಧ ಪರಿಹಾರವಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 30 ದಿನಗಳ ಪ್ರಾತಿನಿಧ್ಯ ಸಲ್ಲಿಸಬೇಕೆಂದು ಪಟೌಡಿ ಕುಟುಂಬಕ್ಕೆ ಸೂಚಿಸಿತ್ತು. ಇಂದಿನಿಂದ ಈ ಆದೇಶಕ್ಕೆ ಸಂಬಂಧಿಸಿಂತೆ 30 ದಿನಗಳ ಒಳಗಡೆ ಮೇಲ್ಮನವಿ ಸಲ್ಲಿಸದೇ ಇದ್ದರೆ ಕೋರ್ಟ್ ಆದೇಶ ಪ್ರಕಟಿಸುವುದಿಲ್ಲ. ಒಂದು ವೇಳೆ ಸಲ್ಲಸದೇ ಇದ್ದರೆ ಕೋರ್ಟ್ ತತನ್ನದೇ ಆದ ಆರ್ಹತೆಯ ಆಧಾರದ ಮೇಲೆ ಮೇಲ್ಮನವಿಯನ್ನು ಪರಿಗಣಿಸುತ್ತದೆ ಎಂದು ಹೇಳಿತ್ತು. ಇಲ್ಲಿಯವರೆಗೆ ಪಟೌಡಿ ಕುಟುಂಬಸ್ಥರು ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರಾ ಇಲ್ಲವೋ ತಿಳಿದು ಬಂದಿಲ್ಲ. ಇದನ್ನೂ ಓದಿ: ಸುದೀಪ್ ಇಲ್ಲದೇ ಬಿಗ್ ಬಾಸ್ ಊಹಿಸಿಕೊಳ್ಳೋಕೆ ಸಾಧ್ಯವಿಲ್ಲ: ಧನರಾಜ್ ಆಚಾರ್
ಭೋಪಾಲ್ ಜಿಲ್ಲಾಧಿಕಾರಿ ಕೌಶಲೇಂದ್ರ ವಿಕ್ರಮ್ ಸಿಂಗ್ ಅವರು ಈ ವಿಷಯದ ಬಗ್ಗೆ ಹೈಕೋರ್ಟ್ ಆದೇಶ ಸ್ಪಷ್ಟವಾದ ನಂತರವೇ ಯಾವುದೇ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಏನಿದು ಪ್ರಕರಣ?
ಮುಂಬೈ ಮೂಲದ ಎನಿಮಿ ಪ್ರಾಪರ್ಟಿ ಕಸ್ಟೋಡಿಯನ್ ಕಚೇರಿ ಭೋಪಾಲ್‌ನ ನವಾಬನನ್ನು ಸರ್ಕಾರಿ ಆಸ್ತಿ ಎಂದು ಘೋಷಿಸಿದ ನಂತರ ಮಧ್ಯಪ್ರದೇಶ ಹೈಕೋರ್ಟ್ 2015 ರಲ್ಲಿ ಪ್ರಕರಣದ ವಿಚಾರಣೆಯನ್ನು ಪ್ರಾರಂಭಿಸಿತ್ತು.
ಭೋಪಾಲ್‌ನ ಮಾಜಿ ನವಾಬರಿಗೆ ಸೇರಿದ್ದ, ನಟ, ಈಗಿನ ನವಾಬ ಸೈಫ್ ಅಲಿ ಖಾನ್ ಅವರಿಗೆ ಸೇರಿದ ಆಸ್ತಿಯನ್ನೂ 2015ರಲ್ಲಿ ‘ಶತ್ರುವಿನ ಸೊತ್ತು’ಗಳ ಪಟ್ಟಿಗೆ ಸೇರಿಸಲಾಗಿದೆ. ಸರ್ಕಾರ ಈ ಧೋರಣೆಯನ್ನು ಪ್ರಶ್ನಿಸಿ ಸೈಫ್ ಅಲಿ ಖಾನ್ ಅವರು 2015ರಲ್ಲಿ ಕೋರ್ಟ್ ಮೆಟ್ಟಿಲೇರಿದ್ದರು. ಇಲ್ಲಿಯವರೆಗೆ ಆಸ್ತಿ ವಶಪಡಿಸಲು ಕೋರ್ಟ್ ತಡೆಯಾಜ್ಞೆ ನೀಡಿತ್ತು.
ಪಟ್ಟಿಗೆ ಸೇರ್ಪಡೆಯಾಗಿದ್ದು ಯಾಕೆ?
ಭಾರತ ಸ್ವಾತಂತ್ರ್ಯ ಪಡೆಯುವಾಗ 1947 ರಲ್ಲಿ ಭೋಪಾಲ್ ರಾಜಪ್ರಭುತ್ವದ ರಾಜ್ಯವಾಗಿತ್ತು ಮತ್ತು ನವಾಬ್ ಹಮೀದುಲ್ಲಾ ಖಾನ್ ಅದರ ಕೊನೆಯ ನವಾಬ್ ಆಗಿದ್ದರು. ನವಾಬ್ ಹಮೀದುಲ್ಲಾ ಖಾನ್ ಅವರಿಗೆ ಮೂವರು ಹೆಣ್ಣು ಮಕ್ಕಳಿದ್ದರು ಅವರಲ್ಲಿ ಅಬಿದಾ ಸುಲ್ತಾನ್ 1950 ರಲ್ಲಿ ಪಾಕಿಸ್ತಾನಕ್ಕೆ (Pakistan) ವಲಸೆ ಹೋಗಿದ್ದರು.
1960ರ ದಶಕದವರೆಗೂ ಬದುಕಿದ್ದ ಹಮೀದುಲ್ಲಾ ಅವರು ತಮ್ಮ ಇನ್ನೊಬ್ಬ ಪುತ್ರಿ, ಮನ್ಸೂರ್ ಅಲಿ ಖಾನ್ ಪಟೌಡಿ ಅವರ ತಾಯಿ ಸಜೀದಾ ಸುಲ್ತಾನಾ ಅವರನ್ನು ತಮ್ಮ ಆಸ್ತಿಯ ಉತ್ತರಾಧಿಕಾರಿ ಎಂದು ಘೋಷಿಸಿದ್ದರು. ಸಾಜಿದಾ ಸುಲ್ತಾನ್ ಭಾರತದಲ್ಲಿಯೇ ಇದ್ದು ಇಫ್ತಿಕರ್ ಅಲಿ ಖಾನ್ ಪಟೌಡಿ( ಸೈಫ್ ಅಲಿಖಾನ್ ಅವರ ಅಜ್ಜ, ಮನ್ಸೂರ್ ಅಲಿಖಾನ್ ಅವರ ತಂದೆ) ಅವರನ್ನು ವಿವಾಹವಾದರು. ನ್ಯಾಯಾಲಯವು ಸಾಜಿದಾ ಸುಲ್ತಾನ್ ಅವರನ್ನು ಕಾನೂನುಬದ್ಧ ಉತ್ತರಾಧಿಕಾರಿಯಾಗಿ ಗುರುತಿಸಿತ್ತು ಮತ್ತು ಸೈಫ್ ಅಲಿ ಖಾನ್ ಆಸ್ತಿಯಲ್ಲಿ ಪಾಲನ್ನು ಪಡೆದರು.
2016ರಲ್ಲಿ ಈ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ. ಹೊಸ ಕಾಯ್ದೆಯಲ್ಲಿ ಭಾರತೀಯ ಪ್ರಜೆಗೆ ಅನ್ವಯವಾಗುವುದಿಲ್ಲ ಎಂಬ ಸಾಲುಗಳನ್ನು ತೆಗೆದುಹಾಕಲಾಗಿದೆ. ಅಷ್ಟೇ ಅಲ್ಲದೇ ಕಾಯ್ದೆಯನ್ನು ಪೂರ್ವಾನ್ವಯವಾಗುವಂತೆ ಜಾರಿ ಮಾಡಲಾಗಿದೆ. ಆದ್ದರಿಂದ ಹಿಂದೆ ಇಂಥ ಆಸ್ತಿಗಳು ಮಾರಾಟವಾಗಿದ್ದರೆ ಆ ಎಲ್ಲಾ ವ್ಯವಹಾರಗಳು ರದ್ದಾಗುತ್ತವೆ. ಕಾಯ್ದೆಯ ತಿದ್ದುಪಡಿಯ ಬಳಿಕ ಸರ್ಕಾರವು ಪಟೌಡಿ ಹಸ್ತಾಂತರವನ್ನೂ ರದ್ದುಪಡಿಸಿ, ಅವರ ಆಸ್ತಿಯನ್ನು ‘ಶತ್ರುವಿನ ಸೊತ್ತು’ ಎಂದು ಹೇಳಿತ್ತು. ಈ ಪ್ರಕರಣದಲ್ಲಿ ಅಬಿದಾ ಸುಲ್ತಾನ್ ಅವರು ಪಾಕಿಸ್ತಾನಕ್ಕೆ ವಲಸೆ ಹೋಗಿದ್ದರಿಂದ ಸರ್ಕಾರ ಪಟೌಡಿ ಆಸ್ತಿ ʼಶತ್ರು ಆಸ್ತಿʼ ಎಂದು ದೃಢೀಕರಿಸಲು ಸಾಧ್ಯವಾಯಿತು.
ಈ ಪ್ರಕರಣದಲ್ಲಿ ಕಕ್ಷಿದಾರರಾಗಿ ಸೈಫ್ ಅಲಿ ಖಾನ್, ಅವರ ತಾಯಿ ಶರ್ಮಿಳಾ ಟ್ಯಾಗೋರ್, ಸಹೋದರಿಯರಾದ ಸೋಹಾ ಅಲಿ ಖಾನ್ ಮತ್ತು ಸಬಾ ಅಲಿ ಖಾನ್ ಮತ್ತು ಮನ್ಸೂರ್ ಅಲಿ ಖಾನ್ ಪಟೌಡಿ ಅವರ ಸಹೋದರಿ ಸಬಿಹಾ ಸುಲ್ತಾನ್, ಮತ್ತು ಕೇಂದ್ರ ಸರ್ಕಾರ ಇತರರು ಇದ್ದಾರೆ.
ಸೈಫ್ ಅಲಿ ಖಾನ್ ತಮ್ಮ ಬಾಲ್ಯವನ್ನು ಕಳೆದ ಫ್ಲ್ಯಾಗ್ ಸ್ಟಾಫ್ ಹೌಸ್, ನೂರ್-ಉಸ್-ಸಬಾ ಅರಮನೆ, ದಾರ್-ಉಸ್-ಸಲಾಮ್, ಹಬೀಬಿಯ ಬಂಗಲೆ, ಅಹಮದಾಬಾದ್ ಅರಮನೆ, ಕೊಹೆಫಿಜಾ ಆಸ್ತಿ ಪರಿಶೀಲನೆಯಲ್ಲಿರುವ ಪ್ರಮುಖ ಆಸ್ತಿಗಳಾಗಿವೆ.
ಪಾಕಿಸ್ತಾನದಲ್ಲೂ ಭಾರತೀಯ ಪ್ರಜೆಗಳಿಗೆ ಸೇರಿದ್ದ ಆಸ್ತಿ ಇತ್ತು. ಅಲ್ಲಿನ ಸರ್ಕಾರವು ಈಗಾಗಲೇ ಅವುಗಳನ್ನು ವಿಲೇವಾರಿ ಮಾಡಿ ಸರ್ಕಾರ ವಶಕ್ಕೆ ಪಡೆದಿದೆ.
ಬಾಲಿವುಡ್ (Bollywood) ನಟ ಸೈಫ್ ಅಲಿ ಖಾನ್ (Saif Ali Khan) ಅವರು ಚಾಕು ಇರಿತದಿಂದ ಇದೀಗ ಚೇತರಿಸಿಕೊಂಡಿದ್ದಾರೆ. ಇದೀಗ 6 ದಿನಗಳ ಬಳಿಕ ಮುಂಬೈನ ಲೀಲಾವತಿ ಆಸ್ಪತ್ರೆಯಿಂದ ಇಂದು (ಜ.21) ಸೈಫ್ ಡಿಸ್ಚಾರ್ಜ್ ಆಗಿ ಮನೆ ತಲುಪಿದ್ದಾರೆ. ಇದನ್ನೂ ಓದಿ:ನಟ ದರ್ಶನ್ ಗನ್ ಸೀಜ್ ಮಾಡಿದ ಪೊಲೀಸರು
ಜ.16ರಂದು ಸೈಫ್ ಅಲಿ ಖಾನ್ ಚಾಕು ಇರಿದ ಘಟನೆ ಜರುಗಿತ್ತು. ದಾಳಿಕೋರನೊಬ್ಬ ಚಾಕುವಿನಿಂದ ಚುಚ್ಚಿದ ಹಿನ್ನೆಲೆ ಕುತ್ತಿಗೆ, ಕೈ ಸೇರಿ 6 ಕಡೆ ಗಂಭೀರ ಗಾಯಗಳಾಗಿತ್ತು. 2 ಶಸ್ತ್ರಚಿಕಿತ್ಸೆಯ ಬಳಿಕ ಇದೀಗ ಸೈಫ್ ಚೇತರಿಸಿಕೊಂಡಿದ್ದಾರೆ. 6 ದಿನಗಳ ನಂತರ, ಇಂದು (ಜ.21) ಮಧ್ಯಾಹ್ನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ನಟನಿಗೆ ಮನೆಯಲ್ಲಿ ವಿಶ್ರಾಂತಿ ಪಡೆಯಲು ವೈದ್ಯರು ಸೂಚಿಸಿದ್ದಾರೆ. ನಟ ಮನೆಗೆ ತಲುಪಿದ್ದು, ಅವರ ನಿವಾಸದ ಸುತ್ತಲೂ ಹೆಚ್ಚಿನ ಭದ್ರತೆ ನೀಡಲಾಗಿದೆ.
ಇನ್ನೂ ಸೈಫ್ ಅಲಿ ಖಾನ್ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾದ ಆರೋಪಿಯನ್ನು ಜ.19ರಂದು ಮುಂಬೈ ಕೋರ್ಟ್ 5 ದಿನ ಪೊಲೀಸ್ ಕಸ್ಟಡಿಗೆ ನೀಡಿದೆ.
ಮುಂಬೈ: ಸೈಫ್ ಅಲಿಖಾನ್ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾದ ಆರೋಪಿಯನ್ನು ಮುಂಬೈ ಕೋರ್ಟ್ 5 ದಿನ ಪೊಲೀಸ್ ಕಸ್ಟಡಿಗೆ ನೀಡಿದೆ.
ವಿಚಾರಣೆ ಸಂದರ್ಭದಲ್ಲಿ ಈ ಕೃತ್ಯದ ಹಿಂದೆ ಅಂತಾರಾಷ್ಟ್ರೀಯ ಪಿತೂರಿ ಶಂಕೆಯನ್ನು ತಳ್ಳಿಹಾಕುವಂತಿಲ್ಲ ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದಾರೆ.
ಸೈಫ್ ಅಲಿಖಾನ್ ಮನೆಯಲ್ಲಿ ನಡೆದ ಕಳ್ಳತನ (Theft) ಯತ್ನಕ್ಕೆ ಸಂಬಂಧಿಸಿದಂತೆ ಆರೋಪಿ ಮೊಹಮ್ಮದ್ ಸರಿಫುಲ್ ಇಸ್ಲಾಂ ಶೆಹಜಾದ್‌ನನ್ನು (Mohammad Sariful Islam Shehzad) ಥಾಣೆಯಲ್ಲಿ ಬಂಧಿಸಲಾಗಿತ್ತು.
ಈ ಆರೋಪಿ ಬಾಂಗ್ಲಾದೇಶದವನಾಗಿರಬಹುದು ಎಂದು ತನಿಖೆಯಿಂದ ತಿಳಿದುಬಂದಿದೆ. ಅವನ ಬಳಿ ಯಾವುದೇ ಭಾರತೀಯ ದಾಖಲೆಗಳಿಲ್ಲ. ಅವನು ಬಾಂಗ್ಲಾದೇಶದವನೆಂದು ನಾವು ಶಂಕಿಸಿದ್ದೇವೆ, ನಾವು ತನಿಖೆ ನಡೆಸುತ್ತಿದ್ದೇವೆ ಮತ್ತು ಅವನ ವಿರುದ್ಧದ ಪ್ರಕರಣಕ್ಕೆ ಪಾಸ್‌ಪೋರ್ಟ್ ಕಾಯ್ದೆಯ ಆರೋಪಗಳನ್ನು ಸೇರಿಸಿದ್ದೇವೆ ಎಂದು ಡಿಸಿಪಿ ದೀಕ್ಷಿತ್ ಗೆಡಮ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದರು.
ಆರೋಪಿ ಬಾಂಗ್ಲಾದೇಶದವನೆಂದು ಸೂಚಿಸುವ ಕೆಲವು ವಸ್ತುಗಳನ್ನು ಆತನಿಂದ ವಶಪಡಿಸಿಕೊಂಡಿದ್ದೇವೆ. ಅವನು ಭಾರತಕ್ಕೆ ಅಕ್ರಮವಾಗಿ ಬಂದು ತನ್ನ ಹೆಸರನ್ನು ಬಿಜೋಯ್ ದಾಸ್ ಎಂದು ಬದಲಾಯಿಸಿಕೊಂಡಿದ್ದಾನೆ. ಸುಮಾರು ನಾಲ್ಕು ತಿಂಗಳಿನಿಂದ ಮುಂಬೈ ಸುತ್ತಮುತ್ತಲ ಪ್ರದೇಶದಲ್ಲಿ ವಾಸಿಸುತ್ತಿದ್ದ. ನಂತರ ಮನೆಗೆಲಸದ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ. ಮೊದಲ ಬಾರಿಗೆ ಸೈಫ್ ನಿವಾಸ ಪ್ರವೇಶಿಸಿದ್ದಾನೆ. ದರೋಡೆ ಮಾಡುವ ಉದ್ದೇಶದಿಂದಲೇ ಆತ ಮನೆಗೆ ಪ್ರವೇಶಿಸಿದ್ದ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ಕಸ್ಟಡಿಗೆ ಪಡೆಯಲಾಗುವುದು. ನಂತರ ಹೆಚ್ಚಿನ ತನಿಖೆ ನಡೆಯಲಿದೆ ಎಂದು ಹೇಳಿದರು.
ಮೊಹಮ್ಮದ್ ಸರಿಫುಲ್ ಇಸ್ಲಾಂ ಶೆಹಜಾದ್ ವಿಜಯ್ ದಾಸ್, ಬಿಜೋಯ್ ದಾಸ್ ಮತ್ತು ಮೊಹಮ್ಮದ್ ಇಲಿಯಾಸ್ ಸೇರಿದಂತೆ ಹಲವು ಹೆಸರುಳನ್ನು ಇಟ್ಟುಕೊಂಡು ಓಡಾಡುತ್ತಿದ್ದ.
ಮುಂಬೈ: ನಟ ಸೈಫ್ ಅಲಿ ಖಾನ್ (Saif Ali Khan) ಅವರ ಮುಂಬೈ ಮನೆಗೆ ನುಗ್ಗಿ ನಟನಿಗೆ ಆರು ಬಾರಿ ಇರಿದ ಹಲ್ಲೆಕೋರನನ್ನು ಬಂಧಿಸಲಾಗಿದ್ದು, ಆತ 5-6 ತಿಂಗಳ ಹಿಂದೆ ಬಾಂಗ್ಲಾದೇಶದಿಂದ (Bangladesh) ಅಕ್ರಮವಾಗಿ ಭಾರತಕ್ಕೆ ಬಂದಿದ್ದಾನೆ ಎಂದು ಮುಂಬೈ ಪೊಲೀಸರು (Mumbai Police) ಹೇಳಿದ್ದಾರೆ.
ಇಂದು ಬೆಳಿಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಪಿ ದೀಕ್ಷಿತ್ ಗೆಡಮ್, ಸೈಫ್ ಅಲಿಖಾನ್ ಮನೆಯಲ್ಲಿ ನಡೆದ ಕಳ್ಳತನ (Theft) ಯತ್ನಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಥಾಣೆಯಲ್ಲಿ ಬಂಧಿಸಲಾಗಿದೆ. ಆರೋಪಿಯನ್ನು ಮೊಹಮ್ಮದ್ ಸರಿಫುಲ್ ಇಸ್ಲಾಂ ಶೆಹಜಾದ್ (Mohammad Sariful Islam Shehzad) ಎಂದು ಗುರುತಿಸಲಾಗಿದೆ ಎಂದರು.
#WATCH | Saif Ali Khan Attack case | Mumbai: DCP Zone 9 Dixit Gedam says, “There is primary evidence to anticipate that the accused is a Bangladeshi. He does not have valid Indian documents. There are some seizures that indicate that he is a Bangladeshi national…As of now, we… pic.twitter.com/aV22IhKF30
ಈ ಆರೋಪಿ ಬಾಂಗ್ಲಾದೇಶದವನಾಗಿರಬಹುದು ಎಂದು ತನಿಖೆಯಿಂದ ತಿಳಿದುಬಂದಿದೆ. ಅವನ ಬಳಿ ಯಾವುದೇ ಭಾರತೀಯ ದಾಖಲೆಗಳಿಲ್ಲ. ಅವನು ಬಾಂಗ್ಲಾದೇಶದವನೆಂದು ನಾವು ಶಂಕಿಸಿದ್ದೇವೆ, ನಾವು ತನಿಖೆ ನಡೆಸುತ್ತಿದ್ದೇವೆ ಮತ್ತು ಅವನ ವಿರುದ್ಧದ ಪ್ರಕರಣಕ್ಕೆ ಪಾಸ್‌ಪೋರ್ಟ್ ಕಾಯ್ದೆಯ ಆರೋಪಗಳನ್ನು ಸೇರಿಸಿದ್ದೇವೆ ಎಂದು ತಿಳಿಸಿದರು.
ಆರೋಪಿ ಬಾಂಗ್ಲಾದೇಶದವನೆಂದು ಸೂಚಿಸುವ ಕೆಲವು ವಸ್ತುಗಳನ್ನು ಆತನಿಂದ ವಶಪಡಿಸಿಕೊಂಡಿದ್ದೇವೆ. ಅವನು ಭಾರತಕ್ಕೆ ಅಕ್ರಮವಾಗಿ ಬಂದು ತನ್ನ ಹೆಸರನ್ನು ಬಿಜೋಯ್ ದಾಸ್ ಎಂದು ಬದಲಾಯಿಸಿಕೊಂಡಿದ್ದಾನೆ. ಸುಮಾರು ನಾಲ್ಕು ತಿಂಗಳಿನಿಂದ ಮುಂಬೈ ಸುತ್ತಮುತ್ತಲ ಪ್ರದೇಶದಲ್ಲಿ ವಾಸಿಸುತ್ತಿದ್ದ. ನಂತರ ಮನೆಗೆಲಸದ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ. ಮೊದಲ ಬಾರಿಗೆ ಸೈಫ್ ನಿವಾಸ ಪ್ರವೇಶಿಸಿದ್ದಾನೆ. ದರೋಡೆ ಮಾಡುವ ಉದ್ದೇಶದಿಂದಲೇ ಆತ ಮನೆಗೆ ಪ್ರವೇಶಿಸಿದ್ದ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ಕಸ್ಟಡಿಗೆ ಪಡೆಯಲಾಗುವುದು. ನಂತರ ಹೆಚ್ಚಿನ ತನಿಖೆ ನಡೆಯಲಿದೆ ಎಂದು ಹೇಳಿದರು.
ಮೊಹಮ್ಮದ್ ಸರಿಫುಲ್ ಇಸ್ಲಾಂ ಶೆಹಜಾದ್ ವಿಜಯ್ ದಾಸ್, ಬಿಜೋಯ್ ದಾಸ್ ಮತ್ತು ಮೊಹಮ್ಮದ್ ಇಲಿಯಾಸ್ ಸೇರಿದಂತೆ ಹಲವು ಹೆಸರುಳನ್ನು ಇಟ್ಟುಕೊಂಡು ಓಡಾಡುತ್ತಿದ್ದ.
ಮುಂಬೈ: ನಟ ಸೈಫ್ ಅಲಿ ಖಾನ್‌ಗೆ (Saif Ali Khan) ಚಾಕು ಇರಿದಿದ್ದ ಆರೋಪಿಯನ್ನು ಮಹಾರಾಷ್ಟ್ರದ (Maharashtra) ಥಾಣೆಯಲ್ಲಿ (Thane) ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿಯನ್ನು ಮೊಹಮ್ಮದ್ ಸರಿಫುಲ್ ಇಸ್ಲಾಂ ಶೆಹಜಾದ್ ಎಂದು ಗುರುತಿಸಲಾಗಿದೆ. ಆತನನ್ನು ಸೈಫ್ ನಿವಾಸದಿಂದ ಸುಮಾರು 35 ಕಿಲೋಮೀಟರ್ ದೂರದಲ್ಲಿರುವ ಕಾಸರ್ವಾಡವಲಿಯ ಹಿರಾನಂದಾನಿ ಎಸ್ಟೇಟ್ ಬಳಿ ಬಂಧಿಸಲಾಗಿದೆ. ದುಷ್ಕರ್ಮಿ ಥಾಣೆಯ ಬಾರ್‌ನಲ್ಲಿ ಕೆಲಸ ಮಾಡುತ್ತಿದ್ದ. ಪೊಲೀಸರಿಗೆ ಸಿಕ್ಕಿಬೀಳುವ ಭಯದಿಂದ ಆತ ತನ್ನ ಹೆಸರನ್ನು ವಿಜಯ್ ದಾಸ್ ಎಂದು ಹೇಳಿಕೊಂಡಿದ್ದ ಎಂದು ಮೂಲಗಳು ತಿಳಿಸಿವೆ.
ಗುರುವಾರ ಮುಂಜಾನೆ ಬಾಂದ್ರಾದಲ್ಲಿರುವ ಸೈಫ್ ಅಲಿ ಖಾನ್ ಅವರ ಮನೆಗೆ ನುಗ್ಗಿ ಆರೋಪಿ ದಾಳಿ ನಡೆಸಿದ್ದ. ಆರು ಬಾರಿ ಇರಿತಕ್ಕೊಳಗಾಗಿದ್ದ ಸೈಫ್ ಅವರನ್ನು ಆಟೋರಿಕ್ಷಾದಲ್ಲಿ ನಗರದ ಲೀಲಾವತಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಬಳಿಕ ಅಲ್ಲಿ ಅವರಿಗೆ ತುರ್ತು ಶಸ್ತ್ರಚಿಕಿತ್ಸೆ ನೀಡಿ, ಐದು ಗಂಟೆಗಳ ಕಾಲ ನಡೆದ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಬಳಿಕ ಅವರ ಬೆನ್ನುಮೂಳೆಯಿಂದ 2.5 ಇಂಚಿನ ಚಾಕುವಿನ ತುಂಡನ್ನು ತೆಗೆಯಲಾಗಿತ್ತು.
ಸೈಫ್ ಅಲಿ ಖಾನ್ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ತಿಳಿಸಿದ್ದಾರೆ. ಇನ್ನೂ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಆಕಾಶ್ ಕೈಲಾಶ್ ಕನ್ನೋಜಿಯಾ ಎಂಬ ಶಂಕಿತನನ್ನು ಛತ್ತೀಸ್‌ಗಢದ ದುರ್ಗ್ ರೈಲು ನಿಲ್ದಾಣದಲ್ಲಿ ಬಂಧಿಸಲಾಗಿತ್ತು.