Tag: ಸೈರಸ್ ಮಿಸ್ತ್ರಿ

  • ಸೈರಸ್ ಮಿಸ್ತ್ರಿ ಕಾರು ಅಪಘಾತ – ಜೊತೆಗೆ ಸಂಚರಿಸುತ್ತಿದ್ದ ಡಾ.ಅನಾಹಿತಾ ಪಾಂಡೋಲೆ ವಿರುದ್ಧ ಕೇಸ್ ದಾಖಲು

    ಸೈರಸ್ ಮಿಸ್ತ್ರಿ ಕಾರು ಅಪಘಾತ – ಜೊತೆಗೆ ಸಂಚರಿಸುತ್ತಿದ್ದ ಡಾ.ಅನಾಹಿತಾ ಪಾಂಡೋಲೆ ವಿರುದ್ಧ ಕೇಸ್ ದಾಖಲು

    ಮುಂಬೈ: ಟಾಟಾ ಸನ್ಸ್‌ನ (Tata Sons) ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ (Cyrus Mistry) ಸಂಚರಿಸುತ್ತಿದ್ದ ಕಾರು ಅಪಘಾತವಾಗಿ ಸಾವನ್ನಪ್ಪಿದ ಎರಡು ತಿಂಗಳ ನಂತರ, ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಪೊಲೀಸರು ಶನಿವಾರ ಕಾರು ಚಲಾಯಿಸುತ್ತಿದ್ದ ಡಾ.ಅನಾಹಿತಾ ಪಾಂಡೋಲೆ (Dr Anahita Pandole) ವಿರುದ್ಧ ನಿರ್ಲಕ್ಷ್ಯದ ಚಾಲನೆ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    2022ರ ಸೆಪ್ಟೆಂಬರ್ 4 ರಂದು ಗುಜರಾತ್‍ನಿಂದ ಮುಂಬೈಗೆ ತೆರಳುತ್ತಿದ್ದಾಗ ಪಾಲ್ಘರ್‌ನ ಚರೋತಿಯ ಸೂರ್ಯ ನದಿ ಸೇತುವೆ ಮೇಲೆ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಸೈರಸ್ ಮಿಸ್ತ್ರಿ ಸಂಚರಿಸುತ್ತಿದ್ದ ಮರ್ಸಿಡಿಸ್ (Mercedes-Benz)  ಕಾರು ಅಪಘಾತವಾಗಿತ್ತು. ಅಪಘಾತದಲ್ಲಿ ಸೈರಸ್ ಮಿಸ್ತ್ರಿ ಸೇರಿ ಇಬ್ಬರು ಮೃತಪಟ್ಟಿದ್ದರು. ಕಾರಿನಲ್ಲಿದ್ದ ಮತ್ತಿಬ್ಬರು ಅನಾಹಿತಾ ಪಾಂಡೋಲೆ (55) ಹಾಗೂ ಅವರ ಪತಿ ಡೇರಿಯಸ್ ಪಾಂಡೋಲೆ (60) ಗಾಯಗೊಂಡಿದ್ದರು. ಇದನ್ನೂ ಓದಿ: ನ್ಯಾಯಮೂರ್ತಿಗಳ ನಿವೃತ್ತಿ ವಯಸ್ಸು ಹೆಚ್ಚಿಸುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ – ಸಚಿವ ಕಿರಣ್ ರಿಜಿಜು

    ಇದೀಗ ಪೊಲೀಸರು ಕಾರು ಚಲಾಯಿಸುತ್ತಿದ್ದ ಅನಾಹಿತಾ ಪಾಂಡೋಲೆ ವಿರುದ್ಧ ಮೋಟಾರು ವಾಹನ ಕಾಯಿದೆ ಭಾರತೀಯ ದಂಡ ಸಂಹಿತೆ 304(ಎ) (ನಿರ್ಲಕ್ಷ್ಯದ ಕೃತ್ಯದಿಂದ ಸಾವಿಗೆ ಕಾರಣ), 279 (ಅತಿವೇಗದ ಚಾಲನೆ), 337 (ಇತರರ ಜೀವ ಮತ್ತು ವೈಯಕ್ತಿಕ ಸುರಕ್ಷತೆಗೆ ಅಪಾಯ ತಂದೊಡ್ಡಿದ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಾರು ಚಲಾಯಿಸುತ್ತಿದ್ದ ಮುಂಬೈನ ಸ್ತ್ರೀರೋಗ ತಜ್ಞೆ ಅನಾಹಿತಾ ಪಾಂಡೋಲೆ ಹಾಗೂ ಅವರ ಪಕ್ಕದಲ್ಲಿ ಕುಳಿತಿದ್ದ ಪತಿ ಡೇರಿಯಸ್ ಪಾಂಡೋಲೆ ಗಂಭೀರವಾಗಿ ಗಾಯಗೊಂಡಿದ್ದರು. ಆ ಬಳಿಕ ಮುಂಬೈನಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಇದೀಗ ಪೊಲೀಸರು ಅನಾಹಿತಾ ಪಾಂಡೋಲೆ ಮತ್ತು ಡೇರಿಯಸ್ ಪಾಂಡೋಲೆ ಹೇಳಿಕೆಯನ್ನು ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಸೈರಸ್ ಮಿಸ್ತ್ರಿ ಕಾರು ಅಪಘಾತಕ್ಕೂ 5 ಸೆಕೆಂಡ್ ಮುನ್ನ ಬ್ರೇಕ್ ಹಾಕಲಾಗಿದೆ: ಮರ್ಸಿಡಿಸ್ ಕಂಪನಿ

    Live Tv
    [brid partner=56869869 player=32851 video=960834 autoplay=true]

  • ಸೈರಸ್‌ ಮಿಸ್ತ್ರಿ ಸಾವು ಪ್ರಕರಣ – ಅಪಘಾತಕ್ಕೀಡಾದ ಕಾರು ಪರಿಶೀಲಿಸಲು ಹಾಂಗ್‌ ಕಾಂಗ್‌ನಿಂದ ಬಂದ ಮರ್ಸಿಡಿಸ್ ತಜ್ಞರು

    ಸೈರಸ್‌ ಮಿಸ್ತ್ರಿ ಸಾವು ಪ್ರಕರಣ – ಅಪಘಾತಕ್ಕೀಡಾದ ಕಾರು ಪರಿಶೀಲಿಸಲು ಹಾಂಗ್‌ ಕಾಂಗ್‌ನಿಂದ ಬಂದ ಮರ್ಸಿಡಿಸ್ ತಜ್ಞರು

    ಮುಂಬೈ: ಟಾಟಾ ಸನ್ಸ್‌ನ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ (Cyrus Mistry) ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪಘಾತದ ಕಾರನ್ನು ತನಿಖೆ ಮತ್ತು ಪರಿಶೀಲನೆ ನಡೆಸಲು ಹಾಂಗ್ ಕಾಂಗ್‌ನ (Hong Kong) ಮರ್ಸಿಡಿಸ್ ತಜ್ಞರ (Mercedes experts) ತಂಡ ಮುಂಬೈಗೆ (Mumbai) ಭೇಟಿ ನೀಡಿದೆ.

    ಮಂಗಳವಾರ ಥಾಣೆಯಲ್ಲಿರುವ ಮರ್ಸಿಡಿಸ್ ಶೋ ರೂಂಗೆ ಭೇಟಿ ನೀಡಿರುವ ತಂಡ ಪರಿಶೀಲನೆ ನಡೆಸಲಿದೆ. ನಂತರ ತಂಡವು ಮರ್ಸಿಡಿಸ್ ಬೆಂಜ್ ಕಂಪನಿಗೆ ವರದಿಯನ್ನು ಸಲ್ಲಿಸಲಿದೆ. ಇದನ್ನೂ ಓದಿ: ರಸ್ತೆ ಅಪಘಾತದಲ್ಲಿ ಟಾಟಾ ಸನ್ಸ್‌ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ದುರ್ಮರಣ

    ಪ್ರಸಿದ್ಧ ಕೈಗಾರಿಕೋದ್ಯಮಿ ಮತ್ತು ಟಾಟಾ ಸನ್ಸ್ ಮಾಜಿ ಅಧ್ಯಕ್ಷ ಮಿಸ್ತ್ರಿ ಸೆಪ್ಟೆಂಬರ್ 4 ರಂದು ಮುಂಬೈ ಬಳಿ ರಸ್ತೆ ಅಪಘಾತದಲ್ಲಿ ನಿಧನರಾದರು. ಪಾಲ್ಘರ್ ಪೊಲೀಸರ ಪ್ರಕಾರ, ಮಿಸ್ತ್ರಿ ಅಹಮದಾಬಾದ್‌ನಿಂದ ಮುಂಬೈಗೆ ಪ್ರಯಾಣಿಸುತ್ತಿದ್ದಾಗ ಅವರ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿ ನಾಲ್ಕು ಜನರಿದ್ದರು. ಮಿಸ್ತ್ರಿ ಸೇರಿದಂತೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನಿಬ್ಬರನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

    ಅಪಘಾತಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಕಾರು ತಯಾರಕ ಕಂಪನಿಗೆ ಹಲವಾರು ಪ್ರಶ್ನೆಗಳನ್ನು ಕೇಳಿದ್ದಾರೆ. ಅಪಘಾತದ ಸಂದರ್ಭದಲ್ಲಿ ಕಾರಿನ ಏರ್‌ ಬ್ಯಾಗ್‌ಗಳು ಏಕೆ ತೆರೆದಿಲ್ಲ? ವಾಹನದಲ್ಲಿ ಏನಾದರೂ ಯಾಂತ್ರಿಕ ದೋಷವಿದೆಯೇ? ಕಾರು ಟೈರ್‌ ಒತ್ತಡ ಏನು ಹೀಗೆ ಹಲವಾರು ಪ್ರಶ್ನೆಗಳನ್ನು ಕೇಳಿದ್ದಾರೆ. ಅದಕ್ಕೆ ಕಂಪನಿ ಉತ್ತರಗಳನ್ನು ನೀಡಿದ್ದು, ಪೊಲೀಸರ ತನಿಖೆಗೆ ಸಹಕಾರ ನೀಡುವುದಾಗಿ ತಿಳಿಸಿದೆ. ಇದನ್ನೂ ಓದಿ: ಸೈರಸ್ ಮಿಸ್ತ್ರಿ ಕಾರು ಅಪಘಾತಕ್ಕೂ 5 ಸೆಕೆಂಡ್ ಮುನ್ನ ಬ್ರೇಕ್ ಹಾಕಲಾಗಿದೆ: ಮರ್ಸಿಡಿಸ್ ಕಂಪನಿ

    Live Tv
    [brid partner=56869869 player=32851 video=960834 autoplay=true]

  • ಸೈರಸ್ ಮಿಸ್ತ್ರಿ ಕಾರು ಅಪಘಾತಕ್ಕೂ 5 ಸೆಕೆಂಡ್ ಮುನ್ನ ಬ್ರೇಕ್ ಹಾಕಲಾಗಿದೆ: ಮರ್ಸಿಡಿಸ್ ಕಂಪನಿ

    ಸೈರಸ್ ಮಿಸ್ತ್ರಿ ಕಾರು ಅಪಘಾತಕ್ಕೂ 5 ಸೆಕೆಂಡ್ ಮುನ್ನ ಬ್ರೇಕ್ ಹಾಕಲಾಗಿದೆ: ಮರ್ಸಿಡಿಸ್ ಕಂಪನಿ

    ಮುಂಬೈ: ಅಪಘಾತದಲ್ಲಿ ಮೃತಪಟ್ಟ ಟಾಟಾ ಸನ್ಸ್ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ (Cyrus Mistry) ಸಂಚರಿಸುತ್ತಿದ್ದ ಕಾರು ಅಪಘಾತಕ್ಕೀಡಾಗುವ 5 ಸೆಕೆಂಡ್‍ಗಳ ಮುನ್ನ ಬ್ರೇಕ್ ಹಾಕಲಾಗಿದೆ ಎಂದು ಐಷಾರಾಮಿ ಕಾರು ಮರ್ಸಿಡಿಸ್ (Mercedes-Benz) ಕಂಪನಿ ಪೊಲೀಸರಿಗೆ ಮಾಹಿತಿ ನೀಡಿದೆ.

    ಸೆಪ್ಟೆಂಬರ್ 4 ಭಾನುವಾರದಂದು ಗುಜರಾತ್‍ನಿಂದ ಮುಂಬೈಗೆ ತೆರಳುತ್ತಿದ್ದಾಗ ಪಾಲ್ಘರ್‌ನ ಚರೋತಿಯ ಸೂರ್ಯ ನದಿ ಸೇತುವೆ ಮೇಲೆ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ಸೈರಸ್ ಮಿಸ್ತ್ರಿ ಸೇರಿ ಇಬ್ಬರು ಮೃತಪಟ್ಟಿದ್ದರು. ಮತ್ತಿಬ್ಬರೂ ಗಾಯಗೊಂಡಿದ್ದರು. ಇದನ್ನೂ ಓದಿ: ಇಂದು ಬಿಜೆಪಿಯಿಂದ ಜನಸ್ಪಂದನ – ದೊಡ್ಡಬಳ್ಳಾಪುರದಲ್ಲಿ ಶಕ್ತಿ ಪ್ರದರ್ಶನ

    ಘಟನೆಯ ಬಳಿಕ ಐಷಾರಾಮಿ ಕಾರು ಅಪಫಾತದ ಕುರಿತಾಗಿ ಹಲವು ಅನುಮಾನಗಳು ಮೂಡಿತ್ತು. ಈ ಬಗ್ಗೆ ಕಾರನ್ನು ಪರಿಶೀಲಿಸಲು ಮರ್ಸಿಡಿಸ್-ಬೆಂಜ್ ತಜ್ಞರ ತಂಡ ಹಾಂಗ್ ಕಾಂಗ್‍ನಿಂದ ಮುಂಬೈಗೆ ಭೇಟಿ ನೀಡಲಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಈ ನಡುವೆ ಜರ್ಮನ್ ವಾಹನ ತಯಾರಕ ಕಂಪನಿ, ಕಾರು ಅಪಘಾತದ ತನಿಖೆಯಲ್ಲಿ ಅಧಿಕಾರಿಗಳಿಗೆ ಸಂಪೂರ್ಣ ಸಹಕಾರ ನೀಡುತ್ತೇವೆ. ಆದರೆ ಗ್ರಾಹಕರ ಗೌಪ್ಯತೆಯನ್ನು ಗೌರವಿಸುವುದಕ್ಕಾಗಿ ಅವರೊಂದಿಗೆ ಮಾತ್ರ ವರದಿಯ ವಿವರ ಹಂಚಿಕೊಳ್ಳುವುದಾಗಿ ತಿಳಿಸಿದೆ. ಇದನ್ನೂ ಓದಿ: ರಸ್ತೆ ಅಪಘಾತದಲ್ಲಿ ಟಾಟಾ ಸನ್ಸ್‌ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ದುರ್ಮರಣ

    ಈ ಬಗ್ಗೆ ಪ್ರಾಥಮಿಕ ಮಾಹಿತಿ ಹಂಚಿಕೊಂಡಿರುವ ಮರ್ಸಿಡಿಸ್ ಕಂಪನಿ, ಅಪಘಾತಕ್ಕೂ ಮುನ್ನ ಕಾರು 100 ಕಿ.ಮೀ ವೇಗದಲ್ಲಿತ್ತು. ಬಳಿಕ ಸೂರ್ಯ ನದಿ ಸೇತುವೆ ಮೇಲೆ ಬರುತ್ತಿದ್ದಂತೆ ವೇಗ 89 ಕಿ.ಮೀ ಇಳಿಕೆ ಕಂಡಿತ್ತು. ಅಪಘಾತಕ್ಕೂ 5 ಸೆಕೆಂಡ್‍ಗೂ ಮುನ್ನ ಬ್ರೇಕ್ ಹಾಕಲಾಗಿತ್ತು. ಅಪಘಾತವಾಗುತ್ತಿದ್ದಂತೆ 4 ಏರ್‌ಬ್ಯಾಗ್‌ಗಳ ಪೈಕಿ 3 ಏರ್‌ಬ್ಯಾಗ್‌ಗಳು ತೆರೆದುಕೊಂಡಿತ್ತು ಎಂದು ಮುಂಬೈನ ಪಾಲ್ಘರ್ ಪೊಲೀಸರಿಗೆ ಸಲ್ಲಿಸಿದ ಮಧ್ಯಂತರ ವರದಿಯಲ್ಲಿ ತಿಳಿಸಿದೆ.

    ಭಾನುವಾರ ಮಧ್ಯಾಹ್ನ ಪಾಲ್ಘರ್ ಜಿಲ್ಲೆಯಲ್ಲಿ ಸಂಭವಿಸಿದ ಮರ್ಸಿಡಿಸ್ ಕಾರು ಅಪಘಾತದಲ್ಲಿ ಸೈರಸ್ ಮಿಸ್ತ್ರಿ (54) ಮತ್ತು ಅವರ ಸ್ನೇಹಿತ ಜಹಾಂಗೀರ್ ಪಾಂಡೋಲೆ ಅವರು ಸಾವನ್ನಪ್ಪಿದ್ದರು. ಕಾರಿನಲ್ಲಿದ್ದ ಮತ್ತಿಬ್ಬರು ಅನಾಹಿತಾ ಪಾಂಡೋಲೆ (55) ಹಾಗೂ ಅವರ ಪತಿ ಡೇರಿಯಸ್ ಪಾಂಡೋಲೆ (60) ಗಾಯಗೊಂಡಿದ್ದರು ಅವರಿಬ್ಬರು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ರಸ್ತೆ ಅಪಘಾತದಲ್ಲಿ ಟಾಟಾ ಸನ್ಸ್‌ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ದುರ್ಮರಣ

    ರಸ್ತೆ ಅಪಘಾತದಲ್ಲಿ ಟಾಟಾ ಸನ್ಸ್‌ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ದುರ್ಮರಣ

    ಮುಂಬೈ: ಟಾಟಾ ಸನ್ಸ್‌ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಅವರು ಅಹಮದಾಬಾದ್‍ನಿಂದ ಮುಂಬೈಗೆ ಹಿಂದಿರುಗುವಾಗ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

    ಪಾಲ್ಘರ್‌ನ ಚರೋತಿಯ ಸೂರ್ಯ ನದಿಯ ಸೇತುವೆಯ ಮೇಲೆ ಈ ಅವಘಡ ಸಂಭವಿಸಿದೆ. ಈ ದುರ್ಘಟನೆ ಸಂಭವಿಸುವಾಗ ಕಾರಿನಲ್ಲಿ ಒಟ್ಟು ನಾಲ್ವರು ಜನರಿದ್ದರು. ಅವರಲ್ಲಿ ಇಬ್ಬರು ಸಾವನ್ನಪ್ಪಿದ್ದು, ಗಾಯಗೊಂಡ ಮತ್ತಿಬ್ಬರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

    ಘಟನೆ ಕುರಿತು ಪಾಲ್ಘರ್ ಎಸ್ಪಿ ಮಾತನಾಡಿ, ಸೈರಸ್ ಮಿಸ್ತ್ರಿ ಬರುತ್ತಿದ್ದ ಮರ್ಸಿಡಿಸ್ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ ಎಂದು ತಿಳಿಸಿದರು. ಇದನ್ನೂ ಓದಿ: 8 ವರ್ಷದಲ್ಲಿ ಭಾರತ ದುರ್ಬಲವಾಗಿದೆ, ವಸ್ತುಗಳ ಬೆಲೆ ಭಾರೀ ಏರಿಕೆಯಾಗಿದೆ: ರಾಹುಲ್ ಕಿಡಿ

    Live Tv
    [brid partner=56869869 player=32851 video=960834 autoplay=true]

  • ಸುಪ್ರೀಂ ಕೋರ್ಟ್ ತೀರ್ಪಿನಿಂದ ನಮ್ಮ ನ್ಯಾಯಾಂಗದ ಮೌಲ್ಯ, ವ್ಯವಸ್ಥೆ, ನೈತಿಕತೆಯನ್ನು ಬಲಪಡಿಸಿದೆ: ರತನ್ ಟಾಟಾ

    ಸುಪ್ರೀಂ ಕೋರ್ಟ್ ತೀರ್ಪಿನಿಂದ ನಮ್ಮ ನ್ಯಾಯಾಂಗದ ಮೌಲ್ಯ, ವ್ಯವಸ್ಥೆ, ನೈತಿಕತೆಯನ್ನು ಬಲಪಡಿಸಿದೆ: ರತನ್ ಟಾಟಾ

    ನವದೆಹಲಿ: ಸೈರಸ್ ಮಿಸ್ತ್ರಿ ಅವರನ್ನು ಟಾಟಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿದ್ದ ಟಾಟಾ ಸನ್ಸ್ ನಿರ್ಧಾರದ ವಿರುದ್ಧ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ತೀರಸ್ಕರಿಸಿದೆ.

    ಈ ಹಿಂದೆ ಸೈರಸ್ ಮಿಸ್ತ್ರಿ ಅವರನ್ನು ಟಾಟಾ ಸಮೂಹ ಸಂಸ್ಥೆಗಳಿಗೆ ಮತ್ತೆ ಅಧ್ಯಕ್ಷರನ್ನಾಗಿ ನೇಮಿಸುವಂತೆ ನಿರ್ದೇಶಿಸಿದ್ದ ರಾಷ್ಟ್ರೀಯ ಕಂಪನಿ ಕಾನೂನು ಮೇಲ್ಮನವಿ ನ್ಯಾಯಾಧಿಕರಣದ (ಎನ್‍ಸಿಎಲ್‍ಎಟಿ) 2019ರ ಡಿಸೆಂಬರ್‍ನಲ್ಲಿ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ತಡೆ ಹಿಡಿದಿತ್ತು. ಆ ಬಳಿಕ ವಿಚಾರಣೆ ನಡೆಯುತ್ತಿತ್ತು. ಇದೀಗ ಸುಪ್ರೀಂ ಕೋರ್ಟ್ ಈ ಅರ್ಜಿಯನ್ನು ವಜಾಗೊಳಿಸಿದೆ. ಈ ಮೂಲಕ ಟಾಟಾ ಸಮೂಹ ಸಂಸ್ಥೆ ಮೇಲುಗೈ ಸಾಧಿಸಿದೆ. ಇದನ್ನೂ ಓದಿ: ನಳಂದ, ತಕ್ಷಶಿಲಾ ವಿಶ್ವವಿದ್ಯಾಲಯ ಧ್ವಂಸ ಮಾಡಿದವರನ್ನು ಯಾರೂ ನೆನಪಿಸಿಕೊಳ್ಳುವುದಿಲ್ಲ: ಅಮಿತ್ ಶಾ

    ಸೈರಸ್ ಮಿಸ್ತ್ರಿ ಅವರನ್ನು ಅಧ್ಯಕ್ಷ ಸ್ಥಾನದಿಂದ ತೆಗೆದುಹಾಕುವ ಟಾಟಾ ಸನ್ಸ್ ನಿರ್ಧಾರವನ್ನು ಬೆಂಬಲಿಸುವ 2021ರ ತೀರ್ಪನ್ನು ಪರಿಶೀಲಿಸಲು ಸೈರಸ್ ಮಿಸ್ತ್ರಿ ಅವರ ಶಪೂರ್ಜಿ ಪಲ್ಲೋಂಜಿ ಗ್ರೂಪ್ ಸಲ್ಲಿಸಿದ ಮರುಪರಿಶೀಲನಾ ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಮಿಸ್ತ್ರಿ 2012ರ ಡಿಸೆಂಬರ್‍ನಲ್ಲಿ ಟಾಟಾ ಸನ್ಸ್‍ನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು. 2016 ರಂದು ಕಂಪನಿಯ ನಿರ್ದೇಶಕರ ಮಂಡಳಿ ನಿರ್ಧಾರದಂತೆ ದಿಢೀರ್ ಅವರನ್ನು ಹುದ್ದೆಯಿಂದ ತೆಗೆದುಹಾಕಲಾಗಿತ್ತು. ಇದನ್ನೂ ಓದಿ: ಜಸ್ಟ್ ಪಾಸ್ ಆದ ಖುಷಿಯಲ್ಲಿ ಮಳೆಯಲ್ಲೇ ಡ್ಯಾನ್ಸ್ ಮಾಡಿದ ವಿದ್ಯಾರ್ಥಿ

    https://twitter.com/RNTata2000/status/1527204806439292928

    ಈ ಬಗ್ಗೆ ಟ್ವಿಟ್ಟರ್ ಮೂಲಕ ಸಂತಸ ವ್ಯಕ್ತ ಪಡಿಸಿರುವ ಟಾಟಾ ಸಮೂಹ ಸಂಸ್ಥೆಗಳ ಮುಖ್ಯಸ್ಥ ರತನ್ ಟಾಟಾ, ಇಂದು ಸುಪ್ರೀಂ ಕೋರ್ಟ್ ಅಂಗೀಕರಿಸಿದ ಮತ್ತು ಎತ್ತಿ ಹಿಡಿದ ತೀರ್ಪಿಗೆ ಕೃತಜ್ಞತೆಯನ್ನು ವ್ಯಕ್ತಪಡಿಸಲು ನಾವು ಬಯಸುತ್ತೇವೆ. ಇದು ನಮ್ಮ ನ್ಯಾಯಾಂಗದ ಮೌಲ್ಯ ವ್ಯವಸ್ಥೆ ಮತ್ತು ನೈತಿಕತೆಯನ್ನು ಬಲಪಡಿಸುತ್ತದೆ ಎಂದು ಬರೆದುಕೊಂಡು ಪೋಸ್ಟ್ ಮಾಡಿದ್ದಾರೆ.