‘ಬಿಗ್ ಬಾಸ್’ ಬೆಡಗಿ ಸೋನು ಗೌಡ (Sonu Srinivas Gowda) ಗೋವಾಗೆ (Goa) ತೆರಳಿದ್ದಾರೆ. ಮಳೆಯಲ್ಲಿ ಕೊಡೆ ಹಿಡಿದು ಸಖತ್ ಹಾಟ್ ಆಗಿ ಸೋನು ಗೌಡ ಪೋಸ್ ನೀಡಿದ್ದಾರೆ. ಈ ಫೋಟೋಗಳನ್ನು ನಟಿ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ.
ಸದಾ ಒಂದಲ್ಲಾ ಒಂದು ಸುದ್ದಿಯ ಮೂಲಕ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುವ ನಟಿ ಸೋನು ಈಗ ಗೋವಾ ವೆಕೇಷನ್‌ನಲ್ಲಿ ಬ್ಯುಸಿಯಾಗಿದ್ದಾರೆ. ತುಂಡು ಬಟ್ಟೆ ಧರಿಸಿ ನಟಿ ಸಖತ್ ಗ್ಲ್ಯಾಮರಸ್ ಆಗಿ ಕಾಣಿಸಿಕೊಂಡಿದ್ದಾರೆ.
ಕಪ್ಪು ಕಲರ್ ಟೀ ಶರ್ಟ್‌ಗೆ ನೀಲಿ ಬಣ್ಣದ ಚಿಕ್ಕದಾದ ಜಿನ್ಸ್ ಚಡ್ಡಿಯನ್ನು ಸೋನು ಧರಿಸಿದ್ದಾರೆ. ನಟಿಯ ಲುಕ್‌ಗೆ ಬಗೆ ಬಗೆಯ ಕಾಮೆಂಟ್‌ಗಳು ಬರುತ್ತಿವೆ. ಚಡ್ಡಿ ಸಣ್ಣದಾಯ್ತು ಎಂದು ನಟಿಯ ಕಾಲೆಳೆದಿದ್ದಾರೆ.
ಅಂದಹಾಗೆ, ‘ಕ್ಯಾಡ್ಬರೀಸ್’ ಸಿನಿಮಾದಲ್ಲಿ ಸೋನು ಶ್ರೀನಿವಾಸ್ ಗೌಡ ಕೂಡ ಕಾಣಿಸಿಕೊಂಡಿದ್ದಾರೆ. ಐಟಂ ಹಾಡಿಗೆ ನಟಿ ಹೆಜ್ಜೆ ಹಾಕಿದ್ದಾರೆ. ಧರ್ಮ ಕೀರ್ತಿರಾಜ್, ಅದ್ವಿತಿ ಶೆಟ್ಟಿ ನಟನೆಯ ಸಿನಿಮಾ ಇದಾಗಿದೆ. ಈ ಚಿತ್ರದ ರಿಲೀಸ್‌ಗೆ ಸೋನು ಎದುರು ನೋಡ್ತಿದ್ದಾರೆ.
ಮಗುವನ್ನು ಅಕ್ರಮವಾಗಿ ಸಾಕುವ ಪ್ರಕರಣಕ್ಕೆ ಸಂಬಂಧಿಸಿದಂತೆ ರೀಲ್ಸ್ ರಾಣಿ ಸೋನು ಗೌಡಗೆ ಸಿಜೆಎಂ ಕೋರ್ಟ್ ನ್ಯಾಯಾಧೀಶರು ಹದಿನಾಲ್ಕು ದಿನಗಳ ಕಾಲ ನ್ಯಾಯಾಂಗ ಬಂಧನ (Judicial custody) ಒಪ್ಪಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿ ಪಡೆದಿದ್ದರು ಪೊಲೀಸರು. ಇಂದು ಪೊಲೀಸ್ ಕಸ್ಟಡಿ ಅಂತ್ಯವಾಗಿತ್ತು.
ಕಾನೂನು ಬಾಹಿರವಾಗಿ ಮಗುವನ್ನ ದತ್ತು ತೆಗೆದುಕೊಂಡು ಪೊಲೀಸ್ ವಶದಲ್ಲಿದ್ದ ಸೋನು ಶ್ರೀನಿವಾಸಗೌಡರನ್ನು (Sonu Srinivas Gowda) ಬೆಂಗಳೂರಿನ ಬ್ಯಾಡರಳ್ಳಿ ಪೊಲೀಸರು ನಿನ್ನೆ (ಮಾ.24) ರಾಯಚೂರಿನ ಮಸ್ಕಿ ತಾಲೂಕಿನ ಕಾಚಾಪುರಕ್ಕೆ ಕರೆದುಕೊಂಡು ಬಂದ ಸ್ಥಳ ಮಹಜರು ಮಾಡಿದ್ದರು. ಬಾಲಕಿ ಚಿಕ್ಕಪ್ಪನ ಮನೆಗೆ ಬಂದ ಪೊಲೀಸರು ಕೆಲವೇ ಕ್ಷಣದಲ್ಲಿ ಮಾಹಿತಿ ಕಲೆಹಾಕಿ ಅವಸರದಲ್ಲಿ ಗ್ರಾಮದಿಂದ ಹೊರನಡೆದಿದ್ದರು. ಈ ವೇಳೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಸೋನು ಗೌಡ ಇದ್ದ ಕಾರಿಗೆ ಗ್ರಾಮಸ್ಥರು ಮುತ್ತಿಗೆ ಹಾಕಿದ್ದರು.
ಸ್ಥಳ ಮಹಜರು ಮಾಡಲು ಪೋಲಿಸರು ಭೇಟಿ ನೀಡಿದ ಬಳಿಕ ಸೋನು ಗೌಡ ಜೊತೆ ಮಾತನಾಡಬೇಕು ಅಂತ ಗ್ರಾಮಸ್ಥರು ಗಲಾಟೆ ಮಾಡಿದರು. ಪೊಲೀಸ್ ಕಾರಿಗೆ ಮುತ್ತಿಗೆ ಹಾಕಿ ಸೋನು ಗೌಡರನ್ನು ನೋಡಲು ನೂಕುನುಗ್ಗಲು ಮಾಡಿದರು. ಗ್ರಾಮಸ್ಥರು ಹಾಗೂ ಬಾಲಕಿ ಸಂಬಂಧಿಕರಿಂದ ಮಾಹಿತಿ ಪಡೆದ ಪೊಲೀಸರು ಸುಮಾರು ಇಪ್ಪತ್ತು ನಿಮಿಷಗಳಲ್ಲಿ ಸ್ಥಳ ಮಹಜರು ಮುಗಿಸಿ ವಾಪಸ್ ನಿನ್ನೆ ಬೆಂಗಳೂರಿಗೆ ತೆರಳಿದ್ದರು.
ಈ ಮಧ್ಯೆ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿರುವ ಮಗುವಿನ ಚಿಕ್ಕಪ್ಪ ಸೋನುಗೌಡ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಗುವನ್ನ ನಾವು ದತ್ತು ನೀಡಿಲ್ಲ, ಆಕೆ ನಮಗೆ ಯಾವುದೇ ಹಣದ ಸಹಾಯ ಮಾಡಿಲ್ಲ. ನಮ್ಮ ಮಗಳನ್ನು ಓದಿಸುತ್ತೇನೆ. ಚೆನ್ನಾಗಿ ಸಾಕುತ್ತೇನೆ ಎಂದು ಹೇಳಿ ಕರೆದುಕೊಂಡು ಹೋಗಿದ್ದಾರೆ. ಈಗ ದತ್ತು ತೆಗೆದುಕೊಂಡಿದ್ದೇನೆ ಅಂತ ಹೇಳಿರುವುದು ಸರಿಯಲ್ಲ ಅಂತ ಆಕ್ರೋಶ ವ್ಯಕ್ತಪಡಿಸಿದ್ದರು.
ಬೆಂಗಳೂರು: ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದ ಪ್ರಕರಣದಲ್ಲಿ ರೀಲ್ಸ್ ಸ್ಟಾರ್ ಸೋನು ಶ್ರೀನಿವಾಸ್ ಗೌಡ (Sonu Srinivas Gowdas) ಅವರ ಪೊಲೀಸ್ ಕಸ್ಟಡಿ ಇಂದಿಗೆ ಅಂತ್ಯವಾಗಲಿದೆ.
ರಾಯಚೂರು ಮೂಲದ ಮಗುವನ್ನು ಕಾನೂನು ಬಾಹಿರವಾಗಿ ದತ್ತು ಪಡೆದ ಪ್ರಕರಣದಲ್ಲಿ ಸೋನು ಬಂಧನಾಗಿದ್ದು, ಮಗುವನ್ನು ಸಹ ರೀಲ್ಸ್‌ನಲ್ಲಿ ಬಳಸಿಕೊಂಡಿದ್ದರು. ಅದರಲ್ಲಿ ಬಂದ ಹಣವನ್ನು ಅವರ ಪೋಷಕರಿಗೆ ಕೊಡುವ ಹೇಳಿಕೆ ನೀಡಿದ್ದರು. ಇದು ಕೂಡ ಕಾನೂನು ಬಾಹಿರ, ಜೊತೆಗೆ ದತ್ತು ಪಡೆಯೋ ಸಂಬಂಧ ಯಾವುದೇ ಕಾನೂನು ಪಾಲನೆ ಮಾಡಿರಲಿಲ್ಲ ಎಂದು ಅಧಿಕಾರಿಗಳು ಹೇಳಿದ್ದರು.
ಒಂದು ವೇಳೆ ದತ್ತು ಪಡೆದರೂ ಆ ಮಗುವಿಗೆ ಸಂಬಂಧಿಸಿದ ಯಾವುದೇ ಗುರುತಿನ ದಾಖಲೆಗಳು ಮತ್ತು ಪೋಷಕರ ಗುರುತು ಬಿಟ್ಟುಕೊಡುವುದು ಕಾನೂನು ಬಾಹಿರ. ಸದ್ಯ 4 ದಿನ ಕಸ್ಟಡಿಗೆ ಪಡೆದ ಬ್ಯಾಡರಹಳ್ಳಿ ಪೊಲೀಸರು, ನಿನ್ನೆಯಷ್ಟೇ (ಭಾನುವಾರ) ರಾಯಚೂರಿಗೆ ಸೋನು ಶ್ರೀನಿವಾಸ್ ಗೌಡರನ್ನ ಕರೆದುಕೊಂಡು ಹೋಗಿ ಸ್ಥಳ ಮಹಜರು ಮಾಡಿ, ಸ್ಥಳೀಯರ ಹೇಳಿಕೆಯನ್ನೂ ದಾಖಲಿಸಿಕೊಂಡಿದ್ದರು.
ಯಾವೆಲ್ಲ ನಿಯಮ ಉಲ್ಲಂಘನೆ?
ನಿಯಮಗಳ ಪ್ರಕಾರ ಮಗುವನ್ನು (Child) ದತ್ತು ಪಡೆಯುವಾಗ ಅರ್ಜಿ ಸಲ್ಲಿಸಬೇಕು. ಆದರೆ ಸೋನುಗೌಡ ಅರ್ಜಿ ಸಲ್ಲಿಸಿರಲಿಲ್ಲ. ಮಗುವನ್ನು ಹೊರಗಡೆ ತೋರಿಸುವಂತಿಲ್ಲ ಮತ್ತು ಕುಟುಂಬದವರ ಮಾಹಿತಿಯನ್ನು ಬಹಿರಂಗಪಡಿಸುವಂತಿಲ್ಲ. ಆದರೆ ಲೈವ್ ಮಾಡುವ ಮೂಲಕ ಈ ವಿಚಾರವನ್ನು ಬಹಿರಂಗಪಡಿಸಲಾಗಿದೆ. ಮಗುವನ್ನು ಸಾಕಿ ಸಲಹುವಷ್ಟು ಪೋಷಕರಲ್ಲಿ ಆರ್ಥಿಕ ಸಾಮರ್ಥ್ಯ ಇದ್ಯಾ ಎಂಬುದನ್ನು ಪರಿಗಣಿಸಲಾಗುತ್ತದೆ. ಮುಖ್ಯವಾಗಿ ಸೋನು ಶ್ರೀನಿವಾಸ್ ಗೌಡ ಮದುವೆ ಸಹ ಆಗಿಲ್ಲ. ದತ್ತು ಪಡೆಯುವವರು ಹಾಗು ಮಗುವಿನ ವಯಸ್ಸಿನ ಅಂತರ 25 ವರ್ಷ ಇರಬೇಕಾಗುತ್ತದೆ.
ವಿಡಿಯೋದಲ್ಲಿ ಮಗುವಿನ ಕುಟುಂಬದಿಂದ ಅನುಮತಿ ಪಡೆದಿದ್ದೇನೆ ಎಂದು ಹೇಳಿದ್ದಾರೆ. ಹೀಗಾಗಿ ಮಗುವನ್ನು ಮಾರಾಟ ಮಾಡಿದ್ದಾರಾ ಎಂಬ ಪ್ರಶ್ನೆಯೂ ಇಲ್ಲಿ ಎದ್ದಿದೆ. ಮಗುವನ್ನು ಮಾರಾಟ ಮಾಡಲು ನಿಷೇಧ ಇರುವ ಕಾರಣ ಪೋಷಕರನ್ನು ವಿಚಾರಣೆಗೆ ಒಳಪಡಿಸಲಾಗುತ್ತದೆ. ಹಿಂದೂ ದತ್ತು ಮತ್ತು ನಿರ್ವಹಣೆ ಕಾಯಿದೆ 1956ರ ಪ್ರಕಾರ ದತ್ತು ಪಡೆಯುವ ಪ್ರಕ್ರಿಯೆ ಕುರಿತ ಸಂಪೂರ್ಣ ಮಾಹಿತಿಯನ್ನು ನೀಡಬೇಕಾಗುತ್ತದೆ. ಇದಕ್ಕೋಸರ ಮಕ್ಕಳ ರಕ್ಷಣಾ ಘಟಕ, ರಾಜ್ಯ ದತ್ತು ಪ್ರಾಧಿಕಾರ, ಆಕೆ ನೆಲೆಸಿರುವ ಅರ್ಜಿ ವಿಳಾಸ ಎಲ್ಲಾ ಮಾಹಿತಿಗಳನ್ನು ಪಡೆದು ಎಲ್ಲಾ ನಿಯಮಗಳನ್ನು ಪಾಲಿಸಿದ ಬಳಿಕ ಮಕ್ಕಳ ಕಲ್ಯಾಣ ಸಮಿತಿಯ ಸಮ್ಮುಖದಲ್ಲಿ ಮಕ್ಕಳನ್ನು ದತ್ತು ಪಡೆಯಬೇಕು.
ಬಾಲ ನ್ಯಾಯ ಕಾಯಿದೆ 2000 ಕಲಂ 29ರ ಪ್ರಕಾರ ಪೋಷಕರು ಮಗುವನ್ನು ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರುಪಡಿಸಿ ಸಮಿತಿ ಆದೇಶದ ಪ್ರಕಾರವೇ ದತ್ತು ನೀಡಬೇಕು
ಸದ್ಯ ಸೋನು ಶ್ರೀನಿವಾಸ್ ಗೌಡ ವಿರುದ್ಧ ಕಠಿಣ ಸೆಕ್ಷನ್‌ಗಳ ಆಧಾರದ ಮೇಲೆ ಪ್ರಕರಣ ದಾಖಲಿಸಿರುವುದರಿಂದ ಬಹುತೇಕ ಜೈಲುಪಾಲಾಗುವುದು ಖಚಿತ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ರಾಯಚೂರು: ಕಾನೂನು ಬಾಹಿರವಾಗಿ ಮಗುವನ್ನ ದತ್ತು ತೆಗೆದುಕೊಂಡು ಪೊಲೀಸ್ ವಶದಲ್ಲಿರುವ ಸೋನು ಶ್ರೀನಿವಾಸಗೌಡರನ್ನು (Sonu Srinivas Gowda) ಬೆಂಗಳೂರಿನ ಬ್ಯಾಡರಳ್ಳಿ ಪೊಲೀಸರು ಇಂದು (ಮಾ.24) ರಾಯಚೂರಿನ ಮಸ್ಕಿ ತಾಲೂಕಿನ ಕಾಚಾಪುರಕ್ಕೆ ಕರೆದುಕೊಂಡು ಬಂದ ಸ್ಥಳ ಮಹಜರು ಮಾಡಿದ್ದಾರೆ. ಬಾಲಕಿ ಚಿಕ್ಕಪ್ಪನ ಮನೆಗೆ ಬಂದ ಪೊಲೀಸರು ಕೆಲವೇ ಕ್ಷಣದಲ್ಲಿ ಮಾಹಿತಿ ಕಲೆಹಾಕಿ ಅವಸರದಲ್ಲಿ ಗ್ರಾಮದಿಂದ ಹೊರನಡೆದರು. ಈ ವೇಳೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಸೋನು ಗೌಡ ಇದ್ದ ಕಾರಿಗೆ ಗ್ರಾಮಸ್ಥರು ಮುತ್ತಿಗೆ ಹಾಕಿದ್ದಾರೆ.
ಸ್ಥಳ ಮಹಜರು ಮಾಡಲು ಪೋಲಿಸರು ಭೇಟಿ ನೀಡಿದ ಬಳಿಕ ಸೋನು ಗೌಡ ಜೊತೆ ಮಾತನಾಡಬೇಕು ಅಂತ ಗ್ರಾಮಸ್ಥರು ಗಲಾಟೆ ಮಾಡಿದರು. ಪೊಲೀಸ್ ಕಾರಿಗೆ ಮುತ್ತಿಗೆ ಹಾಕಿ ಸೋನು ಗೌಡರನ್ನು ನೋಡಲು ನೂಕುನುಗ್ಗಲು ಮಾಡಿದರು. ಗ್ರಾಮಸ್ಥರು ಹಾಗೂ ಬಾಲಕಿ ಸಂಬಂಧಿಕರಿಂದ ಮಾಹಿತಿ ಪಡೆದ ಪೊಲೀಸರು ಸುಮಾರು ಇಪ್ಪತ್ತು ನಿಮಿಷಗಳಲ್ಲಿ ಸ್ಥಳ ಮಹಜರು ಮುಗಿಸಿ ವಾಪಸ್ ತೆರಳಿದ್ದಾರೆ. ಇದನ್ನೂ ಓದಿ:ಸಕ್ಸಸ್‌ಗಾಗಿ ದಿಟ್ಟ ನಿರ್ಧಾರ ಕೈಗೊಂಡ ಶ್ರೀಲೀಲಾ
ಈ ಮಧ್ಯೆ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿರುವ ಮಗುವಿನ ಚಿಕ್ಕಪ್ಪ ಸೋನುಗೌಡ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಗುವನ್ನ ನಾವು ದತ್ತು ನೀಡಿಲ್ಲ, ಆಕೆ ನಮಗೆ ಯಾವುದೇ ಹಣದ ಸಹಾಯ ಮಾಡಿಲ್ಲ. ನಮ್ಮ ಮಗಳನ್ನು ಓದಿಸುತ್ತೇನೆ. ಚೆನ್ನಾಗಿ ಸಾಕುತ್ತೇನೆ ಎಂದು ಹೇಳಿ ಕರೆದುಕೊಂಡು ಹೋಗಿದ್ದಾರೆ. ಈಗ ದತ್ತು ತೆಗೆದುಕೊಂಡಿದ್ದೇನೆ ಅಂತ ಹೇಳಿರುವುದು ಸರಿಯಲ್ಲ ಅಂತ ಆಕ್ರೋಶ ವ್ಯಕ್ತಪಡಿಸಿದರು.
ರಾಯಚೂರು: ಕಾನೂನುಬಾಹಿರವಾಗಿ ಮಗುವನ್ನು ದತ್ತು ಪಡೆದ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸೋನು ಶ್ರೀನಿವಾಸ ಗೌಡಗೆ (Sonu Srinivas Gowda) ಮತ್ತಷ್ಟು ಸಂಕಷ್ಟ ಎದುರಾಗಿದೆ.
ರಾಯಚೂರಿನ ಮಸ್ಕಿ (Maski) ತಾಲೂಕಿನ ಕಾಚಾಪುರದಲ್ಲಿ ಪೊಲೀಸರು (Police) ಸ್ಥಳ ಮಹಜರು ನಡೆಸಿದ್ದಾರೆ. ಸೋನು ಗೌಡಳನ್ನ ಸಹ ಬಾಡರಳ್ಳಿ ಪೊಲೀಸರು ರಾಯಚೂರು (Raichuru) ಜಿಲ್ಲೆಗೆ ಈಗಾಗಲೇ ಕರೆದುಕೊಂಡು ಬಂದಿದ್ದಾರೆ. ಕಾಚಾಪುರ ಗ್ರಾಮಕ್ಕೆ ಸೋನುಗೌಡಳನ್ನ ಕರೆದುಕೊಂಡು ಬಂದು ಮಗುವಿನ ಮನೆಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಕಲೆ ಹಾಕಲಿದ್ದಾರೆ. ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ನಾಲ್ವರು ಭಯೋತ್ಪಾದಕರ ಬಂಧನ – ಅಪಾರ ಶಸ್ತ್ರಾಸ್ತ್ರ ವಶ
ಈ ಮಧ್ಯೆ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿರುವ ಮಗುವಿನ ಚಿಕ್ಕಪ್ಪ ಸೋನುಗೌಡ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಗುವನ್ನ ನಾವು ದತ್ತು ನೀಡಿಲ್ಲ, ಆಕೆ ನಮಗೆ ಯಾವುದೇ ಹಣದ ಸಹಾಯ ಮಾಡಿಲ್ಲ. ನಮ್ಮ ಮಗಳನ್ನು ಓದಿಸುತ್ತೇನೆ. ಚೆನ್ನಾಗಿ ಸಾಕುತ್ತೇನೆ ಎಂದು ಹೇಳಿ ಕರೆದುಕೊಂಡು ಹೋಗಿದ್ದಾರೆ. ಈಗ ದತ್ತು ತೆಗೆದುಕೊಂಡಿದ್ದೇನೆ ಅಂತ ಹೇಳಿರುವುದು ಸರಿಯಲ್ಲ ಅಂತ ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಮೋದಿ ವಿರುದ್ಧ ಅಜಯ್ ರೈ ಸ್ಪರ್ಧೆ – ಕಾಂಗ್ರೆಸ್‌ನ ನಾಲ್ಕನೇ ಪಟ್ಟಿ ರಿಲೀಸ್
ಬೆಂಗಳೂರು: ಮಗುವನ್ನು ದತ್ತು ಪಡೆಯುವಾಗ ಪಾಲಿಸಬೇಕಾದ ನಿಯಮಗಳ ಪಾಲನೆ ಉಲ್ಲಂಘನೆ (Adoption Procedure) ಮಾಡಿದ ಹಿನ್ನೆಲೆಯಲ್ಲಿ ಸೋನು ಶ್ರೀನಿವಾಸ ಗೌಡ (Sonu Srinivas Gowda) ಅವರನ್ನು ಬಂಧಿಸಲಾಗಿದೆ.
ಅನಧಿಕೃತವಾಗಿ ಮಗುವನ್ನು ಮನೆಯಲ್ಲಿ ಇಟ್ಟುಕೊಂಡ ಆರೋಪದ ಹಿನ್ನೆಲೆಯಲ್ಲಿ ಬ್ಯಾಡರಹಳ್ಳಿ ಪೊಲೀಸರು ಮತ್ತು ಮಕ್ಕಳ ರಕ್ಷಣಾ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಚರಣೆ ನಡೆಸಿ ಬಂಧಿಸಿದ್ದಾರೆ.
ಮಕ್ಕಳ ರಕ್ಷಣಾ ನಿರ್ದೇಶನಾಲಯದ ಕಾನೂನು ಪರಿವೀಕ್ಷಣಾಧಿಕಾರಿ ಗೀತಾ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಸೋನು ಶ್ರೀನಿವಾಸ ಗೌಡ ಒಂದು ಮಗುವನ್ನು ದತ್ತು ಪಡೆದ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಹಾಕಿಕೊಂಡಿದ್ದರು. ಆದರೆ ಮಗುವನ್ನು ಅಕ್ರಮವಾಗಿ ದತ್ತು ಪಡೆದಿರುವ ಎಂಬ ಆರೋಪ ಬಂದ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಕೋಟಾಗೆ ಚುನಾವಣಾ ಖರ್ಚಿಗೆ 25 ಸಾವಿರ ರೂ. ನೀಡಿದ ಚುರುಮುರಿ ವ್ಯಾಪಾರಿ
ಯಾವೆಲ್ಲ ನಿಯಮ ಉಲ್ಲಂಘನೆ?
ನಿಯಮಗಳ ಪ್ರಕಾರ ಮಗುವನ್ನು (Child) ದತ್ತು ಪಡೆಯುವಾಗ ಅರ್ಜಿ ಸಲ್ಲಿಸಬೇಕು. ಆದರೆ ಸೋನುಗೌಡ ಅರ್ಜಿ ಸಲ್ಲಿಸಿರಲಿಲ್ಲ. ಮಗುವನ್ನು ಹೊರಗಡೆ ತೋರಿಸುವಂತಿಲ್ಲ ಮತ್ತು ಕುಟುಂಬದವರ ಮಾಹಿತಿಯನ್ನು ಬಹಿರಂಗಪಡಿಸುವಂತಿಲ್ಲ. ಆದರೆ ಲೈವ್ ಮಾಡುವ ಮೂಲಕ ಈ ವಿಚಾರವನ್ನು ಬಹಿರಂಗಪಡಿಸಲಾಗಿದೆ.
ಮಗುವನ್ನು ಸಾಕಿ ಸಲಹುವಷ್ಟು ಪೋಷಕರಲ್ಲಿ ಆರ್ಥಿಕ ಸಾಮರ್ಥ್ಯ ಇದ್ಯಾ ಎಂಬುದನ್ನು ಪರಿಗಣಿಸಲಾಗುತ್ತದೆ. ಮುಖ್ಯವಾಗಿ ಸೋನು ಶ್ರೀನಿವಾಸ್ ಗೌಡ ಮದುವೆ ಸಹ ಆಗಿಲ್ಲ. ದತ್ತು ಪಡೆಯುವವರು ಹಾಗು ಮಗುವಿನ ವಯಸ್ಸಿನ ಅಂತರ 25 ವರ್ಷ ಇರಬೇಕಾಗುತ್ತದೆ. ಇದನ್ನೂ ಓದಿ: ಸೋನು ಶ್ರೀನಿವಾಸ್ ಗೌಡ ಅರೆಸ್ಟ್: ನನ್ನಿಂದ ತಪ್ಪಾಗಿಲ್ಲ ಎಂದ ರೀಲ್ಸ್ ರಾಣಿ
ವಿಡಿಯೋದಲ್ಲಿ ಮಗುವಿನ ಕುಟುಂಬದಿಂದ ಅನುಮತಿ ಪಡೆದಿದ್ದೇನೆ ಎಂದು ಹೇಳಿದ್ದಾರೆ. ಹೀಗಾಗಿ ಮಗುವನ್ನು ಮಾರಾಟ ಮಾಡಿದ್ದಾರಾ ಎಂಬ ಪ್ರಶ್ನೆಯೂ ಇಲ್ಲಿ ಎದ್ದಿದೆ. ಮಗುವನ್ನು ಮಾರಾಟ ಮಾಡಲು ನಿಷೇಧ ಇರುವ ಕಾರಣ ಪೋಷಕರನ್ನು ವಿಚಾರಣೆಗೆ ಒಳಪಡಿಸಲಾಗುತ್ತದೆ.
ಹಿಂದೂ ದತ್ತು ಮತ್ತು ನಿರ್ವಹಣೆ ಕಾಯಿದೆ 1956ರ ಪ್ರಕಾರ ದತ್ತು ಪಡೆಯುವ ಪ್ರಕ್ರಿಯೆ ಕುರಿತ ಸಂಪೂರ್ಣ ಮಾಹಿತಿಯನ್ನು ನೀಡಬೇಕಾಗುತ್ತದೆ. ಇದಕ್ಕೋಸರ ಮಕ್ಕಳ ರಕ್ಷಣಾ ಘಟಕ, ರಾಜ್ಯ ದತ್ತು ಪ್ರಾಧಿಕಾರ, ಆಕೆ ನೆಲೆಸಿರುವ ಅರ್ಜಿ ವಿಳಾಸ ಎಲ್ಲಾ ಮಾಹಿತಿಗಳನ್ನು ಪಡೆದು ಎಲ್ಲಾ ನಿಯಮಗಳನ್ನು ಪಾಲಿಸಿದ ಬಳಿಕ ಮಕ್ಕಳ ಕಲ್ಯಾಣ ಸಮಿತಿಯ ಸಮ್ಮುಖದಲ್ಲಿ ಮಕ್ಕಳನ್ನು ದತ್ತು ಪಡೆಯಬೇಕು.
ಬಾಲ ನ್ಯಾಯ ಕಾಯಿದೆ 2000 ಕಲಂ 29ರ ಪ್ರಕಾರ ಪೋಷಕರು ಮಗುವನ್ನು ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರುಪಡಿಸಿ ಸಮಿತಿ ಆದೇಶದ ಪ್ರಕಾರವೇ ದತ್ತು ನೀಡಬೇಕು.