Tag: ಸೋಮಣ್ಣ

  • 11 ಅಮಾಯಕ ಜೀವಗಳ ಬಲಿ ಪಡೆದು ಈ ಸರ್ಕಾರ ಪಾಪಕ್ಕೆ ಗುರಿಯಾಗಿದೆ: ಸೋಮಣ್ಣ

    11 ಅಮಾಯಕ ಜೀವಗಳ ಬಲಿ ಪಡೆದು ಈ ಸರ್ಕಾರ ಪಾಪಕ್ಕೆ ಗುರಿಯಾಗಿದೆ: ಸೋಮಣ್ಣ

    ಬೆಂಗಳೂರು: 11 ಅಮಾಯಕ ಜೀವಗಳನ್ನು ಬಲಿ ತೆಗೆದುಕೊಂಡು ಸಿದ್ದರಾಮಯ್ಯ (Siddaramaiah) ಸರ್ಕಾರ ಪಾಪಕ್ಕೆ ಗುರಿಯಾಗಿದೆ ಎಂದು ಕೇಂದ್ರ ಸಚಿವ ಸೋಮಣ್ಣ (V Somanna) ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

    ಚಿನ್ನಸ್ವಾಮಿ ಕಾಲ್ತುಳಿತ (Chinnaswamy Stampede) ಪ್ರಕರಣದ ಬಗ್ಗೆ ಬೆಂಗಳೂರಿನಲ್ಲಿ ಮಾತಾನಾಡಿದ ಅವರು, ಇದೊಂದು ಲಜ್ಜೆಗೇಡಿ ಸರ್ಕಾರ. ಹೆಸರು ಬರುತ್ತೆ ಎಂದು ತರಾತುರಿಯಲ್ಲಿ ಕಾರ್ಯಕ್ರಮ ಮಾಡಿದರು. ಒಂದು ವಾರ ಬಿಟ್ಟು ಮಾಡಿದ್ರೆ ಏನು ಆಗುತ್ತಿತ್ತು. ಇಂತಹ ಕೆಲಸ ಮಾಡಿ ನೀವು ಪಾಪಕ್ಕೆ ಗುರಿಯಾಗಿದ್ದೀರಾ ಎಂದು ಕಿಡಿಕಾರಿದರು. ಇದನ್ನೂ ಓದಿ: ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತ ಘಟನೆ ಸರ್ಕಾರದ ಪ್ರಾಯೋಜಿತ ಕೊಲೆ: ಅರಗ ಜ್ಞಾನೇಂದ್ರ

    ಪೊಲೀಸ್ ಕಮೀಷನರ್ ದಯಾನಂದ್ ಪ್ರಾಮಾಣಿಕ ಅಧಿಕಾರಿ. ಅವರನ್ನು ಅಮಾನತು ಮಾಡ್ತೀರಾ. ಸಿದ್ದರಾಮಯ್ಯ ನೈತಿಕತೆ ಇದ್ದರೆ ರಾಜೀನಾಮೆ ಕೊಡಬೇಕಿತ್ತು. ಸಿದ್ದರಾಮಯ್ಯ ಅವರೇ ಯಾರು ನಿಮ್ಮ ಕಿವಿ ಕಚ್ಚಿದ್ರು ಇವತ್ತು ಮಾಡಿ ಅಂತ. ನಿಮ್ಮ ಅನುಭವ, ಚಿಂತನೆ ಏನಾಯ್ತು? ಮುಗ್ಧರನ್ನ ಸಾಯಿಸಿ ಶಾಪಗ್ರಸ್ತ ಸರ್ಕಾರ ಆಗಿದೆ ಈ ಸರ್ಕಾರ ಎಂದು ಹರಿಹಾಯ್ದರು. ಇದನ್ನೂ ಓದಿ: ಆತುರದ ನಿರ್ಧಾರದಿಂದ ತಪ್ಪು ಮಾಡಿದ್ದೇವೆ, ತಡವಾಗಿ ವಿಜಯೋತ್ಸವ ಆಚರಣೆ ಮಾಡ್ಬೋದಿತ್ತು: ಇಕ್ಬಾಲ್ ಹುಸೇನ್

    ನಿಮಗೆ ಮಾನ ಮರ್ಯಾದೆ ಇದ್ದರೆ ಇದರ ಹೊಣೆ ಹೊರಬೇಕು. ಇಂತಹ ಘಟನೆ ಮಾಡಿ ಇತಿಹಾಸದಲ್ಲಿ ನೀವು ಉಳಿದುಕೊಂಡ್ರಿ. ಈಗ ಕಣ್ಣು ಒರೆಸೋ ತಂತ್ರ ಮಾಡ್ತಿದ್ದೀರಾ. ಒಳ್ಳೆಯ ಅಧಿಕಾರಿಗಳನ್ನು ಅಮಾನತು ಮಾಡಿದ್ರೆ ಅಧಿಕಾರಿಗಳಿಗೆ ನಿಮ್ಮ ಜೊತೆ ಕೆಲಸ ಮಾಡೋಕೆ ಹೇಗೆ ಆಗುತ್ತದೆ. ಸರ್ಕಾರಕ್ಕೆ ಹೆಸರು ಮಾಡೋ ಆತುರದ ಪರಮಾವಧಿ. ಇದಕ್ಕೆ ನಿಮಗೆ ಕೊಡಲಿ ಪೆಟ್ಟಾಗಿದೆ. ಈ ಘಟನೆ ಅಕ್ಷಮ್ಯ ಅಪರಾಧ. ಇದಕ್ಕೆ ನೀವೆ ಬೆಲೆ ತೆರಬೇಕು ಎಂದು ಸರ್ಕಾರದ ವಿರುದ್ಧ ಗುಡುಗಿದರು. ಇದನ್ನೂ ಓದಿ: ಮಹಾರಾಷ್ಟ್ರ ಚುನಾವಣೆಯಲ್ಲಿ ಮ್ಯಾಚ್ ಫಿಕ್ಸಿಂಗ್ – ಚುನಾವಣಾ ಆಯೋಗದ ವಿರುದ್ಧ ರಾಹುಲ್ ಗಾಂಧಿ ಬಾಂಬ್‌

  • ಸಿದ್ದರಾಮಯ್ಯ ನಾವೆಲ್ಲ ಒಂದೇ ಟೀಂನಲ್ಲಿ ಇದ್ದವರು, ಈಗ ಮರೆವು ಜಾಸ್ತಿಯಾಗಿದೆ: ಸೋಮಣ್ಣ

    ಸಿದ್ದರಾಮಯ್ಯ ನಾವೆಲ್ಲ ಒಂದೇ ಟೀಂನಲ್ಲಿ ಇದ್ದವರು, ಈಗ ಮರೆವು ಜಾಸ್ತಿಯಾಗಿದೆ: ಸೋಮಣ್ಣ

    ಬಾಗಲಕೋಟೆ: ಸಿದ್ದರಾಮಯ್ಯ (Siddaramaiah) ಹಾಗೂ ನಾವೆಲ್ಲ ಒಂದೇ ಟೀಂನಲ್ಲಿ ಇದ್ದವರು. ಈಗ ಅವರು ಏನು ಮಾತನಾಡುತ್ತಾರೋ ಎನ್ನುವುದು ಅವರಿಗೆ ಗೊತ್ತಿಲ್ಲ. ಸಿದ್ದರಾಮಯ್ಯನವರಿಗೆ ಈಗ ಮರೆವು ಜಾಸ್ತಿಯಾಗಿದೆ ಎಂದು ಕೇಂದ್ರ ರೈಲ್ವೇ ಖಾತೆಯ ರಾಜ್ಯ ಸಚಿವ ವಿ ಸೋಮಣ್ಣ (V Somanna) ಹೇಳಿದರು.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈಗ ಸಿದ್ದರಾಮಯ್ಯನವರು ಏನಾದರೂ ಕೇಳಿದರೆ ಹಾಂ ಅಂತಾರೆ. ಮರೆವಿನಲ್ಲಿ ಇನ್ಯಾರನ್ನೋ ತೃಪ್ತಿ ಪಡಿಸಲು ಹೋಗಿ ಏನೋ ಹೇಳುತ್ತಾರೆ. ನನ್ನನ್ನು ಎಲ್ಲಿ ತೆಗೆದುಬಿಡುತ್ತಾರೋ ಅಂದುಕೊಂಡು ಏನೇನೋ ಮಾತನಾಡುತ್ತಾರೆ ಎಂದರು. ಇದನ್ನೂ ಓದಿ: ಅತ್ಯಾಚಾರ ಕೇಸ್‌ – ನಾಪತ್ತೆಯಾಗಿದ್ದ ನಟ ಮಡೆನೂರು ಮನು ಅರೆಸ್ಟ್‌

     

    ನಾನು ಸಿದ್ದರಾಮಯ್ಯ ಅವರನ್ನು ತುಂಬಾ ಹತ್ತಿರದಿಂದ ನೋಡಿದ್ದೇನೆ. ಅವತ್ತಿನ ಸಿದ್ದರಾಮಯ್ಯನೇ ಬೇರೆ‌ ಇವತ್ತಿನ ಸಿದ್ದರಾಮಯ್ಯನೆ ಬೇರೆ. ನಾವೆಲ್ಲ ಈ ದೇಶದ ಮಣ್ಣಿನ ಮಕ್ಕಳು. ಭಾರತ ದೇಶಕ್ಕೆ ಸಣ್ಣ ಅಪಚಾರ ಮಾಡಿದರೂ ಭಾರತಾಂಬೆ ಸುಮ್ಮನೆ ಬಿಡುವುದಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಸಿಂಧೂರ ಅಳಿಸಲು ಹೊರಟವರನ್ನ ಮಣ್ಣಿನಲ್ಲಿ ಹೂತಿದ್ದೇವೆ: ಮೋದಿ

    ಮೋದಿ ಆಪರೇಷನ್ ಸಿಂಧೂರ (Operation Sindoor) ವಿಚಾರದಲ್ಲಿ ಕೈಗೊಂಡ ‌ತೀರ್ಮಾನಕ್ಕೆ ನಾವು ತಲೆ ಬಾಗಬೇಕು. ತಲೆಬಾಗದೇ ಇದ್ದರೆ ಬಾಕಿದ್ದನ್ನು ನೀವೇ ತೀರ್ಮಾನ ಮಾಡಿ. ಮೋದಿ (Modi) ತೆಗೆದುಕೊಂಡ ತೀರ್ಮಾನಕ್ಕೆ ಅಪಚಾರ ಮಾಡುವುನ್ನು ಬಿಡಿ. ಕೈ ಬಿಡದೇ ಇದ್ದರೆ ಮುಂದೆ ಯಾರು ನಿಮ್ಮನ್ನು ಮೂಸುವವರು ಇಲ್ಲ. ಇಲ್ಲ ನಿಮಗೆ ಮಾರ್ಕೆಟ್‌ ಇಲ್ಲ ಎಂದರು.

  • ಜಲಜೀವನ್ ಮಿಷನ್‌ಗೆ ರಾಜ್ಯಕ್ಕೆ ಘೋಷಿಸಿದ ಹಣ ಬಿಡುಗಡೆ ಮಾಡದೇ ಕೇಂದ್ರ ದ್ರೋಹ: ಸಿಎಂ

    ಜಲಜೀವನ್ ಮಿಷನ್‌ಗೆ ರಾಜ್ಯಕ್ಕೆ ಘೋಷಿಸಿದ ಹಣ ಬಿಡುಗಡೆ ಮಾಡದೇ ಕೇಂದ್ರ ದ್ರೋಹ: ಸಿಎಂ

    – ಕೇಂದ್ರ ವರ್ಸಸ್ ರಾಜ್ಯ ಸರ್ಕಾರದ ನಡುವೆ ಜಲಜೀವನ್ ಮಿಷನ್ ಫೈಟ್

    ಬೆಂಗಳೂರು: ಪ್ರತಿಷ್ಠಿತ ಜಲಜೀವನ್ ಮಿಷನ್‌ಗೆ (Jal Jeevan Mission) ಸಂಬಧಿಸಿ ರಾಜ್ಯಕ್ಕೆ ಘೋಷಿಸಲಾದ ಹಣವನ್ನು ಬಿಡುಗಡೆ ಮಾಡದೇ ಕೇಂದ್ರ ಸರ್ಕಾರ ದ್ರೋಹ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಗಂಭೀರ ಆರೋಪ ಮಾಡಿದ್ದಾರೆ.

    ಈ ಕುರಿತು ಎಕ್ಸ್‌ನಲ್ಲಿ ಟ್ವೀಟ್ ಮಾಡಿದ ಅವರು, ಕೇಂದ್ರ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಅದರಲ್ಲೂ ಪ್ರಮುಖವಾಗಿ ಕೇಂದ್ರ ಸಚಿವ ಸೋಮಣ್ಣರನ್ನು ಟಾರ್ಗೆಟ್ ಮಾಡಿ ವಾಗ್ದಾಳಿ ನಡೆಸಿದ್ದಾರೆ. ಜೆಜೆಎಂ ಅಡಿ ಕರ್ನಾಟಕಕ್ಕೆ 28,623 ಕೋಟಿ ರೂ. ರಿಲೀಸ್ ಮಾಡಿದ್ರೂ, ಅವರು ಖರ್ಚು ಮಾಡಿರೋದು ಬರೀ 11, 760 ಕೋಟಿ ರೂ. ಎಂದು ಸೋಮಣ್ಣ ಲೋಕಸಭೆಗೆ ತಿಳಿಸಿದ್ದಾರೆ ಎಂದು ವರದಿಯಾಗಿದೆ. ಆದರೆ ಸೋಮಣ್ಣ ಸುಳ್ಳು ಹೇಳುತ್ತಿದ್ದಾರೆ ಎಂದು ಸಿಎಂ ಆಪಾದಿಸಿದ್ದಾರೆ. ಇದನ್ನೂ ಓದಿ: ಕುಂಭಮೇಳದಿಂದ ಬರುತ್ತಿದ್ದಾಗ ಅಪಘಾತ – ರಾಯಚೂರಿನ ವ್ಯಕ್ತಿ ಸಾವು

    ರಾಜ್ಯದಲ್ಲಿ ಜೆಜೆಎಂಗೆ 49,262 ಕೋಟಿ ರೂ. ನಿಗದಿಯಾಗಿದೆ. ಇದರಲ್ಲಿ ಕೇಂದ್ರದ ಪಾಲು 26,119 ಕೋಟಿ ರೂ., ರಾಜ್ಯದ ಪಾಲು 23,142 ಕೋಟಿ. ಇದರಲ್ಲಿ ಬಿಡುಗಡೆ ಆಗಿರೋದು 32,202 ಕೋಟಿ. ಈ ಪೈಕಿ ಕೇಂದ್ರ ಕೊಟ್ಟಿರೋದು ಬರೀ 11,760 ಕೋಟಿ. ಅಂದರೆ ಬರೀ 45% ಮಾತ್ರ. ರಾಜ್ಯ ಕೊಟ್ಟಿರೋದು 20,442 ಕೋಟಿ. ಅಂದರೆ 88%ರಷ್ಟು ಮೊತ್ತ. ಬಿಡುಗಡೆಯಾದ 33,202 ಕೋಟಿಯಲ್ಲಿ ಸರ್ಕಾರ 29,413 ಕೋಟಿ ಖರ್ಚು ಮಾಡಿದೆ ಎಂದು ಸಿಎಂ ವಿವರ ನೀಡಿದ್ದಾರೆ. ಇದನ್ನೂ ಓದಿ: ಧಾರ್ಮಿಕ ವಿಚಾರದಲ್ಲೂ ರಾಜಕಾರಣ ಮಾಡುವವರು ನಿಜವಾದ ಹಿಂದೂಗಳಲ್ಲ: ಪ್ರಕಾಶ್‌ ರಾಜ್‌

    ನರೇಂದ್ರ ಮೋದಿ ಅವರ ಸರ್ಕಾರ ತನ್ನ ಬಜೆಟ್‌ನಲ್ಲಿ ಅಗತ್ಯ ಪ್ರಮಾಣದ ಅನುದಾನ ನೀಡದೆ ಜಲಜೀವನ್ ಮಿಷನ್ ಯೋಜನೆಯನ್ನು ಕೊಲ್ಲುತ್ತಿದೆ. ರಾಜ್ಯದ ಹಿತವನ್ನು ಗಮನದಲ್ಲಿಟ್ಟುಕೊಂಡು ಈ ಅನ್ಯಾಯವನ್ನು ಪ್ರಶ್ನಿಸಬೇಕಿದ್ದ ಸಚಿವ ಸೋಮಣ್ಣ ಅವರಂತಹ ಬಿಜೆಪಿ ನಾಯಕರು ನಿರ್ಲಜ್ಜರಾಗಿ ತಪ್ಪು ಮಾಹಿತಿಯನ್ನು ಹರಡಿ ಕನ್ನಡಿಗರಿಗೆ ದ್ರೋಹ ಎಸಗುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: Haveri | ಸತ್ತು ಬದುಕಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಸಾವು

  • ಬೆಂಗಳೂರಿಗೆ ಕುರುಬೂರು ಶಾಂತಕುಮಾರ್ ಶಿಫ್ಟ್ ಮಾಡಲು ಸೋಮಣ್ಣ ಪ್ರಯತ್ನ

    ಬೆಂಗಳೂರಿಗೆ ಕುರುಬೂರು ಶಾಂತಕುಮಾರ್ ಶಿಫ್ಟ್ ಮಾಡಲು ಸೋಮಣ್ಣ ಪ್ರಯತ್ನ

    ನವದೆಹಲಿ: ರೈತ ಮುಖಂಡ ಕುರುಬೂರು ಶಾಂತಕುಮಾರ್ (Kuruburu Shanthakumar) ಅವರನ್ನು ಬೆಂಗಳೂರಿಗೆ (Bengaluru) ಶಿಫ್ಟ್ ಮಾಡಲು ಕೇಂದ್ರ ರೈಲ್ವೇ ಖಾತೆಯ ರಾಜ್ಯ ಸಚಿವ ಸೋಮಣ್ಣ (V Somanna) ಪ್ರಯತ್ನ ನಡೆಸುತ್ತಿದ್ದಾರೆ.

    ಅಪಘಾತದಲ್ಲಿ (Accident) ಬೆನ್ನುಮೂಳೆಗೆ ತೀವ್ರಗಾಯವಾಗಿದ್ದು ಕುರುಬೂರು ಶಾಂತಕುಮಾರ್ ಅವರು ಪಂಜಾಬ್‌ನ ಪಟಿಯಾಲ ರಾಜೇಂದ್ರ ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಬೆಂಗಳೂರಿಗೆ ಏರ್‌ಲಿಫ್ಟ್‌ (Airlift) ಮಾಡುವ ಸಂಬಂಧ ಪಟಿಯಾಲ ಜಿಲ್ಲೆಯ ಡಿಸಿ ಜೊತೆ ಸಚಿವ ಸೋಮಣ್ಣ ಮಾತನಾಡಿದ್ದಾರೆ. ಬೆಂಗಳೂರಿನಲ್ಲೇ ಚಿಕಿತ್ಸೆ ಕೊಡಿಸುವ ಸಂಬಂಧ ಶಾಂತಕುಮಾರ್ ಜೊತೆ ಮೂರು ಬಾರಿ ಸೋಮಣ್ಣ ಮಾತನಾಡಿದ್ದಾರೆ.  ಇದನ್ನೂ ಓದಿ: ಚಿಕ್ಕಮಗಳೂರಲ್ಲಿ ಹಿಂದೂಗಳ ಮನೆ ಮೇಲೆ ಅನ್ಯಕೋಮಿನ ಯುವಕರಿಂದ ಕಲ್ಲು ತೂರಾಟ

    ಕರ್ನಾಟಕದ ರೈತ ಮುಖಂಡನಾಗಿ ಹಲವು ರೈತ ಪರ ಹೋರಾಟಗಳಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿರುವ ಕರ್ನಾಟಕ ರಾಜ್ಯ ಸಂಯುಕ್ತ ಕಿಸಾನ್ ಮೋರ್ಚಾದ ಸಂಚಾಲಕ ಕುರುಬೂರು ಶಾಂತಕುಮಾರ್ ಪಂಜಾಬ್‌ನಲ್ಲಿ ಆಯೋಜನೆಗೊಂಡಿದ್ದ ರೈತ ಪ್ರತಿಭಟನೆಯಲ್ಲಿ ಭಾಗಿಯಾಗಲು ದೆಹಲಿಗೆ ತೆರಳಿದ್ದರು.

    ದೆಹಲಿಯಿಂದ ಪಂಜಾಬ್ ಕಡೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಅಪಘಾತ ಸಂಭವಿಸಿತ್ತು. ಎಸ್ಕಾರ್ಟ್ ವಾಹನ ಜೊತೆ ತೆರಳುತ್ತಿದ್ದ ವೇಳೆ ಮುಂದಿನ ವಾಹನ ಅಪಘಾತಕ್ಕೀಡಾಗಿದೆ. ಹೀಗಾಗಿ ಶಾಂತಕುಮಾರ್ ಪ್ರಯಾಣಿಸುತ್ತಿದ್ದ ಕಾರು ಚಾಲಕ ತಕ್ಷಣ ಬ್ರೇಕ್ ಹಾಕಿದ್ದಾನೆ. ಪರಿಣಾಮ ಹಿಂದಿನಿಂದ ಬರುತ್ತಿದ್ದ 5ಕ್ಕೂ ಹೆಚ್ಚು ಕಾರುಗಳು ಏಕಕಾಲಕ್ಕೆ ಸರಣಿ ಅಪಘಾತಕ್ಕೀಡಾಗಿತ್ತು.

    ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಕಾನೂನು ಖಾತರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈತರು ಕಳೆದ ಒಂದು ವರ್ಷದಿಂದ ಕನೋಲಿ ಬಾರ್ಡರ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಶಾಂತಕುಮಾರ್ ಅವರು ಶುಕ್ರವಾರ ಸಭೆಗೆ ತೆರಳುತ್ತಿದ್ದ ವೇಳೆ ಮಾರ್ಗ ಮಧ್ಯೆ ಈ ಅಪಘಾತ ಸಂಭವಿಸಿತ್ತು.

     

  • 39 ಸಾವಿರ ಕೋಟಿ ಅನುದಾನದಲ್ಲಿ ಕರ್ನಾಟಕದಲ್ಲಿ ರೈಲ್ವೆ ಕೆಲಸ ಆರಂಭ: ಸೋಮಣ್ಣ

    39 ಸಾವಿರ ಕೋಟಿ ಅನುದಾನದಲ್ಲಿ ಕರ್ನಾಟಕದಲ್ಲಿ ರೈಲ್ವೆ ಕೆಲಸ ಆರಂಭ: ಸೋಮಣ್ಣ

    – ಸಿದ್ದರಾಮಯ್ಯರನ್ನು ಯಾರಾದ್ರೂ ಮುಟ್ಟೋಕೆ ಆಗುತ್ತಾ?

    ಬೆಳಗಾವಿ: ಬೆಂಗಳೂರಿಗೆ ನೀಡಿದಷ್ಟು ಬೆಳಗಾವಿಗೂ (Belagavi) ಹೆಚ್ಚಿನ ಆದ್ಯತೆ ಕೊಡುತ್ತೇವೆ. ಬೆಳಗಾವಿ ಸೇರಿ ರಾಜ್ಯಾದ್ಯಂತ 39 ಸಾವಿರ ಕೋಟಿ ರೂ. ಅನುದಾನದಲ್ಲಿ ರೈಲ್ವೆ ಕಾಮಗಾರಿಗಳ (Railway Works) ಕೆಲಸ ಆರಂಭಿಸಲಾಗಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ ಸೋಮಣ್ಣ (Somanna) ತಿಳಿಸಿದರು.

    ಬೆಳಗಾವಿ-ಧಾರವಾಡ (Belagavi-Dharawada) ನೇರ ರೈಲ್ವೆ ಮಾರ್ಗ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಳಗಾವಿ-ಧಾರವಾಡ ಹೊಸ ರೈಲು ಮಾರ್ಗ ದಿ. ಸುರೇಶ್‌ ಅಂಗಡಿ (Suresh Angadi) ಅವರ ಕನಸಾಗಿದೆ. ರೈಲು ಹಳಿ ನಿರ್ಮಾಣಕ್ಕೆ ಒಟ್ಟು 888 ಎಕರೆ ಜಮೀನು ಬೇಕಾಗುತ್ತದೆ. ಬೆಳಗಾವಿ ಜಿಲ್ಲೆಯಲ್ಲಿ 660 ಎಕರೆ, ಧಾರವಾಡದಲ್ಲಿ 228 ಎಕರೆ ಜಮೀನು ಬೇಕು. 446 ಎಕರೆ ಜಮೀನನ್ನು ಮುಂದಿನ ತಿಂಗಳು ಹಸ್ತಾಂತರ ಮಾಡುವ ಬಗ್ಗೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಈ‌ ಮಾರ್ಗ ಸುಮಾರು 73 ಕಿ.ಮೀ. ವ್ಯಾಪ್ತಿ ಹೊಂದಿದ್ದು, ಧಾರವಾಡದ ಕ್ಯಾರಕೊಪ್ಪದಿಂದ ಬೆಳಗಾವಿ ದೇಸೂರದವರೆಗೆ ರೈಲು ಹಳಿ ಮಾಡುವ ಗುರಿ ಇದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರ ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಅಭಿವೃದ್ಧಿ ಮಾಡಬಹುದು. ಜಿಲ್ಲಾಧಿಕಾರಿಗಳು ಒಂದು ವರ್ಷದ ಕೆಲಸವನ್ನು ಒಂದು ತಿಂಗಳಲ್ಲಿ ಮಾಡಿದ್ದಾರೆ ಎಂದು ಶ್ಲಾಘಿಸಿದರು. ಇದನ್ನೂ ಓದಿ: ಫಲಿತಾಂಶಕ್ಕೂ ಮೊದಲೇ ಸೋಲೊಪ್ಪಿಕೊಂಡ್ರಾ ಯೋಗೇಶ್ವರ್‌?

    ಜನವರಿ, ಫೆಬ್ರುವರಿಯಲ್ಲಿ ಭೂಸ್ವಾಧೀನಪಡಿಸಿಕೊಂಡು ಕಾಮಗಾರಿ ಆರಂಭಿಸುತ್ತೇವೆ. ಬೆಳಗಾವಿ ಧಾರವಾಡ ರೈಲು ಮಾರ್ಗವನ್ನು 18 ರಿಂದ 20 ತಿಂಗಳಲ್ಲಿ ಕೆಲಸ ಮುಗಿಸಲಾಗುವುದು. ಜಿಲ್ಲಾಧಿಕಾರಿಗಳು ಜೊತೆ ಸೇರಿಕೊಂಡು ಕೆಲಸ ಮಾಡುವಂತೆ ನಮ್ಮ ಅಧಿಕಾರಿಗಳಿಗೆ ತಿಳಿಸುತ್ತೇನೆ. ಇನ್ನು ರಾಜ್ಯದಲ್ಲಿ 11 ಯೋಜನೆಗಳು ಬಾಕಿ ಇದ್ದವು. ಅದರಲ್ಲಿ 9 ಯೋಜನೆಗಳನ್ನು ಕೈಗೆತ್ತಿಕೊಂಡಿದ್ದೇವೆ. 39 ಸಾವಿರ ಕೋಟಿ ಅನುದಾನ ಒದಗಿಸಿದ್ದೇವೆ. ಐವತ್ತು ವರ್ಷದಲ್ಲಿ ಆಗದೇ ಇರುವ ಕೆಲಸಗಳು ಈ ಹತ್ತು ವರ್ಷದಲ್ಲಿ ಮಾಡಿದ್ದೇವೆ ಎಂದು ಸೋಮಣ್ಣ ಸ್ಪಷ್ಟಪಡಿಸಿದರು.

    ಧಾರವಾಡ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಜೊತೆಗೂ ಮಾತಾಡಿದ್ದೇನೆ. 950 ಕೋಟಿ ರೂ. ಕಾಮಗಾರಿ ಕೈಗೆತ್ತಿಕೊಂಡಿದ್ದೇವೆ. ಜಂಟಿ ಸರ್ವೇ, ಗಡಿ ನಿಗದಿಯಾಗಿದೆ. ಸ್ಟೇಶನ್ ಗಳನ್ನು ಎಲ್ಲೆಲ್ಲಿ ನಿರ್ಮಿಸಬೇಕು ಎಂಬ ಬಗ್ಗೆಯೂ ಚರ್ಚಿಸಲಾಗಿದೆ. ಬೆಳಗಾವಿಯ ತಾಲೂಕಿನ ಕೆಕೆಕೊಪ್ಪ, ಬಡಾಲ ಅಂಕಲಗಿ, ನಾಗೇನಟ್ಟಿ, ನಂದಿಹಳ್ಳಿ, ಗರ್ಲಗುಂಜಿ ಸೇರಿ ಮತ್ತಿತರ ಗ್ರಾಮಗಳ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜಮೀನು ತೆಗೆದುಕೊಳ್ಳುವ ಕೆಲಸ‌ ಡಿಸಿ ಮಾಡಿದ್ದಾರೆ. ಅಲ್ಲದೇ ಬೆಳಗಾವಿ ಹೃದಯ ಭಾಗದಲ್ಲಿ 11ನೇ ಕ್ರಾಸ್ ನಲ್ಲಿ‌ 6 ಆರ್‌.ಒ.ಬಿ ಮತ್ತು ಆರ್.ಯು.ಬಿ. ತೆರೆಯಲು ನಿರ್ಧರಿಸಲಾಗಿದ್ದು, ಒಟ್ಟಾರೆ ಬೆಳಗಾವಿಗೆ ಪ್ರಧಾನಿ ಮೋದಿ ದೊಡ್ಡ ಕೊಡುಗೆ ಕೊಟ್ಟಿದ್ದಾರೆ ಎಂದು ಸೋಮಣ್ಣ ಹೇಳಿದರು.

     

    ರಾಯಚೂರು, ಯಾದಗಿರಿ, ಕುಡಚಿ ಸೇರಿ ಹಲವು ಕಡೆ ಕೆಲಸ ಆರಂಭಿಸಿದ್ದೇವೆ‌. ಯೋಜನೆಗಳನ್ನು ರೂಪಿಸಲು ಜಾಗ ಬೇಕು. ನೀವು ಜಾಗ ಕೊಟ್ಟರೆ ನಾವು ಕೆಲಸ ಮಾಡುತ್ತೇವೆ. ಜಾಗ ಸಿಗಲಿಲ್ಲ ಎಂದರೆ ಯೋಜನೆ ಯೋಜನಗೆಳಾಗಿ ಉಳಿಯುತ್ತವೆ. ಅವಶ್ಯಕತೆ ಇರುವ ಕೆಲಸಗಳಿಗೆ ಆದ್ಯತೆ ಕೊಡುತ್ತೇನೆ. ಲೋಕಾಪೂರ ರಾಮದುರ್ಗ ರೈಲು, ಸವದತ್ತಿ ಯಲ್ಲಮ್ಮಗುಡ್ಡ ರೈಲು ಯೋಜನೆ ಕುರಿತು ಪರಿಶೀಲಿಸುತ್ತೇವೆ ಎಂದರು.

    ಮುಟ್ಟೋಕೆ ಆಗುತ್ತಾ?
    ಸಿದ್ದರಾಮಯ್ಯರನ್ನು (Siddaramaiah) ಯಾರಾದ್ರೂ ಮುಟ್ಟೋಕೆ ಆಗುತ್ತಾ? ಯಾರಾದ್ರು ಸಿಎಂ ಅವರನ್ನು ಮುಟ್ಟಿದ್ರೆ ಪೊಲೀಸರು ಕೇಸ್ ಹಾಕುತ್ತಾರೆ ಎಂದು ಕೇಂದ್ರ ರೈಲ್ವೇ ಖಾತೆಯ ರಾಜ್ಯ ಸಚಿವ ಸೋಮಣ್ಣ (Somanna) ವ್ಯಂಗ್ಯವಾಡಿದರು. ನನನ್ನು ಮುಟ್ಟಿದ್ರೆ ರಾಜ್ಯದ ಜನ ಸುಮ್ನೆ ಬಿಡಲ್ಲ ಎಂಬ ಸಿಎಂ ಹೇಳಿಕೆಗೆ ಸಂಬಂಧಿಸಿದಂತೆ ಕೇಳಲಾದ ಪ್ರಶ್ನೆಗೆ, ಸಿದ್ದರಾಮಯ್ಯ ಅನುಭವಿ ರಾಜಕಾರಣಿ. ಅವರು ಏನ್ ಮಾತಾಡ್ತಾರೆ ಎನ್ನುವುದು ಅವರಿಗೆ ಬಿಡುತ್ತೇನೆ. ಅವರನ್ನು ಯಾರು ಮುಟ್ಟುವುದು ಬೇಡ. ಸಾಮಾನ್ಯ ಜನರ ಭಾವನೆಗೆ ತದ್ವಿರುದ್ಧವಾಗಿ ಮಾತನಾಡುವುದು ಎಷ್ಟರ ಮಟ್ಟಿಗೆ ಸರಿ? ರಾಜ್ಯ ಸರ್ಕಾರದ ಕಾರ್ಯ ವೈಖರಿ ಸರಿಯಿಲ್ಲ ಎಂದು ದೂರಿದರು.

     

  • ದೀಪಾವಳಿಗೆ ರಾಜ್ಯದಲ್ಲಿ ವಿಶೇಷ ರೈಲು ಸಂಚಾರ: ಸೋಮಣ್ಣ

    ದೀಪಾವಳಿಗೆ ರಾಜ್ಯದಲ್ಲಿ ವಿಶೇಷ ರೈಲು ಸಂಚಾರ: ಸೋಮಣ್ಣ

    ಬೆಂಗಳೂರು: ದೀಪಾವಳಿ ಹಬ್ಬದ ಸಮಯದಲ್ಲಿ ಪ್ರಯಾಣಿಕರ ದಟ್ಟಣೆ ಜಾಸ್ತಿ ಇರಲಿರುವುದರಿಂದ ಅಕ್ಟೋಬರ್ 31 ರಿಂದ ನವೆಂಬರ್ 2 ವರೆಗೆ ರಾಜ್ಯದ್ಯಂತ ವಿಶೇಷ ರೈಲುಗಳು ಸಂಚರಿಸಲಿವೆ.

    ರೈಲ್ವೇ ಖಾತೆಯ ರಾಜ್ಯ ಸಚಿವ ಸೋಮಣ್ಣ ಅವರು ಸಾಮಾಜಿಕ ಜಾಲತಾಣದಲ್ಲಿ ಈ ವಿಚಾರವನ್ನು ತಿಳಿಸಿದ್ದಾರೆ. ಇದನ್ನೂ ಓದಿ: ಹೆಚ್‌ಡಿಕೆ ಚನ್ನಪಟ್ಟಣ ಕ್ಷೇತ್ರವನ್ನು ಯೋಗೇಶ್ವರ್‌ಗೆ ಬಿಟ್ಟುಕೊಡಬೇಕು: ಸಿಪಿವೈ ಪರ ಮುನಿಸ್ವಾಮಿ ಬ್ಯಾಟಿಂಗ್

    ಪೋಸ್ಟ್‌ನಲ್ಲಿ ಏನಿದೆ?
    ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಜನದಟ್ಟಣೆ ನಿಯಂತ್ರಿಸಿ, ಸುಗಮ ಸಂಚಾರಕ್ಕಾಗಿ ವಿಶೇಷ ರೈಲುಗಳ ಸಂಚಾರದ ವ್ಯವಸ್ಥೆ ಮಾಡಲಾಗಿದೆ. ಇದೇ ಅಕ್ಟೋಬರ್ 31 ರಿಂದ ನವೆಂಬರ್ 2 ವರೆಗೆ ರಾಜ್ಯದಾದ್ಯಂತ ವಿಶೇಷ ರೈಲುಗಳು ಸಂಚರಿಸಲಿವೆ.

    ರಾಜ್ಯದ ಪ್ರಮುಖ ರೈಲ್ವೆ ನಿಲ್ದಾಣಗಳಾದ ಬೆಳಗಾವಿಯಿಂದ ಮೀರಜ್, ಬೆಂಗಳೂರಿನಿಂದ ಬೆಳಗಾವಿ, ಮೈಸೂರಿನಿಂದ ವಿಜಯಪುರದವರೆಗೆ ಹಾಗೂ ವಿಸ್ತರಿತ ರೈಲ್ವೆ ಮಾರ್ಗ ಹುಬ್ಬಳ್ಳಿಯಿಂದ ರಾಮೇಶ್ವರಂ ಹಾಗೂ ಋಷಿಕೇಶದಿಂದ ಹುಬ್ಬಳ್ಳಿವರೆಗೆ ವಿಶೇಷ ರೈಲುಗಳು ಸಂಚರಿಸಲಿವೆ.

    ಪ್ರಯಾಣಿಕರಿಗೆ ಉತ್ತಮ ಸಂಚಾರದ ವ್ಯವಸ್ಥೆ ಕಲ್ಪಿಸಲು ಭಾರತೀಯ ರೈಲ್ವೆ ಒಟ್ಟು 34 ವಿಶೇಷ ರೈಲುಗಳ ವ್ಯವಸ್ಥೆಮಾಡಿದೆ. ಸಾರ್ವಜನಿಕರು ಈ ವಿಶೇಷ ರೈಲುಗಳ ಸೌಲಭ್ಯ ಪಡೆದುಕೊಳ್ಳಿ, ನಿಮ್ಮ ಹಬ್ಬದ ಸಂಭ್ರಮ ಇಮ್ಮಡಿಯಾಗಲಿ ಎಂದು ಪ್ರಾರ್ಥಿಸುತ್ತೇನೆ.

     

  • Bagmati Express Train Accident | 19 ಮಂದಿಯಲ್ಲಿ ಇಬ್ಬರಿಗೆ ಗಂಭೀರ  ಗಾಯ – ಸೋಮಣ್ಣ

    Bagmati Express Train Accident | 19 ಮಂದಿಯಲ್ಲಿ ಇಬ್ಬರಿಗೆ ಗಂಭೀರ ಗಾಯ – ಸೋಮಣ್ಣ

    ಬೆಂಗಳೂರು: ಮೈಸೂರಿನಿಂದ ಬಿಹಾರ ದರ್ಬಾಂಗ್‌ಗೆ (Mysuru-Darbhanga Bagmati Express) ತೆರಳುತ್ತಿದ್ದ ಬಾಗಮತಿ ಎಕ್ಸ್‌ಪ್ರೆಸ್‌ ರೈಲು ಅಪಘಾತದಲ್ಲಿ 19 ಮಂದಿ ಗಾಯಗೊಂಡಿದ್ದಾರೆ ಎಂದು ರೈಲ್ವೇ ಖಾತೆಯ ರಾಜ್ಯ ಸಚಿವ ವಿ ಸೋಮಣ್ಣ (V Somanna) ತಿಳಿಸಿದ್ದಾರೆ.

    ಪಬ್ಲಿಕ್‌ ಟಿವಿಗೆ ಪ್ರತಿಕ್ರಿಯೆ ನೀಡಿದ ಅವರು, 19 ಮಂದಿಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಇಲ್ಲಿಯವರೆಗೆ ಯಾವ ಸಾವು ನೋವಿನ ಬಗ್ಗೆ ವರದಿ ಬಂದಿಲ್ಲ. ಈ ಅಪಘಾತದಲ್ಲಿ ದೊಡ್ಡ ಅನಾಹುತವಾಗಿಲ್ಲ ಎಂದು ಹೇಳಿದರು.

    ಎಲ್ಲಾ ಪ್ರಯಾಣಿಕರನ್ನೂ ಮೆಮು ರೈಲಿನ ಮೂಲಕ ಶಿಫ್ಟ್ ಮಾಡಲಾಗಿದೆ. ಶನಿವಾರ ಪ್ರಯಾಣಿಕರು ಎಲ್ಲೆಲ್ಲಿಗೆ ತಲುಪಬೇಕು ಅಲ್ಲಿಗೆ ವ್ಯವಸ್ಥೆ ಮಾಡಲಾಗುತ್ತದೆ. ದೇವರ ದಯೆಯಿಂದ ದೊಡ್ಡ ಅನಾಹುತ ತಪ್ಪಿದೆ. ಯಾವ ಕಾರಣಕ್ಕೆ ಅಪಘಾತವಾಯ್ತು ಎನ್ನುವುದರ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಮೈಸೂರಿನಿಂದ ಹೊರಟಿದ್ದ ರೈಲು ಅಪಘಾತ; ದಕ್ಷಿಣ ರೈಲ್ವೆಯಿಂದ ಸಹಾಯವಾಣಿ ನಂಬರ್ ಬಿಡುಗಡೆ

    ಶುಕ್ರವಾರ ಮೈಸೂರಿನಿಂದ ದರ್ಭಾಂಗ್‌ಗೆ ಬಾಗಮತಿ ಎಕ್ಸ್‌ಪ್ರೆಸ್ ರೈಲು ಪ್ರಯಾಣಿಸುತ್ತಿತ್ತು. ರಾತ್ರಿ 8:30ರ ವೇಳೆ ಚೆನ್ನೈ ಸಮೀಪದ ಕವರೈಪೆಟ್ಟೈ ರೈಲು ನಿಲ್ದಾಣದ ಬಳಿ ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಎಕ್ಸ್‌ಪ್ರೆಸ್‌ ರೈಲಿನ 12 ಬೋಗಿಗಳು ಹಳಿತಪ್ಪಿದ್ದು, 2 ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ.

     

    ಕರ್ನಾಟಕದಿಂದ (Karnataka) 1 ಸಾವಿರಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣ ಬೆಳೆಸಿದ್ದರು. ರಾಜ್ಯದ ಪ್ರಯಾಣಿಕರಿದ್ದ ಬೋಗಿಗೂ ಹಾನಿಯಾಗಿದೆ. ಬಿಹಾರ ಕಡೆ ಹೊರಟಿದ್ದ ಪ್ರಯಾಣಿಕರಿಗೆ ಬದಲಿ ರೈಲಿನ ವ್ಯವಸ್ಥೆ ಕಲ್ಪಿಸಲು ಕ್ರಮವಹಿಸಲಾಗಿದೆ.

  • ಸೆ.27ರಂದು ತುಮಕೂರು- ಯಶವಂತಪುರ ಮೆಮು ರೈಲಿಗೆ ಚಾಲನೆ

    ಸೆ.27ರಂದು ತುಮಕೂರು- ಯಶವಂತಪುರ ಮೆಮು ರೈಲಿಗೆ ಚಾಲನೆ

    ತುಮಕೂರು: ತುಮಕೂರು- ಯಶವಂತಪುರ (Tumkur-Yeshwanthpur) ಮೆಮು ರೈಲು ಸಂಚಾರಕ್ಕೆ (Memu Train) ಸೆ. 27ರಂದು ಬೆಳಿಗ್ಗೆ 8 ಗಂಟೆಗೆ ನಗರದ ರೈಲು ನಿಲ್ದಾಣದಲ್ಲಿ ಕೇಂದ್ರ ಜಲ ಶಕ್ತಿ, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ (V Somana) ಚಾಲನೆ ನೀಡಲಿದ್ದಾರೆ ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್ (Jyothi Ganesh) ತಿಳಿಸಿದರು.

    ನಗರದಿಂದ ಬೆಳಿಗ್ಗೆ 8:45ಕ್ಕೆ ಹೊರಟು 10:25 ಗಂಟೆಗೆ ಯಶವಂತಪುರ ತಲುಪಲಿದೆ. ಅಲ್ಲಿಂದ ಸಂಜೆ 5:45ಕ್ಕೆ ಹೊರಡುವ ರೈಲು ರಾತ್ರಿ 7:05 ಗಂಟೆಗೆ ತುಮಕೂರು (Tumakuru) ಪ್ರವೇಶಿಸಲಿದೆ. ಭಾನುವಾರ ಹೊರತುಪಡಿಸಿ ಉಳಿದ ಎಲ್ಲ ದಿನ ರೈಲು ಪ್ರಯಾಣಿಕರ ಇದರ ಪ್ರಯೋಜನ ಪಡೆಯಬಹುದು ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು. ಇದನ್ನೂ ಓದಿ: ಮುಡಾ ಕೇಸಲ್ಲಿ ಸಿಎಂಗೆ ಅಸಲಿ ಸಂಕಷ್ಟ – ಕೋರ್ಟ್‌ ಆದೇಶದಲ್ಲಿ ಏನಿದೆ? ಯಾರ ವಿರುದ್ಧ ತನಿಖೆ?

    ಮೆಮು ರೈಲು ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಯಾಗಿದ್ದು, ಕೊನೆಗೂ ಸಂಚಾರ ಆರಂಭವಾಗುತ್ತಿದೆ. ಸೋಮಣ್ಣ ಕೇಂದ್ರ ಸಚಿವರಾದ ನಂತರ ಜಿಲ್ಲೆಯ ರೈಲ್ವೆ ಕಾಮಗಾರಿಗಳಿಗೆ ವೇಗ ನೀಡಿದ್ದಾರೆ. 500 ಕೋಟಿ ರೂ.ಗೂ ಅಧಿಕ ಮೊತ್ತದ ಕಾಮಗಾರಿಗಳಿಗೆ ಈಗಾಗಲೇ ಚಾಲನೆ ನೀಡಲಾಗಿದೆ. ರೈಲ್ವೆ ಕೆಳ ಸೇತುವೆ, ಮೇಲ್ಸೇತುವೆ ನಿರ್ಮಾಣ ಕಾರ್ಯವೂ ಶುರುವಾಗಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ರಷ್ಯಾ ಮೇಲೆ ಕ್ರೂಸ್‌ ಕ್ಷಿಪಣಿ ದಾಳಿಗೆ ಉಕ್ರೇನ್‌ ಪ್ಲ್ಯಾನ್‌ – ಉನ್ನತಾಧಿಕಾರಿಗಳ ತುರ್ತುಸಭೆ ಕರೆದ ಪುಟಿನ್‌

    ಭೀಮಸಂದ್ರ, ಶೆಟ್ಟಿಹಳ್ಳಿ ಕೆಳ ಸೇತುವೆಗಳ ಅಭಿವೃದ್ಧಿ ಕಾರ್ಯ ಆರಂಭವಾಗಿದೆ. ರೈಲ್ವೆ ಕಾಮಗಾರಿ ಶೀಘ್ರಗತಿಯಲ್ಲಿ ಪೂರ್ಣಗೊಳಿಸಲು ಕ್ರಮಕೈಗೊಳ್ಳಲಾಗಿದೆ ಎಂದರು.

     

  • ಹೆಚ್‌ಡಿಕೆ,  ಜೋಶಿ, ಶೋಭಾ, ಸೋಮಣ್ಣಗೆ ಮಂತ್ರಿ ಸ್ಥಾನ ಫಿಕ್ಸ್‌

    ಹೆಚ್‌ಡಿಕೆ, ಜೋಶಿ, ಶೋಭಾ, ಸೋಮಣ್ಣಗೆ ಮಂತ್ರಿ ಸ್ಥಾನ ಫಿಕ್ಸ್‌

    ನವದೆಹಲಿ: ಕರ್ನಾಟಕದ  ಹೆಚ್‌ಡಿ ಕುಮಾರಸ್ವಾಮಿ (HD Kumaraswamy), ಪ್ರಹ್ಲಾದ್‌ ಜೋಶಿ (Prahlad Joshi), ಶೋಭಾ ಕರಂದ್ಲಾಜೆ (Shobha Karandlaje), ವಿ ಸೋಮಣ್ಣ (ವಿ ಸೋಮಣ್ಣ)  ಅವರಿಗೆ ಸಚಿವ ಸ್ಥಾನ ಸಿಕ್ಕಿದೆ.

    ಇಂದು ಸಂಜೆ 7:15ಕ್ಕೆ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿರುವ ಮೋದಿ (Narendra Modi) ಅವರು ತಮ್ಮ ನಿವಾಸದಲ್ಲಿ ಬೆಳಗ್ಗೆ 11:30ಕ್ಕೆ ನೂತನ ಕ್ಯಾಬಿನೆಟ್‌ ಸಚಿವರಿಗೆ ಚಹಾ ಕೂಟವನ್ನು ಆಯೋಜಿಸಿದ್ದರು.

    ಈ ಸಂದರ್ಭದಲ್ಲಿ ಮೋದಿ ಅವರು ತನ್ನ ಎಲ್ಲಾ ಕ್ಯಾಬಿನೆಟ್‌ ಸಚಿವರಿಗೆ ಸಲಹೆ, ಸೂಚನೆ ನೀಡಿದ್ದಾರೆ. ಕರ್ನಾಟಕ ಹೆಚ್‌ಡಿ ಕುಮಾರಸ್ವಾಮಿ ಮತ್ತು ಪ್ರಹ್ಲಾದ್‌ ಜೋಶಿ ಅವರಿಗೆ ಕ್ಯಾಬಿನೆಟ್‌ ಖಾತೆ,  ಶೋಭಾ ಕರಂದ್ಲಾಜೆ ಮತ್ತು ವಿ.ಸೋಮಣ್ಣ ಅವರಿಗೆ ರಾಜ್ಯ ಖಾತೆ ಸಿಗುವ ಸಾಧ್ಯತೆಯಿದೆ.

  • ಜೆಡಿಎಸ್‌, ಬಿಜೆಪಿ ಕಾರ್ಯಕರ್ತರು ಒಂದೇ ನಾಣ್ಯದ ಎರಡು ಮುಖಗಳ ರೀತಿ ಕೆಲಸ ಮಾಡಿದ್ದಾರೆ: ಸೋಮಣ್ಣ

    ಜೆಡಿಎಸ್‌, ಬಿಜೆಪಿ ಕಾರ್ಯಕರ್ತರು ಒಂದೇ ನಾಣ್ಯದ ಎರಡು ಮುಖಗಳ ರೀತಿ ಕೆಲಸ ಮಾಡಿದ್ದಾರೆ: ಸೋಮಣ್ಣ

    ಮೈಸೂರು: ಜೆಡಿಎಸ್, ಬಿಜೆಪಿ (JDS, BJP) ಕಾರ್ಯಕರ್ತರು ಒಂದು ನಾಣ್ಯದ ಎರಡು ಮುಖಗಳ ರೀತಿ ಕೆಲಸ ಮಾಡಿದ್ದಾರೆ. 28 ಕ್ಷೇತ್ರದಲ್ಲೂ ಆ ಸಮನ್ವಯತೆ ಇತ್ತು ಎಂದು ತುಮಕೂರಿನ (Tumakuru) ಸಂಸದ ವಿ ಸೋಮಣ್ಣ (V Somanna) ಹೇಳಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ತುಮಕೂರು ಕ್ಷೇತ್ರದಲ್ಲಿ ಬಿಜೆಪಿಗಿಂತಲೂ ಜೆಡಿಎಸ್‌ನವರು ಹೆಚ್ಚಿನದಾಗಿ ಕೆಲಸ ಮಾಡಿದ್ದಾರೆ. ದೇವೇಗೌಡರು (Devegowda),  ಕುಮಾರಸ್ವಾಮಿ (Kumaraswamy) ನಾಲ್ಕೈದು ಬಾರಿ ಬಂದು ನನಗೆ ದೊಡ್ಡ ಶಕ್ತಿ ನೀಡಿದರು. ಅವರಿಗೆ ನಾನು ಯಾವತ್ತು ಖುಣಿಯಾಗಿದ್ದೇನೆ ಎಂದರು.  ಇದನ್ನೂ ಓದಿ: ಒಂದೇ ವಿಮಾನದಲ್ಲಿ ದೆಹಲಿಗೆ ಪ್ರಯಾಣ ಬೆಳೆಸಿದ ನಿತೀಶ್‌ ಕುಮಾರ್‌, ತೇಜಸ್ವಿ ಯಾದವ್‌

     

    ಜೆಡಿಎಸ್ ಮತ್ತು ಬಿಜೆಪಿಯ ಈ ಸಮನ್ವಯತೆ ರಾಜ್ಯದಲ್ಲಿ ಮುಂದಿನ ದಿನಗಳಲ್ಲೂ ಇದೇ ರೀತಿ ಮುಂದುವರೆಯುತ್ತದೆ. ಆ ನಿಟ್ಟಿನಲ್ಲಿ ಪ್ರಯತ್ನಗಳು ನಡೆದಿವೆ. ಹನ್ನೊಂದು ತಿಂಗಳು ಒಂದು ರೀತಿ ವನವಾಸದಲ್ಲಿದೆ. ಸದಾ ಕೆಲಸ ಮಾಡುವವನಿಗೆ ಕೆಲಸವೇ ಇಲ್ಲದಂತಾಗಿತ್ತು. ಈಗ ಅದು ಮುಕ್ತಯವಾಗಿದೆ ಎಂದು ತಿಳಿಸಿದರು.

    ತುಮಕೂರಿನ ಜನ ನಾನು ಹೊರಗಿನವನು ಎಂದು ಒಂದು ಕ್ಷಣವೂ ಅಂದುಕೊಳ್ಳಲಿಲ್ಲ. ಯಾರೋ ನಾಲ್ಕು ಜನ ನಾಯಕರು ಮಾತನಾಡಿದರು ತಲೆ ಕಡೆಸಿಕೊಳ್ಳಲಿಲ್ಲ. ಎರಡು ಲಕ್ಷದ ಲೀಡ್ ನೀರಿಕ್ಷೆ ಮಾಡಿದ್ದೆ. ಆದರೆ 20 ಸಾವಿರ ಕಡಿಮೆಯಾಗಿದೆ ಎಂದರು. ಇದನ್ನೂ ಓದಿ: ಎಂದಿನಂತೆ ಪ್ರಯತ್ನ ಮುಂದುವರೆಯಲಿದೆ- ಪತ್ನಿ ಸೋಲಿನ ಬಳಿಕ ಶಿವಣ್ಣ ರಿಯಾಕ್ಷನ್