Tag: ಸೋಮವಾರಪೇಟೆ

  • ರೈತರಿಗೆ ಹಕ್ಕುಪತ್ರಕ್ಕೆ ಆಗ್ರಹ – ಸೋಮವಾರಪೇಟೆ ತಾಲ್ಲೂಕು ಬಂದ್ ಯಶಸ್ವಿ

    ರೈತರಿಗೆ ಹಕ್ಕುಪತ್ರಕ್ಕೆ ಆಗ್ರಹ – ಸೋಮವಾರಪೇಟೆ ತಾಲ್ಲೂಕು ಬಂದ್ ಯಶಸ್ವಿ

    ಮಡಿಕೇರಿ: ʻಸಿʼ ಮತ್ತು ʻಡಿʼ ದರ್ಜೆ ಭೂಮಿಯಲ್ಲಿ (ವ್ಯವಸಾಯಕ್ಕೆ ಯೋಗ್ಯವಲ್ಲದ ಭೂಮಿ) ಸಾಗುವಳಿ ಮಾಡುತ್ತಿರುವ ರೈತರ ಭೂಮಿಯನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸಬಾರದು ಮತ್ತು ರೈತರಿಗೆ ಹಕ್ಕುಪತ್ರ (Farmer Land Rights) ನೀಡಬೇಕು ಎಂದು ಆಗ್ರಹಿಸಿ ರೈತ ಹೋರಾಟ ತಾಲೂಕು ಸಮಿತಿ ಕರೆ ನೀಡಿದ್ದ ಸೋಮವಾರಪೇಟೆ ತಾಲೂಕು ಬಂದ್ (Somwarpet Bandh) ಯಶಸ್ವಿಯಾಗಿದೆ.

    ಸೋಮವಾರಪೇಟೆ ತಾಲೂಕು ಮಾತ್ರವಲ್ಲದೇ ಮಾದಾಪುರ, ಕೊಡ್ಲಿಪೇಟೆ, ಶನಿವಾರಸಂತೆ, ಶಾಂತಳ್ಳಿ, ಆಲೂರು ಸಿದ್ದಾಪುರ ಭಾಗದಲ್ಲೂ ಬಂದ್‌ ಯಶಸ್ವಿಯಾಗಿ ನಡೆಯಿತು. ಇನ್ನೂ ಖಾಸಗಿ ಶಾಲೆಗಳಿಗೆ ಮೊದಲೇ ರಜೆ ನೀಡಿದ್ದರಿಂದ ಬಂದ್‌ ಎಫೆಕ್ಟ್‌ ತಟ್ಟಲಿಲ್ಲ, ಕೆಲ ಸರ್ಕಾರಿ ಶಾಲೆಗಳಿಗೆ ಮಕ್ಕಳು ಬಾರದ ಹಿನ್ನೆಲೆ ತರಗತಿಗಳೂ ನಡೆಯದ ಪ್ರಸಂಗ ಕಂಡುಬಂದಿತು. ಇದನ್ನೂ ಓದಿ: ಕೆ.ಎನ್.ರಾಜಣ್ಣರನ್ನ ಸಂಪುಟದಿಂದ ತೆಗೆದದ್ದು ದುರದೃಷ್ಟಕರ, ಹೀಗೆ ಆಗಬಾರದಿತ್ತು: ಬಿ.ಕೆ.ಹರಿಪ್ರಸಾದ್‌

    ಕೂಲಿ ಕಾರ್ಮಿಕರ ಪರದಾಟ:
    ಬಂದ್‌ ಹಿನ್ನೆಲೆ ಕೆಲ ಸರ್ಕಾರಿ ಶಾಲಾ, ಕಾಲೇಜು ಮಕ್ಕಳು ಕೂಲಿ ಕಾರ್ಮಿಕರು ಬಸ್ ಇಲ್ಲದೇ ಪರದಾಡಿದರು. ಇದೇ ಸಂದರ್ಭ ಸೋಮವಾರಪೇಟೆಯ ವಿವೇಕಾನಂದ ವೃತ್ತದಲ್ಲಿ ವಾಹನಗಳನ್ನ ತಡೆದ ರೈತರು ಅಕ್ರೋಶ ಹೋರ ಹಾಕಿದ್ರು. ಈ ವೇಳೆ ಟ್ರಾಫಿಕ್‌ ಸಮಸ್ಯೆಯಿಂದ ರೋಗಿಯೊಬ್ಬರು ಸರ್ಕಾರಿ ಆಸ್ಪತ್ರೆಯ ಅಂಬುಲೆನ್ಸ್‌ನಲ್ಲೇ ಸಿಲುಕಿ ಒದ್ದಾಡಿದರು. ಇದನ್ನೂ ಓದಿ: ಬಾಂಗ್ಲಾ ಸರಕುಗಳ ಮೇಲೆ ಕಠಿಣ ನಿರ್ಬಂಧ ವಿಧಿಸಿದ ಭಾರತ

    ಬಂದ್‌ ಕುರಿತು ಮಾತನಾಡಿದ ಪ್ರತಿಭಟನಾಕಾರರು, ಕಳೆದ ಹಲವು ದಶಕಗಳಿಂದ ಗ್ರಾಮೀಣ ಭಾಗದಲ್ಲಿ ವನ್ಯಪ್ರಾಣಿಗಳ ಉಪಟಳದ ನಡುವೆಯೂ ಕೃಷಿ ಮಾಡಿಕೊಂಡು ಜೀವನ ನಡೆಸುತ್ತಿರುವ ರೈತರಿಗೆ, ಇತ್ತೀಚೆಗೆ ಸರ್ಕಾರಗಳು ತೆಗೆದುಕೊಳ್ಳುತ್ತಿರುವ ಕ್ರಮಗಳು ನುಂಗಲಾರದ ತುತ್ತಾಗುತ್ತಿವೆ. ಸಿ ಮತ್ತು ಡಿ ಜಾಗದ ಸಮಸ್ಯೆ ರೈತರನ್ನು ಕಾಡುತ್ತಿದ್ದು, ಅರಣ್ಯ ವ್ಯವಸ್ಥಾಪನಾ ಅಧಿಕಾರಿಗಳಿಂದ ಆಗಾಗ್ಗೆ ಬರುತ್ತಿರುವ ನೋಟೀಸ್‌ಗಳು ರೈತರ ನಿದ್ದೆಗೆಡಿಸಿವೆ. ಇದನ್ನೂ ಓದಿ: ಸಚಿವ ಸಂಪುಟದಿಂದ ರಾಜಣ್ಣ ವಜಾ – ಪರಿಷತ್‌ನಲ್ಲಿ ಗದ್ದಲ ಗಲಾಟೆ

    ಕೂರ್ಗ್ ಲ್ಯಾಂಡ್ ರೆಗ್ಯೂಲೇಶನ್ 1889ರ ಕಾಯ್ದೆ ಪೂರ್ವದಲ್ಲಿ ಅಂದಿನ ಜನಸಂಖ್ಯೆಗೆ ಅನುಗುಣವಾಗಿ ರೈತರಿಗೆ ಹಿಡುವಳಿ ಜಮೀನನ್ನ ನೀಡಲಾಗಿತ್ತು. ಉಳಿದಂತೆ ದಟ್ಟವಾದ ಅರಣ್ಯ, ಕಾಡು, ಬೆಟ್ಟಗುಡ್ಡ ಪ್ರದೇಶಗಳನ್ನ ಅರಣ್ಯ ಜಮೀನು ಎಂದು, ವ್ಯವಸಾಯಕ್ಕೆ ಯೋಗ್ಯವಾದ ಭೂಮಿಯನ್ನು ಸರ್ಕಾರದ ಪೈಸಾರಿ ಜಮೀನೆಂದು ಗುರುತಿಸಲಾಗಿತ್ತು. ಜನಸಂಖ್ಯೆ ಬೆಳೆದಂತೆ ಪೈಸಾರಿ ಜಮೀನಿನಲ್ಲಿ ಒತ್ತುವರಿ ಮಾಡಿಕೊಂಡು ಕೃಷಿ ಕಾರ್ಯ ಕೈಗೊಂಡ ರೈತರು ಭೂ ಮಂಜೂರಾತಿ ಕಾಯ್ದೆ ಯಡಿ ಇದೇ ಜಾಗಕ್ಕೆ ಹಕ್ಕುಪತ್ರ ಮಾಡಿಕೊಂಡಿದ್ದಾರೆ. ಉಳಿದವರ ಅರ್ಜಿಗಳು ಕಂದಾಯ ಇಲಾಖೆಯಲ್ಲಿ ಈಗಲೂ ಬಾಕಿ ಉಳಿದಿವೆ. 1978ರಲ್ಲಿ ಸರ್ಕಾರದ ಆದೇಶದಂತೆ ಸರ್ಕಾರದ ಹೆಸರಿನಲ್ಲಿ ದಾಖಲಾಗಿರುವ ವ್ಯವಸಾಯಕ್ಕೆ ಯೋಗ್ಯವಲ್ಲದ ಭೂಮಿಯನ್ನು ಸಿ ಮತ್ತು ಡಿ ಭೂಮಿ ಎಂದು ವರ್ಗೀಕರಿಸಿ ಅಂತಹ ಜಮೀನುಗಳನ್ನು ಮಾತ್ರ ಅರಣ್ಯ ಇಲಾಖೆಗೆ ಹಸ್ತಾಂತರಿಸುವಂತೆ ಅಂದಿನ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.

    ಜಿಲ್ಲಾಧಿಕಾರಿಗಳ ಅಧೀನ ಕಚೇರಿಯ ಅಧಿಕಾರಿಗಳು ಮತ್ತು ನೌಕರರು ಸರ್ಕಾರದ ಹೆಸರಲ್ಲಿರುವ ಎಲ್ಲಾ ಜಮೀನುಗಳನ್ನು ಸ್ಥಳ ಪರಿಶೀಲನೆ ಮಾಡದೇ ಕಚೇರಿ ಯಲ್ಲಿಯೇ ಕುಳಿತುಕೊಂಡು ಪಟ್ಟಿಮಾಡಿ ʻಸಿ ಮತ್ತು ಡಿʼ ಜಮೀನುಗಳೆಂದು ರಾಜ್ಯ ಸರ್ಕಾರಕ್ಕೆ ವರದಿ ಮಾಡಿದ್ದಾರೆ. ವೈಜ್ಞಾನಿಕ ಸರ್ವೇ ಮಾಡದೆ, ಸಂಪೂರ್ಣವಾಗಿ ಪೈಸಾರಿ ಭೂಮಿಯನ್ನು ಸಿ ಮತ್ತು ಡಿ ಎಂದು ವರದಿ ನೀಡಿರುವುದರಿಂದ ಸಮಸ್ಯೆ ಎದುರಾಗಿದೆ ಎಂಬುದು ರೈತರ ಆರೋಪವಾಗಿದೆ. ಇದನ್ನೂ ಓದಿ: `SIR’ ಅಭಿಯಾನ ಚರ್ಚೆಗೆ ಒತ್ತಾಯಿಸಿ ವಿಪಕ್ಷಗಳ ಪ್ರತಿಭಟನೆ – ಲೋಕಸಭೆ, ರಾಜ್ಯಸಭೆಯ ಕಲಾಪ ಮುಂದೂಡಿಕೆ

  • Madikeri | ಜೀವನದಲ್ಲಿ ಜಿಗುಪ್ಸೆ – ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

    Madikeri | ಜೀವನದಲ್ಲಿ ಜಿಗುಪ್ಸೆ – ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

    ಮಡಿಕೇರಿ: ಜೀವನದಲ್ಲಿ ಜಿಗುಪ್ಸೆಗೊಂಡು ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಗು (Kodagu) ಜಿಲ್ಲೆಯ ಸೋಮವಾರಪೇಟೆ (Somwarpet) ತಾಲೂಕಿನ ಐಗೂರು ಗ್ರಾಮಪಂಚಾಯಿತಿ ವ್ಯಾಪ್ತಿಯ ಯಡವಾರೆ ಗ್ರಾಮದಲ್ಲಿ ನಡೆದಿದೆ.

    ನಾರೂರು ಮನೆ ಮಧು (ಅಶೋಕ್) ಮೃತ ವ್ಯಕ್ತಿ. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಮದ್ಯ ಸೇವಿಸಿ ತಲೆಭಾಗಕ್ಕೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೂರು ವರ್ಷದ ಪುತ್ರಿಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಒಂದು ವಾರದ ಹಿಂದೆ ಪತ್ನಿ ಮತ್ತು ಪುತ್ರಿ ಬೆಂಗಳೂರಿಗೆ ತೆರಳಿದ್ದರು. ಭಾನುವಾರ ಬೆಳಗ್ಗೆ ಮೃತನ ತಾಯಿ ಕೂಡ ಬೆಂಗಳೂರಿಗೆ ತೆರಳಿದ್ದರು. ಈ ಸಂದರ್ಭ ತನ್ನ ಮನೆಯಲ್ಲಿ ಇದ್ದ ಡಬ್ಬಲ್ ಬ್ಯಾರೆಲ್ ಕೋವಿಯಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದನ್ನೂ ಓದಿ: ಪಾಕಿಸ್ತಾನದ ಪರ ಬೇಹುಗಾರಿಕೆ – ಉತ್ತರ ಪ್ರದೇಶದ ಉದ್ಯಮಿ ಬಂಧನ

    ಘಟನೆಗೆ ಸಂಬಂಧಿಸಿದಂತೆ ಸೋಮವಾರಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಇದನ್ನೂ ಓದಿ: ಮಹಿಳೆ ಕೊಲೆ ಮಾಡಿ ಬೈಕ್ ಅಪಘಾತವೆಂದು ಬಿಂಬಿಸಿದ ಪತಿ, ಮಾವ, ಅತ್ತೆ ಅರೆಸ್ಟ್

  • Madikeri | ನಾಲ್ಕೈದು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

    Madikeri | ನಾಲ್ಕೈದು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

    ಮಡಿಕೇರಿ: ಕಳೆದ ನಾಲ್ಕೈದು ದಿನಗಳ ಹಿಂದೆ ನಾಪತ್ತೆ ಯಾಗಿದ್ದ ಕೊಡಗಿನ (Kodagu) ಸೋಮವಾರಪೇಟೆಯ ಸಂಪತ್‌ಗಾಗಿ ಕೊಡಗು ಮತ್ತು ಹಾಸನ ಪೊಲೀಸರು ತೀವ್ರ ಕಾರ್ಯಾಚರಣೆ ನಡೆಸಿ ಹುಡುಕಾಟ ನಡೆಸುತ್ತಿದ್ದರು. ಈ ನಡುವೆ ಇಂದು ಸಂಪತ್‌ನ ಮೃತ ದೇಹ ಪತ್ತೆಯಾಗಿದೆ.

    ಹಾಸನ (Hassan) ಜಿಲ್ಲೆಯ ಸಕಲೇಶಪುರ (Sakleshpura) ತಾಲೂಕು ಯಸಳೂರು ಹೋಬಳಿ ಮಾಗೇರಿಯ ಸಮೀಪ ಕಲ್ಲಹಳ್ಳಿ ಗ್ರಾಮದಲ್ಲಿ ಜನವಸತಿ ಪ್ರದೇಶದಲ್ಲಿ ರಕ್ತಸಿಕ್ತವಾದ ಕಾರು ನಿಲ್ಲಿಸಿ ಮತ್ತೊಂದು ಕಾರಿನಲ್ಲಿ ಶನಿವಾರ ಬೆಳಗಿನ ಜಾವ ಪರಾರಿಯಾಗಿದ್ದ ಸಂಪತ್ ಮೃತದೇಹ ಪತ್ತೆ ಆಗಿದೆ. ಈ ಗ್ರಾಮಕ್ಕೆ ತೋಟದ ಕೆಲಸಕ್ಕೆ ಜನ ಕರೆತಂದ ಕಾರಿನ ಚಾಲಕ ಅಪರಿಚಿತ ಕಾರು ರಕ್ತಸಿಕ್ತ ಆಗಿರುವ ಮಾಹಿತಿಯನ್ನು ಗ್ರಾಮಸ್ಥರಿಗೆ ತಿಳಿಸಿದ್ದರು. ನಂತರ ಯಸಳೂರು ಪೋಲಿಸ್ ಠಾಣೆಗೆ ಮಾಹಿತಿ ನೀಡಿದ್ದರು. ಇದಕ್ಕೆ ಸಂಬಂಧಪಟ್ಟಂತೆ ಸರ್ಕಲ್ ಇನ್ಸ್ಪೆಕ್ಟರ್ ಮತ್ತು ಯಸಳೂರು ಸಬ್ ಇನ್ಸ್ಪೆಕ್ಟರ್ ಶ್ರೀನಿವಾಸ್ ಹಾಗೂ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿದ್ದರು. ಇದನ್ನೂ ಓದಿ: ನಾನು ರೌಡಿಶೀಟರ್ ಅಲ್ಲ, ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಯಾವುದೇ ಬಾಕಿ ಇರಿಸಿಕೊಂಡಿಲ್ಲ: ಹರೀಶ್ ಇಂಜಾಡಿ ಸ್ಪಷ್ಟನೆ

    ತನಿಖೆಗಾಗಿ ಶ್ವಾನದಳ ಮತ್ತು ಬೆರಳಚ್ಚು ತಜ್ಞರು ಸಹ ಸ್ಥಳಕ್ಕೆ ಬಂದು ಮಹಜರ್ ಮಾಡಿ ತನಿಖೆ ಚುರುಕುಗೊಳಿಸಿದ್ದಾರೆ. ಘಟನೆಯ ತನಿಖೆ ಮುಂದುವರಿದಂತೆ ಈ ಕಾರು ಕೊಡಗಿನ ಕುಶಾಲನಗರದ ಉದ್ಯಮಿಯಾದ ಜಾನ್ ಅವರಿಗೆ ಸೇರಿದ್ದು ಎಂದು ತಿಳಿದು ಬಂದಿದೆ. ಜಾನ್ ಅವರ ಕಾರನ್ನು ಕುಶಾಲನಗರದಲ್ಲಿ ವಾಸವಿರುವ ಸೋಮವಾರಪೇಟೆ ತಾಲೂಕು ಕಕ್ಕೆ ಹೊಳೆ ಜಂಗ್ಸನ್ ನಿವಾಸಿ ಸಂಪತ್ (ಶಂಭು) ಶನಿವಾರ ತೆಗೆದು ಕೊಂಡು ಬಂದಿರುತ್ತಾರೆ ಎಂದು ತಿಳಿದು ಬಂದಿದೆ. ಆದರೆ ಇಲ್ಲಿಯ ತನಕ ಸಂಪತ್ ಮೊಬೈಲ್ ಸ್ವಿಚ್‌ಆಫ್ ಆಗಿದ್ದು ಯಾವುದೇ ಮಾಹಿತಿ ಲಭ್ಯ ವಾಗಿರಲಿಲ್ಲ. ಇದನ್ನೂ ಓದಿ: ಭದ್ರಾಪುರದಲ್ಲಿ ಹತ್ಯೆಯಾದ ಬಾಲಕಿ ಮನೆಗೆ ಡಿಕೆಶಿ ಭೇಟಿ – ಪರಿಹಾರ ಚೆಕ್ ವಿತರಣೆ

    ಮೊಬೈಲ್‌ಗಳಲ್ಲಿ ಬಂದಿರುವ ಕೊನೆಯ ಕರೆಗಳ ಮಾಹಿತಿಗಳನ್ನು ಕಲೆ ಹಾಕಲಾಗಿತ್ತು. ಜೊತೆಗೆ ಈ ಹಿಂದೆ ನಡೆದ ಗಲಾಟೆ ಘರ್ಷಣೆಯ ಎದುರಾಳಿಗಳನ್ನು ಪೊಲೀಸರು ವಿಚಾರಣೆ ನಡೆಸಿದ್ದರು. ಇದರಲ್ಲಿ ಕೆಲವು ಜನರು ಊರು ಬಿಟ್ಟಿದ್ದು, ಇನ್ನೂ ಕೆಲವರು ವಿಚಾರಣೆಗೆ ಸಹಕರಿಸಿದ್ದಾರೆ. ಇನ್ನೂ ಕೆಲವರು ಪೋಲಿಸ್ ಕರೆಗಳನ್ನು ಉತ್ತರಿಸಿ ಫೋನ್ ಸ್ವಿಚ್‌ಆಫ್ ಮಾಡಿ ಮನೆಗೆ ಬಾರದೆ ತಲೆಮರೆಸಿಕೊಂಡಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಇದನ್ನೂ ಓದಿ: ಡ್ರೋನ್‌ಗಳನ್ನು ಧ್ವಂಸ ಮಾಡೋ ಭಾರ್ಗವಾಸ್ತ್ರ ಪ್ರಯೋಗ ಯಶಸ್ವಿ!

    ಯಸಳೂರು ಸಬ್ ಇನ್ಸ್ಪೆಕ್ಟರ್ ಶ್ರೀನಿವಾಸ್ ಮತ್ತು ಸಿಬ್ಬಂದಿ ವರ್ಗ ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಾರ್ವಜನಿಕರು ಈ ಪ್ರದೇಶದ ಸುತ್ತ ಮುತ್ತ ಹುಡುಕಾಟ ನಡೆಸಿದ ಬಳಿಕ ಮೃತದೇಹ ಪತ್ತೆ ಆಗಿದೆ. ಇದನ್ನೂ ಓದಿ: ಜಪಾನ್ ಕಾನ್ಸುಲ್ ಜನರಲ್ ಜೊತೆ ಸಚಿವ ಶರಣ ಪ್ರಕಾಶ್ ಪಾಟೀಲ್ ಚರ್ಚೆ

    ಮಾಗೇರಿ ಗ್ರಾಮ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಂತೆ ಇದೆ. ಅವರ ತೋಟ, ಗದ್ದೆಗಳ ನಡುವೆ ಮನೆ ಕಟ್ಟಿಕೊಂಡು ವಾಸ ವಾಗಿದ್ದಾರೆ. ಪ್ರವಾಸಿ ತಾಣಗಳು ಇರುವುದರಿಂದ ಹಲವು ಹೋಮ್ ಸ್ಟೇಗಳು ತಲೆ ಎತ್ತಿವೆ. ಅಪರಿಚಿತ ಜನರು ಬರುವುದರಿಂದ ಈ ರೀತಿಯ ಘಟನೆಗಳು ಹೆಚ್ಚಾಗುತ್ತಿರುವುದರಿಂದ ಗ್ರಾಮಸ್ಥರು ಭಯದ ವಾತಾವರಣದಲ್ಲಿ ಬದುಕಬೇಕಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಇದನ್ನೂ ಓದಿ: ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಬಾಕಿಯಿರುವ ಕೇಂದ್ರದ ಪಾಲು ಬಿಡುಗಡೆಯಾಗಿಲ್ಲ: ಸಿಎಂ ಕಿಡಿ

    ಇನ್ನೂ ಸಂಪತ್ ಹೆಣ್ಣಿನ ಮೋಹದ ಬಲೆಗೆ ಸಿಲುಕಿ ಕೊಲೆಯಾಗಿರಬಹುದು ಎಂದು ಹೇಳಲಾಗುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಕೊಡಗು ಹಾಸನ ಪೊಲೀಸರು ಪ್ರಕರಣವನ್ನು ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್ – 31 ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ

  • ವಿದ್ಯಾರ್ಥಿನಿಯ ಹತ್ಯೆಗೈದವ ಆತ್ಮಹತ್ಯೆ ಮಾಡಿಕೊಂಡಿಲ್ಲ: ಎಸ್‍ಪಿ ಸ್ಪಷ್ಟನೆ

    ವಿದ್ಯಾರ್ಥಿನಿಯ ಹತ್ಯೆಗೈದವ ಆತ್ಮಹತ್ಯೆ ಮಾಡಿಕೊಂಡಿಲ್ಲ: ಎಸ್‍ಪಿ ಸ್ಪಷ್ಟನೆ

    ಮಡಿಕೇರಿ: ಸೋಮವಾರಪೇಟೆ (Somavarpet) ತಾಲೂಕಿನ ಸೂರ್ಲುಬ್ಬಿ ಗ್ರಾಮದಲ್ಲಿ ನಡೆದಿದ್ದ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿನಿಯ (SSLC Student) ಹತ್ಯೆ ಪ್ರಕರಣದ ಆರೋಪಿ ಆತ್ಮಹತ್ಯೆ ಮಾಡಿಕೊಂಡ ಮಾಹಿತಿ ಸುಳ್ಳು ಎಂದು ಕೊಡಗು (Kodagu) ಎಸ್‍ಪಿ ಕೆ.ರಾಮರಾಜನ್ ತಿಳಿಸಿದ್ದಾರೆ.

    ಆರೋಪಿ ಪ್ರಕಾಶ್ ಕಾಡಿನಲ್ಲಿ ತಲೆಮರೆಸಿಕೊಂಡಿದ್ದು, ಆ ಭಾಗದಲ್ಲಿ ನೆಟ್‍ವರ್ಕ್ ಇಲ್ಲದ ಕಾರಣ ತಪ್ಪು ಮಾಹಿತಿ ಹರಿದಾಡಿದೆ. ಪೆÇಲೀಸರಿಗೆ ಆತ್ಮಹತ್ಯೆ ಮಾಡಿಕೊಂಡ ಮಾಹಿತಿ ಬಂದಿತ್ತು. ಸ್ಥಳಕ್ಕೆ ಭೇಟಿ ನೀಡಿದಾಗ ಈ ಬಗ್ಗೆ ಯಾವುದೇ ಕುರುಹು ಸಿಕ್ಕಿಲ್ಲ. ಯಾರೋ ಸ್ಥಳೀಯರು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಕೊಡಗಿನಲ್ಲಿ SSLC ವಿದ್ಯಾರ್ಥಿನಿಯ ತಲೆ ಕತ್ತರಿಸಿ ಬರ್ಬರ ಕೊಲೆ!

    ಆರೋಪಿ ಕೋವಿ ಹಿಡಿದುಕೊಂಡು ಕಾಡಿಗೆ ತೆರಳಿದ್ದು, ಆತನ ಮನಸ್ಥಿತಿ ಸರಿಯಿಲ್ಲದ ಕಾರಣ ರಾತ್ರಿ ವೇಳೆ ಏನಾದರೂ ಅನಾಹುತ ಸಂಭವಿಸಿದರೆ ಎಂದು ಆರೋಪಿಯ ಶೋಧ ಕಾರ್ಯ ಸ್ಥಗಿತಗೊಳಿಸಲಾಗಿದೆ. ಶನಿವಾರ ಬೆಳಗ್ಗೆ ಆರೋಪಿ ಹಾಗೂ ಬಾಲಕಿಯ ತಲೆ ಭಾಗದ ಹುಡುಕಾಟ ನಡೆಸಲಿದ್ದೇವೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಛತ್ತೀಸ್‍ಗಢದಲ್ಲಿ ಎನ್‍ಕೌಂಟರ್‌ಗೆ 12 ಮಾವೋವಾದಿಗಳು ಬಲಿ

  • ಸೋಮವಾರಪೇಟೆ ಹೆದ್ದಾರಿಯಲ್ಲಿ ಕಾಡಾನೆ ಪ್ರತ್ಯಕ್ಷ

    ಸೋಮವಾರಪೇಟೆ ಹೆದ್ದಾರಿಯಲ್ಲಿ ಕಾಡಾನೆ ಪ್ರತ್ಯಕ್ಷ

    ಮಡಿಕೇರಿ: ಸೋಮವಾರಪೇಟೆ  (Somwarpet) ತಾಲೂಕಿನ ಕಾಜೂರು (Kajuru) ಮೀಸಲು ಅರಣ್ಯದ ಬಳಿ ಇರುವ ರಾಜ್ಯ ಹೆದ್ದಾರಿಯಲ್ಲಿ ಮತ್ತೆ ಕಾಡಾನೆ (Wild Elephant ) ಪ್ರತ್ಯಕ್ಷವಾಗಿದೆ.

    ಕಾಡಾನೆಗಳು ಹಗಲಲ್ಲೇ ಸಂಚರಿಸುತ್ತಿರುವುದರಿಂದ ಅಲ್ಲಿರುವ ಜನರಿಗೆ ಸಂಚರಿಸಲು ಮತ್ತು ಕಾಫಿ ತೋಟಗಳಲ್ಲಿ ಕೆಲಸ ಮಾಡಲು ಭಯಪಡುತ್ತಿದ್ದಾರೆ. ಕೋವರ್ ಕೊಲ್ಲಿಯ ಟಾಟಾ ಕಾಫಿ ಸಂಸ್ಥೆಯ ತೋಟದಲ್ಲಿದ್ದ ಒಂಟಿ ಸಲಗವನ್ನು ಆರ್.ಆರ್.ಟಿ ಸಿಬ್ಬಂದಿ ಹಾಗೂ ಅರಣ್ಯ ರಕ್ಷಕರು ಕಾಡಿಗಟ್ಟಲು ಮುಂದಾದ ಸಂದರ್ಭದಲ್ಲಿ ದಾಳಿ ಮಾಡಿದೆ. ಇದನ್ನೂ ಓದಿ: ಹೆಚ್‌ಡಿಡಿಯನ್ನು ಭೇಟಿ ಮಾಡಿ ಚರ್ಚಿಸಿದ ಯೋಗೇಶ್ವರ್‌

    ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಪಾರಾದ ಘಟನೆ ಕಾಜೂರು ಅರಣ್ಯ ಪ್ರದೇಶದ ಹೆದ್ದಾರಿಯಲ್ಲಿ ಶನಿವಾರ ಬೆಳಗ್ಗೆ ನಡೆದಿತ್ತು. ಸೋಮವಾರ ಬೆಳಗ್ಗೆ ಮತ್ತೆ ಕಾಜೂರಿನ ಆರ್.ಆರ್.ಟಿ ಸಿಬ್ಬಂದಿ ಹಾಗೂ ಅರಣ್ಯ ರಕ್ಷಕರು ತಂಗಿರುವ ವಸತಿಗೃಹದ ಬಳಿಗೆ ಬಂದು ಮತ್ತೆ ಕಾಡಿಗೆ ಕಾಡಾನೆ ಹಿಂದಿರುಗಿದೆ. ಇದನ್ನೂ ಓದಿ: ಮೋದಿ 3ನೇ ಬಾರಿ ಪ್ರಧಾನಿಯಾಗೋದನ್ನ ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ – ಹೆಚ್‌ಡಿಕೆ

    ಕಾಡಾನೆ ಹಗಲಿನಲ್ಲಿಯೇ ಓಡಾಡುತ್ತಿರುವುದರಿಂದ ದ್ವಿಚಕ್ರ ವಾಹನ ಸವಾರರು ಮತ್ತು ಕೂಲಿ ಕಾರ್ಮಿಕರು ಭಯದಿಂದಲೇ ಸಂಚರಿಸಬೇಕಾದ ಪರಿಸ್ಥಿತಿ ಎದುರಾಗಿದೆ. ಇದನ್ನೂ ಓದಿ: ಅಯೋಧ್ಯೆ ರಾಮಮಂದಿರದ ಮಂಡಲರಾಧನೆಗೆ ಬಾಗಲಕೋಟೆ ಅರ್ಚಕ ಆಯ್ಕೆ

  • ಬಜರಂಗದಳ ಅಲ್-ಖೈದಾ ಅಲ್ಲ: ಸಿದ್ದರಾಮಯ್ಯ ವಿರುದ್ಧ ಅಪ್ಪಚ್ಚು ರಂಜನ್ ಕಿಡಿ

    ಬಜರಂಗದಳ ಅಲ್-ಖೈದಾ ಅಲ್ಲ: ಸಿದ್ದರಾಮಯ್ಯ ವಿರುದ್ಧ ಅಪ್ಪಚ್ಚು ರಂಜನ್ ಕಿಡಿ

    ಮಡಿಕೇರಿ: ಬಜರಂಗದಳ ಭಯೋತ್ಪಾದಕ ಸಂಘಟನೆಯಲ್ಲ. ಅದು ಅಲ್-ಖೈದಾವೂ ಅಲ್ಲ ಎಂದು ಮಡಿಕೇರಿ ಕ್ಷೇತ್ರ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಅಪ್ಪಚ್ಚು ರಂಜನ್ (Appachu Ranjan) ಸಿದ್ದರಾಮಯ್ಯ (Siddaramaiah) ವಿರುದ್ಧ ಕಿಡಿಕಾರಿದ್ದಾರೆ.

    ಕೊಡಗು (Kodagu) ಜಿಲ್ಲೆಯ ಸೋಮವಾರಪೇಟೆ (Somwarpet) ತಾಲೂಕಿನ ಶಿರಂಗಾಲದಲ್ಲಿ ಆಯೋಜಿಸಿದ್ದ ಬಹಿರಂಗ ಪ್ರಚಾರ ಸಭೆಯಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಜರಂಗದಳ ಒಂದು ದೇಶಭಕ್ತ ಸಂಘಟನೆ. ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದ ಮೇಲೆ ಬಜರಂಗದಳವನ್ನು (Bhajarang Dal) ನಿಷೇಧ ಮಾಡುವುದಾಗಿ ಹೇಳಿದ್ದಾರೆ. ಅವರು ಅವಸಾನ ಹೊಂದುವುದು ಖಚಿತ ಎಂದು ಹರಿಹಾಯ್ದರು. ಇದನ್ನೂ ಓದಿ: ಪತ್ನಿ, ಸಹೋದರನಿಗಾಗಿ ಒಂದು ದಿನ ಆಸ್ಪತ್ರೆಗೆ ಭೇಟಿ – ಮತ್ತೊಂದು ದಿನ ಕ್ಷೇತ್ರದಲ್ಲಿ ಪ್ರಿಯಾಂಕ್ ಪ್ರಚಾರ

    ಬಜರಂಗದಳ ದೇಶಾಭಿಮಾನವನ್ನು ಪಸರಿಸುತ್ತಿರುವ ದೇಶಭಕ್ತರ ಸಂಘಟನೆ. ಅದು ಯಾವುದೇ ರೀತಿಯ ಭಯೋತ್ಪಾದಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿಲ್ಲ. ಇಂತಹ ಸಂಘಟನೆಯನ್ನು ನಿಷೇಧಿಸುತ್ತೇವೆ ಎಂದಿರುವ ಸಿದ್ದರಾಮಯ್ಯ ಈ ಬಾರಿ ವರುಣಾದಲ್ಲಿ (Varuna) ಸೋಲುವುದು ಖಚಿತ. ಅಲ್ಲದೇ ಕಾಂಗ್ರೆಸ್ (Congress) 40ಕ್ಕಿಂತ ಹೆಚ್ಚು ಸ್ಥಾನ ಗೆಲ್ಲುವುದಿಲ್ಲ ಎಂದರು. ಇದನ್ನೂ ಓದಿ: ಯತ್ನಾಳ್‌, ಪ್ರಿಯಾಂಕ್‌ ಖರ್ಗೆಗೆ ಶೋಕಾಸ್‌ ನೋಟಿಸ್‌ ಜಾರಿ

    ಇಂಗ್ಲೆಂಡ್‌ನಿಂದ ಟಿಪ್ಪುವಿನ ಖಡ್ಗ ತಂದ ವಿಜಯ್ ಮಲ್ಯ ಮಣ್ಣು ಮುಕ್ಕಿದರು. ಟಿಪ್ಪು ಧಾರವಾಹಿ ಮಾಡಿದ ಸಂಜಯ್ ಖಾನ್ ಸಹ ಮಣ್ಣು ಮುಕ್ಕಿದರು. ಇದೀಗ ಟಿಪ್ಪು ಜಯಂತಿ ಮತ್ತೆ ಮಾಡುತ್ತೇವೆ ಎನ್ನುತ್ತಿರುವ ಸಿದ್ದರಾಮಯ್ಯನವರ ಸರದಿ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಕಾಂಗ್ರೆಸ್‌ ಬಜರಂಗಿ ಸಂಘರ್ಷ – ಬೆಳಗ್ಗೆಯಿಂದಲೇ ದೇವಸ್ಥಾನಗಳಲ್ಲಿ ಮೊಳಗಲಿದೆ ಹನುಮಾನ್ ಚಾಲೀಸಾ

  • ಪ್ರತಾಪ್ ಸಿಂಹ ಮುಂದೆ ಯಾವ ಸ್ಟಾರ್ ಪ್ರಚಾರಕರೂ ಇಲ್ಲ: ಸಿದ್ದರಾಮಯ್ಯಗೆ ಪ್ರತಾಪ್ ಸಿಂಹ ಟಾಂಗ್

    ಪ್ರತಾಪ್ ಸಿಂಹ ಮುಂದೆ ಯಾವ ಸ್ಟಾರ್ ಪ್ರಚಾರಕರೂ ಇಲ್ಲ: ಸಿದ್ದರಾಮಯ್ಯಗೆ ಪ್ರತಾಪ್ ಸಿಂಹ ಟಾಂಗ್

    ಮಡಿಕೇರಿ: ಪ್ರತಾಪ್ ಸಿಂಹ (Prathap Simha) ಮುಂದೆ ಯಾವ ಸ್ಟಾರ್ ಪ್ರಚಾರಕರೂ ಇಲ್ಲ. ವರುಣಾ (Varuna) ಕ್ಷೇತ್ರಕ್ಕೆ ರಮ್ಯಾ ಮತ್ತು ದುನಿಯಾ ವಿಜಿ ಬರಲಿ. ನಾನು ಬರುತ್ತೇನೆ. ಯಾರಿಗೆ ಜೈಕಾರ ಹಾಕುತ್ತಾರೆ ಎನ್ನುವುದನ್ನು ನೋಡಲಿ ಎಂದು ಸಂಸದ ಪ್ರತಾಪ್ ಸಿಂಹ ಸಿದ್ದರಾಮಯ್ಯಗೆ (Siddaramaiah) ಟಾಂಗ್ ನೀಡಿದ್ದಾರೆ.

    ಡಿ.ಕೆ.ಶಿವಕುಮಾರ್ (D.K.Shivakumar) ಹಾಗೂ ಸಿದ್ದರಾಮಯ್ಯ ಪರ ದುನಿಯಾ ವಿಜಯ್ ಮತ್ತು ರಮ್ಯಾ ಪ್ರಚಾರದ ವಿಚಾರವಾಗಿ ಕೊಡಗಿನ (Kodagu) ಸೋಮವಾರಪೇಟೆಯಲ್ಲಿ (Somwarpet) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರುಣಾ ಕ್ಷೇತ್ರಕ್ಕೆ ಮಲ್ಲಿಕಾರ್ಜುನ ಖರ್ಗೆ (MallikarjunKharge) ಬಂದಿದ್ದಾರಾ? ಅವರು ಮೈಸೂರಿಗೆ (Mysuru) ಬಂದು ಕ್ಯಾಂಪೇನ್ ಮಾಡಿ ಅಲ್ಲಿಂದ ಹಾಗೆ ಹೋಗುತ್ತಾರೆ. ಖರ್ಗೆಯವರನ್ನು ರಾಜಕೀಯವಾಗಿ ಮುಗಿಸಲು ಸಿದ್ದರಾಮಯ್ಯ ಮುಂದಾಗಿದ್ದರು. ಹಾಗೆಯೇ ಕೊರಟಗೆರೆಯಲ್ಲಿ 2013ರಲ್ಲಿ ಪರಮೇಶ್ವರ್ ಅವರನ್ನು ಸೋಲಿಸಿ ಒಬ್ಬ ದಲಿತ ನಾಯಕನ್ನು ಮುಗಿಸುತ್ತಾರೆ ಎಂದು ಹರಿಹಾಯ್ದರು. ಇದನ್ನೂ ಓದಿ: ಮೇ 13ಕ್ಕೆ ಸಿದ್ದರಾಮಯ್ಯ ಸೋಲಿನ ಜೊತೆಗೆ ಮುಸ್ಲಿಮ್‌ ಓಲೈಕೆ ಅಂತ್ಯ : ಪ್ರತಾಪ್‌ ಸಿಂಹ

    ಡಿ.ಕೆ.ಶಿವಕುಮಾರ್ ಅವರು ಸಹಾ ಮೈಸೂರಿಗೆ ಬರುತ್ತಾರೆ ಆದರೆ ವರುಣಾ ಕ್ಷೇತ್ರಕ್ಕೆ ಹೋಗುವುದಿಲ್ಲ. ಯಾಕೆಂದರೆ ಸಿದ್ದರಾಮಯ್ಯ ಒಬ್ಬ ಜಾತಿವಾದಿ. ಅದಕ್ಕೆ ಕೆ.ಹೆಚ್.ಮುನಿಯಪ್ಪ, ಆಂಜನೇಯ ಸೇರಿದಂತೆ ಯಾರೂ ವರುಣಾದತ್ತ ಬರೋದಿಲ್ಲ. ಸಿದ್ದರಾಮಯ್ಯ ಮುಸ್ಲಿಂ ಅವರ ಓಲೈಕೆ ಮಾಡುವುದು ಬಿಟ್ಟರೆ ಬೇರೆ ಯಾವುದೇ ಕಾಳಜಿ ಇಲ್ಲ. ಅದು ಅವರ ಪಕ್ಷದವರಿಗೂ ಗೊತ್ತು. ಹಾಗಾಗಿ ದುನಿಯಾ ವಿಜಿ ಮತ್ತು ರಮ್ಯಾ ಬರೋದಕ್ಕೂ ಖರ್ಗೆ, ಪರಮೇಶ್ವರ್ ಅವರು ಬರೋದಕ್ಕೂ ಇರುವ ವ್ಯತ್ಯಾಸ ಎಲ್ಲರಿಗೂ ಗೊತ್ತಾಗುತ್ತದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ವಿನಾಶದ ಅಂಚಿನಲ್ಲಿ ಕಾಂಗ್ರೆಸ್ – ಪ್ರಿಯಾಂಕಾ, ರಾಹುಲ್ ಗಾಂಧಿ ಹೋದಲ್ಲೆಲ್ಲಾ ಅವರಿಗೆ ಸೋಲೇ: ಅರುಣ್ ಸಿಂಗ್

    ವರುಣಾ ಕ್ಷೇತ್ರದಲ್ಲಿ ಸೋಮಣ್ಣಗೆ ಜೈಕಾರ ಹಾಕುತ್ತಾರಾ ಅಥವಾ ಸಿದ್ದರಾಮಯ್ಯಗೆ ಜೈಕಾರ ಹಾಕುತ್ತಾರಾ ಎಂಬುದು ನಿಮಗೆ ಗೊತ್ತಾಗುತ್ತದೆ. ವರುಣಾಕ್ಷೇತ್ರದಲ್ಲಿ ಈಗಾಗಲೇ ಒಂದು ಘೋಷವಾಕ್ಯವನ್ನು ಎಲ್ಲರೂ ಹೇಳುತ್ತಿದ್ದಾರೆ. ಸೋಮಣ್ಣಗೆ ವೋಟು, ಸಿದ್ದರಾಮಯ್ಯಗೆ ಏಟು ಎಂದು ಜನಗಳೇ ಹೇಳುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಅಭಿಮಾನಿ ಬಳಗವೇ ನಮ್ಮ ಆನೆ ಬಲ – ಬಿಜೆಪಿ ಅಭ್ಯರ್ಥಿ ಗೆಲ್ಲಿಸುವಂತೆ ಕಿಚ್ಚ ಸುದೀಪ್‌ ಮನವಿ

  • ಫೋನಲ್ಲಿ ಮಾತನಾಡುತ್ತಿದ್ದ ವಿವಾಹಿತೆಯ ಮೇಲೆ ಅತ್ಯಾಚಾರ ಯತ್ನ – ಆರೋಪಿಗಳಿಗಾಗಿ ಪೊಲೀಸರ ಶೋಧ

    ಫೋನಲ್ಲಿ ಮಾತನಾಡುತ್ತಿದ್ದ ವಿವಾಹಿತೆಯ ಮೇಲೆ ಅತ್ಯಾಚಾರ ಯತ್ನ – ಆರೋಪಿಗಳಿಗಾಗಿ ಪೊಲೀಸರ ಶೋಧ

    ಮಡಿಕೇರಿ: ವಿವಾಹಿತೆಯ ಮೇಲೆ ತಡರಾತ್ರಿ ಅತ್ಯಾಚಾರಕ್ಕೆ (Rape) ಯತ್ನಿಸಿರುವ ಘಟನೆ ಕೊಡಗು (Kodagu) ಜಿಲ್ಲೆಯ ಸೋಮವಾರಪೇಟೆ (Somwarpet) ತಾಲೂಕಿನ ಬಿಳಿಗೆರೆ (Biligere)  ಗ್ರಾಮದಲ್ಲಿ ನಡೆದಿದೆ.

    19 ವರ್ಷದ ವಿವಾಹಿತೆ ರಾತ್ರಿ 9:30ರ ವೇಳೆಗೆ ಮನೆ ಮುಂಭಾಗದಲ್ಲಿ ಪೋನ್‌ನಲ್ಲಿ (Phone) ಮಾತಾನಾಡುತ್ತಿದ್ದಳು. ಈ ಸಂದರ್ಭ ಆಟೋದಲ್ಲಿ (Auto Rickshaw) ಬಂದಿಳಿದ ಮೂವರು ಯುವಕರು ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ಇದನ್ನೂ ಓದಿ: ಸಂಸದರಾಗಲು ಹೊರಟ್ಟಿದ್ದ ಸಿದ್ದರಾಮಯ್ಯ ಸಿಎಂ ಆಗಿದ್ದು ಹೇಗೆ?

    ನಂದಿಮೊಟ್ಟೆಯ ರಾಜ, ಹಟ್ಟಿಹೊಳೆಯ ನೌಶದ್, ಇಗ್ಗೋಡ್ಲಿನ ಫಾರೂಕ್ ಎಂಬವರು ಈ ಪ್ರಕರಣದ ಪ್ರಮುಖ ಆರೋಪಿಗಳು. ಬಲತ್ಕಾರವಾಗಿ ಗೃಹಿಣಿಯನ್ನು ಕಾಫಿತೋಟದೊಳಗೆ ಎಳೆದೊಯ್ಯುತ್ತಿದ್ದ ಸಂದರ್ಭ ಆಕೆ ಜೋರಾಗಿ ಕಿರುಚಲಾರಂಭಿಸಿದಳು. ಇದನ್ನು ಗಮನಿಸಿದ ಆಕೆಯ ಸಂಬಂಧಿಕರು ಭಯಭೀತರಾಗಿ ಕೂಡಲೇ ಸ್ಥಳೀಯರಿಗೆ ಹಾಗೂ ಹಿಂದೂ ಜಾಗರಣ ವೇದಿಕೆಯ (Hindu Jagarana Vedike) ಪ್ರಮುಖರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ವಿಷಯ ತಿಳಿದ ಕ್ಷಣಾರ್ಧದಲ್ಲಿ ಘಟನಾ ಸ್ಥಳಕ್ಕಾಗಮಿಸಿದ ಸ್ಥಳೀಯರು ಹಾಗೂ ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತರು ಓರ್ವ ಆರೋಪಿಯಾದ ರಾಜ ಹಾಗೂ ದುಷ್ಕೃತ್ಯಕ್ಕೆ ಬಳಸಿದ್ದ ಎರಡು ಆಟೋಗಳನ್ನು ವಶಕ್ಕೆ ಪಡೆದಿದ್ದಾರೆ. ಈ ದುಷ್ಕೃತ್ಯದಲ್ಲಿ ತೊಡಗಿದ್ದ ಇನ್ನಿಬ್ಬರು ಆರೋಪಿಗಳಾದ ನೌಶದ್ ಹಾಗೂ ಫಾರೂಕ್ ಪರಾರಿಯಾಗಿದ್ದಾರೆ. ಇದನ್ನೂ ಓದಿ: ದೂರು ಕೊಡಲು ಹೋದ ಯುವತಿಯನ್ನೇ ಮಂಚಕ್ಕೆ ಕರೆದಿದ್ದ ಇನ್‌ಸ್ಪೆಕ್ಟರ್‌ ಅಮಾನತು  

    ಫಾರೂಕ್ ಮಾದಾಪುರದಲ್ಲಿ ಮೊಬೈಲ್ ಅಂಗಡಿ ಇಟ್ಟುಕೊಂಡಿದ್ದ. ದುಷ್ಕೃತ್ಯಕ್ಕೆ ಬಳಸಿರುವ 2 ಆಟೋರಿಕ್ಷಾಗಳು ನೌಶದ್ ಹಾಗೂ ರಶೀದ್ ಎಂಬವರಿಗೆ ಸೇರಿದ್ದಾಗಿದೆ. ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಓರ್ವ ಆರೋಪಿ ಹಾಗೂ ಎರಡು ಆಟೋರಿಕ್ಷಾಗಳನ್ನು ಸೋಮವಾರಪೇಟೆ ಪೋಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿಗಳು ಹೊರದೇಶಗಳಿಗೆ ಪಲಾಯನವಾಗುವ ಸಾಧ್ಯತೆಯಿರುವುದರಿಂದ ದುಷ್ಕೃತ್ಯ ನಡೆಸಿದ ಎಲ್ಲಾ ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ತಪ್ಪಿದಲ್ಲಿ ಅನ್ಯಾಯಕ್ಕೊಳಗಾದ ವಿವಾಹಿತೆ ಹಾಗೂ ಅವರ ಕುಟುಂಬ ವರ್ಗಕ್ಕೆ ನ್ಯಾಯ ದೊರಕಿಸಲು ಸಂಘಟನೆಯ ನೇತೃತ್ವದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಲಾರಿ ಡಿಕ್ಕಿ – ಹೆದ್ದಾರಿಯಲ್ಲಿ ಚಲ್ಲಾಪಿಲ್ಲಿಯಾಗಿ ಬಿದ್ದ ಏಳು ಲಕ್ಷ ಮೌಲ್ಯದ ಮದ್ಯ

    ಘಟನೆ ಸಂಬಂಧಿಸಿದಂತೆ ಸೋಮವಾರಪೇಟೆ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ಆರೋಪಿಗಳ ಪತ್ತೆಗಾಗಿ ಹುಡುಕಾಟ ಮುಂದುವರೆಸಿದ್ದಾರೆ. ಇದನ್ನೂ ಓದಿ: ಗರ್ಭಪಾತಕ್ಕೆ ಯತ್ನ – 19ರ ಯುವತಿ ಸಾವು

  • ಹಿಟ್ಟಿನ ಗಿರಣಿಗೆ ಸಿಲುಕಿದ ತಾಯಿಯನ್ನು ರಕ್ಷಿಸಿದ ಪುತ್ರ

    ಹಿಟ್ಟಿನ ಗಿರಣಿಗೆ ಸಿಲುಕಿದ ತಾಯಿಯನ್ನು ರಕ್ಷಿಸಿದ ಪುತ್ರ

    ಮಡಿಕೇರಿ: ಹಿಟ್ಟಿನ ಗಿರಣಿ ಬೆಲ್ಟ್ ಗೆ ಸಿಲುಕಿದ ತಾಯಿಯನ್ನು ಸಮಯ ಪ್ರಜ್ಞೆಯಿಂದ ಬಾಲಕ ರಕ್ಷಿಸಿದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನಲ್ಲಿ ನಡೆದಿದೆ.

    ಬೆಸೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೂಡೂರು ಗ್ರಾಮದಲ್ಲಿ ಹಿಟ್ಟಿನ ಗಿರಣಿ ಬೆಲ್ಟ್ ಗೆ ತಾಯಿ ಅರ್ಪಿತಾ ಸಿಲುಕಿಕೊಂಡಿದ್ದು, ಬಾಲಕ ದೀಕ್ಷಿತ್(8) ಸಮಯ ಪ್ರಜ್ಞೆಯಿಂದ ರಕ್ಷಿಸಿ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರನಾಗಿದ್ದಾನೆ. ಇದನ್ನೂ ಓದಿ: ಯುವತಿಯ ಹೊಟ್ಟೆಯಲ್ಲಿ ಒಂದೂವರೆ ಕೆಜಿ ಕೂದಲು – ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆದ ವೈದ್ಯರು

    ಮನೆಯಲ್ಲಿ ಹಾಗೂ ಹಿಟ್ಟಿನ ಗಿರಣಿಯಲ್ಲಿ ಯಾರು ಇಲ್ಲದೇ ಇರುವಾಗ ಚಾಲನೆಯಲ್ಲಿದ್ದ ಗಿರಣಿಯ ಬೆಲ್ಟ್ ಗೆ ಆಕಸ್ಮಿಕವಾಗಿ ಅರ್ಪಿತಾ ಅವರ ತಲೆ ಸಿಲುಕಿಕೊಂಡಿದೆ. ಈ ಸಂಬಂಧ ಅರ್ಪಿತಾ ಅವರು ಜೋರಾಗಿ ಕೂಗಿಕೊಂಡಿದ್ದಾರೆ. ಹಿಟ್ಟಿನ ಗಿರಣಿ ಮುಂಭಾಗದ ಸ್ವಲ್ಪ ದೂರದಲ್ಲಿ ಅಟವಾಡುತ್ತಿದ್ದ ದೀಕ್ಷಿತ್ ತಾಯಿಯ ಕೂಗು ಕೇಳಿ ಓಡಿಬಂದಿದ್ದಾನೆ. ಸನ್ನಿವೇಶವನ್ನು ನೋಡಿ ಸಮಯಪ್ರಜ್ಞೆ ತೋರಿ ಹಿಟ್ಟಿನ ಗಿರಣಿಯ ಮೈನ್ ಸ್ವಿಚ್ ಆಫ್ ಮಾಡಿದ್ದಾನೆ. ಈ ಮೂಲಕ ಪ್ರಾಣಾಪಾಯದಿಂದ ತನ್ನ ತಾಯಿಯನ್ನು ಕಾಪಾಡಿದ್ದಾನೆ.

    ದೀಕ್ಷಿತ್ ಗಿರಣಿ ಮಾಲೀಕ ರವಿಕುಮಾರ್ ಮತ್ತು ಅರ್ಪಿತಾ ದಂಪತಿಯ ಪುತ್ರನಾಗಿದ್ದು, ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 2ನೇ ತರಗತಿ ಓದುತ್ತಿದ್ದಾನೆ.

  • ಸೋಮವಾರಪೇಟೆಯಲ್ಲಿ ‘ಸೂರಿಗಾಗಿ ಸಮರ’ ಪ್ರತಿಭಟನೆ

    ಸೋಮವಾರಪೇಟೆಯಲ್ಲಿ ‘ಸೂರಿಗಾಗಿ ಸಮರ’ ಪ್ರತಿಭಟನೆ

    ಮಡಿಕೇರಿ: ನಿವೇಶನ ರಹಿತರಿಗೆ ನಿವೇಶನ ನೀಡುವಂತೆ ಆಗ್ರಹಿಸಿ ಜಿಲ್ಲಾ ಯುನೈಟೆಡ್ ಪ್ಲಾಂಟೇಷನ್ ವರ್ಕರ್ಸ್ ಯೂನಿಯನ್ ವತಿಯಿಂದ ಸೋಮವಾರಪೇಟೆ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಯಿತು.

    ಕಾಫಿ ತೋಟದ ಲೈನ್ ಮನೆಯಲ್ಲಿರುವ ಕಾರ್ಮಿಕರಿಗೆ ಹಾಗೂ ನಿವೇಶನ ಇಲ್ಲದ ಕೂಲಿ ಕಾರ್ಮಿಕರಿಗೆ ನಿವೇಶನ ನೀಡುವಂತೆ ಆಗ್ರಹಿಸಿ ಸೂರಿಗಾಗಿ ಸಮಿತಿ ರಚಿಸಲಾಗಿದೆ. ಈ ಸಮಿತಿ ಮೂಲಕ ಜಿಲ್ಲೆಯಾದ್ಯಂತ ಹೋರಾಟ ಮಾಡುತ್ತ ಸಂಬಂಧಿಸಿದ ಇಲಾಖೆಗೆ ನಿವೇಶನಕ್ಕಾಗಿ ಅರ್ಜಿಗಳನ್ನು ಸಲ್ಲಿಸುತ್ತಾ ಬಂದಿದ್ದರೂ, ಯಾವುದೇ ಪ್ರಯೋಜನವಾಗಿಲ್ಲ ಎಂದು ಪ್ರತಿಭಟನಾಕಾರರು ದೂರಿದರು. ಇದನ್ನೂ ಓದಿ: ಸಂಪಾಜೆ ಘಾಟಿಯಲ್ಲಿ ಉಕ್ಕುತ್ತಿರುವ ಅಂತರ್ಜಲ – ರಸ್ತೆ ಕುಸಿಯುವ ಅತಂಕ- ಬೆಟ್ಟ ಕುಸಿತಕ್ಕೆ ಉಬ್ಬುತ್ತಿರುವ ಹೆದ್ದಾರಿಗಳು

    ರೆವಿನ್ಯೂ ಇಲಾಖೆ, ಸಂಬಂಧಿಸಿದ ಇಲಾಖೆ ಸೂಕ್ತವಾಗಿ ಸ್ಪಂದಿಸುತ್ತಿಲ್ಲ. ಜನಪ್ರತಿನಿಧಿಗಳು ಚುನಾವಣೆಗೂ ಮುನ್ನ ಕಾರ್ಮಿಕ ಮತದಾರರಿಗೆ ಭರವಸೆಗಳನ್ನು ನೀಡಿ ಮೋಸ ಮಾಡುತ್ತಿದ್ದಾರೆ ಎಂದು ಯುನೈಟೆಡ್ ಪ್ಲಾಂಟೇಷನ್ ವರ್ಕರ್ಸ್ ಯೂನಿಯನ್ ಜಿಲ್ಲಾಧ್ಯಕ್ಷ ಎಚ್.ಎಂ. ಸೋಮಪ್ಪ ದೂರಿದರು. ಮಾದಾಪುರ ಗ್ರಾಮ ಪಂಚಾಯಿತಿಯಲ್ಲಿ ವ್ಯಾಪ್ತಿಯಲ್ಲಿ ಪ್ರಕೃತಿ ವಿಕೋಪದ ಸಂದರ್ಭ ಮನೆ ಕಳೆದುಕೊಂಡವರಿಗೆ ಪರಿಹಾರ ನೀಡುವುದರೊಂದಿಗೆ ಮನೆ ನಿರ್ಮಿಸಿಕೊಡುವಂತೆ ಒತ್ತಾಯಿಸಿದರು. ತಾಲೂಕು ಕಚೇರಿಯ ಮೂಲಕ ಮನವಿಯನ್ನು ಸರ್ಕಾರಕ್ಕೆ ಸಲ್ಲಿಸಿದರು. ಇದನ್ನೂ ಓದಿ: ಕಸ ಆಯುವ ಮಹಿಳೆಯ ಪರ್ಫೆಕ್ಟ್ ಇಂಗ್ಲಿಷ್ – ವೀಡಿಯೋ ನೋಡಿ ನೆಟ್ಟಿಗರು ಫಿದಾ