Tag: ಸೋಯಾಬಿನ್‌

  • ಬೆಂಬಲ ಬೆಲೆಯಲ್ಲಿ ಸೋಯಾಬಿನ್, ಶೇಂಗಾ ಖರೀದಿ: ನೋಂದಣಿ, ಖರೀದಿ ಏಕಕಾಲಕ್ಕೆ ಆರಂಭಿಸಲು ಶಿವಾನಂದ ಪಾಟೀಲ್ ಸೂಚನೆ

    ಬೆಂಬಲ ಬೆಲೆಯಲ್ಲಿ ಸೋಯಾಬಿನ್, ಶೇಂಗಾ ಖರೀದಿ: ನೋಂದಣಿ, ಖರೀದಿ ಏಕಕಾಲಕ್ಕೆ ಆರಂಭಿಸಲು ಶಿವಾನಂದ ಪಾಟೀಲ್ ಸೂಚನೆ

    ಬೆಂಗಳೂರು: ಬೆಂಬಲ ಬೆಲೆಯಲ್ಲಿ ಸೋಯಾಬಿನ್ (Soybeans) ಮತ್ತು ಶೇಂಗಾ (Groundnut) ಖರೀದಿ ಮಾಡಲು ಖರೀದಿ ಕೇಂದ್ರ ಆರಂಭಕ್ಕೆ ತ್ವರಿತವಾಗಿ ಕ್ರಮ ಕೈಗೊಳ್ಳಬೇಕು ಹಾಗೂ ನೋಂದಣಿ ಮತ್ತು ಖರೀದಿ ಪ್ರಕ್ರಿಯೆಯನ್ನು ಏಕಕಾಲಕ್ಕೆ ಆರಂಭಿಸಬೇಕು ಎಂದು ಸಚಿವ ಶಿವಾನಂದ ಪಾಟೀಲ್ (Shivanand Patil) ಜಿಲ್ಲಾ ಟಾಸ್ಕ್‌ ಫೋರ್ಸ್‌ ಸಮಿತಿಗಳಿಗೆ ಸೂಚಿಸಿದ್ದಾರೆ.

    ಸೋಯಾಬಿನ್‌ಗೆ ಕ್ವಿಂಟಾಲ್‌ಗೆ 5,328 ರೂ. ಹಾಗೂ ಶೇಂಗಾಗೆ 7,623 ರೂ. ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ಬೀದರ್, ಬೆಳಗಾವಿ, ಧಾರವಾಡ, ಹಾವೇರಿ, ಯಾದಗಿರಿ, ಕಲಬುರಗಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಸೋಯಾಬಿನ್ ಹಾಗೂ ಕೊಪ್ಪಳ, ಧಾರವಾಡ, ಹಾವೇರಿ, ವಿಜಯನಗರ, ಬಳ್ಳಾರಿ, ಚಿತ್ರದುರ್ಗ, ಗದಗ, ಬಾಗಲಕೋಟೆ, ದಾವಣಗೆರೆ, ರಾಯಚೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಶೇಂಗಾ ಖರೀದಿ ಮಾಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ. ಇದನ್ನೂ ಓದಿ: ಪ್ರಮುಖ ವೃತ್ತಗಳಿಗೆ ಸಿಗ್ನಲ್‌ ಅಳವಡಿಸೋದು ಯಾವಾಗ? – ಚಿಕ್ಕೋಡಿಯಲ್ಲಿ ಟ್ರಾಫಿಕ್ ಕಾಟ, ಜನರ ಪರದಾಟ

    ನಾಫೆಡ್, ಎನ್‌ಸಿಸಿಎಫ್ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಲವನ್ನು ಖರೀದಿಗೆ ಏಜನ್ಸಿಯಾಗಿ ನೇಮಕ ಮಾಡಲಾಗಿದೆ. ನೋಂದಣಿಗೆ 80 ದಿನ ಹಾಗೂ ಖರೀದಿಗೆ 90 ದಿನ ನಿಗದಿಪಡಿಸಲಾಗಿದೆ ಎಂದರು. ಇದನ್ನೂ ಓದಿ: ದುರ್ಗಾ ಮೂರ್ತಿ ವಿಸರ್ಜನೆಗೆಂದು ತೆರಳುತ್ತಿದ್ದಾಗ ಕೊಳಕ್ಕೆ ಬಿದ್ದ ಟ್ರ್ಯಾಕ್ಟರ್ – ಕನಿಷ್ಠ 10 ಮಂದಿ ಸಾವು

    ಅಗತ್ಯಕ್ಕೆ ಅನುಗುಣವಾಗಿ ಖರೀದಿ ಕೇಂದ್ರಗಳನ್ನು ಆರಂಭಿಸಬೇಕು, ಖರೀದಿ ಕೇಂದ್ರಗಳಲ್ಲಿ ಲೋಪಗಳಾಗದಂತೆ ಎಚ್ಚರಿಕೆ ವಹಿಸಬೇಕು ಹಾಗೂ ಮಾರ್ಗಸೂಚಿ ಅನ್ವಯ ಖರೀದಿ ಮಾಡಲಾಗುತ್ತಿದೆಯೇ? ಎಂಬ ಬಗ್ಗೆ ನಿರಂತರವಾಗಿ ನಿಗಾ ವಹಿಸಬೇಕು ಎಂದು ಸಂಬಂಧಪಟ್ಟ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.  ಇದನ್ನೂ ಓದಿ: ಎನ್‌ಕೌಂಟರ್ ಭೀತಿ – ಏಕಕಾಲಕ್ಕೆ 103 ನಕ್ಸಲರ ಶರಣಾಗತಿ

    ಎಫ್‌ಎಕ್ಯೂ ಗುಣಮಟ್ಟ ಪರಿಶೀಲನೆಗೆ ಕೃಷಿ ಅಥವಾ ತೋಟಗಾರಿಕೆ ಇಲಾಖೆಯಲ್ಲಿ ಲಭ್ಯ ಇರುವ ಅಧಿಕಾರಿಗಳನ್ನು ಬಳಸಿಕೊಳ್ಳಬೇಕು. ಅಗತ್ಯವಿದ್ದರೆ ಖರೀದಿ ಸಂಸ್ಥೆಗಳು ಅಂತಹ ಅಧಿಕಾರಿಗಳಿಗೆ ತರಬೇತಿ ತರಬೇತಿ ನೀಡಬೇಕು ಎಂದು ಸೂಚಿಸಿದ್ದಾರೆ. ಇದನ್ನೂ ಓದಿ: ಚಿತ್ರದುರ್ಗ | ಚಳ್ಳಕೆರೆಯಲ್ಲಿ ಮಳೆ ಇಲ್ಲದೆ ಒಣಗಿದ ಶೇಂಗಾ ಬೆಳೆ – ರೈತರು ಕಂಗಾಲು

  • ವಿಚ್ಛೇದನ ಪಡೆದ ನಂತರವೂ ಮುಗಿಯದ ದ್ವೇಷ – ಕೌಟುಂಬಿಕ ಕಲಹಕ್ಕೆ ಪತ್ನಿ ಬೆಳೆದಿದ್ದ ಬೆಳೆ ನಾಶ ಮಾಡಿದ್ನಾ ಪತಿ?

    ವಿಚ್ಛೇದನ ಪಡೆದ ನಂತರವೂ ಮುಗಿಯದ ದ್ವೇಷ – ಕೌಟುಂಬಿಕ ಕಲಹಕ್ಕೆ ಪತ್ನಿ ಬೆಳೆದಿದ್ದ ಬೆಳೆ ನಾಶ ಮಾಡಿದ್ನಾ ಪತಿ?

    – ಸಾಲ ಮಾಡಿ ಬೆಳೆದಿದ್ದ ಸೋಯಾಬಿನ್ ಮಣ್ಣುಪಾಲು!

    ಹಾವೇರಿ: ಕೌಟುಂಬಿಕ ಕಲಹದಿಂದ ವಿಚ್ಛೇದನ ಪಡೆದ ನಂತರವೂ ಪತಿ-ಪತ್ನಿ ಗಲಾಟೆ ಮುಂದುವರಿದು, ಸಾವಿರಾರು ಮೌಲ್ಯದ ಕೃಷಿ ಬೆಳೆ ನಾಶದ ಹಂತಕ್ಕೆ ತಲುಪಿರುವ ಘಟನೆ ಹಾವೇರಿಯಲ್ಲಿ (Haveri) ನಡೆದಿದೆ. ವಿಚ್ಛೇದಿತ ಪತಿ ವಿರುದ್ಧವೇ ಈಗ ಪತ್ನಿ ಗಂಭೀರ ಆರೋಪ ಮಾಡಿದ್ದಾಳೆ.

    ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನ ವರ್ದಿ ಗ್ರಾಮದಲ್ಲಿ ನಡೆದ ಘಟನೆಯಿದು. ಕಳೆದ ಎರಡು-ಮೂರು ದಿನಗಳ ಹಿಂದೆ, ಹೇಮಲತಾ ಕಟಗಿ ಎಂಬವರಿಗೆ ಸೇರಿದ ಎರಡೂವರೆ ಎಕರೆಯಲ್ಲಿ ಬೆಳೆದಿದ್ದ ಸೋಯಾಬಿನ್ ಬೆಳೆಯನ್ನು ರಾತ್ರೋರಾತ್ರಿ ನಾಶ ಮಾಡಲಾಗಿದೆ. ಇದನ್ನೂ ಓದಿ: ಗಡಿಭಾಗದ ಮಕ್ಕಳನ್ನು ಶಾಲೆಗೆ ಸೆಳೆಯೋಕೆ ಶಿಕ್ಷಕರ ಪ್ಲ್ಯಾನ್‌ – ಸ್ವಂತ ಖರ್ಚಿನಲ್ಲಿ ಎಲ್‌ಕೆಜಿ, ಯುಕೆಜಿ

    ಹೇಮಲತಾ ಮತ್ತು ಸತೀಶ್‌ಗೆ ಆರು ವರ್ಷದ ಹಿಂದೆ ಮದುವೆ ಆಗಿತ್ತು. ಇಬ್ಬರ ನಡುವೆ ಕೌಟುಂಬಿಕ ಕಲಹದಿಂದ ಒಂದೂವರೆ ವರ್ಷದ ಹಿಂದೆ ವಿಚ್ಛೇದನ ಪಡೆದುಕೊಂಡಿದ್ದರು. ಹಣಕ್ಕಾಗಿ ರಾಜಿ ಪಂಚಾಯಿತಿ ಮಾಡಿಸಿದ್ದ ಗ್ರಾಮಸ್ಥರು ಜಮೀನು ಉಳುಮೆ ಮಾಡಿಕೊಳ್ಳೋಕೆ ಅವಕಾಶ ಮಾಡಿಕೊಟ್ಟಿದ್ದರು. ಹೇಮಲತಾ ಕುಟುಂಬದವರು ಈ ಬಾರಿ ಸೋಯಾಬಿನ್ ಬೆಳೆದಿದ್ದರು. ಜಮೀನು ಉಳುಮೆ ಮಾಡೋವಾಗಲೇ ಸತೀಶ್ ಸವಾಲು ಹಾಕಿದ್ದ. ಈಗ ಆತನೇ ಬೆಳೆ ನಾಶ ಮಾಡಿದ್ದಾನೆ ಎಂದು ಹೇಮಲತಾ ಆರೋಪಿಸಿದ್ದಾರೆ.

    ಎರಡೂವರೆ ಎಕರೆ ಜಮೀನಿನಲ್ಲಿ ಬೆಳೆದಿದ್ದ ಸೋಯಾಬಿನ್ ಬೆಳೆಯನ್ನ ಟ್ರ‍್ಯಾಕ್ಟರ್ ಬಳಸಿ ಸಂಪೂರ್ಣ ನಾಶ ಮಾಡಿದ್ದಾರೆ ಎಂದು ಹೇಮಲತಾ ಹೇಳುತ್ತಿದ್ದಾರೆ. ನನಗೂ ಇದಕ್ಕೂ ಸಂಬಂಧನೇ ಇಲ್ಲ ಅಂತಾ ಸತೀಶ್ ಹೇಳುತ್ತಿದ್ದಾರೆ. ಆದರೆ ಸಂಬಂಧಿಕರು ಸತೀಶ್ ಮೇಲೆ ಆರೋಪ ಮಾಡುತ್ತಿದ್ದಾರೆ. 60 ರಿಂದ 70 ಸಾವಿರ ಖರ್ಚು ಮಾಡಿ ಬೆಳೆದಿದ್ದೇವೆ. ಕೌಟುಂಬಿಕ ಕಲಹದ ದ್ವೇಷ ಇಟ್ಟುಕೊಂಡು, ಜಮೀನು ತಾನೇ ಉಳುಮೆ ಮಾಡುವ ಉದ್ದೇಶದಿಂದ ರಾತ್ರೋರಾತ್ರಿ ಬಂದು ಬೆಳೆನಾಶ ಮಾಡಿದ್ದಾನೆ ಎಂದು ಕುಟುಂಬದ ಸದಸ್ಯರು ಅರೋಪಿಸಿದ್ದಾರೆ. ಜೊತೆಗೆ ಆಡೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ಬೆಳೆನಾಶ ಮಾಡಿರುವವರಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಲೋಕಾಯುಕ್ತದಲ್ಲಿ ವಿಚಾರಣೆಗೆ ಬಾಕಿ ಉಳಿದಿವೆ 18 ಸಾವಿರಕ್ಕೂ ಹೆಚ್ಚು ಕೇಸ್‌

  • ರಾಜ್ಯದ ರೈತರಿಗೆ ಗಣೇಶ ಹಬ್ಬಕ್ಕೆ ಕೇಂದ್ರದಿಂದ ಗಿಫ್ಟ್‌ – ಉದ್ದು, ಸೋಯಾಬಿನ್‌ ಬೆಂಬಲ ಬೆಲೆಯಲ್ಲಿ ಖರೀದಿ

    ರಾಜ್ಯದ ರೈತರಿಗೆ ಗಣೇಶ ಹಬ್ಬಕ್ಕೆ ಕೇಂದ್ರದಿಂದ ಗಿಫ್ಟ್‌ – ಉದ್ದು, ಸೋಯಾಬಿನ್‌ ಬೆಂಬಲ ಬೆಲೆಯಲ್ಲಿ ಖರೀದಿ

    ನವದೆಹಲಿ: ರಾಜ್ಯದಲ್ಲಿ ಮತ್ತೆರೆಡು ಬೆಳೆಗಳನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ಕೇಂದ್ರ ಸಚಿವ ಗ್ರಾಹಕರ ವ್ಯವಹಾರ, ಆಹಾರ ಮತ್ತು ನಾಗರಿಕ ಸರಬರಾಜು ಖಾತೆಯ ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ತಿಳಿಸಿದ್ದಾರೆ.

    ರಾಜ್ಯದಲ್ಲಿ ಹೆಸರು, ಸೂರ್ಯಕಾಂತಿ ಜತೆಗೆ ಈಗ ಉದ್ದು ಮತ್ತು ಸೋಯಾಬಿನ್ ಅನ್ನೂ ಬೆಂಬಲ ಬೆಲೆಯಲ್ಲಿ ಖರೀದಿಸುವಂತೆ ರಾಜ್ಯ ಸರ್ಕಾರಕ್ಕೆ ಕೇಂದ್ರ ನಿರ್ದೇಶಿಸಿದೆ ಎಂದು ಹೇಳಿದ್ದಾರೆ.

    ನಾಲ್ಕೈದು ದಿನಗಳ ಹಿಂದಷ್ಟೇ ಹೆಸರು ಮತ್ತು ಸೂರ್ಯಕಾಂತಿ ಬೆಳೆಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಅನುಮತಿ ನೀಡಿದ್ದ ಕೇಂದ್ರ ಸರ್ಕಾರ, ಇದೀಗ ಉದ್ದು (Vigna Mungo) ಮತ್ತು ಸೋಯಾಬಿನ್ ( Soybean) ಅನ್ನೂ ಬೆಂಬಲ ಬೆಲೆಯಲ್ಲಿ ಖರೀದಿಸಲು ಅನುಮೋದನೆ ನೀಡಿದೆ. ಈ ಮೂಲಕ ರಾಜ್ಯದ ರೈತರಿಗೆ ಗಣೇಶ ಹಬ್ಬದ ಗಿಫ್ಟ್ ನೀಡಿದೆ ಎಂದಿದ್ದಾರೆ ಸಚಿವ ಜೋಶಿ.

    “ಹೆಸರು ಮತ್ತು ಸೂರ್ಯಕಾಂತಿ”ಗೆ ಬೆಂಬಲ ಬೆಲೆ ಘೋಷಿಸಿ ರಾಜ್ಯದಲ್ಲಿ ಖರೀದಿ ಕೇಂದ್ರ ತೆರೆಯುತ್ತಿದ್ದಂತೆಯೇ ಕೇಂದ್ರ ಕೃಷಿ ಸಚಿವಾಲಯ ಇದೀಗ “ಉದ್ದು ಮತ್ತು ಸೋಯಾಬೀನ್” ಗೂ ಬೆಂಬಲ ಬೆಲೆ ಖರೀದಿ ಕೇಂದ್ರ ತೆರೆಯಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದೆ.

    ಕರ್ನಾಟಕದಲ್ಲಿ 2024-25 ರ ಮುಂಗಾರು ಹಂಗಾಮಿನಲ್ಲಿ ಬೆಂಬಲ ಬೆಲೆ ಯೋಜನೆಯಡಿ 19,760 ಮೆಟ್ರಿಕ್ ಟನ್ ಉದ್ದು ಹಾಗೂ 1,03,315 ಮೆಟ್ರಿಕ್ ಟನ್ ಸೋಯಾಬಿನ್ ಖರೀದಿಗೆ ಕೇಂದ್ರ ಸರ್ಕಾರ ಅಸ್ತು ಎಂದಿದೆ.

    ಮುಕ್ತ ಮಾರುಕಟ್ಟೆಯಲ್ಲಿ ಈ ಬೆಳೆಗಳಿಗೆ ಬೆಲೆ ಕಡಿಮೆ ಇರುವುದರಿಂದ MSP ಅಡಿಯಲ್ಲಿ ಖರೀದಿಸಿ ರೈತರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದು ಸಚಿವ ಜೋಶಿ ತಿಳಿಸಿದ್ದಾರೆ.

    ರಾಜ್ಯದಲ್ಲಿ 90 ದಿನಗಳ ಅವಧಿಗೆ ಖರೀದಿ ಕೇಂದ್ರ ತೆರೆದು ಬೆಂಬಲ ಬೆಲೆ ಯೋಜನೆಯಡಿ ಉದ್ದು ಮತ್ತು ಸೋಯಾಬೀನ್ ಖರೀದಿಸುವಂತೆ ಕೇಂದ್ರ ಕೃಷಿ ಸಚಿವಾಲಯ ರಾಜ್ಯ ಸರ್ಕಾರಕ್ಕೆ ನಿನ್ನೆಯೇ (ಆ.29)ಆದೇಶ ಹೊರಡಿಸಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಯತ್ನಾಳ್ ಒಡೆತನದ ಕಾರ್ಖಾನೆಗೆ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳ ಭೇಟಿ

    ಉದ್ದಿನ ಕಾಳು 7400 ರೂ. ಮತ್ತು ಸೋಯಾಬಿನ್ ಗೆ 4892 ರೂ.. ಬೆಂಬಲ ಬೆಲೆಯನ್ನು ಕೇಂದ್ರ ಸರ್ಕಾರ ನಿಗದಿಪಡಿಸಿದೆ. ಕಳೆದ ವರ್ಷ 6,950 ರೂ.. ಇದ್ದ ಉದ್ದಿನ ಬೆಂಬಲ ಬೆಲೆ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 450 ರೂ.. ಹೆಚ್ಚಳ ಕಂಡಿದೆ. 4600 ರೂ. ದರವಿದ್ದ ಸೋಯಾಬಿನ್ ಬೆಂಬಲ ಬೆಲೆ ಈಗ 292 ರೂ. ಹೆಚ್ಚಳವಾಗಿದೆ.

    ತಕ್ಷಣ ಖರೀದಿ ಕೇಂದ್ರ ತೆರೆಯಲು ಒತ್ತಾಯ: ರಾಜ್ಯ ಸರ್ಕಾರ ತಕ್ಷಣವೇ ರಾಜ್ಯದ್ಯಂತ ಬೆಂಬಲ ಬೆಲೆ ಖರೀದಿ ಕೇಂದ್ರಗಳನ್ನು ಆರಂಭಿಸಿ ಹೆಸರು, ಸೂರ್ಯಕಾಂತಿ ಜತೆಗೆ ಉದ್ದು ಮತ್ತು ಸೋಯಾಬಿನ್ ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಬೇಕೆಂದು ಸಚಿವ  ಜೋಶಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

    ಪ್ರಧಾನಿ ಸ್ಪಂದನೆ: ರಾಜ್ಯದ ರೈತರ ಸಮಸ್ಯೆಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೃಷಿ ಸಚಿವ ಶಿವರಾಜ್‌ ಸಿಂಗ್‌ ಸಿಂಗ್ ಚೌಹಾಣ್‌  ನಿರಂತರ ಸ್ಪಂದಿಸುತ್ತಲೇ ಬಂದಿದ್ದಾರೆ. ಇದೀಗ ನಾಲ್ಕು ಬೆಳೆಗಳಿಗೆ ಬೆಂಬಲ ಬೆಳೆ ಖರೀದಿ ಕೇಂದ್ರ ತೆರೆಯಲು ಅನುಮತಿ ನೀಡಿದ್ದಾರೆಂದು ಸಚಿವ ಪ್ರಲ್ಹಾದ ಜೋಶಿ ಧನ್ಯವಾದ ಹೇಳಿದ್ದಾರೆ.

  • ಶೇಂಗಾ, ಸೋಯಾಬೀನ್ ಬೆಳೆಗಾರರಿಗೆ ಮಧ್ಯಂತರ ಬೆಳೆ ವಿಮೆ ಬಿಡುಗಡೆಗೆ ಕ್ರಮ : ಜೋಶಿ

    ಶೇಂಗಾ, ಸೋಯಾಬೀನ್ ಬೆಳೆಗಾರರಿಗೆ ಮಧ್ಯಂತರ ಬೆಳೆ ವಿಮೆ ಬಿಡುಗಡೆಗೆ ಕ್ರಮ : ಜೋಶಿ

    ಬೆಂಗಳೂರು: ಧಾರವಾಡ ಜಿಲ್ಲೆಯಲ್ಲಿ ಶೇಂಗಾ ಮತ್ತು ಸೋಯಾಬಿನ್ (Groundnut, Soybean) ಬೆಳೆಗಳಿಗೂ ಮಧ್ಯಂತರ ಬೆಳೆ ವಿಮೆ (Insurance) ನೀಡುವಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ತಿಳಿಸಿದ್ದಾರೆ.

    ಧಾರವಾಡ ಸಂಸದರೂ ಆಗಿರುವ ಕೇಂದ್ರ ಸಂಸದೀಯ ಸಚಿವ ಜೋಶಿ ಅವರು ಈ ಬಗ್ಗೆ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಡಿದ್ದಾರೆ.

    ಪೋಸ್ಟ್‌ನಲ್ಲಿ ಏನಿದೆ?
    ಬೆಳೆ ಹಾನಿ ಸಮೀಕ್ಷೆಗೂ ಮೊದಲೇ ಶೇಂಗಾ ಹಾಗೂ ಸೋಯಾಬಿನ್ ಬೆಳೆ ಕಟವು ಆಗಿದ್ದರಿಂದ ಈ ಎರಡೂ ಬೆಳೆಗಳನ್ನು ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಮಧ್ಯಂತರ ಪರಿಹಾರ ಪ್ರಕ್ರಿಯೆಯಿಂದ ವಿಮಾ ಕಂಪನಿ ಕೈ ಬಿಟ್ಟಿತ್ತು.  ಇದನ್ನೂ ಓದಿ: 60 ವರ್ಷದ ಕನಸಿನ ಯೋಜನೆ – ಇಂದು ಮೋದಿಯಿಂದ ದೇಶದ ಅತಿ ಉದ್ದದ ಸಮುದ್ರ ಸೇತುವೆ ಲೋಕಾರ್ಪಣೆ

    ಧಾರವಾಡ ಜಿಲ್ಲಾಡಳಿತ ಮಧ್ಯಂತರ ಬೆಳೆ ವಿಮೆ ಪರಿಹಾರಕ್ಕೆ ಸಲ್ಲಿಸಿದ ರಿಪೋರ್ಟ್ ನಲ್ಲಿ ಸೋಯಾಬಿನ್ ಮತ್ತು ಶೇಂಗಾ ಬೆಳೆಗಳನ್ನ ಹೊರತುಪಡಿಸಿ ಮಿಕ್ಕ ಎಲ್ಲಾ ಬೆಳೆಗಳನ್ನು SBI ವಿಮೆ ಕಂಪನಿ ಅಂಗೀಕರಿಸಿ ಮಧ್ಯಂತರ ವಿಮೆ ಹಣ ಬಿಡುಗಡೆ ಮಾಡಿತ್ತು.

     

    ಈ ವಿಚಾರ ಗಮನಕ್ಕೆ ಬರುತ್ತಲೇ ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಗಳು ಮತ್ತು ವಿಮೆ ಕಂಪನಿಯನ್ನು ಸಂಪರ್ಕಿಸಿ, ಸಭೆ ನಡೆಸಿ ಮುಂಗಾರಿನ ಶೇಂಗಾ ಮತ್ತು ಸೋಯಾಬೀನ್ ಬೆಳೆಗಳಿಗೂ ಬೆಳೆ ವಿಮೆ ಪರಿಹಾರ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗಿದೆ. ಎಂದು ಸಚಿವ ಜೋಶಿ ತಿಳಿಸಿದ್ದಾರೆ.   ಇದನ್ನೂ ಓದಿ: ಗುಜರಾತ್‌ನಿಂದ ಅಯೋಧ್ಯೆಗೆ ಆಗಮಿಸಿದೆ 500 ಕೆಜಿಯ ಬೃಹತ್ ನಗಾರಿ

    ಈ ಬೆಳೆಗಾರರ ಸಮಸ್ಯೆ ಅರಿತು ಕೇಂದ್ರ ಕೃಷಿ ಸಚಿವ ಅರ್ಜುನ್ ಅವರೊಂದಿಗೂ ಚರ್ಚೆ ನಡೆಸಿ, ಫಸಲ್ ಬಿಮಾ CEO ರಿತೇಶ್ ಚೌಹಾನ್ ಮತ್ತು SBI ವಿಮೆ ಕಂಪನಿಯ ರಾಷ್ಟ್ರೀಯ ಮುಖ್ಯಸ್ಥ ಪಿಯೂಷ್ ಸಿಂಗ್ ಅವರ ಗಮನ ಸೆಳೆದು ಶೇಂಗಾ, ಸೋಯಾಬೀನ್ ಬೆಳೆ ಗಾರರಿಗೂ ಮಧ್ಯಂತರ ಬೆಳೆ ವಿಮೆ ಪರಿಹಾರ ಕೈ ಸೇರುವಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಜೋಶಿ ಹೇಳಿದ್ದಾರೆ.

    ಧಾರವಾಡ ಜಿಲ್ಲೆಯ ಶೇಂಗಾ ಹಾಗೂ ಸೋಯಾಬೀನ್ ಬೆಳೆಗಳಿಗೂ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಮಧ್ಯಂತರ ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಅತಿ ಶೀಘ್ರದಲ್ಲಿ ಪತ್ರ ತಲುಪಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.