Tag: ಸೌಜನ್ಯ ಕೇಸ್‌

  • ಬೆಳ್ತಂಗಡಿ ಠಾಣೆಯಲ್ಲಿ ಸೌಜನ್ಯ ತಾಯಿ ವಿರುದ್ಧ ಎಫ್‌ಐಆರ್

    ಬೆಳ್ತಂಗಡಿ ಠಾಣೆಯಲ್ಲಿ ಸೌಜನ್ಯ ತಾಯಿ ವಿರುದ್ಧ ಎಫ್‌ಐಆರ್

    ಮಂಗಳೂರು: ಸೌಜನ್ಯ (Soujanya) ತಾಯಿ ಕುಸುಮಾವತಿ ಸೇರಿದಂತೆ 12 ಜನರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ (Belthangady Police Station) ಎಫ್‌ಐಆರ್ ದಾಖಲಾಗಿದೆ.

    ಅ.27 ರಂದು ಬೆಳ್ತಂಗಡಿ ತಾಲೂಕು ಕಚೇರಿ ಎದುರು ಅಕ್ರಮ ಕೂಟ ಸೇರಿದ ಆರೋಪದಲ್ಲಿ ತಿಮರೋಡಿ ಸಹೋದರ ಮೋಹನ್ ಶೆಟ್ಟಿ, ಪ್ರಸನ್ನ ರವಿ ಸೇರಿದಂತೆ ಹಲವರ ವಿರುದ್ಧ ಎಫ್‌ಐಆರ್ ಆಗಿದೆ. ಇದನ್ನೂ ಓದಿ: ಧರ್ಮಸ್ಥಳ ಕೇಸ್ – ಸುಜಾತ ಭಟ್ ಹೊರತುಪಡಿಸಿ ವಿಚಾರಣೆಗೆ ಗೈರಾದ ಬುರುಡೆ ಗ್ಯಾಂಗ್

    ಸಾಮಾಜಿಕ ಜಾಲತಾಣಗಳಲ್ಲಿ ತಿಮರೋಡಿ ಗಡಿಪಾರು ವಿರುದ್ಧ ಪ್ರತಿಭಟನೆ ಅಂತಾ ಕರೆ ನೀಡಲಾಗಿತ್ತು. ಪೊಲೀಸರಿಂದ ಅನುಮತಿ ಸಿಗದೇ ಇದ್ದರೂ ಜನ ಸೇರುವಂತೆ ಕರೆ ಕೊಡಲಾಗಿತ್ತು. ಇದರಿಂದ ಶಾಂತಿ-ಸುವ್ಯವಸ್ಥೆಗೆ ಧಕ್ಕೆಯಾಗಲಿದೆ ಎಂದು ಪೊಲೀಸರು ಸುಮೋಟೊ ಪ್ರಕರಣ ದಾಖಲಿಸಿದ್ದಾರೆ.

  • ಕೆಲವರು ಉದ್ದೇಶಪೂರ್ವಕವಾಗಿ ಧರ್ಮಸ್ಥಳದ ತೇಜೋವಧೆ ಮಾಡುತ್ತಿರಬಹುದು: ದಿನೇಶ್‌ ಗುಂಡೂರಾವ್‌

    ಕೆಲವರು ಉದ್ದೇಶಪೂರ್ವಕವಾಗಿ ಧರ್ಮಸ್ಥಳದ ತೇಜೋವಧೆ ಮಾಡುತ್ತಿರಬಹುದು: ದಿನೇಶ್‌ ಗುಂಡೂರಾವ್‌

    – ಸೌಜನ್ಯ ಇರಲಿ, ಬೇರೆ ಅತ್ಯಾಚಾರ, ಹತ್ಯೆ ಪ್ರಕರಣಗಳಿರಲಿ ನ್ಯಾಯ ಸಿಕ್ಕೇ ಸಿಗುತ್ತೆ ಎಂದ ಸಚಿವ

    ಬೆಂಗಳೂರು: ಧರ್ಮಸ್ಥಳ ಶ್ರೀ ಮಂಜುನಾಥ ಇರುವ ಪುಣ್ಯ ಕ್ಷೇತ್ರ. ಕೆಲವರು ಉದ್ದೇಶಪೂರ್ವಕವಾಗಿ ತೇಜೋವಧೆ ಮಾಡುತ್ತಿರಬಹುದು. ಒಟ್ಟಿನಲ್ಲಿ ಸೌಜನ್ಯ ಪ್ರಕರಣವಿರಲಿ (Soujanya Case) ಬೇರೆ ಅತ್ಯಾಚಾರ, ಹತ್ಯೆ ಪ್ರಕರಣಗಳಿರಲಿ ನ್ಯಾಯ ಸಿಕ್ಕಿಯೇ ಸಿಗುತ್ತದೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ (Dinesh Gundu Rao) ಹೇಳಿದ್ದಾರೆ.

    ಧರ್ಮಸ್ಥಳದಲ್ಲಿ (Dharmasthala) ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು ಪ್ರತಿಕ್ರಿಯಿಸಿದ್ದಾರೆ. ಅನುಮಾನಾಸ್ಪದ ಸಾವುಗಳ ಬಗ್ಗೆ ಎಸ್ಐಟಿ ತನಿಖೆ ಆಗಬೇಕು ಅಂತ ಒತ್ತಡ ಇತ್ತು. ದಕ್ಷಿಣ ಕನ್ನಡ ಪೊಲೀಸರು ತನಿಕೆಗೆ ಸಿದ್ಧವಿದ್ದರು ಅವರ ಮೇಲೆ ನಮಗೂ ನಂಬಿಕೆ ಇತ್ತು. ಇದೀಗ ಸಿಎಂ ಹಾಗೂ ಗೃಹ ಸಚಿವರು ಎಸ್ಐಟಿ ರಚಿಸಿ ಆದೇಶ ಮಾಡಿದ್ದಾರೆ ನಿಜಾಂಶ ಹೊರಗೆ ಬರಬೇಕು ನೂರಾರು ಹೆಣ ಅಂತ ಹೇಳ್ತಿದ್ದಾರೆ ಇದರ ಸತ್ಯಾಂಶ ಹೊರಗೆ ಬರಬೇಕು ಅಂತ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಕೇಸ್‌ | ಎಸ್‍ಐಟಿ ತನಿಖೆಗೆ ಸೌಜನ್ಯ ಕೇಸ್‌ ಇಲ್ಲ: ಪರಮೇಶ್ವರ್‌

    ಅಲ್ಲದೇ ಸಾಕ್ಷಿದಾರ ಯಾರು? ಅವರ ಹಿನ್ನೆಲೆ ಏನು ಎಂಬುದರ ಹಿಂದೆ ಹೋಗಲು ಆಗುವುದಿಲ್ಲ. ಮೊದಲು ಹೆಣ ಹೂತು ಹಾಕಿದ್ದಾರೆ ಎನ್ನಲಾದ ಸ್ಥಳಕ್ಕೆ ಹೋಗಬೇಕು. ವಿಧಿವಿಜ್ಞಾನ ತನಿಖೆ ಆಗಬೇಕು ಇದೆಲ್ಲವನ್ನೂ ನೋಡಬೇಕು. ಯಾರೋ ಒಬ್ಬರ ಮೇಲೆ ಮಾಡಿದ್ದೀವಿ ಅಂತ ಹೇಳಲು ಆಗುವುದಿಲ್ಲ. ಕೇವಲ ಸೌಜನ್ಯ ಕೇಸ್ ಮಾತ್ರವಲ್ಲ, ಎಲ್ಲವನ್ನೂ ಕೂಲಂಕುಷವಾಗಿ ತನಿಖೆ ಮಾಡಬೇಕು. ಸಾಕ್ಷಿದಾರ ಠಾಣೆಗೆ ಬಂದು ಹೇಳಿಕೆ ಕೊಟ್ಟಾಗಲೇ ತನಿಖೆ ಮುಂದುವರಿಸಬಹುದಿತ್ತು. ಆದ್ರೆ ಎಸ್‌ಐಟಿ ಮಾಡಲೇಬೇಕು ಎನ್ನುವ ಒತ್ತಡವಿತ್ತು. ಅದರಂತೆ ಸರ್ಕಾರ ಎಸ್‌ಐಟಿ ರಚನೆ ಮಾಡಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣ- ಎಸ್‍ಐಟಿ ರಚಿಸಿದ ಸರ್ಕಾರ

    ಇದರ ಹೊರತಾಗಿ ಧರ್ಮಸ್ಥಳ ಪುಣ್ಯಕ್ಷೇತ್ರ, ಯಾರೂ ಅದನ್ನ ಗುರಿಯಾಗಿಟ್ಟುಕೊಂಡು ತೇಜೋವಧೆ ಮಾಡಬಾರದು. ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಇರುವ ಕ್ಷೇತ್ರ, ಜೈನ ಸಮುದಾಯದವರೂ ಇರುವ ಕ್ಷೇತ್ರ ಹೀಗಾಗಿ ಕೆಲವರು ಉದ್ದೇಶಪೂರ್ವಕವಾಗಿ ತೇಜೋವಧೆ ಮಾಡುತ್ತಿರಬಹುದು. ಆದ್ರೆ ಜನರ ನಂಬಿಕೆಗಳಿಗೆ ಧಕ್ಕೆ ತರುವಂತ, ತೇಜೋವಧೆ ಮಾಡುವ ಕೆಲಸ ಯಾರೂ ಮಾಡಬಾರದು ಎಂದು ಹೇಳಿದ್ದಾರೆ.

    ತನಿಖೆಯ ಮೇಲೆ ಯಾರೂ ಒತ್ತಡ ಹೇರಲು ಸಾಧ್ಯವಿಲ್ಲ, ತನಿಖೆಯಿಂದ ಯಾರೂ ಪ್ರಭಾವಿಗಳನ್ನು ರಕ್ಷಣೆ ಮಾಡಲು ಸಾಧ್ಯವಿಲ್ಲ. ಸೌಜನ್ಯ ಇರಲಿ ಬೇರೆ ಅತ್ಯಾಚಾರ, ಹತ್ಯೆ ಪ್ರಕರಣಗಳಿರಲಿ ನ್ಯಾಯ ಸಿಕ್ಕಿಯೇ ಸಿಗುತ್ತದೆ ಎಂದು ಅಭಯ ನೀಡಿದರು. ಇದನ್ನೂ ಓದಿ: ಪಂಚಮಸಾಲಿ ಶ್ರೀ ಆರೋಗ್ಯದಲ್ಲಿ ಚೇತರಿಕೆ – ಆಸ್ಪತ್ರೆಗೆ ಭೇಟಿ ನೀಡಿದ ಬಿಜೆಪಿ ನಾಯಕರು

  • ಬೆಳ್ತಂಗಡಿಯಲ್ಲಿ ಬೃಹತ್ ಸಮಾವೇಶ – ಸೆರಗೊಡ್ಡಿ ನೆರೆದವರಲ್ಲಿ ನ್ಯಾಯ ಬೇಡಿದ ಸೌಜನ್ಯ ತಾಯಿ

    ಬೆಳ್ತಂಗಡಿಯಲ್ಲಿ ಬೃಹತ್ ಸಮಾವೇಶ – ಸೆರಗೊಡ್ಡಿ ನೆರೆದವರಲ್ಲಿ ನ್ಯಾಯ ಬೇಡಿದ ಸೌಜನ್ಯ ತಾಯಿ

    – ಅಮ್ಮ ನನ್ನನ್ನು ಬದುಕಿಸು ಎಂಬ ಕೂಗು ಈಗಲೂ ಕೇಳಿಸುತ್ತೆ ಎಂದ ಕುಸುಮಾವತಿ

    ಮಂಗಳೂರು: ಧರ್ಮಸ್ಥಳ (Dharmasthala) ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ (Sowjanya Case) ಸಂಬಂಧಪಟ್ಟಂತೆ ನೈಜ ಆರೋಪಿಗಳ ಪತ್ತೆಗೆ ಒತ್ತಾಯಿಸಿ ಭಾನುವಾರ ಬೆಳ್ತಂಗಡಿಯಲ್ಲಿ (Beltangady) ಬೃಹತ್ ಸಮಾವೇಶ ನಡೆಸಲಾಯಿತು. ಈ ವೇಳೆ ಸೌಜನ್ಯ ತಾಯಿ ಕುಸುಮಾವತಿ ವೇದಿಕೆಯಿಂದ ಕೆಳಗಿಳಿದು ಸೆರಗೊಡ್ಡಿ ನೆರೆದವರಲ್ಲಿ ನ್ಯಾಯ ಬೇಡಿದ್ದಾರೆ.

    ಈ ವೇಳೆ ಮಾತನಾಡಿದ ಅವರು, ನನ್ನ ಮಗಳಿಗೆ ನ್ಯಾಯ ಕೊಡಿಸಲು ಇಡೀ ದೇಶವೇ ಕೂಡಿ ಬಂದಿದೆ. ನನ್ನ ಮಗಳಿಗೋಸ್ಕರ ಇಷ್ಟೊಂದು ಜನ ಸೇರಿದ್ದೀರಿ. ನಮ್ಮ ಮಗುವಿಗೋಸ್ಕರ ನ್ಯಾಯ ಕೇಳಲು ಇಂದು ನಮಗೆ ಪರ್ಮಿಷನ್ ಕೊಟ್ಟಿಲ್ಲ. ಬಜರಂಗದಳದವರೊಂದಿಗೆ ಅಣ್ಣಪ್ಪನಲ್ಲಿ ನ್ಯಾಯ ಕೇಳಲು ಹೋಗಿದ್ದೆ. ನನ್ನನ್ನು ಒಳಗೆ ಹೋಗಲು ಬಿಟ್ಟಿಲ್ಲ. ನನ್ನನ್ನು ಒಂದು ಗಂಟೆ ಹೊರಗಡೆ ಕಾಯಿಸಿದ್ದಾರೆ ಎಂದು ನೋವು ತೋಡಿಕೊಂಡರು.

    ಆ ಅಣ್ಣಪ್ಪ ಸ್ವಾಮಿ ಮಂಜುನಾಥ ಸ್ವಾಮಿಯನ್ನು ನಾನು ಇಲ್ಲಿ ನೋಡುತ್ತಿದ್ದೇನೆ. ಖಂಡಿತಾ ನಾನು ಗಟ್ಟಿಯಾಗಿ ಇದ್ದೇನೆ. ಇಷ್ಟು ಜನರ ಶಕ್ತಿ ನನ್ನಲ್ಲಿ ತುಂಬಿದೆ. ಅದು ಎಷ್ಟು ಬಾರಿ ನನ್ನ ಮಗಳನ್ನು ಅತ್ಯಾಚಾರ ಮಾಡಿದ್ರೋ, ನನ್ನ ಮಗಳು ಎಷ್ಟು ನೋವು ತಿಂದಳೋ, 5-6 ಜನ ಅತ್ಯಾಚಾರ ಮಾಡಿದ್ದಾರೆ. ನ್ಯಾಯ ಸಿಗುತ್ತೆ, ಅತ್ಯಾಚಾರಿಗಳು ಸಿಗುತ್ತಾರೆ ಎಂಬ ನಂಬಿಕೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಅಮ್ಮ ನನ್ನನ್ನು ಬದುಕಿಸು ಎಂಬ ಕೂಗು ನನಗೆ ಈಗಲೂ ಕೇಳಿಸುತ್ತೆ. ಅತ್ಯಾಚಾರ ಮಾಡಿ ಕಾಡಲ್ಲಿ ಬಿಸಾಡಿದ್ದಾರೆ. ಅತ್ಯಾಚಾರ ಮಾಡಿ ಬಿಟ್ಟಿದ್ರೂ ತೊಂದರೆ ಇರುತ್ತಿರಲಿಲ್ಲ. ಆದರೆ ಕೊಂದೇ ಬಿಟ್ಟರು. ಇವತ್ತು ನಿಮ್ಮ ಕಾಲ ಬುಡಕ್ಕೆ ಬಂದು ನ್ಯಾಯ ಕೇಳುತ್ತಿದ್ದೇನೆ. ಯಾವುದೇ ಹಣದ ಆಮಿಷಕ್ಕೆ ನ್ಯಾಯವನ್ನು ಬಲಿ ಕೊಡಬೇಡಿ ತಾಯಂದಿರೆ ಎಂದು ಮನವಿ ಮಾಡಿಕೊಂಡರು. ಇದನ್ನೂ ಓದಿ: ಬಿಜೆಪಿಯಲ್ಲಿ ನಿಷ್ಠೆ ಬಿಟ್ಟು ಬಕೆಟ್ ಹಿಡಿದವರಿಗೆ ಮನ್ನಣೆ: ಪ್ರದೀಪ್ ಶೆಟ್ಟರ್

    ಪ್ರಜಾಪ್ರಭುತ್ವ ವೇದಿಕೆ ಹಾಗೂ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ನೇತೃತ್ವದಲ್ಲಿ ಸೌಜನ್ಯ ಪರ ನ್ಯಾಯಕ್ಕಾಗಿ ಇಂದು ಬೆಳ್ತಂಗಡಿಯಲ್ಲಿ ಬೃಹತ್ ಸಮಾವೇಶ ನಡೆದಿದೆ. ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ನೇತೃತ್ವದಲ್ಲಿ ಸಮಾವೇಶ ನಡೆದಿದೆ. ಪ್ರತಿಭಟನೆಗೆ ಸಾವಿರಾರು ಸಂಖ್ಯೆಯಲ್ಲಿ ಜನರು ಸೇರಿದ್ದಾರೆ. ನ್ಯಾಯಾಲಯದ ಸುಪರ್ದಿಯಲ್ಲಿ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಪ್ರತಿಭಟನೆ ನಡೆಯುತ್ತಿದೆ. ಇದನ್ನೂ ಓದಿ: ಈಶ್ವರಪ್ಪ ವಿರುದ್ಧ ಬಿ.ಸಿ.ಪಾಟೀಲ್ ಗರಂ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸೌಜನ್ಯ ಪ್ರಕರಣದ ರಹಸ್ಯಗಳನ್ನು ಬಿಚ್ಚಿಟ್ರೆ ನನ್ನನ್ನೂ ಸಾಯಿಸ್ಬೋದು: ವಸಂತ ಬಂಗೇರ

    ಸೌಜನ್ಯ ಪ್ರಕರಣದ ರಹಸ್ಯಗಳನ್ನು ಬಿಚ್ಚಿಟ್ರೆ ನನ್ನನ್ನೂ ಸಾಯಿಸ್ಬೋದು: ವಸಂತ ಬಂಗೇರ

    – ನನ್ನ ಅಂತ್ಯದೊಳಗೆ ಸೌಜನ್ಯ ಪ್ರಕರಣಕ್ಕೆ ನ್ಯಾಯ ಕೊಡಿಸಿಯೇ ಸಿದ್ಧ

    ಮಂಗಳೂರು: ವಿದ್ಯಾರ್ಥಿನಿ ಸೌಜನ್ಯ ಪ್ರಕರಣದ (Vasantha Bangera) ರಹಸ್ಯಗಳನ್ನು ಬಿಚ್ಚಿಟ್ಟರೆ ನನ್ನನ್ನು ಕೂಡ ಸಾಯಿಸಬಹುದು ಎಂದು ಬೆಳ್ತಂಗಡಿಯ (Belthangadi) ಮಾಜಿ ಶಾಸಕ ವಸಂತ ಬಂಗೇರ (Vasantha Bangera) ಸ್ಫೋಟಕ ಹೇಳಿಕೆ ನೀಡಿದ್ದಾರೆ.

    ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಬಗ್ಗೆ ಮಾತನಾಡಿದ ಅವರು, ಸಿಬಿಐ ತನಿಖೆಯ ದಾರಿ ತಪ್ಪಿಸಲಾಗಿತ್ತು. ನಾನು ಶಾಸಕನಾಗಿದ್ದಾಗ ಅಧಿವೇಶನದಲ್ಲಿ ಸೌಜನ್ಯ ಕೇಸ್ ಸಿಬಿಐಗೆ ವಹಿಸಲು ಆಗ್ರಹಿಸಿದ್ದೆ. ಸಿದ್ದರಾಮಯ್ಯನವರೂ ಕೆಲವರನ್ನು ತುಂಬಾ ಒಳ್ಳೆಯವರು ಎಂದು ನಂಬಿದ್ದರು. ನನ್ನನ್ನು ಕರೆದು ಹೇಳಿದ್ರು ಇದನ್ನು ಪ್ರಸ್ತಾಪ ಮಾಡಬೇಡ, ಈ ಕೇಸನ್ನು ಸಿಬಿಐಗೆ ವಹಿಸಲು ಸಾಧ್ಯವಿಲ್ಲ ಎಂದರು. ನಾನು ಸುಮಾರು 1 ಗಂಟೆಗೂ ಅಧಿಕ ಕಾಲ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ಮಾಡಿದ್ದೆ. ಕೇವಲ ಸೌಜನ್ಯ ಪ್ರಕರಣ ಮಾತ್ರವಲ್ಲ, ಬೆಳ್ತಂಗಡಿಯಲ್ಲಿ ನಡೆದ ಅಮಾನುಷ ಹತ್ಯೆಗಳ ಬಗ್ಗೆ ಅವರಿಗೆ ತಿಳಿಸಿದ್ದೆ. ಕೊನೆಗೆ ಸಿದ್ದರಾಮಯ್ಯನವರು ಅಧಿವೇಶನದಲ್ಲಿ ಸೌಜನ್ಯ ಪ್ರಕರಣವನ್ನು ಸಿಬಿಐಗೆ ವಹಿಸಿದೆ ಎಂದರು.

    ಸಿಬಿಐ ತನಿಖೆಯಲ್ಲಿ ನ್ಯಾಯ ಸಿಗುತ್ತದೆ ಎಂಬ ನಂಬಿಕೆ ನನಗಿತ್ತು. ಆದರೆ ಸಿಬಿಐ ತನಿಖೆಯ ಅರ್ಧದಲ್ಲಿ ಇದರಲ್ಲಿ ಮೋಸ ಇದೆ ಅನ್ನೋದು ನನಗೆ ತಿಳಿಯಿತು. ಅದನ್ನು ಸಾರ್ವಜನಿಕವಾಗಿ ನಿಮ್ಮ ಮುಂದೆ ಹೇಳಲು ಸಾಧ್ಯವಿಲ್ಲ. ಆದರೆ ಸಂದರ್ಭ ಬಂದಾಗ ನಾನು ಪ್ರಸ್ತಾಪಿಸಿಯೇ ಸಿದ್ಧ. ಒಂದಲ್ಲ ಒಂದು ದಿನ ಕಾಲ ಬರುತ್ತದೆ. ಅವತ್ತು ಸೌಜನ್ಯ ಪ್ರಕರಣದ ದಿಕ್ಕು ತಪ್ಪಿಸಿದ್ದು ಯಾರು, ಅನ್ಯಾಯ ತೊಂದರೆ ಕೊಟ್ಟಿದ್ದು ಯಾರು ಎಂದು ಹೇಳುತ್ತೇನೆ. ಆದರೆ ನನ್ನನ್ನು ಸಾಯಿಸಿದ್ರು ಸಾಯಿಸಬಹುದು. ಅಂತೂ ನನ್ನ ಅಂತ್ಯದೊಳಗೆ ಸೌಜನ್ಯ ಪ್ರಕರಣಕ್ಕೆ ನ್ಯಾಯ ಕೊಡಿಸಿಯೇ ಸಿದ್ಧ ಎಂದು ಹೇಳಿದರು. ಇದನ್ನೂ ಓದಿ: ಸೊಂಟದ ನೋವು ಬಿಟ್ರೆ ಬೇರೆ ಏನೂ ಸಮಸ್ಯೆ ಆಗಿಲ್ಲ: ವೃಕ್ಷ ಮಾತೆಯ ಹೆಲ್ತ್ ಅಪ್ಡೇಟ್

    ಸಿದ್ದರಾಮಯ್ಯನವರನ್ನು ಏಕಾಂಗಿಯಾಗಿ ಭೇಟಿಯಾಗಿ ಈ ಪ್ರಕರಣವನ್ನು ಹೇಗೆ ತನಿಖೆ ಮಾಡಬೇಕೆಂಬುದನ್ನು ಹೇಳುತ್ತೇನೆ. ಇದನ್ನು ಈ ರೀತಿ ತನಿಖೆ ಮಾಡಬೇಕು, ಇಂತವರನ್ನೇ ತನಿಖೆ ಮಾಡಬೇಕು ಎಂದು ಹೇಳುತ್ತೇನೆ. ಖಾಕಿಯವರನ್ನೂ ಕೈ ಕಾಲು ಕಟ್ಟಿ ತನಿಖೆ ಮಾಡಿಸಿ ಎಂದು ಸಿದ್ದರಾಮಯ್ಯನವರಿಗೆ ತಿಳಿಸುತ್ತೇನೆ. ತಪ್ಪು ಮಾಡಿದವನು ಎಷ್ಟೇ ದೊಡ್ಡ ವ್ಯಕ್ತಿಯಾಗಿದ್ದರೂ ಅದನ್ನು ಅನುಭವಿಸಲೇ ಬೇಕು. ಒಗ್ಗಟ್ಟಾಗಿ ಸೌಜನ್ಯ ವಿರುದ್ಧವಾದ ದೌರ್ಜನ್ಯ ಹಾಗೂ ಕೊಲೆ ವಿರುದ್ಧ ದೇಶವ್ಯಾಪಿಯಾಗಿ ಪ್ರತಿಭಟನೆಯಾಗುತ್ತದೆ. ಸೌಜನ್ಯ ಕುಟುಂಬಸ್ಥರನ್ನು ಮುಖ್ಯಮಂತ್ರಿಗಳಿಗೆ ಖುದ್ದು ನಾನೇ ಭೇಟಿ ಮಾಡಿಸಿದ್ದೇನೆ. ಮುಖ್ಯಮಂತ್ರಿಗಳಿಗೂ ಸೌಜನ್ಯ ಪ್ರಕರಣದ ಗಂಭೀರತೆ ಅರಿವಿಗೆ ಬಂದಿದೆ ಎಂದರು. ಇದನ್ನೂ ಓದಿ: ನಮ್ಮ ಸಿಂಹ ರಾಹುಲ್‌ ಗಾಂಧಿ ಗೆದ್ದಿದ್ದಾರೆ – ಸಂಸತ್‌ ಸದಸ್ಯತ್ವ ಅನರ್ಹತೆ ವಾಪಸ್‌ ಬೆನ್ನಲ್ಲೇ ಸಿಹಿ ಹಂಚಿ INDIA ಒಕ್ಕೂಟ ಸಂಭ್ರಮ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪ್ರತಿಭಟನಾ ಸಭೆಯ ವೇದಿಕೆ ಹತ್ತಲು ಯತ್ನಿಸಿದ ಸೌಜನ್ಯ ತಾಯಿಯನ್ನು ತಡೆದ ಪೊಲೀಸರು

    ಪ್ರತಿಭಟನಾ ಸಭೆಯ ವೇದಿಕೆ ಹತ್ತಲು ಯತ್ನಿಸಿದ ಸೌಜನ್ಯ ತಾಯಿಯನ್ನು ತಡೆದ ಪೊಲೀಸರು

    ಮಂಗಳೂರು: ಧರ್ಮಸ್ಥಳದ (Dharamsthala) ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ (Sowjanya Case) ಸಂಬಂಧಿಸಿದಂತೆ ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅವಹೇಳನ ಮಾಡಲಾಗುತ್ತಿರುವ ವಿಚಾರದ ಹಿನ್ನೆಲೆ ಪ್ರತಿಭಟನಾ ಸಮಾವೇಶ ಇಂದು ನಡೆಯಿತು. ಈ ಪ್ರತಿಭಟನಾ ಸಭೆಯಲ್ಲಿ ವೇದಿಕೆ ಹತ್ತಲು ಪ್ರಯತ್ನಿಸಿದ ಸೌಜನ್ಯ ತಾಯಿ ಕುಸುಮಾವತಿಯನ್ನು ಪೊಲೀಸರು ತಡೆದಿದ್ದಾರೆ.

    ಉಜಿರೆಯಲ್ಲಿ (Ujire) ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತ ವೃಂದದಿಂದ ಶ್ರೀ ಜನಾರ್ದನ ಸ್ವಾಮಿ ದೇವಾಲಯದ ಮುಂಭಾಗದ ಮೈದಾನದಲ್ಲಿ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ರಾಜ್ಯದ ವಿವಿಧ ಭಾಗಗಳಿಂದ ಪ್ರತಿಭಟನಾ ಸಮಾವೇಶಕ್ಕೆ ಭಕ್ತರು ಆಗಮಿಸಿದ್ದು, ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಜೈಕಾರ ಕೂಗಿದ್ದಾರೆ.

    ಈ ವೇಳೆ ಸೌಜನ್ಯ ತಾಯಿ ಕುಸುಮಾವತಿ ಜಸ್ಟೀಸ್ ಫಾಸ್ ಸೌಜನ್ಯ ಎಂದು ಭಿತ್ತಿಪತ್ರವನ್ನು ಹಿಡಿದು ತಮ್ಮ ಮಗಳ ಸಾವಿಗೆ ನ್ಯಾಯ ಸಿಗಬೇಕೆಂದು ಆಗ್ರಹಿಸಿ ವೇದಿಕೆ ಹತ್ತಲು ಪ್ರಯತ್ನಿಸಿದ್ದಾರೆ. ಆದರೆ ಈ ವೇಳೆ ಪೊಲೀಸರು ಅವರನ್ನು ತಡೆದಿದ್ದಾರೆ. ಇದನ್ನೂ ಓದಿ: ಗ್ಯಾರಂಟಿ ಯೋಜನೆಗಳಿಗೆ ಎಸ್ಸಿ – ಎಸ್ಟಿ ಅನುದಾನ ಬಳಕೆ; ಸಂಸತ್‌ನಲ್ಲಿ ಬಿಜೆಪಿ ದಲಿತ ಸಂಸದರ ಪ್ರತಿಭಟನೆ

    ಈ ಬಗ್ಗೆ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಕುಸುಮಾವತಿ, ನಾವು ಒಂದು ನ್ಯಾಯ ಕೇಳೋದಕ್ಕಾಗಿ ಬಂದಿದ್ದೆವು. ಮಗಳ ಸಾವಿಗೆ ಸಂಬಂಧಿಸಿದಂತೆ ಹೋರಾಟ ಮಾಡುತ್ತಿದ್ದಾರೆ ಎಂಬ ಕಾರಣಕ್ಕೆ ಬಂದಿದ್ದೆವು. ಆದರೆ ನಮ್ಮನ್ನು ಸ್ಟೇಜ್ ಹತ್ತಲು ಬಿಡಲಿಲ್ಲ. ಮಾತ್ರವಲ್ಲದೇ ನನ್ನ ಮಗನ ಕಾಲರ್ ಅನ್ನು ಹಿಡಿದು ಇಳಿಸಿದರು. ಇದು ಧರ್ಮಸ್ಥಳದ ಧರ್ಮನಾ ಎಂದು ಪ್ರಶ್ನಿಸಿದರು.

    ಸೌಜನ್ಯ ಪರವಾಗಿ ಅವರು ಹೋರಾಟ ಮಾಡುತ್ತಿಲ್ಲ. ಇದೆಲ್ಲಾ ನೆಪವಷ್ಟೇ. ನನ್ನ ಮಗಳ ಹೆಸರನ್ನು ಬಳಸಿ ಹೋರಾಟ ಮಾಡುತ್ತಿದ್ದಾರೆ ಹೊರತು ನನ್ನ ಮಗಳ ಪರವಾಗಿ ಅಲ್ಲ. ನಾವು ನ್ಯಾಯ ಸಿಗುವವರೆಗೂ ಹೋರಾಟ ಮಾಡುತ್ತೇವೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಮರುತನಿಖೆ ಆಗಲೇ ಬೇಕು. ಅತ್ಯಾಚಾರಿಗಳಿಗೆ ಗಲ್ಲುಶಿಕ್ಷೆ ಆಗಬೇಕು ಎಂದು ಕುಸುಮಾವತಿ ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: ಅಣ್ಣ ಹೇಳಿದ್ದಾರೆ ತಮ್ಮ ಕೇಳುತ್ತಿರಬೇಕು: ಹೆಚ್‌ಡಿಕೆಗೆ ಡಿಕೆಶಿ ಟಾಂಗ್‌

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸೌಜನ್ಯ ರೇಪ್‌, ಮರ್ಡರ್‌ ಕೇಸ್‌- ಆರೋಪಿ ಸಂತೋಷ್‌ ರಾವ್‌ ಖುಲಾಸೆ

    ಬೆಂಗಳೂರು: ಸೌಜನ್ಯ ಅತ್ಯಾಚಾರ ಮತ್ತು ಕೊಲೆ (Sowjanya Rape and Murder) ಪ್ರಕರಣದಲ್ಲಿ ಆರೋಪಿಯಾಗಿದ್ದ ಸಂತೋಷ್‌ ರಾವ್‌ನನ್ನು (Santosh Rao) ಕೋರ್ಟ್‌ ದೋಷಮುಕ್ತಗೊಳಿಸಿದೆ.

    ಸಿಬಿಐ ವಿಶೇಷ ನ್ಯಾಯಾಲಯದ (CBI Special Court) ನ್ಯಾಯಾಧೀಶ ಸಂತೋಷ್.ಸಿ.ಬಿ. ಇಂದು ತೀರ್ಪು ಪ್ರಕಟಿಸಿ, ಸಾಕ್ಷ್ಯಾಧಾರ ಕೊರತೆಯಿಂದ ಆರೋಪಿಯನ್ನು ಬಿಡುಗಡೆ ಮಾಡುವಂತೆ ಆದೇಶಿಸಿದ್ದಾರೆ. ಆರೋಪಿ ಪರ ವಕೀಲ ಮೋಹಿತ್ ಕುಮಾರ್ ವಾದ ಮಂಡಿಸಿದ್ದರು.

    ಆರೋಪಿ ಪರ ವಾದ ಏನಿತ್ತು?
    ಆತ್ಯಾಚಾರ ಹಾಗೂ ಕೊಲೆಯಾದ ವೇಳೆ ಆರೋಪಿ ಸ್ಥಳದಲ್ಲಿ ಇರಲಿಲ್ಲ. ರೇಪ್ ಮಾಡಿರುವ ಬಗ್ಗೆ ವೈದ್ಯಕೀಯ ವರದಿ ಇರಲಿಲ್ಲ. ಎರಡು ದಿನ ಬಳಿಕ ಆರೋಪಿಯನ್ನು ಬಂಧಿಸಲಾಗಿತ್ತು. ಸೌಜನ್ಯ ಮೃತಪಟ್ಟ ದಿನ ಭಾರೀ ಮಳೆ ಇತ್ತು. ಅಂದು 500 ಜನ ಹುಡುಕಾಟ ನಡೆಸಿದ್ದರು. ಆದರೆ ಅಂದು ಶವ ಪತ್ತೆಯಾಗಿರಲಿಲ್ಲ. ಇದನ್ನೂ ಓದಿ: ರಾಜ್ಯದಲ್ಲಿ ಫ್ರೀ ಬಸ್ ಸೇವೆ, ನಮ್ಮ ಸಂಸ್ಥೆಗಳ ಮೇಲೆ ಯಾವುದೇ ಹೊರೆಯಾಗಲ್ಲ: ರಾಮಲಿಂಗಾ ರೆಡ್ಡಿ

    ನದಿ ದಾಟಿ ಹೋಗಿದ್ದಾನೆ ಎಂದು ಅನುಮಾನ ವ್ಯಕ್ತಪಡಿಸಿದ ಪೊಲೀಸರು ಎರಡು ದಿನದ ಬಳಿಕ ಸಂತೋಷ್‌ ರಾವ್‌ನನ್ನು ಬಂಧಿಸಿದ್ದರು. ಅಲ್ಲಿದ್ದ ಪ್ರಕೃತಿ ಚಿಕಿತ್ಸಾಲಯದ ಸಿಸಿಟಿವಿ ಸಂಗ್ರಹಿಸಿಲ್ಲ. ಮರಣೋತ್ತರ ಪರೀಕ್ಷೆಯಲ್ಲಿ ರಾತ್ರೋರಾತ್ರಿ ಕೆಟ್ಟ ಬೆಳಕಿನಲ್ಲಿ ಮಾಡಲಾಗಿದೆ. ಸಂತೋಷ್‌ ರಾವ್‌ ಕೊಲೆ ಮಾಡಿದ್ದಾನೆ ಎಂಬುದಕ್ಕೆ ಯಾವುದೇ ಸಾಕ್ಷ್ಯಗಳು ಇಲ್ಲ ಎಂದು ಹೇಮಂತ್‌ ವಾದಿಸಿದ್ದರು.

     

    ಏನಿದು ಪ್ರಕರಣ?
    ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸೌಜನ್ಯ 2012ರ ಅಕ್ಟೋಬರ್ 9ರಂದು ಕಾಣೆಯಾಗಿದ್ದಳು ಎಂದು ತಂದೆ ಚಂದ್ರಪ್ಪ ಅವರು ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದರು. ಅಕ್ಟೋಬರ್ 10ರಂದು ಅರೆನಗ್ನ ಸ್ಥಿತಿಯಲ್ಲಿ ಸೌಜನ್ಯ ಶವ ಪತ್ತೆಯಾಗಿತ್ತು. ಬಳಿಕ ಆಕೆ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಿ ದೂರು ನೀಡಿದ್ದರು. ಈ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಪ್ರತಿಭಟನೆ, ಆಕ್ರೋಶಕ್ಕೆ ಕಾರಣವಾಗಿತ್ತು.

    ಮೊದಲು ಬೆಳ್ತಂಗಡಿ ಪೊಲೀಸರು ತನಿಖೆ ನಡೆಸಿದ್ದರು. ನಂತರ ತನಿಖೆಯನ್ನು ಸಿಐಡಿಗೆ ವರ್ಗಾಯಿಸಲಾಗಿತ್ತು. ಆ ಬಳಿಕ ಸರ್ಕಾರ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಿತ್ತು. 2016ರಲ್ಲಿ ತನಿಖೆ ಪೂರ್ಣಗೊಳಿಸಿದ ಸಿಬಿಐ ಆರೋಪ ಪಟ್ಟಿ ಸಲ್ಲಿಸಿತ್ತು.