Tag: ಸೌಮ್ಯಾ ಸ್ವಾಮಿನಾಥನ್

  • ಓಮಿಕ್ರಾನ್‌ ಭಾರತಕ್ಕೆ ಎಚ್ಚರಿಕೆಯ ಕರೆಗಂಟೆ: ಡಬ್ಲ್ಯೂಎಚ್‌ಒ ವಿಜ್ಞಾನಿ ಸೌಮ್ಯಾ ಸ್ವಾಮಿನಾಥನ್‌

    ಓಮಿಕ್ರಾನ್‌ ಭಾರತಕ್ಕೆ ಎಚ್ಚರಿಕೆಯ ಕರೆಗಂಟೆ: ಡಬ್ಲ್ಯೂಎಚ್‌ಒ ವಿಜ್ಞಾನಿ ಸೌಮ್ಯಾ ಸ್ವಾಮಿನಾಥನ್‌

    ನವದೆಹಲಿ: ಕೊರೊನಾ ವೈರಸ್‌ ರೂಪಾಂತರ ತಳಿ ಓಮಿಕ್ರಾನ್‌, ಭಾರತಕ್ಕೆ ಎಚ್ಚರಿಕೆಯ ಕರೆಗಂಟೆಯಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ವಿಜ್ಞಾನಿ ಡಾ. ಸೌಮ್ಯಾ ಸ್ವಾಮಿನಾಥನ್‌ ತಿಳಿಸಿದ್ದಾರೆ.

    ಕೋವಿಡ್‌ ವಿಚಾರವಾಗಿ ಭಾರತದ ನಡಾವಳಿಗೆ ಇದೊಂದು ಎಚ್ಚರಿಕೆಯ ಕರೆಗಂಟೆ. ಪ್ರತಿಯೊಬ್ಬರೂ ಎಚ್ಚರಿಕೆಯಿಂದಿರಬೇಕು, ಮಾಸ್ಕ್‌ ಧರಿಸುವುದನ್ನು ಮರೆಯಬಾರದು. ಮಾಸ್ಕ್‌ ನಿಮ್ಮ ಪಾಕೆಟ್‌ನಲ್ಲಿರುವ ಲಸಿಕೆಯಂತೆ. ಕೋವಿಡ್‌ ತಡೆಗಟ್ಟುವಲ್ಲಿ ಮಾಸ್ಕ್‌ ಪಾತ್ರವೂ ಪರಿಣಾಮಕಾರಿಯಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಓಮಿಕ್ರಾನ್ ಭಾರೀ ಡೇಂಜರ್ – ಹೊಸ ವೈರಸ್, ಹೊಸ ಲಕ್ಷಣ!

    ಎಲ್ಲಾ ವಯೋಮಾನದವರಿಗೂ ಲಸಿಕೆ ನೀಡುವುದು, ಜನರು ಗುಂಪುಗೂಡುವುದನ್ನು ತಪ್ಪಿಸುವುದು, ಕೋವಿಡ್‌ ಪ್ರಕರಣಗಳಲ್ಲಿ ಏರಿಕೆ ಕಂಡುಬರುವಂತಹ ಪ್ರದೇಶಗಳಲ್ಲಿ ಹೆಚ್ಚಿನ ನಿಗಾವಹಿಸುವ ಕೆಲಸ ಮಾಡಬೇಕು. ಓಮಿಕ್ರಾನ್‌ ವಿರುದ್ಧ ಹೋರಾಡಲು ವಿಜ್ಞಾನಿಗಳು ನೀಡುವ ಸಲಹೆ ಇದಾಗಿದೆ. ಓಮಿಕ್ರಾನ್‌ ನಿಯಂತ್ರಣಕ್ಕೆ ನಮಗೆ ವಿಜ್ಞಾನ ಕೇಂದ್ರಿತ ತಂತ್ರಗಾರಿಕೆ ಅಗತ್ಯವಿದೆ ಎಂದು ಡಾ. ಸೌಮ್ಯಾ ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಬ್ರಿಟನ್‌ನಲ್ಲಿ ಮೊದಲ ಬಾರಿಗೆ ಇಬ್ಬರಲ್ಲಿ ಕೊರೊನಾ ರೂಪಾಂತರಿ ಓಮಿಕ್ರಾನ್‌ ಪತ್ತೆ

    ರೂಪಾಂತರಿ ಡೆಲ್ಟಾಗಿಂತಲೂ ಹೆಚ್ಚು ಪರಿಣಾಮಕಾರಿಯಾಗಿ ಹರಡುವ ಸಾಮರ್ಥ್ಯವನ್ನು ಓಮಿಕ್ರಾನ್‌ ಹೊಂದಿದೆ. ಆದರೂ ಈ ಬಗ್ಗೆ ಅಧಿಕೃತವಾಗಿ ಏನನ್ನೂ ಹೇಳಲು ಸಾಧ್ಯವಿಲ್ಲ. ಇನ್ನು ಕೆಲವೇ ದಿನಗಳಲ್ಲಿ ಹೊಸ ತಳಿ ಬಗ್ಗೆ ಸಾಕಷ್ಟು ಮಾಹಿತಿಗಳು ಹೊರಬರಲಿವೆ ಎಂದು ತಿಳಿಸಿದ್ದಾರೆ.

  • ಕೋವಿಡ್ ಲಸಿಕೆಯ ಡಬಲ್ ಡೋಸ್‍ನಿಂದ 1 ವರ್ಷಕ್ಕಿಂತ ಹೆಚ್ಚಿನ ಸುರಕ್ಷೆ

    ಕೋವಿಡ್ ಲಸಿಕೆಯ ಡಬಲ್ ಡೋಸ್‍ನಿಂದ 1 ವರ್ಷಕ್ಕಿಂತ ಹೆಚ್ಚಿನ ಸುರಕ್ಷೆ

    ನವದೆಹಲಿ: ಕೋವಿಡ್ ಲಸಿಕೆಗಳು ನಿರೀಕ್ಷೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಜನರಿಗೆ ಸೋಂಕಿನಿಂದ ರಕ್ಷಣೆ ನೀಡಲಿವೆ ಎಂದು ವಿಶ್ವ ಆರೋಗ್ಯ ಸಂಸ್ಥೆ( WHO) ಹಿರಿಯ ವಿಜ್ಞಾನಿ ಸೌಮ್ಯಾ ಸ್ವಾಮಿನಾಥನ್ ಹೇಳಿದ್ದಾರೆ.

    ಜಾಗತಿಕ ಮಟ್ಟದಲ್ಲಿ ಮತ್ತೊಮ್ಮೆ ಸೋಂಕಿನ ಪ್ರಮಾಣ ಉಲ್ಬಣಗೊಳ್ಳುವುದು ನಿರೀಕ್ಷಿತವಾಗಿದೆ. ಯುರೋಪ್‍ನ ಹಲವು ದೇಶಗಳಲ್ಲಿ ಸೋಂಕು ಭಾರೀ ಏರಿಕೆ ಕಂಡುಬರುತ್ತಿದೆ. ಜೊತೆಗೆ ನಾನಾ ಕಾರಣಗಳಿಂದಾಗಿ ಆಸ್ಪತ್ರೆಗೆ ದಾಖಲಾಗುವ ಸಂಖ್ಯೆಯಲ್ಲೂ ಹೆಚ್ಚಳವಾಗುತ್ತಿದೆ. ಆದರೆ ಸಾವಿನ ಪ್ರಮಾಣದಲ್ಲಿ ಗಮನಾರ್ಹ ಏರಿಕೆ ದಾಖಲಾಗಿಲ್ಲ ಎಂದಿದ್ದಾರೆ.

    ಸಾವಿನ ಪ್ರಮಾಣದಲ್ಲಿ ಏರಿಕೆಯಾಗದಿರಲು ಕಾರಣ ಸೋಂಕಿಗೆ ಉತ್ತಾಗುವ ಸಾಧ್ಯತೆ ಇದ್ದ ಬಹುತೇಕ ಜನರಿಗೆ ಎರಡೂ ಡೋಸ್ ಲಸಿಕೆ ನೀಡಿರುವುದು ಎಂದು ಸಂದರ್ಶವೊಂದರಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಒಂದು ಕೆನ್ನೆಗೆ ಹೊಡೆದಾಗ ಮತ್ತೊಂದು ಕೆನ್ನೆ ತೋರಿಸಿದರೆ ಸಿಗೋದು ಸ್ವಾತಂತ್ರ್ಯವಲ್ಲ, ಭಿಕ್ಷೆ: ಕಂಗನಾ

    ಇತ್ತೀಚಿನ ಸಾಕ್ಷ್ಯಗಳ ಅನ್ವಯ , ಎರಡೂ ಡೋಸ್ ಲಸಿಕೆ ಪಡೆದ ಬಹುತೇಕ ವಯಸ್ಕರಲ್ಲಿ 1ವರ್ಷದ ಬಳಿಕ ರೋಗದ ವಿರುದ್ಧ ಹೋರಾಡುವ ಪ್ರತಿಕಾಯ ಪ್ರಮಾಣ ಇಳಿಕೆ ಆದರೂ ಲಸಿಕೆ ಕನಿಷ್ಠ 1 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಅವಧಿಗೆ ರಕ್ಷಣೆ ನೀಡುವುದು ಕಂಡುಬಂದಿದೆ ಎಂದಿದ್ದಾರೆ. ಇದನ್ನೂ ಓದಿ: ಶ್ರೀಕಿ ಜೊತೆ ಪ್ರಿಯಾಂಕ್ ಖರ್ಗೆಗೆ ಸಂಪರ್ಕ, 50 ಸಾವಿರ ಕೋಟಿ ಆಸ್ತಿ – ಕಾರ್ಣಿಕ್ ಆರೋಪ