Tag: ಸ್ಟಾರ್‍ಬಕ್ಸ್

  • ಕಾಫಿ ದೈತ್ಯ ಸ್ಟಾರ್‌ಬಕ್ಸ್‌ಗೆ ಭಾರತ ಮೂಲದ ಲಕ್ಷ್ಮಣ್ CEO ಆಗಿ ನೇಮಕ

    ಕಾಫಿ ದೈತ್ಯ ಸ್ಟಾರ್‌ಬಕ್ಸ್‌ಗೆ ಭಾರತ ಮೂಲದ ಲಕ್ಷ್ಮಣ್ CEO ಆಗಿ ನೇಮಕ

    ವಾಷಿಂಗ್ಟನ್: ವಿಶ್ವದ ಅತಿ ದೊಡ್ಡ ಕಾಫಿ ಉತ್ಪನ್ನ ಕಂಪನಿ ಸ್ಟಾರ್‌ಬಕ್ಸ್‌ಗೆ ಇದೀಗ ಹೊಸದಾಗಿ ಭಾರತೀಯ ಮೂಲದ ಲಕ್ಷ್ಮಣ್ ನರಸಿಂಹನ್ ಅವರನ್ನು ಮುಖ್ಯ ಕಾರ್ಯನಿರ್ವಾಹಕಾಧಿಕಾರಿಯಾಗಿ(ಸಿಇಒ) ನೇಮಿಸಲಾಗಿದೆ.

    55 ವಯಸ್ಸಿನ ಲಕ್ಷ್ಮಣ್ ನರಸಿಂಹನ್ ಅವರು ಈ ಹಿಂದೆ ರೆಕಿಟ್ ಕಂಪನಿಯ ಸಿಇಒ ಆಗಿದ್ದರು. ಪೆಪ್ಸಿಕೊವಿನ ಜಾಗತಿಕ ಮುಖ್ಯ ವಾಣಿಜ್ಯ ಅಧಿಕಾರಿಯಾಗಿಯೂ ಇವರು ಕಾರ್ಯ ನಿರ್ವಹಿಸಿದ್ದು, ಇದೀಗ ಆ ಸ್ಥಾನಕ್ಕೆ ಹೋವರ್ಡ್ ಸ್ಕುಲ್ಟ್ಜ್ ಅವರನ್ನು ಬದಲಿಸಲಾಗಿದೆ. ಇದನ್ನೂ ಓದಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ವಜ್ರಕುಮಾರ್ ಇನ್ನಿಲ್ಲ

    ಅಕ್ಟೋಬರ್ 1 ರಂದು ಲಕ್ಷ್ಮಣ್ ನರಸಿಂಹನ್ ಕಂಪನಿಗೆ ಸೇರಲಿದ್ದು, 2023ರ ಏಪ್ರಿಲ್‌ನಲ್ಲಿ ಚುಕ್ಕಾಣಿ ಹಿಡಿಯಲಿದ್ದಾರೆ. ಅಲ್ಲಿಯವರೆಗೆ ಹಂಗಾಮಿ ಸಿಇಒ ಹೋವರ್ಡ್ ಸ್ಕುಲ್ಟ್ಜ್ ಕಂಪನಿಯನ್ನು ಮುನ್ನಡೆಸಲಿದ್ದಾರೆ. ಲಕ್ಷ್ಮಣ್ ನರಸಿಂಹನ್ ಅವರು ಏಪ್ರಿಲ್ 1 ರವರೆಗೆ ಹೋವರ್ಡ್ ಸ್ಕುಲ್ಟ್ಜ್ ಅವರೊಂದಿಗೆ ಒಟ್ಟಾಗಿ ಕೆಲಸ ಮಾಡುತ್ತಾರೆ ಎಂದು ಸ್ಟಾರ್‌ಬಕ್ಸ್ ಹೇಳಿದೆ. ಇದನ್ನೂ ಓದಿ: ಸರ್ಕಾರದ ‘ಪುಣ್ಯಕೋಟಿ’ ಯೋಜನೆಯ ರಾಯಭಾರಿಯಾದ ಕಿಚ್ಚ ಸುದೀಪ್

    ಏಪ್ರಿಲ್‌ನಿಂದ ಜೂನ್ ತಿಂಗಳಿನಲ್ಲಿ ಚೀನಾದಲ್ಲಿ ಕೋವಿಡ್ ನಿರ್ಬಧಗಳಿಂದಾಗಿ ಸ್ಟಾರ್‌ಬಕ್ಸ್ ವ್ಯಾಪಾರ ನಿಧಾನಗತಿಗೆ ಇಳಿದಿದ್ದರೂ ಅಮೆರಿಕದಲ್ಲಿ ಭಾರೀ ಬೇಡಿಕೆ ಹೊಂದಿರುವುದಾಗಿ ವರದಿಯಾಗಿದೆ.

    Live Tv
    [brid partner=56869869 player=32851 video=960834 autoplay=true]

  • ರಷ್ಯಾದಲ್ಲಿ ವ್ಯಾಪಾರ ನಿಲ್ಲಿಸಿದ ಮೆಕ್‍ಡೋನಾಲ್ಡ್, ಸ್ಟಾರ್‌ಬಕ್ಸ್‌, ಪೆಪ್ಸಿ ಕಂಪನಿಗಳು

    ರಷ್ಯಾದಲ್ಲಿ ವ್ಯಾಪಾರ ನಿಲ್ಲಿಸಿದ ಮೆಕ್‍ಡೋನಾಲ್ಡ್, ಸ್ಟಾರ್‌ಬಕ್ಸ್‌, ಪೆಪ್ಸಿ ಕಂಪನಿಗಳು

    ಮಾಸ್ಕೋ: ಉಕ್ರೇನ್ ವಿರುದ್ಧ ಯುದ್ಧ ಸಾರಿರುವ ರಷ್ಯಾಗೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ನಿರ್ಬಂಧಗಳು ಮತ್ತಷ್ಟು ಹೆಚ್ಚಾಗುತ್ತಿದೆ. ಇದೀಗ ಅಮೆರಿಕ ಮೂಲದ ಮೆಕ್‍ಡೋನಾಲ್ಡ್, ಸ್ಟಾರ್‌ಬಕ್ಸ್‌, ಪೆಪ್ಸಿ ಸೇರಿದಂತೆ ಕೆಲ ಕಂಪನಿಗಳ ಆಹಾರ ಉತ್ಪನ್ನಗಳ ಅಂಗಡಿಗಳನ್ನು ರಷ್ಯಾದಲ್ಲಿ ಮುಚ್ಚಲು ತೀರ್ಮಾನಿಸಿದೆ.

    ರಷ್ಯಾ-ಉಕ್ರೇನ್ ವಿರುದ್ಧ ಯುದ್ಧ ಘೋಷಿಸಿ ಈಗಾಗಲೇ ಸಾವಿರಾರೂ ಸಂಖ್ಯೆಗಳಲ್ಲಿ ಜನರ ಸಾವು-ನೋವಿಗೆ ಕಾರಣವಾಗಿದೆ. ಇದರಿಂದ ವಿಶ್ವದ ಕೆಲ ರಾಷ್ಟ್ರಗಳ ಪ್ರತಿಷ್ಠಿತ ಕಂಪನಿಗಳು ರಷ್ಯಾ ಮಾರುಕಟ್ಟೆಗೆ ನಿರ್ಬಂಧ ವಿಧಿಸಲು ಮುಂದಾಗಿದೆ. ಇದೀಗ ಅಮೆರಿಕಾ ಮೂಲದ ಆಹಾರ ಉತ್ಪನ್ನಗಳಾದ ಮೆಕ್‍ಡೋನಾಲ್ಡ್, ಸ್ಟಾರ್‌ಬಕ್ಸ್‌, ಪೆಪ್ಸಿ, ಕೋಕಾ ಕೋಲಾ ರಷ್ಯಾದಲ್ಲಿರುವ ತನ್ನ ಅಂಗಡಿಗಳನ್ನು ಮುಚ್ಚಲು ತೀರ್ಮಾನಿಸಿದೆ. ಇದನ್ನೂ ಓದಿ: ಕಚ್ಚಾ ತೈಲ ಬೆಲೆ ಬ್ಯಾರೆಲ್‍ಗೆ 300 ಡಾಲರ್‌ಗೆ ಏರಬಹುದು: ರಷ್ಯಾ ಎಚ್ಚರಿಕೆ

    ಈ ಬಗ್ಗೆ ಸ್ಪಷ್ಟನೆ ನೀಡಿರುವ ಮೆಕ್‍ಡೋನಾಲ್ಡ್ ಅಧ್ಯಕ್ಷ ಮತ್ತು ಸಿಇಒ ಕ್ರಿಸ್ ಕೆಂಪ್‍ಜಿನ್ಸ್ಕಿ, ಉಕ್ರೇನ್‍ನಲ್ಲಿ ಅನಾವಶ್ಯಕವಾದ ದಾಳಿಯಿಂದಾದ ಸಾವು ನೋವುಗಳನ್ನು ಸಹಿಸುವುದಿಲ್ಲ. ಹಾಗಾಗಿ ನಮ್ಮ ಶಾಪ್‍ಗಳನ್ನು ಸದ್ಯದ ಮಟ್ಟಿಗೆ ಮುಚ್ಚುತ್ತಿರುವುದಾಗಿ ಉದ್ಯೋಗಿಗಳಿಗೆ ಪತ್ರದ ಮೂಲಕ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ನ್ಯಾಟೋ ಸದಸ್ಯತ್ವಕ್ಕೆ ಪಟ್ಟು ಹಿಡಿಯಲ್ಲ ಎಂದ ಉಕ್ರೇನ್‌: ರಷ್ಯಾದ 2 ಷರತ್ತಿಗೆ ಒಪ್ಪಿಗೆ

    ಮೆಕ್‍ಡೋನಾಲ್ಡ್‌ನ 800 ಶಾಪ್‍ಗಳನ್ನು ರಷ್ಯಾದಲ್ಲಿ ಮುಚ್ಚಲು ತೀರ್ಮಾನಿಸಿದೆ. ಆದರೆ ಅಲ್ಲಿ ಉದ್ಯೋಗ ಮಾಡುತ್ತಿದ್ದ 62 ಸಾವಿರ ಉದ್ಯೋಗಿಗಳಿಗೆ ವೇತನವನ್ನು ಈ ಹಿಂದಿನಂತೆ ಮುಂದುವರಿಸಲು ನಿರ್ಧರಿಸಿದೆ.

    ರಷ್ಯಾದಲ್ಲಿರುವ ಸ್ಟಾರ್‌ಬಕ್ಸ್‌ನ 130 ಶಾಪ್‍ಗಳನ್ನು ಮುಚ್ಚಲು ತೀರ್ಮಾನಿಸಿದ್ದು, ಆದರೆ ಇಲ್ಲಿನ 2,000 ಉದ್ಯೋಗಿಗಳಿಗೆ ಸಂಬಳವನ್ನು ಮಾತ್ರ ಈ  ಹಿಂದಿನಂತೆ ಕೊಡುವುದಾಗಿ ಸ್ಟಾರ್‌ಬಕ್ಸ್‌ ಕಂಪನಿಯ ಅಧ್ಯಕ್ಷ ಮತ್ತು ಸಿಇಒ ಕೆವಿನ್ ಜಾನ್ಸನ್ ತಿಳಿಸಿದ್ದಾರೆ. ಇದನ್ನೂ ಓದಿ: ನಿರ್ಬಂಧಕ್ಕೆ ಒಳಪಟ್ಟ ದೇಶಗಳ್ಯಾವುವು? ಕಾರಣ ಏನು? ಪಟ್ಟಿಯಲ್ಲಿ ರಷ್ಯಾ ನಂ.1

    ಪೆಪ್ಸಿ ಮತ್ತು ಕೋಕಾ ಕೋಲಾ ಕಂಪನಿ ರಷ್ಯಾದ ಮಾರುಕಟ್ಟೆಯಲ್ಲಿ ಹೆಚ್ಚಿನ ಉತ್ಪನ್ನಗಳನ್ನು ಬಂದ್ ಮಾಡಲು ತೀರ್ಮಾನಿಸಿದೆ. ಆದರೆ ಮಕ್ಕಳ ಆಹಾರ, ಹಾಲು ಇನ್ನಿತರ ಕೆಲ ಆಹಾರ ಉತ್ಪನ್ನಗಳನ್ನು ಮುಂದುವರಿಸಲು ತೀರ್ಮಾನಿಸಿದೆ. ರಷ್ಯಾದ 20 ಸಾವಿರ ಉದ್ಯೋಗಿಗಳು ಮತ್ತು 40 ಸಾವಿರ ಕೃಷಿಕರು ಈ ಆಹಾರ ಉತ್ಪನ್ನಗಳೊಂದಿಗೆ ಕೈ ಜೋಡಿಸಿರುವ ಪರಿಣಾಮ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಸ್ಪಷ್ಟಪಡಿಸಿದೆ.