ಮುಂಬೈ: ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ಭಾರತದ ವಿರುದ್ಧ ಆಸ್ಟ್ರೇಲಿಯಾ ಸೋತ ಬೆನ್ನಲ್ಲೇ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ಗೆ ಆಸೀಸ್ ಸ್ಟಾರ್ ಬ್ಯಾಟರ್ ಸ್ಟೀವ್ ಸ್ಮಿತ್ (Steve Smith) ನಿವೃತ್ತಿ ಘೋಷಿಸಿದ್ದಾರೆ.
ಆಸ್ಟ್ರೇಲಿಯಾದ ಸ್ಟಾರ್ ಬ್ಯಾಟ್ಸ್‌ಮನ್ ಸ್ಟೀವ್ ಸ್ಮಿತ್ ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳಿಗೆ ವಿದಾಯ ಹೇಳಿದ್ದಾರೆ. ದುಬೈನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್‌ನಲ್ಲಿ ಭಾರತ ವಿರುದ್ಧದ ಪಂದ್ಯದಲ್ಲಿ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ತಮ್ಮ ಕೊನೆಯ ಏಕದಿನ ಪಂದ್ಯವನ್ನು ಆಡಿದರು. ಆಸ್ಟ್ರೇಲಿಯಾ ಪರ 73 ರನ್ ಗಳಿಸಿ ಸೋಲಿನ ಹಾದಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದರು. ಇದನ್ನೂ ಓದಿ: ಸಚಿನ್ ದಾಖಲೆ ಬ್ರೇಕ್ – ವಿಶ್ವದಾಖಲೆ ಬರೆದ ಕೊಹ್ಲಿ
35 ವಯಸ್ಸಿನ ಸ್ಮಿತ್ 170 ಏಕದಿನ ಪಂದ್ಯಗಳಲ್ಲಿ ಆಡಿದ್ದು, 43.28 ಸರಾಸರಿಯಲ್ಲಿ 5800 ರನ್ ಗಳಿಸಿದ್ದಾರೆ. 12 ಶತಕಗಳು ಮತ್ತು 35 ಅರ್ಧಶತಕಗಳನ್ನು ಬಾರಿಸಿದ್ದಾರೆ. ಆಸ್ಟ್ರೇಲಿಯಾ ಪರ ಏಕದಿನ ಪಂದ್ಯಗಳಲ್ಲಿ 12 ನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿ ಹೊರಹೊಮ್ಮಿದ್ದಾರೆ. 2016 ರಲ್ಲಿ ನ್ಯೂಜಿಲೆಂಡ್ ವಿರುದ್ಧ 164 ರನ್ ಗಳಿಸಿದ್ದು ಅವರ ಅತ್ಯಧಿಕ ಸ್ಕೋರ್. ಲೆಗ್ ಸ್ಪಿನ್ನಿಂಗ್ ಆಲ್‌ರೌಂಡರ್ ಆಗಿ ಪಾದಾರ್ಪಣೆ ಮಾಡಿದ ಅವರು 28 ವಿಕೆಟ್‌ಗಳನ್ನು ಪಡೆದಿದ್ದಾರೆ. 90 ಕ್ಯಾಚ್‌ಗಳನ್ನು ಹಿಡಿದಿದ್ದಾರೆ.
ಕ್ರಿಕೆಟ್ ಆಸ್ಟ್ರೇಲಿಯಾ ಮಾಧ್ಯಮ ಪ್ರಕಟಣೆಯ ಪ್ರಕಾರ, ಸೆಮಿಫೈನಲ್ ಸೋಲಿನ ನಂತರ ಸ್ಮಿತ್ ತಮ್ಮ ತಂಡದ ಆಟಗಾರರಿಗೆ ‘ಏಕದಿನ ಪಂದ್ಯಗಳಿಂದ ನಿವೃತ್ತರಾಗುವುದಾಗಿ’ ಹೇಳಿದ್ದರು. ಸ್ಮಿತ್ ಟೆಸ್ಟ್ ಕ್ರಿಕೆಟ್ ಮತ್ತು ಟಿ20 ಅಂತಾರಾಷ್ಟ್ರೀಯ ಪಂದ್ಯಗಳಿಗೆ ಲಭ್ಯವಿರಲಿದ್ದಾರೆ. ಇದನ್ನೂ ಓದಿ: ಬಲಿಷ್ಠ ಆಸ್ಟ್ರೇಲಿಯಾ ಬಗ್ಗು ಬಡಿದು ಫೈನಲ್ ಪ್ರವೇಶಿಸಿದ ಭಾರತ
ಸ್ಮಿತ್ 2015 ಮತ್ತು 2023 ರಲ್ಲಿ ಆಸ್ಟ್ರೇಲಿಯಾದ ಏಕದಿನ ವಿಶ್ವಕಪ್ ವಿಜೇತ ತಂಡದ ಭಾಗವಾಗಿದ್ದರು. ಮೈಕೆಲ್ ಕ್ಲಾರ್ಕ್ ನಿವೃತ್ತರಾದ ನಂತರ ಸ್ಮಿತ್ 50 ಓವರ್‌ಗಳ ತಂಡದ ನಾಯಕತ್ವ ವಹಿಸಿಕೊಂಡರು. ಅವರು 64 ಪಂದ್ಯಗಳಲ್ಲಿ ಆಸ್ಟ್ರೇಲಿಯಾವನ್ನು ಮುನ್ನಡೆಸಿ, ಆ ಪೈಕಿ 32 ಪಂದ್ಯಗಳಲ್ಲಿ ಗೆದ್ದರು ಮತ್ತು 28 ಪಂದ್ಯಗಳಲ್ಲಿ ಸೋತರು. ನಾಲ್ಕು ಪಂದ್ಯಗಳಲ್ಲಿ ಯಾವುದೇ ಫಲಿತಾಂಶವಿಲ್ಲ. ಗಾಯಗೊಂಡಿದ್ದ ಪ್ಯಾಟ್ ಕಮ್ಮಿನ್ಸ್ ಬದಲಿಗೆ ಚಾಂಪಿಯನ್ಸ್ ಟ್ರೋಫಿಗೆ ಅವರು ಮಧ್ಯಂತರ ಆಧಾರದ ಮೇಲೆ ನಾಯಕತ್ವ ವಹಿಸಿಕೊಂಡಿದ್ದರು.
ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಇನ್ನೇನು ಅಂತಿಮಘಟ್ಟ ತಲುಪಿದೆ. ಇಂದು ನಡೆಯಲಿರೋ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ತಂಡಗಳಾದ ಟೀಂ ಇಂಡಿಯಾ (Team India) ಹಾಗೂ ಆಸ್ಟ್ರೇಲಿಯಾ (Australia) ಮುಖಾಮುಖಿಯಾಗಲಿವೆ.
ಮಧ್ಯಾಹ್ನ 2:30ಕ್ಕೆ ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆರಂಭವಾಗಲಿದ್ದು, 2023ರ ಏಕದಿನ ವಿಶ್ವಕಪ್ ಫೈನಲ್ ಸೋಲಿಗೆ ಭಾರತ ಸೇಡು ತೀರಿಸಿಕೊಳ್ಳಲಿದೆಯೇ ಎಂಬುದನ್ನು ಕಾದುನೋಡಬೇಕಿದೆ. ಚಾಂಪಿಯನ್ಸ್ ಟ್ರೋಫಿಯಲ್ಲಿ (champions trophy) ಈವರೆಗೆ ಭಾರತ ಮತ್ತು ಆಸೀಸ್ ನಡುವೆ 4 ಪಂದ್ಯಗಳು ನಡೆದಿದ್ದು, 2 ರಲ್ಲಿ ಭಾರತ, 1ರಲ್ಲಿ ಆಸ್ಟ್ರೇಲಿಯಾ ಗೆದ್ದರೆ, 2009ರಲ್ಲಿ ಒಂದು ಪಂದ್ಯ ಮಳೆಗೆ ಬಲಿಯಾಗಿತ್ತು. ಇದನ್ನೂ ಓದಿ: ವರುಣ್ ಬೆಂಕಿ ಬೌಲಿಂಗ್‌ಗೆ ನ್ಯೂಜಿಲೆಂಡ್ ಬರ್ನ್ – ಭಾರತಕ್ಕೆ 44 ರನ್‌ಗಳ ಭರ್ಜರಿ ಜಯ
ಪಿಚ್ ರಿಪೋರ್ಟ್ ಹೇಗಿದೆ?
ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯಕ್ಕೆ ಬಳಸಿದ ಪಿಚ್‌ನಲ್ಲಿಯೇ ಈ ಪಂದ್ಯ ನಡೆಯಲಿದೆ. ಇನ್ನೂ ದುಬೈನ ಯಾವುದೇ ಅಂಗಳದಲ್ಲಿ ಪಂದ್ಯ ನಡೆದರೂ, ಪಂದ್ಯ ಸಾಗಿದಂತೆ ಪಿಚ್ ನಿಧಾನಗೊಳ್ಳುತ್ತದೆ. ಹೀಗಾಗಿ ಸ್ಪಿನ್ ಮಾಂತ್ರಿಕರು ಹೆಚ್ಚು ಪರಿಣಾಮಕಾರಿಯಾಗಲಿದ್ದಾರೆ. ಹೀಗಾಗಿ ಇಂದಿನ ಪಂದ್ಯದಲ್ಲೂ ಟೀಂ ಇಂಡಿಯಾ ನಾಲ್ವರು ಸ್ಪಿನ್ನರ್‌ಗಳನ್ನ ಕಣಕ್ಕಿಳಿಸೋ ಸಾಧ್ಯತೆಯಿದೆ. ವರುಣ್ ಚಕ್ರವರ್ತಿ ಜೊತೆಗೆ ಕುಲ್‌ದೀಪ್ ಯಾದವ್, ಅಕ್ಷರ್ ಪಟೇಲ್ ಹಾಗೂ ರವೀಂದ್ರ ಜಡೇಜಾ ಕಣಕ್ಕಿಳಿಯೋದು ಫಿಕ್ಸ್ ಆಗಿದೆ. ಸ್ಪೀಡ್ ಗನ್ ಮೊಹಮ್ಮದ್ ಶಮಿ ಜೊತೆಗೆ ಹಾರ್ದಿಕ್ ಪಾಂಡ್ಯ ವೇಗದ ಬೌಲಿಂಗ್‌ನಲ್ಲಿ ಜೊತೆಯಾಗಲಿದ್ದಾರೆ.
ಇಬ್ಬನಿಯ ಸಮಸ್ಯೆ ಇಲ್ಲದಿರುವ ಕಾರಣ, ಟಾಸ್ ಗೆಲ್ಲುವ ತಂಡ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸುವ ಸಾಧ್ಯತೆ ಹೆಚ್ಚು. 270-280 ರನ್ ಗೆಲ್ಲುವ ಸ್ಕೋರ್ ಆಗಬಹುದು. ಆದ್ರೆ ಸದ್ಯ ಟೀಂ ಇಂಡಿಯಾ ಮೊದಲು ಬ್ಯಾಟ್ ಮಾಡಿದ್ರೆ 300 ರನ್ ಅಥವಾ ಮೊದಲು ಬೌಲಿಂಗ್ ಮಾಡಿದ್ರೆ ಆಸೀಸ್ ತಂಡವನ್ನು 250 ರನ್‌ಗಳಿಗೆ ಕಟ್ಟಿಹಾಕುವ ಯೋಚನೆಯಲ್ಲಿದೆ. ಸದ್ಯ ಸತತ 13 ಬಾರಿ ಟಾಸ್ ಸೋತಿರುವ ಟೀಂ ಇಂಡಿಯಾ ಈಬಾರಿಯಾದ್ರೂ ಟಾಸ್ ಗೆಲ್ಲುತ್ತಾ ಎಂಬುದನ್ನು ಕಾದುನೋಡಬೇಕಿದೆ. ಇದನ್ನೂ ಓದಿ: ರೋಹಿತ್ ಶರ್ಮಾ ದಪ್ಪಗಿದ್ದಾರೆ – ಕಾಂಗ್ರೆಸ್ ವಕ್ತಾರೆ ಪೋಸ್ಟ್, ವಿವಾದದ ಬೆನ್ನಲ್ಲೇ ಪಕ್ಷದಿಂದ ಛೀಮಾರಿ
ಇನ್ನೂ ಟೀಂ ಇಂಡಿಯಾ ಬ್ಯಾಟರ್‌ಗಳು ಫಾರ್ಮ್‌ನಲ್ಲಿ ಇರೋದ್ರಿಂದ ಆಸೀಸ್ ವಿರುದ್ಧ ರನ್ ಶಿಖರ ಕಟ್ಟುವ ಸಾಧ್ಯತೆಯಿದೆ. ಹಿಟ್‌ಮ್ಯಾನ್ ರೋಹಿತ್ ಶರ್ಮಾ, ಶುಭಮನ್ ಗಿಲ್, ಆರಂಭದಲ್ಲಿ ಬಿಗ್ ಇನ್ನಿಂಗ್ಸ್ ಕಟ್ಟಬೇಕಿದೆ. 3ನೇ ಕ್ರಮಾಂಕದಲ್ಲಿ ಕೊಹ್ಲಿ, 4ನೇ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಕ್ರೀಸ್‌ನಲ್ಲಿ ಭದ್ರವಾಗಿ ನೆಲೆಯೂರಿದ್ರೆ, ಕನ್ನಡಿಗ ಅಕ್ಷರ್ ಪಟೇಲ್, ಕೆ.ಎಲ್ ರಾಹುಲ್ ಹಾಗೂ ಹಾರ್ದಿಕ್ ಪಾಂಡ್ಯ ಮ್ಯಾಚ್ ಫಿನಿಶರ್‌ಗಳಾಗಿ ಕಣಕ್ಕಿಳಿಯಲು ಕಾದುಕುಳಿತಿದ್ದಾರೆ. ಇದನ್ನೂ ಓದಿ: ಬೆತ್ ಮೂನಿ ಸ್ಫೋಟಕ ಬ್ಯಾಟಿಂಗ್ – ಯುಪಿ ವಿರುದ್ಧ ಗುಜರಾತ್‌ಗೆ 81 ರನ್‌ಗಳ ಭರ್ಜರಿ ಜಯ
ʻಭಾರತಕ್ಕೆ ಹೆಡ್ಡೇಕ್ʼ
ಟೀಂ ಇಂಡಿಯಾದಂತೆ ಆಸ್ಟ್ರೇಲಿಯಾ ಕೂಡ ಸಾಲಿಡ್ ಫಾರ್ಮ್‌ನಲ್ಲಿದೆ. ಅದ್ರಲ್ಲೂ ಐಸಿಸಿ ಟ್ರೋಫಿ ಟೂರ್ನಿಗಳಾದ್ರೆ, ಕಾಂಗರೂಗಳು ಎದುರಾಳಿ ತಂಡಗಳನ್ನು ಬೇಟೆಯಾಡೋದ್ರಲ್ಲಿ ಅನುಮಾನವೇ ಇಲ್ಲ. ಎಷ್ಟೇ ಟಾರ್ಗೆಟ್ ಆಗಿರಲಿ, ಎಂತಹದ್ದೇ ಸಂದರ್ಭ ಇರಲಿ, ಆಸೀಸ್ ಆಟಗಾರರು ವೀರಾವೇಶದಿಂದ ಹೋರಾಡ್ತಾರೆ. ಇತ್ತೀಚೆಗೆ ಇಂಗ್ಲೆಂಡ್ ವಿರುದ್ಧ ನಡೆದ ಪಂದ್ಯವೂ ಇದಕ್ಕೆ ಸಾಕ್ಷಿಯಾಗಿದೆ. ಬುಮ್ರಾ ಅನುಪಸ್ಥಿತಿಯಲ್ಲಿ ಕಣಕ್ಕಿಳಿಯುತ್ತಿರುವ ಭಾರತ ತಂಡಕ್ಕೆ ಟ್ರಾವಿಸ್ ಹೆಡ್ ಮತ್ತೆ ಕಾಡುತ್ತಾರಾ? ಅಥವಾ ಶಮಿ ಸಾರಥ್ಯ ಬೌಲಿಂಗ್ ಪಡೆ ಬಹುಬೇಗನೆ ವಿಕೆಟ್ ಪಡೆದು ಪೆವಿಲಿಯನ್‌ಗಟ್ಟುತ್ತಾರಾ ಎಂಬುದನ್ನು ಕಾದುನೋಡಬೇಕಿದೆ.
ವಿಶ್ವಕಪ್ ಸೋಲಿಗೆ ತಿರುಗೇಟು ಕೊಡುತ್ತಾ ಟೀಂ ಇಂಡಿಯಾ..?
ಇನ್ನೂ ಭಾರತೀಯ ಕ್ರಿಕೆಟ್ ಪ್ರೇಮಿಗಳಿಗೆ 2023ರ ವಿಶ್ವಕಪ್ ಫೈನಲ್ ಪಂದ್ಯದ ಸೋಲು ಮರೆಯೋದಕ್ಕೆ ಸಾಧ್ಯವಿಲ್ಲ. ಒಂದೂವರೆ ವರ್ಷಗಳ ನಂತರ ಮತ್ತೊಂದು ಐಸಿಸಿ ಟೂರ್ನಿಯ ಸೆಮಿಫೈನಲ್‌ನಲ್ಲಿ ಭಾರತ-ಆಸ್ಟ್ರೇಲಿಯಾ ಮುಖಾಮುಖಿ ಎದುರಾಗ್ತಿವೆ. ಆಸ್ಟ್ರೇಲಿಯಾವನ್ನು ಸೋಲಿಸಿ ಸೇಡು ತೀರಿಸಿಕೊಳ್ಳೋಕೆ ಇದೊಂದು ಒಳ್ಳೆಯ ಅವಕಾಶ. ರೋಹಿತ್ ಶರ್ಮಾ ಪಡೆ ಆಸೀಸ್‌ನ್ನು ಸೋಲಿಸಿ ಸೇಡು ತೀರಿಸಿಕೊಳ್ಳುತ್ತದೆ ಎಂದು ಟೀಂ ಇಂಡಿಯಾ ಕ್ರಿಕೆಟ್ ಪ್ರೇಮಿಗಳು ನಿರೀಕ್ಷಿಸಿದ್ದಾರೆ.
ದುಬೈ: ಲೀಗ್ ಸುತ್ತಿನ ಆರಂಭಿಕ ಎರಡೂ ಪಂದ್ಯಗಳಲ್ಲಿ ಸತತ ಗೆಲುವು ಸಾಧಿಸಿ ಸೆಮಿಫೈನಲ್ಸ್‌ಗೆ ಪ್ರವೇಶ ಪಡೆದಿರುವ ಭಾರತ ಮತ್ತು ನ್ಯೂಜಿಲೆಂಡ್ (New Zealand) ತಂಡಗಳು ಇಂದು ಮುಖಾಮುಖಿಯಾಗುತ್ತಿವೆ. ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಮಧ್ಯಾಹ್ನ 2:30ಕ್ಕೆ ಪಂದ್ಯ ಆರಂಭವಾಗಲಿದೆ. ಇಂದಿನ ಪಂದ್ಯದಲ್ಲಿ ಭಾರತ (Team India) ಗೆದ್ದರೆ, ಬಲಿಷ್ಠ ಆಸ್ಟ್ರೇಲಿಯಾ (Australia) ವಿರುದ್ಧ, ಸೋತರೆ ದಕ್ಷಿಣ ಆಫ್ರಿಕಾ ವಿರುದ್ಧ ಕಾದಾಟಕ್ಕಿಳಿಯಲಿದೆ.
ಭಾರತ ಗೆದ್ದರೆ ಸೆಮಿಸ್‌ನಲ್ಲಿ ಆಸೀಸ್ ಎದುರಾಳಿ:
ಇತ್ತ ಬಿ-ಗುಂಪಿನಲ್ಲಿ 5 ಅಂಕ ಪಡೆದಿರುವ ದಕ್ಷಿಣ ಆಫ್ರಿಕಾ ಅಗ್ರಸ್ಥಾನದಲ್ಲಿದ್ದರೆ, ಆಸ್ಟ್ರೇಲಿಯಾ 2ನೇ ಸ್ಥಾನದಲ್ಲಿದೆ. ಅಂಕಪಟ್ಟಿಯ ಪ್ರಕಾರ ಎ ಗುಂಪಿನಲ್ಲಿ ಅಗ್ರಸ್ಥಾನ ಪಡೆದ ಹಾಗೂ ಬಿ ಗುಂಪಿಯಲ್ಲಿ 2ನೇ ಸ್ಥಾನ ಪಡೆದ ಪಂದ್ಯಕ್ಕೆ ಹಾಗೂ ಎ-ಗುಂಪಿಯನ 2ನೇ ಸ್ಥಾನ ಪಡೆದ ತಂಡಕ್ಕೆ ಮತ್ತು ಬಿ ಗುಂಪಿನಲ್ಲಿ ಅಗ್ರಸ್ಥಾನ ಪಡೆದ ತಂಡಗಳ ನಡುವೆ ಸೆಣಸಾಟ ನಡೆಯಲಿದೆ. ಹೀಗಾಗಿ ಭಾರತ ಇಂದಿನ ಪಂದ್ಯದಲ್ಲಿ ಬಲಿಷ್ಠ ಆಸೀಸ್ ತಂಡವನ್ನು ಎದುರಿಸಲೀದೆ.
ಮರುಕಳಿಸುವುದೇ 2023ರ ವಿಶ್ವಕಪ್ ನೆನಪು:
2023ರಲ್ಲಿ ಭಾರತದ ಆತಿಥ್ಯದಲ್ಲಿ ನಡೆದ ಏಕದಿನ ವಿಶ್ವಕಪ್ ಟೂರ್ನಿ ಫೈನಲ್‌ನಲ್ಲಿ ಭಾರತ, ಆಸೀಸ್ ತಂಡಗಳು ಮುಖಾಮುಖಿಯಾಗಿದ್ದವು. ಅಂದು ಪ್ಯಾಟ್ ಕಮ್ಮಿನ್ಸ್ ನಾಯಕತ್ವದಲ್ಲಿ ಆಸ್ಟ್ರೇಲಿಯಾ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಅಂದು ಭಾರತ ಆಸೀಸ್ ಬಿಗಿ ಬೌಲಿಂಗ್ ಹಿಡಿತಕ್ಕೆ ತತ್ತರಿಸಿ 240 ರನ್‌ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿತ್ತು. ಆದ್ರೆ ಟ್ರಾವಿಸ್ ಹೆಡ್ ಅವರ ಶತಕದಾಟದಿಂದಾಗಿ ಭಾರತಕ್ಕೆ ಸೋಲಾಯಿತು. ಇದು ಇಡೀ ಭಾರತೀಯರಿಗೆ ನೋವುಂಟುಮಾಡಿತ್ತು. ಇದೀಗ ಈ ಸೋಲಿನ ಸೇಡನ್ನು ತೀರಿಸಿಕೊಳ್ಳಲು ಭಾರತಕ್ಕೆ ಅವಕಾಶ ಸಿಗುವುದೇ ಅನ್ನೋದನ್ನ ಕಾದುನೋಡಬೇಕಿದೆ.
ಲಾಹೋರ್: ಪಾಕಿಸ್ತಾನದ ಗಡಾಫಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿ 4ನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿರುವ ಇಂಗ್ಲೆಂಡ್ ತಂಡವು 50 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 351 ರನ್ ಗಳಿಸಿದೆ. ಈ ಮೂಲಕ ಆಸ್ಟ್ರೇಲಿಯಾ ತಂಡದ ಗೆಲುವಿಗೆ 352 ರನ್‌ಗಳ ಬೃಹತ್ ಮೊತ್ತದ ಗುರಿ ನೀಡಿದೆ. ಅಲ್ಲದೇ ಚಾಂಪಿಯನ್ಸ್ ಟ್ರೋಫಿ ಇತಿಹಾಸದಲ್ಲಿ ತಂಡವೊಂದು ಗಳಿಸಿದ ಅತಿಹೆಚ್ಚು ರನ್ ಕೂಡ ಇದಾಗಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ 5.2 ಓವರ್‌ಗಳಲ್ಲೇ 43 ರನ್‌ಗಳಿಗೆ 2 ವಿಕೆಟ್ ಕಳೆದುಕೊಂಡಿತ್ತು. ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್, ಜೋಶ್ ಹ್ಯಾಜಲ್ವುಡ್ ಅವರಂತಹ ದೈತ್ಯ ಬೌಲರ್‌ಗಳಿಲ್ಲದೇ ಅನೇಕ ಹೊಸಬರೊಂದಿಗೆ ಕಣಕ್ಕಿಳಿದ ಆಸೀಸ್ ಸ್ಪರ್ಧಾತ್ಮಕ ಪೈಪೋಟಿ ನೀಡುವ ನಿರೀಕ್ಷೆ ಹೆಚ್ಚಿಸಿತ್ತು. ಆದ್ರೆ 3ನೇ ವಿಕೆಟ್‌ಗೆ ಜೊತೆಯಾದ ಬೆನ್ ಡಕೆಟ್ ಹಾಗೂ ಜೋ ರೂಟ್ ಶತಕದ ಜೊಯಾಟ ನೀಡುವ ಮೂಲಕ ಇಂಗ್ಲೆಂಡ್‌ಗೆ ಜೀವ ತುಂಬಿದರು.
ಡಕೆಟ್, ರೂಟ್ ಶತಕದ ಜೊತೆಯಾಟ:
ತಾಳ್ಮೆಯ ಬ್ಯಾಟಿಂಗ್ ಪ್ರದರ್ಶಿಸಿದ ಈ ಜೋಡಿ 155 ಎಸೆತಗಳಲ್ಲಿ 158 ರನ್‌ಗಳ ಜೊತೆಯಾಟ ನೀಡಿತು. ರೂಟ್ 78 ಎಸೆತಗಳಲ್ಲಿ 4 ಬೌಂಡರಿಗಳೊಂದಿಗೆ 68 ರನ್ ಗಳಿಸಿ ಔಟಾದರು. ಆ ಬಳಿಕವೂ ಘಾತುಕ ದಾಳಿ ನಡೆಸಿದ ಬೆನ್ ಡಕೆಟ್ ಆಸೀಸ್ ಬೌಲರ್‌ಗಳನ್ನು ಚೆನ್ನಾಗಿ ಬೆಂಡೆತ್ತಿದರು. ಕೊನೆಯವರೆಗೂ ಹೋರಾಡಿದ ಡಕೆಟ್ 143 ಎಸೆತಗಳಲ್ಲಿ 165 ರನ್ (17 ಬೌಂಡರಿ, 3 ಸಿಕ್ಸರ್) ಗಳಿಸಿ ಔಟಾದರು. ಇದರೊಂದಿಗೆ ನಾಯಕ ಜೋಸ್ ಬಟ್ಲರ್ 23 ರನ್, ಜೋಫ್ರಾ ಆರ್ಚರ್ 21 ರನ್, ಲಿಯಾಮ್ ಲಿವಿಂಗ್‌ಸ್ಟನ್14 ರನ್, ಜೇಮಿ ಸ್ಮಿತ್ 15 ರನ್, ಫಿಲ್ ಸಾಲ್ಟ್ 10 ರನ್‌ಗಳ ಕೊಡುಗೆ ನೀಡಿದರು.
ಚಾಂಪಿಯನ್ಸ್ ಟ್ರೋಫಿಯಲ್ಲಿ ಅತಿಹೆಚ್ಚು ರನ್‌ಗಳಿಸಿದ ಟೀಮ್‌ಗಳು
* 351/8 – ಇಂಗ್ಲೆಂಡ್ – ಲಾಹೋರ್ – 2025
* 347/4 – ನ್ಯೂಜಿಲೆಂಡ್ – ದಿ ಓವಲ್ – 2004
* 338/4 – ಪಾಕಿಸ್ತಾನ – ಓವಲ್ – 2017
* 331/7 – ಭಾರತ – ಕಾರ್ಡಿಫ್ – 2013
* 323/8 – ಇಂಗ್ಲೆಂಡ್ – ಸೆಂಚುರಿಯನ್ – 2009
* 322/3 – ಶ್ರೀಲಂಕಾ – ದಿ ಓವಲ್ – 2017
ಇನ್ನೂ ಆಸ್ಟ್ರೇಲಿಯಾ ಪರ ಬೆನ್ ದ್ವಾರ್ಶುಯಿಸ್ 3 ವಿಕೆಟ್ ಕಿತ್ತರೆ, ಮಾರ್ನಸ್ ಲಾಬುಶೇನ್, ಆಡಂ ಝಂಪಾ ತಲಾ 2 ವಿಕೆಟ್, ಗ್ಲೆನ್ ಮ್ಯಾಕ್ಸ್‌ವೆಲ್ 1 ವಿಕೆಟ್ ಪಡೆದರು.
ಮೆಲ್ಬೋರ್ನ್: ಇಲ್ಲಿ ನಡೆಯುತ್ತಿರುವ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯವು ರಣರೋಚಕ ಹಂತಕ್ಕೆ ತಲುಪಿದೆ. 4ನೇ ದಿನದ ಕೊನೇ ಓವರ್‌ನಲ್ಲಿ ವೇಗಿ ಜಸ್ಪ್ರೀತ್ ಬುಮ್ರಾ (Jasprit Bumrah) ಅವರ ನೋಬಾಲ್ ಎಡವಟ್ಟಿನಿಂದ 1 ವಿಕೆಟ್ ಬಾಕಿ ಉಳಿಸಿಕೊಂಡಿರುವ ಆಸ್ಟ್ರೇಲಿಯಾ (Australia) ತಂಡ 82 ಓವರ್‌ಗಳಲ್ಲಿ 228 ರನ್ ಗಳಿಸಿ, 333 ರನ್‌ಗಳ ಬೃಹತ್ ಮುನ್ನಡೆ ಕಾಯ್ದುಕೊಂಡಿದೆ.
ದ್ವಿತೀಯ ಇನ್ನಿಂಗ್ಸ್ ಆರಂಭದಲ್ಲೇ ಉರಿ ಚೆಂಡಿನ ದಾಳಿ ನಡೆಸಿ ಅಗ್ರ ಬ್ಯಾಟರ್‌ಗಳನ್ನ ಪೆವಿಲಿಯನ್‌ಗಟ್ಟಿದ ಬುಮ್ರಾ ದಿನದ ಕೊನೆಯ ಓವರ್‌ನ 4ನೇ ಎಸೆತದಲ್ಲಿ ವಿಕೆಟ್ ಕಿತ್ತು ಆಲೌಟ್ ಮಾಡಿದ್ದರು. ಆದ್ರೆ ಅದು ನೋಬಾಲ್ ಆದ ಪರಿಣಾಮ ಆಲೌಟ್‌ನಿಂದ ಆಸೀಸ್ ಪಾರಾಯಿತು. ಹೀಗಾಗಿ ಕೊನೆಯ ದಿನ ಆಸೀಸ್ ವಿರುದ್ಧ ಗೆಲ್ಲುವುದು ಕಠಿಣ ಸವಾಲಿನ ಕೆಲಸವಾಗಿದೆ. ಈ ಪಂದ್ಯದ ಗೆಲುವಿನ ಮೇಲೆ ಭಾರತ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ (WTC Final) ಅರ್ಹತೆ ಪಡೆಯಲಿದೆಯೇ ಇಲ್ಲವೇ ಎಂಬುದು ನಿರ್ಧಾರವಾಗಲಿದೆ.
ಹೌದು. ಮೆಲ್ಬೋರ್ನ್ (Melbourne) ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಭಾರತ ಆಸೀಸ್ ನಡುವೆ ಹಣಾ-ಹಣಿ ನಡೆಯುತ್ತಿದೆ. ನಾಲ್ಕನೇ ದಿನದ ಅಂತ್ಯಕ್ಕೆ 9 ವಿಕೆಟ್‌ನಷ್ಟಕ್ಕೆ 228 ರನ್ ಗಳಿಸಿರುವ ಆಸ್ಟ್ರೇಲಿಯಾ 333 ರನ್‌ಗಳ ಬೃಹತ್ ಮುನ್ನಡೆ ಸಾಧಿಸಿದೆ. ಆಸೀಸ್ ಬ್ಯಾಟರ್‌ಗಳಾದ ನಥಾನ್ ಲಿಯಾನ್ (Nathan Lyon), ಸ್ಕಾಟ್ ಬೊಲ್ಯಾಂಡ್ 5ನೇ ದಿನಕ್ಕೆ ಕ್ರೀಸ್ ಕಾಯ್ದುಕೊಂಡಿದ್ದಾರೆ.
3ನೇ ದಿನದ ಅಂತ್ಯಕ್ಕೆ 9 ನಷ್ಟಕ್ಕೆ 358 ರನ್ ಗಳಿಸಿದ್ದ ಭಾರತ (Team India) 4ನೇ ದಿನದ ಆರಂಭದಲ್ಲಿ 11 ರನ್ ಗಳಿಸುವಷ್ಟರಲ್ಲಿ ಕೊನೆಯ ವಿಕೆಟ್ ಕಳೆದುಕೊಂಡು, 369 ರನ್‌ಗಳಿಗೆ ಆಲೌಟ್ ಆಯಿತು. ಬಳಿಕ ಕ್ರೀಸ್ ಆರಂಭಿಸಿದ ಆಸೀಸ್ 91 ರನ್‌ಗಳಿಗೆ ಪ್ರಮುಖ 6 ವಿಕೆಟ್‌ಗಳನ್ನು ಕಳೆದುಕೊಂಡಿತ್ತು. ಈ ನಡುವೆ ನಾಯಕ ಪ್ಯಾಟ್ ಕಮ್ಮಿನ್ಸ್ – ಮಾರ್ನಸ್ ಲಾಬುಶೇನ್ ಹಾಗೂ ಮುರಿಯದ ಕೊನೆಯ ವಿಕೆಟಿಗೆ ನಥಾನ್ ಲಿಯಾನ್ – ಸ್ಕಾಟ್ ಬೊಲ್ಯಾಂಡ್ ಅವರ ಅರ್ಧಶತಕಗಳ ಜೊತೆಯಾಟ ತಂಡಕ್ಕೆ ಶಕ್ತಿ ತುಂಬಿತು. ಪರಿಣಾಮ ಆಸೀಸ್ 82 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 229 ರನ್‌ಗಳಿಸಿದ ಆಸ್ಟ್ರೇಲಿಯಾ 333 ರನ್‌ಗಳ ಮುನ್ನಡೆ ಕಾಯ್ದುಕೊಂಡಿದೆ.
ಬುಮ್ರಾ ಬೆಂಕಿ ಚೆಂಡು:
4ನೇ ದಿನದಾಟದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸಮರ ಸಾರಿದ ಜಸ್ಪ್ರೀತ್ ಬುಮ್ರಾ ಟಾಪ್-ಬ್ಯಾಟರ್‌ಗಳಿಗೆ ಪೆವಲಿಯನ್ ಹಾದಿ ತೋರುವಲ್ಲಿ ಯಶಸ್ವಿಯಾದರು. ಬುನ್ರಾ ಬೆಂಕಿ ಚೆಂಡಿನ ದಾಳಿಗೆ ಅಸೀಸ್ ಬ್ಯಾಟರ್‌ಗಳು ಪೆವಿಲಿಯನ್ ಪರೇಡ್ ನಡೆಸಿದರು. ಇನ್ನು ಆಸೀಸ್ ವಿರುದ್ಧ ಬುಮ್ರಾ 4 ವಿಕೆಟ್ ಕಿತ್ತರೆ, ಮೊಹಮ್ಮದ್ ಸಿರಾಜ್ 3 ವಿಕೆಟ್ ಹಾಗೂ ರವೀಂದ್ರ ಜಡೇಜಾ 1 ವಿಕೆಟ್ ಪಡೆದು ಮಿಂಚಿದರು.
2ನೇ ಇನ್ನಿಂಗ್ಸ್‌ನಲ್ಲಿ ಆಸೀಸ್ ಪರ ಮಾರ್ನಸ್ ಲಾಬುಶೇನ್ 70 ರನ್ (139 ಎಸೆತ, 3 ಬೌಂಡರಿ) ಗಳಿಸಿದ್ರೆ, ಪ್ಯಾಟ್ ಕಮ್ಮಿನ್ಸ್ 41 ರನ್, ಉಸ್ಮಾಣ ಖವಾಜ 21 ರನ್, ಸ್ಯಾಮ್ ಕಾನ್ಸ್‌ಸ್ಟಾಸ್ 8 ರನ್, ಟ್ರಾವಿಸ್ ಹೆಡ್ 1 ರನ್, ಅಲೆಕ್ಸ್ ಕ್ಯಾರಿ 2 ರನ್ ಗಳಿಸಿದ್ರೆ ಮಿಚೆಲ್ ಮಾರ್ಷ್ ಶೂನ್ಯ ಸುತ್ತಿದರು. ದಿನದ ಅಂತ್ಯದ ವರೆಗೂ ವಿಕೆಟ್ ಬಿಟ್ಟುಕೊಡದ ನಥಾನ್ ಲಿಯಾನ್ 41 ರನ್, ಸ್ಕಾಟ್ ಬೊಲ್ಯಾಂಡ್ 10 ರನ್ ಗಳಿಸಿದ್ದು, 5ನೇ ದಿನಕ್ಕೆ ಕ್ರೀಸ್ ಕಾಯ್ದುಕೊಂಡಿದ್ದಾರೆ.
ಬುಮ್ರಾ ಬೆಂಕಿ ಚೆಂಡಿಗೆ ದಾಖಲೆಗಳು ಉಡೀಸ್: ಭಾರತದ ಪರ 200 ವಿಕೆಟ್‌ಗಳನ್ನು ವೇಗವಾಗಿ ಪಡೆದ ಬೌಲರ್ಸ್
37 ಪಂದ್ಯ, ರವಿಚಂದ್ರನ್ ಅಶ್ವಿನ್
44 ಪಂದ್ಯ, ಜಸ್ಪ್ರಿತ್ ಬುಮ್ರಾ
44 ಪಂದ್ಯ, ರವೀಂದ್ರ ಜಡೇಜಾ
46 ಪಂದ್ಯ, ಹರ್ಭಜನ್ ಸಿಂಗ್
47 ಪಂದ್ಯ, ಅನಿಲ್ ಕುಂಬ್ಳೆ
ಅತಿ ಕಡಿಮೆ ಸರಾಸರಿ ಹೊಂದಿರುವ ಬೌಲರ್ಸ್
ಜಸ್ಪ್ರೀತ್ ಬುಮ್ರಾ, 19.56 ಸರಾಸರಿ
ಜಯೋಲ್ ಗಾರ್ನರ್, 20.34 ಸರಾಸರಿ
ಶಾನ್ ಪೊಲಾಕ್, 20.39 ಸರಾಸರಿ
ವಕಾರ್ ಯೂನಿಸ್, 20.61 ಸರಾಸರಿ
ಕಡಿಮೆ ಎಸೆತಗಳಲ್ಲಿ 200 ವಿಕೆಟ್ ಪಡೆದ ಬೌಲರ್‌ಗಳು
ವಕಾರ್ ಯೂನಿಸ್, 7725 ಎಸೆತಗಳು
ಡೇಲ್ ಸ್ಟೇಯ್ನ್, 7848 ಎಸೆತಗಳು
ಕಗಿಸೊ ರಬಾಡ, 8153 ಎಸೆತಗಳು
ಜಸ್ಪ್ರೀತ್ ಬುಮ್ರಾ, 8484 ಎಸೆತಗಳು
ಮೆಲ್ಬೊರ್ನ್: ಇಲ್ಲಿ ನಡೆಯುತ್ತಿರುವ ಬಾಕ್ಸಿಂಗ್ ಡೇ ಟೆಸ್ಟ್ ಕ್ರಿಕೆಟ್‌ನ ಮೊದಲ ದಿನವೇ ಆಸೀಸ್ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದೆ. ಟೀಂ ಇಂಡಿಯಾ ಎದುರು ಪ್ರಾಬಲ್ಯ ಮೆರೆದ ಆಸ್ಟ್ರೇಲಿಯಾ (Australia) ಮೊದಲ ದಿನವೇ 86 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 311 ರನ್ ಗಳಿಸಿದೆ. ಸ್ಟೀವ್ ಸ್ಮಿತ್ (Steve Smith) ನಾಯಕ ಪ್ಯಾಟ್ ಕಮ್ಮಿನ್ಸ್ ಕ್ರೀಸ್‌ನಲ್ಲಿದ್ದು ಶುಕ್ರವಾರ 2ನೇ ದಿನದಾಟ ಮುಂದುವರಿಸಲಿದ್ದಾರೆ.
ಬಾರ್ಡರ್ ಗವಾಸ್ಕರ್ ಟ್ರೋಫಿಯ ಸರಣಿಯಲ್ಲಿ ಇದು 4ನೇ ಪಂದ್ಯವಾಗಿದೆ. ಮೊದಲನೇ ಪಂದ್ಯದಲ್ಲಿ ಭರ್ಜರಿ ಗೆಲುವು ದಾಖಲಿಸಿದ್ದ ಭಾರತ, 2ನೇ ಪಂದ್ಯದಲ್ಲಿ ಸೋಲು ಕಂಡಿತ್ತು, 3ನೇ ಪಂದ್ಯ ಡ್ರಾನಲ್ಲಿ ಅಂತ್ಯಕಂಡಿತು. ಸದ್ಯ ಮುಂದಿನ ಎರಡೂ ಪಂದ್ಯಗಳು ಭಾರತಕ್ಕೆ ನಿರ್ಣಾಯಕವಾಗಿದ್ದು, ಗೆದ್ದರಷ್ಟೇ ವಿಶ್ವಟೆಸ್ಟ್ ಚಾಂಪಿಯನ್ ಶಿಪ್ ಫೈನಲ್‌ಗೆ (WTC Final) ಅರ್ಹತೆ ಪಡೆದುಕೊಳ್ಳಲಿದೆ.
ಮೆಲ್ಬೊರ್ನ್ (Melbourne) ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 4ನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು. ಟೀಂ ಇಂಡಿಯಾ ಬೌಲರ್‌ಗಳ ಎದುರು ಅಬ್ಬರಿಸಿದ ಅಗ್ರ ನಾಲ್ವರು ಬ್ಯಾಟರ್‌ಗಳು ತಲಾ ಒಂದೊಂದು ಅರ್ಧಶತಕ ಸಿಡಿಸುವ ಮೂಲಕ ಮೊದಲ ದಿನವೇ ತಂಡದ ಮೊತ್ತ 300 ರನ್‌ಗಳ ಗಡಿ ದಾಟಿಸುವಲ್ಲಿ ಯಶಸ್ವಿಯಾದರು.
ಆಸೀಸ್ ಪರ ಅಖಾಡಕ್ಕಿಳಿದ 19 ವರ್ಷದ ಸ್ಯಾಮ್ ಕಾನ್ಸ್ಟಸ್ 60 ರನ್ (65 ಎಸೆತ, 6 ಬೌಂಡರಿ, 2 ಸಿಕ್ಸರ್), ಉಸ್ಮಾನ್ ಖವಾಜ 57 ರನ್ (121 ಎಸೆತ, 6 ಬೌಂಡರಿ), ಮಾರ್ನಸ್ ಲಾಬುಶೇನ್ 72 ರನ್ (145 ಎಸೆತ, 7 ಬೌಂಡರಿ), ಮಿಚೆಲ್ ಮಾರ್ಷ್ 4 ರನ್ ಅಲೆಕ್ಸ್ ಕ್ಯಾರಿ 31 ರನ್ ಗಳಿಸಿದ್ದರೆ, ಟೀಂ ಇಂಡಿಯಾ ಕಾಡುತ್ತಿದ್ದ ಟ್ರಾವಿಸ್ ಹೆಡ್ ಶೂನ್ಯ ಸುತ್ತಿದರು. ಇನ್ನೂ ಸ್ಟೀವ್ ಸ್ಮಿತ್ 68 ರನ್ (111 ಎಸೆತ, 5 ಬೌಂಡರಿ, 1 ಸಿಕ್ಸರ್) ಹಾಗೂ ಪ್ಯಾಟ್ ಕಮ್ಮಿನ್ಸ್ 8 ರನ್ ಗಳಿಸಿ 2ನೇ ದಿನಕ್ಕೆ ಬ್ಯಾಟಿಂಗ್ ಕಾಯ್ದಿರಿಸಿದ್ದಾರೆ.
ಟೀಂ ಇಂಡಿಯಾ ಪರ ಮಾರಕ ದಾಳಿ ನಡೆಸಿದ ಜಸ್ಪ್ರೀತ್ ಬುಮ್ರಾ ಪ್ರಮುಖ 3 ವಿಕೆಟ್ ಕಿತ್ತರೆ, ಆಕಾಶ್ ದೀಪ್, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್ ತಲಾ ಒಂದೊಂದು ವಿಕೆಟ್ ಪಡೆದರು.
ಚೆನ್ನೈ: ಟೀಂ ಇಂಡಿಯಾ ಸ್ಟಾರ್ ಆಟಗಾರರಾದ ವಿರಾಟ್ ಕೊಹ್ಲಿ (Virat kohli) ಮತ್ತು ಕೆ.ಎಲ್ ರಾಹುಲ್ (KL Rahul) ಅವರ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶನದಿಂದ ಟೀಂ ಇಂಡಿಯಾ (Team India), ಆಸ್ಟ್ರೇಲಿಯಾ ವಿರುದ್ಧ 6 ವಿಕೆಟ್‌ಗಳ ಅಮೋಘ ಜಯ ಸಾಧಿಸಿದೆ. ಈ ಮೂಲಕ ವಿಶ್ವಕಪ್ ಟೂರ್ನಿಯಲ್ಲಿ ಶುಭಾರಂಭ ಕಂಡಿದೆ.
ಚೇಸಿಂಗ್ ಆರಂಭಿಸಿದ ಭಾರತ 2ನೇ ಓವರ್‌ನಲ್ಲೇ ಕೇವಲ 2 ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡು ತೀವ್ರ ಸಂಕಷ್ಟ ಅನುಭವಿಸಿತ್ತು. ಇದರಿಂದ 4ನೇ ವಿಕೆಟ್‌ಗೆ ಜೊತೆಯಾದ ವಿರಾಟ್ ಕೊಹ್ಲಿ, ಕೆ.ಎಲ್ ರಾಹುಲ್ ಜೋಡಿ ನಿಧಾನಗತಿಯ ಬ್ಯಾಟಿಂಗ್ ಆರಂಭಿಸಿತ್ತು. 15 ಓವರ್ ಪೂರ್ಣಗೊಂಡರೂ ಭಾರತ 49 ರನ್ ಗಳಿಸಿದ್ದರಿಂದ ಗೆಲವು ಅಸಾಧ್ಯವೆಂದೇ ಭಾವಿಸಲಾಗಿತ್ತು. ಬಳಿಕ ಸಮಯೋಚಿತ ಬ್ಯಾಟಿಂಗ್ ನಿಂದ ಒಂದೊಂದೇ ಬೌಂಡರಿಗಳನ್ನ ಸಿಡಿಸುತ್ತಾ ತಂಡವನ್ನು ಗೆಲುವಿನ ಹಾದಿಯತ್ತ ಮುನ್ನಡೆಸಿದರು. ಇದನ್ನೂ ಓದಿ: World Cup 2023: ಸ್ಪಿನ್ ಪಿಚ್‌ನಲ್ಲಿ ತಿಣುಕಾಡಿದ ಆಸೀಸ್ – ಭಾರತಕ್ಕೆ 200 ರನ್‌ಗಳ ಗುರಿ
ಇವರಿಬ್ಬರ ಜೊತೆಯಾಟದಿಂದ ಭಾರತ 35 ಓವರ್‌ಗಳಲ್ಲಿ 151 ರನ್ ಬಾರಿಸಿತ್ತು. 4ನೇ ವಿಕೆಟ್‌ಗೆ ಕೆ.ಎಲ್ ರಾಹುಲ್ ಹಾಗೂ ಕೊಹ್ಲಿ 215 ಎಸೆತಗಳಲ್ಲಿ 165 ರನ್‌ಗಳ ಜೊತೆಯಾಟ ನೀಡಿ ತಂಡವನ್ನು ಗೆಲ್ಲಿಸುವಲ್ಲಿ ಯಶಸ್ವಿಯಾದರು. ಕೊಹ್ಲಿ 116 ಎಸೆತಗಳಲ್ಲಿ 6 ಬೌಂಡರಿಯೊಂದಿಗೆ 85 ರನ್ ಚಚ್ಚಿ ಶತಕ ವಂಚಿರಾದರು. ಇನ್ನೂ ಕೊನೆಯವರೆಗೂ ಹೋರಾಡಿದ ಕೆ.ಎಲ್ ರಾಹುಲ್ 115 ಎಸೆತಗಳಲ್ಲಿ 97 ರನ್ (8 ಬೌಂಡರಿ, 2 ಸಿಕ್ಸರ್) ಚಚ್ಚಿ ಅಜೇರಾಗುಳಿದರು. ಕೊನೆಯಲ್ಲಿ ಹಾರ್ದಿಕ್ ಪಾಂಡ್ಯ 11 ರನ್ ಕೊಡುಗೆ ನೀಡಿದರು.
ಆರಂಭಿಕರಾಗಿ ಕಣಕ್ಕಿಳಿದ ಡೇವಿಡ್ ವಾರ್ನರ್ ಹಾಗೂ ಮಚೆಲ್ ಮಾರ್ಷ್ ಜೋಡಿ ಉತ್ತಮ ಆರಂಭ ನೀಡುವಲ್ಲಿ ವಿಫಲವಾಯಿತು. 2.2 ಓವರ್‌ನಲ್ಲೇ 5 ರನ್‌ಗಳಿಗೆ ಮೊದಲ ವಿಕೆಟ್ ಕಳೆದುಕೊಂಡ ಆಸೀಸ್ ಸಂಕಷ್ಟಕ್ಕೀಡಾಯಿತು. ಈ ವೇಳೆ 2ನೇ ವಿಕೆಟ್‌ಗೆ ಡೇವಿಡ್ ವಾರ್ನರ್ ಮತ್ತು ಸ್ಟೀವ್ ಸ್ಮಿತ್ ಜೋಡಿ, 85 ಎಸೆತಗಳಲ್ಲಿ 69 ರನ್ ಹಾಗೂ ಸ್ಟೀವ್ ಸ್ಮಿತ್ ಮತ್ತು ಮಾರ್ನಸ್ ಲಾಬುಶೇನ್ ಜೋಡಿ 64 ಎಸೆತಗಳಲ್ಲಿ 36 ರನ್‌ಗಳ ಜೊತೆಯಾಟ ನೀಡುವ ಮೂಲಕ ತಂಡಕ್ಕೆ ಚೇತರಿಕೆ ನೀಡಿತ್ತು. ಈ ವೇಳೆ ಟೀಂ ಇಂಡಿಯಾ ಸ್ಪಿನ್ನರ್‌ಗಳು ಆಸೀಸ್ ಅಗ್ರ ಕ್ರಮಾಂಕದ ಬ್ಯಾಟರ್‌ಗಳನ್ನ ಕಟ್ಟಿಹಾಕುವಲ್ಲಿ ಯಶಸ್ವಿಯಾದರು. ಅಂತಿಮವಾಗಿ ಆಸೀಸ್ 49.3 ಓವರ್‌ಗಳಲ್ಲಿ 199ರನ್‌ಗಳಿಗೆ ಸರ್ವಪತನ ಕಂಡಿತು.
ಆಸೀಸ್ ಪರ ಡೇವಿಡ್ ವಾರ್ನರ್ 41 ರನ್ (52 ಎಸೆತ, 6 ಬೌಂಡರಿ), ಸ್ಟೀವ್ ಸ್ಮಿತ್ 46 ರನ್ (71 ಎಸೆತ 5 ಬೌಂಡರಿ), ಮಾರ್ನಸ್ ಲಾಬುಶೇನ್ 27 ರನ್, ಗ್ಲೇನ್ ಮ್ಯಾಕ್ಸ್‌ವೆಲ್ 15 ರನ್, ಕ್ಯಾಮರೂನ್ ಗ್ರೀನ್ 8 ರನ್, ಪ್ಯಾಟ್ ಕಮ್ಮಿನ್ಸ್ 15 ರನ್, ಮಿಚೆಲ್ ಸ್ಟಾರ್ಕ್ 28 ರನ್, ಆಡಂ ಝಂಪಾ 6 ರನ್, ಜೋಶ್ ಹ್ಯಾಜಲ್‌ವುಡ್ 1 ರನ್ ಗಳಿಸಿ ಕ್ರೀಸ್‌ನಲ್ಲಿ ಉಳಿದರೆ, ಮಿಚೆಲ್ ಮಾರ್ಷ್ ಹಾಗೂ ಅಲೆಕ್ಸ್ ಕ್ಯಾರಿ ಶೂನ್ಯಕ್ಕೆ ನಿರ್ಗಮಿಸಿದರು.
ಜಡೇಜಾ ಸ್ಪಿನ್ ಜಾದು: ಟೀಂ ಇಂಡಿಯಾ ಪರ ಬೌಲಿಂಗ್‌ನಲ್ಲಿ ಮೋಡಿ ಮಾಡಿದ ರವೀಂದ್ರ ಜಡೇಜಾ 10 ಓವರ್‌ಗಳಲ್ಲಿ 28 ರನ್ ನೀಡಿ 3 ವಿಕೆಟ್ ಕಿತ್ತರೆ, ಜಸ್ಪ್ರೀತ್ ಬುಮ್ರಾ ಹಾಗೂ ಕುಲ್ದೀಪ್ ಯಾದವ್ ತಲಾ 2 ವಿಕೆಟ್, ಹಾರ್ದಿಕ್ ಪಾಂಡ್ಯ, ರವಿಚಂದ್ರನ್ ಅಶ್ವಿನ್ ಹಾಗೂ ಮೊಹಮ್ಮದ್ ಸಿರಾಜ್ ತಲಾ ಒಂದೊಂದು ವಿಕೆಟ್ ಪಡೆದು ಮಿಂಚಿದರು.
ಚೆನ್ಹೈ: ಚೆಪಾಕ್‌ನ ಚಿದಂಬರಂ ಕ್ರೀಡಾಂಗಣದಲ್ಲಿ ಭಾರತದ (India) ವಿರುದ್ಧ ನಡೆಯುತ್ತಿರುವ ವಿಶ್ವಕಪ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು (Australia) 49.3 ಓವರ್‌ಗಳಲ್ಲಿ 199 ರನ್‌ಗಳಿಗೆ ತನ್ನೆಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡು ಭಾರತಕ್ಕೆ 200 ರನ್‌ಗಳ ಗುರಿ ನೀಡಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಆಸೀಸ್ ಸ್ಪಿನ್ ಪಿಚ್‌ನಲ್ಲಿ ರನ್ ಕದಿಯಲು ತಿಣುಕಾಡಿತು. ಭಾರತದ ಸ್ಪಿನ್ ಮಾಂತ್ರಿಕರ ದಾಳಿ ಹೊರತಾಗಿಯೂ 199 ರನ್ ಗಳಿಸಿ, ಟೀಂ ಇಂಡಿಯಾಕ್ಕೆ (Team India) 200 ರನ್‌ಗಳ ಗುರಿ ನೀಡಿತು. ಇದನ್ನೂ ಓದಿ: ಪ್ರಧಾನಿ ಮೋದಿ ಹತ್ಯೆ, ಮೋದಿ ಸ್ಟೇಡಿಯಂ ಸ್ಫೋಟ ಬೆದರಿಕೆ – ಮುಂಬೈ ಪೊಲೀಸರಿಗೆ ಸಂದೇಶ
ಆರಂಭಿಕರಾಗಿ ಕಣಕ್ಕಿಳಿದ ಡೇವಿಡ್ ವಾರ್ನರ್ ಹಾಗೂ ಮಚೆಲ್ ಮಾರ್ಷ್ ಜೋಡಿ ಉತ್ತಮ ಆರಂಭ ನೀಡುವಲ್ಲಿ ವಿಫಲವಾಯಿತು. 2.2 ಓವರ್‌ನಲ್ಲೇ 5 ರನ್‌ಗಳಿಗೆ ಮೊದಲ ವಿಕೆಟ್ ಕಳೆದುಕೊಂಡ ಆಸೀಸ್ ಸಂಕಷ್ಟಕ್ಕೀಡಾಯಿತು. ಈ ವೇಳೆ 2ನೇ ವಿಕೆಟ್‌ಗೆ ಡೇವಿಡ್ ವಾರ್ನರ್ ಮತ್ತು ಸ್ಟೀವ್ ಸ್ಮಿತ್ (Steve Smith) ಜೋಡಿ, 85 ಎಸೆತಗಳಲ್ಲಿ 69 ರನ್ ಹಾಗೂ ಸ್ಟೀವ್ ಸ್ಮಿತ್ ಮತ್ತು ಮಾರ್ನಸ್ ಲಾಬುಶೇನ್ ಜೋಡಿ 64 ಎಸೆತಗಳಲ್ಲಿ 36 ರನ್‌ಗಳ ಜೊತೆಯಾಟ ನೀಡುವ ಮೂಲಕ ತಂಡಕ್ಕೆ ಚೇತರಿಕೆ ನೀಡಿತ್ತು. ಈ ವೇಳೆ ಟೀಂ ಇಂಡಿಯಾ ಸ್ಪಿನ್ನರ್‌ಗಳು ಆಸೀಸ್ ಅಗ್ರ ಕ್ರಮಾಂಕದ ಬ್ಯಾಟರ್‌ಗಳನ್ನ ಕಟ್ಟಿಹಾಕುವಲ್ಲಿ ಯಶಸ್ವಿಯಾದರು. ಅಂತಿಮವಾಗಿ ಆಸೀಸ್ 49.3 ಓವರ್‌ಗಳಲ್ಲಿ 199 ರನ್‌ಗಳಿಗೆ ಸರ್ವಪತನ ಕಂಡಿತು.
ಆಸೀಸ್ ಪರ ಡೇವಿಡ್ ವಾರ್ನರ್ 41 ರನ್ (52 ಎಸೆತ, 6 ಬೌಂಡರಿ), ಸ್ಟೀವ್ ಸ್ಮಿತ್ 46 ರನ್ (71 ಎಸೆತ 5 ಬೌಂಡರಿ), ಮಾರ್ನಸ್ ಲಾಬುಶೇನ್ 27 ರನ್, ಗ್ಲೇನ್ ಮ್ಯಾಕ್ಸ್‌ವೆಲ್ 15 ರನ್, ಕ್ಯಾಮರೂನ್ ಗ್ರೀನ್ 8 ರನ್, ಪ್ಯಾಟ್ ಕಮ್ಮಿನ್ಸ್ (Pat Cummins) 15 ರನ್, ಮಿಚೆಲ್ ಸ್ಟಾರ್ಕ್ 28 ರನ್, ಆಡಂ ಝಂಪಾ 6 ರನ್, ಜೋಶ್ ಹ್ಯಾಜಲ್‌ವುಡ್ 1 ರನ್ ಗಳಿಸಿ ಕ್ರೀಸ್‌ನಲ್ಲಿ ಉಳಿದರೆ, ಮಿಚೆಲ್ ಮಾರ್ಷ್ ಹಾಗೂ ಅಲೆಕ್ಸ್ ಕ್ಯಾರಿ ಶೂನ್ಯಕ್ಕೆ ನಿರ್ಗಮಿಸಿದರು. ಇದನ್ನೂ ಓದಿ: Asian Games 2023: ಏಷ್ಯನ್ ಗೇಮ್ಸ್‌ನಲ್ಲೂ ಚಿನ್ನ ಗೆದ್ದು ಇತಿಹಾಸ ಸೃಷ್ಟಿಸಿದ ಸಾತ್ವಿಕ್‌ಸಾಯಿರಾಜ್, ಚಿರಾಗ್ ಜೋಡಿ
ಜಡೇಜಾ ಸ್ಪಿನ್ ಜಾದು: ಟೀಂ ಇಂಡಿಯಾ ಪರ ಬೌಲಿಂಗ್‌ನಲ್ಲಿ ಮೋಡಿ ಮಾಡಿದ ರವೀಂದ್ರ ಜಡೇಜಾ 10 ಓವರ್‌ಗಳಲ್ಲಿ 28 ರನ್ ನೀಡಿ 3 ವಿಕೆಟ್ ಕಿತ್ತರೆ, ಜಸ್ಪ್ರೀತ್ ಬುಮ್ರಾ ಹಾಗೂ ಕುಲ್ದೀಪ್ ಯಾದವ್ ತಲಾ 2 ವಿಕೆಟ್, ಹಾರ್ದಿಕ್ ಪಾಂಡ್ಯ, ರವಿಚಂದ್ರನ್ ಅಶ್ವಿನ್ ಹಾಗೂ ಮೊಹಮ್ಮದ್ ಸಿರಾಜ್ ತಲಾ ಒಂದೊಂದು ವಿಕೆಟ್ ಪಡೆದು ಮಿಂಚಿದರು.
ರಾಜ್‌ಕೋಟ್: ಗ್ಲೇನ್ ಮ್ಯಾಕ್ಸ್‌ವೆಲ್ (Glenn Maxwell) ಮಿಂಚಿನ ಬೌಲಿಂಗ್ ದಾಳಿಯಿಂದ ಆಸ್ಟ್ರೇಲಿಯಾ (Australia) ತಂಡವು ಅಂತಿಮ ಪಂದ್ಯದಲ್ಲಿ ಭಾರತದ ವಿರುದ್ಧ 66 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಆದ್ರೆ ಕಳೆದ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದ ಭಾರತ 2-1 ಅಂತರದಲ್ಲಿ ಸರಣಿ ಗೆದ್ದು ಬೀಗಿದೆ.
ಆರಂಭಿಕರಾಗಿ ಕಣಕ್ಕಿಳಿದ ರೋಹಿತ್ ಶರ್ಮಾ (Rohit Sharma) ಹಾಗೂ ವಾಷಿಂಗ್ಟನ್ ಸುಂದರ್ ಜೋಡಿ 10.5 ಓವರ್‌ಗಳಲ್ಲಿ 74 ರನ್ ಜೊತೆಯಾಟ ನೀಡಿತ್ತು. ಆರಂಭದಿಂದಲೇ ಆಸೀಸ್ ಬೌಲರ್‌ಗಳನ್ನ ಬೆಂಡೆತ್ತಲು ಶುರು ಮಾಡಿದ ನಾಯಕ ರೋಹಿತ್ ಶರ್ಮಾ 31 ಎಸೆತಗಳಲ್ಲಿ 5 ಸಿಕ್ಸರ್, 3 ಬೌಂಡರಿಯೊಂದಿಗೆ ಅರ್ಧಶತಕ ಸಿಡಿಸಿದರು. ಇದೇ ವೇಳೆ ಮ್ಯಾಕ್ಸ್‌ವೆಲ್ ಬೌಲಿಂಗ್‌ನಲ್ಲಿ ಸಿಕ್ಸ್ ಸಿಡಿಸಲು ಯತ್ನಿಸಿದ ಸುಂದರ್ ಬೌಂಡರಿ ಲೈನ್‌ನಲ್ಲಿ ಕ್ಯಾಚ್ ನೀಡಿ ನಿರ್ಗಮಿಸಿದರು. ಇದನ್ನೂ ಓದಿ: Ind vs Aus: ವೈಟ್‌ವಾಶ್‌ನಿಂದ ತಪ್ಪಿಸಿಕೊಳ್ಳಲು ಆಸೀಸ್ ತವಕ – ಭಾರತಕ್ಕೆ 353 ರನ್‌ಗಳ ಗುರಿ
57 ಎಸೆತಗಳಲ್ಲಿ 81 ರನ್ (6 ಸಿಕ್ಸರ್, 5 ಬೌಂಡರಿ) ಗಳಿಸಿ ಆಡುತ್ತಿದ್ದ ರೋಹಿತ್ ಶರ್ಮಾ, ಮ್ಯಾಕ್ಸ್‌ವೆಲ್ ಬೌಲಿಂಗ್‌ನಲ್ಲೇ ಸುಲಭ ಕ್ಯಾಚ್‌ಗೆ ತುತ್ತಾದರು. ಈ ಬೆನ್ನಲ್ಲೇ ರೋಹಿತ್ ಶರ್ಮಾ ಜೊತೆಗೂಡಿ 2ನೇ ವಿಕೆಟ್‌ಗೆ 61 ಎಸೆತಗಳಲ್ಲಿ 71 ರನ್ ಜೊತೆಯಾಟ ನೀಡಿದ್ದ ವಿರಾಟ್ ಕೊಹ್ಲಿ ಸಹ 56 ರನ್ (61 ಎಸೆತ, 1 ಸಿಕ್ಸರ್, 5 ಬೌಂಡರಿ) ಗಳಿಸಿ ಮ್ಯಾಕ್ಸ್‌ವೆಲ್‌ಗೆ ವಿಕೆಟ್ ಒಪ್ಪಿಸಿದರು. ನಂತರ ತಂಡದಲ್ಲಿ ಗೆಲುವಿನ ಭರವಸೆ ಮೂಡಿಸಿದ್ದ ಶ್ರೇಯಸ್ ಅಯ್ಯರ್ ಕೂಡ 48 ರನ್ (43 ಎಸೆತ, 2 ಸಿಕ್ಸರ್, 1 ಬೌಂಡರಿ) ಗಳಿಸಿ ಪೆವಿಲಿಯನ್ ಸೇರಿಕೊಂಡರು.
ಬ್ಯಾಟಿಂಗ್‌ನಲ್ಲಿ ಕೇವಲ 5 ರನ್ ಗಳಿಸಿ ಕೈಕೊಟ್ಟಿದ್ದ ಮ್ಯಾಕ್ಸ್‌ವೆಲ್ ಟೀಂ ಇಂಡಿಯಾ ವಿರುದ್ಧ ಮಿಂಚಿನ ಬೌಲಿಂಗ್ ದಾಳಿ ನಡೆಸುವ ಮೂಲಕ ಆಸೀಸ್ ತಂಡದ ಗೆಲುವಿಗೆ ಕಾರಣವಾದರು. 10 ಓವರ್‌ಗಳಲ್ಲಿ 40 ರನ್ ಬಿಟ್ಟುಕೊಟ್ಟ ಮ್ಯಾಕ್ಸ್‌ವೆಲ್, ವಾಷಿಂಗ್ಟನ್ ಸುಂದರ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹಾಗೂ ಶ್ರೇಯಸ್ ಅಯ್ಯರ್ ಪ್ರಮುಖರ ವಿಕೆಟ್ ಪಡೆಯುವ ಮೂಲಕ ಗೆಲುವು ತಂದುಕೊಟ್ಟರು.
ಉಳಿದಂತೆ ಟೀಂ ಇಂಡಿಯಾ ಪರ ಕೆ.ಎಲ್ ರಾಹುಲ್ 26 ರನ್, ರವೀಂದ್ರ ಜಡೇಜಾ 35 ರನ್, ಸೂರ್ಯಕುಮಾರ್ ಯಾದವ್ 8 ರನ್, ಕುಲ್ದೀಪ್ ಯಾದವ್ 2 ರನ್, ಜಸ್ಪ್ರೀತ್ ಬುಮ್ರಾ 5 ರನ್ ಹಾಗೂ ಮೊಹಮ್ಮದ್ ಸಿರಾಜ್ 1 ರನ್ ಗಳಿಸಿದ್ರೆ, ಪ್ರಸಿದ್ಧ್ ಕೃಷ್ಣ ರನ್ ಗಳಿಸದೇ ಅಜೇಯರಾಗುಳಿದರು. ಆಸೀಸ್ ಪರ ಜಾಶ್ ಹ್ಯಾಜಲ್‌ವುಡ್ 2 ವಿಕೆಟ್ ಕಿತ್ತರೆ, ಮಿಚೆಲ್ ಸ್ಟಾರ್ಕ್, ಪ್ಯಾಟ್ ಕಮ್ಮಿನ್ಸ್, ಕ್ಯಾಮರೂನ್ ಗ್ರೀನ್, ತನ್ವೀರ್ ಸಂಘ ತಲಾ ಒಂದೊಂದು ವಿಕೆಟ್ ಪಡೆದು ಮಿಂಚಿದರು.
ಇದಕ್ಕೂ ಮುನ್ನ ಟಾಸ್ ಗೆದ್ದು ಮೊದಲು ಕ್ರೀಸ್‌ಗಿಳಿದ ಆಸ್ಟ್ರೇಲಿಯಾದ ಅಗ್ರ ಕ್ರಮಾಂಕದ ಬ್ಯಾಟರ್‌ಗಳು ಟೀಂ ಇಂಡಿಯಾ ಬೌಲರ್‌ಗಳನ್ನ ಬೆಂಡೆತ್ತಿದರು. ಆರಂಭಿಕರಾಗಿ ಕಣಕ್ಕಿಳಿದ ಡೇವಿಡ್ ವಾರ್ನರ್ ಹಾಗೂ ಮಿಚೆಲ್ ಮಾರ್ಷ್ ಮೊದಲ ವಿಕೆಟ್‌ಗೆ 8.1 ಓವರ್‌ಗಳಲ್ಲಿ 78 ರನ್‌ಗಳ ಜೊತೆಯಾಟ ನೀಡಿದರು. 34 ಎಸೆತಗಳಲ್ಲಿ 56 ರನ್ (4 ಸಿಕ್ಸರ್, 6 ಬೌಂಡರಿ) ಗಳಿಸಿ ಡೇವಿಡ್ ವಾರ್ನರ್ ಔಟಾಗುತ್ತಿದ್ದಂತೆ, ಮಿಚೆಲ್ ಮಾರ್ಷ್ ಹಾಗೂ ಸ್ಟೀವ್ ಸ್ಮಿತ್ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದರು. 2ನೇ ವಿಕೆಟ್‌ಗೆ ಈ ಜೋಡಿ 119 ಎಸೆತಗಳಲ್ಲಿ 137 ರನ್ ಬಾರಿಸಿತ್ತು.
ಕಳೆದ ಎರಡು ಪಂದ್ಯಗಳಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದ ಮಿಚೆಲ್ ಮಾರ್ಷ್ ಅಂತಿಮ ಪಂದ್ಯದಲ್ಲಿ ಶತಕ ವಂಚಿತರಾಗಿ ನಿರ್ಗಮಿಸಿದರು. 84 ಎಸೆತಗಳನ್ನು ಎದುರಿಸಿದ ಮಾರ್ಷ್ 96 ರನ್ (13 ಬೌಂಡರಿ, 3 ಸಿಕ್ಸರ್) ಬಾರಿಸಿದ್ರೆ, ಸ್ಟೀವ್ ಸ್ಮಿತ್ 61 ಎಸೆತಗಳಲ್ಲಿ 74 ರನ್ (8 ಬೌಂಡರಿ, 1 ಸಿಕ್ಸರ್) ರನ್ ಚಚ್ಚಿದರು. 27 ಓವರ್‌ಗಳಲ್ಲಿ ಕೇವಲ 1 ವಿಕೆಟ್ ಕಳೆದುಕೊಂಡಿದ್ದ ಆಸೀಸ್ ಪಡೆ 400 ರನ್‌ಗಳನ್ನು ಕಲೆಹಾಕುವ ಭರವಸೆ ಮೂಡಿಸಿತ್ತು. ಆದ್ರೆ ಸ್ಟೀವ್ ಸ್ಮಿತ್, ಮಿಚೆಲ್ ಮಾರ್ಚ್ ವಿಕೆಟ್ ಪತನ ಬಳಿಕ ರನ್ ವೇಗ ಕೂಡ ಕಡಿಮೆಯಾಯಿತು.
ಅಂತಿಮವಾಗಿ ಆಸ್ಟ್ರೇಲಿಯಾ 50 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 352 ರನ್ ಗಳಿಸಿತು. ಆಸೀಸ್ ಪರ ಮಾರ್ನಸ್ ಲಾಬುಶೇನ್ 72 ರನ್ (9 ಬೌಂಡರಿ, 58 ಎಸೆತ), ಅಲೆಕ್ಸ್ ಕ್ಯಾರಿ 11 ರನ್, ಗ್ಲೇನ್ ಮ್ಯಾಕ್ಸ್‌ವೆಲ್ 5 ರನ್, ಕ್ಯಾಮರೂನ್ ಗ್ರೀನ್ 9 ರನ್ ಗಳಿಸಿ ಪೆವಿಲಿಯನ್ ಸೇರಿದರು. ಕೊನೆಯಲ್ಲಿ ಪ್ಯಾಟ್ ಕಮ್ಮಿನ್ಸ್ 19 ರನ್ ಹಾಘೂ ಮಿಚೆಲ್ ಸ್ಟಾರ್ಕ್ 1 ರನ್ ಗಳಿಸಿ ಅಜೇಯರಾಗುಳಿದರು.
ಟೀಂ ಇಂಡಿಯಾ ಪರ ವೇಗಿ ಜಸ್ಪ್ರೀತ್ ಬುಮ್ರಾ 3 ವಿಕೆಟ್ ಕಿತ್ತರೆ, ಕುಲ್ದೀಪ್ ಯಾದವ್ 2 ವಿಕೆಟ್ ಹಾಗೂ ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ ತಲಾ ಒಂದೊಂದು ವಿಕೆಟ್ ಪಡೆದು ಮಿಂಚಿದರು.
ರಾಜ್‌ಕೋಟ್: ಇಲ್ಲಿನ ಸೌರಾಷ್ಟ್ರ ಕ್ರೀಡಾಂಗಣದಲ್ಲಿ ಭಾರತದ ವಿರುದ್ಧ ನಡೆಯುತ್ತಿರುವ ಮೂರು ಪಂದ್ಯಗಳ ಏಕದಿನ ಸರಣಿಯ ಅಂತಿಮ ಪಂದ್ಯದಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿರುವ ಆಸ್ಟ್ರೇಲಿಯಾ (Australia) 50 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 352 ರನ್ ಗಳಿಸಿ ಭಾರತಕ್ಕೆ (Team India) 353 ರನ್‌ಗಳ ಗುರಿ ನೀಡಿದೆ. ಈ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ವೈಟ್‌ವಾಶ್‌ನಿಂದ ತಪ್ಪಿಸಿಕೊಳ್ಳುವ ತವಕದಲ್ಲಿದೆ.
ಟಾಸ್ ಗೆದ್ದು ಮೊದಲು ಕ್ರೀಸ್‌ಗಿಳಿದ ಆಸ್ಟ್ರೇಲಿಯಾದ ಅಗ್ರ ಕ್ರಮಾಂಕದ ಬ್ಯಾಟರ್‌ಗಳು ಟೀಂ ಇಂಡಿಯಾ (Team India) ಬೌಲರ್‌ಗಳನ್ನ ಬೆಂಡೆತ್ತಿದರು. ಆರಂಭಿಕರಾಗಿ ಕಣಕ್ಕಿಳಿದ ಡೇವಿಡ್ ವಾರ್ನರ್ ಹಾಗೂ ಮಿಚೆಲ್ ಮಾರ್ಷ್ (Mitchell March) ಮೊದಲ ವಿಕೆಟ್‌ಗೆ 8.1 ಓವರ್‌ಗಳಲ್ಲಿ 78 ರನ್‌ಗಳ ಜೊತೆಯಾಟ ನೀಡಿದರು. 34 ಎಸೆತಗಳಲ್ಲಿ 56 ರನ್ (4 ಸಿಕ್ಸರ್, 6 ಬೌಂಡರಿ) ಗಳಿಸಿ ಡೇವಿಡ್ ವಾರ್ನರ್ ಔಟಾಗುತ್ತಿದ್ದಂತೆ, ಮಿಚೆಲ್ ಮಾರ್ಷ್ ಹಾಗೂ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದರು. 2ನೇ ವಿಕೆಟ್‌ಗೆ ಈ ಜೋಡಿ 119 ಎಸೆತಗಳಲ್ಲಿ 137 ರನ್ ಬಾರಿಸಿತ್ತು. ಇದನ್ನೂ ಓದಿ: ಶ್ರೇಯಸ್, ಗಿಲ್ ದ್ವಿಶತಕ ಜೊತೆಯಾಟ, ಸೂರ್ಯನ ಆರ್ಭಟ – ಆಸೀಸ್‌ಗೆ ದಾಖಲೆಯ 400 ರನ್‌ಗಳ ಗುರಿ
ಕಳೆದ ಎರಡು ಪಂದ್ಯಗಳಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದ ಮಿಚೆಲ್ ಮಾರ್ಷ್ ಅಂತಿಮ ಪಂದ್ಯದಲ್ಲಿ ಶತಕ ವಂಚಿತರಾಗಿ ನಿರ್ಗಮಿಸಿದರು. 84 ಎಸೆತಗಳನ್ನು ಎದುರಿಸಿದ ಮಾರ್ಷ್ 96 ರನ್ (13 ಬೌಂಡರಿ, 3 ಸಿಕ್ಸರ್) ಬಾರಿಸಿದ್ರೆ, ಸ್ಟೀವ್ ಸ್ಮಿತ್ (Steve Smith) 61 ಎಸೆತಗಳಲ್ಲಿ 74 ರನ್ (8 ಬೌಂಡರಿ, 1 ಸಿಕ್ಸರ್) ರನ್ ಚಚ್ಚಿದರು. 27 ಓವರ್‌ಗಳಲ್ಲಿ ಕೇವಲ 1 ವಿಕೆಟ್ ಕಳೆದುಕೊಂಡಿದ್ದ ಆಸೀಸ್ ಪಡೆ 400 ರನ್‌ಗಳನ್ನು ಕಲೆಹಾಕುವ ಭರವಸೆ ಮೂಡಿಸಿತ್ತು. ಆದ್ರೆ ಸ್ಟೀವ್ ಸ್ಮಿತ್, ಮಿಚೆಲ್ ಮಾರ್ಚ್ ವಿಕೆಟ್ ಪತನ ಬಳಿಕ ರನ್ ವೇಗ ಕೂಡ ಕಡಿಮೆಯಾಯಿತು. ಇದನ್ನೂ ಓದಿ: World Cup 2023: ಇನ್ನೂ ವೀಸಾ ಸಿಕ್ಕಿಲ್ಲ – ಪಾಕಿಸ್ತಾನ ಆಟಗಾರರಿಗೆ ಶುರುವಾಯ್ತು ಹೊಸ ಸಮಸ್ಯೆ
ಅಂತಿಮವಾಗಿ ಆಸ್ಟ್ರೇಲಿಯಾ 50 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 352 ರನ್ ಗಳಿಸಿತು. ಆಸೀಸ್ ಪರ ಮಾರ್ನಸ್ ಲಾಬುಶೇನ್ 72 ರನ್ (9 ಬೌಂಡರಿ, 58 ಎಸೆತ), ಅಲೆಕ್ಸ್ ಕ್ಯಾರಿ 11 ರನ್, ಗ್ಲೇನ್ ಮ್ಯಾಕ್ಸ್‌ವೆಲ್ 5 ರನ್, ಕ್ಯಾಮರೂನ್ ಗ್ರೀನ್ 9 ರನ್ ಗಳಿಸಿ ಪೆವಿಲಿಯನ್ ಸೇರಿದರು. ಕೊನೆಯಲ್ಲಿ ಪ್ಯಾಟ್ ಕಮ್ಮಿನ್ಸ್ 19 ರನ್ ಹಾಘೂ ಮಿಚೆಲ್ ಸ್ಟಾರ್ಕ್ 1 ರನ್ ಗಳಿಸಿ ಅಜೇಯರಾಗುಳಿದರು.
ಟೀಂ ಇಂಡಿಯಾ ಪರ ವೇಗಿ ಜಸ್ಪ್ರೀತ್ ಬುಮ್ರಾ (Jasprit Bumrah) 3 ವಿಕೆಟ್ ಕಿತ್ತರೆ, ಕುಲ್ದೀಪ್ ಯಾದವ್ 2 ವಿಕೆಟ್ ಹಾಗೂ ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ ತಲಾ ಒಂದೊಂದು ವಿಕೆಟ್ ಪಡೆದು ಮಿಂಚಿದರು.