Tag: ಸ್ಟೀವ್ ಸ್ಮಿತ್

  • ಕ್ಯಾಚ್ ವಿವಾದ; ಮತ್ತೆ ಮೋಸದಾಟ ಆಡಲು ಪ್ರಯತ್ನಿಸಿತಾ ಆಸೀಸ್? – ಅಭಿಮಾನಿಗಳು ಕೆಂಡ

    ಕ್ಯಾಚ್ ವಿವಾದ; ಮತ್ತೆ ಮೋಸದಾಟ ಆಡಲು ಪ್ರಯತ್ನಿಸಿತಾ ಆಸೀಸ್? – ಅಭಿಮಾನಿಗಳು ಕೆಂಡ

    ಲಂಡನ್: ಇತ್ತೀಚಿನ ಕ್ರಿಕೆಟ್ ಟೂರ್ನಿಗಳಲ್ಲಿ ಅಂಪೈರ್ ತೆಗೆದುಕೊಳ್ಳುವ ನಿರ್ಧಾರಗಳು ಕ್ರಿಕೆಟ್ ಲೋಕದಲ್ಲಿ ಭಾರೀ ವಿವಾದಗಳನ್ನ ಸೃಷ್ಟಿಸುತ್ತಿವೆ. ಆದ್ರೆ ಇಂಗ್ಲೆಂಡ್-ಆಸೀಸ್ ನಡುವಿನ ಆಶಸ್ (Ashes 2023) ಟೂರ್ನಿಯ 2ನೇ ಟೆಸ್ಟ್ ಪಂದ್ಯದಲ್ಲಿ ವಿವಾದಕ್ಕೀಡಾಗುತ್ತಿದ್ದ ಇಂಗ್ಲೆಂಡ್ ಬ್ಯಾಟ್ಸ್‌ಮ್ಯಾನ್‌ ಬೆನ್ ಡಕೆಟ್ (Ben Duckett) ಅವರ ಕ್ಯಾಚ್ 3ನೇ ಅಂಪೈರ್‌ನ ಸಮಯ ಪ್ರಜ್ಞೆಯಿಂದ ತಪ್ಪಿದೆ.

    ಹೌದು. ಆಶಸ್ ಟೂರ್ನಿಯಲ್ಲಿ 2ನೇ ಟೆಸ್ಟ್‌ನ 4ನೇ ದಿನದಾಟದಲ್ಲಿ ಆಸ್ಟ್ರೇಲಿಯಾ (Australia) ಆಲ್‌ರೌಂಡರ್ ಕ್ಯಾಮರೂನ್ ಗ್ರೀನ್ ಬೌಲಿಂಗ್‌ನಲ್ಲಿ ಬೆನ್ ಡಕೆಟ್ ಅವರು ಬಾರಿಸಿದ ಹೊಡೆತ ಬೌಂಡರಿ ಲೈನ್‌ನಲ್ಲಿ ಕ್ಯಾಚ್ ಆಗಿತ್ತು. ವೇಗಿ ಮಿಚೆಲ್ ಸ್ಟಾರ್ಕ್ ಕ್ಯಾಚ್ ಹಿಡಿಯುತ್ತಿದ್ದಂತೆ ಇಡೀ ತಂಡ ಕುಣಿದು ಕುಪ್ಪಳಿಸಿತ್ತು. ಇದರಿಂದ ಬಾಡಿದ ಮುಖಹೊತ್ತು ಪೆವಿಲಿಯನ್‌ನತ್ತ ಹೊರಟಿದ್ದರು. ಆಗ ಕ್ರೀಸ್‌ನಲ್ಲಿದ್ದ ನಾಯಕ ಬೆನ್‌ಸ್ಟೋಕ್ಸ್ (Ben Stokes) 3ನೇ ಅಂಪೈರ್ ಪರಿಶೀಲನೆಗೆ ತೆಗೆದುಕೊಂಡರು. ನಂತರ ಸ್ಟಾರ್ಕ್ ಕ್ಯಾಚ್ ಹಿಡಿದು ನಿಯಂತ್ರಿಸಲಾಗದೇ ಚೆಂಡನ್ನು ನೆಲಕ್ಕೆ ತಾಕಿಸಿದ್ದದ್ದು ಕಂಡುಬಂದಿತು. ಇದರಿಂದ 3ನೇ ಅಂಪೈರ್ ನಾಟೌಟ್ ತೀರ್ಪು ನೀಡಿದರು.

    ಈ ಬಗ್ಗೆ ಮೈದಾನದಲ್ಲಿ ಭಾರೀ ಚರ್ಚೆ ಸಹ ನಡೆಯಿತು. ಆಸೀಸ್ ನಾಯಕ ಪ್ಯಾಟ್ ಕಮ್ಮಿನ್ಸ್ ಅವರು ಆನ್-ಫೀಲ್ಡ್ ಅಂಪೈರ್‌ನೊಂದಿಗೆ ಏಕೆ ಔಟ್ ಇಲ್ಲ ಎಂದು ವಾಗ್ವಾದಕ್ಕಿಳಿದರು. ಆದ್ರೆ ಕ್ಯಾಚ್ ಹಿಡಿದ ನಂತರ ಸ್ಟಾರ್ಕ್ ಚೆಂಡನ್ನು ನೆಲಕ್ಕೆ ತಾಕಿಸಿದ್ದಾರೆ. ಕ್ಯಾಚ್ ಅನ್ನು ಸಂಪೂರ್ಣವಾಗಿ ನಿಯಂತ್ರಿಸದ ಕಾರಣ, ಬ್ಯಾಟರ್ ಪರವಾಗಿ ನಿರ್ಧಾರ ನೀಡಬೇಕಾಯಿತು ಎಂದು ಅಂಪೈರ್ ಸಮಾಧಾನಪಡಿಸಿದರು. ಹಾಗಾಗಿ ಆಸ್ಟ್ರೇಲಿಯಾ ತಂಡ ನಿರಾಶೆಗೊಂಡಿತು. ಇದನ್ನೂ ಓದಿ: 48 ವರ್ಷಗಳ ಇತಿಹಾಸದಲ್ಲೇ ಫಸ್ಟ್‌ ಟೈಂ ವಿಶ್ವಕಪ್‌ ಟೂರ್ನಿಯಿಂದಲೇ ವೆಸ್ಟ್‌ ಇಂಡೀಸ್‌ ಔಟ್‌

    ಇತ್ತೀಚೆಗೆ ನಡೆದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) ಫೈನಲ್‌ನಲ್ಲಿ ಟೀಂ ಇಂಡಿಯಾ (Team India) ಆಟಗಾರ ಶುಭಮನ್ ಗಿಲ್ ಅವರ ಕ್ಯಾಚ್ ವಿಚಾರ ಭಾರೀ ವಿವಾದ ಹುಟ್ಟುಹಾಕಿತ್ತು. ದೇಶ-ವಿದೇಶ ಕ್ರಿಕೆಟ್ ದಿಗ್ಗಜರಿಂದಲೂ ಟೀಕೆಗಳು ಕೇಳಿಬಂದಿತ್ತು. ಅಲ್ಲದೇ ಸ್ಟೀವ್ ಸ್ಮಿತ್ ತೆಗೆದುಕೊಂಡಿದ್ದ ಜೋ ರೂಟ್ ಅವರ ಕ್ಯಾಚ್ ಸಹ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಇದನ್ನೂ ಓದಿ: ಕೊಹ್ಲಿ ಮತ್ತು ಬಾಬರ್‌ ಇಬ್ಬರಲ್ಲಿ ಯಾರು ಶ್ರೇಷ್ಠ? – ಭಜ್ಜಿ ಪ್ರಶ್ನೆಗೆ ಶಾಕಿಂಗ್‌ ಉತ್ತರ ಕೊಟ್ಟ ಅಖ್ತರ್‌

    ಆಶಸ್ ಟೂರ್ನಿಯ 2ನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ಮೊದಲ ಇನಿಂಗ್ಸ್‌ನ 47ನೇ ಓವರ್‌ನಲ್ಲಿ ವೇಗಿ ಮಿಚೆಲ್ ಸ್ಟಾರ್ಕ್ ಎಸೆತದಲ್ಲಿ ಇಂಗ್ಲೆಂಡ್ ಸ್ಟಾರ್ ಬ್ಯಾಟರ್ ಜೋ ರೂಟ್ ಪುಲ್ ಮಾಡಲು ಪ್ರಯತ್ನಿಸಿದರು. ಚೆಂಡು ಬ್ಯಾಟ್ ಸರಿಯಾಗಿ ಸಿಗದ ಬ್ಯಾಕ್‌ವಾರ್ಡ್ ಪಾಯಿಂಟ್ ಕಡೆ ಹಾರಿತು. ಈ ವೇಳೆ ಸ್ಟೀವ್ ಸ್ಮಿತ್ ಕ್ಯಾಚ್ ಪಡೆದರು. ಕ್ಯಾಚ್ ಪಡೆದ ತಕ್ಷಣ ಸ್ಮಿತ್ ಕುಣಿದು ಕುಪ್ಪಳಿಸಿದರು. ಈ ವೇಳೆ ಗೊಂದಲಕ್ಕೆ ಒಳಗಾದ ಫೀಲ್ಡ್ ಅಂಪೈರ್‌ಗಳು 3ನೇ ಅಂಪೈರ್ ಸಹಾಯಕ್ಕೆ ಮೊರೆ ಹೋದರು. ಇದನ್ನೂ ಓದಿ: ಇಷ್ಟಕ್ಕೆ ಮುಗಿದಿಲ್ಲ – ವಿಶ್ವಟೆಸ್ಟ್ ಚಾಂಪಿಯನ್ ಶಿಪ್ ಸೋಲಿನ ಬಳಿಕ ಗಿಲ್ ಖಡಕ್ ರಿಯಾಕ್ಷನ್

    3ನೇ ಅಂಪೈರ್‌ಗಳು ಹಲವು ಬಾರಿ ವಿಡಿಯೋ ರೀಪ್ಲೇ ವೀಕ್ಷಿಸಿದ ಬಳಿಕ ಅಂತಿಮವಾಗಿ ಜೋ ರೂಟ್ ಔಟ್ ಎಂದು ತೀರ್ಪು ನೀಡಲಾಯಿತು. ಈ ಬೆನ್ನಲ್ಲೇ ಇಂಗ್ಲೆಂಡ್ ಕ್ರಿಕೆಟ್ ಅಭಿಮಾನಿಗಳು ಆಸೀಸ್ ತಂಡ ಹಾಗೂ 3ನೇ ಅಂಪೈರ್ ವಿರುದ್ಧ ಕಿಡಿ ಕಾರಿದರು. ಸ್ಟೀವ್ ಸ್ಮಿತ್ ಚೆಂಡನ್ನು ಪಡೆಯುವಾಗ ನೆಲಕ್ಕೆ ತಾಗಿಸಿದ್ದಾರೆಂದು ಫೋಟೋ ಸಹಿತ ಅಭಿಮಾನಿಗಳು ಟ್ವೀಟ್ ಮಾಡಿದ್ದಾರೆ. ಈ ಫೋಟೋ ಹಾಗೂ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿವೆ. ಅಲ್ಲದೇ 2ನೇ ಟೆಸ್ಟ್ನ ನಾಲ್ಕನೇ ದಿನದಾಟದಲ್ಲಿ ಮಿಚೆಲ್ ಸ್ಟಾರ್ಕ್ ಹಿಡಿದ ಬೆನ್ ಡಕೆಟ್ ಅವರ ಕ್ಯಾಚರ್ ಡಿಆರ್‌ಎಸ್‌ಗೆ ಮನವಿ ಮಾಡಲಾಗಿತ್ತು. ಆದ್ರೆ, ಅಂಪೈರ್ ನಿಗಾ ವಹಿಸಿ ನಾಟೌಟ್ ತೀರ್ಪು ಪ್ರಕಟಿಸಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಟೆಸ್ಟ್ ಕ್ರಿಕೆಟ್‌ನಲ್ಲಿ 9 ಸಾವಿರ ರನ್ ಪೂರೈಸಿದ ಸ್ಟೀವ್ ಸ್ಮಿತ್ – ದ್ರಾವಿಡ್ ದಾಖಲೆ ಉಡೀಸ್

    ಟೆಸ್ಟ್ ಕ್ರಿಕೆಟ್‌ನಲ್ಲಿ 9 ಸಾವಿರ ರನ್ ಪೂರೈಸಿದ ಸ್ಟೀವ್ ಸ್ಮಿತ್ – ದ್ರಾವಿಡ್ ದಾಖಲೆ ಉಡೀಸ್

    ಲಂಡನ್: ಸದ್ಯ ಇಂಗ್ಲೆಂಡ್ (England) ವಿರುದ್ಧ ಟೆಸ್ಟ್ ಸರಣಿಯನ್ನಾಡುತ್ತಿರುವ ಆಸ್ಟ್ರೇಲಿಯಾ ತಂಡದ ಉಪನಾಯಕ ಸ್ಟೀವ್ ಸ್ಮಿತ್ (Steve Smith) ಟೆಸ್ಟ್ ಕ್ರಿಕೆಟ್‌ನಲ್ಲಿ 9 ಸಾವಿರ ರನ್ ಪೂರೈಸಿ, ವಿಶೇಷ ಸಾಧನೆ ಮಾಡಿದ್ದಾರೆ.

    ಈ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ (Test Cricket) ವೇಗವಾಗಿ 9 ಸಾವಿರ ರನ್ ಪೂರೈಸಿದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಜೊತೆಗೆ 176 ಇನ್ನಿಂಗ್ಸ್‌ಗಳಲ್ಲಿ 9 ಸಾವಿರ ರನ್ ಪೂರೈಸಿದ ರಾಹುಲ್ ದ್ರಾವಿಡ್ (Rahul Dravid) ಅವರ ದಾಖಲೆಯನ್ನ ಮುರಿದಿದ್ದಾರೆ.

    ಇಂಗ್ಲೆಂಡ್ ವಿರುದ್ಧ ಆ್ಯಶಸ್ ಟೂರ್ನಿಯಲ್ಲಿ (Ashes Tourney) 2ನೇ ಟೆಸ್ಟ್ ಪಂದ್ಯವನ್ನಾಡುತ್ತಿರುವ ಸ್ಟೀವ್ ಸ್ಮಿತ್ 95 ರನ್ (162 ಎಸೆತ) ಗಳಿಸಿ ಕ್ರೀಸ್‌ನಲ್ಲಿದ್ದಾರೆ. ಬುಧವಾರ ಲಂಡನ್ನಿನ ಲಾರ್ಡ್ಸ್ ಮೈದಾನದಲ್ಲಿ ಆರಂಭವಾದ 2ನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದ ಆಸೀಸ್ ಪರ ಸ್ಮಿತ್ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿ, 2ನೇ ದಿನದಲ್ಲಿ ಕ್ರೀಸ್ ಮುಂದುವರಿಸಿದ್ದಾರೆ.  ಇದನ್ನೂ ಓದಿ: ICC ODI WorldCup: ಈ ನಾಲ್ಕು ತಂಡಗಳು ಸೆಮಿಫೈನಲ್‌ ಪ್ರವೇಶಿಲಿವೆ – ಸೆಹ್ವಾಗ್‌ ಭವಿಷ್ಯ

    ಟೆಸ್ಟ್ ಕ್ರಿಕೆಟ್‌ನಲ್ಲಿ 9 ಸಾವಿರ ರನ್‌ಗಳನ್ನು ದಾಖಲಿಸಿದ ಆಸ್ಟ್ರೇಲಿಯಾದ 4ನೇ ಬ್ಯಾಟ್ಸ್‌ಮ್ಯಾನ್ ಆಗಿ ಸ್ಟೀ‌ವ್‌ ಸ್ಮಿತ್ ಗುರುತಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಆಸ್ಟ್ರೇಲಿಯಾ ದಿಗ್ಗಜರಾದ ರಿಕಿ ಪಾಂಟಿಂಗ್ (13,378 ರನ್), ಆಲನ್ ಬಾರ್ಡರ್ (11,174 ರನ್) ಹಾಗೂ ಸ್ಟೀವ್ ವಾ (10,927 ರನ್) ಟೆಸ್ಟ್ ಕ್ರಿಕೆಟ್‌ನಲ್ಲಿ ಈ ಸಾಧನೆ ಮಾಡಿದ್ದಾರೆ. ಇದರೊಂದಿಗೆ ಟೆಸ್ಟ್ ಕ್ರಿಕೆಟ್‌ನಲ್ಲಿ ಅತ್ಯಂತ ವೇಗವಾಗಿ 9 ಸಾವಿರ ರನ್‌ಗಳನ್ನು ಪೂರ್ಣಗೊಳಿಸಿದ 2ನೇ ಬ್ಯಾಟ್ಸ್‌ಮ್ಯಾನ್‌ ಎಂಬ ಸಾಧನೆಯನ್ನು ಸ್ಟೀವ್‌ ಸ್ಮಿತ್ ಮಾಡಿದ್ದಾರೆ. ಇದನ್ನೂ ಓದಿ: ICC ODI World Cup: ಪಾಕ್ ಪಂದ್ಯಗಳಿಗೆ ಬಿಗಿ ಭದ್ರತೆ ನೀಡ್ತೇವೆ – ಬಂಗಾಳ ಕ್ರಿಕೆಟ್‌

    ಈ ಹಿಂದೆ ಶ್ರೀಲಂಕಾ ತಂಡದ ಮಾಜಿ ನಾಯಕ ಕುಮಾರ ಸಂಗಕ್ಕಾರ 172 ಇನ್ನಿಂಗ್ಸ್‌ಗಳಲ್ಲಿ 9 ಸಾವಿರ ರನ್ ಪೂರೈಸಿದ್ದರು. ರಾಹುಲ್ ದ್ರಾವಿಡ್ 176 ಇನ್ನಿಂಗ್ಸ್, ಬ್ರಿಯಾನ್ ಲಾರಾ ಹಾಗೂ ರಿಕ್ಕಿ ಪಾಂಟಿಂಗ್ ತಲಾ 177 ಇನ್ನಿಂಗ್ಸ್‌ಗಳಲ್ಲಿ 9 ಸಾವಿರ ರನ್ ಪೂರೈಸಿದ ಸಾಧನೆ ಮಾಡಿದರೆ, ಸ್ಮಿತ್ 174 ಇನ್ನಿಂಗ್ಸ್‌ಗಳಲ್ಲೇ 9 ಸಾವಿರ ರನ್ ಪೂರೈಸಿ 2ನೇ ಸ್ಥಾನಕ್ಕೆ ಜಿಗಿದಿದ್ದಾರೆ. ಇದನ್ನೂ ಓದಿ: ವಿಶ್ವಕಪ್‌ ಹವಾ; ಅಹಮದಾಬಾದ್‌ನಲ್ಲಿ ಹೋಟೆಲ್‌ಗಳ ಬೆಲೆ ದುಬಾರಿ – ದಿನದ ಬಾಡಿಗೆ 1 ಲಕ್ಷ ರೂ.ವರೆಗೆ ಏರಿಕೆ

    ಇತ್ತೀಚೆಗೆ ಭಾರತದ ವಿರುದ್ಧ ನಡೆದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ತಾಳ್ಮೆಯ ಆಟವಾಡಿದ್ದ ಸ್ಮಿತ್ 121 ರನ್ (268 ಎಸೆತ, 19 ಬೌಂಡರಿ) ರನ್ ಗಳಿಸಿ ಮಿಂಚಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • WTC Final: ರೋಚಕ ಘಟ್ಟದಲ್ಲಿ ಪಂದ್ಯ – ಭಾರತದ ಗೆಲುವಿಗೆ ಬೇಕಿದೆ 280 ರನ್‌

    WTC Final: ರೋಚಕ ಘಟ್ಟದಲ್ಲಿ ಪಂದ್ಯ – ಭಾರತದ ಗೆಲುವಿಗೆ ಬೇಕಿದೆ 280 ರನ್‌

    ಲಂಡನ್‌: ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ (WTC Final) ಪಂದ್ಯ ರೋಚಕ ಘಟಕ್ಕೆ ತಲುಪಿದೆ. ನಾಲ್ಕನೇ ದಿನದ ಅಂತ್ಯಕ್ಕೆ ಭಾರತ (Team India) 3 ವಿಕೆಟ್‌ ನಷ್ಟಕ್ಕೆ 164 ರನ್‌ ಗಳಿಸಿದ್ದು, ಗೆಲುವಿಗೆ 280 ರನ್‌ಗಳ ಅಗತ್ಯವಿದೆ.

    173 ರನ್‌ಗಳ ಮುನ್ನಡೆಯೊಂದಿಗೆ 2ನೇ ಇನ್ನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ (Australia) ತಂಡ 4ನೇ ದಿನದಾಟದಲ್ಲಿ 8 ವಿಕೆಟ್‌ಗೆ 270 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿತು. ಉಳಿದ ಒಂದೂವರೆ ದಿನದಲ್ಲಿ ಭಾರತಕ್ಕೆ ಗೆಲ್ಲಲು 444 ರನ್‌ಗಳ ಬೃಹತ್ ಗುರಿ ನೀಡಿತು. ಇದನ್ನೂ ಓದಿ: WTC Final: ಟೆಸ್ಟ್‌ ಕ್ರಿಕೆಟ್‌ನಲ್ಲಿ ಹೊಸ ದಾಖಲೆ ಬರೆದ ರವೀಂದ್ರ ಜಡೇಜಾ

    ಆಸ್ಟ್ರೇಲಿಯಾದ ಮೊದಲ ಇನ್ನಿಂಗ್ಸ್‌ನಲ್ಲಿ ಸ್ಟೀವ್ ಸ್ಮಿತ್ (Steve Smith) ಮತ್ತು ಟ್ರಾವಿಸ್ ಹೆಡ್ (Travis Head) ಶತಕಗಳ ನೆರವಿನಿಂದ 469 ರನ್‌ ಗಳಿಸಿ ಆಲೌಟ್ ಆಗಿತ್ತು. ಆದ್ರೆ ಭಾರತ ಅಜಿಂಕ್ಯಾ ರಹಾನೆ ಹಾಗೂ ಶಾರ್ದೂಲ್‌ ಠಾಕೂರ್‌ ಅರ್ಧಶತಕಗಳ ಬ್ಯಾಟಿಂಗ್‌ ನೆರವಿನಿಂದ 296 ರನ್‌ಗಳಿಗೆ ಸರ್ವಪತನ ಕಂಡಿತ್ತು. 2ನೇ ಇನ್ನಿಂಗ್ಸ್‌ ಆರಂಭಿಸಿದ್ದ ಆಸೀಸ್‌ 3ನೇ ದಿನ ವಿಕೆಟ್‌ ನಷ್ಟಕ್ಕೆ 123 ರನ್‌ ಗಳಿಸಿದ್ದರೆ ಇಂದು ಆ ಮೊತ್ತಕ್ಕೆ 147 ರನ್‌ ಗಳಿಸಿ ಅಂತಿಮವಾಗಿ 84.3 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 270 ರನ್‌ಗಳಿಸಿ ಡಿಕ್ಲೇರ್‌ ಮಾಡಿಕೊಂಡಿತು.

    ಆಸ್ಟ್ರೇಲಿಯಾ ತಂಡದ ಪರ ಉಸ್ಮಾನ್ ಖವಾಜಾ 13 ರನ್, ಡೇವಿಡ್ ವಾರ್ನರ್ 1 ರನ್, ಮಾರ್ನಸ್ ಲಾಬುಶೇನ್‌ 41 ರನ್, ಸ್ಟೀವ್ ಸ್ಮಿತ್ 34 ರನ್, ಟ್ರಾವಿಸ್ ಹೆಡ್ 18 ರನ್, ಕ್ಯಾಮರೂನ್‌ ಗ್ರೀನ್ 25 ರನ್, ಮಿಚೆಲ್ ಸ್ಟಾರ್ಕ್ 41 ರನ್ ಮತ್ತು ನಾಯಕ ಪ್ಯಾಟ್ ಕಮ್ಮಿನ್ಸ್ 5 ರನ್ ಗಳಿಸಿ ಔಟಾದರೆ ಅಲೆಕ್ಸ್ ಕ್ಯಾರಿ 66 ರನ್ ಗಳಿಸಿ ಅಜೇಯರಾಗುಳಿದರು.

    ಇನ್ನೂ 444 ರನ್‌ಗಳ ಬೃಹತ್‌ ಮೊತ್ತದ ಗುರಿ ಪಡೆದ ಭಾರತ 4ನೇ ದಿನದ ಅಂತ್ಯಕ್ಕೆ 44 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 164 ರನ್‌ ಗಳಿಸಿದೆ. ಇದನ್ನೂ ಓದಿ: ಮೊಬೈಲ್ ಆ್ಯಪ್ ಬಳಕೆದಾರರಿಗೆ ಗುಡ್‌ನ್ಯೂಸ್ ಕೊಟ್ಟ Hotstar – ವಿಶ್ವಕಪ್, ಏಷ್ಯಾಕಪ್ ಟೂರ್ನಿ ವೀಕ್ಷಣೆ ಫ್ರೀ

    ಶನಿವಾರ ತನ್ನ ಸರದಿ ಆರಂಭಿಸಿದ ಭಾರತದ ಪರ ಶುಭಮನ್‌ ಗಿಲ್‌ (Shubman Gill) ಹಾಗೂ ನಾಯಕ ರೋಹಿತ್‌ ಶರ್ಮಾ (Rohit Sharma) ಜೋಡಿ ಮೊದಲ ವಿಕೆಟ್‌ಗೆ 41 ರನ್‌ ಜೊತೆಯಾಟವಾಡಿದರೆ, ರೋಹಿತ್‌ ಹಾಗೂ ಚೇತೇಶ್ವರ್ ಪೂಜಾರಾ ಜೋಡಿ 2ನೇ ವಿಕೆಟ್‌ಗೆ 51 ರನ್‌ ಜೊತೆಯಾಟವಾಡಿತು. ನಂತರ ಜೊತೆಗೂಡಿದ ರಹಾನೆ ಹಾಗೂ ವಿರಾಟ್‌ ಕೊಹ್ಲಿ (Virat Kohli) ಜೋಡಿ ಮುರಿಯದ 4ನೇ ವಿಕೆಟ್‌ಗೆ 71 ರನ್‌ ಜೊತೆಯಾಟ ನೀಡಿತು.

    ರೋಹಿತ್‌ ಶರ್ಮಾ 43 ರನ್‌ (60 ಎಸೆತ, 7 ಬೌಂಡರಿ, 1 ಸಿಕ್ಸರ್), ಶುಭಮನ್‌ ಗಿಲ್‌ 18 ರನ್‌, ಚೇತೇಶ್ವರ್‌ ಪೂಜಾರಾ 27 ರನ್‌ ಗಳಿಸಿ ಔಟಾದರು. ಇನ್ನೂ ವಿರಾಟ್‌ ಕೊಹ್ಲಿ 44 ರನ್‌ (60 ಎಸೆತ, 7 ಬೌಂಡರಿ) ಅಜಿಂಕ್ಯಾ ರಹಾನೆ 20 ರನ್‌ ಗಳಿಸಿ ಕ್ರೀಸ್‌ನಲ್ಲಿದ್ದು, ಭಾನುವಾರ ಬ್ಯಾಟಿಂಗ್‌ ಮುಂದುವರಿಸಲಿದ್ದಾರೆ.

  • ಭಾರತ ಕಳಪೆ ಬೌಲಿಂಗ್‌, ಬ್ಯಾಟಿಂಗ್‌ – ಆಸ್ಟ್ರೇಲಿಯಾಗೆ 10 ವಿಕೆಟ್‌ಗಳ ಭರ್ಜರಿ ಜಯ

    ಭಾರತ ಕಳಪೆ ಬೌಲಿಂಗ್‌, ಬ್ಯಾಟಿಂಗ್‌ – ಆಸ್ಟ್ರೇಲಿಯಾಗೆ 10 ವಿಕೆಟ್‌ಗಳ ಭರ್ಜರಿ ಜಯ

    ಅಮರಾವತಿ: ಮಿಚೆಲ್‌ ಸ್ಟಾರ್ಕ್‌ (Mitchell Starc) ಮಾರಕ ಬೌಲಿಂಗ್‌ ದಾಳಿ, ಮಿಚೆಲ್‌ ಮಾರ್ಷ್‌ (Mitchell Marsh) ಹಾಗೂ ಟ್ರಾವಿಸ್‌ ಹೆಡ್‌ ಸ್ಫೋಟಕ ಅರ್ಧಶತಕಗಳ ಬ್ಯಾಟಿಂಗ್‌ ನೆರವಿನಿಂದ ಭಾರತದ (Team India) ವಿರುದ್ಧ ಆಸ್ಟ್ರೇಲಿಯಾ 10 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ 3 ಪಂದ್ಯಗಳ ಸರಣಿಯನ್ನು 1-1 ರಲ್ಲಿ ಗೆದ್ದು ಸಮಬಲ ಸಾಧಿಸಿದೆ.

    ವಿಶಾಖಪಟ್ಟಣದ ವೈ.ಎಸ್ ರಾಜಶೇಖರ್ ರೆಡ್ಡಿ ಸ್ಟೇಡಿಯಂನಲ್ಲಿ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ 2ನೇ ಏಕದಿನ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಫೀಲ್ಟಿಂಗ್‌ ಆಯ್ದುಕೊಂಡ ಆಸ್ಟ್ರೇಲಿಯಾ (Australia), ರೋಹಿತ್‌ (Rohit Sharma) ಪಡೆಯನ್ನ 26 ಓವರ್‌ಗಳಲ್ಲಿ 117 ರನ್‌ಗಳಿಗೆ ಕಟ್ಟಿಹಾಕುವಲ್ಲಿ ಯಶಸ್ವಿಯಾಯಿತು. 118 ರನ್‌ಗಳ ಗುರಿ ಪಡೆದ ಆಸ್ಟ್ರೇಲಿಯಾ ಟಿ20 ಶೈಲಿಯಲ್ಲಿ ಬ್ಯಾಟಿಂಗ್‌ ನಡೆಸಿ 11 ಓವರ್‌ಗಳಲ್ಲಿ 121 ರನ್‌ ಗಳಿಸಿ ಜಯ ಸಾಧಿಸಿತು. ಇದನ್ನೂ ಓದಿ: 750,000 ಡಾಲರ್ ಅಂದ್ರೆ ಎಷ್ಟು ಅಂತ ಗೊತ್ತಿರಲಿಲ್ಲ- ಕಾರು ಖರೀದಿಯ ಬಗ್ಗೆ ಯೋಚಿಸಿದ್ದ ರೋಹಿತ್

    ಆರಂಭಿಕರಾಗಿ ಕಣಕ್ಕಿಳಿದ ಟ್ರಾವಿಸ್‌ ಹೆಡ್‌, ಮಿಚೆಲ್‌ ಮಾರ್ಷ್‌ ವಿಕೆಟ್‌ ಬಿಟ್ಟುಕೊಡದಂತೆ ಟೀಂ ಇಂಡಿಯಾ ಬೌಲರ್‌ಗಳನ್ನ ಬೆಂಡೆತ್ತಿದರು. ಮಾರ್ಷ್‌ 36 ಎಸೆತಗಳಲ್ಲಿ ಸ್ಫೋಟಕ 66 ರನ್‌ (6 ಸಿಕ್ಸರ್‌, 6 ಬೌಂಡರಿ) ಗಳಿಸಿದ್ರೆ, ಟ್ರಾವಿಸ್‌ ಹೆಡ್‌ 30 ಎಸೆತಗಳಲ್ಲಿ 10‌ ಬೌಂಡರಿಯೊಂದಿಗೆ 51 ರನ್‌ ಚಚ್ಚಿ ಜಯದ ಹಾದಿ ತಲುಪಿಸಿದರು.

    ಮೊದಲು ಬ್ಯಾಟಿಂಗ್‌ ಆರಂಭಿಸಿದ ಟೀಂ ಇಂಡಿಯಾ ಆಸ್ಟ್ರೇಲಿಯಾ ಬೌಲರ್‌ಗಳ ದಾಳಿಗೆ ತತ್ತರಿಸಿತು. ಆಸ್ಟ್ರೇಲಿಯಾ ವೇಗಿ ಮಿಚೆಲ್ ಸ್ಟಾರ್ಕ್ ಮಾರಕ ಬೌಲಿಂಗ್ ದಾಳಿ ನಡೆಸಿ, ಭಾರತದ ಅಗ್ರಕ್ರಮಾಂಕದ ಬ್ಯಾಟರ್‌ಗಳನ್ನು ಪೆವಿಲಿಯನ್‌ಗೆ ಕಳುಹಿಸುವಲ್ಲಿ ಯಶಸ್ವಿಯಾದರು. ಇದರಿಂದ ಮೊದಲ ಪಂದ್ಯದಲ್ಲಿ 188 ರನ್‌ಗಳಿಗೆ ಆಸ್ಟ್ರೇಲಿಯಾ ತಂಡವನ್ನು ಕಟ್ಟಿಹಾಕಿದ್ದ ಭಾರತ, 2ನೇ ಪಂದ್ಯದಲ್ಲಿ ಹೀನಾಯ ಸೋಲನುಭವಿಸಬೇಕಾಯಿತು. ಇದನ್ನೂ ಓದಿ: IPL 2023: ಈ ಬಾರಿ ಸಿಎಸ್‌ಕೆ ಕಪ್ ಗೆಲ್ಲಲ್ಲ, ಆರ್‌ಸಿಬಿ ಗೆದ್ದರೆ ಖುಷಿ – ಭಾರತದ ಮಾಜಿ ಕ್ರಿಕೆಟಿಗ ಭವಿಷ್ಯ

    ಮೊದಲ ಓವರ್‌ನ 3ನೇ ಎಸೆತದಲ್ಲಿಯೇ ಶುಭಮನ್‌ ಗಿಲ್ ಔಟಾದರು. ಈ ಬೆನ್ನಲ್ಲೇ ನಾಯಕ ರೋಹಿತ್ ಶರ್ಮಾ 13 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಮೊದಲ ಪಂದ್ಯದಲ್ಲಿ ಶೂನ್ಯ ಸುತ್ತಿದ್ದ ಸೂರ್ಯಕುಮಾರ್ ಯಾದವ್ (Suryakumar Yadav) 2ನೇ ಪಂದ್ಯದಲ್ಲೂ ಶೂನ್ಯಕ್ಕೆ ಔಟಾದರು. ಕಳೆದ ಪಂದ್ಯದಲ್ಲಿ ಮ್ಯಾಚ್‌ ವಿನ್ನರ್‌ ಆಗಿದ್ದ ಕೆ.ಎಲ್ ರಾಹುಲ್ ಈ ಪಂದ್ಯದಲ್ಲಿ ಕೇವಲ 9 ರನ್ ಗಳಿಸಿದರೆ, ಉತ್ತಮವಾಗಿ ಆಡುತ್ತಿದ್ದ ವಿರಾಟ್ ಕೊಹ್ಲಿ (31 ರನ್‌ ಗಳಿಸಿ) ಸಹ ನಥನ್ ಎಲ್ಲಿಸ್‌ಗೆ ವಿಕೆಟ್‌ ಒಪ್ಪಿಸಿದರು.

    ಈ ಬೆನ್ನಲ್ಲೇ ಉಪನಾಯಕ ಹಾರ್ದಿಕ್ ಪಾಂಡ್ಯ 1 ರನ್, ರವೀಂದ್ರ ಜಡೇಜಾ 16 ರನ್‌ ಗಳಿಸಿ ಔಟಾದರು. ಕೊನೆಯಲ್ಲಿ ಆಲ್‌ರೌಂಡರ್ ಅಕ್ಷರ್ ಪಟೇಲ್ 29 ಎಸೆತಗಳಲ್ಲಿ 1 ಬೌಂಡರಿ ಮತ್ತು 2 ಸಿಕ್ಸರ್‌ಗಳ ನೆರವಿನಿಂದ 29 ರನ್ ಬಾರಿಸಿ ತಂಡದ ಮೊತ್ತ 100ರ ಗಡಿ ತಲುಪಿಸುವಲ್ಲಿ ಯಶಸ್ವಿಯಾದರು.

    ಆಸ್ಟ್ರೇಲಿಯಾ ಪರ ಮಿಚೆಲ್‌ ಸ್ಟಾರ್ಕ್‌ 8 ಓವರ್‌ಗಳಲ್ಲಿ 53 ರನ್ ನೀಡಿ 5 ವಿಕೆಟ್‌ ಕಿತ್ತರೆ, ಸೀನ್ ಅಬೋಟ್ 6 ಓವರ್‌ಗಳಲ್ಲಿ 23 ರನ್ ನೀಡಿ 3 ವಿಕೆಟ್ ಪಡೆದರು. ನಥನ್ ಎಲ್ಲಿಸ್ 5 ಓವರ್‌ಗಳಲ್ಲಿ 13 ರನ್ ನೀಡಿ ಉಳಿದ 2 ವಿಕೆಟ್ ಕಬಳಿಸಿದರು.

  • ಬೌಲರ್‌ಗಳ ಭರ್ಜರಿ ಬೇಟೆ, ಕೆ.ಎಲ್‌ ರಾಹುಲ್‌ ಫಿಫ್ಟಿ – ಆಸೀಸ್‌ ವಿರುದ್ಧ ಭಾರತಕ್ಕೆ 5 ವಿಕೆಟ್‌ಗಳ ಜಯ

    ಬೌಲರ್‌ಗಳ ಭರ್ಜರಿ ಬೇಟೆ, ಕೆ.ಎಲ್‌ ರಾಹುಲ್‌ ಫಿಫ್ಟಿ – ಆಸೀಸ್‌ ವಿರುದ್ಧ ಭಾರತಕ್ಕೆ 5 ವಿಕೆಟ್‌ಗಳ ಜಯ

    – ಭಾರತಕ್ಕೆ 5 ವಿಕೆಟ್‌ಗಳ ಭರ್ಜರಿ ಜಯ

    ಮುಂಬೈ: ಕೆ.ಎಲ್‌ ರಾಹುಲ್‌ (KL Rahul) ಜವಾಬ್ದಾರಿಯುತ ಅರ್ಧಶತಕ ಹಾಗೂ ಸಂಘಟಿತ ಬೌಲಿಂಗ್‌ ದಾಳಿ ನೆರವಿನಿಂದ ಆಸ್ಟ್ರೇಲಿಯಾ (Australia) ವಿರುದ್ಧ ಭಾರತ 5 ವಿಕೆಟ್‌ಗಳ ಜಯ ಸಾಧಿಸಿದೆ.

    ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತದ (Team India) ಬೌಲರ್‌ಗಳ ದಾಳಿಗೆ ತತ್ತರಿಸಿದ ಆಸ್ಟ್ರೇಲಿಯಾ 35.4 ಓವರ್‌ಗಳಲ್ಲೇ 188 ರನ್‌ಗಳಿಗೆ ಸರ್ವಪತನಕಂಡಿತು. 189 ರನ್‌ಗಳ ಗುರಿ ಬೆನ್ನತ್ತಿದ ಭಾರತ ನಿಧಾನಗತಿಯ ಬ್ಯಾಟಿಂಗ್‌ನಿಂದ 39.5 ಓವರ್‌ಗಳಲ್ಲಿ 191 ರನ್‌ ಗಳಿಸಿ 5 ವಿಕೆಟ್‌ಗಳ ಜಯ ಸಾಧಿಸಿತು. ಇದನ್ನೂ ಓದಿ: ಸ್ವಿಮ್ಮಿಂಗ್ ಪೂಲ್‌ನಲ್ಲಿ ವಾಕ್ ಮಾಡಿದ ಪಂತ್ – ಬೇಗ ಗುಣಮುಖರಾಗಿ ಅಂದ್ರು ಫ್ಯಾನ್ಸ್

    ಆಸ್ಟ್ರೇಲಿಯಾ ಅಲ್ಪಮೊತ್ತದ ಗುರಿ ಬೆನ್ನಟ್ಟಿದ ಟೀಂ ಇಂಡಿಯಾಕ್ಕೂ ಆರಂಭದಲ್ಲಿ ತೀವ್ರ ಆಘಾತ ಎದುರಾಗಿತ್ತು. ಅಗ್ರಕ್ರಮಾಂಕದ ಬ್ಯಾಟರ್‌ಗಳ ಕಳಪೆ ಬ್ಯಾಟಿಂಗ್‌ ಪ್ರದರ್ಶನದಿಂದ ಸಂಕಷ್ಟಕ್ಕೆ ಸಿಲುಕಿತ್ತು. ಆದರೆ ಕೆ.ಎಲ್‌. ರಾಹುಲ್‌, ರವೀಂದ್ರ ಜಡೇಜಾ ಹಾಗೂ ನಾಯಕ ಹಾರ್ದಿಕ್‌ ಪಾಂಡ್ಯ ಅವರ ಜವಾಬ್ದಾರಿಯುತ ಬ್ಯಾಟಿಂಗ್‌ ನೆರವಿನಿಂದ ಭಾರತ ಗೆಲುವು ಸಾಧಿಸಿತು.

    ಆರಂಭಿಕರಾದ ಇಶಾನ್‌ ಕಿಶನ್‌ 3 ರನ್‌, ಶುಭಮನ್‌ ಗಿಲ್‌ 20 ರನ್‌ ಹಾಗೂ ಕೊಹ್ಲಿ 4 ರನ್‌ ಗಳಿಸಿದರೆ ಸ್ಫೋಟಕ ಬ್ಯಾಟ್ಸ್‌ಮ್ಯಾನ್‌ ಸೂರ್ಯಕುಮಾರ್‌ ಯಾದವ್‌ (Suryakumar Yadav) ಶೂನ್ಯಕ್ಕೆ ನಿರ್ಗಮಿಸಿ ನಿರಾಸೆ ಮೂಡಿಸಿದರು. ಇದರಿಂದ ಭಾರತಕ್ಕೆ ಸೋಲಿನ ಆತಂಕ ಎದುರಾಗಿತ್ತು.

    ರಾಹುಲ್‌ – ಜಡೇಜಾ ಶತಕದ ಜೊತೆಯಾಟ:
    ಮಧ್ಯಂತರದಲ್ಲಿ ಕೆ.ಎಲ್‌ ರಾಹುಲ್‌ ಹಾಗೂ ನಾಯಕ ಹಾರ್ದಿಕ್‌ ಪಾಂಡ್ಯ (Hardik Pandya) ಉತ್ತಮ ಇನ್ನಿಂಗ್ಸ್‌ ಕಟ್ಟುವಲ್ಲಿ ಯಶಸ್ವಿಯಾದರು. ಇವರಿಬ್ಬರ ಜೊತೆಯಾಟದಿಂದ ತಂಡಕ್ಕೆ 55 ಎಸೆತಗಳಲ್ಲಿ 44 ರನ್‌ ಸೇರ್ಪಡೆಯಾಯಿತು. ಅಷ್ಟರಲ್ಲೇ ನಾಯಕ ಹಾರ್ದಿಕ್‌ ಪಾಂಡ್ಯ ಔಟಾಗಿ ಪೆವಿಲಿಯನ್‌ ಸೇರಿಕೊಂಡರು. ನಂತರ ಕಣಕ್ಕಿಳಿದ ಆಲ್‌ರೌಂಡರ್‌ ರವೀಂದ್ರ ಜಡೇಜಾ, ರಾಹುಲ್‌ ಜೊತೆಗೂಡಿ ಭರ್ಜರಿ ಬ್ಯಾಟಿಂಗ್‌ ಮಾಡಿದರು. ಮುರಿಯದ 6ನೇ ವಿಕೆಟ್‌ಗೆ ಈ ಜೋಡಿ 123 ಎಸೆತಗಳಲ್ಲಿ 108 ರನ್‌ ಕಲೆಹಾಕಿತು. ರಾಹುಲ್‌ 91 ಎಸೆತಗಳಲ್ಲಿ 75 ರನ್‌ (7 ಬೌಂಡರಿ, 1 ಸಿಕ್ಸರ್‌) ಗಳಿಸಿದರೆ, ಜಡೇಜಾ 69 ಎಸೆತಗಳಲ್ಲಿ 5 ಬೌಂಡರಿಯೊಂದಿಗೆ 45 ರನ್‌ ಬಾರಿಸಿ ಅಜೇಯರಾಗುಳಿದರು.

    ಆಸ್ಟ್ರೇಲಿಯಾ ಪರ ಮಿಚೆಲ್‌ ಸ್ಟಾರ್ಕ್‌ 3 ವಿಕೆಟ್‌ ಪಡೆದರೆ, ಮಾರ್ಕ್ಸಸ್‌ ಸ್ಟೋನಿಸ್‌ 2 ವಿಕೆಟ್‌ ಕಿತ್ತರು. ಇದನ್ನೂ ಓದಿ: `ನಾಟು ನಾಟು’ ಹಾಡಿಗೆ ಸ್ಟೆಪ್ ಹಾಕಿದ ಕಿಂಗ್ ಕೊಹ್ಲಿ – ವಿರಾಟ್ ಡಾನ್ಸ್‌ಗೆ ಅಭಿಮಾನಿಗಳು ಫಿದಾ

    ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆಸ್ಟ್ರೇಲಿಯಾ ತಂಡವನ್ನು 36 ಓವರ್‌ಗಳ ಒಳಗೆ ಆಲ್‌ಔಟ್‌ ಮಾಡುವಲ್ಲಿ ಟೀಮ್ ಇಂಡಿಯಾ ಯಶಸ್ವಿಯಾಯಿತು.

    ಡೇವಿಡ್‌ ವಾರ್ನರ್‌ ಅನುಪಸ್ಥಿತಿಯಲ್ಲಿ ಇನಿಂಗ್ಸ್‌ ಆರಂಭಿಸಿದ್ದ ಮಿಚೆಲ್‌ ಮಾರ್ಷ್‌ ಸ್ಫೋಟಕ ಬ್ಯಾಟಿಂಗ್‌ ನಡೆಸಿ 65 ಎಸೆತಗಳಲ್ಲಿ 81 ರನ್‌ ಬಾರಿಸುವ ಮೂಲಕ ಕಾಂಗರೂ ಪಡೆಗೆ ಭರ್ಜರಿ ಆರಂಭ ಒದಗಿಸಿದ್ದರು. ಇದರಿಂದ ಆಸ್ಟ್ರೇಲಿಯಾ ತಂಡ 300 ರನ್‌ ಗಡಿ ದಾಟುವ ಸಾಧ್ಯತೆಯಿತ್ತು. ಟೀಂ ಇಂಡಿಯಾ ಬೌಲರ್‌ಗಳ ದಾಳಿಗೆ ತತ್ತರಿಸಿದ ಕಾಂಗರೂ ಪಡೆ ಒಂದೊಂದೆ ವಿಕೆಟ್‌ ಕಳೆದುಕೊಂಡಿತು. ಈ ಮೂಲಕ ಆಸ್ಟ್ರೇಲಿಯಾ ತಂಡವನ್ನು ಭಾರತ ತಂಡ ಏಕದಿನ ಕ್ರಿಕೆಟ್‌ನಲ್ಲಿ ಅತ್ಯಂತ ಕಡಿಮೆ ಓವರ್‌ಗಳಲ್ಲಿ ಆಲ್‌ಔಟ್‌ ಮಾಡಿದ ಇತಿಹಾಸ ನಿರ್ಮಿಸಿತು.

    ಇನಿಂಗ್ಸ್‌ ಆರಂಭಿಸಿದ ಟ್ರಾವಿಸ್‌ ಹೆಡ್‌ 5 ರನ್‌ಗಳಿಸಿ ಮೊಹಮ್ಮದ್‌ ಸಿರಾಜ್‌ ಆಕ್ರಮಣಕಾರಿ ಬೌಲಿಂಗ್‌ಗೆ ಕ್ಲೀನ್‌ ಬೌಲ್ಡ್‌ ಆದರು. ನಂತರ ಮಿಚೆಲ್‌ ಮಾರ್ಷ್‌ ಮತ್ತು ಸ್ಟೀವ್‌ ಸ್ಮಿತ್‌ (Steve Smith) 72 ರನ್‌ಗಳ ಜೊತೆಯಾಟವಾಡಿ ಸ್ವಲ್ಪ ಚೇತರಿಕೆ ತಂದಿದ್ದರು. ಎಚ್ಚರಿಕೆಯಿಂದ ಇನಿಂಗ್ಸ್ ಕಟ್ಟುತ್ತಿದ್ದ ಸ್ಟೀವ್‌ ಸ್ಮಿತ್‌ ಅವರ ಆಟಕ್ಕೆ ನಾಯಕ ಹಾರ್ದಿಕ್‌ ಪಾಂಡ್ಯ ಬ್ರೇಕ್‌ ಹಾಕಿ ಪೆವಿಲಿಯನ್‌ಗೆ ದಾರಿ ತೋರಿಸಿದರು. ಕೀಪರ್‌ ಕೆ.ಎಲ್‌ ರಾಹುಲ್‌ ತೆಗೆದುಕೊಂಡ ಡೈವಿಂಗ್‌ ಕ್ಯಾಚ್‌ ಪರಿಣಾಮ 30 ಎಸೆತಗಳಲ್ಲಿ 22 ರನ್‌ ಗಳಿಸಿದ್ದ ಸ್ಮಿತ್‌ ಪೆವಿಲಿಯನ್‌ ಸೇರಬೇಕಾಯಿತು.

    ಬಳಿಕ ಕೆಲಕಾಲ ಉತ್ತಮ ಬ್ಯಾಟಿಂಗ್‌ ಮಾಡುತ್ತಿದ್ದ ಮಿಚೆಲ್‌ ಮಾರ್ಷ್‌ 61 ಎಸೆತಗಳಲ್ಲಿ 81 ರನ್‌ (10 ಬೌಂಡರಿ, 5 ಸಿಕ್ಸರ್‌) ಚಚ್ಚಿ ರವೀಂದ್ರ ಜಡೇಜಾ ಸ್ಪಿನ್‌ ಬೌಲಿಂಗ್‌ ದಾಳಿಗೆ ತುತ್ತಾದರು. ನಂತರದಲ್ಲಿ ಬಂದ ಬ್ಯಾಟರ್‌ಗಳ ಕಳಪೆ ಪ್ರದರ್ಶನದಿಂದಾಗಿ ಒಂದೊಂದೆ ವಿಕೆಟ್‌ ಪತನಗೊಂಡಿತು. ಅಂತಿಮವಾಗಿ ಆಸ್ಟ್ರೇಲಿಯಾ 188 ರನ್‌ಗಳಿಗೆ ಆಲೌಟ್‌ ಆಯಿತು. ಜಾಶ್‌ ಇಂಗ್ಲಿಸ್‌ 26 ರನ್‌, ಕ್ಯಾಮರೂನ್‌ ಗ್ರೀನ್‌ 12 ರನ್‌ ಗಳಿಸಿದರು.

    ಏಕದಿನ ಸರಣಿಯ ಮೊದಲ ಪಂದ್ಯದಲ್ಲೇ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡದ ಬೌಲರ್‌ಗಳು ಭರ್ಜರಿ ಬೇಟೆಯಾಡಿದರು. ವೇಗಿಗಳಾದ ಮೊಹಮ್ಮದ್‌ ಶಮಿ 6 ಓವರ್‌ಗಳಲ್ಲಿ 17 ರನ್‌ ನೀಡಿ 3 ವಿಕೆಟ್‌ ಪಡೆದರೆ, ಮೊಹಮ್ಮದ್‌ ಸಿರಾಜ್‌ 5.4 ಓವರ್‌ಗಳಲ್ಲಿ 29 ರನ್‌ ನೀಡಿ 3 ವಿಕೆಟ್‌ ಕಿತ್ತರು. ರವೀಂದ್ರ ಜಡೇಜಾ ಸ್ಪಿನ್‌ ಜಾದುವಿನಿಂದ 2 ವಿಕೆಟ್‌ ಪಡೆದರೆ, ಹಾರ್ದಿಕ್‌ ಪಾಂಡ್ಯ, ಕುಲ್‌ದೀಪ್‌ ಯಾದವ್‌ ತಲಾ ಒಂದೊಂದು ವಿಕೆಟ್‌ ಪಡೆದು ತೃಪ್ತಿಪಟ್ಟುಕೊಂಡರು.

    ಆಸ್ಟ್ರೇಲಿಯಾಗೆ ಗಾಯದ ಮೇಲೆ ಬರೆ: ಡೇವಿಡ್‌ ವಾರ್ನರ್‌ ಅನುಪಸ್ಥಿತಿಯಲ್ಲಿ ಇನ್ನಿಂಗ್ಸ್‌ ಆರಂಭಿಸಿದ ಸ್ಟೀವ್‌ ಸ್ಮಿತ್‌ ಸಾರಥ್ಯದ ಆಸ್ಟ್ರೇಲಿಯಾ ತಂಡಕ್ಕೆ ಗಾಯದ ಮೇಲೆ ಬರೆ ಎಳೆದಂತೆ ಮತ್ತೊಂದು ಸಮಸ್ಯೆ ಎದುರಾಗಿತ್ತು. ವಿಕೆಟ್‌ಕೀಪರ್‌ ಬ್ಯಾಟ್ಸ್‌ ಮ್ಯಾನ್‌ ಅಲೆಕ್ಸ್‌ ಕೇರಿ ಅನಾರೋಗ್ಯದ ಕಾರಣ ಕ್ರೀಡಾಂಗಣಕ್ಕೂ ಬಾರದೇ ಹೋಟೆಲ್‌ನಲ್ಲೇ ಉಳಿದುಕೊಂಡರು. ಇದು ತಂಡಕ್ಕೆ ಮತ್ತಷ್ಟು ಸಮಸ್ಯೆ ತಂದೊಡ್ಡಿತ್ತು.

  • ಕೊನೆಯ ಪಂದ್ಯ ಡ್ರಾ – ಆಸೀಸ್ ವಿರುದ್ಧ ಸರಣಿ ಗೆದ್ದ ಭಾರತ

    ಕೊನೆಯ ಪಂದ್ಯ ಡ್ರಾ – ಆಸೀಸ್ ವಿರುದ್ಧ ಸರಣಿ ಗೆದ್ದ ಭಾರತ

    ಅಹಮದಾಬಾದ್: ಟೀಂ ಇಂಡಿಯಾ (Team India) ತವರಿನಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ 4 ಪಂದ್ಯಗಳ ಬಾರ್ಡರ್-ಗವಾಸ್ಕರ್ ಟ್ರೋಫಿ (Border Gavaskar Trophy) ಟೆಸ್ಟ್ ಸರಣಿಯಲ್ಲಿ 2-1 ಅಂತರದಲ್ಲಿ ಜಯ ದಾಖಲಿಸುವ ಮೂಲಕ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) ಟೂರ್ನಿಯ 2ನೇ ಆವೃತ್ತಿಯ ಫೈನಲ್‌ಗೆ ಅರ್ಹತೆ ಪಡೆದುಕೊಂಡಿದೆ.

    ಸತತ 2ನೇ ಬಾರಿ ಫೈನಲ್ ತಲುಪಿದ ಸಾಧನೆ ಮಾಡಿರುವ ಭಾರತ, ಚೊಚ್ಚಲ ಟ್ರೋಫಿ ಮುಡಿಗೇರಿಸಿಕೊಳ್ಳುವ ತವಕದಲ್ಲಿದ್ದು, ಜೂನ್ 7 ರಂದು ಲಂಡನ್ನಿನ ದಿ ಓವೆಲ್ ಕ್ರೀಡಾಂಗಣದಲ್ಲಿ ಆಸೀಸ್ ವಿರುದ್ಧ ಸೆಣಸಲಿದೆ. ಇದನ್ನೂ ಓದಿ: 1,205 ದಿನಗಳ ಬಳಿಕ ಶತಕ ಸಿಡಿಸಿ ಮೆರೆದಾಡಿದ ಕೊಹ್ಲಿ

    ಅಂತಿಮ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ 571 ರನ್ ಗಳಿಸಿದ್ದ ಟೀಂ ಇಂಡಿಯಾ 91 ರನ್‌ಗಳ ಮುನ್ನಡೆ ಕಾಯ್ದುಕೊಂಡಿತ್ತು. ಬಳಿಕ ತನ್ನ 2ನೇ ಇನ್ನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ 4ನೇ ದಿನದಾಟದ ಅಂತ್ಯಕ್ಕೆ 6 ಓವರ್‌ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೇ ಕೇವಲ 3 ರನ್ ಗಳಿಸಿತ್ತು. ಕೊನೆಯದಿನ ತನ್ನ ಸರದಿ ಆರಂಭಿಸಿ 78.1 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 175 ರನ್‌ಗಳಿಸಿತು. ಸಂಜೆ ಆದ ಹಿನ್ನೆಯಲ್ಲಿ ಎರಡೂ ತಂಡದ ನಾಯಕರು ಪಂದ್ಯವನ್ನು ಡ್ರಾ ಮಾಡಲು ಒಪ್ಪಿಗೆ ಸೂಚಿಸಿದರು. ಇದನ್ನೂ ಓದಿ: ಕಿಂಗ್ ಕೊಹ್ಲಿ ಶತಕದ ವೈಭವ – ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ 88 ರನ್ ಮುನ್ನಡೆ

    ಕೊನೆಯದಿನದಾಟದಲ್ಲಿ ಆಸ್ಟ್ರೇಲಿಯಾ ಆರಂಭಿಕ ಟ್ರಾವಿಸ್ ಹೆಡ್ 163 ಎಸೆತಗಳಲ್ಲಿ 90 ರನ್ (10 ಬೌಂಡರಿ, 2 ಸಿಕ್ಸರ್) ಗಳಿಸಿ ಮಿಂಚಿದರು. ತಾಳ್ಮೆಯ ಆಟವಾಡಿದ ಮಾರ್ನಸ್ ಲಾಬುಶೇನ್ 213 ಎಸೆತಗಳಲ್ಲಿ 7 ಬೌಂಡರಿಗಳೊಂದಿಗೆ 63 ರನ್ ಹಾಗೂ ನಾಯಕ ಸ್ಟೀವ್ ಸ್ಮಿತ್ 10 ರನ್ ಗಳಿಸಿ ಅಜೇಯರಾಗುಳಿದರು. ಮ್ಯಾಥಿವ್ ಕುನ್ಹೆಮನ್ 6 ರನ್ ಗಳಿಸಿದರು.

    ಕೊನೆಯದಿನದಾಟದಲ್ಲಿ ಭಾರತದ ಪರ ಆರ್.ಅಶ್ವಿನ್ ಹಾಗೂ ಅಕ್ಷರ್ ಪಟೇಲ್ ತಲಾ ಒಂದೊಂದು ವಿಕೆಟ್ ಪಡೆದರು. 

    Virat Kohli 3

    WTCಗೆ ಭಾರತ ತಂಡ ಹೀಗಿದೆ: ಜೂನ್‌ನಲ್ಲಿ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೆಣಸಲು ಭಾರತ ಬಲಿಷ್ಠ ಆಟಗಾರರ ತಂಡವನ್ನು ಆಯ್ಕೆ ಮಾಡಿದೆ. ರೋಹಿತ್ ಶರ್ಮಾ (Rohit Sharma) (ನಾಯಕ), ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಶ್ರೀಕರ್ ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಅಕ್ಷರ್ದ್ ಪಟೇಲ್, ರವಿಚಂದ್ರನ್ ಅಶ್ಚಿನ್, ಉಮೇಶ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕೆ.ಎಲ್. ರಾಹುಲ್, ಇಶಾನ್ ಕಿಶಾನ್ ಹಾಗೂ ಕುಲ್‌ದೀಪ್ ಯಾದವ್ ತಂಡದಲ್ಲಿ ಇರಲಿದ್ದಾರೆ.

  • ಕಿಂಗ್ ಕೊಹ್ಲಿ ಶತಕದ ವೈಭವ – ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ 88 ರನ್ ಮುನ್ನಡೆ

    ಕಿಂಗ್ ಕೊಹ್ಲಿ ಶತಕದ ವೈಭವ – ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ 88 ರನ್ ಮುನ್ನಡೆ

    ಅಹಮದಾಬಾದ್: ಟೀಂ ಇಂಡಿಯಾ (Team India) ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) ಶತಕದ ಬ್ಯಾಟಿಂಗ್ ನೆರವಿನಿಂದ ಮೊದಲ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ (Australia) ವಿರುದ್ಧ ಭಾರತ 88 ರನ್‌ಗಳ ಮುನ್ನಡೆ ಸಾಧಿಸಿದೆ.

    ಬಾರ್ಡರ್ ಗಾವಾಸ್ಕರ್ ಟ್ರೋಫಿ (Border Gavaskar Trophy) ಟೆಸ್ಟ್ ಸರಣಿಯ ಕೊನೆಯ ಪಂದ್ಯದಲ್ಲಿ ಭಾರತ 4ನೇ ದಿನದಾಟದ ಅಂತ್ಯಕ್ಕೆ 178.5 ಓವರ್‌ಗಳಲ್ಲಿ 571 ರನ್‌ಗಳಿಗೆ ಆಲೌಟ್ ಆಯಿತು. ಬಳಿಕ 2ನೇ ಇನ್ನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ 6 ಓವರ್‌ಗಳಲ್ಲಿ ಕೇವಲ 3 ರನ್ ಗಳಿಸಿ 88 ರನ್‌ಗಳ ಹಿನ್ನಡೆಯಲ್ಲಿದೆ.

    ಆರಂಭಿಕರಾದ ಟ್ರಾವಿಸ್ ಹೆಡ್ (Travis Head) 18 ಎಸೆತಗಳಲ್ಲಿ 3 ರನ್ ಗಳಿಸಿದರೆ, ಮತ್ತೋರ್ವ ಆರಂಭಿಕ ಮ್ಯಾಥಿವ್ ಕುನ್ಹೆಮನ್ ಯಾವುದೇ ರನ್‌ಗಳಿಸದೇ ವಿಕೆಟ್ ಉಳಿಸಿಕೊಂಡಿದ್ದು, ಸೋಮವಾರ ಬ್ಯಾಟಿಂಗ್ ಮುಂದುವರಿಸಲಿದ್ದಾರೆ.

    ಶತಕದ ಬರ ನೀಗಿಸಿಕೊಂಡ ಕೊಹ್ಲಿ: 4ನೇ ದಿನ ಆಸ್ಟ್ರೇಲಿಯಾ ವಿರುದ್ಧ ತಾಳ್ಮೆಯ ಆಟವಾಡಿದ ಕೊಹ್ಲಿ 1,205 ದಿನಗಳ ಬಳಿಕ ಟೆಸ್ಟ್‌ನಲ್ಲಿ ಶತಕ ಸಿಡಿಸಿ ಮಿಂಚಿದರು. ಈ ಮೂಲಕ ತಮ್ಮ ವೃತ್ತಿಜೀವನದ 75ನೇ ಶತಕ ಪೂರ್ಣಗೊಳಿಸಿದರು.

    Virat Kohli 2

    3ನೇ ದಿನದ ಅಂತ್ಯಕ್ಕೆ 128 ಎಸೆತಗಳಲ್ಲಿ 59 ರನ್ ಗಳಿಸಿದ್ದ ಕೊಹ್ಲಿ 4ನೇ ದಿನ ಶತಕ ಸಿಡಿಸಿ ತಂಡಕ್ಕೆ ಆಸರೆಯಾದರು. 4ನೇ ದಿನದಾಟದಲ್ಲಿ ಕೊಹ್ಲಿ 364 ಎಸೆತಗಳಲ್ಲಿ 15 ಬೌಂಡರಿಗಳೊಂದಿಗೆ 186 ರನ್ ಗಳಿಸಿದರೆ, ಜೊತೆಯಾಗಿ ಸಾಥ್ ನೀಡಿದ ಆಲ್‌ರೌಂಡರ್ ಅಕ್ಷರ್ ಪಟೇಲ್ (Axar Patel) 113 ಎಸೆತಗಳಲ್ಲಿ 79 ರನ್ (5 ಬೌಂಡರಿ, 4 ಸಿಕ್ಸರ್) ಬಾರಿಸಿದರು.

    ರವೀಂದ್ರ ಜಡೇಜಾ 28 ರನ್, ಶ್ರೀಕರ್ ಭರತ್ 44 ರನ್, ರವಿಚಂದ್ರನ್ ಅಶ್ವಿನ್ 7 ರನ್ ಗಳಿಸಿದರೆ, ಉಮೇಶ್ ಯಾದವ್ ಒಂದು ಎಸೆತವನ್ನೂ ಎದುರಿಸದೇ ರನೌಟ್ ಆಗಿ ನಿರ್ಗಮಿಸಿದರು. ಮೊಹಮ್ಮದ್ ಶಮಿ ಅಜೇಯರಾಗುಳಿದರು.

    Smit

    ಆಸ್ಟ್ರೇಲಿಯಾ ತಂಡದ ಪರ ನಥನ್ ಲಿಯಾನ್ (Nathan Lyon), ಟಾಡ್ ಮರ್ಫಿ ತಲಾ 3 ವಿಕೆಟ್ ಪಡೆದರೆ, ಮಿಚೆಲ್ ಸ್ಟಾರ್ಕ್, ಮ್ಯಾಥಿವ್ ಕುನ್ಹೆಮನ್ ತಲಾ ಒಂದೊಂದು ವಿಕೆಟ್ ಪಡೆದರು.

  • Ind Vs Aus ಆಸ್ಟ್ರೇಲಿಯಾ ಆಟಗಾರರು ಕಪ್ಪು ಪಟ್ಟಿ ಧರಿಸಿ ಇಳಿದಿದ್ದು ಯಾಕೆ?

    Ind Vs Aus ಆಸ್ಟ್ರೇಲಿಯಾ ಆಟಗಾರರು ಕಪ್ಪು ಪಟ್ಟಿ ಧರಿಸಿ ಇಳಿದಿದ್ದು ಯಾಕೆ?

    ಅಹಮದಾಬಾದ್: ನಾಲ್ಕನೇ ಟೆಸ್ಟ್ ಪಂದ್ಯದ ಎರಡನೇ ದಿನವಾದ ಇಂದು ಆಸ್ಟ್ರೇಲಿಯಾ ತಂಡದ ಆಟಗಾರರು ಕಪ್ಪು ಪಟ್ಟಿ (Black armbands) ಧರಿಸಿ ಟೀಂ ಇಂಡಿಯಾ (Team India) ವಿರುದ್ಧ ಕ್ರಿಕೆಟ್ ಅಂಗಳಕ್ಕೆ ಇಳಿದಿದ್ದಾರೆ.

    ಸಹ ಆಟಗಾರ ಪ್ಯಾಟ್ ಕಮ್ಮಿನ್ಸ್ (Pat Cummins) ತಾಯಿ ನಿಧನರಾದ ಹಿನ್ನೆಲೆಯಲ್ಲಿ ಅಗಲಿದ ಜೀವಕ್ಕೆ ಗೌರವ ಸೂಚಿಸಿ ಆಟಗಾರರು ಈ ನಿರ್ಧಾರ ಕೈಗೊಂಡಿದ್ದಾರೆ. ಮಾರಿಯಾ ಕಮ್ಮಿನ್ಸ್ ಅವರ ಅಗಲಿಕೆಗೆ ಬಿಸಿಸಿಐ (BCCI) ಹಾಗೂ ಕ್ರಿಕೆಟ್ ಆಸ್ಟ್ರೇಲಿಯಾ (Cricket Australia) ಸಂತಾಪ ಸೂಚಿಸಿವೆ. ಇದನ್ನೂ ಓದಿ: ಶಾಸಕ ಹಂಚಿದ ಕುಕ್ಕರ್ ಅಸಲಿ ಮುಖ ತೆರೆದಿಟ್ಟ ಶೃಂಗೇರಿಯ ಮತದಾರರು

    2005 ರಿಂದ ಸ್ತನ ಕ್ಯಾನ್ಸರ್‌ನಿಂದ (Breast cancer)  ಬಳಲುತ್ತಿದ್ದ ಪ್ಯಾಟ್ ಅವರ ತಾಯಿ ಗುರುವಾರ ರಾತ್ರಿ ಮೃತಪಟ್ಟಿದ್ದಾರೆ. ತಾಯಿಯ ಆರೋಗ್ಯ ತೀವ್ರ ಹದಗೆಟ್ಟ ವಿಷಯ ತಿಳಿಯುತ್ತಿದ್ದಂತೆ ಪ್ಯಾಟ್, ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಆಡದಿರಲು ನಿರ್ಧರಿಸಿ ತವರಿಗೆ ಮರಳಿದ್ದರು. ಇದರಿಂದಾಗಿ ಈ ಪಂದ್ಯದಲ್ಲಿ ಸ್ಟೀವ್ ಸ್ಮಿತ್ (Steve Smith) ತಂಡದ ಕ್ಯಾಪ್ಟನ್ ಸ್ಥಾನ ವಹಿಸಿದ್ದಾರೆ.

    ಆಸ್ಟ್ರೇಲಿಯಾ ತಂಡ 167.2 ಓವರ್‍ಗಳಿಗೆ ಆಲೌಟ್ ಆಗಿ 480 ರನ್ ಪೇರಿಸಿದೆ. ಇದನ್ನೂ ಓದಿ: ನಾನು ರಾಜಕೀಯದಲ್ಲಿ ಇರುವವರೆಗೆ ಅಭಿಷೇಕ್ ರಾಜಕೀಯಕ್ಕೆ ಬರಲ್ಲ: ಸುಮಲತಾ

  • ಉಸ್ಮಾನ್ ಖವಾಜ ಶತಕದಾಟ – ಮೊದಲ ದಿನ ಆಸ್ಟ್ರೇಲಿಯಾಗೆ ಮೇಲುಗೈ

    ಉಸ್ಮಾನ್ ಖವಾಜ ಶತಕದಾಟ – ಮೊದಲ ದಿನ ಆಸ್ಟ್ರೇಲಿಯಾಗೆ ಮೇಲುಗೈ

    ಅಹಮದಾಬಾದ್: ಬಾರ್ಡರ್ ಗಾವಾಸ್ಕರ್ ಟ್ರೋಫಿ (Border Gavaskar Trophy) ಸರಣಿಯ 4ನೇ ಹಾಗೂ ಅಂತಿಮ ಟೆಸ್ಟ್‌ನ ಮೊದಲ ದಿನದಾಟದಲ್ಲಿ ಆಸ್ಟ್ರೇಲಿಯಾ (Australia) ತಂಡ ಮೇಲುಗೈ ಸಾಧಿಸಿದೆ.

    ಮೊದಲೆರಡು ಟೆಸ್ಟ್ ಪಂದ್ಯಗಳಲ್ಲಿ ಒಂದೇ ದಿನಕ್ಕೆ ಸರ್ವಪತನ ಕಂಡಿದ್ದ ಆಸ್ಟ್ರೇಲಿಯಾ ತಂಡ 4ನೇ ಪಂದ್ಯದಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದೆ. ಮೊದಲ ದಿನದ ಅಂತ್ಯಕ್ಕೆ 90 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 255 ರನ್ ಕಲೆಹಾಕಿದೆ. ಇದನ್ನೂ ಓದಿ: Ind Vs Aus: ಆಸ್ಟ್ರೇಲಿಯಾದ ಪ್ರಧಾನಿ‌ ಜೊತೆ ಮೋದಿ ಮ್ಯಾಚ್ ವೀಕ್ಷಣೆ

    ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡ ಉತ್ತಮ ಶುಭಾರಂಭ ಪಡೆದುಕೊಂಡಿತು. ಆರಂಭಿಕ ಟ್ರಾವಿಸ್ ಹೆಡ್ 32 ರನ್ ಗಳಿಸಿ ಔಟಾದರು. ನಂತರ ಬಂದ ಮಾರ್ನಸ್ ಲಾಬುಶೇನ್ ಕೇವಲ 3 ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡರು. ಈ ವೇಳೆ ಖವಾಜ (Usman Khawaja) ಜೊತೆಗೂಡಿದ ನಾಯಕ ಸ್ಟೀವ್ ಸ್ಮಿತ್ (Steven Smith) ಉತ್ತಮ ಜೊತೆಯಾಟವಾಡಿದರು. ಈ ಜೋಡಿ 3ನೇ ವಿಕೆಟ್‌ಗೆ 79 ರನ್ ಕಲೆಹಾಕಿತ್ತು. ಸ್ಟೀವ್ ಸ್ಮಿತ್ 38 ರನ್ ಗಳಿಸಿ ಆಡುತ್ತಿದ್ದಾಗ ಜಡೇಜಾ ಸ್ಪಿನ್ ದಾಳಿಗೆ ತುತ್ತಾದರು. ಈ ಬೆನ್ನಲ್ಲೇ 17 ರನ್ ಗಳಿಸಿ ಕ್ರೀಸ್‌ನಲ್ಲಿದ್ದ ಪೀಟರ್ ಹ್ಯಾಂಡ್ಸ್‌ಕೊಂಬ್‌ಗೆ ಮೊಹಮ್ಮದ್ ಶಮಿ (Mohammed Shami) ಪೆವಿಲಿಯನ್ ದಾರಿ ತೋರಿಸಿದರು.

    ನಂತರ ಆಸ್ಟ್ರೇಲಿಯಾ ಯಾವುದೇ ವಿಕೆಟ್ ಕಳೆದುಕೊಳ್ಳದೇ ಮೊದಲ ದಿನದಾಟ ಪೂರ್ಣಗೊಳಿಸಿತು. ಖವಾಜಾ ಮತ್ತು ಕೆಮರೊನ್ ಗ್ರೀನ್ ದಿನದ ಕೊನೆಯಲ್ಲಿ ಉತ್ತಮ ಬ್ಯಾಟಿಂಗ್ ಮಾಡಿದರು. ಈ ಜೋಡಿ ಮುರಿಯದ 5ನೇ ವಿಕೆಟ್‌ಗೆ 85 ರನ್ ಕಲೆಹಾಕಿತು. ಉಸ್ಮಾನ್ ಖವಾಜ 104 ರನ್ (251 ಎಸೆತ, 15 ಬೌಂಡರಿ) ಬಾರಿಸಿದರೆ, ಕೆಮರೊನ್ ಗ್ರೀನ್, 64 ಎಸೆತಗಳಲ್ಲಿ 8 ಬೌಂಡರಿ ಸಹಿತ ಅಜೇಯ 49 ರನ್ ಗಳಿಸಿ 2ನೇ ದಿನಕ್ಕೆ ವಿಕೆಟ್ ಕಾಯ್ದುಕೊಂಡಿದ್ದಾರೆ.

    India Australia Test Narendra Modi Anthony Albanese 2

    ಟೀಂ ಇಂಡಿಯಾ ಪರವಾಗಿ ಮೊಹಮ್ಮದ್ ಶಮಿ ಎರಡು ವಿಕೆಟ್ ಪಡೆದರೆ, ರವಿಚಂದ್ರನ್ ಅಶ್ವಿನ್ (R Ashwin) ಮತ್ತು ರವೀಂದ್ರ ಜಡೇಜಾ ತಲಾ ಒಂದು ವಿಕೆಟ್ ಪಡೆದರು. ಇದನ್ನೂ ಓದಿ: ಪಾಕ್ ಆಲ್‍ರೌಂಡರ್ ಆಟಗಾರ ಹಫೀಸ್ ಮನೆಯಲ್ಲಿ ಕಳ್ಳತನ

  • 4ನೇ ಟೆಸ್ಟ್ ಪಂದ್ಯದಿಂದ ಹೊರಗುಳಿಯಲಿರುವ ಪ್ಯಾಟ್ – ಆಸ್ಟ್ರೇಲಿಯಾ ತಂಡಕ್ಕೆ ಸ್ಟೀವ್ ಸ್ಮಿತ್ ಸಾರಥ್ಯ

    4ನೇ ಟೆಸ್ಟ್ ಪಂದ್ಯದಿಂದ ಹೊರಗುಳಿಯಲಿರುವ ಪ್ಯಾಟ್ – ಆಸ್ಟ್ರೇಲಿಯಾ ತಂಡಕ್ಕೆ ಸ್ಟೀವ್ ಸ್ಮಿತ್ ಸಾರಥ್ಯ

    ಅಹಮದಾಬಾದ್: ಭಾರತದ (Team India) ವಿರುದ್ಧ ನಡೆಯಲಿರುವ 4ನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ (Australia) ತಂಡದ ಸಾರಥ್ಯವನ್ನು ಸ್ಟೀವ್ ಸ್ಮಿತ್ (Steve Smith) ವಹಿಸಲಿದ್ದಾರೆ.

    ತಾಯಿಯ ಅನಾರೋಗ್ಯದಿಂದ ತವರಿಗೆ ಮರಳಿರುವ ಪ್ಯಾಟ್ ಕಮ್ಮಿನ್ಸ್ (Pat Cummins) ಭಾರತಕ್ಕೆ ಮರಳದೇ ಇರಲು ನಿರ್ಧರಿಸಿದ ಬೆನ್ನಲ್ಲಿ ಮತ್ತೊಮ್ಮೆ ಸ್ಮಿತ್ ಅವರಿಗೆ ನಾಯಕನಾಗುವ ಅವಕಾಶ ಸಿಕ್ಕಿದೆ. ಇದನ್ನೂ ಓದಿ: ವಿರಾಟ್ ಶತಕಗಳಿಂದಲೇ ಭಾರತ ಗೆಲ್ಲುತ್ತಿತ್ತು – ಕೊಹ್ಲಿಯನ್ನು ಹೊಗಳಿ ಸಚಿನ್ ವಿರುದ್ಧ ಅಖ್ತರ್ ಟೀಕೆ

    ಈ ಬಗ್ಗೆ ಮಾಹಿತಿ ನೀಡಿರುವ ಕ್ರಿಕೆಟ್ ಆಸ್ಟ್ರೇಲಿಯಾ (Cricket Australia), ಪ್ಯಾಟ್ ತಮ್ಮ ಕುಟುಂಬದೊಂದಿಗೆ ಉಳಿಯಲು ನಿರ್ಧರಿಸಿದ್ದು ಭಾರತದ ವಿರುದ್ಧದ ಪಂದ್ಯದಲ್ಲಿ ಪಾಲ್ಗೊಳ್ಳುತ್ತಿಲ್ಲ ಎಂದಿದೆ. ಮುಂಬರುವ ಏಕದಿನ ಸರಣಿಯಲ್ಲಿ ಭಾಗವಹಿಸುವ ಬಗ್ಗೆ ಯಾವುದೇ ನಿರ್ಧಾರವನ್ನು ಅದು ಪ್ರಕಟಿಸಿಲ್ಲ.

    ಸ್ಮಿತ್ ಮಾತನಾಡಿ, ಭಾರತ ನನ್ನ ನೆಚ್ಚಿನ ಜಾಗ, ನನ್ನ ನೆಚ್ಚಿನ ಜಾಗದಲ್ಲಿ ನಾಯಕತ್ವ ವಹಿಸುತ್ತಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ:  ಜೀವನದಿ ಕಾವೇರಿ ತೀರ್ಥ ಪ್ರಸಾದ ಇನ್ಮುಂದೆ ಭಕ್ತರ ಮನೆ ಬಾಗಿಲಿಗೆ