Tag: ಸ್ಟೆಫಿ ಪಟೇಲ್

  • ಸ್ಟೆಫಿ ಪಟೇಲ್ ಜೊತೆ ಲಂಡನ್ ನಲ್ಲಿ ಕಾಣಿಸಿಕೊಂಡ ವಸಿಷ್ಠ ಸಿಂಹ

    ಸ್ಟೆಫಿ ಪಟೇಲ್ ಜೊತೆ ಲಂಡನ್ ನಲ್ಲಿ ಕಾಣಿಸಿಕೊಂಡ ವಸಿಷ್ಠ ಸಿಂಹ

    ನ್ನಡದ ಹೆಸರಾಂತ ನಟ ವಸಿಷ್ಠ ಸಿಂಹ ಲಂಡನ್ (London) ಗೆ ಹಾರಿದ್ದರು. ಲಂಡನ್ ಸುಂದರ ಸ್ಥಳಗಳಲ್ಲಿ ನಟಿ ಸ್ಟೆಫಿ ಪಟೇಲ್(Stefy patel) ಜೊತೆ ಕಾಣಿಸಿಕೊಂಡಿದ್ದಾರೆ. ಅರೇ.. ಹರಿಪ್ರಿಯಾ ಜೊತೆ ಮದುವೆಯಾಗಿರೋ ವಸಿಷ್ಠ.. ಆ ನಟಿಯ ಜೊತೆ ಅಲ್ಲೇಕೆ ಕಾಣಿಸಿಕೊಂಡರು ಅಂತ ಅಚ್ಚರಿ ಪಡಬೇಡಿ. ಈ ಜೋಡಿ ನಟನೆಯ ಲವ್ ಲಿ (Love Li)  ಸಿನಿಮಾದ ಶೂಟಿಂಗ್ ಲಂಡನ್ ನಲ್ಲಿ ನಡೆದಿದೆ. ಹಾಡೊಂದರ ಚಿತ್ರೀಕರಣಕ್ಕಾಗಿ ಚಿತ್ರತಂಡ ಅಲ್ಲಿಗೆ ಹಾರಿತ್ತು.

    ವಸಿಷ್ಠ ಸಿಂಹ (Vasishtha Simha) ನಟನೆ ಅಂತ ಬಂದ್ರೆ ರೋಸ್ ಹಿಡಿದು ಹೀರೋ ಆಗೋಕು ರೆಡಿ, ಲಾಂಗ್ ಹಿಡಿದು ವಿಲನ್ ಆಗೋಕೂ ಸೈ, ಅಷ್ಟೇ ಅಲ್ಲ ಗಾಯನಕ್ಕೂ ಸೈ ಎನಿಸಿಕೊಂಡಿರುವ ಕಂಚಿನ ಕಂಠದ ನಟ. ಶಿವಣ್ಣನ ಜೊತೆ ಟಗರು ನಲ್ಲಿ ಚಿಟ್ಟೆಯಾಗಿ ಮಿಂಚಿದ ವಸಿಷ್ಠ ಸಿಂಹ ಸ್ಟೈಲಿಶ್ ಲುಕ್ ನಲ್ಲಿ ‘ಲವ್ ಲಿ’ ಯಾಗಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದ ಫಸ್ಟ್ ಲುಕ್ ಪೋಸ್ಟರ್, ಅಪ್ ಡೇಟ್ ಗಳು ಕೂಡ ಗಮನ ಸೆಳೆಯುತ್ತಿವೆ.

    ವಸಿಷ್ಠ ಸಿಂಹನಿಗೆ ನಾಯಕಿಯಾಗಿ ಜಾರ್ಖಂಡ್ ಮೂಲದ ಸ್ಟೆಫಿ ಪಟೇಲ್ ಕಾಣಿಸಿಕೊಂಡಿದ್ದಾರೆ.  ಹಿಂದಿ, ಕೊರಿಯನ್, ತಮಿಳು ಭಾಷೆಗಳ ಸಿನಿಮಾ ಮತ್ತು ವೆಬ್ ಸಿರೀಸ್ ಗಳಲ್ಲಿ ನಟಿಸಿರುವ ಸ್ಟೆಫಿ ಪಟೇಲ್ ಗೆ ಇದು ಮೊದಲ ಕನ್ನಡ ಸಿನಿಮಾ.

     

    ‘ಲವ್ ಲಿ’ ಚಿತ್ರಕ್ಕೆ ಚೇತನ್ ಕೇಶವ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಇದೊಂದು ಕಮರ್ಶಿಯಲ್ ರೋಮ್ಯಾಂಟಿಕ್ ಲವ್ ಸ್ಟೋರಿ ಸಿನಿಮಾವಾಗಿದ್ದು, ರೌಡಿಸಂ ಕಥಾಹಂದರವೂ ಚಿತ್ರದಲ್ಲಿದೆ. ಚಿತ್ರವನ್ನು  ಎಂ.ಆರ್ ರವೀಂದ್ರ ಕುಮಾರ್ ನಿರ್ಮಿಸುತ್ತಿದ್ದು, ಹರೀಶ್ ಕೊಮ್ಮೆ ಸಂಕಲನ, ಅಶ್ವಿನ್ ಕೆನಡಿ ಕ್ಯಾಮೆರಾ ವರ್ಕ್, ಅನೂಪ್ ಸೀಳಿನ್ ಸಂಗೀತ ನಿರ್ದೇಶನ ‘ಲವ್ ಲಿ’ ಚಿತ್ರಕ್ಕಿದೆ.

  • ವಸಿಷ್ಠ ಸಿಂಹ ಅಭಿನಯದ ಸಿನಿಮಾಗೆ ಕೋಟಿ ವೆಚ್ಚದ ಸೆಟ್

    ವಸಿಷ್ಠ ಸಿಂಹ ಅಭಿನಯದ ಸಿನಿಮಾಗೆ ಕೋಟಿ ವೆಚ್ಚದ ಸೆಟ್

    ಸಿಷ್ಠ ಸಿಂಹ ನಟನೆಯ ‘ಲವ್ ಲಿ’ ಸಿನಿಮಾ ಸೆಟ್ಟೇರಿದ ದಿನದಿಂದ ಸ್ಯಾಂಡಲ್ ವುಡ್ ಅಂಗಳದಲ್ಲಿ ಸಿನಿ ಪ್ರೇಕ್ಷಕರ ಗಮನ ಸೆಳೆಯುತ್ತಲೇ ಇದೆ. ಸಿಲಿಕಾನ್ ಸಿಟಿಯಲ್ಲಿ ಮೊದಲ ಹಾಗೂ ಎರಡನೇ ಶೆಡ್ಯೂಲ್ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಮಲ್ಪೆಯ ಪಡುಕರೆಯಲ್ಲಿ ಮೂರನೇ ಹಂತದ ಚಿತ್ರೀಕರಣದಲ್ಲಿ ತೊಡಗಿದೆ. ‘ಲವ್ ಲಿ’ ಚಿತ್ರೀಕರಣಕ್ಕೆಂದೇ ಪಡುಕರೆಯ ಕಡಲ ತೀರದಲ್ಲಿ ಒಂದು ಕೋಟಿ ವೆಚ್ಚದಲ್ಲಿ ಮನೆಯನ್ನು ನಿರ್ಮಾಣ ಮಾಡಲಾಗಿದೆ. ಕೇವಲ 25 ದಿನದಲ್ಲಿ ಈ ಮನೆ ನಿರ್ಮಾಣ ಮಾಡಲಾಗಿದ್ದು, ಕಳೆದ  ಹತ್ತು  ದಿನಗಳಿಂದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ವಸಿಷ್ಠ ಸಿಂಹ, ಸಾಧುಕೋಕಿಲ, ನಾಯಕಿ ಸ್ಟೆಫಿ ಪಟೇಲ್ ಸೇರಿದಂತೆ ಹಲವರು ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ.

    ನಟ ವಸಿಷ್ಠ ಸಿಂಹ ಮಾತನಾಡಿ ಇದೊಂದು ಕಮರ್ಶಿಯಲ್ ರೋಮ್ಯಾಂಟಿಕ್ ಲವ್ ಸ್ಟೋರಿ ಸಿನಿಮಾ. ರೌಡಿಸಂ ಕಥಾಹಂದರ ಕೂಡ ಇದೆ. ನೈಜ ಘಟನೆಯಿಂದ ಸ್ಪೂರ್ತಿ ಪಡೆದು ಅದನ್ನು ಸಿನಿಮೀಯ ರೀತಿಯಲ್ಲಿ ಹೇಳ ಹೊರಟಿದ್ದೇವೆ. ಎಂಟರಿಂದ ಹತ್ತು ಭಾವನೆಗಳನ್ನು ಒಮ್ಮೆಲೆ ಕ್ಯಾರಿ ಮಾಡುವ ಅವಕಾಶ ಈ ಚಿತ್ರದಲ್ಲಿ ಸಿಕ್ಕಿದೆ. ಪಾತ್ರಕ್ಕೆ ಜೀವ ತುಂಬುವ ಕೆಲಸ ನಡೆಯುತ್ತಿದೆ. ಈ ಸಿನಿಮಾ ಸಿನಿ ಪ್ರಿಯರ ಮನಸ್ಸು ಗೆಲ್ಲುವುದರಲ್ಲಿ ಮರು ಮಾತಿಲ್ಲ ಎಂದು ತಿಳಿಸಿದ್ರು. ಇದನ್ನೂ ಓದಿ: ಮಾಜಿ ಸಚಿವ ನಾರಾ ಲೋಕೇಶ್ ಭೇಟಿಯಾದ ನಟ ಯಶ್

    ನಿರ್ದೇಶಕ ಚೇತನ್ ಕೇಶವ್ ಮಾತನಾಡಿ 7 ದಿನಗಳ ಚಿತ್ರೀಕರಣ ನಡೆಸಿದ್ರೆ ಶೇಕಡಾ 80ರಷ್ಟು ಚಿತ್ರೀಕರಣ ಪೂರ್ಣಗೊಳ್ಳಲಿದೆ. ಲಂಡನ್ ನಲ್ಲೂ ಚಿತ್ರೀಕರಣ ಮಾಡಬೇಕಿದೆ. ಜನವರಿ ಮೊದಲ ವಾರದಲ್ಲಿ ಚಿತ್ರತಂಡ ಲಂಡನ್ ಗೆ ತೆರಳಲಿದೆ ಎಂದು ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡ್ರು.

    ‘ಲವ್ ಲಿ’ ಚಿತ್ರವನ್ನು ಚೇತನ್ ಕೇಶವ್ ನಿರ್ದೇಶನ ಮಾಡುತ್ತಿದ್ದು, ವಸಿಷ್ಠ ಸಿಂಹಗೆ ನಾಯಕಿಯಾಗಿ ಜಾರ್ಕಂಡ್ ಮೂಲದ ಸ್ಟೆಫಿ ಪಟೇಲ್ ನಟಿಸುತ್ತಿದ್ದಾರೆ. ಸುಬ್ಬಲಕ್ಷ್ಮಿ ಸಂಸಾರ ಸೀರಿಯಲ್ ಖ್ಯಾತಿಯ ಸಮೀಕ್ಷಾ ಚಿತ್ರದಲ್ಲಿ ಪ್ರಮುಖ ರೋಲ್ ನಲ್ಲಿ ಮಿಂಚಲಿದ್ದಾರೆ. ಮಾಸ್ಟರ್ ಆನಂದ್ ಪುತ್ರಿ ವಂಶಿಕಾ, ಸಾಧುಕೋಕಿಲ, ದತ್ತಣ್ಣ, ಮಾಳವಿಕಾ, ಶೋಭ್ ರಾಜ್, ಸೇರಿದಂತೆ ಹಲವು ಕಲಾವಿದರು ತಾರಾಗಣದಲ್ಲಿದ್ದಾರೆ. ಲವ್ ಲಿ ಚಿತ್ರವನ್ನು ರವೀಂದ್ರ ಕುಮಾರ್ ನಿರ್ಮಾಣ ಮಾಡುತ್ತಿದ್ದಾರೆ. ಅಶ್ವಿನ್ ಕೆನಡಿ ಕ್ಯಾಮೆರಾ ವರ್ಕ್, ಹರೀಶ್ ಕೊಮ್ಮೆ ಸಂಕಲನ, ಅನೂಪ್ ಸೀಳಿನ್ ಸಂಗೀತ ನಿರ್ದೇಶನ ಚಿತ್ರಕ್ಕಿದೆ.

    Live Tv
    [brid partner=56869869 player=32851 video=960834 autoplay=true]

  • ‘ಲವ್ ಲಿ’ ಸಿನಿಮಾದ ಶೂಟಿಂಗ್ ನಲ್ಲಿ ಮತ್ತೆ ಬ್ಯುಸಿಯಾದ ವಸಿಷ್ಠ ಸಿಂಹ

    ‘ಲವ್ ಲಿ’ ಸಿನಿಮಾದ ಶೂಟಿಂಗ್ ನಲ್ಲಿ ಮತ್ತೆ ಬ್ಯುಸಿಯಾದ ವಸಿಷ್ಠ ಸಿಂಹ

    ಸ್ಯಾಂಡಲ್ ವುಡ್ ಪ್ರತಿಭಾನ್ವಿತ ನಟ ವಸಿಷ್ಠ ಸಿಂಹ (Vasishtha Simha) ಅಭಿನಯದ ಬಹು ನಿರೀಕ್ಷಿತ ಸಿನಿಮಾಗಳಲ್ಲೊಂದು ‘ಲವ್ ಲಿ’ (Love Li). ವಸಿಷ್ಠ  ಸಿಂಹ ಅಭಿಮಾನಿ ಬಳಗ ಕೂಡ ಈ ಚಿತ್ರದ ಮೇಲೆ ಅಪಾರ ನಿರೀಕ್ಷೆ ಇಟ್ಟುಕೊಂಡಿದೆ. ಚಿತ್ರದ ಪೋಸ್ಟರ್ ಗಳಲ್ಲಿ ವಸಿಷ್ಠ ಲುಕ್ ಸಖತ್ ಇಂಪ್ರೆಸ್ ಮಾಡಿದ್ದು ‘ಲವ್ ಲಿ’ ಸಿನಿಮಾ ಅಪ್ಡೇಟ್ ಗಳೂ ನಿರೀಕ್ಷೆ ಹೆಚ್ಚಿಸಿವೆ.  ಲವ್ ಲಿ ಚಿತ್ರೀಕರಣ ಕೂಡ ಭರದಿಂದ ಸಾಗುತ್ತಿದ್ದು ಮೊದಲ ಶೆಡ್ಯೂಲ್ ಯಶಸ್ವಿಯಾಗಿ ಮುಗಿಸಿರುವ ಚಿತ್ರತಂಡ ಸೆಕೆಂಡ್ ಶೆಡ್ಯೂಲ್ ಚಿತ್ರೀಕರಣದಲ್ಲಿ ಬ್ಯುಸಿಯಾಗಿದೆ.

    ನಾಗರಭಾವಿಯ ಕಿಂಗ್ಸ್ ಕ್ಲಬ್ ನಲ್ಲಿ ‘ಲವ್ ಲಿ’ ಚಿತ್ರದ ಸೆಕೆಂಡ್ ಶೆಡ್ಯೂಲ್ ಚಿತ್ರೀಕರಣ ನಡೆಯುತ್ತಿದೆ. ಇಲ್ಲಿನ ಕಿಂಗ್ಸ್ ಕ್ಲಬ್ ನಲ್ಲಿ ಆಫೀಸ್ ಸೆಟ್ ನಿರ್ಮಾಣ ಮಾಡಲಾಗಿದ್ದು ವಸಿಷ್ಠ ಸಿಂಹ, ಸಾಧುಕೋಕಿಲ (Sadhu Kokila), ನಟಿ ಸಮೀಕ್ಷಾ, ಕಾಮಿಡಿ ಕಿಲಾಡಿಗಳು ಖ್ಯಾತಿಯ ಸೂರಜ್ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ.  ಚಿತ್ರವನ್ನು ಎಂ.ಆರ್ ರವೀಂದ್ರ ಕುಮಾರ್ ನಿರ್ಮಿಸುತ್ತಿದ್ದು, ಅಶ್ವಿನ್ ಕೆನಡಿ ಕ್ಯಾಮೆರಾ ವರ್ಕ್, ಹರೀಶ್ ಕೊಮ್ಮೆ ಸಂಕಲನ, ಅನೂಪ್ ಸೀಳಿನ್ ಸಂಗೀತ ನಿರ್ದೇಶನ ಚಿತ್ರಕ್ಕಿದೆ. ಇದನ್ನೂ ಓದಿ:ನೆಗೆಟಿವ್ ಕಾಮೆಂಟ್ ಗೆ ಹೆದರಲ್ಲ, ತುಂಬಾ ಜನ ನನ್ನನ್ನು ಪ್ರೀತಿಸ್ತಾರೆ ಎಂದ ಸೋನು ಶ್ರೀನಿವಾಸ್ ಗೌಡ

    ‘ಲವ್ ಲಿ’ ಚಿತ್ರಕ್ಕೆ ಚೇತನ್ ಕೇಶವ್ (Chetan Keshav) ನಿರ್ದೇಶನವಿದೆ. ಇದೊಂದು ಕಮರ್ಷಿಯಲ್ ರೋಮ್ಯಾಂಟಿಕ್ ಲವ್ ಸ್ಟೋರಿ ಸಿನಿಮಾವಾಗಿದ್ದು, ರೌಡಿಸಂ ಕಥಾಹಂದರವೂ ಚಿತ್ರದಲ್ಲಿದೆ. ವಸಿಷ್ಠ ಸಿಂಹನಿಗೆ ನಾಯಕಿಯಾಗಿ ಜಾರ್ಕಂಡ್ ಮೂಲದ ಸ್ಟೆಫಿ ಪಟೇಲ್ (Steffy Patel) ನಟಿಸುತ್ತಿದ್ದು, ಕೊರಿಯನ್ ವೆಬ್ ಸೀರೀಸ್, ತಮಿಳು, ಹಿಂದಿ ಸಿನಿಮಾಗಳಲ್ಲಿ ನಟಿಸಿರುವ ಸ್ಟೆಫಿ ಪಟೇಲ್ ಗೆ ಇದು ಮೊದಲ ಕನ್ನಡ ಸಿನಿಮಾ. ಮಾಸ್ಟರ್ ಆನಂದ್ ಪುತ್ರಿ ವಂಶಿಕಾ ಕೂಡ ಲವ್ ಲಿ ಚಿತ್ರತಂಡ ಸೇರಿಕೊಂಡಿದ್ದು, ಸುಬ್ಬಲಕ್ಷ್ಮಿ ಸಂಸಾರ ಸೀರಿಯಲ್ ಖ್ಯಾತಿಯ ಸಮೀಕ್ಷಾ ಲವ್ ಲಿ ಚಿತ್ರದಲ್ಲಿ ಪ್ರಮುಖ ರೋಲ್ ನಲ್ಲಿ ಮಿಂಚಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]