Tag: ಸ್ಟೇಡಿಯಂ

  • ಕ್ರಿಕೆಟ್‌ ಪಂದ್ಯ ನಡೆಯುತ್ತಿದ್ದಾಗ ಪಾಕ್‌ ಸ್ಟೇಡಿಯಂನಲ್ಲಿ ಸ್ಫೋಟ – ಓರ್ವ ಸಾವು, ಹಲವರಿಗೆ ಗಾಯ

    ಕ್ರಿಕೆಟ್‌ ಪಂದ್ಯ ನಡೆಯುತ್ತಿದ್ದಾಗ ಪಾಕ್‌ ಸ್ಟೇಡಿಯಂನಲ್ಲಿ ಸ್ಫೋಟ – ಓರ್ವ ಸಾವು, ಹಲವರಿಗೆ ಗಾಯ

    ಇಸ್ಲಾಮಾಬಾದ್‌: ಕ್ರಿಕೆಟ್‌ ಪಂದ್ಯ (Cricket Match) ನಡೆಯುತ್ತಿದ್ದಾಗಲೇ ಸ್ಟೇಡಿಯಂನಲ್ಲಿ (Stadium) ಸ್ಫೋಟ ಸಂಭವಿಸಿದ ಘಟನೆ ಪಾಕಿಸ್ತಾನದ (Pakistan) ವಾಯುವ್ಯ ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದಲ್ಲಿ ನಡೆದಿದೆ.

    ಸ್ಫೋಟಕ್ಕೆ ಓರ್ವ ಬಲಿಯಾಗಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ. ಬಜೌರ್ ಜಿಲ್ಲೆಯ ಖಾರ್ ತೆಹ್ಸಿಲ್‌ನಲ್ಲಿರುವ ಕೌಸರ್ ಕ್ರಿಕೆಟ್ ಮೈದಾನದಲ್ಲಿ ಸ್ಫೋಟ ಸಂಭವಿಸಿದೆ.

    ಬಜೌರ್ ಜಿಲ್ಲಾ ಪೊಲೀಸ್ ಅಧಿಕಾರಿ ವಕಾಸ್ ರಫೀಕ್ ಅವರು ಸುಧಾರಿತ ಸ್ಫೋಟಕ ಸಾಧನದ ಮೂಲಕ ಸ್ಫೋಟವನ್ನು ನಡೆಸಲಾಗಿದೆ ಎಂದು ಖಚಿತಪಡಿಸಿದ್ದಾರೆ. ಇದನ್ನೂ ಓದಿ: ಮೋದಿ ನನ್ನ ಒಳ್ಳೆಯ ಸ್ನೇಹಿತ: ಮತ್ತೆ ಯೂಟರ್ನ್ಹೊಡೆದ ಟ್ರಂಪ್

    ಸ್ಫೋಟಗೊಂಡ ಬೆನ್ನಲ್ಲೇ ಪಂದ್ಯ ವೀಕ್ಷಿಸುತ್ತಿದ್ದ ಅಭಿಮಾನಿಗಳು ದಿಕ್ಕಾಪಾಲಾಗಿ ಓಡಿ ಹೋಗಿದ್ದಾರೆ. ಮೈದಾನದಲ್ಲಿ ದಟ್ಟವಾದ ಹೊಗೆ ಏಳುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.

     

  • ಮೆಸ್ಸಿ ಆಟ ನೋಡಲು ಕಿಕ್ಕಿರಿದ ಅಭಿಮಾನಿಗಳು – 28 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ಇಷ್ಟೊಂದು ಜನ!

    ಮೆಸ್ಸಿ ಆಟ ನೋಡಲು ಕಿಕ್ಕಿರಿದ ಅಭಿಮಾನಿಗಳು – 28 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ಇಷ್ಟೊಂದು ಜನ!

    ಕತಾರ್: ಫಿಫಾ ವಿಶ್ವಕಪ್ (FIFA World Cup)  ಇತಿಹಾಸದಲ್ಲಿ ನಿನ್ನೆ ನಡೆದ ಅರ್ಜೆಂಟೀನಾ (Argentina) ಮತ್ತು ಮೆಕ್ಸಿಕೋ (Mexico) ನಡುವಿನ ಪಂದ್ಯದಲ್ಲಿ ಬರೋಬ್ಬರಿ 88,966 ಪ್ರೇಕ್ಷಕರು ಸ್ಟೇಡಿಯಂಗೆ ಆಗಮಿಸಿ ಪಂದ್ಯ ನೋಡಿ ದಾಖಲೆ ಬರೆದಿದ್ದಾರೆ.

    ಶನಿವಾರ ರಾತ್ರಿ 12:30ಕ್ಕೆ ಲುಸೈಲ್ ಕ್ರೀಡಾಂಗಣದಲ್ಲಿ ನಡೆದ ಅರ್ಜೆಂಟೀನಾ ಮತ್ತು ಮೆಕ್ಸಿಕೋ ನಡುವಿನ ಪಂದ್ಯಕ್ಕೆ ಅಭಿಮಾನಿಗಳು ಕಿಕ್ಕಿರಿದು ಆಗಮಿಸಿದರು. ವಿಶ್ವಕಪ್‍ನಲ್ಲಿ ಅಳಿವು ಉಳಿವಿನ ಪರಿಸ್ಥಿತಿಯೊಂದಿಗೆ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಅರ್ಜೆಂಟೀನಾ ತಂಡ ಒತ್ತಡದಲ್ಲಿತ್ತು. ಹಾಗಾಗಿ ಅರ್ಜೆಂಟೀನಾ ಮತ್ತು ಮೆಸ್ಸಿ (Lionel Messi) ಅಭಿಮಾನಿಗಳು ಒಟ್ಟಿಗೆ ತಂಡಕ್ಕೆ ಚಿಯರ್ ಅಪ್ ಮಾಡಲು ಕ್ರೀಡಾಂಗಣಕ್ಕೆ ಆಗಮಿಸಿದರು. ಇದನ್ನೂ ಓದಿ: ಡು ಆರ್ ಡೈ ಪಂದ್ಯದಲ್ಲಿ ಮಿಂಚಿದ ಮೆಸ್ಸಿ – ನಾಕೌಟ್ ರೇಸ್‍ನಲ್ಲಿ ಉಳಿದುಕೊಂಡ ಅರ್ಜೆಂಟೀನಾ

    ಲುಸೈಲ್ ಕ್ರೀಡಾಂಗಣದಲ್ಲಿ ಬರೋಬ್ಬರಿ 88,966 ಜನ ಕಿಕ್ಕಿರಿದು ತುಂಬಿದರು. ಇದು ಕಳೆದ 28 ವರ್ಷಗಳ ವಿಶ್ವಕಪ್ ಇತಿಹಾದಲ್ಲಿ ಅತೀ ಹೆಚ್ಚಿನ ಪ್ರೇಕ್ಷಕರು ಪಂದ್ಯ ವೀಕ್ಷಿಸಿದ ದಾಖಲೆ ಬರೆಯಿತು. ಸ್ಟೇಡಿಯಂನ ಹೊರ ಭಾಗದಲ್ಲೂ ಜನ ಮುಗಿಬಿದ್ದಿದ್ದರು. ವಿಶ್ವದಾದ್ಯಂತ ಫ್ಯಾನ್ಸ್ ಅಲ್ಲಲ್ಲಿ ಫ್ಯಾನ್ಸ್‌ ಆರ್ಮಿ ಸೇರಿ ಪಂದ್ಯ ವೀಕ್ಷಿಸಿದವರು. ಇದನ್ನೂ ಓದಿ: ಕಾಡಿದ ವರುಣ – 2ನೇ ಏಕದಿನ ಪಂದ್ಯ 12 ಓವರ್‌ಗಳಿಗೆ ಅಂತ್ಯ

    ಪಂದ್ಯದಲ್ಲಿ 64 ನಿಮಿಷದಲ್ಲಿ ಅರ್ಜೆಂಟೀನಾ ಪರ ನಾಯಕ ಮೆಸ್ಸಿ ಮೊದಲ ಗೋಲು ಬಾರಿಸಿ ಮುನ್ನಡೆ ತಂದುಕೊಟ್ಟರು. ಅರ್ಜೆಂಟೀನಾ ಎಲ್ಲಾ ವಿಭಾಗದಲ್ಲೂ ಮೆಕ್ಸಿಕೋ ವಿರುದ್ಧ ಪ್ರಬಲವಾಗಿ ಕಂಡಿತು. ಪರಿಣಾಮ 87ನೇ ನಿಮಿಷದಲ್ಲಿ ಎಂಝೋ ಫೆರ್ನಾಂಡಿಸ್ ಮತ್ತೊಂದು ಗೋಲು ಸಿಡಿಸುವ ಮೂಲಕ ಅರ್ಜೆಂಟೀನಾ 2-0 ಅಂತರದಲ್ಲಿ ಮುನ್ನಡೆ ಕಾಯ್ದುಕೊಳ್ಳಲು ಸಹಕರಿಸಿದರು. ಬಳಿಕ ಮೆಕ್ಸಿಕೋ ಗೋಲು ಸಿಡಿಸಲು ಶತಪ್ರಯತ್ನಿಸಿದರೂ ಅರ್ಜೆಂಟೀನಾ ಆಟಗಾರರು ಇದಕ್ಕೆ ಅವಕಾಶ ನೀಡಲಿಲ್ಲ.

    ಅಂತಿಮವಾಗಿ ಫುಲ್‍ಟೈಮ್ ಮುಕ್ತಾಯದ ವೇಳೆಗೆ 2-0 ಅಂತರದಲ್ಲಿ ಮುನ್ನಡೆ ಪಡೆದುಕೊಂಡಿದ್ದ ಅರ್ಜೆಂಟೀನಾ ಗೆಲುವಿನ ನಗೆ ಬೀರಿತು. ಈ ಮೂಲಕ ಸೌದಿ ಅರೇಬಿಯಾ ವಿರುದ್ಧ ಸೋತಿದ್ದ ನೋವು ಮರೆಸಿತು.

    Live Tv
    [brid partner=56869869 player=32851 video=960834 autoplay=true]

  • ನಾಯಿ ವಾಕಿಂಗ್‍ಗೆ ಸ್ಟೇಡಿಯಂ ಖಾಲಿ ಮಾಡಿಸಿದ್ದ ಐಎಎಸ್ ಅಧಿಕಾರಿ ವರ್ಗಾವಣೆ

    ನಾಯಿ ವಾಕಿಂಗ್‍ಗೆ ಸ್ಟೇಡಿಯಂ ಖಾಲಿ ಮಾಡಿಸಿದ್ದ ಐಎಎಸ್ ಅಧಿಕಾರಿ ವರ್ಗಾವಣೆ

    ನವದೆಹಲಿ: ತಮ್ಮ ನಾಯಿಯನ್ನು ವಾಕಿಂಗ್ ಕರೆದುಕೊಂಡು ಹೋಗಲು ಸ್ಟೇಡಿಯಂನಲ್ಲಿದ್ದ ಕ್ರೀಡಾ ಪಡುಗಳನ್ನು ಸಮಯಕ್ಕಿಂತಲೂ ಮೊದಲೇ ಹೊರಗೆ ಕಳುಹಿಸಿದ ದೆಹಲಿ ಕಂದಾಯ ವಿಭಾಗದ ಮುಖ್ಯ ಕಾರ್ಯದರ್ಶಿ ಸಂಜೀವ್ ಖಿರ್ವಾರ್ ಅವರನ್ನು ವರ್ಗಾಯಿಸಲಾಗಿದೆ. ಅಲ್ಲದೇ ಅವರ ಪತ್ನಿ ರಿಂಕು ದುಗ್ಗಾ ಅವರನ್ನು ಅರುಣಾಚಲ ಪ್ರದೇಶಕ್ಕೆ ವರ್ಗಾವಣೆ ಮಾಡಲಾಗಿದೆ.

    ದೆಹಲಿಯಲ್ಲಿರುವ ತ್ಯಾಗರಾಜ್ ಸ್ಟೇಡಿಯಂ ಸಂಜೆ 8 ಗಂಟೆ ವರೆಗೂ ತೆರೆದಿಡಲಾಗುತ್ತಿತ್ತು. ಆದರೆ ಇತ್ತೀಚೆಗೆ ದೆಹಲಿ ಕಂದಾಯ ವಿಭಾಗದ ಮುಖ್ಯ ಕಾರ್ಯದರ್ಶಿ ಸಂಜೀವ್ ಖಿರ್ವಾರ್ ಅವರ ನಾಯಿಯನ್ನು ವಾಕಿಂಗ್ ಕರೆದುಕೊಂಡು ಹೋಗಲು ಅಭ್ಯಾಸ ನಡೆಸುತ್ತಿದ್ದ ಕ್ರೀಡಾಪಟುಗಳನ್ನು ಅವಧಿಗಿಂತಲೂ ಮುಂಚಿತವಾಗಿ ಹೊರಗೆ ಕಳುಹಿಸಲಾಗಿದೆ ಎಂದು ವರದಿಯಾಗುತ್ತಿದ್ದಂತೆ ಸಂಜೀವ್ ಖಿರ್ವಾರ್ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಇದನ್ನೂ ಓದಿ: ಕ್ರೀಡಾಪಟುಗಳನ್ನು ಸ್ಟೇಡಿಯಂನಿಂದ ಹೊರಹಾಕಿ, ಐಎಎಸ್ ಅಧಿಕಾರಿಯ ನಾಯಿಗೆ ವಾಕಿಂಗ್

    ಸಂಜೀವ್ ಖಿರ್ವಾರ್ ಮತ್ತು ಅವರ ಪತ್ನಿ ರಿಂಕು ದುಗ್ಗಾ ಅವರು ತ್ಯಾಗರಾಜ್ ಕ್ರೀಡಾಂಗಣದಲ್ಲಿನ ಸೌಲಭ್ಯಗಳನ್ನು ದುರುಪಯೋಗಪಡಿಸಿಕೊಂಡ ಹಿನ್ನೆಲೆ , ಸಂಜೀವ್ ಖಿರ್ವಾರ್ ಅವರನ್ನು ಲಡಾಖ್‍ಗೆ ಮತ್ತು ರಿಂಕು ಧುಗ್ಗಾ ಅವರನ್ನು ಅರುಣಾಚಲ ಪ್ರದೇಶಕ್ಕೆ ಎಂಎಚ್‍ಎ ವರ್ಗಾಯಿಸಲಾಗಿದೆ.

    ನಾವು ರಾತ್ರಿ 8 ರಿಂದ 8:30ರ ವರೆಗೂ ತರಬೇತಿ ನಡೆಸುತ್ತಿದ್ದೆವು. ಆದರೆ ಈಗ ಅಧಿಕಾರಿಯ ನಾಯಿಗೆ ವಾಕಿಂಗ್ ಕರೆದುಕೊಂಡು ಹೋಗಲು ನಮ್ಮನ್ನು ಸಂಜೆ 7 ಗಂಟೆಗೆ ಮೈದಾನದಿಂದ ಹೊರಡಲು ಹೇಳಲಾಗುತ್ತಿದೆ ಎಂದು ಕ್ರೀಡಾ ತರಬೇತುದಾರರೊಬ್ಬರು ಆರೋಪಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ವೇಶ್ಯಾವಾಟಿಕೆ ಅಕ್ರಮವಲ್ಲ – ಸುಪ್ರೀಂಕೋರ್ಟ್ ಮಹತ್ವದ ತೀರ್ಪು

    ಈ ಬಗ್ಗೆ ಪ್ರತಿಕ್ರಿಯಿಸಿದ ಖಿರ್ವಾರ್, ನನ್ನ ಮೇಲೆ ಹೊರಿಸಿರುವ ಆರೋಪ ಶುದ್ಧ ಸುಳ್ಳು, ನಾನು ತೀರಾ ಅಪರೂಪಕ್ಕೆ ನಾಯಿಯನ್ನು ಸ್ಟೇಡಿಯಂಗೆ ಕರೆದುಕೊಂಡು ಹೋಗಿದ್ದೆ. ಆದರೆ ಇದರಿಂದ ಯಾವುದೇ ಕ್ರೀಡಾಪಟುಗಳಿಗೂ ಅಡ್ಡಿ ಪಡಿಸಿರಲಿಲ್ಲ ಎಂದಿದ್ದರು.

    ಈ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆಯೇ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನಗರದಲ್ಲಿನ ಎಲ್ಲಾ ಸರ್ಕಾರಿ ಕ್ರೀಡಾಂಗಣಗಳನ್ನು ರಾತ್ರಿ 10 ಗಂಟೆಯವರೆಗೆ ಕ್ರೀಡಾಪಟುಗಳಿಗೆ ಅಭ್ಯಾಸಕ್ಕೆ ತೆರೆದಿಡಲು ಆದೇಶಿಸಿದ್ದಾರೆ.

  • ಸತತ ಸೋಲಿನ ಸುಳಿಯಲ್ಲಿರುವ ಮುಂಬೈಗೆ ಮತ್ತೊಂದು ಬರೆ

    ಸತತ ಸೋಲಿನ ಸುಳಿಯಲ್ಲಿರುವ ಮುಂಬೈಗೆ ಮತ್ತೊಂದು ಬರೆ

    ಮುಂಬೈ: 15 ಐಪಿಎಲ್ ಆವೃತ್ತಿಯಲ್ಲಿ ಕಳೆದ 5 ಪಂದ್ಯಗಳಲ್ಲೂ ಸತತವಾಗಿ ಸೋಲನ್ನು ಅನುಭವಿಸಿರುವ ಮುಂಬೈ ಇಂಡಿಯನ್ಸ್ ತಂಡಕ್ಕೆ ಮತ್ತೊಂದು ಬರೆ ಬಿದ್ದಿದೆ.

    ಹೌದು.. ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಸೇರಿದಂತೆ 11 ಸಹ ಆಟಗಾರರಿಗೆ ಪಂಜಾಬ್ ಕಿಂಗ್ಸ್ ವಿರುದ್ದದ ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ದಂಡ ವಿಧಿಸಲಾಗಿದೆ. ಇದನ್ನೂ ಓದಿ: 4 ತಿಂಗಳ ಕಾಲ ಕ್ರಿಕೆಟ್‍ನಿಂದ ಹೊರಗುಳಿಯಬೇಕಾಗಿದೆ ದೀಪಕ್ ಚಹರ್ – ಟಿ20 ವಿಶ್ವಕಪ್‍ಗೂ ಡೌಟ್

    IPL 2022 MI (1)

    ಬುಧವಾರ ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಆಸೋಸಿಯೆಶನ್ ಸ್ಟೇಡಿಯಂನಲ್ಲಿ ನಡೆದ ಕಿಂಗ್ಸ್ ಪಂಜಾಬ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ನಿಧಾನಗತಿಯ ಬೌಲಿಂಗ್ ಪ್ರದರ್ಶಿಸಿದ್ದಕ್ಕಾಗಿ ರೋಹಿತ್ ಶರ್ಮಾಗೆ 24 ಲಕ್ಷ ರೂ. ದಂಡ ವಿಧಿಸಲಾಗಿದೆ. ತಂಡದ 10 ಸಹ ಆಟಗಾರರಿಗೆ ತಲಾ 6 ಲಕ್ಷ ಅಥವಾ ಅವರ ಪಂದ್ಯದ ಶುಲ್ಕದ ಶೇ.25 ಪ್ರತಿಶತದಷ್ಟು ದಂಡ ವಿಧಿಸಲಾಗಿದೆ ಎಂದು ಐಪಿಎಲ್ ಆಯೋಜಕರು ತಿಳಿಸಿದ್ದಾರೆ.

    15ನೇ ಆವೃತ್ತಿಯ ಐಪಿಎಲ್‌ನ ಕಿಂಗ್ಸ್ ಪಂಜಾಬ್ ವಿರುದ್ಧ ನಡೆದ ಪಂದ್ಯದಲ್ಲಿ 186 ರನ್‌ಗಳಿಸಿದ ಮುಂಬೈ ಇಂಡಿಯನ್ಸ್ ತಂಡವು 12 ರನ್‌ಗಳ ಅಂತರದಿಂದ ಸೋಲನ್ನು ಅನುಭವಿಸಿದೆ. ಇದರಿಂದಾಗಿ ಐಪಿಎಲ್ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನಕ್ಕೆ ಕುಸಿಯುವಂತಾಗಿದೆ. ಇದನ್ನೂ ಓದಿ: ಜ್ಯೂನಿಯರ್ ಎಬಿಡಿ ಅಬ್ಬರದಾಟ ವ್ಯರ್ಥ – ಮುಂಬೈ ವಿರುದ್ಧ ಪಂಜಾಬ್‍ಗೆ 12 ರನ್‌ಗಳ ಜಯ

    suryakumar and rohith sharma

    ಪಂದ್ಯದ ಬಳಿಕ ಮಾತನಾಡಿದ ಕ್ಯಾಪ್ಟನ್ ರೋಹಿತ್ ಶರ್ಮಾ, ಮುಂಬೈ ಇಂಡಿಯನ್ಸ್ ಸತತವಾಗಿ 5 ಪಂದ್ಯಗಲ್ಲಿ ಸೋಲನ್ನು ಕಂಡಿದೆ. ಪಂಜಾಬ್ 3 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ನಾವು ಮೈದಾನದಲ್ಲಿ ಉತ್ತಮ ಪ್ರದರ್ಶನವನ್ನೇ ನೀಡಿದ್ದೇವೆ. ಕೊನೆಯ ಇನ್ನಿಂಗ್ಸನಲ್ಲಂತೂ ಗೆಲುವಿನ ಸಮೀಪಕ್ಕೆ ಬಂದಿದ್ದೇವೆ. ಆದರೆ, ಪ್ರಮುಖ ರನೌಟ್‌ಗಳು ಸಂಭವಿಸಿದ್ದರಿಂದ ಸೋಲಾಯಿತು. ಬದಲಾವಣೆಗಾಗಿ ಹೊಸ ಆಲೋಚನಾ ಕ್ರಮವನ್ನು ಅನುಸರಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

     

  • IPL 2022: ಪ್ರೇಕ್ಷಕರಿಗೆ ಸ್ಟೇಡಿಯಂ ಪ್ರವೇಶಿಸಲು ಅನುಮತಿ – ಷರತ್ತುಗಳು ಅನ್ವಯ

    IPL 2022: ಪ್ರೇಕ್ಷಕರಿಗೆ ಸ್ಟೇಡಿಯಂ ಪ್ರವೇಶಿಸಲು ಅನುಮತಿ – ಷರತ್ತುಗಳು ಅನ್ವಯ

    ಮುಂಬೈ: 15ನೇ ಆವೃತ್ತಿಯ ಐಪಿಎಲ್ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಈ ನಡುವೆ ಈ ಬಾರಿಯ ಐಪಿಎಲ್ ವೀಕ್ಷಿಸಲು ಪ್ರೇಕ್ಷಕರಿಗೆ ಅವಕಾಶ ಮಾಡಿಕೊಡಲಾಗಿದೆ.

    ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಐಪಿಎಲ್ ಆಡಳಿತ ಮಂಡಳಿ, 15ನೇ ಆವೃತ್ತಿ ಐಪಿಎಲ್‍ನ್ನು ಸ್ಟೇಡಿಯಂಗೆ ಬಂದು ವೀಕ್ಷಿಸಲು 25% ಪ್ರೇಕ್ಷಕರಿಗೆ ಅವಕಾಶ ಕಲ್ಪಿಸಿಕೊಡಲಾಗಿದೆ. ಕೊರೊನಾ ನಿಯಮವನ್ನು ಗಮನದಲ್ಲಿಟ್ಟುಕೊಂಡು 25% ಪ್ರೇಕ್ಷಕರಿಗೆ ಅವಕಾಶ ನೀಡಲು ನಿರ್ಧರಿಸಲಾಗಿದೆ. ಆದರೆ ಸ್ಟೇಡಿಯಂಗೆ ಆಗಮಿಸುವ ಪ್ರೇಕ್ಷಕರು ಕೊರೊನಾ ನಿಯಮಗಳಾದ ಸಾಮಾಜಿಕ ಅಂತರ, ಮಾಸ್ಕ್‌ಗಳನ್ನು  ಕಡ್ಡಾಯವಾಗಿ ಧರಿಸಬೇಕೆಂದು ಸ್ಪಷ್ಟಪಡಿಸಿದೆ. ಇದನ್ನೂ ಓದಿ: 25ರ ಹರೆಯದಲ್ಲೇ ಟೆನ್ನಿಸ್‍ಗೆ ವಿದಾಯ ಘೋಷಿಸಿದ ವಿಶ್ವ ನಂಬರ್ 1 ಆಟಗಾರ್ತಿ ಆಶ್ ಬಾರ್ಟಿ

    15ನೇ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರನ್ನರ್‌ಅಪ್ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ವಾಂಖೆಡೆ ಸ್ಟೇಡಿಯಂನಲ್ಲಿ ಮುಖಾಮುಖಿಯಾಗಲಿದೆ. ಈ ಪಂದ್ಯದಿಂದಲೇ 25% ಪ್ರೇಕ್ಷಕರಿಗೆ ಅವಕಾಶ ನೀಡಲು ತೀರ್ಮಾನಿಸಲಾಗಿದೆ. ಮುಂಬೈ ನಗರದಲ್ಲಿರುವ ವಾಂಖೆಡೆ ಸ್ಟೇಡಿಯಂ, ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಒಟ್ಟು 20 ಲೀಗ್ ಪಂದ್ಯಗಳು ನಡೆಯಲಿದೆ. ಪುಣೆಯ ಎಮ್‍ಸಿಎ ಅಂತಾರಾಷ್ಟ್ರೀಯ ಸ್ಟೇಡಿಯಂ ಮತ್ತು ಬ್ರಬೋರ್ನ್ ಕ್ರೀಡಾಂಗಣದಲ್ಲಿ 15 ಪಂದ್ಯ ನಡೆಯಲಿದೆ. ಎಲ್ಲಾ ತಂಡಗಳು ತಲಾ 4 ಪಂದ್ಯಗಳನ್ನು ವಾಂಖೆಡೆ ಮತ್ತು ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ಆಡಲಿದ್ದು, ತಲಾ 3 ಪಂದ್ಯಗಳನ್ನು ಬ್ರಬೋರ್ನ್ ಮತ್ತು ಎಮ್‍ಸಿಎ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ಆಡಲಿದೆ. ಇದನ್ನೂ ಓದಿ: ಐಪಿಎಲ್‍ನಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿ

    ಐಪಿಎಲ್ ಮಾರ್ಚ್ 26 ರಂದು ಆರಂಭವಾಗಿ ಮೇ 29ಕ್ಕೆ ಕೊನೆಗೊಳ್ಳಲಿದೆ. ಒಟ್ಟು 65 ದಿನಗಳ ಕಾಲ ಟೂರ್ನಿ ನಡೆಯಲಿದೆ.

     

  • ಐಪಿಎಲ್ ನಿಯಮಿತ ಪ್ರೇಕ್ಷಕರಿಗೆ ಗ್ಯಾಲರಿ ಪ್ರವೇಶ ಪಡೆಯಲು ಅನುಮತಿ

    ಐಪಿಎಲ್ ನಿಯಮಿತ ಪ್ರೇಕ್ಷಕರಿಗೆ ಗ್ಯಾಲರಿ ಪ್ರವೇಶ ಪಡೆಯಲು ಅನುಮತಿ

    ದುಬೈ: ಸೆಪ್ಟೆಂಬರ್ 19ರಿಂದ ಆರಂಭವಾಗಲಿರುವ ಸೆಕೆಂಡ್ ಇನ್ನಿಂಗ್ಸ್ ಐಪಿಎಲ್ ಆರಂಭಕ್ಕೂ ಮೊದಲು ದುಬೈ ಕ್ರಿಕೆಟ್ ಮಂಡಳಿ ಪ್ರೇಕ್ಷಕರಿಗೆ ಸಿಹಿ ಸುದ್ದಿ ನೀಡಿದೆ. ನಿಯಮಿತ ಪ್ರೇಕ್ಷಕರಿಗೆ ಸ್ಟೇಡಿಯಂ ಪ್ರವೇಶಕ್ಕೆ ಅನುಮತಿ ನೀಡಿದೆ.

    ಕೊರೊನಾದಿಂದಾಗಿ ಐಪಿಎಲ್ ವೀಕ್ಷಣೆಗೆ ಪ್ರೇಕ್ಷಕರ ಗ್ಯಾಲರಿ ಪ್ರವೇಶ ನಿಷೇಧಿಸಲಾಗಿತ್ತು. ಆದರೆ ಇದೀಗ ಯುಎಇನಲ್ಲಿ ನಡೆಯುತ್ತಿರುವ 14ನೇ ಆವೃತ್ತಿಯ ದ್ವಿತೀಯ ಚರಣದ ಪಂದ್ಯಗಳಿಗೆ ಸೀಮಿತ ಪ್ರೇಕ್ಷಕರಿಗೆ ಅವಕಾಶ ಕಲ್ಪಿಸಿಕೊಡಲು ಐಪಿಎಲ್ ಆಯೋಜಕ ಮಂಡಳಿ ನಿರ್ಧರಿಸಿದೆ. ಇದನ್ನೂ ಓದಿ: ಅಂತರಾಷ್ಟ್ರೀಯ ಕ್ರಿಕೆಟ್‍ನಲ್ಲಿ ಫೀಲ್ಡಿಂಗ್ ಮಾಡಿದ ಶ್ವಾನಕ್ಕೆ ಐಸಿಸಿ ಪುರಸ್ಕಾರ..!

    ಯುಎಇನ ದುಬೈ, ಶಾರ್ಜಾ ಮತ್ತು ಅಬುಧಾಬಿ ಮೈದಾನಗಳಲ್ಲಿ ಪಂದ್ಯಗಳು ನಡೆಯಲಿದ್ದು, ಈ ಎಲ್ಲಾ ಸ್ಟೇಡಿಯಂಗಳಿಗೆ ಪ್ರೇಕ್ಷರಿಗೆ ಪ್ರವೇಶ ಕಲ್ಪಿಸಿಕೊಡುವ ನಿರೀಕ್ಷೆ ಇದೆ. ಆದರೆ ಎಷ್ಟು ಪ್ರಮಾಣದಲ್ಲಿ ಅವಕಾಶ ಎಂಬುದು ಇನ್ನೂ ಕೂಡ ಸಂಘಟಕರು ಸ್ಪಷ್ಟಪಡಿಸಿಲ್ಲ. ಆದರೆ ಸೆಪ್ಟೆಂಬರ್ 16ರಿಂದ ಆನ್‍ಲೈನ್‍ನಲ್ಲಿ ಟಿಕೆಟ್ ಮಾರಾಟ ಆರಂಭವಾಗಲಿದೆ ಎಂದು ತಿಳಿಸಿದೆ. ಇದನ್ನೂ ಓದಿ: ಎಬಿಡಿ ಸಿಡಿಲಬ್ಬರದ ಶತಕಕ್ಕೆ ಬೆಚ್ಚಿಬಿದ್ದ ಆರ್​ಸಿಬಿ ಬೌಲರ್ಸ್