Tag: ಸ್ಟೈಸ್ ಜೆಟ್

  • ಹಕ್ಕಿ ಡಿಕ್ಕಿಯಾಗಿ 185 ಮಂದಿ ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ!

    ಹಕ್ಕಿ ಡಿಕ್ಕಿಯಾಗಿ 185 ಮಂದಿ ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ!

    ಪಾಟ್ನಾ: ಸುಮಾರು 185 ಮಂದಿ ಪ್ರಯಾಣಿಕರಿದ್ದ ಸ್ಪೈಸ್ ಜೆಟ್ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪಾಟ್ನಾ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶಗೊಂಡ ಘಟನೆ ಇಂದು ನಡೆದಿದೆ.

    ವಿಮಾನ ದೆಹಲಿಗೆ ಹೊರಟಿತ್ತು. ಆದರೆ ಟೇಕಾಫ್ ಆಗುತ್ತಿದ್ದಂತೆಯೇ ಎಡ ಬದಿಯ ಎಂಜಿನ್‍ಗೆ ಹಕ್ಕಿ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ವಿಮಾನ ಟೇಕಾಫ್ ಆಗುತ್ತಿರುವುದನ್ನು ಸ್ಥಲೀಯರು ವೀಡಿಯೋ ಮಾಡಿದ್ದರು. ಈ ವೇಳೆ ಬೆಂಕಿ ಕಾಣಿಸಿರುವುದು ಬೆಳಕಿಗೆ ಬಂದಿದೆ. ಕೂಡಲೆ ವಿಮಾನವು ನಿಲ್ದಾಣಕ್ಕೆ ಹಿಂದಿರುಗಿದ್ದು, ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಇಳಿಸಲಾಗಿದೆ. ಟೇಕ್-ಆಫ್ ಸಮಯದಲ್ಲಿ ಹಕ್ಕಿಗೆ ಪೆಟ್ಟಾಗಿದೆ ಎಂದು ಪೈಲಟ್‍ಗಳು ಶಂಕಿಸಿದ್ದಾರೆ ಎಂದು ವಿಮಾನಯಾನ ನಿಯಂತ್ರಕ ಡಿಜಿಸಿಎ ಮೂಲಗಳು ತಿಳಿಸಿವೆ.

    ಘಟನೆ ಬಗ್ಗೆ ಪ್ರಯಾಣಿಕರು ಪ್ರತಿಕ್ರಿಯಿಸಿ, ವಿಮಾನ ಟೇಕ್-ಆಫ್ ಆದ ಕೂಡಲೇ ಅದರೊಳಗಿದ್ದ ನಮಗೆ ಭಯ ಆರಂಭವಾಯಿತು. ಅಲ್ಲದೆ ಲೈಟ್ ಗಳು ಆಫ್ ಆಗುತ್ತಿದ್ದಂತೆಯೇ ಆದ ಭಯ ಅಷ್ಟಿಷ್ಟಲ್ಲ ಎಂದು ಹೇಳಿದರು.

    ಈ ಸಂಬಂಧ ಪಾಟ್ನಾ ಡಿಎಂ ಚಂದ್ರಶೇಖರ್ ಸಿಂಗ್ ಮಾತನಾಡಿ, ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿರುವುದನ್ನು ಸ್ಥಳೀಯರು ಮೊದಲು ಗಮನಿಸಿದ್ದಾರೆ. ನಂತರ ಅವರು ಜಿಲ್ಲಾ ಮತ್ತು ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ದೆಹಲಿಗೆ ಹೊರಟಿದ್ದ ವಿಮಾನವು ಪಾಟ್ನಾ ವಿಮಾನ ನಿಲ್ದಾಣಕ್ಕೆ ಮರಳಿತು. ಎಲ್ಲಾ 185 ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಗಿದೆ ಎಂದು ಮಾಹಿತಿ ನಿಡಿದರು.

    ಸ್ಪೈಸ್ ಜೆಟ್ ಪ್ರಯಾಣಿಕರಿಗೆ ಪರ್ಯಾಯ ವಿಮಾನ ವ್ಯವಸ್ಥೆ ಮಾಡಿದೆ ಎಂದು ಪಾಟ್ನಾ ವಿಮಾನ ನಿಲ್ದಾಣದ ನಿರ್ದೇಶಕರು ತಿಳಿಸಿದ್ದಾರೆ. ಯಾವ ಪ್ರಯಾಣಿಕರಿಗೆ ಹಾನಿಯಾಗಿಲ್ಲ. ದೆಹಲಿಗೆ ಅವರ ಪ್ರಯಾಣವನ್ನು ಪರ್ಯಾಯ ವಿಮಾನದ ಮೂಲಕ ವ್ಯವಸ್ಥೆಗೊಳಿಸಲಾಗುತ್ತಿದೆ. ಬೆಂಕಿಗೆ ಕಾರಣವೇನು ಎಂಬುದು ತನಿಖೆಯ ವಿಷಯವಾಗಿದೆ ಎಂದು ಅವರು ಹೇಳಿದರು.

    Live Tv