Tag: ಸ್ಟೋರಿ

  • ‘ಯುವ’ ಸಿನಿಮಾದ ಸ್ಟೋರಿ ಏನು?: ಗುಟ್ಟು ಬಿಚ್ಚಿಟ್ಟ ನಿರ್ದೇಶಕ

    ‘ಯುವ’ ಸಿನಿಮಾದ ಸ್ಟೋರಿ ಏನು?: ಗುಟ್ಟು ಬಿಚ್ಚಿಟ್ಟ ನಿರ್ದೇಶಕ

    ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಲ್ಲಿ ಮೂಡಿ ಬಂದಿರುವ ಯುವ ಸಿನಿಮಾದ ಕಥೆ (Story) ಏನು ಎನ್ನುವುದಕ್ಕೆ ಸಂಕ್ಷಿಪ್ತವಾಗಿ ಉತ್ತರಿಸಿದ್ದಾರೆ ನಿರ್ದೇಶಕ ಸಂತೋಷ್ ಆನಂದ್ ರಾಮ್. ತಂದೆ ಮಗನ ಸೆಂಟಿಮೆಂಟ್ ಜೊತೆಗೆ ಮಧ್ಯಮ ವರ್ಗದ ಕುಟುಂಬದ ಕಥೆಯು ಸಿನಿಮಾದಲ್ಲಿದೆಯಂತೆ. ಅದನ್ನು ಎಲ್ಲ ಜನರಿಗೂ ಮನ ಮುಟ್ಟುವಂತೆ ಹೇಳಿರುವುದಾಗಿ ಅವರು ಹೇಳಿದರು.

    ಈ ನಡುವೆ ಯುವರಾಜ್ ಕುಮಾರ್ (Yuvraj Kumar) ಮುಖ್ಯ ಭೂಮಿಕೆಯಲ್ಲಿ ಮೂಡಿ ಬಂದಿರುವ ಯುವ (Yuva) ಚಿತ್ರದ ಮತ್ತೊಂದು ಹಾಡು ನಿನ್ನೆ ಬಿಡುಗಡೆ ಆಗಿದೆ. ‘ಅಪ್ಪುಗೆ’ (Appuge) ಹೆಸರಿನಲ್ಲಿ ಮೂಡಿ ಬಂದಿರುವ ಈ ಹಾಡಿನ ಲಿರಿಕಲ್ ವಿಡಿಯೋವನ್ನು ಪುನೀತ್ ರಾಜ್ ಕುಮಾರ್ ಪುತ್ರಿ ವಂದಿತಾ ಬಿಡುಗಡೆ ಮಾಡಿದ್ದಾರೆ.

    ಅಪ್ಪುಗೆ ಮೇಲೆ ಚಿತ್ರಿತವಾದ ವಿಶೇಷ ಹಾಡು ಇದಾಗಿದ್ದು, ಸಂತೋಶ್ ಆನಂದ್ ರಾಮ್ (Santhosh Anand Ram) ನಿರ್ದೇಶನದಲ್ಲಿ, ಹೊಂಬಾಳೆ ಫಿಲಂಸ್ ನಲ್ಲಿ ಬ್ಯಾನರ್ ಅಡಿ ವಿಜಯ್ ಕಿರಗಂದೂರ್ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ.  ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಸಮಾರಂಭದಲ್ಲಿ ಈ ಹಾಡು ಬಿಡುಗಡೆ ಆಗಿದೆ.

    ಲಿರಿಕಲ್ ವಿಡಿಯೋ ಬಿಡುಗಡೆ ಕಾರ್ಯಕ್ರಮದಲ್ಲಿ ನಟ ಯುವರಾಜ್, ನಿರ್ದೇಶಕ ಸಂತೋಷ್ ಆನಂದ್ ರಾಮ್, ಅಪ್ಪು ಮಗಳು ವಂದಿತಾ (Vandita) ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ತಂದೆ ಮಗನ ಬಾಂಧ್ಯವದ ಹಾಡು ಇದಾಗಿದ್ದು, ಯುವ ಸಿನಿಮಾದ ಬಹುಮುಖ್ಯ ಘಟ್ಟದಲ್ಲಿ ಹಾಡು ಇರಲಿದೆ. ಈ ಹಾಡನ್ನು ಬಿಡುಗಡೆ ಮಾಡಿದ ವಂದಿತಾಗೆ ಚಿತ್ರತಂಡದಿಂದ ಅಪ್ಪು ಫೋಟೋ ಉಡುಗೊರೆಯಾಗಿ ನೀಡಲಾಯಿತು. ಅಪ್ಪನ ಫೋಟೋ ನೋಡಿ ವಂದಿತಾ ಭಾವುಕರಾದರು.

     

    ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆಯಲ್ಲಿ ಈ ಹಾಡು ಮೂಡಿ ಬಂದಿತ್ತು, ವಿಜಯ್ ಪ್ರಕಾಶ್ ಗೀತೆಗೆ ಧ್ವನಿಯಾಗಿದ್ದಾರೆ. ಈ ಹಾಡಿನ ಸಾಹಿತ್ಯ ಸಂತೋಷ್ ಆನಂದ್ ರಾವ್ ಅವರ ಬರವಣಿಗೆಯಲ್ಲಿ ಮೂಡಿ ಬಂದಿದೆ.

  • ‘ಸಲಾರ್’ ಕಥೆ ಏನು?: ರಹಸ್ಯ ಬಿಚ್ಚಿಟ್ಟ ಪ್ರಶಾಂತ್ ನೀಲ್

    ‘ಸಲಾರ್’ ಕಥೆ ಏನು?: ರಹಸ್ಯ ಬಿಚ್ಚಿಟ್ಟ ಪ್ರಶಾಂತ್ ನೀಲ್

    ಭಾರತೀಯ ಸಿನಿಮಾ ರಂಗದಲ್ಲಿ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಸಲಾರ್ ಸಿನಿಮಾದ ಕಥೆಯ (Story) ಬಗ್ಗೆ ಸಾಕಷ್ಟು ಚರ್ಚೆ ನಡೆದಿತ್ತು. ಪ್ರಶಾಂತ್ ನೀಲ್ (Prashant Neel) ಈ ಹಿಂದೆ ಕನ್ನಡದಲ್ಲಿ ಮಾಡಿದ್ದ ಉಗ್ರಂ ಸಿನಿಮಾವನ್ನೇ ಕೊಂಚ ಬದಲಿಸಿಕೊಂಡು ಚಿತ್ರ ಮಾಡಿದ್ದಾರೆ ಎಂದು ಹೇಳಲಾಗಿತ್ತು. ಈ ಕುರಿತಂತೆ ಪ್ರಶಾಂತ್ ನೀಲ್ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಇದೇ ಮೊದಲ ಬಾರಿಗೆ ಕಥೆಯ ಬಗ್ಗೆ ಪ್ರಶಾಂತ್ ಮಾತನಾಡಿದ್ದಾರೆ.

    ಇದು ರಿಮೇಕ್ ಸಿನಿಮಾವಲ್ಲ ಎಂದು ಸ್ಪಷ್ಟ ಪಡಿಸಿದರುವ ಅವರು, ಸ್ನೇಹಿತರಿಬ್ಬರು ದೊಡ್ಡ ಶತ್ರುಗಳಾಗಿ ಬದಲಾಗುವ ಕಥೆಯನ್ನು ಸಿನಿಮಾದಲ್ಲಿ ತೋರಿಸಲಾಗುತ್ತಿದೆ ಎಂದಿದ್ದಾರೆ. ಈ ಇಬ್ಬರ ಜರ್ನಿಯನ್ನು ಎರಡು ಭಾಗವಾಗಿ ತೋರಿಸಲಾಗುವುದು ಎಂದು ಇದೇ ಮೊದಲ ಬಾರಿಗೆ ಕಥೆಯ ಬಗ್ಗೆ ಬಾಯ್ಬಿಟ್ಟಿದ್ದಾರೆ.

    ಪ್ರಿರಿಲೀಸ್ ಇವೆಂಟ್ ಮಾಡಲ್ಲ

    ಸದ್ಯ ಚಿತ್ರೋದ್ಯಮದಲ್ಲಿ ಇವೆಂಟ್ ಟ್ರೆಂಡ್ ಹೆಚ್ಚಾಗಿದೆ. ಪೋಸ್ಟ್ ರಿಲೀಸ್ ಇವೆಂಟ್, ಪ್ರಿರಿಲೀಸ್ (Event) ಇವೆಂಟ್ ಹೀಗೆ ಜನರನ್ನು ಸೇರಿಸುವುದಕ್ಕಾಗಿ ನಾನಾ ರೀತಿಯ ಕಸರತ್ತುಗಳನ್ನು ಮಾಡಲಾಗುತ್ತದೆ. ಇಂಥದ್ದೊಂದು ಯಾವುದೇ ಇವೆಂಟ್ ಸಲಾರ್ ಚಿತ್ರಕ್ಕಾಗಿ ಮಾಡುತ್ತಿಲ್ಲ ಎನ್ನುವ ವಿಷಯ ಗಾಂಧಿನಗರದಲ್ಲಿ ಓಡಾಡುತ್ತಿದೆ. ಯಾವುದೇ ಇವೆಂಟ್ ಮಾಡದೇ, ಟ್ರೈಲರ್ ಬಿಡುಗಡೆ ನಂತರ ನೇರವಾಗಿ ಸಿನಿಮಾ ರಿಲೀಸ್ ಮಾಡಲು ಮುಂದಾಗಿದೆಯಂತೆ ಹೊಂಬಾಳೆ ಸಂಸ್ಥೆ.

    ಸಲಾರ್ ಪ್ರಭಾಸ್ (Prabhas) ಸಿನಿಮಾ ಅನ್ನೋದಕ್ಕಿಂತ ಹೆಚ್ಚಾಗಿ ಇದು ಕೆಜಿಎಫ್ (KGF) ನಿರ್ದೇಶಕನ ಸಿನಿಮಾ ಎನ್ನುವ ನಿರೀಕ್ಷೆ. ಕೆಜಿಎಫ್ ಅನ್ನೋ ದೃಶ್ಯಕಾವ್ಯ ಕೊಟ್ಟು ಸಿನಿಮಾ ಮೇಕಿಂಗ್ ಸ್ಟೈಲ್‌ಗೆ ಹೊಸ ಭಾಷ್ಯ ಬರೆದ ನಿರ್ದೇಶಕನ ಇನ್ನೊಂದು ಸಿನಿಮಾ ಕೊನೆಗೂ ಬರ್ತಿದೆ. ಕೆಜಿಎಫ್ ಹೇಗೆ ವಿಶ್ವದಗಲ ಬಾಹು ಹಸ್ತ ಚಾಚಿತ್ತೋ ಅದಕ್ಕಿಂತ ಹೆಚ್ಚಾಗಿ ಸಲಾರ್ ಅಜಾನುಬಾಹುವಾಗಿ ಹೊರಹೊಮ್ಮಲಿದೆ. ಹೊಂಬಾಳೆ ಸಂಸ್ಥೆ ಈಗಿನಿಂದಲೇ ಸಕಲ ಸಿದ್ಧತೆ ಮಾಡಿಕೊಂಡ ಪರಿಣಾಮ ಅಮೆರಿಕಾದಲ್ಲೂ ಮುಂಗಡ ಟಿಕೆಟ್ ಬುಕಿಂಗ್ ನಡೆಯುತ್ತಿದೆ.

    ಸಲಾರ್ (Salaar) ಮೇಲಿನ ನಿರೀಕ್ಷೆ ಎಷ್ಟಿದೆ ಅಂದ್ರೆ ಈಗಾಗಲೇ ಅಮೆರಿಕಾದಲ್ಲಿ ಈಗಾಗಲೇ ಲಕ್ಷ ಡಾಲರ್ ಕಲೆಕ್ಷನ್ ಟಿಕೆಟ್‌ನಿಂದ ಬಂದಿದೆ. ಅದ್ಹೇಗೆ ಅನ್ನೋದು ನಿಮ್ಮ ಅನುಮಾನವೇ? ಅನೇಕ ದೇಶಗಳಲ್ಲಿ ಸಲಾರ್ ಅಡ್ವಾನ್ಸ್ ಬುಕಿಂಗ್ ಓಪನ್ ಆಗಿದೆ. ಅಮೆರಿಕಾ ಸಮೇತ. ಅದರಲ್ಲೂ ನಾರ್ಥ್ ಅಮೆರಿಕಾದಲ್ಲಿ ಹೆಚ್ಚಿನ ಭಾರತೀಯರಿದ್ದಾರೆ. ಆ ಭಾಗದಲ್ಲಿ ಪ್ರಭಾಸ್ ಹಾಗೂ ಪ್ರಶಾಂತ್ ನೀಲ್ ಕಾಂಬಿನೇಷನ್ ಚಿತ್ರವನ್ನ ನೋಡುವ ಕುತೂಹಲ. ಇದೇ ಕಾರಣಕ್ಕೆ ಸಲಾರ್ ತಿಂಗಳಿಗೂ ಅಡ್ವಾನ್ಸ್ ಬುಕಿಂಗ್ ಸ್ಟಾರ್ಟ್ ಆಗಿದ್ದು ಮೊದಲ ದಿನವೇ ಲಕ್ಷ ಡಾಲರ್ ಮೊತ್ತದ ಟಿಕೆಟ್ ಸೇಲ್ ಆಗಿದೆ.

     

    ಅಂದಹಾಗೆ ಸರಿಯಾಗಿ ಸಲಾರ್ ತೆರಗಪ್ಪಳಿಸೋದನ್ನ ನೋಡಲು ಇನ್ನೊಂದು ತಿಂಗಳಷ್ಟೇ ಬಾಕಿ ಇದೆ. ಡಿಸೆಂಬರ್ 1 ಟ್ರೈಲರ್ ರಿಲೀಸ್. ಬಳಿಕ ಪ್ರಭಾಸ್ ಅಖಾಡಕ್ಕಿಳಿಯುತ್ತಾರೆ. ಪ್ರಶಾಂತ್ ನೀಲ್ ಹಗಲು ರಾತ್ರಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ನಿರತಗಾಗಿದ್ದಾರೆ. ಹೊಂಬಾಳೆ ಈ ಚಿತ್ರವನ್ನ ವಿಶ್ವವ್ಯಾಪಿ ಏಕಕಾಲದಲ್ಲಿ 5 ಸಾವಿರಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ರಿಲೀಸ್ ಮಾಡಲು ಪ್ಲ್ಯಾನ್ ಮಾಡಿಕೊಂಡಿದೆ. ಬೆನ್ನುಮೂಳೆ ಸಮಸ್ಯೆಯಿಂದಾಗಿ ಪ್ರಭಾಸ್ ಟ್ರೀಟ್‌ಮೆಂಟ್ ಪಡೆದು ವಿಶ್ರಾಂತಿಯಲ್ಲಿದ್ದಾರೆ. ಟ್ರೈಲರ್ ರಿಲೀಸ್ ಆದ ಬಳಿಕವೇ ಪ್ರಚಾರದ ಅಖಾಡಕ್ಕೆ ಎಂಟ್ರಿ ಕೊಡ್ತಾರೆ ಪ್ರಭಾಸ್. ಸೋ.. ಇದಿಷ್ಟು ಸಲಾರ್ ಅಖಾಡದ ಬಿಸಿ ಬಿಸಿ ಸುದ್ದಿ.

  • ಕಾಡು ಜನರ ಪಾತ್ರದಲ್ಲಿ ಶಿವರಾಜ್ ಕುಮಾರ್ : ಕ್ಯಾಪ್ಟನ್ ಮಿಲ್ಲರ್ ಸ್ಟೋರಿ ರೋಚಕ

    ಕಾಡು ಜನರ ಪಾತ್ರದಲ್ಲಿ ಶಿವರಾಜ್ ಕುಮಾರ್ : ಕ್ಯಾಪ್ಟನ್ ಮಿಲ್ಲರ್ ಸ್ಟೋರಿ ರೋಚಕ

    ನ್ನಡದ ಹೆಸರಾಂತ ನಟ ಶಿವರಾಜ್ ಕುಮಾರ್ (Shivraj Kumar) ಏಕಕಾಲಕ್ಕೆ ತಮಿಳಿನ ಎರಡು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಒಂದು ಸಿನಿಮಾದಲ್ಲಿ ರಜನಿಕಾಂತ್ ನಾಯಕನಾದರೆ ಮತ್ತೊಂದು ಸಿನಿಮಾದಲ್ಲಿ ರಜನಿ ಅಳಿಯ ಧನುಷ್ (Dhanush) ನಾಯಕ. ಈ ಎರಡೂ ಚಿತ್ರಗಳು ಶೂಟಿಂಗ್ ನಡೆಯುತ್ತಿದ್ದು, ಎರಡಲ್ಲೂ ಶಿವಣ್ಣ ಪಾಲ್ಗೊಂಡಿದ್ದಾರೆ.

    ರಜನಿಕಾಂತ್ ನಟನೆಯ ಜೈಲರ್ ಸಿನಿಮಾದಲ್ಲಿ ಶಿವರಾಜ್ ಕುಮಾರ್ ವಿಶೇಷ ಪಾತ್ರ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ,  ಪಾತ್ರ ಯಾವುದು, ಹಿನ್ನೆಲೆ ಏನು ಎನ್ನುವ ವಿಚಾರ ಈವರೆಗೂ ಚಿತ್ರತಂಡ ಬಿಟ್ಟು ಕೊಟ್ಟಿಲ್ಲ. ಸ್ವತಃ ಶಿವರಾಜ್ ಕುಮಾರ್ ಕೂಡ ಈತನಕ ಹೇಳಿಕೊಂಡಿಲ್ಲ. ಪಾತ್ರ ಮತ್ತು ಕಥೆಯ ಬಗ್ಗೆ ಗೌಪ್ಯತೆ ಕಾಪಾಡಿಕೊಂಡು ಬರಲಾಗುತ್ತಿದೆ. ಇದನ್ನೂ ಓದಿ: ದತ್ತಣ್ಣ ಮದುವೆ ಆಗಲಿಲ್ಲ ಏಕೆ? ಗೆಳೆಯರು ಬಿಚ್ಚಿಟ್ಟ ರಹಸ್ಯ

    ಆದರೆ, ಆಕಸ್ಮಿಕ ಎನ್ನುವಂತೆ ಧನುಷ್ ಜೊತೆ ಮಾಡುತ್ತಿದ್ದ ಕ್ಯಾಪ್ಟನ್ ಮಿಲ್ಲರ್ (Captain Miller) ಸಿನಿಮಾದ ಕೆಲವು ವಿಷಯಗಳು ಸೋರಿಕೆಯಾಗಿವೆ. ಅಂದರೆ, ಶಿವರಾಜ್ ಕುಮಾರ್ ಅವರಿಗೆ ಕೇಶವಿನ್ಯಾಸ ಮಾಡುತ್ತಿರುವ ರಾಜು ಎನ್ನುವವರು ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಪಾತ್ರ ಮತ್ತು ಸಿನಿಮಾದ ಕಥೆಯನ್ನೂ ಅವರು ಬಿಟ್ಟುಕೊಟ್ಟಿದ್ದಾರೆ.

    ಕಾಡು ಜನರು ಮತ್ತು ಬ್ರಿಟಿಷ್ ರ ನಡುವಿನ ಹೋರಾಟದ ಕಥೆಯನ್ನು ಕ್ಯಾಪ್ಟನ್ ಮಿಲ್ಲರ್ ನಲ್ಲಿ ಹೇಳುತ್ತಿದ್ದಾರಂತೆ ನಿರ್ದೇಶಕರು. ಈ ಸಿನಿಮಾದಲ್ಲಿ ಕಾಡು ಜನರ ಪಾತ್ರದಲ್ಲಿ ಶಿವಣ್ಣ ಮತ್ತು ಧನುಷ್ ಕಾಣಿಸಿಕೊಂಡಿದ್ದಾರೆ. ಅದರಲ್ಲೂ ಧನುಷ್ ಅಣ್ಣನ ಪಾತ್ರದಲ್ಲಿ ಶಿವರಾಜ್ ಕುಮಾರ್ ನಟಿಸಿದ್ದಾರಂತೆ.

  • ತೆರಿಗೆ ಕಟ್ಟಲು ಆಗ್ತಿಲ್ಲ – ಅಳಲು ತೋಡಿಕೊಂಡ ಕಂಗನಾ

    ತೆರಿಗೆ ಕಟ್ಟಲು ಆಗ್ತಿಲ್ಲ – ಅಳಲು ತೋಡಿಕೊಂಡ ಕಂಗನಾ

    ಮುಂಬೈ: ಬಾಲಿವುಡ್ ನಟಿ ಕಂಗನಾ ರಣಾವತ್‍ರವರು ತೆರಿಗೆ ಕಟ್ಟಲು ಆಗುತ್ತಿಲ್ಲ ಎಂದು ಸೋಶಿಯಲ್ ಮೀಡಿಯಾ ಮೂಲಕ ಹೇಳಿಕೊಂಡಿದ್ದಾರೆ.

    ಕೊರೊನಾ ವೈರಸ್ ತಡೆಗಟ್ಟಲು ಬಹುತೇಕ ರಾಜ್ಯಗಳಲ್ಲಿ ಲಾಕ್‍ಡೌನ್ ಘೋಷಿಸಿರುವುದರಿಂದ ಜನ ಜೀವನ ಅಸ್ತವ್ಯಸ್ತವಾಗಿದೆ. ಲಾಕ್‍ಡೌನ್ ಕೇವಲ ಜನ ಸಾಮಾನ್ಯರ ಮೇಲಷ್ಟೇ ಅಲ್ಲದೆ ಸೆಲೆಬ್ರೆಟಿಗಳ ಜೀವನದ ಮೇಲೂ ಹೊಡೆತ ಬಿದ್ದಿದೆ. ಅನೇಕ ಕಲಾವಿರು ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದಾರೆ.

    ಸದ್ಯ ಬಾಲಿವುಡ್ ನಟಿ ಕಂಗನಾ ರಣಾವತ್ ಸಾಲು ಸಾಲು ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದಾರೆ. ಒಂದು ಸಿನಿಮಾಗೆ ಏನಿಲ್ಲ ಅಂದರೂ ಕೋಟ್ಯಂತರ ರೂ. ಸಂಭಾವನೆ ಪಡೆಯುತ್ತಾರೆ. ಹೀಗಿದ್ದರೂ ಕಂಗನಾ ಕಳೆದ ವರ್ಷದ ತೆರಿಗೆಯಲ್ಲಿ ಅರ್ಧದಷ್ಟನ್ನು ಮಾತ್ರ ಪಾವತಿ ಮಾಡಿದ್ದು, ಈ ಬಾರಿ ನನಗೆ ತೆರಿಗೆ ಕಟ್ಟಲು ಸಾಧ್ಯವಾಗುತ್ತಿಲ್ಲ ಎಂದು ಸೋಶಿಯಲ್ ಮೀಡಿಯಾದಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನು ಓದಿ: ವಧು ಯಾಮಿಯನ್ನ ರಾಧೆ ಮಾಗೆ ಹೋಲಿಸಿದ ನಟ – ಚಪ್ಪಲಿ ಕೇಳಿದ ಕಂಗನಾ

    ಈ ಕುರಿತಂತೆ ನಟಿ ಕಂಗನಾ ರಣಾವತ್‍ರವರು ತಮ್ಮ ಇನ್ ಸ್ಟಾಗ್ರಾಮ್ ಖಾತೆಯ ಸ್ಟೋರಿಯಲ್ಲಿ, ನನ್ನ ಒಟ್ಟು ಆದಾಯದಲ್ಲಿ ಶೇ. 45ರಷ್ಟು ತೆರಿಗೆ ಪಾವತಿಸುತ್ತೇನೆ. ನಾನು ಅತೀ ಹೆಚ್ಚು ತೆರಿಗೆ ಪಾವತಿಸುವ ನಟಿಯಾಗಿದ್ದೇನೆ. ಆದರೆ ಕೆಲಸ ಇಲ್ಲದೆ, ಕಳೆದ ವರ್ಷ ಅರ್ಧದಷ್ಟು ತೆರಿಗೆಯನ್ನು ಪಾವತಿಸಿದ್ದೇನೆ. ಇದೀಗ ತೆರಿಗೆ ಪಾವತಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿದ್ದು, ನನ್ನ ಜೀವನದಲ್ಲಿ ಇದೇ ಮೊದಲ ಬಾರಿಗೆ ಎಂದಿದ್ದಾರೆ.

    ನಾನು ತೆರಿಗೆ ಪಾವತಿಸುವುದು ತಡ ಮಾಡಿದರೆ ಸರ್ಕಾರ ನನಗೆ ಬಡ್ಡಿ ವಿಧಿಸುತ್ತದೆ. ಇದನ್ನು ನಾನು ಸ್ವಾಗತಿಸುತ್ತೇನೆ. ಈ ಸಮಯ ನಮ್ಮೆಲ್ಲರಿಗೂ ಕಠಿಣವಾಗಿರಬಹುದು. ಆದರೆ ಎಲ್ಲರೂ ಒಂದಾದರೆ ಸಮಯಕ್ಕಿಂತ ಕಠಿಣವಾಗಬಹುದು ಎಂದು ಸ್ಟೋರಿಯಲ್ಲಿ ಬರೆದುಕೊಂಡಿದ್ದಾರೆ. ಇದನ್ನು ಓದಿ: ಕೊರೊನಾ ವೈರಸ್‍ನ್ನು ನಾನು ಹೊಡೆದೋಡಿಸಿದೆ: ಕಂಗನಾ