ಮೈಸೂರು: ನಾಡಹಬ್ಬ ಮೈಸೂರು ದಸರಾ (Mysuru Dasara) ಮೆರುಗು ಜೋರಾಗಿದ್ದು, ಜಂಬೂಸವಾರಿಗೆ ಕ್ಷಣಗಣನೆ ಶುರುವಾಗಿದೆ. ಇಂದು ಸಂಜೆ ನಡೆಯಲಿರುವ ಜಂಬೂಸವಾರಿ ಮೆರವಣಿಗೆಯಲ್ಲಿ 58 ಸ್ತಬ್ಧಚಿತ್ರ ಸೇರಿ 150ಕ್ಕೂ ಕಲಾತಂಡಗಳು ಭಾಗಿಯಾಗಲಿವೆ.
ಈ ಬಾರಿಯ ಜಂಬೂಸವಾರಿ ಮೆರವಣಿಗೆಯಲ್ಲಿ 58 ಟ್ಯಾಬ್ಲೋಗಳು ಸಾಗಲು ಸಿದ್ಧಗೊಂಡಿವೆ. 31 ಜಿಲ್ಲೆಗಳು ಹಾಗೂ ವಿವಿಧ ಇಲಾಖೆಗಳು ಸೇರಿದಂತೆ 58 ಟ್ಯಾಬ್ಲೋಗಳು ಅಂಬಾವಿಲಾಸ ಅರಮನೆಯ ಆವರಣದಲ್ಲಿ ಸಿದ್ಧಗೊಂಡಿವೆ. ಈ ಮೂಲಕ ತಮ್ಮ ಸ್ಥಳೀಯ ಕಲೆ, ಸಾಹಿತ್ಯ, ಸಂಸ್ಕೃತಿ ಹಾಗೂ ಯೋಜನೆಗಳು ಸೇರಿದಂತೆ ಹಲವು ಮಹತ್ವ ಸಾರಲಿವೆ.ಇದನ್ನೂ ಓದಿ: ಬನ್ನಿ ಮರಕ್ಕೆ ಪೂಜೆ ಸಲ್ಲಿಸಿದ ಯದುವೀರ್ ಒಡೆಯರ್
ಎಲ್ಲಾ ಸ್ತಬ್ಧಚಿತ್ರಗಳು ಮೈಸೂರು ಬಂಡಿಪಾಳ್ಯದ ಎಪಿಎಂಸಿ ಆವರಣದಲ್ಲಿ ಸಿದ್ಧವಾಗಿ ನಿಂತಿವೆ. ಜೊತೆಗೆ ಮೆರವಣಿಗೆಯಲ್ಲಿ 150ಕ್ಕೂ ಅಧಿಕ ಕಲಾತಂಡಗಳು ಪಾಲ್ಗೊಳ್ಳಲಿದ್ದು, ಜಂಬೂಸವಾರಿಯಲ್ಲಿ ಭಾಗಿಯಾಗಲು ಕಾತುರದಿಂದ ಕಾಯುತ್ತಿವೆ.
ಇನ್ನೂ ಜಂಬೂ ಸವಾರಿ ಹಿನ್ನೆಲೆ ಮೈಸೂರಿನಾದ್ಯಂತ ಬಿಗಿಭದ್ರತೆ ಮಾಡಿಕೊಳ್ಳಲಾಗಿದ್ದು, ವಿವಿಧ ಜಿಲ್ಲೆಗಳಿಂದ ಪೊಲೀಸ್ ಪಡೆ ಆಗಮಿಸಿದೆ. ನಗರದಾದ್ಯಂತ 9 ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದ್ದು, ಚಿತ್ರದುರ್ಗ, ಚಿಕ್ಕಮಗಳೂರು, ಕೊಪ್ಪಳ, ಬೆಳಗಾವಿಯಿಂದ ಗರುಡ ಪಡೆ, ಶ್ವಾನದಳ, ಬಾಂಬ್ ಸ್ಕ್ವಾಡ್ ಆಗಮಿಸಿದೆ. ಜೊತೆಗೆ ಜಂಬೂಸವಾರಿ ಸಾಗುವ ಮಾರ್ಗದ ಉದ್ದಕ್ಕೂ ಭಾರಿ ಬಿಗಿ ಬಂದೋಬಸ್ತ್ ಮಾಡಿಕೊಳ್ಳಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮಕೈಗೊಳ್ಳಲಾಗಿದ್ದು, ಅರಮನೆ ಸುತ್ತಮುತ್ತ ಹಾಗೂ ಅಂಬಾರಿ ಸಾಗುವ ಮಾರ್ಗದಲ್ಲಿ ಹೆಚ್ಚುವರಿ ಸಿಸಿಟಿವಿ ನಿಯೋಜನೆ ಮಾಡಲಾಗಿದೆ. ಬನ್ನಿಮಂಟಪ ಸೇರಿದಂತೆ ರಾಜಮಾರ್ಗಗಳಲ್ಲಿ ಪೊಲೀಸರು ಹದ್ದಿನ ಕಣ್ಣು ಇಟ್ಟಿದ್ದಾರೆ.ಇದನ್ನೂ ಓದಿ: ಹಿಂದೂಸ್ತಾನಿ ಶಾಸ್ತ್ರೀಯ ಗಾಯಕ, ಪದ್ಮವಿಭೂಷಣ ಪುರಸ್ಕೃತ ಪಂಡಿತ್ ಚನ್ನುಲಾಲ್ ಮಿಶ್ರಾ ನಿಧನ
ಮೈಸೂರು: ನಾಡಹಬ್ಬ ಮೈಸೂರು ದಸರಾ (Mysuru Dasara) ಸ್ತಬ್ಧಚಿತ್ರ ಪ್ರದರ್ಶನದಲ್ಲಿ ಮಂಡ್ಯ (Mandya) ಜಿಲ್ಲೆ ರಂಗನತಿಟ್ಟು ಪಕ್ಷಿಧಾಮ (Ranganathittu Bird Sanctuary) ಹಾಗೂ ಕೃಷ್ಣರಾಜಸಾಗರ ಆಣೆಕಟ್ಟು (KRS Dam) ಸ್ತಬ್ಧ ಚಿತ್ರಕ್ಕೆ ಪ್ರಥಮ ಸ್ಥಾನ ಸಿಕ್ಕಿದೆ.
ಕೃಷಿ ಪ್ರಧಾನ ಮಂಡ್ಯ ಜಿಲ್ಲೆಯ ಹಿರಿಮೆ ಮತ್ತು ಪ್ರತಿಷ್ಠೆಯಾದ ವಿಶ್ವವಿಖ್ಯಾತ ಕೆಆರ್‌ಎಸ್ ಜಲಾಶಯ ಹಾಗೂ ರಂಗನತಿಟ್ಟು ಪಕ್ಷಿಧಾಮದ ಪ್ರತಿರೂಪ ಮಾದರಿಯನ್ನು ಈ ಬಾರಿಯ ಮೈಸೂರು ದಸರಾ ಮೆರವಣಿಗೆಯಲ್ಲಿ ಪ್ರದರ್ಶನ ಮಾಡಲಾಗಿತ್ತು. ಕರ್ನಾಟಕದ ಪಕ್ಷಿಕಾಶಿ ಎಂದೇ ಹೆಸರುವಾಸಿಯಾಗಿರುವ ರಂಗನತಿಟ್ಟು ಪಕ್ಷಿಧಾಮ ಸ್ತಬ್ಧ ಚಿತ್ರ ಎಲ್ಲರ ಗಮನ ಸೆಳೆದಿತ್ತು. ಇದನ್ನೂ ಓದಿ: ದರ್ಶನ್, ಪವಿತ್ರಾಗೆ ನೋ ರಿಲೀಫ್ – ಕೋರ್ಟ್ ಜಾಮೀನು ನೀಡದ್ದು ಯಾಕೆ?
ಯಾವ ಜಿಲ್ಲೆಗೆ ಯಾವ ಪ್ರಶಸ್ತಿ? ಪ್ರಥಮ – ಮಂಡ್ಯ (ರಂಗನತಿಟ್ಟು ಪಕ್ಷಿಧಾಮ ಹಾಗೂ ಕೆಆರ್‌ಎಸ್ ಅಣೆಕಟ್ಟು) ದ್ವಿತೀಯ – ಧಾರವಾಡ (ಇಸ್ರೊ ಗಗನಯಾನದಲ್ಲಿ ಹಣ್ಣಿನ ನೊಣಗಳು) ತೃತೀಯ – ಚಾಮರಾಜನಗರ (ಸೋಲಿಗರ ಸೊಗಡು ಒಮ್ಮೆ ನೀ ಬಂದು ನೋಡು)
ಸಮಾಧಾನಕರ ಬಹುಮಾನ ಉಡುಪಿ – ಸಾಂಸ್ಕೃತಿಕ ವೈಭವ ಹಾಗೂ ಕರಾವಳಿಯ ಸೊಬಗು ಗದಗ – ಗ್ರಾಮಸಭೆ–ಹಳ್ಳಿಯ ವಿಧಾನಸಭೆ ಮೈಸೂರು -ಮಾನವ ಕುಲದ ಸಮಾನತೆ–ಧಾರ್ಮಿಕ ಬೆಳಕಿನಿಂದ ಸಾಂವಿಧಾನಿಕ ನ್ಯಾಯದವರೆಗೆ ಚಿಕ್ಕಮಗಳೂರು – ತೇಜಸ್ವಿ ವಿಸ್ಮಯ ಲೋಕ
ಇಲಾಖೆ, ನಿಗಮ ಹಾಗೂ ಮಂಡಳಿಗಳ ವಿಭಾಗ ಪ್ರಥಮ – ವಾರ್ತಾ ಇಲಾಖೆ (ವಿಶ್ವಗುರು ಬಸವಣ್ಣ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ) ದ್ವಿತೀಯ – ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ (ಗ್ರಾಮೀಣ ಜನರ ಆರೋಗ್ಯದಲ್ಲಿ ಸುಸ್ಥಿರತೆ ಸಾಧಿಸುವುದು) ತೃತೀಯ – ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (ಮೈಸೂರು ಸ್ಯಾಂಡಲ್‌ವುಡ್ ಸೋಪು ಕಿರು ಪರಿಚಯ)
ಸಮಾಧಾನಕರ ಬಹುಮಾನ
ಅರಣ್ಯ ವಸತಿ ಮತ್ತು ವಿಹಾರಧಾಮಗಳ ಸಂಸ್ಥೆ – ವನ್ಯಜೀವಿ ಸಂರಕ್ಷಣೆ ನಮ್ಮೆಲ್ಲರ ಹೊಣೆ
ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ- ಸ್ವಸ್ಥ ಮೆದುಳು:ಸ್ಪಷ್ಟ ಮಾತು
ಕಾರ್ಮಿಕ ಇಲಾಖೆ – ಕಾರ್ಮಿಕ ಹಿತರಕ್ಷಣೆ
ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತ – ನಿಗಮದ ಉತ್ಪನ್ನಗಳ ಮಾದರಿ
-ವಸ್ತು ಪ್ರದರ್ಶನ ಗ್ರೌಂಡ್‌ನಲ್ಲಿ ಟ್ಯಾಬ್ಲೋ ಇಡಲು ಸೂಚನೆ -ಸಿಎಂ ಸಿದ್ದರಾಮಯ್ಯ ಮನವಿಯಿಂದಲೂ ಆಗಿಲ್ಲ ಪ್ರಯೋಜನ
ಬೆಂಗಳೂರು: 75ನೇ ಗಣರಾಜ್ಯೋತ್ಸವದ (Republic Day) ಅಂಗವಾಗಿ ದೆಹಲಿಯಲ್ಲಿ ಪಥ ಸಂಚಲನ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಬಾರಿ ಪಥ ಸಂಚಲನದಲ್ಲಿ ಪಾಲ್ಗೊಳ್ಳಲು ಕರ್ನಾಟಕದ ಸ್ತಬ್ಧಚಿತ್ರಕ್ಕೆ (Karnataka Tableau) ಅವಕಾಶ ನಿರಾಕರಿಸಲಾಗಿದೆ.
ಕರ್ತವ್ಯ ಪಥದಲ್ಲಿ ನಡೆಯಲಿರುವ 2024ರ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕವನ್ನು ಸೇರಿಸಲಾಗಿಲ್ಲ. ಬದಲಾಗಿ ಟ್ಯಾಬ್ಲೋವನ್ನು ಕೆಂಪು ಕೋಟೆಯ ಭಾರತ್ ಪರ್ವ್ ವಿಭಾಗದಲ್ಲಿ ಇರಿಸಲಾಗಿದೆ. ಈ ಸಂಬಂಧ ಕೇಂದ್ರ ರಕ್ಷಣಾ ಇಲಾಖೆಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.
ಈ ಬಾರಿಯ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕ ಟ್ಯಾಬ್ಲೋಗೆ ಅವಕಾಶ ನೀಡದಿರುವ ನಿರ್ಧಾರವು ಕನ್ನಡಿಗರ ಭಾವನೆಗಳಿಗೆ ಧಕ್ಕೆ ತಂದಿದೆ. ಸ್ತಬ್ಧಚಿತ್ರವನ್ನು ಪರೇಡ್‌ನಿಂದ ಹೊರಗಿಟ್ಟಿರುವುದು ಕರ್ನಾಟಕದ ಜನತೆಗೆ ತೀವ್ರ ನಿರಾಶೆಯನ್ನುಂಟು ಮಾಡಿದೆ. ಏಳು ಕೋಟಿ ಕನ್ನಡಿಗರ ಭಾವನೆಗಳಿಗೆ ಧಕ್ಕೆಯಾಗದಂತೆ ನೋಡಿಕೊಳ್ಳಲು, 2024 ರ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಬ್ರಾಂಡ್ ಬೆಂಗಳೂರು ಸ್ತಬ್ದಚಿತ್ರ ಪ್ರದರ್ಶಿಸಲು ಅನುವು ಮಾಡಿಕೊಡಬೇಕು ಎಂದು ಸಿಎಂ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಸ್ತಬ್ಧಚಿತ್ರ ರಾಜಕಾರಣ ಸಿಎಂಗೆ ಶೋಭೆ ತರಲ್ಲ: ಪ್ರಹ್ಲಾದ್ ಜೋಶಿ
ಬೆಂಗಳೂರು: ರಾಜ್ಯದ ಕಾಂಗ್ರೆಸ್ (Congress) ಸರ್ಕಾರ ಮತ್ತು ಕಾಂಗ್ರೆಸ್ ಮುಖಂಡರಿಗೆ ಈ ನಾಡಿನ ನೆಲ, ಜಲ, ಸಂಪತ್ತಿನ ಬಗ್ಗೆ ನೈಜ ಕಾಳಜಿ ಇದ್ದರೆ ಬೆಳಗಾವಿ ವಿಚಾರದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಹೇಳಿಕೆ ವಿಷಯದಲ್ಲಿ ಮುಖ್ಯಮಂತ್ರಿಗಳು ತಮ್ಮ ಅಭಿಪ್ರಾಯ ತಿಳಿಸಬೇಕು ಎಂದು ಬಿಜೆಪಿ (BJP) ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ (BY Vijayendra) ಒತ್ತಾಯಿಸಿದರು.
ಬೆಂಗಳೂರಿನ (Bengaluru) ಹೋಟೆಲ್‌ವೊಂದರಲ್ಲಿ ಇಂದು ನಡೆದ ಬಿಜೆಪಿ ಲೋಕಸಭೆ ಕ್ಷೇತ್ರವಾರು ಸಭೆಯ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಕಾವೇರಿ ನೀರನ್ನು ತಮಿಳುನಾಡಿಗೆ ಕಳೆದ ಆರು ತಿಂಗಳಿಂದ ಹರಿಸುತ್ತಿದ್ದು ಅದರ ವಿಷಯದಲ್ಲೂ ದಿಟ್ಟ ನಿರ್ಧಾರ ತೆಗೆದುಕೊಳ್ಳಲಿ ಎಂದು ಒತ್ತಾಯಿಸಿದರು. ದೆಹಲಿ ಗಣರಾಜ್ಯೋತ್ಸವ ಪರೇಡ್ ವೇಳೆ ಸ್ತಬ್ಧಚಿತ್ರ ವಿಷಯದಲ್ಲಿ ಕರ್ನಾಟಕಕ್ಕೆ ನಿರಂತರವಾಗಿ 14 ವರ್ಷಗಳಿಂದ ಅವಕಾಶ ಸಿಕ್ಕಿದೆ. ಈಗ ಕೊಡುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿಲ್ಲ. ಕಳೆದ ವರ್ಷ ಕೂಡ ಕರ್ನಾಟಕಕ್ಕೆ ಅವಕಾಶ ಸಿಕ್ಕಿಲ್ಲ ಎಂದು ಹೇಳಿದಾಗ ರಾಜ್ಯದ ನಮ್ಮೆಲ್ಲ ಹಿರಿಯರು ಪ್ರಯತ್ನಿಸಿದಾಗ ಅವಕಾಶ ಲಭಿಸಿತ್ತು. ಈ ಬಾರಿ ಕರ್ನಾಟಕ, ಗೋವಾ ಸೇರಿ ನಾಲ್ಕೈದು ರಾಜ್ಯಗಳಿಗೆ ಅವಕಾಶ ಸಿಕ್ಕಿಲ್ಲ. ಕರ್ನಾಟಕಕ್ಕೆ ಅವಕಾಶ ಕೊಡಬಾರದೆಂಬ ದುರುದ್ದೇಶ ಇದರಲ್ಲಿ ಇಲ್ಲ. ಬೇರೆ ರಾಜ್ಯಕ್ಕೂ ಅವಕಾಶ ಕೊಡಬೇಕೆಂಬ ಸದುದ್ದೇಶವಿದೆ ಅಷ್ಟೇ ಎಂದು ನುಡಿದರು. ಇದನ್ನೂ ಓದಿ: ರಾಮಮಂದಿರ ದೇಶದ ಕತೆಯ ಪ್ರತಿಬಿಂಬ; ರಾಮನ ಬಗ್ಗೆ ಅಪಪ್ರಚಾರ ಸಲ್ಲದು: ಗುರೂಜಿ ರಿತೇಶ್ವರ್ ಮಹಾರಾಜ್
ಅವಕಾಶ ಸಿಗದ ಕರ್ನಾಟಕ ಮತ್ತಿತರ ರಾಜ್ಯಗಳಿಗೆ ಎಕ್ಸಿಬಿಷನ್‌ನಲ್ಲಿ ಅವಕಾಶ ಮಾಡಿಕೊಟ್ಟಿದ್ದಾರೆ. ಇದನ್ನು ಗಮನಿಸದೆ ಈ ನಾಡಿನ ಬಗ್ಗೆ ಮೊಸಳೆ ಕಣ್ಣೀರು ಹಾಕುವ ಕೆಲಸ ರಾಜ್ಯ ಕಾಂಗ್ರೆಸ್ ಸರ್ಕಾರದ್ದು ಎಂದು ಟೀಕಿಸಿದರು. ಕನ್ನಡಪರ ಹೋರಾಟಗಾರ ನಾರಾಯಣಗೌಡರ ಕುರಿತ ಸರ್ಕಾರದ ನಡೆಯನ್ನು ರಾಜ್ಯದ ಜನತೆ ಗಮನಿಸುತ್ತಿದ್ದಾರೆ. ಮಂಗಳವಾರ ಬಿಡುಗಡೆ ಆದೊಡನೆ ಮತ್ತೊಂದು ಕೇಸಿನಲ್ಲಿ ಒಳಗಡೆ ಹಾಕುವ ಪಿತೂರಿ ರಾಜ್ಯ ಸರ್ಕಾರದ್ದು ಎಂದು ಆಕ್ಷೇಪಿಸಿದರು. ಮೊಸಳೆ ಕಣ್ಣೀರು ಹಾಕುವುದನ್ನು ಬಿಡಿ. ಪ್ರಾಮಾಣಿಕವಾಗಿ ಎಲ್ಲಾ ವಿಷಯದಲ್ಲೂ ರಾಜ್ಯದ ಪರವಾಗಿ ನಿಲ್ಲಿ ಎಂದು ಸರ್ಕಾರಕ್ಕೆ ಆಗ್ರಹಿಸಿದರು. ಇದನ್ನೂ ಓದಿ: ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಹೋಗಲ್ಲ: ಕಾಂಗ್ರೆಸ್
ಎಲ್ಲಾ ವಿಷಯದಲ್ಲೂ ಕೇಂದ್ರ ಸರ್ಕಾರ ರಾಜ್ಯದ ವಿರುದ್ಧ ಇದೆ ಎಂದು ಮಾನ್ಯ ಮುಖ್ಯಮಂತ್ರಿಗಳು ಬಿಂಬಿಸುತ್ತಿದ್ದಾರೆ. ಇದು ನಿಮಗೆ ಶೋಭೆ ತರುವುದಿಲ್ಲ. ಬೇರೆ ಬೇರೆ ವಿಷಯಗಳಲ್ಲಿ ನಿಮ್ಮ ನಡವಳಿಕೆಯನ್ನು ಜನತೆ ಗಮನಿಸುತ್ತಿದ್ದಾರೆ. ಬಿಜೆಪಿ ಸಂಘಟನೆ ದೃಷ್ಟಿಯಿಂದ ಇಂದಿನ ಸಭೆ ನಡೆದಿದೆ. ಮುಂದಿನ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕರೆದ ಸಭೆ ಇದು ಎಂದರು. ಇದನ್ನೂ ಓದಿ: ಲೋಕಸಭೆ ಚುನಾವಣೆ 2024 – ಶಾಸಕರು, ಮಾಜಿ ಸಚಿವರಿಗೆ ಟಿಕೇಟ್ ನೀಡಲು SP ಪ್ಲ್ಯಾನ್
ನವದೆಹಲಿ: ಈ ಬಾರಿಯ ಗಣರಾಜ್ಯೋತ್ಸವ (Republic Day) ಪರೇಡ್ನಲ್ಲಿ ಕರ್ನಾಟಕದ ಸ್ತಬ್ಧಚಿತ್ರ (Karnataka Tableau) ಪ್ರದರ್ಶನಗೊಳ್ಳಲಿದೆ. ಈ ಹಿಂದೆ ಅನುಮತಿ ನಿರಾಕರಿಸಿದ್ದ ಸಮಿತಿ ಕೊನೆ ಕ್ಷಣದಲ್ಲಿ ರಾಜ್ಯದ ಟ್ಯಾಬ್ಲೊಗೆ ಅವಕಾಶ ನೀಡಿದ್ದು, ಕನ್ನಡಿಗರ ಆಕ್ರೋಶಕ್ಕೆ ಕೇಂದ್ರ ಸರ್ಕಾರ ಮಣಿದಂತಾಗಿದೆ.
13ವರ್ಷಗಳಿಂದ ಕರ್ನಾಟಕ ಗಣರಾಜೋತ್ಸವ ಪರೇಡ್‌ನಲ್ಲಿ ಸ್ತಬ್ಧ ಚಿತ್ರ ಪ್ರದರ್ಶಿಸಿತ್ತು. ಈ ಬಾರಿ ಬೇರೆ ರಾಜ್ಯಗಳಿಗೆ ಅವಕಾಶ ನೀಡುವ ದೃಷ್ಟಿಯಿಂದ ಕರ್ನಾಟಕಕ್ಕೆ ಅನುಮತಿ ಇಲ್ಲ ಎಂದು ಟ್ಯಾಬ್ಲೋ ಆಯ್ಕೆ ಸಮಿತಿ ಹೇಳಿತ್ತು. ಸಮಿತಿಯ ನಿರ್ಧಾರಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು.
ಕರ್ನಾಟಕಕ್ಕೆ (Karnataka) ಆದ ಅನ್ಯಾಯವನ್ನು ಪ್ರಶ್ನಿಸಿ ಪಬ್ಲಿಕ್ ಟಿವಿ (PublicTv ಕೂಡಾ ನಿರಂತರ ವರದಿ ಪ್ರಸಾರ ಮಾಡಿತ್ತು. ವರದಿ ಬಳಿಕ ರಾಜಕೀಯ ಚರ್ಚೆಗೆ ಕಾರಣವಾಗಿತ್ತು. ಜನರು ಸೋಶಿಯಲ್ ಮೀಡಿಯಾಗಳಲ್ಲಿ ಕೂಡ ಮತ್ತು ರಾಜ್ಯ ಬಿಜೆಪಿ (BJP) ಸರ್ಕಾರದ ವಿರುದ್ಧ ಹರಿಹಾಯ್ದಿದ್ದರು. ಇದನ್ನೆಲ್ಲ ಗಮನಿಸಿದ ರಾಜ್ಯ ಸರ್ಕಾರ ಕೇಂದ್ರದ ಮಟ್ಟದಲ್ಲಿ ಒತ್ತಡ ತರುವ ಪ್ರಯತ್ನ ಮಾಡಿತ್ತು. ಇದನ್ನೂ ಓದಿ:ಪರೀಕ್ಷಾ ಪೆ ಚರ್ಚಾ ಸಂವಾದ- ಪೂರಕ ವಿಚಾರ, ಒಳನೋಟಗಳನ್ನು ಆಹ್ವಾನಿಸಿದ ಪ್ರಧಾನಿ
ಚುನಾವಣಾ ವರ್ಷದಲ್ಲಿ ವಿವಾದಗಳನ್ನು ಸೃಷ್ಟಿಸಲು ಹಿಂಜರಿದಿರುವ ಕೇಂದ್ರ ಸರ್ಕಾರ ಕರ್ನಾಟಕದ ಟ್ಯಾಬ್ಲೋ ಪ್ರದರ್ಶನಕ್ಕೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲೇ ಆಯ್ಕೆ ಸಮಿತಿ ಕರ್ನಾಟಕದ ನಾರಿ ಶಕ್ತಿ ಸ್ತಬ್ಧ ಚಿತ್ರ ಪ್ರದರ್ಶನಕ್ಕೆ ಅನುಮತಿ ನೀಡಿದ್ದು, 14 ಬಾರಿ ಕರ್ತವ್ಯ ಪಥ್‌ನಲ್ಲಿ ರಾಜ್ಯದ ಟ್ಯಾಬ್ಲೋ ಪ್ರದರ್ಶನಗೊಳ್ಳಲಿದೆ. ಇದನ್ನೂ ಓದಿ: ಹೆಂಡತಿಯನ್ನೇ ಹತ್ಯೆ ಮಾಡಿದ್ನಾ ಸ್ಯಾಂಟ್ರೋ ರವಿ? – ಹಣದ ವಿಚಾರಕ್ಕೆ ಕೊಂದು, ನಾಪತ್ತೆ ಅಂತಾ ಕಥೆ ಕಟ್ಟಿದ್ದ!
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ನವದೆಹಲಿಯಲ್ಲಿ (New Delhi) ನಡೆಯಲಿರುವ ಗಣರಾಜ್ಯೋತ್ಸವ (Republic Day) ಪಥ ಸಂಚಲನದಲ್ಲಿ ಪಾಲ್ಗೊಳ್ಳಲು ಕರ್ನಾಟಕದ ಸ್ತಬ್ಧಚಿತ್ರಕ್ಕೆ (Karnataka Tableau) ಅವಕಾಶ ನಿರಾಕರಿಸಿರುವುದಕ್ಕೆ ಸ್ತಬ್ದಚಿತ್ರ ನೋಡೆಲ್ ಅಧಿಕಾರಿ ಸಿ.ಆರ್.ನವೀನ್ ಸ್ಪಷ್ಟನೆ ನೀಡಿದ್ದಾರೆ.
ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಅವರು, ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಕಳೆದ 8 ವರ್ಷಗಳಲ್ಲಿ ಭಾಗವಹಿಸುವ ಅವಕಾಶ ದೊರೆಯದ ಹಾಗೂ ಅತಿ ಕಡಿಮೆ ಬಾರಿ ಪಾಲ್ಗೊಂಡ ರಾಜ್ಯಗಳಿಗೆ ಅವಕಾಶ ನೀಡುವಂತೆ ಕೇಂದ್ರ ಸರ್ಕಾರವು ಮಾರ್ಗಸೂಚಿ ಹೊರಡಿಸಿದೆ. ಇದನ್ನೂ ಓದಿ: 13 ವರ್ಷಗಳ ಬಳಿಕ ಗಣರಾಜ್ಯೋತ್ಸವ ಪರೇಡ್ನಲ್ಲಿ ಕರ್ನಾಟಕದ ಟ್ಯಾಬ್ಲೋಗಿಲ್ಲ ಅವಕಾಶ
ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯಕ್ಕೆ ಈ ಬಾರಿ ಗಣರಾಜ್ಯೋತ್ಸವದಲ್ಲಿ ಸ್ತಬ್ಧಚಿತ್ರದೊಂದಿಗೆ ಭಾಗವಹಿಸುವ ಅವಕಾಶ ದೊರೆತಿಲ್ಲ ಎಂದು ತಿಳಿಸಿದ್ದಾರೆ.
ಕಳೆದ ವರ್ಷದ ಪಥ ಸಂಚಲನದಲ್ಲಿ ಪಾಲ್ಗೊಂಡಿದ್ದ ರಾಜ್ಯಗಳ ಪಟ್ಟಿ ಹಾಗೂ ಈ ಬಾರಿ ಆಯ್ಕೆಯಾಗಿರುವ ರಾಜ್ಯಗಳ ಪಟ್ಟಿಯನ್ನು ಗಮನಿಸಿದರೆ, 2022ರಲ್ಲಿ ಮೊದಲ ಮೂರು ಬಹುಮಾನ ಪಡೆದ ರಾಜ್ಯಗಳು ಈ ಬಾರಿ ಆಯ್ಕೆಯಾಗಿರುವುದಿಲ್ಲ. ಅಲ್ಲದೇ ಕಳೆದ ವರ್ಷ ಭಾಗವಹಿಸಿದ್ದ ರಾಜ್ಯಗಳಲ್ಲಿ ಮೂರು ರಾಜ್ಯಗಳನ್ನು ಹೊರತುಪಡಿಸಿದರೆ, ಇನ್ನುಳಿದ ರಾಜ್ಯಗಳು ಆಯ್ಕೆಯಾಗಿರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಕರ್ನಾಟಕ, ಕನ್ನಡ ಭಾಷೆ ಬಗ್ಗೆ ಕೇಂದ್ರದ ಮಲತಾಯಿ ಧೋರಣೆ ವಿರುದ್ಧ HDK ಆಕ್ರೋಶ
ಈ ಬಾರಿ ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಕರ್ನಾಟಕ ಸ್ತಬ್ಧಚಿತ್ರಕ್ಕೆ ಅವಕಾಶ ನಿರಾಕರಿಸಿರುವುದಕ್ಕೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿರುದ್ಧ ವಿಪಕ್ಷಗಳು ಟೀಕಾಪ್ರಹಾರ ನಡೆಸಿದ್ದವು. ಇದರ ಬೆನ್ನಲ್ಲೇ ಸ್ತಬ್ಧಚಿತ್ರ ನೋಡೆಲ್ ಅಧಿಕಾರಿ ಸ್ಪಷ್ಟನೆ ನೀಡಿದ್ದಾರೆ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ದೆಹಲಿಯ ರಾಜಪಥ್‍ನಲ್ಲಿ 73ನೇ ಗಣರಾಜ್ಯೋತ್ಸವ ದಿನಾಚರಣೆಯ ಪರೇಡ್‍ನಲ್ಲಿ ಗಮನಸೆಳೆದ ಕರ್ನಾಟಕ ಪಾರಂಪರಿಕ ಕರಕುಶಲ ವಸ್ತುಗಳಗಳ ತೊಟ್ಟಿಲು ವಿಷಯಧಾರಿತ ರಾಜ್ಯದ ಸ್ತಬ್ಧಚಿತ್ರಕ್ಕೆ ದ್ವಿತೀಯ ಸ್ಥಾನ ದೊರೆತಿದೆ.
ಪರೇಡ್‍ನಲ್ಲಿ ಉತ್ತಮವಾಗಿ ಪ್ರದರ್ಶನಗೊಂಡ ರಾಜ್ಯಗಳ ಸ್ತಬ್ಧಚಿತ್ರಗಳ ಪೈಕಿ ಉತ್ತರ ಪ್ರದೇಶಕ್ಕೆ ಮೊದಲ ಸ್ಥಾನ ಸಿಕ್ಕರೆ, ದ್ವಿತೀಯ ಸ್ಥಾನ ಕರ್ನಾಟಕ್ಕೆ ದೊರೆತಿದೆ. ಮೇಘಾಲಯಕ್ಕೆ ತೃತೀಯ ಸ್ಥಾನ ನೀಡಲಾಗಿದೆ. ಇದನ್ನೂ ಓದಿ: ರಾಜಪಥದಲ್ಲಿ ಭಾರತದ ವೈಭವ ಅನಾವರಣ
#RepublicDay ನಲ್ಲಿ ರಾಜ್ಯದಿಂದ ಪ್ರದರ್ಶನಗೊಂಡ 'ಕರ್ನಾಟಕ: ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು' ವಿಷಯದ ಸ್ತಬ್ಧಚಿತ್ರಕ್ಕೆ ದ್ವಿತೀಯ ಸ್ಥಾನ ದೊರೆತಿದೆ.
ಉತ್ತಮ ಪರೇಡ್ ನಡೆಸಿದ ಮೂರು ಸೈನ್ಯ ಪಡೆಗಳ ಪೈಕಿ ನೌಕಾಪಡೆಯ ಮಾರ್ಚಿಂಗ್ ಕಾಂಟಿಜೆಂಟ್ ಪ್ರಥಮ ಸ್ಥಾನ ಪಡೆದಿದೆ, ಇತರ ಕಾಂಟಿಜೆಂಟ್‍ಗಳ ಪೈಕಿ ಸಿಐಎಸ್‍ಎಫ್ ಕಾಂಟಿಜೆಂಟ್‍ಗೆ ದ್ವಿತೀಯ ಸ್ಥಾನ ನೀಡಲಾಗಿದೆ. ಕೇಂದ್ರ ಸಚಿವಾಲಯದ ಸ್ತಬ್ಧಚಿತ್ರಗಳ ಪೈಕಿ ಶಿಕ್ಷಣ ಸಚಿವಾಲಯ ಮತ್ತು ನಾಗರಿಕ ವಿಮಾನಯಾನ ಸಚಿವಾಲಯ ಜಂಟಿ ಅಗ್ರಸ್ಥಾನ ಪಡೆದುಕೊಂಡಿದೆ.
ದಕ್ಷಿಣ ಭಾರತದಿಂದ ಕರ್ನಾಟಕದ ಏಕೈಕ ಸ್ತಬ್ಧ ಚಿತ್ರ:
ಪ್ರತಿ ವರ್ಷದಂತೆ ಈ ವರ್ಷವೂ ದೆಹಲಿ ರಾಜಪಥ್‍ನಲ್ಲಿ ಸಂಚರಿಸಿದ ಕರ್ನಾಟಕದ ಸ್ತಬ್ಧ ಚಿತ್ರ ಗಮನಸೆಳೆಯಿತು. ಈ ಬಾರಿ ದಕ್ಷಿಣ ಭಾರತದಿಂದ ಕರ್ನಾಟಕದ ಏಕೈಕ ಸ್ತಬ್ಧ ಚಿತ್ರ ಪ್ರದರ್ಶನಗೊಂಡಿತು. ಕರ್ನಾಟಕದ ಟ್ಯಾಬ್ಲೋ ಸತತ 13ನೇ ವರ್ಷವೂ ಪ್ರದರ್ಶನಗೊಂಡಿತು. ಈ ಬಾರಿ ಕರ್ನಾಟಕ ಪಾರಂಪರಿಕ ಕರಕುಶಲ ವಸ್ತುಗಳಗಳ ತೊಟ್ಟಿಲು ವಿಷಯಧಾರಿತ ಸ್ತಬ್ಧ ಚಿತ್ರ ಪ್ರದರ್ಶನಗೊಂಡಿದ್ದು, ಟ್ಯಾಬ್ಲೋ ತಯಾರಿ ಕಾರ್ಯದಲ್ಲಿ ಕಲಾವಿದ ಶಶಿಧರ್ ಅಡಪ ನೇತೃತ್ವ ವಹಿಸಿದ್ದರು. ಈ ಸ್ತಬ್ಧ ಚಿತ್ರವನ್ನು ತಯಾರು ಮಾಡಲು ಒಂದೂವರೆ ತಿಂಗಳು ಕಾಲ ನೂರಾರು ಜನರು ಒಟ್ಟಾಗಿ ಸೇರಿ ಕೆಲಸ ನಿರ್ವಹಿಸಿ ಕರ್ನಾಟಕದ ಕರಕುಶಲ ಕಲೆಯನ್ನು ದೇಶಕ್ಕೆ ಪರಿಚಯಿಸಿದ್ದರು.
ಸ್ತಬ್ಧ ಚಿತ್ರದಲ್ಲಿ ಏನಿತ್ತು?
ಕರ್ನಾಟಕದ ಸ್ತಬ್ದಚಿತ್ರದ ಮುಂಭಾಗದಲ್ಲಿ ಮೈಸೂರಿನ ಬೀಟೆ ಮರ ಹಾಗೂ ದಂತದ ಕಸೂತಿ ಕೆತ್ತನೆಯ ಬೃಹದಾಕಾರದ ಆನೆಯ ಕಲಾಕೃತಿ ಇತ್ತು. ಈ ಕಲಾಕೃತಿಯ ಕೆಳಗಿನ ಭಾಗದಲ್ಲಿ ಯಕ್ಷಗಾನ ಬೊಂಬೆಯಾಟದ ಚಿತ್ರಣವಿದೆ ಜೊತೆಗೆ ಗಂಜೀಫಾ ಕಲಾಕೃತಿ ಇತ್ತು. ಸ್ತಬ್ದಚಿತ್ರದ ಮಧ್ಯದಲ್ಲಿ ಕಣ್ಮನ ಸೆಳೆಯುವ ಬಿದರಿ ಕಲೆಯಲ್ಲಿ ರೂಪಿಸಿರುವ ದೊಡ್ಡ ಪ್ರಮಾಣದ ಹೂಜಿ. ಹೂಜಿಯ ಇಕ್ಕೆಲೆಗಳಲ್ಲಿ ಕರಾವಳಿಯ ವೈಶಿಷ್ಠ್ಯವನ್ನು ಬಿಂಬಿಸುವ ಭೂತಾರಾಧನೆಯ ಮುಖವಾಡವನ್ನು ಹೊತ್ತ ಲೋಹದ ಕಲಾಕೃತಿಗಳು, ಹೂಜಿಯ ಹಿಂಬದಿಯಲ್ಲಿ ಬಿದರಿ ಕಲೆ ಬಳಸಿ ಸಿದ್ದಪಡಿಸಿರುವ ನವಿಲುಗಳಿದ್ದವು. ಅಲ್ಲದೆ, ಮಧ್ಯ ಭಾಗದ ಹಿಂಬಂದಿಯಲ್ಲಿ ಕಿನ್ನಾಳದ ವೈಶಿಷ್ಠಪೂರ್ಣ ಕಲೆಯಲ್ಲಿ ಮೇಳೈಸಿದ ಬೃಹತ್ ಗಾತ್ರದ ಆಂಜನೇಯ ಸ್ವಾಮಿಯ ಮೂರ್ತಿ ಸ್ತಬ್ದಚಿತ್ರದ ಕೇಂದ್ರ ಬಿಂದುವಿನಂತೆ ಕಂಗೊಳಿಸಿತ್ತು. ಇದನ್ನೂ ಓದಿ: ದೆಹಲಿಯಲ್ಲಿ ಸಂಚರಿಸಲಿದೆ ಕರ್ನಾಟಕದ ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು
ಆಂಜನೇಯ ಸ್ವಾಮಿಯ ಮೂರ್ತಿಯ ಅಕ್ಕ-ಪಕ್ಕದಲ್ಲಿ ಚೆನ್ನಪಟ್ಟಣದ ಬೊಂಬೆಗಳು, ಮೆರುಗೆಣ್ಣೆಯ ಆಟಿಕೆಗಳು, ನವಲಗುಂದ ಧರಿ (ಜಮಖಾನೆ), ಶ್ರೀಗಂಧ ಮರದ ಕೆತ್ತನೆಯ ಹಾಗೂ ಮಣ್ಣಿನ ಕಲಾಕೃತಿಗಳು ಇತ್ತು. ಸ್ತಬ್ದಚಿತ್ರದ ಕೊನೆಯಲ್ಲಿ ಪಾರಂಪರಿಕ ಕರಕುಶಲ ಉತ್ಪನ್ನಗಳ ತಯಾರಿಕೆಗೆ ಉತ್ತೇಜನ ನೀಡಿ ಪ್ರೋತ್ಸಾಹಿಸಿದ ಕಲಾಲೋಕದ ಮಹಾಮಾತೆ, ಸ್ವಾತಂತ್ರ್ಯ ಹೋರಾಟಗಾರ್ತಿ ಹಾಗೂ ಕನ್ನಡತಿ ಕಮಲಾದೇವಿ ಚಟ್ಟೋಪಾದ್ಯಾಯ ಅವರು ಗಂಧದ ಪೆಟ್ಟಿಗೆ, ನವಿಲಿನಾಕಾರದ ದೀಪದ ಕಲಶಗಳು, ಸಂಡೂರಿನ ಬಾಳೆ ನಾರಿನ ಚೀಲಗಳು ಹೀಗೆ ವಿವಿಧ ಕರಕುಶಲ ವಸ್ತುಗಳನ್ನು ಬಾಗಿನ ರೂಪದಲ್ಲಿ ನೀಡುತ್ತಿರುವ ದೃಶ್ಯಾವಳಿಯ ದೊಡ್ಡ ಪ್ರತಿಮೆ. ಹಿಂಭಾಗದ ಎಡ – ಬಲ ಭಾಗದಲ್ಲಿ ಕೈಮಗ್ಗದ ಹಿರಿಮೆಯ ಇಳಕಲ್ ಕಸೂತಿ ಸೀರೆಗಳು, ಮೊಳಕಾಲ್ಮೋರು ಸೀರೆಗಳು ಹಾಗೂ ಮೈಸೂರು ರೇಷ್ಮೆ ಸೀರೆ. ಹಿಂಭಾಗದಲ್ಲಿ ಕಿನ್ನಾಳ ಕಲೆಯಲ್ಲಿ ತಯಾರಿಸಿದ ಬಾಲೆಯರ ಕಲಾಕೃತಿಗಳು, ಪಶ್ಚಿಮ ಘಟ್ಟಗಳಲ್ಲಿ ಲಭ್ಯವಿರುವ ಬೆತ್ತ, ಬಿದಿರು, ಕಾಡುಬಳ್ಳಿಗಳು ಹಾಗೂ ತಾಟಿನಿಂಗು ಮರದ ಎಲೆಯಿಂದ ತಯಾರಿಸಿದ ಬಗೆ ಬಗೆಯ ಬುಟ್ಟಿಗಳೂ ಕೂಡಾ ಸ್ತಬ್ದಚಿತ್ರಕ್ಕೆ ವಿಶೇಷ ಮೆರುಗನ್ನು ನೀಡಿತ್ತು. ಇದನ್ನೂ ಓದಿ: ಗಲ್ವಾನ್ ಬಳಿಕ ಒಲಿಂಪಿಕ್ಸ್ ಜ್ಯೋತಿ ವಿಚಾರದಲ್ಲೂ ಕಿರಿಕ್ – ಸಣ್ಣತನ ತೋರಿದ ಚೀನಾ
ಜಾನಪದ ತಜ್ಞ ಡಾ.ರಾಧಾಕೃಷ್ಣ ಉರಾಳ ನೇತೃತ್ವದ ಕಲಾ ಕದಂಬ ಕಲಾ ಕೇಂದ್ರದ ತಂಡ ಯಕ್ಷಗಾನ ಪಾತ್ರಗಳಲ್ಲಿ ಹೆಜ್ಜೆ ಹಾಕಿ ರಾಜ್‍ಪಥ್‍ನಲ್ಲಿ ಕರ್ನಾಟಕದ ಸಂಸ್ಕೃತಿಯನ್ನು ಅನಾವರಣಗೊಳಿಸಿದ್ದರು.
ಬೆಂಗಳೂರು: ಕರ್ನಾಟಕ ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು ಎಂಬ ವಿಷಯಾಧಾರಿತ ರಾಜ್ಯದ ಸ್ತಬ್ಧ ಚಿತ್ರ ಈ ಬಾರಿಯ ಜನವರಿ 26ರ ಗಣರಾಜ್ಯೋತ್ಸವ ದಿನಾಚರಣೆಗೆ ಆಯ್ಕೆಯಾಗಿದೆ. ಈ ಬಾರಿ ಆಯ್ಕೆಯಾದ 12 ರಾಜ್ಯಗಳ ಸ್ತಬ್ಧ ಚಿತ್ರಗಳಲ್ಲಿ ದಕ್ಷಿಣ ಭಾರತದಿಂದ ಆಯ್ಕೆಯಾಗಿರುವ ಏಕೈಕ ಸ್ತಬ್ಧ ಚಿತ್ರ ನಮ್ಮ ಕರ್ನಾಟಕದ್ದಾಗಿದೆ. ಅಲ್ಲದೆ, ರಾಜ್ಯದ ಸ್ತಬ್ಧ ಚಿತ್ರ ಸತತವಾಗಿ ಹದಿಮೂರನೇ ಬಾರಿಗೆ ಆಯ್ಕೆಯಾಗುತ್ತಿದೆ ಎಂಬುದು ದಾಖಲಾರ್ಹ ಸಂಗತಿ.
ಕೌಶಲ್ಯದಿಂದ ತಯಾರಿಸಿದ ಮಡಿಕೆ, ಸೂಕ್ಷ್ಮವಾಗಿ ಕೆತ್ತನೆ ಮಾಡಿದ ಶ್ರೀಗಂಧದ ಚಿಕಣಿ (ಮಿನಿಯೇಚರ್ಸ್ ಅಥವಾ ಕಿರು ಮಾದರಿ ವಸ್ತುಗಳು), ಕೈಮಗ್ಗದ ಸೀರೆಗಳು, ಕೈಯಿಂದಲೇ ವಿಶಿಷ್ಟ ಕಲಾಕೃತಿಗಳೂ ಒಳಗೊಂಡಂತೆ 16 ಕರಕುಶಲ ವಸ್ತುಗಳು ಭೌಗೋಳಿಕ ಸೂಚಿ ಸಂಕೇತದ ಪಟ್ಟಿಯಲ್ಲಿ ಸೇರ್ಪಡೆಯಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕವನ್ನು ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು ಎಂದೇ ಕರೆಯುತ್ತಾರೆ. ಚೆನ್ನಪಟ್ಟಣ ಮತ್ತು ಕಿನ್ನಾಳ ಮರದ ಕೆತ್ತನೆ ವಸ್ತುಗಳು (ಇನ್‍ಲೇ ಕಾವಿರ್ಂಗ್ಸ್), ಕಂಚಿನ ಪ್ರತಿಮೆಗಳು, ಮೆರುಗೆಣ್ಣೆಯ ಹಾಗೂ ಬಿದರಿಯ ಕಲಾಕೃತಿಗಳು ಕರ್ನಾಟಕದ ಪ್ರಮುಖ ಕಲೆಗಳಾಗಿವೆ.
ಟಿರ್ರಾಕೋಟ ಅತ್ಯಂತ ಹಳೆಯ ಕಲೆಯಾಗಿದೆ. ವಿಜಯನಗರದ ಅರಸರು ಪೋಷಿಸುತ್ತಿದ್ದ ಕಿನ್ನಾಳದ ಮೆರುಗೆಣ್ಣೆಯ ಕಲಾಕೃತಿಗಳು, ಕರ್ನಾಟಕದ ಜೊತೆಗೆ ಅವಿನಾಭಾವ ಸಂಬಂಧ ಹೊಂದಿರುವ ಮತ್ತು ಒಂದು ಸಾವಿರ ವರ್ಷಗಳಿಗೂ ಹೆಚ್ಚು ಇತಿಹಾಸವಿರುವ ಶ್ರೀಗಂಧದ ಕಲಾಕೃತಿಗಳು ಹಾಗೂ ದಂತದ ಕೆತ್ತನೆಯ ಕಲೆ ರಾಜ್ಯಕ್ಕೇ ವಿಶಿಷ್ಟ ಎನಿಸಿದೆ. ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮವು ಇ-ವಾಣಿಜ್ಯ ನಿಗಮೀಕೃತ ಸಂಸ್ಥೆಯ ಸಹಯೋಗದೊಂದಿಗೆ 55,000 ಕಲಾಕಾರರಿಗೆ ಉತ್ತಮ ಮಾರುಕಟ್ಟೆಯನ್ನು ಕಲ್ಪಿಸಿದೆ. ಇದನ್ನೂ ಓದಿ:ಟ್ಯಾಬ್ಲೊ ವಿಚಾರದಲ್ಲಿ ದಕ್ಷಿಣ ಭಾರತಕ್ಕೆ ಅನ್ಯಾಯ – ಸಿಡಿದೆದ್ದ ರಾಜ್ಯಗಳು
ಸ್ವಾತಂತ್ರ್ಯ ಹೋರಾಟಗಾರರು, ಅಭಿನೇತ್ರಿ, ಸಮಾಜ ಸೇವಕರು, ಕಲಾ ಉತ್ತೇಜಕರೂ ಎಲ್ಲವೂ ಆಗಿದ್ದ ಕರ್ನಾಟಕದವರೇ ಆದ ಕಮಲಾದೇವಿ ಚಟ್ಟೋಪಾಧ್ಯಾಯ ಅವರು ನಶಿಸಿ ಹೋಗುತ್ತಿದ್ದ ಪಾರಂಪಾರಿಕ ಕರಕುಶಲ ವಸ್ತುಗಳ ತಯಾರಿಕಾ ಕಲೆಯನ್ನು ಉಳಿಸಲು ಪ್ರಮುಖ ಪಾತ್ರ ವಹಿಸಿದ್ದರು ಎಂಬುದು ಗಮನಾರ್ಹ.
ಸ್ತಬ್ಧ ಚಿತ್ರದಲ್ಲಿ ಏನಿದೆ?:
ಕರ್ನಾಟಕದ ಸ್ತಬ್ದಚಿತ್ರದ ಮುಂಭಾಗದಲ್ಲಿ ಮೈಸೂರಿನ ಬೀಟೆ ಮರ ಹಾಗೂ ದಂತದ ಕಸೂತಿ ಕೆತ್ತನೆಯ ಬೃಹದಾಕಾರದ ಆನೆಯ ಕಲಾಕೃತಿ ಹಾಗೂ ಈ ಕಲಾಕೃತಿಯ ಕೆಳಗಿನ ಭಾಗದಲ್ಲಿ ಯಕ್ಷಗಾನ ಬೊಂಬೆಯಾಟದ ಚಿತ್ರಣವಿದೆ. ಜೊತೆಗೆ, ಗಂಜೀಫಾ ಕಲಾಕೃತಿಗಳಿವೆ. ಇದನ್ನೂ ಓದಿ:ಈ ಬಾರಿಯ ಗಣರಾಜ್ಯೋತ್ಸವಕ್ಕೆ ವಿದೇಶಿ ಅತಿಥಿಗಳಿಗೆ ಆಹ್ವಾನ ಇಲ್ಲ
ಸ್ತಬ್ಧ ಚಿತ್ರದ ಮಧ್ಯದಲ್ಲಿ ಕಣ್ಮನ ಸೆಳೆಯುವ ಬಿದರಿ ಕಲೆಯಲ್ಲಿ ರೂಪಿಸಿರುವ ದೊಡ್ಡ ಪ್ರಮಾಣದ ಹೂಜಿ. ಹೂಜಿಯ ಇಕ್ಕೆಲೆಗಳಲ್ಲಿ ಕರಾವಳಿಯ ವೈಶಿಷ್ಟ್ಯವನ್ನು ಬಿಂಬಿಸುವ ಭೂತಾರಾಧನೆಯ ಮುಖವಾಡವನ್ನು ಹೊತ್ತ ಲೋಹದ ಕಲಾಕೃತಿಗಳಿವೆ. ಹೂಜಿಯ ಹಿಂಬದಿಯಲ್ಲಿ ಬಿದರಿ ಕಲೆ ಬಳಸಿ ಸಿದ್ಧಪಡಿಸಿರುವ ನವಿಲುಗಳಿವೆ. ಅಲ್ಲದೆ, ಮಧ್ಯ ಭಾಗದ ಹಿಂಬಂದಿಯಲ್ಲಿ ಕಿನ್ನಾಳದ ವೈಶಿಷ್ಟ್ಯಪೂರ್ಣ ಕಲೆಯಲ್ಲಿ ಮೇಳೈಸಿದ ಬೃಹತ್ ಗಾತ್ರದ ಆಂಜನೇಯ ಸ್ವಾಮಿಯ ಮೂರ್ತಿ ಸ್ತಬ್ಧ ಚಿತ್ರದ ಕೇಂದ್ರ ಬಿಂದುವಿನಂತೆ ಕಂಗೊಳಿಸುತ್ತಿದೆ. ಆಂಜನೇಯ ಸ್ವಾಮಿಯ ಮೂರ್ತಿಯ ಅಕ್ಕ-ಪಕ್ಕದಲ್ಲಿ ಚೆನ್ನಪಟ್ಟಣದ ಬೊಂಬೆಗಳು, ಮೆರುಗೆಣ್ಣೆಯ ಆಟಿಕೆಗಳು, ನವಲಗುಂದ ಧರಿ (ಜಮಖಾನೆ), ಶ್ರೀಗಂಧ ಮರದ ಕೆತ್ತನೆಯ ಹಾಗೂ ಮಣ್ಣಿನ ಕಲಾಕೃತಿಗಳಿವೆ. ಇದನ್ನೂ ಓದಿ: ಈ ಬಾರಿ ಗಣರಾಜ್ಯೋತ್ಸವ ಹೇಗಿರುತ್ತೆ – ಇಲ್ಲಿದೆ ವಿವರ
ತದನಂತರ, ಸ್ತಬ್ಧ ಚಿತ್ರದ ಕೊನೆಯಲ್ಲಿ ಪಾರಂಪರಿಕ ಕರಕುಶಲ ಉತ್ಪನ್ನಗಳ ತಯಾರಿಕೆಗೆ ಉತ್ತೇಜನ ನೀಡಿ ಪ್ರೋತ್ಸಾಹಿಸಿದ ಕಲಾಲೋಕದ ಮಹಾಮಾತೆ, ಸ್ವಾತಂತ್ರ್ಯ ಹೋರಾಟಗಾರ್ತಿ ಹಾಗೂ ಕನ್ನಡತಿ ಕಮಲಾದೇವಿ ಚಟ್ಟೋಪಾದ್ಯಾಯ ಅವರು ಗಂಧದ ಪೆಟ್ಟಿಗೆ, ನವಿಲಿನಾಕಾರದ ದೀಪದ ಕಲಶಗಳು, ಸಂಡೂರಿನ ಬಾಳೆ ನಾರಿನ ಚೀಲಗಳು ಹೀಗೆ ವಿವಿಧ ಕರಕುಶಲ ವಸ್ತುಗಳನ್ನು ಬಾಗಿನ ರೂಪದಲ್ಲಿ ನೀಡುತ್ತಿರುವ ದೃಶ್ಯಾವಳಿಯ ದೊಡ್ಡ ಪ್ರತಿಮೆ ಇದೆ. ಅದೇ ಭಾಗದಲ್ಲಿ ಕರ್ನಾಟಕದ ಕೈಮಗ್ಗದ ಹಿರಿಮೆಯ ಇಳಕಲ್ ಕಸೂತಿ ಸೀರೆಗಳು, ಮೊಳಕಾಲ್ಮೂರು ಸೀರೆಗಳು ಹಾಗೂ ಮೈಸೂರು ರೇಷ್ಮೆ ಸೀರೆಗಳು, ಕಿನ್ನಾಳ ಕಲೆಯಲ್ಲಿ ತಯಾರಿಸಿದ ಬಾಲೆಯರ ಕಲಾಕೃತಿಗಳು, ಪಶ್ಚಿಮ ಘಟ್ಟಗಳಲ್ಲಿ ಲಭ್ಯವಿರುವ ಬೆತ್ತ, ಬಿದಿರು, ಕಾಡುಬಳ್ಳಿಗಳು ಹಾಗೂ ತಾಟಿನಿಂಗು ಮರದ ಎಲೆಯಿಂದ ತಯಾರಿಸಿದ ಬಗೆ ಬಗೆಯ ಬುಟ್ಟಿಗಳೂ ಕೂಡಾ ಸ್ತಬ್ಧ ಚಿತ್ರಕ್ಕೆ ವಿಶೇಷ ಮೆರುಗ ನೀಡಿದೆ.
ನಿರ್ಮಿಸಿದವರು ಯಾರು?: ಈ ಬಾರಿಯ ಸ್ತಬ್ಧ ಚಿತ್ರ ನಿರ್ಮಾಣ ಕಾರ್ಯದಲ್ಲಿ ಹೆಸರಾಂತ ಕಲಾ ನಿರ್ದೇಶಕ ಶಶಿಧರ್ ಅಡಪ ನೇತೃತ್ವದ ಪ್ರತಿರೂಪಿ ಸಂಸ್ಥೆಯ ಒಂದು ನೂರಕ್ಕೂ ಹೆಚ್ಚು ಕಲಾವಿದರು, ಸುಪ್ರಸಿದ್ಧ ಸಂಗೀತ ನಿರ್ದೇಶಕ ಪ್ರವೀಣ್ ದಯಾನಂದ ರಾವ್ ಮತ್ತು ತಂಡ ಹಾಗೂ ಜಾನಪದ ತಜ್ಞ ಡಾ.ರಾಧಾಕೃಷ್ಣ ಉರಾಳ ನೇತೃತ್ವದ ಕಲಾ ಕದಂಬ ಕಲಾ ಕೇಂದ್ರದ ತಂಡವೂ ಶ್ರಮಿಸಿದೆ.
ಸುವರ್ಣ ವರ್ಷ: ರಾಷ್ಟ್ರದ ರಾಜಧಾನಿಯಲ್ಲಿ ಗಣರಾಜ್ಯೋತ್ಸವ ದಿನಾಚರಣೆಯ ಸುಸಂದರ್ಭದಲ್ಲಿ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ವಿಶಾಲ ಮೈಸೂರು ರಾಜ್ಯ (ಕರ್ನಾಟಕ ರಾಜ್ಯವು) ಪಾಲ್ಗೊಳ್ಳಲು 1972 ರಲ್ಲಿ ಮೊದಲು ಪ್ರಾರಂಭಿಸಿತ್ತು.
ಅಂದಿನ ಮುಖ್ಯಮಂತ್ರಿ ಡಿ ದೇವರಾಜ ಅರಸ್ ಅವರು ಈ ಜವಾಬ್ದಾರಿಯನ್ನು ಅಂದಿನ ವಾರ್ತಾ ಮತ್ತು ಪ್ರಚಾರ ಇಲಾಖೆಗೆ ವಹಿಸಿದ್ದರು. ಅಂದಿನಿಂದ ಇಂದಿನವರೆಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯೇ ರಾಜ್ಯ ಸರ್ಕಾರದ ಪರವಾಗಿ ಸ್ತಬ್ದಚಿತ್ರ ನಿರ್ಮಾಣ ಹಾಗೂ ಪ್ರದರ್ಶನದ ಕಾರ್ಯವನ್ನು ನಿರ್ವಹಿಸುತ್ತಲಿದೆ. ಇದೀಗ ಭಾರತ ಸ್ವಾತಂತ್ರ್ಯದ ಅಮೃತ ವರ್ಷ ಮಹೋತ್ಸವ ವರ್ಷದಲ್ಲಿ ನವದೆಹಲಿಯಲ್ಲಿನ ಗಣರಾಜ್ಯೋತ್ಸವ ದಿನಾಚರಣೆಯ ಸಂಭ್ರಮದಲ್ಲಿ ಕರ್ನಾಟಕದ ಪಾಲ್ಗೊಳ್ಳುವಿಕೆ 50ನೇ ವರ್ಷ ವರ್ಷದ್ದಾಗಿದೆ.
ಅಂತೆಯೇ, ರಾಜ್ಯದ ಪರವಾಗಿ ಸ್ತಬ್ಧ ಚಿತ್ರ ನಿರ್ಮಾಣ ಮತ್ತು ಪ್ರದರ್ಶನ ಕಾರ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಿರುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಾಯಕ ಕೂಡಾ ಸುವರ್ಣ ವರ್ಷ ಪೂರೈಸುತ್ತಿದೆ ಎಂಬುದು ಹರ್ಷದಾಯಕ ಸಂಗತಿಯಾಗಿದೆ.
ಮೈಸೂರು: ಅಧಿಕಾರ ಹೋದ ಬಳಿಕ ಸಿದ್ದರಾಮಯ್ಯ ಅವರಿಗೆ ಮಹನೀಯರು ನೆನಪಾಗುತ್ತಾರೆ ಎಂದು ವಿಪಕ್ಷ ನಾಯಕರ ವಿರುದ್ಧ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡುತ್ತಾ ನಾರಾಯಣ ಗುರುಗಳ ಸ್ತಬ್ಧಚಿತ್ರಕ್ಕೆ ಗಣರಾಜ್ಯೋತ್ಸವ ಪೆರೇಡ್ ನಲ್ಲಿ ಅವಕಾಶ ಸಿಗದ ಬಗ್ಗೆ ಸಿದ್ದರಾಮಯ್ಯ ಆಕ್ರೋಶ ವಿಚಾರಕ್ಕೆ ಪ್ರತಿಕ್ರಿಯಿಸಿದರು. ಸಿದ್ದರಾಮಯ್ಯ ಅವರ ವರ್ತನೆ ಕಾಮಾಲೆ ಕಣ್ಣಿಗೆ ನೋಡುವುದೆಲ್ಲಾ ಹಳದಿ ಎಂಬಂತಾಗಿದೆ. ರಾಜ್ಯದಲ್ಲಿ ಕ್ಯಾಂಟೀನ್ ಗೆ ಹೆಸರಿಡುವಾಗ ಈ ನೆಲದ ಮಹಾ ಪುರುಷರ ಹೆಸರು ಅವರಿಗೆ ನೆನಪಾಗಲಿಲ್ಲ. ಸಿದ್ದರಾಮಯ್ಯಗೆ ಆಗ ನೆನಪಾಗಿದ್ದು ಇಂದಿರಾಗಾಂಧಿ ಹೆಸರು ಮಾತ್ರ ಎಂದರು.
ಅಧಿಕಾರದಲ್ಲಿ ಇರುವಾಗ ಅವರಿಗೆ ಮಹನೀಯರು ನೆನಪಾಗುವುದಿಲ್ಲ. ಅಧಿಕಾರ ಹೋದ ಮೇಲೆ ಮಹನೀಯರು ನೆನಪಾಗುತ್ತಾರೆ. ನಾರಾಯಣ ಗುರುಗಳು, ಒನಕೆ ಓಬವ್ವ, ಮೈಸೂರು ಮಹಾರಾಜರು ಎಂದಿಗೂ ಸಿದ್ದರಾಮಯ್ಯಗೆ ಅಧಿಕಾರದಲ್ಲಿ ಇದ್ದಾಗ ನೆನಪಾಗಲಿಲ್ಲ. ಈಗ ಭೂತದ ಬಾಯಲ್ಲಿ ಭಗವದ್ಗಿತೆ ಎಂಬಂತೆ ಮಹನೀಯರಿಗೆ ಗೌರವ ಕೊಡುವುದನ್ನು ನಮಗೆ ಹೇಳುತ್ತಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ತಜ್ಞರು ಗ್ರೀನ್ ಸಿಗ್ನಲ್ ಕೊಟ್ರೆ ಬೆಂಗಳೂರಿನಲ್ಲಿ ಮರು ದಿನವೇ ಶಾಲೆ ಪ್ರಾರಂಭ: ಬಿಸಿ ನಾಗೇಶ್
ಗಣರಾಜ್ಯೋತ್ಸವದಲ್ಲಿ ಒಂದು ವಿಷಯ ಕೊಟ್ಟಿದ್ದಾರೆ. ಆ ವಿಷಯಕ್ಕೆ ಅನುಗುಣವಾಗಿ ಯಾರು ಸ್ತಬ್ಧಚಿತ್ರ ಮಾಡಿರುತ್ತಾರೋ ಗುಣಮಟ್ಟದ ಆಧಾರದ ಮೇಲೆ ಅದರ ಆಯ್ಕೆ ಆಗುತ್ತದೆ. ಆಯ್ಕೆ ಪ್ರಕ್ರಿಯೆ ಪಾರದಾರ್ಶಕವಾಗಿರುತ್ತೆ. ಇಲ್ಲಿ ಯಾರ ಅವಮಾನದ ಪ್ರಶ್ನೆಯೆ ಇರುವುದಿಲ್ಲ. ಸಿದ್ದರಾಮಯ್ಯ ಅವರು ಮೊದಲು ಗಣರಾಜ್ಯೋತ್ಸವದ ಸ್ತಬ್ಧಚಿತ್ರಗಳ ಮಾರ್ಗ ಸೂಚಿ ಓದಿಕೊಳ್ಳಲಿ ಎಂದು ಸಲಹೆ ನೀಡಿದರು. ಇದನ್ನೂ ಓದಿ: ಎಸ್‌ಪಿ ಮುಖ್ಯಸ್ಥ ಮುಲಾಯಂ ಸಿಂಗ್ ಸೊಸೆ, ಅಖಿಲೇಶ್ ಯಾದವ್ ನಾದಿನಿ ಬಿಜೆಪಿ ಸೇರ್ಪಡೆ
ಕೇರಳ ಸರ್ಕಾರವು ಈ ಬಾರಿಯ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ನಾರಾಯಣ ಗುರುಗಳ ಸ್ತಬ್ಧಚಿತ್ರವನ್ನು ಪ್ರಸ್ತುತಪಡಿಸಲು ಪ್ರಸ್ತಾಪವನ್ನು ಕಳಿಸಿತ್ತು. ಆದರೆ ಇದನ್ನು ಕೇಂದ್ರ ಸರ್ಕಾರ ನಿರಾಕರಿಸಿದೆ. ಈ ಮೂಲಕ ಸತತ ಮೂರನೇ ಬಾರಿಗೆ ಕೇರಳ ಗಣರಾಜ್ಯೋತ್ಸವ ಪರೇಡ್‍ನಿಂದ ಹೊರಗುಳಿದಿದೆ. ಸದ್ಯ ಇದು ವಿವಾದಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ವಿವಿಧ ರಾಜಕೀಯ ಪಕ್ಷಗಳು, ಸಮಾಜಸುಧಾರಕ ನಾರಾಯಣ ಗುರುಗಳ ಸ್ತಬ್ಧಚಿತ್ರವನ್ನು ನಿರಾಕರಿಸುವ ಮೂಲಕ ಅವರಿಗೆ ಅವಮಾನ ಮಾಡಲಾಗಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸುತ್ತಿವೆ.
ಮೈಸೂರು:ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗವಹಿಸುವ ಸ್ತಬ್ಧಚಿತ್ರಗಳ ನಿರ್ಮಾಣದ ಸಿದ್ಧತಾ ಕಾರ್ಯವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಪರಿಶೀಲಿಸಿದ್ದಾರೆ.
ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ರಂಗಮಂದಿರ ಮಂಟಪದ ಎದುರಿನ ಮಳಿಗೆಯಲ್ಲಿ ನಿರ್ಮಿಸುತ್ತಿರುವ ಸ್ತಬ್ಧಚಿತ್ರ ಪರಿಶೀಲನೆ ಮಾಡಿದ್ದಾರೆ. ನಿರ್ಮಾಣದ ಕಾರ್ಯದಲ್ಲಿ ತೊಡಗಿದ್ದ ಕಲಾವಿದರ ಜೊತೆಗೆ ಸಮಾಲೋಚಿಸಿ ಮಾಹಿತಿ ಪಡೆದರು. ಇದನ್ನೂ ಓದಿ: ಹಣವೇ ಇಲ್ಲ ಲಾಕ್ ಮಾಡುವ ಅವಶ್ಯಕತೆ ಇತ್ತಾ?- ಮಾಲೀಕನಿಗೆ ಪತ್ರ ಬರೆದ ಕಳ್ಳರು
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಅಧ್ಯಕ್ಷತೆಯ ಉನ್ನತಮಟ್ಟದ ಸಮಿತಿ ತೀರ್ಮಾನದಂತೆ ಸ್ತಬ್ಧಚಿತ್ರಗಳನ್ನು ಕಡಿಮೆ ಮಾಡಬೇಕು ಎನ್ನುವ ಕಾರಣಕ್ಕಾಗಿ ಈ ಬಾರಿ 6 ಸ್ತಬ್ಧಚಿತ್ರ ಪಾಲ್ಗೊಳ್ಳಲಿವೆ. ಅ.13ರ ಸಂಜೆ ಹೊತ್ತಿಗೆ ಸಂಪೂರ್ಣ ಸಿದ್ಧವಾಗಲಿದೆ. ಕಲಾತಂಡ ಭಾಗವಹಿಸಲಿವೆ. ದಸರಾ ಮಹೋತ್ಸವದ ಎಲ್ಲ ಸಿದ್ಧತೆ ಮುಗಿಯುತ್ತಿವೆ. ತಾಲೀಮಿಗೆ ಆನೆಗಳು ಸಜ್ಜಾಗಿವೆ ಎಂದರು. ಇದನ್ನೂ ಓದಿ:ಮದುವೆಗಾಗಿ ಮತಾಂತರ ತಪ್ಪು: ಮೋಹನ್ ಭಾಗವತ್
ಸರಳ ದಸರಾ ಮಹೋತ್ಸವ ಆಚರಣೆಯಾಗಿದ್ದರಿಂದ ಅಧಿಕಾರೇತರ ಸದಸ್ಯರನ್ನು ರಚನೆ ಮಾಡದೆ ಅಧಿಕಾರಿಗಳು ನಿರ್ವಹಣೆ ಮಾಡಿದ್ದಾರೆ. ದಸರಾ ಕಾರ್ಯಕ್ರಮಗಳು ಸುಲಲಿತವಾಗಿ ಜರುಗುತ್ತಿವೆ ಎಂದು ಹೇಳಿದರು.