Tag: ಸ್ಥಳೀಯ ಸಂಸ್ಥೆಗಳ ಚುನಾವಣೆ

  • ಪ್ರಜಾಪ್ರಭುತ್ವ ಉಳಿಸುವ ಕಾಳಜಿ ಇದ್ದರೇ ಮೊದಲು ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಿ – ಸಿಎಂಗೆ ಹೆಚ್‌ಡಿಕೆ ಸವಾಲ್

    ಪ್ರಜಾಪ್ರಭುತ್ವ ಉಳಿಸುವ ಕಾಳಜಿ ಇದ್ದರೇ ಮೊದಲು ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಿ – ಸಿಎಂಗೆ ಹೆಚ್‌ಡಿಕೆ ಸವಾಲ್

    ಬೆಂಗಳೂರು: ಮಾನವ ಸರಪಳಿ (Human Chain) ರಚಿಸಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಣೆ ಮಾಡಿದ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ (H.D Kumaraswamy) ಕಿಡಿಕಾರಿದ್ದಾರೆ.

    ಎಕ್ಸ್‌ ಖಾತೆಯಲ್ಲಿ ಈ ಕುರಿತು ಟ್ವೀಟ್ ಮಾಡಿರೋ ಕುಮಾರಸ್ವಾಮಿ, ಪ್ರಜಾಪ್ರಭುತ್ವ ಉಳಿಸುವ ಕಾಳಜಿ ಇದ್ದರೇ ಮೊದಲು ಸ್ಥಳೀಯ ಸಂಸ್ಥೆಗಳ ಚುನಾವಣೆ (Local Body Elections) ಮಾಡಿ ಅಂತ‌ ಸಿಎಂ ಸಿದ್ದರಾಮಯ್ಯಗೆ (Siddaramaiah) ಸವಾಲ್ ಹಾಕಿದ್ದಾರೆ. ಇದನ್ನೂ ಓದಿ: ನಡುರಸ್ತೆಯಲ್ಲೇ ಯುವಕನ ಬಟ್ಟೆ ಬಿಚ್ಚಿಸಿ ಹಲ್ಲೆ – ಬೆಂಗಳೂರಲ್ಲಿ ಇದೆಂತಹ ಅಮಾನವೀಯ ಕೃತ್ಯ!

    ಹೆಚ್‌ಡಿಕೆ ಎಕ್ಸ್‌ನಲ್ಲಿ ಏನಿದೆ?
    ಮಾನವ ಸರಪಳಿ ನೆಪದಲ್ಲಿ ಪುಕ್ಕಟೆ ಪ್ರಚಾರ ಗಿಟ್ಟಿಸಿದ ಕಾಂಗ್ರೆಸ್ ಸರ್ಕಾರಕ್ಕೆ ಪ್ರಜಾಪ್ರಭುತ್ವ ಉಳಿಸುವ ಕಾಳಜಿಯೇ ಇಲ್ಲ. ಇದ್ದರೇ ಮೊದಲು ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಿ. ಅಧಿಕಾರಕ್ಕೇರಿದಾಗಿನಿಂದ ಪ್ರಜಾಪ್ರಭುತ್ವದ ಸರಪಳಿಯ ತಳಮಟ್ಟದ ಆಧಾರಸ್ತಂಭಗಳಾದ ಜಿಲ್ಲಾ ಮತ್ತು ತಾಲೂಕು ಪಂಚಾಯತಿ ಮತ್ತು ಬಿಬಿಎಂಪಿ ಚುನಾವಣೆ ನಡೆಸಿಲ್ಲ, ಯಾಕೆ?

    ಸ್ಥಳೀಯ ಸರ್ಕಾರಗಳ ಕತ್ತು ಹಿಸುಕಿ ನೀವು ವಿಧಾನಸೌಧದಲ್ಲಿ ಮೆರೆದರೇನು ಭಾಗ್ಯ? ಮಾನ್ಯ ಸಿದ್ದರಾಮಯ್ಯನವರೇ, ನೀವು ಅಧಿಕಾರಕ್ಕೆ ಬಂದು ವರ್ಷದ ಮೇಲೆ 4 ತಿಂಗಳಾಯಿತು (2023 ಮೇ 20). ಈವರೆಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸಾಧ್ಯವಾಗಿಲ್ಲ. ನಿಮ್ಮ ಪ್ರಜಾಪ್ರಭುತ್ವ, ಜನಪರತೆ, ಜಾಹೀರಾತುಗಳಲ್ಲಷ್ಟೆ ಝಗಮಗಿಸುತ್ತಿದೆ. ನಿಮ್ಮದು ಪ್ರಚಾರ ಜಾಸ್ತಿ, ಆಚಾರ ನಾಸ್ತಿ.

    ವಿಚ್ಚಿಧ್ರ ಶಕ್ತಿಗಳನ್ನು ದಮನ ಮಾಡುವುದು ಎಂದರೆ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ತತ್ವಕ್ಕೆ ತಿಲಾಂಜಲಿ ಇಡುವುದೇ? ಮಾನವ ಸರಪಳಿಯಿಂದ ಪ್ರಜಾಪ್ರಭುತ್ವ ಉಳಿಯುತ್ತದೆಯೇ? ಜನರ ತೆರಿಗೆ ಹಣದ ಪೋಲು ಪ್ರಜಾಪ್ರಭುತ್ವಕ್ಕೆ ಭೂಷಣವೇ? ಮೊದಲು ಸ್ಥಳೀಯ ಸಂಸ್ಥೆ ಚುನಾವಣೆ ಘೋಷಿಸಿ. ನೈಜ ಪ್ರಜಾಪ್ರಭುತ್ವದ ಸರಪಳಿಯನ್ನು ಗಟ್ಟಿಗೊಳಿಸಿ ಅಂತ ಕುಮಾರಸ್ವಾಮಿ ಟ್ವೀಟ್ ಮಾಡಿ‌ ಸರ್ಕಾರಕ್ಕೆ ಕುಮಾರಸ್ವಾಮಿ ಸವಾಲ್ ಹಾಕಿದ್ದಾರೆ. ಇದನ್ನೂ ಓದಿ: ಈದ್‌ ಮೆರವಣಿಗೆಗೆ ಪ್ರತಿಯಾಗಿ ಬಜರಂಗದಳ-ವಿಹೆಚ್‌ಪಿಯಿಂದ ಬಿ.ಸಿ ರೋಡ್ ಚಲೋಗೆ ಕರೆ

  • ಚುನಾವಣೆ ಪ್ರಚಾರದ ವೇಳೆ DMK ಅಭ್ಯರ್ಥಿ ಹೃದಯಾಘಾತದಿಂದ ಸಾವು

    ಚುನಾವಣೆ ಪ್ರಚಾರದ ವೇಳೆ DMK ಅಭ್ಯರ್ಥಿ ಹೃದಯಾಘಾತದಿಂದ ಸಾವು

    ಚೆನ್ನೈ: ತಮಿಳುನಾಡು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೂ ಮುನ್ನವೇ ತಂಜಾವೂರಿನಲ್ಲಿ ಚುನಾವಣೆ ಪ್ರಚಾರ ನಡೆಸುತ್ತಿಸದ್ದ ವೇಳೆ ಅಭ್ಯರ್ಥಿಯೊಬ್ಬರು ಹೃದಯಾಘಾತದಿಂದ ನಿಧನರಾಗಿದ್ದಾರೆ.

    ತಂಜಾವೂರಿನ ಅಯ್ಯಂಪೇಟ್ಟೈ 9ನೇ ವಾರ್ಡ್‍ನಲ್ಲಿ ಈ ಘಟನೆ ನಡೆದಿದ್ದು, ಡಿಎಂಕೆಯಿಂದ ಸ್ಪರ್ಧಿಸಿದ್ದ ಅಭ್ಯರ್ಥಿ ಡಿಎಂ ಅನಸೂಯ ಅವರು ಚುನಾವಣಾ ಪ್ರಚಾರದ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: Ranji Trophy: ಚೊಚ್ಚಲ ಪಂದ್ಯದಲ್ಲೇ ಶತಕ ಸಿಡಿಸಿ ಮಿಂಚಿದ ಯಶ್ ಧುಲ್

    ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಇದೇ ಫೆಬ್ರವರಿ 19ರ ಶನಿವಾರ ನಡೆಯಲಿದ್ದು, ಇಂದು ಪ್ರಚಾರಕ್ಕೆ ಕೊನೆಯ ದಿನವಾಗಿತ್ತು ಮತ್ತು ಚುನಾವಣೆಯ ಫಲಿತಾಂಶವನ್ನು ಫೆಬ್ರವರಿ 22 ರಂದು ಪ್ರಕಟಿಸಲು ನಿರ್ಧರಿಸಲಾಗಿದೆ. ಇದನ್ನೂ ಓದಿ: ನನ್ನ ಕಣ್ಣಿಗೆ ಸೇಬು ಹಣ್ಣಿನಂತೆ ಕಾಣುವಿರಿ, ಚಿಯರ್ಸ್ ಪಪ್ಪಾ: ರವೀನಾ ಟಂಡನ್

  • ಸಿಎಂ ತವರು ಜಿಲ್ಲೆಯಲ್ಲಿ ಬಿಜೆಪಿಗೆ ಮುಖಭಂಗ- ಭದ್ರಾವತಿ ನಗರಸಭೆ, ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ಕಾಂಗ್ರೆಸ್ ತೆಕ್ಕೆಗೆ

    ಸಿಎಂ ತವರು ಜಿಲ್ಲೆಯಲ್ಲಿ ಬಿಜೆಪಿಗೆ ಮುಖಭಂಗ- ಭದ್ರಾವತಿ ನಗರಸಭೆ, ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ಕಾಂಗ್ರೆಸ್ ತೆಕ್ಕೆಗೆ

    ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ನಗರಸಭೆ ಹಾಗೂ ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ಸ್ಥಾನಗಳಿಗೆ ಏ.27 ರಂದು ಮತದಾನ ನಡೆದಿತ್ತು. ಇಂದು ಎರಡೂ ಸ್ಥಳೀಯ ಸಂಸ್ಥೆಗಳ ಫಲಿತಾಂಶ ಹೊರ ಬಿದ್ದಿದ್ದು, ಎರಡರಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಹೆಚ್ಚಿನ ಸ್ಥಾನ ಪಡೆಯುವ ಮೂಲಕ ಅಧಿಕಾರದ ಗದ್ದುಗೆ ಏರಿದ್ದಾರೆ. ಈ ಮೂಲಕ ಮುಖ್ಯಮಂತ್ರಿ ತವರು ಜಿಲ್ಲೆಯಲ್ಲಿಯೇ ಬಿಜೆಪಿಗೆ ಭಾರೀ ಮುಖಭಂಗವಾಗಿದೆ.

    ಭದ್ರಾವತಿ ನಗರಸಭೆ ವ್ಯಾಪ್ತಿಯಲ್ಲಿ ಒಟ್ಟು 35 ವಾರ್ಡ್ ಗಳಿದ್ದು, 34 ವಾರ್ಡ್ ಗಳಿಗೆ ಚುನಾವಣೆ ನಡೆದಿತ್ತು. ವಾರ್ಡ್ ನಂಬರ್ 29ರ ಕಾಂಗ್ರೆಸ್ ಅಭ್ಯರ್ಥಿ ಮತದಾನಕ್ಕೂ ಮೊದಲೇ ಮೃತಪಟ್ಟಿದ್ದರಿಂದ ಈ ವಾರ್ಡ್ ನಲ್ಲಿ ಚುನಾವಣೆ ರದ್ದುಗೊಂಡಿತ್ತು. ಇನ್ನುಳಿದಂತೆ 34 ವಾರ್ಡ್ ಗಳಿಗೆ ಮತದಾನ ನಡೆದಿತ್ತು. 34 ಸ್ಥಾನಗಳ ಪೈಕಿ ಕಾಂಗ್ರೆಸ್ 18, ಜೆಡಿಎಸ್ 11, ಬಿಜೆಪಿ 4 ಹಾಗೂ ಪಕ್ಷೇತರ 1 ಸ್ಥಾನದಲ್ಲಿ ಗೆಲುವು ಕಂಡಿದ್ದಾರೆ.

    ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಯಲ್ಲಿಯೂ ಬಿಜೆಪಿ ಮುಗ್ಗರಿಸಿದೆ. ಕಳೆದ 25 ವರ್ಷದಿಂದ ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಯಲ್ಲಿ ಅಧಿಕಾರ ಹಿಡಿದಿದ್ದ ಬಿಜೆಪಿಗೆ ಈ ಬಾರಿ ಮತದಾರರು ಸೋಲಿನ ರುಚಿ ತೋರಿಸಿದ್ದಾರೆ. ಈ ಮೂಲಕ ಬಿಜೆಪಿ ಶಾಸಕ ಅರಗ ಜ್ಞಾನೇಂದ್ರ ಅವರಿಗೆ ಮುಖಭಂಗ ಉಂಟಾಗಿದೆ. ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಯಲ್ಲಿ ಒಟ್ಟು 15 ಸ್ಥಾನಗಳಿದ್ದು, ಕಾಂಗ್ರೆಸ್ 9 ಸ್ಥಾನಗಳಲ್ಲಿ ಜಯಭೇರಿ ಬಾರಿಸಿದರೆ, ಬಿಜೆಪಿ ಕೇವಲ 6 ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದೆ.

    ಫಲಿತಾಂಶದ ಬಗ್ಗೆ ಪ್ರತಿಕ್ರಿಸಿರುವ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಭದ್ರಾವತಿಯಲ್ಲಿ ಈ ಬಾರಿ ಹೆಚ್ಚು ಸ್ಥಾನ ಗಳಿಸಬೇಕು ಎಂಬ ದೃಷ್ಟಿಯಿಂದ ಸಾಕಷ್ಟು ಸಂಘಟನೆ ಮಾಡಿದ್ದೆವು. ಆದರೆ ಮತದಾರರು ನಮಗೆ 4 ಸ್ಥಾನ ನೀಡಿದ್ದಾರೆ. ಕಳೆದ ಬಾರಿ ಬಿಜೆಪಿ 2 ಸ್ಥಾನ ಪಡೆದಿತ್ತು. ಜೊತೆಗೆ ಕಳೆದ ಬಾರಿ ಎಲ್ಲ ವಾರ್ಡ್ ಗಳಿಗೂ ಅಭ್ಯರ್ಥಿ ಹಾಕುವುದು ಸಾಧ್ಯವಾಗಿರಲಿಲ್ಲ. ಆದರೆ ಈ ಬಾರಿ ಎಲ್ಲ ವಾರ್ಡ್ ಗಳಿಗೂ ಅಭ್ಯರ್ಥಿ ಹಾಕಿದ್ದೆವು. ಜೊತೆಗೆ 4 ಸ್ಥಾನಗಳಲ್ಲಿ ಗೆಲುವು ಕಂಡಿದ್ದೇವೆ.

    ತೀರ್ಥಹಳ್ಳಿಯಲ್ಲಿ ಅಧಿಕಾರ ಏಕೆ ಕೈ ತಪ್ಪಿ ಹೋಯಿತು ಗೊತ್ತಾಗುತ್ತಿಲ್ಲ. ಈ ಬಗ್ಗೆ ಜಿಲ್ಲಾ ಸಮಿತಿ ಹಾಗೂ ಸ್ಥಳೀಯ ಶಾಸಕರ ಜೊತೆ ಚರ್ಚಿಸುತ್ತೇನೆ ಎಂದು ಸಚಿವ ಈಶ್ವರಪ್ಪ ತಿಳಿಸಿದರು.

  • ಕೋಟೆನಾಡಿನಲ್ಲಿ ದಂಪತಿ ಗೆಲುವು

    ಕೋಟೆನಾಡಿನಲ್ಲಿ ದಂಪತಿ ಗೆಲುವು

    ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗದಲ್ಲಿ ನಡೆದ ನಗರಸಭೆ ಚುನಾವಣೆಯಲ್ಲಿ ಕುಟುಂಬ ರಾಜಕಾರಣ ಎಂಟ್ರಿಯಾಗಿದ್ದು, ನಗರಸಭೆ ಚುನಾವಣೆಯಲ್ಲಿ ಎರಡು ಕುಟುಂಬದ ಪತಿ ಹಾಗು ಪತ್ನಿಯರು ಪ್ರತ್ಯೇಕ ವಾರ್ಡ್ ಗಳಲ್ಲಿ ಸ್ಪರ್ಧಿಸಿ ಗೆದ್ದಿದ್ದಾರೆ.

    ಕಳೆದ ಬಾರಿಯ ನಗರಸಭೆಯ ಅಧ್ಯಕ್ಷರಾಗಿದ್ದ ಗೊಪ್ಪೆ ಮಂಜುನಾಥ್ ಅವರು ಪಕ್ಷೇತರ ಅಭ್ಯರ್ಥಿಯಾಗಿ 11ನೇ ವಾರ್ಡ್ ನಿಂದ ಸ್ಪರ್ಧಿಸಿ ಜಯಗಳಿಸಿದ್ದಾರೆ. ಅವರ ಪತ್ನಿ ಜಯಂತಿ 14 ವಾರ್ಡ್ ನಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದು ಜಯಗಳಿಸಿದ್ದಾರೆ.

    ಬಿಜೆಪಿಯಿಂದಲೂ ಮತ್ತೊಂದು ದಂಪತಿ ಸ್ಪರ್ಧಿಸಿದ್ದು, 16ನೇ ವಾರ್ಡ್ ನಿಂದ ಮಾಜಿ ನಗರಸಭಾ ಸದಸ್ಯ ವೆಂಕಟೇಶಪ್ಪ ಹಾಗು 19 ನೇ ವಾರ್ಡ್ ನಿಂದ ಅವರ ಪತ್ನಿ ತಿಪ್ಪಮ್ಮ ಕೂಡ ಅಖಾಡದಲ್ಲಿದ್ದು, ಪ್ರತಿಸ್ಪರ್ಧಿಗಳ ವಿರುದ್ಧ ಗೆಲುವು ಸಾಧಿಸಿದ್ದಾರೆ. ಈ ಮೂಲಕ ನಗರಸಭೆಗೂ ಕುಟುಂಬ ರಾಜಕೀಯ ಎಂಟ್ರಿ ಕೊಟ್ಟಂತಾಗಿದೆ.

    ಹಿಂದುಳಿದಿರುವ ಕೋಟೆನಾಡನ್ನ ಅಭಿವೃದ್ಧಿ ಪಡಿಸುವಲ್ಲಿ ನಾಯಕರು ವಿಫಲರಾಗಿದ್ದಾರೆ ಎನ್ನುವ ಆರೋಪ ಇದೆ. ಈಗ ನಗರಸಭೆ ಅಖಾಡದ ಮೂಲಕ ಹೊಸದಾಗಿ ರಾಜಕೀಯ ಪ್ರವೇಶ ಮಾಡಿರುವ ಮಹಿಳಾ ಮಣಿಗಳು ಎಷ್ಟರಮಟ್ಟಿಗೆ ಅವರಿಗೆ ಸಿಕ್ಕಿರುವ ಜವಬ್ದಾರಿಯನ್ನ ನಿರ್ವಹಿಸುವರೋ ಎಂಬ ಕುತೂಹಲ ಜನರಲ್ಲಿ ಮೂಡಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • 1 ನಗರಸಭೆ, 3 ಪುರಸಭೆಯಲ್ಲಿ ಗೆಲುವು – ಮತ್ತೊಮ್ಮೆ ಜೆಡಿಎಸ್‍ನ ಭದ್ರಕೋಟೆಯಾದ ಮಂಡ್ಯ

    1 ನಗರಸಭೆ, 3 ಪುರಸಭೆಯಲ್ಲಿ ಗೆಲುವು – ಮತ್ತೊಮ್ಮೆ ಜೆಡಿಎಸ್‍ನ ಭದ್ರಕೋಟೆಯಾದ ಮಂಡ್ಯ

    ಮಂಡ್ಯ: 18 ಸ್ಥಾನಗಳನ್ನು ಗೆಲ್ಲುವ ಮೂಲಕ ಜೆಡಿಎಸ್ ನಗರಸಭೆಯನ್ನು ಗೆದ್ದುಕೊಂಡಿದ್ದು, ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

    ಮಂಡ್ಯ ಹಿಂದುಳಿದ ನಗರವಾಗಿತ್ತು. ಇನ್ನು ಮುಂದೆ ಅಭಿವೃದ್ಧಿ ಪಥದತ್ತ ಸಾಗಲಿದೆ. ಸಿಎಂ ನಮ್ಮವರು, ಮಂಡ್ಯದಲ್ಲಿ ನಾನು ಶಾಸಕನಾಗಿದ್ದೇನೆ. ಈ ಹಿನ್ನೆಲೆಯಲ್ಲಿ ಅಭಿವೃದ್ಧಿ ಕೆಲಸ ಆಗಲಿದೆ. ನಗರಸಭೆಯಲ್ಲಿ ಜೆಡಿಎಸ್ ಪಕ್ಷ ಬಹುಮತ ಪಡೆಯಲು ಮುಖ್ಯಮಂತ್ರಿ ಕುಮಾರಸ್ವಾಮಿಯವರ ಆಡಳಿತ ವೈಖರಿ ಮತ್ತು ಮಾಜಿ ಪ್ರದಾನಿ ದೇವೇಗೌಡರ ಆದರ್ಶವೇ ಕಾರಣ ಎಂದು ಮಂಡ್ಯ ಶಾಸಕ ಶ್ರೀನಿವಾಸ್ ಮತ್ತು ಜೆಡಿಎಸ್ ಪಕ್ಷದ ಪ್ರದಾನ ಕಾರ್ಯರ್ಶಿ ಜಫ್ರುಲ್ಲಾ ಖಾನ್ ಹರ್ಷ ವ್ಯಕ್ತಪಡಿಸಿ ಜಿಲ್ಲೆಯ ಜನರಿಗೆ ಧನ್ಯವಾದ ಸಲ್ಲಿಸಿದ್ದಾರೆ.

    ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯ ಏಳು ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದ್ದ ಜೆಡಿಎಸ್, ಈಗ ಮಂಡ್ಯ ನಗರಸಭೆಯಲ್ಲೂ ಬಹುಮತ ಪಡೆಯುವ ಮೂಲಕ ಜೆಡಿಎಸ್ ಭದ್ರಕೋಟೆ ಎನ್ನುವುದು ಮತ್ತೊಮ್ಮೆ ಸಾಬೀತು ಮಾಡಿದೆ. ಮಂಡ್ಯ, ಮದ್ದೂರು, ನಾಗಮಂಗಲ ಮತ್ತು ಪಾಂಡವಪುರ ಪುರಸಭೆಯಲ್ಲಿ ಜೆಡಿಎಸ್ ಗೆಲುವು ಸಾಧಿಸಿದೆ.

    ಇದೇ ವೇಳೆ ಕಾರ್ಯಕರ್ತ ನಿಂಗರಾಜು ಶಾಸಕ ಎಂ ಶ್ರೀನಿವಾಸ್ ಹಾಗೂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಫ್ರುಲ್ಲಾ ಖಾನ್ ವಿರುದ್ಧ ಕಿಡಿಕಾರಿದ್ದರು. ನನಗೆ ಟಿಕೆಟ್ ನೀಡಿದ್ರೆ ನಾನೇ ಗೆಲುತ್ತಿದ್ದೆ. ನನಗೆ ಅನ್ಯಾಯ ಮಾಡಿದ್ದೀರಿ. ನಾನು 20 ವರ್ಷಗಳಿಂದ ಪಕ್ಷಕ್ಕೆ ದುಡಿದ್ದೀನಿ. ಇಂದು ನನ್ನ ಮನೆ ಹಾಳಾಗಿದೆ ಎಂದು ನೋವುವನ್ನು ಹೇಳಿಕೊಂಡಿದ್ದರು.

    ಈ ವೇಳೆ ಬೆಂಬಲಿಗರು ನೊಂದ ಕಾರ್ಯಕರ್ತನನ್ನು ಶಾಸಕರ ಕಚೇರಿಯಿಂದ ಹೊರ ಹಾಕಿದ್ದಾರೆ. ನಿಂಗರಾಜು ಅವರ ಮಂಡ್ಯ ನಗರಸಭೆಯ 12ನೇ ವಾರ್ಡ್ ನಿಂದ ಸ್ಪರ್ಧಿಸಿದ್ದು, ನಾಲ್ಕನೇ ಸ್ಥಾನ ಪಡೆದಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮತ ಎಣಿಕಾ ಕೇಂದ್ರದಿಂದ ಕಿವಿಮುಚ್ಚಿಕೊಂಡು ಓಟಕ್ಕಿತ್ತ ಗೆದ್ದ ಕೈ ಸದಸ್ಯೆ! – ವಿಡಿಯೋ ನೋಡಿ

    ಮತ ಎಣಿಕಾ ಕೇಂದ್ರದಿಂದ ಕಿವಿಮುಚ್ಚಿಕೊಂಡು ಓಟಕ್ಕಿತ್ತ ಗೆದ್ದ ಕೈ ಸದಸ್ಯೆ! – ವಿಡಿಯೋ ನೋಡಿ

    ಉಡುಪಿ: ರಾಜ್ಯ ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಇಂದು ಹೊರಬಿದ್ದಿದ್ದು, ಉಡುಪಿಯಲ್ಲಿ ವಿಜಯದ ಪತಾಕೆ ಹಾರಿಸಿದ್ದ ಕಾಂಗ್ರೆಸ್ ಮಹಿಳಾ ಅಭ್ಯರ್ಥಿ ಕಿವಿ ಮುಚ್ಚಿಕೊಂಡು ಓಡಿದ ಘಟನೆ ನಡೆದಿದೆ.

    ಉಡುಪಿ ನಗರಸಭೆಗೆ ಆಯ್ಕೆಯಾದ ಕಾಂಗ್ರೆಸ್ ನ ಸೆಲಿನಾ ಕರ್ಕಡ ಅವರು ಗೆಲುವನ್ನು ಘೋಷಿಸುತ್ತಿದ್ದಂತೆಯೇ ಮತ ಎಣಿಕಾ ಕೇಂದ್ರದಲ್ಲಿ ಮೋದಿಗೆ ಜೈಕಾರ ಹಾಕಲಾಯಿತು. ಬಿಜೆಪಿ ಕಾರ್ಯಕರ್ತರ ಮೋದಿ ಮೋದಿ ಕೂಗಿನ ಮಧ್ಯೆಯೇ ಸಾಗುತ್ತಿದ್ದ ಸದಸ್ಯೆಗೆ ಇರಿಸುಮುರಿಸು ಉಂಟಾಗಿದ್ದು, ಹೀಗಾಗಿ ಕಿವಿ ಮುಚ್ಚಿಕೊಂಡು ಅಲ್ಲಿಂದ ಓಟಕ್ಕಿತ್ತರು. ಇದನ್ನೂ ಓದಿ: ಉಡುಪಿಯಲ್ಲಿ ಬಿಜೆಪಿ ಕ್ಲೀನ್ ಸ್ವೀಪ್- ಮಧ್ವರಾಜ್ ವಾರ್ಡ್ ನಲ್ಲೇ ಕಾಂಗ್ರೆಸ್ಸಿಗೆ ಸೋಲು

    ಉಡುಪಿಯ ಮೂಡುಪೆರಂಪಳ್ಳಿ ವಾರ್ಡ್ ನ ಕಾಂಗ್ರೆಸ್ ಸದಸ್ಯೆ ಸೆಲಿನಾ ಗೆಲುವಿನ ಬಳಿಕ ಅವರನ್ನು ಅಭಿನಂದಿಸಲು ಕಾರ್ಯಕರ್ತರ ಕೊರತೆಯಾಗಿದ್ದು, ಈ ಹಿನ್ನೆಲೆಯಲ್ಲಿ ಸೆಲಿನಾ ಅವರೇ ಹಾರ ಹಾಕಿಕೊಂಡು ಏಕಾಂಗಿಯಾಗಿ ತೆರಳಿದ್ದಾರೆ. ಇದನ್ನೂ ಓದಿ: ಶಾಸಕರ ಮುಂದೆ ಕಣ್ಣೀರು ಹಾಕಿದ ಜೆಡಿಎಸ್ ಕಾರ್ಯಕರ್ತ!

    ಒಟ್ಟಿನಲ್ಲಿ ಇಂದು ಕುತೂಹಲದಿಂದ ಕಾಯುತ್ತಿದ್ದ ಸ್ಥಳೀಯ ಸಂಸ್ಥೆಗಳು ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು ವಿಧಾನಸಭಾ ಚುನಾವಣೆಯ ಫಲಿತಾಂಶದಂತೆ ಜಿಲ್ಲೆಯಲ್ಲಿ ಕಾಂಗ್ರೆಸ್ ಧೂಳಿಪಟವಾಗಿದೆ. ವಿಶೇಷ ಏನೆಂದರೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರ ವಾರ್ಡ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋತಿದ್ದಾರೆ.

    ಮೈಸೂರು, ತುಮಕೂರು ಮತ್ತು ಶಿವಮೊಗ್ಗ ಮಹಾನಗರ ಪಾಲಿಕೆ ಸೇರಿದಂತೆ 22 ಜಿಲ್ಲೆಗಳ 29 ನಗರಸಭೆ, 53 ಪುರಸಭೆ, 20 ಪಟ್ಟಣ ಪಂಚಾಯಿತಿಗಳಿಗೆ ಚುನಾವಣೆ ನಡೆದಿತ್ತು. ಶೇಕಡಾ 67.51ರಷ್ಟು ಮತದಾನವಾಗಿತ್ತು. ಒಟ್ಟು 2634 ವಾರ್ಡ್ ಗಳಲ್ಲಿ ಚುನಾವಣೆ ನಡೆದಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಉಡುಪಿಯಲ್ಲಿ ಬಿಜೆಪಿ ಕ್ಲೀನ್ ಸ್ವೀಪ್- ಮಧ್ವರಾಜ್ ವಾರ್ಡ್ ನಲ್ಲೇ ಕಾಂಗ್ರೆಸ್ಸಿಗೆ  ಸೋಲು

    ಉಡುಪಿಯಲ್ಲಿ ಬಿಜೆಪಿ ಕ್ಲೀನ್ ಸ್ವೀಪ್- ಮಧ್ವರಾಜ್ ವಾರ್ಡ್ ನಲ್ಲೇ ಕಾಂಗ್ರೆಸ್ಸಿಗೆ ಸೋಲು

    ಉಡುಪಿ: ಇಂದು ಕುತೂಹಲದಿಂದ ಕಾಯುತ್ತಿದ್ದ ಸ್ಥಳೀಯ ಸಂಸ್ಥೆಗಳು ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು ವಿಧಾನಸಭಾ ಚುನಾವಣೆಯ ಫಲಿತಾಂಶದಂತೆ ಜಿಲ್ಲೆಯಲ್ಲಿ ಕಾಂಗ್ರೆಸ್ ಧೂಳಿಪಟವಾಗಿದೆ. ವಿಶೇಷ ಏನೆಂದರೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರ ವಾರ್ಡ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋತಿದ್ದಾರೆ.

    ಉಡುಪಿ ನಗರಸಭೆ
    ಉಡುಪಿ ನಗರಸಭೆಯಲ್ಲಿ ಬಿಜೆಪಿ ಪಾರಮ್ಯ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ನಿಂದ ಅಧಿಕಾರವನ್ನು ಕಸಿದುಕೊಂಡಿದೆ. ಉಡುಪಿ ನಗರಸಭೆ ಬಿಜೆಪಿಗೆ ಪ್ರತಿಷ್ಠೆಯ ಕಣವಾಗಿತ್ತು. ಈ ನಗರ ಸಭೆ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮೂಲಕ ದೇಶದಲ್ಲೇ ಬಿಜೆಪಿಗೆ ಪ್ರಥಮ ಅಧಿಕಾರ ಕೊಟ್ಟಿದೆ. ಈ ನಗರಸಭೆಯಲ್ಲಿ 1968 ರಲ್ಲಿ ಜನಸಂಘ ಅಧಿಕಾರ ಹಿಡಿದಿತ್ತು. ಆದರೆ ಈಗ ಸುವರ್ಣ ವರ್ಷದಲ್ಲಿ ಬಿಜೆಪಿಗೆ ಗೆಲುವು ಲಭಿಸಿದೆ. ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಗೆ ಭಾರೀ ಮುಖಭಂಗವಾಗಿದ್ದು, ಪ್ರಮೋದ್ ಮಧ್ವರಾಜ್ ವಾರ್ಡ್ ನಲ್ಲೂ ಬಿಜೆಪಿ ಗೆಲುವು ಸಾಧಿಸಿದೆ. ನಗರಸಭಾ ಮಾಜಿ ಅಧ್ಯಕ್ಷೆ ಮೀನಾಕ್ಷಿ ಬನ್ನಂಜೆಗೆ ಸೋಲಾಗಿದೆ. ಈ ನಗರ ಸಭೆಯಲ್ಲಿ ಬಿಜೆಪಿ 31 ಮತ್ತು ಕಾಂಗ್ರೆಸ್4 ಸ್ಥಾನಗಳನ್ನು ಗಳಿಸಿದೆ.

    ಕುಂದಾಪುರ ಪುರಸಭೆ
    ಈ ಪುರಸಭೆಯಲ್ಲಿ ಬಿಜೆಪಿ 14, ಕಾಂಗ್ರೆಸ್ 8 ಮತ್ತು ಪಕ್ಷೇತರ 1 ಗೆಲವು ಸಾಧಿಸಿದ್ದು, ಬಿಜೆಪಿ ಅಧಿಕಾರಕ್ಕೆ ಏರಲಿದೆ. ಬಿಜೆಪಿ ಬಂಡಾಯ ಅಭ್ಯರ್ಥಿ ರಾಜೇಶ್ ಕಾವೇರಿಗೆ ಬಿಜೆಪಿಯೆದುರು ಸೋಲಾಗಿದ್ದು, ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಮತ್ತೆ ಮೇಲುಗೈ ಸಾಧಿಸಿದ್ದಾರೆ. ಇದರಿಂದ ಎಂಎಲ್‍ಸಿ ಪ್ರತಾಪ್ ಚಂದ್ರ ಶೆಟ್ಟಿಗೆ ಮುಖಭಂಗವಾಗಿದೆ.

    ಕಾರ್ಕಳ ಪುರಸಭೆ
    ಈ ಪುರಸಭೆ ಫಲಿತಾಂಶ ಅತಂತ್ರವಾಗಿ ಬಂದಿದ್ದು, ಕಾಂಗ್ರೆಸ್ ಬಿಜೆಪಿಗೆ ಸಮಬಲ ಫಲಿತಾಂಶ ಬಂದಿದೆ. ಬಿಜೆಪಿ 11, ಕಾಂಗ್ರೆಸ್ 11 ಮತ್ತು ಪಕ್ಷೇತರ 1 ಸ್ಥಾನವನ್ನು ಪಡೆದುಕೊಂಡಿದೆ. ಈ ಚುನಾವಣೆಯಲ್ಲಿ ಶಾಸಕರು, ಸಂಸದರಿಗೆ ಮತ ಚಲಾಯಿಸುವ ಹಕ್ಕು ಇದ್ದು, ಬಿಜೆಪಿ ಶಾಸಕರ ಮತ್ತು ಸಂಸದರ ಮತ ಬಳಸಿ ಅಧಿಕಾರಕ್ಕೆ ಬರಲು ಪ್ರಯತ್ನಿಸುತ್ತಿದೆ. ಈಗ ಪಕ್ಷೇತರ ವಿಜಯಿ ಲಕ್ಷ್ಮೀನಾರಾಯಣ ಮಲ್ಯ ಅವರ ಬೆಂಬಲ ಬಿಜೆಪಿಗೆ ಸಿಗಲಿದೆ ಎಂದು ಬಿಜೆಪಿ ಶಾಸಕ ಸುನೀಲ್ ಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಸಾಲಿಗ್ರಾಮ ಪಟ್ಟಣ ಪಂಚಾಯತ್
    ಸಾಲಿಗ್ರಾಮ ಪಟ್ಟಣ ಪಂಚಾಯತ್ ನಲ್ಲಿ ಬಿಜೆಪಿ 10, ಕಾಂಗ್ರೆಸ್ 5 ಹಾಗು ಪಕ್ಷೇತರ 1 ಸ್ಥಾನವನ್ನು ಗಳಿಸಿದ್ದು, ಒಂದು ಅಂಚೆ ಮತದಿಂದ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಇವರು ಪುನೀತ್ ಪೂಜಾರಿ 4ನೇ ವಾರ್ಡ್ ಅಭ್ಯರ್ಥಿಯಾಗಿದ್ದಾರೆ.

    ಮೈಸೂರು, ತುಮಕೂರು ಮತ್ತು ಶಿವಮೊಗ್ಗ ಮಹಾನಗರ ಪಾಲಿಕೆ ಸೇರಿದಂತೆ 22 ಜಿಲ್ಲೆಗಳ 29 ನಗರಸಭೆ, 53 ಪುರಸಭೆ, 20 ಪಟ್ಟಣ ಪಂಚಾಯಿತಿಗಳಿಗೆ ಚುನಾವಣೆ ನಡೆದಿತ್ತು. ಶೇಕಡಾ 67.51ರಷ್ಟು ಮತದಾನವಾಗಿತ್ತು. ಒಟ್ಟು 2634 ವಾರ್ಡ್‍ಗಳಲ್ಲಿ ಚುನಾವಣೆ ನಡೆದಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಠೇವಣಿ ಉಳಿಸಿಕೊಳ್ಳಲು ಕಾಂಗ್ರೆಸ್ ಕಾರ್ಯಕರ್ತರಿಂದ ನಕಲಿ ಮತದಾನ- ಜೆಡಿಎಸ್ ಆರೋಪ

    ಠೇವಣಿ ಉಳಿಸಿಕೊಳ್ಳಲು ಕಾಂಗ್ರೆಸ್ ಕಾರ್ಯಕರ್ತರಿಂದ ನಕಲಿ ಮತದಾನ- ಜೆಡಿಎಸ್ ಆರೋಪ

    ಕೊಪ್ಪಳ: ನಕಲಿ ಮತದಾರನ್ನು ಕರೆತಂದ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವಿನ ಜಗಳವನ್ನು ನಿಲ್ಲಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ ಘಟನೆ ನಗರದ ಹಮಾಲರ ಕಾಲೊನಿಯ 3ನೇ ವಾರ್ಡ್ ನಲ್ಲಿ ನಡೆದಿದೆ.

    ಇಂದು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಕಾಂಗ್ರೆಸ್ ಕಾರ್ಯಕರ್ತರು ಕೊಪ್ಪಳ ಸಮೀಪದ ಹಾಲರ್ತಿ, ಹೂವಿನಾಳ ಹಾಗೂ ಕುನಿಕೇರಿ ಗ್ರಾಮದಿಂದ ಜನರು ಕರೆಸಿ ಮತದಾನ ಮಾಡಿಸುತ್ತಿದ್ದಾರೆ. ಮತದಾರ ಪಟ್ಟಿಯಲ್ಲಿ ಬೇರೆ ಗ್ರಾಮಗಳ ಜನರ ಹೆಸರು ಇದೆ, ಅದನ್ನು ಪರೀಶಿಲನೆ ಮಾಡಬೇಕೆಂದು ಜಿಲ್ಲಾ ಚುನಾವಣೆ ಆಯೋಗಕ್ಕೆ ಮನವಿ ಮಾಡಿಕೊಂಡಿದ್ದೇವು. ಆದರೆ ಅವರು ಯಾವುದೇ ಕ್ರಮ ಕೈಗೊಂಡಿಲ್ಲ. ಈಗ ಅಕ್ರಮ ಮತದಾನ ನಡೆಯುತ್ತಿದೆ ಎಂದು ಜೆಡಿಎಸ್ ಅಭ್ಯರ್ಥಿ ಮಹ್ಮದ್ ಶಫಿ ಆರೋಪಿಸಿದ್ದಾರೆ.

    ಕಾಂಗ್ರೆಸ್ ಅಭ್ಯರ್ಥಿಯು ಸೋಲುವುದು ಖಚಿತವಾಗಿದ್ದು, ಠೇವಣಿ ಉಳಿಯಬೇಕು ಎನ್ನುವ ಉದ್ದೇಶದಿಂದ ನಕಲಿ ಮತದಾನಕ್ಕೆ ಮುಂದಾಗಿದ್ದಾರೆ. ಗ್ರಾಮೀಣ ಪ್ರದೇಶದ ಜನರಿಗೆ ಹಣ ನೀಡಿ, ಕರೆಸಲಾಗುತ್ತಿದೆ. ಅವರನ್ನು ನಾವು ಹಿಡಿದು ಪೊಲೀಸರಿಗೆ ಒಪ್ಪಿಸಿದರೂ, ಪೊಲೀಸರು ವಶಕ್ಕೆ ಪಡೆದು ಬಳಿಕ ಕೈಬಿಡುತ್ತಿದ್ದಾರೆ. ಅಕ್ರಮವಾಗಿ ನಡೆಯುತ್ತಿರುವ ಚುನಾವಣೆಯನ್ನು ರದ್ದುಗೊಳಿಸಿ, ಮರು ಚುನಾವಣೆಗೆ ಆದೇಶ ಹೊರಡಿಸಬೇಕು ಎಂದು ಸ್ಥಳೀಯ ನಿವಾಸಿಗಳು ಆಗ್ರಹಿಸಿದ್ದಾರೆ.

    ಬೇರೆ ಗ್ರಾಮಗಳಿಂದ ಮತಗಟ್ಟೆಗೆ ಬಂದಿದ್ದ ಕೆಲವರನ್ನು ಸಾರ್ವಜನಿಕರು ಪೊಲೀಸರಿಗೆ ಒಪ್ಪಿಸಿದರು. ಈ ವೇಳೆ ಭಾರೀ ಪ್ರಮಾಣದಲ್ಲಿ ಜನರು ಗಲಾಟೆ ಮಾಡಿದ್ದರಿಂದ ಅವರನ್ನು ಚದುರಿಸಲು ಲಾಠಿ ಚಾರ್ಜ್ ಮಾಡಿದ್ದಾಗಿ ಪೊಲೀಸ್ ಮೂಲಗಳು ತಿಳಿಸಿವೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಯಾವುದೇ ಕಾರಣಕ್ಕೂ ಮೈತ್ರಿಯಿಲ್ಲ- ಮಾಜಿ ಶಾಸಕ ಕೆ.ಎನ್ ರಾಜಣ್ಣ

    ಯಾವುದೇ ಕಾರಣಕ್ಕೂ ಮೈತ್ರಿಯಿಲ್ಲ- ಮಾಜಿ ಶಾಸಕ ಕೆ.ಎನ್ ರಾಜಣ್ಣ

    ತುಮಕೂರು: ರಾಜ್ಯದಲ್ಲಿ ಮೈತ್ರಿ ಸರ್ಕಾರ ಇರಬಹುದು. ಆದ್ರೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಮೈತ್ರಿಯಿಲ್ಲ ಅಂತ ಕಾಂಗ್ರೆಸ್ ಮಾಜಿ ಶಾಸಕ ಕೆ.ಎನ್.ರಾಜಣ್ಣ ಹೇಳಿದ್ದಾರೆ.

    ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮೈತ್ರಿ ಇರಬಹುದು ಮಧುಗಿರಿಯಲ್ಲಿ ಯಾವುದೇ ಕಾರಣಕ್ಕೂ ಮೈತ್ರಿ ಮಂತ್ರ ಇಲ್ಲ. ಸ್ಥಳೀಯ ಮತದಾರರು ಹಾಗೂ ಸ್ಥಳೀಯ ಮುಖಂಡರೇ ನಮಗೆ ಹೈಕಮಾಂಡ್. ಈ ಮೂಲಕ ಹೈಕಮಾಂಡ್ ಗೆ ಮಾತಿಗೂ ಮನ್ನಣೆ ಇಲ್ಲ ಎಂದು ಪರೋಕ್ಷ ಸಂದೇಶ ರವಾನಿಸಿದ್ದಾರೆ.

    ಮಧುಗಿರಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್- ಜೆಡಿಎಸ್ ಬಿಗ್ ಫೈಟ್ ಸಾಧ್ಯತೆ ಇದೆ. ಪುರಸಭೆಯಲ್ಲಿ ಈ ಬಾರಿಯೂ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ ಅಂತ ಪುರಸಭಾ ಚುನಾವಣೆ ಪೂರ್ವಾಭಾವಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಕೆಎನ್‍ಆರ್ ಸ್ಪಷ್ಟಪಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ: www.instagram.com/publictvnews

  • ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಎಚ್.ವಿಶ್ವನಾಥ್ ನೇಮಕ: ಲೋಕಲ್ ಚುನಾವಣೆ ಮೈತ್ರಿಗೆ ಎಚ್‍ಡಿಡಿ ಟ್ವಿಸ್ಟ್

    ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಎಚ್.ವಿಶ್ವನಾಥ್ ನೇಮಕ: ಲೋಕಲ್ ಚುನಾವಣೆ ಮೈತ್ರಿಗೆ ಎಚ್‍ಡಿಡಿ ಟ್ವಿಸ್ಟ್

    ಬೆಂಗಳೂರು: ಮಾಜಿ ಸಚಿವ ಎಚ್.ವಿಶ್ವನಾಥ್ ಅವರನ್ನು ಸರ್ವಾನುಮತದಿಂದ ಜೆಡಿಎಸ್ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದೇವೆ ಎಂದು ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.

    ಪಕ್ಷದ ಕಚೇರಿಯಾದ ಜೆಪಿ ಭವನದಲ್ಲಿ ಜೆಡಿಎಸ್ ಬಾವುಟವನ್ನು ಎಚ್.ಡಿ.ಕುಮಾರಸ್ವಾಮಿ ಅವರು ಎಚ್.ವಿಶ್ವನಾಥ್ ಅವರಿಗೆ ಹಸ್ತಾಂತರಿಸಿ, ಅಧಿಕಾರ ಒಪ್ಪಿಸಿದರು.

    ಸುದ್ದಿಗೊಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಎಚ್.ಡಿ.ಕುಮಾರಸ್ವಾಮಿ ಒಬ್ಬರೇ ಸಿಎಂ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಕೆಲಸ ಮಾಡುವುದು ಕಷ್ಟ. ಒಂದೂವರೆ ತಿಂಗಳ ಹಿಂದೆಯೇ ಕುಮಾರಸ್ವಾಮಿಯೂ ರಾಜ್ಯಾಧ್ಯಕ್ಷ ಜವಾಬ್ದಾರಿಯನ್ನು ಬೇರೆಯವರಿಗೆ ವಹಿಸುವಂತೆ ಕೇಳಿದ್ದರು ಎಂದು ಹೇಳಿದರು.

    ಹಿಂದೆ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಎಂ.ಪಿ.ಪ್ರಕಾಶ್ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಒಬ್ಬ ವ್ಯಕ್ತಿಗೆ ಒಂದೇ ಸ್ಥಾನ ಎನ್ನುವ ಉದ್ದೇಶದಿಂದ ರಾಜ್ಯಾಧ್ಯಕ್ಷ ಜವಾಬ್ದಾರಿಯನ್ನು ಎಚ್.ವಿಶ್ವನಾಥ್ ಅವರಿಗೆ ವಹಿಸಲಾಗಿದೆ ಎಂದರು.

    ಚುನಾವಣೆ ಮೈತ್ರಿಗೆ ಟ್ವಿಸ್ಟ್:
    ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಕಷ್ಟ. ಕಾಂಗ್ರೆಸ್ ಜೊತೆಗೆ ನಮಗೆ ಒಡಂಬಡಿಕೆ ಇದೆ. ಆದರೆ ಸ್ಥಾನಗಳ ಸಂಚಿಕೆಯಲ್ಲಿ ಅವರಿಗೂ ಕಷ್ಟವಾಗುತ್ತದೆ. ಕಾಂಗ್ರೆಸ್ ನಾಯಕರು ಚರ್ಚೆ ಮಾಡಿದ್ದಾರೆ. ಅದರಲ್ಲಿ ಯಾವುದೇ ದೋಷವಿಲ್ಲ. ನಮ್ಮ ಪಕ್ಷವು ಪ್ರತ್ಯೇಕವಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಎದುರಿಸಲಿದೆ. ಚುನಾವಣೆಯಲ್ಲಿ ದೋಸ್ತಿ ಪಕ್ಷಗಳ ಮಧ್ಯೆ ತಿಕ್ಕಾಟ ಇರುವುದಿಲ್ಲ ಎಂದು ಟ್ವಿಸ್ಟ್ ನೀಡಿದ್ದಾರೆ.

    ಯುವಕರಿಗೆ ಪಕ್ಷದಲ್ಲಿ ಮಣೆ:
    ಪಕ್ಷದ ಸಂಘಟನೆ ಉದ್ದೇಶದಿಂದ ಹೊಸದಾಗಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಸಂಪೂರ್ಣವಾಗಿ ಯುವಕರಿಗೆ ಅವಕಾಶ ಕಲ್ಪಿಸಲಾಗುತ್ತದೆ. ಜೊತೆಗೆ ಹಿಂದುಳಿದವರು, ಮುಸ್ಲಿಂ ಸೇರಿದಂತೆ ಇತರರಿಗೂ ಸ್ಥಾನ, ಜವಾಬ್ದಾರಿ ನೀಡಲಾಗುತ್ತದೆ. ಪಕ್ಷದ ಹಿರಿಯರನ್ನು ನಾವು ಕಡೆಗಣಿಸುತ್ತಿಲ್ಲ, ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡೆ ಮುಂದುವರಿಯುತ್ತೇವೆ. ಮುಂದಿನ 10 ದಿನಗಳಲ್ಲಿ ಆಯ್ಕೆ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿಸಿದರು.

    ರಾಷ್ಟ್ರೀಯ ಪಕ್ಷವೊಂದು ಸಾಲಮನ್ನಾ ವಿಚಾರದಲ್ಲಿ ಬೇರೆ ಅರ್ಥ ಕಲ್ಪಿಸಿ, ಗೊಂದಲ ಸೃಷ್ಟಿಸುತ್ತಿದೆ ಎಂದು ಬಿಜೆಪಿ ವಿರುದ್ಧ ದೂರಿದ ಅವರು, ಕುಮಾರಸ್ವಾಮಿ ಬಜೆಟ್ ಮೂರು ಜಿಲ್ಲೆಗೆ ಸೀಮಿತವಾಗಿಲ್ಲ. ಇಂತಹ ಆರೋಪ ತೊಡೆಯಲು ಕಿರುಹೊತ್ತಿಗೆ ಬಿಡುಗಡೆ ಮಾಡಲಾಗುತ್ತದೆ. ಅದನ್ನು ರಾಜ್ಯದ ಮನೆ ಮನೆಗಳಿಗೆ ಹಂಚಿ ಸತ್ಯವನ್ನು ಸಾಬೀತು ಮಾಡುತ್ತೇವೆ ಎಂದು ತಿರುಗೇಟು ನೀಡಿದರು.

    ವಿಧಾನಸಭೆ ವಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ 5 ವರ್ಷ, ನಾನು ಒಂದು ವರ್ಷ ಹಾಗೂ ಕುಮಾರಸ್ವಾಮಿ 20 ತಿಂಗಳು ಮುಖ್ಯಮಂತ್ರಿ ಆಗಿದ್ದೇವೆ. ಯಾರು ಉತ್ತರ ಕರ್ನಾಟಕಕ್ಕೆ ಹೆಚ್ಚು ಕೊಡುಗೆ ನೀಡಿದ್ದಾರೆಂದು ವಿಧಾನಸಭೆಯಲ್ಲಿ ಚರ್ಚೆಯಾಗಲಿ ಎಂದು ಸವಾಲು ಹಾಕಿದರು.