Tag: ಸ್ನೇಹಮಯಿ ಕೃಷ್ಣ

  • ಸೌಜನ್ಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದು ಮಾವ ವಿಠಲ ಗೌಡ: ಸ್ನೇಹಮಯಿ ಕೃಷ್ಣ ಸ್ಫೋಟಕ ಹೇಳಿಕೆ

    ಸೌಜನ್ಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದು ಮಾವ ವಿಠಲ ಗೌಡ: ಸ್ನೇಹಮಯಿ ಕೃಷ್ಣ ಸ್ಫೋಟಕ ಹೇಳಿಕೆ

    – ದಕ್ಷಿಣ ಕನ್ನಡ ಎಸ್‌ಪಿಗೆ ದೂರು ಸಲ್ಲಿಸಿದ ಸಾಮಾಜಿಕ ಹೋರಾಟಗಾರ

    ಮಂಗಳೂರು: ಸೌಜನ್ಯ ಕೊಲೆ ಮಾಡಿದ್ದು ಆಕೆಯ ಮಾವ ವಿಠಲ ಗೌಡ (Vittal Gowda) ಎಂದು ಮೈಸೂರಿನ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ (Snehamayi Krishna) ಆರೋಪಿಸಿದ್ದಾರೆ. ಈ ಕುರಿತು ದಕ್ಷಿಣ ಕನ್ನಡ ಎಸ್‌ಪಿ ಡಾ.ಅರುಣ್ ಕುಮಾರ್‌ಗೆ ದೂರು ಅರ್ಜಿ ಸಲ್ಲಿಸಿದ್ದಾರೆ.

    ಸೌಜನ್ಯಳ ಮೇಲೆ ಸೋದರಮಾವ ವಿಠಲ ಗೌಡಗೆ ಕೆಟ್ಟ ದೃಷ್ಟಿ ಇತ್ತು. ಆಕೆಯನ್ನು ಬಳಸಿಕೊಳ್ಳಲು ಬಹಳ ಸಮಯದಿಂದ ಹವಣಿಸುತ್ತಿದ್ದ. ಒಪ್ಪದೇ ಇದ್ದಂತ ಸಂದರ್ಭದಲ್ಲಿ ಆಕೆ ಮೇಲೆ ಅತ್ಯಾಚಾರ ಮಾಡಿ ಕೊಲೆಗೈದ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಬಂಗ್ಲೆಗುಡ್ಡಕ್ಕೆ ಸೌಜನ್ಯ ಮಾವ ವಿಠಲಗೌಡನ ಕರೆದೊಯ್ದ SIT

    ಸಾಂದರ್ಭಿಕ ಸಾಕ್ಷಿಗಳನ್ನು ಇಟ್ಟುಕೊಂಡು ದಕ್ಷಿಣ ಕನ್ನಡ ಎಸ್ಪಿ ತನಿಖೆ ನಡೆಸಬೇಕೆಂದು ಸ್ನೇಹಮಯಿ ಕೃಷ್ಣ ದೂರಿನ ಮೂಲಕ ಮಂಪರು ಪರೀಕ್ಷೆ ಮಾಡಲು ಆಗ್ರಹಿಸಿದ್ದಾರೆ.

    ಸೌಜನ್ಯ ತಾಯಿ ಕುಸುಮಾವತಿಗೂ ಸಹೋದರ ವಿಠಲ ಗೌಡನ ಮೇಲೆ ಸಂಶಯವಿತ್ತು. ಸೌಜನ್ಯ ಮೃತದೇಹವನ್ನು ನೋಡಲು ಕುಸುಮಾವತಿ ಹೋಗಿರಲಿಲ್ಲ. ಸಂತೋಷ್ ರಾವ್ ಅವರನ್ನು ಈ ಕೃತ್ಯಕ್ಕೆ ಬಳಸಿಕೊಂಡಿರಬಹುದು. ಈ ಬಗ್ಗೆ ನಾನು ಬಹಳ ದಿನಗಳಿಂದ ಮಾಹಿತಿಗಳನ್ನು ಕಲೆ ಹಾಕುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸೌಜನ್ಯ ಕೇಸ್‌| ದಯಾಮರಣ ಕೋರಿ ರಾಷ್ಟ್ರಪತಿಗಳಿಗೆ ಉದಯ್‌ ಜೈನ್‌ ಪತ್ರ

    ಸಂಪೂರ್ಣ ಮರುತನಿಖೆ ನಡೆಸಿ ಆರೋಪಿಗೆ ಶಿಕ್ಷೆ ವಿಧಿಸಬೇಕು. ವಿಠಲ ಗೌಡನ ಮಂಪರು ಪರೀಕ್ಷೆ ಮಾಡಬೇಕು. ಮಂಪರು ಪರೀಕ್ಷೆಯಿಂದ ಸತ್ಯ ಬಹಿರಂಗವಾಗಲಿದೆ ಎಂದು ಹೇಳಿದ್ದಾರೆ.

  • ಮುಡಾ ಹಗರಣ | ಸಿಎಂಗೆ ನಿರಾಸೆ – ತನಿಖೆ ಮುಂದುವರಿಸಿ, ಅಂತಿಮ ವರದಿ ಸಲ್ಲಿಕೆಗೆ ಆದೇಶ

    ಮುಡಾ ಹಗರಣ | ಸಿಎಂಗೆ ನಿರಾಸೆ – ತನಿಖೆ ಮುಂದುವರಿಸಿ, ಅಂತಿಮ ವರದಿ ಸಲ್ಲಿಕೆಗೆ ಆದೇಶ

    – ಕೇಸ್ ಮುಚ್ಚಿ ಹಾಕಲು ಅವಕಾಶ ಕೊಡಲ್ಲ ಎಂದ ಸ್ನೇಹಮಯಿ

    ಬೆಂಗಳೂರು: ಮುಡಾ ಹಗರಣದಲ್ಲಿ (MUDA Scam) ಬಿಗ್ ರಿಲೀಫ್ ನಿರೀಕ್ಷೆಯಲ್ಲಿದ್ದ ಸಿಎಂ ಸಿದ್ಗೆದರಾಮಯ್ಯಗೆ (Siddaramaiah) ನಿರಾಸೆಯಾಗಿದೆ. ತನಿಖೆ ಮುಂದುವರಿಸಿ, ಅಂತಿಮ ವರದಿ ಸಲ್ಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.

    ಸಿಎಂ ವಿರುದ್ಧದ ಬಿ ರಿಪೋರ್ಟ್ ವಿರೋಧಿಸಿ ದೂರುದಾರ ಸ್ನೇಹಮಯಿ ಕೃಷ್ಣ (Snehamayi Krishna) ಮತ್ತು ಇಡಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿ, ಆದೇಶ ಕಾಯ್ದಿರಿಸಿದ್ದ ನ್ಯಾಯಾಲಯ ಅಂತಿಮ ವರದಿ ಬಳಿಕ ಬಿ ರಿಪೋರ್ಟ್ ಬಗ್ಗೆ ತೀರ್ಮಾನ ಮಾಡುವುದಾಗಿ ಹೇಳಿದೆ. ತನಿಖೆ ಮುಂದುವರಿಸಲು ಅನುಮತಿ ನೀಡುವಂತೆ ಕೋರಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಮನವಿಯನ್ನು ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಪುರಸ್ಕರಿಸಿದ್ದಾರೆ. ಇದನ್ನೂ ಓದಿ: ಈ ಬಾರಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯ ಸಾಧ್ಯತೆ – ಮುಂಗಾರು ಮಳೆ ಬಗ್ಗೆ ಹವಾಮಾನ ಇಲಾಖೆ ಮಾಹಿತಿ

    ಆದೇಶದ ಬಳಿಕ ಮಾತನಾಡಿದ ದೂರುದಾರ ಸ್ನೇಹಮಯಿ ಕೃಷ್ಣ ಅವರು, ಲೋಕಾ ಅಧಿಕಾರಿಗಳು ಸಿಎಂ ಕುಟುಂಬವನ್ನ ರಕ್ಷಣೆ ಮಾಡುವುದಕ್ಕೆ ತನಿಖೆ ಪೂರ್ಣಗೊಳಿಸದೇ ವರದಿ ಸಲ್ಲಿಕೆ ಮಾಡಿದ್ದರು. ಹಾಗಾಗಿ ಕೋರ್ಟ್ ಅಂತಿಮ ವರದಿಯನ್ನ ಸಲ್ಲಿಸಲು ಕೋರ್ಟ್ ಸೂಚಿಸಿದೆ ಎಂದಿದ್ದಾರೆ. ಇದನ್ನೂ ಓದಿ: ನವಜಾತ ಶಿಶುಗಳ ಕಳ್ಳಸಾಗಣೆ ಮಾಡಿದರೆ ಆಸ್ಪತ್ರೆಗಳ ಪರವಾನಿಗೆ ಕೂಡಲೇ ಅಮಾನತುಗೊಳಿಸಿ: ಸುಪ್ರೀಂ

    ತನಿಖಾಧಿಕಾರಿಗಳಿಗೆ ತನಿಖೆಯ ಬಗ್ಗೆ ತಿಳಿದಿಲ್ಲ. ಮಾನ್ಯ ನ್ಯಾಯಾಲಯದ ಇಂದಿನ ಆದೇಶದಲ್ಲಿ ಸರ್ಕಾರಕ್ಕೆ ಛೀಮಾರಿ ಹಾಕಿದೆ. ಸಿಎಂ ಅಧಿಕಾರ ದುರುಪಯೋಗಪಡಿಸಿಕೊಂಡು ಕೇಸ್ ಮುಚ್ಚಿ ಹಾಕುವ ಪ್ರಯತ್ನಕ್ಕೆ ನಾನು ಅವಕಾಶ ಕೊಡಲ್ಲ ಎಂದು ಹೇಳಿದ್ದಾರೆ.

  • ಸಿಎಂ ಸಿದ್ದರಾಮಯ್ಯ, ಕುಟುಂಬದ ಮೇಲಿನ ಎಲ್ಲಾ ಆರೋಪಕ್ಕೂ ಸಾಕ್ಷಿ ಇವೆ: ಸ್ನೇಹಮಯಿ ಕೃಷ್ಣ

    ಸಿಎಂ ಸಿದ್ದರಾಮಯ್ಯ, ಕುಟುಂಬದ ಮೇಲಿನ ಎಲ್ಲಾ ಆರೋಪಕ್ಕೂ ಸಾಕ್ಷಿ ಇವೆ: ಸ್ನೇಹಮಯಿ ಕೃಷ್ಣ

    – ಸಿಎಂ ಪಾಲಿಗೆ ಬಿಗ್ ಡೇ! ಲೋಕಾಯುಕ್ತ ಕ್ಲೀನ್‌ಚೀಟ್ ಸರಿ ಇದ್ಯಾ? ಅಥವಾ ಇಲ್ವಾ? – ಅಂತಿಮ ಆದೇಶ ನೀಡಲಿದೆ ಕೋರ್ಟ್‌

    ಮೈಸೂರು: ಸಿಎಂ ಸಿದ್ದರಾಮಯ್ಯ (Siddaramaiah) ಪಾಲಿಗೆ ಇಂದು ಬಿಗ್ ಡೇ. ಮುಡಾ ಹಗರಣ (MUDA Case) ವಿಚಾರದಲ್ಲಿ ಸಿಎಂ ಹಾಗೂ ಸಿಎಂ ಕುಟುಂಬಕ್ಕೆ ಲೋಕಾಯುಕ್ತರು ನೀಡಿರುವ ಕ್ಲೀನ್ ಚೀಟ್ ಪ್ರಶ್ನಿಸಿ ಜನಪ್ರತಿನಿಧಿ ನ್ಯಾಯಾಲಯಕ್ಕೆ ದೂರುದಾರ ಸ್ನೇಹಮಹಿ ಕೃಷ್ಣ ಅರ್ಜಿ ಹಾಕಿದ್ದರು. ಇಡಿ ಕೂಡ ಲೋಕಾಯುಕ್ತ ವರದಿ ಪ್ರಶ್ನಿಸಿ ಅರ್ಜಿ ಹಾಕಿತ್ತು. ಎಲ್ಲರ ವಾದ ಆಲಿಸಿರುವ ನ್ಯಾಯಾಲಯ ಇವತ್ತು ಲೋಕಾಯುಕ್ತ ವರದಿ ಒಪ್ಪಿಕೊಳ್ಳಬೇಕಾ ಅಥವಾ ತಿರಸ್ಕರಿಸಬೇಕಾ ಎಂಬ ಆದೇಶ ನೀಡಲಿದೆ.

    ಈ ಕುರಿತು ‘ಪಬ್ಲಿಕ್‌ ಟಿವಿ’ ಜೊತೆ ಮಾತನಾಡಿರುವ ಸ್ನೇಹಮಯಿ ಕೃಷ್ಣ, ಜನಪ್ರತಿನಿಧಿ ನ್ಯಾಯಾಲಯ ಲೋಕಾಯುಕ್ತ ರೀಪೋರ್ಟ್ ರದ್ದು ಮಾಡುವ ವಿಶ್ವಾಸವಿದೆ. ಸಿಎಂ ಹಾಗೂ ಸಿಎಂ ಕುಟುಂಬದ ಮೇಲಿನ ಎಲ್ಲಾ ಆರೋಪಕ್ಕೂ ಸಾಕ್ಷಿ ಇವೆ. ಲೋಕಾಯುಕ್ತ ಸಿಎಂ ಪ್ರಭಾವಕ್ಕೆ ಒಳಗಾಗಿ ಕ್ಲೀನ್‌ಚೀಟ್ ಕೊಟ್ಟಿದೆ. ನ್ಯಾಯಾಲಯಕ್ಕೆ ಇದನ್ನು ಮನವರಿಕೆ ಮಾಡಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಮುಸ್ಲಿಮರದ್ದು ಕಾಂಟ್ರ್ಯಾಕ್ಟ್‌ ಮ್ಯಾರೇಜ್, ಹಿಂದೂಗಳ ರೀತಿ ಏಳು ಜನ್ಮದ ಅನುಬಂಧ ಅಲ್ಲ: ರಾಯರೆಡ್ಡಿ

    ನ್ಯಾಯಾಲಯ ಲೋಕಾಯುಕ್ತ ರೀಪೋರ್ಟ್ ತಿರಸ್ಕರಿಸುವ ಸಾಧ್ಯತೆ ಇದೆ. ನ್ಯಾಯಾಲಯ ಲೋಕಾಯುಕ್ತ ರೀಪೋರ್ಟ್ ತಿರಸ್ಕರಿಸದೆ ಇದ್ದರೆ ನಾನು ಹೈಕೋರ್ಟ್‌ಗೆ ಅರ್ಜಿ ಹಾಕುತ್ತೇನೆ ಎಂದು ಹೇಳಿದರು.

    ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ತನಿಖೆ ನಡೆಸಿತ್ತು. ತನಿಖೆಯಲ್ಲಿ ಸಿದ್ದರಾಮಯ್ಯಗೆ ಕ್ಲೀನ್‌ಚಿಟ್‌ ಕೊಟ್ಟಿತ್ತು. ಇದನ್ನೂ ಓದಿ: ಜಾತಿ ಜನಗಣತಿ ಯಾವುದೇ ಸಮಾಜದ ಪರ, ವಿರೋಧ ನಿರ್ಣಯ ಮಾಡೋದಲ್ಲ: ಶಿವಾನಂದ ಪಾಟೀಲ್

  • ಮುಡಾ ಕೇಸ್| ಸಿಎಂ ವಿರುದ್ಧ ನನಗೆ ಅತಿ ಹೆಚ್ಚಿನ ದಾಖಲೆ ಕೊಟ್ಟಿದ್ದೇ ಕಾಂಗ್ರೆಸ್ ನಾಯಕರು: ಸ್ನೇಹಮಯಿ ಕೃಷ್ಣ

    ಮುಡಾ ಕೇಸ್| ಸಿಎಂ ವಿರುದ್ಧ ನನಗೆ ಅತಿ ಹೆಚ್ಚಿನ ದಾಖಲೆ ಕೊಟ್ಟಿದ್ದೇ ಕಾಂಗ್ರೆಸ್ ನಾಯಕರು: ಸ್ನೇಹಮಯಿ ಕೃಷ್ಣ

    – ಸಿದ್ದರಾಮಯ್ಯ ಭ್ರಷ್ಟಾಚಾರದ ಬಗ್ಗೆ ಅಸಮಾಧಾನ ಇರುವ ಜನ ಕಾಂಗ್ರೆಸ್‌ನಲ್ಲಿ ಹೆಚ್ಚಿದ್ದಾರೆ ಎಂದ ದೂರುದಾರ

    ಮೈಸೂರು: ಮುಡಾ ಹಗರಣದಲ್ಲಿ ನನಗೆ ಸಿಎಂ ವಿರುದ್ಧ ಅತಿ ಹೆಚ್ಚಿನ ದಾಖಲೆ ಕೊಟ್ಟಿದ್ದೆ ಕಾಂಗ್ರೆಸ್ ನಾಯಕರು ಎಂದು ದೂರುದಾರ ಸ್ನೇಹಮಯಿ ಕೃಷ್ಣ ಸ್ಫೋಟಕ ಹೇಳಿಕೆ ನೀಡಿದ್ದಾರೆ.

    ‘ಪಬ್ಲಿಕ್ ಟಿವಿ’ ಜೊತೆ ಮಾತಾಡಿದ ಅವರು, ಮುಡಾ ಹಗರಣದ ವಿಚಾರದಲ್ಲಿ ಕಳೆದ ಜನವರಿ ತಿಂಗಳಿಂದ ನನಗೆ ಅತಿ ಹೆಚ್ಚಿನ ದಾಖಲೆಗಳು ಕಾಂಗ್ರೆಸ್ ನಾಯಕರಿಂದ ಬಂದಿವೆ. ಕಾಂಗ್ರೆಸ್ ನಾಯಕರು ಕೊಟ್ಟಿರುವ ದಾಖಲೆಗಳು ನನ್ನ ಹೋರಾಟದ ವೇಗ ಹೆಚ್ಚಿಸಿವೆ ಎಂದು ತಿಳಿಸಿದ್ದಾರೆ.

    ಕಾಂಗ್ರೆಸ್‌ನಲ್ಲೂ ಸಿಎಂ ಭ್ರಷ್ಟಾಚಾರದ ಬಗ್ಗೆ ಅಸಮಾಧಾನ ಇರುವ ಜನ ಹೆಚ್ಚಿದ್ದಾರೆ. ಪಕ್ಷದ ಒಳಗೆ ಅದನ್ನು ತೋರಿಸಲು ಅವರಿಗೆ ಆಗಲ್ಲ. ಹೀಗಾಗಿ, ನನಗೆ ದಾಖಲೆ ಕೊಟ್ಟಿದ್ದಾರೆ. ಕಾಂಗ್ರೆಸ್‌ನ ಯಾವ ಹಂತದ ನಾಯಕರು, ಅವರು ಯಾರು ಅನ್ನೋದನ್ನು ನಾನು ಹೇಳುವುದಿಲ್ಲ ಎಂದಿದ್ದಾರೆ.

  • ನಾನು ಓದಿರೋದು 10ನೇ ತರಗತಿ, ಮುಡಾ ಕೇಸ್‌ನಲ್ಲಿ ನಾನೇ ವಾದ ಮಾಡ್ತೀನಿ: ಸ್ನೇಹಮಹಿ ಕೃಷ್ಣ

    ನಾನು ಓದಿರೋದು 10ನೇ ತರಗತಿ, ಮುಡಾ ಕೇಸ್‌ನಲ್ಲಿ ನಾನೇ ವಾದ ಮಾಡ್ತೀನಿ: ಸ್ನೇಹಮಹಿ ಕೃಷ್ಣ

    ಮೈಸೂರು: ಮುಡಾ (MUDA Scam) ಬ್ರಹ್ಮಾಂಡ ಭ್ರಷ್ಟಾಚಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಹೈಕೋರ್ಟ್ ನಕಾರ ಹಿನ್ನೆಲೆಯಲ್ಲಿ ಸರ್ವೋಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸುವ ನಿರ್ಧಾರದಿಂದ ದೂರುದಾರ ಸ್ನೇಹಮಹಿ ಕೃಷ್ಣ (Snehamayi Krishna) ಹಿಂದೆ ಸರಿದಿದ್ದಾರೆ. ಜನ ಪ್ರತಿನಿಧಿ ನ್ಯಾಯಾಲಯದಲ್ಲಿ ತಾನೇ ಕೇಸ್ ವಾದಿಸಲು ಸ್ನೇಹಮಹಿ ಕೃಷ್ಣ ಮುಂದಾಗಿದ್ದಾರೆ.

    ಈ ಬಗ್ಗೆ ‘ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಅವರು, ಉಚ್ಚ ನ್ಯಾಯಾಲಯವು ನನ್ನ ಅರ್ಜಿಗೆ ಸಂಬಂಧಿಸಿದಂತೆ ನೀಡಿರುವ ತೀರ್ಪಿನ ಅಂಶಗಳನ್ನು ಓದಿದ್ದೇನೆ. ನನ್ನ ಬಳಿ ಇರುವ ಸಾಕ್ಷ್ಯಾಧಾರಗಳನ್ನು ಮತ್ತೊಮ್ಮೆ ಪರಿಶೀಲನೆ ನಡೆಸಿದ್ದೇನೆ. ನನ್ನ ಇದುವರೆಗಿನ ಕಾನೂನು ಹೋರಾಟದ ಅನುಭವವನ್ನು ಆಧರಿಸಿ ಈ ನಿರ್ಧಾರಕ್ಕೆ ಬಂದಿದ್ದೇನೆ. ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಲು ಸದ್ಯ ಸರ್ವೋಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲ್ಲ. ಲೋಕಾಯುಕ್ತ ಅಧಿಕಾರಿಗಳು ಏನೇ ವರದಿ ಸಲ್ಲಿಸಿದರೂ ಸರಿ. ನನ್ನ ಬಳಿ ಇರುವ ಸಾಕ್ಷ್ಯಾಧಾರಗಳನ್ನು ಆಧರಿಸಿ ಹೋರಾಡುತ್ತೇನೆ ಎಂದರು. ಇದನ್ನೂ ಓದಿ: Bengaluru | ಏರ್‌ ಶೋ ಹಿನ್ನೆಲೆ ಟ್ರಾಫಿಕ್ ಜಾಮ್ ಬಿಸಿ – ಕಿಲೋಮೀಟರ್‌ಗಟ್ಟಲೆ ನಿಂತ ವಾಹನಗಳು

    ನಾನು ಮಾಡಿರುವ ಆರೋಪವನ್ನು ಸಾಬೀತು ಪಡಿಸಿ, ಆರೋಪಿತರಿಗೆ ಶಿಕ್ಷೆ ಕೊಡಿಸಬಹುದು ಎಂಬ ವಿಶ್ವಾಸ ಮೂಡಿದೆ. ಖುದ್ದಾಗಿ ನಾನೇ ಮಾನ್ಯ ನ್ಯಾಯಾಲಯಕ್ಕೆ ಸಾಕ್ಷಾಧಾರಗಳನ್ನು ಒದಗಿಸಿ, ವಾದ ಮಂಡನೆ ಮಾಡುವೆ. ನಾನು ಓದಿರುವುದು 10ನೇ ತರಗತಿ. ಜ್ಞಾನದ ಮುಂದೆ ಯಾವುದೂ ಇಲ್ಲ. ನಾನು ಪ್ರತಿನಿತ್ಯ ಪುಸ್ತಕಗಳನ್ನ ಓದಿ ಸಾಕಷ್ಟು ತಿಳಿದುಕೊಂಡಿದ್ದೇನೆ. ನಾನು ಮಾಡಿರುವ ಆರೋಪವನ್ನು ಸಾಬೀತು ಪಡಿಸಿ, ಆದಷ್ಟು ಬೇಗ ಆರೋಪಿಗಳಿಗೆ ಶಿಕ್ಷೆ ಕೊಡಿಸುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ದೇಶದ ವಿವಿಧ ನಗರಗಳ ಮೆಟ್ರೋ ದರಕ್ಕಿಂತಲೂ ಬೆಂಗಳೂರು ಮೆಟ್ರೋ ದರವೇ ದುಬಾರಿ!

  • MUDA Case | ಸಿಎಂ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಹೋಗ್ತೀನಿ – ಸ್ನೇಹಮಯಿ ಕೃಷ್ಣ

    MUDA Case | ಸಿಎಂ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಹೋಗ್ತೀನಿ – ಸ್ನೇಹಮಯಿ ಕೃಷ್ಣ

    ಮೈಸೂರು/ಧಾರವಾಡ: ನಮ್ಮ ಹೋರಾಟಕ್ಕೆ ಒಂದು ಹಿನ್ನಡೆಯಾಗಿದೆ, ಇದಕ್ಕಾಗಿ ಹೋರಾಟದಿಂದ ಹಿಂದೆ ಸರಿಯಲ್ಲ. ಸುಪ್ರೀಂ ಕೋರ್ಟ್‌ಗೆ ಹೋಗ್ತೀನಿ ಎಂದು ಮುಡಾ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ (Snehamayi Krishna) ಹೇಳಿದ್ದಾರೆ.

    ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಪ್ರಕರಣದ (MUDA Case) ತನಿಖೆಯನ್ನು ಸಿಬಿಐಗೆ ವಹಿಸಲು ಧಾರವಾಡ ಹೈಕೋರ್ಟ್‌ (Dahrwad High Court) ನಿರಾಕರಿಸಿದ್ದರ ಕುರಿತು ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಅವರು ಮಾತನಾಡಿದ್ದಾರೆ. ಮಾತನಾಡಿದ ಅವರು, ನಮ್ಮ ಹೋರಾಟಕ್ಕೆ ಒಂದು ಹಿನ್ನಡೆಯಾಗಿದೆ. ಆದ್ರೆ ಇದಕ್ಕಾಗಿ ಹೋರಾಟದಿಂದ ಹಿಂದೆ ಸರಿಯಲ್ಲ. ಸುಪ್ರೀಂ ಕೋರ್ಟ್‌ಗೆ ಹೋಗ್ತೀನಿ ಎಂದು ಹೇಳಿದ್ದಾರೆ.

    ನ್ಯಾಯಾಲಯ ಯಾವ ವಿಚಾರವನ್ನಿಟ್ಟುಕೊಂಡು ಸಿಬಿಐ ತನಿಖೆಗೆ ಕೊಡಲು ನಿರಾಕರಿಸಿದೆ ಗೊತ್ತಿಲ್ಲ. ಆ ಅಂಶಗಳನ್ನು ನೋಡಿ ನಮ್ಮ ವಕೀಲರ ಜೊತೆ ಮಾತಾಡುತ್ತೇನೆ. ಬಳಿಕ ನಾವು ಸುಪ್ರೀಂ ಕೋರ್ಟ್‌ಗೆ ಹೋಗುತ್ತೇವೆ. ಲೋಕಾಯುಕ್ತ ತನಿಖೆ ಮೇಲೆ ನಮಗೆ ನಂಬಿಕೆ ಇಲ್ಲ. ಸಿದ್ದರಾಮಯ್ಯ ಅವರು ಹೇಳಿದಂತೆ ತನಿಖೆ ನಡೆಯುತ್ತಿದೆ ಎಂಬ ಅನುಮಾನ ಇತ್ತು. ಅದಕ್ಕಾಗಿ ನಾವು ಸಿಬಿಐಗೆ ಹೋಗಬೇಕೆಂದು ಹೋರಾಟ ಮಾಡ್ತೀವಿ. ಮುಂದಿನ ವಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುತ್ತೇವೆ. ಈ ಪ್ರಕರಣವನ್ನ ಸಿಬಿಐಗೆ ನೀಡುವಂತೆ ಹೋರಾಟ ಮಾಡ್ತೀವಿ ಎಂದು ತಿಳಿಸಿದ್ದಾರೆ.

    ಯುದ್ಧದಲ್ಲಿ ಸೋಲು ಗೆಲುವು ಸಹಜ. ಇದುವರೆಗೆ ನಾವು ಗೆದ್ದಿದ್ದೆವು, ಈಗ ಸಣ್ಣ ಹಿನ್ನಡೆಯಾಗಿದೆ ಅಷ್ಟೇ. ಇದರಿಂದ ನಾನು ವ್ಯತಿರಿಕ್ತವಾಗುವುದಿಲ್ಲ. ಈಗಲೂ ನನಗೆ ಲೋಕಾಯುಕ್ತದ ತನಿಖೆ ಮೇಲೆ ನಂಬಿಕೆ ಇಲ್ಲ. ಸುಪ್ರೀಂ ಕೋರ್ಟ್‌ ಮುಡಾ ಪ್ರಕರಣವನ್ನ ಸಿಬಿಐ ತನಿಖೆಗೆ ವಹಿಸುತ್ತದೆ ಎಂಬ ನಂಬಿಕೆಯಿದೆ ಎಂದು ನುಡಿದಿದ್ದಾರೆ. ಇದನ್ನೂ ಓದಿ: ಬ್ರ್ಯಾಂಡ್‌ ನೇಮ್‌ ಚೇಂಜ್‌; ‘ಎಟರ್ನಲ್‌’ ಎಂದು ಹೆಸರು ಬದಲಿಸಿಕೊಂಡ Zomato

    ಇನ್ನೂ ಕೋರ್ಟ್‌ ತೀರ್ಪಿನ ಕುರಿತು ಸ್ನೇಹಮಹಿ ಕೃಷ್ಣ ಪರ ವಕೀಲರಾದ ಲಕ್ಷ್ಮಣ ರಾವ್‌ ಕುಲಕರ್ಣಿ, ವಕೀಲೆ ಪೂಜಾ ಸವದತ್ತಿ ʻಪಬ್ಲಿಕ್ ಟಿವಿʼಗೆ ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ: ಸಿಎಂ ನೈತಿಕತೆ ಕಳೆದುಕೊಂಡಿದ್ದಾರೆ, ಮುಡಾ ಕೇಸ್‌ ಸಿಬಿಐಗೆ ಹೋಗೋದು ನಿಶ್ಚಿತ: ಸ್ನೇಹಮಹಿ ಕೃಷ್ಣ

    ತೀರ್ಪು ನಮ್ಮ ಪರವಾಗಿ ಭರವಸೆ ಇತ್ತು, ನಾವು ಕೂಡ ಸಾಕಷ್ಟು ತಯಾರಿ ಮಾಡಿಕೊಂಡೇ ವಾದ ಮಂಡನೆ ಮಾಡಿದ್ದೆವು. ಆದರೆ ಅರ್ಜಿ ಯಾಕೆ ವಜಾ ಆಗಿದೆ ಎನ್ನುವ ಸಂಪೂರ್ಣ ಮಾಹಿತಿ ಇನ್ನೂ ಗೊತ್ತಾಗಿಲ್ಲ. ತೀರ್ಪಿನ ಆದೇಶ ಪ್ರತಿ ಅಧಿಕೃತವಾಗಿ ನಮ್ಮ ಕೈಗೆ ಸಿಕ್ಕಿಲ್ಲ. ಆದೇಶ ಪ್ರತಿಗಾಗಿ ಮನವಿ ಸಲ್ಲಿಕೆ ಮಾಡಿದ್ದೇವೆ. ಇಂದು ಸಂಜೆ ಸಿಗುವ ಭರವಸೆಯಿದೆ. ಸದ್ಯ ಹೈಕೋರ್ಟ್‌ ನೀಡಿರುವ ತೀರ್ಪಿಗೆ ತಲೆ ಬಾಗುತ್ತೇವೆ. ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಕೆ ಮಾಡುತ್ತೇವೆ ಎಂದು ಸ್ನೇಹಮಯಿ ಕೃಷ್ಣ ಪರ ವಕೀಲರು ಹೇಳಿದ್ದಾರೆ. ಇದನ್ನೂ ಓದಿ: ಟೋಲ್ ತಪ್ಪಿಸುತ್ತಿದ್ದ ವಾಹನ ಸವಾರರಿಗೆ ಹೆದ್ದಾರಿ ಪ್ರಾಧಿಕಾರ ಶಾಕ್; ಬಿಡದಿ ಬಳಿಯ ಎಕ್ಸಿಟ್ ರೋಡ್ ಬಂದ್

  • ಸಿಎಂ ನೈತಿಕತೆ ಕಳೆದುಕೊಂಡಿದ್ದಾರೆ, ಮುಡಾ ಕೇಸ್‌ ಸಿಬಿಐಗೆ ಹೋಗೋದು ನಿಶ್ಚಿತ: ಸ್ನೇಹಮಹಿ ಕೃಷ್ಣ

    ಸಿಎಂ ನೈತಿಕತೆ ಕಳೆದುಕೊಂಡಿದ್ದಾರೆ, ಮುಡಾ ಕೇಸ್‌ ಸಿಬಿಐಗೆ ಹೋಗೋದು ನಿಶ್ಚಿತ: ಸ್ನೇಹಮಹಿ ಕೃಷ್ಣ

    – ನೈತಿಕತೆಯಿಂದ ಕೊಡಲ್ಲ, ಹೈಕಮಾಂಡ್‌ ರಾಜೀನಾಮೆ ಪಡೆಯುವ ಸಮಯ ಬಂದಿದೆ ಎಂದ ದೂರುದಾರ

    ಮೈಸೂರು: ಮುಡಾ ಹಗರಣ (MUDA Scam) ತನಿಖೆಯನ್ನು ನ್ಯಾಯಾಲಯ ಸಿಬಿಐಗೆ ಕೊಟ್ಟೇ ಕೊಡುತ್ತದೆ. ಸಿಎಂ‌ ಸಿದ್ದರಾಮಯ್ಯ ನೈತಿಕತೆ ಕಳೆದು ಕೊಂಡಿದ್ದಾರೆ. ಹೀಗಾಗಿ ಅವರಿಗೆ ಅವರೇ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲ್ಲ. ಬದಲಾಗಿ ಹೈಕಮಾಂಡ್ ಅವರ ರಾಜೀನಾಮೆ ಪಡೆಯುವ ಕ್ಷಣ ಹತ್ತಿರ ಬಂದಿದೆ ಎಂದು ದೂರುದಾರ ಸ್ನೇಹಮಹಿ ಕೃಷ್ಣ (Snehamayi Krishna) ʻಪಬ್ಲಿಕ್ ಟಿವಿʼಗೆ ಹೇಳಿದ್ದಾರೆ.

    ಸಿದ್ದರಾಮಯ್ಯಗೆ (Siddaramaiah) ಮಾತ್ರವಲ್ಲ ಮುಡಾ ಹಗರಣದಲ್ಲಿ ಭಾಗಿಯಾಗಿರುವ ಎಲ್ಲರಿಗೂ ಸಂಕಷ್ಟ ಕಟ್ಟಿಟ್ಟ ಬುತ್ತಿ. ಎಲ್ಲರಿಗೂ ಶಿಕ್ಷೆ ಕೊಡಿಸಿಯೇ ಕೊಡಿಸುತ್ತಿನಿ. ಮುಡಾಕ್ಕೆ ಎಲ್ಲಾ ಸೈಟ್ ವಾಪಸ್ ಬರಬೇಕು. ಎಲ್ಲರಿಗೂ ಶಿಕ್ಷೆ ಕೊಡಿಸುವವರೆಗೂ ನಾನು ಈ ಹೋರಾಟ ನಿಲ್ಲಿಸಲ್ಲ ಎಂದು ಶಪಥ ಮಾಡಿದ್ದಾರೆ. ಇದನ್ನೂ ಓದಿ: 2027ಕ್ಕೆ ಚಂದ್ರಯಾನ-4, 2026ಕ್ಕೆ ಗಗನಯಾನ: ಜಿತೇಂದ್ರ ಸಿಂಗ್‌

    ಸಿಎಂ ಸಿದ್ದರಾಮಯ್ಯಗೆ ಇಂದು ಬಿಗ್ ಡೇ:
    ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿದ್ದ ಅರ್ಜಿ ವಿಚಾರಣೆಯನ್ನು ಜ.27ರಂದು ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ಧಾರವಾಡ ಹೈಕೋರ್ಟ್‌ ಇಂದು 10:30ಕ್ಕೆ ವೇಳೆಗೆ ಪ್ರಕಟಿಸಲಿದೆ. ಇದನ್ನೂ ಓದಿ: ಟೋಲ್ ತಪ್ಪಿಸುತ್ತಿದ್ದ ವಾಹನ ಸವಾರರಿಗೆ ಹೆದ್ದಾರಿ ಪ್ರಾಧಿಕಾರ ಶಾಕ್; ಬಿಡದಿ ಬಳಿಯ ಎಕ್ಸಿಟ್ ರೋಡ್ ಬಂದ್

    ಪ್ರಕರಣವನ್ನು ಸಿಬಿಐಗೆ ವಹಿಸಲು ಕೋರಿ ದೂರುದಾರ ಸ್ನೇಹಮಯಿ ಕೃಷ್ಣ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಸುಧೀರ್ಘವಾಗಿ ವಾದ- ಪ್ರತಿವಾದ ಆಲಿಸಿದ್ದ ಹೈಕೋರ್ಟ್ ಧಾರವಾಡ ಪೀಠ ಆದೇಶವನ್ನು ಕಾಯ್ದಿರಿಸಿತ್ತು. ಪ್ರತಿಹಂತದಲ್ಲೂ ಲೋಕಾಯುಕ್ತದ ತನಿಖಾ ವರದಿಯನ್ನು ಪಡೆದಿರೋ ಹೈಕೋರ್ಟ್, ಎಲ್ಲವನ್ನೂ ಕೂಲಂಕುಶವಾಗಿ ಪರಿಶೀಲಿಸಿದೆ. ಹೀಗಾಗಿ ಇಂದು ಹೈಕೋರ್ಟ್ ನೀಡಲಿರುವ ಆದೇಶ ಸಾಕಷ್ಟು ಕುತೂಹಲ ಕೆರಳಿಸಿದೆ. ಒಂದೊಮ್ಮೆ ಸ್ನೇಹಮಯಿ ಕೃಷ್ಣ ಅರ್ಜಿ ಊರ್ಜಿತವಾಗಿ ಪ್ರಕರಣ ಸಿಬಿಐಗೆ ವರ್ಗಾವಣೆ ಆದ್ರೆ ಸಿಎಂ ಸಿದ್ದರಾಮಯ್ಯಗೆ ಬಹುದೊಡ್ಡ ಸಂಕಷ್ಟ ಎದುರಾಗಲಿದೆ.

  • ರಕ್ತಾಭಿಷೇಕ ನಡೆದಿದ್ದು ಬಲಪಡಿಸೋದಕ್ಕಲ್ಲ, ನನ್ನ ವಶೀಕರಣಕ್ಕೆ – ಸ್ನೇಹಮಯಿ ಕೃಷ್ಣ ದೂರು

    ರಕ್ತಾಭಿಷೇಕ ನಡೆದಿದ್ದು ಬಲಪಡಿಸೋದಕ್ಕಲ್ಲ, ನನ್ನ ವಶೀಕರಣಕ್ಕೆ – ಸ್ನೇಹಮಯಿ ಕೃಷ್ಣ ದೂರು

    ಮೈಸೂರು: ಮುಡಾ ಪ್ರಕರಣದ (MUDA Case) ದೂರುದಾರ ಸ್ನೇಹಮಯಿ ಕೃಷ್ಣ ಹಾಗೂ ಗಂಗರಾಜು ಪೋಟೋಗೆ ರಕ್ತದ ಅಭಿಷೇಕ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೂಜೆ ಮಾಡಿದ್ದು, ಶಕ್ತಿ ತುಂಬಲು ಅಲ್ಲ ವಶೀಕರಣಕ್ಕೆ ಎಂದು ಸ್ನೇಹಮಯಿ ಕೃಷ್ಣ (Snehamayi Krishna) ಗಂಭೀರ ಆರೋಪ ಮಾಡಿ ಮಂಗಳೂರು ಪೊಲೀಸ್ ಕಮಿಷನರ್‌ಗೆ (Mangaluru Police Commissioner) ಸ್ನೇಹಮಯಿಕೃಷ್ಣ ಲಿಖಿತ ದೂರು ನೀಡಿದ್ದಾರೆ.

    ಬರ್ಕೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ 13/2025 ಸಂಖ್ಯೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಿ ಸತ್ಯಾಂಶವನ್ನು ತಿಳಿದುಕೊಂಡು ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸಿ ಎಂದು ದೂರು ನೀಡಿದ್ದಾರೆ. ಇದನ್ನೂ ಓದಿ: ಸ್ನೇಹಮಯಿ ಕೃಷ್ಣ ಕೈಬಲಪಡಿಸಲು ಮಂಗಳೂರಲ್ಲಿ ಪ್ರಾಣಿಬಲಿ ಶಂಕೆ

    ಮುಡಾ ಪ್ರಕರಣದಲ್ಲಿ ಹೋರಾಟ ನಡೆಸುತ್ತಿರುವ ಸ್ನೇಹಮಯಿ ಕೃಷ್ಣ ಮತ್ತು ಗಂಗರಾಜುರವರಿಗೆ ಬಲ ತುಂಬುವ ಸಲುವಾಗಿ ಈ ರೀತಿ ಮಾಡಲಾಗಿದೆ ಎಂದು ಹೇಳಿರುತ್ತೀರಿ. ಆದರೆ ನನ್ನ ಅನುಭವ ಮತ್ತು ಲಭ್ಯವಿರುವ ಮಾಹಿತಿ ಪ್ರಕಾರ ನಮಗೆ ಬಲ ತುಂಬುವ ಸಲುವಾಗಿ ಈ ಕೃತ್ಯ ನಡೆಸಿರುವುದಿಲ್ಲ. ನಮ್ಮನ್ನು ವಶೀಕರಣ ಮಾಡಿಕೊಂಡು, ಆಮೀಷಕ್ಕೆ ಒಳಪಡಿಸಿ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಅವರಿಗೆ ಅನುಕೂಲ ಮಾಡಿಕೊಡಬೇಕು. ಮುಡಾ ಹೋರಾಟದಿಂದ ಹಿಂದೆ ಸರಿಯಬೇಕು ಅಂತ ಹೀಗೆ ಮಾಡಿರುವುದಾಗಿ ದೂರಿನಲ್ಲಿ ತಿಳಿಸಿದ್ದರೆ. ಇದನ್ನೂ ಓದಿ: ಬಜೆಟ್‌ ಮಂಡನೆ ವೇಳೆ ನಿರ್ಮಲಾ ಉಲ್ಲೇಖಿಸಿದ ಕವಿತೆ ಬರೆದ ಗುರಜದ ವೆಂಕಟ ಅಪ್ಪರಾವ್ ಯಾರು ಗೊತ್ತಾ?

    ಅದರಲ್ಲೂ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಕರ್ನಾಟಕ ಹೈಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿಯನ್ನು ಹಿಂದಕ್ಕೆ ಪಡೆಯಬೇಕು. ಈ ದುರುದ್ದೇಶದಿಂದ ಈ ಕೃತ್ಯವನ್ನು ನಡೆಸಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಈ ಕೆಳಕಂಡ ಸಾಕ್ಷ್ಯಾಧಾರಗಳನ್ನು ನೀಡುತ್ತಿದ್ದೇನೆ. ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಿ ಎಂದು ಮಂಗಳೂರು ಕಮಿಷನರ್‌ಗೆ ಲಿಖಿತ ದೂರು ನೀಡಿದ್ದಾರೆ. ಇದನ್ನೂ ಓದಿ: ಅನಗತ್ಯ ವೆಚ್ಚ, ಲೂಟಿಗೆ ಕಡಿವಾಣ ಹಾಕಿ ಅತ್ಯಧಿಕ ಗಾತ್ರದ ಬಜೆಟ್‌ ಮಂಡಿಸಿದ ಕೇಂದ್ರ ಸರ್ಕಾರ: ಆರ್‌.ಅಶೋಕ್

  • ಸ್ನೇಹಮಯಿ ಕೃಷ್ಣ ಕೈಬಲಪಡಿಸಲು ಮಂಗಳೂರಲ್ಲಿ ಪ್ರಾಣಿಬಲಿ ಶಂಕೆ

    ಸ್ನೇಹಮಯಿ ಕೃಷ್ಣ ಕೈಬಲಪಡಿಸಲು ಮಂಗಳೂರಲ್ಲಿ ಪ್ರಾಣಿಬಲಿ ಶಂಕೆ

    – ನನ್ನ ಕುಗ್ಗಿಸಲು ಹಲವು ಪ್ರಯತ್ನ ನಡೆದಿದೆ ಎಂದ ಸಾಮಾಜಿಕ ಕಾರ್ಯಕರ್ತ
    – ಪ್ರಸಾದ್ ಅತ್ತಾವರ ವಿರುದ್ಧ ಮತ್ತೊಂದು ಎಫ್‌ಐಆರ್

    ಮೈಸೂರು: ಮುಡಾ ಹಗರಣ (MUDA Case) ಬಯಲಿಗೆಳೆದ ಸಾಮಾಜಿಕ ಕಾರ್ಯಕರ್ತ ಸ್ನೇಹಿಮಯಿ ಕೃಷ್ಣ (Snehamayi Krishna) ಅವರನ್ನು ಬಲಪಡಿಸಲು ಪ್ರಾಣಿಬಲಿ ಕೊಟ್ಟಿರುವ ಶಂಕೆ ವ್ಯಕ್ತವಾಗಿದೆ.

    ಮಂಗಳೂರಿನಲ್ಲಿ (Mangaluru) ಸ್ನೇಹಮಯಿ ಕೃಷ್ಣ ಅವರ ಹೆಸರಿನಲ್ಲಿ ವಾಮಾಚಾರ ನಡೆದಿದೆ ಎನ್ನಲಾಗಿದೆ. ದೇವಿ ಮುಂದೆ ಸ್ನೇಹಮಯಿ ಕೃಷ್ಣ ಅವರ ಭಾವಚಿತ್ರ ಇಡಲಾಗಿದೆ. ಜೊತೆಗೆ ದೇವಿಗೆ ರಕ್ತಾಭಿಷೇಕ ಮಾಡಿರುವ ಫೋಟೋ ರಿವೀಲ್ ಆಗಿದೆ. ಇದನ್ನೂ ಓದಿ: ಮುಡಾ ಹಗರಣದಲ್ಲಿ ಅಕ್ರಮ ಹಣದ ವರ್ಗಾವಣೆಯಾಗಿದೆ – ಇಡಿಯಿಂದ ಸಬ್ ರಿಜಿಸ್ಟ್ರಾರ್‌ಗಳಿಗೆ 104 ಪುಟಗಳ ಪತ್ರ

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಸ್ನೇಹಮಯಿ ಕೃಷ್ಣ, ಯಾವ ಕಾರಣಕ್ಕೆ ಮಾಡಿದ್ದಾರೆ ಎಂಬುದು ಗೊತ್ತಿಲ್ಲ. ನನ್ನ ಪರವಾಗಿ ಅಥವಾ ನನಗೆ ಶಕ್ತಿ ತುಂಬಲು ಈ ರೀತಿ ಮಾಡಿಲ್ಲ. ಹರ್ಷ ಮತ್ತು ಶ್ರೀನಿಧಿ ನನ್ನ ಬಳಿಗೆ ಪಾರ್ವತಿ ಸಿದ್ದರಾಮಯ್ಯ ಪರವಾಗಿ ಬಂದಿದ್ದರು. ಅವರ ಪರವಾಗಿ ಬಂದು ಆಮಿಷವೊಡ್ಡಿದ್ದರು. ಇದರಿಂದ ನನ್ನ ಪರ ಹೇಗೆ ಅನ್ನುವುದು ಗೊತ್ತಿಲ್ಲ ಎಂದು ಅನುಮಾನ ವ್ಯಕ್ತಪಡಿಸಿದರು.

    ಬ್ಲಾಕ್ ಟೀ ಶರ್ಟ್ ಹಾಕಿರುವ ವ್ಯಕ್ತಿ ನಮ್ಮ ಬಾಸ್ ಅಂತ ಶ್ರೀನಿಧಿ ಮತ್ತು ಹರ್ಷ ನನ್ನ ಮಗನಿಗೆ ಪೋಟೋ ತೋರಿಸಿದ್ದಾರೆ. ಇವರು ಮಂಗಳೂರಿನಲ್ಲಿ ಇದ್ದಾರೆ. ಇವರು ಹೇಳಿದ್ದಂತೆ ಮಾಡುತ್ತೇವೆ ಎಂದಿದ್ದರು. ನನ್ನ ಪರವಾಗಿ ಅಲ್ಲ, ನನ್ನ ವಶಪಡಿಸಿಕೊಳ್ಳಲು ಈ ರೀತಿ ಮಾಡಿರಬಹುದು. ಹಲವು ರೀತಿ ನನ್ನ ಕುಗ್ಗಿಸುವ ಹಲವು ಪ್ರಯತ್ನ ನಡೆದಿದೆ. ಅದರಲ್ಲಿ ಇದು ಒಂದಾಗಿದೆ ಎಂದರು. ಇದನ್ನೂ ಓದಿ: ಮುಡಾ ಕೇಸ್‌ನಲ್ಲಿ ಸಿಎಂ ಪರ ನಾವೆಲ್ಲ ನಿಂತುಕೊಳ್ತೀವಿ – ಪರಮೇಶ್ವರ್

    ಅವರು ಏನೇ ಪ್ರಯತ್ನ ಪಟ್ಟರೂ, ನನ್ನ ಹೋರಾಟ ನಿಲ್ಲಿಸಲ್ಲ ಎಂದು ಸ್ಪಷ್ಟಪಡಿಸಿದರು.

    ಸಲೂನ್‌ವೊಂದರ ಮೇಲೆ ದಾಳಿ ನಡೆಸಿದ ಪ್ರಕರಣದಲ್ಲಿ ವಿಚಾರಣೆ ವೇಳೆ ಪ್ರಸಾದ್ ಅತ್ತಾವರ ಮೊಬೈಲ್‌ನಲ್ಲಿ ಪ್ರಾಣಿ ಬಲಿ ಕೊಟ್ಟಿರುವ ಫೋಟೋ ಬಯಲಾಗಿದೆ. ಹಣ ತುಂಬಿದ ಬ್ಯಾಗ್‌ನ ಫೋಟೋವನ್ನು ಹೆಂಡತಿಗೆ ಪ್ರಸಾದ್ ಕಳುಹಿಸಿದ್ದ. ಇದನ್ನೂ ಓದಿ: ಮುಡಾ 50:50 ಸೈಟು ಹಗರಣ – ಜೆಡಿಎಸ್‌ ಶಾಸಕ ಜಿಟಿಡಿ, ಪುತ್ರ ಹರೀಶ್‌ ಗೌಡ ವಿರುದ್ಧ ಲೋಕಾಯುಕ್ತಕ್ಕೆ ದೂರು

    ಈ ಸಂಬಂಧ ಎಫ್‌ಐಆರ್ ದಾಖಲಾಗಿದ್ದು, ಪೊಲೀಸರು ಎಲ್ಲವನ್ನೂ ಉಲ್ಲೇಖಿಸಿದ್ದಾರೆ. ಪೂಜೆಯ ಮಧ್ಯವರ್ತಿಯಾಗಿ ಪ್ರಸಾದ್ ಅತ್ತಾವರ ಭಾಗವಹಿಸಿರುವ ಶಂಕೆ ವ್ಯಕ್ತವಾಗಿದೆ.

  • ಮುಡಾ 50:50 ಸೈಟು ಹಗರಣ – ಜೆಡಿಎಸ್‌ ಶಾಸಕ ಜಿಟಿಡಿ, ಪುತ್ರ ಹರೀಶ್‌ ಗೌಡ ವಿರುದ್ಧ ಲೋಕಾಯುಕ್ತಕ್ಕೆ ದೂರು

    ಮುಡಾ 50:50 ಸೈಟು ಹಗರಣ – ಜೆಡಿಎಸ್‌ ಶಾಸಕ ಜಿಟಿಡಿ, ಪುತ್ರ ಹರೀಶ್‌ ಗೌಡ ವಿರುದ್ಧ ಲೋಕಾಯುಕ್ತಕ್ಕೆ ದೂರು

    ಮೈಸೂರು: ಮುಡಾದ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ – MUDA) 50:50 ಸೈಟು ಹಂಚಿಕೆಯಲ್ಲಿ ನಡೆದಿರುವ ಅಕ್ರಮಕ್ಕೆ ಸಂಬಂಧಿಸಿದಂತೆ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ (Snehamayi Krishna) ಇಬ್ಬರು ಜೆಡಿಎಸ್‌ ಶಾಸಕರ ವಿರುದ್ಧ ದೂರು ನೀಡಿದ್ದಾರೆ.

    ಇಂದು ಮೈಸೂರಿನ ಲೋಕಾಯುಕ್ತ ಕಚೇರಿಗೆ ತೆರಳಿ ಜೆಡಿಎಸ್‌ ಶಾಸಕರಾದ ಜಿ.ಟಿ ದೇವೇಗೌಡ (GT Devegowda) ಹಾಗೂ ಪುತ್ರ ಜಿ.ಡಿ ಹರೀಶ್‌ ಗೌಡ (Harish Gowda) ವಿರುದ್ಧ ಲೋಕಾಯುಕ್ತಕ್ಕೆ (Lokayukta) ದೂರು ಸಲ್ಲಸಿದ್ದಾರೆ. ಇದನ್ನೂ ಓದಿ: MUDA Scam | ಜೆಡಿಎಸ್‌ ಶಾಸಕ ಜಿಟಿಡಿ ವಿರುದ್ಧವೂ ಲೋಕಾಯುಕ್ತಕ್ಕೆ ದೂರು – 2 ಸೈಟು ಕಿಕ್‌ಬ್ಯಾಕ್‌ ಆರೋಪ

    ಮುಡಾ ಸೈಟು ಹಂಚಿಕೆಯಲ್ಲಿ ಶಾಸಕ ಜಿ.ಟಿ ದೇವೇಗೌಡರು ತಮ್ಮ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ. ಸರ್ವೇ ನಂ.81/2ರಲ್ಲಿ 2.22 ಎಕರೆ ಜಮೀನಿಗೆ ಪರಿಹಾರ ನೀಡಿಲ್ಲವೆಂದು 19 ನಿವೇಶನವನ್ನು ಜಿಟಿಡಿ ಕುಟುಂಬ ಪಡೆದುಕೊಂಡಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ಸಂಬಂಧ ಭೂ ಮಾಲೀಕನ ಮನೆಗೆ ತೆರಳಿ ಮಾತುಕತೆ ನಡೆಸಿರುವ ಫೋಟೋ ಸಹ ಬಿಡುಗಡೆ ಮಾಡಿದ್ದಾರೆ. ಇದನ್ನೂ ಓದಿ: ಮುಡಾ ಕೇಸ್‌ನಲ್ಲಿ ಸಿಎಂ ಪತ್ನಿಗೆ `ಹೈ’ ರಿಲೀಫ್ – ಕೋರ್ಟ್‌ನಲ್ಲಿ ವಾದ ಪ್ರತಿವಾದ ಏನಿತ್ತು?

    ದೇವನೂರು ಗ್ರಾಮದ ಶಂಕರಯ್ಯ ಕುಟುಂಬದ ಜೊತೆ ಶಾಸಕರಾದ ಜಿ.ಟಿ ದೇವೇಗೌಡ ಹಾಗೂ ಪುತ್ರ ಜಿ.ಡಿ ಹರೀಶ್‌ ಗೌಡ ವ್ಯವಹಾರ ನಡೆಸಿದ್ದಾರೆ ಹಾಗೂ ಕುಟುಂಬಸ್ಥರನ್ನು ಭೇಟಿಯಾಗಿ ಚೆಕ್‌ ನೀಡುತ್ತಿದ್ದಾರೆ ಎನ್ನಲಾದ ಫೋಟೋಗಳ ದಾಖಲೆಯೊಂದಿಗೆ ದೂರು ಸಲ್ಲಿಸಿದ್ದಾರೆ. ಇದನ್ನೂ ಓದಿ: ಮುಡಾ ಕೇಸ್‌ನಲ್ಲಿ ಸಿಎಂ ಪತ್ನಿಗೆ `ಹೈ’ ರಿಲೀಫ್ – ಕೋರ್ಟ್‌ನಲ್ಲಿ ವಾದ ಪ್ರತಿವಾದ ಏನಿತ್ತು?

    ಜಿ.ಟಿ ದೇವೇಗೌಡ ಅವರು ತಮ್ಮ ಸಹೋದರಿ ಮಗ ಮಹೇಂದ್ರ ಮೂಲಕ ಬೇನಾಮಿ ಆಸ್ತಿ ಖರೀದಿಸಿದ್ದಾರೆ. ಅಂದಿನ ತಹಸಿಲ್ದಾರ್ ರಕ್ಷಿತ್ ಅವರ ಮೇಲೆ ಪ್ರಭಾವ ಬೀರಿ ಮುಡಾ ಆಸ್ತಿಗೆ ಪರಿಹಾರ ಪಡೆದಿದ್ದಾರೆ. ದೇವನೂರು 2ನೇ ಹಂತದ ಸರ್ವೆ ನಂ. 81/2ರಲ್ಲಿ 20ಕ್ಕೂ ಹೆಚ್ಚು ಮನೆ ಇದ್ದರೂ ಪರಿಹಾರ ತೆಗೆದುಕೊಂಡಿದ್ದಾರೆ. ಇದರಲ್ಲಿ ಜಿಟಿಡಿ ಅವರ ಪ್ರಭಾವ, ಬೇನಾಮಿ ಆಸ್ತಿ ಹೊಂದಿರುವುದು ಹಾಗೂ ಅಧಿಕಾರಿಯ ತಪ್ಪು ಎದ್ದು ಕಾಣುತ್ತಿದೆ. ಇದರ ಬಗ್ಗೆ ಸಂಪೂರ್ಣ ತನಿಖೆ ಆಗಬೇಕು ಎಂಬುದು ನನ್ನ ಮನವಿ ಎಂದು ಸ್ನೇಹಮಯಿ ಕೃಷ್ಣ ದೂರಿನಲ್ಲಿ ಮನವೊ ಮಾಡಿದ್ದಾರೆ.

    ಕೆಲ ದಿನಗಳ ಹಿಂದೆಯಷ್ಟೇ ಶಾಸಕ ಜಿ.ಟಿ ದೇವೇಗೌಡ ಅವರ ವಿರುದ್ಧ ಸ್ನೇಹಮಯಿ ಕೃಷ್ಣ ಸೈಟು ಕಿಕ್‌ ಬ್ಯಾಕ್‌ ಪಡೆದಿರುವ ಆರೋಪದ ಮೇಲೆ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಇದನ್ನೂ ಓದಿ: MUDA Case | ಇಡಿ ಸಮನ್ಸ್‌ಗೆ ಹೈಕೋರ್ಟ್ ತಡೆ – ಸಿಎಂ ಪತ್ನಿ ಪಾರ್ವತಿಗೆ ತಾತ್ಕಾಲಿಕ ರಿಲೀಫ್