Tag: ಸ್ಪಾಟ್ ಫಿಕ್ಸಿಂಗ್

  • 7 ವರ್ಷದ ಬಳಿಕ ಕ್ರಿಕೆಟ್‍ಗೆ ಮರಳಿದ ಶ್ರೀಶಾಂತ್ 

    7 ವರ್ಷದ ಬಳಿಕ ಕ್ರಿಕೆಟ್‍ಗೆ ಮರಳಿದ ಶ್ರೀಶಾಂತ್ 

    ತಿರುವನಂತಪುರಂ: 7 ವರ್ಷದ ಬಳಿಕ ಕ್ರಿಕೆಟ್‍ಗೆ ಶ್ರೀಶಾಂತ್ ಮರಳಿದ್ದಾರೆ. ಸೈಯದ್ ಮುಷ್ತಾಕ್ ಅಲಿ ಟಿ-20 ಪಂದ್ಯಾವಳಿಗಾಗಿ ಕೇರಳ ರಾಜ್ಯ ಕ್ರಿಕೆಟ್ ಸಂಸ್ಥೆ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಅದರಲ್ಲಿ ತಿರುವನಂತಪುರ ಎಕ್ಸ್‌ಪ್ರೆಸ್‌ ಖ್ಯಾತಿಯ ಶ್ರೀಶಾಂತ್ ಸ್ಥಾನ ಪಡೆದುಕೊಂಡಿದ್ದಾರೆ.

    ಶ್ರೀಶಾಂತ್ ಈ ವರ್ಷದ ಸೆಪ್ಟೆಂಬರ್‌ನಲ್ಲಿ  ಸ್ಪಾಟ್ ಫಿಕ್ಸಿಂಗ್ ಪ್ರಕರಣದಿಂದಾಗಿ ಏಳು ವರ್ಷಗಳ ನಿಷೇಧ ಮುಗಿಸಿ ಬಂದಿದ್ದರು. ಸ್ಥಾನ ಪಡೆದ ಬಳಿಕ ಕೇರಳ ರಾಜ್ಯ ತಂಡದ ಸಹ ಆಟಗಾರರು ಮತ್ತು ನಿರ್ವಾಹಕರೊಂದಿಗೆ ತಮ್ಮ ರಾಜ್ಯದ ಕ್ಯಾಪ್‍ನ್ನು ಸ್ವೀಕರಿಸುವ ವಿಡಿಯೋ ಒಂದನ್ನು ಶ್ರೀಶಾಂತ್ ಸಾಮಾಜಿಕ ಜಾಲತಾಣದಲ್ಲಿ ಹಾಕಿಕೊಂಡಿದ್ದಾರೆ.

    ವಿಡಿಯೋದ ಜೊತೆ ಒಂದು ಭಾವನಾತ್ಮಕ ಸಂದೇಶವನ್ನು ಬರೆದುಕೊಂಡಿರುವ ಶ್ರೀಶಾಂತ್ ಮುರಿದ ಬಿದ್ದ ಮನುಷ್ಯ ತನ್ನನ್ನು ತಾನೇ ಮರುನಿರ್ಮಾಣ ಮಾಡಿಕೊಳ್ಳುವ ಬಲದ ಮುಂದೆ ಉಳಿದೆಲ್ಲವು ಶೂನ್ಯ ಎಂದು ಟ್ವೀಟ್ ಮಾಡಿದ್ದಾರೆ.

    ಮುಂದಿನ ತಿಂಗಳಿನಿಂದ ಆರಂಭಗೊಳ್ಳಲಿರುವ ಪಂದ್ಯಾವಳಿಯಲ್ಲಿ ಕೇರಳ ತಂಡವನ್ನು ಸಂಜು ಸ್ಯಾಮ್ಸನ್ ಮುನ್ನಡೆಸಲಿದ್ದಾರೆ ಎಂದು ಕೇರಳ ಕ್ರಿಕೆಟ್ ಅಸೋಸಿಯೇಷನ್‍ನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಟೂರ್ನಿಗಾಗಿ ಉತ್ತರ ಪ್ರದೇಶಕ್ಕೆ ತೆರಳಲಿರುವ ಶ್ರೀಶಾಂತ್ ಅವರಿಗೆ ಭಾರತದ ಮಾಜಿ ಆಟಗಾರ ಸುರೇಶ್ ರೈನಾ ಆಲ್ ದಿ ಬೆಸ್ಟ್ ಗೆಳೆಯ ಶೀಘ್ರದಲ್ಲೇ ಭೇಟಿಯಾಗೋಣ ಎಂದು ಶುಭಹಾರೈಸಿದ್ದಾರೆ.

    37ರ ಹರೆಯದ ಶ್ರೀಶಾಂತ್ ಕೊನೆಯ ಬಾರಿ 2011ರಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದರು. 2013ರಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್‍ನಲ್ಲೂ ಕಣಕ್ಕೆ ಇಳಿದಿದ್ದರು. ನಂತರ ಸ್ಪಾಟ್ ಫಿಕ್ಸಿಂಗ್‍ನಿಂದಾಗಿ ನಿಷೇಧಕ್ಕೆ ಗುರಿಯಾಗಿದ್ದ ಶ್ರೀಶಾಂತ್ ಮತ್ತೆ ಭಾರತ ತಂಡಕ್ಕೆ ಪುನಾರಾಗಮನದ ನಿರೀಕ್ಷೆಯಲ್ಲಿದ್ದಾರೆ. ಸಚಿನ್ ಬೇಬಿ, ಜಲಾಜ್ ಸಕ್ಸೇನಾ ಮತ್ತು ರಾಬಿನ್ ಉತ್ತಪ್ಪ ಕೂಡ ಕೇರಳ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

  • ಫಿಕ್ಸಿಂಗ್ ನಡೆಸಿ ನಿಷೇಧಕ್ಕೊಳಗಾದ ಪಾಕ್ ಕ್ರಿಕೆಟಿಗರು ಇವರೇ!

    ಫಿಕ್ಸಿಂಗ್ ನಡೆಸಿ ನಿಷೇಧಕ್ಕೊಳಗಾದ ಪಾಕ್ ಕ್ರಿಕೆಟಿಗರು ಇವರೇ!

    ಫಿಕ್ಸಿಂಗ್‍ಗೂ ಪಾಕಿಸ್ತಾನಕ್ಕೂ ಬಿಡದ ನಂಟು..!

    ಇಸ್ಲಾಮಾಬಾದ್: ವಿಶ್ವ ಕ್ರಿಕೆಟ್ ಇತಿಹಾಸದಲ್ಲಿ ಮ್ಯಾಚ್ ಫಿಕ್ಸಿಂಗ್, ಸ್ಪಾಟ್ ಫಿಕ್ಸಿಂಗ್ ಎಂದಾಕ್ಷಣ ಪಾಕಿಸ್ತಾನ ಕ್ರಿಕೆಟ್ ಆಟಗಾರರ ಹೆಸರು ನೆನಪಾಗುತ್ತದೆ. ಕಳೆದ 2 ದಶಕಗಳಲ್ಲಿ ಸರಿ ಸುಮಾರು 8 ಮಂದಿ ಪಾಕಿಸ್ತಾನ ಕ್ರಿಕೆಟ್ ಆಟಗಾರರು ಮ್ಯಾಚ್ ಫಿಕ್ಸಿಂಗ್ ಕಾರಣದಿಂದ ನಿಷೇಧವನ್ನು ಎದುರಿಸಿದ್ದಾರೆ. ಈಗಲೂ ಕೂಡ ಪಾಕ್ ಕ್ರಿಕೆಟಿಗರೊಂದಿಗೆ ಫಿಕ್ಸಿಂಗ್ ನಡೆಸಲು ಬುಕ್ಕಿಗಳು ಮಾತುಕತೆ ನಡೆಸುತ್ತಿದ್ದಾರೆ ಎಂದರೇ ಆಟಗಾರರಲ್ಲಿ ಯಾವುದೇ ಬದಲಾವಣೆ ಆಗಿಲ್ಲ ಎಂದು ಸ್ಪಷ್ಟವಾಗುತ್ತದೆ.

    ಇತ್ತೀಚೆಗೆ ಪಾಕಿಸ್ತಾನ ಸೂಪರ್ ಲೀಗ್‍ಗೂ ಮುನ್ನ ಪಾಕಿಸ್ತಾನ ಅನುಭವಿ ಆಟಗಾರ ಉಮರ್ ಅಕ್ಮಲ್‍ರನ್ನು ಫಿಕ್ಸಿಂಗ್ ಮಾಡಲು ಬುಕ್ಕಿಗಳು ಸಂಪರ್ಕಿಸಿದ್ದರು. ಪರಿಣಾಮ ಪಾಕಿಸ್ತಾನ ಕ್ರಿಕೆಟ್ ಬೋರ್ಡ್ ಅಕ್ಮಲ್‍ಗೆ ಮೂರು ವರ್ಷ ಎಲ್ಲಾ ಮಾದರಿಯ ಕ್ರಿಕೆಟ್‍ನಿಂದ ಅಮಾನತು ಮಾಡಿದೆ. ಇದೇ ವೇಳೆ ಫಿಕ್ಸಿಂಗ್ ಕಾರಣದಿಂದ ನಿಷೇಧಕ್ಕೊಳಗಾದ ಆಟಗಾರರ ಪಟ್ಟಿ ಇಂತಿದೆ.

    ಸಲೀಂ ಮಲಿಕ್ (2000): ಮ್ಯಾಚ್ ಫಿಕ್ಸಿಂಗ್ ಕಾರಣದಿಂದ ಮೊದಲ ಬಾರಿಗೆ ಪಾಕ್ ಕ್ರಿಕೆಟ್ ಇತಿಹಾಸದಲ್ಲಿ ನಿಷೇಧಕ್ಕೆ ಒಳಗಾದ ಆಟಗಾರ ಸಲೀಂ ಮಲಿಕ್. ಆ ವೇಳೆ ಆತನ ಮೇಲೆ ಜೀವಮಾನದ ಅಮಾನತು ವಿಧಿಸಲಾಗಿತ್ತು. ಆದರೆ ಕೆಲ ಸಮಯದ ಬಳಿಕ ಆತನ ಮೇಲಿನ ಅಮಾನತು ವಾಪಸ್ ಪಡೆಯಲಾಗಿತ್ತು. ಆದರೆ 2008ರಲ್ಲಿ ಮತ್ತೊಮ್ಮೆ ಫಿಕ್ಸಿಂಗ್ ನಡೆಸಿ ಸಲೀಂ ಸಿಕ್ಕಿಹಾಕಿಕೊಂಡಿದ್ದ.

    ಅಟಾ-ಉರ್-ರೆಹಮಾನ್ (2000): ಫಿಕ್ಸಿಂಗ್ ನಡೆಸಲು ಬುಕ್ಕಿಗಳೊಂದಿಗೆ ಮಾತುಕತೆ ನಡೆಸಿದ ಕಾರಣದಿಂದ 2000ರಲ್ಲಿ ಆತನ ವಿರುದ್ಧ ಜೀವಮಾನದ ಅಮಾನತು ವಿಧಿಸಲಾಗಿತ್ತು. ಆದರೆ 2006 ರಲ್ಲಿ ಅಮಾನತು ಹಿಂಪಡೆಯಲಾಗಿತ್ತು.

    ಮೊಹಮ್ಮದ್ ಅಮಿರ್ (2011): ಇಂಗ್ಲೆಂಡ್ ಟೂರ್ನಿ ಸಂದರ್ಭದಲ್ಲಿ ಉದ್ದೇಶ ಪೂರ್ವಕವಾಗಿ ನೋ ಬಾಲ್ ಎಸೆಯಲು ಬುಕ್ಕಿಗಳೊಂದಿಗೆ ಸ್ಪಾಟ್ ಫಿಕ್ಸಿಂಗ್ ಮಾಡಿಕೊಳ್ಳಲಾಗಿತ್ತು. 2010 ರಲ್ಲಿ ಅಮಿರ್ ಸ್ಪಾಟ್ ಫಿಕ್ಸಿಂಗ್ ನಡೆಸಿದ್ದ. ಪರಿಣಾಮ 2011ರಲ್ಲಿ 5 ವರ್ಷ ಅಮಾನತು ಮಾಡಲಾಗಿತ್ತು. ಅಮಾನತು ಅಂತ್ಯವಾದ ಬಳಿಕ 2016ರಲ್ಲಿ ಮತ್ತೆ ಅಮಿರ್ ಪಾಕ್ ತಂಡಕ್ಕೆ ರೀ ಎಂಟ್ರಿ ಕೊಟ್ಟಿದ್ದ.

    ಮೊಹಮ್ಮದ್ ಆಸಿಫ್ (2011): ಸ್ಪಾಟ್ ಫಿಕ್ಸಿಂಗ್ ಭಾಗವಾಗಿ ನೋ ಬಾಲ್ ಎಸೆದಿದ್ದ ಆಸಿಫ್‍ಗೆ 7 ವರ್ಷ ಅಮಾನತು ವಿಧಿಸಿಲಾಗಿತ್ತು. ಆದರೆ ಆ ಬಳಿಕ ಅಮಾನತು ಶಿಕ್ಷೆಯನ್ನು 5 ವರ್ಷಕ್ಕೆ ಇಳಿಸಲಾಗಿತ್ತು. ಅಲ್ಲದೇ ವಿಚಾರಣೆ ಕಾರಣದಿಂದ ಆಸಿಫ್ 12 ತಿಂಗಳು ಜೈಲು ವಾಸ ಅನುಭವಿಸಿದ್ದ.

    ಸಲ್ಮಾನ್ ಭಟ್ (2011): 2010ರ ಇಂಗ್ಲೆಂಡ್ ಟೂರ್ನಿ ಭಾಗವಾಗಿ ನಡೆದಿದ್ದ ಟೂರ್ನಿಯಲ್ಲಿ ಅಮಿರ್, ಆಸಿಫ್‍ರೊಂದಿಗೆ ಭಟ್ ಕೂಡ ಮ್ಯಾಚ್ ಫಿಕ್ಸಿಂಗ್ ನಡೆಸಿದ್ದ. ಪರಿಣಾಮ ಜೀವಮಾನ ನಿಷೇಧಕ್ಕೆ ಒಳಗಾಗಿದ್ದ ಭಟ್‍ಗೆ ಆ ಬಳಿಕ ಶಿಕ್ಷೆಯನ್ನು 5 ವರ್ಷಕ್ಕೆ ಇಳಿಸಲಾಗಿತ್ತು.

    ಡ್ಯಾನಿಶ್ ಕನೇರಿಯಾ (2010): ಪಾಕಿಸ್ತಾನ ಪರ ಆಡಿದ ಮೊದಲ ಹಿಂದೂ ಎಂಬ ದಾಖಲೆ ಬರೆದಿದ್ದ ಡ್ಯಾನಿಶ್ ಕನೇರಿಯಾ ಇಂಗ್ಲೆಂಡ್‍ನಲ್ಲಿ ನಡೆದಿದ್ದ ಕೌಂಟಿ ಕ್ರಿಕೆಟ್ ಟೂರ್ನಿ ಸಂದರ್ಭದಲ್ಲಿ ಸ್ಪಾಟ್ ಫಿಕ್ಸಿಂಗ್ ನಡೆಸಿದ್ದ. ಪರಿಣಾಮ ಆತನ ವಿರುದ್ಧ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಜೀವಮಾನ ನಿಷೇಧ ವಿಧಿಸಿತ್ತು. 2018 ರಲ್ಲಿ ಸ್ಪಾಟ್ ಫಿಕ್ಸಿಂಗ್ ಕುರಿತು ಮಾತನಾಡಿದ್ದ ಕನೇರಿಯಾ ಫಿಕ್ಸಿಂಗ್ ನಡೆಸಿದ್ದಾಗಿ ಒಪ್ಪಿಕೊಂಡಿದ್ದ.

    ಶಾರ್ಜೀಲ್ ಖಾನ್ (2018): ಪಾಕ್ ತಂಡದ ಆರಂಭಿಕ ಆಟಗಾರನಾಗಿದ್ದ ಶಾರ್ಜೀಲ್ ಖಾನ್ ಪಾಕ್ ಕ್ರಿಕೆಟ್ ಬೋರ್ಡ್ ಆಯೋಜಿಸುವ ಪಾಕಿಸ್ತಾನ್ ಸೂಪರ್ ಲೀಗ್‍ನಲ್ಲಿ ಸ್ಪಾಟ್ ಫಿಕ್ಸಿಂಗ್ ನಡೆಸಿ ಸಿಕ್ಕಿಹಾಕಿಕೊಂಡಿದ್ದ. ಪರಿಣಾಮ 5 ವರ್ಷ ಆತನನ್ನು ಅಮಾನತು ಮಾಡಲಾಗಿದೆ.

    ಉಮರ್ ಅಕ್ಮಲ್ (2020): ಪಾಕಿಸ್ತಾನ ಸೂಪರ್ ಲೀಗ್‍ನಲ್ಲಿ ಫಿಕ್ಸಿಂಗ್ ನಡೆಸಲು ಬುಕ್ಕಿಗಳು ಉಮರ್ ಅಕ್ಮಲ್‍ನನ್ನು ಸಂಪರ್ಕಿಸಿದ್ದರು. ಆದರೆ ಈ ವಿಚಾರವನ್ನು ಆತ ಪಾಕ್ ಕ್ರಿಕೆಟ್ ಬೋರ್ಡಿಗೆ ತಿಳಿಸಿರಲಿಲ್ಲ. ಪರಿಣಾಮ ಪಾಕ್ ಕ್ರಿಕೆಟ್ ಬೋರ್ಡಿನ ಭ್ರಷ್ಟಾಚಾರ ನಿಗ್ರಹ ಸಮಿತಿ ಉಮರ್ ಅಕ್ಮಲ್‍ಗೆ 3 ವರ್ಷ ನಿಷೇಧ ವಿಧಿಸಲಾಗಿದೆ.

  • ಪಾಕ್ ಕ್ರಿಕೆಟಿಗ ಉಮರ್ ಅಕ್ಮಲ್‍ಗೆ 3 ವರ್ಷ ನಿಷೇಧ

    ಪಾಕ್ ಕ್ರಿಕೆಟಿಗ ಉಮರ್ ಅಕ್ಮಲ್‍ಗೆ 3 ವರ್ಷ ನಿಷೇಧ

    – ಸ್ಪಾಟ್ ಫಿಕ್ಸಿಂಗ್ ಅಪ್ರೋಚ್ ಮಾಹಿತಿ ನೀಡಲು ವಿಫಲ

    ಇಸ್ಲಾಮಾಬಾದ್: ಪಾಕ್ ಕ್ರಿಕೆಟಿಗ ಉಮರ್ ಅಕ್ಮಲ್ ಮೇಲೆ ಪಾಕಿಸ್ತಾನ ಕ್ರಿಕೆಟ್ ಬೋರ್ಡ್ (ಪಿಸಿಬಿ) ಎಲ್ಲಾ ಮಾದರಿಯ ಕ್ರಿಕೆಟ್‍ನಿಂದ 3 ವರ್ಷ ನಿಷೇಧಿಸಿದೆ.

    ಬೋರ್ಡ್ ಇಂದು ನಿಷೇಧ ಕುರಿತ ಮಾಹಿತಿಯನ್ನು ನೀಡಿದೆ. ಆದರೆ ಉಮರ್ ಅಕ್ಮಲ್ ಯಾವ ತಪ್ಪಿನ ವಿರುದ್ಧ ಕ್ರಮಕೈಗೊಳ್ಳಲಾಗಿದೆ ಎಂಬ ಬಗ್ಗೆ ಸ್ಪಷ್ಟ ಮಾಹಿತಿ ನೀಡಿಲ್ಲ. ಆದರೆ ಪಾಕಿಸ್ತಾನ ಸೂಪರ್ ಲೀಗ್ ಟೂರ್ನಿಯಲ್ಲಿ ಸ್ಪಾಟ್ ಫಿಕ್ಸಿಂಗ್ ಮಾಡಲು ಅಪ್ರೋಚ್ ಆಗಿರುವ ಕುರಿತು ಕ್ರಿಕೆಟ್ ಬೋರ್ಡಿಗೆ ಮಾಹಿತಿ ನೀಡಲು ವಿಫಲರಾದ ಕಾರಣದಿಂದ ಕ್ರಮಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ.

    ಅಕ್ಮಲ್ ವಿರುದ್ಧ ಎರಡು ತಿಂಗಳ ಹಿಂದೆ ಭ್ರಷ್ಟಾಚಾರ ನೀತಿ ಸಂಹಿತೆ ಅಡಿ ತನಿಖೆ ಆರಂಭಿಸಲಾಗಿತ್ತು. ನಿಷೇಧ ಕುರಿತು ಮಾಹಿತಿ ನೀಡಿ ಪಿಸಿಬಿ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದೆ. ನಿವೃತ್ತ ನ್ಯಾಯಮೂರ್ತಿ ಫಜಲ್ ಇ ಮಿರಾನ್ ನೇತೃತ್ವದ ಶಿಸ್ತು ಸಮಿತಿ 3 ವರ್ಷ ನಿಷೇಧ ವಿಧಿಸಿದೆ. ಫೆ.20 ರಂದು ಅಕ್ಮಲ್‍ರನ್ನು ಅಮಾನತು ಮಾಡಿ ಆದೇಶ ನೀಡಲಾಗಿತ್ತು.

    29 ವರ್ಷದ ಅಕ್ಮಲ್ ಪಾಕ್ ಪರ ಅಕ್ಟೋಬರಿನಲ್ಲಿ ಅಂತಿಮ ಪಂದ್ಯವನ್ನಾಡಿದ್ದರು. ಇದುವರೆಗೂ 21 ಟೆಸ್ಟ್, 121 ಏಕದಿನ ಹಾಗೂ 84 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ್ದಾರೆ. ಅಂತಿಮವಾಗಿ ಶ್ರೀಲಂಕಾ ವಿರುದ್ಧದ ಟಿ20 ಟೂರ್ನಿಯಲ್ಲಿ ಭಾಗಿಯಾಗಿದ್ದ ಅಕ್ಮಲ್, ಆಡಿದ ಎರಡು ಪಂದ್ಯಗಳಲ್ಲಿ ಶೂನ್ಯಕ್ಕೆ ಔಟಾಗಿದ್ದರು.

  • ಪಾಕ್ ಕ್ರಿಕೆಟರ್‌ಗೆ 17 ತಿಂಗಳು ಜೈಲು ಶಿಕ್ಷೆ ವಿಧಿಸಿದ ಲಂಡನ್ ಕೋರ್ಟ್

    ಪಾಕ್ ಕ್ರಿಕೆಟರ್‌ಗೆ 17 ತಿಂಗಳು ಜೈಲು ಶಿಕ್ಷೆ ವಿಧಿಸಿದ ಲಂಡನ್ ಕೋರ್ಟ್

    ಲಂಡನ್: ಪಾಕಿಸ್ತಾನದ ಮಾಜಿ ಬ್ಯಾಟ್ಸ್‌ಮನ್ ನಾಸಿರ್ ಜಮ್‍ಶೆಡ್‍ಗೆ ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಮ್ಯಾಂಚೆಸ್ಟರ್‌ನ ಕ್ರೌನ್ ಕೋರ್ಟ್ 17 ತಿಂಗಳ ಜೈಲು ಶಿಕ್ಷೆ ವಿಧಿಸಿದೆ.

    33 ವರ್ಷದ ಮಾಜಿ ಬ್ಯಾಟ್ಸ್‌ಮನ್ ನಾಸಿರ್ ಜಮ್‍ಶೆಡ್‌ಗೆ ಕಳೆದ ವರ್ಷ ಡಿಸೆಂಬರ್‌ನಲ್ಲಿ ನ್ಯಾಯಾಲಯ ಶಿಕ್ಷೆ ವಿಧಿಸಿತ್ತು. ಈ ಹಿಂದೆ 4 ಆಟಗಾರರು ಫಿಕ್ಸಿಂಗ್‍ಗಾಗಿ ಜೈಲಿಗೆ ಹೋಗಿದ್ದರು. ಇದರಲ್ಲಿ ಪಾಕಿಸ್ತಾನದ ಮೊಹಮ್ಮದ್ ಅಮೀರ್, ಮೊಹಮ್ಮದ್ ಆಸಿಫ್, ಸಲ್ಮಾನ್ ಬಟ್ ಸೇರಿದ್ದಾರೆ.

    ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯವೊಂದರಲ್ಲಿ ಅಮೀರ್, ಆಸಿಫ್ ಮತ್ತು ಸಲ್ಮಾನ್ ಬಟ್ ಸ್ಪಾಟ್ ಫಿಕ್ಸಿಂಗ್ ನಡೆಸಿದ್ದ ಆರೋಪ ಸಾಬೀತಾದ ನಂತರ 2010ರಲ್ಲಿ ಲಂಡನ್ ನ್ಯಾಯಾಲಯವು ಶಿಕ್ಷೆ ವಿಧಿಸಿತ್ತು. ಅಮೀರ್ 1 ವರ್ಷ ಕ್ರಿಕೆಟ್ ನಿಷೇಧ ಶಿಕ್ಷೆ, 3 ತಿಂಗಳ ಜೈಲುವಾಸ ಅನುಭವಿಸಬೇಕಾಯಿತು. ಆಸಿಫ್‍ಗೂ 1 ವರ್ಷ ಕ್ರಿಕೆಟ್ ನಿಷೇಧ, 6 ತಿಂಗಳು ಸೆರೆವಾಸಕ್ಕೆ ಗುರಿಯಾಗಿದ್ದರು. ಬಟ್‍ಗೆ 30 ತಿಂಗಳು ಕ್ರಿಕೆಟ್ ನಿಷೇಧ, 7 ತಿಂಗಳ ಜೈಲು ವಾಸಕ್ಕೆ ಗುರಿಯಾಗಿದ್ದರು.

    ಜಮ್‍ಶೆಡ್ ಸಹಚರರಾದ ಯೂಸುಫ್ ಅನ್ವರ್ ಮತ್ತು ಮೊಹಮ್ಮದ್ ಎಜಾಜ್ ಅವರಿಗೆ ಕ್ರೌನ್ ಕೋರ್ಟ್ 40 ಮತ್ತು 30 ತಿಂಗಳು ಜೈಲು ಶಿಕ್ಷೆ ವಿಧಿಸಿದೆ. ಪಾಕಿಸ್ತಾನ ಸೂಪರ್ ಲೀಗ್‍ನಲ್ಲಿನ ಕಳಪೆ ಪ್ರದರ್ಶನಕ್ಕಾಗಿ ಆಟಗಾರರಿಗೆ ಹಣವನ್ನು ನೀಡಿದ್ದನ್ನು ಇಬ್ಬರೂ ಒಪ್ಪಿಕೊಂಡಿದ್ದಾರೆ. ಈ ಇಬ್ಬರೂ ಇಂಗ್ಲೆಂಡ್ ಪ್ರಜೆಗಳಾಗಿದ್ದು, ಜಮ್‍ಶೆಡ್‍ರನ್ನು 2018ರಲ್ಲಿಯೇ ಪಾಕಿಸ್ತಾನ ಕ್ರಿಕೆಟ್ ಬೋರ್ಡ್ (ಪಿಸಿಬಿ) 10 ವರ್ಷಗಳ ಕಾಲ ನಿಷೇಧ ಹೇರಿತ್ತು.

    ಬಂಧಿಸಿದ್ದು ಹೇಗೆ?:
    ಸ್ಪಾಟ್ ಫಿಕ್ಸಿಂಗ್ ಬಗ್ಗೆ ತನಿಖೆಯ ವೇಳೆ ಬ್ರಿಟನ್‍ನ ರಾಷ್ಟ್ರೀಯ ಅಪರಾಧ ಸಂಸ್ಥೆಯು ಕಳೆದ ವರ್ಷ ಜಮ್‍ಶೆಡ್, ಯೂಸುಫ್ ಅನ್ವರ್ ಮತ್ತು ಮೊಹಮ್ಮದ್ ಇಜಾಜ್ ಅವರನ್ನು ಬಂಧಿಸಿತ್ತು. ಆರಂಭದಲ್ಲಿ ಮೂವರೂ ಪಾಕಿಸ್ತಾನ ಸೂಪರ್ ಲೀಗ್‍ನಲ್ಲಿ ಫಿಕ್ಸಿಂಗ್ ಆರೋಪವನ್ನು ನಿರಾಕರಿಸಿದ್ದರು. ಆದರೆ ಕಳೆದ ವರ್ಷ ಡಿಸೆಂಬರ್‍ನಲ್ಲಿ ನಡೆದ ವಿಚಾರಣೆಯ ವೇಳೆ ಆರೋಪಿಗಳು ತಪ್ಪು ಒಪ್ಪಿಕೊಂಡಿದ್ದರು.

    2016ರ ಬಾಂಗ್ಲಾದೇಶ ಪ್ರೀಮಿಯರ್ ಲೀಗ್‍ನಲ್ಲಿ ಜಮ್‍ಶೆಡ್ ಎರಡು ಬಾರಿ ಸ್ಪಾಟ್ ಫಿಕ್ಸಿಂಗ್ ಮಾಡಲು ಯತ್ನಿಸಿ ವಿಫಲರಾಗಿದ್ದರು ಎಂದು ತನಿಖೆಯಿಂದ ಪೊಲೀಸರಿಗೆ ತಿಳಿದುಬಂದಿತ್ತು. ನಂತರ ಅವರು ರಣಪುರ ರೈಡರ್ಸ್ ಪರ ಶಾರ್ಜೀಲ್ ಖಾನ್ ಜೊತೆ ಆಡಿದ್ದರು.

  • ಸ್ಪಾಟ್ ಫಿಕ್ಸಿಂಗ್ ಪ್ರಕರಣ: ಶ್ರೀಶಾಂತ್‍ಗೆ  ಸುಪ್ರೀಂನಿಂದ ಬಿಗ್ ರಿಲೀಫ್

    ಸ್ಪಾಟ್ ಫಿಕ್ಸಿಂಗ್ ಪ್ರಕರಣ: ಶ್ರೀಶಾಂತ್‍ಗೆ ಸುಪ್ರೀಂನಿಂದ ಬಿಗ್ ರಿಲೀಫ್

    ನವದೆಹಲಿ: 2013ರಲ್ಲಿ ಕ್ರಿಕೆಟಿಗ ಶ್ರೀಶಾಂತ್ ಮೇಲೆ ಬಿಸಿಸಿಐ ಶಿಸ್ತು ಸಮಿತಿ ವಿಧಿಸಿದ್ದ ಅಜೀವ ನಿಷೇಧವನ್ನು ಸುಪ್ರೀಂ ಕೋರ್ಟ್ ತೆರವುಗೊಳಿಸಿದ್ದು, ನಿಷೇಧದ ಮರುಪರಿಶೀಲನೆ ಮಾಡುವಂತೆ ಸೂಚನೆ ನೀಡಿದೆ.

    ನ್ಯಾ. ಅಶೋಕ್ ಭೂಷಣ್ ಮತ್ತು ನ್ಯಾ. ಕೆಎಂ ಜೋಸೆಫ್ ದ್ವಿಸದಸ್ಯ ಪೀಠ ಶ್ರೀಶಾಂತ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿತ್ತು. ಈ ವೇಳೆ ಬಿಸಿಸಿಐ ಶ್ರೀಶಾಂತ್ ಮೇಲೆ ವಿಧಿಸಿರುವ ನಿಷೇಧವನ್ನು ತೆರವುಗೊಳಿಸಿ ಮೂರು ತಿಂಗಳ ಒಳಗಾಗಿ ಮರುವಿಚಾರಣೆ ನಡೆಸಿ ಉತ್ತರಿಸುವಂತೆ ಸೂಚಿಸಿದೆ.

    ಶ್ರೀಶಾಂತ್ ಪರ ವಕೀಲರಾದ ಸಲ್ಮಾನ್ ಖುರ್ಷಿದ್ ಮಂಡಿಸಿದ ವಾದ ಆಲಿಸಿದ ನ್ಯಾಯಾಲಯ ಖಚಿತವಾದ ಆಧಾರಗಳಿಲ್ಲದೇ ಅಜೀವ ನಿಷೇಧ ಶಿಕ್ಷೆ ಬಹಳ ಕಠಿಣ ನಿರ್ಣಯ ಎಂದು ಅಭಿಪ್ರಾಯ ಪಟ್ಟಿದೆ. ಅಲ್ಲದೇ ನಿರ್ಧಾರ ಶ್ರೀಶಾಂತ್ ವಿರುದ್ಧದ ಕ್ರಿಮಿನಲ್ ಪ್ರಕರಣ ಮೇಲೆ ಇದು ಪ್ರಭಾವ ಬೀರುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

    2013ರ ಐಪಿಎಲ್ ಆವೃತ್ತಿಯಲ್ಲಿ ರಾಜಸ್ಥಾನ ರಾಯಲ್ಸ್ ತಂಡದ ಪರ ಆಡಿದ್ದ ಶ್ರೀಶಾಂತ್ ವಿರುದ್ಧ ಸ್ಪಾಟ್ ಫಿಕ್ಸಿಂಗ್ ಆರೋಪ ಕೇಳಿ ಬಂದಿತ್ತು. ಈ ವೇಳೆ ಓವರಿನಲ್ಲಿ 14 ರನ್ ನೀಡಲು ಶ್ರೀಶಾಂತ್ ಫಿಕ್ಸಿಂಗ್ ನಡೆಸಿದ್ದರು ಎಂದು ಆರೋಪಿಸಲಾಗಿತ್ತು. ಆದರೆ ಆ ಓವರಿನಲ್ಲಿ 13 ರನ್ ಮಾತ್ರ ಬಂದಿದೆ. ಶ್ರೀಶಾಂತ್ ಯಾವುದೇ ಫಿಕ್ಸಿಂಗ್ ಮಾಡಿಕೊಂಡಿರಲಿಲ್ಲ ಎಂದು ವಕೀಲರು ವಾದ ಮಂಡಿಸಿದ್ದರು. ಫಿಕ್ಸಿಂಗ್ ಆರೋಪದಲ್ಲಿ ಶ್ರೀಶಾಂತ್ ವಿರುದ್ಧ ಯಾವುದೇ ಸಾಕ್ಷಿಗಳು ಇಲ್ಲ. ಕೇವಲ ಪ್ರಾಥಮಿಕ ಮಾಹಿತಿ ಆಧಾರದ ಮೇಲೆ ಕ್ರಮಕೈಗೊಳ್ಳಲಾಗಿತ್ತು ಎಂಬುದನ್ನು ವಕೀಲರು ನ್ಯಾಯಾಲಯಕ್ಕೆ ತಿಳಿಸಿದ್ದರು. ಅಲ್ಲದೇ ಬಿಸಿಸಿಐ ನಿಷೇಧವನ್ನು ತೆರವುಗೊಳಿಸಿದರೆ ಮತ್ತೆ ಕ್ರಿಕೆಟ್ ಆಡಲು ಶ್ರೀಶಾಂತ್ ಸಿದ್ಧರಿದ್ದಾರೆ ಎಂದು ವಕೀಲರು ನ್ಯಾಯಾಲಯದ ಗಮನಕ್ಕೆ ತಂದಿದ್ದರು.

    2018 ರಲ್ಲಿ ಕೇರಳ ಹೈಕೋರ್ಟ್ ಏಕ ಸದಸ್ಯ ಪೀಠ ಬಿಸಿಸಿಐ ಆದೇಶವನ್ನು ರದ್ದುಗೊಳಿಸಿತ್ತು. ಬಿಸಿಸಿಐ ಈ ತೀರ್ಪಿನ ಬಗ್ಗೆ ಮರುಪರಿಶೀಲನೆ ನಡೆಸಲು ಅರ್ಜಿ ಸಲ್ಲಿಸಿತ್ತು. ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ನಿಷೇಧವನ್ನು ತೆರವುಗೊಳಿಸಲು ತಡೆ ನೀಡಿತ್ತು. ಪರಿಣಾಮ ಶ್ರೀಶಾಂತ್ ಸುಪ್ರೀಂ ಕೋರ್ಟಿನಲ್ಲಿ ಅರ್ಜಿ ಸಲ್ಲಿಸಿದ್ದರು.

    ಶ್ರೀಶಾಂತ್ ಮಾತ್ರವಲ್ಲದೇ ಮತ್ತಿಬ್ಬರು ಆಟಗಾರರ ವಿರುದ್ಧ ಫಿಕ್ಸಿಂಗ್ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಮೂವರನ್ನು ಬಂಧಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕ್ರಿಕೆಟ್ ಇತಿಹಾಸದಲ್ಲೇ ವಿಚಿತ್ರ ಶಾಟ್ – ಕೀಪರ್ ನಿಲ್ಲೋ ಜಾಗದಲ್ಲಿ ಬ್ಯಾಟ್ಸ್ ಮನ್ : ವಿಡಿಯೋ

    ಕ್ರಿಕೆಟ್ ಇತಿಹಾಸದಲ್ಲೇ ವಿಚಿತ್ರ ಶಾಟ್ – ಕೀಪರ್ ನಿಲ್ಲೋ ಜಾಗದಲ್ಲಿ ಬ್ಯಾಟ್ಸ್ ಮನ್ : ವಿಡಿಯೋ

    ಕೊಲಂಬೋ: ಶ್ರೀಲಂಕಾದ ಬ್ಯಾಟ್ಸ್ ಮನ್ ಚಾಮರ ಸಿಲ್ವಾ ವಿಚಿತ್ರ ಶಾಟ್ ಹೊಡೆಯಲು ಹೋಗಿ ಸಾಮಾಜಿಕ ಜಾಲತಾಣದಲ್ಲಿ ಈಗ ಟ್ರೋಲ್ ಆಗುತ್ತಿದ್ದಾರೆ.

    ಕೊಲಂಬೋದಲ್ಲಿ ಎಂಎಎಸ್ ಉನಿಚೆಲ ಮತ್ತು ತೀಜೆ ಲಂಕಾ ವಿರುದ್ಧದ ಕ್ಲಬ್ ಪಂದ್ಯದಲ್ಲಿ ಚಾಮರ ಸಿಲ್ವಾ ವಿಕೆಟ್ ಹಿಂದುಗಡೆಯಿಂದ ಬ್ಯಾಟ್ ಮಾಡಲು ಹೋಗಿದ್ದಾರೆ. ಬೌಲರ್ ಬಾಲ್ ಎಸೆಯುವ ಸಂದರ್ಭದಲ್ಲಿ ಕೀಪರ್ ನಿಲ್ಲುವ ಜಾಗಕ್ಕೆ ಬ್ಯಾಟ್ ಮಾಡಲು ಹೋಗಿದ್ದಾರೆ. ಚಾಮರ ಸಿಲ್ವಾ ಹಿಂದಕ್ಕೆ ಹೋಗಿದ್ದನ್ನು ನೋಡಿ ಬೌಲರ್ ವಿಕೆಟ್ ಗೆ ಬಾಲ್ ಹಾಕಿ ಬೌಲ್ಡ್ ಮಾಡಿದ್ದಾರೆ.

    ಈಗ ಚಾಮರ ಸಿಲ್ವಾ ಅವರ ಈ ವಿಚಿತ್ರ ಶಾಟ್ ಬಗ್ಗೆ ಜನ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದು, ಈ ಶಾಟ್ ಹೊಡೆಯುವ ಅಗತ್ಯ ಏನಿತ್ತು ಎಂದು ಪ್ರಶ್ನಿಸುತ್ತಿದ್ದಾರೆ.

    ಸ್ಪಾಟ್ ಫಿಕ್ಸಿಂಗ್ ಆರೋಪ:
    ಜನವರಿಯಲ್ಲಿ ಲಂಕಾ ದೇಶಿ ಕ್ರಿಕೆಟ್‍ನಲ್ಲಿ ಪಾಂಡೂರಾ ಕ್ರಿಕೆಟ್ ಕ್ಲಬ್-ಕಲುಟರಾ ಫಿಸಿಕಲ್ ಕಲ್ಚರ್ ಕ್ಲಬ್ ತಂಡಗಳ ನಡುವೆ ಪಂದ್ಯ ನಡೆದಿತ್ತು. ಈ ಪಂದ್ಯದ ವೇಳೆ ಲಂಕಾ ಅಂತಾರಾಷ್ಟ್ರೀಯ ತಂಡದ ಮಾಜಿ ಆಟಗಾರ ಹಾಲಿ ಪಾಂಡೂರಾ ತಂಡದ ನಾಯಕ ಚಾಮರ ಸಿಲ್ವ ಸ್ಪಾಟ್ ಫಿಕ್ಸಿಂಗ್ ನಡೆಸಿರುವುದು ಸಾಬೀತಾಗಿತ್ತು. ಹೀಗಾಗಿ ಅವರಿಗೆ 2 ವರ್ಷದ ನಿಷೇಧ ಶಿಕ್ಷೆ ವಿಧಿಸಲಾಗಿತ್ತು. ಇದರ ವಿರುದ್ಧ ಸಿಲ್ವ ಮೇಲ್ಮನವಿ ಸಲ್ಲಿಸಿದ್ದರು. ನಂತರ ಆ ಪಂದ್ಯಗಳೇ ಅಸಿಂಧು ಎಂದು ಶ್ರೀಲಂಕಾ ಕ್ರಿಕೆಟ್ ಮಂಡಳಿ ಘೋಷಿಸಿತ್ತು. ಹೀಗಾಗಿ ಚಾಮರ ಸಿಲ್ವ ಮೇಲಿನ ನಿಷೇಧವನ್ನು ತೆರವುಗೊಳಿಸಲಾಗಿದ್ದ ಪರಿಣಾಮ ದೇಶಿ ಪಂದ್ಯಗಳಲ್ಲಿ ಭಾಗವಹಿಸಲು ಅನುಮತಿ ಸಿಕ್ಕಿತ್ತು.

    ಶ್ರೀಲಂಕಾ ಆಟಗಾರರು ಕ್ರಿಕೆಟ್ ಗೆ ವಿಶೇಷ ಕೊಡುಗೆಯನ್ನು ನೀಡಿದ್ದಾರೆ. ಮಾಜಿ ಆಟಗಾರ ತಿಲಕರತ್ನೆ ದಿಲ್ಶಾನ್ ವಿಕೆಟ್ ಕೀಪರ್ ಕೈಗೆ ಬಾಲ್ ಸಿಗದಂತೆ ಬೌಂಡರಿ ಕಳುಹಿಸುವ ಶಾಟ್ ಹೊಡೆಯುತ್ತಿದ್ದರು. ಈ ಶಾಟ್ ‘ದಿಲ್ ಸ್ಕೂಪ್’ ಎಂದೇ ಹೆಸರುವಾಸಿಯಾಗಿದೆ.

    https://youtu.be/F6i1AlJi36M

    https://twitter.com/dinkerv/status/933017776964247552

  • ಐಪಿಎಲ್ ಸ್ಪಾಟ್ ಫಿಕ್ಸಿಂಗ್: ಶ್ರೀಶಾಂತ್ ಮೇಲಿನ ಅಜೀವ ನಿಷೇಧ ತೆರವಿಗೆ ತಡೆ

    ಐಪಿಎಲ್ ಸ್ಪಾಟ್ ಫಿಕ್ಸಿಂಗ್: ಶ್ರೀಶಾಂತ್ ಮೇಲಿನ ಅಜೀವ ನಿಷೇಧ ತೆರವಿಗೆ ತಡೆ

    ಕೊಚ್ಚಿ: ಭಾರತೀಯ ಕ್ರಿಕೆಟ್ ತಂಡದಲ್ಲಿ ಮರಳಿ ಸ್ಥಾನವನ್ನು ಪಡೆಯಬೇಕೆಂಬ ಆಸೆ ಹೊಂದಿದ್ದ ಕ್ರಿಕೆಟಿಗ ಎಸ್ ಶ್ರೀಶಾಂತ್‍ಗೆ ಭಾರೀ ಹಿನ್ನಡೆಯಾಗಿದ್ದು, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಶ್ರೀಶಾಂತ್ ಮೇಲೆ ವಿಧಿಸಿದ್ದ ಅಜೀವ ನಿಷೇಧವನ್ನು ತೆರವುಗೊಳಿಸಲು ಕೇರಳ ಹೈಕೋರ್ಟ್ ತಡೆ ನೀಡಿದೆ.

    ಆಗಸ್ಟ್ ತಿಂಗಳಿನಲ್ಲಿ ಕೇರಳ ಹೈಕೋರ್ಟ್ ಬಿಸಿಸಿಐಗೆ ಶ್ರೀಶಾಂತ್ ಮೇಲಿನ ಅಜೀವ ನಿಷೇಧವನ್ನು ತೆರವುಗೊಳಿಸುವಂತೆ ಆದೇಶವನ್ನು ನೀಡಿತ್ತು. ಆದರೆ ಬಿಸಿಸಿಐ, ಈ ಆದೇಶವನ್ನು ಪುನರ್ ಪರಿಶೀಲಿಸುವಂತೆ ಅರ್ಜಿಯನ್ನು ಸಲ್ಲಿಸಿತ್ತು. ಬಿಸಿಸಿಐ ಮನವಿಯನ್ನು ಪರಿಶೀಲಿಸಿದ ಹೈ ಕೋರ್ಟ್‍ನ ವಿಭಾಯ ಪೀಠವು ಬಿಸಿಸಿಐ ಪುನರ್ ಪರಿಶೀಲನಾ ಅರ್ಜಿಯನ್ನು ಎತ್ತಿ ಹಿಡಿದಿದ್ದು, ಶ್ರೀಶಾಂತ್ ಮೇಲಿನ ಅಜೀವ ನಿಷೇಧ ತೆರವಿಗೆ ತಡೆ ನೀಡಿದೆ.

    ಕೋರ್ಟ್ ತೀರ್ಪಿನ ಕುರಿತು ಪ್ರತಿಕ್ರಿಯಿಸಿರುವ ಶ್ರೀಶಾಂತ್ ನ್ಯಾಯಕ್ಕಾಗಿ ನಿರಂತರ ಹೋರಾಟ ನಡೆಸುವುದಾಗಿ ಟ್ವೀಟ್ ಮಾಡಿದ್ದಾರೆ. ಅಲ್ಲದೇ ಇದು ಅತ್ಯಂತ ಕೆಟ್ಟ ತೀರ್ಮಾನವಾಗಿದ್ದು, ನನಗೆ ಮಾತ್ರ ವಿಶೇಷ ಕಾನೂನು ಏಕೆ? ನಿಜವಾದ ಅಪರಾಧಿಗಳು ಎಲ್ಲಿ? ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಜಸ್ಥಾನ ತಂಡಗಳ ವಿರುದ್ಧ ಯಾವ ಕ್ರಮನ್ನು ಕೈಗೊಳ್ಳಲಾಗಿದೆ ಎಂದು ಬಿಸಿಸಿಐಗೆ ಪ್ರಶ್ನಿಸಿದ್ದಾರೆ. ನನಗೆ ನನ್ನ ಕುಟುಂಬ ಹಾಗೂ ನನ್ನನ್ನು ನಂಬುವ ಹಲವು ಆತ್ಮೀಯರ ಬೆಂಬಲವಿದ್ದು, ನಿಷೇಧ ತೆರವಿನ ವಿಚಾರದಲ್ಲಿ ನಿರಂತರವಾಗಿ ಹೋರಾಟವನ್ನು ಮುಂದುವರೆಸುವುದಾಗಿ ತಿಳಿಸಿದ್ದಾರೆ.

    2013ರ ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಶ್ರೀಶಾಂತ್ ಜೊತೆಗೆ ರಾಜಸ್ಥಾನ್ ರಾಯಲ್ಸ್ ತಂಡದ ಅಜಿತ್ ಚಾಂಡೀಲ, ಅಂಕಿತ್ ಚೌಹಾಣ್, ಅಲ್ಲದೇ ಚೆನ್ನೈ ಸೂಪರ್ ಕಿಂಗ್ಸ್, ರಾಜಸ್ಥಾನ್ ರಾಯಲ್ಸ್ ತಂಡಗಳನ್ನು ಎರಡು ವರ್ಷಗಳ ಕಾಲ ನಿಷೇಧವನ್ನು ವಿಧಿಸಲಾಗಿತ್ತು.