Tag: ಸ್ಪೀಕರ್

  • ದ್ವೇಷ ಭಾಷಣದ ವಿಚಾರದಲ್ಲಿ ಪೊಲೀಸ್ ಅಧಿಕಾರಿಗಳ ವಿರುದ್ಧ ಖಾದರ್ ಅಸಮಾಧಾನ – ಗೃಹ ಸಚಿವರಿಗೆ ಪತ್ರ

    ದ್ವೇಷ ಭಾಷಣದ ವಿಚಾರದಲ್ಲಿ ಪೊಲೀಸ್ ಅಧಿಕಾರಿಗಳ ವಿರುದ್ಧ ಖಾದರ್ ಅಸಮಾಧಾನ – ಗೃಹ ಸಚಿವರಿಗೆ ಪತ್ರ

    ಬೆಂಗಳೂರು: ದ್ವೇಷ ಭಾಷಣಗಳ ವಿರುದ್ಧ ಪೊಲೀಸ್ ಅಧಿಕಾರಿಗಳ ಕ್ರಮದಲ್ಲಿನ ಅಸಮರ್ಪಕತೆಯ ಬಗ್ಗೆ ತನಿಖೆ ನಡೆಸುವಂತೆ ಸ್ಪೀಕರ್ ಯು.ಟಿ ಖಾದರ್ (U T Khader) ಅವರು ಗೃಹ ಸಚಿವ ಪರಮೇಶ್ವರ್ (Parameshwar) ಅವರಿಗೆ ಪತ್ರ ಬರೆದಿದ್ದಾರೆ.

    ಇತ್ತೀಚೆಗೆ ರಾಜ್ಯದ ಕರಾವಳಿ ಭಾಗದಲ್ಲಿ ನಡೆಯುತ್ತಿರುವ ದ್ವೇಷಭರಿತ ಭಾಷಣಗಳು, ಪ್ರಚೋದನಾತ್ಮಕ ಹೇಳಿಕೆಗಳು ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಹರಡುತ್ತಿರುವ ಸಮಾಜ ಘಾತುಕ ವದಂತಿಗಳು ಸಾರ್ವಜನಿಕ ಶಾಂತಿ ಮತ್ತು ಸೌಹಾರ್ದತೆಗೆ ಭಾರೀ ಧಕ್ಕೆ ಉಂಟುಮಾಡುವಂತಹ ಅಪಾಯಕಾರಿ ಸ್ಥಿತಿಯನ್ನು ನಿರ್ಮಾಣ ಮಾಡುತ್ತಿವೆ. ಈ ಗಂಭೀರ ಬೆಳವಣಿಗೆಯನ್ನು ನಾನು ಈ ಪತ್ರದ ಮೂಲಕ ತಮ್ಮ ಗಮನಕ್ಕೆ ತರಲು ಇಚ್ಛಿಸುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ನೀಟ್ ಸೀಟು – ದಲ್ಲಾಳಿಗಳ ಮೋಸದ ಜಾಲಕ್ಕೆ ಬಲಿಯಾಗಬೇಡಿ: ಶರಣಪ್ರಕಾಶ್ ಪಾಟೀಲ್

    ಗಮನಾರ್ಹ ಸಂಗತಿಯೆಂದರೆ, ಈ ಹಿಂದಿನ ಕೆಲವು ಪೊಲೀಸ್ ಅಧಿಕಾರಿಗಳು ಈ ದ್ವೇಷ ಭಾಷಣ, ಪ್ರಚೋದನಕಾರಿ ಹೇಳಿಕೆಗಳು, ಸಾಮಾಜಿಕ ಮಾಧ್ಯಮಗಳಲ್ಲಿ ಸಮಾಜ ಘಾತುಕ ವದಂತಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳದೇ ಅಸಹಾಯಕತೆ ಅಥವಾ ನಿರ್ಲಕ್ಷ್ಯ ವಹಿಸಿದ್ದಾರೆ. ಆದರೆ ಈಗಿನ ಪೊಲೀಸ್ ಅಧಿಕಾರಿಗಳು ದ್ವೇಷ ಭಾಷಣದ ವಿರುದ್ಧ ಸಮರ್ಪಕ ಹಾಗೂ ತ್ವರಿತ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಅಧ್ಯಯನ ಪ್ರವಾಸ: ಮಲೇಶಿಯಾದಲ್ಲಿ ಸಭಾಧ್ಯಕ್ಷ ಯು.ಟಿ.ಖಾದರ್

    ಒಂದು ವೇಳೆ, ಹಿಂದಿನ ಅಧಿಕಾರಿಗಳು ಸೂಕ್ತ ಸಮಯದಲ್ಲಿ ಕ್ರಮ ಕೈಗೊಂಡಿದ್ದರೆ ಕರಾವಳಿ ಭಾಗದಲ್ಲಿ ಒಂದೆರೆಡು ಧರ್ಮಾಧಾರಿತ ಕೊಲೆ ಮತ್ತು ಹಿಂಸಾಚಾರವನ್ನು ತಪ್ಪಿಸಬಹುದಾಗಿತ್ತು. ಈ ಹಿಂದೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ದರೋಡೆ, ಮಾದಕ ವಸ್ತು ಸಾಗಾಟ ಮತ್ತಿತರ ಸಮಾಜಘಾತುಕ ಕೆಲಸಗಳಲ್ಲಿ ನಿಷ್ಠೆಯಿಂದ, ತ್ವರಿತಗತಿಯಲ್ಲಿ ಸೂಕ್ತ ಕ್ರಮ ಕೈಗೊಂಡ ಈ ಹಿಂದಿನ ಪೊಲೀಸ್ ಅಧಿಕಾರಿಗಳು ದ್ವೇಷ ಭಾಷಣಗಳ ವಿರುದ್ಧ ಯಾಕೆ ಸೂಕ್ತ ಕ್ರಮ ಕೈಗೊಳ್ಳಲಿಲ್ಲ? ಅದಕ್ಕೆ ಕಾರಣಗಳೇನು ಅನ್ನುವ ಸೂಕ್ತ ತನಿಖೆಯಾಗಬೇಕಿದೆ ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಇಡಿ ತನಿಖೆಗೆ ನನ್ನ ಸಹೋದರ ಡಿ.ಕೆ ಸುರೇಶ್ ಸಹಕಾರ ಕೊಡ್ತಾರೆ: ಡಿಕೆಶಿ

    ಆ ಮೂಲಕ ನಮ್ಮ ರಾಜ್ಯದ ಆಂತರಿಕ ಶಾಂತಿ, ಸಾಮರಸ್ಯ ಹಾಗೂ ಸಾರ್ವಜನಿಕ ನಂಬಿಕೆಯನ್ನು ಮತ್ತಷ್ಟು ಬಲಪಡಿಸಬಹುದು. ಈ ಆಶಯದಿಂದ ಈ ಪತ್ರವನ್ನು ತಮ್ಮ ಗಮನಕ್ಕೆ ತರುತ್ತಿದ್ದೇನೆ. ತಾವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಅಗತ್ಯ ಕ್ರಮ ಕೈಗೊಳ್ಳಬೇಕೆಂಬ ನನ್ನ ಅಭಿಪ್ರಾಯವನ್ನು ಈ ಮೂಲಕ ತಿಳಿಸುತ್ತಿದ್ದೇನೆ. ಅಲ್ಲದೇ ಹಿಂದಿನ ಪೊಲೀಸ್ ಅಧಿಕಾರಿಗಳು ದ್ವೇಷ ಭಾಷಣ ತಡೆಯಲು ವಿಫಲರಾಗಿದ್ದರು. ಅದರ ಬಗ್ಗೆ ತನಿಖೆ ಮಾಡಬೇಕು ಎಂದು ಪತ್ರದ ಮೂಲಕ ಆಗ್ರಹಿಸಿದ್ದಾರೆ.

  • ಮೋದಿಗೆ ತಲೆಬಾಗಿ ನಮಿಸಿದ್ದು ಸರಿಯಲ್ಲ- ಸ್ಪೀಕರ್‌ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

    ಮೋದಿಗೆ ತಲೆಬಾಗಿ ನಮಿಸಿದ್ದು ಸರಿಯಲ್ಲ- ಸ್ಪೀಕರ್‌ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

    – ರಾಗಾ ಹೇಳಿಕೆಗೆ ಓಂ ಬಿರ್ಲಾ ಸ್ಪಷ್ಟನೆ

    ನವದೆಹಲಿ: ಸ್ಪೀಕರ್ ಓಂ ಬಿರ್ಲಾ ಅವರು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಭೇಟಿಯಾದಾಗ ತಲೆಬಾಗಿ ನಮಸ್ಕರಿಸಿದ್ದರು. ಆದರೆ ರಾಹುಲ್‌ ಗಾಂಧಿ ಮುಂದೆ ನೇರವಾಗಿ ನಿಂತು ಕೈ ಕುಲುಕಿದ್ದರು. ಈ ವಿಚಾರವನ್ನು ವಿರೋಧ ಪಕ್ಷದ ನಾಯಕ ರಾಗಾ ಅವರು ಇಂದು ಸಂಸತ್ತಿನಲ್ಲಿ ಪ್ರಸ್ತಾಪಿಸಿ ವಾಗ್ದಾಳಿ ನಡೆಸಿದರು.

    ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ರಾಹುಲ್ ಗಾಂಧಿ (Rahul Gandhi), ಲೋಕಸಭಾ ಸ್ಪೀಕರ್ ಆಯ್ಕೆ ದಿನವನ್ನು ಉಲ್ಲೇಖಿಸಿ, ನಾನು ನಿಮ್ಮೊಂದಿಗೆ ಕೈಕುಲುಕಿದಾಗ ನೀವು ನೇರವಾಗಿ ನಿಂತು ನನ್ನ ಕೈಕುಲುಕಿದ್ದೀರಿ. ಆದರೆ ಮೋದಿಜಿ ಕೈಕುಲುಕಿದಾಗ ತಲೆಬಾಗಿ ನಮಸ್ಕರಿಸಿ ಕೈಕುಲುಕಿದ್ದೀರಿ ಎಂದು ಹೇಳಿದರು. ಈ ವೇಳೆ ಆಡಳಿತ ಪಕ್ಷದ ಸದಸ್ಯರು ರಾಹುಲ್‌ ಗಾಂಧಿ ವಿರುದ್ಧ ಕಿಡಿಕಾರಿದ್ದು, ಇದು ಪೀಠಕ್ಕೆ ಮಾಡಿದ ಅವಮಾನ ಎಂದು ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: ರಾಹುಲ್ ಗಾಂಧಿ ಇಡೀ ಹಿಂದೂ ಸಮಾಜ ಅವಮಾನಿಸಿದ್ದಾರೆ: ಅಶ್ವಿನಿ ವೈಷ್ಣವ್

    ರಾಹುಲ್‌ ಗಾಂಧಿಗೆ ಹೇಳಿಕೆಗೆ ಪ್ರತಿಕ್ರಿಯಿಸಿದ ಸ್ಪೀಕರ್‌ ಓಂ ಬಿರ್ಲಾ (Om Birla) ಅವರು, ಪ್ರಧಾನಿಯವರು ಸದನದ ನಾಯಕ. ಸಾರ್ವಜನಿಕ ಜೀವನದಲ್ಲಿ ಮತ್ತು ವೈಯಕ್ತಿಕ ಜೀವನದಲ್ಲಿ ನಮಗಿಂತ ಹಿರಿಯರನ್ನು ಭೇಟಿಯಾದಾಗ ಅವರಿಗೆ ತಲೆಬಾಗಿ ನಮಸ್ಕರಿಸಿ ಗೌರವ ನೀಡುವುದು ನಮ್ಮ ಸಂಸ್ಕೃತಿಯಾಗಿದೆ. ನಾನು ಈ ಸಂಸ್ಕೃತಿ ಮತ್ತು ಮೌಲ್ಯಗಳನ್ನು ಅನುಸರಿಸುತ್ತೇನೆ. ಹಿರಿಯರಿಗೆ ನಮಸ್ಕರಿಸುವುದು ಮತ್ತು ಅಗತ್ಯವಿದ್ದರೆ ಅವರ ಪಾದಗಳನ್ನು ಮುಟ್ಟುವುದು ಕೂಡ ನಮ್ಮ ಸಂಸ್ಕೃತಿಯ ಭಾಗವಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

    ಬಿರ್ಲಾ ಮಾತಿಗೆ ಮತ್ತೆ ಪ್ರತಿಕ್ರಿಯಿಸಿದ ರಾಗಾ, ಸ್ಪೀಕರ್‌ ಅವರ ಮಾತನ್ನು ಗೌರವಿಸುತ್ತೇನೆ. ಆದರೆ ಈ ಸದನದಲ್ಲಿ ನಿಮಗಿಂತ ದೊಡ್ಡವರು ಯಾರೂ ಇಲ್ಲ. ಇಲ್ಲಿ ನಿಮ್ಮ ಮಾತೇ ಕೊನೆಯದು. ಎಲ್ಲರೂ ನಿಮ್ಮನ್ನು ಗೌರವಿಸಬೇಕು. ನಾನು ನಿಮ್ಮ ಮುಂದೆ ತಲೆಬಾಗುತ್ತೇನೆ ಮತ್ತು ಇಡೀ ಪ್ರತಿಪಕ್ಷಗಳು ನಿಮ್ಮ ಮುಂದೆ ತಲೆಬಾಗುತ್ತವೆ. ಲೋಕಸಭಾ ಸದಸ್ಯರಾದ ನಾವು ಸ್ಪೀಕರ್‌ಗೆ ಅಧೀನರಾಗಿದ್ದೇವೆ. ನೀವು ಏನು ಹೇಳಿದರೂ ನಾವು ಕೇಳುತ್ತೇವೆ. ಆದರೆ ಸದನದಲ್ಲಿ ನಿಷ್ಪಕ್ಷಪಾತವಾಗಿರುವುದು ಮುಖ್ಯ ಎಂದು ಹೇಳಿದರು.

  • ಲೋಕಸಭೆಯ ಸ್ಪೀಕರ್‌ ಆಗಿ 2 ನೇ ಬಾರಿಗೆ ಓಂ ಬಿರ್ಲಾ ಆಯ್ಕೆ

    ಲೋಕಸಭೆಯ ಸ್ಪೀಕರ್‌ ಆಗಿ 2 ನೇ ಬಾರಿಗೆ ಓಂ ಬಿರ್ಲಾ ಆಯ್ಕೆ

    ನವದೆಹಲಿ: 18ನೇ ಲೋಕಸಭೆಯ ಸ್ಪೀಕರ್‌ ಆಗಿ 2 ನೇ ಬಾರಿಗೆ ಓಂ ಬಿರ್ಲಾ (Om Birla) ಆಯ್ಕೆಯಾಗಿದ್ದಾರೆ. ಧ್ವನಿ ಮತದ ಮೂಲಕ ಲೋಕಸಭೆ ಸ್ಪೀಕರ್ ಆಗಿ ಓಂ ಬಿರ್ಲಾ ಆಯ್ಕೆಯಾಗಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ ಅವರು ಓಂ ಬಿರ್ಲಾ ಹೆಸರನ್ನು ಪ್ರಸ್ತಾಪಿಸಿದರು. ನಂತರ ಪ್ರಧಾನಿ ಮೋದಿ (Narendra Modi) ಮತ್ತು ರಾಹುಲ್ ಗಾಂಧಿ (Rahul Gandhi) ಅವರನ್ನು ಸ್ಪೀಕರ್‌ ಕುಳಿತುಕೊಳ್ಳುವ ಆಸನಕ್ಕೆ ಕರೆದೊಯ್ದರು.  ಈ ವೇಳೆ ಮೋದಿಯವರು, ನೀವು ಎರಡನೇ ಬಾರಿಗೆ ಈ ಸ್ಥಾನವನ್ನು ಅಲಂಕರಿಸಿರುವುದು ಸದನದ ಸೌಭಾಗ್ಯ. ನಾನು ನಿಮ್ಮನ್ನು ಮತ್ತು ಇಡೀ ಸದನವನ್ನು ಅಭಿನಂದಿಸುತ್ತೇನೆ ಎಂದು ಹೇಳಿದರು.

    ಪ್ರತಿಪಕ್ಷಗಳಿಗೆ ಉಪಸಭಾಪತಿ ಸ್ಥಾನ ನೀಡುವಂತೆ ಷರತ್ತು ಹಾಕಿದ್ದರು. ಈ ಬಗ್ಗೆ ಆಡಳಿತ ಪಕ್ಷ ಮತ್ತು ಪ್ರತಿಪಕ್ಷಗಳ ನಡುವೆ ಒಮ್ಮತ ಮೂಡಿರಲಿಲ್ಲ. ಎನ್‌ಡಿಎಯಿಂದ ಓಂ ಬಿರ್ಲಾ ಮತ್ತು ವಿರೋಧ ಪಕ್ಷದಿಂದ ಕೆ. ಸುರೇಶ್ ಅಭ್ಯರ್ಥಿಯಾಗಿದ್ದರು. ಇದನ್ನೂ ಓದಿ: ಲೋಕಸಭೆಯ ಸ್ಪೀಕರ್‌ ಚುನಾವಣೆ – ಎನ್‌ಡಿಎ ಓಂ ಬಿರ್ಲಾ v/s ಇಂಡಿಯಾ ಒಕ್ಕೂಟದ ಸುರೇಶ್‌ ಮಧ್ಯೆ ಫೈಟ್‌

    ಸ್ವಾತಂತ್ರ್ಯದ ನಂತರ, ಲೋಕಸಭೆಯ ಸ್ಪೀಕರ್ (Lok Sabha Speaker Election) ಮತ್ತು ಉಪಸಭಾಪತಿಯನ್ನು ಆಡಳಿತ ಪಕ್ಷ ಮತ್ತು ಪ್ರತಿಪಕ್ಷಗಳ ನಡುವಿನ ಒಮ್ಮತದ ಮೂಲಕ ಆಯ್ಕೆ ಮಾಡಲಾಗುತಿತ್ತು. ಆದರೆ ಈ ಬಾರಿ ಇಂಡಿಯಾ ಬಣ ಅಭ್ಯರ್ಥಿ ಘೋಷಣೆಯ ನಂತರ ಚುನಾವಣೆ ನಡೆದಿದೆ. ಈ ಹಿಂದೆ 1952 ಮತ್ತು 1976ರಲ್ಲಿ ಲೋಕಸಭಾ ಸ್ಪೀಕರ್ ಹುದ್ದೆಗೆ ಚುನಾವಣೆ ನಡೆದಿತ್ತು.

  • ಸ್ವಾತಂತ್ರ್ಯ ನಂತರ ಸ್ಪೀಕರ್‌ ಹುದ್ದೆಗೆ ಫಸ್ಟ್‌ ಟೈಂ ಚುನಾವಣೆ – INDIA ಒಕ್ಕೂಟ ಆಡಳಿತ ಇರೋ ರಾಜ್ಯಗಳಲ್ಲಿ ಯಾರಿಗೆ ನೀಡಿವೆ?

    ಸ್ವಾತಂತ್ರ್ಯ ನಂತರ ಸ್ಪೀಕರ್‌ ಹುದ್ದೆಗೆ ಫಸ್ಟ್‌ ಟೈಂ ಚುನಾವಣೆ – INDIA ಒಕ್ಕೂಟ ಆಡಳಿತ ಇರೋ ರಾಜ್ಯಗಳಲ್ಲಿ ಯಾರಿಗೆ ನೀಡಿವೆ?

    ನವದೆಹಲಿ: ಸಂಪ್ರದಾಯದಂತೆ ಸರ್ವಾನುಮತದಿಂದ ಸ್ಪೀಕರ್ (Spekaer) ಆಯ್ಕೆ ಮಾಡಲು ಎನ್‌ಡಿಎ (NDA) ನಡೆಸಿದ ಪ್ರಯತ್ನ ಫಲ ನೀಡದ ಕಾರಣ ಲೋಕಸಭೆ ಸ್ಪೀಕರ್ ಹುದ್ದೆಗೆ ಸ್ವಾತಂತ್ರ್ಯ ನಂತರ ಮೊಟ್ಟ ಮೊದಲ ಬಾರಿಗೆ ಚುನಾವಣೆ ನಡೆಯಲಿದೆ.

    ಸರ್ವಾನುಮತದಿಂದ ಸ್ಪೀಕರ್ ಆಯ್ಕೆಗೆ INDIA ಕೂಟ ಷರತ್ತನ್ನು ವಿಧಿಸಿತ್ತು. ವಿಪಕ್ಷಗಳಿಗೆ ಡೆಪ್ಯೂಟಿ ಸ್ಪೀಕರ್ ಸ್ಥಾನ ನೀಡುವ ಯಾವುದೇ ಭರವಸೆಯನ್ನು ಎನ್‌ಡಿಎ ನೀಡದ ಕಾರಣ ಸ್ಪೀಕರ್ ಚುನಾವಣೆಯಲ್ಲಿ ಸ್ಪರ್ಧಿಸಿದೆ.

    ವಿಪಕ್ಷಗಳೊಡನೆ ರಕ್ಷಣಾಮಂತ್ರಿ ರಾಜನಾಥ್ ಸಿಂಗ್ ಮಂಥನ ನಡೆಸಿದರೂ ಪ್ರಯೋಜನ ಆಗಲಿಲ್ಲ. ಎನ್‌ಡಿಎ ಅಭ್ಯರ್ಥಿಯಾಗಿ ಓಂ ಬಿರ್ಲಾ (Om Birla), ಇಂಡಿ ಕೂಟದ ಅಭ್ಯರ್ಥಿಯಾಗಿ ಕೆ ಸುರೇಶ್ (K Suresh) ನಾಮಪತ್ರ ಸಲ್ಲಿಸಿದ್ದು ನಾಳೆ ಚುನಾವಣೆ ನಡೆಯಲಿದೆ. ಇದನ್ನೂ ಓದಿ: ಸೂರಜ್‌ ಪರ ದೂರು ನೀಡಿದ್ದ ಶಿವಕುಮಾರ್‌ ವಿರುದ್ಧ ಹಣ ದುರುಪಯೋಗ ಆರೋಪ, ಎಫ್‌ಐಆರ್‌ ದಾಖಲು

    INDIA ಕೂಟದ ಅಭ್ಯರ್ಥಿಗೆ ಈವರೆಗೂ ಟಿಎಂಸಿ (TMC) ಬೆಂಬಲ ಸೂಚಿಸಿಲ್ಲ. ನಮ್ಮನ್ನು ಸಂಪರ್ಕಿಸದೇ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿದೆ ಎಂದು ಹೇಳಿದೆ.

    ಇಂದು ರಾತ್ರಿ ಖರ್ಗೆ ನೇತೃತ್ವದಲ್ಲಿ ಇಂಡಿ ಕೂಟದ ನಾಯಕರು ಸಭೆ ಸೇರಿದ್ದಾರೆ. ಉಭಯ ಕೂಟಗಳು ತಮ್ಮ ಸಂಸದರಿಗೆ ವಿಪ್ ಜಾರಿ ಮಾಡಿವೆ. ವೈಎಸ್‌ಆರ್ ಪಕ್ಷ ಎನ್‌ಡಿಎ ಅಭ್ಯರ್ಥಿ ಬೆಂಬಲಿಸುವ ಸಂಭವ ಇದೆ. ಬೆಂಬಲ ನೀಡಿದರೆ 4 ಸದಸ್ಯರ ಮತ ಓಂ ಬಿರ್ಲಾ ಅವರಿಗೆ ಬೀಳುವ ಸಾಧ್ಯತೆಯಿದೆ.

    ಲೋಕಸಭೆಯಲ್ಲಿ ಉಪ ಸಭಾಪತಿ ಹುದ್ದೆಯ ಮೇಲೆ ಕಣ್ಣಿಟ್ಟಿರುವ ವಿಪಕ್ಷಗಳು ಆಡಳಿತದಲ್ಲಿರುವ ಯಾವುದೇ ರಾಜ್ಯಗಳಲ್ಲಿ ಎನ್‌ಡಿಎ ಮೈತ್ರಿಗೆ ಡೆಪ್ಯೂಟಿ ಸ್ಥಾನ ನೀಡಿಲ್ಲ. ಸ್ಪೀಕರ್‌ ಮತ್ತು ಡೆಪ್ಯೂಟಿ ಸ್ಪೀಕರ್‌ ಹುದ್ದೆಯನ್ನು ತಮ್ಮ ಬಳಿಯೇ ಇಟ್ಟುಕೊಂಡಿವೆ.

    ಎಲ್ಲಿ ಯಾರಿಗೆ ನೀಡಲಾಗಿದೆ?
    ತಮಿಳುನಾಡು (ಡಿಎಂಕೆ) , ಕರ್ನಾಟಕ ಕಾಂಗ್ರೆಸ್‌), ಕೇರಳ (ಎಲ್‌ಡಿಎಫ್‌),ಪಂಜಾಬ್‌ ಮತ್ತು ದೆಹಲಿ (ಆಪ್‌), ಹಿಮಾಚಲ ಪ್ರದೇಶ (ಕಾಂಗ್ರೆಸ್‌) ಪಶ್ಚಿಮ ಬಂಗಾಳದಲ್ಲಿ(ಟಿಎಂಸಿ) ಆಡಳಿತ ಪಕ್ಷದ ಸದಸ್ಯರೇ ಎರಡು ಸ್ಥಾನವನ್ನು ಆಲಂಕರಿಸಿದ್ದಾರೆ. ತೆಲಂಗಾಣದಲ್ಲಿ ಸ್ಪೀಕರ್‌ ಸ್ಥಾನ ಕಾಂಗ್ರೆಸ್‌ ಬಳಿಯಿದ್ದರೆ ಡೆಪ್ಯೂಟಿ ಸ್ಪೀಕರ್‌ ಸ್ಥಾನ ಇನ್ನೂ ನೇಮಕವಾಗಿಲ್ಲ. ಜಾರ್ಖಂಡ್‌ನಲ್ಲಿ ಜೆಎಂಎಂ ಮತ್ತು ಕಾಂಗ್ರೆಸ್‌ ಮೈತ್ರಿ ಸರ್ಕಾರವಿದ್ದು ಜೆಎಂಎಂ ಸ್ಪೀಕರ್‌ ಸ್ಥಾನ ಹೊಂದಿದೆ. ಡೆಪ್ಯೂಟಿ ಸ್ಥಾನಕ್ಕೆ ಇನ್ನೂ ನೇಮಕವಾಗಿಲ್ಲ.

    ಹಿಂದೆ ಏನಾಗಿತ್ತು?
    1925 – ಆಗಿನ ಸೆಂಟ್ರಲ್ ಲೆಜಿಸ್ಲೇಟಿವ್ ಅಸೆಂಬ್ಲಿಗೆ ಎಲೆಕ್ಷನ್, ಸ್ಪೀಕರ್ ಸ್ಥಾನಕ್ಕೆ ಟಿ.ರಂಗಾಚಾರಿಯಾರ್, ವಿಠಲ್‌ಭಾಯ್ ಪಟೇಲ್ ಸ್ಪರ್ಧೆ ನಡೆದು ಸ್ವರಾಜ್ ಪಕ್ಷದ ವಿಠಲ್‌ಭಾಯ್ ಜೆ ಪಟೇಲ್ 2 ಮತದಿಂದ ಗೆಲುವು
    1925-1946 – ಸ್ಪೀಕರ್ ಸ್ಥಾನಕ್ಕೆ ಆರು ಬಾರಿ ಚುನಾವಣೆ
    1946 – ಕೊನೆಯ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸಿ ಆಯ್ಕೆಯಾದ ಜಿವಿ ಮಾಳವಂಕರ್
    1956 – ಮಾಳವಂಕರ್ ನಿಧನದಿಂದ ಸ್ಪೀಕರ್ ಆಗಿ ಡೆಪ್ಯೂಟಿ ಸ್ಪೀಕರ್ ಎಂಎ ಅಯ್ಯಂಗಾರ್ ಆಯ್ಕೆ
    1957- 2ನೇ ಸಾರ್ವತ್ರಿಕ ಚುನಾವಣೆ ನಂತರ ಸರ್ವಾನುಮತದಿಂದ ಎಂಎ ಅಯ್ಯಂಗಾರ್ ಆಯ್ಕೆ. ಅಲ್ಲಿಂದ ಈವರೆಗೂ ಲೋಕಸಭೆ ಸ್ಪೀಕರ್ ಚುನಾವಣೆ ನಡೆದಿರಲ್ಲ ಸರ್ವಾನುಮತದ ಆಯ್ಕೆ ನಡೆದಿತ್ತು.

     

  • ಆಂಧ್ರ ಬಿಜೆಪಿ ಅಧ್ಯಕ್ಷೆ ಪುರಂದೇಶ್ವರಿ ಲೋಕಸಭೆಯ ಸ್ಪೀಕರ್‌?

    ಆಂಧ್ರ ಬಿಜೆಪಿ ಅಧ್ಯಕ್ಷೆ ಪುರಂದೇಶ್ವರಿ ಲೋಕಸಭೆಯ ಸ್ಪೀಕರ್‌?

    ನವದೆಹಲಿ: ಸಚಿವರಿಗೆ ಖಾತೆ ಹಂಚಿಕೆ ಅಂತಿಮವಾಗುತ್ತಿದ್ದಂತೆ 18ನೇ ಲೋಕಸಭೆಯ ಸ್ಪೀಕರ್‌ (Lok Sabha Speaker) ಹುದ್ದೆಗೆ ಆಂಧ್ರಪ್ರದೇಶ (Andhra Pradesh) ಬಿಜೆಪಿ ಅಧ್ಯಕ್ಷೆ ದಗ್ಗುಬಾಟಿ ಪುರಂದೇಶ್ವರಿ (Purandeswari) ಹೆಸರು ಬಂದಿದೆ.

    ಬಿಜೆಪಿ (BJP) ಬಹುಮತ ಹೊಂದಿದ್ದ ಎರಡು ಅವಧಿಯಲ್ಲಿ ಕ್ರಮವಾಗಿ ಸುಮಿತ್ರಾ ಮಹಾಜನ್ ಮತ್ತು ಓಂ ಬಿರ್ಲಾ ಅವರು ಸ್ಪೀಕರ್ ಆಗಿದ್ದರು. ಆದರೆ ಈ ಬಾರಿ ಬಿಜೆಪಿಗೆ ಸ್ಪಷ್ಟ ಬಹುಮತ ಇಲ್ಲದೇ ಇದ್ದಾಗ ಸ್ಪೀಕರ್‌ ಯಾರಾಗುತ್ತಾರೆ ಎಂಬ ಕುತೂಹಲ ಹೆಚ್ಚಾಗಿದೆ.

    ಎನ್‌ಡಿಎ ಸರ್ಕಾರ ರಚನೆಯಾದ ಬಳಿಕ ಸ್ಪೀಕರ್‌ ಹುದ್ದೆ ನೀಡುವಂತೆ ಟಿಡಿಪಿ (TDP) ಬೇಡಿಕೆ ಇಟ್ಟಿತ್ತು. ಆದರೆ ಸಮ್ಮಿಶ್ರ ಸರ್ಕಾರದಲ್ಲಿ ಸ್ಪೀಕರ್‌ ಹುದ್ದೆಗೆ ಭಾರೀ ಮಹತ್ವ ಇರುವ ಕಾರಣ ಬಿಜೆಪಿ ಬಿಟ್ಟು ಕೊಟ್ಟಿಲ್ಲ. ಈ ಕಾರಣಕ್ಕೆ ಟಿಡಿಪಿ ಮತ್ತು ಬಿಜೆಪಿಗೆ ಆಪ್ತವಾಗಿರುವ ಪುರಂದೇಶ್ವರಿ ಹೆಸರು ಈಗ ಕೇಳಿ ಬಂದಿದೆ. ಇದನ್ನೂ ಓದಿ: ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ರೈತರಿಗೆ ಹಣ – ಕಿಸಾನ್‌ ಸಮ್ಮಾನ್‌ ನಿಧಿ ಕಡತಕ್ಕೆ ಮೋದಿ ಸಹಿ

    ಪುರಂದರೇಶ್ವರಿ ಯಾರು?
    ದಿವಂಗತ ಎನ್‌.ಟಿ.ರಾಮರಾವ್‌ ಅವರ ಪುತ್ರಿ ಆಗಿರುವ ಪುರಂದರೇಶ್ವರಿ ರಾಜಮಂಡ್ರಿ ಲೋಕಸಭಾ ಕ್ಷೇತ್ರದ ಸದಸ್ಯೆಯಾಗಿದ್ದಾರೆ. ಟಿಡಿಪಿ ನಾಯಕ ಚಂದ್ರಬಾಬು (Chandrababu Naidu) ಅವರ ಪತ್ನಿಯ ಸಹೋದರಿಯಾಗಿದ್ದಾರೆ. ಪುರಂದರೇಶ್ವರಿ ಅವರ ಸಹೋದರ ಬಾಲಕೃಷ್ಣ ಹಿಂದೂಪುರ ವಿಧಾನಸಭಾ ಕ್ಷೇತ್ರದ ಟಿಡಿಪಿ ಶಾಸಕರಾಗಿದ್ದಾರೆ. ಆಂಧ್ರದಲ್ಲಿ ಬಿಜೆಪಿ ಮತ್ತು ಟಿಡಿಪಿ, ಜನಸೇನಾ ಮೈತ್ರಿಯಾಗಲು ಪುರಂದೇಶ್ವರಿ ಪಾತ್ರ ದೊಡ್ಡದು. ಈ ಕಾರಣಕ್ಕೆ ಪುರಂದೇಶ್ವರಿ ಹೆಸರು ಈಗ ಮುನ್ನೆಲೆಗೆ ಬಂದಿದೆ.

    ಪುರಂದರೇಶ್ವರಿ ಅವರನ್ನು ಸ್ಪೀಕರ್‌ ಸ್ಥಾನಕ್ಕೆ ಕೂರಿಸಿದರೆ ಸರ್ಕಾರ ಮಹಿಳೆಯರ ಪರವಾಗಿ ಇದೆ ಎಂಬ ಸಂದೇಶವನ್ನು ರವಾನಿಸದಂತಾಗುತ್ತದೆ. ಅಷ್ಟೇ ಅಲ್ಲದೇ ಮಿತ್ರ ಪಕ್ಷವಾದ ಟಿಡಿಪಿ, ಜನಸೇನಾ ಸೇರಿದಂತೆ ಯಾವುದೇ ಪಕ್ಷಗಳು ವಿರೋಧ ವ್ಯಕ್ತಪಡಿಸುವ ಸಾಧ್ಯತೆ ಇಲ್ಲ ಎಂಬ ಲೆಕ್ಕಾಚಾರವನ್ನು ಬಿಜೆಪಿ ಹಾಕಿಕೊಂಡಿದೆ.

     

  • ಹಿಂದೂಗಳು ನಮಸ್ಕಾರ ಮಾಡ್ಬೇಕು ಅಂತ ನಾನು ಹೇಳಿದ್ದೀನಾ? – ಸಚಿವ ಜಮೀರ್‌ ಪ್ರಶ್ನೆ

    ಹಿಂದೂಗಳು ನಮಸ್ಕಾರ ಮಾಡ್ಬೇಕು ಅಂತ ನಾನು ಹೇಳಿದ್ದೀನಾ? – ಸಚಿವ ಜಮೀರ್‌ ಪ್ರಶ್ನೆ

    ಬೆಳಗಾವಿ: ಮುಸ್ಲಿಂ ಸ್ಪೀಕರ್‌ ಕುರಿತಾದ ನನ್ನ ಹೇಳಿಕೆಗೆ ನಾನು ಈಗಲೂ ಬದ್ಧ, ಹಿಂದೂಗಳು (Hindu) ನಮಸ್ಕಾರ ಮಾಡ್ಬೇಕು ಅಂತ ನಾನು ಹೇಳಿದ್ದೀನಾ? ಎಂದು ಸಚಿವ ಜಮೀರ್ ಅಹ್ಮದ್ ಖಾನ್‌ (Zameer Ahmed Khan) ಪ್ರಶ್ನೆ ಮಾಡಿದರು.

    ಬೆಳಗಾವಿ ಸುವರ್ಣಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸದನ 4ನೇ ತಾರೀಖು ಶುರುವಾಗಿದೆ. ಮೊದಲ ವಾರ ಏನೂ ಮಾತಾಡಿಲ್ಲ. 2ನೇ ವಾರ ಇದ್ದಕ್ಕಿದ್ದಂತೆ ಈ ವಿಷಯ ತೆಗೆದುಕೊಂಡಿದ್ದಾರೆ. ಇದರ ಅಗತ್ಯವಾದರೂ ಏನಿತ್ತು? ನಾ‌ನೇನು ತಪ್ಪು ಮಾತಾಡಿದ್ದೇನೆ? ಹೈದರಾಬಾದ್ ಸಭೆಯಲ್ಲಿ ಮಾತಾಡಿದ್ದೇನೆ. ಸಭೆಯಲ್ಲಿ ಯಾರೋ ಒಬ್ಬ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಸಮಾನ ಅವಕಾಶ ಕೊಡಲ್ಲ ಎಂದು ಕೇಳಿದ್ರು. ಆಗ ನಿನ್ನ ಭಾವನೆ ತಪ್ಪಿದೆ ಎಂದು ತಿಳಿವಳಿಕೆ ಹೇಳಿದೆ ಎಂದರು. ಇದನ್ನೂ ಓದಿ: Article 370: ಶೇಕ್ ಅಬ್ದುಲ್ಲಾ ಖುಷಿಪಡಿಸಲು ಜಾರಿಗೆ ತಂದಿದ್ದನ್ನು ಮೋದಿ ಧೈರ್ಯದಿಂದ ರದ್ದು ಮಾಡಿದ್ರು: ಯತ್ನಾಳ್

    ಕರ್ನಾಟಕದಲ್ಲಿ 17‌ ಅಲ್ಪಸಂಖ್ಯಾತರಿಗೆ ಕಾಂಗ್ರೆಸ್‌ (Congress) ಟಿಕೆಟ್‌ ಕೊಟ್ಟಿದೆ, ಅದರಲ್ಲಿ 9 ಜನ ಗೆದಿದ್ದಾರೆ. 9 ರಲ್ಲಿ 5 ಜನರಿಗೆ ಅಧಿಕಾರಿ ಕೊಟ್ಟಿದ್ದಾರೆ. ನನ್ನ, ರಹೀಮ್ ಖಾನ್‌ನ ಮಂತ್ರಿ ಮಾಡಿದ್ದಾರೆ. ಸಲೀಂ ಅಹ್ಮದ್ ಅವರನ್ನ ಚಿಫ್ ವಿಪ್ ಮಾಡಿದ್ದಾರೆ. ನಜೀರ್ ಅಹ್ಮದ್ ಅವರನ್ನ ಸಿಎಂ ರಾಜಕೀಯ ಕಾರ್ಯದರ್ಶಿ ಮಾಡಿದ್ದಾರೆ. ಕರ್ನಾಟಕದಲ್ಲಿ ಯು.ಟಿ ಖಾದರ್ (UT Khader) ಅವರನ್ನ ಸ್ಪೀಕರ್ ಮಾಡಿದ್ದಾರೆ. ಸ್ಪೀಕರ್ ಅವರಿಗೆ ನನ್ನನ್ನು ಸೇರಿದಂತೆ ಬಿಜೆಪಿ ಅವರು ನಮಸ್ಕಾರ ಮಾಡಬೇಕು ಎಂದು ಹೇಳಿದ್ದೇನೆ. ಇದು ಹೇಗೆ ಅಪಮಾನ ಆಗುತ್ತೆ‌ ಎಂದು ಜಮೀರ್‌ ತಮ್ಮ ಹೇಳಿಕೆ ಸಮರ್ಥಿಸಿಕೊಂಡಿದ್ದಾರೆ.

    ಸಾಂವಿಧಾನಿಕ ಪೀಠಕ್ಕೆ ಎಲ್ಲರೂ ನಮಸ್ಕಾರ ಮಾಡಲೇಬೇಕು ತಾನೇ. ಕಾಂಗ್ರೆಸ್ ಪಕ್ಷ ಸ್ಪೀಕರ್ ಸ್ಥಾನ ಕೊಟ್ಟಿದೆ. ಯಾರೇ ಇದ್ದರೂ ಪೀಠಕ್ಕೆ ನಮಸ್ಕಾರ ಮಾಡಲೇಬೇಕು. ಅಂತಹ ಸ್ಥಾನವನ್ನು ಅಲ್ಪ ಸಂಖ್ಯಾತರಿಗೆ ಕಾಂಗ್ರೆಸ್ ಕೊಟ್ಟಿದೆ ಎಂದು ಹೇಳಿದ್ದೇನೆ. ಹಿಂದೂಗಳು ನಮಸ್ಕಾರ ಮಾಡಬೇಕು ಎಂದು ನಾನು ಹೇಳಿದ್ದೀನಾ? ಎಂದು ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: `ದಳಪತಿ’ಗಳಿಗೆ ಸೆಡ್ಡು ಹೊಡೆದ ಸಿ.ಎಂ ಇಬ್ರಾಹಿಂ ಬಣ- ರಾಷ್ಟ್ರೀಯ ಅಧ್ಯಕ್ಷರಾಗಿ ಸಿ.ಕೆ.ನಾಣು ನೇಮಕ

    ಬಿಜೆಪಿ ಅವರಿಗೆ ಯಾವ ವಿಷಯ ಇರಲಿಲ್ಲ. ಹಾಗಾಗಿ ಇವತ್ತು ಈ ವಿಷಯ ತೆಗೆದುಕೊಂಡಿದ್ದಾರೆ. ಸ್ಪಷ್ಟನೆ ಕೊಡಲು ನಾನು ಸಿದ್ದವಾಗಿದ್ದೇನೆ. ಅದನ್ನು ಕೇಳಲು ಬಿಜೆಪಿಯವರು ರೆಡಿಯಾಗಿಲ್ಲ. ಬಿಜೆಪಿಯಲ್ಲೇ ಹೊಂದಾಣಿಕೆಯಿಲ್ಲ, ಅವರ ಹೈಕಮಾಂಡ್ ನಿಂದ ಸೂಚನೆ ಬಂದಿದೆ‌. ಆದ್ದರಿಂದ ಬಿಜೆಪಿ ಅವರು‌ ಪ್ರತಿಭಟನೆ ಮಾಡುತ್ತಿದ್ದಾರೆ. ನಾನು ತಪ್ಪು ಮಾಡಿಲ್ಲ, ನನ್ನ ಹೇಳಿಕೆಗೆ ನಾನೀಗಲೂ ಬದ್ಧ ಎಂದು ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಸಮನ್ವಯ ಹೆಲ್ತ್‌ಕೇರ್ ರಾಘವೇಂದ್ರ ಶಾಸ್ತ್ರಿಗೆ ಸಿಂಗಾಪುರ ಸರ್ಕಾರದ ಪ್ರೆಸಿಡೆನ್ಶ್ಯಿಯಲ್ ರೆಸಿಲಿಯನ್ಸ್ ಪದಕ 

  • ಕಾಂಗ್ರೆಸ್ ಮುಸ್ಲಿಂ ಸಮಾಜಕ್ಕೆ ಕೊಟ್ಟಿರುವ ಗೌರವದ ಬಗ್ಗೆ ಮಾತನಾಡಿದ್ದೇನೆ: ಜಮೀರ್

    ಕಾಂಗ್ರೆಸ್ ಮುಸ್ಲಿಂ ಸಮಾಜಕ್ಕೆ ಕೊಟ್ಟಿರುವ ಗೌರವದ ಬಗ್ಗೆ ಮಾತನಾಡಿದ್ದೇನೆ: ಜಮೀರ್

    ಬೆಂಗಳೂರು: ಕಾಂಗ್ರೆಸ್ (Congress) ಪಕ್ಷ ಮುಸ್ಲಿಂ ಸಮಾಜಕ್ಕೆ (Muslim Community) ಕೊಟ್ಟಿರುವ ಗೌರವದ ಬಗ್ಗೆ ಮಾತನಾಡಿದ್ದೇನೆ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಖಾತೆಯ ಸಚಿವ ಜಮೀರ್‌ ಅಹಮದ್‌ ಖಾನ್‌ (Zameer Ahmed Khan) ಸ್ಪಷ್ಟನೆ ನೀಡಿದ್ದಾರೆ.

    ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ತೆಲಂಗಾಣ ವಿಧಾನ ಸಭೆ ಚುನಾವಣೆ ಸ್ಟಾರ್ ಪ್ರಚಾರಕನಾದ ನಾನು ಹೈದರಾಬಾದ್ ನಲ್ಲಿ ಯಾವುದೇ ವ್ಯಕ್ತಿ ಅಥವಾ ಪಕ್ಷದ ಶಾಸಕರ ಬಗ್ಗೆ ಅಗೌರವವಾಗಿ ಮಾತನಾಡಿಲ್ಲ. ಕರ್ನಾಟಕದಲ್ಲಿ ಮುಸ್ಲಿಂ ಸಮುದಾಯಕ್ಕೆ ಕಾಂಗ್ರೆಸ್ ಅತ್ಯುನ್ನತ ಗೌರವ ನೀಡಿದೆ. ಆ ವಿಚಾರವನ್ನು ಅಲ್ಲಿ ಪ್ರಸ್ತಾಪ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.  ಇದನ್ನೂ ಓದಿ: ಮುಸ್ಲಿಂ ಸ್ಪೀಕರ್‌ಗೆ ಬಿಜೆಪಿಯವರೂ ನಮಸ್ಕರಿಸುತ್ತಾರೆ: ಜಮೀರ್ ಮತ್ತೊಂದು ಎಡವಟ್ಟು

     

    ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಪೀಕರ್ ಸ್ಥಾನ ನೀಡಿದೆ. ವಿಧಾನಸಭೆಯಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸೇರಿ ನಾವೆಲ್ಲರೂ ಅವರನ್ನು ಸನ್ಮಾನ್ಯ ಸಭಾಧ್ಯಕ್ಷರೇ ಎಂದು ಕರೆಯುತ್ತೇವೆ. ಅಷ್ಟೊಂದು ಉನ್ನತ ಹುದ್ದೆ ಏರುವ ಅವಕಾಶ ನೀಡಲಾಗಿದೆ ಎಂದು ಹೇಳಿದ್ದೆ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ.

    ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿ ಹಲವರು ನನ್ನ ಮಾತು ತಪ್ಪಾಗಿ ಅರ್ಥೈಸಿಕೊಂಡು ವಿವಾದದ ಸ್ವರೂಪ ನೀಡುತ್ತಿದ್ದಾರೆ. ನಾನು ಕಾಂಗ್ರೆಸ್ ಪಕ್ಷ ಮುಸ್ಲಿಂ ಸಮುದಾಯಕ್ಕೆ ಎರಡು ಸಚಿವ ಸ್ಥಾನ, ಪರಿಷತ್ ನಲ್ಲಿ ಮುಖ್ಯ ಸಚೇತಕ, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ, ಎಲ್ಲದಕ್ಕಿಂತ ಹೆಚ್ಚಾಗಿ ಸ್ಪೀಕರ್ ಸ್ಥಾನ ನೀಡಿದೆ ಎಂದಷ್ಟೇ ಹೇಳಿದ್ದೇನೆ ಎಂದು ಮತ್ತೊಮ್ಮೆ ಸ್ಪಷ್ಟ ಪಡಿಸುತ್ತೇನೆ. ಕಾಂಗ್ರೆಸ್ ನಮ್ಮ ಸಮಾಜಕ್ಕೆ ನೀಡಿರುವ ಗೌರವ ಸ್ಮರಿಸುವುದು ತಪ್ಪೇ ಎಂದು ಪ್ರೆಶ್ನೆ ಮಾಡಿದ್ದಾರೆ.

     

  • ಮುಸ್ಲಿಂ ಸ್ಪೀಕರ್‌ಗೆ ಬಿಜೆಪಿಯವರೂ ನಮಸ್ಕರಿಸುತ್ತಾರೆ: ಜಮೀರ್ ಮತ್ತೊಂದು ಎಡವಟ್ಟು

    ಮುಸ್ಲಿಂ ಸ್ಪೀಕರ್‌ಗೆ ಬಿಜೆಪಿಯವರೂ ನಮಸ್ಕರಿಸುತ್ತಾರೆ: ಜಮೀರ್ ಮತ್ತೊಂದು ಎಡವಟ್ಟು

    ಬೆಂಗಳೂರು: ತೆಲಂಗಾಣದಲ್ಲಿ (Telangana) ಚುನಾವಣಾ ಭಾಷಣದ ವೇಳೆ ಸಚಿವ ಜಮೀರ್ ಅಹಮದ್ (Zameer Ahmed Khan) ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದಾರೆ. ಮುಸ್ಲಿಂ ಸ್ಪೀಕರ್ ಯುಟಿ ಖಾದರ್‌ಗೆ (UT Khader) ಈಗ ಬಿಜೆಪಿಯವರೂ (BJP) ನಮಸ್ಕರಿಸುತ್ತಾರೆನ್ನುವ ಮೂಲಕ ವಿವಾದವನ್ನು ತಮ್ಮ ಮೈಮೇಲೆ ಎಳೆದುಕೊಂಡಿದ್ದಾರೆ.

    ತೆಲಂಗಾಣದಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳಿ ಭಾಷಣದ ವೇಳೆ ಹೇಳಿಕೆ ನೀಡಿದ ಜಮೀರ್, ಮುಸ್ಲಿಮರಲ್ಲಿ 17 ಮಂದಿಗೆ ಟಿಕೆಟ್ ನೀಡಲಾಗಿತ್ತು. ಈ ಪೈಕಿ 7 ಮಂದಿ ಶಾಸಕರಾಗಿ ಆಯ್ಕೆಯಾಗಿದ್ದೇವೆ. ಅದರಲ್ಲಿ 5 ಜನರಿಗೆ ಕಾಂಗ್ರೆಸ್ ಅಧಿಕಾರ ನೀಡಿದೆ. ನನಗೆ 3 ಖಾತೆ ನೀಡಿ ಮಂತ್ರಿ ಮಾಡಿದೆ. ರಹೀಂ ಖಾನ್ ಮಂತ್ರಿಯಾಗಿದ್ದಾರೆ. ಸಲೀಂ ಅಹ್ಮದ್ ವಿಪ್ ಆಗಿದ್ದಾರೆ. ನಸೀರ್ ಅಹ್ಮದ್ ಸಿಎಂ ಅವರ ರಾಜಕೀಯ ಕಾರ್ಯದರ್ಶಿಯಾಗಿದ್ದಾರೆ ಎಂದು ಹೇಳಿದರು.

    ರಾಜಕೀಯ ಇತಿಹಾಸದಲ್ಲಿ ಮುಸ್ಲಿಂ ವ್ಯಕ್ತಿಯನ್ನು ಸ್ಪೀಕರ್ ಮಾಡಿರಲಿಲ್ಲ. ಈಗ ಮೊದಲ ಬಾರಿಗೆ ಮುಸ್ಲಿಂ ವ್ಯಕ್ತಿಯನ್ನು ಸ್ಪೀಕರ್ ಮಾಡಿದ್ದು ಕಾಂಗ್ರೆಸ್ ಪಕ್ಷ. ಈಗ ದೊಡ್ಡ ದೊಡ್ಡ ಬಿಜೆಪಿ ನಾಯಕರು ಕೂಡಾ ಸ್ಪೀಕರ್ ಯುಟಿ ಖಾದರ್ ಅವರಿಗೆ ನಮಸ್ಕಾರ ಎನ್ನುತ್ತಾರೆ. ಇದನ್ನು ಮಾಡಿದ್ದು ಯಾರು? ಕಾಂಗ್ರೆಸ್ ಪಕ್ಷ ಎಂದು ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದಾರೆ. ಇದನ್ನೂ ಓದಿ: ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ಭಾಗ್ಯ: ಮಧು ಬಂಗಾರಪ್ಪ

    ಕಳೆದ ಕೆಲ ದಿನಗಳ ಹಿಂದಷ್ಟೇ ಜಮೀರ್ ರಾಜಸ್ಥಾನದಲ್ಲಿ ಮಾತನಾಡುತ್ತಾ ಕರ್ನಾಟಕದಲ್ಲಿ ಕಾಂಗ್ರೆಸ್ ಮುಸ್ಲಿಂ ಮತಗಳಿಂದಲೇ ಅಧಿಕಾರಕ್ಕೆ ಬಂದಿದೆ ಎಂದಿದ್ದರು. ಈ ಮೂಲಕ ವಿವಾದವನ್ನು ಹುಟ್ಟುಹಾಕಿದ್ದರು. ಕರ್ನಾಟಕದ ಮಸೀದಿಗಳಲ್ಲಿ ನಾವು ಸಭೆ ಮಾಡಿ ಒಗ್ಗಟ್ಟು ಪ್ರದರ್ಶನಕ್ಕೆ ಮನವಿ ಮಾಡಿದ್ದೆವು. ಹೀಗಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬಂತು. ರಾಜಸ್ಥಾನದಲ್ಲೂ ಇದೇ ಸೂತ್ರ ಅನುಸರಿಸಿ ಎಂದು ಕರೆ ನೀಡಿದ್ದರು. ಇದನ್ನೂ ಓದಿ: ನಾಲ್ವರ ಕೊಂದ ಆರೋಪಿ ಮೇಲೆ ಜನಾಕ್ರೋಶ; ರಸ್ತೆ ತಡೆದು ಸಾರ್ವಜನಿಕರ ಪ್ರತಿಭಟನೆ, ಲಾಠಿ ಪ್ರಹಾರ – ಉಡುಪಿ ಉದ್ವಿಗ್ನ

  • ಮಸೂದೆಗಳ ಪ್ರತಿ ಹರಿದು ಡೆಪ್ಯುಟಿ ಸ್ಪೀಕರ್‌ನತ್ತ ತೂರಿದ ವಿಪಕ್ಷಗಳು – ಬಿಜೆಪಿಯ 10 ಶಾಸಕರು ಅಮಾನತು

    ಮಸೂದೆಗಳ ಪ್ರತಿ ಹರಿದು ಡೆಪ್ಯುಟಿ ಸ್ಪೀಕರ್‌ನತ್ತ ತೂರಿದ ವಿಪಕ್ಷಗಳು – ಬಿಜೆಪಿಯ 10 ಶಾಸಕರು ಅಮಾನತು

    ಬೆಂಗಳೂರು: ವಿಧಾನಸಭೆಯಲ್ಲಿ ಬುಧವಾರ ಭಾರೀ ಗದ್ದಲ ಏರ್ಪಟ್ಟ ಹಿನ್ನೆಲೆ ಸದನದ ಸ್ಪೀಕರ್ ಯುಟಿ ಖಾದರ್ (UT Khader) ಅವರು 318 ನಿಯಮದ ಹಕ್ಕನ್ನು ಚಲಾಯಿಸಿ 10 ಸದಸ್ಯರನ್ನು ಅಮಾನತುಗೊಳಿಸಿದ್ದಾರೆ.

    ವೇದವ್ಯಾಸ್ ಕಾಮತ್, ಯಶಪಾಲ್ ಸುವರ್ಣ, ಅರವಿಂದ ಬೆಲ್ಲದ್, ಸುನಿಲ್ ಕುಮಾರ್, ಉಮಾನಾಥ್ ಕೋಟ್ಯನ್, ಆರಗ ಜ್ಞಾನೇಂದ್ರ, ಭರತ್ ಶೆಟ್ಟಿ ಸೇರಿ 10 ಸದಸ್ಯರನ್ನು ಸ್ಪೀಕರ್ ಖಾದರ್ ಅಮಾನತು ಮಾಡಿದ್ದಾರೆ.

    ವಿಧಾನಸಭೆಯಲ್ಲಿ ಬಿಜೆಪಿ (BJP) ಸದಸ್ಯರಿಂದ ಭಾರೀ ಹೈಡ್ರಾಮಾ ನಡೆದಿದ್ದು, ಸ್ಪೀಕರ್ ಪೀಠವನ್ನು ಅಲಂಕರಿಸಿದ್ದ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ (Rudrappa lamani) ಮೇಲೆ ವಿಧೇಯಕ ಪ್ರತಿಯನ್ನು ಹರಿದು ಬಿಸಾಡಿದ ಪ್ರಸಂಗ ನಡೆಯಿತು. ಈ ಹಿನ್ನೆಲೆ ಗದ್ದಲ ಸೃಷ್ಟಿಸಿದ ಶಾಸಕರನ್ನು ಸಸ್ಪೆಂಡ್ ಮಾಡುವಂತೆ ಕಾಂಗ್ರೆಸ್ ನಾಯಕರು ಮನವಿ ಮಾಡಿದ್ದರು. ಇದನ್ನೂ ಓದಿ: ಸದನದಲ್ಲಿ ‘ಐಎಎಸ್’ ಕೋಲಾಹಲ – ಸ್ಪೀಕರ್ ಮೇಲೆ ಹರಿದ ಹಾಳೆ ಎಸೆದ ಬಿಜೆಪಿ, ಜೆಡಿಎಸ್ ಸದಸ್ಯರು

    ಇದೀಗ ಸದನದಲ್ಲಿ ಭಾರೀ ಗದ್ದಲ ನಡೆದ ಹಿನ್ನೆಲೆ ಬಿಜೆಪಿಯ 10 ಸದಸ್ಯರನ್ನು ಸ್ಪೀಕರ್ ಅಮಾನತುಗೊಳಿಸಿದ್ದಾರೆ. ಸಸ್ಪೆಂಡ್‌ ಆದ ಸದಸ್ಯರನ್ನು ಮಾರ್ಷಲ್‌ಗಳು ವಿಧಾನಸಭೆಯಿಂದ ಹೊರಹಾಕಿದ್ದಾರೆ. ಇದನ್ನೂ ಓದಿ: ವಿಧಾನ ಪರಿಷತ್‍ನಲ್ಲಿ ಗುಂಡಿನ ಗಮ್ಮತ್ತಿನ ಬಗ್ಗೆ ಚರ್ಚೆ- ನಗೆಗಡಲಲ್ಲಿ ತೇಲಿದ ಸದನ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಿಧಾನಸಭೆಗೆ ಅಪರಿಚಿತ ವ್ಯಕ್ತಿ ಎಂಟ್ರಿ ಬೆನ್ನಲ್ಲೇ ಖಾದರ್ ಅಲರ್ಟ್

    ವಿಧಾನಸಭೆಗೆ ಅಪರಿಚಿತ ವ್ಯಕ್ತಿ ಎಂಟ್ರಿ ಬೆನ್ನಲ್ಲೇ ಖಾದರ್ ಅಲರ್ಟ್

    ಬೆಂಗಳೂರು: ವಿಧಾನಸಭೆಯ ಸಭಾಂಗಣಕ್ಕೆ ಅಪರಿಚಿತ ವ್ಯಕ್ತಿ ಪ್ರವೇಶ ಬೆನ್ನಲ್ಲೇ ಸ್ಪೀಕರ್ ಖಾದರ್ (UT Kader) ಅಲರ್ಟ್ ಆಗಿದ್ದಾರೆ.

    ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಭದ್ರತೆ ಬಿಗಿಗೊಳಿಸುವಂತೆ ಸೂಚನೆ ಕೊಟ್ಟು ಖುದ್ದಾಗಿ ಪರಿಶೀಲನೆ ನಡೆಸಿದ್ದಾರೆ. ಈ ಬೆನ್ನಲ್ಲೇ ಸಚಿವಾಲಯದ ಸಿಬ್ಬಂದಿಯ ವ್ಯಾನಿಟಿ ಬ್ಯಾಗ್‍ನಲ್ಲಿ ಚಾಕುವೊಂದು ಪತ್ತೆಯಾಗಿದೆ. ಚಾಕು ವಶಕ್ಕೆ ಪಡೆದು ಮಹಿಳಾ ಸಿಬ್ಬಂದಿಗೆ ಕಚೇರಿಯಲ್ಲಿ ಕಾರ್ಯನಿರ್ವಹಿಸಲು ಪೊಲೀಸರು ಕಳುಹಿಸಿ ಕೊಟ್ಟಿದ್ದಾರೆ.

    ಕಲಾಪದಲ್ಲಿ ಎಲ್ಲರೂ ಐಡಿ ಕಾರ್ಡ್ (ID Card) ತೋರಿಸಿ ಸದನ ಪ್ರವೇಶಿಸಬೇಕೆಂದು ಸ್ಪೀಕರ್ ಸೂಚನೆ ಕೊಟ್ಟಿದ್ದಾರೆ. ಈ ವೇಳೆ ಸದಸ್ಯರ ಪ್ರವೇಶ ವೇಳೆ ಫೇಸ್ ಐಡೆಂಟಿಫಿಕೇಷನ್ ವ್ಯವಸ್ಥೆ ಜಾರಿಗೆ ತನ್ನಿ ಅಂತ ಬಸವರಾಜ ರಾಯರೆಡ್ಡಿ ಸಲಹೆ ನೀಡಿದ್ದಾರೆ. ಹಾಗೆಯೇ ಮತ್ತೊಬ್ಬ ಸದಸ್ಯ, ಬಾರ್ ಕೋಡ್ ವ್ಯವಸ್ಥೆ ಜಾರಿಗೆ ತನ್ನಿ ಅಂತ ಸಲಹೆ ನೀಡಿದ್ರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]