Tag: ಸ್ಪೆಷಲ್ ಸಾಂಗ್

  • ‘ಗಜರಾಮ’ ಚಿತ್ರದ ಸ್ಪೆಷಲ್ ನಂಬರ್ ಹಾಡಿಗೆ ಹೆಜ್ಜೆ ಹಾಕಿದ ರಾಗಿಣಿ

    ‘ಗಜರಾಮ’ ಚಿತ್ರದ ಸ್ಪೆಷಲ್ ನಂಬರ್ ಹಾಡಿಗೆ ಹೆಜ್ಜೆ ಹಾಕಿದ ರಾಗಿಣಿ

    ನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ ಡಿಂಗ್ರಿ ನಾಗರಾಜ್ ಅವರು ಅನೇಕ ಸಿನಿಮಾಗಳ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ. ಅವರ ಪುತ್ರ ರಾಜವರ್ಧನ್ ಕೂಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಹೀರೋ ಆಗಿ ಅವರು ಸ್ಯಾಂಡಲ್ ವುಡ್ ನಲ್ಲಿ ಗುರುಸಿಕೊಂಡಿರುವ ಅವರು ಸಾಲು ಸಾಲು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಪ್ರತಿ ಚಿತ್ರದಲ್ಲೂ ಬೇರೆ ಬೇರೆ ಬಗೆಯ ಪಾತ್ರಗಳಿಗೆ ಬಣ್ಣ ಹಚ್ಚುತ್ತಿರುವ ರಾಜವರ್ಧನ್ (Rajavardhan) ಕೈಯಲ್ಲಿ ಹಲವು ಪ್ರಾಜೆಕ್ಟ್ ಗಳಿವೆ. ಅವುಗಳಲ್ಲಿ ನಿರೀಕ್ಷೆ ಹೆಚ್ಚಿಸಿರುವ ಸಿನಿಮಾ ‘ಗಜರಾಮ’ (Gajarama). ಈ ಚಿತ್ರದ  ಕೆಲಸಗಳು ಭರದಿಂದ ಸಾಗಿವೆ. ಫಸ್ಟ್ ಲುಕ್ ಮೂಲಕ ಗಮನಸೆಳೆದಿರುವ ಗಜರಾಮನ ಸ್ಪೆಷಲ್ ಹಾಡಿನ ಚಿತ್ರೀಕರಣ ಚಿಕ್ಕಗುಬ್ಬಿಯಲ್ಲಿ ನಡೆದಿದೆ. ಝಗಮಗಿಸುವ ಸೆಟ್ ನಲ್ಲಿ, ಧನು ಮಾಸ್ಟರ್ ಕೊರಿಯೋಗ್ರಫಿಯಲ್ಲಿ ತುಪ್ಪದ ಬೆಡಗಿ ರಾಗಿಣಿ‌ ಜೊತೆ ರಾಜವರ್ಧನ್ ಹೆಜ್ಜೆ ಹಾಕಿದ್ದಾರೆ.

    ರಾಗಿಣಿ (Ragini Dwivedi) ಮಾತನಾಡಿ, ‘ಹೊಸ ಹೊಸ ಪ್ರಯತ್ನಗಳು ನಮ್ಮ ಇಂಡಸ್ಟ್ರೀಯಲ್ಲಿ ಆಗಬೇಕು. ಕನ್ನಡ ಸಿನಿಮಾಗಳು ಒಳ್ಳೆ ರೀತಿಯಲ್ಲಿ ಬೆಳೆಯುತ್ತಿವೆ. ಅದನ್ನು ನೋಡಿ ಹೆಮ್ಮೆ ಅನಿಸುತ್ತದೆ. ನಾನು ಎಲ್ಲಿ ಹೋದರು ಕರ್ನಾಟಕ ನನ್ನ ಮನೆ ತರ. ಗಜರಾಮ ಸಿನಿಮಾದಲ್ಲಿ ನನಗಾಗಿ ಮಾಡಿರುವ ಸ್ಪೆಷಲ್ ಸಾಂಗ್ (Special Song) ಇದೆ. ರಾಜ್ ಅದ್ಭುತ ನಟ. ಮನೋಮೂರ್ತಿ ಅವರ ಮ್ಯೂಸಿಕ್, ಧನು ಕೊರಿಯೋಗ್ರಫಿ ಎಲ್ಲವೂ ಸೇರಿ ಈ ವರ್ಷದ ಹಿಟ್ ಹಾಡುಗಳಲ್ಲಿ ಒಂದಾಗಲಿದೆ. ಇಡೀ ತಂಡಕ್ಕೆ ನಿಮ್ಮ‌‌ ಬೆಂಬಲ ಇರಲಿ’ ಎಂದರು.

    ರಾಜವರ್ಧನ್ ಮಾತನಾಡಿ, ಇವತ್ತು ಕುಂಬಳಕಾಯಿವರೆಗೂ ಬಂದಿದ್ದೇವೆ. ಈ ಸಿನಿಮಾ ಒಂದು ವರ್ಷದ ಜರ್ನಿ. ಲೈಫ್ ಲೈನ್ ಪಿಕ್ಚರ್ಸ್ ಜೊತೆ ಮಾಡುತ್ತಿರುವ ಮೊದಲ ಚಿತ್ರ ಇದು. ಅದ್ಭುತವಾಗಿ ಸಿನಿಮಾ ಬಂದಿದೆ. ಸುನಿಲ್ ಮುಂದಿನ ದಿನಗಳಲ್ಲಿ ಮಾಸ್ ಡೈರೆಕ್ಟರ್ ಆಗಿ ಚಿತ್ರರಂಗ ಬರ್ತಾರೆ. ರಾಗಿಣಿ ಅವರು ಕಾಲೇಜ್ ಟೈಮ್ ನಿಂದ ಕ್ರಶ್. ಈಗ ವರ್ಕ್ ಮಾಡುವ ಅವಕಾಶ ಸಿಕ್ಕಿದೆ. ಡ್ರೀಮ್ ಕಂಪ್ಲೀಟ್ ಆಗಿದೆ. ಮನೋ ಸರ್ ಮೆಲೋಡಿ ಕಿಂಗ್. ಈಗ ಮಾಸ್ ಕಿಂಗ್ ಆಗಿದ್ದಾರೆ. ನಮ್ಮ ಕಥೆಗೆ ಹೇಗೆ ಬೇಕೋ ಆಗಿದ್ದಾರೆ ನಮ್ಮ ಹೀರೋಯಿನ್. ರಾಮ್ ನನ್ನ ಪಾತ್ರ. ರಾಮ ರಾವಣ ಎರಡು ನಾನೇ. ತುಂಬಾ ಒಳ್ಳೆ ಆರ್ಟಿಸ್ಟ್ ಚಿತ್ರದಲ್ಲಿದ್ದಾರೆ ಎಂದರು.

    ನಿರ್ದೇಶಕ ಸುನಿಲ್ ಕುಮಾರ್ ಮಾತನಾಡಿ, ಬೆಂಗಳೂರು, ಮೈಸೂರು, ಮಂಡ್ಯ ಸುತ್ತಮುತ್ತ ಚಿತ್ರೀಕರಣ ಮಾಡಲಾಗಿದೆ. ಇವತ್ತು ಕೊನೆಯ ದಿನ. ರಾಜವರ್ಧನ್ ಸರ್ ತುಂಬಾ ಡೆಡಿಕೇಷನ್ ಆಗಿ ಕೆಲಸ ಮಾಡಿದ್ದಾರೆ. ನಿರ್ಮಾಪಕರು ಬಜೆಟ್ ಕೇಳದೆ ಸಿನಿಮಾ ಮಾಡಿದ್ದಾರೆ. ಮನೋಮೂರ್ತಿ ಸರ್ ಅದ್ಭುತ ಮ್ಯೂಸಿಕ್ ಕೊಟ್ಟಿದ್ದಾರೆ. ಸಾಂಗ್ ಕೇಳಿದ ತಕ್ಷಣ ರಾಗಿಣಿ ಮೇಡಂ ಒಪ್ಪಿಕೊಂಡರು ಎಂದರು.

    ನಿರ್ಮಾಪಕ ನರಸಿಂಹಮೂರ್ತಿ ಮಾತನಾಡಿ,  ಇವತ್ತು ಸಿನಿಮಾಗೆ ಕುಂಬಳಕಾಯಿ. ಮೂಹೂರ್ತ ಆದಾಗ ಎಷ್ಟು ಖುಷಿ ಆಗಿತ್ತು. ಈಗ ಅಷ್ಟೇ ಖುಷಿಯಾಗುತ್ತಿದೆ. ಈ ಸಾಂಗ್ ಅನ್ನು ವಿವರಣೆ ಪಡೆದು ಬಳಿಕ ಮಾಡುತ್ತೇನೆ. ಅದಕ್ಕಾಗಿ ಕಾಯಬೇಕು ಎಂದರು. ಮನೋ ಸರ್ ಗೆ ತುಂಬಾ ಕಾಟ ಕೊಟ್ಟು ಸಾಂಗ್ ಮಾಡಿಸಿದ್ದೇವೆ. ಧನು ಮಾಸ್ಟರ್ ಈ ಹಾಡನ್ನು ಕೊನೆಯಲಿ ಮಾಡೋಣಾ ಎಂದರು. ಒಳ್ಳೆ ಔಟ್ ಫುಟ್ ಬಂದಿದೆ. ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ಸಿನಿಮಾ ತೆರೆಗೆ ಬರುವ ಪ್ರಯತ್ನ ಮಾಡುತ್ತೇವೆ ಎಂದರು. ಸಂಗೀತ ನಿರ್ದೇಶಕ ಮನೋಮೂರ್ತಿ ಮಾತನಾಡಿ, ಸಿನಿಮಾದಲ್ಲಿ ಒಟ್ಟು 5 ಹಾಡುಗಳಿವೆ. ಈ ಸಾಂಗ್ ಅದ್ಭುತವಾಗಿ ಮೂಡಿಬಂದಿದೆ. ಈ ತರ ಹಾಡು ಮಾಡದೆ ಬಹಳ ವರ್ಷಗಳೇ ಆಗಿದೆ ಎಂದರು.

    ಶಿಷ್ಯ ದೀಪಕ್ ಪೊಲೀಸ್ ಪಾತ್ರದಲ್ಲಿ, ತೆಲುಗಿನ ಖ್ಯಾತ ಖಳನಟ ಕಬೀರ್ ಸಿಂಗ್ ಖಳನಾಯಕನಾಗಿ, ತಪಸ್ವಿನಿ ರಾಜವರ್ಧನ್ ಗೆ ಜೋಡಿಯಾಗಿ ನಟಿಸಿದ್ದಾರೆ. ಕಾಮಿಡಿ ‌ಕಿಲಾಡಿ ಖ್ಯಾತಿಯ ಸಂತು ಸೇರಿದಂತೆ ಹಲವರು ತಾರಾಬಳಗದಲ್ಲಿದ್ದಾರೆ. ಯುವ ನಿರ್ದೇಶಕ ಸುನಿಲ್ ಕುಮಾರ್ ವಿ.ಎ. ನಿರ್ದೇಶನ ಮಾಡುತ್ತಿದ್ದಾರೆ. ಖ್ಯಾತ ನಿರ್ದೇಶಕರಾದ ಯೋಗರಾಜ್ ಭಟ್, ‘ದುನಿಯಾ’ ಸೂರಿ ಸೇರಿದಂತೆ ಒಂದಷ್ಟು ನಿರ್ದೇಶಕರ ಜೊತೆ ಅಸಿಸ್ಟೆಂಟ್, ಅಸೋಸಿಯೇಟ್ ಡೈರೆಕ್ಟರ್ ಆಗಿ ಕೆಲಸ ಮಾಡಿರುವ ಅನುಭವವಿರುವ ಸುನಿಲ್ ಕುಮಾರ್‌ ಈಗ ‘ಗಜರಾಮ’ ಸಿನಿಮಾದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಬಡ್ತಿ ಪಡೆಯುತ್ತಿದ್ದಾರೆ. ಆಕ್ಷನ್ ಮಾಸ್ ಎಂಟರ್‌ಟೇನರ್ ಆಗಿರುವ ‘ಗಜರಾಮ’ ಚಿತ್ರಕ್ಕೆ ಮನೋಮೂರ್ತಿ ಸಂಗೀತ ನೀಡುತ್ತಿರುವುದು ವಿಶೇಷ. ಈ ಚಿತ್ರಕ್ಕೆ ಕೆ.ಎಸ್. ಚಂದ್ರಶೇಖರ್ ಛಾಯಾಗ್ರಾಹಣ ಮಾಡುತ್ತಿದ್ದು, ಜ್ಞಾನೇಶ್ ಬಿ. ಮಠದ್ ಸಂಕಲನದ ಹೊಣೆ ಹೊತ್ತುಕೊಂಡಿದ್ದಾರೆ. ಧನಂಜಯ್ ಅವರ ಕೊರಿಯೋಗ್ರಾಫಿ, ಚಿನ್ಮಯ್ ಭಾವಿಕೆರೆ, ಜಯಂತ್ ಕಾಯ್ಕಿಣಿ, ಚೇತನ್ ಕುಮಾರ್, ಪ್ರಮೋದ್ ಮರವಂತೆ ಅವರ ಸಾಹಿತ್ಯ ಈ ಚಿತ್ರಕ್ಕಿದೆ.

    ‘ಬಾಂಡ್ ರವಿ’ ಸಿನಿಮಾವನ್ನು ನಿರ್ಮಾಣ ಮಾಡುತ್ತಿರುವ ಲೈಫ್ ಲೈನ್ ಫಿಲ್ಮ್ ಪ್ರೊಡಕ್ಷನ್ ಅಡಿಯಲ್ಲಿ ನರಸಿಂಹಮೂರ್ತಿ ‘ಗಜರಾಮ’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದು, ಮಲ್ಲಿಕಾರ್ಜುನ್ ಕಾಶಿ ಮತ್ತು ಝವೀಯರ್ ಫರ್ನಾಂಡಿಸ್ ಸಹ ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಕಬ್ಜ’ ಸಿನಿಮಾಗಾಗಿ ಕುಣಿಯಲಿದ್ದಾರೆ ತಾನ್ಯಾ ಹೋಪ್

    ‘ಕಬ್ಜ’ ಸಿನಿಮಾಗಾಗಿ ಕುಣಿಯಲಿದ್ದಾರೆ ತಾನ್ಯಾ ಹೋಪ್

    ಗಾಗಲೇ ‘ಕಬ್ಜ’ (Kabzaa) ಸಿನಿಮಾದ ರಿಲೀಸ್ ದಿನಾಂಕವನ್ನು ಘೋಷಣೆ ಮಾಡಿರುವ ನಿರ್ದೇಶಕ ಆರ್.ಚಂದ್ರು, ಈ ನಡುವೆ ಮತ್ತೊಂದು ಅಚ್ಚರಿ ಸುದ್ದಿಯನ್ನೂ ನೀಡಿದ್ದಾರೆ. ಕಬ್ಜ ಸಿನಿಮಾಗಾಗಿ ಸ್ಪೆಷಲ್ ಸಾಂಗ್ (Special Song) ಚಿತ್ರೀಕರಣಕ್ಕೆ ಅವರು ಸಿದ್ಧತೆ ಮಾಡಿಕೊಂಡಿದ್ದು, ಈ ವಿಶೇಷ ಹಾಡಿಗೆ ತಾನ್ಯ ಹೋಪ್ (Tanya Hope) ಹೆಜ್ಜೆ ಹಾಕಲಿದ್ದಾರೆ ಎಂದು ಹೇಳಲಾಗುತ್ತಿದೆ. ಯಜಮಾನ ಸಿನಿಮಾಗಾಗಿ ‘ಬಸಣ್ಣಿ ಬಾ’ ಗೀತೆಗೆ ಸೊಂಟ ಬಳುಕಿಸಿದ್ದ ತಾನ್ಯ, ಕಬ್ಜ ಸಿನಿಮಾದ ಹಾಡಿನಲ್ಲೂ ಹಾಟ್ ಹಾಟ್ ಆಗಿ ಕಾಣಿಸಿಕೊಳ್ಳಲಿದ್ದಾರಂತೆ.

    ಈ ಹಾಡಿನ ಚಿತ್ರೀಕರಣಕ್ಕಾಗಿ ಅದ್ಧೂರಿ ಸೆಟ್ ಹಾಕಲಾಗುತ್ತಿದ್ದು, ಪೂರ್ತಿ ಹಾಡು ಇದೇ ಸೆಟ್ ನಲ್ಲೇ ಚಿತ್ರೀಕರಣವಾಗಲಿದೆ. ತಾನ್ಯ ಜೊತೆ ಸುದೀಪ್ ಹೆಜ್ಜೆ ಹಾಕುತ್ತಾರಾ ಅಥವಾ ಉಪೇಂದ್ರ ಇರಲಿದ್ದಾರೆ ಎನ್ನುವುದೇ ಸದ್ಯಕ್ಕಿರುವ ಕುತೂಹಲ. ಈ ಸಿನಿಮಾದಲ್ಲಿ ಇನ್ನೂ ಹಲವು ಅಚ್ಚರಿಯ ಕಲಾವಿದರು ಇರಲಿದ್ದಾರಂತೆ. ಆ ಕಲಾವಿದರ ಕುರಿತಂತೆ ಹೆಚ್ಚಿನ ಮಾಹಿತಿ ಸಿನಿಮಾದಲ್ಲೇ ಸಿಗಲಿದೆ ಎಂದಿದ್ದಾರೆ ಚಂದ್ರು. ಇದನ್ನೂ ಓದಿ:ಮದುವೆ ಫೋಟೋ ಹಂಚಿಕೊಂಡ ಬೆನ್ನಲ್ಲೇ ವೈರಲಾಯ್ತು ಸಿದ್- ಕಿಯಾರಾ ಆಮಂತ್ರಣ ಪತ್ರಿಕೆ

    ಕಿಚ್ಚ ಸುದೀಪ್ (Sudeep), ಉಪೇಂದ್ರ (Upendra) ಮತ್ತು ಆರ್.ಚಂದ್ರು ಕಾಂಬಿನೇಷನ್ ನ ಮೊದಲ ಸಿನಿಮಾ ಇದಾಗಿದ್ದು, ಈಗಾಗಲೇ ಬಹುತೇಕ ಚಿತ್ರೀಕರಣವನ್ನೂ ಮುಗಿಸಿಕೊಂಡಿದೆ. ಮಾರ್ಚ್ 17 ರಂದು ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬ. ಅಂದು ಈ ಸಿನಿಮಾವನ್ನು ಬಿಡುಗಡೆ ಮಾಡುವ ತಯಾರಿ ಕೂಡ ನಡೆದಿದೆ. ಆರೇಳು ಭಾಷೆಗಳಲ್ಲಿ ಈ ಸಿನಿಮಾವನ್ನು ಬಿಡುಗಡೆ ಮಾಡುವುದಾಗಿ ಈಗಾಗಲೇ ನಿರ್ದೇಶಕರು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕನ್ನಡಕ್ಕೆ ಮತ್ತೊಮ್ಮೆ ಎಂಟ್ರಿ ಕೊಟ್ಟ ಸನ್ನಿ ಲಿಯೋನ್

    ಕನ್ನಡಕ್ಕೆ ಮತ್ತೊಮ್ಮೆ ಎಂಟ್ರಿ ಕೊಟ್ಟ ಸನ್ನಿ ಲಿಯೋನ್

    ಮಾದಕ ಬೆಡಗಿ ಸನ್ನಿಲಿಯೋನ್ ಈಗಾಗಲೇ ಕನ್ನಡದ ಎರಡು ಹಾಡುಗಳಿಗೆ ಹೆಜ್ಜೆ ಹಾಕಿದ್ದಾರೆ. ಪ್ರೇಮ್ ನಟಿಸಿದ್ದ ‘ಡಿಕೆ’ ಸಿನಿಮಾದ ‘ಶೇಷಮ್ಮ ಶೇಷಮ್ಮ ಬಾಗ್ಲು ತೆಗೆಯಮ್ಮ’ ಹಾಡಿಗೆ ಸಖತ್ ಹೆಜ್ಜೆ ಹಾಕಿದ್ದ ಸನ್ನಿ, ಆನಂತರ ಇಂದ್ರಜಿತ್ ಲಂಕೇಶ್ ನಿರ್ದೇಶನದ ಚಿತ್ರದಲ್ಲೂ ಸನ್ನಿ ಕಾಣಿಸಿಕೊಂಡಿದ್ದರು. ಇದೀಗ ಸದ್ದಿಲ್ಲದೇ ಮತ್ತೊಂದು ಸಿನಿಮಾದ ಸ್ಪೆಷಲ್ ಹಾಡಿಗೆ ಕುಣಿದು ಹೋಗಿದ್ದಾರೆ ಸನ್ನಿ ಲಿಯೋನ್. ಈಗಾಗಲೇ ಆ ಹಾಡಿನ ಚಿತ್ರೀಕರಣ ಕೂಡ ಆಗಿದೆ. ಇದನ್ನೂ ಓದಿ : ಮೇ 11ಕ್ಕೆ ನಟಿ ಮಮತಾ ರಾವುತ್ ಮದುವೆ : ಡಾಕ್ಟರ್ ಜತೆ ಸಪ್ತಪದಿ ತುಳಿಯಲಿರುವ ನಟಿ

    ಸಚಿನ್ ಧನಪಾಲ್ ನಟನೆಯ ‘ಚಾಂಪಿಯನ್’ ಸಿನಿಮಾದಲ್ಲಿ ವಿಶೇಷವಾದ ಹಾಡೊಂದಕ್ಕೆ ಸನ್ನಿ ಲಿಯೋನ್ ಹೆಜ್ಜೆ ಹಾಕಿದ್ದಾರೆ. ಸ್ಪೋರ್ಟ್ಸ್ ಆಧರಿಸಿದ ಸಿನಿಮಾ ಇದಾಗಿದ್ದು, ಒಂದು ಸನ್ನಿವೇಶದಲ್ಲಿ ಬರುವ ಹಾಡಿಗೆ ಸನ್ನಿ ಕುಣಿದಿರುವುದು ವಿಶೇಷ. ಸಚಿನ್ ಅವರ ಚೊಚ್ಚಲು ಸಿನಿಮಾ ಇದಾಗಿದ್ದು, ಶಾಹುರಾಜ ಶಿಂಧೆ ನಿರ್ದೇಶನದಲ್ಲಿ ಚಿತ್ರ ಮೂಡಿ ಬಂದಿದೆ. ಇದನ್ನೂ ಓದಿ : ರಣಬೀರ್ ನನ್ನ ದೊಡ್ಡ ವಿಮರ್ಶಕ ಎಂದು ಹೇಳಿ ನಾಚಿ ನೀರಾದ ಆಲಿಯಾ

    ಡಿಂಗರ್ ಬಿಲ್ಲಿ ಎಂಬ ಸಾಹಿತ್ಯದಿಂದ ಶುರುವಾಗುವ ಈ ಗೀತೆಗೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಉತ್ತರ ಕರ್ನಾಟಕ ಭಾಷೆಯ ಸೊಗಡನ್ನು ಈ ಸಾಹಿತ್ಯದಲ್ಲಿ ಬಳಸಿಕೊಂಡಿದ್ದಾರೆ ಶಿವು ಬೊರಗಿ. ಅಂದಹಾಗೆ ಈ ಸಿನಿಮಾದಲ್ಲಿ ಸಚಿನ್ ನಾಯಕನಾದರೆ, ಅದಿತಿ ಪ್ರಭುದೇವ ನಾಯಕಿ. ಚಿಕ್ಕಣ್ಣ, ಪ್ರಶಾಂತ್ ಸಿದ್ದಿ, ಹಿರಿಯ ನಟರಾದ ದೇವರಾಜ್ ಸೇರಿದಂತೆ ಹಲವು ಕಲಾವಿದರು ಈ ಸಿನಿಮಾದಲ್ಲಿದ್ದಾರೆ.

  • ಪುಷ್ಪಾ ಸಿನಿಮಾದಲ್ಲಿ ಅಲ್ಲು ಜೊತೆ ಡ್ಯಾನ್ಸ್ ಮಾಡಲಿದ್ದಾರಾ ಸಮಂತಾ?

    ಪುಷ್ಪಾ ಸಿನಿಮಾದಲ್ಲಿ ಅಲ್ಲು ಜೊತೆ ಡ್ಯಾನ್ಸ್ ಮಾಡಲಿದ್ದಾರಾ ಸಮಂತಾ?

    ಹೈದರಾಬಾದ್: ಟಾಲಿವುಡ್ ನಟ ಸ್ಟೈಲಿಶ್ ಸ್ಟಾರ್ ಲ್ಲು ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ ಅಭಿನಯದ ಬಹುನಿರೀಕ್ಷಿತ ಪುಷ್ಪ ಸಿನಿಮಾ ವಿಶೇಷ ಸಾಂಗ್‍ವೊಂದರಲ್ಲಿ ನಟಿ ಸಮಂತಾ ಹೆಜ್ಜೆ ಹಾಕಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

    ಶೂಟಿಂಗ್‍ನಿಂದ ಕೊಂಚ ಬ್ರೇಕ್ ತೆಗೆದುಕೊಂಡಿದ್ದ ನಟಿ ಸಮಂತಾ ಇದೀಗ ಬ್ಯಾಕ್ ಟು ಬ್ಯಾಕ್ ಚಿತ್ರಗಳಿಗೆ ಸಹಿ ಹಾಕುತ್ತಿದ್ದಾರೆ. ಸದ್ಯ ಅಲ್ಲು ಅರ್ಜುನ್ ಅವರ ಮುಂಬರುವ ಬಿಗ್-ಬಜೆಟ್ ಚಿತ್ರ ಪುಷ್ಪಾದಲ್ಲಿ ವಿಶೇಷ ಸಾಂಗ್‍ವೊಂದರಲ್ಲಿ ನೃತ್ಯ ಮಾಡಲು ಒಪ್ಪಿಕೊಂಡಿದ್ದು, ನವೆಂಬರ್ ಅಂತ್ಯದಲ್ಲಿ ಈ ಹಾಡಿನ ಚಿತ್ರೀಕರಣವನ್ನು ಚಿತ್ರತಂಡ ಆರಂಭಿಸಲಿದೆ ಮತ್ತು ಹೈದರಾಬಾದ್‍ನ ರಾಮೋಜಿ ಫಿಲಂ ಸಿಟಿಯಲ್ಲಿ ಅದ್ಧೂರಿ ಸೆಟ್ ಹಾಕಲು ಪ್ಲಾನ್ ಮಾಡಲಾಗಿದೆ ಎಂಬ ಸುದ್ದಿಯೊಂದು ಇದೀಗ ಭಾರೀ ಸದ್ದು ಮಾಡುತ್ತಿದೆ.

    ನಟ ನಾಗ ಚೈತನ್ಯ ಜೊತೆಗೆ ವಿಚ್ಛೇದನ ಪಡೆದ ನಂತರ ಸಮಂತಾ ಬದರಿನಾಥ್, ಕೇದಾರನಾಥ್, ಗೋವಾ ಮತ್ತು ಚೆನ್ನೈ ಪ್ರವಾಸ ಕೈಗೊಂಡಿದ್ದರು. ಆದರೆ ಇದೀಗ ತಮಿಳು ಮತ್ತು ತೆಲುಗು ಸಿನಿಮಾಗಳಲ್ಲಿ ಮತ್ತೆ ಬಣ್ಣ ಹಚ್ಚಲು ರೆಡಿಯಾಗಿದ್ದಾರೆ. ದನ್ನೂ ಓದಿ: ಮಗಳ ಹುಟ್ಟುಹಬ್ಬವನ್ನು ವಿಲ್ಲಾದಲ್ಲಿ ಆಚರಿಸುತ್ತಿರೋ ಅಭಿ, ಐಶ್ – ದಿನಕ್ಕೆ ಇದರ ಬೆಲೆ ಎಷ್ಟು ಗೊತ್ತಾ?

    ಕೆಲವು ದಿನಗಳ ಹಿಂದೆ ಪುಷ್ಪಾ ಸಿನಿಮಾದ ನಿರ್ಮಾಪಕರು ವಿಶೇಷ ಸಾಂಗ್‍ವೊಂದರಲ್ಲಿ ಅಭಿನಯಿಸಲು ಸಮಂತಾ ಅವರೊಂದಿಗೆ ಮಾತುಕತೆ ನಡೆಸಿದ್ದು, ಸಮಂತಾ ಅವರು ಗ್ರೀನ್ ಸಿಗ್ನಲ್ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಸಮಂತಾ ಆಗಲಿ, ಪುಷ್ಪಾ ಸಿನಿಮಾದ ನಿರ್ದೇಶಕ ಸುಕುಮಾರನ್ ಆಗಲಿ ಎಲ್ಲೂ ಅಧಿಕೃತವಾಗಿ ಹೇಳಿಕೆ ನೀಡಿಲ್ಲ. ಇದನ್ನೂ ಓದಿ: ದಲಿತರು ಕೋಳಿ ಕೊಟ್ಟರೆ ತಿನ್ನುತ್ತಾರಾ? : ಕ್ಷಮೆ ಕೇಳಿದ ಹಂಸಲೇಖ

    ಪುಷ್ಪಾ ಚಿತ್ರದಲ್ಲಿ ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ಮತ್ತು ಫಹದ್ ಫಾಸಿಲ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದು, ಈ ಚಿತ್ರಕ್ಕೆ ನಿರ್ದೇಶಕ ಸುಕುಮಾರನ್ ಆ್ಯಕ್ಷನ್ ಕಟ್ ಹೇಳಿದ್ದಾರೆ. ಚಿತ್ರದಲ್ಲಿ ಜಗಪತಿ ಬಾಬು, ಪ್ರಕಾಶ್ ರಾಜ್, ಧನಂಜಯ್, ಸುನೀಲ್, ಅನಸೂಯಾ ಭಾರದ್ವಾಜ್ ಮತ್ತು ಹರೀಶ್ ಉತ್ತಮನ್ ಸೇರಿದಂತೆ ದೊಡ್ಡ ತಾರಾಬಳಗವೇ ಇದ್ದು, ಆಕ್ಷನ್ ಥ್ರಿಲ್ಲರ್ ಚಿತ್ರಕ್ಕೆ ದೇವಿ ಶ್ರೀ ಪ್ರಸಾದ್ ಸಂಗೀತ ಸಂಯೋಜಿಸಿದ್ದಾರೆ. ಇದೇ ಡಿಸೆಂಬರ್ 17 ರಂದು ಪುಷ್ಪಾ ಸಿನಿಮಾ ಬಹು ಭಾಷೆಗಳಲ್ಲಿ ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ.