ಬೆಂಗಳೂರು: ಸ್ಮಾರ್ಟ್ ಮೀಟರ್ (Smart Meter) ವಿಚಾರದಲ್ಲಿ ಕೋರ್ಟ್ ಕೊಡೋ ತೀರ್ಪಿಗೆ ನಾನು ಬದ್ಧನಾಗಿರುತ್ತೇನೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ (K J George) ಸ್ಪಷ್ಟಪಡಿಸಿದ್ದಾರೆ.
ಸ್ಮಾರ್ಟ್ ಮೀಟಿಂಗ್ ಹಗರಣ ಆರೋಪದಲ್ಲಿ ಸಚಿವ ಜಾರ್ಜ್ ಮೇಲೆ ಎಫ್‌ಐಆರ್‌ಗೆ ಕೋರ್ಟ್ ಸೂಚನೆ ಕೊಟ್ಟಿದೆ ಎಂಬ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕೋರ್ಟ್ ಎಫ್‌ಐಆರ್ ಹಾಕಿ ಅಂತ ಹೇಳಿರೋ ಆರ್ಡರ್ ಇದ್ದರೆ ಕೊಡಿ. ಜನಪ್ರತಿನಿಧಿಗಳ ಕೋರ್ಟ್ ಆದೇಶ ಮಾಡಿರೋದು ನಾನು ನೋಡಿಲ್ಲ. ಆದೇಶ ಪ್ರತಿ ಇದ್ದರೆ ಕೊಡಿ ನಾನು ಪ್ರತಿಕ್ರಿಯೆ ಕೊಡ್ತೀನಿ ಎಂದಿದ್ದಾರೆ. ಇದನ್ನೂ ಓದಿ: ದರ್ಶನ್ ಜಾಮೀನು ಭವಿಷ್ಯ; ವಾದ-ಪ್ರತಿವಾದ ಮುಕ್ತಾಯ – ಒಂದು ವಾರದಲ್ಲಿ ಸುಪ್ರೀಂ ಆದೇಶ
ಸ್ಮಾರ್ಟ್ ಮೀಟರ್ ಕುರಿತು ಅಶ್ವಥ್ ನಾರಾಯಣ ಮತ್ತು ಬಿಜೆಪಿಯವರು ಈ ಕೇಸ್ ಹಾಕಿದ್ದಾರೆ. ಹೈಕೋರ್ಟ್, ರಾಜ್ಯಪಾಲರು, ಜನಪ್ರತಿನಿಧಿಗಳ ಕೋರ್ಟ್ ಎಲ್ಲಾ ಕಡೆ ಅವರು ದೂರು ಕೊಟ್ಟಿದ್ದಾರೆ. ಕೋರ್ಟ್ ಏನಾದ್ರು ನನಗೆ ವಿವರಣೆ ಕೇಳಿದ್ರೆ ಕೊಡ್ತೀನಿ. ಸ್ಮಾರ್ಟ್ ಮೀಟರ್ ವಿಚಾರ ನಾವು ಕಾನೂನು ಪ್ರಕಾರವಾಗಿ ಮಾಡಿದ್ದೇವೆ. ಅಕ್ರಮದ ದಾಖಲೆ ಇದ್ದರೆ ಕೋರ್ಟ್ಗೆ ಅವರು ಕೊಡಲಿ. ಕೋರ್ಟ್ ಕೊಡುವ ತೀರ್ಪಿಗೆ ನಾನು ಬದ್ಧನಾಗಿರುತ್ತೇನೆ ಎಂದು ತಿಳಿಸಿದ್ದಾರೆ.
ಇದೇ ವೇಳೆ ಅರ್ಜಿದಾರರ ಪರ ವಕೀಲೆ ಲಕ್ಷ್ಮೀ ಅಯ್ಯಂಗಾರ್ ವಾದ ಮಾಡಿ, ಸ್ಮಾರ್ಟ್ ಮೀಟರ್ ಅಳವಡಿಕೆಯ ಮಾರ್ಗಸೂಚಿಯಲ್ಲಿ ಏನೋ ವಿಚಾರ ಅಡಗಿದೆ. ಅದನ್ನು ಓದಿ ಅರ್ಥ ಮಾಡಿಕೊಳ್ಳುವುದು ನಮಗೆ ಕಷ್ಟ ಆಗಿದೆ. ತ್ರಿ-ಫೇಸ್ ಮೀಟರ್‌ಗೆ 10 ಸಾವಿರ ರೂ. ಆಗುತ್ತದೆ. ಹೀಗಾಗಿ ಹೊಸ ಮಾರ್ಗಸೂಚಿಯಿಂದ ಜನರಿಗೆ ಹೊರೆ ಆಗ್ತಿದೆ ಎಂದು ವಾದ ಮಂಡಿಸಿದರು.
ವಾದ ಆಲಿಸಿದ ನ್ಯಾಯಾಲಯ ಮಾರ್ಗಸೂಚಿ ಬಗ್ಗೆ ಯಾಕಿಷ್ಟು ಗೊಂದಲ? ಕಾರ್ಯ ನಿರ್ವಹಣೆಯಲ್ಲಿರುವ ಮಾರ್ಗಸೂಚಿ ಎಂದು ಗ್ರಾಹಕರಿಗೆ ಆಪರೇಷನ್ ಮಾಡ್ತಿದ್ದೀರಾ? ವಿದ್ಯುತ್ ಸಂಪರ್ಕಕ್ಕೆ 10 ಸಾವಿರ ರೂ. ಕೊಡಲು ಆಗುತ್ತಾ? ಬಡವರಿಗೆ ಅಷ್ಟು ಹಣ ನೀಡಲು ಆಗುತ್ತಾ? ಗ್ರಾಹಕರಿಗೆ ಸಮಸ್ಯೆ ಆಗಬಾರದು ಎಂದು ಎಜಿಗೆ ಸೂಚನೆ ನೀಡಿದೆ.
ರಾಜ್ಯದಲ್ಲಿ 10 ಸಾವಿರ ರೂ. ಇರುವ ಸ್ಮಾರ್ಟ್ ಮೀಟರ್ ಬೇರೆ ರಾಜ್ಯದಲ್ಲಿ 900 ರೂ. ಹೇಗೆ? ಇದರ ಬಗ್ಗೆ ಸಂಪೂರ್ಣವಾದ ಮಾಹಿತಿ ನೀಡಿ ಎಂದು ತಿಳಿಸಿ, ವಿಚಾರಣೆಯನ್ನು ಬುಧವಾರಕ್ಕೆ (ಜು.9) ಮುಂದೂಡಿದೆ.ಇದನ್ನೂ ಓದಿ: ಕೇಂದ್ರದ ಮಾಜಿ ಸಚಿವೆ ಸ್ಮೃತಿ ಇರಾನಿಯ ಸೀರಿಯಲ್ ಫಸ್ಟ್ ಲುಕ್ ಔಟ್
ಬೆಂಗಳೂರು: ಬೆಸ್ಕಾಂ (BESCOM) ವಿದ್ಯುತ್ ಸಂಪರ್ಕದಲ್ಲಿ ಜುಲೈ 1 ರಿಂದ ಮಹತ್ವದ ಬದಲಾವಣೆಯಾಗಲಿದೆ. ಗ್ರಾಮೀಣ ಪ್ರದೇಶಗಳಲ್ಲಿ ಹೊಸ ಹಾಗೂ ತಾತ್ಕಾಲಿಕ ವಿದ್ಯುತ್ ಸಂಪರ್ಕಗಳಿಗೆ ಸ್ಮಾರ್ಟ್ ಮೀಟರ್ (Smart Meters) ಅಳವಡಿಕೆ ಕಡ್ಡಾಯಗೊಳಿಸಿ ಬೆಸ್ಕಾಂ ಆದೇಶ ಹೊರಡಿಸಿದೆ.
ಈಗಾಗಲೇ ಬೆಂಗಳೂರಿನಲ್ಲಿ (Bengaluru) ಸ್ಮಾರ್ಟ್ ಮೀಟರ್ ಕಡ್ಡಾಯಗೊಳಿಸಲಾಗಿದ್ದು, ಗ್ರಾಮಾಂತರ ಪ್ರದೇಶಕ್ಕೂ ಇದನ್ನ ವಿಸ್ತರಣೆ ಮಾಡುವಂತೆ ಬೆಸ್ಕಾಂ ಆದೇಶ ಹೊರಡಿಸಿದೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಆದೇಶದಂತೆ ಬೆಸ್ಕಾಂ ವ್ಯಾಪ್ತಿಯ ಗ್ರಾಮಾಂತರ ಪ್ರದೇಶಗಳಲ್ಲಿ 2025 ರ ಜುಲೈ 1 ರಿಂದ ಹೊಸ ಮತ್ತು ತಾತ್ಕಾಲಿಕ ವಿದ್ಯುತ್ ಸಂಪರ್ಕ (Electrical connection) ಪಡೆಯುವ ಗ್ರಾಹಕರು ಸ್ಮಾರ್ಟ್ ಮೀಟರ್ ಅಳವಡಿಸಬೇಕಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಆಪ್ತರಿಂದ ಫುಲ್ ಟರ್ಮ್ ಸಿಎಂ ಗೇಮ್ ಚಾಲೂ: ಸಿಎಂ ಸಮರ್ಥನೆ, ಜಾರಿಕೊಂಡ ಡಿಸಿಎಂ, ಅಸಲಿ ಕಹಾನಿ ಏನು!?
ನಗರ ಪ್ರದೇಶದ ಸ್ಮಾರ್ಟ್ ಮೀಟರ್ ಅಳವಡಿಕೆ ಶುರು
ಬೆಸ್ಕಾಂ ವ್ಯಾಪ್ತಿಯ ಬೆಂಗಳೂರು ನಗರ ಸೇರಿದಂತೆ ಎಲ್ಲಾ ನಗರ ಪ್ರದೇಶಗಳಲ್ಲಿ 2025ರ ಫೆಬ್ರವರಿ 15 ರಿಂದ ಸ್ಮಾರ್ಟ್ ಮೀಟರ್ ಅಳವಡಿಕೆ ಆರಂಭಗೊಂಡಿದ್ದು, ಈಗ ಬೆಸ್ಕಾಂ ವ್ಯಾಪ್ತಿಯ ಗ್ರಾಮೀಣ ಪ್ರದೇಶಗಳಿಗೂ ಯೋಜನೆ ವಿಸ್ತರಿಸಿದೆ. ಹೊಸ ಹಾಗೂ ತಾತ್ಕಾಲಿಕ ವಿದ್ಯುತ್ ಸಂಪರ್ಕಗಳಿಗೆ ಗ್ರಾಹಕರು ಅರ್ಜಿ ಸಲ್ಲಿಸಿ, ಬೆಸ್ಕಾಂನ ನೋಂದಾಯಿತ ಮಳಿಗೆಗಳಿಂದ ಸ್ಮಾರ್ಟ್ ಮೀಟರ್ ಖರೀದಿಸಿ ವಿದ್ಯುತ್ ಸಂಪರ್ಕ ಪಡೆಯಬಹುದು ಎಂದು ಬೆಸ್ಕಾಂ ತಿಳಿಸಿದೆ. ಇದನ್ನೂ ಓದಿ: ಸಿದ್ದರಾಮಯ್ಯ 2 ವರ್ಷ 11 ತಿಂಗಳು ಸಿಎಂ ಆಗಿರ್ತಾರೆ, ಇನ್ನೂ ಸ್ಟ್ರಾಂಗ್ ಆಗ್ತಾರೆ: ಬಸವರಾಜ ರಾಯರೆಡ್ಡಿ ಬಾಂಬ್
ಸ್ಮಾರ್ಟ್ ಮೀಟರ್ ಯಾಕೆ ಬೆಸ್ಕಾಂ ಹೇಳೋದೇನು?
* ಹಳೆಯ ಮಾದರಿಯ ಮೀಟರ್‌ಗಳಿಗಿಂತ ವಿಶಿಷ್ಟವಾಗಿರುವ ಸ್ಮಾರ್ಟ್ ಮೀಟರ್‌ಗಳು ಜಿಪಿಆರ್‌ಎಸ್/ಆರ್‌ಎಫ್ ಆಧಾರಿತ ಸಂವಹನ ಡೇಟಾ ಸಂಗ್ರಹಣೆಗೆ ಸರ್ವರ್ ಹಾಗೂ ಕ್ಲೌಡ್ ಸಂಪರ್ಕ ಹೊಂದಿರುತ್ತದೆ.
* ಅಡ್ವಾನ್ಸ್ಡ್ ಮೀಟರಿಂಗ್ ಇನ್ಫ್ರಾಸ್ಟ್ರಕ್ಚರ್ (ಎಎಂಐ) ತಂತ್ರಜ್ಞಾನದ ಸ್ಮಾರ್ಟ್ ಮೀಟರ್‌ಗಳು ವಿದ್ಯುತ್ ಬಳಕೆ ಮಾಹಿತಿಯನ್ನು ಸಂಗ್ರಹಿಸುವ ಮೂಲಕ ಗ್ರಾಹಕರು ಹಾಗೂ ಬೆಸ್ಕಾಂ ನಡುವೆ ನೇರ ಸಂಪರ್ಕ ಕಲ್ಪಿಸಲಿದೆ.
* ಮೊಬೈಲ್ ಅಪ್ಲಿಕೇಶನ್ ಮೂಲಕ ನೈಜ ಸಮಯದ ವಿದ್ಯುತ್ ಬಳಕೆ, ವೊಲ್ಟೇಜ್, ಪವರ್ ಫ್ಯಾಕ್ಟರ್ ಮಾಹಿತಿ ಹಾಗೂ ರೀಚಾರ್ಜ್ ಸೌಲಭ್ಯ ಪಡೆಯಬಹುದಾಗಿದೆ.
* ಮುಂಚಿತವಾಗಿ ಹಣ ಪಾವತಿಸಿ ತಮ್ಮ ಆಯ್ಕೆಯ ದಿನಗಳ ಅವಧಿಗೆ ರಿಜಾರ್ಜ್ ಮಾಡಿಕೊಳ್ಳಬಹುದು.
* ಒಂದು ವೇಳೆ ವಿದ್ಯುತ್ ಕಡಿತಗೊಂಡರೆ ಗ್ರಾಹಕರು ಬಿಲ್ ಪಾವತಿಸಿದ ತಕ್ಷಣ ವಿದ್ಯುತ್ ಸಂಪರ್ಕ ಪಡೆದುಕೊಳ್ಳಬಹುದಾಗಿದೆ.
ಗ್ರಾಹಕರಿಗೆ ಏನು ಅನುಕೂಲ?
ಈ ಕುರಿತು ಬೆಸ್ಕಾಂ ಪ್ರಧಾನ ವ್ಯವಸ್ಥಾಪಕ ರಾಜಾಜಿರಾವ್ ʻಪಬ್ಲಿಕ್ ಟಿವಿʼ ಜೊತೆಗೆ ಮಾತನಾಡಿದ್ದಾರೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಮಾರ್ಗಸೂಚಿಯಂತೆ ನಗರ ಪ್ರದೇಶಗಳಲ್ಲಿ ಫೆ. 15 ರಿಂದ ಸ್ಮಾರ್ಟ್ ಮೀಟರ್ ಅಳವಡಿಕೆ ಆರಂಭ ಆಗಿತ್ತು. ಜುಲೈ 1 ರಿಂದ ಗ್ರಾಮಿಣ ಭಾಗದಲ್ಲೂ ಇದು ವಿಸ್ತರಣೆಯಾಗುತ್ತೆ. ಹೊಸ ಸಂಪರ್ಕ, ತಾತ್ಕಾಲಿಕ ಸಂಪರ್ಕ ಪಡೆಯುವವರು ಸ್ಮಾರ್ಟ್ ಮೀಟರ್ ಪಡೆಯಬೇಕು. ಸ್ಮಾರ್ಟ್ ಮೀಟರ್‌ನಲ್ಲಿ, ಪ್ರಿಪೇಯ್ಡ್ , ಪೋಸ್ಟ್ ಪೇಯ್ಡ್ ಮೂಲಕ ಬಳಕೆ ಮಾಡಬಹುದು. ಗ್ರಾಹಕರ ದಿನ ನಿತ್ಯದ ಬಳಕೆಯನ್ನ ಮೊಬೈಲ್ ಆಪ್‌ನಲ್ಲಿಯೇ ನೋಡಿಕೊಳ್ಳಬಹುದು. ಪ್ರೀಪೇಯ್ಡ್ ನಲ್ಲಿ ಮುಂಗಡ ಹಣವನ್ನ ತುಂಬಿರುತ್ತಾರೆ. ಹಣ ಖಾಲಿಯಾಗ್ತಿದ್ದಂತೆ ಮೂರು ಬಾರಿ ಮೊಬೈಲ್‌ಗೆ ಅಲರ್ಟ್ ಮೆಸೇಜ್ ಬರುತ್ತೆ. ಹಣ ಖಾಲಿಯಾದಾಗ ವಿದ್ಯುತ್ ಸಂಪರ್ಕ ಕಡಿತ ಆಗುತ್ತೆ. ಸ್ಮಾರ್ಟ್ ಮೀಟರ್ ಗಳಿಂದ ಬೆಸ್ಕಾಂಗೂ ಆರ್ಥಿಕತೆ ಹೆಚ್ಚಳವಾಗಲಿದೆ. ಮನೆಗಳಿಗೆ ಹೊಸ ಸಂಪರ್ಕ ಪಡೆಯಲು ಸ್ಮಾರ್ಟ್ ಮೀಟರ್ ಕಡ್ಡಾಯ ಈರಲಿದೆ. ಇದರಿಂದ ಗ್ರಾಹಕರಿಗೂ ಅನುಕೂಲಗಳಿವೆ ಎಂದು ತಿಳಿಸಿದ್ದಾರೆ.
ಬೆಂಗಳೂರು: ಸ್ಮಾರ್ಟ್ ಮೀಟರ್ ದೊಡ್ಟ ಹಗರಣ ಆಗಿದೆ. ಇದಕ್ಕೆ ಇಂಧನ ಇಲಾಖೆ ಸಚಿವರು ಉತ್ತರ ಕೊಡಬೇಕು ಎಂದು ಮಾಜಿ ಡಿಸಿಎಂ ಅಶ್ವಥ್ ನಾರಾಯಣ್, ಸಚಿವ ಜಾರ್ಜ್‌ಗೆ ಆಗ್ರಹ ಮಾಡಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಸ್ಮಾರ್ಟ್ ಮೀಟರ್ ಹಗರಣ ವ್ಯವಸ್ಥಿತವಾಗಿ ನಡೆದಿದೆ. ಸಚಿವರು ಮತ್ತು ಅವರ ಅಧಿಕಾರಿಗಳು ಇತ್ತೀಚೆಗೆ ಮಾಡಿದ್ದ ಸುದ್ದಿಗೋಷ್ಠಿಯಲ್ಲಿ 9 ಸುಳ್ಳುಗಳನ್ನು ಹೇಳಿದ್ದಾರೆ ಎಂದು ಆರೋಪಿಸಿದರು. ಖುದ್ದು ಅಶ್ವಥ್ ನಾರಾಯಣ್, ಸಚಿವ ಜಾರ್ಜ್ ಮತ್ತು ಸಚಿವರು ಮಾಡಿದ್ದ ಸುದ್ದಿಗೋಷ್ಠಿಗೆ ಪವರ್ ಪಾಯಿಂಟ್ ಪ್ರೆಸೆಂಟೇಶನ್ ಮೂಲಕ ಕೌಂಟರ್ ಕೊಟ್ಟರು.
ಸ್ಮಾರ್ಟ್ ಮೀಟರ್ ಟೆಂಡರ್ ಭಾರತ ಸರ್ಕಾರದ ನಿಗದಿತ ನಿಯಮಗಳ ಪ್ರಕಾರ ಮಾಡಲಾಗಿದೆ. ಪ್ರಿಬಿಡ್ ಟೆಂಡರ್‌ನಲ್ಲಿ ಯಾರೂ ಬಂದಿರಲಿಲ್ಲ ಅಂತ ಸಚಿವರು ಹೇಳಿದ್ರು. ಆದರೆ 10 ಜನರು ಪ್ರಿ ಬಿಡ್ಡಿಂಗ್‌ನಲ್ಲಿ ಭಾಗವಹಿಸಿದ್ದರು. 117 ಜನರು ಮಾಹಿತಿ ಕೇಳಿದ್ದಾರೆ. ಕೇಂದ್ರದ ನಿಯಮಾವಳಿಯಂತೆ ಐಎಸ್ 16444 ಸ್ಟಾಂಡರ್ಡ್ ಇರುವ ಹತ್ತಾರು ಜನರಿದ್ದಾರೆ. ಅವರನ್ನೇ ರಾಜ್ಯವು ಪರಿಗಣಿಸಬೇಕಿತ್ತು. 1 ಲಕ್ಷ ಸ್ಮಾರ್ಟ್ ಮೀಟರ್ ಉತ್ಪಾದಿಸಿ ವಿತರಿಸಿದ ಅನುಭವ ಬೇಕಿತ್ತು. ಟೆಂಡರ್ 200 ಕೋಟಿಗಿಂತ ಹೆಚ್ಚು ಮೊತ್ತದ್ದಾದರೆ ಗ್ಲೋಬಲ್ ಟೆಂಡರ್ ಕರೆಯಬೇಕಿತ್ತು. ಪ್ರಿಬಿಡ್ ವೇಳೆ ಇದನ್ನು ಹೇಳಿದ್ದರೂ ಅದನ್ನು ಪರಿಗಣಿಸಿಲ್ಲ ಎಂದು ಇಲಾಖೆ ವಿರುದ್ದ ಆರೋಪ ಮಾಡಿದರು.
ಇಂಧನ ಮೀಟರ್‌ಗೆ ಸಂಬಂಧಿಸಿ ಕರ್ನಾಟಕದಲ್ಲಿ ರಿಟೇಲ್ ಔಟ್‍ಲೆಟ್‍ನಲ್ಲಿ 5 ವರ್ಷ ಅನುಭವ ಇರಬೇಕೆಂಬ ನಿಯಮವನ್ನೂ ಪರಿಗಣಿಸಿಲ್ಲ. ಮೀಟರ್ ಡಾಟಾ ಮ್ಯಾನೇಜ್‍ಮೆಂಟ್ ಸೊಲ್ಯೂಶನ್ ಅನ್ನು ಗ್ಲೋಬಲ್ ಆಗಿ ತೆಗೆದುಕೊಂಡಿಲ್ಲ. ಡಿಬಾರ್- ಬ್ಲ್ಯಾಕ್‍ಲಿಸ್ಟ್ ಆದವರನ್ನು ಪರಿಗಣಿಸಬಾರದು ಎಂಬ ನಿಯಮವೂ ಇದೆ. ಗ್ಲೋಬಲ್ ಎಂಬುದನ್ನು ಪರಿಗಣಿಸಿಯೇ ಇಲ್ಲ. ಕೇಂದ್ರದ ನಿಯಮಾವಳಿಯಂತೆ ಟೆಂಡರ್ ಕರೆದಿದ್ದಾರೆ ಅಂತ ಸಚಿವರು ಹೇಳಿರೋದೆ ಸುಳ್ಳು. ಕೇಂದ್ರದ ಪ್ರಮುಖ ನಿಯಮಾವಳಿಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದರು.
ಸಚಿವರು, ತಾತ್ಕಾಲಿಕ ಸಂಪರ್ಕ ಪಡೆಯುವವರಿಗೆ ಹಾಗೂ ಹೊಸ ಗ್ರಾಹಕರಿಗೆ ಕಡ್ಡಾಯ ಎಂದಿದ್ದಾರೆ. ಆದರೆ ಇದು ಕಡ್ಡಾಯವಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ. ಎಲ್ಲ ಗ್ರಾಹಕರಿಗೆ, ಫೀಡರ್, ಟ್ರಾನ್ಸ್‌ಫಾರ್ಮರ್‌ಗಳಿಗೆ ಸ್ಮಾರ್ಟ್ ಮೀಟರ್ ಅಳವಡಿಸಿದ ಬಳಿಕವೇ ಹೊಸ ಗ್ರಾಹಕರಿಗೆ ಕಡ್ಡಾಯ ಮಾಡಬಹುದೆಂದು ಕೇಂದ್ರ ವಿದ್ಯುತ್ ಪ್ರಾಧಿಕಾರವು (ಸಿಇಸಿ) ತಿಳಿಸಿದೆ. ಸರ್ಕಾರವು ಗ್ರಾಹಕರ ಜೇಬಿನಿಂದ ಹಣ ಲೂಟಿ ಮಾಡಲು ಮುಂದಾಗಿದೆ. ಇದರಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂದು ಹೇಳಿದರು.
ಇಂಧನ ಇಲಾಖೆಯಲ್ಲಿ ಲೂಟಿ, ಕಳ್ಳತನ ಮಾಡುತ್ತಿದ್ದಾರೆ. ಗ್ರಾಹಕರ ರಕ್ಷಣೆ ಮಾಡುವುದು ನಮ್ಮ ಕರ್ತವ್ಯ. ಅಧಿಕಾರ ದುರ್ಬಳಕೆ ಮಾಡಿಕೊಂಡು ತಮ್ಮ ಸ್ವಾರ್ಥಕ್ಕಾಗಿ, ಲಾಭಕ್ಕಾಗಿ ಸ್ಮಾರ್ಟ್ ಮೀಟರ್ ಅಳವಡಿಸಲು ಮುಂದಾಗಿದ್ದಾರೆ. ಇವರಿಗೆ ಶಿಕ್ಷೆ ಆಗಲೇಬೇಕು. ಇದನ್ನು ತಾರ್ಕಿಕ ಅಂತ್ಯಕ್ಕೆ ಒಯ್ಯುತ್ತೇವೆ. ಅಕ್ರಮ ಏನು? ತಪ್ಪು ಏನು ಅಂತ ತಿಳಿಸಿದ್ದೇವೆ. ದಾಖಲೆ ಸಹಿತವಾಗಿ ತಪ್ಪಿನ ಮಾಹಿತಿ ನೀಡಿದ್ದೇವೆ. ನಾಗರಿಕರು, ಗ್ರಾಹಕರ ಹಿತ ಕಾಪಾಡುವ ದೃಷ್ಟಿಯಿಂದ ಸಚಿವರಿಗೆ ಪತ್ರವನ್ನೂ ಕೊಟ್ಟಿದ್ದೇವೆ. ಇದಕ್ಕೆ ಸಚಿವರು ಉತ್ತರ ಕೊಡಬೇಕು ಎಂದು ಆಗ್ರಹಿಸಿದರು.
ಬೆಂಗಳೂರು: ಬೆಸ್ಕಾಂ ಸೇರಿ ಎಲ್ಲ ಎಸ್ಕಾಂಗಳ ಸ್ಮಾರ್ಟ್ ಮೀಟರ್ ಖರೀದಿ ಟೆಂಡರ್‌ನಲ್ಲಿ 15,568 ಕೋಟಿ ರೂ. ಮೊತ್ತದ ಹಗರಣ ಆಗಿದೆ. ಇದು ರಾಜ್ಯದ ದೊಡ್ಡ ಹಗರಣ ಎಂದು ಶಾಸಕ ಅಶ್ವಥ್ ನಾರಾಯಣ್ (Ashwath Narayan) ಬಾಂಬ್ ಸಿಡಿಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿ (BJP Office) ಎಸ್.ಆರ್ ವಿಶ್ವನಾಥ್ ಅವರೊಂದಿಗೆ ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ಸ್ಮಾರ್ಟ್ ಮೀಟರ್ ಹಗರಣ ಆರೋಪ ಕುರಿತು ಮಾತನಾಡಿದ ಮಾಜಿ ಡಿಸಿಎಂ ಅಶ್ವಥ್ ನಾರಾಯಣ್, ಸ್ಮಾರ್ಟ್ ಮೀಟರ್‌ಗಳ ಖರೀದಿಯಲ್ಲಿ ಸಾಕಷ್ಟು ಅವ್ಯವಹಾರ ಆಗಿದೆ. ನಾನು, ವಿಶ್ವನಾಥ್ ಇಬ್ಬರು ಸದನದಲ್ಲೂ ಇದರ ಬಗ್ಗೆ ಮಾತಾಡಿದ್ದೇವೆ. ಅಧಿಕಾರ ದುರ್ಬಳಕೆ ಮಾಡಿಕೊಂಡು ಸರ್ಕಾರ ಅವ್ಯವಹಾರ ನಡೆಸಿದೆ. ನಮ್ಮ ಆರೋಪಕ್ಕೆ ಸದನದಲ್ಲೇ ಉತ್ತರ ಕೊಡುತ್ತೇನೆ ಎಂದು ಇಂಧನ ಸಚಿವರು ಹೇಳಿದ್ದರು. ಆದರೆ, ಸದನಕ್ಕೆ ಆ ದಿನ ಬಂದಿದ್ದರೂ ಕೂಡ ಸಚಿವ ಜಾರ್ಜ್ ನಾಪತ್ತೆಯಾಗಿದ್ದರು. ನಮ್ಮ ಆರೋಪಗಳಿಗೆ ಸಚಿವರು ಉತ್ತರ ಕೊಡಲಿಲ್ಲ. ಆದರೆ ಸೋಮವಾರ ಅಧಿಕಾರಿಗಳ ಮೂಲಕ ಹಗರಣ ಆಗಿಲ್ಲ ಎಂದು ಸರ್ಕಾರ ಹೇಳಿಸಿದೆ ಎಂದು ತಿಳಿಸಿದರು.ಇದನ್ನೂ ಓದಿ:ಗುಡ್ ನ್ಯೂಸ್ ಕೊಟ್ಟ ‘ದಿ ವಿಲನ್’ ನಟಿ- ಆ್ಯಮಿ ಜಾಕ್ಸನ್‌ಗೆ ಗಂಡು ಮಗು
ಬೆಸ್ಕಾಂ (BESCOM) ಸೇರಿ ಎಲ್ಲ ಎಸ್ಕಾಂಗಳ (ESCOM) ಸ್ಮಾರ್ಟ್ ಮೀಟರ್ ಖರೀದಿ ಟೆಂಡರ್‌ನಲ್ಲಿ 15,568 ಕೋಟಿ ರೂ. ಮೊತ್ತದ ಹಗರಣ ಆಗಿದೆ. ಇದೊಂದು ರಾಜ್ಯದ ದೊಡ್ಡ ಹಗರಣವಾಗಿದೆ. ಸ್ಮಾರ್ಟ್ ಮೀಟರ್ ಕಡ್ಡಾಯನಾ? ಕೆಇಆರ್‌ಸಿ ಗೈಡ್‌ಲೈನ್ಸ್ ಪ್ರಕಾರ ಸ್ಮಾರ್ಟ್ ಮೀಟರ್ ಕಡ್ಡಾಯ ಮಾಡುವಂತಿಲ್ಲ. ತಾತ್ಕಾಲಿಕ ಗ್ರಾಹಕರಿಗೆ ಮಾತ್ರ ಕಡ್ಡಾಯ ಮಾಡಬಹುದೇ ಹೊರತು ಹೊಸ ಗ್ರಾಹಕರಿಗೆ ಕಡ್ಡಾಯ ಮಾಡುವಂತಿಲ್ಲ. ಇನ್ನೂ ಸ್ಮಾರ್ಟ್ಮೀಟರ್‌ಗಳ ಖರೀದಿಯಲ್ಲಿ ಕೆಟಿಪಿಪಿ ಕಾಯ್ದೆ ಉಲ್ಲಂಘನೆಯಾಗಿದೆ. ರಾಜಶ್ರೀ ಕಂಪನಿಗೆ ಅನುಕೂಲ ಆಗುವಂತೆ ಟೆಂಡರ್ ಕೊಟ್ಟಿದ್ದಾರೆ. ಕೆಟಿಪಿಪಿ ಕಾಯ್ದೆ ಪ್ರಕಾರ ಟೆಂಡರ್ ಪಡೆದುಕೊಳ್ಳುವ ಸಂಸ್ಥೆ ಬಳಿ 6,800 ಕೋಟಿ ರೂ. ಬಿಡ್ ಸಾಮರ್ಥ್ಯ ಮೊತ್ತ ಇರಬೇಕು. ಆದರೆ ಟೆಂಡರ್ ಪಡೆದ ರಾಜಶ್ರೀ ಕಂಪನಿ ಬಳಿ ಇದ್ದಿದ್ದು ಕೇವಲ 400 ಕೋಟಿ ರೂ. ಅಷ್ಟೇ. ಟೆಂಡರ್ ಮೌಲ್ಯ 1,920 ಕೋಟಿ ಇಡಬೇಕಿತ್ತು. ಆದರೆ ಟೆಂಡರ್‌ನಲ್ಲಿ ಇಟ್ಟಿದ್ದು ಕೇವಲ 107 ಕೋಟಿ ರೂ. ಬ್ಲಾಕ್‌ಲಿಸ್ಟ್ನಲ್ಲಿ ಇರುವ ಸಂಸ್ಥೆಗೆ ಟೆಂಡರ್ ಕೊಡುವಂತಿಲ್ಲ ಅಂತ ಕೆಟಿಪಿಪಿ ಕಾಯ್ದೆಯಲ್ಲಿದೆ. ಆದರೆ ಉತ್ತರ ಪ್ರದೇಶದಲ್ಲಿ ಬ್ಲಾಕ್‌ಲಿಸ್ಟ್ ಆಗಿದ್ದ ಬಿಸಿಐಟಿಎಸ್ ಕಂಪನಿಗೆ ಸಾಪ್ಟ್ವೇರ್ ಟೆಂಡರ್ ಕೊಟ್ಟಿರುತ್ತಾರೆ ಎಂದು ಆರೋಪಿಸಿದರು.
ಸ್ಮಾರ್ಟ್ಮೀಟರ್‌ಗಳ ದರಗಳಲ್ಲಿ ಬೇರೆ ರಾಜ್ಯಗಳಿಗೂ ನಮಗೂ ಬಹಳ ವ್ಯತ್ಯಾಸವಿದೆ. ಒಂದು ಮೀಟರ್‌ಗೆ ನಮ್ಮಲ್ಲಿ 8,160 ರೂ. ತೆಗೆದುಕೊಳ್ಳುತ್ತಾರೆ. ನಮ್ಮಲ್ಲಿ ತಿಂಗಳಿಗೆ ಕೊಡುವ ದರ ಹತ್ತು ವರ್ಷಗಳಿಗೆ ಲೆಕ್ಕ ಹಾಕಿದರೆ ಪ್ರತೀ ಮೀಟರ್‌ಗೆ 17 ಸಾವಿರ ರೂ. ಆಗಲಿದೆ. ಬೇರೆ ರಾಜ್ಯಗಳಲ್ಲಿ 7,400 ರೂ.ಯಿಂದ 9,260 ಆಗಲಿದೆ. ಸ್ಮಾರ್ಟ್ಮೀಟರ್ ದರ, ಸಾಫ್ಟ್ವೇರ್ ನಿರ್ವಹಣೆ ದರ ಹಾಗೂ ಸಿಬ್ಬಂದಿ ವೇತನ ದರಗಳನ್ನು ಸೇರಿಸಿ ಹತ್ತು ವರ್ಷಕ್ಕೆ ಜನರಿಂದ ಸಂಗ್ರಹ ಮಾಡುತ್ತಿದ್ದಾರೆ ಎಂದರು.
ಸ್ಮಾರ್ಟ್ಮೀಟರ್‌ಗೆ ಗ್ಲೋಬಲ್ ಟೆಂಡರ್ ಕರೆಯಬೇಕಿತ್ತು. ಆದರೆ ಇವರು ಕರೆದಿಲ್ಲ. ಭಂಡತನದಿಂದ ಕಣ್ಮುಂದೆ ಸುಳ್ಳು ಹೇಳಿ ಅವ್ಯವಹಾರ ಮಾಡಿದ್ದಾರೆ. ರಾಜಶ್ರೀ, ಸಹ್ಯಾದ್ರಿ ಹಾಗೂ ವಿಆರ್ ಪಾಟೀಲ್ ಕಂಪನಿಗಳು ಬಿಡ್ ಹಾಕಿದ್ದವು. ಇವರ ಟೆಂಡರ್ ದಾಖಲೆ ಪ್ರಕಾರ ಒಂದೇ ಒಂದು ಕಂಪನಿ ಅರ್ಹವಾಗಿದ್ದು, ಅದೇ ರಾಜಶ್ರೀ ಕಂಪನಿ ಎಂದಿದ್ದಾರೆ. ನಾವು ರಾಜಕೀಯ ಪ್ರೇರಿತ ಆರೋಪ ಮಾಡುತ್ತಿಲ್ಲ. ಸತ್ಯ ಹೇಳಿದ್ದೀವಿ. ಸರ್ಕಾರ ಎಚ್ಚೆತ್ತುಕೊಳ್ಳಬೇಕು, ತಕ್ಷಣ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ನಾವು ಬಿಸಿ ಮುಟ್ಟಿಸಬೇಕಾಗುತ್ತದೆ. ಹಗಲು ದರೋಡೆ ನಿಲ್ಲಿಸಬೇಕು, ಈಗ ಆಗಿರುವ ಟೆಂಡರ್ ರದ್ದು ಮಾಡಬೇಕು. ಮತ್ತೆ ನಿಯಮಾನುಸಾರ ಟೆಂಡರ್ ಕರೆಯಲಿ ಎಂದು ಆಗ್ರಹಿಸಿದರು.
ಬೆಂಗಳೂರು: ಸ್ಮಾರ್ಟ್ ಮೀಟರ್ ವಿರುದ್ಧ ಬೆಂಗಳೂರಿನ ನಿವಾಸಿಗಳು ಅಸಮಾಧಾನ ಹೊರಹಾಕಿದ್ದಾರೆ. ಈಗಾಗಲೇ ಕರೆಂಟ್ ಬಿಲ್ ಹೆಚ್ಚು ಬರುತ್ತಿದ್ದು, ಅದರ ಜೊತೆಗೆ ಮತ್ತೆ ಈಗ ಲೂಟಿ ಮಾಡುವ ಪ್ಲ್ಯಾನ್ ಎಂದು ಕಿಡಿಕಾರಿದ್ದಾರೆ.
ಹೊಸ ಹಾಗೂ ತಾತ್ಕಾಲಿಕ ವಿದ್ಯುತ್ ಸಂಪರ್ಕಗಳಿಗೆ ಸ್ಮಾರ್ಟ್ ಮೀಟರ್ ವ್ಯವಸ್ಥೆಯನ್ನು ಇಂಧನ ಇಲಾಖೆ ಜಾರಿಗೊಳಿಸಲಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗವು ಸ್ಮಾರ್ಟ್ ಮೀಟರ್ ಅಳವಡಿಕೆ ಸಂಬಂಧ 2024ರ ಮಾ.6 ರಂದು ಮಾರ್ಗಸೂಚಿ ಹೊರಡಿಸಿತ್ತು. ಅದರಂತೆ ಬೆಸ್ಕಾಂ ವ್ಯಾಪ್ತಿಯಲ್ಲಿ ಹಂತಹಂತವಾಗಿ ಸ್ಮಾರ್ಟ್ ಮೀಟರ್ ಅಳವಡಿಕೆ ಹಾಗೂ ಬದಲಾವಣೆ ಕಾರ್ಯ ಕೈಗೊಳ್ಳಲಾಗಿದೆ.
ಪಿಂಚಣಿ ಗ್ರಾಚ್ಯುಟಿ ಹೆಸರಿನಲ್ಲಿ ಗ್ರಾಹಕರಿಗೆ ಬರೆ ಹಾಕಾಯ್ತು. ಈಗ ಸ್ಮಾರ್ಟ್ ಮೀಟರ್ ಹೆಸರಿನಲ್ಲಿ ಲೂಟಿ ಕೆಲಸ ಶುರುವಾಗಿದೆ ಎಂಬ ಆರೋಪ ಕೇಳಿಬಂದಿದೆ. ಪ್ರತಿ ತಿಂಗಳು ನಿರ್ವಹಣೆ ಹೆಸರಿನಲ್ಲಿ ಇನ್ಮುಂದೆ ಬಿಲ್ ಜೊತೆ ದುಡ್ಡು ಕಟ್ಟಬೇಕು. ನಿಗದಿತ ಶುಲ್ಕದ ಜೊತೆಗೆ ಸ್ಮಾರ್ಟ್ ಮೀಟರ್ ನಿರ್ವಹಣೆಗೂ ಗ್ರಾಹಕರು ಹಣ ಕೊಡಬೇಕು.
ಒಂದು ಕೈಯಲ್ಲಿ ಗೃಹಜ್ಯೋತಿ ಗಿಫ್ಟ್ ಕೊಟ್ಟು ಇನ್ನೊಂದು ಕೈಯಲ್ಲಿ ದುಡ್ಡು ಕಿತ್ತುಕೊಳ್ಳುವ ತಂತ್ರವೇ ಇದು ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿ ಬರ್ತಿದೆ. ಸ್ಮಾರ್ಟ್ ಮೀಟರ್ ಅಳವಡಿಕೆ ಬಳಿಕ ನಿಗದಿತ ಶುಲ್ಕದ ಜಾರ್ಜ್ ಜೊತೆಗೆ ಪ್ರತಿ ತಿಂಗಳು ಗ್ರಾಹಕ 75-118 ರೂ.ವರೆಗೆ ಕಟ್ಟಬೇಕು.
ಸ್ಮಾರ್ಟ್ ಮೀಟರ್ ನಿರ್ವಹಣೆ ಮಾಡೋರಿಗೆ ಪ್ರತಿ ತಿಂಗಳು ತಿಂಗಳು ದುಡ್ಡು ಕಟ್ಟಬೇಕು. ಫಿಕ್ಸೆಡ್ ಚಾರ್ಜ್ ಪ್ರತ್ಯೇಕ, ಇದರ ಜೊತೆ ಜೊತೆಗೆ ನಿರ್ವಹಣೆ ಹೆಸರಿನಲ್ಲಿಯೂ ಹಣ ವಸೂಲಿಗೆ ಸರ್ಕಾರ ಮುಂದಾಗಿದೆ ಎನ್ನಲಾಗಿದೆ.