Tag: ಸ್ಮಾರ್ಟ್ ಮೀಟರ್ ಹಗರಣ

  • ಸ್ಮಾರ್ಟ್ ಮೀಟರ್ ಹಗರಣ – ಸಚಿವ ಜಾರ್ಜ್‌ಗೆ ಬಿಗ್‌ ರಿಲೀಫ್‌

    ಸ್ಮಾರ್ಟ್ ಮೀಟರ್ ಹಗರಣ – ಸಚಿವ ಜಾರ್ಜ್‌ಗೆ ಬಿಗ್‌ ರಿಲೀಫ್‌

    ಬೆಂಗಳೂರು: ಸ್ಮಾರ್ಟ್ ಮೀಟರ್ ಟೆಂಡರ್‌ನಲ್ಲಿ (Smart Meter Tender) 16 ಸಾವಿರ ಕೋಟಿ ರೂ. ಅಕ್ರಮ ಆರೋಪದಲ್ಲಿ ಇಂಧನ ಸಚಿವ ಕೆಜೆ ಜಾರ್ಜ್‌ ಅವರಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ.

    ಪ್ರಕರಣದಲ್ಲಿ ಸಚಿವ ಕೆ.ಜೆ.ಜಾರ್ಜ್ (KG George) ವಿರುದ್ಧ ನಡೆಸಿದ ತನಿಖಾ ವರದಿಯನ್ನು ಕೋರ್ಟ್ ಸಲ್ಲಿಸಲು ಲೋಕಾಯುಕ್ತ ಪೊಲೀಸರಿಗೆ ನಿರ್ದೇಶನ ನೀಡಿ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಮಾಡಿತ್ತು. ಇದನ್ನು ಪ್ರಶ್ನಿಸಿ, ಸಚಿವ ಕೆಜೆ ಜಾರ್ಜ್ ಹೈಕೋರ್ಟ್‌ಗೆ (High Court) ಅರ್ಜಿ ಸಲ್ಲಿಸಿದ್ದರು.

    ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌, ಲೋಕಾಯುಕ್ತ ಎಸ್ಪಿ ಹಾಗೂ ದೂರುದಾರರಾದ ಬಿಜೆಪಿ ನಾಯಕರಾದ ಸಿಎನ್ ಅಶ್ವಥ್ ನಾರಾಯಣ್, ಎಸ್ ಆರ್ ವಿಶ್ವನಾಥ್, ಧೀರಜ್ ಮುನಿರಾಜು ಅವರಿಗೆ ನೋಟಿಸ್‌ ನೀಡಿದೆ.

    ಲೋಕಾಯುಕ್ತ ಪೊಲೀಸರಿಂದ (Lokayukta Police) ವರದಿ ನೀಡುವಂತೆ ವಿಚಾರಣಾಧೀನ ನ್ಯಾಯಾಲಯ ಮಾಡಿರುವ ಆದೇಶಕ್ಕೆ ತಡೆ ನೀಡಿ ಹೈಕೋರ್ಟ್‌ ಎರಡು ವಾರ ವಿಚಾರಣೆ ಮುಂದೂಡಿದೆ. ಈ ಮೂಲಕ ಸಚಿವ ಜಾರ್ಜ್‌ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ. ಇದನ್ನೂ ಓದಿ: ಇನ್ಮುಂದೆ ಅಲ್ಪಸಂಖ್ಯಾತರ ಸಾಮೂಹಿಕ ವಿವಾಹಕ್ಕೆ 50 ಸಾವಿರ ರೂ. ಗಿಫ್ಟ್‌ – ಜಮೀರ್ ಅಹ್ಮದ್

    ಅರ್ಜಿ ವಿಚಾರಣೆ ವೇಳೆ ಒಂದು ರಾಜಕೀಯ ಪಕ್ಷ ಮತ್ತೊಂದು ಪಕ್ಷದ ವಿರುದ್ಧ ಕೇಸ್ ಹಾಕುವ ಸಂಪ್ರದಾಯ ಇದು. ತಮಿಳುನಾಡಿನಲ್ಲಿದ್ದ ಸಂಪ್ರದಾಯ ಈಗ ಇಲ್ಲೂ ಶುರುವಾಗಿದೆ ಎಂದು ವಿಚಾರಣೆ ವೇಳೆ ನ್ಯಾ. ಎಂಐ ಅರುಣ್ ಅವರ ಏಕಸದಸ್ಯ ಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ.

    ನಾವು ಪ್ರಕರಣದ ಮೆರಿಟ್ ಮೇಲೆ ವಾದಿಸ್ತಿಲ್ಲ ಎಂದು ಅಂತಾ ಸ್ಪಷ್ಟಪಡಿಸ್ತೇನೆ ಎಂದು ಜಾರ್ಜ್ ಪರ ಹಿರಿಯ ವಕೀಲ ಸಿವಿ ನಾಗೇಶ್ ಪೀಠಕ್ಕೆ ತಿಳಿಸಿದರು. ಇದನ್ನೂ ಓದಿ: ಧರ್ಮಸ್ಥಳ ಬುರುಡೆ ರಹಸ್ಯ- ಸಾಕ್ಷಿದಾರನ ಪರವಾಗಿ ಬರ್ತಾರಾ 6 ಮಂದಿ ಸ್ಥಳೀಯರು?

    ಜಾರ್ಜ್ ಪರ ವಕೀಲರ ವಾದವೇನು?
    ಸಚಿವ ಜಾರ್ಜ್ ಹಾಗೂ ಹಿರಿಯ ಅಧಿಕಾರಿಗಳನ್ನ ಆರೋಪಿಗಳನ್ನಾಗಿ ಮಾಡಲಾಗಿದೆ. ವಿಚಾರಣಾಧೀನ ನ್ಯಾಯಾಲಯ ತನಿಖಾ ವರದಿ ಸಲ್ಲಿಸಲು ಲೋಕಾಯುಕ್ತ ಎಸ್‌ಪಿಗೆ ಆದೇಶಿಸಲಾಗಿದೆ. ಸಾರ್ವಜನಿಕ ಸೇವಕರಿಗಿಂತ ಪೊಲೀಸ್ ಅಧಿಕಾರಿ ಮೆಲ್ದರ್ಜೆಯಲ್ಲಿ ಇರುವುದಿಲ್ಲ. ಹೀಗಾಗಿ ಅವರಿಗೆ ವರದಿ ಸಲ್ಲಿಸುವಂತೆ ಸೂಚಿಸಲಾಗದು. ಇದು ನ್ಯಾಯಾಲಯದ ವ್ಯಾಪ್ತಿಯನ್ನು ಮೀರಿದೆ ಎಂದು ಹಿರಿಯ ವಕೀಲ ಸಿವಿ ನಾಗೇಶ್ ವಾದ ಮಂಡಿಸಿದರು.

    ಬಿಜೆಪಿ ನಾಯಕರ ಪರ ವಕೀಲರ ವಾದವೇನು?
    ಲೋಕಾಯುಕ್ತ ಎಸ್‌ಪಿ ವರದಿಯಿಂದ ನ್ಯಾಯಾಲಯಕ್ಕೆ ತೃಪ್ತಿಯಾದರೆ ಹಿರಿಯ ಅಧಿಕಾರಿಗಳಿಗೆ ತನಿಖೆಗೆ ಆದೇಶ ನೀಡಲಾಗುತ್ತದೆ. ಸದ್ಯ ಪ್ರಕರಣದ ಪ್ರಾಥಮಿಕ ಹಂತದ ತನಿಖೆ ನಡೆಸಲಾಗುತ್ತಿದೆ. ಈ ಹಂತದಲ್ಲಿ ಮಧ್ಯಂತರ ಆದೇಶ ನೀಡುವ ಅವಶ್ಯಕತೆ ಇಲ್ಲ ಎಂದು ಹಿರಿಯ ವಕೀಲೆ ಲಕ್ಷ್ಮೀ ಅಯ್ಯಂಗಾರ್ ವಾದ ಮಾಡಿದರು.

  • ಮತ್ತೆ ಸ್ಮಾರ್ಟ್ ಮೀಟರ್ ಹಗರಣ ಕೆದಕಿದ ಬಿಜೆಪಿ – ಸಚಿವ ಜಾರ್ಜ್ ವಿರುದ್ಧ ಖಾಸಗಿ ದೂರು

    ಮತ್ತೆ ಸ್ಮಾರ್ಟ್ ಮೀಟರ್ ಹಗರಣ ಕೆದಕಿದ ಬಿಜೆಪಿ – ಸಚಿವ ಜಾರ್ಜ್ ವಿರುದ್ಧ ಖಾಸಗಿ ದೂರು

    – ವಿಚಾರಣೆ ಮುಂದೂಡಿದ ಕೋರ್ಟ್

    ಬೆಂಗಳೂರು: ಇಂಧನ ಇಲಾಖೆಯಲ್ಲಿ ಕೇಳಿಬಂದಿರೋ ಸ್ಮಾರ್ಟ್ ಮೀಟರ್ ಹಗರಣ (Smart Meter Scam) ಈಗ ಹೊಸ ರೂಪ ಪಡೆದುಕೊಂಡಿದೆ. ಈ ಹಿಂದೆ ಲೋಕಾಯುಕ್ತಕ್ಕೆ ದೂರು ನೀಡಿದ್ದರೂ ಯಾವುದೇ ತನಿಖಾ ಪ್ರಗತಿ ಕಾಣದೇ ಇರೋದ್ರಿಂದ ಮೂವರು ಬಿಜೆಪಿ ಶಾಸಕರು (BJP MLA) ಕೋರ್ಟ್ ಮೊರೆ ಹೋಗಿದ್ದಾರೆ.

    ಸಚಿವ ಕೆ.ಜೆ ಜಾರ್ಜ್ (KJ George) ಹಾಗೂ ಬೆಸ್ಕಾಂನ (BESCOM) ಹಿರಿಯ ಅಧಿಕಾರಿಗಳ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ. ಬಿಜೆಪಿ ಶಾಸಕ ಅಶ್ವಥ್‌ನಾರಾಯಣ, ಎಸ್.ಆರ್ ವಿಶ್ವನಾಥ್ ಹಾಗೂ ಧೀರಜ್ ಮುನಿರಾಜು ಈ ದೂರು ದಾಖಲಿಸಿದ್ದು, ಅರ್ಜಿದಾರರ ಪರವಾಗಿ ವಕೀಲೆ ಲಕ್ಷ್ಮಿ ಅಯ್ಯಂಗಾರ್ ವಾದ ಮಂಡಿಸಿದ್ದಾರೆ. ಇದನ್ನೂ ಓದಿ: ತೆಲಂಗಾಣ ಮಾಡೆಲ್ ಜಾತಿ ಜನಗಣತಿಗೆ ಕಾಂಗ್ರೆಸ್ ಮಣೆ- ಸಿದ್ದರಾಮಯ್ಯ ವರದಿ ಕಸದ ಬುಟ್ಟಿಗೆ: ಶಾಸಕ ಸುನಿಲ್ ಕುಮಾರ್ ವ್ಯಂಗ್ಯ

    ಬ್ಲ್ಯಾಕ್‌ ಲಿಸ್ಟ್‌ನಲ್ಲಿರೋ ಕಂಪನಿ ಜೊತೆ ಒಡಂಬಡಿಕೆ ಮಾಡಿಕೊಂಡು ದುಬಾರಿ ದರ ವಿಧಿಸಲಾಗಿದೆ ಅಂತ ವಾದಿಸಿದ್ರು. ವಾದ ಪ್ರತಿವಾದಗಳನ್ನು ಆಲಿಸಿ ಕೋರ್ಟ್‌ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿತು. ಇನ್ನೂ ಖಾಸಗಿ ದೂರಿನ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವ ಕೆ.ಜೆ. ಜಾರ್ಜ್, ದೂರುದಾರರು ಕೋರ್ಟ್ ಮೊರೆ ಹೋಗಿದ್ದಾರೆ. ನಾವು ಕೂಡ ವಿವರಣೆ ನೀಡುತ್ತೇವೆ. ಅಂತಿಮವಾಗಿ ಕೋರ್ಟ್ ನಿರ್ಧಾರ ಮಾಡಲಿದೆ ಅಂದ್ರು. ಇದನ್ನೂ ಓದಿ: RE ಸಂಶೋಧನೆ, ನಾವೀನ್ಯತೆ; 1.27 ಲಕ್ಷ ಕೋಟಿ ಯೋಜನೆಗೆ ಕೇಂದ್ರ ಅಸ್ತು: ಪ್ರಹ್ಲಾದ್ ಜೋಶಿ

    ಬಿಜೆಪಿ ಆರೋಪ ಏನು?
    ಸ್ಮಾರ್ಟ್‌ ಮೀಟರ್‌ ಟೆಂಡರ್‌ನಲ್ಲಿ ಕೇವಲ ಮೂರು ಕಂಪನಿ ಮಾತ್ರ ಟೆಂಡರ್‌ನಲ್ಲಿದ್ದವು. ಇತರೆ ಕಂಪನಿಗಳು ಟೆಂಡರ್‌ಗೆ ಬರದಂತೆ ಷರತ್ತು ವಿಧಿಸಲಾಗಿತ್ತು. ಬಿಡ್‌ನಲ್ಲಿ ಇದ್ದ ಎರಡು ಕಂಪನಿಗಳು ಡಮ್ಮಿ ಕಂಪನಿಗಳು. ಹೀಗಾಗಿ ರಾಜಶ್ರೀಗೆ ಟೆಂಡರ್ ನೀಡಿರುವುದೇ ಅಕ್ರಮವಾಗಿ. ಬೆಸ್ಕಾಂ ನಲ್ಲಿ ದೊಡ್ಡ ಮಟ್ಟದ ಅಕ್ರಮಗಳು ನಡೆಯುತ್ತಿವೆ. ಒಂದು ಸ್ಮಾರ್ಟ್ ಮೀಟರ್‌ಗೆ 5,000 ರೂಪಾಯಿ ತ್ರೀಫೇಸ್ ಮೀಟರ್‌ಗಾಗಿ 9,000 ರೂ. ನಿಗದಿ ಮಾಡಿದೆ. ಇದೇ ಮೀಟರ್‌ಗಳು ಬೇರೆ ರಾಜ್ಯಗಳಲ್ಲಿ 900 ಮಾತ್ರ ಇದೆ. ರಾಜ್ಯಪಾಲರ ಬಳಿ ಈಗಾಗಲೇ ಪ್ರಾಸಿಕ್ಯೂಷನ್ ಅನುಮತಿ ಕೋರಲಾಗಿದೆ. 3 ಎಂಎಲ್‌ಎಗಳು ರಾಜ್ಯಪಾಲರನ್ನು ಕೇಳಿದ್ದಾರೆ ಎಂದು ಬಿಜೆಪಿ ದೂರಿನಲ್ಲಿ ತಿಳಿಸಿದೆ. ಇದನ್ನೂ ಓದಿ: ರಾಜ್ಯದಲ್ಲಿ ಹೂಡಿಕೆ: ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಜೊತೆ ರೋಲ್ಸ್‌ ರಾಯ್ಸ್‌ ಕಂಪನಿ ಮಾತುಕತೆ

  • ಸ್ಮಾರ್ಟ್ ಮೀಟರ್ ಹಗರಣ – ಬಿಜೆಪಿ ನಿಯೋಗದಿಂದ ರಾಜ್ಯಪಾಲರಿಗೆ ದೂರು

    ಸ್ಮಾರ್ಟ್ ಮೀಟರ್ ಹಗರಣ – ಬಿಜೆಪಿ ನಿಯೋಗದಿಂದ ರಾಜ್ಯಪಾಲರಿಗೆ ದೂರು

    – ಸ್ಮಾರ್ಟ್ ಮೀಟರ್ ಮೂಲಕ ಸರ್ಕಾರದ ಹಗಲು ದರೋಡೆ; ಸಿ.ಎನ್ ಅಶ್ವಥ್ ನಾರಾಯಣ್ ಟೀಕೆ

    ಬೆಂಗಳೂರು: ಸ್ಮಾರ್ಟ್ ಮೀಟರ್ ಮೂಲಕ ಹಗಲು ದರೋಡೆ ಮಾತ್ರವಲ್ಲದೆ, ಗ್ರಾಹಕರಿಗೆ ಅನ್ಯಾಯವಾಗುತ್ತಿದೆ ಎಂದು ಮಾಜಿ ಡಿಸಿಎಂ, ಶಾಸಕ ಡಾ.ಸಿ.ಎನ್ ಅಶ್ವಥ್ ನಾರಾಯಣ್(Dr C N Ashwath Narayan) ಟೀಕಿಸಿದ್ದಾರೆ.

    ವಿರೋಧ ಪಕ್ಷದ ನಾಯಕ ಆರ್ ಅಶೋಕ್(R Ashok) ಮತ್ತು ಸಿ.ಎನ್ ಅಶ್ವಥ್ ನಾರಾಯಣ್ ಅವರ ನೇತೃತ್ವದ ಬಿಜೆಪಿ ನಿಯೋಗವು ಬುಧವಾರ ರಾಜ್ಯಪಾಲರನ್ನು ಭೇಟಿ ಮಾಡಿ ಹಗರಣದ ಸೂಕ್ತ ತನಿಖೆಗೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ದೂರು ನೀಡಿದರು. ಈ ಸಂದರ್ಭ ಮಾಧ್ಯಮಗಳ ಜೊತೆ ಮಾತನಾಡಿದ ಸಿ.ಎನ್ ಅಶ್ವಥ್ ನಾರಾಯಣ್ ಅವರು, ಸ್ಮಾರ್ಟ್ ಮೀಟರ್ ಕುರಿತಂತೆ ಗೌರವಾನ್ವಿತ ರಾಜ್ಯಪಾಲರ ಜೊತೆ ಚರ್ಚೆ ಮಾಡಿದ್ದೇವೆ ಎಂದು ವಿವರಿಸಿದರು. ಇದನ್ನೂ ಓದಿ: ಪಾಕಿಸ್ತಾನದಲ್ಲಿ ನನ್ನನ್ನು ಮದುವೆಯಾಗು: ಪಾಕ್‌ ಅಧಿಕಾರಿ ಮುಂದೆ ಆಸೆ ವ್ಯಕ್ತಪಡಿಸಿದ್ದ ಜ್ಯೋತಿ

    ಈ ಹಗರಣದಲ್ಲಿ ಗ್ರಾಹಕರಿಗೆ ಅನ್ಯಾಯವಾಗುತ್ತಿದೆ. ಸಾವಿರಾರು ಕೋಟಿ ಲೂಟಿ ನಡೆಯುತ್ತಿದೆ. ರಾಜ್ಯ ಸರ್ಕಾರ, ಇಂಧನ ಇಲಾಖೆ ಹಾಗೂ ಅಧಿಕಾರಿಗಳು ಇದರಲ್ಲಿ ಭಾಗಿ ಆಗಿರುವುದಾಗಿ ರಾಜ್ಯಪಾಲರಿಗೆ ತಿಳಿಸಲಾಗಿದೆ. ಈ ಕುರಿತು ದಾಖಲೆಗಳೊಂದಿಗೆ ಲೋಕಾಯುಕ್ತಕ್ಕೆ ದೂರು ನೀಡಿದ್ದೇವೆ. ಇದುವರೆಗೂ ಎಫ್‌ಐಆರ್ ದಾಖಲಾಗಿಲ್ಲ. ಈ ಸಂಬಂಧ ಲೋಕಾಯುಕ್ತಕ್ಕೆ ಮತ್ತೊಮ್ಮೆ ದೂರು ನೀಡಲಾಗಿದೆ ಎಂದರು. ಇದನ್ನೂ ಓದಿ: ತುಮಕೂರು | ಕೆಮಿಕಲ್ ಸಂಪ್‍ ಕ್ಲೀನ್‌ ಮಾಡುವಾಗ ಇಬ್ಬರು ಕಾರ್ಮಿಕರು ಸಾವು, ಮತ್ತಿಬ್ಬರು ಅಸ್ವಸ್ಥ

    ಅಧಿಕಾರ ದುರ್ಬಳಕೆ ಮಾಡಿದ ಇಂಧನ ಸಚಿವರು, ಇತರ ಅಧಿಕಾರಿಗಳು ಗುತ್ತಿಗೆ ಕೊಟ್ಟು ಕಾನೂನಿನ ಉಲ್ಲಂಘನೆ ಮಾಡಿದ್ದಾರೆ. ಅಧಿಕಾರ ದುರ್ಬಳಕೆ, ಹಗಲು ದರೋಡೆ ಮಾಡಿದ ಸ್ಮಾರ್ಟ್ ಮೀಟರ್ ಹಗರಣಕ್ಕೆ(Smart Meter Scam) ತಾರ್ಕಿಕ ಅಂತ್ಯ ಕಾಣಿಸಲು ಯೋಜಿಸಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಆಪರೇಷನ್ ಸಿಂಧೂರ ಹೇಳಿಕೆ ವಿವಾದ – ಅಶೋಕ ವಿವಿ ಪ್ರೊಫೆಸರ್‌ಗೆ ಮಧ್ಯಂತರ ಜಾಮೀನು

    ರಾಜ್ಯ ವಿದ್ಯುತ್ ನಿಯಂತ್ರಣ ಆಯೋಗ ಮತ್ತು ಕೇಂದ್ರ ವಿದ್ಯುತ್ ಆಯೋಗದ ಕಾನೂನಿನಲ್ಲಿ ಅವಕಾಶ ಇಲ್ಲದಿದ್ದರೂ ಸ್ಮಾರ್ಟ್ ಮೀಟರ್ ಕಡ್ಡಾಯ ಮಾಡುತ್ತಿರುವುದು ಪ್ರಥಮ ಉಲ್ಲಂಘನೆ. ಇಲ್ಲಿ ದುಬಾರಿ ದರ ಇದೆ. ಅರ್ಹತೆ ಇಲ್ಲದ ಗುತ್ತಿಗೆದಾರರಿಗೆ ಗುತ್ತಿಗೆ ಕೊಡಲಾಗಿದೆ. ಕಾನೂನಿನ ಉಲ್ಲಂಘನೆ, ಅಧಿಕಾರ ದುರ್ಬಳಕೆ ಮಾಡಿದ ಕುರಿತು ಮಾನ್ಯ ರಾಜ್ಯಪಾಲರ ಗಮನಕ್ಕೆ ತಂದಿದ್ದೇವೆ. ಗೋಲ್ಡ್ ಸ್ಮಗ್ಲಿಂಗ್(Gold Smuggling) ಪ್ರಕರಣವು ತೀವ್ರ ತನಿಖೆ ನಡೆದು ಇನ್ನಷ್ಟು ವಿವರ ಹೊರಬರುವ ವಿಶ್ವಾಸವಿದೆ ಎಂದರು.

    ರತ್ನಗಂಬಳಿ ಹಾಸಿ ಸುಖದಲ್ಲಿ ತಮ್ಮ ಸಾಧನೆಗಳನ್ನು ಹೇಳಿಕೊಂಡಿದ್ದಾರೆ. ಕಾಂಗ್ರೆಸ್ಸಿನ(Congress) ಸಮರ್ಪಣಾ ಸಮಾವೇಶ, ಸಾಧನಾ ಸಮಾವೇಶ ಎಲ್ಲವೂ ಬೂಟಾಟಿಕೆ. ಇದು ಲೂಟಿ ಸರ್ಕಾರ. ರಾಜ್ಯದಲ್ಲಿ ಸಂತಸ ಮತ್ತು ಆನಂದವಾಗಿ ಇರುವವರು ಸಿಎಂ ಮತ್ತು ಅಧಿಕಾರದಲ್ಲಿರುವ ಸಚಿವ ಸಂಪುಟದ 35 ಜನರ ತಂಡ ಎಂದು ಆರೋಪಿಸಿದರು. ಇದನ್ನೂ ಓದಿ: ಮುಂದಿನ ಮಳೆಗಾಲದೊಳಗೆ ಸಮಸ್ಯೆ ಬಗೆಹರಿಯದಿದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡ್ತೇನೆ: ಬೈರತಿ ಬಸವರಾಜ್

    ವಿಪಕ್ಷ ನಾಯಕ ಆರ್. ಅಶೋಕ್, ಶಾಸಕ ಸಿ.ಎನ್ ಅಶ್ವಥ್ ನಾರಾಯಣ್, ಶಾಸಕ ಕೆ.ಗೋಪಾಲಯ್ಯ, ಶಾಸಕ ಧೀರಜ್ ಮುನಿರಾಜು ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

  • ಸ್ಮಾರ್ಟ್ ಮೀಟರ್ ಹಗರಣ ಆರೋಪ – ಸಚಿವ ಜಾರ್ಜ್ ವಿರುದ್ಧ ಲೋಕಾಯುಕ್ತಕ್ಕೆ ಬಿಜೆಪಿ ದೂರು

    ಸ್ಮಾರ್ಟ್ ಮೀಟರ್ ಹಗರಣ ಆರೋಪ – ಸಚಿವ ಜಾರ್ಜ್ ವಿರುದ್ಧ ಲೋಕಾಯುಕ್ತಕ್ಕೆ ಬಿಜೆಪಿ ದೂರು

    ಬೆಂಗಳೂರು: ಸ್ಮಾರ್ಟ್ ಮೀಟರ್ ಹಗರಣ (Smart Meter Scam) ಆರೋಪಕ್ಕೆ ಸಂಬಂಧಪಟ್ಟಂತೆ ಲೋಕಾಯುಕ್ತಕ್ಕೆ ಬಿಜೆಪಿ (BJP) ದೂರು ನೀಡಿದೆ.

    ಶಾಸಕರಾದ ಅಶ್ವಥ್ ನಾರಾಯಣ್, ಎಸ್.ಆರ್.ವಿಶ್ವನಾಥ್, ಧೀರಜ್ ಮುನಿರಾಜು ನೇತೃತ್ವದ ನಿಯೋಗದಿಂದ ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿ, ದೂರು ಸಲ್ಲಿಸಿದ್ದಾರೆ. ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ದೂರು ನೀಡಿದ್ದು, ಇಂಧನ ಸಚಿವ ಕೆ.ಜೆ.ಜಾರ್ಜ್, ಗೌರವ್ ಗುಪ್ತಾ, ಟೆಕ್ನಿಕಲ್ ಡೈರೆಕ್ಟರ್ ಮಹಾಂತೇಶ್ & ಬಾಲಾಜಿ ಮೇಲೆ ದೂರು ನೀಡಲಾಗಿದೆ.ಇದನ್ನೂ ಓದಿ: ಚೀಟಿ ಹಣದ ವಿಚಾರಕ್ಕೆ ಗಲಾಟೆ – ಯುವಕನ ತಲೆ ಒಡೆದು ಹತ್ಯೆ

    ಲೋಕಾಯುಕ್ತಕ್ಕೆ ದೂರು ನೀಡಿದ ಬಳಿಕ ಮಾತನಾಡಿದ ಶಾಸಕ ಅಶ್ವಥ್ ನಾರಾಯಣ್, ಇಂಧನ ಇಲಾಖೆ ಪ್ರಧಾನ ಕಾರ್ಯದರ್ಶಿ ಮೇಲೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ದೂರು ನೀಡಿದ್ದೇವೆ. ಇಂಧನ ಸಚಿವ ಕೆಜೆ ಜಾರ್ಜ್ (KJ George), ಗೌರವ್ ಗುಪ್ತಾ, ಟೆಕ್ನಿಕಲ್ ಡೈರೆಕ್ಟರ್ ಮಹಾಂತೇಶ್ & ಬಾಲಾಜಿ ವಿರುದ್ಧ ದೂರು ನೀಡಿದ್ದು, ರಾಜಶ್ರೀ ಕಂಪನಿಯ ಕಂಬ ತಯಾರಿಸುವ ಕಂಪನಿಗೆ ಸ್ಮಾರ್ಟ್ ಮೀಟರ್ ಅಳವಡಿಕೆಗೆ ಟೆಂಡರ್ ನೀಡಿದ್ದಾರೆ. ನಿಯಮಗಳ ಉಲ್ಲಂಘನೆ, ಬ್ಲಾಕ್ ಲಿಸ್ಟ್ ಕಂಪನಿಗೆ ಟೆಂಡರ್ ನೀಡಿದ್ದಾರೆ ಎಂದು ಆರೋಪಿಸಿದರು.

    ಲೋಕಾಯುಕ್ತರಿಗೆ ಸವಿಸ್ತಾರವಾಗಿ ತಿಳಿಸಿದ್ದೇವೆ. ಇದನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಬೇಕಿದೆ. ಭ್ರಷ್ಟಾಚಾರದ ವಿರುದ್ಧ ನಾವು ಹೋರಾಟ ಮಾಡುತ್ತಿದ್ದೇವೆ. ಭ್ರಷ್ಟಾಚಾರ ಮುಕ್ತವಾಗಿಸಬೇಕು. ಇದೊಂದು ಬೇನಾಮಿ ಕಂಪನಿ. 9 ಸುಳ್ಳುಗಳನ್ನು ಜಾರ್ಜ್ ಹೇಳಿದ್ದಾರೆ. ಅದ್ಯಾವುದಕ್ಕೂ ಉತ್ತರವಿಲ್ಲ. ಸದನದ ಒಳಗೂ ಅಧಿಕಾರ ದುರ್ಬಳಕೆ ಮಾಡಿದ್ದಾರೆ. ಒಬ್ಬ ವ್ಯಕ್ತಿಗೆ ಟೆಂಡರ್ ಕೊಡಲು ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಕಿಡಿಕಾರಿದರು.ಇದನ್ನೂ ಓದಿ: 500 ರೂ. ಮುಖಬೆಲೆಯ ನಕಲಿ ನೋಟುಗಳ ಬಗ್ಗೆ ಹೈ ಅಲರ್ಟ್‌ – ಫೇಕ್‌ ನೋಟ್‌ ಗುರುತಿಸೋದು ಹೇಗೆ?