ಮೈಸೂರು: ಮಾರುವೇಷದಲ್ಲಿದ್ದ ಸ್ಯಾಂಟ್ರೋ ರವಿಯ (Santro Ravi) ಪತ್ತೆಗೆ ಆತನ ಹಣೆಯ ಮೇಲಿರುವ ಮಾರ್ಕ್ ಖಾಕಿಗೆ ಸುಳಿವು ನೀಡಿತ್ತು ಎನ್ನುವ ವಿಷಯ ಇದೀಗ ಬೆಳಕಿಗೆ ಬಂದಿದೆ.
ವೇಶ್ಯಾವಾಟಿಕೆ ದಂಧೆ, ಜಾತಿ ನಿಂದನೆ, ಸರ್ಕಾರಿ ಅಧಿಕಾರಿಗಳ ವರ್ಗಾವಣೆ ದಂಧೆ ಸೇರಿದಂತೆ ಅನೇಕ ಕ್ರಿಮಿನಲ್ ಪ್ರಕರಣಗಳ ಆರೋಪ ಹೊತ್ತಿದ್ದ ಸ್ಯಾಂಟ್ರೋ ರವಿಯನ್ನು ಶುಕ್ರವಾರ ಗುಜರಾತ್ನ (Gujarat) ಅಹಮದಾಬಾದ್ನಲ್ಲಿ ಪೊಲೀಸರು ಬಂಧಿಸಿದ್ದರು. ಆದರೆ ಇದಕ್ಕೂ ಮುನ್ನ ಸುಮಾರು 10 ದಿನಗಳ ಕಾಲ ಮಾರುವೇಷದಲ್ಲಿ ತಿರುಗಾಡುತ್ತಿದ್ದ.
ಅಷ್ಟೇ ಅಲ್ಲದೇ 20 ವರ್ಷದ ಹಿಂದಿನ ವಿಗ್ ಇರುವ ಫೋಟೋಗಳಿಂದ ಮುಖಚಹರೆ ಗೊಂದಲ ಉಂಟು ಮಾಡಿತ್ತು. ಆದರೆ ಆತನ ಹಣೆಯ ಎಡಭಾಗದಲ್ಲಿರುವ ಗುರುತಿನಿಂದಾಗಿ ಆತನೇ ಸ್ಯಾಂಟ್ರೋ ರವಿ ಎನ್ನುವುದು ಬಂಧನದ (Arrest) ವೇಳೆ ಮೈಸೂರು ಪೊಲೀಸರಿಗೆ ಸಹಕಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಿದ್ದು, ಸದ್ಯ ಆತ ಮೈಸೂರಿನ (Mysuru) ಕಾರಾಗೃಹದಲ್ಲಿದ್ದಾನೆ. ಇದನ್ನೂ ಓದಿ:ರಾಜ್ಯದಲ್ಲಿ ಮುಂದಿನ 6 ದಿನ ಚಳಿ ಹೆಚ್ಚಳ ಸಾಧ್ಯತೆ
ಆದರೆ ಮೈಸೂರು ಕಾರಾಗೃಹದಲ್ಲಿ ಸ್ಯಾಂಟ್ರೋಗೆ ಸಿಗುತ್ತಾ ವಿಶೇಷ ಸವಲತ್ತು ಎಂಬ ಪ್ರಶ್ನೆ ಇದೀಗ ಮೂಡುತ್ತಿದೆ. ಜೈಲು ಅಧೀಕ್ಷಕರ ವರ್ಗಾವಣೆಗೆ ಸಹಾಯ ಮಾಡಿದ್ದ ಸ್ಯಾಂಟ್ರೋ ರವಿ ವರ್ಗಾವಣೆ ಮಾಡಿಸಿದನ್ನು ಸ್ಟೇಟಸ್‍ನಲ್ಲಿ ಹಾಕಿಕೊಂಡಿದ್ದ. ಕೇಂದ್ರ ಕಾರಾಗೃಹದ ಅಧೀಕ್ಷಕ ಮಹೇಶ್ ಕುಮಾರ್ ಜಿಗಣಿಗೆ ಶಿಫಾರಸು ಮಾಡಿದ್ದ. ಶಿವಮೊಗ್ಗದಿಂದ ಬೆಂಗಳೂರು ಕಾರಾಗೃಹಕ್ಕೆ ವರ್ಗಾವಣೆ ಆಗಿದ್ದ ಮಹೇಶ್ ಸದ್ಯ ಮೈಸೂರು ಕೇಂದ್ರ ಕಾರಾಗೃಹದ ಅಧೀಕ್ಷಕರಾಗಿದ್ದಾರೆ. ಗೃಹ ಸಚಿವರ ಸೂಚನೆಯಂತೆ 2021ರಲ್ಲಿ ವರ್ಗಾವಣೆ ಮಾಡಲಾಗಿತ್ತು. ಇದನ್ನೂ ಓದಿ:ಪ್ರೇಮ ವೈಫಲ್ಯ – ಕಳೆನಾಶಕ ಸೇವಿಸಿ ಅಪ್ರಾಪ್ತೆ ಆತ್ಮಹತ್ಯೆ
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ರಾಜ್ಯದ ಗೃಹ ಸಚಿವರು ಗುಜರಾತ್‌ನಲ್ಲಿದ್ದಾರೆ. ಸ್ಯಾಂಟ್ರೋ ರವಿ (Santro Ravi) ಕೂಡ ಅಲ್ಲೇ ಇದ್ದ. ಗೃಹ ಸಚಿವರು ಗುಜರಾತ್‌ಗೆ ಯಾವಾಗ ಹೋದರು ಎನ್ನುವುದೇ ಯಕ್ಷಪ್ರಶ್ನೆ. ಗುಜರಾತಿನಲ್ಲೂ ಬಿಜೆಪಿ ಸರ್ಕಾರವಿದೆ. ಬಿಜೆಪಿಯವರು ಏನು ಬೇಕಾದರೂ ಮಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ಅನುಮಾನ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ಮಾಧ್ಯಮ ಸಂವಾದದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸ್ಯಾಂಟ್ರೋ ರವಿಯನ್ನು ಗುಜರಾತ್‌ನಿಂದ ರಾಜ್ಯಕ್ಕೆ ಕರೆತಂದ ಪೊಲೀಸರು ಅಜ್ಞಾತ ಸ್ಥಳಕ್ಕೆ ಮಾಧ್ಯಮಗಳ ಕಣ್ತಪ್ಪಿಸಿ ರಾಜಾತಿಥ್ಯ ಕೊಟ್ಟು ಕರೆದೊಯ್ದಿದ್ದಾರೆ. ವಿಐಪಿ ಗೇಟ್ ಮೂಲಕ ಸ್ಯಾಂಟ್ರೋ ರವಿಯನ್ನು ಎಲ್ಲರ ಕಣ್ತಪ್ಪಿಸಿ ಕರೆತಂದದ್ದು ಏಕೆ? ವಿಐಪಿ ಗೇಟ್ ಇರುವುದು ಪ್ರಧಾನಿ, ಮುಖ್ಯಮಂತ್ರಿಗಳಿಗೆ ಮಾತ್ರ. ಒಬ್ಬ ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಗೆ ಇಷ್ಟೊಂದೆಲ್ಲ ರಾಜಾತಿಥ್ಯ ಏಕೆ ಎಂದು ಅವರು ಪ್ರಶ್ನಿಸಿದರು. ಇದನ್ನೂ ಓದಿ: ಎಲ್ಲರ ಜಾತಕ ನನ್ನ ಬಳಿ ಇದೆ ಹುಷಾರ್ – ಪೊಲೀಸರಿಗೇ ಅವಾಜ್ ಬಿಟ್ಟ ಸ್ಯಾಂಟ್ರೋ ರವಿ..!
ಸ್ಯಾಂಟ್ರೋ ರವಿಯನ್ನು ಎರಡು-ಮೂರು ದಿನಗಳ ಹಿಂದೆಯೇ ಗುಜರಾತ್‌ನಲ್ಲಿ ಬಂಧಿಸಿದ್ದಾರೆ. ಏನೆಲ್ಲಾ ಸಾಕ್ಷ್ಯ ಇಟ್ಟುಕೊಂಡಿದ್ದನೋ ಅದನ್ನೆಲ್ಲ ಕಿತ್ತುಕೊಂಡು ಬಂದಿದ್ದಾರೆ. ಅಧಿಕಾರಿಗಳ ವರ್ಗಾವಣೆಯಲ್ಲಿ ಇವನದ್ದೇ ನೇರ ಪಾತ್ರವಿದೆ. ಮೈಸೂರಿನಲ್ಲಿ ಮಹಿಳೆಯೊಬ್ಬರು ದಾಖಲಿಸಿದ ಪ್ರಕರಣ ಬಿಟ್ಟು ಉಳಿದ ಪ್ರಕರಣವನ್ನು ಯಾವ ರೀತಿ ತನಿಖೆ ಮಾಡುತ್ತಾರೆ? ಸರ್ಕಾರದ ಆಡಳಿತ, ದಂಧೆಕೋರರು ದಲ್ಲಾಳಿಗಳಿಂದ ನಡೆಯಬೇಕು ಅಂದರೆ ಈ ಸರ್ಕಾರ ಮುಂದುವರೆಯಬೇಕಾ? ಎಂದು ಗುಡುಗಿದರು.
ನನ್ನ ಆಡಳಿತ ಇದ್ದಾಗ ನಾನು ಬಿಗಿಯಾಗಿ ಇಟ್ಟುಕೊಂಡಿದ್ದೆ. ಜನರಿಗೆ ಉತ್ತರ ಕೊಡಬೇಕಾದವರು ಸರ್ಕಾರದವರೇ. ಸ್ಯಾಂಟ್ರೋ ರವಿ ರಾಜರೋಷವಾಗಿ ಮಾತಾಡ್ತಾನೆ ಅಂದರೆ ಹೇಗೆ? ಪೂನಾದಿಂದ ಗುಜರಾತ್‌ಗೆ ಯಾಕೆ ಕರೆಸಿಕೊಂಡರು? ಅವನಿಗೆ ಏನು ಪ್ರಾಮಿಸ್ ಮಾಡಿ ಕರೆಸಿಕೊಂಡರು. ಒಂದು ತಿಂಗಳು ಸುದ್ದಿಯಲ್ಲಿ ಇರ್ತಾರೆ. ನಂತರ ಜನ ಮರೆತಾಗ ಮುಚ್ಚಿ ಹಾಕುತ್ತಾರೆ ಅಷ್ಟೆ ಎಂದು ಹೇಳಿದರು. ಇದನ್ನೂ ಓದಿ: ಮಾಜಿ ಶಾಸಕ ವೈಎಸ್‌ವಿ ದತ್ತಾ, ಶಾಸಕ ಹೆಚ್.ನಾಗೇಶ್ ಕಾಂಗ್ರೆಸ್ ಸೇರ್ಪಡೆ
ಗೃಹ ಸಚಿವರು ಯಾಕೆ ಗುಜರಾತ್‌ಗೆ ಹೋದರು. ಸಾಬರಮತಿ ಆಶ್ರಮದಲ್ಲಿ ಗಾಂಧಿ ಪ್ರತಿಮೆ ಬಳಿ ಫೋಟೊ ತೆಗೆಸಿಕೊಳ್ಳುವುದು, ವೀಡಿಯೋ ಕ್ಲಿಪ್ಪಿಂಗ್ ಯಾಕೆ ಕಳಿಸಿರುವುದು. ನನಗೆ ಅನುಮಾನ ಅಂತೂ ಇದೆ. ಪೂನಾದಲ್ಲೇ ಅರೆಸ್ಟ್ ಮಾಡಬಹುದಿತ್ತಲ್ಲಾ? ಆತನನ್ನು ಗುಜರಾತ್‌ಗೆ ಯಾಕೆ ಕರೆಸಿಕೊಂಡರು. ನಾನೇ ಎಲ್ಲ ಹೇಳೋದಾದ್ರೆ ಸರ್ಕಾರ ತನಿಖೆ ಮಾಡಬೇಕಲ್ಲಾ? ವಾಸ್ತವಾಂಶ ಹೇಳಬೇಕಲ್ಲವೇ? 40 ಪರ್ಸೆಂಟ್ ಸರ್ಕಾರ ಅಂತಾರೆ. ಒಂದು ದಾಖಲೆ ಕೊಡಕಾಗುತ್ತದೆಯೇ? ಸಚಿವ ಎಂಟಿಬಿ ನಾಗರಾಜ್ ಹೇಳಿಕೆ ಸಾಕಲ್ಲವೇ? ಇಂತಹ ಕೆಟ್ಟ ಸರ್ಕಾರ ಹಿಂದೆ ಬಂದಿಲ್ಲ, ಮುಂದೆ ಬರುವುದಿಲ್ಲ ಎಂದು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಕೇಸರಿ ಬಟ್ಟೆ ಬಗ್ಗೆ ಮಾತಾಡೋವ್ರು, ಅದೇ ಕೇಸರಿ ಬಟ್ಟೆನೇ ಇಂಥವರು ಹೆಗಲಿಕೆ ಹಾಕಿದ್ದಲ್ವಾ. ಅದಕ್ಕೆ ಗೌರವವಿಲ್ಲವೆ? ಜೆಡಿಎಸ್ ಜನರ ಟೀಂ, ಕಾಂಗ್ರೆಸ್-ಬಿಜೆಪಿ ಅವರು ಹೇಳಿದ್ದಾರಲ್ಲಾ ಅಲ್ಲೇ ಅರ್ಥ ಮಾಡಿಕೊಳ್ಳಿ. ಇವರು ಯಾವ ಟೀಂ ಅಂತ. ಬಿಜೆಪಿ ಆಡಳಿತ ಮಾಡಬೇಕಾದರೆ ಯಾವ ಕೃಪಾಕಟಾಕ್ಷ ಇತ್ತು ಚಾಟಿ ಬೀಸಿದರು.
ಈ ಸರ್ಕಾರದಲ್ಲಿ ಸ್ಯಾಂಟ್ರೋ ರವಿಯಂಥವರು ತುಂಬಾ ಜನ ಇದ್ದಾರೆ. ಕೆಲವು ಮಂತ್ರಿಗಳು, ರಾಜಕಾರಣಿಗಳಲ್ಲಿ ಸಂಪರ್ಕದಲ್ಲಿ ಇದ್ದಾರೆ. ನಾನು ಅಂದು ಹೇಳದೇ ಹೋಗಿದ್ರೆ ಇದನ್ನು ಮುಚ್ಚಿ ಹಾಕ್ತಿದ್ರು ಅಷ್ಟೆ. ಕೇರಳ ಅಲ್ಲಿ ಇಲ್ಲಿ ಹೋಗಿದ್ದ ಅಂತ ಹೇಳಿದ್ದರು. ನಾನು ಯಾಕೆ ಮೊಸರಲ್ಲಿ ಕಲ್ಲು ಹುಡುಕಲಿ. ಪಾರದರ್ಶಕವಾಗಿ ತನಿಖೆ ನಡೆಸುತ್ತಿದ್ದರೆ ಹೇಳಲಿ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಇದನ್ನೂ ಓದಿ: ನಿಮಿಷಾಂಭ ದೇವಿಗೆ ಹರಕೆ ಹೊತ್ತ 22 ಗಂಟೆಗಳಲ್ಲೇ ಸ್ಯಾಂಟ್ರೋ ರವಿ ಅರೆಸ್ಟ್: ಅಲೋಕ್ ಕುಮಾರ್
ಮೀಸಲಾತಿಗಾಗಿ ಮಠಾಧೀಶರನ್ನು ಎತ್ತಿಕಟ್ಟುತ್ತಿರುವ ರಾಜಕಾರಣಿಗಳು
ಈಗಿನ ರಾಜಕಾರಣಿಗಳು ಮೀಸಲಾತಿ ಕುರಿತಂತೆ ಮಠಾಧೀಶರನ್ನು ಎತ್ತಿ ಕಟ್ಟುತ್ತಿದ್ದಾರೆ. ಅವರನ್ನು ಬಿಸಿಲಲ್ಲಿ ಕೂರಿಸಿ ಹೋರಾಟ ಮಾಡಿಸುತ್ತಿದ್ದಾರೆ. ಮೀಸಲಾತಿ ಕುರಿತು ಸರ್ಕಾರಕ್ಕೆ ಅರಿವಿಲ್ಲವೇ? ರಾಜಕಾರಣಿಗಳು ಮಠಾಧೀಶರನ್ನು ಮುಂದೆ ಬಿಟ್ಟು ಹೋರಾಟವನ್ನು ಮಾಡಿಸುತ್ತಿದ್ದಾರೆ. ಮೀಸಲಾತಿ ಅರ್ಥ ಏನು? ಹೋದ ಕಡೆಯೆಲ್ಲಾ ಸದಾಶಿವ ಆಯೋಗ ವರದಿ ಮಾಡಿ ಅಂತಿದ್ದಾರೆ. ನಾವು ಈ ವರದಿ ಜಾರಿಗೆ ತಂದರೆ ಬೋವಿ, ಬಂಜಾರ ಸಮುದಾಯಕ್ಕೆ ಅನ್ಯಾಯ ಆಗುತ್ತೆ ಅನ್ನೊ ಭಯವಿದೆ. ನಾನು ಅಧಿಕಾರಕ್ಕೆ ಬಂದ್ರೆ ಎಲ್ಲರನ್ನೂ ಕರೆದು ಚರ್ಚಿಸಿ ಮುಂದಿನ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ತಿಳಿಸಿದರು.
ರಾಜಕಾರಣಿಗಳಿಂದಲೇ ಸಮಸ್ಯೆ ಆರಂಭವಾಗಿದೆ. ಪರ್ಸೆಂಟೆಜ್ ಹೆಚ್ಚು ಮಾಡಿ ಅಂತ ಕೇಳಲಾಗ್ತಿದೆ. ಆದರೆ ಸರ್ಕಾರಿ ನೌಕರರು, ಸಮುದಾಯ ಪರಿಸ್ಥಿತಿ ಎಲ್ಲಾ ಅಧ್ಯಯನ ಆಗಬೇಕು. ಅವರಿಗೆ ಹೆಚ್ಚಳ ಮಾಡಿದ್ರು ನಮಗೂ ಹೆಚ್ಚಳ ಮಾಡಿ ಅನ್ನುವುದಲ್ಲ. 12% ಹೆಚ್ಚಳ ಮಾಡಿ ಅನ್ನೋದಕ್ಕೆ ಸರಿಯಾದ ಮಾಹಿತಿ ಕೊಟ್ಟು ಚರ್ಚೆ ಮಾಡಬೇಕು. ಮಠಾಧೀಶರ ಭಾವನೆ ತಪ್ಪು ಅನ್ನೋದಿಲ್ಲ. ನಮ್ಮನ್ನು ಈ ವರ್ಗಕ್ಕೆ ಸೇರಿಸಿ ಅಂತ ಕೇಳಿದಾಗ ಯಾವ ಆಧಾರದ ಮೇಲೆ ಕೇಳುತ್ತಿದ್ದೇವೆ. ಯಾವ ಮಾರ್ಗಸೂಚಿ ಇದೆ ಅನ್ನೋದನ್ನ ನೋಡಬೇಕು. ಜನರನ್ನು ಬೀದಿಯಲ್ಲಿ ಬೆಂಕಿ ಹಚ್ಚಿಸಿ ಹೋರಾಟ ಮಾಡಿಸುವುದು ಯಾಕೆ? ಸರ್ಕಾರಕ್ಕೆ ವಿವರವಾಗಿ ವಾಸ್ತವಾಂಶ ಹೇಳಬೇಕಲ್ಲ. ಅದಕ್ಕೆ ನಾನು ಅಂದು ಹೇಳಿದ್ದು. ರಂಗ ಅಲ್ಲ ಮಂಗ ಅಂತ. ಮೀಸಲಾತಿ ವ್ಯವಸ್ಥೆಯಲ್ಲಿ ಇಂತಹ ಬೇಡಿಕೆಗಳು ಬಂದಾಗ ಯೋಚನೆ ಮಾಡಬೇಕು ಎಂದರು.
ಸದಾಶಿವ ಆಯೋಗದ ವರದಿ ಬಂದು ಎಷ್ಟು ವರ್ಷ ಆಯ್ತು. ನಾವು ಈ ಕಾರ್ಯಕ್ರಮ ಕೊಡೋಕೆ ಹೋದ್ರೆ ಏನಾಗುತ್ತದೆ ಅಂತ ಹೇಳಿದ್ದೆ. ಅವರಿಗೂ ಕೊಟ್ರಿ ನಮಗೂ ಕೊಡಿ ಅಂತ ಅಂದಾಗ, ಎಷ್ಟು ಜನರಿಗೆ ಮೋಸ ಮಾಡ್ತೀರ ನೀವು. ನಮ್ಮ ಸಮಾಜಕ್ಕೆ ಶೇ.12 ರಷ್ಟು ಹೆಚ್ಚಿಸುವುದಕ್ಕೆ ಯಾವ ಆಧಾರದಲ್ಲಿ ಕೊಡಬೇಕು ಸರ್ಕಾರ. ಇಂಟರ್ನಲ್ ರಿಪೋರ್ಟ್ ತೆಗೆದುಕೊಂಡು ಚರ್ಚಿಸಿ ಎಂದು ನಮ್ಮ ಸ್ವಾಮೀಜಿಗೂ ಹೇಳಿದ್ದೆ ಎಂದು ತಿಳಿಸಿದರು. ಇದನ್ನೂ ಓದಿ: ನಿರಾಣಿ ಆ ಹುಲಿ ಜೊತೆ ಮಾತಾಡಲಿ- ಯತ್ನಾಳ್‍ರನ್ನ ಹುಲಿಗೆ ಹೋಲಿಕೆ ಮಾಡಿದ ಸ್ವಾಮೀಜಿ
ಊಹಾಪೋಹಕ್ಕೆ ನಕ್ಕ ಹೆಚ್ಡಿಕೆ
ನಾನು ಜನಾರ್ದನ ರೆಡ್ಡಿ ಅವರ ಜೊತೆ ಕೈ ಜೋಡಿಸಿಲ್ಲ, ಜೋಡಿಸುವುದೂ ಇಲ್ಲ. ನಮ್ಮ ಮತ್ತು ಅವರ ಕೈ ದೂರ. ಇದೊಂದು ಊಹಾಪೋಹ ಸುದ್ದಿ ಅಷ್ಟೆ ಎಂದು ಹೇಳಿದರು. ಸಿ.ಪಿ.ಯೋಗೇಶ್ವರ್ ಆಡಿಯೋ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅವರ ವಿಚಾರಕ್ಕೆ ಪ್ರಾಮುಖ್ಯತೆ ಕೊಡೋದು ಬೇಡ ಎಂದರು.
ಹಾಸನದಲ್ಲಿ ಕುಟುಂಬದಿಂದ ಮತ್ತೊಬ್ಬರು ಸ್ಪರ್ಧೆ ವಿಚಾರ ಹಾಗೂ ಬಿಜೆಪಿ ಶಾಸಕ ಪ್ರೀತಂಗೌಡ ಹೇಳಿಕೆ ಕುರಿತು ಮಾತನಾಡಿ, ಅವರು ಪ್ರವೋಕ್ ಮಾಡುತ್ತಿದ್ದಾರೆ ಅನ್ನುವುದು ನನ್ನ ಅಭಿಪ್ರಾಯ. ಹಾಸನದಲ್ಲಿ ಚುನಾವಣೆ ಗೆಲ್ಲಲು ನಮ್ಮ ಕುಟುಂಬದವರೇ ನಿಲ್ಲಬೇಕಿಲ್ಲ. ಸಾಮಾನ್ಯ ಕಾರ್ಯಕರ್ತರಿಗೆ ಕೊಟ್ಟರೂ ಗೆಲ್ಲುತ್ತಾರೆ. ಕಾರ್ಯಕರ್ತರನ್ನ ನಿಲ್ಲಿಸಿ ಗೆಲ್ಲುವ ಶಕ್ತಿಯಿದೆ. ಹಾಸನ ಜಿಲ್ಲೆಯನ್ನು ಹೆಚ್.ಡಿ.ರೇವಣ್ಣನವರಿಗೆ ಬಿಡಲಾಗಿದೆ. ಅವರು ಎಲ್ಲವನ್ನು ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು. ಇದನ್ನೂ ಓದಿ: ಬಿಜೆಪಿ ಬಗ್ಗೆ ಗೌರವ ಇಲ್ಲ ಅಂದ್ರೆ ಈ ಪಕ್ಷದಲ್ಲಿ ಯಾಕೆ ಇರ್ತೀಯಾ: ಯತ್ನಾಳ್ ವಿರುದ್ಧ ನಿರಾಣಿ ಏಕವಚನದಲ್ಲೇ ಗುಡುಗು
ಯಾರೇ ಹೋದರೂ ಪಕ್ಷಕ್ಕೆ ಧಕ್ಕೆ ಇಲ್ಲ
ನಮ್ಮ ಪಕ್ಷ ನಾಯಕರನ್ನು ತಯಾರು ಮಾಡುವ ಪಕ್ಷ. ನಮ್ಮಿಂದ ಹೋಗಿರೋರ ಚರಿತ್ರೆ ನೋಡಿ. ಬೇರೆ ಪಕ್ಷಗಳಿಗೆ ಹೋಗಿ ಏನಾಗಿದ್ದಾರೆ ಅವರೆಲ್ಲ. ನಮ್ಮಿಂದ ಯಾರೇ ಹೋದರೂ ನಮ್ಮ ಪಕ್ಷಕ್ಕೆ ಧಕ್ಕೆ ಇಲ್ಲ. ಇನ್ನು ಕೆಲ ದಿನಗಳಲ್ಲಿ 50-60 ಸೀಟ್‌ಗಳಿಗೆ ಎರಡನೇ ಪಟ್ಟಿ ಬಿಡುಗಡೆ ಮಾಡುತ್ತೇನೆ. ಹೊಸಬರಿಗೆ ಟಿಕೆಟ್ ಕೊಟ್ಟು ಗೆಲ್ಲಿಸಿಕೊಂಡು ಬರುತ್ತೇವೆ. ಇನ್ನು ಬೆಂಗಳೂರು ನಗರದಲ್ಲಿ ಈ ಬಾರಿ 6 ರಿಂದ 8 ಸ್ಥಾನ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Live Tv
[brid partner=56869869 player=32851 video=960834 autoplay=true]
ಮೈಸೂರು: ಕ್ರಿಮಿನಲ್ ಪ್ರಕರಣಗಳ ಆರೋಪಿ ಸ್ಯಾಂಟ್ರೋ ರವಿಗೆ (Santro Ravi) 14 ದಿನ ನ್ಯಾಯಾಂಗ ಬಂಧನ ವಿಧಿಸಿ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.
ನ್ಯಾಯಾಲಯದ ನ್ಯಾಯಾಧೀಶರಾದ ಎಸ್.ಗುರುರಾಜ್ ಅವರು ಆದೇಶ ಹೊರಡಿಸಿದ್ದಾರೆ. ಇದರಿಂದಾಗಿ ಸ್ಯಾಂಟ್ರೋ ರವಿ ಜೊತೆಗೆ ಸಹಚರರಾದ ರಾಮ್ ಜೀ, ಸತೀಶ್ ಕೂಡ ಜೈಲು ಪಾಲಾಗಿದ್ದಾರೆ. ಮೈಸೂರಿನ (Mysuru) ಕೇಂದ್ರ ಕಾರಾಗೃಹಕ್ಕೆ ಸ್ಯಾಂಟ್ರೋ ರವಿಯನ್ನು ಪೊಲೀಸರು ಕರೆದೊಯ್ದಿದ್ದಾರೆ. ಇದನ್ನೂ ಓದಿ: ಎಲ್ಲರ ಜಾತಕ ನನ್ನ ಬಳಿ ಇದೆ ಹುಷಾರ್ – ಪೊಲೀಸರಿಗೇ ಅವಾಜ್ ಬಿಟ್ಟ ಸ್ಯಾಂಟ್ರೋ ರವಿ..!
ವೇಶ್ಯಾವಾಟಿಕೆ ದಂಧೆ, ಜಾತಿ ನಿಂದನೆ, ಸರ್ಕಾರಿ ಅಧಿಕಾರಿಗಳ ವರ್ಗಾವಣೆ ದಂಧೆ ಸೇರಿದಂತೆ ಅನೇಕ ಕ್ರಿಮಿನಲ್ ಪ್ರಕರಣಗಳ ಆರೋಪ ಹೊತ್ತಿದ್ದ ಸ್ಯಾಂಟ್ರೋ ರವಿಯನ್ನು ಶುಕ್ರವಾರ ಗುಜರಾತ್ನ ಅಹಮದಾಬಾದ್ನಲ್ಲಿ ಪೊಲೀಸರು ಬಂಧಿಸಿದ್ದರು. ನಂತರ ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.
ಸ್ಯಾಂಟ್ರೋ ರವಿ ವಿರುದ್ಧ ಆತನ ಎರಡನೇ ಪತ್ನಿ ಕೂಡ ದೂರು ನೀಡಿದ್ದಾರೆ. “ನನ್ನ ಮೇಲೆ ಹಲ್ಲೆ ನಡೆಸಿದ್ದು, ಹಣಕ್ಕಾಗಿ ಬೇರೆಯವರೊಂದಿಗೆ ಲೈಂಗಿಕ ಸಂಪರ್ಕ ಹೊಂದುವಂತೆ ನನ್ನನ್ನು ಪೀಡಿಸುತ್ತಿದ್ದ” ಎಂದು ಸಂತ್ರಸ್ತೆ ದೂರು ನೀಡಿದ್ದರು. ಈ ಸಂಬಂಧ ಮೈಸೂರಿನ ವಿಜಯನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪ ಪತ್ತೆಗೆ ಬಲೆಬೀಸಿದ್ದರು. ಇದನ್ನೂ ಓದಿ: ಗಂಟೆಗೊಮ್ಮೆ ಇನ್ಸುಲಿನ್ ತಗೋತಿದ್ದಾನೆ – ಸ್ಯಾಂಟ್ರೋ ರವಿ ಕಾಯಿಲೆ ಬಗ್ಗೆ ಮಾಹಿತಿ ನೀಡಿದ ADGP
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ರಾಜ್ಯದಲ್ಲಿ ಭಾರೀ ಸಂಚಲನ ಸೃಷ್ಟಿಸಿ ತಲೆಮರೆಸಿಕೊಂಡಿದ್ದ ಕ್ರಿಮಿನಲ್ ಪ್ರಕರಣಗಳ (Criminal Case) ಆರೋಪಿ ಸ್ಯಾಂಟ್ರೋ ರವಿ (Santro Ravi) ಕೊನೆಗೂ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ತನ್ನ ವಿರುದ್ಧ ಎಫ್‌ಐಆರ್ (FIR) ದಾಖಲಾಗ್ತಿದ್ದಂತೆ ಕಾಲ್ಕಿತ್ತಿದ್ದ ಸ್ಯಾಂಟ್ರೋ ರವಿ, ಸಿಕ್ಕಿಬಿದ್ದ ಬಳಿಕ ಪೊಲೀಸರಿಗೆ (Mysuru Police) ಹೇಳಿದ ಒಂದೊಂದೇ ವಿಚಾರಗಳು ರಿವೀಲ್ ಆಗ್ತಿವೆ.
ಅತ್ಯಾಚಾರ, ಜಾತಿ ನಿಂದನೆ, ವೇಶ್ಯಾವಾಟಿಕೆ ದಂಧೆ ಹಾಗೂ ವರ್ಗಾವಣೆ ಕೇಸ್‌ನಲ್ಲಿ ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿಯನ್ನ ತಡರಾತ್ರಿ ಮೈಸೂರಿಗೆ ಕರೆದೊಯ್ದ ಪೊಲೀಸರು (Police) ಆತನ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ಇದನ್ನೂ ಓದಿ: ಎರಡು ವಾರಗಳಲ್ಲಿ 2 ಬಾರಿ ಕೊರೊನಾ ಸೋಂಕಿಗೆ ತುತ್ತಾಗಿ ಆಸ್ಪತ್ರೆ ಸೇರಿದ ಲಲಿತ್ ಮೋದಿ
ಎಫ್‌ಐಆರ್ ದಾಖಲಾಗ್ತಿದ್ದಂತೆ ಎಲ್ಲ ನನಗೆ ಗೊತ್ತಿರೋ ಪೊಲೀಸರೇ ಏನೂ ಮಾಡೋದಿಲ್ಲ ಅಂದುಕೊಂಡಿದ್ದ ರವಿ, ಕೇಸ್ ಗಂಭೀರತೆ ಪಡೆಯುತ್ತಿದ್ದಂತೆ ತಾನು ಬಳಸ್ತಿದ್ದ ಮೊಬೈಲ್ ಗಳಲ್ಲಿನ ಸಿಮ್ ಹಾಗೂ ತಲೆಯಲ್ಲಿದ್ದ ವಿಗ್ ಕಿತ್ತು ಮನೆಯಲ್ಲೆ ಬಿಸಾಡಿ ಕೊಡಗಿನತ್ತ ಕಾಲ್ಕಿತ್ತಿದ್ದ. ಅಲ್ಲಿನ ಹೋಂ ಸ್ಟೇ ಯಲ್ಲಿ ಎರಡು ದಿನ ಕಾಲ ಕಳೆದಿದ್ದ. ಹಳೆ ಫೋನ್ ನಿಂದ ಕಾಪಿ ಮಾಡಿಕೊಂಡಿದ್ದ ಅತ್ಯಾಪ್ತರಿಗೆ ವಾಟ್ಸಾಪ್ ಕಾಲ್ ಗಳ ಮೂಲಕ ಸಂಪರ್ಕದಲ್ಲಿದ್ದು, ಹೆಬ್ರಿ, ಕೇರಳ, ಪುಣೆ, ಗುಜರಾತ್ ಸುತ್ತಾಡಿದ್ದ ಅನ್ನೋ ಮಾಹಿತಿ ಸಿಕ್ಕಿದೆ.
ಮೈಸೂರು ತಲುಪುತ್ತಿದ್ದಂತೆ, “ಎಲ್ಲರ ಜಾತಕ ನನ್ನ ಕೈಯಲ್ಲಿದೆ ಹುಷಾರ್. ನನಗೆ ಗೊತ್ತು ಏನ್ ಮಾಡ್ಬೇಕು ಅಂತ” ಎಂದು ಅವಾಜ್ ಬಿಟ್ಟಿದ್ದಾನಂತೆ. ಅದೇನ್ ಜಾತಕ ಇಟ್ಕೊಂಡಿದ್ದಾನೊ ಸ್ಯಾಂಟ್ರೋ ರವಿ ಹೊರಗೆ ಬಿಡಬೇಕು. ಸದ್ಯ ಆತನ ಮಾತಿನಿಂದ ಸೂಕ್ಷ್ಮ ತನಿಖೆಗಿಳಿದ ಪೊಲೀಸರು ಆತನ ಮನೆಯಲ್ಲಿ ಸಿಕ್ಕ ಎರಡು ಫೋನ್ ಗಳ ಪರಿಶೀಲನೆ ನಡೆಸಿ ಮಾಹಿತಿಯನ್ನ ಎಫ್‌ಎಸ್‌ಎಲ್ ಗೆ ರವಾನಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
ಮೈಸೂರು: ಕ್ರಿಮಿನಲ್ ಆರೋಪಿ ಸ್ಯಾಂಟ್ರೋ ರವಿಯನ್ನು (Santro Ravi) ರಾಜ್ಯಕ್ಕೆ ಕರೆತಂದಿರುವ ಪೊಲೀಸರು ಶನಿವಾರ ಪ್ರಾಥಮಿಕ ವಿಚಾರಣೆ ನಡೆಸಿದ್ದಾರೆ. ಎಸಿಪಿ ಶಿವಶಂಕರ್ ವಿಜಯನಗರ ಪೊಲೀಸ್ ಠಾಣೆಯಲ್ಲಿ (VijayaNagara Police Station) ಪ್ರಾಥಮಿಕ ತನಿಖೆ ನಡೆಸಿದ್ದಾರೆ.
ಕಳೆದ ಎರಡು ದಿನಗಳಿಂದ ಮೈಸೂರಿನಲ್ಲೇ ಉಳಿದಿರುವ ಎಡಿಜಿಪಿ (ADGP) ಅಲೋಕ್ ಕುಮಾರ್ (Alok Kumar) ಶನಿವಾರ ವಿಜಯನಗರ ಪೊಲೀಸ್ ಠಾಣೆಗೆ ಆಗಮಿಸಿ ತನಿಖಾಧಿಖಾರಿಗಳಿಂದ ಮಾಹಿತಿ ಪಡೆದಿದ್ದಾರೆ. ಬಳಿಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಲು ಮುಂದಾಗಿದ್ದಾರೆ.
ನಾವು ಪೊಲೀಸ್ ಕಸ್ಟಡಿಗೆ ನೀಡುವಂತೆ ನ್ಯಾಯಾಧೀಶರನ್ನ ಕೇಳ್ತೀವಿ. ಪೊಲೀಸ್ ಕಸ್ಟಡಿಯಲ್ಲಿ ಹೆಚ್ಚಿನ ವಿಚಾರಣೆ ನಡೆಸುತ್ತೇವೆ. ಸ್ಯಾಂಟ್ರೋ ರವಿ 11 ದಿನ ಎಲ್ಲೆಲ್ಲಿ ಓಡಾಡಿದ್ದ? ಯಾರು-ಯಾರು ಸಹಾಯ ಮಾಡಿದ್ದರು? ಇದರ ಬಗ್ಗೆ ಆರಂಭಿಕ ಮಾಹಿತಿ ಪಡೆಯುತ್ತಿದ್ದೇವೆ. ಸ್ಯಾಂಟ್ರೋ ರವಿ ವಿಚಾರಣೆಗೆ ಸ್ಪಂದಿಸುತ್ತಿದ್ದಾನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿ ಗುಜರಾತ್‌ನಲ್ಲಿ ಬಂಧನ
ಇದೇ ವೇಳೆ ಸ್ಯಾಂಟ್ರೋ ರವಿ ಕಾಯಿಲೆ ಬಗ್ಗೆ ಪ್ರತಿಕ್ರಿಯಿಸಿ, ಸ್ಯಾಂಟ್ರೋ ರವಿಗೆ ಮಧುಮೇಹ (Diabetes) ಕಾಯಿಲೆಯಿದೆ. ಗಂಟೆಗೊಮ್ಮೆ ಇನ್ಸುಲಿನ್ ಪಡೆದುಕೊಳ್ಳುತ್ತಿದ್ದಾನೆ. ಸೂಕ್ತ ಔಷಧಿ ವ್ಯವಸ್ಥೆ ಮಾಡಲು ಸೂಚಿಸಿದ್ದೇನೆ. ಅವನಿಗೆ ಡಯಾಬಿಟಿಕ್ ಬಿಟ್ಟರೆ ಅಂತಹ ಸಮಸ್ಯೆ ಇಂದಂತೆ ಕಾಣ್ತಿಲ್ಲ. ಸ್ಯಾಂಟ್ರೋ ರವಿ ಸೇರಿದಂತೆ ಇನ್ನೂ ನಾಲ್ವರ ವಿಚಾರಣೆ ನಡೆಸುತ್ತಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.
ಸ್ಯಾಂಟ್ರೋ ರವಿ ಬಂಧಿಸಿದ್ದು ಹೇಗೆ?
4 ಐಪಿಎಸ್ ಅಧಿಕಾರಿಗಳ ನೇತೃತ್ವದಲ್ಲಿ 11 ತಂಡಗಳಾಗಿ ಪೊಲೀಸರು ಸ್ಯಾಂಟ್ರೋಗಾಗಿ ಹುಡುಕಾಟ ನಡೆಸಿದ್ದರು. ಆತ ಪದೇ ಪದೇ ಸಿಮ್ ಕಾರ್ಡ್ಗಳನ್ನು ಬದಲಿಸುತ್ತಿದ್ದ. ಒಮ್ಮೆ ಬಳಸಿದ ಸಿಮ್ ಅನ್ನು ಆತ ಮತ್ತೊಮ್ಮೆ ಬಳಸುತ್ತಿರಲಿಲ್ಲ. ಅಷ್ಟೇ ಅಲ್ಲದೇ ಆನ್‌ಲೈನ್ ಖಾತೆಯ ಮೂಲಕ ಎಲ್ಲಿಯೂ ವ್ಯವಹಾರ ನಡೆಸಿರಲಿಲ್ಲ. ಇದರಿಂದ ಪೊಲೀಸರಿಗೆ ಆತನನ್ನು ಪತ್ತೆಹಚ್ಚುವುದು ಸವಾಲಾಗಿತ್ತು. ಗುರುವಾರ ರಾತ್ರಿ ಗುಜರಾತ್‌ನ ಪ್ರತಿಷ್ಠಿತ ಹೋಟೆಲ್ ಒಂದರಲ್ಲಿ ರವಿ ಇರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರ ತಂಡ ಶುಕ್ರವಾರ ಮಧ್ಯಾಹ್ನ ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇಬ್ಬರು ಐಪಿಎಸ್ ತಂಡಗಳ ನೇತೃತ್ವದಲ್ಲಿ ಸ್ಯಾಂಟ್ರೋ ರವಿಯನ್ನು ಪೊಲೀಸರು ಬಂಧಿಸಿ, ಮೈಸೂರಿಗೆ ಕರೆತಂದಿದ್ದಾರೆ.
Live Tv
[brid partner=56869869 player=32851 video=960834 autoplay=true]
ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗಂಜಾಂ ಗ್ರಾಮದಲ್ಲಿರುವ ನಿಮಿಷಾಂಭ ದೇವಿ (Nimishamba Temple) ಗೆ ಹರಕೆ ಹೊತ್ತ 22 ಗಂಟೆಗಳಲ್ಲೇ ಸ್ಯಾಂಟ್ರೋ ರವಿ ಅರೆಸ್ಟ್ ಆಗಿರುವುದಾಗಿ ಎಡಿಜಿಪಿ ಅಲೋಕ್ ಕುಮಾರ್ (ADGP Alok Kumar) ಹೇಳಿದ್ದಾರೆ.
ಶನಿವಾರ ದೇವಿಗೆ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ದೇವಿ ಮೇಲೆ ಹನ್ನೆರಡು ವರ್ಷಗಳಿಂದ ನನಗೆ ನಂಬಿಕೆ ಇದೆ. 2011 ರಲ್ಲಿ ಮೈಸೂರಿನಲ್ಲಿ ಡಬಲ್ ಮರ್ಡರ್ ಕೇಸ್ ಆಗಿತ್ತು. ಆಗಲೂ ಬಂದು ನಾನು ದೇವಿಗೆ ಹರಕೆ ಹೊತ್ತಿದ್ದೆ. ಹಾಗೆ ಹರಕೆ ಹೊತ್ತು ಪೂಜೆ ಸಲ್ಲಿಸಿ ನಾವು ಮೈಸೂರಿಗೆ ಹೋಗುವುದರೊಳಗಾಗಿ ಅಂದ್ರೆ ಐದೇ ಗಂಟೆಗಳಲ್ಲಿ ಆರೋಪಿಗಳನ್ನ ಬಂಧಿಸಲಾಗಿತ್ತು ಎಂದು ವಿವರಿಸಿದರು.
ಈಗಲೂ ಜನವರಿ 10ರಂದು ನಾನು ಇಲ್ಲಿಗೆ ಬಂದು ಪೂಜೆ ಸಲ್ಲಿಸಿ ಸ್ಯಾಂಟ್ರೋ ರವಿ (Santro Ravi) ಬಂಧನವಾಗಲಿ ಎಂದು ಹರಕೆ ಹೊತ್ತಿದ್ದೆ. ಈ ಬಾರಿಯೂ ಹರಕೆ ಹೊತ್ತ 22 ಗಂಟೆಗಳಲ್ಲೇ ಆರೋಪಿ ಸಿಕ್ಕಿದ್ದಾನೆ. ಹಾಗಾಗಿ ದೇವಿಗೆ ಪೂಜೆ ಸಲ್ಲಿಸಿ ಹರಕೆ ತೀರಿಸಿದ್ದೇನೆ ಎಂದರು. ಇದನ್ನೂ ಓದಿ: ಸ್ಯಾಂಟ್ರೋ ಗುಜರಾತ್ ಗುಮಾನಿ – ಬಂಧನದ ಅಸಲಿ ಕಹಾನಿ ಏನು?
ದೇವಿ ಮೇಲೆ ಅಪಾರವಾದ ನಂಬಿಕೆ ಇದೆ. ನಾನಗೂ ಬಹಳ ನಂಬಿಕೆ ಇದೆ. ಆತನಿಂದಾಗಿ ಸರ್ಕಾರಕ್ಕೆ, ಪೊಲೀಸ್ ಇಲಾಖೆ (Police Department) ಗೆ ಕೆಟ್ಟ ಹೆಸರು ಬರುತ್ತಿತ್ತು. ಹಾಗಾಗಿ ಆತ ನಮಗೆ ಬೇಗ ಸಿಗಲಿ ಎಂದು ಹರಕೆ ಹೊತ್ತಿದ್ದೆ. ಆತ ಈಗ ನಮ್ಮ ಕಸ್ಟಡಿಯಲ್ಲಿದ್ದಾನೆ. ಆತನ ಹೇಳಿಕೆ ದಾಖಲಿಸಲಾಗುತ್ತಿದೆ ಎಂದು ತಿಳಿಸಿದರು.
ಮೊದಲು ಆತನ ವಿರುದ್ಧ ದಾಖಲಾಗಿರುವ ಕೇಸ್ ಬಗೆಗೆ ವಿಚಾರಣೆ ನಡೆಯುತ್ತೆ. ನಂತರ ಆತ ತಲೆ ಮರೆಸಿಕೊಂಡು ಎಲ್ಲೆಲ್ಲಿ ಇದ್ದ ಆತನಿಗೆ ಯಾರೆಲ್ಲಾ ಸಹಾಯ ಮಾಡಿದ್ರು ಎಂಬ ಬಗೆಗೆ ವಿಚಾರಣೆ ಮಾಡ್ತೀವಿ. ಹಾಗೊಂದು ವೇಳೆ ಯಾರಾದ್ರು ಸಹಾಯ ಮಾಡಿದ್ರೆ ಅವರ ಮೇಲೂ ಕ್ರಮ ಕೈಗೊಳ್ತೀವಿ ಎಂದು ಹೇಳಿದರು.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಸ್ಯಾಂಟ್ರೋ ರವಿ (Santro Ravi) ಹಾಕಿದ್ದ ವಾಟ್ಸಪ್ ಸ್ಟೇಟಸ್ (Whatsapp Status) ನಿಂದ ಯಾರಿಗೆಲ್ಲ ಕಷ್ಟ..? ವಾಟ್ಸಪ್ ಸ್ಟೇಟಸ್‍ನಲ್ಲಿದ್ದವರ ಕೆಲವರ ರಿಯಲ್ ಸ್ಟೇಟಸ್ ಏನಾಗುತ್ತೆ..? ಹೀಗೆ ರಾಜ್ಯ ರಾಜಕೀಯ ಪಡಸಾಲೆಯಲ್ಲಿ ಕುತೂಹಲ ಗರಿಗೆದರಿದೆ. ಕೆಲವರ ತಪ್ಪು ಅಚ್ಚು ಹಾಕ್ತಾರಾ..? ಕೆಲವರ ತಪ್ಪನ್ನ ಮುಚ್ಚಿ ಹಾಕ್ತಾರಾ..!? ಎಂಬ ಚರ್ಚೆಯೂ ಶುರು ಆಗಿದೆ. ಸ್ಯಾಂಟ್ರೋ ಅಂದರ್ ಆಗಿ ಮುಜಗರದಿಂದ ಸದ್ಯಕ್ಕೆ ಸರ್ಕಾರ ಬಚಾವ್ ಎನ್ನಬಹುದು. ಆದರೆ ಸಿಡಿಗಳ ಸ್ಟೋರಿ ಏನಾಗುತ್ತೆ..!? ಎಂಬ ಕುತೂಹಲ ಇದೆ.
ಅಂದಹಾಗೆ ಸ್ಯಾಂಟ್ರೋ ರವಿ ಬಳಿ ಬಾಂಬೆ ಡೇಸ್ ಸಿಡಿಗಳಿವೆ ಅಂತಾ ಹೆಚ್‍ಡಿಕೆ ಬಾಂಬ್ ಸಿಡಿಸಿದ್ರು. ಕಾಂಗ್ರೆಸ್, ಜೆಡಿಎಸ್‍ಗೆ ಎಲೆಕ್ಷನ್ ಪ್ರಚಾರದ ಸರಕಾಗಿದ್ದು, ಮುಂದೆ ಸಿಡಿ ರಹಸ್ಯ ಬಯಲಾಗುವ ಟ್ವಿಸ್ಟ್ ಕೂಡ ಕೊಡುತ್ತಿವೆ. ಈಗಾಗಲೇ ಬಂಧನ ಆಗಿರುವ ಸ್ಯಾಂಟ್ರೋ ರವಿ ಬಾಯಿಬಿಡ್ತಾನಾ ಸಿಡಿ (CD) ರಹಸ್ಯ..? ಸ್ಯಾಂಟ್ರೋ ರವಿ ಸಿಡಿ ಬ್ಲ್ಯಾಕ್‍ಮೇಲ್ ಶುರುವಾಗುತ್ತಾ..? ನಿಜಕ್ಕೂ ಸಿಡಿಗಳು ಇವೆಯಾ..? ಅನ್ನೋ ಆತಂಕ ಎದುರಾಗಿದ್ದು, ಸ್ಯಾಂಟ್ರೋ ಟ್ರಾವೆಲ್ಸ್ ಹತ್ತಿದವರಿಗೆ ಢವಢವ ಶುರು ಆಗಿದೆ. ಇದನ್ನೂ ಓದಿ: ಸ್ಯಾಂಟ್ರೋ ರವಿ ವಿರುದ್ಧ 1995 ರಿಂದಲೂ ಕೇಸ್‍ಗಳನ್ನು ಜಾಲಾಡ್ತಿರೋ ಪೊಲೀಸರು
ಇದರ ಜೊತೆಗೆ ಕೆಲ ವರ್ಗಾವಣೆ ವಿಚಾರವಾಗಿ ಆಡಿಯೋ ಕೂಡ ರಿಲೀಸ್ ಆಗಿತ್ತು. ವರ್ಗಾವಣೆ ಮಾಡಿಸಿ ಇದು ನನ್ನ ಮೊದಲ ವರ್ಕ್ ಎಂದು ಸ್ಟೇಟಸ್ ಹಾಕಿಕೊಂಡಿದ್ದ. ವರ್ಗಾವಣೆ ದಂಧೆಯ ಮೂಲಕವೂ ಹಣ ಮಾಡಿದ್ದ ಎಂಬುದಕ್ಕೆ ಸಾಕ್ಷಿಗಳಿವೆ ಎನ್ನಲಾಗಿದೆ. ಇದರಿಂದ ವರ್ಗಾವಣೆ ಮಾಡಿಸಿಕೊಂಡವರು, ಮಾಡಿಸಿಕೊಟ್ಟವರ ಹೆಸರು ಹೊರಗೆ ಬರುತ್ತಾ..? ಅವರಿಗೂ ಸಂಕಷ್ಟವಾ ಕಾದುನೋಡಬೇಕಿದೆ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಗೃಹ ಸಚಿವರು ಹೋಗುವ ಮುನ್ನವೇ ಗುಜರಾತ್‍ಗೆ ಸ್ಯಾಂಟ್ರೋ ರವಿ (Santro Ravi) ಜಂಪ್ ಆಗಿದ್ನಾ? ಕೈ ಕಾಲು ಹಿಡಿದು ಬಚಾವ್ ಆಗುವ ಪ್ರಯತ್ನಕ್ಕೆ ಮುಂದಾಗಿದ್ನಾ ರವಿ? ಎಂಬ ಚರ್ಚೆಗಳು ಶುರುವಾಗಿವೆ. ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ಗುಜರಾತ್ ಟೂರ್‌ನಿಂದ ರಾಜ್ಯಕ್ಕೆ ಬಂದ ಮಾರನೇ ದಿನವೇ ಸ್ಯಾಂಟ್ರೋ ಆರೆಸ್ಟ್ ಅಸಲಿಯತ್ತೇನು? ಗುಜರಾತ್ ಮಾಡೆಲ್ ಗುಮಾನಿ. ಏನಿದು ಆರೆಸ್ಟ್ ಅಸಲಿ ಕಹಾನಿ? ಅಂತಾ ಕಾಂಗ್ರೆಸ್ (Congress) ಮತ್ತು ಜೆಡಿಎಸ್ (JDS) ಸಂಶಯ ವ್ಯಕ್ತಪಡಿಸಿವೆ.
ಅಂದಹಾಗೆ ಕಾಕತಾಳಿಯೋ? ಸ್ಯಾಂಟ್ರೋ ರವಿ ಪ್ರಯತ್ನವೋ? ಗುಜರಾತ್‍ನಲ್ಲಿ ಕಳ್ಳ-ಪೊಲೀಸ್ ಆಟದ ಬಗ್ಗೆ ನಾನಾ ದೃಷ್ಟಿಕೋನದಲ್ಲಿ ಕಾಂಗ್ರೆಸ್, ಜೆಡಿಎಸ್ ಪ್ರಶ್ನೆಗಳನ್ನು ಕೇಳ್ತಿವೆ. ಮೂರು ದಿನಗಳ ಹಿಂದೆಯಷ್ಟೇ ಗುಜರಾತ್ ಟೂರ್‌ಗೆ ಆರಗ ಜ್ಞಾನೇಂದ್ರ ತೆರಳಿದ್ರು. ವಿಧಿ ವಿಜ್ಞಾನ ವಿಶ್ವವಿದ್ಯಾನಿಲಯಕ್ಕೆ ಸಂಬಂಧಪಟ್ಟಂತೆ ಎರಡು ದಿನಗಳ ಗುಜರಾತ್ ಪ್ರವಾಸ ಕೈಗೊಂಡಿದ್ದರು. ಇದೇ ವೇಳೆ ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ಭೇಟಿಯಾಗಿ ಸೌಹಾರ್ದಯುತವಾದ ಮಾತುಕತೆ ನಡೆಸಿದ್ರು ಅಹಮದಾಬಾದ್‍ನಿಂದ ಆರಗ ಜ್ಞಾನೇಂದ್ರ ರಾಜ್ಯಕ್ಕೆ ವಾಪಸ್ ಆಗಿದ್ದಾರೆ. ಇದೇ ಸಂಧರ್ಭದಲ್ಲಿ ಅಹಮದಾಬಾದ್‍ನಲ್ಲೇ ಸ್ಯಾಂಟ್ರೋ ರವಿ ಬಂಧನ ಆಗಿರುವುದಕ್ಕೆ ಕಾಂಗ್ರೆಸ್ ಗುಮಾನಿ ವ್ಯಕ್ತಪಡಿಸಿದೆ. ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (H.D Kumarswamy) ಸಹ ಗೃಹ ಸಚಿವರ ಮೇಲೆ ಅನುಮಾನವ್ಯಕ್ತಪಡಿಸಿ ಟಾಂಗ್ ನೀಡಿದ್ದಾರೆ. ಇದನ್ನೂ ಓದಿ: ಸ್ಯಾಂಟ್ರೋ ರವಿ ವಿರುದ್ಧ 1995 ರಿಂದಲೂ ಕೇಸ್‍ಗಳನ್ನು ಜಾಲಾಡ್ತಿರೋ ಪೊಲೀಸರು
ಕಡೇ ಕ್ಷಣದ ತನಕವೂ ಬಂಧನದಿಂದ ತಪ್ಪಿಸಿಕೊಳ್ಳಲು ಸ್ಯಾಂಟ್ರೋ ರವಿ ಗೃಹ ಸಚಿವರ ಭೇಟಿಗೆ ಯತ್ನಿಸುತ್ತಿದ್ದ ಎಂಬ ಗುಸುಗುಸು ನಡೆಯುತ್ತಿದೆ. ಆದ್ರೆ ಸರ್ಕಾರ ಮತ್ತು ವೈಯುಕ್ತಿಕ ಮುಜಗರಕ್ಕೆ ಸಿಲುಕಿಸಿದ್ದ ಗೃಹ ಸಚಿವರು ಸ್ಯಾಂಟ್ರೋ ರವಿ ನಡೆಗೆ ಕೆಂಡವಾಗಿದ್ದಾರಂತೆ. ಹಾಗಾಗಿ ಸ್ಯಾಂಟ್ರೋ ಆರೆಸ್ಟ್ ಮಾಡಿ ಅಂತಾ ಕಟ್ಟಾಜ್ಞೆ ಮಾಡಿದ್ರಂತೆ. ಹಾಗಾದ್ರೆ ಗೃಹ ಸಚಿವರು ಗುಜರಾತ್‍ನಲ್ಲಿ, ಸ್ಯಾಂಟ್ರೋ ರವಿ ಆರೆಸ್ಟ್ ಕೂಡ ಗುಜರಾತ್‍ನಲ್ಲಿ ಆಗಿರೋದಕ್ಕೆ ಕಾಂಗ್ರೆಸ್ ಮತ್ತು ಹೆಚ್‍ಡಿಕೆ ಲಿಂಕ್ ಕಲ್ಪಿಸುತ್ತಿರುವ ಅಸಲಿಯತ್ತೇನು? ರಾಜಕೀಯ ಕಾರಣವೋ? ಇಲ್ಲ ಬೇರೆ ಟ್ವಿಸ್ಟ್ ಕಹಾನಿಯೋ? ಕಾದುನೋಡಬೇಕಿದೆ. ಇದನ್ನೂ ಓದಿ: ಎಲ್ಲರ ಕಣ್ತಪ್ಪಿಸಿ ಸ್ಯಾಂಟ್ರೋ ರವಿ ಶಿಫ್ಟ್ – ವಿಐಪಿ ಗೇಟ್‍ನಲ್ಲಿ ಕರೆದೊಯ್ದ ಬಗ್ಗೆ ಹೆಚ್‍ಡಿಕೆ ಕಿಡಿ
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರ (BJP Government) ಕ್ಕೆ ಭಾರೀ ಮುಜುಗರ ತಂದಿದ್ದ ಜೊತೆಗೆ ತಲೆನೋವೂ ಆಗಿದ್ದ ಸ್ಯಾಂಟ್ರೋ ರವಿ (Santro Ravi) ಕೊನೆಗೂ ಪೊಲೀಸರ ಖೆಡ್ಡಾಕ್ಕೆ ಬಿದ್ದಿದ್ದಾನೆ. ಬಂಧಿತ ಸ್ಯಾಂಟ್ರೋ ರವಿಯನ್ನು ಪೊಲೀಸರು ದೂರದ ಗುಜರಾತ್‍ನಿಂದ ರಾಜ್ಯಕ್ಕೆ ಕರೆತಂದಿದ್ದಾರೆ. ಸ್ಯಾಂಟ್ರೋ ರವಿ ಪ್ರಕರಣವನ್ನು ರಾಜ್ಯ ಸರ್ಕಾರ ಬಹಳ ಗಂಭೀರವಾಗಿ ತೆಗೆದುಕೊಂಡಿದ್ದು, ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಲು ಗೃಹ ಇಲಾಖೆಗೆ ಸೂಚಿಸಲಾಗಿದೆ. ಸ್ಯಾಂಟ್ರೋ ರವಿಯಿಂದಾಗಿ ಸರ್ಕಾರಕ್ಕೂ, ವೈಯಕ್ತಿಕವಾಗಿ ತಮಗೂ ಮುಜುಗರ ಆಗಿರೋದ್ರಿಂದ ಖುದ್ದು ಸಿಎಂ ಬೊಮ್ಮಾಯಿ (Basavaraj Bommai) ಸ್ಯಾಂಟ್ರೋ ರವಿ ಪ್ರಕರಣದ ತನಿಖೆಯಲ್ಲಿ ಆಸಕ್ತಿ ವಹಿಸಿದ್ದಾರೆ.
ಸ್ಯಾಂಟ್ರೋ ರವಿ ಮೇಲೆ 1995 ರಿಂದಲೂ ವಿವಿಧ ಕ್ರಿಮಿನಲ್ ಕೇಸ್ ಗಳಿವೆ ಎನ್ನಲಾಗಿದೆ. ಮೈಸೂರು, ಬೆಂಗಳೂರುಗಳಲ್ಲೇ ಹೆಚ್ಚಿನ ಕೇಸ್‍ಗಳು ದಾಖಲಾಗಿವೆ. ಹೀಗಾಗಿ ಸ್ಯಾಂಟ್ರೋ ರವಿ ವಿರುದ್ಧ ಕಳೆದ 20 ವರ್ಷಗಳಿಗೂ ಹೆಚ್ಚು ಕಾಲದಿಂದಲೂ ಆತನ ಮೇಲಿರುವ ಎಲ್ಲ ಕೇಸ್‍ಗಳು ಹಾಗೂ ಆತನಿಗಿರುವ ರಾಜಕಾರಣಿಗಳ ಸಂಪರ್ಕದ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಪೊಲೀಸರಿಗೆ ಸಿಎಂ ಬೊಮ್ಮಾಯಿ ತಾಕೀತು ಮಾಡಿದ್ದಾರೆ. ಇದನ್ನೂ ಓದಿ: ಎಲ್ಲರ ಕಣ್ತಪ್ಪಿಸಿ ಸ್ಯಾಂಟ್ರೋ ರವಿ ಶಿಫ್ಟ್ – ವಿಐಪಿ ಗೇಟ್‍ನಲ್ಲಿ ಕರೆದೊಯ್ದ ಬಗ್ಗೆ ಹೆಚ್‍ಡಿಕೆ ಕಿಡಿ
ಸ್ಯಾಂಟ್ರೊ ರವಿ ಏನೇನು ಮಾಡಿದ್ದಾನೆ, ಯಾವ ಯಾವ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾನೆ. ಕಳೆದ 20 ವರ್ಷಗಳಲ್ಲಿ ಯಾರ್ಯಾರ ಸಂಪರ್ಕದಲ್ಲಿದ್ದಾನೆ. ಯಾವ್ಯಾವ ಸರ್ಕಾರಗಳ ಅವಧಿಯಲ್ಲಿ ಏನೇನು ಡೀಲ್ ಗಳನ್ನು ನಡೆಸಿದ್ದಾನೆ, ಯಾರ್ಯಾರ ಖಾತೆಗಳಿಗೆ ಹಣ ವರ್ಗಾವಣೆ ಮಾಡಿದ್ದಾನೆ, ವರ್ಗಾವಣೆ ಮಾಡಿಸಿಕೊಂಡಿದ್ದಾನೆ. ಈ ಬಗ್ಗೆ ನಿಖರವಾಗಿ, ಕರಾರುವಕ್ಕಾಗಿ ತನಿಖೆ ಮಾಡುವಂತೆ ಎಂದು ಪೊಲೀಸರಿಗೆ ಸಿಎಂ ಸೂಚಿಸಿದ್ದದಾರೆ. ಒಟ್ಟಿನಲ್ಲಿ ಸ್ಯಾಂಟ್ರೋ ರವಿ ವಿರುದ್ಧ ಇರುವ ಪ್ರಕರಣಗಳನ್ನು ಸರ್ಕಾರ ಬಹಳ ಗಂಭೀರವಾಗಿ ತೆಗೆದುಕೊಂಡಿದೆ.
ಒಟ್ಟಿನಲ್ಲಿ ಸ್ಯಾಂಟ್ರೋ ರವಿಯ ವಿರುದ್ಧ ಸಮಗ್ರ ತನಿಖೆ ನಡೆಸಿ ಪುರಾವೆಗಳನ್ನು ಸಂಗ್ರಹಿಸುವ ಕೆಲಸ ಮಾಡುವ ನಿಟ್ಟಿನಲ್ಲಿ ಸರ್ಕಾರ ಮುಂದಾಗಿದೆ. ಸ್ಯಾಂಟ್ರೋ ರವಿಯ ಸುಳಿಯಲ್ಲಿ ಯಾರಿದ್ದಾರೆ..? ಯಾರಿಲ್ಲ..? ಯಾರು ಸಿಕ್ಕಿ ಹಾಕ್ಕೋಳ್ತಾರೆ..?, ಯಾರು ಬಚಾವ್ ಆಗ್ತಾರೆ..? ಯಾರ್ಯಾರ ಬಣ್ಣ ಬಣ್ಣ ಬಯಲಾಗುತ್ತೆ..? ಅನ್ನೋದು ತನಿಖೆ ನಂತರವೇ ಗೊತ್ತಾಗುತ್ತೆ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಬಂಧಿತ ಸ್ಯಾಂಟ್ರೋ ರವಿ (Santro Ravi) ಯನ್ನ ರಹಸ್ಯವಾಗಿ ಕರೆದೊಯ್ದಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ (HD KUmaraswamy) ಕೆಂಡಾಮಂಡಲರಾಗಿದ್ದಾರೆ.
ಕೆಐಎಎಲ್ (KIAL) ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸರು ಪ್ರಧಾನಿಗಳು, ಮುಖ್ಯಮಂತ್ರಿಗಳು ಓಡಾಡುವ ಜಾಗದಲ್ಲಿ ಇಂತಹ ಆರೋಪಿಯನ್ನ ಯಾಕೆ ಕರೆದೊಯ್ದರು..?, ಈ ರಾಜ್ಯದಲ್ಲಿ ಪೊಲೀಸ್ ಇಲಾಖೆ ಬದುಕಿದೆಯಾ..?. ಇದನ್ನ ನೋಡ್ತಾ ಇದ್ರೆ ಈಗಲೂ ಪೊಲೀಸರು ಸ್ಯಾಂಟ್ರೋ ರವಿಗೆ ರಾಜಾತಿಥ್ಯ ನೀಡ್ತಾ ಇದ್ದಾರೆ ಎಂದು ಕಿಡಿಕಾರಿದ್ದಾರೆ.
ಗೃಹ ಮಂತ್ರಿಗಳು ಆಹಮದಾಬಾದ್ (Ahemedabad) ಗೆ ಹೋಗ್ತಾರೆ ಅದೇ ಜಾಗದಲ್ಲಿ ಸ್ಯಾಂಟ್ರೋ ರವಿ ಬಂಧನವಾಗ್ತಾರೆ. ಅಲ್ಲಿ ಬಿಜೆಪಿ ಸರ್ಕಾರ (BJP Government) ಇದೆ, ಹೀಗಾಗಿ ಮೊದಲೇ ರವಿಯನ್ನ ಬಂಧನ ಮಾಡಿದ್ದಾರೆ. ಅವನಿಂದ ಇರುವ ದಾಖಲೆಗಳನ್ನ ತೆಗೆದುಕೊಂಡು ಈಗ ಬಂಧನದ ನಾಟಕ ಮಾಡ್ತಾ ಇದ್ದಾರೆ ಎಂದು ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: ಗುಜರಾತ್ ಪ್ರವಾಸ ಮುಗಿಸಿ ಆರಗ ವಾಪಸ್ ಆಗ್ತಿದ್ದಂತೆ ಸ್ಯಾಂಟ್ರೋ ರವಿ ಅರೆಸ್ಟ್- ರಾಜ್ಯ ರಾಜಕೀಯದಲ್ಲಿ ಸಂಚಲನ
ಇರುವ ಸಾಕ್ಷಿಗಳನ್ನ ಈಗಾಗಲೇ ನಾಶ ಮಾಡಿರುತ್ತಾರೆ. ಪಿಎಸ್‍ಐ ಡ್ರಗ್ಸ್ ಕೇಸ್ (PSI Drugs Case) ಗಳಂತೆ ಈ ಕೇಸನ್ನು ವ್ಯವಸ್ಥಿತವಾಗಿ ಮುಚ್ಚಿ ಹಾಕ್ತಾರೆ ಎಂದು ಹೆಚ್‍ಡಿಕೆ ಆರೋಪಿಸಿದ್ದಾರೆ. ಸ್ಯಾಂಟ್ರೊ ರವಿ ಬಂಧಿಸಿ ಕರೆತಂದಿದ್ದಾರೆ. ನಮ್ಮ ಗೃಹ ಸಚಿವರು ಗುಜರಾತ್ ಭಾಗದಲ್ಲಿದ್ದಾರೆ. ಸ್ಯಾಂಟ್ರೊ ರವಿ ಕೂಡ ಅಲ್ಲೇ ಇದ್ದಾನೆ. ಇಲ್ಲಿಂದ ಅವರು ಅಲ್ಲಿ ಯಾವಾಗ ಹೋದ್ರು..?, ಗೃಹ ಸಚಿವರು ಗುಜರಾತ್ ಗೆ ಯಾವಾಗ ಹೋದ್ರು ಅನ್ನೋದೆ ಯಕ್ಷಪ್ರಶ್ನೆಯಾಗಿದೆ ಎಂದರು.
ಗುಜರಾತ್ ನಲ್ಲಿಯೂ ಬಿಜೆಪಿ ಸರ್ಕಾರ ಇದೆ. ಅವರನ್ನ ಬಂಧಿಸಿ ಕರೆತರ್ತಿರೋದು ಈ ಕೇಸ್ ಮುಚ್ಚಿಹಾಕಲು. ಗುಜರಾತ್ (Gujarat) ನಲ್ಲಿ ಎರಡ್ಮೂರು ದಿನದ ಹಿಂದೆಯೇ ಬಂಧಿಸಿದ್ದಾರೆ. ಏನೇನೆಲ್ಲ ಸಾಕ್ಷ್ಯ ಇಟ್ಟುಕೊಂಡಿದ್ದ ಅದನ್ನೆಲ್ಲ ಕಿತ್ತುಕೊಂಡಿದ್ದಾರೆ. ಈಗ ಕರೆದುಕೊಂಡು ಬಂದಿದ್ದಾರೆ. ಏರ್ ಪೋರ್ಟ್ ನಲ್ಲಿ ವಿಐಪಿ ಗೇಟ್ ನಲ್ಲಿ ಆತನನ್ನ ಕರೆದುಕೊಂಡು ಹೋಗ್ತಾರೆ. ಅಂದ್ರೆ ಆತನಿಗೆ ರಾಜಾತಿಥ್ಯ ಎಷ್ಟಿದೆ ಅಂತಾಯ್ತು. ಪ್ರಧಾನಿ, ಮುಖ್ಯಮಂತ್ರಿಗಳಿಗೆ ಇರುವ ವಿಐಪಿ ಗೇಟ್ ನಲ್ಲಿ ಅವ್ರನ್ನ ಯಾಕೆ ಬಿಡ್ತಾರೆ. ಅಧಿಕಾರಿಗಳ ವರ್ಗಾವಣೆಯಲ್ಲಿ ಇವನದ್ದೇ ನೇರ ಪಾತ್ರ ಇದೆ ಎಂದು ಗರಂ ಆಗಿದ್ದಾರೆ.
ಯಾವ ಅಧಿಕಾರಿಗಳು ಇವನ ಬಗ್ಗೆ ತನಿಖೆ ಮಾಡ್ತಾರೆ. ಮೈಸೂರಿನಲ್ಲಿ ಮಹಿಳೆ ಕೊಟ್ಟಿರುವ ಕೇಸ್ ಮೇಲೆ ಇವರು ಬಂಧಿಸಿ ಕರೆತಂದಿರೋದು. ಬೇರೆ ವಿಷಯ ಇದೆಯಲ್ಲ ಇದನ್ನ ಯಾವ ರೀತಿ ತನಿಖೆ ಮಾಡ್ತಾರೆ. ಬಿಜೆಪಿ ಪಕ್ಷ ಈ ದೇಶದಲ್ಲಿ ಏನೇ ಬೇಕಿದ್ರು ಮಾಡ್ತಾರೆ. ಸ್ಯಾಂಟ್ರೊ ಪರಾರಿಯಾಗಲು ಮೈಸೂರು ಪೊಲೀಸರು ಸಹಾಯ ಮಾಡಿದ್ದಾರೆ. ರಾಜ್ಯ ಬಿಟ್ಟು ಹೋಗೋವರೆಗೆ ಏನು ಮಾಡ್ತಿದ್ರು?. ಪೊಲೀಸ್ ಇಲಾಖೆ ಬದುಕಿದ್ಯಾ? ಯಾವಾಗಲೋ ಸಾಯಿಸಿದ್ದಾರೆ. ಟಾಪ್ ಅಧಿಕಾರಿ ವರ್ಗಾವಣೆ ಮಾಡೋ ಅಧಿಕಾರವನ್ನೇ ಅವನಿಗೆ ಕೊಟ್ಟಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಆರ್.ಅಶೋಕ್ (R Ashok), ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಕ್ರಮ ತೆಗೆದುಕೊಂಡಿಲ್ಲ ಅನ್ನೋ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ನನ್ನ ಕಾಲದಲ್ಲಿ ವಿಚಾರ ಬಂದಿದ್ದರೆ ಯಾವಾಗಲೋ ತನಿಖೆ ಮಾಡ್ತಿದ್ದೆ. ನನ್ನ ಕಾಲದಲ್ಲಿ ವಿಧಾನಸೌಧ (VidhanSoudha), ಕುಮಾರಕೃಪಾದಲ್ಲಿ ಇರಲು ಬಿಟ್ಟಿದ್ನಾ?. ಕೇಳಿ ಅಶೋಕ್ ಅವರನ್ನು, ನಮಗೇನು ಇವರ ಆಟ ಗೊತ್ತಿಲ್ವಾ?. ಯಾರ್ಯಾರು ಎಲ್ಲೆಲ್ಲಿ ಟಚ್ ಅಲ್ಲಿದ್ದಾರೆ ಅಂತಾ ಗೊತ್ತಿಲ್ವಾ. ಇವರು ಗೃಹ ಸಚಿವರಿದ್ರಲ್ಲಾ, ಇವರೇನು ಮಾಡ್ತಿದ್ರು. ಸದಾನಂದಗೌಡ (Sadananda Gowda) ಸಿಎಂ ಆಗಿದ್ದಾಗ ಗೃಹ ಸಚಿವರಾಗಿದ್ರಲ್ವಾ..?, ನಮ್ಮ ಸರ್ಕಾರ ಹೋದ ಮೇಲೆ ಇವನ ಆಟ ಶುರುವಾಗಿದೆ. ನಂತರ ಇವನೇ ಕಿಂಗ್ ಆಗಿದ್ದಾನೆ. 2005 ರಲ್ಲೂ ಹೆಂಡತಿ ಸಾಯಿಸಿ ತಪ್ಪಿಸಿಕೊಂಡಿದ್ದ ರಂದು ತಿಳಿಸಿದರು.
ವಿಐಪಿ ಗೇಟ್ ನಲ್ಲಿ ಕರೆದುಕೊಂಡು ಹೋಗಿದ್ದು ಮಹಾನ್ ತಪ್ಪು. ಡ್ರಗ್ಸ್ ಕೇಸ್, ಪಿಎಸ್‍ಐ ಕೇಸ್ ಮುಚ್ಚಿಹಾಕಿದ್ರು. ಇದನ್ನೂ ಇದೇ ರೀತಿ ಮುಚ್ಚಿಹಾಕ್ತಾರೆ ಅಷ್ಟೇ ಎಂದರು.
Live Tv
[brid partner=56869869 player=32851 video=960834 autoplay=true]