Tag: ಸ್ವಚ್ಛತೆ

  • ಕಡಲತೀರ ಸ್ವಚ್ಛಗೊಳಿಸಿ ಗಾಂಧೀಜಿ ಜನ್ಮದಿನ ಆಚರಣೆ

    ಕಡಲತೀರ ಸ್ವಚ್ಛಗೊಳಿಸಿ ಗಾಂಧೀಜಿ ಜನ್ಮದಿನ ಆಚರಣೆ

    ಕಾರವಾರ: ಕರಾವಳಿ ಜಿಲ್ಲೆ ಉತ್ತರ ಕನ್ನಡದಲ್ಲಿ ಪ್ರತಿವರ್ಷದಂತೆ ಈ ಭಾರಿಯೂ ರವೀಂದ್ರನಾಥ ಟ್ಯಾಗೋರ್ ಕಡಲತೀರದಲ್ಲಿ ಖುದ್ದು ಅಧಿಕಾರಿಗಳು, ಜನಪ್ರತಿನಿಧಿಗಳು ಸೇರಿ ನೂರಾರು ಮಂದಿ ಸ್ವಚ್ಛತೆ ನಡೆಸುವ ಮೂಲಕ ವಿಭಿನ್ನವಾಗಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಜನ್ಮ ದಿನಾಚರಣೆಯನ್ನು ಆಚರಿಸಿದರು.

    ನಗರಸಭೆಯಿಂದ ಆಯೋಜಿಸಲಾಗಿದ್ದ ಗಾಂಧಿ ಜಯಂತಿ ಹಾಗೂ ಸ್ವಚ್ಛತಾ ಕಾರ್ಯಕ್ರಮಕ್ಕೆ ನಗರಸಭೆ ಉದ್ಯಾನವನದಲ್ಲಿರುವ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಚಾಲನೆ ನೀಡಿದರು. ನಂತರ ಅಧಿಕಾರಿಗಳು ಹಾಗೂ ಸಾರ್ವಜನಿಕರು ಕಡಲತೀರ ಸ್ಪಚ್ಛ ಮಾಡುವ ಮೂಲಕ ಗಾಂಧಿ ಜಯಂತಿ ಆಚರಿಸಿದರು. ಇದನ್ನೂ ಓದಿ: ಗಾಂಧಿ ಜಯಂತಿ ವಿಶೇಷ – ವಿಜಯಪುರದ ಗ್ರಾಮ ಸಭೆ ವೀಕ್ಷಣೆ ಮಾಡಲಿದ್ದಾರೆ ಮೋದಿ

    ನಗರಸಭೆ ಅಧ್ಯಕ್ಷ ನಿತಿನ್ ಪಿಕಳೆ ಸೇರಿದಂತೆ ಸದಸ್ಯರು, ಜಿಲ್ಲಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಪ್ರಿಯಾಂಕ ಎಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು ಸೇರಿದಂತೆ ಅಧಿಕಾರಿಗಳು ಸಹ ಕಡಲತೀರದಲ್ಲಿ ಸ್ವಚ್ಛತೆಯಲ್ಲಿ ಪಾಲ್ಗೊಂಡಿದ್ದರು. ಟ್ಯಾಗೋರ್ ಕಡಲತೀರದುದ್ದಕ್ಕೂ ಬಿದ್ದಿದ್ದ ಪ್ಲಾಸ್ಟಿಕ್, ಬಾಟಲ್, ಚೀಲ, ಬಟ್ಟೆ ಹಾಗೂ ಬಲೆ ಸೇರಿದಂತೆ ಇನ್ನಿತರ ತ್ಯಾಜ್ಯಗಳನ್ನು ಆಯ್ದು ಸ್ವಚ್ಛಗೊಳಿಸಿದರು. ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು, ಎನ್ ಸಿಸಿ ಕೆಡೆಟ್, ಪೊಲೀಸರು, ವಿವಿಧ ಸಂಘಟನೆಗಳ ಕಾರ್ಯಕರ್ತರು ಭಾಗವಹಿಸಿದ್ದರು.

  • ಮಾತು ಕೇಳದ ಪಾಲಿಕೆ ಅಧಿಕಾರಿಗಳು- ಸಲಾಕೆ ಹಿಡಿದು ಚರಂಡಿ ಸ್ವಚ್ಛತೆಗೆ ನಿಂತ ಶಾಸಕ ದೇವಾನಂದ

    ಮಾತು ಕೇಳದ ಪಾಲಿಕೆ ಅಧಿಕಾರಿಗಳು- ಸಲಾಕೆ ಹಿಡಿದು ಚರಂಡಿ ಸ್ವಚ್ಛತೆಗೆ ನಿಂತ ಶಾಸಕ ದೇವಾನಂದ

    ವಿಜಯಪುರ: ಸಲಾಕೆ, ಬುಟ್ಟಿ ಹಿಡಿದು ಚರಂಡಿಯಿಂದಾದ ರಾಡಿಯನ್ನು ಸ್ವತಃ ಶಾಸಕ ದೇವಾನಂದ ಚವ್ಹಾಣ ಸ್ವಚ್ಛಗೊಳಿಸಿದ್ದಾರೆ. ಎಷ್ಟೇ ಸೂಚಿಸಿದರೂ ಮಹಾನಗರ ಪಾಲಿಕೆ ಆಯುಕ್ತರು ಈ ಬಗ್ಗೆ ಸೂಕ್ತ ಕ್ರಮ ಕೈಗೊಂಡಿರಲಿಲ್ಲ. ಹೀಗಾಗಿ ಖುದ್ದು ಶಾಸಕರೇ ಸ್ವಚ್ಛಗೊಳಿಸಿದ್ದಾರೆ.

    ನಗರದ ನಾಗಠಾಣ ಮತಕ್ಷೇತ್ರದ ವ್ಯಾಪ್ತಿಯ ವಾರ್ಡ್ ನಂ.15ರ ಕಾವಿ ಪ್ಲಾಟ್ ನಲ್ಲಿ ನಾಗಠಾಣ ಶಾಸಕ ದೇವಾನಂದ ಚವ್ಹಾಣ ಸ್ವಚ್ಛಗೊಳಿಸಿದ್ದಾರೆ. ನಗರದಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದಾಗಿ ಕಾವಿ ಪ್ಲಾಟ್ ನಲ್ಲಿ ಚರಂಡಿ ನೀರು ರಸ್ತೆ ಹಾಗೂ ಕೆಲ ಮನೆಗಳಿಗೆ ನುಗ್ಗಿತ್ತು. ಇದರ ಬಗ್ಗೆ ಸಾರ್ವಜನಿಕರು ಶಾಸಕ ದೇವಾನಂದ ಅವರಿಗೆ ಅನೇಕ ಬಾರಿ ದೂರು ನೀಡಿದ್ದರು. ಅಲ್ಲದೆ ಈ ಬಗ್ಗೆ ಕ್ರಮ ತೆಗೆದುಕೊಳ್ಳುವಂತೆ ಮಹಾನಗರ ಪಾಲಿಕೆ ಆಯುಕ್ತರನ್ನು ಸ್ಥಳಕ್ಕೆ ಕರೆದೊಯ್ದು ಪರಿಸ್ಥಿತಿ ತೋರಿಸಿ, ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು. ಇದನ್ನೂ ಓದಿ:ಮುಖ್ಯಮಂತ್ರಿ ಆಗುವ ಕಾಲ ಬಂದೇ ಬರುತ್ತೆ- ಯತ್ನಾಳ್ ಸಿಎಂ ಆಗುವ ಇಂಗಿತ

    ಇಷ್ಟಾದರೂ ಯಾವುದೇ ಪ್ರಯೋಜನ ಆಗದ ಕಾರಣ ಖುದ್ದು ಶಾಸಕ ದೇವಾನಂದ ಚವ್ಹಾಣ ಸಲಾಕೆ, ಬುಟ್ಟಿ ಹಿಡಿದು ಸ್ವಚ್ಛತೆಗೆ ಮುಂದಾದರು. ಆಗ ದೌಡಾಯಿಸಿದ ಮಹನಾಗರ ಪಾಲಿಕೆ ಅಧಿಕಾರಿಗಳಿಗೆ ಶಾಸಕ ದೇವಾನಂದ ತರಾಟೆಗೆ ತಗೆದುಕೊಂಡರು.

    ಈ ಸಮಸ್ಯೆ ಮಳೆ ಬಂದಾಗೆಲಲ್ಲ ಆಗುತ್ತೆ, ಶಾಶ್ವತ ಪರಿಹಾರ ಒದಗಿಸಿ ಎಂದು ಸೂಚಿಸಿದರು. ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವುದಾಗಿ ಮಹನಗರ ಪಾಲಿಕೆ ಅಧಿಕಾರಿಗಳು ಭರವಸೆ ನೀಡಿದ ಬಳಿಕ ಶಾಸಕ ದೇವಾನಂದ ಹಿಂದಿರುಗಿದರು.

  • ಸಲಾಕೆ ಹಿಡಿದು ಕಲ್ಯಾಣಿ ಕ್ಲೀನ್ ಮಾಡಲು ನಿಂತ ಸಂಸದ ಮುನಿಸ್ವಾಮಿ

    ಸಲಾಕೆ ಹಿಡಿದು ಕಲ್ಯಾಣಿ ಕ್ಲೀನ್ ಮಾಡಲು ನಿಂತ ಸಂಸದ ಮುನಿಸ್ವಾಮಿ

    – ಎರಡೇ ದಿನದಲ್ಲಿ ಪುರಾತನ ಕಲ್ಯಾಣಿಗೆ ಕಾಯಕಲ್ಪ

    ಕೋಲಾರ: ಕೆರೆ-ಕುಂಟೆಗಳ ಅಭಿವೃದ್ದಿಗೆ ಒತ್ತು ನೀಡಿದ್ದ ಸಂಸದ ಮುನಿಸ್ವಾಮಿ, ಇದೀಗ ಕಲ್ಯಾಣಿಗಳ ಸ್ವಚ್ಛತೆಗೆ ಮುಂದಾಗಿದ್ದಾರೆ. ಜಿಲ್ಲೆಯ ಜಲ ಮೂಲಗಳ ಸಂರಕ್ಷಣೆಗೆ ಸ್ವಚ್ಛ ಭಾರತ ಅಭಿಯಾನದಡಿ ಅಂತರ್ಜಲ ವೃದ್ಧಿಸುವ ಕಲ್ಯಾಣಿಗಳಂತಹ ಜಲಮೂಲಗಳ ಅಭಿವೃದ್ದಿ, ಸ್ವಚ್ಛತೆಗೆ ಪಣ ತೊಟ್ಟಿದ್ದಾರೆ.

    ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಯಲ್ದೂರು ಗ್ರಾಮದಲ್ಲಿನ ಕಲ್ಯಾಣಿ ಸ್ವಚ್ಛತೆಗೆ ಪಣ ತೊಟ್ಟಿದ್ದು, ಸ್ವತಃ ಸಂಸದ ಮುನಿಸ್ವಾಮಿಯವರು ಸ್ವಚ್ಛತಾ ಕಾರ್ಯದದಲ್ಲಿ ತೊಡಗಿದ್ದಾರೆ. ಸಾಂಘಿಕ ಪ್ರಯತ್ನದ ಮೂಲಕ ಕಲ್ಯಾಣಿ ಅಭಿವೃದ್ದಿಗೆ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಸಾಥ್ ನೀಡುತ್ತಿದ್ದಾರೆ. ಕೋಲಾರ ಜಿಲ್ಲೆಯನ್ನು ಕೆರೆಗಳ ತವರು ಎನ್ನಲಾಗುತ್ತದೆ. ನದಿ ನಾಲೆಗಳಿಲ್ಲದ ಬಯಲು ಸೀಮೆ ಕೋಲಾರದಲ್ಲಿ 3 ಸಾವಿರಕ್ಕೂ ಹೆಚ್ಚು ಕೆರೆ-ಕುಂಟೆಗಳಿವೆ.

    ಮಳೆ ಇಲ್ಲದೆ ಜಲಮೂಲಗಳೆಲ್ಲ ನಾಪತ್ತೆಯಾಗಿದ್ದು, ಇದನ್ನರಿತ ಸಂಸದರು ತಿಂಗಳಿಗೆ ಕನಿಷ್ಟ ಒಂದು ಕಲ್ಯಾಣಿಯನ್ನಾದರೂ ಅಭಿವೃದ್ಧಿಪಡಿಸಬೇಕು ಎಂದು ಪಣ ತೊಟ್ಟಿದ್ದಾರೆ. ಸಂಸದ ಮುನಿಸ್ವಾಮಿ ತಮ್ಮ ತಂಡದೊಂದಿಗೆ ಕಲ್ಯಾಣಿ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಈ ಹಿಂದೆ ಕೆರೆ-ಕುಂಟೆಗಳ ಸ್ವಚ್ಛತೆ ಹಾಗೂ ಅಭಿವೃದ್ದಿಗೆ ಒತ್ತು ನೀಡಿದ್ದ ಸಂಸದ ಮುನಿಸ್ವಾಮಿ, ಇದೀಗ ಅಂತರ್ಜಲ ವೃದ್ಧಿಸುವ ಕಲ್ಯಾಣಿಗಳ ಅಭಿವೃದ್ಧಿಗೆ ಪಣ ತೊಟ್ಟಿದ್ದಾರೆ. ಸ್ವಚ್ಛ ಭಾರತ ಅಭಿಯಾನದ ಮೂಲಕ ಪರಿಸರ ಸಂರಕ್ಷಣೆ ಹಾಗೂ ಮಾಲಿನ್ಯ ನಿಯಂತ್ರಣಕ್ಕೆ ಚಾಲನೆ ನೀಡಿದ್ದಾರೆ.

    ಯಲ್ದೂರು ಗ್ರಾಮದ ಹೃದಯ ಭಾಗದಲ್ಲಿರುವ ಚೋಳರ ಕಾಲದ ಐತಿಹಾಸಿಕ ಹಿನ್ನೆಲೆ ಹೊಂದಿರುವ ಕಲ್ಯಾಣಿಯನ್ನು ಮಾದರಿಯಾಗಿ ಅಭಿವೃದ್ಧಿಪಡಿಸಲು ಎಂಪಿ ಆ್ಯಂಡ್ ಟೀಮ್ ಮುಂದಾಗಿದೆ. ಸುಮಾರು ಒಂದು ಎಕರೆ ವಿಸ್ತೀರ್ಣ ಹಾಗೂ ವಿಶಾಲವಾಗಿರುವ ಕಲ್ಯಾಣಿ ಸಂರಕ್ಷಣೆ ಮಾಡುವುದು, ಸ್ವಚ್ಛತೆ ದೃಷ್ಟಿಯಿಂದ ಮಾಲಿನ್ಯ ತಡೆಯಲು ಸುತ್ತ ಮುಳ್ಳು ತಂತಿ ಬೇಲಿ ನಿರ್ಮಿಸಲಾಗುತ್ತಿದೆ.

    ಸ್ವಚ್ಛ ಭಾರತ ಅಭಿಯನದಡಿ ಕಲ್ಯಾಣಿ ಸ್ವಚ್ಛ ಮಾಡಿ ಜಲ ಮೂಲ ರಕ್ಷಣೆಗೆ ಒತ್ತು ನೀಡಲಾಗುತ್ತಿದೆ. ಸಂಸದ ಮುನಿಸ್ವಾಮಿ ಈ ಹಿಂದೆ ಜಿಲ್ಲೆಯ ವಿವಿಧ ಕೆರೆಗಳ ಅಭಿವೃದ್ಧಿ ಮಾಡಿದ್ದರು. ಸದ್ಯ ಜಿಲ್ಲೆಯಲ್ಲಿರುವ ಕಲ್ಯಾಣಿಗಳ ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ತಿಂಗಳಿಗೆ ಒಂದರಂತೆ ಸ್ವಚ್ಛ ಮಾಡಲು ಮುಂದಾಗಿರುವುದು ಸ್ಥಳೀಯರಿಗೂ ಖುಷಿ ಕೊಟ್ಟಿದೆ.

  • ವೀಡಿಯೋ ವೈರಲ್: ಸೀರೆಯುಟ್ಟು ಮ್ಯಾನ್‍ಹೋಲ್‍ಗೆ ಇಳಿದ ಮುನ್ಸಿಪಲ್ ಆಫೀಸರ್

    ವೀಡಿಯೋ ವೈರಲ್: ಸೀರೆಯುಟ್ಟು ಮ್ಯಾನ್‍ಹೋಲ್‍ಗೆ ಇಳಿದ ಮುನ್ಸಿಪಲ್ ಆಫೀಸರ್

    ಮುಂಬೈ: ಸ್ವಚ್ಛತಾ ಕಾಮಗಾರಿಯ ವೇಳೆ ಕಾರ್ಮಿಕರನ್ನು ಮ್ಯಾನ್‍ಹೋಲ್‍ಗೆ ದಬಾಯಿಸಿ ಇಳಿಸುವ ಅಧಿಕಾರಿಗಳನ್ನು ನಾವು ನೋಡಿದ್ದೇವೆ. ಅದರೆ ಸೀರೆಯುಟ್ಟು ಮ್ಯಾನ್‍ಹೋಲ್‍ಗೆ ಇಳಿದು ಕೆಲಸ ಮಾಡಿಸುತ್ತಿರುವ ಮುನ್ಸಿಪಲ್ ಆಫೀಸರ್ ಅಧಿಕಾರಿಯ ವೀಡಿಯೋ ವೈರಲ್ ಆಗಿದೆ.

    ಥಾಣೆಯಲ್ಲಿ ಮಳೆ ಹೆಚ್ಚಾಗಿರುವುದರಿಂದ ಮಳೆ ನೀರು ಸರಾಗವಾಗಿ ಹೋಗಲು ಚರಂಡಿ ವ್ಯವಸ್ಥೆ ಸರಿ ಇದೆಯೇ ಎಂದು ಮಹಿಳಾ ಅಧಿಕಾರಿ ಪರಿಶೀಲನೆ ನಡೆಸಿದ್ದಾರೆ. ಭಿವಾಂಡಿ-ನಿಜಾಂಪುರ್ ಮುನ್ಸಿಪಲ್ ಕಾರ್ಪೋರೇಷನ್ (ಬಿಎನ್‍ಎಂಸಿ)ನ ಸ್ಯಾನಿಟರಿ ಇನ್ಸ್‍ಪೆಕ್ಟರ್ ಸುವಿಧಾ ಚವಾಣ್, ಮರದ ಏಣಿಯ ಸಹಾಯದಿಂದ ಮ್ಯಾನ್ ಹೋಲ್ ಒಳಗೆ ಇಳಿದು ಪರಿಶಿಲನೆ ನಡೆಸಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನದಲ್ಲಿ ಕತ್ತೆಗಳ ಸಂಖ್ಯೆ ಹೆಚ್ಚಳ

    ವೀಡಿಯೋದಲ್ಲಿ ಏನಿದೆ:
    ಮ್ಯಾನ್‍ಹೋಲ್‍ನಲ್ಲಿ ಸ್ವಚ್ಛತಾ ಕೆಲಸ ನಡೆಯುತ್ತಿತ್ತು. ವೇಳೆ ಅಲ್ಲಿಗೆ ಬಂದ ಮಹಿಳಾ ಅಧಿಕಾರಿ ಸ್ವತಃ ಮ್ಯಾನ್‍ಹೋಲ್ ಒಳಕ್ಕೆ ಇಳಿದಿದ್ದಾರೆ. ಮ್ಯಾನ್‍ಹೋಲ್‍ಗೆ ಮರದ ಏಣಿಯೊಂದನ್ನು ಇರಿಸಿ ಉಟ್ಟ ಸೀರೆಯಲ್ಲೇ ಕೆಳಕ್ಕಿಳಿದ ಸುವಿಧಾ, ಒಳಗೆ ಏನೇನು ಕೆಲಸ ನಡೆಯುತ್ತಿದೆ ಎಂದು ಫೋಟೋ ತೆಗೆದು, ಅಲ್ಲಿದ್ದ ಕಾರ್ಮಿಕರ ಬಳಿ ಮಾತನಾಡಿ ಸ್ವಚ್ಛತಾ ಕೆಲಸ ಪರಿಶೀಲನೆ ಮಾಡಿದ್ದಾರೆ. ಈ ಘಟನೆಯ ವೀಡಿಯೋ ಈಗ ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಘಟನೆ ಮಹಾರಾಷ್ಟ್ರದ ಭಿವಾಂಡಿ, ನಿಜಾಮ್‍ಪುರ್ ನಗರ ಪಾಲಿಕೆ ವ್ಯಾಪ್ತಿಯಲ್ಲಿ ನಡೆದಿದೆ. ಇದನ್ನೂ ಓದಿ: ಫೀಸ್ ಕಟ್ಟುವಂತೆ ಒತ್ತಾಯ ಮಾಡುವ ಶಾಲೆಗಳ ವಿರುದ್ಧ ಕ್ರಮ: ಸಿಎಂ

    ಮುಂಗಾರು ಪ್ರಾರಂಭವಾಗುತ್ತಿರುವುದರಿಂದ ಅವ್ಯವಸ್ಥೆ ಆಗದಂತೆ ನೋಡಿಕೊಳ್ಳುವುದಕ್ಕಾಗಿ ಪಾಲಿಕೆ ವ್ಯಾಪ್ತಿಯ ವಿವಿಧೆಡೆ ಸ್ವಚ್ಛತಾ ಕಾರ್ಯಗಳ ಬಗ್ಗೆ ಹೀಗೆಯೇ ನಿಗಾ ವಹಿಸುತ್ತಿದ್ದು, ಇವರು ಇಷ್ಟೊಂದು ಮುತುವರ್ಜಿ ವಹಿಸಿ ಕಾರ್ಯ ನಿರ್ವಹಿಸುತ್ತಿರುವುದಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿ ಇಂತಹ ಅಧಿಕಾರಿಗಳು ಇರಬೇಕು ಎಂದು ಶ್ಲಾಘಿಸುತ್ತಿದ್ದಾರೆ.

     

  • ಇಂದಿರಾ ಕ್ಯಾಂಟೀನ್‍ನ ಚಿತ್ರಾನ್ನ ಸವಿದ ಎಸ್.ಟಿ. ಸೋಮಶೇಖರ್

    ಇಂದಿರಾ ಕ್ಯಾಂಟೀನ್‍ನ ಚಿತ್ರಾನ್ನ ಸವಿದ ಎಸ್.ಟಿ. ಸೋಮಶೇಖರ್

    -ಇಂದಿರಾ ಕ್ಯಾಂಟೀನ್ ಸ್ವಚ್ಛತೆ, ಗುಣಮಟ್ಟ, ಅಡುಗೆ ಪರಿಶೀಲನೆ

    ಮೈಸೂರು: ಟಿ.ನರಸೀಪುರದ ಇಂದಿರಾ ಕ್ಯಾಂಟೀನ್‍ಗೆ ಭೇಟಿ ನೀಡಿದ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಟಿ. ಸೋಮಶೇಖರ್ ಅವರು, ಸ್ವಚ್ಛತೆ ಹಾಗೂ ಅಡುಗೆ ತಯಾರಿಕಾ ವ್ಯವಸ್ಥೆಯನ್ನು ಖುದ್ದು ಪರಿಶೀಲನೆ ಮಾಡಿ ಚಿತ್ರಾನ್ನವನ್ನು ಟೆಸ್ಟ್ ಮಾಡಿದ್ದಾರೆ.

    ಇಂದಿರಾ ಕ್ಯಾಂಟೀನ್‍ನಲ್ಲಿಯೇ ಚಿತ್ರಾನ್ನ ಸೇವಿಸಿದ ಸೋಮಶೇಖರ್ ಅವರು, ಗುಣಮಟ್ಟದ ವ್ಯವಸ್ಥೆಗೆ ಮೆಚ್ಚುಗೆಯನ್ನು ಸೂಚಿಸಿದರು. ಪ್ರತಿದಿನ ಬೆಳಗ್ಗೆ 200 ಮಂದಿಗೆ ಉಪಾಹಾರ, ಮಧ್ಯಾಹ್ನ ಹಾಗೂ ರಾತ್ರಿ ತಲಾ 200 ಮಂದಿಗೆ ಆಗುವಷ್ಟು ಊಟವನ್ನು ಇಲ್ಲಿ ಸಿದ್ಧಪಡಿಸುವ ಬಗ್ಗೆ ಮಾಹಿತಿ ಪಡೆದಿದ್ದಾರೆ. ಇದನ್ನೂ ಓದಿ: ಜೂನ್ 7ರ ನಂತರ ಲಾಕ್ ಡೌನ್ ಬೇಡ: ಎಸ್.ಟಿ.ಸೋಮಶೇಖರ್ 

    ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಇಂದಿರಾ ಕ್ಯಾಂಟಿನ್‍ನಲ್ಲಿ ಉತ್ತಮವಾದ ವ್ಯವಸ್ಥೆಯನ್ನು ಮಾಡಲಾಗಿದ್ದು, ಗುಣಮಟ್ಟವನ್ನು ಕಾಯ್ದುಕೊಳ್ಳಲಾಗಿದೆ. ಸ್ವತಃ ನಾನು ತಿಂಡಿಯನ್ನು ಸೇವಿಸುವ ಮೂಲಕ ಪರಿಶೀಲನೆ ನಡೆಸಿದ್ದು, ಶುಚಿಯಾಗಿ ಮತ್ತು ರುಚಿಯಾಗಿ ತಯಾರಿಸಲಾಗಿದೆ ಎಂದು ತಿಳಿಸಿದರು. ಶಾಸಕರಾದ ಅಶ್ವಿನ್ ಕುಮಾರ್ ಹಾಗೂ ಸಂಸದರು, ಔಷಧ ಟಾಸ್ಕ್ ಫೋರ್ಸ್ ಸಮಿತಿ ಅಧ್ಯಕ್ಷರಾದ ಪ್ರತಾಪ್ ಸಿಂಹ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

  • ಗಣರಾಜೋತ್ಸವದ ವಿಶೇಷ- ಮಕ್ಕಳಿಂದ ಸ್ವಚ್ಛತಾ ಕಾರ್ಯ

    ಗಣರಾಜೋತ್ಸವದ ವಿಶೇಷ- ಮಕ್ಕಳಿಂದ ಸ್ವಚ್ಛತಾ ಕಾರ್ಯ

    – ರಾಜಾಸೀಟ್ ಉದ್ಯಾನವನ ಸ್ವಚ್ಛತೆ

    ಮಡಿಕೇರಿ: ದೇಶ-ವಿದೇಶಿ ಪ್ರವಾಸಿಗರನ್ನು ತನ್ನತ್ತ ಸೂಜಿಗಲ್ಲಿನಂತೆ ಆಕರ್ಷಿಸುವ ಮಂಜಿನ ನಗರಿ ಮಡಿಕೇರಿಯ ರಾಜಾಸೀಟ್‍ನಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ಮಕ್ಕಳು ಸ್ವಚ್ಛತಾ ಕಾರ್ಯವನ್ನು ಮಾಡಿ ಎಲ್ಲರ ಗಮನ ಸೆಳೆಯುವುದರ ಜೊತೆಗೆ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

    ಈ ಪ್ರವಾಸಿತಾಣಕ್ಕೆ ಬರುವ ಪ್ರವಾಸಿಗರು ತ್ಯಾಜ್ಯ ವಸ್ತುಗಳನ್ನು ಎಲ್ಲೆಂದರಲ್ಲಿ ಬಿಸಾಡುತ್ತಾರೆ. ಇದನ್ನು ಕಂಡ ಮಕ್ಕಳು ಇಂದು ರಾಜಾಸೀಟ್ ಉದ್ಯಾನವನದಲ್ಲಿ ಸ್ವಚ್ಛತಾ ಕಾರ್ಯವನ್ನು ಮಾಡಿದ್ದಾರೆ. ಮಡಿಕೇರಿ ನಗರದ ಕಲಾ ನಗರದದ ಮಕ್ಕಳು ಇಂದು 72ನೇ ಗಣರಾಜ್ಯೋತ್ಸವದ ಅಂಗವಾಗಿ ಸ್ವಚ್ಛತಾ ಕಾರ್ಯವನ್ನು ಮಾಡಿದ್ದಾರೆ.

    ಬೆಳಗ್ಗೆ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಸುಮಾರು 10 ಮಕ್ಕಳು ಸೇರಿ ರಾಜಾಸೀಟ್‍ಗೆ ತೆರಳಿದ್ದಾರೆ. ಉದ್ಯಾನವನದೊಳಗೆ ಹೋಗುವಾಗ ಕಸ ಮತ್ತು ತ್ಯಾಜ್ಯ ವಸ್ತುಗಳನ್ನು ಕಂಡ ಮಕ್ಕಳು ಗಣರಾಜ್ಯೋತ್ಸವದ ದಿನ ಈ ಕಾರ್ಯಗಳನ್ನು ನಾವೇ ಮಾಡಬಹುದು ಎಂದು ಮಕ್ಕಳೇ ಮಾತಾನಾಡಿಕೊಂಡು.

    ಸ್ವಚ್ಛತಾ ಕಾರ್ಯ ಮಾಡಿದ್ದಾರೆ. ಅಲ್ಲದೇ ಬರುವ ಪ್ರವಾಸಿಗರಿಗೆ ಕಸಗಳನ್ನು ಕಸದ ಬುಟ್ಟಿಯಲ್ಲಿ ಹಾಕಿ ಹೋಗಿ ಕ್ಲೀನ್ ಕೊಡಗು ಎಂಬ ಭಾವನೆಯಿಂದ ಜಿಲ್ಲೆಗೆ ಅಗಮಿಸಿ ಎಂದು ಮನವಿ ಮಾಡಿದ್ದಾರೆ. ಮಕ್ಕಳ ಈ ಕಾರ್ಯಕ್ಕೆ ನಗರದ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

  • ಹನಿಮೂನ್‍ಗೆ ಹೋಗೋ ಬದಲು ಬೀಚ್ ಸ್ವಚ್ಛಗೊಳಿಸಿದ ನವ ದಂಪತಿ

    ಹನಿಮೂನ್‍ಗೆ ಹೋಗೋ ಬದಲು ಬೀಚ್ ಸ್ವಚ್ಛಗೊಳಿಸಿದ ನವ ದಂಪತಿ

    – 800 ಕೆಜಿ ಕಸ ತೆಗೆದು ಸಾಹಸ
    – ನೆಟ್ಟಿಗರಿಂದ ಭಾರೀ ಮೆಚ್ಚುಗೆ

    ಉಡುಪಿ: ಹೊಸದಾಗಿ ವಿವಾಹವಾದ ಜೋಡಿ ಹನಿಮೂನ್‍ಗೆ ವಿದೇಶಕ್ಕೆ ಅಥವಾ ತಮಗಿಷ್ಟವಾದ ಸ್ಥಳಕ್ಕೆ ಹೋಗಲು ಇಷ್ಟಪಡುತ್ತಾರೆ. ಆದರೆ ಈ ನವದಂಪತಿ ಬೀಚ್ ಸ್ವಚ್ಛಗೊಳಿಸುವ ಮೂಲಕ ಗಮನಸೆಳೆದಿದ್ದಾರೆ.

    ಉಡುಪಿಯ ಬೈಂದೂರು ಮೂಲದ ಅನುದೀಪ್ ಹೆಗಡೆ ಹಾಗೂ ಮಿನುಶಾ ಕಾಂಚನ ಕುಟುಂಬಸ್ಥರು ಹಾಗೂ ಸ್ನೇಹಿತರೊಂದಿಗೆ ಬೀಚ್ ಸ್ವಚ್ಛಗೊಳಿಸುವ ಮೂಲಕ ಗಮನಸೆಳೆದಿದ್ದು, ಈ ಫೋಟೋ ಹಾಗೂ ವಿಡಿಯೋಗಳನ್ನು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಇದೀಗ ಪೋಸ್ಟ್ ಸಖತ್ ವೈರಲ್ ಆಗಿದ್ದು, ಸಾಕಷ್ಟು ಮೆಚ್ಚುಗೆ ವ್ಯಕ್ತವಾಗುತ್ತಿದೆ.

     

    View this post on Instagram

     

    A post shared by Anudeep Hegde (@travel_nirvana)

    ಬೈಂದೂರಿನ ಅನುದೀಪ್ ಹೆಗಡೆ ಡಿಜಿಟಲ್ ಮಾರ್ಕೆಟರ್ ಆಗಿ ಕೆಲಸ ಮಾಡುತ್ತಿದ್ದು, ಪ್ರಕೃತಿ ಸಂರಕ್ಷಣೆ ಬಗ್ಗೆ ಕಾಳಜಿ ವಹಿಸಿ ಹನಿಮೂನ್‍ಗೆ ಹೋಗುವ ಬದಲು ಬೀಚ್ ಸ್ವಚ್ಛಗೊಳಿಸಿದ್ದಾರೆ. ವಿವಾಹದ ಬಳಿಕ ಜೋಡಿ ರಾಜ್ಯದಲ್ಲೇ ಕಾಲ ಕಳೆದಿದ್ದು, ಇದೇ ಸಂದರ್ಭದಲ್ಲಿ ಸೋಮೇಶ್ವರ ಬೀಚ್‍ಗೆ ತೆರಳಿದ್ದಾರೆ.

    ಈ ವೇಳೆ ಬೀಚ್ ಸಂಪೂರ್ಣವಾಗಿ ಕಸ ಹಾಕುವ ಕೇಂದ್ರವಾಗಿ ಮಾರ್ಪಟ್ಟಿದ್ದನ್ನು ಕಂಡು ಅನುದೀಪ್ ಹಾಗೂ ಮಿನುಶಾ ದಿಗ್ಭ್ರಮೆಗೊಂಡಿದ್ದಾರೆ. ಬೀಚ್ ಸಂಪೂರ್ಣವಾಗಿ ಕಸ, ಪ್ಲಾಸ್ಟಿಕ್‍ನಿಂದ ಕೂಡಿರುವುದನ್ನು ಕಂಡು ಬೇಸರಗೊಂಡಿದ್ದಾರೆ. ಬಳಿಕ ಜೋಡಿ ಹನಿಮೂನ್‍ಗೆ ತೆರಳುವುದನ್ನು ಬಿಟ್ಟು ಬೀಚ್ ಸ್ವಚ್ಛಗೊಳಿಸಲು ನಿರ್ಧರಿಸಿದೆ.

     

    View this post on Instagram

     

    A post shared by Anudeep Hegde (@travel_nirvana)

    ಅನುದೀಪ್ ಸ್ವಚ್ಛಗೊಳಿಸುವ ಸಂಪೂರ್ಣ ಪ್ರಕ್ರಿಯೆಯನ್ನು ವಿಡಿಯೋ ಹಾಗೂ ಫೋಟೋಗಳಲ್ಲಿ ಸೆರೆ ಹಿಡಿದಿದ್ದು, ಇವುಗಳನ್ನು ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದಾರೆ. 800 ಕೆ.ಜಿ.ಗೂ ಅಧಿಕ ಕಸವನ್ನು ಬೀಚ್‍ನಿಂದ ತೆಗೆಯಲಾಗಿದೆ ಎಂದು ತಿಳಿಸಿದ್ದಾರೆ. ಜನರ ಕನಸು ಹಾಗೂ ಪೋಸ್ಟ್ ವೆಡ್ಡಿಂಗ್ ಚಾಲೆಂಜ್ ಆಗಿ ತೆಗೆದುಕೊಂಡು ಕೆಲಸ ಆರಂಭಿಸಿದ್ದು, ಅವಿರತವಾಗಿ ಶ್ರಮಿಸಿ ಬೈಂದೂರಿನ ಸೋಮೇಶ್ವರ ಬೀಚ್ ಸ್ವಚ್ಛಗೊಳಿಸಿದ್ದಾರೆ. 10 ದಿನಗಳ ಬಳಿಕ ಇಂದು ಬೃಹತ್ ಆಂದೋಲನವಾಗಿ ಮಾರ್ಪಟ್ಟಿದೆ. ಸುಮಾರು 800 ಕೆ.ಜಿ. ಕಸವನ್ನು ಸ್ವಚ್ಛಗೊಳಿಸಲಾಗಿದೆ.

     

    View this post on Instagram

     

    A post shared by Anudeep Hegde (@travel_nirvana)

    ಇದೊಂದು ತುಂಬಾ ವಿನಮ್ರ ಅನುಭವ ಹಾಗೂ ಮಾನವೀಯತೆಯ ಬಗೆಗಿನ ನನ್ನ ನಂಬಿಕೆಯನ್ನು ಪುನಃಸ್ಥಾಪಿಸುವಂತಾಯಿತು. ನಾವೆಲ್ಲರೂ ಒಂದೇ ವಿಷಯವನ್ನು ಬಯಸುತ್ತೇವೆ. ಇದರಿಂದ ಯಾರಾದರೂ ಒಬ್ಬರು ಪ್ರೇರಣೆಗೊಂಡು ಈ ಕುರಿತು ಅರಿವು ಮೂಡಿಸಬೇಕಿದೆ. ಎಲ್ಲರೂ ಸೇರಿ ಮಾಡಿದರೆ ಹೆಚ್ಚು ವ್ಯತ್ಯಾಸ ಕಾಣಬಹುದಾಗಿದೆ ಎಂದು ತಮ್ಮ ಇನ್‍ಸ್ಟಾಗ್ರಾಮ್ ಪೋಸ್ಟ್‍ನಲ್ಲಿ ಅನುದೀಪ್ ಬರೆದುಕೊಂಡಿದ್ದಾರೆ.

     

    View this post on Instagram

     

    A post shared by Anudeep Hegde (@travel_nirvana)

    ಅನುದೀಪ್ ಅವರ ಇನ್‍ಸ್ಟಾ ಪೋಸ್ಟ್ ಕಂಡು ನೆಟ್ಟಿಗರು ಫಿದಾ ಆಗಿದ್ದು, ಕಮೆಂಟ್ ಮಾಡುವ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪೋಸ್ಟ್ ಸಖತ್ ವೈರಲ್ ಆಗಿದೆ.

  • ನೌಕರರಿದ್ದರೂ, ವಿಧಾನಸೌಧ ಸ್ವಚ್ಛ ಮಾಡಲು 59 ಲಕ್ಷ ಟೆಂಡರ್

    ನೌಕರರಿದ್ದರೂ, ವಿಧಾನಸೌಧ ಸ್ವಚ್ಛ ಮಾಡಲು 59 ಲಕ್ಷ ಟೆಂಡರ್

    – ಅನುಮಾನ ಹುಟ್ಟಿಸಿದ ಪಿಡಬ್ಲ್ಯುಡಿ ಇಲಾಖೆಯ ನಿರ್ಧಾರ

    ಬೆಂಗಳೂರು: ರಾಜ್ಯದ ಶಕ್ತಿಸೌಧ ವಿಧಾನಸೌಧವನ್ನು ಸ್ವಚ್ಛ ಮಾಡಲು ಪಿಡಬ್ಲ್ಯುಡಿ ಇಲಾಖೆ 59 ಲಕ್ಷ ವೆಚ್ಚದಲ್ಲಿ ಟೆಂಡರ್ ಕರೆದು ದುಂದು ವೆಚ್ಚಕ್ಕೆ ಮುಂದಾಗಿದೆ.

    ವಿಧಾನಸೌಧವನ್ನು ಸ್ವಚ್ಛವಾಗಿ ಇಡಲು ಸ್ವಚ್ಛತಾ ಸಿಬ್ಬಂದಿ, ಪ್ರತಿ ವಿಭಾಗದಲ್ಲಿ ಡಿ ಗ್ರೂಪ್ ನೌಕರರು ಇದ್ದಾರೆ. ಈಗಾಗಲೇ ಪ್ರತಿದಿನ ವಿಧಾನಸೌಧದ ಪ್ರತಿ ಕಚೇರಿ ಹಾಗೂ ಕಾರಿಡಾರ್ ಗಳನ್ನು ಸ್ವಚ್ಛಗೊಳಿಸಲಾಗುತ್ತೆ. ಇವೆಲ್ಲ ಇದ್ದರೂ ವಿಧಾನಸೌಧ ಕ್ಲೀನ್ ಮಾಡಲು ಹೊಸ ಟೆಂಡರ್ ಕರೆಯಲಾಗಿದೆ.

    ವಿಧಾನಸೌಧದಲ್ಲಿರುವ ಕಚೇರಿಗಳನ್ನು ಆಯಾ ಇಲಾಖೆಯಲ್ಲಿನ ಡಿ ಗ್ರೂಪ್ ನೌಕರರು ಸ್ವಚ್ಛಗೊಳಿಸುತ್ತಾರೆ. ವಿಧಾನ ಸೌಧದ ಕಾರಿಡಾರ್ ಹಾಗೂ ಹೊರ ಭಾಗದ ಸ್ವಚ್ಛತೆಗೆ ಗುತ್ತಿಗೆ ಆಧಾರಿತ ಕಾರ್ಮಿಕರು ಪ್ರತ್ಯೇಕವಾಗಿದ್ದಾರೆ. ಇಷ್ಟಾಗಿಯೂ ವಿಧಾನಸೌಧದ ಕಾರಿಡಾರ್ ಗಳನ್ನು ನೀರು ಹಾಕಿ ತೊಳೆಯಲು ಪ್ರತ್ಯೇಕ ಟೆಂಡರ್ ಕರೆದಿದ್ದು ಪಿಡಬ್ಲ್ಯುಡಿ ಇಲಾಖೆಯ ಈ ನಿರ್ಧಾರ ಅನುಮಾನ ಕಾರಣವಾಗಿದೆ.

    ಕೊರೊನಾ ಸಮಯದಲ್ಲಿ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ಎದುರಾಗಿದೆ. ಹೀಗಿರುವಾಗ ವಿಧಾನಸೌಧದ ಪಿಡಬ್ಲ್ಯುಡಿ ಅಧಿಕಾರಿಗಳು ʼವಾಟರ್ ವಾಶ್ ಹೆಸರಲ್ಲಿ ಟೆಂಡರ್ ಕಾಸು ಮಾಡಲು ಹೊರಟ್ಟಿದ್ದಾರಾ ಎಂಬ ಪ್ರಶ್ನೆ ಎದ್ದಿದೆ.

  • ಬೆಂಗಳೂರಿಗೆ ‘ಅತ್ಯುತ್ತಮ ಸ್ವಯಂ ಸುಸ್ಥಿರ ಮೆಗಾ ಸಿಟಿ’ ಪಟ್ಟ

    ಬೆಂಗಳೂರಿಗೆ ‘ಅತ್ಯುತ್ತಮ ಸ್ವಯಂ ಸುಸ್ಥಿರ ಮೆಗಾ ಸಿಟಿ’ ಪಟ್ಟ

    ಬೆಂಗಳೂರು: ಸಿಲಿಕಾನ್ ಸಿಟಿಗೆ ಮತ್ತೊಂದು ಗರಿ ಲಭಿಸಿದ್ದು, 40 ಲಕ್ಷಕ್ಕಿಂತ ಕಡಿಮೆ ಜನಸಂಖ್ಯೆ ವಿಭಾಗದಲ್ಲಿ ಬೆಂಗಳೂರು ‘ಅತ್ಯುತ್ತಮ ಸ್ವಯಂ ಸುಸ್ಥಿರ ಮೆಗಾ ಸಿಟಿ'(ಬೆಸ್ಟ್ ಸೆಲ್ಫ್ ಸಸ್ಟೇನೆಬಲ್ ಮೆಗಾ ಸಿಟಿ) ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ತ್ಯಾಜ್ಯ ನಿರ್ವಹಣೆ ಕುರಿತು ಕೇಂದ್ರೀಕರಿಸುವುದು ಹಾಗೂ ಮನೆ ಗೊಬ್ಬರದ ಕುರಿತು ಉತ್ತೇಜನ ನೀಡುತ್ತಿರುವುದಕ್ಕೆ ಈ ಪ್ರಶಸ್ತಿ ಲಭಿಸಿದೆ.

    ಈ ಕುರಿತು ವಸತಿ ಹಾಗೂ ನಗರ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ದುರ್ಗಾಶಂಕರ್ ಮಿಶ್ರಾ ಈ ಕುರಿತು ಟ್ವೀಟ್ ಮಾಡುವ ಮೂಲಕ ಸ್ಪಷ್ಟಪಡಿಸಿದ್ದು, ಬಯೋಮ್ಯಾನ್ ಮೂಲಕ ಮನೆಯಲ್ಲೇ ಗೊಬ್ಬರ ತಯಾರಿ ವ್ಯವಸ್ಥೆಯಿಂದಾಗಿ ಬೆಂಗಳೂರಿಗೆ ಈ ಪ್ರಶಸ್ತಿ ಲಭಿಸಿದೆ ಎಂದು ತಿಳಿಸಿದ್ದಾರೆ. ಈ ಮೂಲಕ ಬೆಸ್ಟ್ ಸೆಲ್ಫ್ ಸಸ್ಟೇನೆಬಲ್ ಮೆಗಾ ಸಿಟಿ ಬಿರುದು ಬೆಂಗಳೂರಿಗೆ ಲಭಿಸಿದೆ ಎಂದು ಸ್ಪಷ್ಟಪಡಿಸಿದ್ದಾರೆ.

    ನಾಗರಿಕರೇ ನಡೆಸುವ ಕಾಂಪೋಸ್ಟ್ ಮಾರುಕಟ್ಟೆ ಅಥವಾ ಕಾಂಪೋಸ್ಟ್ ಸಂದೇಶ್‍ಗಳಲ್ಲಿ ವಿವಿಧ ರೀತಿಯ ಮಿಶ್ರ ಗೊಬ್ಬರ ತಯಾರಿಕೆಯನ್ನು ಪ್ರದರ್ಶಿಸಲಾಗುತ್ತದೆ. ಇದು ದೇಶದ ಉಳಿದ ಭಾಗಗಳಿಗೆ ಸ್ಪೂರ್ತಿದಾಯಕ ಮಾದರಿಯಾಗಿದೆ. ನಗರದ ಸ್ಥಳೀಯ ಸಂಸ್ಥೆ(ಯುಎಲ್‍ಬಿ) ಒಡಿಎಫ್++ ಟ್ಯಾಗ್‍ನ್ನು ಮುಡಿಗೇರಿಸಿಕೊಂಡಿದೆ ಎಂದು ತಿಳಿಸಿದ್ದಾರೆ.

    ಬೆಂಗಳೂರು 40 ಲಕ್ಷ ಜನಸಂಖ್ಯೆ ವಿಭಾಗದಲ್ಲಿ ‘ಬೆಸ್ಟ್ ಸೆಲ್ಫ್ ಸಸ್ಟೇನೆಬಲ್ ಮೆಗಾ ಸಿಟಿ’ ಎಂಬ ಬಿರುದು ಪಡೆದಿದೆ. 3,200ರ ಪೈಕಿ 1,491 ಅಂಕಗಳನ್ನು ಪಡೆದಿದೆ. 10 ಲಕ್ಷ ಜನಸಂಖ್ಯೆ ಹೊಂದಿದ ನಗರದ ಸ್ಥಳೀಯ ಸಂಸ್ಥೆಗಳ ಪೈಕಿ ಬೆಂಗಳೂರು 37ನೇ ರ‌್ಯಾಂಕ್ ಪಡೆದಿದೆ.

    ಸ್ವಚ್ಛ ಸರ್ವೇಕ್ಷಣದಲ್ಲಿ 214ನೇ ರ‌್ಯಾಂಕ್
    ಆಗಸ್ಟ್ ನಲ್ಲಿ ವಸತಿ ಹಾಗೂ ನಗರ ವ್ಯವಹಾರಗಳ ಸಚಿವಾಲಯ ಬಿಡುಗಡೆ ಮಾಡಿದ ಸ್ವಚ್ಛ ಸರ್ವೇಕ್ಷಣ-2020 ರಲ್ಲಿ ಬೆಂಗಳೂರು 214ನೇ ರ‌್ಯಾಂಕ್ ಪಡೆದಿದೆ. ಆದರೆ ಕಳೆದ ಬಾರಿಗಿಂತ ಈ ಬಾರಿ ಕುಸಿತ ಕಂಡಿದ್ದು, 194ರಿಂದ 214ಕ್ಕೆ ಜಾರಿದೆ. 6,000 ಅಂಕಗಳ ಪೈಕಿ ಕೇವಲ 2,656.82 ಅಂಕಗಳನ್ನು ಮಾತ್ರ ಪಡೆದಿದೆ.

  • ರಾಯಚೂರಿನಲ್ಲಿ ಊಟ, ನೀರಿಗಾಗಿ ಹೊರಬರುತ್ತಿರುವ ಕೊರೊನಾ ಸೋಂಕಿತರು

    ರಾಯಚೂರಿನಲ್ಲಿ ಊಟ, ನೀರಿಗಾಗಿ ಹೊರಬರುತ್ತಿರುವ ಕೊರೊನಾ ಸೋಂಕಿತರು

    ರಾಯಚೂರು: ಜಿಲ್ಲೆಯ ಕೋವಿಡ್ ಆಸ್ಪತ್ರೆಗಳಾದ ರಿಮ್ಸ್ ಹಾಗೂ ಓಪೆಕ್ ನಲ್ಲಿನ ಸಮಸ್ಯೆಗಳು ಬಗೆಹರಿಯುವ ಲಕ್ಷಣಗಳೇ ಕಾಣುತ್ತಿಲ್ಲ. ಸ್ವಚ್ಛತೆ ಕೊರತೆ, ಊಟ, ನೀರಿನ ಸೌಲಭ್ಯ ಸರಿಯಾಗಿ ಇಲ್ಲದಿರುವುದು, ಮುಖ್ಯವಾಗಿ ಸಮರ್ಪಕ ಚಿಕಿತ್ಸೆ ನೀಡುತ್ತಿಲ್ಲ ಅನ್ನೋ ಸೋಂಕಿತರ ಆರೋಪ ಈಗಲೂ ಮುಂದುವರೆದಿದೆ.

    ಊಟ, ತಿಂಡಿ, ನೀರಿಗಾಗಿ ರೋಗಿಗಳ ಜೊತೆಗೆ ಇರುವವರು ಹಾಗೂ ರೋಗಿಗಳು ಸಹ ಹೊರಗೆ ಬಂದು ಹೋಟೆಲ್‍ಗಳಲ್ಲಿ ತೆಗೆದುಕೊಂಡು ಆಸ್ಪತ್ರೆಗೆ ವಾಪಸ್ ಮರಳುತ್ತಿದ್ದಾರೆ. ಟೀ ಕೊಡುತ್ತಿಲ್ಲ, ಕುಡಿಯುವ ನೀರಿನ ಸೌಲಭ್ಯವಿಲ್ಲ, ಹೊರಗಡೆಯಿಂದಲೇ ನೀರು ತರಬೇಕಾಗಿದೆ. ವೈದ್ಯರು ಸಕಾಲಕ್ಕೆ ಬಂದು ಚಿಕಿತ್ಸೆ ನೀಡುತ್ತಿಲ್ಲ ಎಂದು ಸೋಂಕಿತರ ಅಟೆಂಡರ್‌ಗಳು ಆರೋಪಿಸಿದ್ದಾರೆ.

    ಕೋವಿಡ್ ರೋಗಿಗಳು ಇರುವ ವಾರ್ಡುಗಳಲ್ಲಿ ಸ್ವಚ್ಛತೆ ಇಲ್ಲ. ವಾರ್ಡ್‌ಗಳ ಶೌಚಾಲಯಗಳು ಗಬ್ಬುನಾರುತ್ತಿವೆ. ವಾರ್ಡಗಳಲ್ಲಿ ಸ್ವಚ್ಛ ಮಾಡಲು ಸಿಬ್ಬಂದಿ ಬರುತ್ತಿಲ್ಲ. ಹೀಗಾಗಿ ಸೋಂಕಿತರೇ ವಾರ್ಡ್ ಸ್ವಚ್ಛ ಮಾಡಿಕೊಳ್ಳುತ್ತಿದ್ದಾರೆ. ರಿಮ್ಸ್‌ನಲ್ಲಿ ಕೋವಿಡ್ ರೋಗಿಗಳಿಗಾಗಿ ಪ್ರತ್ಯೇಕ ವಾರ್ಡ ಆರಂಭಿಸಲಾಗಿದೆ. ಆದರೆ ನಾವೇ ಸ್ವಚ್ಛ ಮಾಡಿಕೊಳ್ಳುವುದು ಅನಿವಾರ್ಯವಾಗಿದೆ ಎಂದು ಸೋಂಕಿತರು ಅಳಲು ತೊಡಿಕೊಂಡಿದ್ದಾರೆ. ಇಲ್ಲಿಯ ಅವ್ಯವಸ್ಥೆಯ ಬಗ್ಗೆ ಸೋಂಕಿತರೇ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.

    ಇತ್ತೀಚಿಗೆ ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಕೋವಿಡ್ ಆಸ್ಪತ್ರೆಗಳ ಅವ್ಯವಸ್ಥೆ ಸರಿಪಡಿಸುವಂತೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರೂ ಇಲ್ಲಿನ ವ್ಯವಸ್ಥೆಯಲ್ಲಿ ಯಾವುದೇ ಬದಲಾವಣೆಗಳು ಆಗಿಲ್ಲ.