ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ನಿರ್ಮಾಣ ಮಾಡುತ್ತಿರುವ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾದ ನಾಯಕ ಕಂ ನಿರ್ದೇಶಕ ರಾಜ್ ಬಿ ಶೆಟ್ಟಿ ಅವರು ಲುಕ್ ಅನಾವರಣಗೊಂಡಿದೆ. ಪ್ರಕೃತಿಯ ಮಡಿಲಿಲ್ಲ ಒಂದು ರೀತಿಯ ಸಂತನಂತೆ ಅವರು ಕಂಡಿದ್ದಾರೆ. ಮೊನ್ನೆಯಷ್ಟೇ ಈ ಸಿನಿಮಾದ ನಾಯಕಿಯ ಪೋಸ್ಟರ್ ಅನ್ನು ಚಿತ್ರತಂಡ ರಿಲೀಸ್ ಮಾಡಿತ್ತು. ಇದೀಗ ನಾಯಕನ ಫೋಟೋವನ್ನು ಬಿಡುಗಡೆಗೊಳಿಸಲಾಗಿದೆ.
ಇದೊಂದು ನಾಯಕಿ ಪ್ರಧಾನ ಸಿನಿಮಾವಾಗಿದ್ದು, ರಮ್ಯಾ ಮತ್ತು ರಾಜ್ ಬಿ ಶೆಟ್ಟಿ ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ರಾಜ್ ಬಿ ಶೆಟ್ಟಿ ನಾಯಕನಾಗಿ ನಟಿಸುವುದರ ಜೊತೆಗೆ ನಿರ್ದೇಶಕನಾಗಿಯೂ ಕೆಲಸ ಮಾಡಿದ್ದಾರೆ. ಈಗಾಗಲೇ ಸಂಪೂರ್ಣ ಚಿತ್ರೀಕರಣ ಕೂಡ ಮುಗಿಸಿದೆ ಚಿತ್ರತಂಡ. ರಮ್ಯಾ ಅವರ ಚೊಚ್ಚಲು ನಿರ್ಮಾಣದ ಸಿನಿಮಾ ಇದಾಗಿದ್ದರಿಂದ ಅತೀವ ನಿರೀಕ್ಷೆಯನ್ನು ಇಟ್ಟುಕೊಳ್ಳಲಾಗಿದೆ. ಇದನ್ನೂ ಓದಿ: ಸಿನಿಮಾ ಮೂಲಕ ಪತಿಯ ಪ್ರಜಾಕೀಯಕ್ಕೆ ಸಾಥ್ ನೀಡಿದ ಪ್ರಿಯಾಂಕ ಉಪೇಂದ್ರ
ಅಂದುಕೊಂಡಂತೆ ಆಗಿದ್ದರೆ, ಈ ಸಿನಿಮಾದ ಮೂಲಕವೇ ನಾಯಕಿಯಾಗಿ ರಮ್ಯಾ ಮತ್ತೆ ಸಿನಿಮಾ ರಂಗ ಪ್ರವೇಶ ಮಾಡಬೇಕಿತ್ತು. ಸಿನಿಮಾದ ಟೈಟಲ್ ಲಾಂಚ್ ಮಾಡಿದಾಗ ರಮ್ಯಾ ಮತ್ತು ರಾಜ್ ಬಿ ಶೆಟ್ಟಿ ಇಬ್ಬರ ಹೆಸರೂ ಇತ್ತು. ಆದರೆ, ಕೊನೆ ಕ್ಷಣದ ಬದಲಾವಣೆಯಲ್ಲಿ ರಮ್ಯಾ ಬದಲಾಗಿ ಬೇರೊಬ್ಬ ಕಲಾವಿದೆ ನಾಯಕಿಯಾಗಿ ಆಯ್ಕೆಯಾದರು. ರಮ್ಯಾ ಬದಲಾಗಿ ಆ ಪಾತ್ರವನ್ನು ಸಿರಿ ನಿರ್ವಹಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
ನಟಿ ರಮ್ಯಾ ಬ್ಯಾನರ್ ನಲ್ಲಿ ಮೂಡಿ ಬರುತ್ತಿರುವ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾದ ಟೈಟಲ್ ವಿವಾದಕ್ಕೆ ಗುರಿಯಾಗಿದೆ. ಈ ಟೈಟಲ್ ತಮ್ಮದೆಂದು, ಅದನ್ನು ಯಾರಿಗೂ ಕೊಡಬಾರದು ಎಂದು ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ತಮ್ಮ ಲಾಯರ್ ಮೂಲಕ ಪತ್ರವೊಂದನ್ನು ಕಳುಹಿಸಿದ್ದರು. ಅಲ್ಲದೇ, ತಾವು ಅದೇ ಹೆಸರಿನಲ್ಲಿ ಸಿನಿಮಾ ಮಾಡುತ್ತಿರುವುದಾಗಿ, ಅದು ಅರ್ಧಕ್ಕೆ ನಿಂತಿದೆ ಎಂದು ತಿಳಿಸಿದ್ದರು. ಅದರಿಂದಾಗಿ ಟೈಟಲ್ ಬಗ್ಗೆ ಗೊಂದಲ ಮೂಡಿತ್ತು.
ವಾಣಿಜ್ಯ ಮಂಡಳಿಗೆ ಪತ್ರ ಬರೆದ ಬೆನ್ನಲ್ಲೇ ಆ ಟೈಟಲ್ ಬಗ್ಗೆ ಪರಿಶೀಲಿಸಿದಾಗ ಅಸಲಿಯಾಗಿ ಅದು ರಾಜೇಂದ್ರ ಸಿಂಗ್ ಬಾಬು ಅವರ ಹೆಸರಿನಲ್ಲಿ ಇರಲಿಲ್ಲ ಎನ್ನುವುದು ಗೊತ್ತಾಗಿದೆ. ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾ ಮಾಡುತ್ತಿರುವ ಬಿ.ಕೆ.ಗಂಗಾಧರ್ ಅವರು ಈ ಟೈಟಲ್ ಅನ್ನು ವಾಣಿಜ್ಯ ಮಂಡಳಿಯಲ್ಲಿ ನೋಂದಾಯಿಸಿದ್ದಾರೆ. ಅಲ್ಲದೇ, ರಮ್ಯಾ ಸಿನಿಮಾ ಮಾಡುತ್ತೇನೆ ಎಂದಾಗ, ಅವರಿಗೆ ಆ ಟೈಟಲ್ ಅನ್ನು ವರ್ಗಾಯಿಸಿದ್ದಾರೆ ಎಂದು ಸ್ವತಃ ವಾಣಿಜ್ಯ ಮಂಡಳಿಯ ಅಧ್ಯಕ್ಷರೇ ತಿಳಿಸಿದ್ದಾರೆ. ಹಾಗಾಗಿ ರಮ್ಯಾಗೆ ಆ ಟೈಟಲ್ ಸಿಗಲಿದೆ.
ಬಿ.ಕೆ.ಗಂಗಾಧರ್ ಅವರು ರಮ್ಯಾ ಹೆಸರಿಗೆ ಆ ಟೈಟಲ್ ಅನ್ನು ವರ್ಗಾಯಿಸಿರುವುದರಿಂದ, ರಮ್ಯಾ ಅವರು ವಾಣಿಜ್ಯ ಮಂಡಳಿಗೆ ಪತ್ರ ಬರೆಯಬೇಕಿದೆ. ಗಂಗಾಧರ ಅವರು ನೀಡಿರುವ ಎನ್.ಓ.ಸಿ ಪತ್ರವನ್ನು ವಾಣಿಜ್ಯ ಮಂಡಳಿಗೆ ನೀಡಿದ ತಕ್ಷಣವೇ ಅದನ್ನು ರಮ್ಯಾ ಅವರ ನಿರ್ಮಾಣ ಸಂಸ್ಥೆಗೆ ವರ್ಗಾಯಿಸಲಾಗುವುದು ಎಂದು ಮಂಡಳಿಯ ಅಧ್ಯಕ್ಷರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಇದನ್ನೂ ಓದಿ: ಕೊನೆಗೂ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ರು ರಾಮ್ ಚರಣ್ ದಂಪತಿ
ರಾಜೇಂದ್ರ ಸಿಂಗ್ ಬಾಬು ವಾಣಿಜ್ಯ ಮಂಡಳಿಗೆ ಬರೆದ ಪತ್ರದಲ್ಲಿ ‘ನನ್ನ ಕಕ್ಷಿದಾರರು ನಿರ್ಮಿಸುವ ಮೇಲ್ಕಂಡ ಸ್ವಾತಿ ಮುತ್ತಿನ ಮಳೆ ಹನಿಯೆ’ ಹೆಸರಿನ ಚಿತ್ರದ ತಾರಾಗಣದಲ್ಲಿ ಅಂಬರೀಶ್, ಸುಹಾಸಿನಿ ಮತ್ತು ಇತರ ಕಲಾವಿದರು ನಟಿಸಿದ್ದು. ಶೇಕಡಾ 80ರಷ್ಟು ಚಿತ್ರೀಕರಣ ಕೂಡ ಮುಗಿದಿದೆ. ಮೇಲ್ಕಂಡ ಚಿತ್ರದ ನಾಯಕ ನಟ ಅಂಬರೀಶ್ ನಿಧನ ಹೊಂದಿ ನಂತರ ಚಿತ್ರದ ಚಿತ್ರೀಕರಣವು ಕಾರಣಾಂತರಗಳಿಂದ ನಿಂತಿದೆ. ನನ್ನ ಕಕ್ಷಿದಾರರು ಹೇಳುವ ಹಾಗೆ ಮೇಲ್ಕಂಡ ಚಿತ್ರ ಶೀರ್ಷಿಕೆ ಅವರೇ ನಿರ್ದೇಶಿಸಿರುವ ಬಣ್ಣದ ಗೆಜ್ಜೆ ಚಿತ್ರದ ಹಾಡಿನ ಶೀರ್ಷಿಕೆಯಾಗಿರುತ್ತದೆ’ ಎಂದು ಸಿಂಗ್ ಬಾಬು ಪರ ವಕೀಲ ಎಸ್.ಆರ್. ಶ್ರೀನಿವಾಸ್ ಮೂರ್ತಿ ಪತ್ರ ಬರೆದಿದ್ದಾರೆ.
ಅಲ್ಲದೇ, ತಾವು ನಿರ್ಮಾಣ ಮಾಡುವ ಚಿತ್ರಕ್ಕೆ ಮೇಲ್ಕಂಡ ಶೀರ್ಷಿಕೆಯನ್ನು ಅಂದರೆ ಸ್ವಾತಿ ಮುತ್ತಿನ ಮಳೆ ಹನಿಯೇ ಶಿರ್ಷಿಕೆಯನ್ನಾಗಲಿ, ಹಾಡನ್ನಾಗಲು ಯಾವುದೇ ರೀತಿ ಉಪಯೋಗಿಸಲು ಅಥವಾ ನೋಂದಾಯಿಸಲು ನನ್ನ ಕಕ್ಷಿದಾರರ ವಿನಃ ಯಾರಿಗೂ ಯಾವುದೇ ವಿಧವಾದ ಹಕ್ಕು ಇರುವುದಿಲ್ಲ. ಒಂದು ವೇಳೆ ನಾನು ನೀಡಿರುವ ಈ ವಕೀಲರ ನೋಟಿಸಿನ ನಂತರವೂ ನೀವು ಬೇರೆ ನಿರ್ಮಾಪಕರಿಗೆ ಈ ಚಿತ್ರದ ಶೀರ್ಷಿಕೆಯನ್ನು ನೋಂದಾವಣೆ ಮಾಡಿಕೊಡಲು ಮತ್ತು ಚಿತ್ರ ನಿರ್ಮಾಣ ಮಾಡಲು ಅವಕಾಶ ಕೊಟ್ಟಿದ್ದೆ ಆದರೆ, ನನ್ನ ಕಕ್ಷಿದಾರರು ನೊಂದಾಣಿಕೆ ಮಾಡಿರುವ ಶೀರ್ಷಿಕೆಯ ಕೃತಿ ಚೌರ್ಯವಾಗುತ್ತದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
ಮೂರು ದಿನಗಳ ಹಿಂದೆಯಷ್ಟೇ ಕನ್ನಡ ಸಿನಿಮಾ ರಂಗದ ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾದ ಟೈಟಲ್ ತಮ್ಮ ಬಳಿ ಇದೆ. ಅದನ್ನು ಯಾರೂ ಬಳಸಬಾರದು ಎಂದು ತಮ್ಮ ವಕೀಲರ ಮೂಲಕ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರವೊಂದನ್ನು ಕಳುಹಿಸಿದ್ದರು. ಈ ಪತ್ರವು ಸ್ಯಾಂಡಲ್ ವುಡ್ ಅಂಗಳದಲ್ಲಿ ಭಾರೀ ಸದ್ದು ಮಾಡಿತ್ತು. ಆದರೆ, ಅಸಲಿಯಾಗಿ ವಿಷಯವೇ ಬೇರೆ ಆಗಿದೆ. ಈ ಟೈಟಲ್ ರಾಜೇಂದ್ರ ಸಿಂಗ್ ಬಾಬು ಅವರ ಬಳಿಯೇ ಇಲ್ಲವೆಂದು ಗೊತ್ತಾಗಿದೆ.
ಸ್ವಾತಿ ಮುತ್ತಿನ ಮಳೆ ಹನಿಯೇ ಟೈಟಲ್ ಇರುವುದು ನಿರ್ಮಾಪಕ ಬಿ.ಕೆ. ಗಂಗಾಧರ್ ಅವರ ಬಳಿ. ಈಗಾಗಲೇ ರಮ್ಯಾ ಅವರು ಗಂಗಾಧರ್ ಅವರಿಂದ ಪತ್ರದ ಮೂಲಕ ಟೈಟಲ್ ಅನ್ನು ತಮಗೆ ವರ್ಗಾಯಿಸಿಕೊಂಡಿದ್ದಾರಂತೆ. ಗಂಗಾಧರ ಅವರು ಕೊಟ್ಟ ಪತ್ರವನ್ನು ವಾಣಿಜ್ಯ ಮಂಡಳಿಗೆ ಸಲ್ಲಿಸಿದರೆ, ಟೈಟಲ್ ರಮ್ಯಾ ಅವರ ಪಾಲಾಗಲಿದೆ. ಹಾಗಾಗಿ ಈ ಶೀರ್ಷಿಕೆಗೂ ಮತ್ತು ರಾಜೇಂದ್ರ ಸಿಂಗ್ ಬಾಬು ಅವರಿಗೂ ಯಾವುದೇ ಸಂಬಂಧವಿಲ್ಲವೆಂದು ಸ್ವತಃ ವಾಣಿಜ್ಯ ಮಂಡಳಿಯೇ ಹೇಳಿದೆ. ಇದನ್ನೂ ಓದಿ: ಮೊದಲ ಬಾರಿಗೆ ಮಗಳ ಮುಖ ಪರಿಚಯಿಸಿದ `ಯುವರತ್ನ’ ನಟಿ
ರಾಜೇಂದ್ರ ಸಿಂಗ್ ಬಾಬು ವಾಣಿಜ್ಯ ಮಂಡಳಿಗೆ ಬರೆದ ಪತ್ರದಲ್ಲಿ ‘ನನ್ನ ಕಕ್ಷಿದಾರರು ನಿರ್ಮಿಸುವ ಮೇಲ್ಕಂಡ ಸ್ವಾತಿ ಮುತ್ತಿನ ಮಳೆ ಹನಿಯೆ’ ಹೆಸರಿನ ಚಿತ್ರದ ತಾರಾಗಣದಲ್ಲಿ ಅಂಬರೀಶ್, ಸುಹಾಸಿನಿ ಮತ್ತು ಇತರ ಕಲಾವಿದರು ನಟಿಸಿದ್ದು. ಶೇಕಡಾ 80ರಷ್ಟು ಚಿತ್ರೀಕರಣ ಕೂಡ ಮುಗಿದಿದೆ. ಮೇಲ್ಕಂಡ ಚಿತ್ರದ ನಾಯಕ ನಟ ಅಂಬರೀಶ್ ನಿಧನ ಹೊಂದಿ ನಂತರ ಚಿತ್ರದ ಚಿತ್ರೀಕರಣವು ಕಾರಣಾಂತರಗಳಿಂದ ನಿಂತಿದೆ. ನನ್ನ ಕಕ್ಷಿದಾರರು ಹೇಳುವ ಹಾಗೆ ಮೇಲ್ಕಂಡ ಚಿತ್ರ ಶೀರ್ಷಿಕೆ ಅವರೇ ನಿರ್ದೇಶಿಸಿರುವ ಬಣ್ಣದ ಗೆಜ್ಜೆ ಚಿತ್ರದ ಹಾಡಿನ ಶೀರ್ಷಿಕೆಯಾಗಿರುತ್ತದೆ’ ಎಂದು ಸಿಂಗ್ ಬಾಬು ಪರ ವಕೀಲ ಎಸ್.ಆರ್. ಶ್ರೀನಿವಾಸ್ ಮೂರ್ತಿ ಪತ್ರ ಬರೆದಿದ್ದಾರೆ.
ಅಲ್ಲದೇ, ತಾವು ನಿರ್ಮಾಣ ಮಾಡುವ ಚಿತ್ರಕ್ಕೆ ಮೇಲ್ಕಂಡ ಶೀರ್ಷಿಕೆಯನ್ನು ಅಂದರೆ ಸ್ವಾತಿ ಮುತ್ತಿನ ಮಳೆ ಹನಿಯೇ ಶಿರ್ಷಿಕೆಯನ್ನಾಗಲಿ, ಹಾಡನ್ನಾಗಲು ಯಾವುದೇ ರೀತಿ ಉಪಯೋಗಿಸಲು ಅಥವಾ ನೋಂದಾಯಿಸಲು ನನ್ನ ಕಕ್ಷಿದಾರರ ವಿನಃ ಯಾರಿಗೂ ಯಾವುದೇ ವಿಧವಾದ ಹಕ್ಕು ಇರುವುದಿಲ್ಲ. ಒಂದು ವೇಳೆ ನಾನು ನೀಡಿರುವ ಈ ವಕೀಲರ ನೋಟಿಸಿನ ನಂತರವೂ ನೀವು ಬೇರೆ ನಿರ್ಮಾಪಕರಿಗೆ ಈ ಚಿತ್ರದ ಶೀರ್ಷಿಕೆಯನ್ನು ನೋಂದಾವಣೆ ಮಾಡಿಕೊಡಲು ಮತ್ತು ಚಿತ್ರ ನಿರ್ಮಾಣ ಮಾಡಲು ಅವಕಾಶ ಕೊಟ್ಟಿದ್ದೆ ಆದರೆ, ನನ್ನ ಕಕ್ಷಿದಾರರು ನೊಂದಾಣಿಕೆ ಮಾಡಿರುವ ಶೀರ್ಷಿಕೆಯ ಕೃತಿ ಚೌರ್ಯವಾಗುತ್ತದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ‘ಸ್ವಾತಿ ಮುತ್ತಿನ ಮಳೆಹನಿಯೇ’ ಸಿನಿಮಾವನ್ನು ನಿರ್ಮಾಣ ಮಾಡುತ್ತಿರುವ ವಿಚಾರ ತಿಳಿದೇ ಇದೆ. ಈಗಾಗಲೇ ಬಹುತೇಕ ಚಿತ್ರೀಕರಣವನ್ನೂ ಮುಗಿಸಲಾಗಿದೆ. ಬಿಡುಗಡೆಗೂ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಈ ವೇಳೆಯಲ್ಲಿ ಚಿತ್ರದ ಶೀರ್ಷಿಕೆಯ ಸಲುವಾಗಿ ವಿಘ್ನವೊಂದು ಎದುರಾಗಿದೆ. ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ಶೀರ್ಷಿಕೆ ನನ್ನದು. ನನ್ನ ಸಿನಿಮಾ ಅರ್ಧಕ್ಕೆ ನಿಂತಿದೆ. ಅದನ್ನು ಮುಂದುವರೆಸಬೇಕು. ಹಾಗಾಗಿ ಈ ಶೀರ್ಷಿಕೆಯನ್ನು ಯಾರೂ ಬಳಸದಂತೆ ಕ್ರಮ ತಗೆದುಕೊಳ್ಳಬೇಕೆಂದು ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು, ತಮ್ಮ ಲಾಯರ್ ಮೂಲಕ ವಾಣಿಜ್ಯ ಮಂಡಳಿಗೆ ಪತ್ರವೊಂದನ್ನು ಬರೆದಿದ್ದಾರೆ.
ವಾಣಿಜ್ಯ ಮಂಡಳಿಗೆ ಬರೆದ ಪತ್ರದಲ್ಲಿ ‘ನನ್ನ ಕಕ್ಷಿದಾರರು ನಿರ್ಮಿಸುವ ಮೇಲ್ಕಂಡ ಸ್ವಾತಿ ಮುತ್ತಿನ ಮಳೆ ಹನಿಯೆ’ ಹೆಸರಿನ ಚಿತ್ರದ ತಾರಾಗಣದಲ್ಲಿ ಅಂಬರೀಶ್, ಸುಹಾಸಿನಿ ಮತ್ತು ಇತರ ಕಲಾವಿದರು ನಟಿಸಿದ್ದು. ಶೇಕಡಾ 80ರಷ್ಟು ಚಿತ್ರೀಕರಣ ಕೂಡ ಮುಗಿದಿದೆ. ಮೇಲ್ಕಂಡ ಚಿತ್ರದ ನಾಯಕ ನಟ ಅಂಬರೀಶ್ ನಿಧನ ಹೊಂದಿ ನಂತರ ಚಿತ್ರದ ಚಿತ್ರೀಕರಣವು ಕಾರಣಾಂತರಗಳಿಂದ ನಿಂತಿದೆ. ನನ್ನ ಕಕ್ಷಿದಾರರು ಹೇಳುವ ಹಾಗೆ ಮೇಲ್ಕಂಡ ಚಿತ್ರ ಶೀರ್ಷಿಕೆ ಅವರೇ ನಿರ್ದೇಶಿಸಿರುವ ಬಣ್ಣದ ಗೆಜ್ಜೆ ಚಿತ್ರದ ಹಾಡಿನ ಶೀರ್ಷಿಕೆಯಾಗಿರುತ್ತದೆ’ ಎಂದು ಸಿಂಗ್ ಬಾಬು ಪರ ವಕೀಲ ಎಸ್.ಆರ್. ಶ್ರೀನಿವಾಸ್ ಮೂರ್ತಿ ಪತ್ರ ಬರೆದಿದ್ದಾರೆ. ಇದನ್ನೂ ಓದಿ: ರವಿಚಂದ್ರನ್ ಪುತ್ರ ವಿಕ್ರಮ್ ನಟನೆಯ ಎರಡನೇ ಸಿನಿಮಾಗೆ ಮುಹೂರ್ತ
ಅಲ್ಲದೇ, ತಾವು ನಿರ್ಮಾಣ ಮಾಡುವ ಚಿತ್ರಕ್ಕೆ ಮೇಲ್ಕಂಡ ಶೀರ್ಷಿಕೆಯನ್ನು ಅಂದರೆ ಸ್ವಾತಿ ಮುತ್ತಿನ ಮಳೆ ಹನಿಯೇ ಶಿರ್ಷಿಕೆಯನ್ನಾಗಲಿ, ಹಾಡನ್ನಾಗಲು ಯಾವುದೇ ರೀತಿ ಉಪಯೋಗಿಸಲು ಅಥವಾ ನೋಂದಾಯಿಸಲು ನನ್ನ ಕಕ್ಷಿದಾರರ ವಿನಃ ಯಾರಿಗೂ ಯಾವುದೇ ವಿಧವಾದ ಹಕ್ಕು ಇರುವುದಿಲ್ಲ. ಒಂದು ವೇಳೆ ನಾನು ನೀಡಿರುವ ಈ ವಕೀಲರ ನೋಟಿಸಿನ ನಂತರವೂ ನೀವು ಬೇರೆ ನಿರ್ಮಾಪಕರಿಗೆ ಈ ಚಿತ್ರದ ಶೀರ್ಷಿಕೆಯನ್ನು ನೋಂದಾವಣೆ ಮಾಡಿಕೊಡಲು ಮತ್ತು ಚಿತ್ರ ನಿರ್ಮಾಣ ಮಾಡಲು ಅವಕಾಶ ಕೊಟ್ಟಿದ್ದೆ ಆದರೆ, ನನ್ನ ಕಕ್ಷಿದಾರರು ನೊಂದಾಣಿಕೆ ಮಾಡಿರುವ ಶೀರ್ಷಿಕೆಯ ಕೃತಿ ಚೌರ್ಯವಾಗುತ್ತದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
ಆ್ಯಪಲ್ ಬಾಕ್ಸ್ ಮೂಲಕ ಸಿನಿಮಾ ರಂಗಕ್ಕೆ ಮತ್ತೆ ಎಂಟ್ರಿ ಕೊಟ್ಟವರು ರಮ್ಯಾ. ಈ ಹೆಸರಿನಲ್ಲಿ ರಮ್ಯಾ ನಿರ್ಮಾಣ ಸಂಸ್ಥೆಯನ್ನು ಶುರು ಮಾಡಿದ್ದಾರೆ. ಮೊದಲ ಚಿತ್ರವಾಗಿ ಸ್ವಾತಿ ಮುತ್ತಿನ ಮಳೆ ಹನಿಯೇ ಘೋಷಣೆ ಮಾಡಿದ್ದರು. ರಾಜ್ ಬಿ ಶೆಟ್ಟಿ ನಿರ್ದೇಶನದಲ್ಲಿ ತಯಾರಾದ ಈ ಸಿನಿಮಾ ಈಗಾಗಲೇ ಸಂಪೂರ್ಣ ಚಿತ್ರೀಕರಣ ಕೂಡ ಮುಗಿಸಿಕೊಂಡಿದೆ. ಹಾಗಾಗಿ ಈ ಚಿತ್ರದ ನಾಯಕಿಯ ಪಾತ್ರದ ಫೋಟೋವನ್ನು ರಮ್ಯಾ ಹಂಚಿಕೊಂಡಿದ್ದಾರೆ.
ಅಂದುಕೊಂಡಂತೆ ಆಗಿದ್ದರೆ ಈ ಸಿನಿಮಾದ ನಾಯಕಿಯಾಗಿ ರಮ್ಯಾ ಅವರೇ ತೆರೆಯ ಮೇಲೆ ಕಾಣಿಸಿಕೊಳ್ಳುವುದಿತ್ತು. ಸಿನಿಮಾದ ಟೈಟಲ್ ಲಾಂಚ್ ಆದಾಗ ರಮ್ಯಾ ಮತ್ತು ರಾಜ್ ಬಿ ಶೆಟ್ಟಿ ಕಾಂಬಿನೇಷನ್ ನ ಸಿನಿಮಾ ಎಂದೇ ಹೇಳಲಾಗಿತ್ತು. ಆನಂತರ ರಮ್ಯಾ ಸ್ಥಾನಕ್ಕೆ ಸಿರಿ ರವಿಕುಮಾರ್ ಆಗಮಿಸಿದರು. ಈ ಸಿನಿಮಾದ ನಾಯಕಿಯಾಗಿ ಸಿರಿ ಆಯ್ಕೆಯಾದ ವಿಚಾರವನ್ನು ನಿರ್ಮಾಣ ತಂಡವೇ ಹೇಳಿತ್ತು. ಆದರೆ, ರಮ್ಯಾ ಯಾಕೆ ಅದರಿಂದ ಹೊರ ಬಂದರು ಎನ್ನುವ ವಿಚಾರವನ್ನು ಹೇಳಿರಲಿಲ್ಲ. ಇದನ್ನೂ ಓದಿ: ತಮಿಳಿನತ್ತ ಹೊಂಬಾಳೆ ಫಿಲ್ಮ್ಸ್:ಕೀರ್ತಿ ಸುರೇಶ್ ನಟನೆಯ `ರಘುತಥಾ’ ಚಿತ್ರ ನಿರ್ಮಾಣಕ್ಕೆ ಸಾಥ್
ಸ್ವಾತಿ ಮುತ್ತಿನ ಮಳೆ ಹನಿಯೇ ಸಿನಿಮಾದ ಶೂಟಿಂಗ್ ಇದೀಗ ಸಂಪೂರ್ಣ ಮುಗಿದಿದೆ. ಹಾಗಾಗಿ ಚಿತ್ರದ ಕ್ಯಾರೆಕ್ಟರ್ ಪೋಸ್ಟರ್ ಅನ್ನು ಸ್ವತಃ ರಮ್ಯಾ ಅವರೇ ಹಂಚಿಕೊಂಡಿದ್ದಾರೆ. ಸಿರಿ ಈ ಸಿನಿಮಾದಲ್ಲಿ ಯಾವ ಲುಕ್‍ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಕುತೂಹಲಕ್ಕೆ ತೆರೆ ಎಳೆದಿದ್ದಾರೆ. ಇದೊಂದು ಮಹಿಳಾ ಪ್ರಧಾನ ಸಿನಿಮಾವಾಗಿದ್ದು, ಬಹುತೇಕ ಕಥೆ ಸಿರಿ ಅವರ ಪಾತ್ರದ ಸುತ್ತಲೇ ಸುತ್ತಲಿದೆಯಂತೆ.
Live Tv
[brid partner=56869869 player=32851 video=960834 autoplay=true]
ಮೋಹಕ ತಾರೆ ರಮ್ಯಾ (Ramya) ಮತ್ತೆ ಸಿನಿಮಾ ರಂಗಕ್ಕೆ ಬರುವ ವಿಚಾರ ಅವರ ಅಭಿಮಾನಿಗಳಲ್ಲಿ ಸಂತಸ ಮೂಡಿಸಿತ್ತು. ಹಲವು ವರ್ಷಗಳ ನಂತರ ಮತ್ತೆ ರಮ್ಯಾ ಸ್ಯಾಂಡಲ್ ವುಡ್ ಗೆ ಬಂದರಲ್ಲ ಅಂತ ಸಂಭ್ರಮಿಸುವ ಹೊತ್ತಿನಲ್ಲೇ, ಏನೋ ಯಡವಟ್ಟಾದ ವಿಚಾರವೊಂದು ಗಾಂಧಿನಗರದಲ್ಲಿ ಹರಿದಾಡುತ್ತಿದೆ. ಅವರೇ ನಿರ್ಮಾಣ ಮಾಡುತ್ತಿದ್ದ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾದಿಂದ ರಮ್ಯಾ ಹೊರ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ.
ಈ ಹಿಂದೆ ರಮ್ಯಾ ಅವರ ಪ್ರೊಡಕ್ಷನ್ ಹೌಸ್ ಆ್ಯಪಲ್ ಬಾಕ್ಸ್ ತಿಳಿಸಿದಂತೆ ‘ಸ್ವಾತಿ ಮುತ್ತಿನ ಮಳೆ ಹನಿಯೇ’ (Swati Muttina Malehaniye) ಸಿನಿಮಾವನ್ನು ರಮ್ಯಾ ಅವರೇ ನಿರ್ಮಾಣ ಮಾಡಿ, ಅವರೇ ನಾಯಕಿಯಾಗಿ ನಟಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಇದೀಗ ನಾಯಕಿಯ ಸ್ಥಾನವನ್ನು ಬೇರೊಬ್ಬರು ತುಂಬಲಿದ್ದಾರೆ ಎನ್ನಲಾಗುತ್ತಿದೆ. ಈ ಸಿನಿಮಾದಲ್ಲಿ ಸಿರಿ ರವಿಕುಮಾರ್ ಲೀಡ್ ಪಾತ್ರದಲ್ಲಿ ಮಾಡಲಿದ್ದಾರೆ ಎಂದು ಸ್ವತಃ ರಮ್ಯಾ ಅವರ ಪ್ರೊಡಕ್ಷನ್ ಹೌಸ್ ತಿಳಿಸಿದೆ. ಇದನ್ನೂ ಓದಿ: ರಿಷಬ್ ಶೆಟ್ಟಿ ಸಕ್ಸಸ್ ಸೀಕ್ರೆಟ್ ಬಗ್ಗೆ ತಂದೆ ಭಾಸ್ಕರ್ ಶೆಟ್ಟಿ ಮಾತು
ಆ್ಯಪಲ್ ಬಾಕ್ಸ್ (apple box) ಅಧಿಕೃತ ಪೇಜಿನಲ್ಲಿ ಹಾಕಿರುವಂತೆ, ‘ಸಿರಿ ರವಿಕುಮಾರ್ (Siri Ravikumar) ನಮ್ಮ ನಿರ್ಮಾಣದ ಸಿನಿಮಾದಲ್ಲಿ ಮುಖ್ಯ ಪಾತ್ರ ಮಾಡುತ್ತಿದ್ದಾರೆ. ಆದರೆ, ರಮ್ಯಾ ಬೆಳ್ಳಿಪರದೆಯ ಮೇಲೆ ಆದಷ್ಟು ಬೇಗ ಮರಳಲಿದ್ದಾರೆ’ ಎಂದು ಬರೆಯಲಾಗಿದೆ. ಅಲ್ಲಿಗೆ ರಮ್ಯಾ ಕೇವಲ ನಿರ್ಮಾಪಕಿಯಾಗಿ ಮಾತ್ರ ಉಳಿಯಲಿದ್ದಾರಾ ಅಥವಾ ಇಬ್ಬರು ನಾಯಕಿಯರು ಈ ಸಿನಿಮಾದಲ್ಲಿ ಇದ್ದಾರಾ ಎನ್ನುವುದು ಸದ್ಯಕ್ಕಿರುವ ಕುತೂಹಲ.
ಇದೊಂದು ಮಹಿಳಾ ಪ್ರಧಾನ ಸಿನಿಮಾವಾಗಿದ್ದು, ರಾಜ್ ಬಿ ಶೆಟ್ಟಿ (Raj B. Shetty) ಈ ಚಿತ್ರದ ನಿರ್ದೇಶಕರು. ಅವರು ಕೂಡ ಪ್ರಧಾನ ಪಾತ್ರವನ್ನೇ ನಿರ್ವಹಿಸುತ್ತಿದ್ದಾರೆ. ಅಲ್ಲದೇ, ನಿರ್ಮಾಣದಲ್ಲೂ ಹೂಡಿಕೆ ಮಾಡಿದ್ದಾರೆ. ರಮ್ಯಾ ಈ ಸಿನಿಮಾದಲ್ಲಿ ಕೇವಲ ನಿರ್ಮಾಪಕಿಯಾಗಿ ಮಾತ್ರ ಇರುತ್ತಾರಾ? ಅಥವಾ ನಟಿಯಾಗಿಯೂ ತೆರೆಯ ಮೇಲೆ ಕಾಣಿಸಿಕೊಳ್ಳುತ್ತಾರಾ ಎನ್ನುವುದನ್ನು ಕಾದು ನೋಡಬೇಕು.
Live Tv
[brid partner=56869869 player=32851 video=960834 autoplay=true]
ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ(Sandalwood Queen Ramya) ಚಿತ್ರರಂಗಕ್ಕೆ ಕಂಬ್ಯಾಕ್ ಆಗುತ್ತಿದ್ದಾರೆ. `ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರದ ಮೂಲಕ ನಟನೆ ಜೊತೆಗೆ ನಿರ್ಮಾಣಕ್ಕೂ ಇಳಿದಿದ್ದಾರೆ. ರಾಜ್ ಬಿ. ಶೆಟ್ಟಿ (Raj B Shetty) ಜೊತೆ ಮೋಹಕತಾರೆ ರಮ್ಯಾ ಕಂಬ್ಯಾಕ್ ಆಗುತ್ತಿದ್ದಾರೆ. ಇದೀಗ ಈ ಚಿತ್ರದ ಲೇಟೆಸ್ಟ್ ಅಪ್ಡೇಟ್‌ವೊಂದು ಹೊರಬಿದ್ದಿದೆ.
ರಮ್ಯಾ ಇದೀಗ ನಿರ್ಮಾಪಕಿಯಾಗಿ(Producer) ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಅಭಿಮಾನಿಗಳ ಆಸೆಯಂತೆ ತಮ್ಮ ನಿರ್ಮಾಣದ ಚಿತ್ರದಲ್ಲಿ ನಾಯಕಿಯಾಗಿ ಬರುತ್ತಿದ್ದಾರೆ. ಇತ್ತೀಚೆಗಷ್ಟೇ ರಾಜ್ ಬಿ. ಶೆಟ್ಟಿ ಮತ್ತು ರಮ್ಯಾ ಕಾಂಬಿನೇಷನ್‌ನಲ್ಲಿ ಹೊಸ ಸಿನಿಮಾ ಮಾಡುವುದಾಗಿ ಅನೌನ್ಸ್ ಮಾಡಿದ್ದರು. ಅದರಂತೆ ಇದೀಗ ಸಿಂಗಲ್ ಶೆಡ್ಯೂಲ್‌ನಲ್ಲಿ ಸಿನಿಮಾ ಕಂಪ್ಲೀಟ್ ಮಾಡಲು ಯೋಚಿಸಿದ್ದಾರೆ. ಇದನ್ನೂ ಓದಿ:ವಾರಾಣಸಿಯಲ್ಲಿ ಗಂಗಾರತಿ ಮಾಡಿದ ‘ಬನಾರಸ್’ ಹೀರೋ ಝೈದ್ ಖಾನ್
ದೀಪಾವಳಿ ಹಬ್ಬದ ನಂತರ `ಸ್ವಾತಿ ಮುತ್ತಿನ ಮಳೆ ಹನಿಯೇ’ (Swathi Muttina Male Haniye) ಚಿತ್ರದ ಶೂಟಿಂಗ್ ಶುರುವಾಗಲಿದೆ. ಊಟಿ ಮತ್ತು ಮೈಸೂರಿನಲ್ಲಿ ಚಿತ್ರೀಕರಣ ನಡೆಯಲಿದೆ. ಈ ಶೂಟಿಂಗ್ ಮಧ್ಯೆ ಎರಡು ದಿನವಷ್ಟೇ ಬ್ರೇಕ್ ಇರಲಿದ್ದು, ಒಂದೇ ಶೆಡ್ಯೂಲ್‌ನಲ್ಲಿ ಚಿತ್ರೀಕರಣ ಕಂಪ್ಲೀಟ್ ಆಗಲಿದೆ.
ರಮ್ಯಾ ಬ್ರೇಕ್‌ನ ನಂತರ ಬಿಗ್ ಸ್ಕ್ರೀನ್‌ನಲ್ಲಿ ಕಾಣಿಸಿಕೊಳ್ಳುತ್ತಿರುವುದು ರಮ್ಯಾ ಅಭಿಮಾನಿಗಳ ಪಾಲಿಗೆ ಇದು ಬಿಗ್ ನ್ಯೂಸ್. ಅದರಲ್ಲೂ ರಾಜ್ ಬಿ. ಶೆಟ್ಟಿ ಅವರಂತಹ ಪ್ರತಿಭಾವಂತ ನಟ ಕಮ್ ನಿರ್ದೇಶಕನ ಜೊತೆ ನೆಚ್ಚಿನ ನಟಿ ರಮ್ಯಾ ಬರುತ್ತಿರೋದಕ್ಕೆ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.
Live Tv
[brid partner=56869869 player=32851 video=960834 autoplay=true]
ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ(Actress Ramya) ಮತ್ತೆ ಸಾಕಷ್ಟು ವರ್ಷಗಳ ನಂತರ ಬಣ್ಣದ ಲೋಕಕ್ಕೆ ಕಂಬ್ಯಾಕ್ ಆಗಲು ಸಜ್ಜಾಗಿದ್ದಾರೆ. ಇದೀಗ ಖಾಸಗಿ ವಾಹಿನಿಯ ಅವಾರ್ಡ್ ಇವೆಂಟ್‌ಗೆ ಭೇಟಿ ಕೊಟ್ಟಿದ್ದ ವೇಳೆ ತಾವು ಮದುವೆಯಾಗುವ ಹುಡುಗ ಹೇಗಿರಬೇಕು ಎಂದು ರಮ್ಯಾ ರಿವೀಲ್ ಮಾಡಿದ್ದಾರೆ.
ಚಂದನವನದ ಸಾಕಷ್ಟು ಸಿನಿಮಾಗಳ ಮೂಲಕ ಸ್ಟಾರ್‌ಗಳ ಜೊತೆ ತೆರೆಹಂಚಿಕೊಂಡು ಮೋಡಿ ಮಾಡಿರುವ ನಟಿ ರಮ್ಯಾ ಮತ್ತೆ ಚಿತ್ರರಂಗದಲ್ಲಿ ಸದ್ದು ಮಾಡ್ತಿದ್ದಾರೆ. `ಸ್ವಾತಿ ಮುತ್ತಿನ ಮಳೆ ಹನಿಯೇ’ (Swathi Muttina Male Haniye) ಭಿನ್ನ ಕಥೆಯ ಮೂಲಕ ಕಂಬ್ಯಾಕ್ ಆಗಿದ್ದಾರೆ. ಇದೀಗ ವೇದಿಕೆಯೊಂದರಲ್ಲಿ ತಾವು ಮದುವೆ ಆಗುವ ಹುಡುಗ ಹೀಗೆ ಇರಬೇಕು ಎಂದು ರಮ್ಯಾ ಹೇಳಿದ್ದಾರೆ.
ಅನುಬಂಧ ಅವಾರ್ಡ್ಸ್ ನಿರೂಪಕ ಅಕುಲ್ ಬಾಲಾಜಿ, ಪ್ರೀತಿ ಹುಡುಗ ಹೇಗಿರಬೇಕು ಎಂದು ಪ್ರಶ್ನೆ ಮಾಡಿದ್ದಾರೆ. ಆಗ ನಾನು ಸಿಂಗಲ್ ಆಗಿದ್ದೇನೆ, ಆತ ಕೂಡ ಸಿಂಗಲ್ ಆಗಿರಬೇಕು. ಆತನಿಗೆ ಮದುವೆ ಆಗಿರಬಾರದು. ಹುಡುಗನ ಲುಕ್ಸ್ ಬಗ್ಗೆ ನಾನು ಯೋಚನೆ ಮಾಡುವುದಿಲ್ಲ. ಅವರು ಒಳ್ಳೆಯ ಮನುಷ್ಯನಾಗಿರಬೇಕು. ಅವನಲ್ಲಿ ಕರುಣೆಯ ಗುಣ ಹೆಚ್ಚಿಗೆ ಇರಬೇಕು ಎಂದು ರಮ್ಯಾ ಹೇಳಿಕೊಂಡಿದ್ದಾರೆ. ಇದನ್ನೂ ಓದಿ:ಅಪ್ಪು ಗುಣಗಳನ್ನ ಅಳವಡಿಸಿಕೊಳ್ಳಬೇಕು ಎಂದು ಫ್ಯಾನ್ಸ್‌ಗೆ ಉಪ್ಪಿ ಸಂದೇಶ
ಇನ್ನೂ ಸಾಕಷ್ಟು ವರ್ಷಗಳ ನಂತರ ಕಂಬ್ಯಾಕ್ ಆಗುತ್ತಿರುವ ಮೋಹಕ ತಾರೆ ರಮ್ಯಾ ಎಂಟ್ರಿಯ ಬಗ್ಗೆ ಅಭಿಮಾನಿಗಳು ಕಾತುರರಾಗಿದ್ದಾರೆ.
Live Tv
[brid partner=56869869 player=32851 video=960834 autoplay=true]
ಆಪಲ್ ಬಾಕ್ಸ್ ಸ್ಟುಡಿಯೋಸ್ ಎಂಬ ನಿರ್ಮಾಣ ಸಂಸ್ಥೆಯ ಮೂಲಕ ಇನ್ನು ಮುಂದೆ ಚಿತ್ರಗಳನ್ನು ನಿರ್ಮಿಸುವುದಾಗಿ ರಮ್ಯಾ ಯಾವಾಗ ಘೋಷಿಸಿದರೋ, ಆಗಿನಿಂದಲೂ ಆ ಚಿತ್ರ ಯಾವುದಿರಬಹುದು? ಯಾರು ನಟಿಸಬಹುದು? ರಮ್ಯಾ ಬರೀ ನಿರ್ಮಾಪಕಿಯಾಗಿರುತ್ತಾರಾ ಅಥವಾ ಈ ಚಿತ್ರದ ಮೂಲಕ ನಟನೆಗೆ ವಾಪಸ್ಸಾಗುತ್ತಾರಾ? ಎಂಬಂತಹ ಹಲವು ಪ್ರಶ್ನೆಗಳು ಇದ್ದವು. ಈಗ ಈ ಎಲ್ಲ ಪ್ರಶ್ನೆಗಳಿಗೂ ಉತ್ತರ ಸಿಕ್ಕಿದೆ. ಇದನ್ನೂ ಓದಿ:ಬಿಗ್ ಬಾಸ್ ಮನೆಗೆ ನಾನು ಲವ್ ಮಾಡೋಕೆ ಬಂದಿಲ್ಲ: ಗೊಬ್ಬರಗಾಲಗೆ ಕಾವ್ಯಶ್ರೀ ವಾರ್ನಿಂಗ್
ವಿಜಯದಶಮಿಯ ದಿನದಂದು ರಮ್ಯಾ ತಮ್ಮ ನಿರ್ಮಾಣದ ಮೊದಲ ಚಿತ್ರವನ್ನು ಅಧಿಕೃತವಾಗಿ ಘೋಷಿಸಿದ್ದಾರೆ. ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಹೆಸರಿನ ಈ ಚಿತ್ರವನ್ನು ರಾಜ್ ಬಿ ಶೆಟ್ಟಿ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ರಮ್ಯಾ ಮತ್ತು ರಾಜ್ ಬಿ ಶೆಟ್ಟಿ ಇಬ್ಬರೂ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ರಾಜ್ ಹೇಳಿದ ಕಥೆಯಿಂದ ಖುಷಿಯಾಗಿ ಈ ಚಿತ್ರವನ್ನು ನಿರ್ಮಿಸುತ್ತಿರುವುದಾಗಿ ರಮ್ಯಾ ಹೇಳಿಕೊಂಡಿದ್ದಾರೆ. ಪ್ರೀ-ಪ್ರೊಡಕ್ಷನ್ ಹಂತದಲ್ಲಿರುವ ಈ ಚಿತ್ರವು ಸದ್ಯದಲ್ಲೇ ಪ್ರಾರಂಭವಾಗಲಿದೆ. ರಾಜ್ ಶೆಟ್ಟಿ ನಿರ್ದೇಶನದ ‘ಗರುಡ ಗಮನ ಋಷಭ ವಾಹನ’ ಚಿತ್ರಕ್ಕೆ ಛಾಯಾಗ್ರಾಹಕರಾಗಿ ಕೆಲಸ ಮಾಡಿದ್ದ ಪ್ರವೀಣ್ ಶ್ರೀಯಾನ್ ಮತ್ತು ಸಂಗೀತ ನಿರ್ದೇಶಕ ಮಿಥುನ್ ಮುಕುಂದನ್ ಇಲ್ಲೂ ಮುಂದುವರೆಯಲಿದ್ದಾರೆ.
‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರವನ್ನು ರಮ್ಯಾ ಅವರ ಆಪಲ್ಬಾಕ್ಸ್ ಸ್ಟುಡಿಯೋಸ್ ಮತ್ತು ಲೈಟರ್ ಬುದ್ಧ ಫಿಲಂಸ್ ಜಂಟಿಯಾಗಿ ನಿರ್ಮಿಸುತ್ತಿವೆ. ಈ ಚಿತ್ರದ ಬಗ್ಗೆ ಇನ್ನಷ್ಟು ಮಾಹಿತಿ ಸದ್ಯದಲ್ಲೇ ಹೊರಬೀಳಲಿದೆ.
Live Tv
[brid partner=56869869 player=32851 video=960834 autoplay=true]