Tag: ಸ್ವಾಮೀಜಿಗಳು

  • ಶಿವಮೊಗ್ಗದ ರಾಮಲಿಂಗೇಶ್ವರ ಮಠದ ಆಸ್ತಿ ವಿವಾದ- ಬೆಂಗ್ಳೂರಿನ 18 ಎಕರೆ ಮೇಲೆ ಕಣ್ಣು

    ಶಿವಮೊಗ್ಗದ ರಾಮಲಿಂಗೇಶ್ವರ ಮಠದ ಆಸ್ತಿ ವಿವಾದ- ಬೆಂಗ್ಳೂರಿನ 18 ಎಕರೆ ಮೇಲೆ ಕಣ್ಣು

    – ಅಸಲಿ, ನಕಲಿ ಸ್ವಾಮೀಜಿಗಳ ಫೈಟ್

    ಶಿವಮೊಗ್ಗ: ನಗರದ ರಾಮಲಿಂಗೇಶ್ವರ ಮಠ, ಈ ಮಠದ ಹೆಸರಲ್ಲಿ ಬೆಂಗಳೂರಿನ ನಾಗಸಂದ್ರ ಬಳಿ 18 ಎಕರೆ ಜಮೀನಿದೆ. ನೂರಾರು ಕೋಟಿ ಬೆಲೆಬಾಳುವ ಈ ಜಾಗದ ಮೇಲೆ ಸ್ವಾಮೀಜಿಗಳು, ರಾಜಕಾರಣಿಗಳು, ಪ್ರಭಾವಿಗಳ ಕಣ್ಣು ಬಿದ್ದಿದೆ. ಸ್ವಾಮೀಜಿಗಳ ನಡುವೆಯೇ ಅಸಲಿ, ನಕಲಿ ಅಂತ ವಿವಾದ ತಾರಕಕ್ಕೇರಿದೆ.

    ಶಿವಮೊಗ್ಗ ಜಿಲ್ಲೆಯ ಹಾರನಹಳ್ಳಿಯಲ್ಲಿರುವ ರಾಮಲಿಂಗೇಶ್ವರ ಮಠಕ್ಕೆ ನೂರಾರು ವರ್ಷ ಇತಿಹಾಸ ಇದೆ. ಕೆಳದಿ ಸಂಸ್ಥಾನದ ಅರಸರ ಕಾಲದಲ್ಲಿ ಈ ಮಠ ಅಸ್ತಿತ್ವಕ್ಕೆ ಬಂತಂತೆ. ಮಠ ಆರಂಭದ ದಿನಗಳಲ್ಲಿ ದಾಸೋಹ, ಪೂಜೆ-ಪ್ರವಚನ ಮಾಡಿಕೊಂಡು ಸಾಮಾಜಮುಖಿ ಕೆಲಸದಲ್ಲಿ ತೊಡಗಿತ್ತು. ಕಾಲಕ್ರಮೇಣ ಮಠ ಕೂಡ ಕಮರ್ಷಿಯಲ್ ಟಚ್ ಪಡೆದುಕೊಂಡಿತು. ಈ ಮಠಕ್ಕೆ ಬೆಂಗಳೂರಿನ ನಾಗಸಂದ್ರ ಬಳಿ ನೂರಾರು ಕೋಟಿ ರೂ. ಬೆಲೆ ಬಾಳುವ 18 ಎಕರೆ ಜಮೀನಿದ್ದು ಮಠದ ಆಸ್ತಿ ಕಬಳಿಸಲು ಸ್ವಾಮೀಜಿಗಳ ನಡುವೆ ಪೈಪೋಟಿ ಶುರುವಾಗಿದ್ಯಂತೆ.

    ಮಠದ ಆಸ್ತಿ ವ್ಯಾಜ್ಯ ಕೋರ್ಟಿನಲ್ಲಿದ್ದು 1988ರಿಂದ ಇಂದಿನವರೆಗೂ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಸದ್ಯ ವಿಶ್ವರಾಧ್ಯ ಸ್ವಾಮೀಜಿ ಮಠದಲ್ಲಿ ವಾಸವಿದ್ದು, ಕಾಶಿ ಪ್ರವಾಸಕ್ಕೆ ಹೋಗಿದ್ದಾರೆ. ಇದೇ ವೇಳೆ ರಾಮಲಿಂಗೇಶ್ವರ ಮಠದ ಮೂಲ ಸ್ವಾಮೀಜಿ ನಾನೇ ಅಂತ ಹೇಳಿಕೊಂಡು ಶಿವಕುಮಾರ ಸ್ವಾಮಿ ಅಲಿಯಾಸ್ ಚಂದ್ರಮೌಳೇಶ್ವರ ಸ್ವಾಮೀಜಿ ತಮ್ಮ ಬೆಂಬಲಿಗರ ಜೊತೆ ಬಂದು ಮಠಕ್ಕೆ ಪ್ರವೇಶಿಸಲು ಯತ್ನಿಸಿದ್ದಾರೆ. ಆಗ ಮಠದಲ್ಲಿದ್ದ ವಿಶ್ವರಾಧ್ಯ ಶ್ರೀ ಬೆಂಬಲಿಗರು ಅಡ್ಡಿಪಡಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಕುಂಸಿ ಪೊಲೀಸರು ಗುಂಪು ಗಲಾಟೆ ತಪ್ಪಿಸಿದ್ದಾರೆ.

    ಬೆಂಗಳೂರಿನ ನಾಗಸಂದ್ರ ಬಳಿ ಮಠಕ್ಕೆ ಸೇರಿದ 18 ಎಕರೆ ಜಮೀನನ್ನು ಮೆಟ್ರೋ ಕಾಮಗಾರಿಗೆ ಬಿಎಂಆರ್‍ಸಿಎಲ್ ವಶಪಡಿಸಿಕೊಂಡಿದೆ. ಪರಿಹಾರ ಮೊತ್ತವಾಗಿ 88 ಕೋಟಿ ರೂ.ನೀಡಿದೆ. ಆದರೆ ಈ ಭೂಮಿ ನ್ಯಾಯಾಲಯದಲ್ಲಿದ್ದ ಕಾರಣ ಪರಿಹಾರದ ಹಣ ಸರ್ಕಾರದ ಬಳಿಯೇ ಇದೆ. ಹಾಗಾಗಿ ಈ ಹಣ ಲಪಟಾಯಿಸಲು ಮಠದ ಗಂಧ-ಗಾಳಿಯೇ ಗೊತ್ತಿಲ್ಲದವರು ಕೂಡ ನಾನು ಸ್ವಾಮೀಜಿ, ನಾನು ಪೀಠಾಧಿಪತಿ ಅಂತ ಹೊಸಹೊಸದಾಗಿ ಹುಟ್ಟಿಕೊಳ್ತಿದ್ದಾರಂತೆ.

    ಒಟ್ಟಾರೆ, ರಾಮಲಿಂಗೇಶ್ವರ ಮಠದ ಆಸ್ತಿ ವಿವಾದ ಗೊಂದಲದ ಗೂಡಾಗಿದೆ. ಈಗಾಗಿ ಇಡಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿ ಆಗ ಸತ್ಯಾಸತ್ಯತೆ ಹೊರ ಬರಲಿದೆ ಅಂತ ಮಠದ ಭಕ್ತರು ಹಾಗು ಗ್ರಾಮಸ್ಥರು ಆಗ್ರಹಿಸಿದ್ದಾರೆ.

  • ನಾವ್ ಒಂದು ವಾರ ಹೆಂಡ್ತಿನಾ ಬಿಡಲ್ಲ, ಸ್ವಾಮೀಜಿಗಳು ಮದ್ವೆಯನ್ನೇ ಆಗಲ್ಲ: ಈಶ್ವರಪ್ಪ

    ನಾವ್ ಒಂದು ವಾರ ಹೆಂಡ್ತಿನಾ ಬಿಡಲ್ಲ, ಸ್ವಾಮೀಜಿಗಳು ಮದ್ವೆಯನ್ನೇ ಆಗಲ್ಲ: ಈಶ್ವರಪ್ಪ

    ತುಮಕೂರು: ಸರ್ವಸಂಗ ಪರಿತ್ಯಾಗಿಗಳ ಮುಂದೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಪತ್ನಿಯರ ವಿಚಾರವಾಗಿ ಮಾತನಾಡಿ, ಹಾಸ್ಯ ಮಾಡಿದ ಪ್ರಸಂಗ ಇಂದು ತುರುವೇಕೆರೆಯಲ್ಲಿ ನಡೆದಿದೆ.

    ತುರುವೇಕೆರೆಯ ಕಾಡಸಿದ್ದೇಶ್ವರ ಮಠದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಇಡೀ ಜೀವನವನ್ನು ತ್ಯಾಗ ಮಾಡಿ ನಮ್ಮೆಲ್ಲರ ಕಲ್ಯಾಣಕ್ಕೆ ಸ್ವಾಮೀಜಿಗಳು ಶ್ರಮಿಸುತ್ತಾರೆ. ಯಾವುದೋ ಜನ್ಮದಲ್ಲಿ ಮಾಡಿದ ಪುಣ್ಯದಿಂದ ಅಂತಹ ಪೂಜ್ಯರ ಕಾರ್ಯಕ್ರದಲ್ಲಿ ಭಾಗವಹಿಸುವ ಅವಕಾಶ ಸಿಕ್ಕಿದೆ. ನಾವೆಲ್ಲ ಸಂಸಾರಸ್ಥರು, ಒಂದು ವಾರ ಹೆಂಡತಿಯನ್ನು ಬಿಡಲ್ಲ. ನಾವ್ ಬಿಡ್ತೀವಾ ಎಂದು ಪ್ರಶ್ನಿಸಿ ಕಾರ್ಯಕ್ರದಲ್ಲಿ ನಗೆ ಹರಿಸಿದರು.

    ಸ್ವಾಮೀಜಿಗಳಿಗೆ ಮದುವಯನ್ನೇ ಆಗಲ್ಲ. ಅವರು ಸ್ವಾಮೀಜಿ ಆಗುವುದಕ್ಕೂ ಮುನ್ನ ಬ್ರಹ್ಮಚರ್ಯ ಅನುಸರಿಸುತ್ತಾರೆ. ಇಂಥವರನ್ನ ನಾವು ತ್ಯಾಗಿಗಳು ಎನ್ನುತ್ತೇವೆ. ನಾವೆಲ್ಲ ಭೋಗಿಗಳು, ನಮ್ಮ ಜೀವನದ ಎಲ್ಲಾ ಆನಂದವನ್ನು ನಾವು ಕಾಣುತ್ತೇವೆ. ತ್ಯಾಗಿಗಳು ಆನಂದ ಅನುಭವಿಸಿದಂತಹ ಭೋಗಿಗಳಿಗೆ ಇನ್ನೂ ಒಳ್ಳೆದಾಗಲಿ ಎಂದು ಆಶೀರ್ವಾದ ಮಾಡುತ್ತಾರೆ ಎಂದರು.

  • ವೀರಶೈವ ಬಿಟ್ಟು ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸಿ – ಮತ್ತೆ ಪ್ರತ್ಯೇಕ ಧರ್ಮದ ಕೂಗು

    ವೀರಶೈವ ಬಿಟ್ಟು ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸಿ – ಮತ್ತೆ ಪ್ರತ್ಯೇಕ ಧರ್ಮದ ಕೂಗು

    ಬೆಂಗಳೂರು: ಮತ್ತೊಮ್ಮೆ ಪ್ರತ್ಯೇಕ ಲಿಂಗಾಯತ ಧರ್ಮದ ಕೂಗು ಕೇಳಿಬಂದಿದೆ. ರಾಜ್ಯ ಸರ್ಕಾರ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ ಹಾಗೂ ಹಿಂದುಳಿದ ವರ್ಗಕ್ಕೆ ಸೇರಿಸುತ್ತಿರುವ ಬೆನ್ನಲ್ಲೇ ನಿಗಮಕ್ಕೆ ಲಿಂಗಾಯತ ಎಂಬ ಹೆಸರನ್ನು ಮಾತ್ರ ಬಳಸುವಂತೆ ಜಾಗತಿಕ ಲಿಂಗಾಯತ ಮಹಾಸಭಾ ಆಗ್ರಹಿಸಿದೆ.

    ಬಸವ ಸಮಿತಿಯ ಅರಿವಿನ ಮನೆಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಲಿಂಗಾಯತ ಸ್ವಾಮೀಜಿಗಳು, ಸರ್ಕಾರದ ನಿರ್ಧಾರವನ್ನು ಜಾಗತಿಕ ಲಿಂಗಾಯತ ಮಹಾಸಭಾದ ಸ್ವಾಗತಿಸುತ್ತದೆ. ಆದರೆ, ವೀರಶೈವ ಎನ್ನುವುದನ್ನು ಬಿಟ್ಟು ಲಿಂಗಾಯತ ಅಭಿವೃದ್ಧಿ ನಿಗಮ ಎಂದು ಸ್ಥಾಪಿಸಿ. ಅಲ್ಲದೆ, ಪ್ರತ್ಯೇಕ ಧರ್ಮ ಮತ್ತು ಹಿಂದುಳಿದ ವರ್ಗದ ವಿಚಾರ ಬೇರೆ. ಹೀಗಾಗಿ ಧರ್ಮದ ಹೋರಾಟ ನಿರಂತರವಾಗಿ ನಡೆಯುತ್ತದೆ. ಲಿಂಗಾಯತ ಅಸ್ಮಿತೆಗಾಗಿ ಹಾಗೂ ಸ್ವಾತಂತ್ರ್ಯ ಧರ್ಮಕ್ಕಾಗಿ ನಮ್ಮ ಹೋರಾಟ ಮುಂದುವರಿಯಲಿದೆ. ಈ ವಿಚಾರವಾಗಿ ನಾವು ಸುಪ್ರೀಂ ಕೋರ್ಟ್‍ಗೆ ಹೋಗಲು ಸಿದ್ಧರಿದ್ದೇವೆ ಎಂದು ಒಕ್ಕೂರಲಿನಿಂದ ತಿಳಿಸಿದ್ದಾರೆ.


    ಸುದ್ದಿಗೋಷ್ಠಿಯಲ್ಲಿ ಗದಗನ ಡಂಬಳ ಮಠದ ಶ್ರೀ ಸಿದ್ದರಾಮ ಸಾಮೀಜಿ, ಬಾಲ್ಕಿ ಹಿರೇಮಠ ಸಂಸ್ಥಾನದ ಬಸವಲಿಂಗ ಪಟ್ಟದ ದೇವರು, ಕೂಡಲ ಸಂಗಮದ ಪಂಚಮಸಾಲಿ ಪೀಠದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ, ಮುಂಡರಗಿ ಮಠದ ಶ್ರೀ ನಿಜಗುಣಾನಂದ ಸ್ವಾಮೀಜಿ, ಮುರುಘಾಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ, ಬಾಗಲಕೋಟೆ ಜಿಲ್ಲೆಯ ಕೂಡಲ ಸಂಗಮದ ಮಾತೋಶ್ರಿ ಗಂಗಾಮಾತೆ, ವಿಜಯ ಮಹಾಂತೇಶ್ವರ ಮಠದ ಗುರು ಮಹಾಂತ ಸ್ವಾಮೀಜಿ ಸೇರಿದಂತೆ ಹಲವರು ಭಾಗಿಯಾಗಿ ಕಾಂಗ್ರಸ್‍ನ ಕೆಲ ಲಿಂಗಾಯತ ನಾಯಕರ ನಿಲುವನ್ನು ಖಂಡಿಸಿದ್ದಾರೆ.

    ಗದಗ ಡಂಬಳ ಮಠದ ಶ್ರೀ ಸಿದ್ದರಾಮ ಸ್ವಾಮೀಜಿ ಮಾತನಾಡಿ, ವಿರಶೈವ ಲಿಂಗಾಯತ ನಿಗಮ ಮಂಡಳಿ ಸ್ಥಾಪಿಸುವ ಕುರಿತು ಕಾಂಗ್ರೆಸ್ ನಾಯಕರು ಸಭೆ ಮಾಡಿದ್ದು, ಇದಕ್ಕೆ ನಮ್ಮ ತಕರಾರಿಲ್ಲ. ಅದರೆ, ವೀರಶೈವ ಲಿಂಗಾಯತ ಎಂದು ಎಲ್ಲೂ ಇಲ್ಲ ಹೀಗಾಗಿ ಹೆಸರನ್ನು ಲಿಂಗಾಯತ ಎಂದು ಬದಲಿಸಬೇಕು. ವೀರಶೈವ ಎನ್ನುವುದೇ ಇಲ್ಲದಿದ್ದಾಗ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಎಂಬ ಹೆಸರನ್ನೇಕೆ ಇಡಬೇಕು ಎಂದು ಪ್ರಶ್ನಿಸಿದ್ದಾರೆ.

    ಲಿಂಗಾಯತ ಸ್ವತಂತ್ರ ಧರ್ಮ ಹೋರಾಟ ಮುಗಿದ ಅಧ್ಯಾಯ ಎಂದು ಸುದ್ದಿ ಪತ್ರಿಕೆಯಲ್ಲಿ ಪ್ರಕಟವಾಗಿದೆ. ಇದು ಸುಳ್ಳು ಲಿಂಗಾಯತರ ಹೋರಾಟ ನಿರಂತರವಾಗಿರುತ್ತದೆ. ಯಾವುದೇ ಕಾರಣಕ್ಕೂ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಲಿಂಗಾಯತ ಹೋರಾಟ ಮುಗಿದ ಅಧ್ಯಾಯ ಎಂಬುದು ಕಾಂಗ್ರೆಸ್ ಪಕ್ಷದ ಹೇಳಿಕೆ ಅಗಿರಬಹುದು. ಅದರೆ, ಸ್ವತಂತ್ರ ಧರ್ಮದ ಹೋರಾಟ ನಮ್ಮ ಅಸ್ಮಿತೆ. ನಾವು ನಮ್ಮ ಹೋರಾಟವನ್ನು ಮುಂದುವರಿಸುತ್ತೇವೆ ಎಂದು ಸಿದ್ದರಾಮ ಸ್ವಾಮೀಜಿ ತಿಳಿಸಿದರು.

    ಕೂಡಲ ಸಂಗಮದ ಪಂಚಮಸಾಲಿ ಪೀಠದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಮಾತನಾಡಿ, ನಿಗಮ ಮಂಡಳಿ ಸ್ಥಾಪನೆ ಮಾಡಿ ಲಿಂಗಾಯತ ಜಾತಿಯನ್ನು ಹಿಂದುಳಿದ ವರ್ಗಕ್ಕೆ ಸೇರಿಸಲು ಮುಂದಾಗಿದ್ದಾರೆ. ಇದಕ್ಕೆ ನಮ್ಮ ಒಪ್ಪಿಗೆ ಇದೆ. ಆದರೆ ಸ್ವತಂತ್ರ ಧರ್ಮದ ಹೋರಾಟಕ್ಕೂ ನಿಗಮ ಮಂಡಳಿ ಸ್ಥಾಪನೆಗೂ ಸಂಬಂಧವಿಲ್ಲ. ಕಾಂಗ್ರಸ್ ಪಕ್ಷದ ಕೆಲ ಲಿಂಗಾಯತ ನಾಯಕರು ಈ ಗೊಂದಲವನ್ನು ಸೃಷ್ಟಿಸುತ್ತಿದ್ದಾರೆ. ಲಿಂಗಾಯತ ಧರ್ಮದ ಹೋರಾಟ ನಿರಂತರವಾಗಿರುತ್ತದೆ. ನಿಗಮ ಮಂಡಳಿಗೂ ಸಹ ವೀರಶೈವ ಎನ್ನುವುದನ್ನು ಬಿಟ್ಟು ಲಿಂಗಾಯತ ಅಭಿವೃದ್ಧಿ ನಿಗಮ ಎಂದು ಸ್ಥಾಪಿಸಿ ಎಂದು ಸಲಹೆ ನೀಡಿದ್ದಾರೆ.

    ಎಲ್ಲೂ ಉಲ್ಲೇಖವಾಗಿಲ್ಲ
    ಮಂಡಲ್ ವರದಿಯಲ್ಲಿ ಲಿಂಗಾಯತದ ಕುರಿತು ಪ್ರಸ್ತಾಪವಾಗಿಲ್ಲ. 30 ಪಂಗಡಗಳನ್ನು ಕೇಂದ್ರ ಸರ್ಕಾರದ ಹಿಂದುಳಿದ ವರ್ಗಕ್ಕೆ ಸೇರಿಸಲಾಗಿತ್ತು. ಉಳಿದ 90 ಪಂಗಡಗಳನ್ನು ಹಿಂದುಳಿದ ವರ್ಗಕ್ಕೆ ಸೇರಿಸಬೇಕೆಂಬ ಒತ್ತಡ ನಮ್ಮದಾಗಿದೆ. ಲಿಂಗಾಯತ ಗಾಣಿಗ, ನೇಕಾರ ಲಿಂಗಾಯತ, ಬಡಿಗ ಲಿಂಗಾಯತ ಸೇರಿದಂತೆ 30 ಪಂಗಡಗಳಿಗೆ ಲಿಂಗಾಯತ ಎಂದೇ ಸೇರಿಸಿದ್ದಾರೆ. ಯಾವ ಜಾತಿಯಲ್ಲೂ ವೀರಶೈವ ಲಿಂಗಾಯತ ಎಂದು ಉಲ್ಲೇಖವಾಗಿಲ್ಲ ಎಂದು ಜಾಗತಿಕ ಲಿಂಗಾಯತ ಮಹಾಸಭಾದ ಕಾರ್ಯದರ್ಶಿ ಎಸ್.ಎಂ.ಜಾಮದಾರ್ ಸ್ಪಷ್ಟಪಡಿಸಿದ್ದಾರೆ.

    ವೀರಶೈವವನ್ನು ಉಪಪಂಗಡವಾಗಿ ನಾವು ಗೌರವಿಸುತ್ತೇವೆ. ಆದರೆ, ತಾವೇ ಜಾತಿ ಹುಟ್ಟುಹಾಕಿದವರು, ಬಸವಣ್ಣ ಶಿಷ್ಯ ಎಂದರೆ ನಾವು ಒಪ್ಪುವುದಿಲ್ಲ. ಈ ಕುರಿತು ಬಹುತೇಕ ಜನರಿಗೆ ಜಾತಿ ಪ್ರಮಾಣ ಪತ್ರದಲ್ಲಿ ಗೊಂದಲ ಸೃಷ್ಟಿಸಿದ್ದಾರೆ. ಇದೀಗ ಮತ್ತೆ ಪ್ರತ್ಯೇಕ ಧರ್ಮದ ಮಾನ್ಯತೆ ನೀಡಿ ಎಂದರೆ, ಅವರೇನು ಹುಚ್ಚರಾ? 2002ರ ಗೆಜೆಟ್ ನೋಟಿಫಿಕೇಷನ್ ಸರ್ಕಾರ ಹಿಂಪಡೆಯಬೇಕು. ಇಲ್ಲವಾದಲ್ಲಿ ಹೈಕೋರ್ಟ್, ಸುಪ್ರೀಂ ಕೋರ್ಟ್ ಮೆಟ್ಟಿಲೇರಲೂ ಸಿದ್ಧ. ಈ ಕುರಿತು ತಪ್ಪು ಮಾಹಿತಿ ನೀಡಿ ಜನರನ್ನು ದಾರಿ ತಪ್ಪಿಸಬೇಡಿ ಎಂದು ಜಾಮದಾರ್ ಮನವಿ ಮಾಡಿದರು.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]