Tag: ಸ್ವಿಟ್ಜರ್ಲೆಂಡ್

  • ಕ್ವಾಂಟಮ್ ಕ್ಷೇತ್ರದಲ್ಲಿ ಸಹಭಾಗಿತ್ವ, ಸಂಶೋಧನೆ, ಆವಿಷ್ಕಾರಕ್ಕೆ ಕರ್ನಾಟಕದ ಜೊತೆ ಕೈಜೋಡಿಸಿ: ಬೋಸರಾಜು ಆಹ್ವಾನ

    ಕ್ವಾಂಟಮ್ ಕ್ಷೇತ್ರದಲ್ಲಿ ಸಹಭಾಗಿತ್ವ, ಸಂಶೋಧನೆ, ಆವಿಷ್ಕಾರಕ್ಕೆ ಕರ್ನಾಟಕದ ಜೊತೆ ಕೈಜೋಡಿಸಿ: ಬೋಸರಾಜು ಆಹ್ವಾನ

    ಬರ್ನ್: 2035ರ ವೇಳೆಗೆ ರಾಜ್ಯವನ್ನು 20 ಶತಕೋಟಿ ಡಾಲರ್ ಕ್ವಾಂಟಮ್ ಆರ್ಥಿಕ ರಾಜ್ಯವಾಗಿ ಅಭಿವೃದ್ಧಿಪಡಿಸಲು ದಿಟ್ಟ ಹೆಜ್ಜೆಗಳನ್ನು ಕರ್ನಾಟಕ ಸರ್ಕಾರ ಇಟ್ಟಿದೆ. ಬೆಂಗಳೂರು ನಗರದಲ್ಲಿ ಕ್ಯೂ-ಸಿಟಿ (Q- ಕ್ವಾಂಟಮ್‌ ಸಿಟಿ) ಸ್ಥಾಪಿಸಲು ಅಗತ್ಯ ಭೂಮಿಯನ್ನು ನಿಗದಿಪಡಿಸಲಾಗಿದೆ. ಕ್ವಾಂಟಮ್ (Quantum) ಕ್ಷೇತ್ರದಲ್ಲಿ ಸಹಭಾಗಿತ್ವ, ಸಂಶೋಧನೆ ಹಾಗೂ ಆವಿಷ್ಕಾರಕ್ಕೆ ವಿಫುಲ ಅವಕಾಶಗಳಿದ್ದು, ಸಹಭಾಗಿತ್ವದ ಸಂಶೋಧನೆಗೆ ಕರ್ನಾಟಕ (Karnataka) ರಾಜ್ಯ ಸರ್ಕಾರದ ಜೊತೆ ಕೈಜೋಡಿಸುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ಎಸ್ ಬೋಸರಾಜು (NS Boseraju) ಕರೆ ನೀಡಿದರು.

    ಇಂದು ಸ್ವಿಟ್ಜರ್ಲೆಂಡ್‌ನ ಜಿನೆವಾದ ಬಯೋಟೆಕ್ ಕ್ಯಾಂಪಸ್‌ನಲ್ಲಿ ಆಯೋಜಿಸಲಾಗಿದ್ದ ‘ಸ್ವಿಸ್‌ನೆಕ್ಸ್ ಕ್ವಾಂಟಮ್ ಸಮಿಟ್ 2025’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕರ್ನಾಟಕ ರಾಜ್ಯದಲ್ಲಿ ಕ್ವಾಂಟಮ್ ಕ್ಷೇತ್ರದ ಅಭಿವೃದ್ದಿಯಲ್ಲಿ ರಾಜ್ಯ ಸರ್ಕಾರ ಇಟ್ಟಿರುವಂತಹ ದಿಟ್ಟ ಹೆಜ್ಜೆಗಳ ಬಗ್ಗೆ ಸಮಗ್ರ ಮಾಹಿತಿಯನ್ನು ನೀಡಿದರು. ಭಾರತ ಸರ್ಕಾರವು ಸುಮಾರು 6,000 ಕೋಟಿ ರೂ. ವೆಚ್ಚದಲ್ಲಿ ರಾಷ್ಟ್ರೀಯ ಕ್ವಾಂಟಮ್ ಮಿಷನ್ (NQM) ಆರಂಭಿಸಿದೆ. ಈ ಮಿಷನ್ ನಾವೀನ್ಯತೆ, ಕೌಶಲ್ಯ ಮತ್ತು ಸ್ಟಾರ್ಟ್-ಅಪ್ ಬೆಂಬಲದ ಮೂಲಕ 50ರಿಂದ 1000ಕ್ಯೂ ಬಿಟ್ ಕ್ವಾಂಟಮ್ ಕಂಪ್ಯೂಟರ್‌ಗಳನ್ನು ಅಭಿವೃದ್ಧಿಪಡಿಸುವುದು, ಸುರಕ್ಷಿತ ಕ್ವಾಂಟಮ್ ಸಂವಹನ ಜಾಲಗಳನ್ನು ನಿರ್ಮಿಸುವುದು ಮತ್ತು ಕಂಪ್ಯೂಟಿಂಗ್, ಸಂವಹನ, ಸಂವೇದನೆ ಮತ್ತು ಸಾಮಗ್ರಿಗಳಿಗಾಗಿ ರಾಷ್ಟ್ರೀಯ ಕೇಂದ್ರಗಳನ್ನು ಸ್ಥಾಪಿಸುವ ಗುರಿಯನ್ನು ಹೊಂದಿದೆ. ಕರ್ನಾಟಕ ರಾಜ್ಯವು ಈ ರಾಷ್ಟ್ರೀಯ ದೃಷ್ಟಿಕೋನವನ್ನು ಅಳವಡಿಸಿಕೊಂಡಿರುವ ಪ್ರಮುಖ ರಾಜ್ಯವಾಗಿ ಹೊರಹೊಮ್ಮಿದೆ ಎಂದರು. ಇದನ್ನೂ ಓದಿ: ಚಿಕ್ಕಬಳ್ಳಾಪುರ | ಅನ್ಯಕೋಮಿನ ವ್ಯಕ್ತಿಯಿಂದ ಪದವೀಧರೆ ಮೇಲೆ ರೇಪ್‌ – ಸಂತ್ರಸ್ತೆ ನೆರವಿಗೆ ಧಾವಿಸಿದ ಮಹಿಳೆ ಹೇಳಿದ್ದೇನು?

    ವಿಶ್ವವಿಖ್ಯಾತ ಸಂಶೋಧನಾ ಸಂಸ್ಥೆಯಾಗಿರುವ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ (IISc) ಈಗಾಗಲೇ ಕ್ವಾಂಟಮ್ ರಿಸರ್ಚ್ ಪಾರ್ಕನ್ನು ಸ್ಥಾಪಿಸಿದ್ದು, ಕರ್ನಾಟಕ ಸರ್ಕಾರ ಅಗತ್ಯ ಅನುದಾನ ನೀಡಿದೆ. ಈ ಮೂಲಕ ತಂತ್ರಜ್ಞಾನಕ್ಕೆ ಈಗಾಗಲೇ ಮಹತ್ವದ ಬದ್ಧತೆಯನ್ನು ತೋರಿದೆ. ಈ ಸೌಲಭ್ಯವು 55ಕ್ಕೂ ಹೆಚ್ಚು ಸಂಶೋಧನೆ ಮತ್ತು ಅಭಿವೃದ್ಧಿ ಯೋಜನೆಗಳು ಮತ್ತು 13 ಸ್ಟಾರ್ಟ್ಅಪ್‌ಗಳನ್ನು ಬೆಂಬಲಿಸಿದೆ. ವಾರ್ಷಿಕ 1,000ಕ್ಕೂ ಹೆಚ್ಚು ಕ್ವಾಂಟಮ್ ತಜ್ಞರಿಗೆ ತರಬೇತಿ ನೀಡುತ್ತಿದೆ. ದೀರ್ಘಾವಧಿಯಲ್ಲಿ ಇದನ್ನು ಮುಂದುವರಿಸಲು ನಮ್ಮ ಸರ್ಕಾರವು 48 ಕೋಟಿ ರೂ. ಹೆಚ್ಚುವರಿ ಅನುದಾನ ಒದಗಿಸಿದೆ ಎಂದು ತಿಳಿಸಿದರು. ಇದನ್ನೂ ಓದಿ: ಸರ್ಕಾರಕ್ಕೆ ನೈತಿಕತೆ ಇದ್ದರೆ ಪ್ರಿಯಾಂಕ್ ಮೇಲೆ ಕೇಸ್ ದಾಖಲಿಸಲಿ: ಅಶ್ವಥ್ ನಾರಾಯಣ್

    ಜುಲೈ 31 ಹಾಗೂ ಆಗಸ್ಟ್ 1, 2025ರಂದು ಎರಡು ದಿನಗಳ ಕಾಲ ಭಾರತ ದೇಶದ ಮೊದಲ ಕ್ವಾಂಟಮ್ ಇಂಡಿಯಾ ಶೃಂಗಸಭೆಯನ್ನು ಬೆಂಗಳೂರು ನಗರದಲ್ಲಿ ಆಯೋಜಿಸಲಾಯಿತು. ಕ್ವಾಂಟಮ್ ಇಂಡಿಯಾ ಸಮಿಟ್, ಇಬ್ಬರು ನೋಬೆಲ್ ಪ್ರಶಸ್ತಿ ಪುರಸ್ಕೃರು ಸೇರಿದಂತೆ ಎರಡು ಸಾವಿರಕ್ಕೂ ಹೆಚ್ಚು ಸಂಶೋಧಕರು, ಹಾಗೂ ಕ್ವಾಂಟಮ್ ಕ್ಷೇತ್ರದ ಉದ್ಯಮಿಗಳನ್ನು ಆಕರ್ಷಿಸುವಲ್ಲಿ ಯಶಸ್ವಿಯಾಗಿತ್ತು. ಆ ಸಮ್ಮೇಳನದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಹಾಗೂ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರು ಕ್ವಾಂಟಮ್ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸಾವಿರ ಕೋಟಿ ರೂ. ಮೀಸಲಿರಿಸುವ ಘೋಷಣೆಯನ್ನು ಮಾಡಿದ್ದಾರೆ. ಸಮಾವೇಶದಲ್ಲಿ ನೀಡಿದ್ದ ಭರವಸೆಯಂತೆ ಕ್ಯೂ-ಸಿಟಿ ನಿರ್ಮಾಣಕ್ಕೆ ಅಗತ್ಯವಿರುವಂತಹ ಭೂಮಿಯನ್ನು ಮಂಜೂರು ಮಾಡಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ನೀವು ಪಿತೂರಿಯಲ್ಲಿ ತೊಡಗಿದ್ದೀರಿ – ರೈಲ್ವೇ ಹಗರಣದಲ್ಲಿ ಲಾಲು, ರಾಬ್ಡಿ, ತೇಜಸ್ವಿ ವಿರುದ್ಧ ದೋಷಾರೋಪ ನಿಗದಿ

    ಪ್ರತಿವರ್ಷ ಸುಮಾರು 90 ಸಾವಿರಕ್ಕೂ ಹೆಚ್ಚು ಕ್ವಾಂಟಮ್ ಎಂಜಿನಿಯರ್‌ಗಳನ್ನು ತಯಾರಿಸುವ ಮೂಲಕ ವಿಶ್ವದಲ್ಲೇ ಅತ್ಯತ್ತಮ ಮಾನವ ಸಂಪನ್ಮೂಲ ಹೊಂದಿರುವ ದೇಶವಾಗಿದೆ. ಸಂಶೋಧನೆ ಹಾಗೂ ಆವಿಷ್ಕಾರದಲ್ಲಿ ಭಾರತ ದೇಶ ವಿಶ್ವ ಭೂಫಟದಲ್ಲಿ ತನ್ನದೇ ಆದ ವಿಶೇಷ ಸ್ಥಾನಮಾನ ಹೊಂದಿದೆ. ಕರ್ನಾಟಕ ರಾಜ್ಯ ಕ್ವಾಂಟಮ್ ಕ್ಷೇತ್ರದ ಅಭಿವೃದ್ಧಿಗೆ ರೂಟ್ ಮ್ಯಾಪ್ ಸಿದ್ಧಪಡಿಸಿಕೊಂಡಿದೆ. ಸಿಲಿಕಾನ್ ವ್ಯಾಲಿ ಎಂದೇ ಹೆಸರುವಾಸಿಯಾಗಿರುವ ಬೆಂಗಳೂರು ನಗರದಲ್ಲಿ ಕ್ವಾಂಟಮ್ ಕ್ಷೇತ್ರದಲ್ಲಿ ಸಹಭಾಗಿತ್ವ, ಸಂಶೋಧನೆ ಹಾಗೂ ಆವಿಷ್ಕಾರಕ್ಕೆ ವಿಫುಲ ಅವಕಾಶಗಳನ್ನು ಹೊಂದಿದೆ. ಕರ್ನಾಟಕ ರಾಜ್ಯ ಸರ್ಕಾರ ಈ ಕ್ಷೇತ್ರಗಳಲ್ಲಿ ಕೈಜೋಡಿಸಲು ಮುಂದಾಗುವರಿಗೆ ಎಲ್ಲಾ ರೀತಿಯ ಸಹಕಾರ ನೀಡಲು ಸಿದ್ಧವಿದೆ ಎಂದು ಕರೆ ನೀಡಿದರು. ಇದನ್ನೂ ಓದಿ: ರೈತರ ಸಮಸ್ಯೆ ಬಗೆಹರಿಸಲಿಲ್ಲ ಅಂದ್ರೆ ಮುಖಕ್ಕೆ ಹೊಡೆಯುತ್ತೇನೆ – ಅಧಿಕಾರಿಗಳಿಗೆ ಶಾಸಕ ಬಾಲಕೃಷ್ಣ ತರಾಟೆ

    ಶೃಂಗಸಭೆಯ ಸಂದರ್ಭದಲ್ಲಿ, ಸಚಿವ ಎನ್.ಎಸ್. ಬೋಸರಾಜು ಅವರು ʼಕ್ಯೂ-ಸಿಟಿ – ಫೇಸ್ ಒನ್ʼ ಪರಿಕಲ್ಪನೆಯ ವೀಡಿಯೋವನ್ನು ಅನಾವರಣಗೊಳಿಸಿದರು. ಇದು ಬೆಂಗಳೂರಿನಲ್ಲಿ ಅಭಿವೃದ್ಧಿಪಡಿಸಲಿರುವ ಕ್ವಾಂಟಮ್ ತಂತ್ರಜ್ಞಾನ ಕ್ಯಾಂಪಸ್‌ನ ಮೊದಲ ನೋಟವನ್ನು ನೀಡುತ್ತದೆ. ಪ್ರಸ್ತಾವಿತ ಕ್ಯೂ-ಸಿಟಿ ಹಾರ್ಡ್ವೇರ್ ಉತ್ಪಾದನಾ ಘಟಕಗಳು, ಸುಧಾರಿತ ಸಂಶೋಧನೆ ಮತ್ತು ಅಭಿವೃದ್ಧಿ ಸೌಲಭ್ಯಗಳು, ಇನ್‌ಕ್ಯುಬೇಶನ್ ಕೇಂದ್ರಗಳು ಮತ್ತು ಪ್ರಯೋಗಾಲಯದಿಂದ ಮಾರುಕಟ್ಟೆಗೆ ಕ್ವಾಂಟಮ್ ನಾವೀನ್ಯತೆಯನ್ನು ಅಭಿವೃದ್ಧಿಗೊಳಿಸಲು ವಿನ್ಯಾಸಗೊಳಿಸಲಾದ ಸಹಯೋಗದ ಕಾರ್ಯಕ್ಷೇತ್ರಗಳನ್ನು ಸಂಯೋಜಿಸುತ್ತದೆ. ಇದನ್ನೂ ಓದಿ: RSS ಬಗ್ಗೆ ಖರ್ಗೆಗೆ ಏನೂ ಕಿಸಿಯೋಕೆ ಆಗ್ಲಿಲ್ಲ, ಪ್ರಿಯಾಂಕ್‌ಗೆ ಆಗುತ್ತಾ? – ಯತ್ನಾಳ್ ಕಿಡಿ

    ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿಯ ವ್ಯವಸ್ಥಾಪಕ ನಿರ್ದೇಶಕರಾದ ಸದಾಶಿವ ಪ್ರಭು, ಐಎಎಸ್, ಭಾರತೀಯ ವಿಜ್ಞಾನ ಸಂಸ್ಥೆ (IISc) ಕ್ವಾಂಟಮ್ ರಿಸರ್ಚ್ ಪಾರ್ಕನ ಅಧ್ಯಕ್ಷರಾದ ಪ್ರೊ. ಅರಿಂದಮ್ ಘೋಷ್, ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರ ಆಪ್ತ ಕಾರ್ಯದರ್ಶಿಗಳಾದ ವೀರಭದ್ರ ಹಂಚಿನಾಳ್ ಅವರನ್ನೊಳಗೊಂಡ ಅಧಿಕಾರಿಗಳ ತಂಡ ಸಮಾವೇಶದಲ್ಲಿ ಭಾಗವಹಿಸಿದೆ. ಇದನ್ನೂ ಓದಿ: ಕೊಡಗು | ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಗೂಡ್ಸ್‌ ವಾಹನ ಪಲ್ಟಿ

  • ಸ್ವಿಸ್ ಮಹಿಳೆಯನ್ನು ದೆಹಲಿಗೆ ಕರೆಸಿ ಹತ್ಯೆ ಮಾಡಿದ ಸ್ನೇಹಿತ

    ಸ್ವಿಸ್ ಮಹಿಳೆಯನ್ನು ದೆಹಲಿಗೆ ಕರೆಸಿ ಹತ್ಯೆ ಮಾಡಿದ ಸ್ನೇಹಿತ

    ನವದೆಹಲಿ: ಸ್ವಿಟ್ಜರ್ಲೆಂಡ್‌ನ (Switzerland) ಮಹಿಳೆಯೊಬ್ಬಳನ್ನು (Woman) ತನ್ನ ದೇಶದಿಂದ ದೆಹಲಿಗೆ (Delhi) ಕರೆಸಿಕೊಂಡು ಕೈಕಾಲು ಕಟ್ಟಿ ಹತ್ಯೆಗೈದ ಘಟನೆ ನಡೆದಿದೆ.

    ಹತ್ಯೆಗೊಳಗಾದ ಮಹಿಳೆಯನ್ನು ಲೀನಾ ಬರ್ಗರ್ ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುಪ್ರೀತ್ ಸಿಂಗ್ ಎಂಬಾತನನ್ನು ಪೊಲೀಸರು (Police) ಬಂಧಿಸಿದ್ದಾರೆ. ಆರೋಪಿ ಸ್ವಿಟ್ಜರ್ಲೆಂಡ್‌ಗೆ ತೆರಳಿದ್ದಾಗ ಮಹಿಳೆಯನ್ನು ಭೇಟಿಯಾಗಿದ್ದು, ಬಳಿಕ ಇಬ್ಬರೂ ಸ್ನೇಹಿತರಾಗಿದ್ದರು. ಇದನ್ನೂ ಓದಿ: ಅಬ್ಬಬ್ಬಾ! ಬ್ಲೌಸ್‌ನಲ್ಲೂ ಚಿನ್ನ ಸಾಗಾಟ – ಬೆಂಗ್ಳೂರು ಏರ್ಪೋರ್ಟ್‌ನಲ್ಲಿ ಸಿಕ್ಕಿಬಿದ್ದ ಮಹಿಳೆ ಅಂದರ್‌

    ಮಹಿಳೆಯನ್ನು ಭೇಟಿಯಾಗಲು ಆರೋಪಿ ಆಗಾಗ ಸ್ವಿಟ್ಜರ್ಲೆಂಡ್‌ಗೆ ತೆರಳುತ್ತಿದ್ದ. ಆಕೆಗೆ ಬೇರೆ ವ್ಯಕ್ತಿಯೊಂದಿಗೆ ಸಂಬಂಧವಿದೆ ಎಂದು ಶಂಕಿಸಿ ಆರೋಪಿ ಆಕೆಯನ್ನು ಹತ್ಯೆ ಮಾಡಿದ್ದಾನೆ. ಮಹಿಳೆಯ ಹತ್ಯೆಗೆ ಸಂಚು ರೂಪಿಸಿ ಭಾರತಕ್ಕೆ ಬರುವಂತೆ ಆಕೆಯನ್ನು ಕರೆಸಿಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿದ್ದಾರೆ.

    ಮಹಿಳೆ ಅ.11 ರಂದು ಭಾರತಕ್ಕೆ ಬಂದಿದ್ದರು. ಐದು ದಿನಗಳ ಬಳಿಕ ಆಕೆಯನ್ನು ತನ್ನ ರೂಮಿಗೆ ಕರೆದುಕೊಂಡು ಹೋಗಿದ್ದಾನೆ. ಬಳಿಕ ಅವಳ ಕೈ ಮತ್ತು ಕಾಲುಗಳನ್ನು ಕಟ್ಟಿ ಕೊಲೆ ಮಾಡಿದ್ದಾನೆ. ಸ್ವಲ್ಪ ದಿನ ಮೃತ ದೇಹವನ್ನು ಕಾರಿನಲ್ಲಿ ಇರಿಸಿಕೊಂಡಿದ್ದ. ದುರ್ವಾಸನೆ ಬಂದ ಬಳಿಕ ಪ್ಲಾಸ್ಟಿಕ್ ಬ್ಯಾಗ್‍ನಲ್ಲಿ ಹಾಕಿ ರಸ್ತೆಯ ಬದಿಯಲ್ಲಿ ಎಸೆದು ಹೋಗಿದ್ದ. ಸಿಸಿಟಿವಿ ದೃಶ್ಯಾವಳಿಗಳ ಸಹಾಯದಿಂದ ವಾಹನದ ನೋಂದಣಿ ಸಂಖ್ಯೆ ಪಡೆದು ನಂತರ ದೆಹಲಿ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ.

    ಆರೋಪಿಯ ಮನೆಯಲ್ಲಿ 2.25 ಕೋಟಿ ರೂ. ಹಾಗೂ ಎರಡು ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದನ್ನೂ ಓದಿ: ಸಾಮಾಜಿಕ ಬಹಿಷ್ಕಾರದಿಂದ ಮನನೊಂದು ವ್ಯಕ್ತಿ ಆತ್ಮಹತ್ಯೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಯುರೋಪ್‌ನಲ್ಲಿ ಗೂಗಲ್ ಉದ್ಯೋಗಿಗಳ ಸಾಮೂಹಿಕ ವಜಾ- ಕಚೇರಿಯಲ್ಲಿ ಪ್ರತಿಭಟನೆ

    ಯುರೋಪ್‌ನಲ್ಲಿ ಗೂಗಲ್ ಉದ್ಯೋಗಿಗಳ ಸಾಮೂಹಿಕ ವಜಾ- ಕಚೇರಿಯಲ್ಲಿ ಪ್ರತಿಭಟನೆ

    ಬರ್ನ್: ಗೂಗಲ್ (Google) ಕಂಪನಿ ಉದ್ಯೋಗಿಗಳ (Employees) ಸಾಮೂಹಿಕ ವಜಾ (Layoff) ಮುಂದುವರಿಸಿದ್ದು, ಇದೀಗ 200 ಉದ್ಯೋಗಿಗಳನ್ನು ವಜಾಗೊಳಿಸಿರುವ ಹಿನ್ನೆಲೆ ಸ್ವಿಟ್ಜರ್‌ಲೆಂಡ್‌ನ (Switzerland) ಜ್ಯೂರಿಯಲ್ಲಿರುವ ಕಂಪನಿಯ ಕಚೇರಿಯಲ್ಲಿ ಉದ್ಯೋಗಿಗಳು ಕೆಲಸವನ್ನು ನಿಲ್ಲಿಸಿ, ಪ್ರತಿಭಟನೆ ನಡೆಸಿದ್ದಾರೆ.

    ಗೂಗಲ್‌ನ ಮೂಲ ಕಂಪನಿ ಆಲ್ಫಾಬೆಟ್ ಜನವರಿಯಲ್ಲಿ ಪ್ರಪಂಚದಾದ್ಯಂತ ಸುಮಾರು 12,000 ಉದ್ಯೋಗಿಗಳನ್ನು ವಜಾಗೊಳಿಸುವುದಾಗಿ ಘೋಷಿಸಿತ್ತು. ಇದು ಜಾಗತಿಕವಾಗಿ ಶೇ.9 ರಷ್ಟು ಕಂಪನಿಯ ಉದ್ಯೋಗಿಗಳಿಗೆ ಸಮವಾದ ಸಂಖ್ಯೆಯಾಗಿದೆ. ಇದೀಗ ಗೂಗಲ್ ಉದ್ಯೋಗಿಗಳನ್ನು ಕಡಿತಗೊಳಿಸುವುದಾಗಿ ಘೋಷಿಸಿದೆ.

    ಸುಮಾರು 5,000 ಉದ್ಯೋಗಿಗಳಿರುವ ಗೂಗಲ್‌ನ ಜ್ಯೂರಿ ಕಚೇರಿಯಲ್ಲಿ ಕಳೆದ ತಿಂಗಳು ಉದ್ಯೋಗಿಗಳನ್ನು ಕಡಿತಗೊಳಿಸುವುದರ ವಿರುದ್ಧ ಪ್ರತಿಭಟನೆ ನಡೆಸಲಾಗಿತ್ತು. ವಜಾಗೊಳ್ಳುತ್ತಿರುವ ಉದ್ಯೋಗಿಗಳಿಗೆ ಬೆಂಬಲಿಸಿ ಇತರ ಉದ್ಯೋಗಿಗಳು ಕೆಲಸವನ್ನು ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದ್ದಾರೆ. ಇದನ್ನೂ ಓದಿ: ಉದ್ಯೋಗಿಗಳಿಗೆ ಈಗ ಬೋನಸ್ ಇಲ್ಲ, ಹೊಸ ನೇಮಕಾತಿ ಸ್ಥಗಿತಗೊಳಿಸಿದ ಆಪಲ್

    ಉದ್ಯೋಗಿಗಳನ್ನು ವಜಾಗೊಳಿಸುತ್ತಿರುವಲ್ಲಿ ಪಾರದರ್ಶಕತೆಯನ್ನು ತೋರ್ಪಡಿಸಲಾಗುತ್ತಿಲ್ಲ. ಕಂಪನಿ ಪ್ರತಿ ವರ್ಷ ಭಾರೀ ಲಾಭ ಗಳಿಸುತ್ತಿರುವ ಸಮಯದಲ್ಲಿಯೂ ಉದ್ಯೋಗಿಗಳನ್ನು ವಜಾಗೊಳಿಸುತ್ತಿರುವುದು ಅವರಲ್ಲಿ ನಿರಾಸೆ ಮೂಡಿಸಲು ಕಾರಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಉದ್ಯೋಗಿಗಳನ್ನು ಕಡಿತಗೊಳಿಸುತ್ತಿರುವುದರ ಬಗ್ಗೆ ಗೂಗಲ್ ವಕ್ತಾರರು, ಕಂಪನಿಯು ಅಗತ್ಯಕ್ಕಿಂತಲೂ ಹೆಚ್ಚಿನ ಉದ್ಯೋಗಿಗಳನ್ನು ಹೊಂದಿರುವ ಹಿನ್ನೆಲೆ ಕಡಿತಗೊಳಿಸಲು ಮುಂದಾಗಿರುವುದಾಗಿ ತಿಳಿಸಿದೆ. ಇದನ್ನೂ ಓದಿ: ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯ – ಒಂದೇ ಬೆಡ್ ಮೇಲೆ ಇಬ್ಬರು ರೋಗಿಗಳ ನರಳಾಟ

  • ಸ್ವಿಟ್ಜರ್‌ಲೆಂಡ್ ನಲ್ಲಿ ಬುರ್ಖಾ ಬ್ಯಾನ್‌ಗೆ ಪ್ರಸ್ತಾವನೆ – ನಿಯಮ ಉಲ್ಲಂಘಿಸಿದ್ರೆ 83 ಸಾವಿರ ದಂಡ

    ಸ್ವಿಟ್ಜರ್‌ಲೆಂಡ್ ನಲ್ಲಿ ಬುರ್ಖಾ ಬ್ಯಾನ್‌ಗೆ ಪ್ರಸ್ತಾವನೆ – ನಿಯಮ ಉಲ್ಲಂಘಿಸಿದ್ರೆ 83 ಸಾವಿರ ದಂಡ

    ಬರ್ನ್: ಸ್ವಿಟ್ಜರ್‌ಲೆಂಡ್‌ನಲ್ಲಿ (Switzerland) ಬುರ್ಖಾ (Burqa) ನಿಷೇಧಿಸಲಾಗಿದ್ದು, ನಿಯಮ ಉಲ್ಲಂಘಿಸುವವರಿಗೆ 83 ಸಾವಿರ ರೂ. ದಂಡ ವಿಧಿಸುವ ಪ್ರಸ್ತಾವನೆ ಸಲ್ಲಿಸಲಾಗಿದೆ.

    ಭಾರತದಲ್ಲಿ ಹಿಜಬ್ (Hijab) ಬೇಕು, ನಮ್ಮ ಆಯ್ಕೆ, ಇಸ್ಲಾಂ (Muslim Community) ಅವಿಭಾಜ್ಯ ಅಂಗ ಎಂದು ಹೋರಾಟ ನಡೆಯುತ್ತಿದೆ. ಆದರೆ ಇರಾನ್‌ನಲ್ಲಿ (Iran) ಹಿಜಬ್ ವಿರೋಧಿಸಿ ಪ್ರತಿಭಟನೆ ನಡೆಯುತ್ತಿದೆ. ಹಲವು ಪ್ರತಿಭಟನಾಕಾರರು ಗುಂಡಿಗೆ ಬಲಿಯಾಗಿದ್ದಾರೆ. ಇದನ್ನೂ ಓದಿ: ಮೂರು ದಿನದ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಶವ ಚಂಡಿಯಲ್ಲಿ ಪತ್ತೆ

    ಈ ಹೋರಾಟ, ವಾದ-ವಿವಾದಗಳ ನಡುವೆ ಸ್ವಿಟ್ಜರ್‌ಲೆಂಡ್‌ನಲ್ಲಿ ಬುರ್ಖಾ ಬ್ಯಾನ್ ಹಾಗೂ ಈ ನಿಯಮ ಉಲ್ಲಂಘಿಸಿದರೆ 82,000 ರೂಪಾಯಿ ದಂಡ ವಿಧಿಸುವ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದೇ ತಿಂಗಳ ಅಕ್ಟೋಬರ್ 12 ರಂದು ಸ್ವಿಟ್ಜರ್‌ಲೆಂಡ್ ಸಂಸತ್ತಿನಲ್ಲಿ ಈ ಮಸೂದೆ ಮಂಡಿಸಲಾಗಿದೆ. ಕಳೆದ ವರ್ಷ ಸ್ವಿಟ್ಜರ್‌ಲೆಂಡ್‌ನಲ್ಲಿ ಜನಾಭಿಪ್ರಾಯ ಸಂಗ್ರಹಿಸಿ ಸುರಕ್ಷತೆ ಹಾಗೂ ಇತರ ಕಾರಣಗಳಿಂದ ಮುಖ ಮುಚ್ಚುವ ವಸ್ತ್ರಗಳನ್ನು ನಿಷೇಧಿಸಲು ಮತದಾನ ಮಾಡಲಾಗಿತ್ತು. ಇದೀಗ ಈ ನಿಯಮ ಉಲ್ಲಂಘಿಸಿದರೆ ದಂಡ ವಿಧಿಸುವ ಪ್ರಸ್ತಾವನೆ ಕರಡು ಮಸೂದೆಯನ್ನು ಸಲ್ಲಿಸಲಾಗಿದೆ. ಇದನ್ನೂ ಓದಿ: ರಾಜ್ಯಾದ್ಯಂತ ಇನ್ನೆರಡು ದಿನ ಭಾರೀ ಮಳೆ ಸಾಧ್ಯತೆ

    ಮೂಸೂದೆ ಅಂಗೀಕಾರವಾದರೆ ಈ ನಿಯಮದ ಪ್ರಕಾರ ಹಿಜಬ್ ಧರಿಸಲು ಅವಕಾಶವಿದೆ. ಆದರೆ ಕಣ್ಣು ಮಾತ್ರ ಕಾಣಿಸುವ ಮುಖದ ಇತರ ಭಾಗಗಳು ಮುಚ್ಚುವ ವಸ್ತ್ರಗಳನ್ನು ಧರಿಸುವ ಅವಕಾಶವಿಲ್ಲ. ಕಳೆದ ವರ್ಷ ಈ ಪ್ರಸ್ತಾವನೆಗೆ ಸ್ವಿಟ್ಜರ್‌ಲೆಂಡ್‌ನ ಶೇ.51.2 ಮಂದಿ ಬೆಂಬಲಿಸಿದ್ದರು. ಇದೇ ವೇಳೆ ಇನ್ನುಳಿದ ಕೆಲವರು ಪ್ರಮುಖವಾಗಿ ಮುಸ್ಲಿಮರು ಇದನ್ನು ಟೀಕಿಸಿದ್ದರು.

    Live Tv
    [brid partner=56869869 player=32851 video=960834 autoplay=true]

  • ಸದ್ಗುರು ಜೊತೆ ಮಂಡಿ ನೋವಿನ ಬಗ್ಗೆ ಹೇಳಿಕೊಂಡ ಸಿಎಂ

    ಸದ್ಗುರು ಜೊತೆ ಮಂಡಿ ನೋವಿನ ಬಗ್ಗೆ ಹೇಳಿಕೊಂಡ ಸಿಎಂ

    ಬರ್ನ್: ಸ್ವಿಟ್ಜರ್ಲೆಂಡ್‌ನ ದಾವೋಸ್‌ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಸಿಎಂ ಬಸವರಾಜ ಬೊಮ್ಮಾಯಿ ತೆರಳಿದ್ದಾರೆ. ಈ ವೇಳೆ ಬೊಮ್ಮಾಯಿ ಸದ್ಗುರು ಜಗ್ಗಿ ವಾಸುದೇವ್ ಅವರನ್ನು ಭೇಟಿ ಮಾಡಿದರು.

    ಹವಾಮಾನ ಬದಲಾವಣೆ ಹಾಗೂ ಪರಿಸರ ಮಾಲಿನ್ಯ ಕುರಿತ ಗೋಷ್ಠಿಗೂ ಮುನ್ನ ಸದ್ಗುರು ಬೊಮ್ಮಾಯಿಯವರನ್ನು ಭೇಟಿ ಮಾಡಿದರು. ಸಿಎಂ ನಡೆದು ಬರುತ್ತಿದ್ದುದನ್ನು ನೋಡಿ ಸದ್ಗುರು ಏನಾಗಿದೆ ಎಂದು ವಿಚಾರಿಸಿದರು. ಈ ವೇಳೆ ಬೊಮ್ಮಾಯಿ ತಮ್ಮ ಮಂಡಿ ನೋವಿನ ಸಮಸ್ಯೆ ಬಗ್ಗೆ ಜಗ್ಗಿ ವಾಸುದೇವ್ ಬಳಿ ಹೇಳಿಕೊಂಡರು. ಇದನ್ನೂ ಓದಿ: ಪರಿಷತ್‌ ಚುನಾವಣೆ – ನಾಮಪತ್ರ ಸಲ್ಲಿಕೆಗೆ ನಾಳೆ ಕೊನೆ ದಿನ, ಕಾಂಗ್ರೆಸ್-ಬಿಜೆಪಿಯಲ್ಲಿ ಇನ್ನೂ ಅಂತಿಮವಾಗದ ಅಭ್ಯರ್ಥಿಗಳು

    ಶೃಂಗಸಭೆಯಲ್ಲಿ ಸಿಎಂ ಬೊಮ್ಮಾಯಿ ನೀಲಿ ಬಣ್ಣದ ಸೂಟ್ ಧರಿಸಿ ಮಿಂಚಿದ್ದಾರೆ. ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಕೈಗಾರಿಕಾ ಇಲಾಖೆ ಮುಖ್ಯ ಕಾರ್ಯದರ್ಶಿ ಡಾ.ಇ.ವಿ. ರಮಣ ರೆಡ್ಡಿ ಹಾಗೂ ಸಿಎಂ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಸಿಎಂಗೆ ಸಾತ್ ನೀಡಿದ್ದಾರೆ. ಇದನ್ನೂ ಓದಿ: ಕುವೆಂಪು, ನಾಡಗೀತೆಗೆ ಅವಮಾನ- ರೋಹಿತ್ ಚಕ್ರತೀರ್ಥರ ಮೇಲೆ ಮುಗಿಬಿದ್ದ ಕಾಂಗ್ರೆಸ್

    ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಭಾರತವನ್ನು ಬಸವರಾಜ ಬೊಮ್ಮಾಯಿ ಪ್ರತಿನಿಧಿಸುತ್ತಿದ್ದಾರೆ. ಸಿಎಂ ಜೊತೆ 8 ಜನರ ತಂಡ ದಾವೋಸ್‌ಗೆ ತೆರಳಿದ್ದು, ಸಿಎಂ ಆದ ಬಳಿಕ ಬೊಮ್ಮಾಯಿಯವರಿಗೆ ಇದು ಮೊದಲ ವಿದೇಶ ಪ್ರವಾಸವಾಗಿದೆ.

  • ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಪಾಲ್ಗೊಳ್ಳಲು ದಾವೋಸ್ ತೆರಳಿದ ಬೊಮ್ಮಾಯಿ ನಿಯೋಗ – ರೂಟ್‌ ಮ್ಯಾಪ್‌ ಹೀಗಿದೆ

    ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಪಾಲ್ಗೊಳ್ಳಲು ದಾವೋಸ್ ತೆರಳಿದ ಬೊಮ್ಮಾಯಿ ನಿಯೋಗ – ರೂಟ್‌ ಮ್ಯಾಪ್‌ ಹೀಗಿದೆ

    ಬೆಂಗಳೂರು: ಸ್ವಿಟ್ಜರ್ಲೆಂಡಿನ ದಾವೋಸ್‍ನಲ್ಲಿ ಇಂದಿನಿಂದ ಆರಂಭವಾಗಿರುವ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಪಾಲ್ಗೊಳ್ಳಲು ಸಿಎಂ ಬೊಮ್ಮಾಯಿ ನೇತೃತ್ವದ ನಿಯೋಗ ಇಂದು ರಾಜ್ಯದಿಂದ ಹೊರಟಿದೆ.

    ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಭಾರತವನ್ನೂ ಪ್ರತಿನಿಧಿಸಲಿರುವ ಸಿಎಂ ಬೊಮ್ಮಾಯಿಗೆ ಐಟಿಬಿಟಿ ಸಚಿವ ಡಾ.ಅಶ್ವಥ್ ನಾರಾಯಣ ಮತ್ತು ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಮುರುಗೇಶ್ ನಿರಾಣಿ ಸಾತ್ ಕೊಟ್ಟಿದ್ದಾರೆ. ಬೊಮ್ಮಾಯಿಯವರಿಗೆ ಸಿಎಂ ಆದ ಬಳಿಕ ಮೊದಲ ವಿದೇಶ ಪ್ರವಾಸ ಇದಾಗಿದೆ. ಇಂದು ಬೆಳಗ್ಗೆ 8:30ಕ್ಕೆ ತಮ್ಮ ಆರ್.ಟಿ.ನಗರದ ನಿವಾಸದಿಂದ ಪ್ಯಾಂಟ್, ಶರ್ಟ್ ಧರಿಸಿ ಸಾಮಾನ್ಯ ಉಡುಪಿನಲ್ಲೇ ದಾವೋಸ್‍ಗೆ ತೆರಳಿದರು. ಸಿಎಂ ಜೊತೆಗೆ ಅದ್ಧೂರಿ ಸೂಟ್ ಧರಿಸಿದ ಮುರುಗೇಶ್ ನಿರಾಣಿ ಹೊರಟರು. ಇಂದು ಸಿಎಂ ಜೊತೆಗೆ ಒಟ್ಟು 8 ಜನರ ತಂಡ ದಾವೋಸ್‍ಗೆ ಪ್ರಯಾಣಿಸಿದೆ. ಸಿಎಂ ಅವರೊಂದಿಗೆ ಧರ್ಮಪತ್ನಿ ಚೆನ್ನಮ್ಮ, ಮುರುಗೇಶ್ ನಿರಾಣಿ ಮತ್ತು ನಿರಾಣಿಯವರ ಪತ್ನಿ, ನಿರಾಣಿ ಪಿಎ ಶರಣಬಸಪ್ಪ, ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಮತ್ತು ಅವರ ಪಿಎ, ಸಿಎಂ ಒಎಸ್‍ಡಿ ರೋಹನ್ ಬಿರಾದಾರ್ ದಾವೋಸ್‍ಗೆ ತೆರಳಿದರು. ಇದನ್ನೂ ಓದಿ: ರಾಜ್ಯದಲ್ಲೂ ಪೆಟ್ರೋಲ್‌, ಡೀಸೆಲ್‌ ದರ ಇಳಿಕೆಗೆ ಕ್ರಮವಹಿಸಿ: ಸಿಎಂಗೆ ಬಿಎಸ್‌ವೈ ಮನವಿ

    ದಾವೋಸ್‍ಗೆ ಹೋಗುವ ಮುನ್ನ ಆರ್‍ಟಿ ನಗರದ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ಕಳೆದ ನಾಲ್ಕು ತ್ರೈಮಾಸಿಕಕ್ಕೆ ಹೋಲಿಕೆ ಮಾಡಿದರೆ ದೇಶಕ್ಕೆ ವಿದೇಶಿ ನೇರ ಬಂಡವಾಳ ಅತಿ ಹೆಚ್ಚು ಬಂದಿದೆ. ಇದರಲ್ಲಿ ನಂಬರ್ ಒನ್ ಪಾಲು ಕರ್ನಾಟಕಕ್ಕೆ ಹರಿದು ಬಂದಿದೆ. ನಾಳೆ ಮತ್ತು ನಾಡಿದ್ದು ದಾವೋಸ್ ವಿಶ್ವ ಆರ್ಥಿಕ ಒಕ್ಕೂಟದ ಸಮ್ಮೇಳನದಲ್ಲಿ ಭಾಗವಹಿಸುತ್ತಿದ್ದೇವೆ. ಸಮ್ಮೇಳನದಲ್ಲಿ ವಿಶ್ವದ ಹೆಸರಾಂತ ಪ್ರಮುಖರನ್ನು ಮತ್ತು ಕೈಗಾರಿಕೋದ್ಯಮಿಗಳನ್ನು ಭೇಟಿ ಮಾಡಲಾಗುವುದು. ಹಲವಾರು ಜನ ರಾಜ್ಯದಲ್ಲಿ ಬಂಡವಾಳ ಹೂಡಲು ಮುಂದೆ ಬಂದಿದ್ದಾರೆ. ವಿಶೇಷವಾಗಿ ನವೆಂಬರ್‌ನಲ್ಲಿ ರಾಜ್ಯದಲ್ಲಿ ನಡೆಯಲಿರುವ ಗ್ಲೋಬಲ್ ಇನ್ವೆಸ್ಟ್ ಮೀಟ್‍ಗೆ ಬಹುದೊಡ್ಡ ಪ್ರತಿಕ್ರಿಯೆ ಸಿಗುವ ವಿಶ್ವಾಸವಿದೆ ಎಂದು ಹೇಳಿದರು.

    ಇದೇ ವೇಳೆ ಸಿಎಂ ಭೇಟಿ ಮಾಡಿದ ಸಚಿವರಾದ ಮುನಿರತ್ನ, ಗೋಪಾಲಯ್ಯ, ಸಿ.ಸಿ ಪಾಟೀಲ್, ಬೈರತಿ ಬಸವರಾಜು ಮುಂತಾದವರು ದಾವೋಸ್ ಪ್ರವಾಸಕ್ಕೆ ಅಭಿನಂದಿಸಿ ಶುಭ ಕೋರಿದರು. ಇದನ್ನೂ ಓದಿ: ಸಾಧಿಸುವ ಛಲವಿದ್ದರೆ ಯಾವುದೂ ಕಷ್ಟವಲ್ಲ ಅನ್ನೋದಕ್ಕೆ ಮೂವರು ವಿದ್ಯಾರ್ಥಿನಿಯರೇ ಸಾಕ್ಷಿ!

    ಬಸವರಾಜ ಬೊಮ್ಮಾಯಿಯವರು ಎರಡನೇ ಬಾರಿಗೆ ದಾವೋಸ್ ಶೃಂಗ ಸಭೆಯಲ್ಲಿ ಭಾಗವಹಿಸುತ್ತಿದ್ದಾರೆ. ಈ ಹಿಂದೆ ಜಲಸಂಪನ್ಮೂಲ ಖಾತೆ ಸಚಿವರಾಗಿದ್ದಾಗ ದಾವೋಸ್ ಪ್ರವಾಸ ಕೈಗೊಂಡಿದ್ದರು. ಸಿಎಂ ಆದ ಬಳಿಕ ಈಗ ಎರಡನೇ ಬಾರಿಗೆ ದಾವೋಸ್ ಸಮ್ಮೇಳನದಲ್ಲಿ ಭಾಗವಹಿಸಿದ್ದಾರೆ.

    ದಾವೋಸ್ ರೂಟ್ ಮ್ಯಾಪ್ ಹೀಗಿದೆ:
    ಬೆಂಗಳೂರಿಂದ ಇಂದು ಬೆಳಗ್ಗೆ 10:35ರ ವಿಮಾನದ ಮೂಲಕ ದುಬೈಗೆ ಪ್ರಯಾಣ. ಇಂದು ಮಧ್ಯಾಹ್ನ 12:45 ಕ್ಕೆ ದುಬೈಗೆ ತಲುಪಲಿರುವ ಸಿಎಂ. ದುಬೈನಿಂದ ಮಧ್ಯಾಹ್ನ 3:35ಕ್ಕೆ ಸ್ವಿಟ್ಜರ್ಲೆಂಡ್‍ನ ಜ್ಯೂರಿಚ್‍ಗೆ ಪ್ರಯಾಣ. ರಾತ್ರಿ 8:20 ರಿಂದ ಜ್ಯೂರಿಚ್‍ನಿಂದ ದಾವೋಸ್ ರಸ್ತೆ ಮಾರ್ಗದ ಮೂಲಕ ಪ್ರಯಾಣ. ರಾತ್ರಿ 12ಕ್ಕೆ ದಾವೋಸ್ ತಲುಪಲಿರುವ ಸಿಎಂ ನೇತೃತ್ವದ ನಿಯೋಗ. ನಾಳೆಯಿಂದ ದಾವೋಸ್ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಭಾಗಿ. ಎರಡು ದಿನಗಳ ಕಾಲ ದಾವೋಸ್ ಶೃಂಗ ಸಭೆಯಲ್ಲಿ ಭಾಗವಹಿಸಲಿರುವ ಸಿಎಂ. ಎರಡು ವೇದಿಕೆಗಳಲ್ಲಿ ಭಾರತ ಪ್ರತಿನಿಧಿಸಿ ಭಾಷಣ ಮಾಡಲಿರುವ ಸಿಎಂ. ಮೇ 25ರ ಬೆಳಗ್ಗೆ 11 ಗಂಟೆಗೆ ದಾವೋಸ್‍ನಿಂದ ತಾಯ್ನಾಡಿಗೆ ಪ್ರಯಾಣ. ಮೇ 26ರ ಬೆಳಗ್ಗೆ 9ಕ್ಕೆ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿರುವ ಸಿಎಂ ನಿಯೋಗ.