Tag: ಹಂಗಮಾ2

  • ಕುಟುಂಬ ಸಮೇತರಾಗಿ ಈ ಸಿನಿಮಾ ನೋಡಿ: ಶಿಲ್ಪಾ ಶೆಟ್ಟಿ

    ಕುಟುಂಬ ಸಮೇತರಾಗಿ ಈ ಸಿನಿಮಾ ನೋಡಿ: ಶಿಲ್ಪಾ ಶೆಟ್ಟಿ

    ಮುಂಬೈ: ಬಾಲಿವುಡ್ ಶಿಲ್ಪಾ ಶೆಟ್ಟಿ ತಮ್ಮ ವೈಯಕ್ತಿಕ ಸಮಸ್ಯೆಗಳ ನಡುವೆಯೂ ಹಂಗಮಾ 2 ಸಿನಿಮಾವನ್ನು ಕುಟುಂಬ ಸಮೇತರಾಗಿ ನೋಡಿ ಎಂದು ಹೇಳಿ ತಮ್ಮ ವೃತ್ತಿಪರತೆಯನ್ನು ಮೆರೆದು ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

    ಬಹುಕಾಲದ ಬಳಿಕ ಶಿಲ್ಪಾ ಶೆಟ್ಟಿ ನಟನೆಗೆ ಮರಳಿದ್ದಾರೆ. ಹಂಗಾಮಾ 2ಚಿತ್ರದ ಮೂಲಕ ಅವರು ಕಮ್‍ಬ್ಯಾಕ್ ಮಾಡಿದ್ದಾರೆ. ಈ ಸಿನಿಮಾ ಜು.23ರಂದು ಬಿಡುಗಡೆ ಆಗಿದೆ. ಡಿಸ್ನಿ ಪ್ಲಸ್ ಹಾಟ್ ಸ್ಟಾರ್ ಓಟಿಟಿ ಮೂಲಕ ರಿಲೀಸ್ ಆಗಿರುವ ಈ ಚಿತ್ರದ ಪ್ರಚಾರದಲ್ಲಿ ಶಿಲ್ಪಾ ಶೆಟ್ಟಿ ಭಾಗಿ ಆಗಿದ್ದಾರೆ. ಗಂಡನ ನೀಲಿ ಚಿತ್ರ ಹಗರಣದ ತಲೆಬಿಸಿ ಏನೇ ಇದ್ದರೂ ಕೂಡ ಅವರು ಹಂಗಮಾ 2 ಚಿತ್ರ ನೋಡಿ ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಕೆಜಿಎಫ್ 2 ಫಸ್ಟ್ ಡೇ ಫಸ್ಟ್ ಶೋ ಟಿಕೆಟ್ ಪಡೆಯಲಿರುವ ವಿಶೇಷ ಅಭಿಮಾನಿ

    ಯೋಗ ಕಲಿಸಿದ ಪಾಠಗಳನ್ನು ನಾನು ನಂಬುತ್ತೇನೆ ಮತ್ತು ಪಾಲಿಸುತ್ತೇನೆ. ಬದುಕು ಇರುವುದೇ ಈ ಕ್ಷಣದಲ್ಲಿ. ಒಂದು ಒಳ್ಳೆಯ ಸಿನಿಮಾ ಮಾಡಲು ಹಂಗಮಾ 2 ತಂಡ ಶ್ರಮಿಸಿದೆ. ಎಂದಿಗೂ ಸಿನಿಮಾಗೆ ತೊಂದರೆ ಆಗಬಾರದು. ಹಾಗಾಗಿ ಇಂದು ನೀವು ನಿಮ್ಮ ಕುಟುಂಬ ಸಮೇತ ಈ ಸಿನಿಮಾ ನೋಡಿ ಅಂತ ನಾನು ಮನವಿ ಮಾಡಿಕೊಳ್ಳುತ್ತೇನೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಶಿಲ್ಪಾ ಶೆಟ್ಟಿ ಪೋಸ್ಟ್ ಮಾಡಿದ್ದಾರೆ.

    ನಟಿ ಶಿಲ್ಪಾ ಶೆಟ್ಟಿ. ಆದರೆ ಅವರ ಪತಿ ರಾಜ್ ಕುಂದ್ರಾ ನೀಲಿ ಚಿತ್ರಗಳ ದಂಧೆಯಲ್ಲಿ ಪ್ರಮುಖ ಆರೋಪಿ ಆಗಿರುವುದರಿಂದ ಅವರು ಮುಜುಗರ ಅನುಭವಿಸುವಂತಾಗಿದೆ. ಮಾಡೆಲ್ ಮತ್ತು ನಟಿಯರನ್ನು ಬಳಸಿಕೊಂಡು ರಾಜ್ ಕುಂದ್ರಾ ಅಶ್ಲೀಲ ಸಿನಿಮಾಗಳನ್ನು ಮಾಡುತ್ತಿದ್ದರು ಎಂಬ ಆರೋಪ ಎದುರಾಗಿದೆ. ಹಾಗಿದ್ದರೂ  ಶಿಲ್ಪಾ ಶೆಟ್ಟಿ ತಮ್ಮ ವೃತ್ತಿಪರತೆಯನ್ನು ಮರೆತಿಲ್ಲ. ಎಂದಿನಂತೆ ತಾವು ನಟಿಸಿದ ಸಿನಿಮಾ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಅದು ಎಲ್ಲರ ಗಮನ ಸೆಳೆಯುತ್ತಿದೆ.