ಬಳ್ಳಾರಿ: ವಿಜಯನಗರ (Vijayanagar) ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಮಳೆಯಾಗುತ್ತಿದೆ. ಇದರಿಂದ ಹಂಪಿಯ (Hampi) ವಿರೂಪಾಕ್ಷ ದೇವಾಲಯದ (Virupaksha Temple) ಆವರಣದಲ್ಲಿ ಮಳೆ ನೀರು ನಿಂತಿದ್ದು, ಜನರು ಹೈರಾಣಾಗುತ್ತಿದ್ದಾರೆ.
ಐತಿಹಾಸಿಕ ಹಂಪಿಯ ಶ್ರೀ ವಿರೂಪಾಕ್ಷ ದೇಗುಲದ ಆವರಣದಲ್ಲಿ ಮಳೆಯಿಂದಾಗಿ ಮೊಣಕಾಲುದ್ಧ ನೀರು ನಿಂತಿದೆ. ಪರಿಣಾಮ ದೇವಸ್ಥಾನಕ್ಕೆ ಬರುವ ಭಕ್ತರು ಹಾಗೂ ಪ್ರವಾಸಿಗರಿಗೆ ಸಮಸ್ಯೆ ಎದುರಾಗಿದೆ. ಬೇರೆ ದಾರಿಯಿಲ್ಲದೇ ಪ್ರವಾಸಿಗರು ನಿಂತ ನೀರಿನಲ್ಲಿಯೇ ನಡೆದುಕೊಂಡು ಹೋಗಿ, ವಿರೂಪಾಕ್ಷೇಶ್ವರನ ದರ್ಶನ ಪಡೆದಿದ್ದಾರೆ.ಇದನ್ನೂ ಓದಿ: ಮುನಿಯಪ್ಪ ಸಿಎಂ ಆದ್ರೆ ನಾನೂ ಸಂತೋಷ ಪಡ್ತೇನೆ: ಪರಮೇಶ್ವರ್
ಮಳೆ ಬಂದಾಗ ನೀರು ಹೊರಹೋಗುವ ವ್ಯವಸ್ಥೆ ಮಾಡಬೇಕಿದ್ದ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದರಿಂದ ಪ್ರವಾಸಿಗರು ಹಿಡಿಶಾಪ ಹಾಕುತ್ತಿದ್ದಾರೆ.
ಬಳ್ಳಾರಿ: ರಾಜ್ಯ ಪ್ರವಾಸದಲ್ಲಿರುವ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman), ಐತಿಹಾಸಿಕ ಹಂಪಿಯ ವಿರುಪಾಕ್ಷೇಶ್ವರನ ಸನ್ನಿಧಿಗೆ (Virupaksha Temple) ಭೇಟಿ ನೀಡಿ ದರ್ಶನ ಪಡೆದು, ಆನೆ ಲಕ್ಷ್ಮೀಯಿಂದ ಹೂವಿನ ಹಾರ ಹಾಕಿಸಿಕೊಂಡರು. ಇದೇ ವೇಳೆ ದೇಶಕ್ಕೆ ಒಳ್ಳೆಯದಾಗಲಿ ಎಂದು ನಿರ್ಮಲಾ ಸೀತಾರಾಮನ್ ಹಂಪಿಯ ವಿರುಪಾಕ್ಷೇಶ್ವರನಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಿದರು.
ಪೂಜೆ ಬಳಿಕ ಮಾತನಾಡಿದ ನಿರ್ಮಲಾ ಸೀತಾರಾಮನ್, ನನಗೆ ಬಹಳಷ್ಟು ಜನ ಹಂಪಿಯನ್ನ ವೀಕ್ಷಣೆ ಮಾಡಿ ಎಂದು ಹೇಳುತ್ತಿದ್ದರು. ಇಂದು ಆ ಅವಕಾಶ ನನಗೆ ಸಿಕ್ಕಿರೊದು ನನ್ನ ಅದೃಷ್ಟ. ಹಂಪಿಯ ಸಾಂಸ್ಕೃತಿಕ ಪರಂಪರೆಯನ್ನ ಕಣ್ತುಂಬಿಕೊಂಡಿರೋದು ತುಂಬಾ ಹೆಮ್ಮಯ ಅನುಭವ ಎಂದರು. ಇದನ್ನೂ ಓದಿ: RSS ಸಂಸ್ಕೃತಿ ತೋರಿಸುವ 20 ವಿಡಿಯೋ ರಿಲೀಸ್ ಮಾಡಿದ್ದೇನೆ: ಪ್ರಿಯಾಂಕ್ ಖರ್ಗೆ ಬಾಂಬ್
ಇಲ್ಲಿಯ ಕಲೆ ಸಂಸ್ಕೃತಿ ಈ ನಾಡಿನ ಪರಂಪರೆಯ ಪ್ರತೀಕವಾಗಿದೆ. ಯುನೆಸ್ಕೊ ಗುರುತಿಸಿರುವ ಐತಿಹಾಸಿಕ ತಾಣ ಹಂಪಿಯ ಪ್ರತಿಯೊಂದು ಶಿಲೆಯು ಇಲ್ಲಿನ ಪರಂಪರೆಯನ್ನ ಪ್ರತಿಬಿಂಬಿಸುವಂತಿದೆ. ಇಲ್ಲಿ ಅನೇಕ ಉತ್ಖನನ ಕಾರ್ಯಗಳ ಜೊತೆಗೆ ಹಂಪಿಯ ಅಭಿವೃದ್ಧಿ ಕಾರ್ಯಗಳೂ ನಡೆಯುತ್ತಿವೆ. ನನಗೆ ಇಲ್ಲಿಯ ಇತಿಹಾಸ ಪರಂಪರೆಯ ಬಗ್ಗೆ ಸಂಸದ ತುಕರಾಂ ಹಾಗೂ ರಾಜ ವಶಂಸ್ಥ ಶ್ರೀ ಕೃಷ್ಣದೇವರಾಯ ವಿವರಿಸಿದ್ದರು. ಹಂಪಿಯ ಪ್ರಾಚೀನ ಸಂಸ್ಕೃತಿ ಕಣ್ತುಂಬಿಕೊಳ್ಳುವುದು ಹೆಮ್ಮೆಯ ಸಂಗತಿ ಎನಿಸುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಬಿಹಾರ ಚುನಾವಣೆಯಲ್ಲಿ ನಾನು ಸ್ಪರ್ಧಿಸಲ್ಲ – ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್
ಬೆಂಗಳೂರು: ಖ್ಯಾತ ಸಾಹಿತಿ, ಹಿರಿಯ ಕತೆಗಾರ ಪ್ರೊ.ಮೊಗಳ್ಳಿ ಗಣೇಶ್ (64) ಭಾನುವಾರ ಅನಾರೋಗ್ಯದಿಂದ ಮನೆಯಲ್ಲಿ ನಿಧನರಾದರು. ಇವರು ಪತ್ನಿ, ಮೂವರು ಪುತ್ರಿಯರನ್ನು ಅಗಲಿದ್ದಾರೆ.
ಹಂಪಿ ಕನ್ನಡ ವಿಶ್ವವಿದ್ಯಾಲಯ (Hampi Kannada University) ಸುಮಾರು 28 ವರ್ಷ ಪ್ರಾಧ್ಯಾಪಕರಾಗಿದ್ದ ಮೊಗಳ್ಳಿ ಗಣೇಶ್ (Mogalli Ganesh) ತಮ್ಮ ವಿಶಿಷ್ಟ ಶೈಲಿಯ ಕಥೆಗಳ ಮೂಲಕ ಅವರು ಸಾಹಿತ್ಯ ಲೋಕದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದವರು. ಹಂಪಿಯ ಕನ್ನಡ ವಿಶ್ವವಿದ್ಯಾನಿಲಯದಲ್ಲಿ ಸೇವೆ ಸಲ್ಲಿಸಿದ್ದ ಅವರು ‘ಸೂರ್ಯನನ್ನು ಬಚ್ಚಿಡಬಹುದೆ?’ ಮತ್ತು ‘ಅನಾದಿ’ ಕಾವ್ಯ ಸಂಕಲನಗಳ ಮೂಲಕ ಹೆಸರು ಮಾಡಿದರು.
ಬುಗುರಿ, ಮಣ್ಣು, ಅತ್ತೆ, ಭೂಮಿ, ಕನ್ನೆಮಳೆ, ದೇವರ ದಾರಿ, ಮೊಗಳ್ಳಿ ಕಥೆಗಳು (ಆವರೆಗಿನ ಬಹುಪಾಲು ಕಥೆಗಳ ಸಂಕಲನ) ಮುಂತಾದವು ಮೊಗಳ್ಳಿ ಗಣೇಶ್ ಅವರ ಕಥಾ ಸಂಕಲನಗಳು. ತೊಟ್ಟಿಲು, ಕಿರೀಟ ಅವರ ಕಾದಂಬರಿಗಳು. ‘ಬೇರು’ ಅವರ ಬೃಹತ್ ಕಾದಂಬರಿ. ‘ಕಥನ’ ಅವರ ಪ್ರಬಂಧ ಸಂಕಲನ. ‘ಸೊಲ್ಲು’, ‘ವಿಮರ್ಶೆ’, ‘ಶಂಬಾ ಭಾಷಿಕ ಸಂಶೋಧನೆ’, ‘ತಕರಾರು’ ಅವರ ವಿಮರ್ಶಾ ಕೃತಿಗಳು. ‘ವಿಶ್ಲೇಷಣೆ’ ಎಂಬ ಅಂಕಣ ಕೂಡಾ ಜನಪ್ರಿಯ. ‘ಅಂಬೇಡ್ಕರ್ ಎಂಬ ಮಹಾನದಿ ಮತ್ತು ದಲಿತೀಕರಣಗೊಂಡ ಗಾಂಧೀಜಿ’ ಅವರ ಚಿಂತನ ಕೃತಿ. ಗಣೇಶ್ ಇತರ ಭಾಷೆಗಳ ಕೃತಿಗಳನ್ನು ಕನ್ನಡಕ್ಕೆ ತಂದರೆ, ಅವರ ಅನೇಕ ಬರಹಗಳು ಇತರ ಭಾಷೆಗಳಿಗೆ ಅನುವಾದಗೊಂಡಿದೆ.
ಮೊಗಳ್ಳಿ ಗಣೇಶ್ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ವರನಟ ಡಾ.ರಾಜಕುಮಾರ್ ಹೆಸರಿನಲ್ಲಿರುವ ಅಧ್ಯಯನ ಪೀಠಕ್ಕೆ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಕನ್ನಡದ ಖ್ಯಾತ ಕಥೆಗಾರ ,ವಿಮರ್ಶಕ ಡಾ. ಮೊಗಳ್ಳಿ ಗಣೇಶ್ ಅವರ ನಿಧನಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರೂ ಆಗಿದ್ದ ಮೊಗಳ್ಳಿ ಗಣೇಶ್ ಅವರ ನಿಧನದಿಂದ ಕನ್ನಡ ಸಾಹಿತ್ಯ ಒಬ್ಬ ಅತ್ಯುತ್ತಮ ಬರಹಗಾರನನ್ನ ಕಳೆದುಕೊಂಡಿದೆ ಎಂದು ಸಚಿವ ಶಿವರಾಜ ತಂಗಡಗಿ ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.
ಬಳ್ಳಾರಿ: ಸರಣಿ ರಜೆ ಹಿನ್ನೆಲೆ ದಕ್ಷಿಣ ಕಾಶಿ, ವಿಶ್ವವಿಖ್ಯಾತ ಹಂಪಿಗೆ (Hampi) ಪ್ರವಾಸಿಗರ (Tourist) ದಂಡು ಹರಿದು ಬಂದಿದೆ.
ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ವಿಶ್ವಪ್ರಸಿದ್ಧ ಹಂಪಿ ಕಳೆದೆರಡು ದಿನಗಳಿಂದ ಪ್ರವಾಸಿಗರಿಂದ ತುಂಬಿ ತುಳುಕುತ್ತಿದೆ. ವಿಜಯ-ವಿಠ್ಠಲ ದೇಗುಲ, ಕಲ್ಲಿನ ತೇರು ಹಾಗೂ ವಿರೂಪಾಕ್ಷೇಶ್ವರ ದೇವಸ್ಥಾನದ ಬಳಿ ಸಹಸ್ರಾರು ಪ್ರವಾಸಿಗರು ಸೇರಿದ ಕಾರಣ ಹೆಚ್ಚಿನ ಜನದಟ್ಟಣೆಯಿಂದ ಹಲವೆಡೆ ಟ್ರಾಫಿಕ್ (Traffic) ಕಿರಿಕಿರಿ ಉಂಟಾಗಿತ್ತು.ಇದನ್ನೂಓದಿ: ಪಿಓಪಿ ಮೂರ್ತಿಗಳ ವಿಸರ್ಜನೆಯಿಂದ ಜಲಚರಗಳ ಸಾವು –ಮಣ್ಣಿನ ಗಣಪನ ಪೂಜಿಸಲು ಈಶ್ವರ್ಖಂಡ್ರೆಮನವಿ
ಹಂಪಿಯ ಸ್ಮಾರಕಗಳ ಬಳಿ ಜನಸಾಗರವೇ ಹರಿದು ಬಂದಿದರೂ ಬ್ಯಾಟರಿ ಚಾಲಿತ ವಾಹನಗಳಿಲ್ಲದೇ ಪ್ರವಾಸಿಗರು ಪರದಾಡಿದರು. ಇತ್ತ ಸರಣಿ ರಜೆ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬಂದಿದ್ದರಿಂದ ಜನಸಂದಣೆ ನಿಯಂತ್ರಿಸಲು ಪೊಲೀಸರ ಹರಸಾಹಸಪಟ್ಟರು.
ಕೊಪ್ಪಳ: ಮಲೆನಾಡಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆ ಟಿಬಿ ಡ್ಯಾಂಗೆ (TB Dam) ಒಳಹರಿವು ಹೆಚ್ಚಾಗಿದೆ. ಹೀಗಾಗಿ ಡ್ಯಾಂನ 26 ಗೇಟ್‌ಗಳಿಂದ 90,893 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ಹಂಪಿ (Hampi) ಸ್ಮಾರಕಗಳಿಗೆ ಮುಳುಗಡೆ ಭೀತಿ ಎದುರಾಗಿದೆ.ಇದನ್ನೂ ಓದಿ: ಮಳೆಯಬ್ಬರ – ರಾಜ್ಯದ ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ
ಮಲೆನಾಡು ಭಾಗದಲ್ಲಿ ಮಳೆ ಪ್ರಮಾಣ ಹೆಚ್ಚಾಗಿದ್ದು, ತುಂಗಭದ್ರಾ ಜಲಾಶಯಕ್ಕೆ ಒಳಹರಿವಿನ ಪ್ರಮಾಣದಲ್ಲಿ ಏರಿಕೆಯಾಗಿದೆ. ಒಳಹರಿವು ಹೆಚ್ಚಾದ ಹಿನ್ನೆಲೆ ಸದ್ಯ ಜಲಾಶಯದಿಂದ 90,893 ಕ್ಯೂಸೆಕ್ ನೀರು ರಿಲೀಸ್ ಮಾಡಲಾಗಿದೆ. ಜಲಾಶಯದ 33 ಗೇಟ್‌ಗಳ ಪೈಕಿ 26 ಕ್ರಸ್ಟ್ ಗೇಟ್‌ಗಳ ಮೂಲಕ ನೀರು ಬಿಡಲಾಗುತ್ತಿದೆ.
ಏಕಾಏಕಿ ನೀರನ್ನು ಬಿಡುಗಡೆ ಮಾಡಿದ್ದು, ತುಂಗಭದ್ರಾ ನದಿ (Tungabhadra River) ಪಾತ್ರದಲ್ಲಿ ಪ್ರವಾಹದ ಭೀತಿ ಹೆಚ್ಚಾಗಿದೆ. ಹೀಗಾಗಿ ನದಿ ಪಾತ್ರದ ಗ್ರಾಮಗಳ ಜನರು ನದಿ ತೀರಕ್ಕೆ ಹೋಗದಂತೆ ಟಿಬಿ ಬೋರ್ಡ್ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಒಂದು ವೇಳೆ ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಳವಾದರೆ, ಇನ್ನಷ್ಟು ಪ್ರಮಾಣದ ನೀರನ್ನು ನದಿಗೆ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಸದ್ಯ 90,893 ಸಾವಿರ ಕ್ಯೂಸೆಕ್ ನೀರು ರಿಲೀಸ್ ಮಾಡಿರುವುದರಿಂದ ಹಂಪಿಯ ಕೆಲ ಸ್ಮಾರಕಗಳಿಗೆ ಮುಳುಗಡೆ ಭೀತಿ ಎದುರಾಗಿದೆ.ಇದನ್ನೂ ಓದಿ: ಬೆಂಗಳೂರಲ್ಲಿ ಚಿನ್ನದಂಗಡಿ ದರೋಡೆ ಕೇಸ್ – ಟಾಯ್ ಗನ್ ತೋರಿಸಿ ಚಿನ್ನ ರಾಬರಿ
ಬಳ್ಳಾರಿ/ಕೊಪ್ಪಳ: ಒಳ ಹರಿವು ಹೆಚ್ಚಳವಾಗಿದ್ದರಿಂದ ಜಲಾಶಯದಿಂದ (TB Dam) ತುಂಗಭದ್ರಾ ನದಿಗೆ (Tungabhadra River) 35,100 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ.
12 ಗೇಟ್ ಗಳನ್ನು ಓಪನ್ ಮಾಡಿ ನದಿಗೆ ನೀರು ರಿಲೀಸ್ ಮಾಡಿದ್ದರಿಂದ ಹಂಪಿಯ (Hampi) ಸ್ನಾನಘಟಕ್ಕೆ ಪ್ರವಾಸಿಗರು ತೆರಳದಂತೆ ಹಾಗೂ ನದಿ ಪಾತ್ರಕ್ಕೆ ಜನ-ಜಾನುವಾರು ತೆರಳದಂತೆ ತುಂಗಾಭದ್ರಾ ಬೋರ್ಡ್ ಸೂಚನೆ ನೀಡಿದೆ.
ಸದ್ಯ ಜಲಾಶಯಕ್ಕೆ 34,625 ಕ್ಯೂಸೆಕ್ ನೀರು ಒಳ ಹರಿವು ಇರುವುದಿಂದ ಯಾವುದೇ ಕ್ಷಣದಲ್ಲಿ ಬೇಕಾದ್ರೂ ನದಿಗೆ ಇನ್ನಷ್ಟು ಪ್ರಮಾಣದ ನೀರು ಬಿಡುಗಡೆ ಮಾಡುವ ಸಾಧ್ಯತೆ ಇದೆ.
ಅಂತರಜಿಲ್ಲಾ ಸಂಪರ್ಕ ಸ್ಥಗಿತ:
ಕೊಪ್ಪಳ ತಾಲ್ಲೂಕಿನ ಮುನಿರಾಬಾದ್, ಹುಲಗಿ, ತಿರುಮಲಾಪುರ, ಗಂಗಾವತಿ ತಾಲ್ಲೂಕಿನ ಸಣಾಪುರ, ಹನುಮನಹಳ್ಳಿ, ಆನೆಗೊಂದಿ, ಚಿಕ್ಕಜಂತಕಲ್, ಮುಸ್ಟೂರು, ಕಾರಟಗಿ ತಾಲ್ಲೂಕಿನ ನಂದಿಹಳ್ಳಿ, ಶಾಲಿಗೆನೂರು, ಕಕ್ಕರಗೋಳ ಸೇರಿದಂತೆ ಇತರ ಗ್ರಾಮಗಳ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಎದುರಾಗಿದೆ.
ತಳವಾರಘಟ್ಟದಿಂದ ಹಂಪಿ ದಡಕ್ಕೆ ಸೇರಿಸುತ್ತಿದ್ದ ದೋಣಿಗಳೂ ಸಂಚಾರವೂ ಬಂದ್ ಆಗಿದೆ. ವಿರುಪಾಪುರ ಗಡ್ಡೆಯಿಂದ ಹಂಪಿಯ ವಿರೂಪಾಕ್ಷನ ದರ್ಶಕ್ಕೆ ಹೋಗುವವರ ಮಧ್ಯೆ ಸಂಪರ್ಕ ಸೇತುವಾಗಿದ್ದ ದೋಣಿ ವಿಹಾರ ಬಂದ್ ಮಾಡಲಾಗಿದೆ.
ಬಳ್ಳಾರಿ: ವಿಶ್ವಪಾರಂಪರಿಕ ತಾಣಗಳಲ್ಲಿ ಒಂದಾಗಿರುವ ಹಂಪಿಯಲ್ಲಿ(Hampi) ರಾಜ್ಯದ ಎರಡನೇ ಅತಿದೊಡ್ಡ ಹಾಗೂ ಕಲ್ಯಾಣ ಕರ್ನಾಟಕದ ಅತಿದೊಡ್ಡ ತಾರಾಲಯ(Planetarium) ಹಾಗೂ ವಿಜ್ಞಾನ ಕೇಂದ್ರವನ್ನು ನಿರ್ಮಿಸಲಾಗುವುದು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್ ಬೋಸರಾಜು(N S Bosaraju) ತಿಳಿಸಿದರು.
ಉತ್ತಮ ಜಾಗ ಮಂಜೂರು:
ಕಮಲಾಪುರದ(Kamalapura) ಪ್ರಮುಖ ಜಾಗವನ್ನು ವಿಜ್ಞಾನ ಕೇಂದ್ರ ಹಾಗೂ ತಾರಾಲಯ ನಿರ್ಮಾಣಕ್ಕೆ ಮಂಜೂರು ಮಾಡಲಾಗಿದೆ. ಪ್ರಮುಖ ರಸ್ತೆಯಲ್ಲಿ 10 ಎಕ್ರೆ ಜಾಗ ಮಂಜೂರಾಗಿದ್ದು, ಉತ್ತಮ ವಿನ್ಯಾಸದ ಮೂಲಕ ಜಾಗದ ಸದುಪಯೋಗ ಪಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು. ಇದನ್ನೂ ಓದಿ: ಭಾರತ ಪ್ರಪಂಚದಾದ್ಯಂತದ ನಿರಾಶ್ರಿತರಿಗೆ ಆಶ್ರಯ ನೀಡುವ ಧರ್ಮಶಾಲೆಯಲ್ಲ – ಸುಪ್ರೀಂ
ರಾಜ್ಯದ ಎರಡನೇ ಅತಿದೊಡ್ಡ ತಾರಾಲಯ:
ಕಲ್ಯಾಣ ಕರ್ನಾಟಕದ ಅತಿದೊಡ್ಡ ಹಾಗೂ ರಾಜ್ಯದ 2ನೇ ಅತಿದೊಡ್ಡ ತಾರಾಲಯವನ್ನು ಇಲ್ಲಿ ನಿರ್ಮಿಸಲು ಯೋಜಿಸಲಾಗಿದೆ. 12 ಮೀ. ನಾನೋಸೀಮ್ ಡೋಮ್ ತಾರಾಲಯ ಹಾಗೆಯೇ ಅತ್ಯಾಧುನಿಕ ಸೌಲಭ್ಯಗಳನು ಹೊಂದಿರುವ ವಿಜ್ಞಾನ ಕೇಂದ್ರ ನಿರ್ಮಿಸಲಾಗುವುದು. ಪ್ರವಾಸೋದ್ಯಮ ಇಲಾಖೆ ಈ ಜಾಗವನ್ನು ನೀಡಿದೆ. ಇಲ್ಲಿ ಕಾಮಗಾರಿಗಳ ಪ್ರಾರಂಭಕ್ಕೆ ಅಗತ್ಯ ತಯಾರಿ ನಡೆಸುವಂತೆ ಸೂಚಿಸಿದರು. ಇದನ್ನೂ ಓದಿ: ಜನೌಷಧಿ ಕೇಂದ್ರಗಳ ಪುನರಾರಂಭಕ್ಕೆ ಸಂಸದ ಕಾರಜೋಳ ಆಗ್ರಹ
ಕಲ್ಯಾಣ ಕರ್ನಾಟಕ ಭಾಗದ ಯುವ ಜನರಲ್ಲಿ ವೈಜ್ಞಾನಿಕ ಮನೋಭಾವ, ವಿಜ್ಞಾನ ಮತ್ತು ತಂತ್ರಜ್ಞಾನದ ಬಗ್ಗೆ ಆಸಕ್ತಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಹೊಸ ಯೋಜನೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಸಿಎಂ ಸಿದ್ದರಾಮಯ್ಯನವರ(Siddaramaiah) ಆಶಯದಂತೆ ಪ್ರತಿ ಜಿಲ್ಲೆಗಳಲ್ಲೂ ವಿಜ್ಞಾನ ಕೇಂದ್ರ ಹಾಗೂ ತಾರಾಲಯ ನಿರ್ಮಿಸಲಾಗುತ್ತಿದೆ. ಯುನೆಸ್ಕೋ ಪಾರಂಪರಿಕ ತಾಣವಾಗಿರುವ ಹಂಪಿಯಲ್ಲಿ ಉತ್ತಮ ದರ್ಜೆಯ ಸೌಲಭ್ಯಗಳನ್ನು ಕಲ್ಪಿಸುವುದು ನಮ್ಮ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಕೇಂದ್ರದಿಂದ 4,195 ಕೋಟಿ ಅನುದಾನ ಬಾಕಿ; ಸಿಎಂ ಬೂಟಾಟಿಕೆ ಪ್ರದರ್ಶನ – ಜೋಶಿ ವಾಗ್ದಾಳಿ
ಈ ಸಂದರ್ಭದಲ್ಲಿ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ(ಕೆಸ್ಟೆಪ್ಸ್‌ನ) ವ್ಯವಸ್ಥಾಪಕ ನಿರ್ದೇಶಕ ಸದಾಶಿವ ಪ್ರಭು ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
-4 ಚೆಕ್‌ಪೋಸ್ಟ್ ನಿರ್ಮಿಸಿ, ಭದ್ರತೆ ಹೆಚ್ಚಿಸಿದ ಪೊಲೀಸ್ ಇಲಾಖೆ
ಬಳ್ಳಾರಿ: ಭಾರತ-ಪಾಕಿಸ್ತಾನ (India-Pakistan) ಗಡಿಯಲ್ಲಿ ಉದ್ವಿಗ್ನ ವಾತಾವರಣ ಹಿನ್ನೆಲೆ ದಕ್ಷಿಣ ಕಾಶಿ, ಯುನೆಸ್ಕೋ ವಿಶ್ವಪಾರಂಪರಿಕ ತಾಣ ಹಂಪಿಯ (Hampi) ಮೇಲೆ ಕೇಂದ್ರ, ರಾಜ್ಯ ಸರ್ಕಾರ ವಿಶೇಷ ನಿಗಾವಹಿಸಿದ್ದು, ಹೆಚ್ಚಿನ ಭದ್ರತೆ ಒದಗಿಸಲಾಗಿದೆ.ಇದನ್ನೂ ಓದಿ: ಕುಂಭಮೇಳದ ನೀಲಿ ಕಂಗಳ ಚೆಲುವೆಗೆ ಬಿಗ್ ಚಾನ್ಸ್- ಫ್ಯಾನ್ಸ್‌ಗೆ ಗುಡ್ ನ್ಯೂಸ್
ಹಂಪಿಗೆ ಬರುವ ಎಲ್ಲಾ ವಾಹನಗಳ ತಪಾಸಣೆ ಮಾಡಲಾಗುತ್ತಿದ್ದು, ಪ್ರತಿಯೊಬ್ಬ ಪ್ರವಾಸಿಗನ ಪರಿಶೀಲನೆ ನಡೆಸಲಾಗುತ್ತಿದೆ. ಜೊತೆಗೆ ಹಂಪಿಗೆ ಬರುವ ಮಾರ್ಗಗಳಲ್ಲಿ 4 ಚೆಕ್‌ಪೋಸ್ಟ್ಗಳನ್ನು ನಿರ್ಮಾಣ ಮಾಡಲಾಗಿದೆ. 24 ಗಂಟೆಗಳ ಕಾಲ ಎರಡು ಚೆಕ್‌ಪೋಸ್ಟ್‌ಗಳು ಕಾರ್ಯ ನಿರ್ವಹಿಸುತ್ತಿದ್ದು, ಕಲ್ಲಿನ ತೇರಿನ ಬಳಿ ಹಗಲು ಹೊತ್ತಿನಲ್ಲಿ ಚೆಕ್‌ಪೋಸ್ಟ್ ಕಾರ್ಯನಿರ್ವಹಿಸುತ್ತಿದೆ.
ಹೊಸ ವರ್ಷ ಸಂಭ್ರಮಿಸಲು ಹಂಪಿಗೆ ಆಗಮಿಸ್ತಿರುವ ಪ್ರವಾಸಿಗರು ಬೆಳ್ಳಂಬೆಳಗ್ಗೆ ಹಂಪಿಯ ಮಾತಂಗ ಬೆಟ್ಟದಲ್ಲಿ ಜಮಾಯಿಸಿದ್ದಾರೆ. ಬೆಟ್ಟದ ತುತ್ತ ತುದಿ ಏರಿರುವ ಪ್ರವಾಸಿಗರು, ವರ್ಷದ ಮೊದಲ ಸೂರ್ಯೋದಯ ಕಣ್ತುಂಬಿಕೊಂಡರು. ರಾಜ್ಯ ಅಲ್ಲದೇ ದೇಶ-ವಿದೇಶಗಳಿಂದ ಬಂದಿದ್ದ ಪ್ರವಾಸಿಗರು ಸೂರ್ಯೋದಯ ವೀಕ್ಷಣೆ ಮಾಡಿ, ಬೆಟ್ಟದಲ್ಲೇ ದ್ಯಾನಕ್ಕೆ ಕುಳಿತರು.
ಬಳ್ಳಾರಿ: ವಿಶ್ವವಿಖ್ಯಾತ ಹಂಪಿಯಲ್ಲಿ ಹೊಸ ವರ್ಷದ ಆಚರಣೆಗೆ ಯಾವುದೇ ನಿರ್ಬಂಧ ವಿಧಿಸಿಲ್ಲ. ಎಂದಿನಂತೆ ಪ್ರವಾಸಿಗರಿಗೆ ಹಂಪಿಗೆ (Hampi) ಮುಕ್ತ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ.
ಹೊಸ ವರ್ಷಾಚರಣೆಗೆ ಕ್ಷಣಗಣನೆ ಶುರುವಾಗಿದ್ದು, ರಾಜ್ಯದ ಹಲವೆಡೆ ಧಾರ್ಮಿಕ ಕ್ಷೇತ್ರಗಳ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಆದರೆ ಹಂಪಿಯಲ್ಲಿ ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧವಿಲ್ಲದ ಕಾರಣ ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಿದೆ.ಇದನ್ನೂ ಓದಿ: ಬೈಕ್, ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ – 3 ಮಂದಿ ಸಾವು
ಹೊಸ ವರ್ಷಾಚರಣೆ ಹಿನ್ನೆಲೆ ಇಂದು (ಡಿ.31) ಹಾಗೂ ನಾಳೆ (ಜ.01) ಲಕ್ಷಾಂತರ ಪ್ರವಾಸಿಗರು ಹಂಪಿಗೆ ಭೇಟಿ ನೀಡುವ ನಿರೀಕ್ಷೆ ಇದೆ. ದೇಶ, ವಿದೇಶಗಳಿಂದ ಲಕ್ಷಾಂತರ ಪ್ರವಾಸಿಗರು ಹಂಪಿ ಪ್ರವಾಸಕ್ಕೆ ಬರಲಿದ್ದಾರೆ ಎನ್ನಲಾಗಿದೆ. ಅಲ್ಲದೇ ರಾಜ್ಯದ ವಿವಿಧ ಜಿಲ್ಲೆಗಳಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳು ಪ್ರವಾಸಕ್ಕೆ ಬರುವ ಸಾಧ್ಯತೆ ಇದೆ. ಹಂಪಿ ಭೇಟಿಗೆ ಬರುವ ಪ್ರವಾಸಿಗರು, ತುಂಗಭದ್ರಾ ಜಲಾಶಯ ಹಾಗೂ ಅಂಜನಾದ್ರಿಗೂ ಭೇಟಿ ನೀಡಲಿದ್ದಾರೆ.