Tag: ಹಂಪಿ ಸ್ಮಾರಕಗಳು

  • ಟಿಬಿ ಡ್ಯಾಂನ 26 ಗೇಟ್‌ಗಳಿಂದ 90,893 ಕ್ಯೂಸೆಕ್ ನೀರು ರಿಲೀಸ್ – ಮುಳುಗಡೆ ಭೀತಿಯಲ್ಲಿ ಹಂಪಿ ಸ್ಮಾರಕಗಳು

    ಟಿಬಿ ಡ್ಯಾಂನ 26 ಗೇಟ್‌ಗಳಿಂದ 90,893 ಕ್ಯೂಸೆಕ್ ನೀರು ರಿಲೀಸ್ – ಮುಳುಗಡೆ ಭೀತಿಯಲ್ಲಿ ಹಂಪಿ ಸ್ಮಾರಕಗಳು

    ಕೊಪ್ಪಳ: ಮಲೆನಾಡಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆ ಟಿಬಿ ಡ್ಯಾಂಗೆ (TB Dam) ಒಳಹರಿವು ಹೆಚ್ಚಾಗಿದೆ. ಹೀಗಾಗಿ ಡ್ಯಾಂನ 26 ಗೇಟ್‌ಗಳಿಂದ 90,893 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ಹಂಪಿ (Hampi) ಸ್ಮಾರಕಗಳಿಗೆ ಮುಳುಗಡೆ ಭೀತಿ ಎದುರಾಗಿದೆ.ಇದನ್ನೂ ಓದಿ: ಮಳೆಯಬ್ಬರ – ರಾಜ್ಯದ ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

    ಮಲೆನಾಡು ಭಾಗದಲ್ಲಿ ಮಳೆ ಪ್ರಮಾಣ ಹೆಚ್ಚಾಗಿದ್ದು, ತುಂಗಭದ್ರಾ ಜಲಾಶಯಕ್ಕೆ ಒಳಹರಿವಿನ ಪ್ರಮಾಣದಲ್ಲಿ ಏರಿಕೆಯಾಗಿದೆ. ಒಳಹರಿವು ಹೆಚ್ಚಾದ ಹಿನ್ನೆಲೆ ಸದ್ಯ ಜಲಾಶಯದಿಂದ 90,893 ಕ್ಯೂಸೆಕ್ ನೀರು ರಿಲೀಸ್ ಮಾಡಲಾಗಿದೆ. ಜಲಾಶಯದ 33 ಗೇಟ್‌ಗಳ ಪೈಕಿ 26 ಕ್ರಸ್ಟ್ ಗೇಟ್‌ಗಳ ಮೂಲಕ ನೀರು ಬಿಡಲಾಗುತ್ತಿದೆ.

    ಏಕಾಏಕಿ ನೀರನ್ನು ಬಿಡುಗಡೆ ಮಾಡಿದ್ದು, ತುಂಗಭದ್ರಾ ನದಿ (Tungabhadra River) ಪಾತ್ರದಲ್ಲಿ ಪ್ರವಾಹದ ಭೀತಿ ಹೆಚ್ಚಾಗಿದೆ. ಹೀಗಾಗಿ ನದಿ ಪಾತ್ರದ ಗ್ರಾಮಗಳ ಜನರು ನದಿ ತೀರಕ್ಕೆ ಹೋಗದಂತೆ ಟಿಬಿ ಬೋರ್ಡ್ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಒಂದು ವೇಳೆ ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಳವಾದರೆ, ಇನ್ನಷ್ಟು ಪ್ರಮಾಣದ ನೀರನ್ನು ನದಿಗೆ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಸದ್ಯ 90,893 ಸಾವಿರ ಕ್ಯೂಸೆಕ್ ನೀರು ರಿಲೀಸ್ ಮಾಡಿರುವುದರಿಂದ ಹಂಪಿಯ ಕೆಲ ಸ್ಮಾರಕಗಳಿಗೆ ಮುಳುಗಡೆ ಭೀತಿ ಎದುರಾಗಿದೆ.ಇದನ್ನೂ ಓದಿ: ಬೆಂಗಳೂರಲ್ಲಿ ಚಿನ್ನದಂಗಡಿ ದರೋಡೆ ಕೇಸ್‌ – ಟಾಯ್‌ ಗನ್ ತೋರಿಸಿ ಚಿನ್ನ ರಾಬರಿ

  • ಕಂಪ್ಲಿ-ಗಂಗಾವತಿ ಸಂಪರ್ಕ ಕಲ್ಪಿಸುವ ಸೇತುವೆ ಮುಳುಗಡೆ

    ಕಂಪ್ಲಿ-ಗಂಗಾವತಿ ಸಂಪರ್ಕ ಕಲ್ಪಿಸುವ ಸೇತುವೆ ಮುಳುಗಡೆ

    – ಹಂಪಿಯ ಹಲವು ಸ್ಮಾರಕಗಳು ಜಲಾವೃತ

    ಬಳ್ಳಾರಿ: ಜಿಲ್ಲೆಯ ಕಂಪ್ಲಿ ಪಟ್ಟಣದ ಸಮೀಪದ ತುಂಗಭದ್ರಾ ನದಿಗೆ 1.12 ಲಕ್ಷ ಕ್ಯೂಸೆಕ್ ನೀರು ಬಿಟ್ಟ ಹಿನ್ನೆಲೆಯಲ್ಲಿ ಅಪಾಯದ ಮಟ್ಟ ಮೀರಿ ತುಂಗಭದ್ರಾ ನದಿ ಹರಿಯುತ್ತಿದೆ. ಇದರಿಂದ ಕಂಪ್ಲಿ-ಗಂಗಾವತಿ ಸಂಪರ್ಕ ಕಲ್ಪಿಸುವ ಸೇತುವೆ ಮುಳುಗಡೆಯಾಗಿದೆ.

    ಸೇತುವೆ ಮುಳುಗಡೆಯಾದ ಹಿನ್ನೆಲೆಯಲ್ಲಿ ಕಂಪ್ಲಿ-ಗಂಗಾವತಿ ಸಂಪರ್ಕ ಬಂದ್ ಆಗಿದೆ. ಅಲ್ಲದೇ ಸ್ಥಳದಲ್ಲಿ ಅಧಿಕಾರಿಗಳು ಮತ್ತು ಪೊಲೀಸರು ಬಿಡುಬಿಟ್ಟಿದ್ದಾರೆ. ಇನ್ನೂ ಅಪಾಯದ ಮಟ್ಟ ಮೀರಿ ತುಂಗಭದ್ರಾ ನದಿ ಹರಿಯುತ್ತಿರುವುದರಿಂದ ನದಿ ಪಾತ್ರದಲ್ಲಿರುವ 54 ಕುಟುಂಬಗಳನ್ನು ತಾತ್ಕಾಲಿಕವಾಗಿ ಬೇರೆ ಕಡೆ ಸ್ಥಳಾಂತರ ಮಾಡಲು ಪೊಲೀಸರು ನಿರ್ಧಾರ ಮಾಡಿದ್ದಾರೆ.

    ಇತ್ತ ತುಂಗಭದ್ರಾ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ 20 ಕ್ರಸ್ಟ್ ಗೇಟ್‍ಗಳ ಮೂಲಕ ನೀರನ್ನು ನದಿಗೆ ಹರಿಬಿಡಲಾಗಿದೆ. ಪರಿಣಾಮ ಹಂಪಿಯ ಹಲವು ಸ್ಮಾರಕಗಳು ಮುಳುಗಡೆಯಾಗಿವೆ. ಪುರಂದರ ದಾಸರ ಮಂಟಪ, ಸಾಲುಮಂಟಪ, ಧಾರ್ಮಿಕ ವಿಧಿಗಳನ್ನು ಮಾಡುವ ಮಂಟಪಗಳು ಸೇರಿದಂತೆ ಹಲವು ಸ್ಮಾರಕ ಮುಳುಗಡೆಯಾಗಿವೆ. ಅಲ್ಲದೇ ಜಿಲ್ಲಾಡಳಿತ ಹಂಪಿಯಿಂದ ವಿರೂಪಾಪುರಗಡ್ಡೆ ತೆರಳು ಬೋಟ್ ಸ್ಥಗಿತಗೊಳಿಸಿದೆ. ನದಿಯಲ್ಲಿ ತೆಪ್ಪ ಹಾಕದಂತೆಯೂ ಎಚ್ಚರಿಕೆ ನೀಡಿದೆ.

    ಜಿಲ್ಲೆಯಲ್ಲಿ ಅಷ್ಟೇನೂ ಮಳೆಯಾಗಿಲ್ಲ. ಆದರೆ ಮಲೆನಾಡಿನಲ್ಲಿ ಸುರಿಯುತ್ತಿರೋ ಮಳೆಯಿಂದಾಗಿ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಜಲಾಶಯದಿಂದ ನೀರು ಬಿಟ್ಟ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರಿಗೆ ಎಚ್ಚರಿಕೆಯಿಂದ ಇರುವುದಕ್ಕೆ ಜಿಲ್ಲಾಡಳಿತ ಆದೇಶ ನೀಡಿದೆ.