Tag: ಹಂಸಲೇಖಾ

  • ಹಂಸಲೇಖಾ ವಿರುದ್ಧ ನೀಡಿದ್ದ ದೂರನ್ನು ಹಿಂಪಡೆದ ಕೃಷ್ಣರಾಜ್

    ಹಂಸಲೇಖಾ ವಿರುದ್ಧ ನೀಡಿದ್ದ ದೂರನ್ನು ಹಿಂಪಡೆದ ಕೃಷ್ಣರಾಜ್

    ಬೆಂಗಳೂರು: ಸ್ಯಾಂಡಲ್‍ವುಡ್ ಖ್ಯಾತ ಸಂಗೀತಾ ನಿರ್ದೇಶಕ ಹಂಸಲೇಖಾ ವಿರುದ್ಧ ದಾಖಲಿಸಿದ್ದ ದೂರನ್ನು ಕೃಷ್ಣರಾಜ್ ಅವರು ಹಿಂಪಡೆದುಕೊಂಡಿದ್ದಾರೆ.

    ಇತ್ತೀಚೆಗಷ್ಟೇ ಮೈಸೂರಿನ ಮಾನಸಗಂಗೋತ್ರಿಯಲ್ಲಿಯಲ್ಲಿ ನಡೆದಿದ್ದ ಪ್ರಶಸ್ತಿ ಸಮಾರಂಭವೊಂದರ ಕಾರ್ಯಕ್ರಮದಲ್ಲಿ ಹಂಸಲೇಖ ಅವರು, ಪೇಜಾವರ ಶ್ರೀಗಳು ದಲಿತರ ಮನೆಗೆ ಹೋಗಿ ಕುಳಿತುಕೊಂಡು ಬಂದಿದ್ದಾರೆ. ಆದರೆ ದಲಿತರು ಕೋಳಿ ಕೊಟ್ರೆ ತಿಂತಾರಾ.? ಕುರಿ ರಕ್ತ ಪ್ರೈ ಮಾಡಿ ಕೊಟ್ರೆ ತಿಂತಾರಾ. ಲಿವರ್ ಕೊಟ್ರೆ ತಿಂತಾರಾ? ದಲಿತರ ಮನೆಗೆ ಹೋಗುವುದು ದೊಡ್ಡ ವಿಷಯ ಅಲ್ಲ, ತಮ್ಮ ಮನೆಗೆ ಕರೆದುಕೊಂಡು ಹೋಗಿ ಅವರು ತಿಂದ ಲೋಟ, ತಟ್ಟೆ ತೊಳೆಯೋದು ದೊಡ್ಡ ವಿಷಯ ಎಂದು ಹೇಳಿದ್ದರು

    ಹೀಗಾಗಿ ಪೇಜಾವರ ಶ್ರೀಗಳ ವಿರುದ್ಧ ಹಂಸಲೇಖ ಅವರು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಕೃಷ್ಣರಾಜ್ ಅವರು ಬಸವನಗುಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೀಗ ಬ್ರಾಹ್ಮಣ ಸಂಘದ ದೂರಿಗೆ ನಾನು ಬೆಂಬಲಿಸ್ತೇನೆ ಅದಕ್ಕಾಗಿ ತನ್ನ ದೂರನ್ನು ಹಿಂಪಡೆಯುವುದಾಗಿ ಸಮಜಾಯಿಷಿ ನೀಡಿ ದೂರನ್ನು ಹಿಂಪಡೆದಿದ್ದಾರೆ. ಇದನ್ನೂ ಓದಿ:  ದಲಿತರು ಕೋಳಿ ಕೊಟ್ಟರೆ ತಿನ್ನುತ್ತಾರಾ?: ಕ್ಷಮೆ ಕೇಳಿದ ಹಂಸಲೇಖ

  • ಕದ್ದುಮುಚ್ಚಿ: ಪ್ರೀತಿ ಮತ್ತು ಬದುಕಿನ ಹದವಾದ ರಸಪಾಕ!

    ಕದ್ದುಮುಚ್ಚಿ: ಪ್ರೀತಿ ಮತ್ತು ಬದುಕಿನ ಹದವಾದ ರಸಪಾಕ!

    ಬೆಂಗಳೂರು: ಮಂಜುನಾಥ್ ನಿರ್ಮಾಣದ ಕದ್ದುಮುಚ್ಚಿ ಚಿತ್ರ ತೆರೆ ಕಂಡಿದೆ. ಹಂಸಲೇಖಾ ಅವರ ಸಂಗೀತದಲ್ಲಿ ಮೂಡಿ ಬಂದಿರೋ ಹಾಡುಗಳೂ ಸೇರಿದಂತೆ ನಾನಾ ಥರದಲ್ಲಿ ಪ್ರೇಕ್ಷಕರನ್ನು ಆವರಿಸಿಕೊಂಡಿದ್ದ ಈ ಸಿನಿಮಾ ಯುವ ತಲ್ಲಣಗಳ ಕಥೆಯ ಸುಳಿವನ್ನು ಬಿಟ್ಟುಕೊಟ್ಟಿತ್ತು. ಇದೀಗ ಕದ್ದುಮುಚ್ಚಿ ಒಳಗಿರೋ ಸಿಹಿಯಾದ ಹೂರಣ ಅನಾವರಣಗೊಂಡಿದೆ.

    ಒಂದು ಮಾಮೂಲಿ ಜಾಡಿನ ಕಥೆಯನ್ನೂ ಕೂಡಾ ವಿಶಿಷ್ಟವಾದ ಆಲೋಚನೆ ಮತ್ತು ಭಿನ್ನವಾದ ನಿರೂಪಣಾ ಶೈಲಿ ಹೊಸದಾಗಿಸಿ ಬಿಡುತ್ತದೆ. ಅದೇ ರೀತಿ ಪ್ರೀತಿ, ಪ್ರೇಮ ಮತ್ತು ಬದುಕಿನ ಕಥೆ ಹೊಂದಿರೋ ಈ ಚಿತ್ರವೂ ಕೂಡಾ ರೂಪುಗೊಂಡಿದೆ. ಇಡೀ ಸಿನಿಮಾ ಎಲ್ಲರಿಗೂ ಆಪ್ತವಾಗೋದೇ ಈ ಕಾರಣದಿಂದ.

    ನಾಯಕ ಅಗರ್ಭ ಶ್ರೀಮಂತಿಕೆಯ ಹಿನ್ನೆಲೆ ಹೊಂದಿರುವಾತ. ಆದರೆ ಸಹಜವಾದ ಪ್ರೀತಿ ಸಿಕ್ಕದೆ ಎಲ್ಲವೂ ಢಾಂಬಿಕ ಎಂಬ ಭಾವನೆ ರೂಢಿಸಿಕೊಳ್ಳೋ ಆತ ದಿಕ್ಕುದೆಸೆ ಇಲ್ಲದಂತೆ ಹೊರಟು ಬಿಡುತ್ತಾನೆ. ಆದರೆ ಬದುಕಿನ ವೈಚಿತ್ರ್ಯಗಳೇ ನಾಯಕನಿಗೆ ಅಪ್ಪಟ ಮಲೆನಾಡು ಸೀಮೆಯ ದಿಕ್ಕು ತೋರುತ್ತದೆ. ಪ್ರೀತಿಯ ತತ್ವಾರದಿಂದ ಬೆಂಗಾಡಿನಂತಾಗಿದ್ದ ಆತನ ಮುಂದೆ ಮಲೆನಾಡ ಚೆಲುವೆಯೊಬ್ಬಳ ಆಗಮನವಾಗುತ್ತದೆ. ಯಥಾ ಪ್ರಕಾರ ಸುತ್ತಾಟ, ರೊಮ್ಯಾನ್ಸುಗಳ ನಡುವೆ ಇನ್ನೇನು ಗಟ್ಟಿ ಮೇಳದತ್ತ ಈ ಜೋಡಿ ಹೊರಟಿದೆ ಅಂದುಕೊಳ್ಳುವ ಹೊತ್ತಿಗೆಲ್ಲ ಭಯಾನಕ ಟ್ವಿಸ್ಟು ಎದುರಾಗುತ್ತೆ.

    ಅದರ ಫಲವಾಗಿ ತಾನು ಅಪಾರವಾಗಿ ಪ್ರೀತಿಸಿದ ಹುಡುಗಿಯ ಮದುವೆಗೇ ತಾನೇ ಓಡಾಡೋ ದುಃಸ್ಥಿತಿ ನಾಯಕನಿಗೆ ಬಂದೊದಗುತ್ತೆ. ಹಾಗಾದರೆ ಈ ಪ್ರೀತಿಯಲ್ಲಿ ಬಿರುಕು ಮೂಡಲು ಕಾರಣವೇನು, ಈ ಜೋಡಿ ಮತ್ತೆ ಒಂದಾಗುತ್ತಾ ಅನ್ನೋದನ್ನ ಚಿತ್ರ ಮಂದಿರಗಳಲ್ಲಿಯೇ ನೋಡಿದರೆ ಚೆನ್ನ. ಹಾಗಂತ ಇಷ್ಟಕ್ಕೆ ಮಾತ್ರವೇ ಸಿನಿಮಾ ಸೀಮಿತವಾಗಿಲ್ಲ. ಅದರ ಹರವು ವಿಸ್ತಾರವಾಗಿದೆ. ಹಿರಿ, ಮರಿ ಕಲಾವಿದರೊಂದಿಗೆ ಇಡೀ ಚಿತ್ರವನ್ನ ಮಜವಾಗಿಯೇ ಕಟ್ಟಿಕೊಡಲು ನಿರ್ದೇಶಕರು ಪ್ರಯತ್ನಿಸಿದ್ದಾರೆ.

    ಹಂಸಲೇಖ ಅವರ ಮಾಂತ್ರಿಕ ಸಂಗೀತದ ಶಕ್ತಿಯೊಂದಿಗೆ ಕೆಲ ಕೊರತೆಗಳ ನಡುವೆಯೂ ಕದ್ದುಮುಚ್ಚಿ ಚಿತ್ರ ಇಷ್ಟವಾಗುವಂತಿದೆ.

    ರೇಟಿಂಗ್: 3.5/5

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಶಾಕುಂತಲೆಗಾಗಿ ಹಂಸಲೇಖಾ ಹುಡುಕಾಟ!

    ಶಾಕುಂತಲೆಗಾಗಿ ಹಂಸಲೇಖಾ ಹುಡುಕಾಟ!

    ಬೆಂಗಳೂರು: ಸಂಗೀತ ನಿರ್ದೇಶಕರಾಗಿ ಕನ್ನಡ ಚಿತ್ರರಂಗದಕ್ಕೆ ನವ ಮಾಧುರ್ಯ ತುಂಬಿದವರು ನಾದಬ್ರಹ್ಮ ಹಂಸಲೇಖಾ. ಅವರೀಗ ಶಾಕುಂತಲೆ ಎಂಬ ಚಿತ್ರವನ್ನು ನಿರ್ದೇಶನ ಮಾಡುವ ತಯಾರಿಯಲ್ಲಿದ್ದಾರೆ. ವರ್ಷದ ಹಿಂದೆಯೇ ಈ ಚಿತ್ರದ ಬಗ್ಗೆ ಸುದ್ದಿ ಶುರುವಾಗಿತ್ತಾದರೂ ಇದೀಗ ತಾನೇ ಎಲ್ಲ ಚಟುವಟಿಕೆಗಳೂ ಆರಂಭವಾಗಿವೆ.

    ಭಾರತೀಯ ಚಿತ್ರರಂಗದಲ್ಲಿಯೇ ಮೈಲಿಗಲ್ಲಾಗಿ ದಾಖಲಾಗಬಲ್ಲಂಥಾ ಕಥಾನಕವನ್ನು ಶಾಕುಂತಲೆ ಚಿತ್ರ ಹೊಂದಿದೆ ಅಂತ ಹಂಸಲೇಖ ಈ ಹಿಂದೆಯೇ ಹೇಳಿಕೊಂಡಿದ್ದಾರೆ. ಇಡೀ ಚಿತ್ರ ಶಾಕುಂತಲೆಯ ಪಾತ್ರದ ಸುತ್ತಲೇ ಸುತ್ತೋದರಿಂದ ಅದಿಲ್ಲಿ ಬಹು ಮುಖ್ಯ. ಈ ಪಾತ್ರ ನಿರ್ವಹಿಸೋದು ಕೂಡಾ ಸವಾಲಿನ ಕೆಲಸವೇ. ಇದಕ್ಕೆ ಸೂಕ್ತವಾದ ಹುಡುಗಿಯನ್ನು ಆರಂಭದಿಂದಲೂ ಹಂಸಲೇಖಾ ಹುಡುಕುತ್ತಿದ್ದರು. ಇದೀಗ ಶಾಕುಂತಲೆ ಸಿಗೋ ಸಮಯ ಹತ್ತಿರಾಗಿದೆ. ಡಿಸೆಂಬರ್ ಒಂಬತ್ತರ ಹೊತ್ತಿಗೆಲ್ಲಾ ಶಾಕುಂತಲೆ ಯಾರಾಗಲಿದ್ದಾರೆಂಬುದು ಪಕ್ಕಾ ಆಗಲಿದೆಯಂತೆ!

    ಸಂಗೀತ ಮತ್ತು ಗ್ರಾಫಿಕ್ಸ್ ಕೂಡಾ ಈ ಚಿತ್ರದ ಪ್ರಧಾನ ಅಂಶ. ಈ ಕಾರಣದಿಂದಲೇ ಚಿತ್ರ ಶುರುವಾಗೋದು ಕೊಂಚ ತಡವಾಗಿದೆಯಂತೆ. ಈ ವರ್ಷದ ಕಡೆಯ ಹೊತ್ತಿಗೆಲ್ಲ ಶಾಕುಂತಲೆಯ ಚಿತ್ರೀಕರಣ ಶುರುವಾಗಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಹಂಸಲೇಖಾರಿಂದ ರೇವಾ ವಿವಿ ಮಾಧ್ಯಮ ಕೇಂದ್ರ ಉದ್ಘಾಟನೆ

    ಹಂಸಲೇಖಾರಿಂದ ರೇವಾ ವಿವಿ ಮಾಧ್ಯಮ ಕೇಂದ್ರ ಉದ್ಘಾಟನೆ

    ಬೆಂಗಳೂರು: ರೇವಾ ವಿಶ್ವವಿದ್ಯಾಲಯ ಹಚ್ಚ ಹಸಿರಿನ ನಿತ್ಯ ತೋರಣದ ವಿದ್ಯಾ ದೇವಾಲಯ ಎಂದು ನಾದಬ್ರಹ್ಮರೆಂದು ಪ್ರಖ್ಯಾತಿ ಹೊಂದಿರುವ ಸಂಗೀತ ನಿರ್ದೇಶಕ ಹಂಸಲೇಖ ಅವರು ಬಣ್ಣಿಸಿದ್ದಾರೆ.

    ರೇವಾ ವಿಶ್ವವಿದ್ಯಾಲಯದಲ್ಲಿ ನೂತನವಾಗಿ ನಿರ್ಮಿಸಿರುವ ಮಾಧ್ಯಮಕೇಂದ್ರ(ಮೀಡಿಯಾ ಸೆಂಟರ್)ವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದ ಅವರು, ಬೆಂಗಳೂರು ನಗರ ಒತ್ತಡದ ಮತ್ತು ಸಂಚಾರ ದಟ್ಟಣೆಯ ಕಿಷ್ಕಿಂದೆ ಎಂದು ಹೆಸರಾಗುತ್ತಿದೆ. ಅಂತಹ ಆಲೋಚನೆಗಳಿಂದ ಹೊರ ಬರಲು ಬೆಂಗಳೂರಿನಿಂದ ಕೊಂಚ ಹೊರವಲಯದಲ್ಲಿ ರೇವಾ ವಿದ್ಯಾದೇವಾಲಯವಿದೆ. ಇದರ ಮಾಧ್ಯಮಕೇಂದ್ರದ ಉದ್ಘಾಟನೆಗೆ ನನ್ನನು ಮುಖ್ಯ ಅತಿಥಿಯಾಗಿ ಆಹ್ವಾನಿಸಿದ್ದಾರೆ. ಇದು ನನ್ನ ಪುಣ್ಯ. ಈ ವಿಶ್ವವಿದ್ಯಾಲಯದ ಬಗ್ಗೆ ಕೇಳಿದ್ದೆ ಆದರೆ ಇವತ್ತು ನೋಡುವಂತಹ ಭಾಗ್ಯ ಲಭಿಸಿದೆ. ಒಳಗೆ ಬಂದು ನೋಡಿದಾಗ ಇದೊಂದು ಹಚ್ಚ ಹಸಿರಿನ ನಿತ್ಯ ತೋರಣವೆಂದು ಭಾಸವಾಯಿತು ಎಂದರು.

    ಈ ರೇವಾ ವಿಶ್ವವಿದ್ಯಾಲಯದಲ್ಲಿ ಮಾಧ್ಯಮಕೇಂದ್ರವನ್ನು ವೃತ್ತಿಪರವಾಗಿ ನಿರ್ಮಾಣ ಮಾಡಲಾಗಿದೆ. ಈ ಕೇಂದ್ರ ಉದ್ಘಾಟನೆಗೊಳ್ಳುವ ಮೂಲಕ ರೇವಾ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಡಾ. ಪಿ. ಶ್ಯಾಮರಾಜು ಅವರ ಕನಸು ನನಸಾಗಿದೆ.

    ವಿದ್ಯಾರ್ಥಿಗಳು ಕೊಡುಗೆ ನೀಡಲಿ
    ಇವತ್ತು ಸುದ್ದಿಯಿಂದ ಜೀವನ. ಆದರೆ ಶಿಕ್ಷಕರಾದ ನಾವು ಸುದ್ದಿ ಒಳಗಿನ ವೈಬ್ರೆಂಟ್‍ನಿಂದ ಜೀವನ ಎನ್ನುತ್ತೇವೆ. ಪ್ರತಿಯೊಂದು ವೈಬ್ರೆಷನ್ ಒಂದು ಮೆಸೇಜ್ ಇದ್ದಂತೆ. ಇವತ್ತಿನಿಂದ ಮೀಡಿಯಾ ಸೆಂಟರ್ ನಲ್ಲಿ ಪಾಸಿಟಿವ್ ವೈಬ್ರೆಷನ್ ಪ್ರಾರಂಭವಾಗಿದೆ. ಈ ವಿಶ್ವವಿದ್ಯಾಲಯದಲ್ಲಿ ಪ್ರತಿವರ್ಷ ಐದು ಸಾವಿರ ವಿದ್ಯಾರ್ಥಿಗಳು ತೇರ್ಗಡೆಯಾಗಿ ಹೊರ ಹೋಗುತ್ತಿದ್ದಾರೆ. ಅವರೆಲ್ಲ ಈ ನಾಡಿಗೆ ಕೊಡುಗೆಯನ್ನು ನೀಡಲಿ ಎಂದು ಹಾರೈಸಿದರು.

    ಈ ಸ್ಟುಡಿಯೋದಲ್ಲಿ ಪ್ರದರ್ಶನ ಕಲೆಗೆ ಒಂದು ಪ್ರತ್ಯೇಕ ವಿಭಾಗ ತೆರೆಯಲಾಗಿದೆ. ಜೊತೆಗೆ ಇದಕ್ಕೆ ಪ್ರತಿಭಾನ್ವಿತ ಸಿಬ್ಬಂಧಿಯನ್ನು ನೇಮಕ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಜಾನಪದಕ್ಕೆ ಸಂಬಂಧಿಸಿದಂತೆ ಕೆಲಸ ಮಾಡುವಾಗ ನಾನು ಇವರ ಜೊತೆ ಕೈಜೋಡಿಸುತ್ತೇನೆ ಎಂದರು.

    ರೇವಾ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ. ಪಿ. ಶ್ಯಾಮರಾಜುರವರು ಮಾತನಾಡಿ, ನಮ್ಮ ವಿಶ್ವವಿದ್ಯಾಲಯದಲ್ಲಿ 15 ಸಾವಿರ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಇವತ್ತು ಉದ್ಘಾಟನೆಗೊಂಡಿರುವ ಸ್ಟುಡಿಯೋದಿಂದ ಪತ್ರಿಕೋದ್ಯಮ ಮತ್ತು ಇತರೆ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ತರಗತಿಯಲ್ಲಿ ಒತ್ತಡದಲ್ಲಿರುವ ವಿದ್ಯಾರ್ಥಿಗಳು ಪತ್ರಿಕೋದ್ಯಮಕ್ಕೆ ಸಂಬಂಧಿಸಿದ ಕಲೆ ಮತ್ತು ತಂತ್ರಜ್ಞಾನದ ಬಗ್ಗೆ ತಿಳಿದುಕೊಂಡು ತಮ್ಮ ಒತ್ತಡವನ್ನು ಕಡಿಮೆ ಮಾಡಿಕೊಳ್ಳಬಹುದಾಗಿದೆ. ವಿದ್ಯಾರ್ಥಿಗಳು ಪದವಿಯ ಜತೆಗೆ ತಂತ್ರಜ್ಞಾನಗಳ ಬಗ್ಗೆಯೂ ತಿಳಿದು ಹೊರಜಗತ್ತಿಗೆ ಕಾಲಿಡಲಿ ಎಂಬ ಉದ್ದೇಶದಿಂದ ಈ ಮಾಧ್ಯಮ ಕೇಂದ್ರವನ್ನು ತೆರೆಯಲಾಗಿದೆ ಎಂದು ತಿಳಿಸಿದರು.

    1 ಕೋಟಿ ವೆಚ್ಚದಲ್ಲಿ ಮಾಧ್ಯಮ ಕೇಂದ್ರ:
    ಮಲ್ಟಿ ಮೀಡಿಯಾ, ಮೀಡಿಯಾ ಎಡಿಟಿಂಗ್, ಅನಿಮೇಶನ್ ತಂತ್ರಜ್ಞಾನ, ಕಂಪ್ಯೂಟರ್ ಗ್ರಾಫಿಕ್ಸ್, ಆನ್‍ಲೈನ್ ವಿಡಿಯೋ ಎಡಿಟಿಂಗ್, ಕ್ಯಾಂಪಸ್ ಟಿ.ವಿ., ಕ್ಯಾಂಪಸ್ ರೇಡಿಯೋ, ವೆಬ್ ರೇಡಿಯೋ ಹಾಗೂ ವಾರ್ತಾ ನಿರೂಪಣೆ, ಚರ್ಚೆಗೆ ಸಂಬಂಧಿಸಿದ ಸ್ಟುಡಿಯೋಗಳು ಮಾಧ್ಯಮ ಕೇಂದ್ರದಲ್ಲಿದ್ದು, ಒಂದು ಕೋಟಿ ವೆಚ್ಚದಲ್ಲಿ ಈ ಕೇಂದ್ರವನ್ನು ನಿರ್ಮಿಸಲಾಗಿದೆ.

    ಕಾರ್ಯಕ್ರಮದಲ್ಲಿ ಉಪಕುಲಪತಿಗಳಾದ ಡಾ. ಎಸ್. ವೈ ಕುಲಕರ್ಣಿ, ಕುಲಸಚಿವರಾದ ಡಾ. ಧನಂಜಯ್, ವಿಭಾಗದ ಮುಖ್ಯಸ್ಥರಾದ ಡಾ. ಬೀನಾ ಜಿ., ಡಾ. ಪಾಯಲ್ ದತ್ತ ಚೌದರಿ ಮತ್ತು ಮಂಜುನಾಥ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.