ಈ ಕುರಿತು ಟ್ವೀಟ್ ಮಾಡಿರುವ ಐಪಿ ಸಿಂಗ್, ಪ್ರಧಾನಿ ನರೇಂದ್ರ ಮೋದಿ ಹಕ್ಕಿಗಳಿಗೆ ಆಹಾರ ಉಣಿಸುವ ಫೋಟೋ ಪೋಸ್ಟ್ ಮಾಡಿ, ಈ ವ್ಯಕ್ತಿಯನ್ನು ಏನು ಮಾಡಬೇಕು? ಅವರು ಬಡ ಪಕ್ಷಿಗಳಿಗೆ ಆಹಾರ ನೀಡಿದರು. ಆದರೆ ಅವು ಹಕ್ಕಿ ಜ್ವರದಿಂದ ಕೊನೆಗೊಂಡಿತು ಎಂದು ಬರೆದುಕೊಂಡಿದ್ದಾರೆ.
ದೇಶಾದ್ಯಂತ ಹಲವು ರಾಜ್ಯಗಳಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದ್ದು, ಮನುಷ್ಯರಿಗೆ ಹರಡದಂತೆ ತಡೆಯಲು ಕೇಂದ್ರ ಸರ್ಕಾರ ದೆಹಲಿಯಲ್ಲಿ ಕಂಟ್ರೋಲ್ ರೂಮ್ ತೆರೆಯಲು ಚಿಂತನೆ ನಡೆಸಿದೆ. ಕೇರಳ, ಮಧ್ಯಪ್ರದೇಶ, ಹಿಮಾಚಲ ಪ್ರದೇಶ ಹಾಗೂ ರಾಜಸ್ಥಾನ ನಾಲ್ಕು ರಾಜ್ಯಗಳ 12 ಕೇಂದ್ರಗಳಲ್ಲಿ ಏಕಾಏಕಿ ಹಕ್ಕಿ ಜ್ವರ ಕಾಣಿಸಿಕೊಂಡಿದೆ.
ಬೆಂಗಳೂರು: ಕೇರಳದ ಆಲಪ್ಪುಳ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ ಬಾತುಕೋಳಿಗಳಲ್ಲಿ ಹಕ್ಕಿಜ್ವರ (ಎಚ್5ಎನ್8) ಸೋಂಕು ದೃಢಪಟ್ಟಿದ್ದು, ರಾಜ್ಯದಲ್ಲಿಯೂ ರೋಗ ಕಾಣಿಸಿಕೊಳ್ಳುವ ಸಾಧ್ಯತೆಗಳಿರುವುದರಿಂದ ರೋಗೋದ್ರೇಕದ ನಿರ್ವಹಣೆಗೆ ಎಲ್ಲ ಜಿಲ್ಲೆಗಳಲ್ಲಿಯೂ ಹೈ ಅಲರ್ಟ್ ಘೋಷಿಸಲಾಗಿದೆ ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಹಕ್ಕಿ ಜ್ವರದ ಸರ್ವೇಕ್ಷಣ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ನಿರ್ವಹಣೆ ಮಾಡಲು ಸಿದ್ಧತೆ ಮಾಡಿಕೊಳ್ಳಿ ಎಂದು ಇಲಾಖೆಯ ಅಧಿಕಾರಿಗಳು ಮತ್ತು ಪಶುವೈದ್ಯರಿಗೆ ಸೂಚನೆ ನೀಡಲಾಗಿದೆ. ಕೇರಳಕ್ಕೆ ಹೊಂದಿಕೊಂಡಿರುವ ರಾಜ್ಯದ ಗಡಿಜಿಲ್ಲೆಗಳಾದ ದಕ್ಷಿಣ ಕನ್ನಡ, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ಉಪನಿರ್ದೇಶಕರುಗಳು ಹಕ್ಕಿ ಜ್ವರ ತಡೆಯಲು ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಮಟ್ಟದ ರೋಗ ನಿಯಂತ್ರಣ ಸಮಿತಿಯ ಸಭೆ ನಡೆಸಿ ಸೂಕ್ತ ಮುಂಜಾಗೃತಾ ಕ್ರಮ ಕೈಗೊಳ್ಳಬೇಕು. ಸದ್ಯ ರಾಜ್ಯದಲ್ಲಿ ಯಾವುದೇ ಪ್ರಕರಣಗಳು ಕಂಡುಬಂದಿಲ್ಲ. ಆದರೆ ಎಲ್ಲ ರೀತಿಯ ಎಚ್ಚರಿಗೆ ವಹಿಸಿ ರೋಗ ಲಕ್ಷಣ ಕಂಡುಬಂದಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಕೇರಳ ಗಡಿ ಭಾಗದಲ್ಲಿ ಕೂಡಲೇ ಚೆಕ್ ಪೋಸ್ಟಗಳನ್ನು ನಿರ್ಮಿಸಿ ಕೇರಳದಿಂದ ಕೋಳಿ, ಕುಕ್ಕುಟ ಹಾಗೂ ಕುಕ್ಕುಟ ಉತ್ಪನ್ನಗಳ ಸಾಗಾಣಿಕೆಯನ್ನು ನಿರ್ಬಂಧಿಸಬೇಕು. ಅಲ್ಲದೆ ಕೇರಳದಿಂದ ಬರುವ ಕೋಳಿ ಸಾಗಾಣಿಕೆ ವಾಹನಗಳನ್ನು ಸ್ಯಾನಿಟೈಜ್ ಮಾಡಿ ಒಳ ಬಿಡಬೇಕು. ಅಲ್ಲದೆ ಕೈಗೊಂಡ ಕ್ರಮಗಳ ದೈನಂದಿನ ವರದಿಯನ್ನು ಉಪನಿರ್ದೇಶಕರು, ಕೋಳಿ ರೋಗ ನಿರ್ಣಯ ಪ್ರಯೋಗಾಲಯದ ಕಚೇರಿಗೆ ಸಲ್ಲಿಸಬೇಕೆಂದು ತಿಳಿಸಿದ್ದಾರೆ.
ಗಡಿ ಜಿಲ್ಲೆಗಳಲ್ಲಿ ಇರುವ ಕುಕ್ಕುಟ ಕ್ಷೇತ್ರಗಳಿಂದ ಪ್ರತಿ ವಾರ ರ್ಯಾಂಡಮ್ ಆಗಿ ತಲಾ 5 ಸೀರಂ, 5 ಟ್ರೇಕಿಯಲ್ ಮತ್ತು 5 ಪರಿಸರ ಮಾದರಿಗಳನ್ನು ಸಂಗ್ರಹಿಸಿ ಮುಂದಿನ ಆದೇಶದವರೆಗೆ ಬೆಂಗಳೂರಿನ ಪ್ರಾಣಿ ಆರೋಗ್ಯ ಮತ್ತು ಜೈವಿಕ ಸಂಸ್ಥೆ ಪ್ರಯೋಗಾಲಯಕ್ಕೆ ವಿಶ್ಲೇಷಣೆಗೆ ಸಲ್ಲಿಸುವಂತೆ ಸೂಚಿಸಿದ್ದಾರೆ.
ಎಲ್ಲ ಜಿಲ್ಲೆಗಳ ವ್ಯಾಪ್ತಿಯಲ್ಲಿ ಬರುವ ಕುಕ್ಕುಟ ಕ್ಷೇತ್ರ, ಪಕ್ಷಿಧಾಮ ಹಾಗೂ ನೀರು ಸಂಗ್ರಹಣ ಸ್ಥಳಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು. ಕೋಳಿ ಅಥವಾ ಹಕ್ಕಿಗಳ ಅಸ್ವಾಭಾವಿಕ ಮರಣ ಸಂಭವಿಸಿದಲ್ಲಿ ಅಥವಾ ರೋಗ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಮೇಲಾಧಿಕಾರಿಗಳಿಗೆ ಮಾಹಿತಿ ನೀಡಿ. ಹಕ್ಕಿ ಜ್ವರದ ಸಂಭವನೀಯತೆಯನ್ನು ಪರಿಗಣಿಸಿ, ಸಂಬಂಧಪಟ್ಟ ಪ್ರಯೋಗಾಲಯಕ್ಕೆ ವರದಿ ಮಾಡಿ, ರೋಗ ವಿಶ್ಲೇಷಣೆ ನೆಡಸುವ ಬಗ್ಗೆ ಕ್ರಮ ವಹಿಸಬೇಕು. ಅಲ್ಲದೆ ಜೈವಿಕ ಸುರಕ್ಷಾತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.
ಮೈಸೂರು: ಮೈಸೂರಿನಲ್ಲಿ ಹಕ್ಕಿ ಜ್ವರ ಭೀತಿ ಹಿನ್ನೆಲೆ ಕರ್ನಾಟಕ- ಕೇರಳ ಗಡಿಯಲ್ಲಿ ತೀವ್ರ ನಿಗಾ ವಹಿಸಲಾಗಿದೆ. ಮೈಸೂರು ಜಿಲ್ಲೆಯಲ್ಲಿ ಈವರೆಗೆ ಹಕ್ಕಿಜ್ವರ ಕಂಡುಬಂದಿಲ್ಲ. ಹಕ್ಕಿಜ್ವರದ ಪತ್ತೆಗಾಗಿ ಜಿಲ್ಲಾಡಳಿತ ನಿರಂತರ ಕಾರ್ಯಚರಣೆ ನಡೆಸುತ್ತಿದೆ ಎಂದು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೇಳಿದ್ದಾರೆ.
ಕಳೆದ ವರ್ಷ ಮೈಸೂರಿನಲ್ಲಿ ಹಕ್ಕಿಜ್ವರದ ಹಿನ್ನೆಲೆಯಲ್ಲಿ ‘ಕಲ್ಲಿಂಗ್ ಆಪರೇಷನ್’ ನಡೆದಿತ್ತು. ಅದಕ್ಕಾಗಿ ಈ ಬಾರಿ ಸಾಕಷ್ಟು ಮುನ್ನೆಚ್ಚರಿಕಾ ಕ್ರಮ ವಹಿಸಲಾಗಿದೆ. ಹಕ್ಕಿಜ್ವರ ಅಕ್ಕಪಕ್ಕದ ರಾಜ್ಯದಲ್ಲಿ ಕಂಡುಬಂದಿದೆ. ಹಾಗಾಗಿ ಅಲ್ಲಿ ಇದೀಗ ಕಲ್ಲಿಂಗ್ ಆಪರೇಷನ್ ನಡೆಯುತ್ತಿದೆ. ಕೇರಳ ಹಾಗೂ ತಮಿಳುನಾಡು ಗಡಿಯಲ್ಲಿ ಪಕ್ಷಿ ಹಾಗೂ ಕೋಳಿ ಸಾಗಾಟ ನಿಷೇಧ ಮಾಡಲಾಗಿದೆ ಹಾಗೂ ಆ ರಾಜ್ಯಗಳಿಂದ ಬರುವ ವಾಹನಗಳನ್ನ ಸ್ಯಾನಿಟೈಜೆಷನ್ ಮಾಡಲಾಗುತ್ತಿದೆ ಎಂದು ತಿಳಿಸಿದರು.
ವಲಸೆ ಹಕ್ಕಿಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಲಾಗಿದ್ದು, ಎಲ್ಲೆಲ್ಲಿ ವಲಸೆ ಹಕ್ಕಿಗಳು ಬರುತ್ತವೆ ಅಲ್ಲೆಲ್ಲ ಹಿಕ್ಕೆಗಳ ಸಂಗ್ರಹ ಮಾಡಿ ಲ್ಯಾಬ್‍ಗೆ ಕಳುಹಿಸಲಾಗಿದೆ. ಈವರೆಗೆ ಬಂದಿರುವ ಲ್ಯಾಬ್ ವರದಿಯಲ್ಲಿ ಹಕ್ಕಿಜ್ವರ ಪತ್ತೆಯಾಗಿಲ್ಲ. ಮೃಗಾಲಯಕ್ಕೆ ತಾತ್ಕಾಲಿಕ ಪ್ರವೇಶ ನಿರ್ಬಂಧ ಅಥವಾ ಇತರೆ ನಿರ್ಧಾರಗಳ ಬಗ್ಗೆ ತೀರ್ಮಾನಿಸಿಲ್ಲ. ಹಕ್ಕಿಜ್ವರ ಪತ್ತೆಯಾದರೆ ಮುಂದಿನ ಹಂತದ ನಿರ್ಧಾರ ಮಾಡುತ್ತೇವೆ ಎಂದು ವಿವರಿಸಿದರು.
ಕೇರಳದಿಂದ ಬರುವ ವಾಹನಗಳ ತಪಾಸಣೆ ನಡೆಸಲಾಗುತ್ತಿದ್ದು, ಬಾವಲಿ ಚೆಕ್ ಪೋಸ್ಟ್‍ನಲ್ಲಿ ತಪಾಸಣೆ ನಡೆಸಲಾಗುತ್ತಿದೆ. ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚನೆಯನ್ವಯ ಪೊಲೀಸರು ಕೋಳಿ, ಕೋಳಿ ಮಾಂಸ ಸಾಗಣೆ ವಾಹನಗಳನ್ನು ಪರಿಶೀಲಿಸುತ್ತಿದ್ದಾರೆ. ಪೊಲೀಸರೊಂದಿಗೆ ಪಶು ಸಂಗೋಪನೆ ಇಲಾಖೆ ಸಿಬ್ಬಂದಿಗಳು ಈ ಕುರಿತಂತೆ ನಿಗಾ ವಹಿಸುತ್ತಿದ್ದಾರೆ.
ಕೊಡಗಿನಲ್ಲಿ ಹೈ ಅಲರ್ಟ್: ಪಕ್ಕದ ಕೇರಳ ರಾಜ್ಯದಲ್ಲಿ ಹಕ್ಕಿ ಜ್ವರ ಕನ್ಫರ್ಮ್ ಆಗಿದೆ ಎಂದು ಕೊಡಗು ಜಿಲ್ಲಾಧಿಕಾರಿ ಅನೀಸ್ ಕಣ್ಣಣಿ ಜಾಯ್ ಹೇಳಿದ್ದಾರೆ. ಹಾಗಾಗಿ ಜಿಲ್ಲೆಯಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಜಿಲ್ಲೆಯ 3 ಅಂತರರಾಜ್ಯ ಚೆಕ್‍ಪೋಸ್ಟ್ ಗಳಲ್ಲಿ ತಪಾಸಣೆ ನಡೆಸಲಾಗುತ್ತಿದೆ. ಕೇರಳದಿಂದ ಕೊಡಗಿಗೆ ಕುಕ್ಕುಟೋದ್ಯಮದ ಯಾವುದೇ ಉತ್ಪನ್ನ ಬರುವುದಿಲ್ಲ. ಆದ್ರೆ ಕೊಡಗಿನಿಂದ ಕೇರಳಕ್ಕೆ ಕೋಳಿ ಉತ್ಪನ್ನ ಹೋಗುತ್ತದೆ. ಕೋಳಿ ಸಾಗಿಸಿ ವಾಪಸ್ ಆಗುವ ಖಾಲಿ ವಾಹನಗಳಿಗೆ ಸ್ಯಾನಿಟೈಸ್ ಮಾಡಲಾಗುತ್ತಿದ್ದು, ಜೊತೆಗೆ ಒಂದು ಪರ್ಸೆಂಟ್ ಹೈಪೋಕ್ಲೋರೈಡ್ ಸಿಂಪಡಣೆ ಮಾಡಲಾಗುತ್ತಿದೆ. ಕೊಡಗಿನಲ್ಲಿ ಇದುವರೆಗೆ ಹಕ್ಕಿಜ್ವರದ ಲಕ್ಷಣ ಕಂಡುಬಂದಿಲ್ಲ. ಆದರೂ ಹೈಅಲರ್ಟ್ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.
– ಹಕ್ಕಿ ಜ್ವರವನ್ನು ರಾಜ್ಯ ವಿಪತ್ತು ಎಂದು ಘೋಷಿಸಿದ ಸರ್ಕಾರ
– 48 ಸಾವಿರ ಪಕ್ಷಿಗಳನ್ನು ಕೊಲ್ಲಲು ನಿರ್ಧಾರ
ತಿರುವನಂತಪುರಂ: ಹಕ್ಕಿ ಜ್ವರ ರಾಜ್ಯ ವಿಪತ್ತು ಎಂದು ಕೇರಳ ಸರ್ಕಾರ ಘೋಷಿಸಿದೆ. ರಾಜ್ಯದ ಕೊಟ್ಟಯಂ ಹಾಗೂ ಆಲಪ್ಪುಳ ಜಿಲ್ಲೆಗಳಲ್ಲಿ ಈ ಹಕ್ಕಿ ಜ್ವರ ಕಾಣಿಸಿಕೊಂಡಿದ್ದು, ಸರ್ಕಾರ ಹೈ ಅಲರ್ಟ್ ಘೋಷಿಸಿದೆ.
ಎರಡೂ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಸತ್ತ ಬಾತುಕೋಳಿಗಳ ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಈ ವೇಳೆ ಹಕ್ಕಿ ಜ್ವರ ಇರುವುದು ಪತ್ತೆಯಾಗಿದೆ. ಆದರೆ ಈ ಜ್ವರವೂ ಮನುಷ್ಯರಿಗೆ ಹರಡಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಹಕ್ಕಿ ಜ್ವರದಿಂದಾಗಿ ಕೊಟ್ಟಯಂನ ನೀಂದೂರ್ ಪಂಚಾಯಿತಿ ವ್ಯಾಪ್ತಿಯ ಜಮೀನಿನಲ್ಲಿ ಸುಮಾರು 1,650 ಬಾತುಕೋಳಿಗಳು ಸಾವನ್ನಪ್ಪಿದ್ದು, ಇದು ಪ್ರತ್ಯೇಕ ಪ್ರದೇಶವಾದ್ದರಿಂದ ಜನರಿಗೆ ಹರಡಿಲ್ಲ ಎನ್ನಲಾಗಿದೆ. ಆದರೂ ಕೊಟ್ಟಯಂ ಜಿಲ್ಲೆಯಲ್ಲಿ ತಲಾ 5 ಜನರ 8 ತಂಡಗಳನ್ನು ನೇಮಿಸಲಾಗಿದ್ದು, ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವಂತೆ ಜಾಗೃತಿ ಮೂಡಿಸಲಾಗುತ್ತಿದೆ.
ಕೇವಲ ಕೊಟ್ಟಯಂ ಮಾತ್ರವಲ್ಲದೆ ಆಲಪ್ಪುಳ ಹಾಗೂ ಕುಟ್ಟನಾಡ್ ಪ್ರದೇಶದಲ್ಲಿ ಸಹ ಈ ಹಕ್ಕಿ ಜ್ವರ ಪತ್ತೆಯಾಗಿರುವುದು ಆತಂಕವನ್ನು ಸೃಷ್ಟಿಸಿದೆ. ತಲವಾಡಿ, ಎಡತ್ವಾ, ಪಲ್ಲಿಪಾಡ್ ಹಾಗೂ ತಜಕ್ಕರ ಪಂಚಾಯಿತಿ ಪ್ರದೇಶಗಳಿಗೂ ಹಬ್ಬಿದೆ. ಅನೇಕ ಜಿಲ್ಲೆಗಳಲ್ಲಿ ನಿಯಂತ್ರಣ ಕೊಠಡಿಗಳನ್ನು ಸಹ ತೆರೆಯಲಾಗಿದೆ. ಅಲ್ಲದೆ ರ್ಯಾಪಿಡ್ ರಿಸ್ಪಾನ್ಸ್ ಫೋರ್ಸ್‍ಗಳನ್ನು ಹಾಕಲಾಗಿದೆ.
ಅಲ್ಲದೆ ಹಕ್ಕಿ ಜ್ವರದ ಭೀತಿಯಿಂದಾಗಿ ನಿಯಂತ್ರಣಕ್ಕೆ ತರಲು ಒಂದು ಕಿ.ಮೀ.ವ್ಯಾಪ್ತಿಯಲ್ಲಿನ ಎಲ್ಲ ಪಕ್ಷಿಗಳನ್ನು ಕೊಲ್ಲುವ ನಿರ್ಧಾರ ಕೈಗೊಳ್ಳಲಾಗಿದೆ. ಸಾಕು ಪಕ್ಷಿಗಳನ್ನೂ ಸೇರಿದಂತೆ ಸುಮಾರು 48 ಸಾವಿರ ಪಕ್ಷಿಗಳನ್ನು ಕೊಲ್ಲಲಾಗುತ್ತಿದೆ.
ವನ್ಯಜೀವಿ ಸಚಿವ ಕೆ.ರಾಜು ಅವರು ಈ ಕುರಿತು ಮಾತನಾಡಿ, ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಬಳಿಕ ರೈತರಿಗೆ ಪರಿಹಾರ ನೀಡುವ ಕುರಿತು ನಿರ್ಧರಿಸಲಾಗುವುದು ಎಂದು ತಿಳಿಸಿದ್ದಾರೆ.
ಕಳೆದ ವರ್ಷ ಸಹ ಕೋಯಿಕ್ಕೋಡ್ ಹಾಗೂ ಮಲಪ್ಪುರಂ ಜಿಲ್ಲೆಗಳಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿತ್ತು. ಈ ವೇಳೆ ಸಹ ಜನರಿಗೆ ಹರಡಬಾರದು ಎಂಬ ಮುನ್ನೆಚ್ಚರಿಕೆ ಉದ್ದೇಶದಿಂದ ಹಕ್ಕಿಗಳನ್ನು ಕೊಲ್ಲಲಾಗಿತ್ತು.
ಚಿಕ್ಕಮಗಳೂರು: ಕೊರೊನಾ ಭೀತಿಯ ಬೆನ್ನಲ್ಲೇ ಕಾಫಿನಾಡಲ್ಲಿ ಮಂಗನ ಖಾಯಿಲೆ ಹಾಗೂ ಹಕ್ಕಿ ಜ್ವರ ಕಾಣಿಸಿಕೊಳ್ಳುತ್ತಿದ್ದು, ಜನರನ್ನು ಆತಂಕಕ್ಕೀಡು ಮಾಡಿವೆ.
ಕಾಫಿನಾಡಿನಲ್ಲಿ ಒಂದೂ ಕೊರೊನಾ ಪ್ರಕರಣ ಪತ್ತೆಯಾಗದಿದ್ದರೂ, ವೈರಸ್‍ಗೆ ಹೆದರಿ ಜನ ಮನೆಯಿಂದ ಆಚೆ ಬರುತ್ತಿಲ್ಲ. ಮೂಡಿಗೆರೆ, ಕೊಪ್ಪ, ಶೃಂಗೇರಿ ಹಾಗೂ ಎನ್.ಆರ್.ಪು ತಾಲೂಕಿನ ಜನ ಕೊರೊನಾಗಿಂತ ಕೆಎಫ್‍ಡಿ (ಮಂಗನ ಖಾಯಿಲೆ)ಗೆ ಬೆಚ್ಚಿ ಬೀಳುತ್ತಿದ್ದಾರೆ. ಮಂಗನ ಕಾಯಿಲೆಯಿಂದ ಜಿಲ್ಲೆಯಲ್ಲಿ ಈಗಾಗಲೇ ಆರೇಳು ಜನ ಬಳಲುತ್ತಿದ್ದಾರೆ.
ಈ ಎರಡು ಖಾಯಿಲೆಗಳ ಭಯದ ನಡುವೆ ಇದೀಗ ಅಲ್ಲಲ್ಲಿ ಹಕ್ಕಿಗಳು ಸಾಯುತ್ತಿದ್ದು, ಚಿಕ್ಕಮಗಳೂರಿಗೆ ಹಕ್ಕಿ ಜ್ವರವೂ ಕಾಲಿಟ್ಟಿದ್ಯ ಎಂಬ ಆತಂಕ ಸ್ಥಳಿಯರನ್ನು ಕಾಡುತ್ತಿದೆ. ಗುರುವಾರ ನಗರದ ಕೋಟೆ ಬಡಾವಣೆಯಲ್ಲಿ ಎರಡು ಪಾರಿವಾಳಗಳು ಸಾವನ್ನಪ್ಪಿದ್ದವು. ಇಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮನೆ ಮುಂದೆ ಎರಡು ಮೈನಾ ಹಕ್ಕಿಗಳು ಸಾವನ್ನಪ್ಪಿವೆ. ಗುರುವಾರ ಎರಡು, ಇಂದು ಎರಡು ಹಕ್ಕಿಗಳು ಸಾವನ್ನಪ್ಪಿರುವುದರಿಂದ ಮೈಸೂರು, ದಾವಣಗೆರೆಯಲ್ಲಿದ್ದ ಹಕ್ಕಿಜ್ವರ ಕಾಫಿನಾಡಿಗೂ ಕಾಲಿಟ್ಟಿತೇ ಎಂದು ಸ್ಥಳಿಯರು ಆತಂಕಕ್ಕೀಡಾಗಿದ್ದಾರೆ.
ದೇಶದ ಜನ ಕೊರೊನಾ ಭಯದಲ್ಲಿ ಬದುಕುತ್ತಿದ್ದರೆ, ಮಲೆನಾಡಿಗರು ಕೊರೊನಾ ಜೊತೆಗೆ ಕೆಎಫ್‍ಡಿ ಹಾಗೂ ಹಕ್ಕಿಜ್ವರದ ಆತಂಕದಲ್ಲಿ ದಿನ ದೂಡುವಂತಾಗಿದೆ. ಹಕ್ಕಿಗಳು ಸಾವನ್ನಪ್ಪಿದ ನಂತರ ಸ್ಥಳ ಪರಿಶೀಲನೆ ನಡೆಸಿ ಹಕ್ಕಿಗಳ ಕಳೆಬರಹವನ್ನು ಶಿವಮೊಗ್ಗದ ಲ್ಯಾಬಿಗೆ ಕಳುಸಲಾಗಿದೆ. ವರದಿ ಬಂದ ಬಳಿಕ ಹಕ್ಕಿಗಳು ಯಾವ ಕಾರಣಕ್ಕೆ ಸಾವನ್ನಪ್ಪಿವೆ ಎಂಬುದನ್ನು ತಿಳಿಯಲಿದೆ.
ಮಡಿಕೇರಿ: ಕಳೆದ ಎರಡು ತಿಂಗಳಿಂದ ಜಿಲ್ಲೆಗೆ ಬಾರದಿರುವ ಉಸ್ತುವಾರಿ ಸಚಿವರು ಮತ್ತು ಕೊಡಗು ಸಂಸದರನ್ನು ಹುಡುಕಿಕೊಡುವಂತೆ ಕೊಡಗು ಜೆಡಿಎಸ್ ಜಿಲ್ಲಾ ಘಟಕದ ಮುಖಂಡರು ಎಸ್‍ಪಿಗೆ ದೂರು ನೀಡಿದ್ದಾರೆ.
ಉಸ್ತುವಾರಿ ಸಚಿವ ವಿ. ಸೋಮಣ್ಣ ಮತ್ತು ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ ಅವರು ಕಳೆದ ಎರಡು ತಿಂಗಳಿಂದ ಜಿಲ್ಲೆಗೆ ಆಗಮಿಸಿಲ್ಲ. ರಾಜ್ಯದಲ್ಲಿ ಕೊರೊನಾ ಆತಂಕ ತೀವ್ರವಾಗಿದ್ದು, ಜಿಲ್ಲೆಯಲ್ಲಿಯೂ ಈಗಾಗಲೇ ನಾಲ್ಕು ಸೋಂಕಿತ ಪ್ರಕರಣಗಳು ದಾಖಲಾಗಿವೆ. ಮತ್ತೊಂದೆಡೆ ನೆರೆಯ ಕೇರಳದಲ್ಲಿ ಮತ್ತು ಪಕ್ಕದ ಜಿಲ್ಲೆ ಮೈಸೂರಿನಲ್ಲಿ ಹಕ್ಕಿ ಜ್ವರ ಕೂಡ ತೀವ್ರಗೊಂಡಿದೆ. ಇಷ್ಟೆಲ್ಲಾ ಆದರೂ ಉಸ್ತುವಾರಿ ಸಚಿವರು ಮತ್ತು ಸಂಸದರು ಕನಿಷ್ಠ ಸೌಜನ್ಯಕ್ಕಾದರೂ ಜಿಲ್ಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿಲ್ಲ ಎಂದು ಜೆಡಿಎಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಿಲ್ಲೆಯಲ್ಲಿ ಕೊರೊನಾ ಸೋಂಕು ಎದುರಿಸುವುದಕ್ಕೆ ಅಗತ್ಯ ಔಷಧಿಗಳಿವೆಯಾ? ಅಥವಾ ಸೌಲಭ್ಯಗಳಿವೆಯಾ ಎಂದು ಪರಿಶೀಲನೆಯನ್ನೂ ಮಾಡಿಲ್ಲ. ಈ ಇಬ್ಬರನ್ನು ಯಾರಾದರೂ ಅಪಹರಣ ಮಾಡಿದ್ದಾರಾ? ಇಲ್ಲಾ ಕೊರೊನಾ ರೋಗವೇನಾದರೂ ಬಂದಿದೆಯಾ? ಇವೆಲ್ಲವನ್ನೂ ಪರಿಶೀಲಿಸಿ ಹುಡುಕಿಕೊಡಬೇಕು ಎಂದು ಎಸ್‍ಪಿಗೆ ಜೆಡಿಎಸ್ ಕಾರ್ಯಕರ್ತರು ದೂರು ನೀಡಿದ್ದಾರೆ. 10 ದಿನಗಳಲ್ಲಿ ಉಸ್ತವಾರಿ ಸಚಿವ ಹಾಗೂ ಸಂಸದರನ್ನು ಹುಡುಕಿಕೊಡಬೇಕು ಇಲ್ಲದಿದ್ದರೆ ರಾಜ್ಯ ಉಚ್ಛನ್ಯಾಯಾಲಯದ ಮೊರೆ ಹೋಗಲಾಗುವುದು ಎಂದು ಎಸ್‍ಪಿ ಸುಮನ್ ಡಿ.ಪಿ ಅವರಿಗೆ ಕೊಟ್ಟ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಮೈಸೂರು: ಜಿಲ್ಲೆಯಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡ ಹಿನ್ನೆಲೆ ಶ್ರೀ ಗಣಪತಿ ಆಶ್ರಮದಲ್ಲಿ ಗಣಪತಿ ಸಚ್ಚಿದಾನಂದ ಸ್ವಾಮೀಜಿಗಳು 3 ಸಾವಿರ ಗಿಳಿಗಳ ಆರೈಕೆಗೆ ಇಳಿದಿದ್ದಾರೆ.
ಆಶ್ರಮದ ಶುಕವನದಲ್ಲಿ ಸುಮಾರು 3 ಸಾವಿರ ಗಿಳಿಗಳಿದ್ದು, 450 ಪ್ರಭೇದದ ಗಿಳಿಗಳನ್ನ ಸಂರಕ್ಷಿಸಲಾಗಿದೆ. ಸ್ವತಃ ಗಣಪತಿ ಸಚ್ಚಿದಾನಂದ ಸ್ವಾಮೀಜಿಗಳೇ ಗಿಳಿಗಳ ಆರೈಕೆಯಲ್ಲಿ ತೊಡಗಿದ್ದು, ಸ್ವತಃ ತಾವೇ ನೀರು ಆಹಾರ ನೀಡಿ ಆರೈಕೆ ಮಾಡುತ್ತಿದ್ದಾರೆ. ಆಶ್ರಮಕ್ಕೆ ಹೊರಗಿನ ಹಕ್ಕಿಗಳು ಸಂಪರ್ಕ ಮಾಡದಂತೆ ಸುತ್ತಲೂ ಬಲೆ ಹಾಕಲಾಗಿದೆ. ಆಶ್ರಮದ ಸುತ್ತ ಮುತ್ತ ಕೋಳಿಗಳು,ಕೊಕ್ಕರೆಗಳು ಸುಳಿಯದಂತೆ ನೋಡಿಕೊಳ್ಳಲಾಗಿದೆ.
ಮೈಸೂರಿನ ಕುಂಬಾರಕೊಪ್ಪಲು ಮನೆಯೊಂದರಲ್ಲಿ ಇತ್ತೀಚೆಗೆ ಸತ್ತಿದ್ದ ಕೋಳಿ ಹಾಗೂ ಸ್ಮಶಾನದಲ್ಲಿ ಮೃತಪಟ್ಟಿದ್ದ ಪಕ್ಷಿಯ ಮೃತದೇಹದ ಮಾದರಿಗಳನ್ನು ಭೂಪಾಲ್‍ನ ನ್ಯಾಷನಲ್ ಇನ್ಸ್ ಟಿಟ್ಯೂಟ್ ಹೈಸೆಕ್ಯೂರಿಟಿ ಅನಿಮಲ್ ಡೀಸಿಸ್‍ಗೆ ಕಳುಹಿಸಲಾಗಿತ್ತು. ಮೈಸೂರಿನಿಂದ ಕಳುಹಿಸಿದ್ದ ಏಳು ಮಾದರಿಗಳಲ್ಲಿ ಎರಡು ಮಾದರಿಗಳು ಪಾಸಿಟಿವ್ ಬಂದಿದೆ.
ಈ ನಿಟ್ಟಿನಲ್ಲಿ ಜಿಲ್ಲಾಡಳಿತವು ತಕ್ಷಣವೇ ಸಾಕು ಪಕ್ಷಿಗಳ ಸರ್ವೆ ನಡೆಸಿ, ಮೂರ್ನಾಲ್ಕು ದಿನಗಳಲ್ಲಿ 6,436 ಪಕ್ಷಿಗಳನ್ನು ಕೊಲ್ಲಲು ರ್ನಿಧರಿಸಿದೆ. ಜೊತೆಗೆ ಹಕ್ಕಿಜ್ವರ ಪತ್ತೆಯಾದ ಮೈಸೂರಿನ ಕುಂಬಾರಕೊಪ್ಪಲಿನ ಒಂದು ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಸರ್ವೆ ಕಾರ್ಯ ನಡೆಸಲಾಗಿದೆ. ಈವರೆಗೆ ಒಟ್ಟು 6,436 ಪಕ್ಷಿಗಳನ್ನು ಅಧಿಕಾರಿಗಳು ಗುರುತಿಸಿದ್ದಾರೆ. ಹೀಗಾಗಿ ಕುಂಬಾರಕೊಪ್ಪಲಿನ 10 ಕಿ.ಮೀ. ವ್ಯಾಪ್ತಿಯನ್ನು ಸೂಕ್ಷ್ಮ ವಲಯ ಎಂದು ಘೋಷಣೆ ಮಾಡಲಾಗಿದೆ.
ಸೂಕ್ಷ್ಮ ವಲಯದ ವ್ಯಾಪ್ತಿಯಲ್ಲಿ ಒಟ್ಟು 17,820 ಮನೆಗಳಿವೆ. ಅದರಲ್ಲಿ 144 ಮನೆಗಳಲ್ಲಿ ಪಕ್ಷಿಗಳಿವೆ. ಈ ಪೈಕಿ ನೈಸರ್ಗಿಕ ಪಕ್ಷಿಗಳು 1,252, ಔದ್ಯಮಿಕ ಪಕ್ಷಿಗಳು 5,100 ಹಾಗೂ ಸಾಕು ಪಕ್ಷಿಗಳು 254 ಎಂದು ಗುರುತಿಸಲಾಗಿದೆ. ಇದರಲ್ಲಿ ಕ್ವೈಲ್ಸ್ 12 ಹಾಗೂ ಟರ್ಕಿ 18 ಸೇರಿ ಒಟ್ಟು 6,436 ಪಕ್ಷಿಗಳಿದ್ದು, ಎಲ್ಲವನ್ನೂ ನಾಶಪಡಿಸಲು ನಿರ್ಧರಿಸಲಾಗಿದೆ.
ಮೈಸೂರು: ನಗರದಲ್ಲಿ ಹಕ್ಕಿ ಜ್ವರ ದೃಢವಾದ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಪಕ್ಷಿ ಸರ್ವೆ ಕಾರ್ಯ ಆರಂಭಿಸಿದೆ.
ಮೈಸೂರಿನ ಕುಂಬಾರಕೊಪ್ಪಲು ಮನೆಯೊಂದರಲ್ಲಿ ಇತ್ತೀಚೆಗೆ ಸತ್ತಿದ್ದ ಕೋಳಿ ಹಾಗೂ ಸ್ಮಶಾನದಲ್ಲಿ ಮೃತಪಟ್ಟಿದ್ದ ಪಕ್ಷಿಯ ಮೃತದೇಹದ ಮಾದರಿಗಳನ್ನು ಭೂಪಾಲ್‍ನ ನ್ಯಾಷನಲ್ ಇನ್ಸ್ ಟಿಟ್ಯೂಟ್ ಹೈಸೆಕ್ಯೂರಿಟಿ ಅನಿಮಲ್ ಡೀಸಿಸ್‍ಗೆ ಕಳುಹಿಸಲಾಗಿತ್ತು. ಮೈಸೂರಿನಿಂದ ಕಳುಹಿಸಿದ್ದ ಏಳು ಮಾದರಿಗಳಲ್ಲಿ ಎರಡು ಮಾದವರಿಗಳು ಪಾಸಿಟಿವ್ ಬಂದಿದೆ. ಇದನ್ನೂ ಓದಿ: ಹಕ್ಕಿ ಜ್ವರ ಖಾತ್ರಿ- ಕುಂಬಾರಕೊಪ್ಪಲಿನ 10 ಕಿ.ಮೀ ವ್ಯಾಪ್ತಿಯಲ್ಲಿ ಕೋಳಿ ಮಾರಾಟ ನಿಷೇಧ
ಈ ನಿಟ್ಟಿನಲ್ಲಿ ಜಿಲ್ಲಾಡಳಿತವು ತಕ್ಷಣವೇ ಸಾಕು ಪಕ್ಷಿಗಳ ಸರ್ವೆ ನಡೆಸಿ, ಮೂರ್ನಾಲ್ಕು ದಿನಗಳಲ್ಲಿ 6,436 ಪಕ್ಷಿಗಳನ್ನು ಕೊಲ್ಲಲು ರ್ನಿಧರಿಸಿದೆ. ಜೊತೆಗೆ ಹಕ್ಕಿಜ್ವರ ಪತ್ತೆಯಾದ ಮೈಸೂರಿನ ಕುಂಬಾರಕೊಪ್ಪಲಿನ ಒಂದು ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಸರ್ವೆ ಕಾರ್ಯ ನಡೆಸಲಾಗಿದೆ. ಈವರೆಗೆ ಒಟ್ಟು 6,436 ಪಕ್ಷಿಗಳನ್ನು ಅಧಿಕಾರಿಗಳು ಗುರುತಿಸಿದ್ದಾರೆ. ಹೀಗಾಗಿ ಕುಂಬಾರಕೊಪ್ಪಲಿನ 10 ಕಿ.ಮೀ. ವ್ಯಾಪ್ತಿಯನ್ನು ಸೂಕ್ಷ್ಮ ವಲಯ ಎಂದು ಘೋಷಣೆ ಮಾಡಲಾಗಿದೆ.
ಸೂಕ್ಷ್ಮ ವಲಯದ ವ್ಯಾಪ್ತಿಯಲ್ಲಿ ಒಟ್ಟು 17,820 ಮನೆಗಳಿವೆ. ಅದರಲ್ಲಿ 144 ಮನೆಗಳಲ್ಲಿ ಪಕ್ಷಿಗಳಿವೆ. ಈ ಪೈಕಿ ನೈಸರ್ಗಿಕ ಪಕ್ಷಿಗಳು 1,252, ಔದ್ಯಮಿಕ ಪಕ್ಷಿಗಳು 5,100 ಹಾಗೂ ಸಾಕು ಪಕ್ಷಿಗಳು 254 ಎಂದು ಗುರುತಿಸಲಾಗಿದೆ. ಇದರಲ್ಲಿ ಕ್ವೈಲ್ಸ್ 12 ಹಾಗೂ ಟರ್ಕಿ 18 ಸೇರಿದ್ದು ಒಟ್ಟು 6,436 ಪಕ್ಷಿಗಳಿದ್ದು, ಎಲ್ಲವನ್ನೂ ನಾಶಪಡಿಸಲು ನಿರ್ಧರಿಸಲಾಗಿದೆ.
ಶಿವಮೊಗ್ಗ: ಕೊರೊನಾ ಹಾಗೂ ಹಕ್ಕಿಜ್ವರ ಹಿನ್ನೆಲೆ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಮಾರ್ಚ್ 31ರವರೆಗೆ ಕೋಳಿ ಮಾಂಸ ಮಾರಾಟವನ್ನು ಸ್ಥಗಿತಗೊಳಿಸಲಾಗಿದೆ.
ಇಂದಿನಿಂದ ಮಾರ್ಚ್ 31ರವರೆಗೆ ಸ್ವಯಂ ಪ್ರೇರಿತರಾಗಿ ಕೋಳಿ ಮಾಂಸ ಮಾರಾಟ ಸ್ಥಗಿತಗೊಳಿಸುತ್ತೇವೆ ಎಂದು ಮಾರಾಟಗಾರರು ಹೇಳಿದ್ದಾರೆ. ಕೊರೊನಾ ವೈರಸ್ ಈಗಾಗಲೇ ಇಡೀ ವಿಶ್ವವನ್ನೇ ತಲ್ಲಣಗೊಳಿಸಿದ್ದು, ಇದರ ಜೊತೆಗೆ ಮೈಸೂರು ಹಾಗೂ ಹರಿಹರದಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿದೆ. ಈ ಹಿನ್ನೆಲೆ ಸಾಗರದ ಕೋಳಿ ಮಾಂಸ ಮಾರಾಟಗಾರರು ಮುನ್ನೆಚ್ಚರಿಕಾ ಕ್ರಮವಾಗಿ ಸ್ವಯಂ ಪ್ರೇರಿತರಾಗಿ ಕೋಳಿ ಮಾಂಸ ಮಾರಾಟ ಬಂದ್ ಮಾಡಿದ್ದಾರೆ.
ಅಲ್ಲದೇ ಅಂಗಡಿ ಹಾಗೂ ಮಾಂಸದ ಮಾರುಕಟ್ಟೆಯನ್ನು ಸ್ವಚ್ಛಗೊಳಿಸುತ್ತಿದ್ದಾರೆ. ಮಾರಾಟಗಾರರು ಸ್ವಯಂ ಪ್ರೇರಿತವಾಗಿ ಬಂದ್‍ಗೊಳಿಸಿದ್ದಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ಮಾರಾಟಗಾರರು ಈ ನಿರ್ಧಾರ ತೆಗೆದುಕೊಂಡಿರೋದು ಒಳ್ಳೆಯ ಕೆಲಸ ಎಂದು ಜನರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮೈಸೂರಿನಲ್ಲಿ ಹಕ್ಕಿ ಜ್ವರ ಖಾತ್ರಿಯಾಗಿದೆ. ಕುಂಬಾರಕೊಪ್ಪಲಿನಲ್ಲಿ ಸಾಕಿದ ಕೋಳಿ ಹಾಗೂ ಕೊಕ್ಕರೆ ಸ್ಯಾಂಪಲ್‍ನಲ್ಲಿ ಜ್ವರ ಇರುವುದು ಕಂಡು ಬಂದಿದೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್ ಹೇಳಿದ್ದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಕ್ಕಿ ಜ್ವರದ ಬಗ್ಗೆ ಇದೇ ತಿಂಗಳು 12 ರಂದು ಸ್ಯಾಂಪಲ್ ಕಳುಹಿಸಲಾಗಿತ್ತು. ಇದೀಗ ಇಂದು ಹಕ್ಕಿ ಜ್ವರ ಇರುವುದು ಖಚಿತವಾಗಿದೆ. ಹೀಗಾಗಿ ಸೋಂಕು ಬಂದಿರುವ ಸ್ಥಳದಲ್ಲಿ ಸಾಕಿರುವ ಹಕ್ಕಿಗಳನ್ನು ಸಾಯಿಸಬೇಕು. ಮನುಷ್ಯರಿಗೆ ಇದು ಹರಡುವುದಿಲ್ಲ. ಆದರೂ ಮುಂಜಾಗ್ರತವಾಗಿ ಹಕ್ಕಿಗಳನ್ನು ಸಾಯಿಸಬೇಕು ಎಂದು ತಿಳಿಸಿದ್ದರು.
ಸೋಂಕು ಪತ್ತೆಯಾದ ಸ್ಥಳದ 10 ಕಿ.ಮೀ ವ್ಯಾಪ್ತಿಯಲ್ಲಿ ನಾಳೆಯಿಂದ ಕೋಳಿ ಹಾಗೂ ಯಾವುದೇ ಪಕ್ಷಿಗಳನ್ನ ಮಾರಾಟ ಮಾಡುವಂತಿಲ್ಲ. ಸೋಂಕು ಪತ್ತೆಯಾದ 1 ಕಿ.ಮೀ ವ್ಯಾಪ್ತಿಯಲ್ಲಿ ತಿನ್ನುವಂತ ಪಕ್ಷಿಗಳನ್ನು ಸೇವನೆ ಮಾಡಬಾರದು ಎಂದಿದ್ದರು.
ಇತ್ತ ರಾಜ್ಯಕ್ಕೆ ಕಾಲಿಟ್ಟಿರುವ ಕೊರೊನಾ ವೈರಸ್ 11 ಮಂದಿಗೆ ತಗುಲಿದ್ದು, ಈಗಾಗಲೇ ಕಲಬುರಗಿಯಲ್ಲಿ ಓರ್ವ ವೃದ್ಧರನ್ನು ಬಲಿ ಪಡೆದಿದೆ. ಇತ್ತ ನೆರೆ ರಾಜ್ಯ ಮಹಾರಾಷ್ಟ್ರದಲ್ಲೂ ಕೊರೊನಾ ರಣಕೇಕೆ ಹಾಕುತ್ತಿದ್ದು, 39 ಮಂದಿಗೆ ಸೋಂಕು ತಟ್ಟಿರುವುದು ದೃಢಪಟ್ಟಿದೆ. ಈವರೆಗೆ ವಿಶ್ವದಾದ್ಯಂತ ಬರೋಬ್ಬರಿ 7,171 ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಸುಮಾರು 1,82,605 ಮಂದಿಗೆ ಕೊರೊನಾ ತಗುಲಿದೆ ಎಂದು ವರದಿಯಾಗಿದೆ.
ಮೈಸೂರು: ನಗರದಲ್ಲಿ ಹಕ್ಕಿ ಜ್ವರ ಖಾತ್ರಿಯಾಗಿದೆ. ಕುಂಬಾರಕೊಪ್ಪಲಿನಲ್ಲಿ ಸಾಕಿದ ಕೋಳಿ ಹಾಗೂ ಕೊಕ್ಕರೆ ಸ್ಯಾಂಪಲ್‍ನಲ್ಲಿ ಜ್ವರ ಇರುವುದು ಕಂಡು ಬಂದಿದೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್ ಹೇಳಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಕ್ಕಿ ಜ್ವರದ ಬಗ್ಗೆ ಇದೇ ತಿಂಗಳು 12 ರಂದು ಸ್ಯಾಂಪಲ್ ಕಳುಹಿಸಲಾಗಿತ್ತು. ಇದೀಗ ಇಂದು ಹಕ್ಕಿ ಜ್ವರ ಇರುವುದು ಖಚಿತವಾಗಿದೆ. ಹೀಗಾಗಿ ಸೋಂಕು ಬಂದಿರುವ ಸ್ಥಳದಲ್ಲಿ ಸಾಕಿರುವ ಹಕ್ಕಿಗಳನ್ನು ಸಾಯಿಸಬೇಕು. ಮನುಷ್ಯರಿಗೆ ಇದು ಹರಡುವುದಿಲ್ಲ. ಆದರೂ ಮುಂಜಾಗ್ರತವಾಗಿ ಹಕ್ಕಿಗಳನ್ನು ಸಾಯಿಸಬೇಕು ಎಂದು ತಿಳಿಸಿದ್ದಾರೆ.
ಸೋಂಕು ಪತ್ತೆಯಾದ ಸ್ಥಳದ 10 ಕಿ.ಮೀ ವ್ಯಾಪ್ತಿಯಲ್ಲಿ ನಾಳೆಯಿಂದ ಕೋಳಿ ಹಾಗೂ ಯಾವುದೇ ಪಕ್ಷಿಗಳನ್ನ ಮಾರಾಟ ಮಾಡುವಂತಿಲ್ಲ. ಸೋಂಕು ಪತ್ತೆಯಾದ 1 ಕಿ.ಮೀ ವ್ಯಾಪ್ತಿಯಲ್ಲಿ ತಿನ್ನುವಂತ ಪಕ್ಷಿಗಳನ್ನು ಸೇವನೆ ಮಾಡಬಾರದು ಎಂದಿದ್ದಾರೆ.
ನಾಳೆಯಿಂದ ಕಲ್ಲಿಂಗ್ ಆಪರೇಷನ್ ಮಾಡಲಾಗುವುದು. ಹೀಗಾಗಿ ವ್ಯಾಪ್ತಿಯಲ್ಲಿರುವ ಎಲ್ಲಾ ಹಕ್ಕಿಗಳನ್ನು ಗುಂಡಿ ತೆಗೆದು ಮುಚ್ಚಲಾಗುವುದು. ಈಗಾಗಲೇ ಸರ್ವೆ ಪ್ರಾರಂಭ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.