Tag: ಹಗರಣ

  • ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ ಕೇಸ್‌ – ಇಂದು ಮಾಜಿ ಸಚಿವ ನಾಗೇಂದ್ರ ಜಾಮೀನು ಭವಿಷ್ಯ

    ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ ಕೇಸ್‌ – ಇಂದು ಮಾಜಿ ಸಚಿವ ನಾಗೇಂದ್ರ ಜಾಮೀನು ಭವಿಷ್ಯ

    ಬೆಂಗಳೂರು: ಒಂದು ಕಡೆ ನಟ ದರ್ಶನ್ (Darshan) ಜಾಮೀನು ತೀರ್ಪು ಮತ್ತೊಂದು ಕಡೆ ರಾಜಕೀಯ ನಾಯಕರ ತೀರ್ಪು ಭಾರಿ ಕುತೂಹಲ ಮೂಡಿಸಿದೆ.

    ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ (Valmiki Development Corporation scam) ಕೇಸ್‌ನಲ್ಲಿ ಬಂಧಿತರಾಗಿರುವ ಮಾಜಿ ಸಚಿವ ನಾಗೇಂದ್ರ ಜಾಮೀನು ಅರ್ಜಿಯ ತೀರ್ಪು ಸೋಮವಾರ (ಇಂದು) ಪ್ರಕಟವಾಗಲಿದೆ. ಬಹುತೇಕ 12 ಗಂಟೆ ವೇಳೆಗೆ ಜಾಮೀನು ತೀರ್ಪು ಬರುವ ಸಾಧ್ಯತೆಯಿದೆ. ಹಾಗಾಗಿ ಇವತ್ತು ಸಿಟಿ ಸಿವಿಲ್ ನ್ಯಾಯಾಲಯದತ್ತ ಚಿತ್ತ ನೆಟ್ಟಿದೆ. ಇದನ್ನೂ ಓದಿ: ಮುಂಬೈನಿಂದ ನ್ಯೂಯಾರ್ಕ್‌ಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನಕ್ಕೆ ಬಾಂಬ್‌ ಬೆದರಿಕೆ

    ಈಗಾಗಲೇ ನಾಗೇಂದ್ರ (BN Nagendra) ವಿರುದ್ಧ ಇಡಿ ಅಧಿಕಾರಿಗಳು ಪ್ರಾಸಿಕ್ಯೂಷನ್‌ಗೆ ಅನುಮತಿ ಪಡೆದಿದ್ದಾರೆ. ಸದ್ಯ ಸೆಂಟ್ರಲ್ ಜೈಲಲ್ಲಿರೋ ಮಾಜಿ ಸಚಿವರಿಗೆ ಬೇಲ್ ಸಿಕ್ಕಿದರಷ್ಟೇ ಪರಪ್ಪನ ಅಗ್ರಹಾರದಿಂದ ರಿಲೀಸ್ ಆಗಲಿದ್ದಾರೆ. ಇದನ್ನೂ ಓದಿ: Valmiki Scam | ಬಳ್ಳಾರಿ ಚುನಾವಣೆಗೆ ಹಣ ಬಳಕೆ – ಹಗರಣದ ಮಾಸ್ಟರ್‌ಮೈಂಡ್‌ ನಾಗೇಂದ್ರ

    ಹಗರಣದ ಮಾಸ್ಟರ್‌ಮೈಂಡ್‌ ನಾಗೇಂದ್ರ:
    ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ 187 ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ್ದ ಇಡಿ ಬೆಂಗಳೂರಿನ ಜನಪ್ರತಿನಿಗಳ ವಿಶೇಷ ನ್ಯಾಯಾಲಯಕ್ಕೆ 24 ಮಂದಿ ಆರೋಪಿಗಳ ವಿರುದ್ಧ ಆರೋಪಪಟ್ಟಿಯನ್ನು ಇದೇ ಅಕ್ಟೋಬರ್‌ 5ರಂದು ಸಲ್ಲಿಸಿತ್ತು. ಪ್ರಕರಣದಲ್ಲಿ ನಾಗೇಂದ್ರ ಮಾಸ್ಟರ್‌ ಮೈಂಡ್ ಎಂದು ಇಡಿ ಉಲ್ಲೇಖಿಸಿದೆ. ಸತ್ಯನಾರಾಯಣ ವರ್ಮಾ, ಪದ್ಮನಾಭ, ನಾಗೇಶ್‌ರಾವ್, ನೆಕ್ಕಂಟಿ ನಾಗರಾಜ್, ವಿಜಯ್‌ಕುಮಾರ್ ಸೇರಿ 24 ಮಂದಿ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆಯಾಗಿತ್ತು. ಮೇ 2024 ರಲ್ಲಿ ನಿಗಮದ ಉದ್ಯೋಗಿ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡ ನಂತರ ಈ ಬಹುಕೋಟಿ ಹಗರಣ ಬೆಳಕಿಗೆ ಬಂದಿತ್ತು.

    ಆರೋಪ ಪಟ್ಟಿಯಲ್ಲಿ ಏನಿದೆ?
    ಕರ್ನಾಟಕ ಪೊಲೀಸ್ ಮತ್ತು ಸಿಬಿಐ ದಾಖಲಿಸಿದ ಎಫ್‌ಐಆರ್‌ಗಳ ಆಧಾರದ ಮೇಲೆ ಇಡಿ ತನಿಖೆಯನ್ನು ಪ್ರಾರಂಭಿಸಿತು. ಸುಮಾರು 89.62 ಕೋಟಿ ರೂ.ಗಳನ್ನು ನಿಗಮದ ಖಾತೆಗಳಿಂದ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ತೆರೆಯಲಾದ ನಕಲಿ ಖಾತೆಗಳಿಗೆ ವರ್ಗಾಯಿಸಿ ನಂತರ ಆ ಹಣವವನ್ನು ಶೆಲ್‌ ಕಂಪನಿಗಳಿಗೆ ಮೂಲಕ ಅಕ್ರಮ ಎಸಗಲಾಗಿದೆ.

    ಬಿ.ನಾಗೇಂದ್ರ ಅವರು ತಮ್ಮ ಪ್ರಭಾವ ಬಳಸಿ ಖಾತೆಯನ್ನು ಯಾವುದೇ ಸೂಕ್ತ ಅನುಮತಿಯಿಲ್ಲದೆ  ಬೆಂಗಳೂರಿನಎಂಜಿ ರಸ್ತೆ ಶಾಖೆಗೆ ವರ್ಗಾಯಿಸಿದ್ದಾರೆ. 187 ಕೋಟಿ ರೂ. ಗಂಗಾ ಕಲ್ಯಾಣ ಯೋಜನೆಯಡಿ ರಾಜ್ಯ ಖಜಾನೆಯಿಂದ 43.33 ಕೋಟಿ ರೂ.ಗಳನ್ನು ಸರಿಯಾದ ಕಾರ್ಯವಿಧಾನಗಳನ್ನು ಅನುಸರಿಸದೇ ಮತ್ತು ಸರ್ಕಾರದ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಠೇವಣಿ ಮಾಡಲಾಗಿದೆ.

    ತನಿಖೆಯ ವೇಳೆ 20.19 ಕೋಟಿ ರೂ. ಹಣವನ್ನು ಬಳ್ಳಾರಿ ಕ್ಷೇತ್ರದಿಂದ 2024ರ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ ಅಭ್ಯರ್ಥಿಯ ಪ್ರಚಾರಕ್ಕೆ ದುರ್ಬಳಕೆ ಬಳಕೆ ಮಾಡಲಾಗಿದೆ. ಅಷ್ಟೇ ಅಲ್ಲದೇ ನಾಗೇಂದ್ರ ಅವರ ವೈಯಕ್ತಿಕ ಖರ್ಚಿಗೆ ಬಳಸಲಾಗಿದೆ. ಇದನ್ನೂ ಓದಿ: ಜಮ್ಮು-ಕಾಶ್ಮೀರದಲ್ಲಿ ರಾಷ್ಟ್ರಪತಿ ಆಳ್ವಿಕೆ ವಾಪಸ್‌ – ಹೊಸ ಸರ್ಕಾರ ರಚನೆಗೆ ಅಸ್ತು

    ನಾಗೇಂದ್ರ ಅವರ ಸೂಚನೆ ಮೇರೆಗೆ ನಗದನ್ನು ನಿರ್ವಹಿಸುತ್ತಿದ್ದ ವಿಜಯ್ ಕುಮಾರ್ ಗೌಡ ಅವರ ಮೊಬೈಲ್ ಫೋನ್‌ನಿಂದ ಚುನಾವಣಾ ವೆಚ್ಚದ ವಿವರಗಳನ್ನು ಪಡೆಯಲಾಗಿದೆ. ಹಗರಣ ಬೆಳಕಿಗೆ ಬಂದ ನಂತರ ರಾಜೀನಾಮೆ ನೀಡಿದ ಬಿ.ನಾಗೇಂದ್ರ ಅವರು ತಮ್ಮ ಮೊಬೈಲ್ ಫೋನ್‌ಗಳನ್ನು ನಾಶಪಡಿಸಿದ್ದಾರೆ. ಅಷ್ಟೇ ಅಲ್ಲದೇ ಉಳಿದವರಿಗೆ ಈ ಪ್ರಕರಣದಲ್ಲಿ ಮೌನವಾಗಿರುವಂತೆ ಸೂಚನೆ ನೀಡಿದ್ದಾರೆ. ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ ಎಂದು ಇಡಿ ತಿಳಿಸಿದೆ.

  • Valmiki Scam | ಬಳ್ಳಾರಿ ಚುನಾವಣೆಗೆ ಹಣ ಬಳಕೆ – ಹಗರಣದ ಮಾಸ್ಟರ್‌ಮೈಂಡ್‌ ನಾಗೇಂದ್ರ

    Valmiki Scam | ಬಳ್ಳಾರಿ ಚುನಾವಣೆಗೆ ಹಣ ಬಳಕೆ – ಹಗರಣದ ಮಾಸ್ಟರ್‌ಮೈಂಡ್‌ ನಾಗೇಂದ್ರ

    – ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಇಡಿ ಚಾರ್ಜ್‌ಶೀಟ್‌ ಸಲ್ಲಿಕೆ

    ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (Karnataka Maharshi Valmiki Scheduled Tribe Development Corporation Ltd) ಹಣವನ್ನು 2024ರ ಲೋಕಸಭೆ ಚುನಾವಣೆಯಲ್ಲಿ (Lok Sabha Election) ಸ್ಪರ್ಧಿಸಿದ ಬಳ್ಳಾರಿ ಅಭ್ಯರ್ಥಿಯ ಖರ್ಚು ಮತ್ತು ಹಾಗೂ ಬಿ.ನಾಗೇಂದ್ರ (B Nagendra) ಅವರ ವೈಯಕ್ತಿಕ ವೆಚ್ಚಕ್ಕೆ ಬಳಸಲಾಗಿದೆ ಎಂದು ಜಾರಿ ನಿರ್ದೇಶನಾಲಯ (ED) ಚಾರ್ಜ್‌ಶೀಟ್‌ನಲ್ಲಿ ಹೇಳಿದೆ.

    ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ 187 ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ್ದ ಇಡಿ ಇಂದು ಬೆಂಗಳೂರಿನ ಜನಪ್ರತಿನಿಗಳ ವಿಶೇಷ ನ್ಯಾಯಾಲಯಕ್ಕೆ 24 ಮಂದಿ ಆರೋಪಿಗಳ ವಿರುದ್ಧ ಆರೋಪಪಟ್ಟಿ ಸಲ್ಲಿಸಿದೆ. ಪ್ರಕರಣದಲ್ಲಿ ನಾಗೇಂದ್ರ ಮಾಸ್ಟರ್‌ ಮೈಂಡ್ ಎಂದು ಇಡಿ ಉಲ್ಲೇಖಿಸಿದೆ. ಸತ್ಯನಾರಾಯಣ ವರ್ಮಾ, ಪದ್ಮನಾಭ, ನಾಗೇಶ್‌ರಾವ್, ನೆಕ್ಕಂಟಿ ನಾಗರಾಜ್, ವಿಜಯ್‌ಕುಮಾರ್ ಸೇರಿ 24 ಮಂದಿ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆಯಾಗಿದೆ.

    ಮೇ 2024 ರಲ್ಲಿ ನಿಗಮದ ಉದ್ಯೋಗಿ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡ ನಂತರ ಈ ಬಹುಕೋಟಿ ಹಗರಣ ಬೆಳಕಿಗೆ ಬಂದಿತ್ತು. ಇದನ್ನೂ ಓದಿ: ಉತ್ತರ ಪ್ರದೇಶ| ಹಳಿಗಳ ಮೇಲೆ ಇರಿಸಿದ್ದ ಸಿಮೆಂಟ್ ಸ್ಲ್ಯಾಬ್‌ಗಳಿಗೆ ಗೂಡ್ಸ್ ರೈಲು ಡಿಕ್ಕಿ

    ಆರೋಪ ಪಟ್ಟಿಯಲ್ಲಿ ಏನಿದೆ?
    ಕರ್ನಾಟಕ ಪೊಲೀಸ್ ಮತ್ತು ಸಿಬಿಐ ದಾಖಲಿಸಿದ ಎಫ್‌ಐಆರ್‌ಗಳ ಆಧಾರದ ಮೇಲೆ ಇಡಿ ತನಿಖೆಯನ್ನು ಪ್ರಾರಂಭಿಸಿತು. ಸುಮಾರು 89.62 ಕೋಟಿ ರೂ.ಗಳನ್ನು ನಿಗಮದ ಖಾತೆಗಳಿಂದ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ತೆರೆಯಲಾದ ನಕಲಿ ಖಾತೆಗಳಿಗೆ ವರ್ಗಾಯಿಸಿ ನಂತರ ಆ ಹಣವವನ್ನು ಶೆಲ್‌ ಕಂಪನಿಗಳಿಗೆ ಮೂಲಕ ಅಕ್ರಮ ಎಸಗಲಾಗಿದೆ.

    ಬಿ.ನಾಗೇಂದ್ರ ಅವರು ತಮ್ಮ ಪ್ರಭಾವ ಬಳಸಿ ಖಾತೆಯನ್ನು ಯಾವುದೇ ಸೂಕ್ತ ಅನುಮತಿಯಿಲ್ಲದೆ  ಬೆಂಗಳೂರಿನಎಂಜಿ ರಸ್ತೆ ಶಾಖೆಗೆ ವರ್ಗಾಯಿಸಿದ್ದಾರೆ. 187 ಕೋಟಿ ರೂ. ಗಂಗಾ ಕಲ್ಯಾಣ ಯೋಜನೆಯಡಿ ರಾಜ್ಯ ಖಜಾನೆಯಿಂದ 43.33 ಕೋಟಿ ರೂ.ಗಳನ್ನು ಸರಿಯಾದ ಕಾರ್ಯವಿಧಾನಗಳನ್ನು ಅನುಸರಿಸದೇ ಮತ್ತು ಸರ್ಕಾರದ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಠೇವಣಿ ಮಾಡಲಾಗಿದೆ.

    ತನಿಖೆಯ ವೇಳೆ 20.19 ಕೋಟಿ ರೂ. ಹಣವನ್ನು ಬಳ್ಳಾರಿ ಕ್ಷೇತ್ರದಿಂದ 2024ರ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ ಅಭ್ಯರ್ಥಿಯ ಪ್ರಚಾರಕ್ಕೆ ದುರ್ಬಳಕೆ ಬಳಕೆ ಮಾಡಲಾಗಿದೆ. ಅಷ್ಟೇ ಅಲ್ಲದೇ ನಾಗೇಂದ್ರ ಅವರ ವೈಯಕ್ತಿಕ ಖರ್ಚಿಗೆ ಬಳಸಲಾಗಿದೆ.

    ನಾಗೇಂದ್ರ ಅವರ ಸೂಚನೆ ಮೇರೆಗೆ ನಗದನ್ನು ನಿರ್ವಹಿಸುತ್ತಿದ್ದ ವಿಜಯ್ ಕುಮಾರ್ ಗೌಡ ಅವರ ಮೊಬೈಲ್ ಫೋನ್‌ನಿಂದ ಚುನಾವಣಾ ವೆಚ್ಚದ ವಿವರಗಳನ್ನು ಪಡೆಯಲಾಗಿದೆ. ಹಗರಣ ಬೆಳಕಿಗೆ ಬಂದ ನಂತರ ರಾಜೀನಾಮೆ ನೀಡಿದ ಬಿ.ನಾಗೇಂದ್ರ ಅವರು ತಮ್ಮ ಮೊಬೈಲ್ ಫೋನ್‌ಗಳನ್ನು ನಾಶಪಡಿಸಿದ್ದಾರೆ. ಅಷ್ಟೇ ಅಲ್ಲದೇ ಉಳಿದವರಿಗೆ ಈ ಪ್ರಕರಣದಲ್ಲಿ ಮೌನವಾಗಿರುವಂತೆ ಸೂಚನೆ ನೀಡಿದ್ದಾರೆ. ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ ಎಂದು ಇಡಿ ತಿಳಿಸಿದೆ.

  • Valmiki Scam | 187 ಕೋಟಿ ಲೂಟಿಗೆ ನಕಲಿ ವ್ಯಕ್ತಿಯನ್ನು ಸೃಷ್ಟಿಸಿ ಹುದ್ದೆ ನೀಡಿದ್ದ ಎಂಡಿ

    Valmiki Scam | 187 ಕೋಟಿ ಲೂಟಿಗೆ ನಕಲಿ ವ್ಯಕ್ತಿಯನ್ನು ಸೃಷ್ಟಿಸಿ ಹುದ್ದೆ ನೀಡಿದ್ದ ಎಂಡಿ

    ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ (Karnataka Maharshi Valmiki Scheduled Tribe Development Corporation Ltd) ಕೋಟ್ಯಂತರ ರೂ. ಹಣ ಲೂಟಿ ಮಾಡಲು ನಕಲಿ ಹುದ್ದೆಯನ್ನೇ ಸೃಷ್ಟಿಸಿದ ಘಟನೆ ಈಗ ಬೆಳಕಿಗೆ ಬಂದಿದೆ.

    ಹೌದು. ವಾಲ್ಮೀಕಿ ಅಭಿವೃದ್ಧಿ ನಿಗಮ ಬಹುಕೋಟಿ ಹಗರಣ ಬಗೆದಷ್ಟು ಬಯಲಾಗುತ್ತಿದೆ. ಜಾರಿ ನಿರ್ದೇಶನಾಲಯದ (ED) ಪ್ರವೇಶದ ಬಳಿಕ ಒಂದೊಂದೇ ಸ್ಫೋಟಕ ಮಾಹಿತಿಗಳು ಹೊರ ಬರುತ್ತಿವೆ.

    ಕೋಟಿ ಕೋಟಿ ಹಣವನ್ನು ಲೂಟಿ ಹೊಡೆಯಲು ಎಂಡಿ ಪದ್ಮನಾಭ್ (Padmanabh) ನಕಲಿ ವ್ಯಕ್ತಿಯನ್ನೇ ಸೃಷ್ಟಿಸಿ ನಿಗಮದಲ್ಲಿ ಹುದ್ದೆ ಸಹ ನೀಡಿದ್ದರು. ಈ ನಕಲಿ ವ್ಯಕ್ತಿ 45 ಕೋಟಿ ರೂ. ಹಣ ವ್ಯವಹಾರ ಮಾಡಿದ ವಿಚಾರ ಈಗ ಬೆಳಕಿಗೆ ಬಂದಿದೆ. ಇದನ್ನೂ ಓದಿ: Valmiki Scam | ನಾಗೇಂದ್ರ ಆದಾಯದ ಮೂಲ ಕೆದಕಲು ಮುಂದಾದ ಇಡಿ

    ಲೂಟಿಗಾಗಿ ನಕಲಿ ಹುದ್ದೆ:
    ಕೋಟಿ ಕೋಟಿ ಲೂಟಿ ಹೊಡೆಯಲು ಪದ್ಮನಾಭ್ ಜ್ಯೂನಿಯರ್ ಅಕೌಂಟೆಂಟ್ ಹುದ್ದೆಯನ್ನು ಸೃಷ್ಟಿಸಿದ್ದರು. ಈ ಹುದ್ದೆಗೆ ಶಿವಕುಮಾರ್‌ ಹೆಸರಿನಲ್ಲಿ ಉದ್ಯೋಗಿಯನ್ನು ನೇಮಕ ಮಾಡಲಾಗಿತ್ತು. ಜ್ಯೂನಿಯರ್ ಅಕೌಂಟೆಂಟ್ ಅಂತಾ ಐಡಿ ಕಾರ್ಡ್ ನೀಡಿ ಹಣಕಾಸು ವ್ಯವಹಾರ ನೋಡಿಕೊಳ್ಳುವ ಅಧಿಕಾರ ನೀಡಲಾಗಿತ್ತು. ಅಸಲಿಗೆ ಶಿವಕುಮಾರ್‌ ಹೆಸರಿನ ವ್ಯಕ್ತಿಯೇ ಇರಲಿಲ್ಲ. ಇದನ್ನೂ ಓದಿ: ಕೊರಗಜ್ಜನ ಕೋಲದಲ್ಲಿ ಕತ್ರಿನಾ ಕೈಫ್‌, ಕೆಎಲ್‌ ರಾಹುಲ್‌ ಭಾಗಿ

    ಹಣಕ್ಕೆ ಕನ್ನ ಹಾಕಲು ಎಂಜಿ ರಸ್ತೆಯ ಯೂನಿಯನ್‌ ಬ್ಯಾಂಕ್‌ನಲ್ಲಿ ಫೆ. 21ರಂದು 034123030001619 ಖಾತೆ ಓಪನ್‌ ಆಗುತ್ತದೆ.ಈ ಶಿವಕುಮಾರ್ ಖಾತೆಗೆ ನಿಗಮದಿಂದ 187 ಕೋಟಿ ರೂ. ವರ್ಗಾವಣೆಗೆ ಮನವಿ ಹೋಗುತ್ತದೆ. ಮನವಿ ಮೇರೆಗೆ ನಿಗಮದಿಂದ ಮಾ 5ರಿಂದ ಮೇ 6 ರವರೆಗೆ 187 ಕೋಟಿ ರೂ. ಹಣ ವರ್ಗಾವಣೆಯಾಗುತ್ತದೆ. ಶಿವಕುಮಾರ್‌ ಖಾತೆಯಿಂದ ಹೈದರಾಬಾದ್‌ನ ಆರ್‌ಬಿಎಲ್ ಬ್ಯಾಂಕ್‌ಗೆ ಹಣ ವರ್ಗಾವಣೆ ಆಗುತ್ತದೆ. ಪದ್ಮನಾಭ್ ಕೃತ್ಯಕ್ಕೆ ಯೂನಿಯನ್‌ ಬ್ಯಾಂಕ್ ಸಿಬ್ಬಂದಿ ಸಾಥ್ ನೀಡಿದ್ದರಿಂದ ಇಷ್ಟೊಂದು ಹಣವನ್ನು ಲೂಟಿ ಮಾಡಲಾಗಿದೆ.

  • ವಾಲ್ಮೀಕಿ ನಿಗಮ ಆಯ್ತು ಈಗ ವಕ್ಫ್‌ ಬೋರ್ಡ್‌ನಲ್ಲೂ ಕೋಟ್ಯಂತರ ರೂ. ಅಕ್ರಮ ವರ್ಗಾವಣೆ

    ವಾಲ್ಮೀಕಿ ನಿಗಮ ಆಯ್ತು ಈಗ ವಕ್ಫ್‌ ಬೋರ್ಡ್‌ನಲ್ಲೂ ಕೋಟ್ಯಂತರ ರೂ. ಅಕ್ರಮ ವರ್ಗಾವಣೆ

    ಬೆಂಗಳೂರು: ವಾಲ್ಮೀಕಿ ನಿಗಮ, ಬಾಗಲಕೋಟೆ ಪ್ರವಾಸೋದ್ಯಮ ಇಲಾಖೆಯ ಬಳಿಕ ವಕ್ಫ್‌ ಬೋರ್ಡ್‌ನಲ್ಲೂ (Waqf Board) ಕೋಟ್ಯಂತರ ರೂ. ಹಣವನ್ನು ಅಕ್ರಮ ವರ್ಗಾವಣೆ ಮಾಡಿರುವ ವಿಚಾರ ಈಗ ಬೆಳಕಿಗೆ ಬಂದಿದೆ.

    ಹೌದು. ವಕ್ಫ್‌ ಬೋರ್ಡ್‌ ಮಾಜಿ ಸಿಇಒ ಝುಲ್ಫಿಕಾರುಲ್ಲಾ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ (High Grounds Police) ಮುಖ್ಯ ಲೆಕ್ಕಾಧಿಕಾರಿ ಮೀರ್ ಅಹಮದ್ ಅಬ್ಬಾಸ್ ಕೊಟ್ಟ ದೂರಿನ ಆಧಾರ ಮೇಲೆ ಎಫ್‌ಐಆರ್‌ ದಾಖಲಾಗಿದೆ. ಇದನ್ನೂ ಓದಿ: ವಾಲ್ಮೀಕಿ ನಿಗಮದಂತೆ ಪ್ರವಾಸೋದ್ಯಮ ಇಲಾಖೆಯಲ್ಲೂ ಗೋಲ್ಮಾಲ್‌ – 2.47 ಕೋಟಿ ರೂ. ಅಕ್ರಮ ಹಣ ವರ್ಗಾವಣೆ

     

    ದೂರಿನಲ್ಲಿ ಏನಿದೆ?
    ವಕ್ಫ್ ಮಂಡಳಿ ಆಸ್ತಿ ಮಾರಾಟ ಸಂಬಂಧ 4 ಕೋಟಿ ರೂ. ಹಣ ಮಂಡಳಿ ಬ್ಯಾಂಕ್ ಖಾತೆಗೆ ಜಮೆಯಾಗಿತ್ತು. ಈ ಹಣವನ್ನು 2016ರಲ್ಲಿ ಚಿಂತಾಮಣಿಯ ವಿಜಯ ಬ್ಯಾಂಕ್‌ಗೆ ವರ್ಗಾವಣೆ ಮಾಡಿದ್ದ ಝುಲ್ಫಿಕಾರುಲ್ಲಾ ಸಿಇಒ ಹೆಸರಿನಲ್ಲಿ ಎರಡು ಚೆಕ್ ಮೂಲಕ ಫಿಕ್ಸೆಡ್ ಡೆಪಾಸಿಟ್ ಮಾಡಿದ್ದರು. ಇದರಿಂದ ವಕ್ಫ್ ಮಂಡಳಿಗೆ 8 ಕೋಟಿ ರೂ.ನಷ್ಟ ಆಗಿದೆ ಎಂದು ದೂರು ನೀಡಲಾಗಿದೆ.

    ಸಂಸ್ಥೆಯ ಗಮನಕ್ಕೆ ತರದೇ ಹಣ ವರ್ಗಾವಣೆ ಮಾಡಿ ನಂಬಿಕೆ ದ್ರೋಹ ಎಸಗಿದ್ದಾರೆಂದು ದೂರಿನಲ್ಲಿ ಆರೋಪಿಸಲಾಗಿದೆ.

  • ವಾಲ್ಮೀಕಿ ನಿಗಮದಂತೆ ಪ್ರವಾಸೋದ್ಯಮ ಇಲಾಖೆಯಲ್ಲೂ ಗೋಲ್ಮಾಲ್‌ – 2.47 ಕೋಟಿ ರೂ. ಅಕ್ರಮ ಹಣ ವರ್ಗಾವಣೆ

    ವಾಲ್ಮೀಕಿ ನಿಗಮದಂತೆ ಪ್ರವಾಸೋದ್ಯಮ ಇಲಾಖೆಯಲ್ಲೂ ಗೋಲ್ಮಾಲ್‌ – 2.47 ಕೋಟಿ ರೂ. ಅಕ್ರಮ ಹಣ ವರ್ಗಾವಣೆ

    – ಕಳೆದ ಅಕ್ಟೋಬರ್‌ 28 ರಿಂದ ಈ ಫೆಬ್ರವರಿ 22 ರವರೆಗೆ ವರ್ಗಾವಣೆ
    – 3 ಖಾತೆಯಿಂದ ಒಟ್ಟು 54 ಬಾರಿ ವರ್ಗಾವಣೆ
    – ನಿರ್ಮಿತಿ ಕೇಂದ್ರ, ಸಮಾಜ ಕಲ್ಯಾಣ ಇಲಾಖೆಗೂ ದುಡ್ಡು

    ಬಾಗಲಕೋಟೆ: ರಾಜ್ಯದಲ್ಲಿ ವಾಲ್ಮೀಕಿ ನಿಗಮದ ಹಗರಣ (Valmiki Scam) ಸರ್ಕಾರದ ಕೊರಳಿಗೆ ಕುಣಿಕೆಯಾಗುತ್ತಿದೆ. ಈಗಾಗಲೇ ಸಚಿವ ಬಿ. ನಾಗೇಂದ್ರ (Nagendra) ತಲೆದಂಡ ಕೂಡ ಆಗಿದ್ದು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇದರ ಮಧ್ಯೆ ಅದೇ ಮಾದರಿಯಲ್ಲಿ ಮತ್ತೊಂದು ಇಲಾಖೆಗೆ ಸಂಬಂಧಿಸಿದ ಬ್ಯಾಂಕ್ ಖಾತೆಯಲ್ಲಿ ವಂಚನೆ ಆಗಿರುವುದು ಬೆಳಕಿಗೆ ಬಂದಿದೆ.

    ಬಾಗಲಕೋಟೆ (Bagalkot) ಜಿಲ್ಲಾ ಪ್ರವಾಸೋದ್ಯಮ (Tourism Department) ಇಲಾಖೆಯಲ್ಲಿ 2,47,73,999 ರೂ. ವಂಚನೆಯಾಗಿದ್ದು, ಬಾಗಲಕೋಟೆ ಐಡಿಬಿಐ ಬ್ಯಾಂಕ್‌ ಖಾತೆಗಳ ಮೂಲಕ ಹಣ ವಿವಿಧ ಖಾತೆಗೆ ಅಕ್ರಮವಾಗಿ ವರ್ಗಾವಣೆಯಾಗಿದೆ. ಅಕ್ರಮ ಬೆಳಕಿಗೆ ಬರುತ್ತಿದಂತೆ ಜುಲೈ 11 ರಂದು ಪ್ರವಾಸೋದ್ಯಮ ಇಲಾಖೆ ಅಧಿಕಾರಿ ಗೋಪಾಲ ಹಿತ್ತಲಮನಿ ಬ್ಯಾಂಕ್ ಮ್ಯಾನೇಜರ್ ಹಾಗೂ ಸಿಬ್ಬಂದಿ ವಿರುದ್ಧ ಬಾಗಲಕೋಟೆ ಸಿಇಎನ್ ಠಾಣೆಯಲ್ಲಿ ದೂರು ನೀಡಿದ್ದು ಪೊಲೀಸರು ಅಕ್ರಮ ವ್ಯವಹಾರಗಳ ಬಗ್ಗೆ ತನಿಖೆ ಆರಂಭಿಸಿದ್ದಾರೆ.

    ವಂಚನೆ ಹೇಗೆ?
    ಜಿಲ್ಲಾ ಪ್ರವಾಸೋದ್ಯಮ ಇಲಾಖೆಗೆ ಸಂಬಂಧಿಸಿದಂತೆ ಒಟ್ಟು ಮೂರು ಖಾತೆಗಳನ್ನು ಬಾಗಲಕೋಟೆ ಐಡಿಬಿಐ ಬ್ಯಾಂಕ್‌ನಲ್ಲಿ (IDBI) ನಿರ್ವಹಣೆ ಮಾಡಲಾಗುತ್ತಿದ್ದು, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಅಧ್ಯಕ್ಷರ (ಹೆಡ್‌) ಹೆಸರಲ್ಲಿ ಐಡಿಬಿಐ ಬ್ಯಾಂಕ್ ನಲ್ಲಿ ಖಾತೆ ತೆರೆಯಲಾಗಿದೆ. ಮೂರು ಬ್ಯಾಂಕ್‌ ಖಾತೆಯಿಂದ ಕಳೆದ ಅಕ್ಟೋಬರ್‌ 28 ರಿಂದ ಈ ಫೆಬ್ರವರಿ 22 ರವರೆಗೆ ವಿವಿಧ ಖಾತೆಗಳಿಗೆ ಹಣ ವರ್ಗಾವಣೆಯಾಗಿದೆ. ಇದನ್ನೂ ಓದಿ: ಅನಂತ್‌ ಅಂಬಾನಿ ವಿವಾಹ ಮಹೋತ್ಸವದಲ್ಲಿ ಮೋದಿ ಭಾಗಿ – ನವ ಜೋಡಿಗೆ ಆಶೀರ್ವದಿಸಿದ ಪ್ರಧಾನಿ!

    ಯಾವ ಖಾತೆಯಿಂದ ಎಷ್ಟು?
    1071104000160063 ಖಾತೆ ಮೂಲಕ 1,35,96,500 ರೂ., 1071104000165228 ಮೂಲಕ 1,01,33,750 ರೂ., ಮೂರನೇ ಖಾತೆ 1071104000165501 ಯಿಂದ 10,43,749 ರೂ. ಹಣ ವರ್ಗಾವಣೆಯಾಗಿದೆ. ಒಂದು ಖಾತೆಯಿಂದ 28 ಬಾರಿ, ಮತ್ತೊಂದು ಖಾತೆಯಿಂದ 25 ಬಾರಿ, ಮೂರನೇ ಖಾತೆಯಿಂದ ಒಂದು ಬಾರಿ ಸೇರಿ ಒಟ್ಟು 54 ಬಾರಿ ಹಣ ವರ್ಗಾವಣೆಯಾಗಿದೆ.

    ಪ್ರವಾಸೋದ್ಯಮ ಇಲಾಖೆ ಅನುಮತಿಯಿಲ್ಲದೆ, ಅಧಿಕಾರಿಗಳಿಗೆ ಗೊತ್ತಿಲ್ಲದಂತೆ ಇಲಾಖೆಗೆ ಸಂಬಂಧಿಸಿದ ಹಣವನ್ನು ಆರೋಪಿಗಳು ತಮಗೆ ಬೇಕಾದ ರೀತಿಯಲ್ಲಿ ವರ್ಗಾವಣೆ ಮಾಡಿದ್ದಾರೆ. ಇಲಾಖೆಯ ಹಣ ತೆಗೆದುಕೊಂಡು ಸರಕಾರಕ್ಕೆ ಮೋಸ ಮಾಡಿದ್ದಾರೆ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಇನ್ನು ಮುಂದೆ ಕ್ರೆಡಿಟ್‌ ಕಾರ್ಡ್‌ನಂತೆ ಯುಪಿಐ ಬಳಸಿ- ಇದು ಹೇಗೆ ಕೆಲಸ ಮಾಡುತ್ತೆ?

    ಬಾಗಲಕೋಟೆ ಎಸ್‌ಪಿ  ಅಮರನಾಥ ರೆಡ್ಡಿ

    ಎಸ್‌ಪಿ ಹೇಳಿದ್ದೇನು?
    ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಬಾಗಲಕೋಟೆ ಎಸ್‌ಪಿ  ಅಮರನಾಥ ರೆಡ್ಡಿ, ಪ್ರವಾಸೋದ್ಯಮ ಇಲಾಖೆಯ ಖಾತೆಯಿಂದ ನಿರ್ಮಿತಿ ಕೇಂದ್ರ, ಸಮಾಜ ಕಲ್ಯಾಣ ಇಲಾಖೆಗೂ ದುಡ್ಡು ಹೋಗಿದೆ. ಹಣ ವರ್ಗಾವಣೆ ಬಗ್ಗೆ ಐಡಿಬಿಐ ಬ್ಯಾಂಕ್ ಬಳಿಯೂ ದಾಖಲೆ ಇಲ್ಲ. ಯಾರು ದುರುಪಯೋಗ ಪಡಿಸಿಕೊಂಡಿದ್ದಾರೆ ಎನ್ನುವುದು ತನಿಖೆ ನಂತರ ಗೊತ್ತಾಗಲಿದೆ. ಒಂದು ತಂಡ ರಚಿಸಿ ತನಿಖೆ ನಡೆಸಿದ್ದೇವೆ. ದಾಖಲೆ ಸಂಗ್ರಹಣೆ ಬಳಿಕ ಸತ್ಯಾಸತ್ಯತೆ ಗೊತ್ತಾಗಲಿದೆ.

    ಬ್ಯಾಂಕ್‌ನವರಿಗೆ ನೋಟಿಸ್‌ ನೀಡಲಾಗಿದ್ದು, ಎಷ್ಟು ಖಾತೆಗಳಿಗೆ ಹೋಗಿದೆ ಎನ್ನುವುದನ್ನು ಮಾಹಿತಿ ಕೇಳಿದ್ದೇವೆ. ಬೇರೆ ಬೇರೆ ಇಲಾಖೆಗಳ ಖಾತೆಗಳ ಬಗ್ಗೆಯೂ ಪರಿಶೀಲನೆ ಮಾಡಲಾಗುವುದು. ಯಾರಾದರೂ ದೂರು ನೀಡಿದರೆ ಖಂಡಿತ ತನಿಖೆ ನಡೆಸುತ್ತೇವೆ. ಪ್ರವಾಸೋದ್ಯಮ ಇಲಾಖೆಯಲ್ಲಿ 2021ರಿಂದ ಇಲ್ಲಿಯವರೆಗೂ ಬಂದ ಡಿಡಿಗಳ ಬಳಿಯೂ ಮಾಹಿತಿ ಪಡೆಯಲಿದ್ದೇವೆ. ಬ್ಯಾಂಕ್‌ನಿಂದ ವಿವರಣೆ ಬಂದ ಬಂದ ಮೇಲೆ ವೈಯಕ್ತಿಕವಾಗಿ ನೋಟಿಸ್ ನೀಡಲಿದ್ದೇವೆ. ಬೇರೆ ಖಾತೆಗಳಿಗೆ ಹೋಗಿದೆಯೋ, ಬೇರೆ ಇಲಾಖೆ ಖಾತೆಗಳಿಗೆ ಹೋಗಿದೆಯೋ ಎಂಬುದನ್ನು ಪರಿಶೀಲನೆ‌ ಮಾಡುತ್ತೇವೆ ಎಂದಿದ್ದಾರೆ.

     

  • ವಾಲ್ಮೀಕಿ ನಿಗಮ ಗೋಲ್ಮಾಲ್‌ಗೆ ಸ್ಪೋಟಕಆಡಿಯೋ ಸಾಕ್ಷ್ಯ – ನಾಗೇಂದ್ರ ಕಡೆಯವರಿಂದಲೇ ಅಕ್ರಮ ಆರೋಪ

    ವಾಲ್ಮೀಕಿ ನಿಗಮ ಗೋಲ್ಮಾಲ್‌ಗೆ ಸ್ಪೋಟಕಆಡಿಯೋ ಸಾಕ್ಷ್ಯ – ನಾಗೇಂದ್ರ ಕಡೆಯವರಿಂದಲೇ ಅಕ್ರಮ ಆರೋಪ

    ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (Karnataka Maharshi Valmiki Scheduled Tribe Development Corporation Ltd) ಬಹುಕೋಟಿ ಅವ್ಯವಹಾರ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಹಗರಣಕ್ಕೆ ಸಂಬಂಧಿಸಿದಂತೆ ಇದೀಗ ಬಯಲಾದ ಆಡಿಯೋ, ವೀಡಿಯೋ ಸಾಕ್ಷ್ಯಗಳು ಹಗರಣದ ಕರ್ಮಕಾಂಡವನ್ನು ಬಟಾಬಯಲು ಮಾಡಿವೆ.

    ಅಧೀಕ್ಷಕ ಚಂದ್ರಶೇಖರ್ (Chandrashekar) ಆತ್ಮಹತ್ಯೆಗೆ (Suicide) 3 ದಿನ ಮೊದಲು ಅಂದ್ರೆ ಮೇ 24ರಂದು ನಿಗಮದ ಎಂಡಿ ಪದ್ಮನಾಭ್ (MD Padmanabhan) ಮತ್ತು ಲೆಕ್ಕಪರಿಶೋಧಕ ಪರಶುರಾಮ್ (Parashuram) ಹೋಟೆಲ್ ಒಂದರಲ್ಲಿ ರಹಸ್ಯ ಸಭೆ ನಡೆಸಿದ್ದರು. ಹಗರಣದಲ್ಲಿ ಯಾರ‍್ಯಾರು ಪಾಲುದಾರರು? ಹಗರಣ ಬಯಲಾದ್ರೆ ಏನಾಗುತ್ತೆ? ಸಿಬಿಐ ತನಿಖೆ ನಡೆದರೆ ಏನಾಗುತ್ತದೆ? ಸ್ಥಳೀಯವಾಗಿಯೇ ತನಿಖೆ ನಡೆಸಿದರೆ ಏನಾಗುತ್ತೆ? ಎಂಬ ಬಗ್ಗೆ ಪದ್ಮನಾಭ್-ಪರಶುರಾಮ್ ಮಾತಾಡಿಕೊಂಡಿದ್ದರು.

    ಎಂಡಿ ತಮ್ಮನ್ನು ಹಗರಣದಲ್ಲಿ ಸಿಲುಕಿಸಬಹುದು ಎಂಬ ಭಯಕ್ಕೆ ಇದೆಲ್ಲವನ್ನು ಅಧೀಕ್ಷಕ ಪರಶುರಾಮ್ ರೆಕಾರ್ಡ್ ಮಾಡಿಕೊಂಡಿದ್ದರು. ಇದೀಗ ಇದೇ ಆಡಿಯೋ-ವೀಡಿಯೋ ಔಟ್ ಆಗಿದ್ದು, ಭಾರೀ ಸಂಚಲನಕ್ಕೆ ಕಾರಣವಾಗಿದೆ. ಇದನ್ನೂ ಓದಿ: ರಾಮನಗರ ಜಿಲ್ಲೆ ಹೆಸರು ಬದಲಾವಣೆ ಹಿಂದೆ ತುಷ್ಟೀಕರಣ ಅಜೆಂಡಾ: ನಿಖಿಲ್ ಕುಮಾರಸ್ವಾಮಿ

     

    ಆಡಿಯೋ ಸಾಕ್ಷ್ಯ 1 – ಸಚಿವ ನಾಗೇಂದ್ರಗೆ ಗೊತ್ತು!
    ಪರಶುರಾಮ್, ಲೆಕ್ಕ ಪರಿಶೋಧಕ: ಮಿನಿಸ್ಟರ್ ಗಮನಕ್ಕೆ ಇಲ್ವಾ ಸರ್ ಇದು. ನೆಕ್ಕಂಟಿ ನಾಗರಾಜ್ ಅಕೌಂಟ್ ಓಪನ್ ಮಾಡಿರೋದು.
    ಪದ್ಮನಾಭ, ಎಂಡಿ: ಅದು ಗೊತ್ತು ಅವರಿಗೆ, ಅವರೇ ಅಲ್ವಾ, ಎಲ್ಲರನ್ನು ಕರೆಸಿ, ಮಾತನಾಡಿದ್ದು.
    ಪರಶುರಾಮ್, ಲೆಕ್ಕ ಪರಿಶೋಧಕ: ಅಕೌಂಟ್ ಓಪನ್ ಮಾಡೋವಾಗ ಇದ್ದರಲ್ಲ.

    ಆಡಿಯೋ ಸಾಕ್ಷ್ಯ 2 – ಅಧ್ಯಕ್ಷರಿಗೆ ಹೇಳ್ಬೇಡಿ ರಾದ್ದಾಂತ ಆಗುತ್ತೆ!
    ಪರಶುರಾಮ್, ಲೆಕ್ಕ ಪರಿಶೋಧಕ : ಬ್ಯಾಂಕ್‌ನವರು ಈಗ ಕೇಸ್ ಮಾಡ್ತಿವಲ್ಲ ನಮ್ಮ ದುಡ್ಡು ನಮಗೆ ಕೊಡ್ತಾರಾ ಅವರು ಅಂತಾ? ಅಧ್ಯಕ್ಷರಿಗೆ ಹೇಳೋದಾ ಬೇಡ್ವಾ ಅಂತಾ.
    ಪದ್ಮನಾಭ, ಎಂಡಿ : ಹೇಳಿದ್ರೆ ದೊಡ್ಡ ರಾದ್ದಾಂತ ಮಾಡ್ತಾರೆ ಈಗ. ಸೋಮವಾರ, ಮಂಗಳವಾರ, ಬುಧವಾರ ಮೂರು ದಿನ ಬಿಡೋಣ ಈಗ. ಮ್ಯಾನೇಜ್ ಮಾಡಿ ಕಳಿಸಿ. ಅವನಿಗೂ ಅಷ್ಟೇ, ಆಯ್ತಪ್ಪ ಎಲ್ಲಾ ಪ್ರಿಂಟ್ ತೆಗೆಯಕ್ಕೆ ಹೇಳಿದ್ದೀನಿ ಕೊಡ್ತಿನಿ ಅಂತಾ ಹೇಳಿ ಕಳಿಸಿ. ಇದನ್ನೂ ಓದಿ: ಮುಡಾ ಭ್ರಷ್ಟಾಚಾರ ಪ್ರಕರಣ – ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ದಾಖಲು

     

    ಆಡಿಯೋ ಸಾಕ್ಷ್ಯ 3 ಹಗರಣ ಬಯಲಾದ್ರೆ ಏನ್ ಹೇಳ್ಬೇಕು?
    ಪರಶುರಾಮ್, ಲೆಕ್ಕ ಪರಿಶೋಧಕ : ನಿಮ್ಮ ಕಾಂಟ್ಯಾಕ್ಟ್‌ನಲ್ಲಿ ಯಾರು ಇದ್ದಾರೆ ಸಾರ್?
    ಪದ್ಮನಾಭ, ಎಂಡಿ : ಅದೇ ನಾಗರಾಜ್ ಬಾಮೈದ
    ಪರಶುರಾಮ್, ಲೆಕ್ಕ ಪರಿಶೋಧಕ : ನಾನು ಅವತ್ತೇ ಹೇಳಿದ್ದೆ ಸಾರ್, ಬೇಡ ಬೇಡ ಅಂತಾ. ಈ ಸೂ… ಮಕ್ಕಳು ಬಂದ್ರಲ್ಲ.
    ಪದ್ಮನಾಭ, ಎಂಡಿ: ನಾವು ಅದನ್ನು ಹೇಳಬಾರದು. ಒಂದೇ ಮಾತಲ್ಲಿ ಹೇಳಬೇಕು. ಮಿನಿಸ್ಟರ್ ಆಫೀಸ್‌ನಿಂದ ಹೇಳಿದ್ರು. ನಾಗರಾಜ್ ಕಡೆಯಿಂದ ಒತ್ತಡ ಬಂತು. ನಾವು ಆಯಿತು ಅಂತಾ, ಇದ್ದ ಅಕೌಂಟ್ ಟ್ರಾನ್ಸ್‌ಫರ್‌ ಮಾಡಿಕೊಟ್ವಿ.

  • ಶರಣಪ್ರಕಾಶ್ ಪಾಟೀಲ್, ದದ್ದಲ್ ರಾಜೀನಾಮೆಗೆ ಆಗ್ರಹ ; ಜುಲೈ 3ರಂದು ಸಿಎಂ ಮನೆಗೆ ಮುತ್ತಿಗೆ -ವಿಜಯೇಂದ್ರ

    ಶರಣಪ್ರಕಾಶ್ ಪಾಟೀಲ್, ದದ್ದಲ್ ರಾಜೀನಾಮೆಗೆ ಆಗ್ರಹ ; ಜುಲೈ 3ರಂದು ಸಿಎಂ ಮನೆಗೆ ಮುತ್ತಿಗೆ -ವಿಜಯೇಂದ್ರ

    ಶಿವಮೊಗ್ಗ: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ (Valmiki Corporation Scam ) ಆಗಿರುವ ಬೃಹತ್ ಹಗರಣ, ಭ್ರಷ್ಟಾಚಾರದ ಸಂಬಂಧ ಸಿಎಂ (CM Siddaramaiah) ರಾಜೀನಾಮೆಗೆ ಆಗ್ರಹಿಸಿ ಜುಲೈ 3ರಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ (BY Vijayendra) ಅವರು ಹೇಳಿದರು.

    ಶಿವಮೊಗ್ಗದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, 3ರಂದು ಬಿಜೆಪಿಯ ಎಲ್ಲ ಶಾಸಕರು, ವಿಧಾನಪರಿಷತ್ ಸದಸ್ಯರು ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಹಾಕುತ್ತೇವೆ ಎಂದು ವಿಜಯೇಂದ್ರ ನುಡಿದರು. ಇದನ್ನೂ ಓದಿ: ಜನಪ್ರಿಯ ವಾಹಿನಿಯಲ್ಲಿ ಧಾರಾವಾಹಿ ಆಯ್ತು ರೇಣುಕಾಸ್ವಾಮಿ ಮರ್ಡರ್

    ಬಿಜೆಪಿ ತೀವ್ರ ಹೋರಾಟದ ಬಳಿಕ ಸಚಿವ ನಾಗೇಂದ್ರ (Nagendra ರಾಜೀನಾಮೆ ಕೊಟ್ಟಿದ್ದಾರೆ. ಆದರೆ ಎಸ್‍ಐಟಿ ಇಲ್ಲಿನವರೆಗೆ ನಾಗೇಂದ್ರರನ್ನು ವಿಚಾರಣೆಗೆ ಒಳಪಡಿಸಿಲ್ಲ. ನಮ್ಮ ಹೋರಾಟದ ಮುಂದುವರೆದ ಭಾಗವಾಗಿ ಸಿಎಂ ಮನೆಗೆ ಮುತ್ತಿಗೆ ಹಾಕುತ್ತೇವೆ. ಸಚಿವ ಡಾ.ಶರಣಪ್ರಕಾಶ್ ಪಾಟೀಲ್, ನಿಗಮದ ಅಧ್ಯಕ್ಷ ದದ್ದಲ್, ಅಷ್ಟೇ ಅಲ್ಲದೇ ಮಾನ್ಯ ಮುಖ್ಯಮಂತ್ರಿಗಳೂ ಅವರ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಾಗಿದೆ ಎಂದು ವಿಜಯೇಂದ್ರ ಆಗ್ರಹಿಸಿದರು.

    ಪರಿಶಿಷ್ಟ ಪಂಗಡಕ್ಕೆ ಮೀಸಲಿಟ್ಟ ಹಣವನ್ನು ಲೂಟಿ ಮಾಡಿದ್ದಾರೆ. ಸ್ವತಃ ಮುಖ್ಯಮಂತ್ರಿಗಳೇ ಹಣಕಾಸಿನ ಸಚಿವರಾಗಿದ್ದಾರೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಅವರ ಗಮನಕ್ಕೆ ಬಾರದೇ ಇಷ್ಟು ದೊಡ್ಡ 187 ಕೋಟಿ ರೂ.ಗಳ ಹಗರಣ ನಡೆಯಲು ಅಸಾಧ್ಯ. ನಿನ್ನೆ ಬಿಜೆಪಿ ರಾಜ್ಯಾದ್ಯಂತ ಹೋರಾಟ ಮಾಡಿದೆ; ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಾಗಿದೆ. ಈ ಹಗರಣದ ವಿರುದ್ಧ ನಮ್ಮ ಹೋರಾಟ ನಿರಂತರವಾಗಿ ನಡೆದಿದೆ. ಅಧಿಕಾರಿ ಚಂದ್ರಶೇಖರ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಡೆತ್ ನೋಟಿನಲ್ಲಿ ಹಲವಾರು ಅಂಶಗಳು ಇವೆ. ಆದರೆ ರಾಜ್ಯ ಸರಕಾರ ಈ ಪ್ರಕರಣವನ್ನು ಇನ್ನೂ ಗಂಭೀರವಾಗಿ ಪರಿಗಣಿಸಿಲ್ಲ ಎಂದು ಟೀಕಿಸಿದರು.

     

  • ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗರಣ – ತನಿಖೆಗೆ ಸಿಬಿಐ ಬಳಿಕ ED ಎಂಟ್ರಿ!

    ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗರಣ – ತನಿಖೆಗೆ ಸಿಬಿಐ ಬಳಿಕ ED ಎಂಟ್ರಿ!

    ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣ (Valmiki Corporation Corruption Scam) ಪ್ರಕರಣಕ್ಕೆ ಈಗ ಸಿಬಿಐ ಬಳಿಕ ಜಾರಿ ನಿರ್ದೇಶನಾಲಯ (ED) ಎಂಟ್ರಿ ಆಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

    ಸಿಬಿಐ ಬಳಿಕ ಜಾರಿ ನಿರ್ದೇಶನಾಲಯ ಎಂಟ್ರಿ ಆಗಿದ್ದು, ಯೂನಿಯನ್ ಬ್ಯಾಂಕ್ (Union Bank Of India) ನೀಡಿದ್ದ ದೂರು ಹಾಗೂ ಅಕ್ರಮ ಹಣ ವರ್ಗಾವಣೆ ನಡೆದಿರುವ ಬಗ್ಗೆ ಸಿಬಿಐನಿಂದ ಮಾಹಿತಿ ಪಡೆದುಕೊಂಡಿದೆ. ಜೊತೆಗೆ ಸಿಬಿಐ ದಾಖಲಿಸಿರುವ ಎಫ್‌ಐಆರ್‌ ಬಗ್ಗೆಯೂ ಮಾಹಿತಿ ಪಡೆದಿದ್ದು, ಮುಂದಿನ ವಾರದಲ್ಲೇ ಇಡಿ ಇನ್ನಷ್ಟು ತನಿಖೆಯೊಂದಿಗೆ ಎಫ್‌ಐಆರ್‌ ದಾಖಲಿಸುವ ಸಾಧ್ಯತೆಯಿದೆ ಎಂದು ಉನ್ನತ ಮೂಲಗಳು ʻಪಬ್ಲಿಕ್‌ ಟಿವಿʼಗೆ (Public TV) ಮಾಹಿತಿ ನೀಡಿವೆ. ಇದನ್ನೂ ಓದಿ: Exclusive: ನಮ್ಮ ನಾಯಕರು ಸೂಚಿಸಿದ್ರೆ ರಾಜೀನಾಮೆ ಕೊಡಲು ಸಿದ್ಧ- ವಾಲ್ಮೀಕಿ ನಿಗಮದ ಅಧ್ಯಕ್ಷ ದದ್ದಲ್

    ಈಗಾಗಲೇ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ (Karnataka Maharshi Valmiki Scheduled Tribe Development Corporation Ltd) ನಡೆದಿರುವ ಹಗರಣಕ್ಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂನಿಯನ್‌ ಬ್ಯಾಂಕ್‌ ತನ್ನ ಮೂವರು ಸಿಬ್ಬಂದಿಯನ್ನು ಅಮಾನತುಗೊಳಿಸಿದೆ. ಖಾತೆಗಳಲ್ಲಿನ ವಂಚನೆಯ ವಹಿವಾಟಿನ ಬಗ್ಗೆ ಬ್ಯಾಂಕ್ ಅರಿವು ಹೊಂದಿದೆ. ಅಕ್ರಮಗಳು ಬೆಳಕಿಗೆ ಬಂದಾಗ ಬ್ಯಾಂಕ್ ತಕ್ಷಣವೇ ಪ್ರಶ್ನಾರ್ಹ ವಹಿವಾಟುಗಳನ್ನು ವಂಚನೆ ಎಂದು ಘೋಷಿಸಿದೆ. ಸಂಪೂರ್ಣ ತನಿಖೆ ಮತ್ತು ಅಪರಾಧಿಗಳ ಪತ್ತೆಗಾಗಿ ಮೇ 30 ರಂದು ಕೇಂದ್ರೀಯ ತನಿಖಾ ದಳಕ್ಕೆ (CBI) ದೂರು ನೀಡಿದ್ದೇವೆ. ಮುಂದಿನ ವಿಚಾರಣೆಗಾಗಿ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಈ ಸಮಸ್ಯೆಯನ್ನು ನ್ಯಾಯಯುತವಾಗಿ ಮತ್ತು ತ್ವರಿತವಾಗಿ ಪರಿಹರಿಸಲು ನಾವು ಅಧಿಕಾರಿಗಳಿಗೆ ಸಂಪೂರ್ಣ ಸಹಕಾರ ನೀಡುತ್ತೇವೆ ಮತ್ತು ಅಂತಹ ಘಟನೆಗಳನ್ನು ತಡೆಯಲು ನಾವು ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ ಎಂದು ಹೇಳಿದೆ. ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಆತ್ಮಹತ್ಯೆ – ಅಧಿಕಾರಿಗಳು, ಬ್ಯಾಂಕ್‌ ಉದ್ಯೋಗಿ ವಿರುದ್ಧ ಎಫ್‌ಐಆರ್‌

    ಏನಿದು ಪ್ರಕರಣ?
    ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್‌ (Chandrashekaran) ಇತ್ತೀಚೆಗೆ ಶಿವಮೊಗ್ಗದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೂ ಮುನ್ನ ಬರೆದಿದ್ದ ಡೆತ್‌ನೋಟ್‌ನಲ್ಲಿ ಮೂವರು ಹೆಸರು ಹಾಗೂ ಬಹುಕೋಟಿ ಹಗರಣ ನಡೆದಿರುವ ಬಗ್ಗೆ ಉಲ್ಲೇಖಿಸಿದ್ದರು. ಈ ಬೆನ್ನಲ್ಲೇ ಬ್ಯಾಂಕ್‌ನಿಂದ 94 ಕೋಟಿ ರೂ. ಅಕ್ರಮವಾಗಿ ವರ್ಗಾವಣೆಯಾಗಿದೆ. ಹಣ ವರ್ಗಾವಣೆಯಾದ ಬಗ್ಗೆ ಯಾವುದೇ ಮೇಲ್‌, ಮೆಸೇಜ್‌ ಬಂದಿಲ್ಲ. ಬ್ಯಾಂಕ್‌ ಸಿಬ್ಬಂದಿಯಿಂದಲೇ ನಕಲಿ ದಾಖಲೆ ಸೃಷ್ಟಿಸಿ ವಂಚನೆ ಎಸಗಿದ್ದಾರೆ ಎಂದು ಆರೋಪಿಸಿ ನಿಗಮದ ಪ್ರಧಾನ ವ್ಯವಸ್ಥಾಪಕ ರಾಜಶೇಖರ್ ಅವರು ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಬ್ಯಾಕ್‌ನ 6 ಮಂದಿ ಸಿಬ್ಬಂದಿ ವಿರುದ್ಧ ಹೈಗ್ರೌಂಡ್ಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ಇದನ್ನೂ ಓದಿ: ವಾಲ್ಮೀಕಿ ನಿಗಮದಲ್ಲಿ 94 ಕೋಟಿ ಗೋಲ್ಮಾಲ್‌ – ಯೂನಿಯನ್‌ ಬ್ಯಾಂಕ್‌ನಿಂದಲೇ ವಂಚನೆ, ಕೇಸ್‌ ದಾಖಲು

  • ವಾಲ್ಮೀಕಿ ನಿಗಮದಲ್ಲಿ ಹಗರಣ – ಹೈದರಾಬಾದ್‌ ಸಹಕಾರಿ ಬ್ಯಾಂಕ್‌ನಲ್ಲಿದ್ದ 45 ಕೋಟಿ ಹಣ ಸೀಝ್‌

    ವಾಲ್ಮೀಕಿ ನಿಗಮದಲ್ಲಿ ಹಗರಣ – ಹೈದರಾಬಾದ್‌ ಸಹಕಾರಿ ಬ್ಯಾಂಕ್‌ನಲ್ಲಿದ್ದ 45 ಕೋಟಿ ಹಣ ಸೀಝ್‌

    ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ (Karnataka Maharshi Valmiki Scheduled Tribe Development Corporation Ltd) ಅಕ್ರಮವಾಗಿ ಸಹಕಾರಿ ಬ್ಯಾಂಕ್‌ಗೆ ವರ್ಗಾವಣೆಯಾಗಿದ್ದ 45 ಕೋಟಿ ರೂ. ಹಣವನ್ನು ವಿಶೇಷ ತನಿಖಾ ತಂಡ (SIT) ಸೀಝ್‌ ಮಾಡಿದೆ.

    ನಿಗಮದಿಂದ ಹೈದರಾಬಾದ್‌ನಲ್ಲಿರುವ ಫಸ್ಟ್ ಫೈನಾನ್ಸ್ ಸಹಕಾರಿ ಬ್ಯಾಂಕಿಗೆ ಒಟ್ಟು 94.73 ಕೋಟಿ ರೂ. ವರ್ಗಾವಣೆಯಾಗಿತ್ತು. ಈಗಾಗಲೇ ಫಸ್ಟ್ ಫೈನಾನ್ಸ್ ಸಹಕಾರಿ ಬ್ಯಾಂಕ್ ಮಾಲೀಕ ಸತ್ಯನಾರಾಯಣ್‌ ಅವರನ್ನು ಬಂಧಿಸಲಾಗಿದೆ.  ಇದನ್ನೂ ಓದಿ: ಅಣ್ಣಾಮಲೈ ಫೋಟೋ ಹಾಕಿ ನಡು ರಸ್ತೆಯಲ್ಲಿ ಮೇಕೆ ತಲೆ ಕತ್ತರಿಸಿ ಸಂಭ್ರಮಿಸಿದ ಡಿಎಂಕೆ ಕಾರ್ಯಕರ್ತರು

     

    ಸಹಕಾರಿ ಬ್ಯಾಂಕ್‌ನ 18 ನಕಲಿ ಖಾತೆಗಳಿಗೆ ವರ್ಗಾವಣೆಯಾಗಿದ್ದ 94.73 ಕೋಟಿ ರೂ ಪೈಕಿ ಬಹುಪಾಲು ಹಣ ಡ್ರಾ ಮಾಡಲಾಗಿದೆ. ಉಳಿದ ಹಣ ಎಲ್ಲಿಗೆ ಹೋಗಿದೆ ಎಂಬುದರ ಕುರಿತು ಎಸ್‌ಐಟಿ ತನಿಖೆ ಮುಂದುವರಿಸಿದೆ.

    ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪದ್ಮನಾಭ, ಪರಶುರಾಮ್, ನೆಕ್ಕುಂಟಿ ನಾಗರಾಜ್, ನಾಗೇಶ್ವರ ರಾವ್, ಸತ್ಯನಾರಾಯಣ ಬಂಧನ ಮಾಡಿದ ಎಸ್‌ಐಟಿ ಕಸ್ಟಡಿಗೆ ಪಡೆದು ವಿಚಾರಣೆ ನಡೆಸುತ್ತಿದೆ. ಇದನ್ನೂ ಓದಿ: ವಾಲ್ಮೀಕಿ ನಿಗಮದಲ್ಲಿ ಕೋಟ್ಯಂತರ ಹಗರಣ – ಇಂದೇ ನಾಗೇಂದ್ರ ರಾಜೀನಾಮೆ ಸಾಧ್ಯತೆ!

     

  • ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಶನಿವಾರ ರಾಜ್ಯಾದ್ಯಂತ ಯುವಮೋರ್ಚಾದಿಂದ ರಸ್ತೆತಡೆ

    ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಶನಿವಾರ ರಾಜ್ಯಾದ್ಯಂತ ಯುವಮೋರ್ಚಾದಿಂದ ರಸ್ತೆತಡೆ

    ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (Karnataka Maharshi Valmiki Scheduled Tribe Development Corporation Ltd) 187 ಕೋಟಿ ರೂ.ಹಗರಣಕ್ಕೆ ಸಂಬಂಧಿಸಿ ರಾಜ್ಯದ ಯುವಜನ ಸೇವೆ, ಕ್ರೀಡೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಾದ ಬಿ.ನಾಗೇಂದ್ರ (Nagendra) ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ (BJP Yuva Morcha) ವತಿಯಿಂದ ನಾಳೆ ಬೆಳಗ್ಗೆ ರಾಜ್ಯಾದ್ಯಂತ ಬಿಜೆಪಿ ರಸ್ತೆ ತಡೆ ಜಾಥಾ ಇಟ್ಟುಕೊಂಡಿದೆ.  ಇದನ್ನೂ ಓದಿ: 94 ಕೋಟಿ ಹಗರಣ – ಸಿಬಿಐಗೆ ದೂರು ನೀಡಿ ಮೂವರನ್ನು ಅಮಾನತುಗೊಳಿಸಿದ ಯೂನಿಯನ್‌ ಬ್ಯಾಂಕ್‌

     

    ಸಚಿವ ನಾಗೇಂದ್ರ ಅವರ ಮೌಖಿಕ ಸೂಚನೆ ಮೇರೆಗೆ ಈ ಬೃಹತ್ ಹಗರಣ (Scam) ನಡೆದಿದೆ. ಅಲ್ಲದೆ ನಿಗಮದ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಡೆತ್ ನೋಟಿನಲ್ಲೂ ಸಚಿವರ ಹೆಸರನ್ನು ಉಲ್ಲೇಖಿಸಿದ್ದಾರೆ. ಆದರೂ, ರಾಜ್ಯ ಸರಕಾರ ಅವರ ರಕ್ಷಣೆಗೆ ನಿಂತಿದೆ ಎಂದು  ಹೇಳಿದೆ. ಇದನ್ನೂ ಓದಿ: ಡೆತ್‌ನೋಟ್‌ನಲ್ಲಿರುವ ನಾಗರಾಜ್‌ ಜೊತೆ ನಾಗೇಂದ್ರಗೆ ವ್ಯವಹಾರ ಇದೆ: ಸಿಟಿ ರವಿಯಿಂದ ಫೋಟೋ ರಿಲೀಸ್

    ಮುಖ್ಯಮಂತ್ರಿಗಳು ಕೂಡಲೇ ಈ ಬ್ರಹ್ಮಾಂಡ ಭ್ರಷ್ಟಾಚಾರ ಮಾಡಿದ ಸಚಿವರ ನ್ನು ಸಂಪುಟದಿಂದ ವಜಾ ಮಾಡಬೇಕೆಂದು ಯುವಾ ಮೋರ್ಚಾ ಆಗ್ರಹಿಸಿದೆ.