Tag: ಹಣ

  • ಬೆಳಗಾವಿ | 2,000 ಹಣಕ್ಕಾಗಿ ಹರಿಯಿತು ಯುವಕನ ನೆತ್ತರು

    ಬೆಳಗಾವಿ | 2,000 ಹಣಕ್ಕಾಗಿ ಹರಿಯಿತು ಯುವಕನ ನೆತ್ತರು

    ಬೆಳಗಾವಿ: ಸಾಲವಾಗಿ ಕೊಟ್ಟ ಹಣ ಮರುಪಾವತಿಸದ ಸ್ನೇಹಿತನಿಗೆ (Friend) ತನ್ನ ಸ್ನೇಹಿತನೇ ಚಟ್ಟ ಕಟ್ಟಿ ಪೊಲೀಸರಿಗೆ ಶರಣಾದ ಘಟನೆ ಬೆಳಗಾವಿಯಲ್ಲಿ (Belagavi) ನಡೆದಿದೆ.

    ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಗಿರಿಯಾಲ ಗ್ರಾಮದಲ್ಲಿ ಘಟನೆ ನಡೆದಿದ್ದು ಘಟನೆಯಿಂದ ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ. ಗಿರಿಯಾಲ‌ ಗ್ರಾಮದ ಮಂಜುನಾಥ ಗೌಡರ (30) ಕೊಲೆಯಾದ ದುರ್ದೈವಿ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ರಸ್ತೆಗಳಲ್ಲಿ ಬಟರ್ ಫ್ಲೈ ಲೈಟ್ ಹಾಕಿದ್ದೇವೆಂದು 73 ಲಕ್ಷ ಹಣ ಪಡೆದು ಗುಳುಂ; ಗೋಲ್ಮಾಲ್ ಬಹಿರಂಗ

    ಕಳೆದ ವಾರ ಸ್ನೇಹಿತ ದಯಾನಂದ ಗುಂಡ್ಲೂರನಿಂದ 2 ಸಾವಿರ ಹಣ ಸಾಲವನ್ನಾಗಿ ಮಂಜುನಾಥ ಪಡೆದಿದ್ದ. ಒಂದು ವಾರದೊಳಗೆ ಹಣ ಮರಳಿಸುವುದಾಗಿ ಹೇಳಿದ್ದ. ಅವಧಿ ಮುಗಿದ ಹಿನ್ನೆಲೆಯಲ್ಲಿ ಸಾಲ ಕೇಳಲು ದಯಾನಂದ ಮುಂದಾಗಿದ್ದ. ಇದೇ ಹಣದ ವಿಚಾರಕ್ಕೆ ಮಂಜುನಾಥ ‌ಹಾಗೂ ದಯಾನಂದ ಮಧ್ಯೆ ಜಗಳ ಆಗಿದೆ. ಇಬ್ಬರ ಜಗಳ ವಿಕೋಪಕ್ಕೆ ತಿರುಗಿ ಮಂಜುನಾಥ‌ನನ್ನು ದಯಾನಂದ ಕೊಲೆ ಮಾಡಿದ್ದಾನೆ.

    ರಾತ್ರಿ ನಡೆದ ಜಗಳದ ಸಿಟ್ಟಿನಲ್ಲೇ ಬೆಳಗಿ‌ನ ಜಾವ ಕೊಡ್ಲಿಯಿಂದ ಹೊಡೆದು ಮಂಜುನಾಥ‌ನ ಹತ್ಯೆ ಮಾಡಲಾಗಿದೆ. ತೀವ್ರ ರಕ್ತಸ್ರಾವದಿಂದ ಆಸ್ಪತ್ರೆಗೆ ಸಾಗಿಸುವ ಮುನ್ನವೇ ಮಂಜುನಾಥ ಗೌಡರ ಉಸಿರು ಚಲ್ಲಿದ್ದಾನೆ. ಮಂಜುನಾಥ ಗೌಡರ ಸಾವನಪ್ಪಿರುವ ಸುದ್ದಿ ತಿಳಿದು ಪೊಲೀಸರಿಗೆ ಸ್ವಯಂ ಪ್ರೇರಿತವಾಗಿ ಹೋಗಿ ದಯಾನಂದ ಶರಣಾಗಿದ್ದಾನೆ. ಇದನ್ನೂ ಓದಿ: ಬ್ರಿಟನ್‌ನಲ್ಲಿ ಭಾರತೀಯ ಮೂಲದ 20ರ ಯುವತಿ ಮೇಲೆ ಅತ್ಯಾಚಾರ

  • ಬೀದರ್ | ಬಸ್‌ನಲ್ಲೇ ಬಿಟ್ಟು ಹೋಗಿದ್ದ 1.60 ಲಕ್ಷ ಹಣ ಪ್ರಯಾಣಿಕನಿಗೆ ಮರಳಿಸಿದ ಸಾರಿಗೆ ಸಿಬ್ಬಂದಿ

    ಬೀದರ್ | ಬಸ್‌ನಲ್ಲೇ ಬಿಟ್ಟು ಹೋಗಿದ್ದ 1.60 ಲಕ್ಷ ಹಣ ಪ್ರಯಾಣಿಕನಿಗೆ ಮರಳಿಸಿದ ಸಾರಿಗೆ ಸಿಬ್ಬಂದಿ

    ಬೀದರ್: ಪ್ರಯಾಣ ಮಾಡುವಾಗ ಬಸ್‌ನಲ್ಲೇ ಬಿಟ್ಟು ಹೋಗಿದ್ದ 1.60ಲಕ್ಷ ಹಣವನ್ನು ಪ್ರಯಾಣಿಕನಿಗೆ ಮರಳಿ ನೀಡಿ ಕಂಡಕ್ಟರ್ ಮತ್ತು ಚಾಲಕ ಮಾನವೀಯತೆ ಮೆರೆದ ಘಟನೆ ಬೀದರ್‌ನಲ್ಲಿ (Bidar) ನಡೆದಿದೆ.

    ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಭಾಟಸಾಂಗ್ವಿ ಗ್ರಾಮದ ಬಳಿ ಈ ಘಟನೆ ನಡೆದಿದೆ. 1.60 ಲಕ್ಷ ರೂ. ಬಸ್‌ನಲ್ಲೇ ಬಿಟ್ಟು ಹೋದ ವಿಷಯ ತಿಳಿದು ಕರ್ತವ್ಯ ನಿರತ ಸಾರಿಗೆ ಬಸ್ ನಿರ್ವಾಹಕರಾದ ಸಿದ್ರಾಮ್ ಮತ್ತು ಚಾಲಕರಾದ ಹನೀಪ್ ಗ್ರಾಮಕ್ಕೆ ಹೋಗಿ ಹಣದ ಚೀಲ ಮರಳಿಸಿ ಮಾನವೀಯತೆ ಮೆರೆದಿದ್ದಾರೆ.ಇದನ್ನೂ ಓದಿ: ಮೈದುನನ ಜೊತೆ ಮಲಗೋಕೆ ಒತ್ತಾಯಿಸ್ತಿದ್ರು, ವರದಕ್ಷಿಣೆಗಾಗಿ ಚಿತ್ರಹಿಂಸೆ ನೀಡಿದ್ದಾರೆ – ವಿಡಿಯೋ ಮಾಡಿಟ್ಟು ಗೃಹಿಣಿ ಆತ್ಮಹತ್ಯೆ

    ಗ್ರಾಮಕ್ಕೆ ತೆರಳಿ ವಯೋವೃದ್ಧನಿಗೆ ಹಣ ವಾಪಸ್ ನೀಡಿದ ನಿರ್ವಾಹಕ ಮತ್ತು ಚಾಲಕನ ಪ್ರಾಮಾಣಿಕತೆಗೆ ಜಿಲ್ಲೆಯ ಜನರು ಶ್ಲಾಘಿಸಿದ್ದಾರೆ.

  • ಲೋಕಾಯುಕ್ತ ಡಿವೈಎಸ್‌ಪಿ ಹೆಸರಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಬೆದರಿಸಿ ಹಣಕ್ಕೆ ಬೇಡಿಕೆ – ಆರೋಪಿ ಅರೆಸ್ಟ್

    ಲೋಕಾಯುಕ್ತ ಡಿವೈಎಸ್‌ಪಿ ಹೆಸರಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಬೆದರಿಸಿ ಹಣಕ್ಕೆ ಬೇಡಿಕೆ – ಆರೋಪಿ ಅರೆಸ್ಟ್

    ರಾಮನಗರ: ಲೋಕಾಯುಕ್ತ ಡಿವೈಎಸ್‌ಪಿ (Lokayukta DySP) ಹೆಸರಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಬೆದರಿಸಿ ಹಣಕ್ಕೆ (Money) ಬೇಡಿಕೆಯಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ರಾಮನಗರದ (Ramanagara) ಐಜೂರು ಪೊಲೀಸರು (Ijoor Police) ಬಂಧಿಸಿದ್ದಾರೆ.

    ಮುರೇಗಪ್ಪ ಬಂಧಿತ ಆರೋಪಿ. ಮಾಗಡಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗೆ ಕರೆ ಮಾಡಿದ್ದ ಮುರೇಗಪ್ಪ ಲೋಕಾಯುಕ್ತ ಅಧಿಕಾರಿ ಎಂದು ಹೇಳಿ ಹಣಕ್ಕೆ ಬೇಡಿಕೆಯಿಟ್ಟಿದ್ದ. ಈ ಸಂಬಂಧ ಸಿಡಿಪಿಒ ಅಧಿಕಾರಿ ಸುರೇಂದ್ರ ಐಜೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಐಜೂರು ಪೊಲೀಸರು ಕಾರ್ಯಾಚರಣೆ ನಡೆಸಿ ಮಹಾರಾಷ್ಟçದ ಕೊಲ್ಲಾಪುರದಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಭಾರತಕ್ಕೆ ಏಷ್ಯಾ ಕಪ್‌ ನೀಡದ ಸಚಿವ ನಖ್ವಿಗೆ ಪಾಕ್‌ನಲ್ಲಿ ಚಿನ್ನದ ಪದಕ ನೀಡಿ ಸನ್ಮಾನಕ್ಕೆ ನಿರ್ಧಾರ

    ಆರೋಪಿ ಮುರೇಗಪ್ಪ ಮೇಲೆ 50ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಬಂಧಿತ ಆರೋಪಿಯಿಂದ 3 ಮೊಬೈಲ್ ಹಾಗೂ 9ಕ್ಕೂ ಹೆಚ್ಚು ಸಿಮ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇಷ್ಟೇ ಅಲ್ಲದೇ ಮುರೇಗಪ್ಪ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಲೋಕಾಯಕ್ತ ಅಧಿಕಾರಿ ಎಂದು ಬೆದರಿಕೆ ಹಾಕಿ ಹಣ ಪೀಕಿದ್ದ. ಮುರೇಗಪ್ಪ ಎಂಟು ವರ್ಷಗಳ ಕಾಲ ಪೊಲೀಸ್ ಪೇದೆಯಾಗಿ ಕರ್ತವ್ಯ ನಿರ್ವಹಿಸಿದ್ದ. ಎರಡು ವರ್ಷ ಲೋಕಾಯುಕ್ತದಲ್ಲಿ ಕರ್ತವ್ಯ ನಿರ್ವಹಿಸಿ, ಸಸ್ಪೆಂಡ್ ಆಗಿದ್ದ. ಬಳಿಕ ಬೆದರಿಕೆ ಹಾಕಿ ಹಣ ಪೀಕುವುದನ್ನೇ ವೃತ್ತಿ ಮಾಡಿಕೊಂಡಿದ್ದ. ಸದ್ಯ ಆರೋಪಿಯನ್ನು ಬಂಧಿಸಿದ ಐಜೂರು ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಇದನ್ನೂ ಓದಿ: ನಟಿ ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್ ಕೇಸ್ – 2 ತಿಂಗಳು ಕಳೆದರೂ 12 ಆರೋಪಿಗಳಿಗೆ ಬಿಡುಗಡೆ ಭಾಗ್ಯವಿಲ್ಲ

  • ಡಿಜಿಟಲ್ ಅರೆಸ್ಟ್ – 30 ಲಕ್ಷ ರೂ. ಕಳೆದುಕೊಂಡ ಮಾಜಿ ಶಾಸಕ

    ಡಿಜಿಟಲ್ ಅರೆಸ್ಟ್ – 30 ಲಕ್ಷ ರೂ. ಕಳೆದುಕೊಂಡ ಮಾಜಿ ಶಾಸಕ

    ಬೆಂಗಳೂರು: ಡಿಜಿಟಲ್ ಅರೆಸ್ಟ್‌ಗೆ (Digital Arrest) ಒಳಗಾಗಿ ಔರದ್ (Aurad) ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಗುಂಡಪ್ಪ ವಕೀಲ್ (Gundappa Vakil) 30 ಲಕ್ಷ ರೂ. ಹಣ ಕಳೆದುಕೊಂಡಿದ್ದಾರೆ.

    ಸಿಬಿಐ, ಇಡಿ ಹಾಗೂ ಜಡ್ಜ್ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್ ಮಾಡಿದ್ದು, ಮಾಜಿ ಶಾಸಕರಿಂದ ಹಂತ ಹಂತವಾಗಿ 30 ಲಕ್ಷ ರೂ. ಹಣವನ್ನು ಖದೀಮರು ವರ್ಗಾಯಿಸಿಕೊಂಡಿದ್ದಾರೆ. ಘಟನೆ ಸಂಬಂಧ ಬೆಂಗಳೂರು ಸಿಸಿಬಿ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ:  ಈದ್‌ಮಿಲಾದ್ ವೇಳೆ 15 ನಿಮಿಷ ಪೊಲೀಸರನ್ನ ಸುಮ್ಮನಿರಿಸಿ ಹಾಡು ಪ್ರಸಾರ – ಮೂವರ ವಿರುದ್ಧ ಕೇಸ್ ದಾಖಲು

    ಮೊದಲು ಆಗಸ್ಟ್ 12ರಂದು ಸಿಬಿಐ ಆಫೀಸರ್ ಎಂದು ಕರೆ ಮಾಡಿದ್ದ ಖದೀಮರು, ನೀವು ನರೇಶ್ ಗೋಯಲ್ ಮನಿ ಲಾಡರಿಂಗ್ ಕೇಸ್‌ನಲ್ಲಿ ಭಾಗಿಯಾಗಿದ್ದೀರಿ. ನರೇಶ್ ಗೋಯಲ್ ಜೊತೆ ಅಕ್ರಮ ವ್ಯವಹಾರ ಮಾಡಿದ್ದೀರಿ ಎಂದು ಹೆದರಿಸಿದ್ದರು. ಆ.13ರಂದು ಸಿಬಿಐ ಡಿಸಿಪಿ ಎಂದು ಮತ್ತೋರ್ವ ಕರೆ ಮಾಡಿ, ನೀವು ಡಿಜಿಟಲ್ ಅರೆಸ್ಟ್ ಆಗಿದ್ದೀರಾ, ಕಾಲ್ ಕಟ್ ಮಾಡಬೇಡಿ ಎಂದು ಹೆದರಿಸಿದ್ದ. ಬಳಿಕ ಆನ್‌ಲೈನ್‌ನಲ್ಲಿ ಫೇಕ್ ಜಡ್ಜ್ ಮುಂದೆ ಹಾಜರು ಪಡಿಸಿದ್ದ ಖದೀಮರು ಕೋರ್ಟ್ ಹಾಲ್ ರೀತಿ ಸೆಟಪ್ ಮಾಡಿ ನಂಬಿಕೆ ಹುಟ್ಟಿಸಿದ್ದರು. ನಮ್ಮದು ತಪ್ಪಿಲ್ಲ ಎಂದು ಮುಚ್ಚಳಿಕೆ ಬರೆದುಕೊಡಿ ಎಂದು 10 ಲಕ್ಷ ರೂ. ಹಣ ವರ್ಗಾಯಿಸಿಕೊಂಡಿದ್ದರು. ಬಳಿಕ ಪ್ರಾಪರ್ಟಿ ತನಿಖೆ ಮಾಡಬೇಕೆಂದು 20 ಲಕ್ಷ ರೂ. ಡೆಪಾಸಿಟ್ ಮಾಡಿಸಿಕೊಂಡಿದ್ದರು. ಹೀಗೆ ಖದೀಮರ ಮಾತು ನಂಬಿ ಹಂತ-ಹಂತವಾಗಿ 30.99 ಲಕ್ಷ ರೂ. ಹಣ ವರ್ಗಾವಣೆ ಮಾಡಿಕೊಂಡಿದ್ದಾರೆ. ಹಣ ಹಾಕಿಸಿಕೊಂಡು ತನಿಖೆ ಮುಗಿದ ನಂತರ ಮರಳಿ ಕೊಡುವುದಾಗಿ ನಂಬಿಸಿದ್ದರು. ಇದನ್ನೂ ಓದಿ: ಮದ್ದೂರಿನಲ್ಲಿ ಗಣೇಶನ ಮೇಲೆ ಕಲ್ಲು ತೂರಲು ಪ್ರಚೋದನೆ ಏನು? – ಇಲ್ಲಿದೆ ಇನ್‌ಸೈಡ್‌ ಸ್ಟೋರಿ

    ಹಣ ಮರಳಿ ಬಾರದಿದ್ದಾಗ ಮಾಜಿ ಶಾಸಕ ಗುಂಡಪ್ಪ ವಕೀಲ್ ಸಿಸಿಬಿ ಸೈಬರ್ ಕ್ರೈಂ (CCB) ಪೊಲೀಸರಿಗೆ ದೂರು ನೀಡಿದ್ದಾರೆ. ಗುಂಡಪ್ಪ ವಕೀಲ್ ನೀಡಿದ ದೂರಿನ ಅನ್ವಯ ಎಫ್‌ಐಆರ್ ದಾಖಲಿಸಲಾಗಿದೆ. ಇದನ್ನೂ ಓದಿ: ಮದ್ದೂರು ಗಲಭೆ – ರಾಜ್ಯದಲ್ಲಿ ಹಿಂದೂಗಳೇ ಟಾರ್ಗೆಟ್; ಎನ್‌ಐಎ ತನಿಖೆಗೆ ಆಗ್ರಹಿಸುವಂತೆ ಮನವಿ

  • ಕಾರು ಸಮೇತ ಲಕ್ಷ ಲಕ್ಷ ಹಣ ಕದ್ದು ಪರಾರಿ – ಸಿನಿಮೀಯ ಶೈಲಿಯಲ್ಲಿ ಆರೋಪಿ ಅರೆಸ್ಟ್

    ಕಾರು ಸಮೇತ ಲಕ್ಷ ಲಕ್ಷ ಹಣ ಕದ್ದು ಪರಾರಿ – ಸಿನಿಮೀಯ ಶೈಲಿಯಲ್ಲಿ ಆರೋಪಿ ಅರೆಸ್ಟ್

    – ನಿವೃತ್ತ ಪೊಲೀಸ್‌ಗೆ ಚಾಲಾಕಿ ಚಾಲಕ ವಂಚನೆ

    ಚಿತ್ರದುರ್ಗ: ಕಾರು ಚಾಲಕರನ್ನೇ ನಂಬಿ ಎಷ್ಟೋ ಜನರು ದೂರದೂರಿಗೆ ಪ್ರಯಾಣ ಮಾಡುತ್ತಾರೆ. ಆದರೆ ಇಲ್ಲೊಬ್ಬ ಚಾಲಾಕಿ ಚಾಲಕ ಕಾರು ಸಮೇತ ಲಕ್ಷಾಂತರ ರೂ. ಕದ್ದು (Money Theft) ಪಾರಾರಿಯಾಗಿದ್ದ. ಪೊಲೀಸರು ಸಿನಿಮೀಯ ಶೈಲಿಯಲ್ಲಿ ಆರೋಪಿ ಬೆನ್ನತ್ತಿ ಹೆಡೆಮುರಿ ಕಟ್ಟಿದ್ದಾರೆ.

    ಚಿತ್ರದುರ್ಗ (Chitradurga) ಜಿಲ್ಲೆಯ ಚಳ್ಳಕೆರೆ (Challakere) ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಬೆಂಗಳೂರು ಮೂಲದ ನಿವೃತ್ತ ಎಸ್ಪಿ ಗುರುಪ್ರಸಾದ್ ತಮ್ಮ ಪತ್ನಿಯೊಂದಿಗೆ ಬಳ್ಳಾರಿಯಲ್ಲಿ ಜಮೀನು ಮಾರಾಟ ಮಾಡಲು ಬಾಡಿಗೆ ಕಾರಿನಲ್ಲಿ ತೆರಳಿದ್ದರು. ಅಲ್ಲಿ ಸರಿ ಸುಮಾರು 97 ಲಕ್ಷ ರೂ.ಗೆ ಜಮೀನು ಮಾರಾಟ ಮಾಡಿದ್ದು, ಕಾರಲ್ಲಿಯೇ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದರು. ಈ ಮಧ್ಯೆ ಚಳ್ಳಕೆರೆಯಲ್ಲಿ ಊಟಕ್ಕೆಂದು ಕಾರು ನಿಲ್ಲಿಸಿ ತೆರಳಿದ್ದರು. ಆಗ ಕಾರು ಚಾಲಕ ಇವರಿಗೆ ಗೊತ್ತಿಲ್ಲದೇ 97 ಲಕ್ಷ ಹಣದೊಂದಿಗೆ ಕಾರು ಸಮೇತ ಪರಾರಿಯಾಗಿದ್ದ. ಇದನ್ನೂ ಓದಿ: ಏಕಾಂಗಿ ನಿರೂಪಣೆ ಬಳಿಕ ಹೊಸ ಮನ್ವಂತರಕ್ಕೆ ಕಾಲಿಟ್ಟ ಆ್ಯಂಕರ್ ಅನುಶ್ರೀ

    ಈ ಬಗ್ಗೆ ನಿವೃತ್ತ ಎಸ್ಪಿ ಗುರುಪ್ರಸಾದ್ ಚಳ್ಳಕೆರೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಎಚ್ಚೆತ್ತ ಪೊಲೀಸರ ತಂಡ ಕಳ್ಳನ ಪತ್ತೆಗೆ ಬಲೆ ಬೀಸಿದ್ದರು. ಆರೋಪಿ ರಮೇಶ್ ಮೂಲತಃ ಆಂಧ್ರದ ಹಿಂದೂಪುರ ಮೂಲದವನಾದ ಹಿನ್ನೆಲೆ ಆಂಧ್ರದತ್ತ ಪ್ರಯಾಣ ಬೆಳೆಸಿ ಸಿನಿಮಾ ಶೈಲಿಯಲ್ಲಿ ಚೇಸ್ ಮಾಡಿದ್ದರು. ಆಂಧ್ರದ ಬಳಿ ರಮೇಶ್ ಕಾರು ಮರಕ್ಕೆ ಡಿಕ್ಕಿಯಾಗಿತ್ತು. ಕೂಡಲೇ ಆರೋಪಿಯನ್ನು ಸೆರೆಹಿಡಿದ ಪೊಲೀಸರು 97 ಲಕ್ಷ ಹಣವನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: Jammu Kashmir | ಅಕ್ರಮವಾಗಿ ಗಡಿ ನುಸುಳಲು ಯತ್ನ – ಇಬ್ಬರು ಉಗ್ರರ ಎನ್‌ಕೌಂಟರ್

    ಆರೋಪಿ ರಮೇಶ್ ಚಳ್ಳಕೆರೆ ಪಟ್ಟಣದ ಹೋಟೆಲ್ ಬಳಿಯಿಂದ ಕಾರು ಸಮೇತ ಎಸ್ಕೇಪ್ ಆಗುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಇದರ ಜಾಡು ಹಿಡಿದು ಬೆನ್ನತ್ತಿದ್ದ ಪೊಲೀಸರು ಆತನ ಹೆಡೆಮುರಿಕಟ್ಟಿದ್ದಾರೆ. ಇದನ್ನೂ ಓದಿ: ಉಕ್ರೇನ್ ರಷ್ಯಾ ಯುದ್ಧವನ್ನು ಮೋದಿ ಯುದ್ಧ ಎಂದು ಕರೆದ ಅಮೆರಿಕ

  • Belagavi | 500 ರೂ.ಗಾಗಿ ತಾಯಿ ಎದುರೇ ಸ್ನೇಹಿತನ ಕೊಲೆ

    Belagavi | 500 ರೂ.ಗಾಗಿ ತಾಯಿ ಎದುರೇ ಸ್ನೇಹಿತನ ಕೊಲೆ

    ಬೆಳಗಾವಿ: 500 ರೂ.ಗಾಗಿ (Money) ತಾಯಿ ಎದುರೇ ತನ್ನ ಸ್ನೇಹಿತನನ್ನು ಕೊಲೆ ಮಾಡಿದ ಘಟನೆ ಬೆಳಗಾವಿ (Belagavi) ತಾಲೂಕಿನ ಯಳ್ಳೂರು (Yellur) ಗ್ರಾಮದಲ್ಲಿ ನಡೆದಿದೆ.

    ಯಳ್ಳೂರು ಗ್ರಾಮದ ನಿವಾಸಿ ಹುಸೇನ್ ತಾಶೇವಾಲೆ (45) ಮೃತ ದುರ್ದೈವಿ. ಮಿಥುನ್ ಕುಬಚಿ, ಮನೋಜ್ ಇಂಗಳೇ ಕೊಲೆ ಆರೋಪಿಗಳು. ಗುಜುರಿ ಸಾಮಗ್ರಿ ವಿಚಾರಕ್ಕೆ ಸ್ನೇಹಿತರ ಮಧ್ಯೆ ಜಗಳವಾಗಿ ಮನಸ್ತಾಪಗಳಾಗಿತ್ತು. ಮೃತ ಹುಸೇನ್ ಕೊಲೆ ಆರೋಪಿಗಳಾದ ಮಿಥುನ್ ಮತ್ತು ಮನೋಜ್‌ಗೆ 500 ರೂ. ಕೊಡಬೇಕಿತ್ತು. ಹಣ ಕೇಳಲು ಹುಸೇನ್ ಮನೆಗೆ ಇಬ್ಬರೂ ಹೋಗಿದ್ದರು. ಈ ವೇಳೆ ಮೂವರ ಮಧ್ಯೆ ಗಲಾಟೆಯಾಗಿದೆ. ಇದನ್ನೂ ಓದಿ: Mysuru Dasara | ಅಂಬಾರಿ ಹೊರುವ ಅಭಿಮನ್ಯುಗಿಂತ ಭೀಮನೇ ಬಲಶಾಲಿ

    ಈ ವೇಳೆ ಹುಸೇನ್ ಹೊಟ್ಟೆಯ ಭಾಗಕ್ಕೆ ಕೈಯಿಂದ ಇಬ್ಬರೂ ಆರೋಪಿಗಳು ಗುದ್ದಿದ್ದಾರೆ. ಹೊಟ್ಟೆಯ ಭಾಗಕ್ಕೆ ಬಲವಾಗಿ ಪೆಟ್ಟು ಬಿದ್ದಿದ್ದರಿಂದ ಹುಸೇನ್ ಸಾವನ್ನಪ್ಪಿದ್ದಾನೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೊಲೆ ನಡೆದಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಕೇಸ್; ಇಂದು ಪಾಯಿಂಟ್ 17ರಲ್ಲಿ ಉತ್ಖನನ – ಸಿಗುತ್ತಾ ಬುರುಡೆ, ಮೂಳೆ ಕುರುಹು?

  • ಪಂಚಾಯತ್ ರಾಜ್ ಇಲಾಖೆಯ ಹಿರಿಯ ಸಹಾಯಕಿಗೆ 45,000 ರೂ. ಸೈಬರ್ ವಂಚನೆ

    ಪಂಚಾಯತ್ ರಾಜ್ ಇಲಾಖೆಯ ಹಿರಿಯ ಸಹಾಯಕಿಗೆ 45,000 ರೂ. ಸೈಬರ್ ವಂಚನೆ

    ಬೆಂಗಳೂರು: ಸೈಬರ್ ವಂಚನೆಯಿಂದ (Cyber Fraud) ಸರ್ಕಾರಿ ಅಧಿಕಾರಿಯೊಬ್ಬರು 45,000 ರೂ. ಹಣ ಕಳೆದುಕೊಂಡಿರುವ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ

    ಪಂಚಾಯತ್ ರಾಜ್ (Panchayat Raj) ಇಲಾಖೆಯ ಹಿರಿಯ ಸಹಾಯಕಿ ಹೇಮಲತಾಗೆ ವಂಚನೆ ಎಸಗಲಾಗಿದೆ. ಆ.6ರಂದು ಅಧೀನ ಕಾರ್ಯದರ್ಶಿಗಳ ವಾಟ್ಸಾಪ್‌ನಿಂದ 45,000 ರೂ. ಅವಶ್ಯಕತೆ ಇದೆ ಎಂದು ಸಂದೇಶ ಬಂದಿದೆ. ಕೂಡಲೇ ಹೇಮಲತಾ ಸಂದೇಶದಲ್ಲಿದ್ದ ನಂಬರ್‌ಗೆ ಗೂಗಲ್ ಪೇ ಮೂಲಕ ಹಣ ಕಳುಹಿಸಿದ್ದರು. ಇದನ್ನೂ ಓದಿ: ಅಮೆರಿಕದಿಂದ ಭಾರತಕ್ಕೆ ಬೆದರಿಕೆ ಹಾಕಿದ ಪಾಕ್‌ ಸೇನಾ ಮುಖ್ಯಸ್ಥ

    ಆದರೆ ಕರೆ ಮಾಡಿದಾಗ ಮೊಬೈಲ್ ನಂಬರ್ ಹ್ಯಾಕ್ ಆಗಿರುವುದು ತಿಳಿದುಬಂದಿದೆ. ಈ ಬಗ್ಗೆ ಸೋನುಕುಮಾರ್ ಎಂಬವರ ವಿರುದ್ಧ ವಿಧಾನಸೌಧ ಠಾಣೆಯಲ್ಲಿ ವಂಚನೆ ಬಗ್ಗೆ ಕೇಸ್ ದಾಖಲಾಗಿದೆ. ಇದನ್ನೂ ಓದಿ: ಖಾಸಗಿ ಆಸ್ಪತ್ರೆಯ ಉದ್ಘಾಟನೆ ವೇಳೆ 10 ನಿಮಿಷ ಲಿಫ್ಟ್‌ನಲ್ಲಿ ಸಿಲುಕಿದ ರಾಮಲಿಂಗಾ ರೆಡ್ಡಿ

  • ಸಿದ್ರಾಮಣ್ಣ ಸರ್ಕಾರದಲ್ಲಿ ದುಡ್ಡಿಲ್ಲ: ಪರಮೇಶ್ವರ್‌

    ಸಿದ್ರಾಮಣ್ಣ ಸರ್ಕಾರದಲ್ಲಿ ದುಡ್ಡಿಲ್ಲ: ಪರಮೇಶ್ವರ್‌

    ಬಾಗಲಕೋಟೆ: ವಸತಿ ಯೋಜನೆಯಲ್ಲಿ ಅಕ್ರಮದ ಬಗ್ಗೆ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ (BR Patil) ಆರೋಪ ಮಾಡಿದ್ದರೆ, ಮತ್ತೊಂದೆಡೆ ಅನುದಾನ ವಿಚಾರವಾಗಿ ಶಾಸಕ ರಾಜು ಕಾಗೆ ಅಸಮಧಾನ ವ್ಯಕ್ತಪಡಿಸಿದ್ದಾರೆ. ಅದರ ಬೆನ್ನೆಲ್ಲೇ ಈಗ ಗೃಹ ಸಚಿವ ಡಾ. ಜಿ ಪರಮೇಶ್ವರ್‌ (Parameshwara) ಕೂಡ ಅಭಿವೃದ್ಧಿ ಯೋಜನೆಗಳಿಗೆ ಸರ್ಕಾರದ ಬಳಿ ಹಣ (Money) ಇಲ್ಲ ಎಂದು ಬಹಿರಂಗವಾಗಿ ಹೇಳಿದ್ದಾರೆ.

    ಬಾದಾಮಿಯಲ್ಲಿ ಸೋಮವಾರ ಮಾತನಾಡಿದ ಗೃಹ ಸಚಿವ ಪರಮೇಶ್ವರ್‌, ಬಾದಾಮಿ ಅಭಿವೃದ್ಧಿಗೆ ಒಂದು ಯೋಜನೆ ಸಿದ್ದ ಮಾಡಿ. ಅದು ಎಷ್ಟು ಮೊತ್ತದ್ದಾದರೂ ಪರವಾಗಿಲ್ಲ. ಅದು ಸಾವಿರ ಕೋಟಿ ಪ್ರಾಜೆಕ್ಟ್ ಆಗಿರಲಿ. ಪ್ರಸ್ತಾವನೆ ಸಿದ್ಧ ಮಾಡಿ ಕೇಂದ್ರಕ್ಕೆ ಕಳುಹಿಸಿಕೊಡಿ. ಯಾಕೆಂದರೆ ನಮ್ಮ ಬಳಿ ದುಡ್ಡಿಲ್ಲ. ಸಿದ್ದರಾಮಣ್ಣನ ಬಳಿ ದುಡ್ಡಿಲ್ಲ ಎಂದಿದ್ದಾರೆ. ಅಷ್ಟೇ ಅಲ್ಲದೇ ನಮ್ಮ ಬಳಿ ಇರುವ ದುಡ್ಡಿನಲ್ಲಿ ನಿಮಗೆ ಈಗಾಗಲೇ ಅಕ್ಕಿ, ಬೇಳೆ, ಎಣ್ಣೆ ಕೊಟ್ಟಿದ್ದೇವೆ ಎಂದು ಹೇಳಿದ್ದಾರೆ.

     

    ಗ್ಯಾರಂಟಿ ಯೋಜನೆ ಜಾರಿ ಮಾಡಿ ಅಧಿಕಾರಕ್ಕೆ ಬಂದ ರಾಜ್ಯ ಕಾಂಗ್ರೆಸ್ ಸರ್ಕಾರ ಪದೇ ಪದೇ ಸ್ವಪಕ್ಷದ ಶಾಸಕರು ಸಚಿವರ ಅಸಮಾಧಾನದ ಹೇಳಿಕೆಗಳ ಮೂಲಕ ತೀವ್ರ ಮುಜುಗರ ಎದುರಿಸುತ್ತಿದೆ. ವಿರೋಧ ಪಕ್ಷಗಳಿಗಿಂತ ಸ್ವಪಕ್ಷದವರೇ ಕಾಂಗ್ರೆಸ್‌ಗೆ ಮುಳುವಾಗಿದ್ದು ಹೊಸದಾಗಿ ಈಗ ಪರಮೇಶ್ವರ್‌ ಸೇರ್ಪಡೆಯಾಗಿದ್ದಾರೆ.

  • ಅಹಮದಾಬಾದ್ ವಿಮಾನ ದುರಂತ – ಅವಶೇಷಗಳಡಿ ಸೂಟ್‌ಕೇಸ್‌ನಲ್ಲಿದ್ದ ಹಣ ಪತ್ತೆ

    ಅಹಮದಾಬಾದ್ ವಿಮಾನ ದುರಂತ – ಅವಶೇಷಗಳಡಿ ಸೂಟ್‌ಕೇಸ್‌ನಲ್ಲಿದ್ದ ಹಣ ಪತ್ತೆ

    ಗಾಂಧಿನಗರ: ವಿಮಾನ ದುರಂತದಿಂದ (Plane Crash) 270 ಮಂದಿ ಸುಟ್ಟು ಕರಕಲು ಆಗಿದ್ದು, ವಿಮಾನ ಭಸ್ಮವಾಗಿದೆ. ಆದರೆ ಜನರು ತಂದಿದ್ದ ದುಡ್ಡು ಮಾತ್ರ ಸುಟ್ಟಿಲ್ಲ.

    ಅಹಮದಾಬಾದ್ (Ahmedabad) ವಿಮಾನ ದುರಂತದಿಂದ ಇಡೀ ಜಗತ್ತು ಬೆಚ್ಚಿಬಿದ್ದಿದೆ. ಜಗತ್ತು ಕಂಡ ದೊಡ್ಡ ದುರಂತ ಇದಾಗಿದೆ. 270 ಮಂದಿ ಜನ ಸಾವನ್ನಪ್ಪಿದ್ದಾರೆ. ಏರ್ ಇಂಡಿಯಾದಲ್ಲಿ (Air India) ಪ್ರಯಾಣ ಮಾಡುತ್ತಿದ್ದ 242 ಜನರಲ್ಲಿ 241 ಜನ ಬೆಂಕಿಗಾಹುತಿ ಆಗಿ ಸುಟ್ಟು ಕರಕಲು ಆಗಿದ್ದಾರೆ. ಅದರಲ್ಲಿ ರಮೇಶ್ ವಿಶ್ವಾಸ್ ಕುಮಾರ್ ಎಂಬ ವ್ಯಕ್ತಿ ಮಾತ್ರ ಬದುಕಿ ಉಳಿದಿದ್ದಾರೆ. 241 ಮಂದಿ ಸುಟ್ಟು ಕರಕಲು ಆಗಿದ್ದರೂ ಸಹ ಅವರು ತಂದಿದ್ದ ದುಡ್ಡು ಮಾತ್ರ ಏನೂ ಆಗಿಲ್ಲ. ಇದನ್ನೂ ಓದಿ: ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದರೆ ಏನಾಗುತ್ತೆ?

    ಮನುಷ್ಯ ಏನೇ ಸಂಪಾದನೆ ಮಾಡಿದರೂ ಏನನ್ನು ಹೊತ್ತು ಕೊಂಡು ಹೋಗಲ್ಲ ಅಂತಾರೆ, ಅದು ನಿಜ. ತನ್ನ ಇಡೀ ಜೀವನ ಹೊಟ್ಟೆಪಾಡಿಗಾಗಿ, ದುಡ್ಡಿಗಾಗಿ ದುಡಿಯೋದು. ಆದರೆ ವಿಮಾನ ದುರಂತದಲ್ಲಿ ಜನ ಸುಟ್ಟು ಕರಕಲು ಆಗಿದ್ದಾರೆ. ಆದರೆ ಜನ ತಂದಿದ್ದ ದುಡ್ಡು ಸುಟ್ಟಿಲ್ಲ. ಅವಶೇಷಗಳ ಪತ್ತೆ ವೇಳೆ ಭಗವದ್ಗೀತೆ ಪುಸ್ತಕ, ಕೃಷ್ಣನ ವಿಗ್ರಹದ ಜೊತೆಗೆ ಸೂಟ್‌ಕೇಸ್‌ನಲ್ಲಿದ್ದ ದುಡ್ಡು ಕೂಡ ಪತ್ತೆಯಾಗಿದೆ. ಸುಡದೇ ಇರುವ ದುಡ್ಡನ್ನು ಕ್ರೋಢೀಕರಿಸಲಾಗಿದೆ. ಇದನ್ನೂ ಓದಿ: ʻಕಾಂತಾರ ಚಾಪ್ಟರ್-1ʼ ಶೂಟಿಂಗ್‌ ವೇಳೆ ಮತ್ತೊಂದು ಅವಘಡ – ರಿಷಬ್‌ ಶೆಟ್ಟಿ ಸೇರಿ 30 ಮಂದಿ ಅಪಾಯದಿಂದ ಪಾರು!

  • ಝೀರೋ ಬ್ಯಾಲೆನ್ಸ್ ಇದ್ದ ರನ್ಯಾ ಅಕೌಂಟ್‌ಗೆ 2 ದಿನದಲ್ಲಿ 10 ಲಕ್ಷ ಹಣ!

    ಝೀರೋ ಬ್ಯಾಲೆನ್ಸ್ ಇದ್ದ ರನ್ಯಾ ಅಕೌಂಟ್‌ಗೆ 2 ದಿನದಲ್ಲಿ 10 ಲಕ್ಷ ಹಣ!

    ಬೆಂಗಳೂರು: ನಟಿ ರನ್ಯಾ ರಾವ್ (Ranya Rao) ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ (Gold Smuggling Case) ಬಗೆದಷ್ಟು ಮಾಹಿತಿಗಳು ಬಯಲಾಗುತ್ತಿವೆ. ಇದೀಗ ಝೀರೋ ಬ್ಯಾಲೆನ್ಸ್ ಇದ್ದ ರನ್ಯಾ ಅಕೌಂಟ್‌ಗೆ ಎರಡೇ ದಿನದಲ್ಲಿ 10 ಲಕ್ಷ ಹಣ ಸಂದಾಯವಾಗಿರುವ ಬಗ್ಗೆ ಮಾಹಿತಿ ಹೊರಬಿದ್ದಿದೆ.

    4 ಲಕ್ಷ, 1 ಲಕ್ಷ, 5 ಲಕ್ಷದಂತೆ ಒಟ್ಟು 10 ಲಕ್ಷ ಹಣ ಇದ್ದಕ್ಕಿದ್ದಂತೆ ರನ್ಯಾ ಅಕೌಂಟ್‌ಗೆ ಸಂದಾಯವಾಗಿದೆ. ಓಂಕಾರ ಕೋ ಆಪರೇಟಿವ್ ಬ್ಯಾಂಕ್ ಅಕೌಂಟ್‌ನಿಂದ ಟ್ರಿನಿಟಿಯ ಕೆನರಾ ಬ್ಯಾಂಕ್‌ನಲ್ಲಿರುವ ರನ್ಯಾ ಅಕೌಂಟ್‌ಗೆ 10 ಲಕ್ಷ ಹಣ ಸಂದಾಯವಾಗಿದೆ. 2022ರ ಏ.27 ಹಾಗೂ 28ರಂದು ಹಣ ಸಂದಾಯ ಆಗಿದೆ ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಕೊಪ್ಪಳ ಗ್ಯಾಂಗ್‌ರೇಪ್ ಪ್ರಕರಣ – ಮೂವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

    ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ನಟಿ ರನ್ಯಾ ರಾವ್‌ಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಮಾ.24 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ. ಸದ್ಯ ರನ್ಯಾ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಇದನ್ನೂ ಓದಿ: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ವಿರೋಧ