ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಪಟ್ಟದ ಮೇಲೆ ಕಣ್ಣಿಟ್ಟಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಹಣಕಾಸು ಖಾತೆಯನ್ನು ನೀಡಬೇಕೆಂದು ಹೈಕಮಾಂಡ್ ಬಳಿ ಬೇಡಿಕೆ ಇಟ್ಟಿದ್ದ ವಿಚಾರ ಮೂಲಗಳಿಂದ ತಿಳಿದು ಬಂದಿದೆ.
ಸಿದ್ದರಾಮಯ್ಯನವರಿಗೆ (Siddaramaiah) ಸಿಎಂ ಹುದ್ದೆ ಸಿಕ್ಕಿದ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ತನಗೆ ಹಣಕಾಸು ಖಾತೆಯನ್ನು (Ministry of Finance) ನೀಡುವಂತೆ ಹೈಕಮಾಂಡ್ ಬಳಿ ಮನವಿ ಮಾಡಿದ್ದರು. ಆದರೆ ಸಿದ್ದರಾಮಯ್ಯ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಇನ್ನು ಕೆಲವೇ ತಿಂಗಳಲ್ಲಿ ರಾಜಕೀಯ ಬದಲಾವಣೆ ಆಗಲಿದೆ: ಹೆಚ್‌ಡಿಕೆ ಭವಿಷ್ಯ
ಬೇರೆ ಯಾವುದೇ ಖಾತೆಯನ್ನು ಬೇಕಾದರೆ ಕೊಡಿ. ಆದರೆ ಹಣಕಾಸು ಖಾತೆಯನ್ನು ನಾನೇ ಇಟ್ಟುಕೊಳ್ಳುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಹೀಗಾಗಿ ಡಿಕೆಶಿಗೆ ಎರಡು ಪ್ರಬಲ ಖಾತೆಯನ್ನು ಹೈಕಮಾಂಡ್ ನೀಡಿದೆ. ಇದನ್ನೂ ಓದಿ: ಒಂದು ಕರೆಗೆ ಕರಗಿದ ಕನಕಪುರದ ಬಂಡೆ – ತಡರಾತ್ರಿ ನಡೆದಿದ್ದು ಏನು?
ಮೂಲಗಳ ಪ್ರಕಾರ ಡಿಕೆಶಿಗೆ ಬೆಂಗಳೂರು ಅಭಿವೃದ್ಧಿ ಹಾಗೂ ಜಲಸಂಪನ್ಮೂಲ ಖಾತೆಯನ್ನು ನೀಡಲು ಹೈಕಮಾಂಡ್ ಅನುಮತಿ ನೀಡಿದೆ. ಈ ಹಿಂದಿನ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಡಿಕೆಶಿ ಇಂಧನ ಖಾತೆಯನ್ನು ಹೊಂದಿದ್ದರೆ ಎಂಬಿ ಪಾಟೀಲ್ ಜಲಸಂಪನ್ಮೂಲ ಖಾತೆಯ ಸಚಿವರಾಗಿದ್ದರು.
ಬೆಂಗಳೂರು: ಹಣಕಾಸಿನ (Money) ವಿಚಾರದ ಹಿನ್ನೆಲೆಯಲ್ಲಿ ಮಾರಾಕಾಸ್ತ್ರಗಳಿಂದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ.
ಲಿಯಾಖತ್ ಅಲಿಖಾನ್ (44) ಕೊಲೆಯಾದ ವ್ಯಕ್ತಿ. ನಾಯಂಡಹಳ್ಳಿ ಚೆಟ್ಟೀಸ್ ಪೆಟ್ರೋಲ್ ಬಂಕ್ ಬಳಿಯ ಮನೆಯಲ್ಲಿ ಘಟನೆ ನಡೆದಿದೆ. ರಾತ್ರಿ ಜಿಮ್‌ಗೆ ಹೋಗಿದ್ದ ಲಿಯಾಖತ್ ಅಲಿಖಾನ್ ನಾಪತ್ತೆಯಾಗಿದ್ದ. ಈ ಹಿನ್ನೆಲೆಯಲ್ಲಿ ಲಿಯಾಖತ್ ಅಲಿಖಾನ್‌ನನ್ನು ಕುಟುಂಬಸ್ಥರು ಹುಡುಕಾಟ ನಡೆಸಿದ್ದರು. ಬಳಿಕ ಬೆಳಗಿನ ಜಾವ ಮತ್ತೊಂದು ಮನೆಯಲ್ಲಿ ಲಿಯಾಕತ್ ಶವವಾಗಿ ಪತ್ತೆ ಆಗಿದ್ದಾನೆ. ಇದನ್ನೂ ಓದಿ:ಪಾಕ್, ಚೀನಾದಲ್ಲಿ ತರಬೇತಿ ಪಡೆದ ಡೇಂಜರಸ್ ವ್ಯಕ್ತಿ ಭಾರತಕ್ಕೆ ಎಂಟ್ರಿ – NIA ಅಲರ್ಟ್
ಸದ್ಯ ಶವವನ್ನು ಮರಣೋತ್ತರ ಪರೀಕ್ಷೆಗೆ ಪೊಲೀಸರು ರವಾನಿಸಿದ್ದಾರೆ. ಹಣಕಾಸಿನ ಹಿನ್ನೆಲೆ ಕೊಲೆ ಮಾಡಿರುವ ಬಗ್ಗೆ ಕುಟುಂಬಸ್ಥರು ಶಂಕಿಸಿದ್ದು, ಸ್ನೇಹಿತರಾದ (Friends) ವಾಸೀಂ ಮತ್ತು ಜೋಹರ್ ಕೊಲೆ ಮಾಡಿರುವುದಾಗಿ ಆರೋಪ ಕೇಳಿ ಬರುತ್ತಿದೆ. ಘಟನೆಗೆ ಸಂಬಂಧಿಸಿ ಮೃತ ಲಿಯಾಕತ್ ಕುಟುಂಬಸ್ಥರು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಕೊಲೆ ಪ್ರಕರಣ ದಾಖಲಿಸಿಕೊಂಡ ಚಂದ್ರಾಲೇಔಟ್ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ:ಉಗ್ರನನ್ನು ಹತ್ಯೆಗೈದ ಭದ್ರತಾ ಪಡೆ
ಹಾಸನ: ಹಣಕಾಸಿನ ವಿಷಯಕ್ಕೆ ಗೆಳೆಯನನ್ನೆ ದುಷ್ಕರ್ಮಿ ಕೊಲೆ ಮಾಡಿಸಿರುವ ಘಟನೆ ಹಾಸನದಲ್ಲಿ ನಡೆದಿದೆ.
ಮೇ.10ರ ರಾತ್ರಿ ಹಾಸನದ ಹೊಸ ಬಸ್ ನಿಲ್ದಾಣದ ಬಳಿ ಆಟೋಚಾಲಕ ಗಿರೀಶ್ ಕೊಲೆ ನಡೆದಿದ್ದು, ಪೊಲೀಸರ ನಿದ್ದೆಗೆಡಿಸಿತ್ತು. ಆ ಕ್ಷಣಕ್ಕೆ ಆರೋಪಿಗಳು ಯಾರೂ ಎಂದೇ ಪತ್ತೆಯಾಗಿರಲಿಲ್ಲ. ನಿಂತಿದ್ದ ಆಟೋ ಒಳಗಡೆಯೇ ಗಿರೀಶ್‍ನನ್ನು ಕೊಲೆ ಮಾಡಲಾಯಿತು. ಈ ಹಿನ್ನೆಲೆ ಪೊಲೀಸರು ಆರೋಪಿಗಳನ್ನು ಹುಡುಕಿಕೊಂಡು ಹೋಗಿದ್ದು, ಗಿರೀಶ್ ಗೆಳೆಯರೇ ಕೊಲೆಗಾರರು ಎಂಬುದು ತಿಳಿದುಬಂದಿದೆ.
ನಡೆದಿದ್ದೇನು?
ಕೊಲೆಯಾದ ಹೊಸಕೊಪ್ಪಲು ಆಟೋ ಚಾಲಕ ಗಿರೀಶ್ ಮತ್ತು ಪ್ರಮುಖ ಆರೋಪಿ ವಾಸು ಇಬ್ಬರು ಬೆಂಗಳೂರಿನಲ್ಲಿ ಆಟೋ ಚಾಲಕರಾಗಿದ್ದರು. ಹಾಗಾಗಿ ಇಬ್ಬರ ನಡುವೆ ಸ್ನೇಹದ ಜೊತೆಗೆ ಹಣಕಾಸಿನ ವ್ಯವಹಾರವೂ ಇತ್ತು. ಕೊರೊನಾ ಹಿನ್ನೆಲೆಯಲ್ಲಿ ಇಬ್ಬರೂ ಬೆಂಗಳೂರು ಬಿಟ್ಟು ಹಾಸನಕ್ಕೆ ಬಂದಿದ್ದರು. ಆಗಲೂ ಇಬ್ಬರ ಸ್ನೇಹ ಮುಂದುವರಿದಿತ್ತು.
ಕೊಲೆಯಾದ ಗಿರೀಶ್ ಬೆಳಗ್ಗೆ ಹಿಮತ್ ಸಿಂಗ್ ಕಾರ್ಖಾನೆಯಲ್ಲಿ ಕೆಲಸ ಮಾಡಿ, ರಾತ್ರಿ ವೇಳೆ ಆಟೋ ಓಡಿಸುತ್ತಿದ್ದ. ವಾಸು ನಗರದ ಎಪಿಎಂಪಿಯಲ್ಲಿ ಸುಂಕ ವಸೂಲಿ ಕೆಲಸ ಮಾಡುತ್ತಿದ್ದ. ಇಬ್ಬರ ನಡುವೆ ದುಡ್ಡು ಕೊಡುವ, ತೆಗೆದುಕೊಳ್ಳುವ ಸಂಬಂಧ ಮನಸ್ತಾಪವಿತ್ತು. ಇದೇ ಕಾರಣಕ್ಕೆ ಇಬ್ಬರು ಜಗಳ ಮಾಡಿಕೊಂಡಿದ್ದರು. ಈ ವೈಷಮ್ಯದಿಂದಲೇ ಗಿರೀಶ್ ಹತ್ಯೆಯಾಗಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ. ಇದನ್ನೂ ಓದಿ: ತಲೆಗೆ 25 ಲಕ್ಷ ಬಹುಮಾನ ಘೋಷಣೆಗೆಯಾಗಿದ್ದ ನಕ್ಸಲ್ ನಾಯಕ ಶವವಾಗಿ ಪತ್ತೆ
ಗಿರೀಶ್ ದಿನಚರಿ ಗೊತ್ತಿದ್ದ ವಾಸು ಹಾಗೂ ಅವರ ತಂಡ ಅವನನ್ನು ಸಾಯಿಸಲು ಯೋಜನೆ ರೂಪಿಸಿದ್ದಾರೆ. ಈ ಹಿನ್ನೆಲೆ ವಾಸು ಮತ್ತು ಅವರ ತಂಡ ಹಾಸನದ ಹೊಸ ಬಸ್ ನಿಲ್ದಾಣಕ್ಕೆ ಬಂದು ರಾತ್ರಿ 9 ಗಂಟೆ ಸುಮಾರಿಗೆ ಗಿರೀಶ್‍ನನ್ನು ಮದ್ಯಪಾನ ಮಾಡಲು ಕರೆದುಕೊಂಡು ಹೋಗಿದ್ದಾರೆ. ನಂತರ ಹಣಕಾಸು ವಿಷಯಕ್ಕೆ ಜಗಳ ತೆಗೆದು ಅದು ತಾರಕಕ್ಕೇ ಹೋಗಿ, ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ಕೊಲೆ ಪ್ರಕರಣದಲ್ಲಿ ಒಟ್ಟು ಆರು ಮಂದಿ ಭಾಗಿಯಾಗಿದ್ದರು. ಇವರಲ್ಲಿ ಐದು ಮಂದಿಯನ್ನು ಬಂಧಿಸಲಾಗಿದ್ದು, ಪ್ರಮುಖ ಆರೋಪಿಗಾಗಿ ಶೋಧಕಾರ್ಯ ಮುಂದುವರಿದಿದೆ.
ಒಟ್ಟಿನಲ್ಲಿ ಹಣಕಾಸು ವಿಷಯಕ್ಕೆ ಸ್ನೇಹಿತರ ನಡುವೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಪ್ರಮುಖ ಆರೋಪಿ ಪರಾರಿಯಾಗಿದ್ದು, ಉಳಿದ ಐವರು ಆರೋಪಿಗಳು ಕಂಬಿ ಎಣಿಸುತ್ತಿದ್ದಾರೆ.
ನವದೆಹಲಿ: ಭಯೋತ್ಪಾದಕ ಚಟುವಟಿಕೆಗಳಿಗೆ ಹಣಕಾಸು ನೆರವು ನೀಡುತ್ತಿದ್ದ ಪ್ರಕರಣದ ಕಾಶ್ಮೀರದ ಪ್ರತ್ಯೇಕತಾವಾದಿ ಹೋರಾಟಗಾರ ಯಾಸೀನ್ ಮಲಿಕ್ ದೋಷಿ ಎಂದು ಎನ್‍ಐಎ ಕೋರ್ಟ್ ಘೋಷಿಸಿದೆ. ಪ್ರಕರಣದಲ್ಲಿ ತಪ್ಪೊಪ್ಪಿಕೊಂಡ ಹಿನ್ನೆಲೆಯಲ್ಲಿ ಕೋರ್ಟ್ ತೀರ್ಪು ಪ್ರಕಟಿಸಿದೆ.
ಎನ್‍ಐಎ ಅಧಿಕಾರಿಗಳು ಯಾಸೀನ್ ಮಲಿಕ್ ಆರ್ಥಿಕ ಪರಿಸ್ಥಿತಿಯನ್ನು ಮೌಲ್ಯಮಾಪನ ಮಾಡಲಿದ್ದು, ಶಿಕ್ಷೆಯ ಪ್ರಮಾಣದ ಬಗ್ಗೆ ಮೇ 25 ರಂದು ವಿಚಾರಣೆ ನಡೆಯಲಿದೆ. ಮೂಲಗಳ ಪ್ರಕಾರ, ಯಾಸಿನ್ ಮಲಿಕ್ ಮುಂದಿನ ವಿಚಾರಣೆಯ ದಿನಾಂಕದೊಳಗೆ ತಮ್ಮ ಹಣಕಾಸಿನ ಆಸ್ತಿಗಳ ಬಗ್ಗೆ ಅಫಿಡವಿಟ್ ಸಲ್ಲಿಸುವಂತೆ ಸೂಚಿಸಲಾಗಿದೆ. ಇದನ್ನೂ ಓದಿ: ಪೋಸ್ಟರ್‌ಗಳಲ್ಲಿ ಹುಲಿ ಚಿತ್ರಗಳನ್ನ ಹಾಕಿಬಿಟ್ರೆ ಮೈಸೂರು ಹುಲಿ ಆಗಿಬಿಡ್ತಾನಾ?: ಪ್ರತಾಪ್ ಸಿಂಹ
ಕಠಿಣ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ(ಯುಎಪಿಎ) ಸೇರಿದಂತೆ ವಿವಿಧ ಪ್ರಕರಣಗಳು ಯಾಸಿನ್ ಮಲ್ಲಿಕ್ ಮೇಲೆ ದಾಖಲಾಗಿತ್ತು. ತನ್ನ ಮೇಲೆ ದಾಖಲಾದ ಆರೋಪಗಳ ಸಂಬಂಧ ಮೇ 10 ರಂದು ಕೋರ್ಟ್‍ನಲ್ಲಿ ಮಲ್ಲಿಕ್ ತಪ್ಪೊಪ್ಪಿಕೊಂಡ ಹಿನ್ನೆಲೆಯಲ್ಲಿ ಈ ಮಹತ್ವದ ತೀರ್ಪು ಪ್ರಕಟವಾಗಿದೆ. 2017 ರಲ್ಲಿ ಯಾಸೀನ್ ಮಲಿಕ್ ವಿರುದ್ಧ ದೂರು ದಾಖಲಾಗಿತ್ತು.
ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕರಾದ ಫಾರೂಕ್ ಅಹ್ಮದ್ ದಾರ್ ಅಲಿಯಾಸ್ ಬಿಟ್ಟಾ ಕರಾಟೆ, ಶಬ್ಬೀರ್ ಶಾ, ಮಸರತ್ ಆಲಂ, ಎಂಡಿ ಯೂಸುಫ್ ಷಾ, ಅಫ್ತಾಬ್ ಅಹ್ಮದ್ ಶಾ, ಅಲ್ತಾಫ್ ಅಹ್ಮದ್ ಶಾ, ನಯೀಮ್ ಖಾನ್, ಎಂಡಿ ಅಕ್ಬರ್ ಖಾಂಡೆ, ರಾಜಾ ಮೆಹರಾಜುದ್ದೀನ್ ಕಲ್ವಾಲ್ ಸೇರಿದಂತೆ ಇತರ ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕರ ವಿರುದ್ಧವೂ ಚಾರ್ಜ್‍ಶೀಟ್ ಸಲ್ಲಿಕೆಯಾಗಿದೆ. ಇದನ್ನೂ ಓದಿ: ಭಾರೀ ಮಳೆಗೆ ಕೊಚ್ಚಿ ಹೋಯ್ತು ಬೆಂಗಳೂರು -ಮೈಸೂರು ಹೆದ್ದಾರಿ – ಟ್ರಾಫಿಕ್ ಜ್ಯಾಮ್
ಬೆಂಗಳೂರು: ರಾಜಧಾನಿಗೆ ಬಿಬಿಎಂಪಿ ಮತ್ತೊಂದು ಶಾಕ್ ನೀಡಲು ಮುಂದಾಗಿದ್ದು, ವಿದ್ಯುತ್ ಬಿಲ್ ಮೂಲಕ ಕಸ ನಿರ್ವಹಣೆ ಸೆಸ್ ಸಂಗ್ರಹಕ್ಕೆ ಬಿಬಿಎಂಪಿ ಪ್ಲಾನ್ ಮಾಡ್ತಿದೆ.
ಬಿಬಿಎಂಪಿ ಸೆಸ್ ಸಂಗ್ರಹಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ ಎನ್ನಲಾಗಿದೆ. ಸರ್ಕಾರ ಒಪ್ಪಿಗೆ ಸೂಚಿಸಿದ್ರೇ ಸದ್ಯದಲ್ಲೇ ಸಿಲಿಕಾನ್ ಸಿಟಿ ಜನರ ಮನೆಗೆ ತಿಂಗಳಿಗೊಮ್ಮೆ ಕರೆಂಟ್ ಬಿಲ್ ಜೊತೆಗೆ ಗಾರ್ಬೇಜ್ ಬಿಲ್ ಬರಲಿದೆ.
2011 ರಿಂದ ಆಸ್ತಿ ತೆರಿಗೆ ಮೇಲೆ ಶೇ.19 ರಷ್ಟು ಸೆಸ್ ಸಂಗ್ರಹಿಸಲಾಗುತ್ತಿದೆ. ಆದರೆ ಇದರಿಂದ ಕಸ ನಿರ್ವಹಣಾ ವೆಚ್ಚದ ಶೇ.15 ರಷ್ಟು ಸಂಗ್ರಹಣೆಯಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ವಿದ್ಯುತ್ ಬಿಲ್ ಮೂಲಕ ಪ್ರತಿ ತಿಂಗಳು ಕಸ ನಿರ್ವಹಣೆ ಸೆಸ್ ಸಂಗ್ರಹಿಸಲು ಬಿಬಿಎಂಪಿ ಮುಂದಾಗಿದೆ. ಇದರಿಂದ ಮಾಸಿಕ 48 ಕೋಟಿ ರೂ. ಆದಾಯದ ನಿರೀಕ್ಷೆಯಲ್ಲಿದೆ.
ವಾಣಿಜ್ಯ ಉತ್ಪಾದಕರಿಂದ 23.93 ಕೋಟಿ ರೂ. ಸಂಗ್ರಹದ ಗುರಿಯನ್ನು ಬಿಬಿಎಂಪಿ ಹೊಂದಿದೆ. ಈ ಆದಾಯದ ಮೂಲಕ ಗುತ್ತಿಗೆದಾರರ ಬಿಲ್, ಪೌರಕಾರ್ಮಿಕರ ಸಂಬಳಕ್ಕೆ ಅನುಕೂಲ ಮಾಡಿಕೊಳ್ಳಲು ತೀರ್ಮಾನಿಸಿದೆ ಎನ್ನಲಾಗಿದೆ. ಆದರೆ ಬಿಬಿಎಂಪಿ ಮುಖ್ಯ ಆಯುಕ್ತರು ಮಾತ್ರ ಇಂಥಾ ಯಾವುದೇ ಪ್ರಸ್ತಾವನೆಯನ್ನು ಬಿಬಿಎಂಪಿ ಸಲ್ಲಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಗೃಹ ತ್ಯಾಜ್ಯ ಉತ್ಪಾದಕರಿಗೆ ವಿದ್ಯುತ್ ಬಿಲ್ ಆಧರಿಸಿ ಪ್ರಸ್ತಾಪಿಸಿರುವ ಸೆಸ್ ವಿವರ ಹೀಗಿದೆ:
ವಿದ್ಯುತ್ ಬಿಲ್ ಕಸ ಸೆಸ್
* 200 ರೂ. ವರೆಗೆ 30 ರೂ.
* 200-500 ರೂ. 60 ರೂ.
* 500-1000 ರೂ. 100 ರೂ.
* 1001-2000 ರೂ. 200 ರೂ.
* 2001-3000 ರೂ. 350 ರೂ.
* 3000 ರೂ.ಗಿಂತ ಹೆಚ್ಚು 500 ರೂ.
ಮುಂಬೈ: ವಿಶ್ವದ ಪ್ರಸಿದ್ಧ ವ್ಯಕ್ತಿಗಳು ತೆರಿಗೆ ವಂಚನೆ ಮಾಡುತ್ತಿದ್ದಾರೆ ಎಂಬ ಬಗ್ಗೆ ಇದೀಗ ಪಂಡೋರಾ ಪೇಪರ್ ಎಂಬ ರಹಸ್ಯ ಹಣಕಾಸು ಮಾಹಿತಿ ಬಿಡುಗಡೆಯಾಗಿದೆ. ಈ ಮಾಹಿತಿಯಲ್ಲಿ ಕ್ರಿಕೆಟ್ ದೇವರು ಎನಿಸಿಕೊಂಡಿರುವ ಸಚಿನ್ ತೆಂಡೂಲ್ಕರ್ ಅವರ ಹೆಸರು ಕೇಳಿಬಂದಿದೆ.
ಭಾರತೀಯ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಹೆಸರು ಕೂಡಾ ಪಂಡೋರಾ ಪೇಪರ್ಸ್‍ನಲ್ಲಿದೆ. ಅಲ್ಲದೆ ಅನಿಲ್ ಅಂಬಾನಿ, ಬಯೋಕಾನ್ ಸಂಸ್ಥೆಯ ಕಿರಣ್ ಮುಂಜುದಾರ್ ಶಾ ಪತಿ ಸೇರಿದಂತೆ ಸುಮಾರು 300 ಭಾರತೀಯರನ್ನು ಹೆಸರಿಸಲಾಗಿದೆ. ಬ್ರಿಟನ್ ಮಾಜಿ ಪ್ರಧಾನಿ ಟೋನಿ ಬ್ಲೇರ್, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಪಾಕಿಸ್ಥಾನದ ಪ್ರಧಾನಿ ಇಮ್ರಾನ್ ಖಾನ್ ಆಪ್ತ ಬಳಗ ಸೇರಿದಂತೆ ಸುಮಾರು 700ಕ್ಕೂ ಹೆಚ್ಚು ಮಂದಿಯ ಮಾಹಿತಿಯಿದೆ ಎಂದು ವರದಿಯಾಗಿದೆ.
ಮುಂಬೈ: ಅಮೆರಿಕದ ಬ್ಯಾಂಕಿಂಗ್ ಕಂಪನಿ `ಸಿಟಿಬ್ಯಾಂಕ್’ ಭಾರತದಲ್ಲಿ ಗ್ರಾಹಕ ಬ್ಯಾಂಕಿಂಗ್ ಸೇವೆಗಳನ್ನು ಸ್ಥಗಿತಗೊಳಿಸುತ್ತಿರುವುದಾಗಿ ಪ್ರಕಟಿಸಿದೆ.
ದೇಶದಲ್ಲಿ ಸಿಟಿ ಬ್ಯಾಂಕ್ ಒಟ್ಟು 35 ಶಾಖೆಗಳನ್ನು ಹೊಂದಿದ್ದು, ಕ್ರೆಡಿಟ್ ಕಾರ್ಡ್, ಗೃಹ ಸಾಲ, ಸಂಪತ್ತು ನಿರ್ವಹಣೆ ಸೇವೆಗಳನ್ನು ನೀಡುತ್ತಿದೆ. ಅಂದಾಜು ನಾಲ್ಕು ಸಾವಿರ ಸಿಬ್ಬಂದಿ ಸಂಸ್ಥೆಯ ಗ್ರಾಹಕ ಬ್ಯಾಂಕಿಂಗ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದಾರೆ.
ಒಟ್ಟು 13 ದೇಶಗಳಲ್ಲಿ ಗ್ರಾಹಕ ಬ್ಯಾಂಕಿಂಗ್ ಸೇವೆಗಳನ್ನು ಸ್ಥಗಿತಗೊಳಿಸುತ್ತಿದ್ದೇವೆ. ಈ ದೇಶಗಳಲ್ಲಿ ಇತರರಿಗೆ ಸ್ಪರ್ಧೆ ನೀಡಲು ಅಗತ್ಯವಿರುವಷ್ಟು ಪ್ರಮಾಣದಲ್ಲಿ ದೊಡ್ಡದಾಗಿ ಬೆಳೆದಿಲ್ಲದ ಕಾರಣ ಈ ಸೇವೆಗಳನ್ನು ಸ್ಥಗಿತಗೊಳಿಸುವ ನಿರ್ಧಾರವನ್ನು ಪ್ರಕಟಿಸುತ್ತಿದ್ದೇವೆ ಎಂದು ಸಿಟಿಬ್ಯಾಂಕ್‍ನ ಜಾಗತಿಕ ವಹಿವಾಟುಗಳ ಸಿಇಒ ಜೇನ್ ಫ್ರೇಸರ್ ಗುರುವಾರ ಹೇಳಿದ್ದಾರೆ.
ಸಿಟಿ ಇಂಡಿಯಾದ ಮುಖ್ಯ ಕಾರ್ಯನಿರ್ವಾಹಕ ಅಶು ಖುಲ್ಲರ್ ಪ್ರತಿಕ್ರಿಯಿಸಿ, ತಕ್ಷಣಕ್ಕೆ ನಮ್ಮ ಚಟುವಟಿಕೆಗಳಲ್ಲಿ ಯಾವುದೇ ಬದಲಾವಣೆ ಇಲ್ಲ. ಬ್ಯಾಂಕ್ ತನ್ನ ಸೇವೆಗಳನ್ನು ಸ್ಥಗಿತಗೊಳಿಸಲು ಕಾನೂನು ಜಾರಿ ಸಂಸ್ಥೆಗಳ ಅನುಮೋದನೆ ಅಗತ್ಯವಿದೆ. ಈ ಘೋಷಣೆಯಿಂದ ಉದ್ಯೋಗಿಗಳ ಮೇಲೆ ತಕ್ಷಣಕ್ಕೆ ಯಾವುದೇ ಪರಿಣಾಮ ಉಂಟಾಗುವುದಿಲ್ಲ. ಸದ್ಯಕ್ಕೆ ನಮ್ಮ ಗ್ರಾಹಕರಿಗೆ ಸೇವೆ ಒದಗಿಸುವುದನ್ನು ಮುಂದುವರಿಸುತ್ತೇವೆ ಎಂದಿದ್ದಾರೆ.
1902ರಲ್ಲಿ ಭಾರತಕ್ಕೆ ಬಂದ ಸಿಟಿಬ್ಯಾಂಕ್ 1985ರಿಂದ ಗ್ರಾಹಕ ಬ್ಯಾಂಕಿಂಗ್ ಸೇವೆಗಳನ್ನು ಒದಗಿಸುತ್ತಿದೆ. ಮುಂಬೈ, ಪುಣೆ, ಬೆಂಗಳೂರು, ಚೆನ್ನೈ ಮತ್ತು ಗುರುಗ್ರಾಮದಲ್ಲಿ ಇರುವ ತನ್ನ ಕೇಂದ್ರಗಳಿಂದ ಜಾಗತಿಕ ವಾಣಿಜ್ಯ ವಹಿವಾಟುಗಳಿಗೆ ಬೆಂಬಲ ನೀಡುವ ಕೆಲಸವನ್ನು ಮುಂದುವರಿಸಲಿದೆ.
ಕೃಷಿ, ವಸತಿ, ನವೀಕರಿಸಬಹುದಾದ ಇಂಧನ ಮತ್ತು ಎಂಎಸ್‍ಎಂಇಗಳಿಗೆ (ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ) ಮಾರ್ಚ್ 2020ರ ವೇಳೆಗೆ ಒಟ್ಟು 27,911 ಕೋಟಿ ರೂ. ಸಾಲವನ್ನು ಸಿಟಿಬ್ಯಾಂಕ್ ನೀಡಿದೆ.
ಎಲ್ಲ ವರ್ಗದ ಜನರಿಗೆ ಸಿಟಿಬ್ಯಾಂಕ್ ಸೇವೆ ನೀಡಿದ್ದರೂ ವಿಶೇಷವಾಗಿ ಜಾಗತಿಕ ಕಂಪನಿಯ ನೌಕರರು ಮತ್ತು ಹೆಚ್ಚು ಸಂಬಳ ಇದ್ದ ನೌಕರರಿಗೆ ವಿಶೇಷ ಸೇವೆಗಳನ್ನು ನೀಡುತ್ತಿತ್ತು.
ನವದೆಹಲಿ: ಕೇಂದ್ರ ಸರ್ಕಾರ ಇಂದು ಮಂಡಿಸಿದ ಬಜೆಟ್‌ನಲ್ಲಿ ಕೆಲ ಉತ್ಪನ್ನಗಳ ಮೇಲೆ ಕೃಷಿ ಮೂಲಸೌಕರ್ಯ ಮತ್ತು ಅಭಿವೃದ್ಧಿ ಸೆಸ್ ವಿಧಿಸಿದ ವಿಚಾರ ಬಹಳ ಚರ್ಚೆ ಆಗುತ್ತಿದೆ.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೃಷಿ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮೇಲೆ ಸೆಸ್ ವಿಧಿಸಿದ್ದಾರೆ. ಡೀಸೆಲ್ ಮೇಲೆ 4 ರೂ. ಮತ್ತು ಪೆಟ್ರೋಲ್ ಮೇಲೆ 2.5 ರೂ. ಕೃಷಿ ಮೂಲಸೌಕರ್ಯ ಮತ್ತು ಅಭಿವೃದ್ಧಿ ಸೆಸ್ ವಿಧಿಸಿದ್ದಾರೆ.
ಕೃಷಿ ಕಾಯ್ದೆಗಳನ್ನು ಖಂಡಿಸಿ ರೈತರು ಹೋರಾಟ ನಡೆಸುತ್ತಿರುವ ಸಂದರ್ಭದಲ್ಲಿಯೇ ಕೃಷಿ ಹೆಸರಿನಲ್ಲಿ ಸೆಸ್ ವಿಧಿಸಿರುವುದು ಭಾರೀ ಚರ್ಚೆಗೆ ಗ್ರಾಸವಾಗಿತ್ತು.
ಚರ್ಚೆಯ ಬೆನ್ನಲ್ಲೇ ಈಗಾಗಲೇ ದುಬಾರಿ ಆಗುತ್ತಿರುವ ಪೆಟ್ರೋಲ್, ಡೀಸೆಲ್ ದರ ಮತ್ತಷ್ಟು ದುಬಾರಿ ಆಗಲಿದೆ ಎಂದು ವಿಪಕ್ಷಗಳು ಬಜೆಟ್ ಅನ್ನು ಟೀಕಿಸಿತ್ತು. ಈ ವೇಳೆ ಸ್ಪಷ್ಟನೆ ನೀಡಿದ ಕೇಂದ್ರ ಸರ್ಕಾರ, ಕೃಷಿ ಸೆಸ್ ವಿಧಿಸಲಾಗಿದೆ ನಿಜ. ಆದರೆ ಇದು ಗ್ರಾಹಕರ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಎಂದು ಸ್ಪಷ್ಟಪಡಿಸಿತು.
ಯಾವುದರ ಮೇಲೆ ಎಷ್ಟು ಕೃಷಿ ಸೆಸ್?
ಪೆಟ್ರೋಲ್ – 2.50 ರೂ.
ಡೀಸೆಲ್ – 4 ರೂ.
ಚಿನ್ನ, ಬೆಳ್ಳಿ – 2.5%
ಮದ್ಯ – 100%
ಕಚ್ಚಾ ತಾಳೆ ಎಣ್ಣೆ -17.5%
ಕಚ್ಚಾ ಸೋಯಾ, ಸೂರ್ಯಕಾಂತಿ ಎಣ್ಣೆ – 20%
ಸೇಬು – 35%
ಕಲ್ಲಿದ್ದಲು, ಲಿಗ್ನೈಟ್ – 1.5%
ರಸಗೊಬ್ಬರ – 5%
ಬಟಾಣಿ – 40%
ಕಾಬೂಲ್ ಕಡಲೆ – 30%
ಬೆಂಗಾಲ್ ಕಡಲೆಬೇಳೆ- 50%
ಬೇಳೆಕಾಳು – 20%
ಹತ್ತಿ – 5%
ದುಬಾರಿಯಾಗಲ್ಲ ಯಾಕೆ?
ತೈಲ, ಬಂಗಾರದ ವಿಚಾರದಲ್ಲಿ ಒಂದು ಕೈಯಲ್ಲಿ ಕೊಟ್ಟು ಇನ್ನೊಂದು ಕೈಯಲ್ಲಿ ವಾಪಸ್ ಪಡೆಯಲಾಗಿದೆ. ಹೀಗಾಗಿ ಕೃಷಿ ಸೆಸ್ ವಿಧಿಸಿದರೂ ತೈಲ ಗ್ರಾಹಕರ ಮೇಲೆ ಹೊರೆ ಇಲ್ಲ. ತೈಲದ ಮೇಲಿನ ಮೂಲ ಮತ್ತು ವಿಶೇಷ ಹೆಚ್ಚುವರಿ ಅಬಕಾರಿ ಸುಂಕ ಇಳಿಕೆಯಾಗಿದೆ.
ಪೆಟ್ರೋಲ್ ಮೇಲಿನ ಮೂಲ ಅಬಕಾರಿ ಸುಂಕ 2.98 ರೂ. ರಿಂದ 1.4 ರೂಗೆ ಇಳಿಕೆಯಾಗಿದ್ದರೆ ವಿಶೇಷ ಹೆಚ್ಚುವರಿ ಅಬಕಾರಿ ಸುಂಕ 12 ರೂ.ಗಳಿಂದ 11 ರೂ.ಗಳಿಗೆ ಕಡಿತವಾಗಿದೆ.
ಡೀಸೆಲ್ ಮೇಲಿನ ಮೂಲ ಅಬಕಾರಿ ಸುಂಕ 4.83 ರೂ. ನಿಂದ 1.8 ರೂ.ಗೆ ಇಳಿಕೆಯಾಗಿದ್ದರೆ ವಿಶೇಷ ಹೆಚ್ಚುವರಿ ಅಬಕಾರಿ ಸುಂಕ 9 ರೂ.ಗಳಿಂದ 8 ರೂ.ಗಳಿಗೆ ಕಡಿತವಾಗಿದೆ.
ಚಿನ್ನ, ಬೆಳ್ಳಿ ಮೇಲೆ ಕೃಷಿ ಸೆಸ್ ವಿಧಿಸಿದ್ದರೂ, ಮತ್ತೊಂದು ಕಡೆ ಅಬಕಾರಿ ಸುಂಕ ಇಳಿಕೆ ಮಾಡಲಾಗಿದೆ. ಶೇ.100ರಷ್ಟು ಕೃಷಿ ಸೆಸ್ ವಿಧಿಸಿದ್ದರೂ ಮದ್ಯ ಕೂಡ ದುಬಾರಿ ಆಗುವುದಿಲ್ಲ. ಮದ್ಯದ ಮೇಲಿನ ಅಬಕಾರಿ ಸುಂಕವನ್ನು ಶೇ.150ರಿಂದ ಶೇ.50ಕ್ಕೆ ಇಳಿಕೆ ಮಾಡಲಾಗಿದೆ. ಚಿನ್ನ ಬೆಳ್ಳಿ ಮೇಲಿದ್ದ ಅಬಕಾರಿ ಸುಂಕವನ್ನು ಶೇ.12.5ರಿಂದ ಶೇ.7.5ಕ್ಕೆ ಇಳಿಸಲಾಗಿದೆ. ಇದರಿಂದಾಗಿ 1 ಗ್ರಾಮ್‍ಗೆ 125 ರೂ. ದರ ಇಳಿಕೆಯಾಗುವ ಸಾಧ್ಯತೆಯಿದೆ.
ಪಾಟ್ನಾ: ಕೈಮೂರ್ ಡುಮರ್ಕೋನ್ ಗ್ರಾಮದಲ್ಲಿ ನಡೆದ ಕೊಲೆ ಪ್ರಕರಣವನ್ನ ಪೊಲೀಸರು ಭೇದಿಸಿದ್ದು, ತಂದೆಯನ್ನ ಕೊಂದ ಮಗನನ್ನ ಬಂಧಿಸಿದ್ದಾರೆ. ಅಕ್ಟೋಬರ್ 19ರಂದು ಈ ಕೊಲೆ ನಡೆದಿತ್ತು.
ಅಕ್ಟೋಬರ್ 19ರಂದು ರುಂಡ- ಮುಂಡ ಬೇರ್ಪಡೆಯಾದ ಶವ ಪತ್ತೆಯಾಗಿತ್ತು. ಚೈನಪುರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡ ತನಿಖೆ ಆರಂಭಿಸಿದ್ದರು. ಸಾವನ್ನಪ್ಪಿದ ವ್ಯಕ್ತಿಯ ಗುರುತು ಪತ್ತೆಯಾಗುತ್ತಿದ್ದಂತೆ ಪೊಲೀಸರು ತನಿಖೆಯನ್ನ ಚುರುಕುಗೊಳಿಸಿದ್ದರು. ಮೊದಲಿಗೆ ಮೃತ ಯಾರೊಂದಿಗಾದ್ರೂ ಜಗಳ ಮಾಡಿಕೊಂಡಿರುವ ಕುರಿತು ಮಾಹಿತಿ ಕಲೆ ಹಾಕಲಾರಂಭಿಸಿದ್ದರು. ಮೃತ ಅಪರಾಧ ಹಿನ್ನೆಲೆಯುಳ್ಳವನಾಗಿದ್ದರಿಂದ ಗ್ರಾಮದಲ್ಲಿ ಬಹುತೇಕರೊಂದಿಗೆ ಶತೃತ್ವ ಹೊಂದಿದ್ದನು.
ಪೊಲೀಸರು ಅನುಮಾನದ ಮೇರೆಗೆ ಮೃತನ ಪುತ್ರನನ್ನೇ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಆದ್ರೆ ಪುತ್ರ ಮೊದಲಿಗೆ ಸುಳ್ಳು ಹೇಳಿ ಬಚಾವ್ ಆಗಲು ಪ್ರಯತ್ನಿಸಿದ್ದಾನೆ. ಪೊಲೀಸರು ವಿಚಾರಣೆ ತೀವ್ರಗೊಳಿಸಿದಾಗ ತಪ್ಪೊಪ್ಪಿಕೊಂಡಿದ್ದಾನೆ.
ತಂದೆ ಮತ್ತು ಮಗನ ನಡುವೆ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ವೈಮನಸ್ಸು ಉಂಟಾಗಿತ್ತು. ಇದೇ ವಿಚಾರಕ್ಕೆ ಅಕ್ಟೋಬರ್ 19ರಂದು ಜಗಳ ನಡೆದಿದ್ದು, ಕೋಪದಲ್ಲಿ ಕೊಡಲಿಯಿಂದ ತಂದೆಯ ರುಂಡವನ್ನ ಕಡಿದಿದ್ದಾನೆ. ನಂತರ ಶವವನ್ನ ನಿರ್ಜನ ಪ್ರದೇಶದಲ್ಲಿ ಎಸೆದಿದ್ದನು ಎಂದು ಎಸ್.ಪಿ. ದಿಲನ್‍ವಾಜ್ ಅಹ್ಮದ್ ಹೇಳಿದ್ದಾರೆ.
ನವದೆಹಲಿ: ವಂಚನೆ ಪ್ರಕರಣಗಳು ಜಾಸ್ತಿಯಾಗುತ್ತಿರುವ ಬೆನ್ನಲ್ಲೇ ಎಲ್ಲ ಸಹಕಾರಿ ಬ್ಯಾಂಕುಗಳು ಇನ್ನು ಮುಂದೆ ರಿಸರ್ವ್ ಬ್ಯಾಂಕ್ ಅಡಿಯಲ್ಲಿ ಬರಲಿವೆ.
ಇಂದು ಕೇಂದ್ರ ಸರ್ಕಾರದ ಕ್ಯಾಬಿನೆಟ್ ಸಭೆ ನಡೆಯಿತು. ಈ ವೇಳೆ ಕ್ಯಾಬಿನೆಟ್ ಸುಗ್ರೀವಾಜ್ಞೆ ಹೊರಡಿಸಲು ಒಪ್ಪಿಗೆ ನೀಡಿತು.
ಬ್ಯಾಂಕಿಂಗ್ ನಿಯಂತ್ರಣ (ತಿದ್ದುಪಡಿ) ಮಸೂದೆ – 2020 ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಮಂಡಿಸಲು ಸರ್ಕಾರ ಮುಂದಾಗಿತ್ತು. ಆದರೆ ಕೋವಿಡ್ 19ನಿಂದಾಗಿ ಅಧಿವೇಶನವನ್ನು ಮುಂದೂಡಿದ್ದರಿಂದ ಮಸೂದೆ ಪಾಸ್ ಆಗಿರಲಿಲ್ಲ. ಹೀಗಾಗಿ ಸಹಕಾರಿ ಬ್ಯಾಂಕುಗಳಲ್ಲಿ ಠೇವಣಿ ಇರಿಸಿರುವ ಗ್ರಾಹಕರ ಹಿತವನ್ನು ಕಾಯಲು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದೆ.
ವಿಡಿಯೋ ಕನ್ಫರೆನ್ಸ್ ಮೂಲಕ ಮಾಧ್ಯಮಗಳ ಜೊತೆ ಮಾತನಾಡಿದ ಸಂಸದೀಯ ವ್ಯವಹಾರಗಳ ಸಚಿವ ಪ್ರಕಾಶ್ ಜಾವಡೇಕರ್, ಇನ್ನು ಮುಂದೆ 1,482 ನಗರ ಸಹಕಾರ ಬ್ಯಾಂಕುಗಳು ಮತ್ತು 58 ರಾಜ್ಯ ಸಹಕಾರಿ ಬ್ಯಾಂಕುಗಳು ಆರ್‌ಬಿಐ ನಿಗಾದಲ್ಲಿ ಕೆಲಸ ಮಾಡಲಿದೆ ಎಂದು ಎಂದು ತಿಳಿಸಿದರು.
ರಾಷ್ಟ್ರಪತಿಗಳು ಸುಗ್ರೀವಾಜ್ಞೆಗೆ ಸಹಿ ಹಾಕಿದ ದಿನದಿಂದ ಇದು ಅಧಿಕೃತವಾಗಿ ಜಾರಿಗೆ ಬರಲಿದೆ. ಕಳೆದ ವರ್ಷ ಪಂಜಾಬ್ ಮಹಾರಾಷ್ಟ್ರ ಸಹಕಾರ ಬ್ಯಾಂನಲ್ಲಿ ನಡೆದ ಅವ್ಯವಹಾರ ಬೆಳಕಿಗೆ ಬಂದ ನಂತರ ಗ್ರಾಹಕರ ಹಿತವನ್ನು ಸರ್ಕಾರ ಕಾಪಾಡಬೇಕು ಎಂಬ ಆಗ್ರಹ ಕೇಳಿಬಂದಿತ್ತು. ಈ ವರ್ಷದ ಬಜೆಟ್‌ನಲ್ಲಿ ಹಣಕಾಸು ಸಚಿವೆ ಆರ್‌ಬಿಐ ಅಡಿಯಲ್ಲಿ ಸಹಕಾರಿ ಬ್ಯಾಂಕುಗಳು ತರಲಾಗುವುದು ಎಂದು ತಿಳಿಸಿದ್ದರು.
The decision to bring 1,540 cooperative banks under RBI's supervision will give an assurance to more than 8.6 crore depositors in these banks that their money amounting to Rs 4.84 lakh crore will stay safe: Union Minister Prakash Javadekar https://t.co/IAy0GN98el