Tag: ಹಣಕಾಸು ಸಚಿವೆ

  • ಮಾಲ್ಡೀವ್ಸ್‌ಗೆ ಡಿಚ್ಚಿ- ಲಕ್ಷದ್ವೀಪ ಪ್ರವಾಸಿ ತಾಣವಾಗಿ ಅಭಿವೃದ್ಧಿ

    ಮಾಲ್ಡೀವ್ಸ್‌ಗೆ ಡಿಚ್ಚಿ- ಲಕ್ಷದ್ವೀಪ ಪ್ರವಾಸಿ ತಾಣವಾಗಿ ಅಭಿವೃದ್ಧಿ

    ನವದೆಹಲಿ: ಚೀನಾದತ್ತ ವಾಲುತ್ತಿರುವ ಮಾಲ್ಡೀವ್ಸ್‌ಗೆ (Maldives) ತಿರುಗೇಟು ಎಂಬಂತೆ ಕೇಂದ್ರ ಸರ್ಕಾರ ತನ್ನ ಬಜೆಟ್‌ನಲ್ಲಿ ಲಕ್ಷದ್ವೀಪವನ್ನು (Lakshadweep) ಅಭಿವೃದ್ಧಿ ಮಾಡುವುದಾಗಿ ಘೋಷಣೆ ಮಾಡಿದೆ.

    ದೇಶೀಯ ಪ್ರವಾಸೋದ್ಯಮದ ಉತ್ಸಾಹವನ್ನು ಹೆಚ್ಚಿಸಲು ಲಕ್ಷದ್ವೀಪ ಸೇರಿದಂತೆ ಹಲವು ದ್ವೀಪಗಳಲ್ಲಿ ಬಂದರು ಸಂಪರ್ಕ, ಮೂಲಸೌಕರ್ಯ ಯೋಜನೆಗಳನ್ನು ಆರಂಭಿಸಲಾಗುವುದು ಎಂದು ವಿತ್ತ ಮಂತ್ರಿ ನಿರ್ಮಲಾ ಸೀತಾರಾಮನ್‌ (Niramala Sitharaman) ತಮ್ಮ ಬಜೆಟ್ ಭಾಷಣದಲ್ಲಿ ಹೇಳಿದ್ದಾರೆ.

    ನಿರ್ಮಲಾ ಸೀತಾರಾಮನ್‌ ಅವರು ಇಂದು ನೂತನ ಲೋಕಸಭೆಯಲ್ಲಿ (Loksabha) ಬಜೆಟ್ ಮಂಡಿಸಿದ ಅವರು, ವಿಕಸಿತ್ ಭಾರತ್‌ನ ದೃಷ್ಟಿಯನ್ನು ಸಾಕಾರಗೊಳಿಸಲು ರಾಜ್ಯದಲ್ಲಿ ಅನೇಕ ಬೆಳವಣಿಗೆ ಮತ್ತು ಅಭಿವೃದ್ಧಿ-ಶಕ್ತಗೊಳಿಸುವ ಸುಧಾರಣೆಗಳ ಅಗತ್ಯವಿದೆ ಎಂದು ಹೇಳಿದರು. ಇದನ್ನೂ ಓದಿ: ಮಧ್ಯಂತರ ಬಜೆಟ್‌ನಲ್ಲಿ ನಾರಿಶಕ್ತಿಗೆ ಹೆಚ್ಚಿನ ಒತ್ತು

    ಜುಲೈನಲ್ಲಿ ಪೂರ್ಣ ಪ್ರಮಾಣದ ಬಜೆಟ್‌ನಲ್ಲಿ (Union Budget 2024) ನಮ್ಮ ಸರ್ಕಾರವು ವಿಕಸಿತ್ ಭಾರತ್‌ನ ನಮ್ಮ ಅನ್ವೇಷಣೆಗಾಗಿ ವಿವರವಾದ ಮಾರ್ಗಸೂಚಿಯನ್ನು ಪ್ರಸ್ತುತಪಡಿಸುತ್ತದೆ. ನಮ್ಮ ಸರ್ಕಾರವು ವಿವಿಧ ಇಲಾಖೆಗಳ ಅಡಿಯಲ್ಲಿ ಅಸ್ತಿತ್ವದಲ್ಲಿರುವ ಆಸ್ಪತ್ರೆ ಮೂಲಸೌಕರ್ಯಗಳನ್ನು ಬಳಸಿಕೊಂಡು ಹೆಚ್ಚಿನ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲು ಯೋಜಿಸಿದೆ ಎಂದರು.

  • ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಏಮ್ಸ್ ಆಸ್ಪತ್ರೆಗೆ ದಾಖಲು

    ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಏಮ್ಸ್ ಆಸ್ಪತ್ರೆಗೆ ದಾಖಲು

    ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಸೋಮವಾರ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS) ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.

    ಸೋಮವಾರ ಮಧ್ಯಾಹ್ನ 12 ಗಂಟೆ ವೇಳೆಗೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅವರನ್ನು ಆಸ್ಪತ್ರೆಯ (Hospital) ಖಾಸಗಿ ವಾರ್ಡ್‌ನಲ್ಲಿ ದಾಖಲಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

    ಭಾನುವಾರ ಸೀತಾರಾಮನ್ ಅವರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಪ್ರಯುಕ್ತ ದೆಹಲಿಯ ‘ಸದೈವ್ ಅಟಲ್’ಗೆ ತೆರಳಿ ಪುಷ್ಪನಮನ ಸಲ್ಲಿಸಿದ್ದರು.

    Live Tv
    [brid partner=56869869 player=32851 video=960834 autoplay=true]

  • ಬ್ಯಾಂಕುಗಳಿಗೆ ಸ್ಥಳೀಯ ಭಾಷಿಕರನ್ನೇ ನೇಮಿಸಿ- ನಿರ್ಮಲಾ ಸೀತಾರಾಮನ್ ಸಲಹೆ

    ಬ್ಯಾಂಕುಗಳಿಗೆ ಸ್ಥಳೀಯ ಭಾಷಿಕರನ್ನೇ ನೇಮಿಸಿ- ನಿರ್ಮಲಾ ಸೀತಾರಾಮನ್ ಸಲಹೆ

    ನವದೆಹಲಿ: ಇನ್ನುಮುಂದೆ ಬ್ಯಾಂಕುಗಳಿಗೆ (Banks) ಸ್ಥಳೀಯ ಭಾಷೆ (Local Language) ಮಾತನಾಡುವವರನ್ನೇ ಸಿಬ್ಬಂದಿಯಾಗಿ ನೇಮಕ ಮಾಡಿ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಸಲಹೆ ನೀಡಿದ್ದಾರೆ.

    ಮುಂಬೈನಲ್ಲಿ (Mumbai) ನಡೆದ ಭಾರತೀಯ ಬ್ಯಾಂಕುಗಳ ಸಂಘದ (Indian Banks Association) 75ನೇ ವಾರ್ಷಿಕ ಮಹಾಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ನೀವು ಅಲ್ಲಿ ಗ್ರಾಹಕರೊಂದಿಗೆ ವ್ಯವಹರಿಸಲು ಇದ್ದೀರೇ ಹೊರತು, ವ್ಯವಸ್ಥೆಯನ್ನು ಬೆಳೆಸಲು ಅಲ್ಲ ಎಂದು ಹೇಳಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ: ನಾನ್‍ವೆಜ್ ಊಟಕ್ಕೆಂದು ಬಂದವರಿಗೆ ಗೋಮಾಂಸ ಸರ್ವ್ – ಹೋಟೆಲ್ ಮಾಲೀಕ ಅರೆಸ್ಟ್

    sbi bank
    ಸಾಂದರ್ಭಿಕ ಚಿತ್ರ

    ಶಾಖಾ ಮಟ್ಟದ ಬ್ಯಾಂಕುಗಳನ್ನು ನೋಡಿದಾಗ ಕೆಲವರು `ಹೇ ನೀವು ಹಿಂದಿ ಮಾತನಾಡುವುದಿಲ್ಲವೇ, ನೀವೆಲ್ಲೋ ಭಾರತೀಯರಲ್ಲ ಅನ್ನಿಸುತ್ತದೆ’ ಅಂದುಕೊಳ್ಳುತ್ತಾರೆ. ಇದು ಉತ್ತಮ ವ್ಯಾವಹಾರಿಕ (Business) ಸಂಬಂಧದ ಲಕ್ಷಣವಲ್ಲ ಎಂದು ನಾನು ಭಾವಿಸುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಮಳೆಯಲ್ಲೂ ಮೈಚಳಿ ಬಿಡಿಸುವಂತೆ ಮಾದಕ ಲುಕ್ ನೀಡುವ ಹಾಟ್ ನೈಟ್‌ಡ್ರೆಸ್ ಹೇಗಿವೆ ನೋಡಿ

    nirmala sithraman

    ಸ್ಥಳೀಯ ಭಾಷೆಯಲ್ಲಿ ವ್ಯವಹರಿಸಲು ಸಾಧ್ಯವಾಗದ ಸಿಬ್ಬಂದಿಯನ್ನು ಪ್ರಾದೇಶಿಕ ಶಾಖೆಗಳಿಗೆ ನೇಮಕ ಮಾಡಬಾರದು. ಹಾಗಾಗಿ ಉತ್ತಮ ಸಿಬ್ಬಂದಿ ನೇಮಕ ಮಾಡಿಕೊಳ್ಳುವಲ್ಲಿ ಹೆಚ್ಚು ಸಂವೇದನಾ ಶೀಲ ಮಾರ್ಗಗಳನ್ನು ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಬ್ಯಾಂಕ್ ವಿಲೀನದಿಂದ ಉದ್ಯೋಗದಲ್ಲಿ ಕಡಿತವಾಗುವುದಿಲ್ಲ: ನಿರ್ಮಲಾ ಸೀತಾರಾಮನ್

    ಬ್ಯಾಂಕ್ ವಿಲೀನದಿಂದ ಉದ್ಯೋಗದಲ್ಲಿ ಕಡಿತವಾಗುವುದಿಲ್ಲ: ನಿರ್ಮಲಾ ಸೀತಾರಾಮನ್

    ಚೆನ್ನೈ: ಸಾರ್ವಜನಿಕ ವಲಯದ ಬ್ಯಾಂಕ್‍ಗಳನ್ನು ವಿಲೀನ ಮಾಡುವುದರಿಂದ ಯಾವುದೇ ಉದ್ಯೋಗ ಕಡಿತವಾಗುವುದಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟಪಡಿಸಿದ್ದಾರೆ.

    ಚೆನ್ನೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬ್ಯಾಂಕ್ ವಿಲೀನದಿಂದ ಉದ್ಯೋಗ ಕಡಿತವಾಗತ್ತೆ ಎನ್ನುವುದು ಸಂಪೂರ್ಣ ಸುಳ್ಳು ಮಾಹಿತಿ. ಶುಕ್ರವಾರವೇ ಈ ಕುರಿತು ನಾನು ಸ್ಪಷ್ಟಪಡಿಸಿದ್ದೇನೆ. ಬ್ಯಾಂಕ್‍ಗಳನ್ನು ವಿಲೀನಗೊಳಿಸುವುದರಿಂದ ಉದ್ಯೋಗಿಗಳಿಗೆ ಹಾನಿಯಾಗುವುದಿಲ್ಲ. ಒಬ್ಬ ಉದ್ಯೋಗಿಯನ್ನೂ ಕೆಲಸದಿಂದ ತೆಗೆದು ಹಾಕುವುದಿಲ್ಲ ಎಂಬ ಅಂಶವನ್ನು ಮಾಧ್ಯಮಗಳ ಮೂಲಕ ಸ್ಪಷ್ಟವಾಗಿ ತಿಳಿಸಿದ್ದೇನೆ ಎಂದು ಪುನರುಚ್ಛರಿಸಿದ್ದಾರೆ.

    ನಿರ್ಮಲಾ ಸೀತಾರಾಮನ್ ಅವರು ಆಗಸ್ಟ್ 30ರಂದು 10 ಸಾರ್ವಜನಿಕ ವಲಯದ ಬ್ಯಾಂಕ್‍ಗಳನ್ನು ನಾಲ್ಕು ಬ್ಯಾಂಕ್‍ಗಳಿಗೆ ವಿಲೀನಗೊಳಿಸಿರುವ ಕುರಿತು ಘೋಷಣೆ ಮಾಡಿದ್ದರು. ಐದು ವರ್ಷಗಳ ಆರ್ಥಿಕತೆಯ ಕುಂಟಿತವನ್ನು ಸರಿ ದಾರಿಗೆ ತಂದು, ಬೆಳೆವಣಿಗೆಯತ್ತ ಕೊಂಡೊಯ್ಯಬೇಕು. ಹೀಗಾಗಿ ಸಣ್ಣ ಬ್ಯಾಂಕ್‍ಗಳನ್ನು ವಿಲೀನಗೊಳಿಸಿ ಬೃಹತ್ ಬ್ಯಾಂಕ್‍ಗಳನ್ನಾಗಿ ಮಾಡಿ, ವಿಶ್ವ ದರ್ಜೆಗೆ ಕೊಂಡೊಯ್ಯಬೇಕು ಎನ್ನುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದರು.

    ಇದರ ಭಾಗವಾಗಿ ರಾಜ್ಯದ ಕೆನರಾ ಬ್ಯಾಂಕ್ ಮತ್ತು ಸಿಂಡಿಕೇಟ್ ಬ್ಯಾಂಕ್‍ಗಳನ್ನು ಸಹ ವಿಲೀನ ಮಾಡಲಾಗುತ್ತಿದೆ. ಈ ಕುರಿತು ಆಗಸ್ಟ್ 30ರಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದ ನಿರ್ಮಲಾ ಸೀತಾರಾಮನ್ ಅವರು, 2017ರಲ್ಲಿ 17 ಸಾರ್ವಜನಿಕ ವಲಯದ ಬ್ಯಾಂಕ್‍ಗಳಿದ್ದವು. ಇದನ್ನು 13ಕ್ಕೆ ಇಳಿಸುವ ನಿಟ್ಟಿನಲ್ಲಿ ಈ ವಿಲೀನ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿಸಿದ್ದರು.

    ಪಂಜಾಬ್ ನ್ಯಾಷನಲ್ ಬ್ಯಾಂಕ್, ಓರಿಯಂಟಲ್ ಬ್ಯಾಂಕ್ ಆಫ್ ಕಾಮರ್ಸ್ ಹಾಗೂ ಯುನೈಟೆಡ್ ಬ್ಯಾಂಕ್ ವಿಲೀನವಾದರೆ ಇಂಡಿಯನ್ ಬ್ಯಾಂಕ್ ಜೊತೆ ಅಲಹಾಬಾದ್ ಬ್ಯಾಂಕ್ ವಿಲೀನವಾಗಲಿದೆ. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಆಂಧ್ರ ಬ್ಯಾಂಕ್, ಕಾರ್ಪೋರೇಷನ್ ಬ್ಯಾಂಕ್ ವಿಲೀನವಾಗಲಿವೆ.

    ವಸೂಲಾಗದ ಸಾಲ(ಎನ್‍ಪಿಎ)ದ ಪ್ರಮಾಣ 8.65 ಲಕ್ಷ ಕೋಟಿ ರೂ.ನಿಂದ 7.90 ಲಕ್ಷ ಕೋಟಿ ರೂ.ಗೆ ಇಳಿಕೆಯಾಗಿದೆ. ಆರ್ಥಿಕತೆಯನ್ನು 5 ಟ್ರಿಲಿಯನ್ ಡಾಲರ್ ಗುರಿ ತಲುಪಲು ಕೇಂದ್ರ ಸರ್ಕಾರ ಎಲ್ಲ ರೀತಿಯ ಆರ್ಥಿಕ ಸುಧಾರಣಾ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ 10 ಬ್ಯಾಂಕ್‍ಗಳ ವಿಲೀನ ಪ್ರಕ್ರಿಯೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದ್ದರು.

  • ನಮ್ಮದು ಸೂಟ್‍ಕೇಸ್ ಸಾಗಿಸುವ ಸರ್ಕಾರವಲ್ಲ: ನಿರ್ಮಲಾ ಸೀತಾರಾಮನ್

    ನಮ್ಮದು ಸೂಟ್‍ಕೇಸ್ ಸಾಗಿಸುವ ಸರ್ಕಾರವಲ್ಲ: ನಿರ್ಮಲಾ ಸೀತಾರಾಮನ್

    ಚೆನ್ನೈ: ಸೂಟ್‍ಕೇಸ್ ಕೊಡುವುದು ಹಾಗೂ ತೆಗೆದುಕೊಳ್ಳುವುದನ್ನು ಮಾಡಲು ಮೋದಿಯವರದ್ದು ಸೂಟ್‍ಕೇಸ್ ಸಾಗಿಸುವ ಸರ್ಕಾರವಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪರೋಕ್ಷವಾಗಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.

    ಚೆನ್ನೈನಲ್ಲಿ ನಡೆದ  ಇಂಟರ್‌ನ್ಯಾಷನಲ್‌  ಬ್ಯುಸಿನೆಸ್ ಕಾನ್ಫರೆನ್ಸ್‍ನಲ್ಲಿ ಮಾತನಾಡಿದ ಅವರು, ಬಜೆಟ್ ಪತ್ರಗಳನ್ನು ಸೂಟ್‍ಕೇಸ್‍ನಲ್ಲಿ ತರುವುದರ ಬದಲು ಬಟ್ಟೆಯಲ್ಲಿ ತಂದ ಕುರಿತು ಸ್ಪಷ್ಟನೆ ನೀಡುವ ವೇಳೆ ಕಾಂಗ್ರೆಸ್ ವಿರುದ್ಧ ಪರೋಕ್ಷವಾಗಿ ಹರಿಹಾಯ್ದಿದ್ದಾರೆ. ಹಿಂದಿನ ಯುಪಿಎ ಸರ್ಕಾರ ಭ್ರಷ್ಟಾಚಾರ ಮಾಡಿದ್ದರಿಂದ ಸೂಟ್‍ಕೇಸ್ ತಂದಿತ್ತು. ನಾವು ಈಗ ಎಲ್ಲರಿಗೂ ಕಾಣುವಂತೆ ಹಾಗೂ ಭಾರತೀಯ ಸಂಸ್ಕೃತಿಯ ಪ್ರಕಾರ ಬಟ್ಟೆಯಲ್ಲಿ ಬಜೆಟ್ ದಾಖಲೆಗಳನ್ನು ತಂದಿದ್ದೇವೆ ಎಂದು ಕುಟುಕಿದ್ದಾರೆ.

    ನಮ್ಮದು ಸೂಟ್‍ಕೇಸ್ ಹೊತ್ತೊಯ್ಯುವ ಸರ್ಕಾರವಲ್ಲ. ಹೀಗಾಗಿ 2019ರ ಬಜೆಟ್ ವೇಳೆ ನಾನು ಅದನ್ನು ತರಲಿಲ್ಲ. ಸೂಟ್‍ಕೇಸ್ ತರುವುದರಿಂದ ಏನೋ ತಂದಂತೆ ಗೋಚರಿಸುತ್ತದೆ. ಅಲ್ಲದೆ, ನಮ್ಮದು ಸೂಟ್‍ಕೇಸ್ ಸಾಗಿಸುವ ಸರ್ಕಾರವಲ್ಲ. ನಾವು ಸೂಟ್‍ಕೇಸ್ ಕೊಡುವುದು ಹಾಗೂ ತೆಗೆದುಕೊಳ್ಳುವುದನ್ನು ಮಾಡುವುದಿಲ್ಲ ಎಂದು ಪರೋಕ್ಷವಾಗಿ ಯುಪಿಎ ವಿರುದ್ಧ ಟೀಕಿಸಿದರು.

    ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ವೇಳೆ ಸೂಟ್‍ಕೇಸ್‍ನಲ್ಲಿ ಬಜೆಟ್ ದಾಖಲೆಗಳನ್ನು ತರದೆ, ದೇಶದ ಸಂಸ್ಕೃತಿಯಂತೆ ‘ಹೊತ್ತಿಗೆ’ಯಲ್ಲಿ ತಂದಿದ್ದರು. ಈ ಕುರಿತು ಸ್ಪಷ್ಟನೆ ಕೇಳಿದಾಗ ಸೂಟ್‍ಕೇಸ್ ತರುವುದು ವಿದೇಶಿ ಸಂಸ್ಕೃತಿ ಎಂದು ಹೇಳಿದ್ದರು.

    ಬಜೆಟ್ ಮಂಡನೆ ವೇಳೆ ನಿರ್ಮಲಾ ಸೀತಾರಾಮನ್ ಅವರು ‘ಹೊತ್ತಿಗೆ’ ಬಜೆಟ್ ಪುಸ್ತಕ ಹಾಗೂ ದಾಖಲೆಗಳನ್ನು ಕೆಂಪು ಬಟ್ಟೆಯಲ್ಲಿ ಮಾಧ್ಯಮಗಳಿಗೆ ಪ್ರದರ್ಶಿಸಿದ್ದರು ಇದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.