Tag: ಹಣ ಜಪ್ತಿ

  • ಬೆಳಗಾವಿಯಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 2.73 ಕೋಟಿ ಹಣ ಜಪ್ತಿ

    ಬೆಳಗಾವಿಯಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 2.73 ಕೋಟಿ ಹಣ ಜಪ್ತಿ

    ಬೆಳಗಾವಿ: ಇಲ್ಲಿನ ಸಿಸಿಬಿ ಪೊಲೀಸರು (Belagavi CCB Police) ಭರ್ಜರಿ ಕಾರ್ಯಾಚರಣೆ ನಡೆಸಿದ್ದು ಸೂಕ್ತ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 2.73 ಕೋಟಿ ರೂ. ಹಣ ಜಪ್ತಿ ಮಾಡಲಾಗಿದೆ.

    ಮಹಾರಾಷ್ಟ್ರದ ಸಾಂಗಲಿ‌ಯಿಂದ ಹುಬ್ಬಳ್ಳಿಯತ್ತ ತೆರಳುತ್ತಿದ್ದ ಗೂಡ್ಸ್ ವಾಹನದಲ್ಲಿ ಕೋಟಿ ಕೋಟಿ ಹಣ ಪತ್ತೆಯಾಗಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ವಾಹನ ಚಾಲಕನನ್ನು ವಶಕ್ಕೆ ಪಡೆದು ಹಣ ಜಪ್ತಿ (Money seized) ಮಾಡಿದ್ದಾರೆ. ಇದನ್ನೂ ಓದಿ: Chattisgarh | ಅಬುಜ್ಮಾರ್ ಎನ್‌ಕೌಂಟರ್‌ನಲ್ಲಿ 38 ಮಾವೋವಾದಿಗಳ ಹತ್ಯೆ

    ಮಹಾರಾಷ್ಟ್ರದ ಸಾಂಗಲಿ ಪಟ್ಟಣದ ಸಚೀನ ಮೇನಕುದುಳೆ, ಮಾರುತಿ ಮಾರಗುಡೆ ಎಂಬ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಇದನ್ನೂ ಓದಿ: ತಲೆ ಸೀಳಿದ ಬುಲೆಟ್‌, ಬೆರಳು ಕಟ್‌; ಭೀಕರ ಹತ್ಯೆಯಾದ ಹಮಾಸ್‌ ಮುಖ್ಯಸ್ಥನ ದೇಹ ಸ್ಥಿತಿ ಹೇಗಿತ್ತು?

    ಹಣ ಸಾಗಾಟ ಮಾಡಲು ಗೂಡ್ಸ್ ವಾಹನದ ಕ್ಯಾಬಿನನ್ನೇ ಮಾಡಿಫೈ ಮಾಡಿದ್ದಾರೆ. ಜಪ್ತಿಯಾದ ಹಣದ ಮೂಲ ಯಾವುದು ಎಂದು ತನಿಖೆ ನಡೆಸುತ್ತಿರುವುದಾಗಿ ಡಿಸಿಪಿ ರೋಹನ್ ಜಗದೀಶ್ ಮಾಹಿತಿ ನೀಡಿದ್ದಾರೆ. ಬೆಳಗಾವಿ ಮಾಳಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಈ ಕುರಿತು ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದೆ. ಇದನ್ನೂ ಓದಿ: ಮತ್ತೆ 3 ವಿಮಾನಗಳಿಗೆ ಬಾಂಬ್ ಬೆದರಿಕೆ ಕರೆ – ಬೆಂಗಳೂರಿಂದ ಮುಂಬೈಗೆ ಹೊರಟಿದ್ದ ಫ್ಲೈಟ್‌ಗೂ ಥ್ರೆಟ್ ಕಾಲ್

  • ಭರ್ಜರಿ ಬೇಟೆ – 5.60 ಕೋಟಿ ರೂ. ಹಣ, 3 ಕೆಜಿ ಚಿನ್ನ, 103 ಕೆಜಿ ಬೆಳ್ಳಿ ಜಪ್ತಿ

    ಭರ್ಜರಿ ಬೇಟೆ – 5.60 ಕೋಟಿ ರೂ. ಹಣ, 3 ಕೆಜಿ ಚಿನ್ನ, 103 ಕೆಜಿ ಬೆಳ್ಳಿ ಜಪ್ತಿ

    ಬಳ್ಳಾರಿ: ಇಲ್ಲಿನ ಬ್ರೂಸ್ ಪೇಟೆ ಪೊಲೀಸರು (Bellary Police) ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ ದಾಖಲೆ ಇಲ್ಲದ 5.60 ಕೋಟಿ ರೂ. ನಗದು ಮತ್ತು ಅಪಾರ ಪ್ರಮಾಣದ ಚಿನ್ನ, ಬೆಳ್ಳಿ ಆಭರಣಗಳನ್ನ (Gold and Silver Jewellery) ಜಪ್ತಿ ಮಾಡಲಾಗಿದೆ.

    ಬಳ್ಳಾರಿಯ (Bellary) ಬ್ರೂಸ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕಂಬಳಿ ಬಜಾರ್‌ನಲ್ಲಿರುವ ಹೇಮಾ ಜ್ಯೂವೆಲರಿ ಶಾಪ್ ಮಾಲೀಕರ ಮನೆಯಲ್ಲಿ ಹಣ, ಆಭರಣಗಳನ್ನು ಜಪ್ತಿ ಮಾಡಲಾಗಿದೆ. ಇದನ್ನೂ ಓದಿ: ಭರ್ಜರಿ ಕಾರ್ಯಾಚರಣೆಯಲ್ಲಿ 5 ಕೆಜಿ ಚಿನ್ನಾಭರಣ ಜಪ್ತಿ!

    ಒಟ್ಟು 5.60 ಕೋಟಿ ರೂ. ನಗದು, 3 ಕೆಜಿ ಬಂಗಾರ 103 ಕೆಜಿ ಬೆಳ್ಳಿ ಆಭರಣ, 21 ಕೆಜಿ ಕಚ್ಚಾ ಬೆಳ್ಳಿಯನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಜಪ್ತಿ ಮಾಡಿದ ನಗದು ಹವಾಲಾಕ್ಕೆ ಸಂಬಂಧಿಸಿದ ಹಣ ಎನ್ನಲಾಗಿದೆ. ಇದನ್ನೂ ಓದಿ: ರಾಜ್ಯಾದ್ಯಂತ ಒಟ್ಟು 15.78 ಕೋಟಿ ಹಣ, 1.27 ಕೋಟಿ ರೂ. ಮೌಲ್ಯದ ಚಿನ್ನಾಭರಣ ಜಪ್ತಿ

    ಪ್ರಕರಣ ಸಂಬಂಧ ಆರೋಪಿ ನರೇಶ್ ಎಂಬಾತನನ್ನ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಮೈಸೂರಿನಲ್ಲಿ 98.52 ಕೋಟಿ ರೂ. ಮೊತ್ತದ ಬಿಯರ್ ಜಪ್ತಿ

  • ಹುಣಸೂರಲ್ಲಿ ದಾಖಲೆಯಿಲ್ಲದೆ ಸಾಗಿಸ್ತಿದ್ದ 2 ಕೋಟಿ ರೂ. ಜಪ್ತಿ

    ಹುಣಸೂರಲ್ಲಿ ದಾಖಲೆಯಿಲ್ಲದೆ ಸಾಗಿಸ್ತಿದ್ದ 2 ಕೋಟಿ ರೂ. ಜಪ್ತಿ

    ಮೈಸೂರು: ಉಪಚುನಾವಣೆ ಹಿನ್ನೆಲೆಯಲ್ಲಿ ಎಲ್ಲೆಡೆ ಚುನಾವಣಾಧಿಕಾರಿಗಳು ಅಕ್ರಮ ಹಣ, ಮದ್ಯ, ವಸ್ತುಗಳು ಸಾಗಿಸಬಾರದೆಂದು ವಾಹನಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಈ ನಡುವೆ ಹುಣಸೂರು ಮನುಗನಹಳ್ಳಿ ಚೆಕ್ ಪೋಸ್ಟ್ ನಲ್ಲಿ ದಾಖಲೆಯಿಲ್ಲದೆ ಸಾಗಿಸುತ್ತಿದ್ದ 2 ಕೋಟಿ ರೂ. ಹಣವನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

    ಬೊಲೆರೋ ವಾಹನದಲ್ಲಿ ಈ ಹಣವನ್ನು ಸಾಗಿಸಲಾಗುತ್ತಿತ್ತು. ವಾಹನದಲ್ಲಿ 3 ಚೀಲಗಳಲ್ಲಿ ಹಣವನ್ನು ಇಟ್ಟುಕೊಂಡು ಕೊಂಡೊಯ್ಯಲಾಗುತ್ತಿತ್ತು. ಎಂ.ಡಿ.ಸಿ.ಸಿ ಬ್ಯಾಂಕಿನ ಇಬ್ಬರು ನೌಕರರು ಹಣದ ಜೊತೆ ಪ್ರಯಾಣ ಮಾಡುತ್ತಿದ್ದರು. ಪಿರಿಯಾಪಟ್ಟಣ ಬ್ಯಾಂಕಿಗೆ ಇದನ್ನು ಸಾಗಿಸುತ್ತಿರುವುದಾಗಿ ಬ್ಯಾಂಕ್ ನೌಕಕರು ಪೊಲೀಸರಿಗೆ ಹೇಳಿದ್ದಾರೆ.

    ಬ್ಯಾಂಕಿಗೆ ಹಣ ಸಾಗಿಸುವ ಮುನ್ನ ಚುನಾವಣಾಧಿಕಾರಿಗಳ ಅನುಮತಿ ಯಾಕೆ ಪಡೆಯಲಿಲ್ಲ? ಅದರಲ್ಲೂ ಗನ್ ಮ್ಯಾನ್ ಇಲ್ಲದೆ ಅಪಾರ ಪ್ರಮಾಣದ ಹಣ ಸಾಗಾಟ ಮಾಡುತ್ತಿರುವುದು ತಪ್ಪು. ಬ್ಯಾಂಕಿಗೆ ಸೇರಿದ ಹಣವನ್ನು ಚೀಲಗಳಲ್ಲಿ ಸಾಗಿಸುವ ಅವಶ್ಯಕತೆ ಏನು, ಸೂಕ್ತ ದಾಖಲೆ ಇಲ್ಲದೆ ಯಾಕೆ ಹಣ ಸಾಗಿಸುತ್ತಿದ್ದೀರಾ ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ ಈ ಹಣ ಬಹುಶಃ ಉಪಚುನಾವಣೆಗೆ ಹಂಚಲು ಸಾಗಿಸುತ್ತಿದ್ದಾರಾ ಎಂದು ಅಧಿಕಾರಿಗಳು ಶಂಕಿಸಿದ್ದಾರೆ.

    ಈ ಸಂಬಂಧ ಎಂ.ಡಿ.ಸಿ.ಸಿ ಬ್ಯಾಂಕಿನ ಇಬ್ಬರು ನೌಕರರಿಗೂ ನೋಟಿಸ್ ಜಾರಿ ಮಾಡಲಾಗಿದ್ದು, ಈ ಹಣಕ್ಕೆ ಸೂಕ್ತ ದಾಖಲೆ ಒದಗಿಸುವಂತೆ ಚುನಾವಣಾಧಿಕಾರಿಗಳು ಸೂಚಿಸಿದ್ದಾರೆ.

  • ದಾಖಲೆ ಇಲ್ಲದ 7 ಕೋಟಿ ರೂ. ಜಪ್ತಿ, ನಾಲ್ವರ ಬಂಧನ

    ದಾಖಲೆ ಇಲ್ಲದ 7 ಕೋಟಿ ರೂ. ಜಪ್ತಿ, ನಾಲ್ವರ ಬಂಧನ

    ಹೈದರಾಬಾದ್: ದಾಖಲೆ ಇಲ್ಲದ ಸುಮಾರು 7 ಕೋಟಿ ರೂ.ಗಳಷ್ಟು ಹಣವನ್ನು ನಗರದ ಟಾಸ್ಕ್ ಪೋರ್ಸ್ ಪೊಲೀಸರು ಬುಧವಾರ ಜಪ್ತಿ ಮಾಡಿದ್ದಾರೆ.

    ಈ ಪ್ರಕರಣದಲ್ಲಿ ನಾಲ್ವರನ್ನು ಬಂಧಿಸಲಾಗಿದೆ. ಆರೋಪಿಗಳನ್ನು ಬಂಧಿಸಿದ ನಂತರ ಇನ್ನೂ ಹಲವೆಡೆಗಳಲ್ಲಿ ದಾಳಿ ನಡೆಸಲಾಗಿದೆ. ಈ ಕುರಿತು ಪ್ರಕರಣ ದಾಖಲಾಗಿದ್ದು, ಸ್ಥಳದಲ್ಲಿ ಪತ್ತೆಯಾದ ಹಣ ಹಾಗೂ ವಸ್ತುಗಳನ್ನು ಜಪ್ತಿ ಮಾಡಿದ್ದೇವೆ ಎಂದು ಪೊಲೀಸ್ ಆಯುಕ್ತರಾದ ಅಂಜನಿ ಕುಮಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

    ಸ್ಥಳದಲ್ಲಿ ಹಣವನ್ನು ಹೊರಿತುಪಡಿಸಿ ಒಂದು ಕಾರು, ಮೂರು ಮೊಬೈಲ್ ಫೋನ್, ಮ್ಯಾಕ್‍ಬುಕ್, ಐಪ್ಯಾಡ್, ಲ್ಯಾಪ್‍ಟಾಪ್, 30 ಚೆಕ್ ಬುಕ್‍ಗಳು ಹಾಗೂ ನೋಟ್ ಕೌಟಿಂಗ್ ಮಷಿನ್‍ಗಳನ್ನು ಜಪ್ತಿ ಮಾಡಲಾಗಿದೆ.

    ಅಷ್ಟೇ ಅಲ್ಲದೆ ಜಪ್ತಿಯಾದ ಹಣವನ್ನು ಬರುವ ರಾಜ್ಯದಲ್ಲಿಯ ವಿಧಾನಸಭಾ ಚುನಾವಣೆಗೆ ಉಪಯೋಗಿಸಲು ಇಟ್ಟಿದ್ದರು. ಹಲವು ಕಂಪನಿಗಳು ಹಾಗೂ ಹವಾಲ ನಡೆಸುವವರು ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ನಾವು ಈ ಪ್ರಕರಣದ ತನಿಖೆಗಾಗಿ ಜಾರಿ ನಿರ್ದೇಶನಾಲಯ ಮತ್ತು ಆದಾಯ ತೆರಿಗೆ ಇಲಾಖೆಯಿಂದ ಸಹಾಯ ಪಡೆಯುತ್ತಿದ್ದೇವೆ. ಸದ್ಯ ಈ ಸಂಬಂಧ ವಿಚಾರಣೆಯನ್ನು ಮುಂದುವರಿದಿದೆ ಎಂದು ಅಂಜನಿ ಕುಮಾರ್ ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv