Tag: ಹಣ

  • ಹಾವೇರಿ| 33 ಸೆಕೆಂಡ್ ನಲ್ಲಿ 33 ಲಕ್ಷ ಹಣ ಕಳ್ಳತನ – ಓರ್ವ ಆರೋಪಿ ಅರೆಸ್ಟ್

    ಹಾವೇರಿ| 33 ಸೆಕೆಂಡ್ ನಲ್ಲಿ 33 ಲಕ್ಷ ಹಣ ಕಳ್ಳತನ – ಓರ್ವ ಆರೋಪಿ ಅರೆಸ್ಟ್

    ಹಾವೇರಿ: ಕಾರಿನ ಗಾಜು ಒಡೆದು 33 ಸೆಕೆಂಡ್‌ನಲ್ಲಿ 33 ಲಕ್ಷ ದೋಚಿದ (Money Theft) ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಹಾವೇರಿ ಪೊಲೀಸರು (Haveri Police) ಬಂಧಿಸಿದ್ದಾರೆ ಎಂದು ಎಸ್ಪಿ ಅಂಶುಕುಮಾರ್ ತಿಳಿಸಿದ್ದಾರೆ.

    ಆಂಧ್ರಪ್ರದೇಶ ಮೂಲದ ಎ.ಜಗದೀಶ್ (28) ಬಂಧಿತ ಆರೋಪಿ. ಕಳೆದ ನಾಲ್ಕು ದಿನಗಳ ಹಿಂದೆ ಕಾರಿನ ಗಾಜು ಒಡೆದು 33 ಲಕ್ಷ ಹಣ ದೋಚಿ ಆರೋಪಿಗಳು ಪರಾರಿಯಾಗಿದ್ದರು. ಕಳ್ಳರ ಕೈಚಳಕದ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಸದ್ಯ ಆರೋಪಿಯಿಂದ 30 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದೆ.  ಇದನ್ನೂ ಓದಿ: ಪುಣ್ಯಕ್ಷೇತ್ರಗಳ ನದಿ ತೀರದಲ್ಲಿ ಶಾಂಪೂ, ಸೋಪುಗಳ ಮಾರಾಟ ನಿಷೇಧ

    ಘಟನೆ ಏನು?
    ಸಿವಿಲ್ ಕಾಂಟ್ರ್ಯಾಕ್ಟರ್ ಸಂತೋಷ್ ಹಾವೇರಿಯ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ದೈನಂದಿನ ವ್ಯವಹಾರಕ್ಕಾಗಿ 33 ಲಕ್ಷ ರೂ. ಹಣವನ್ನು ಸಂಬಂಧಿಕರ ಖಾತೆಯಿಂದ ಚೆಕ್ ಮುಖಾಂತರ ಡ್ರಾ ಮಾಡಿಕೊಂಡಿದ್ದರು. ಡ್ರಾ ಮಾಡಿದ ಹಣವನ್ನು ಕಾರಿನ ಹಿಂಭಾಗದ ಸೀಟಿನಲ್ಲಿಟ್ಟಿದ್ದರು. ಇದನ್ನೂ ಓದಿ: ರನ್ಯಾ ರಾವ್ ಶೋಕಿಗೆ ಅಧಿಕಾರಿಗಳೇ ಶಾಕ್ – ನಟಿ ಬಳಿಯಿತ್ತು ಕೋಟಿ ಮೌಲ್ಯದ 39 ವಿದೇಶಿ ವಾಚ್‌ಗಳು

    ಸಂತೋಷ್ ಮಾ.6ರಂದು ಸಂಜೆ 4:05ಕ್ಕೆ ಮನೆ ಮುಂದೆ ಕಾರು ನಿಲ್ಲಿಸಿ, ಕಾರಿನಲ್ಲಿ ಹಣ ಬಿಟ್ಟು ಮನೆಯೊಳಗೆ ಹೋಗಿದ್ದರು. ಮನೆಯಲ್ಲಿ ಊಟ ಮಾಡಿ ವಾಪಸ್ ಸಂಜೆ 5:20ಕ್ಕೆ ಕಾರಿನ ಹತ್ತಿರ ಬಂದು ನೋಡಿದಾಗ ಕಾರಿನ ಗ್ಲಾಸ್ ಒಡೆದು ಹಣ ಕಳ್ಳತನ ಆಗಿರುವುದು ಬೆಳಕಿಗೆ ಬಂದಿದೆ. ಇದನ್ನೂ ಓದಿ: Bengaluru| ಕುಂಭಮೇಳ ಟೂರ್ ಪ್ಯಾಕೇಜ್ ನೆಪದಲ್ಲಿ 70 ಲಕ್ಷ ವಂಚನೆ – ಆರೋಪಿ ಅರೆಸ್ಟ್

    2 ಬೈಕ್‌ಗಳಲ್ಲಿ ಬಂದಿದ್ದ 4 ಜನ ಕಳ್ಳರಲ್ಲಿ ಒಬ್ಬ ಕಾರಿನ ಬಳಿ ಸುತ್ತಾಡಿ, ಕಾರಿನ ಗ್ಲಾಸ್ ಒಡೆದು ಕಾರಿನ ಒಳಹೊಕ್ಕು ಹಣವಿದ್ದ ಬ್ಯಾಗ್ ತೆಗೆದುಕೊಂಡಿದ್ದಾನೆ. ನಂತರ ಬೈಕ್‌ನಲ್ಲಿ ಬಂದ ಮತ್ತೊಬ್ಬ ಖದೀಮ ಆತನನ್ನು ಕರೆದುಕೊಂಡು ಪರಾರಿಯಾಗಿದ್ದಾನೆ. ಘಟನೆ ಸಂಬಂಧ ಹಾವೇರಿ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದನ್ನೂ ಓದಿ: 7ನೇ ತರಗತಿ ವಿದ್ಯಾರ್ಥಿನಿಗೆ ಬಾಲ್ಯವಿವಾಹ – ಬರಲ್ಲ ಅಂತ ಕಿರುಚಾಡಿದ್ರೂ ಹೊತ್ತೊಯ್ದ ಪಾಪಿಗಳು

  • Ankola| ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ 1.15 ಕೋಟಿ ಹಣ ಪತ್ತೆ

    Ankola| ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ 1.15 ಕೋಟಿ ಹಣ ಪತ್ತೆ

    ಕಾರವಾರ: ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ (Car) 1.15 ಕೋಟಿ ರೂ. ಪತ್ತೆಯಾದ ಘಟನೆ ಅಂಕೋಲದ (Ankola) ರಾಮನಗುಳಿ ಬಳಿಯ ರಾಷ್ಟ್ರಿಯ ಹೆದ್ದಾರಿ 66ರ ಪಕ್ಕದ ನಿರ್ಜನ ಪ್ರದೇಶದಲ್ಲಿ ನಡೆದಿದೆ.

    ಮಂಗಳವಾರ ಸಂಜೆಯಿಂದ ನಿರ್ಜನ ಪ್ರದೇಶದಲ್ಲಿ ಕಾರನ್ನು ಪಾರ್ಕ್ ಮಾಡಲಾಗಿತ್ತು. ಈ ಬಗ್ಗೆ ಅಂಕೋಲಾ ಪೊಲೀಸರಿಗೆ ಸಾರ್ವಜನಿಕರಿಂದ ಮಾಹಿತಿ ಸಿಗುತ್ತಿದ್ದಂತೆ ಪರಿಶೀಲನೆಗೆ ಬಂದ ಪೊಲೀಸರು ಕಾರಿನ ಬಾಗಿಲು ಓಪನ್ ಮಾಡಿ ಪರಿಶೀಲನೆ ನಡೆಸಿದ ವೇಳೆ ಕಾರಿನಲ್ಲಿ ಕಬ್ಬಿಣದ ಬಾಕ್ಸ್ ಸಿಕ್ಕಿದ್ದು, ಅದನ್ನು ತೆರೆದು ನೋಡಿದಾಗ ಅದರಲ್ಲಿ 1.15 ಕೋಟಿ ಹಣ (Money) ಇರುವುದು ಕಂಡುಬಂದಿದೆ. ಇದನ್ನೂ ಓದಿ: MUDA Scam| ಒಂದೇ ದಿನದಲ್ಲಿ ಒಬ್ಬನ ಹೆಸರಿಗೆ 31 ಸೈಟ್ ರಿಜಿಸ್ಟರ್ – ಇಡಿಯಿಂದ 160 ಸೈಟ್‌ ಜಪ್ತಿ

    ಕೆಎ 51 ಎಮ್‌ಬಿ 9634 ನಂಬರ್ ಪ್ಲೇಟಿನ ಕಾರು ಇದಾಗಿದೆ. ಕಾರಿನ ರಿಜಿಸ್ಟ್ರೇಷನ್ ನಂಬರ್ ಅನ್ನು ಪರಿಶೀಲಿಸಿದಾಗ ಆಲ್ಟ್ರೋಜ್ ಕಾರು ಎಂದು ತೋರಿಸಿದ್ದು, ಮಡಿಕೇರಿ ಆರ್‌ಟಿಓ ಪಾಸಿಂಗ್ ಹೊಂದಿದೆ. ಅಸಲಿಗೆ ಇದು ಕ್ರೇಟಾ ಕಾರಾಗಿದ್ದು, ಈ ಕಾರಿನ ಬಾನೆಟ್, ಡಿಕ್ಕಿ ತೆರೆದ ಸ್ಥಿತಿಯಲ್ಲಿದ್ದು, ಕಾರಿನ ಸೀಟ್ ಕಿತ್ತು ಹೊರಗೆ ಬಿದ್ದಿರುವ ಸ್ಥಿತಿಯಲ್ಲಿ ಹಾಗೂ ಕಿಟಕಿ ಗಾಜುಗಳು ಒಡೆದ ಸ್ಥಿತಿಯಲ್ಲಿರುವುದು ಕಂಡುಬಂದಿದೆ. ಇದನ್ನೂ ಓದಿ: ಮೈಸೂರು ಮಹಾರಾಣಿ ಕಾಲೇಜು ಕಟ್ಟಡ ಕುಸಿತ – ಅವಶೇಷಗಳಡಿ ಸಿಲುಕಿದ್ದ ಕಾರ್ಮಿಕ ಸಾವು

    ಸದ್ಯ ಅಂಕೋಲ ಪೊಲೀಸರು ವಾಹನವನ್ನು ವಶಕ್ಕೆ ಪಡೆದು ಠಾಣೆಯಲ್ಲಿ ಇರಿಸಿದ್ದು ,ಯಾವುದೋ ದರೋಡೆ ಮಾಡಿ ಹಣ ಸಾಗಿಸುತ್ತಿರುವ ಅನುಮಾನ ವ್ಯಕ್ತಪಡಿಸಿದ್ದಾರೆ. ಅಂಕೋಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮಹಾಕುಂಭ ಮೇಳದಲ್ಲಿ ಕಾಲ್ತುಳಿತ – 10 ಸಾವು

  • Ramanagara | ಹಣದ ಆಸೆಗೆ ಸ್ವಂತ ಮಗುವನ್ನೇ ಮಾರಿದ ತಾಯಿ – ನಾಲ್ವರು ಅರೆಸ್ಟ್

    Ramanagara | ಹಣದ ಆಸೆಗೆ ಸ್ವಂತ ಮಗುವನ್ನೇ ಮಾರಿದ ತಾಯಿ – ನಾಲ್ವರು ಅರೆಸ್ಟ್

    ರಾಮನಗರ: ಹಣದ (Money) ಆಸೆಗೆ ಬಿದ್ದ ತಾಯಿಯೋರ್ವಳು ತನ್ನ ಗಂಡನಿಗೂ ತಿಳಿಸದೇ ಹೆತ್ತ ಮಗುವನ್ನೇ (Child) ಮಾರಾಟ ಮಾಡಿರುವ ಘಟನೆ ರಾಮನಗರದಲ್ಲಿ (Ramanagara) ನಡೆದಿದೆ. ಈ ಸಂಬಂಧ ಪತ್ನಿಯ ವಿರುದ್ಧ ಪತಿಯೇ ದೂರು ನೀಡಿದ್ದು, ಪತ್ನಿ ಹಾಗೂ ಇತರೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

    ರಾಮನಗರದ ಯಾರಬ್ ನಗರ ನಿವಾಸಿ ಸದ್ದಾಂ ಪಾಷಾ ಹಾಗೂ ನಸ್ರೀನ್ ತಾಜ್ ಕಳೆದ 6 ವರ್ಷಗಳ ಹಿಂದೆ ಮದುವೆ ಆಗಿದ್ದರು. ಅವಳಿ ಮಕ್ಕಳು ಸೇರಿ ಒಟ್ಟು 4 ಮಕ್ಕಳಿದ್ದು, ಕೂಲಿ ಕೆಲಸ ಮಾಡುತ್ತಿದ್ದ ಸದ್ದಾಂ ಬಡತನದಲ್ಲಿ ಜೀವನ ನಡೆಸುತ್ತಿದ್ದರು. ಕಳೆದ 30 ದಿನಗಳ ಹಿಂದೆ ದಂಪತಿಗೆ ಗಂಡು ಮಗು ಜನಿಸಿತ್ತು. ಸದ್ದಾಂ ಕೆಲ ಕೈಸಾಲ ಕೂಡಾ ಮಾಡಿಕೊಂಡಿದ್ದ ಹಿನ್ನೆಲೆ ಈ ಸಾಲ ತೀರಿಸುವ ಸಂಬಂಧ ಕೊನೆಯ ಮಗುವನ್ನು ಮಾರಾಟ ಮಾಡುವಂತೆ ನಸ್ರೀನ್, ಸದ್ದಾಂಗೆ ಪೀಡಿಸುತ್ತಲೇ ಬಂದಿದ್ದಳು. ಆದರೆ, ಸದ್ದಾಂ ಪತ್ನಿಯ ಮಾತನ್ನು ತಿರಸ್ಕರಿಸಿದ್ದ. ಇದನ್ನೂ ಓದಿ: ಎಸ್‌ಎಂಕೆ ಅಂತಿಮ ದರ್ಶನ ಪಡೆದ ಸಿಎಂ

    ಕೊನೆಗೆ ಡಿ.5ಕ್ಕೆ ಪತಿ ಕೆಲಸಕ್ಕೆ ಹೋಗಿದ್ದನ್ನು ಬಳಸಿಕೊಂಡ ನಸ್ರೀನ್ ಸ್ಥಳೀಯ ಅಸ್ಲಾಂ ಹಾಗೂ ಫಾಹಿಮಾ ಸಹಾಯದೊಂದಿಗೆ ಬೆಂಗಳೂರಿನ ನಿವಾಸಿ ತರ್ನಮ್ ಸುಲ್ತಾನ್ ಎಂಬವರಿಗೆ ಗಂಡು ಮಗುವನ್ನು 1.5 ಲಕ್ಷಕ್ಕೆ ಮಾರಾಟ ಮಾಡಿದ್ದಾಳೆ. ಇನ್ನು ಪತಿ ಸದ್ದಾಂ ಪಾಷಾ ಕೆಲಸ ಮುಗಿಸಿ ಮನೆಗೆ ಬಂದ ಸಂದರ್ಭದಲ್ಲಿ ಮಗುವಿನ ಕುರಿತು ವಿಚಾರಿಸಿದ್ದಾನೆ. ಈ ವೇಳೆ ನಸ್ರೀನ್ ಮಗುವಿಗೆ ಹುಷಾರಿಲ್ಲ ಸಂಬಂಧಿಕರು ಕರೆದುಕೊಂಡು ಹೋಗಿದ್ದು, ಬೆಳಗ್ಗೆ ವಾಪಸ್ ಬಿಡುತ್ತಾರೆ ಎಂದು ಸಮಜಾಯಿಷಿ ನೀಡಿದ್ಧಾಳೆ. ಪತ್ನಿಯ ಮಾತನ್ನು ನಂಬಿದ್ದ ಸದ್ದಾಂ ಪಾಷಾ ಊಟ ಮುಗಿಸಿ ಮಲಗಿದ್ದ. ಮಾರನೆಯ ದಿನವೂ ಮಗುವಿಗಾಗಿ ದಂಪತಿಗಳ ನಡುವೆ ಗಲಾಟೆಯಾಗಿದ್ದು, ಇದರಿಂದ ಸದ್ದಾಂ ತಲೆಗೆ ಪೆಟ್ಟು ಬಿದ್ದಿದೆ. ಇದನ್ನೂ ಓದಿ: ಪ್ರಧಾನಿಯಾಗುವ ಅವಕಾಶವಿದೆ ಅಂದಿದ್ದಕ್ಕೆ ನಕ್ಕಿದ್ದರು – ಮಾಜಿ ಸಚಿವ ಎಂ.ಸಿ ನಾಣಯ್ಯ

    ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ನಂತರ ಡಿ.7ರಂದು ರಾಮನಗರ ಪುರ ಪೊಲೀಸ್ ಠಾಣೆಯಲ್ಲಿ ಸದ್ದಾಂ ಪತ್ನಿ ವಿರುದ್ಧ ದೂರು ದಾಖಲಿಸಿದ್ದಾನೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ರಾಮನಗರ ಟೌನ್ ಪೊಲೀಸರು, ಕಾರ್ಯಾಚರಣೆ ನಡೆಸಿ ಮಗುವನ್ನು ರಕ್ಷಿಸಿದ್ದಾರೆ. ಮಗುವಿನ ತಾಯಿ ಸೇರಿ ನಾಲ್ವರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದಾರೆ. ಇದನ್ನೂ ಓದಿ: ಎಸ್‌ಎಂ ಕೃಷ್ಣ ವಿಧಿವಶ – ಬುಧವಾರ ರಾಮನಗರದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ

  • ಮತ್ತೆ ಕೋಟ್ಯಧೀಶನಾದ ಮಲೆ ಮಾದಪ್ಪ – 2.43 ಕೋಟಿ ರೂ. ಕಾಣಿಕೆ ಹಣ ಸಂಗ್ರಹ

    ಮತ್ತೆ ಕೋಟ್ಯಧೀಶನಾದ ಮಲೆ ಮಾದಪ್ಪ – 2.43 ಕೋಟಿ ರೂ. ಕಾಣಿಕೆ ಹಣ ಸಂಗ್ರಹ

    -ಭಕ್ತರಿಂದ 62 ಗ್ರಾಂ ಚಿನ್ನ, 2.513 ಕೆಜಿ ಬೆಳ್ಳಿ ಅರ್ಪಣೆ

    ಚಾಮರಾಜನಗರ: ಜಿಲ್ಲೆಯ ಹನೂರು (Hanur) ತಾಲೂಕಿನ ಇತಿಹಾಸ ಪ್ರಸಿದ್ಧ ಮಲೆ ಮಹದೇಶ್ವರ (Male Mahadeshwara Temple) ಮತ್ತೆ ಕೋಟ್ಯಧೀಶನಾಗಿದ್ದಾನೆ.

    ಮಹದೇಶ್ವರನ ಹುಂಡಿಯಲ್ಲಿ ಕಳೆದ 27 ದಿನಗಳ ಅವಧಿಯಲ್ಲಿ 2.43 ಕೋಟಿ ರೂ. ಕಾಣಿಕೆ ಹಣ ಸಂಗ್ರಹವಾಗಿದೆ. ನಗದು ಹಣ ಜೊತೆಗೆ 62 ಗ್ರಾಂ ಚಿನ್ನ, 2.51 ಕೆಜಿ ಬೆಳ್ಳಿಯನ್ನು ಭಕ್ತರು ಮಲೆ ಮಾದಪ್ಪನಿಗೆ ಅರ್ಪಿಸಿದ್ದಾರೆ. ಇದನ್ನೂ ಓದಿ: ಮಾಜಿ ಸಚಿವ ಮನೋಹರ್‌ ತಹಶೀಲ್ದಾರ್‌ ವಿಧಿವಶ

    ಬಿಗಿ ಬಂದೋಬಸ್ತ್‌ನಲ್ಲಿ ಮಲೆ ಮಹದೇಶ್ವರ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ರಘು ನೇತೃತ್ವದಲ್ಲಿ ಹುಂಡಿಗಳ ಎಣಿಕೆ ಕಾರ್ಯ ನಡೆಯಿತು. ಈ ಬಾರಿ ದೀಪಾವಳಿ ಹಬ್ಬ, ಅಮವಾಸ್ಯೆ ಹಾಗೂ ಕಾರ್ತಿಕ ಸೋಮವಾರ ಹಿನ್ನೆಲೆ ಲಕ್ಷಾಂತರ ಮಂದಿ ಮಲೆ ಮಹದೇಶ್ವರನ ದರ್ಶನ ಪಡೆದಿದ್ದರು. ಈ ಹಿನ್ನೆಲೆ ಹುಂಡಿ ಆದಾಯದಲ್ಲೂ ಕೂಡ ಏರಿಕೆಯಾಗಿದೆ. ಇದನ್ನೂ ಓದಿ: ಧಾರವಾಡದಲ್ಲಿ ತಾಯಂದಿರಿಂದಲೇ ಮಕ್ಕಳ ಕಿಡ್ನ್ಯಾಪ್‌ – ತಾಯಂದಿರು, ಅವರ ಪ್ರೇಮಿಗಳು ಅರೆಸ್ಟ್‌

  • Odisha| ಸಗಣಿ ರಾಶಿಯಲ್ಲಿ ಬಚ್ಚಿಟ್ಟಿದ್ದ 20 ಲಕ್ಷ ರೂ. ಸೀಜ್

    Odisha| ಸಗಣಿ ರಾಶಿಯಲ್ಲಿ ಬಚ್ಚಿಟ್ಟಿದ್ದ 20 ಲಕ್ಷ ರೂ. ಸೀಜ್

    ಭುವನೇಶ್ವರ: ಹಸುವಿನ ಸಗಣಿ ರಾಶಿಯಲ್ಲಿ (Cow Dung) ಬಚ್ಚಿಟ್ಟಿದ್ದ 20 ಲಕ್ಷ ರೂ. ಹಣವನ್ನು ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡ ಘಟನೆ ಒಡಿಶಾದ (Odisha) ಬಾಲಾಸೋರ್ (Balasore) ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ.

    ಹೈದರಾಬಾದ್ ಮತ್ತು ಒಡಿಶಾ ಪೊಲೀಸ್ ತಂಡ ದಾಳಿ ನಡೆಸಿ ಕಮರ್ದಾ ಪೊಲೀಸ್ ಠಾಣಾ ವ್ಯಾಪ್ತಿಯ ಬಡಮಂಡರುಣಿ ಗ್ರಾಮದಲ್ಲಿ ಹಣವನ್ನು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಮಸ್ಕ್‌ ಜೊತೆ ಒಪ್ಪಂದ – ಫಸ್ಟ್‌ ಟೈಂ ಸ್ಪೇಸ್‌ ಎಕ್ಸ್‌ ರಾಕೆಟ್‌ನಲ್ಲಿ ಹಾರಲಿದೆ ಇಸ್ರೋ ಉಪಗ್ರಹ

    ಸಾಂದರ್ಭಿಕ ಚಿತ್ರ

    ಗೋಪಾಲ್ ಎಂಬಾತ ಹೈದರಾಬಾದ್‌ನ ಕೃಷಿ ಆಧಾರಿತ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಕಂಪನಿಯ ಲಾಕರ್‌ನಿಂದ 20 ಲಕ್ಷಕ್ಕೂ ಹೆಚ್ಚು ಹಣವನ್ನು ಕಳ್ಳತನ ಮಾಡಿದ್ದ. ಬಳಿಕ ತನ್ನ ಸೋದರ ಮಾವ ರವೀಂದ್ರ ಬೆಹೆರಾ ಮೂಲಕ ಹಣವನ್ನು ಗ್ರಾಮಕ್ಕೆ ಕಳುಹಿಸಿದ್ದಾನೆ ಎಂದು ಆರೋಪಿಸಿ ದೂರು ನೀಡಲಾಗಿತ್ತು. ಇದನ್ನೂ ಓದಿ: ಜಪಾನ್‌ನಿಂದ ಚೀನಾಗೆ ಶಿಫ್ಟ್ ಆಯ್ತು ಟ್ರಂಪ್ ‘ವಾಣಿಜ್ಯ ಯುದ್ಧ’ ಕಾರ್ಡ್ – ಭಾರತ ಮುಂದಿನ ಟಾರ್ಗೆಟ್?

    ದೂರಿನ ಆಧಾರದ ಮೇರೆಗೆ ಹೈದರಾಬಾದ್ ಪೊಲೀಸರ ತಂಡ ಕಮರ್ದಾ ಪೊಲೀಸರೊಂದಿಗೆ ರವೀಂದ್ರ ಮನೆಯ ಮೇಲೆ ದಾಳಿ ನಡೆಸಿ ಸಗಣಿ ರಾಶಿಯಲ್ಲಿ ಬಚ್ಚಿಟ್ಟಿದ್ದ ಅಪಾರ ಪ್ರಮಾಣದ ಹಣವನ್ನು ವಶಪಡಿಸಿಕೊಂಡಿದೆ. ಇದನ್ನೂ ಓದಿ: ಸರ್ಕಾರಿ ನೌಕರರ ಬಿಪಿಎಲ್‌ ಕಾರ್ಡ್‌ ರದ್ದು – ಕಲಬುರಗಿಯಲ್ಲಿ ಹೆಚ್ಚು, ಉಡುಪಿಯಲ್ಲಿ ಅತಿ ಕಡಿಮೆ

    ಹಣ ಕದ್ದ ಬಳಿಕ ಗೋಪಾಲ್ ಹಾಗೂ ರವೀಂದ್ರ ಇಬ್ಬರೂ ತಲೆಮರೆಸಿಕೊಂಡಿದ್ದಾರೆ ಎಂದು ಕಮರ್ದಾ ಪೊಲೀಸ್ ಠಾಣೆ ಐಐಸಿ ಪ್ರೇಮದ ನಾಯಕ್ ಹೇಳಿದ್ದಾರೆ. ದಾಳಿಯ ವೇಳೆ ಆರೋಪಿಯ ಕುಟುಂಬದ ಸದಸ್ಯರೊಬ್ಬರನ್ನು ಬಂಧಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಮುಜರಾಯಿ ವ್ಯಾಪ್ತಿಯ ದೇವಸ್ಥಾನಗಳಿಗೆ ಫೆನ್ಸಿಂಗ್ – ಒತ್ತುವರಿ ಆಗಿದ್ರೆ ಕೋರ್ಟ್ ಮೂಲಕ ತೆರವು

  • ಜಮೀರ್‌ಗೆ ಮತ್ತೊಂದು ಸಂಕಷ್ಟ; ಸಚಿವರ ವಿರುದ್ಧ ಚುನಾವಣಾಧಿಕಾರಿಗಳಿಂದ ದೂರು

    ಜಮೀರ್‌ಗೆ ಮತ್ತೊಂದು ಸಂಕಷ್ಟ; ಸಚಿವರ ವಿರುದ್ಧ ಚುನಾವಣಾಧಿಕಾರಿಗಳಿಂದ ದೂರು

    ರಾಯಚೂರು: ಮುಡಾ ಪ್ರಕರಣದಲ್ಲಿ (MUDA Case) ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್ ನೀಡಿದ್ದ ತೀರ್ಪನ್ನು `ಪೊಲಿಟಿಕಲ್ ಜಡ್ಜ್‌ಮೆಂಟ್’ ಎಂದಿದ್ದ ಸಚಿವ ಜಮೀರ್ ಅಹ್ಮದ್ (Zameer Ahmed Khan) ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರು ಸೂಚನೆ ನೀಡಿದ್ದರು. ಈ ಬೆನ್ನಲ್ಲೇ ಜಮೀರ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

    ಚನ್ನಪಟ್ಟಣದ (Channapatna) ಯಾರಬ್‌ನಗರದಲ್ಲಿ ಮತಪ್ರಚಾರದ ವೇಳೆ ಮಹಿಳೆಯೊಬ್ಬರಿಗೆ 500 ರೂ. ಮುಖಬೆಲೆಯ ನೋಟುಗಳನ್ನು ಜಮೀರ್ ನೀಡಿದ್ದರು. ಮತಪ್ರಚಾರದ ವೇಳೆ ಹಣ ಹಂಚಿಕೆ ಆರೋಪದಡಿ ಚುನಾವಣಾಧಿಕಾರಿಗಳು ದೂರು ನೀಡಿದ್ದಾರೆ. ಇದನ್ನೂ ಓದಿ: ಪ್ರೇಮಿ ಮದುವೆಗೆ ನಿರಾಕರಿಸಿದ ಆರೋಪ- ಯುವತಿ ಆತ್ಮಹತ್ಯೆಗೆ ಶರಣು

    ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಹಾಗೂ `ಪಬ್ಲಿಕ್ ಟಿವಿ’ ವರದಿ ಉಲ್ಲೇಖಿಸಿ ಚುನಾವಣಾಧಿಕಾರಿಗಳು ದೂರು ನೀಡಿದ್ದಾರೆ. ಈ ಕುರಿತು ಚನ್ನಪಟ್ಟಣ ಪೂರ್ವ ಪೊಲೀಸ್ ಠಾಣೆಯಲ್ಲಿ ಎನ್‌ಸಿಆರ್ ದಾಖಲಿಸಲಾಗಿದೆ. ಇದನ್ನೂ ಓದಿ: ಸಮಾಜ ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ, ರಾಷ್ಟ್ರೀಯ ಶತ್ರುಗಳ ವಿರುದ್ಧ ಹೋರಾಡಬೇಕಿದೆ – ಮೋದಿ ವಾಗ್ದಾಳಿ

    ಪ್ರಕರಣ ಏನು?
    ಯಾರಬ್‌ನಗರದಲ್ಲಿ ಪ್ರಚಾರದ ವೇಳೆ ಮಹಿಳೆಗೆ 500 ರೂ. ಮುಖಬೆಲೆಯ ನೋಟನ್ನು ಜಮೀರ್ ಕೊಟ್ಟಿದ್ದರು. ಗನ್ ಮ್ಯಾನ್ ಬಳಿಯಿಂದ ಹಣ ಪಡೆದು ಪ್ರಚಾರ ವಾಹನದ ಮೇಲಿಂದಲೇ ಮಹಿಳೆಗೆ ಹಣ ನೀಡಿದ್ದರು. ಈ ದೃಶ್ಯದ ವೀಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಶನಿವಾರ ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ಪರ ಸಚಿವ ಜಮೀರ್, ರಹೀಂ ಖಾನ್, ಡಿ.ಕೆ.ಸುರೇಶ್ ಪ್ರಚಾರ ನಡೆಸಿದ್ದರು. ಇದನ್ನೂ ಓದಿ: ದೆಹಲಿ, ಮುಂಬೈನಲ್ಲಿ ಈರುಳ್ಳಿ ದರ ಕೆ.ಜಿ. 80 ರೂ.ಗೆ ಏರಿಕೆ – 5 ವರ್ಷಗಳಲ್ಲೇ ಗರಿಷ್ಠ

    ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ನಾಯಕರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಕಾಂಗ್ರೆಸ್ ಸಚಿವರಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಆರೋಪ ಮಾಡಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಮತ್ತೆ ಸುವರ್ಣಯುಗ ಆಡಳಿತಕ್ಕೆ ಬರಲಿದೆ, ಅದಕ್ಕಾಗಿ ನಿಖಿಲ್‌ ಗೆಲ್ಲಿಸಿ: ಹೆಚ್‌ಡಿಕೆ ಮನವಿ

  • ವರಮಹಾಲಕ್ಷ್ಮೀ ಹಬ್ಬದ ಚೀಟಿ ಹೆಸರಿನಲ್ಲಿ ಐದು ಕೋಟಿಗೂ ಹೆಚ್ಚು ವಂಚಿಸಿ ಪರಾರಿ

    ವರಮಹಾಲಕ್ಷ್ಮೀ ಹಬ್ಬದ ಚೀಟಿ ಹೆಸರಿನಲ್ಲಿ ಐದು ಕೋಟಿಗೂ ಹೆಚ್ಚು ವಂಚಿಸಿ ಪರಾರಿ

    ಆನೇಕಲ್: ವರಮಹಾಲಕ್ಷ್ಮೀ (Varamahalakshmi Festival) ಹಬ್ಬದ ಚೀಟಿ ಹೆಸರಿನಲ್ಲಿ ಐದು ಕೋಟಿಗೂ ಹೆಚ್ಚು ವಂಚಿಸಿ (Fraud) ಮಾಲೀಕ ಪರಾರಿಯಾದ ಘಟನೆ ಆನೇಕಲ್ (Anekal) ತಾಲೂಕಿನ ಕಾಚನಾಯಕನಹಳ್ಳಿಯಲ್ಲಿ ನಡೆದಿದೆ.

    ಚಿನ್ನ ಕೊಡುತ್ತೇನೆ ಎಂದು ಹಣ ಕಟ್ಟಿಸಿಕೊಂಡು ಸೇಟು ವಂಚನೆ ಮಾಡಿದ್ದಾನೆ. ಲಕ್ಷಾಂತರ ರೂ. ಸಾಲ ಮಾಡಿ ಮಹಿಳೆಯರು (Woman) ಹಣ ಕಟ್ಟಿದ್ದರು. ಇದೀಗ ಚಿನ್ನ ಅಡವಿಟ್ಟು ಮನೆ ಖಾಲಿ ಮಾಡಿಕೊಂಡು ಸೇಟು ಎಸ್ಕೇಪ್ ಆಗಿದ್ದಾನೆ. ಮುನಾರಾಮ್ ಎಂಬ ರಾಜಸ್ಥಾನಿ ಮೂಲದ ಮಾರ್ವಾಡಿ ಆನಂದ್ ಜ್ಯುವೆಲರ್ಸ್ ಅಂಡ್ ಕೇಸರ್ ಬ್ಯಾಂಕರ್ಸ್‌ನ ಮಾಲೀಕನಾಗಿದ್ದು, ಹತ್ತು ವರ್ಷಕ್ಕೂ ಹೆಚ್ಚು ದಿನದಿಂದ ಇಲ್ಲೇ ವಾಸವಿದ್ದ. ಈತ 150ಕ್ಕೂ ಹೆಚ್ಚು ಜನರಿಂದ ಚೀಟಿ ಹಾಕಿಸಿಕೊಂಡು ಚಿನ್ನ ಅಡಮಾನ ಇಟ್ಟುಕೊಂಡಿದ್ದ. ಹಬ್ಬ ಎಂದು ಚೀಟಿ ಹಾಕಿದ್ದವರು ಚಿನ್ನ ಬಿಡಿಸಿಕೊಂಡು ಬರಲು ಹೋದಾಗ ವಂಚನೆ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಮ್ಯಾನ್ ಪೋರ್ಟಬಲ್ ಆಂಟಿ ಟ್ಯಾಂಕ್ ಗೈಡೆಡ್ ಕ್ಷಿಪಣಿಯ ಯಶಸ್ವಿ ಪ್ರಯೋಗ ನಡೆಸಿದ ಡಿಆರ್‌ಡಿಒ

    ಚಿನ್ನದ ಅಂಗಡಿ ಮಾಲೀಕ ಅಂಗಡಿ ಹಾಗೂ ಮನೆ ಖಾಲಿ ಮಾಡಿಕೊಂಡು ಎಸ್ಕೇಪ್ ಆಗಿದ್ದು ಕಂಡು ಆತಂಕಕ್ಕೊಳಗಾದ ಗ್ರಾಮಸ್ಥರು ಪೊಲೀಸ್ ಠಾಣೆಗೆ ದೌಡಾಯಿಸಿದ್ದಾರೆ. ಸೇಟು ಇಂದ ವಂಚನೆಗೊಳಗಾದವರು ಸೂರ್ಯ ನಗರ ಪೊಲೀಸ್ ಠಾಣೆ ಎದುರು ಜಮಾಯಿಸಿದ್ದಾರೆ. ವರಮಹಾಲಕ್ಷ್ಮೀ ಹಬ್ಬ ಎಂದು ಹಣ ಕಟ್ಟಿದವರು ಈಗ ಬೀದಿಗೆ ಬಿದ್ದಿದ್ದಾರೆ. ಇತ್ತ ಹಬ್ಬವೂ ಇಲ್ಲ, ಅತ್ತ ಹಣವೂ ಇಲ್ಲ, ಹಣ ಕಟ್ಟಿಸಿಕೊಂಡವನು ಇಲ್ಲ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಘಟನೆ ಕುರಿತು ಸೂರ್ಯ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿ ಕುರಿತು ದೆಹಲಿ ಮಟ್ಟದಲ್ಲಿ ಚರ್ಚಿಸಿ ನಿರ್ಧಾರ: ವಿಜಯೇಂದ್ರ

  • ಹೆಚ್ಚು ಸಂಬಳದ ಆಸೆಗೆ ಉಜ್ಬೇಕಿಸ್ತಾನಕ್ಕೆ ಹೋದ ಕರ್ನಾಟಕದ ಯುವಕರು – ಅನ್ನ, ನೀರು ಸಿಗದೇ ಪರದಾಟ

    ಹೆಚ್ಚು ಸಂಬಳದ ಆಸೆಗೆ ಉಜ್ಬೇಕಿಸ್ತಾನಕ್ಕೆ ಹೋದ ಕರ್ನಾಟಕದ ಯುವಕರು – ಅನ್ನ, ನೀರು ಸಿಗದೇ ಪರದಾಟ

    – ಸ್ವದೇಶಕ್ಕೆ ಕರೆಸಿಕೊಳ್ಳುವಂತೆ ಸಿಎಂ, ಪಿಎಂಗೆ ಮನವಿ

    ಬೀದರ್: ಲಕ್ಷ ಲಕ್ಷ ಸಂಬಳದ ಆಸೆಗೆ ಕೆಲಸ ಅರಸಿ ಉಜ್ಬೇಕಿಸ್ತಾನಕ್ಕೆ (Uzbekistan) ಹೋಗಿದ್ದ ಬೀದರ್ (Bidar) ಹಾಗೂ ಕಲಬರಗಿ (Kalaburagi) ಮೂಲದ ಯುವಕರಿಗೆ ಸಂಕಷ್ಟ ಎದುರಾಗಿದ್ದು, ಉದ್ಯೋಗ ಹಾಗೂ ಅನ್ನ, ನೀರು ಇಲ್ಲದೆ ಪರದಾಡುತ್ತಿದ್ದಾರೆ.

    ಬೀದರ್ ಹಾಗೂ ಕಲಬರಗಿಯ 14 ಮಂದಿ ಯುವಕರು ಲಕ್ಷಾಂತರ ಸಂಬಳದ ಆಸೆಗೆ ಮಧ್ಯವರ್ತಿಗಳಿಗೆ ಲಕ್ಷ ಲಕ್ಷ ಹಣ ನೀಡಿ ಉಜ್ಬೇಕಿಸ್ತಾನಕ್ಕೆ ತೆರಳಿ ಮೋಸ ಹೋಗಿದ್ದಾರೆ. ಅತ್ತ ಉದ್ಯೋಗವೂ ಇಲ್ಲದೇ ತಿನ್ನಲು ಅನ್ನ ನೀರು ಕೂಡ ಸಿಗದೇ ಇದೀಗ ಯುವಕರು ಪರದಾಡುವಂತಾಗಿದೆ. ಇದನ್ನೂ ಓದಿ: ರಾಗಾ ಹೊಲಿದ ಚಪ್ಪಲಿಗೆ 10 ಲಕ್ಷ ರೂ. ಆಫರ್ ತಿರಸ್ಕರಿಸಿದ ಚಮ್ಮಾರ

    ಉಜ್ಬೇಕಿಸ್ತಾನಕ್ಕೆ ತೆರಳಿದವರ ಪೈಕಿ ಬೀದರ್ ಜಿಲ್ಲೆಯ ಬಸವಕಲ್ಯಾಣ, ಹುಮ್ನಾಬಾದ್ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕಿನ ಯುವಕರು ಸೇರಿದ್ದಾರೆ. ವಿದೇಶದಿಂದ ಸ್ವದೇಶಕ್ಕೆ ವಾಪಸ್ ಕರೆಸಿಕೊಳ್ಳುವಂತೆ ಪ್ರಧಾನಿ ಮೋದಿ ಹಾಗೂ ಸಿಎಂ ಸಿದ್ದರಾಮಯ್ಯಗೆ ಮೋಸ ಹೋದ ಯುವಕರು ವಿಡಿಯೋ ಮೂಲಕ ಮನವಿ ಮಾಡಿದ್ದಾರೆ. ನಾವು ನಮ್ಮ ಮಧ್ಯವರ್ತಿಗಳನ್ನು ನಂಬಿ ಮೋಸ ಹೋಗಿದ್ದೇವೆ. ಇಲ್ಲಿ ಊಟ ಇಲ್ಲದೆ ಹಲವು ಜನ ಸತ್ತಿದ್ದಾರೆ. ಇದರಿಂದ ನಮಗೆ ಭಯವಾಗುತ್ತಿದೆ. ಬೇಗ ನಮ್ಮನ್ನು ಸ್ವದೇಶಕ್ಕೆ ಕರೆಸಿಕೊಳ್ಳಿ ಎಂದು ಯುವಕರು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಆಟವಾಡುತ್ತಾ ಮೆಟ್ರೋ ಹಳಿಗೆ ಬಿದ್ದ ಮಗು – ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ಪಾರು

  • ಫಾರ್ಮ್‍ಹೌಸ್‍ನಲ್ಲಿ ರೇವ್ ಪಾರ್ಟಿ ಪ್ರಕರಣ- ಐವರ ಬ್ಯಾಂಕ್ ಅಕೌಂಟ್ ಸೀಜ್

    ಫಾರ್ಮ್‍ಹೌಸ್‍ನಲ್ಲಿ ರೇವ್ ಪಾರ್ಟಿ ಪ್ರಕರಣ- ಐವರ ಬ್ಯಾಂಕ್ ಅಕೌಂಟ್ ಸೀಜ್

    ಬೆಂಗಳೂರು: ನಗರದ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಫಾರ್ಮ್‍ಹೌಸ್‍ನಲ್ಲಿ ನಡೆದ ರೇವ್ ಪಾರ್ಟಿ (Rave Party) ಪ್ರಕರಣದ ತನಿಖೆ ಚುರುಕುಗೊಂಡಿದೆ.

    ಬಂಧಿತರ ಐವರು ಆರೋಪಿಗಳ ಅಕೌಂಟ್‍ನಲ್ಲಿದ್ದ ಹಣವನ್ನು ಸಿಸಿಬಿ ಪೊಲೀಸರು (CCB Police) ಸೀಜ್ ಮಾಡಿದ್ದಾರೆ. ಆರೋಪಿಗಳ ಅಕೌಂಟ್‍ನಲ್ಲಿ ಲಕ್ಷಲಕ್ಷ ಹಣ ಪತ್ತೆಯಾಗಿತ್ತು. ಹೀಗಾಗಿ ಸಿಸಿಬಿ ಅಧಿಕಾರಿಗಳು ಎಲ್ಲಾ ಅಕೌಂಟ್‍ಗಳನ್ನ ಫ್ರೀಜ್ ಮಾಡಿಸಿದ್ದಾರೆ. ಅಲ್ಲದೆ ಆರೋಪಿಗಳ ಮೊಬೈಲ್ ಮಿರರ್ ಇಮೇಜ್ ಮಾಡಿಸಲು ಸಿದ್ಧತೆ ನಡೆಸುತ್ತಿದ್ದಾರೆ.

    ಬೇರೆ ಎಲ್ಲೆಲ್ಲಿ ರೇವ್ ಪಾರ್ಟಿ ಮಾಡಿಸಿದ್ರು..? ಯಾರೆಲ್ಲ ಭಾಗಿಯಾಗಿದ್ರು..?, ರೇವ್ ಪಾರ್ಟಿಗೆ ಎಷ್ಟು ಹಣ ವಸೂಲಿ ಮಾಡ್ತಿದ್ರು..? ಡ್ರಗ್ಸ್ ಎಲ್ಲಿಂದ ಬರ್ತಿತ್ತು..?, ಎಲ್ಲ ಮಾಹಿತಿ ಪತ್ತೆ ಮಾಡಲು ಮೊಬೈಲ್ ಮಿರರ್ ಇಮೇಜಿಂಗ್ ಮಾಡಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಅಲ್ಲದೇ ಐವರು ಆರೋಪಿಗಳನ್ನ ಬಾಡಿ ವಾರೆಂಟ್ ಮೇಲೆ ಕಸ್ಟಡಿಗೆ ಪಡೆಯಲು ಕೂಡ ತಯಾರಿ ನಡೆಯುತ್ತಿದೆ.

    ಸೋಮವಾರ ಕೋರ್ಟ್ ಗೆ ಅರ್ಜಿ ಹಾಕಿ ಆರೋಪಿಗಳನ್ನ ಕಸ್ಟಡಿಗೆ ಪಡೆಯಲು ಸಿಸಿಬಿ ಹಾಗೂ ಆರೋಪಿಗಳ ವಿಚಾರಣೆ ಬಳಿಕ ನಟಿ ಹೇಮ ಸೆರಿದಂತೆ ಪಾರ್ಟಿಯಲ್ಲಿದ್ದವರಿಗೆ ನೋಟಿಸ್ ನೀಡಲು ಸಿದ್ಧತೆ ಮಾಡಿಕೊಂಡಿದೆ.

    ವಾಸು ಎಂಬಾತನ ಹುಟ್ಟುಹಬ್ಬದ ಅಂಗವಾಗಿ Sunset To Sun Rise victory ಶೀರ್ಷಿಕೆಯಲ್ಲಿ ರೇವ್ ಪಾರ್ಟಿ ಆಯೋಜನೆ ಮಾಡಲಾಗಿತ್ತು. ಪಾರ್ಟಿಯಲ್ಲಿ ನೂರರಿಂದ ನೂರೈವತ್ತು ಮಂದಿ ಜಮಾವಣೆಗೊಂಡಿದ್ದರು ಎನ್ನಲಾಗಿದೆ. ರೇವ್ ಪಾರ್ಟಿಯಲ್ಲಿ ದೊಡ್ಡ ಮಟ್ಟದ ಮಾದಕ ವಸ್ತು ಬಳಕೆ ಮಾಡಿರುವ ಸುಳಿವು ಸಿಕ್ಕಿದೆ. ಎಂಡಿಎಂಎ, ಕೊಕೇನ್, ಹೈಡೋಗಾಂಜಾ ಪತ್ತೆಯಾಗಿತ್ತು.

    ಪಾರ್ಟಿಯಲ್ಲಿ ಭಾಗಿಯಾಗಿದ್ದ 73 ಮಂದಿ ಪುರುಷರಲ್ಲಿ 59 ಮಂದಿ ಹಾಗೂ 30 ಮಂದಿ ಯುವತಿಯರ ಪೈಕಿ 27 ಮಂದಿಯ ಬ್ಲಡ್ ರಿಪೋರ್ಟ್ ಪಾಸಿಟಿವ್ ಎಂದು ಬಂದಿತ್ತು. ಈ ಮೂಲಕ ಪಾರ್ಟಿಯಲ್ಲಿ ಸೇರಿದ್ದ ಬಹುತೇಕ ಮಂದಿ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿತ್ತು. ತೆಲುಗು ಕಿರುತೆರೆ ನಟಿ ಹೇಮಾ(ಕೃಷ್ಣವೇಣಿ) ಪಾಲ್ಗೊಂಡಿರುವುದು ಕೂಡ ಬಯಲಾಗಿತ್ತು.

  • ಲಾರಿಗೆ ಡಿಕ್ಕಿಯಾಗಿ ಪಲ್ಟಿಯಾದ ವಾಹನದಲ್ಲಿತ್ತು 7 ಕೋಟಿ ರೂ.!

    ಲಾರಿಗೆ ಡಿಕ್ಕಿಯಾಗಿ ಪಲ್ಟಿಯಾದ ವಾಹನದಲ್ಲಿತ್ತು 7 ಕೋಟಿ ರೂ.!

    ಅಮರಾವತಿ: ಆಂಧ್ರಪ್ರದೇಶದಲ್ಲಿ ಪಲ್ಟಿಯಾದ ವಾಹನವೊಂದರಿಂದ ಬರೋಬ್ಬರಿ 7 ಕೋಟಿ ಹಣವನ್ನು ವಶಕ್ಕೆ ಪಡೆಯಲಾಗಿದೆ. ಈ ಮೂಲಕ ಲೋಕಸಭಾ ಚುನಾವಣೆಗೂ ಮುನ್ನ ರಾಜ್ಯದಲ್ಲಿ ಎರಡನೇ ಬಾರಿ ದೊಡ್ಡ ಮೊತ್ತದ ಹಣವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

    ವಾಹನ ವಿಜಯವಾಡದಿಂದ ವಿಶಾಖಪಟ್ಟಣಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಪೂರ್ವ ಗೋದಾವರಿ ಪೊಲೀಸರು ವಾಹನದಿಂದ 7 ಬಾಕ್ಸ್‌ಗಳಲ್ಲಿ ತುಂಬಿದ್ದ 7 ಕೋಟಿ ರೂ. ಹಣವನ್ನು (Rs 7 crore cash seized In Andhrapradesh) ವಶಪಡಿಸಿಕೊಂಡಿದ್ದಾರೆ.

    ಸಿಕ್ಕಿಬಿದ್ದಿದ್ದು ಹೇಗೆ.?: ನಲ್ಲಜರ್ಲ ಮಂಡಲದ ಅನಂತಪಲ್ಲಿ ಎಂಬಲ್ಲಿ ಲಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ವಾಹನ ಪಲ್ಟಿಯಾಗುತ್ತಿದತೆಯೇ ಅದರಲ್ಲಿದ್ದ ಸುಮಾರು7 ರಟ್ಟಿನ ಡಬ್ಬಗಳನ್ನು ಒಂದು ಗೋಣಿಚೀಲದಿಂದ ಇನ್ನೊಂದು ಚೀಲಕ್ಕೆ ಹಾಕುತ್ತಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವಶಪಡಿಸಿಕೊಂಡ ಮೊತ್ತ ಸುಮಾರು 7 ಕೋಟಿ ಎಂದು ವರದಿಯಾಗಿದೆ. ಇದನ್ನೂ ಓದಿ: ಟೈಯರ್ ಬ್ಲಾಸ್ಟ್ ಆಗಿ ಕ್ರೂಸರ್ ಪಲ್ಟಿ – ಮೂವರು ಮಹಿಳೆಯರ ದುರ್ಮರಣ

    ಪಲ್ಟಿಯಾದ ವಾಹನದ ಚಾಲಕನಿಗೆ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಗೋಪಾಲಪುರಂ ಆಸ್ಪತ್ರೆಗೆ ರವಾನಿಸಲಾಗಿದೆ. ಈ ನಡುವೆ ಪೊಲೀಸರು ತನಿಖೆ ಆರಂಭಿಸಿದ್ದು, ನಗದು ಮೂಲವನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿದ್ದಾರೆ.

    ಗುರುವಾರ ರಾಜ್ಯದ ಎನ್‌ಟಿಆರ್ ಜಿಲ್ಲೆಯ ಚೆಕ್‌ಪೋಸ್ಟ್‌ನಲ್ಲಿ ಟ್ರಕ್‌ನಿಂದ ಲೆಕ್ಕಕ್ಕೆ ಸಿಗದ 8 ಕೋಟಿ ರೂಪಾಯಿ ಮೌಲ್ಯದ ಹಣವನ್ನು ವಶಪಡಿಸಿಕೊಂಡ ಎರಡು ದಿನಗಳ ನಂತರ ಈ ಘಟನೆ ನಡೆದಿದೆ. ನಗದು ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

    ಆಂದ್ರಪ್ರದೇಶದಲ್ಲಿ ಮೇ 13ರಂದು ಚುನಾವಣೆ ನಡೆಯಲಿದೆ.