Tag: ಹಣ

  • ‘ಕೈ’ ನಾಯಕರಿಗೆ ಸೇರಿದ ಕಾರಿನಲ್ಲಿ 2 ಕೋಟಿಗೂ ಅಧಿಕ ಹಣ ಪತ್ತೆ – ಕಾರು ಸಮೇತ ಹಣ ಸೀಜ್

    ‘ಕೈ’ ನಾಯಕರಿಗೆ ಸೇರಿದ ಕಾರಿನಲ್ಲಿ 2 ಕೋಟಿಗೂ ಅಧಿಕ ಹಣ ಪತ್ತೆ – ಕಾರು ಸಮೇತ ಹಣ ಸೀಜ್

    ಕಲಬುರಗಿ: ಜಿಲ್ಲೆಯಲ್ಲಿ ಕುರುಡು ಕಾಂಚಾಣ ಭಾರೀ ಸದ್ದು ಮಾಡಿದ್ದು, ಆದಾಯ ತೆರಿಗೆ (Income Tax) ಅಧಿಕಾರಿಗಳು ಮಿಂಚಿನ ಕಾರ್ಯಾಚರಣೆ ನಡೆಸಿ ‘ಕೈ’ (Congress) ನಾಯಕರಿಗೆ ಸೇರಿದ ಕಾರಿನಲ್ಲಿ ಪತ್ತೆಯಾದ 2 ಕೋಟಿಗೂ ಅಧಿಕ ಹಣವನ್ನು ಸೀಜ್ (Money Seize) ಮಾಡಿದ್ದಾರೆ.

    ಕಲಬುರಗಿ (Kalaburagi) ರೈಲ್ವೆ ನಿಲ್ದಾಣದಿಂದ ಹಣ ಸಾಗಾಟ ಮಾಡುತ್ತಿದ್ದ ವೇಳೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೇರೆ ರಾಜ್ಯದಿಂದ ರೈಲು ಮೂಲಕ ಕಲಬುರಗಿ ರೈಲು ನಿಲ್ದಾಣಕ್ಕೆ ಹಣ ಬಂದಿತ್ತು. ರೈಲ್ವೆ ನಿಲ್ದಾಣದಿಂದ ಇನ್ನೋವಾ ಕಾರಿನಲ್ಲಿ ಹಣ ಸಾಗಾಟಕ್ಕೆ ಯತ್ನಿಸಿದ ಸಂದರ್ಭ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಹೆಲಿಕಾಪ್ಟರ್‌ ಒಳಗೆ ಆಯತಪ್ಪಿ ಬಿದ್ದ ದೀದಿ- ಸಣ್ಣಪುಟ್ಟ ಗಾಯ

    ಖಚಿತ ಮಾಹಿತಿಯ ಮೇರೆಗೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿ ಕಾರು ಸಮೇತ ಹಣವನ್ನು ಸೀಜ್ ಮಾಡಿದ್ದು, ಕಲಬುರಗಿಯ ಖರ್ಗೆ ಸರ್ಕಲ್ ಬಳಿ ಇರುವ ಆದಾಯ ತೆರಿಗೆ ಇಲಾಖೆಯ ಕಚೇರಿಯಲ್ಲಿ ಹಣದ ಸಮೇತ ವಾಹನ ಸೀಜ್ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಪುಲ್ವಾಮಾ ದಾಳಿಯಲ್ಲಿ ಸೈನಿಕರು ಸತ್ತಾಗ ಮಂಗಳಸೂತ್ರ ಕಿತ್ತುಕೊಂಡಿದ್ಯಾರು: ಬಿ.ಕೆ ಹರಿಪ್ರಸಾದ್ ಪ್ರಶ್ನೆ

  • ಧಾರವಾಡದಲ್ಲಿ 18 ಕೋಟಿ ಪತ್ತೆ – ಎಸ್‌ಬಿಐಗೆ ಹಣ ರವಾನೆ

    ಧಾರವಾಡದಲ್ಲಿ 18 ಕೋಟಿ ಪತ್ತೆ – ಎಸ್‌ಬಿಐಗೆ ಹಣ ರವಾನೆ

    ಧಾರವಾಡ: ದಾಸನಕೊಪ್ಪ ಸರ್ಕಲ್ ಬಳಿ ಇರುವ ಅರ್ನಾ ಅಪಾರ್ಟ್‌ಮೆಂಟ್‌ನಲ್ಲಿರುವ ಯು.ಬಿ.ಶೆಟ್ಟಿ ಅವರ ಅಕೌಂಟೆಂಟ್ ಬಸವರಾಜ ದತ್ತುನವರ ಅವರ ಮನೆಯಲ್ಲಿ ಜಪ್ತಿ ಮಾಡಲಾದ 18 ಕೋಟಿ ರೂ. ಹಣವನ್ನು ಐಟಿ (Income Tax) ಅಧಿಕಾರಿಗಳು ಹುಬ್ಬಳ್ಳಿಯ ಕೇಶ್ವಾಪುರದಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ (SBI) ರವಾನಿಸಿದ್ದಾರೆ.

    ಮಂಗಳವಾರ ರಾತ್ರಿ ಚುನಾವಣಾ ವಿಚಕ್ಷಣಾ ದಳದ ಅಧಿಕಾರಿಗಳು ಬಸವರಾಜ ದತ್ತುನವರ ಅವರ ಮನೆಯಲ್ಲಿ ಮದ್ಯ (Liquor) ಶೇಖರಿಸಿ ಇಡಲಾಗಿದೆ ಎಂಬ ಶಂಕೆ ಮೇಲೆ ದಾಳಿ ನಡೆಸಿದ್ದರು. ದಾಳಿ ವೇಳೆ ಅವರ ಮನೆಯಲ್ಲಿ 18 ಕೋಟಿ ರೂ. ಬೃಹತ್ ಮೊತ್ತದ ಹಣ ಪತ್ತೆಯಾಗಿತ್ತು.ಕೂಡಲೇ ಈ ಪ್ರಕರಣವನ್ನು ಆದಾಯ ತೆರಿಗೆ ಇಲಾಖೆಗೆ ಹಸ್ತಾಂತರಿಸಲಾಗಿತ್ತು. ಇದನ್ನೂ ಓದಿ: ಜನತಂತ್ರದ ಹಬ್ಬ – ಚುನಾವಣಾ ಖರ್ಚು ವೆಚ್ಚ ಹೇಗೆ ನಡೆಯುತ್ತೆ? – ಈ ಬಾರಿ ಅಂದಾಜಿಸಿರುವ ವೆಚ್ಚ ಎಷ್ಟು?

     

    20 ಜನ ಅಧಿಕಾರಿಗಳು ದತ್ತುನವರ ಮನೆಯಲ್ಲಿ ನಿನ್ನೆ ರಾತ್ರಿಯಿಡೀ ಕಾರ್ಯಾಚರಣೆ ನಡೆಸಿ ಮಶಿನ್ ಮುಖಾಂತರ ಹಣ ಎಣಿಕೆ ಮಾಡಿದ್ದಾರೆ. ಇಂದು ಮಧ್ಯಾಹ್ನದವರೆಗೂ ಅಧಿಕಾರಿಗಳು ತಪಾಸಣೆ ನಡೆಸಿ 18 ಕೋಟಿ ರೂ. ಹಣವನ್ನು 18 ಬ್ಯಾಗ್‌ಗಳಲ್ಲಿ ತುಂಬಿ ಪೊಲೀಸ್ ಭದ್ರತೆ ಮಧ್ಯೆ ಹುಬ್ಬಳ್ಳಿಯ ಕೇಶ್ವಾಪುರದಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಸಾಗಿಸಿದ್ದಾರೆ.  ಇದನ್ನೂ ಓದಿ: ದಕ್ಷಿಣ ಭಾರತದ ಏವಿಯೇಷನ್‌ ಹಬ್‌ ಆಗುತ್ತಾ ಬೆಂಗ್ಳೂರು ಏರ್‌ಪೋರ್ಟ್‌?- ಏನಿದು ಏವಿಯೇಷನ್‌ ಹಬ್‌?

    ಬಸವರಾಜ ದತ್ತುನವರ ತಾನು ಯು.ಬಿ.ಶೆಟ್ಟಿ ಅವರ ಅಕೌಂಟೆಂಟ್ ಎಂದು ಹೇಳಿಕೊಂಡಿದ್ದರಿಂದ ಐಟಿ ಅಧಿಕಾರಿಗಳು ಶೆಟ್ಟಿ ಅವರ ಕಚೇರಿ ಮೇಲೂ ದಾಳಿ ಮಾಡಿ ಪರಿಶೀಲನೆ ನಡೆಸಿದ್ದರು. ಬುಧವಾರ ಮಧ್ಯಾಹ್ನ 2 ಗಂಟೆವರೆಗೂ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿ ಎರಡು ಪೊಲೀಸ್ ಎಸ್ಕಾರ್ಟ್ ವಾಹನದ ಸಮೇತ ಭದ್ರತೆಯೊಂದಿಗೆ 18 ಕೋಟಿ ಹಣವನ್ನು 18 ಬ್ಯಾಗ್‌ಗಳಲ್ಲಿ ತುಂಬಿಕೊಂಡು ಹುಬ್ಬಳ್ಳಿಯ ಕೇಶ್ವಾಪುರದಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ರವಾನಿಸಿದ್ದಾರೆ.

  • ಧಾರವಾಡದಲ್ಲಿ ಚುನಾವಣಾ ಕ್ಷಿಪ್ರ ಪಡೆ ದಾಳಿ- 18 ಕೋಟಿ ವಶಕ್ಕೆ

    ಧಾರವಾಡದಲ್ಲಿ ಚುನಾವಣಾ ಕ್ಷಿಪ್ರ ಪಡೆ ದಾಳಿ- 18 ಕೋಟಿ ವಶಕ್ಕೆ

    ಧಾರವಾಡ: ಇಲ್ಲಿನ ಬಸವರಾಜ ದುತ್ತಣ್ಣವರ ಎಂಬವರ ಮನೆ ಮೇಲೆ ಚುನಾವಣಾ ಕ್ಷಿಪ್ರ ಕಾರ್ಯಪಡೆ ಅಧಿಕಾರಿಗಳು ದಾಳಿ ನಡೆಸಿ 18 ಕೋಟಿ ನಗದು ವಶಪಡಿಸಿಕೊಂಡಿದ್ದಾರೆ.

    ಧಾರವಾಡದ ದಾಸನಕೊಪ್ಪ ಸರ್ಕಲ್ ಬಳಿ ಇರುವ ಅರ್ನಾ ಅಪಾರ್ಟ್‌ಮೆಂಟ್‌ನಲ್ಲಿ ಬಸವರಾಜ್ ದುತ್ತಣ್ಣವರ ಎಂಬವರ ಮನೆ ಇದೆ. ಚುನಾವಣೆ ಹಿನ್ನೆಲೆ ಮನೆಯಲ್ಲಿ ಮದ್ಯ ಸಂಗ್ರಹಿಸಿ ಇಟ್ಟ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಚುನಾವಣಾ ಕ್ಷಿಪ್ರ ಕಾರ್ಯಪಡೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

    ಮನೆಯಲ್ಲಿ ಮದ್ಯ ಹುಡುಕುತ್ತಿದ್ದಾಗ ಅಲ್ಮೆರಾದಲ್ಲಿ ಹಣ ಪತ್ತೆಯಾಗಿದೆ. ಇದಕ್ಕೂ ಮೊದಲು ಮನೆಯಲ್ಲಿದ್ದ ವಿವಿಧ ಚೀಲಗಳಲ್ಲಿ ಮದ್ಯ ಹುಡುಕಿದ ಅಧಿಕಾರಿಗಳಿಗೆ ಮದ್ಯದ ಬಾಟ್ಲಿಗಳು ಸಿಗದೇ ಹೋದಾಗ ಅಲ್ಮೆರಾದಲ್ಲೂ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಬೃಹತ್ ಮೊತ್ತ ಪತ್ತೆಯಾಗಿದೆ ಎಂದು ಹೇಳಲಾಗುತ್ತಿದೆ.

    ಸ್ಥಳಕ್ಕೆ ಎಸಿಪಿ ಬಸವರಾಜ ಹಾಗೂ ಇತರ ಅಧಿಕಾರಿಗಳು ಸಹ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

  • ಚಿಕ್ಕೋಡಿಯಲ್ಲಿ 16 ಲಕ್ಷ ನಗದು ಸೀಜ್- ಇಬ್ಬರನ್ನು ವಶಕ್ಕೆ ಪಡೆದ ಪೊಲೀಸ್ರು

    ಚಿಕ್ಕೋಡಿಯಲ್ಲಿ 16 ಲಕ್ಷ ನಗದು ಸೀಜ್- ಇಬ್ಬರನ್ನು ವಶಕ್ಕೆ ಪಡೆದ ಪೊಲೀಸ್ರು

    ಚಿಕ್ಕೋಡಿ: ಲೋಕಸಭಾ ಚುನಾವಣೆಯ (Loksabha Elections 2024) ದಿನಾಂಕ ಘೋಷಣೆಯಾದ ಬೆನ್ನಲ್ಲೇ ನೀತಿ ಸಂಹಿತೆ (Code Of Conduct) ಕೂಡ ಜಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಆಕ್ಟೀವ್ ಆಗಿದ್ದಾರೆ. ಅಂತೆಯೇ ಚಿಕ್ಕೋಡಿಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿರುವ ಪೊಲೀಸರು, ಬಸ್ ಮೂಲಕ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 16 ಲಕ್ಷ 31 ಸಾವಿರ ರೂ. ವಶಕ್ಕೆ ಪಡೆದಿದ್ದಾರೆ.

    ತಡರಾತ್ರಿ ಚಿಕ್ಕೋಡಿ ಬಸ್ ನಿಲ್ದಾಣದಲ್ಲಿ ಪೊಲೀಸರ ತಪಾಸಣೆ ವೇಳೆ ಹಣ ಪತ್ತೆಯಾಗಿದೆ. ಚಿಕ್ಕೋಡಿಯಿಂದ ಮಹಾರಾಷ್ಟ್ರದ ಇಚಲಕರಂಜಿ ನಗರಕ್ಕೆ ತೆರಳುತ್ತಿದ್ದ ಬಸ್ ತಪಾಸಣೆ ವೇಳೆ ದಾಖಲೆ ಇಲ್ಲದ ಹಣ ಪತ್ತೆಯಾಗಿದೆ. ಅಕ್ರಮ ಹಣದ ಜೊತೆಗೆ ಇಬ್ಬರನ್ನ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ.

    ಹಣ ಸಾಗಾಟ ಮಾಡುವರು ಮಹಾರಾಷ್ಟ್ರದ ಇಚಲಕರಂಜಿ ನಗರದ ನಿವಾಸಿಗಳಾಗಿದ್ದಾರೆ. ಪ್ರಕರಣವನ್ನ ಆದಾಯ ತೆರಿಗೆ ಇಲಾಖೆಗೆ ಪೊಲೀಸರು ಹಸ್ತಾಂತರಿಸಿದ್ದಾರೆ. ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಮಂಗಳೂರಿನಲ್ಲಿ ಎಳನೀರು ಕುಡಿದು 15 ಮಂದಿ ಅಸ್ವಸ್ಥ!

  • ಸಿಇಎನ್ ಪೊಲೀಸರ ಭರ್ಜರಿ ಬೇಟೆ – 2.93 ಕೋಟಿ ರೂ. ನಗದು ಜಪ್ತಿ

    ಸಿಇಎನ್ ಪೊಲೀಸರ ಭರ್ಜರಿ ಬೇಟೆ – 2.93 ಕೋಟಿ ರೂ. ನಗದು ಜಪ್ತಿ

    – ಇಬ್ಬರು ವಶಕ್ಕೆ, ಟೊಯೊಟಾ ಕಾರು, ಮೊಬೈಲ್ ಜಪ್ತಿ

    ವಿಜಯಪುರ: ಚುನಾವಣಾ ನೀತಿ ಸಂಹಿತೆ (Code of Election Conduct) ಜಾರಿ ಬೆನ್ನಲ್ಲೇ ಪೊಲೀಸರು ಅಲರ್ಟ್ ಆಗಿದ್ದಾರೆ. ವಿಜಯಪುರದಲ್ಲಿ (Vijayapura) ಸಿಇಎನ್ ಪೊಲೀಸರು (CEN Police) ಭರ್ಜರಿ ಬೇಟೆ ಆಡಿ ಒಂದಲ್ಲ, ಎರಡಲ್ಲ ಬರೋಬ್ಬರಿ 2.93 ಕೋಟಿ ರೂ. ನಗದನ್ನು ಜಪ್ತಿ ಮಾಡಿದ್ದಾರೆ.

    ಲೋಕಸಭಾ ಚುನಾವಣೆ (Lok Sabha Electon) ಹಿನ್ನೆಲೆ ಹೈದರಾಬಾದ್‌ನಿಂದ (Hyderabad) ಹುಬ್ಬಳ್ಳಿಗೆ ಟೊಯೊಟಾ ಕಾರಿನಲ್ಲಿ ಹಣ ಸಾಗಿಸಲಾಗುತ್ತಿತ್ತು. ಈ ವೇಳೆ ವಿಜಯಪುರ ನಗರದ ಸಿಂದಗಿ ಬೈಪಾಸ್ ಬಳಿ ತಪಾಸಣೆ ನಡೆಸಿ ನಗದನ್ನು ಜಪ್ತಿ ಮಾಡಿದ್ದಾರೆ. ಇದನ್ನೂ ಓದಿ: ಹನುಮಾನ್‌ ಚಾಲೀಸಾ ಕೇಸ್‌ – ಹಲ್ಲೆಗೆ ಒಳಗಾದ ಅಂಗಡಿ ಮಾಲೀಕನನ್ನೇ ವಶಕ್ಕೆ ಪಡೆದ ಪೊಲೀಸರು

    ಅಲ್ಲದೇ ಬಾಲಾಜಿ ನಿಕ್ಕಂ, ಸಚಿನ್ ಮೋಯಿತೆ ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದವರಿಂದ 2.93 ಕೋಟಿ ರೂ. ನಗದು, ಟೊಯೊಟಾ ಕಾರು, ಎರಡು ಮೊಬೈಲ್ ಜಪ್ತಿಗೈದಿದ್ದಾರೆ. ಈ ಕುರಿತು ಗೋಳಗುಮ್ಮಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ನಿಶ್ಚಿತಾರ್ಥದ ಬಳಿಕ ಮದುವೆಗೆ ನಕಾರ – ವಿಷ ಕುಡಿಸಿ ಯುವತಿಯ ಹತ್ಯೆಗೈದ ಮಾವ

  • ದುಡ್ಡು ಕೊಡಿ ಪ್ಲೀಸ್‌ – ಇನ್ನೂ ಬಗೆಹರಿಯದ ಗೃಹಲಕ್ಷ್ಮಿ, ಅನ್ನಭಾಗ್ಯ ಸಮಸ್ಯೆ

    ದುಡ್ಡು ಕೊಡಿ ಪ್ಲೀಸ್‌ – ಇನ್ನೂ ಬಗೆಹರಿಯದ ಗೃಹಲಕ್ಷ್ಮಿ, ಅನ್ನಭಾಗ್ಯ ಸಮಸ್ಯೆ

    – ಪಬ್ಲಿಕ್‌ ಟಿವಿ ರಿಯಾಲಿಟಿ ಚೆಕ್‌ನಲ್ಲಿ ಮಹಿಳೆಯರ ಆಕ್ರೋಶ

    ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ (Congress Guarantee) ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ (Gruhalakshmi) ಯೋಜನೆ ಹಳ್ಳಹಿಡಿಯುತ್ತಿದ್ಯಾ ಎಂಬ ಅನುಮಾನ ಶುರುವಾಗಿದೆ.

    ಬೆಂಗಳೂರು, ಹಾಸನ, ರಾಯಚೂರು, ಮಂಡ್ಯ, ಕೋಲಾರ ಜಿಲ್ಲೆಯಲ್ಲಿ ಕೆಲವು ಮಹಿಳೆಯರಿಗೆ (Women) ಮೊದಲ ತಿಂಗಳ ಹಣ ಮಾತ್ರ ಬಂದಿದ್ದರೆ, ಕೆಲವರಿಗೆ ಮೂರು ತಿಂಗಳ ಹಣ ಬಂದಿದೆ. ಆದರೆ ಕಡು ಬಡವರು, ಬೀದಿ ಬದಿ ವ್ಯಾಪಾರಿಗಳಿಗೆ ಒಂದು ತಿಂಗಳ ಹಣವೂ ಬಂದಿಲ್ಲ. ಇದನ್ನೂ ಓದಿ: ಕೃಷಿ ಉಪಕರಣಗಳ ಬೆಲೆ ದುಪ್ಪಟ್ಟು – ಅಂದು 30 ಪೈಪ್‌, 5 ಸ್ಪ್ರಿಂಕ್ಲರ್‌ಗೆ 1,876 ರೂ. – ಈಗ 4,667 ರೂ.ಗೆ ಏರಿಕೆ

     

    ಅಧಿಕಾರಿಗಳನ್ನು ಪ್ರಶ್ನಿಸಿದರೆ ಆಧಾರ್ ಕಾರ್ಡ್ ನಂಬರ್, ಫೋನ್ ನಂಬರ್ ಸರಿಯಲ್ಲ ಎನ್ನುತ್ತಾರೆ. ಎಲ್ಲವನ್ನು ಸರಿಪಡಿಸಿದರೂ ಸಹ ಹಣ ಬಂದಿಲ್ಲ ಎಂದು ಸರ್ಕಾರದ ವಿರುದ್ದ ಮಹಿಳೆಯರು ಕಿಡಿಕಾರಿದ್ದಾರೆ.  ಇದನ್ನೂ ಓದಿ: ಹೊಸ ವರ್ಷಕ್ಕೆ ಎಣ್ಣೆ ಶಾಕ್ ಫಿಕ್ಸ್ – ಜನವರಿಯಿಂದ ಮದ್ಯದ ಬೆಲೆಯಲ್ಲಿ ಭಾರೀ ಏರಿಕೆ

    ಬ್ಯಾಂಕ್ ಹಾಗೂ ಕಂಪ್ಯೂಟರ್ ಸೆಂಟರ್‌ಗಳಲ್ಲಿ ಗ್ಯಾರೆಂಟಿ ಯೋಜನೆ ಹಣದ ಬಗ್ಗೆ ವಿಚಾರಿಸಿ ನಿರಾಶರಾಗಿದ್ದೇವೆ ಎಂದು ತಮ್ಮ ಅಳಲು ತೋಡಿಕೊಂಡಿದ್ದಾರೆ. ಈ ಬಗ್ಗೆ ಪಬ್ಲಿಕ್ ಟಿವಿ ರಿಯಾಲಿಟಿ ಚೆಕ್ ನಡೆಸಿದೆ.

     

    ಅನ್ನಭಾಗ್ಯದ ಹಣವೂ ಇಲ್ಲ:
    ಗ್ಯಾರಂಟಿಗಳನ್ನು ಈಡೇರಿಸುವ ಜಂಬದಲ್ಲಿರುವ ರಾಜ್ಯ ಸರ್ಕಾರ ಸಾಕಷ್ಟು ಜನ ಮಹಿಳೆಯರಿಗೆ ಗೃಹ ಲಕ್ಷ್ಮಿ ಇರಲಿ ಅನ್ನಭಾಗ್ಯ ಹಣವನ್ನೂ (Anna Bhagya Yojana) ಕೊಡುತ್ತಿಲ್ಲ

     

    ಕೋಲಾರ ನಗರದ ನೂರ್ ನಗರದಲ್ಲಿ ಸಾಕಷ್ಟು ಜನ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ 2 ಸಾವಿರ ಹಣ ಮಾತ್ರವಲ್ಲ ಅನ್ನಭಾಗ್ಯ ಯೋಜನೆಯ ಹಣ ಕೂಡ ಸಿಕ್ಕಿಲ್ಲ. ಅಧಿಕಾರಿಗಳನ್ನು ಕೇಳಿದರೆ ಬರುತ್ತೆ ಹೋಗಿ ಎನ್ನುತ್ತಾರೆ. ಅಲ್ಲದೆ ಆಹಾರ ಇಲಾಖೆಯಲ್ಲಿ ಕೇಳಿದರೆ ಬ್ಯಾಂಕ್ ಆಧಾರ್ ಲಿಂಕ್ ಮಾಡಿ ಎನ್ನುತ್ತಾರೆ. ಬ್ಯಾಂಕ್‌ನಲ್ಲಿ ವಿಚಾರಿಸಿದರೆ ಆಹಾರ ಇಲಾಖೆಯಲ್ಲಿ ಕೇಳಿ ಎನ್ನುತ್ತಾರೆ. ಹಾಗಾಗಿ ಮೂಗಿಗೆ ತುಪ್ಪ ಸವರುವ ಕೆಲಸವನ್ನು ಸರ್ಕಾರ ಮಾಡಿದೆ ಎಂದು ಮಹಿಳೆಯರು ಸಿಟ್ಟು ಹೊರ ಹಾಕಿದ್ದಾರೆ.

     

  • ಮುರುಘಾ ಮಠದ ಉಸ್ತುವಾರಿ ವಿರುದ್ಧ 24 ಲಕ್ಷ ರೂ. ದುರ್ಬಳಕೆ ಆರೋಪ- ವೈರಲಾಯ್ತು ನೋಟಿಸ್

    ಮುರುಘಾ ಮಠದ ಉಸ್ತುವಾರಿ ವಿರುದ್ಧ 24 ಲಕ್ಷ ರೂ. ದುರ್ಬಳಕೆ ಆರೋಪ- ವೈರಲಾಯ್ತು ನೋಟಿಸ್

    ಚಿತ್ರದುರ್ಗ: ಮುರುಘಾ ಮಠದ (Murugha Mutt) ಉಸ್ತುವಾರಿ ಬಸವಪ್ರಭುಶ್ರೀ ವಿರುದ್ಧ ಮಠದ ಹಣ ದುರುಪಯೋಗ ಮಾಡಿಕೊಂಡಿರುವ ಆರೋಪವೊಂದು ಕೇಳಿಬಂದಿದೆ.

    ಚಿತ್ರದುರ್ಗ ಮುರುಘಾ ಮಠದ 24 ಲಕ್ಷ ರೂಪಾಯಿ ಹಣ ದುರುಪಯೋಗ ಮಾಡಿಕೊಂಡಿದ್ದಾರೆಂದು ಆರೋಪಿಸಿ ಬಸವಪ್ರಭುಶ್ರೀಗೆ ಆಡಳಿತಾಧಿಕಾರಿ ನೋಟಿಸ್ ನೀಡಿದ್ದಾರೆ. ಇದನ್ನೂ ಓದಿ: ಮೆಟ್ರೋದಲ್ಲಿ ಯುವತಿ ಹಿಂದಿನಿಂದ ಮೈ,ಕೈ ಮುಟ್ಟಿ ಎಸ್ಕೇಪ್‍ಗೆ ಯತ್ನ- ಯುವಕ ಅರೆಸ್ಟ್

    ಮುರುಘಾಶ್ರೀ (Murugha Shree) ಜೈಲಿನಲ್ಲಿದ್ದ ಸಂದರ್ಭದಲ್ಲಿ ಮಠದ ಆಡಳಿತಾಧಿಕಾರಿಯಾಗಿದ್ದ ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶೆ ರೇಖಾ ಅವರು ನವೆಂಬರ್ 4ರಂದು ಬಸವಪ್ರಭುಶ್ರೀಗೆ (Basavaprabhu Shree) ನೋಟಿಸ್ ಜಾರಿಗೊಳಿಸಿದ್ದಾರೆ. ಆ ನೋಟಿಸ್ ತಡವಾಗಿ ವೈರಲ್ ಆಗಿದೆ. ಆದರೆ ಮಠದ ಹಣವನ್ನು ವಕೀಲರ ಸಂಭಾವನೆಗೆ ಬಳಸಿದ್ದೇವೆಂದು ಬಸವಪ್ರಭು ಶ್ರೀ ಸಮಜಾಯಿಷಿ ನೀಡಿದ್ದು, ಅವರು ನೀಡಿದ ಸಮಜಾಯಿಷಿ ಸಮಂಜಸವಲ್ಲ ಎಂದು ನೋಟಿಸ್ ನಲ್ಲಿ ಉಲ್ಲೇಖವಾಗಿದೆ.

    ಶೀಘ್ರವೇ ಮಠದ ಹಣವನ್ನು ಖಾತೆಗೆ ಸಂದಾಯ ಮಾಡದಿದ್ದಲ್ಲಿ ಕೋರ್ಟ್ ನಲ್ಲಿ (Court) ದಾವೆ ಹೂಡಲಾಗುವುದೆಂದು ನೋಟಿಸ್ ನೀಡಲಾಗಿದೆ. ಗುರುವಾರವಷ್ಟೇ ಮಠದ ಅಧಿಕಾರ ಮರಳಿ ಪಡೆದಿರುವ ಮುರುಘಾಶ್ರೀ ಶಿಷ್ಯರಾದ ಬಸವಪ್ರಭು ವಿಚಾರದಲ್ಲಿ ಯಾವ ನಿರ್ಣಯ ಕೈಗೊಳ್ಳುವರೆಂಬ ಕುತೂಹಲ ಭಕ್ತರಲ್ಲಿದೆ. ಇತ್ತ ಮಠದ ಹಣ ದುರ್ಬಳಕೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಟೀಕೆ ಹಾಗೂ ಚರ್ಚೆ ಶುರುವಾಗಿವೆ.

  • ತಂಬಾಕು ಚೀಲಗಳಲ್ಲಿ ತುಂಬಿ ದಾಖಲೆ ಇಲ್ಲದೆ ಸಾಗಿಸ್ತಿದ್ದ 8 ಕೋಟಿ ಹಣ ಜಪ್ತಿ

    ತಂಬಾಕು ಚೀಲಗಳಲ್ಲಿ ತುಂಬಿ ದಾಖಲೆ ಇಲ್ಲದೆ ಸಾಗಿಸ್ತಿದ್ದ 8 ಕೋಟಿ ಹಣ ಜಪ್ತಿ

    ಚಿತ್ರದುರ್ಗ: ದಾಖಲೆ ಇಲ್ಲದೆ ಚಿತ್ರದುರ್ಗದಿಂದ (Chitradurga) ಶಿವಮೊಗ್ಗಕ್ಕೆ ಸಾಗಿಸುತ್ತಿದ್ದ ಬರೋಬ್ಬರಿ 8 ಕೋಟಿ ರೂ. ಹಣವನ್ನು (Money)  ಹೊಳಲ್ಕೆರೆ ಪೊಲೀಸರು (Holalkere Police) ಜಪ್ತಿ ಮಾಡಿದ್ದಾರೆ.

    ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಮಲ್ಲಾಡಿಹಳ್ಳಿ ಬಳಿ ಇನೋವಾ ಕಾರಿನಲ್ಲಿ ತೆರಳುತಿದ್ದ ಚಾಲಕ ಸಚಿನ್‌ನನ್ನು ವಶಕ್ಕೆ ಪಡೆದಿರುವ ಪೊಲೀಸರು ಕಾರಿನಲ್ಲಿ ತಂಬಾಕು ಚೀಲಗಳಲ್ಲಿ ತುಂಬಲಾಗಿದ್ದ 8 ಕೋಟಿ ರೂ. ಹಣವನ್ನು ಜಪ್ತಿ ಮಾಡಿದ್ದಾರೆ.

    ಈ ಹಣ ಚಿತ್ರದುರ್ಗದ ಅಡಿಕೆ ವರ್ತಕರಿಗೆ ಸೇರಿದ್ದು ಎಂಬ ಅನುಮಾನವಿದ್ದು, ಖಚಿತ ಮಾಹಿತಿಗಾಗಿ ಆದಾಯ ತೆರಿಗೆ ಅಧಿಕಾರಿಗಳಿಗೆ ಈ ಮಾಹಿತಿಯನ್ನು ನೀಡಲಾಗಿದೆ. ವಿಚಾರಣೆ ಬಳಿಕ ಈ ಹಣ ಯಾರಿಗೆ ಸೇರಿದ್ದು ಹಾಗೂ ಯಾವ ಕಾರಣಕ್ಕೆ ಸಾಗಿಸಲಾಗುತ್ತಿತ್ತು ಎಂಬುದು ತಿಳಿಯಲಿದೆ ಎಂದು ಎಸ್‌ಪಿ ಧರ್ಮೇಂದರ್ ಕುಮಾರ್ ಮೀನಾ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಪ್ಯಾರಾಗ್ಲೈಡಿಂಗ್ ಮೂಲಕ ಆದಿಯೋಗಿಯ ದರ್ಶನಕ್ಕೆ ಪ್ರಾಯೋಗಿಕ ಹಾರಾಟ

    ಜಪ್ತಿಯಾಗಿರುವ ಭಾರೀ ಮೊತ್ತದ ಹಣ ಎಣಿಕೆ ಕಾರ್ಯವನ್ನು ಹೊಳಲ್ಕೆರೆ ಪೊಲೀಸರು ಕೈಗೊಂಡಿದ್ದಾರೆ. ಈ ಪ್ರಕರಣ ಹೊಳಲ್ಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಇದನ್ನೂ ಓದಿ: ಗೆಳೆಯನನ್ನು ಮದುವೆಯಾಗಲು ಪಾಕಿಸ್ತಾನಕ್ಕೆ ಹೋಗಿದ್ದ ಅಂಜು ತವರಿಗೆ ವಾಪಸ್

  • ಹಾಸನಾಂಬೆ ದೇಗುಲಕ್ಕೆ ದಾಖಲೆಯ ಆದಾಯ- 9 ದಿನಗಳಲ್ಲಿ 4,56,22,580 ರೂ. ಸಂಗ್ರಹ

    ಹಾಸನಾಂಬೆ ದೇಗುಲಕ್ಕೆ ದಾಖಲೆಯ ಆದಾಯ- 9 ದಿನಗಳಲ್ಲಿ 4,56,22,580 ರೂ. ಸಂಗ್ರಹ

    ಹಾಸನ: ವರ್ಷಕ್ಕೆ ಒಂದು ಬಾರಿ ದರ್ಶನ ನೀಡುವ ಹಾಸನಾಂಬೆಯ (Hasanambe) ಜಾತ್ರಾ ಮಹೋತ್ಸವ ಇತಿಹಾಸದಲ್ಲೇ ದಾಖಲೆ ಬರೆದಿದ್ದು, ದಾಖಲೆಯ ಆದಾಯ (Income) ಗಳಿಸಿದೆ.

    9 ದಿನಗಳ ದರ್ಶನದಲ್ಲಿ ಒಟ್ಟು 4,56,22,580 ರೂ. ಸಂಗ್ರಹವಾಗಿದೆ. ವಿಶೇಷ ದರ್ಶನದ ಪಾಸ್ ಹಾಗೂ ಲಡ್ಡು ಪ್ರಸಾದ ಮಾರಾಟದಿಂದ ಕೋಟಿ ಕೋಟಿ ಆದಾಯ ಗಳಿಸಿದೆ. ನ.3ರಿಂದ ಪ್ರಾರಂಭವಾಗಿ ನ.11ರ ಮಧ್ಯಾಹ್ನ 2ಗಂಟೆಯವರೆಗೆ ಒಟ್ಟು 4,56,22,580 ರೂ. ಆದಾಯ ಬಂದಿದೆ. ಸಾವಿರ ರೂ. ಟಿಕೆಟ್ ಮಾರಾಟದಿಂದ 2,30,91,000 ರೂ. ಸಂಗ್ರಹವಾಗಿದ್ದು, 300 ರೂ. ಟಿಕೆಟ್ ಮಾರಾಟದಿಂದ 1,79,65,500 ರೂ. ಸಂಗ್ರಹವಾಗಿದೆ. ಇದನ್ನೂ ಓದಿ: ಅತಿವೃಷ್ಠಿಯಲ್ಲಿ ಬಿಎಸ್‍ವೈ ಭಿಕ್ಷೆ ಬೇಡಿದ್ದರು, ಸಿದ್ದರಾಮಯ್ಯರಂತೆ ಡ್ಯಾನ್ಸ್ ಮಾಡಿರಲಿಲ್ಲ: ಆರಗ ಜ್ಞಾನೇಂದ್ರ ವ್ಯಂಗ್ಯ

    ಲಡ್ಡು ಪ್ರಸಾದ ಮಾರಾಟದಿಂದ ಕೂಡ 45,66,080 ಹಣ ಸಂಗ್ರಹವಾಗಿದ್ದು, ಒಟ್ಟು 4,56,22,580 ರೂ. ಆದಾಯವನ್ನು ಹಾಸನಾಂಬ ದೇವಾಲಯ ಗಳಿಸಿದೆ. ಹಾಸನಾಂಬೆ ದರ್ಶನೋತ್ಸವ ಇತಿಹಾಸದಲ್ಲೇ ಅತಿ ಹೆಚ್ಚಿನ ಆದಾಯ ಗಳಿಸಿದ್ದು, ಇನ್ನೂ ಮೂರು ದಿನ ಬಾಕಿ ಇರುವಾಗಲೇ ಕೋಟಿ ಕೋಟಿ ಆದಾಯ ಗಳಿಸಿದೆ. ಇದನ್ನೂ ಓದಿ: ನ.15ಕ್ಕೆ ವಿಜಯೇಂದ್ರ ಪದಗ್ರಹಣ

  • `ಗ್ಯಾರಂಟಿ’ ಗುಡ್‍ನ್ಯೂಸ್: ಅನ್ನಭಾಗ್ಯ, ಗೃಹಲಕ್ಷ್ಮಿ ಹಣ ಜಮೆಗೆ ಡೆಡ್‍ಲೈನ್

    `ಗ್ಯಾರಂಟಿ’ ಗುಡ್‍ನ್ಯೂಸ್: ಅನ್ನಭಾಗ್ಯ, ಗೃಹಲಕ್ಷ್ಮಿ ಹಣ ಜಮೆಗೆ ಡೆಡ್‍ಲೈನ್

    ಬೆಂಗಳೂರು: ಲೋಕಸಭೆ ಚುನಾವಣೆ (Loksabha Election) ಬೆನ್ನಲ್ಲೆ ಗ್ಯಾರಂಟಿ ಸಮರ್ಪಕ ಜಾರಿಗೆ ಸರ್ಕಾರ ಕಸರತ್ತು ನಡೆಸುತ್ತಿದೆ. ರಾಜ್ಯದ ಜನತೆಗೆ `ಗ್ಯಾರಂಟಿ’ ಗುಡ್‍ನ್ಯೂಸ್ ಒಂದು ಸಿಕ್ಕಿದೆ.

    ರಾಜ್ಯದಲ್ಲಿ ಅನ್ನಭಾಗ್ಯ (Anna Bhagya) ಹಾಗೂ ಗೃಹಲಕ್ಷ್ಮಿ (Gruhalakshmi) ಹಣ ವಿಳಂಬವಾಗುತ್ತಿದ್ದ ಬೆನ್ನಲ್ಲೇ ಫಲಾನುಭವಿಗಳಿಗೆ ಹಣ ತಲುಪಿಸೋಕೆ ನಿಗದಿತ ಡೆಡ್‍ಲೈನ್ ಅನ್ನು ಆರ್ಥಿಕ ಇಲಾಖೆ ನೀಡಿದೆ.

    ಆರ್ಥಿಕ ಇಲಾಖೆಯ ಡಿಡಿಓಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದು, ಈ ಮೂಲಕ ಹಣ ತಲುಪಲು ಪ್ರತಿ ತಿಂಗಳಲ್ಲೂ ದಿನಾಂಕ ಫಿಕ್ಸ್ ಮಾಡಲಾಗುತ್ತಿದೆ. ಗೃಹಲಕ್ಷ್ಮಿ, ಅನ್ನಭಾಗ್ಯದ ಹಣ ಖಾತೆಗೆ ಜಮೆ ಆಗಲು ಇನ್ಮುಂದೆ ಡೆಡ್ ಲೈನ್ ಇರಲಿದೆ. ಇದನ್ನೂ ಓದಿ: ಕೆಲಸದಿಂದ ತೆಗೆದು ಹಾಕಿದ್ದಕ್ಕೆ ಪ್ರತಿಮಾ ಕೊಲೆ- ತಪ್ಪೊಪ್ಪಿಕೊಂಡ ಕಿರಣ್

    ಅನ್ನಭಾಗ್ಯ ಹಾಗೂ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪ್ರತಿ ತಿಂಗಳ 20ಕ್ಕೆ ಹಾಕಲು ಆರ್ಥಿಕ ಇಲಾಖೆ ಸುತ್ತೋಲೆ ನೀಡಿದೆ. ಅನ್ನಭಾಗ್ಯದ ದುಡ್ಡನ್ನು 10-15 ದಿನಾಂಕದೊಳಗೆ ಪ್ರಕ್ರಿಯೆಗೆ ಸೂಚನೆ ನೀಡಲಾಗಿದೆ. ಹಾಗೆಯೇ ಗೃಹಲಕ್ಷ್ಮಿ ಹಣ ತಿಂಗಳ 15- 20 ರೊಳಗೆ ಜಮೆಗೆ ಸೂಚನೆ ನೀಡಲಾಗಿದೆ.