Tag: ಹತ್ರಾಸ್

  • ಹತ್ರಾಸ್‌ ಕಾಲ್ತುಳಿತ ದುರಂತ; ಹೆಣಗಳ ರಾಶಿ ಕಂಡು ಹೃದಯಾಘಾತದಿಂದ ಪೊಲೀಸ್‌ ಕಾನ್‌ಸ್ಟೇಬಲ್‌ ಸಾವು

    ಹತ್ರಾಸ್‌ ಕಾಲ್ತುಳಿತ ದುರಂತ; ಹೆಣಗಳ ರಾಶಿ ಕಂಡು ಹೃದಯಾಘಾತದಿಂದ ಪೊಲೀಸ್‌ ಕಾನ್‌ಸ್ಟೇಬಲ್‌ ಸಾವು

    ಲಕ್ನೋ: ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಕಾಲ್ತುಳಿತದಿಂದಾಗಿ ನೂರಾರು ಮಂದಿ ದುರಂತ ಸಾವಿಗೀಡಾಗಿರುವ ಘಟನೆ ನಡೆದಿದೆ. ಆಸ್ಪತ್ರೆಯಲ್ಲಿ ಹೆಣಗಳ ರಾಶಿ ಕಂಡು ಪೊಲೀಸ್‌ ಕಾನ್‌ಸ್ಟೇಬಲ್‌ವೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

    ಇಟಾಹ್ ಜಿಲ್ಲೆಯ ಅವಘರ್ ಪೊಲೀಸ್ ಠಾಣೆಯಲ್ಲಿ ನಿಯೋಜಿಸಲಾದ ಕಾನ್‌ಸ್ಟೆಬಲ್ ರವಿ, ಹತ್ರಾಸ್ (Hathras) ಸತ್ಸಂಗದಲ್ಲಿ ಮೃತಪಟ್ಟವರ ಮೃತದೇಹಗಳನ್ನು ನೋಡಿದ ನಂತರ ಹೃದಯಾಘಾತಕ್ಕೆ ಒಳಗಾಗಿದ್ದರು. ಇಟಾಹ್ ವೈದ್ಯಕೀಯ ಕಾಲೇಜಿನಲ್ಲಿ ನಿಧನರಾದರು. ಇದನ್ನೂ ಓದಿ: ಹತ್ರಾಸ್‌ ದುರಂತ- ಮೃತರ ಕುಟುಂಬಕ್ಕೆ ತಲಾ 2 ಲಕ್ಷ, ಗಾಯಾಳುಗಳಿಗೆ ತಲಾ 50 ಸಾವಿರ ನೆರವು

    ರವಿ ಒಂದು ತಿಂಗಳಿನಿಂದ ತನ್ನ ಸಹೋದ್ಯೋಗಿ ಶೇಖರ್ ಪ್ರೇಮಿಯೊಂದಿಗೆ ಕ್ಯೂಆರ್‌ಟಿ ಕರ್ತವ್ಯದ ಮೇಲೆ ಇಟಾಹ್ ನಗರದಲ್ಲಿ ನೆಲೆಸಿದ್ದರು. ಹತ್ರಾಸ್ ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ, ಇಟಾಹ್ ವೈದ್ಯಕೀಯ ಕಾಲೇಜಿಗೆ ಹೋಗುವಂತೆ ಅವರಿಗೆ ಸೂಚಿಸಲಾಗಿತ್ತು.

    ಅಲ್ಲಿಗೆ ಬಂದ ಕಾನ್‌ಸ್ಟೇಬಲ್ ರವಿಗೆ ಮೃತದೇಹಗಳನ್ನು ನೋಡಿ ತಲೆ ತಿರುಗತೊಡಗಿತು. ಜಿಲ್ಲಾ ಮ್ಯಾಜಿಸ್ಟ್ರೇಟ್ ಪ್ರೇಮ್ ರಂಜನ್ ಸಿಂಗ್, ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ಕುಮಾರ್ ಸಿಂಗ್ ಮತ್ತು ಇತರ ಅಧಿಕಾರಿಗಳು ಘಟನಾ ಸ್ಥಳಕ್ಕೆ ಆಗಮಿಸಿದರು. ಮೈಬಿಸಿ ಕಾರಣ ರವಿ ತನ್ನ ಶರ್ಟ್ ತೆಗೆದು ಹಾಕಿದರು. ತಕ್ಷಣ ಅಧಿಕಾರಿಗಳು ಹವಾನಿಯಂತ್ರಿತ ಕೋಣೆಗೆ ಅವರನ್ನು ಸ್ಥಳಾಂತರಿಸಿದರು. ಆದರೆ, ಅವರು ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿಸಿದೆ.

    ಹತ್ರಾಸ್‌ ಕಾಲ್ತುಳಿತದಿಂದ ಇದುವರೆಗೆ 116 ಮಂದಿ ಬಲಿಯಾಗಿದ್ದಾರೆ. ಅವರ ಪೈಕಿ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಇದನ್ನೂ ಓದಿ: ಹತ್ರಾಸ್‌ನಲ್ಲಿ ಕಾಲ್ತುಳಿತಕ್ಕೆ 27 ಮಂದಿ ಸಾವು, ಹಲವರಿಗೆ ಗಾಯ

  • ಹತ್ರಾಸ್‌ ದುರಂತ- ಮೃತರ ಕುಟುಂಬಕ್ಕೆ ತಲಾ 2 ಲಕ್ಷ, ಗಾಯಾಳುಗಳಿಗೆ ತಲಾ 50 ಸಾವಿರ ನೆರವು

    ಹತ್ರಾಸ್‌ ದುರಂತ- ಮೃತರ ಕುಟುಂಬಕ್ಕೆ ತಲಾ 2 ಲಕ್ಷ, ಗಾಯಾಳುಗಳಿಗೆ ತಲಾ 50 ಸಾವಿರ ನೆರವು

    ಲಕ್ನೋ: ಉತ್ತರ ಪ್ರದೇಶದ ಹತ್ರಾಸ್ (Hathras Tragedy) ಜಿಲ್ಲೆಯಲ್ಲಿ ಸತ್ಸಂಗದ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬ ಹಾಗೂ ಗಾಯಾಳುಗಳಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಪರಿಹಾರ ಘೋಷಿಸಿದ್ದಾರೆ.

    ಹತ್ರಾಸ್ ಘಟನೆಯ ಬಗ್ಗೆ ಸಂತಾಪ ವ್ಯಕ್ತಪಡಿಸಿದ ಯೋಗಿ ಆದಿತ್ಯನಾಥ್, ಈ ಬಗ್ಗೆ ಸಮಗ್ರ ತನಿಖೆ ನಡೆಸಲಾಗುವುದು. ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ಆರ್ಥಿಕ ನೆರವು ನೀಡಲು ಸೂಚನೆ ನೀಡಲಾಗಿದೆ ಎಂದರು.

    ಕ್ಷಣ ಕ್ಷಣದ ಬೆಳವಣಿಗೆಗಳ ಮೇಲೆ ಖುದ್ದು ಮುಖ್ಯಮಂತ್ರಿಯೇ ನೇರ ಕಣ್ಣಿಟ್ಟಿದ್ದು, ಇಬ್ಬರು ಸಚಿವರು, ಮುಖ್ಯ ಕಾರ್ಯದರ್ಶಿ ಹಾಗೂ ಡಿಜಿಪಿಯನ್ನು ಘಟನಾ ಸ್ಥಳಕ್ಕೆ ಕಳುಹಿಸಿದ್ದಾರೆ. ಎಡಿಜಿ, ಆಗ್ರಾ ಮತ್ತು ಕಮಿಷನರ್, ಅಲಿಘರ್ ನೇತೃತ್ವದಲ್ಲಿ ತಂಡವನ್ನು ರಚಿಸಲಾಗಿದೆ. ಅಲ್ಲದೇ ದುರಂತಕ್ಕೆ ಕಾರಣ ಏನು ಎಂಬುದರ ಬಗ್ಗೆ ತನಿಖೆ ಮಾಡಲು ಸೂಚನೆಗಳನ್ನು ನೀಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಹತ್ರಾಸ್‌ನಲ್ಲಿ ಕಾಲ್ತುಳಿತಕ್ಕೆ 27 ಮಂದಿ ಸಾವು, ಹಲವರಿಗೆ ಗಾಯ



    ಮಾಹಿತಿ ಪ್ರಕಾರ, 100ಕ್ಕೂ ಹೆಚ್ಚು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಮೃತರಲ್ಲಿ 25 ಕ್ಕೂ ಹೆಚ್ಚು ಮಂದಿ ಇಟಾಹ್ ಮೂಲದವರು ಎಂದು ಹೇಳಲಾಗಿದೆ. ಘಟನೆಯ ನಂತರ ಫಿರೋಜಾಬಾದ್‌ನ ಆರೋಗ್ಯ ಇಲಾಖೆಯಿಂದ ಇಬ್ಬರು ವೈದ್ಯರ ತಂಡ, ಐದು ಅಂಬುಲೆನ್ಸ್‌ಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ. ಮೃತರಲ್ಲಿ ಹಲವಾರು ಮಹಿಳೆಯರು ಮತ್ತು ಒಂದು ಮಗು ಕೂಡ ಸೇರಿದೆ.

  • ಹತ್ರಾಸ್‌ನಲ್ಲಿ ಕಾಲ್ತುಳಿತಕ್ಕೆ 27 ಮಂದಿ ಸಾವು, ಹಲವರಿಗೆ ಗಾಯ

    ಹತ್ರಾಸ್‌ನಲ್ಲಿ ಕಾಲ್ತುಳಿತಕ್ಕೆ 27 ಮಂದಿ ಸಾವು, ಹಲವರಿಗೆ ಗಾಯ

    ಲಕ್ನೋ: ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ (Hathras, Uttarpradesh) ಮಂಗಳವಾರ ನಡೆದ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಕಾಲ್ತುಳಿತ ಸಂಭವಿಸಿದ್ದು,  25 ಮಂದಿ ಮಹಿಳೆಯರು ಸೇರಿ ಒಟ್ಟು 27 ಜನ ಸಾವನ್ನಪ್ಪಿದ್ದಾರೆ.

    ರತಿಭಾನಪುರದಲ್ಲಿ ಭೋಲೆಬಾಬಾ ಪ್ರವಚನ ಕಾರ್ಯಕ್ರಮ ನಡೆದಿತ್ತು. ಈ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಕಾಲ್ತುಳಿತ ಉಂಟಾಗಿ ಮಹಿಳೆಯರು, ಮಕ್ಕಳು ಸೇರಿದಂತೆ ಹಲವರು ಗಾಯಗೊಂಡಿದ್ದರು. ಇನ್ನು ಪ್ರವಚನದಲ್ಲಿ ಪಾಲ್ಗೊಳ್ಳಲು ಬಂದಿದ್ದ ನೂರಾರು ಭಕ್ತರು ಬಿಸಿಲಿನ ತಾಪಕ್ಕೆ ಮೂರ್ಛೆ ಹೋದರು.

    ಘಟನೆಯ ಬಗ್ಗೆ ಮಾಹಿತಿ ಪಡೆದ ತಕ್ಷಣ ಪೊಲೀಸರು ಮತ್ತು ಆಡಳಿತವು ಸ್ಥಳಕ್ಕೆ ಧಾವಿಸಿದ್ದು, ಹಲವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಒಟ್ಟು 15 ಮಹಿಳೆಯರು ಮತ್ತು ಮಕ್ಕಳನ್ನು ಎಟಾಹ್ ಮೆಡಿಕಲ್ ಕಾಲೇಜಿಗೆ ಕರೆದೊಯ್ಯಲಾಗಿದ್ದು, ಸದ್ಯ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೂ ಹೆಚ್ಚು ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

  • ಬಿಜೆಪಿ ಟಿಕೆಟ್‌ ವಂಚಿತ, ಹತ್ರಾಸ್‌ ಸಂಸದ ಹೃದಯಾಘಾತದಿಂದ ನಿಧನ

    ಬಿಜೆಪಿ ಟಿಕೆಟ್‌ ವಂಚಿತ, ಹತ್ರಾಸ್‌ ಸಂಸದ ಹೃದಯಾಘಾತದಿಂದ ನಿಧನ

    ಲಕ್ನೋ: ಉತ್ತರ ಪ್ರದೇಶದ ಹತ್ರಾಸ್‌ನ ಬಿಜೆಪಿ ಸಂಸದ ರಾಜವೀರ್ ದಿಲೇರ್ (Hathras BJP MP Rajveer Diler) ಅವರು ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ.

    ವರದಿಗಳ ಪ್ರಕಾರ, ಸಂಸದರು ಅಲಿಘರ್‌ನಲ್ಲಿರುವ ತಮ್ಮ ನಿವಾಸದಲ್ಲಿದ್ದ ಸಂದರ್ಭದಲ್ಲಿ ಇದ್ದಕ್ಕಿದ್ದಂತೆ ಮೂರ್ಛೆ ಹೋಹಿ ಕುಸಿದು ಬಿದ್ದಿದ್ದಾರೆ. ತಕ್ಷಣ ಸಂಬಂಧಿಕರು ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದರು. ಆದರೆ ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

    ಯೋಗಿ ಸಂತಾಪ: ಬಿಜೆಪಿ ಸಂಸದರ ನಿಧನಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಸಂತಾಪ ಸೂಚಿಸಿದ್ದಾರೆ. ಹತ್ರಾಸ್ ಲೋಕಸಭಾ ಕ್ಷೇತ್ರದ ಸಂಸದ ರಾಜವೀರ್ ಸಿಂಗ್ ದಿಲೇರ್ ಜಿ ಅವರ ಅಕಾಲಿಕ ನಿಧನವು ಬಿಜೆಪಿ ಕುಟುಂಬಕ್ಕೆ ತುಂಬಲಾರದ ನಷ್ಟವಾಗಿದೆ. ಅಗಲಿದ ಆತ್ಮಕ್ಕೆ ಶಾಂತಿ ಕೊಡಲಿ ಎಂದು ಭಗವಂತ ಶ್ರೀರಾಮನಲ್ಲಿ ಪ್ರಾರ್ಥನೆ. ಈ ಸಂದರ್ಭದಲ್ಲಿ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ತಮ್ಮ ಎಕ್ಸ್‌ ನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: Lok Sabha Election 2024: 14 ಕ್ಷೇತ್ರದಲ್ಲಿ 3 ದಿನ ಮದ್ಯ ಮಾರಾಟ ಬಂದ್

    ರಾಜವೀರ್ ದಿಲೇರ್ ಅವರು ಈ ಬಾರಿಯ ಲೋಕಸಭಾ ಚುನಾವಣೆಯ ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಆದರೆ ಇವರಿಗೆ ಬಿಜೆಪಿ ಟಿಕೆಟ್‌ ಕೊಡಲು ನಿರಾಕರಿಸಿತ್ತು. ಬದಲಾಗಿ ಅನುಪ್ ಪ್ರಧಾನ್ ಅವರನ್ನು ಕಣಕ್ಕಿಳಿಸಿದೆ. 2019 ರ ಲೋಕಸಭಾ ಚುನಾವಣೆಯಲ್ಲಿ ರಾಜ್ವಿರ್ ದಿಲೇರ್ 260,208 ಮತಗಳ ಅಂತರದಿಂದ ಗೆದ್ದಿದ್ದರು. ರಾಜ್‌ವೀರ್ ದಿಲೆರ್ 684,299 ಮತಗಳನ್ನು ಪಡೆದಿದ್ದು, ಸಮಾಜವಾದಿ ಪಕ್ಷದ ರಾಮ್‌ಜಿ ಲಾಲ್ ಸುಮನ್ ಅವರನ್ನು ಸೋಲಿಸಿದ್ದರು.

  • ಹತ್ರಾಸ್ ರೇಪ್ ಕೇಸ್ – ಓರ್ವ ದೋಷಿ, ಮೂವರು ಖುಲಾಸೆ

    ಹತ್ರಾಸ್ ರೇಪ್ ಕೇಸ್ – ಓರ್ವ ದೋಷಿ, ಮೂವರು ಖುಲಾಸೆ

    ಲಕ್ನೋ: ಹತ್ರಾಸ್ (Hathras) ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ (Uttar Pradesh) ವಿಶೇಷ ನ್ಯಾಯಾಲಯವು ಮೂವರನ್ನು ಖುಲಾಸೆಗೊಳಿಸಿದ್ದು, ಓರ್ವನನ್ನು ಅಪರಾಧಿ ಎಂದು ತೀರ್ಪು ನೀಡಿದೆ.

    ಆರೋಪಿಗಳಾದ ರಾಮು, ಲವಕುಶ ಮತ್ತು ರವಿ ಅವರನ್ನು ಖುಲಾಸೆಗೊಳಿಸಲಾಗಿದ್ದು, ಆರೋಪಿ ಸಂದೀಪ್ ಅವರನ್ನು ಕೊಲೆಗೆ ಸಮಾನವಲ್ಲದ ಅಪರಾಧಿ ನರಹತ್ಯೆ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಅಪರಾಧಕ್ಕಾಗಿ ಶಿಕ್ಷೆಗೆ ಗುರಿಪಡಿಸಲಾಗಿದೆ. ಇದನ್ನೂ ಓದಿ: ಅತ್ತಿಗೆಯೊಂದಿಗೆ ಸಂಬಂಧ ಹೊಂದಿಲ್ಲ – ಸಾಬೀತುಪಡಿಸಲು ಅಗ್ನಿಪರೀಕ್ಷೆ ಮಾಡಿಕೊಂಡ ಭೂಪ

    ಸಂತ್ರಸ್ತೆಯ ಮೇಲೆ ಸೆಪ್ಟೆಂಬರ್ 14, 2020 ರಂದು ಹತ್ರಾಸ್‍ನಲ್ಲಿ 19 ವರ್ಷದ ದಲಿತ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಆರೋಪಿಗಳು ಅವಳನ್ನು ಕೊಲ್ಲಲು ಪ್ರಯತ್ನಿಸಿದ್ದರು. ಸೆಪ್ಟೆಂಬರ್ 29 ರಂದು ದೆಹಲಿಯ ಸಫ್ದರ್‍ಜಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಂತ್ರಸ್ತೆ ಸಾವನ್ನಪ್ಪಿದ್ದಳು. ಆಕೆಯ ಶವವನ್ನು ಯುಪಿ ಪೊಲೀಸರು ಮತ್ತು ಜಿಲ್ಲಾಡಳಿತವು ಕುಟುಂಬದ ಒಪ್ಪಿಗೆ ಪಡೆಯದೇ ಅವರ ಅನುಪಸ್ಥಿತಿಯಲ್ಲಿ ಸುಟ್ಟು ಹಾಕಿತ್ತು.

    CRIME 2

    ಬಲವಂತದ ಶವಸಂಸ್ಕಾರ ಮತ್ತು ಸಾಮೂಹಿಕ ಅತ್ಯಾಚಾರಕ್ಕೆ (Gang rape) ಸಂಬಂಧಿಸಿದಂತೆ, ಅಲಹಾಬಾದ್ ಹೈಕೋರ್ಟ್ 2020ರ ಅಕ್ಟೋಬರ್ 1 ರಂದು ಸ್ವಯಂಪ್ರೇರಿತವಾಗಿ ವಿಚಾರಣೆ ನಡೆಸಿತ್ತು. 2020ರ ಸೆಪ್ಟೆಂಬರ್ 29 ರಂದು ಸಂತ್ರಸ್ತೆಯ ಮರಣದ ನಂತರ ಆಕೆಯ ಅಂತ್ಯಕ್ರಿಯೆಗೆ ಕಾರಣವಾದ ಘಟನೆಗಳು ನಮ್ಮ ಆತ್ಮಸಾಕ್ಷಿಯನ್ನು ಆಘಾತಗೊಳಿಸಿವೆ, ಆದ್ದರಿಂದ ಸ್ವಯಂಪ್ರೇರಿತವಾಗಿ ವಿಚಾರಣೆಗೆ ತೆಗೆದುಕೊಳ್ಳುತ್ತಿದ್ದೇವೆ ಎಂದು ಹೈಕೋರ್ಟ್ ಹೇಳಿತ್ತು.

    ಅಕ್ಟೋಬರ್ 10 ರಂದು ಅಲಹಾಬಾದ್ ಹೈಕೋರ್ಟ್ (Allahabad High Court) ಈ ಪ್ರಕರಣವನ್ನು ಸಿಬಿಐಗೆ (Central Bureau of Investigation) ವಹಿಸಿತ್ತು. ತನಿಖೆ ನಡೆಸಿದ್ದ ಸಿಬಿಐ ಎಲ್ಲಾ ನಾಲ್ವರು ಆರೋಪಿಗಳ ವಿರುದ್ಧ ಡಿಸೆಂಬರ್ 2020ರಲ್ಲಿ ಚಾರ್ಜ್‍ಶೀಟ್ ಸಲ್ಲಿಸಿತ್ತು. ಇದನ್ನೂ ಓದಿ: ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ

  • ಕನ್ವರ್ ಯಾತ್ರೆಗೆ ತೆರಳುತ್ತಿದ್ದ ಭಕ್ತರ ಮೇಲೆ ಟ್ರಕ್ ಹರಿದು ಐವರು ಸಾವು- ಓರ್ವ ಗಂಭೀರ

    ಕನ್ವರ್ ಯಾತ್ರೆಗೆ ತೆರಳುತ್ತಿದ್ದ ಭಕ್ತರ ಮೇಲೆ ಟ್ರಕ್ ಹರಿದು ಐವರು ಸಾವು- ಓರ್ವ ಗಂಭೀರ

    ಲಕ್ನೋ: ಕನ್ವರ್ ಯಾತ್ರೆಗೆ ತೆರಳುತ್ತಿದ್ದ ಭಕ್ತರ ಮೇಲೆ ಟ್ರಕ್ ಹರಿದ ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯ ಗ್ವಾಲಿಯರ್‌ನಲ್ಲಿ ಇಂದು ನಸುಕಿನ 2.15ರ ಸುಮಾರಿಗೆ ಅಪಘಾತ ಸಂಭವಿಸಿದೆ. ಇದನ್ನೂ ಓದಿ: ನನ್ನ ಲೆವಲ್‍ಗೆ ಮಾತನಾಡೋರು ಇದ್ರೆ ನಾನು ಮಾತಾಡ್ತೇನೆ- ಜಮೀರ್‌ಗೆ ಡಿಕೆಶಿ ಟಾಂಗ್

    ಕನ್ವರ್ ಯಾತ್ರೆ ಕೈಗೊಂಡಿದ್ದ ಭಕ್ತರು ಹರಿದ್ವಾರದಿಂದ ಗ್ವಾಲಿಯರ್‌ಗೆ ಹೋಗುತ್ತಿದ್ದರು. ಈ ವೇಳೆ ಅವಘಡ ಸಂಭವಿಸಿದೆ. ಘಟನೆ ಕುರಿತು ತನಿಖೆ ನಡೆಸಲಾಗುತ್ತಿದ್ದು, ಟ್ರಕ್ ಚಾಲಕನನ್ನು ಶೀಘ್ರವೇ ಬಂಧಿಸಲಾಗುವುದು. ತಪ್ಪಿತಸ್ಥರನ್ನು ಬಿಡುವುದಿಲ್ಲ ಎಂದು ಆಗ್ರಾ ವಲಯದ ಎಡಿಜಿ ರಾಜೀವ್ ಕೃಷ್ಣ ತಿಳಿಸಿದ್ದಾರೆ. ಇದನ್ನೂ ಓದಿ: ಶಿಕ್ಷಕರ ನೇಮಕಾತಿ ಹಗರಣ – ಟಿಎಂಸಿ ಸಚಿವ ಪಾರ್ಥ ಚಟರ್ಜಿ ಅರೆಸ್ಟ್

    ಕನ್ವರ್ ಯಾತ್ರೆಯ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಮೊರಾದಾಬಾದ್‌ನ ಶಾಲೆಗಳು ಹಾಗೂ ಎಲ್ಲಾ ಶೈಕ್ಷಣಿಕ ಸಂಸ್ಥೆಗಳನ್ನು ಜುಲೈ 25 ಮತ್ತು 26ರಂದು ಬಂದ್ ಮಾಡಲಾಗುವುದು. ಈಗಾಗಲೇ ಕನ್ವರ್ ಯಾತ್ರೆಯಿಂದಾಗಿ ಉತ್ತರಾಖಂಡದ ಹರಿದ್ವಾರ ಮತ್ತು ಉತ್ತರಪ್ರದೇಶದ ಮೀರತ್‌ನಲ್ಲಿಯೂ ಶಾಲೆಗಳನ್ನು ಮುಚ್ಚಲಾಗಿದೆ. ಯಾತ್ರಿಕರು ಈ ಪ್ರದೇಶಗಳಲ್ಲಿ ಹಾದು ಹೋಗುವುದರಿಂದ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ತಡೆಯಲು ಎರಡೂ ದಿನ ಶೈಕ್ಷಣಿಕ ಸಂಸ್ಥೆಗಳನ್ನು ತೆರೆಯುವುದಿಲ್ಲ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ.

    Live Tv
    [brid partner=56869869 player=32851 video=960834 autoplay=true]

  • ದೇಶಾದ್ಯಂತ ಸುದ್ದಿಯಾಗಿದ್ದ ಹತ್ರಾಸ್‌, ಲಖೀಂಪುರದಲ್ಲಿ ಬಿಜೆಪಿಗೆ ಮುನ್ನಡೆ

    ದೇಶಾದ್ಯಂತ ಸುದ್ದಿಯಾಗಿದ್ದ ಹತ್ರಾಸ್‌, ಲಖೀಂಪುರದಲ್ಲಿ ಬಿಜೆಪಿಗೆ ಮುನ್ನಡೆ

    ಲಕ್ನೋ: ದೇಶಾದ್ಯಂತ ತೀವ್ರ ಸಂಚಲನ ಸೃಷ್ಟಿಸಿದ್ದ ಉತ್ತರ ಪ್ರದೇಶ ಹತ್ರಾಸ್‌ ಮತ್ತು ಲಖೀಂಪುರ ಜಿಲ್ಲೆಯ ಎಲ್ಲ ಕೇತ್ರದಲ್ಲಿ ಬಿಜೆಪಿ ಆರಂಭಿಕ ಮುನ್ನಡೆ ಸಾಧಿಸಿದೆ.

    ಗ್ಯಾಂಗ್‌ ರೇಪ್‌ ಪ್ರಕರಣದಿಂದ ಹತ್ರಾಸ್‌, ಕೃಷಿ ಕಾಯ್ದೆ ವಿರೋಧಿಸಿ ನಡೆದ ಹಿಂಸಾಚಾರ ಪ್ರಕರಣದಿಂದ ಲಂಖೀಂಪುರ ದೇಶಾದ್ಯಂತ ಸುದ್ದಿಯಾಗಿತ್ತು. ಸಿಎಂ ಯೋಗಿ ಆದಿತ್ಯನಾಥ್‌ ನೇತೃತ್ವದ ಸರ್ಕಾರ ಮತ್ತು ಬಿಜೆಪಿಗೆ ಈ ಪ್ರಕರಣದಿಂದ ಮುಜುಗರವಾಗಿತ್ತು. ಇದನ್ನೂ ಓದಿ: ಉತ್ತರ ಪ್ರದೇಶ ಅಂಚೆ ಮತ ಎಣಿಕೆ: ಆರಂಭದಲ್ಲಿ ಬಿಜೆಪಿ ಮುನ್ನಡೆ

    ವಿಧಾನಸಭಾ ಚುನಾವಣೆಯ ಸಂದರ್ಭದಲ್ಲೂ ಈ ವಿಷಯಗಳು ಚರ್ಚೆ ಆಗಿತ್ತು. ಈ ಎರಡು ಪ್ರಕರಣಗಳಿಂದ ಬಿಜೆಪಿಗೆ ಹಿನ್ನಡೆಯಾಗಲಿದೆ ಎಂಬ ವಿಶ್ಲೇಷಣೆ ಕೇಳಿ ಬಂದಿತ್ತು. ಆದರೆ ಆರಂಭದ ಮುನ್ನಡೆ ಗಮನಿಸಿದಾಗ ಈ ಚುನಾವಣೆಯಲ್ಲಿ ಮತದಾರ ಈ ವಿಚಾರವನ್ನು ಪರಿಗಣಿಸದೇ ಮತ ಮಾಡಿರುವುದು ಸ್ಪಷ್ಟವಾಗುತ್ತದೆ.

    ಬೆಳಗ್ಗೆ 10 ಗಂಟೆಯ ಟ್ರೆಂಡ್‌ ಪ್ರಕಾರ ಬಿಜೆಪಿ 270, ಎಸ್‌ಪಿ 106, ಬಿಸ್‌ಪಿ 3, ಕಾಂಗ್ರೆಸ್‌ 4, ಇತರರು 5 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ. ಇದನ್ನೂ ಓದಿ: ಇಂದು ಪಂಚರಾಜ್ಯ ಚುನಾವಣಾ ಫಲಿತಾಂಶ- ಯುಪಿಯಲ್ಲಿ ಯಾರಿಗೆ ಒಲಿಯುತ್ತೆ ಅದೃಷ್ಟ?

    ಒಟ್ಟು 403 ಕ್ಷೇತ್ರಗಳ ಪೈಕಿ ಬಹುಮತಕ್ಕೆ 203 ಸ್ಥಾನಗಳ ಅಗತ್ಯವಿದೆ. 2017ರ ಚುನಾವಣೆಯಲ್ಲಿ ಬಿಜೆಪಿ 312, ಬಿಎಸ್‌ಪಿ 19, ಎಸ್‌ಪಿ+ಕಾಂಗ್ರೆಸ್ 54, ಇತರರು 18 ಸ್ಥಾನವನ್ನು ಗೆದ್ದಿದ್ದರು.

  • ಹತ್ರಾಸ್‍ನಲ್ಲಿ 4 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ

    ಹತ್ರಾಸ್‍ನಲ್ಲಿ 4 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ

    – ಉತ್ತರ ಪ್ರದೇಶದಲ್ಲಿ ನಿಲ್ಲದ ಅಪರಾಧ ಪ್ರಕರಣಗಳು

    ಲಕ್ನೋ: 19 ವರ್ಷದ ಯುವತಿಯ ಗ್ಯಾಂಗ್‍ರೇಪ್ ಪ್ರಕರಣ ಮಾಸುವ ಮುನ್ನವೇ ಹತ್ರಾಸ್ ನಲ್ಲಿ ಮತ್ತೊಂದು ಅತ್ಯಾಚಾರ ನಡೆದಿದೆ. ಅದು ನಾಲ್ಕು ವರ್ಷದ ಪುಟ್ಟ ಕಂದಮ್ಮನ ಮೇಲೆ ಅತ್ಯಾಚಾರ ನಡೆದಿರುವ ವಿಷಯ ತಿಳಿಯುತ್ತಿದ್ದಂತೆ ಸಾರ್ವಜನಿಕರು ಸರ್ಕಾರ ಮತ್ತು ಪೊಲೀಸರ ವಿರುದ್ಧ ಆಕ್ರೋಶ ಹೊರ ಹಾಕುತ್ತಿದ್ದಾರೆ.

    ಹತ್ರಾಸ್ ನ ಸಸ್ನಿ ಎಂಬಲ್ಲಿ ಸಂಬಂಧಿಕನೇ ಮಗುವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದ ಎಂದು ಸರ್ಕಲ್ ಆಫಿಸರ್ ರುಚಿ ಗುಪ್ತಾ ಸುದ್ದಿ ಸಂಸ್ಥೆಗೆ ಹೇಳಿದ್ದಾರೆ.

    ಸೆಪ್ಟೆಂಬರ್ 14ರಂದು ತನ್ನ ತಾಯಿಯೊಂದಿಗೆ ಹುಲ್ಲು ತರಲೆಂದು ಯುವತಿ ಜಮೀನಿಗೆ ತೆರಳಿದ್ದಳು. ಈ ವೇಳೆ ನಾಲ್ವರು ಕಾಮಪಿಶಾಚಿಗಳು ಆಕೆಯನ್ನು ಎಳೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದರು. ಅಲ್ಲದೇ ಆಕೆಯ ನಾಲಿಗೆಯನ್ನು ಕತ್ತರಿಸಿ, ಬೆನ್ನು ಮೂಳೆ, ಕತ್ತಿಗೆ ಗಂಭೀರವಾಗಿ ಹಾನಿ ಮಾಡಿದ್ದರು. ಕಾಮುಕರ ಅಟ್ಟಹಾಸಕ್ಕೆ ಗಂಭೀರವಾಗಿ ಗಾಯಗೊಂಡಿದ್ದ ಯುವತಿಯನ್ನು ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಪಡೆಯುತ್ತಿದ್ದಂತೆಯೇ ಘಟನೆ ನಡೆದು ಎರಡು ವಾರಗಳ ನಂತರ ಸೆ.29ರಂದು ಮೃತಪಟ್ಟಿದ್ದಳು. ಇದನ್ನೂ ಓದಿಹತ್ರಾಸ್ ಯುವತಿ ಮೇಲೆ ಅತ್ಯಾಚಾರವಾಗಿಲ್ಲ – ಶಾಕಿಂಗ್ ಹೇಳಿಕೆ ನೀಡಿದ ಐಜಿ

    ಯುವತಿ ಸಾವನ್ನಪ್ಪಿದ ವಿಚಾರ ಸುದ್ದಿಯಾಗುತ್ತಿದ್ದಂತೆಯೇ ದೇಶದೆಲ್ಲೆಡೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಆರೋಪಿಗಳನ್ನು ನೇಣಿಗೇರಿಸುವಂತೆ ದೇಶದ ಮೂಲೆಮೂಲೆಯಿಂದಲೂ ಕೂಗು ಕೇಳಿ ಬಂದಿದೆ. ಈ ಮಧ್ಯೆ ಉತ್ತರಪ್ರದೇಶದ ಪೊಲೀಸರು ಯುವತಿಯ ಕುಟುಂಬಕ್ಕೆ ತಿಳಿಯದಂತೆ ಮೃತದೇಹವನ್ನು ಅಸ್ಪತ್ರೆಯಿಂದ ಶಿಫ್ಟ್ ಮಾಡಿದ್ದಾರೆ ಎಂದು ಸಹೋದರ ಗಂಭೀರವಾಗಿ ಆರೋಪ ಮಾಡಿದ್ದರು. ಯುವತಿಯ ತಂದೆ ಹಾಗೂ ಸಹೋದರ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ನಮಗೆ ಗೊತ್ತಾಗಂದೆ ಪೊಲೀಸರು ಕಪ್ಪು ಬಣ್ಣದ ಸ್ಕಾರ್ಪಿಯೋ ಕಾರಿನಲ್ಲಿ ಮೃತದೇಹವನ್ನು ಸಾಗಿಸಿದ್ದಾರೆ ಎಂದು ಕೂಡ ಸಹೋದರ ದೂರಿದ್ದರು. ಇದನ್ನೂ ಓದಿ: ಕೊನೆ ಬಾರಿ ಮಗಳ ಮುಖ ತೋರಿಸಲಿಲ್ಲ: ಹತ್ರಾಸ್ ಸಂತ್ರಸ್ತೆ ತಾಯಿ

    ಉತ್ತರ ಪ್ರದೇಶ ಸರ್ಕಾರ ಪ್ರಕರಣವನ್ನು ಎಸ್‍ಐಟಿ ನೀಡಿತ್ತು. ದೇಶದಾದ್ಯಂತ ಆಕ್ರೋಶ ವ್ಯಕ್ತವಾದ ಹಿನ್ನೆಲೆ ಸಿಎಂ ಯೋಗಿ ಆದಿತ್ಯನಾಥ್ ಸಿಬಿಐಗೆ ನೀಡಿದ್ದರು. ಮಂಗಳವಾರ ಹತ್ರಾಸ್ ಸಂತ್ರಸ್ತೆಯ ಅಂತ್ಯಕ್ರಿಯೆ ಮಾಡಿದ್ದ ಸ್ಥಳಕ್ಕೆ ಸಿಬಿಐ ತಂಡ ಭೇಟಿ ನೀಡಿತ್ತು. ಹಾಗೆ ಈ ಮೊದಲು ತನಿಖೆ ನಡೆಸಿದ ಅಧಿಕಾರಿಗಳಿಂದಲೂ ಮಾಹಿತಿ ಪಡೆದುಕೊಂಡಿದೆ.

  • ಹತ್ರಾಸ್ ಸಂತ್ರಸ್ತೆ, ಆರೋಪಿ ಮಧ್ಯೆ ಇತ್ತು ನಿರಂತರ ಸಂಪರ್ಕ – 104 ಕರೆಯ ರಹಸ್ಯ ಬಿಚ್ಚಿಟ್ಟ ಪೊಲೀಸರು

    ಹತ್ರಾಸ್ ಸಂತ್ರಸ್ತೆ, ಆರೋಪಿ ಮಧ್ಯೆ ಇತ್ತು ನಿರಂತರ ಸಂಪರ್ಕ – 104 ಕರೆಯ ರಹಸ್ಯ ಬಿಚ್ಚಿಟ್ಟ ಪೊಲೀಸರು

    – 62 ಔಟ್ ಗೋಯಿಂಗ್, 42 ಇನ್ ಕಮಿಂಗ್ ಕಾಲ್

    ಲಕ್ನೋ: ಹತ್ರಾಸ್ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಪ್ರಕರಣದ ಪ್ರಮುಖ ಆರೋಪಿ ಜೊತೆ 19 ವರ್ಷದ ಸಂತ್ರಸ್ತೆ ನಿರಂತರ ಸಂಪರ್ಕದಲ್ಲಿದ್ದಳು ಎಂದು ಉತ್ತರಪ್ರದೇಶದ ಪೊಲೀಸರು ತಿಳಿಸಿದ್ದಾರೆ.

    ಸೆಪ್ಟೆಂಬರ್ ನಲ್ಲಿ ನಡೆದಿದ್ದ ಯುವತಿಯ ಸಾಮೂಹಿಕ ಅತ್ಯಾಚಾರ ಹಾಗೂ ಮಾರಣಾಂತಿಕ ಹಲ್ಲೆಯ ಪ್ರಕರಣದಲ್ಲಿ ಅದೇ ಗ್ರಾಮದ ಸಂದೀಪ್ ಸಿಂಗ್ ಪ್ರಮುಖ ಆರೋಪಿಯಾಗಿದ್ದಾನೆ. ಈತನ ಜೊತೆ ಸಂತ್ರಸ್ತೆ ನಿರಂತರ ಸಂಪರ್ಕದಲ್ಲಿದ್ದ ಬಗ್ಗೆ ಪೊಲೀಸರಿಗೆ ತನಿಖೆಯ ವೇಳೆ ಬೆಳಕಿಗೆ ಬಂದಿದೆ.  ಇದನ್ನೂ ಓದಿ: ಗ್ಯಾಂಗ್‍ರೇಪ್ ಪ್ರಕರಣ – ಸಂತ್ರಸ್ತೆ ಕುಟುಂಬ ಹೊರಗಿಟ್ಟು 2.30ಕ್ಕೆ ಪೊಲೀಸರಿಂದ್ಲೇ ಅಂತ್ಯಕ್ರಿಯೆ!

    ಸಂತ್ರಸ್ತೆಯ ಕುಟುಂಬ ಮತ್ತು ಆರೋಪಿ ಸಂದೀಪ್ ಫೋನ್ ಟ್ರ್ಯಾಕ್ ಮಾಡಿರುವ ಪೊಲೀಸರು, ಆರೋಪಿಯು ಯುವತಿಯೊಂದಿಗೆ ನಿರಂತರವಾಗಿ ದೂರವಾಣಿ ಸಂಪರ್ಕದಲ್ಲಿದ್ದ. ಸಂತ್ರಸ್ತೆಯ ಸಹೋದರನ ಹೆಸರಿನಲ್ಲಿ ಸಂದೀಪ್ ಗೆ ಒಂದೇ ಫೋನ್ ನಂಬರಿನಿಂದ ನಿಯಮಿತವಾಗಿ ಕರೆಗಳು ಬರುತ್ತಿದ್ದವು. ಈ ದೂರವಾಣಿ ಸಂಭಾಷಣೆಗಳು 2019 ಅಕ್ಟೋಬರ್ 13ರಿಂದ ಪ್ರಾರಂಭವಾಗಿವೆ. ಸಂತ್ರಸ್ತೆ ನೆಲೆಸಿದ್ದ ಹಳ್ಳಿ ಬೂಲ್ ಗಾಹಿಯಿಂದ ಕೇವಲ 2 ಕಿ.ಮೀ ದೂರದಲ್ಲಿರುವ ಚಂದಪಾ ಪ್ರದೇಶದಲ್ಲಿರುವ ಸೆಲ್ ಟವರ್ ಗಳಿಂದ ಹೆಚ್ಚಿನ ಕರೆಗಳನ್ನು ಮಾಡಲಾಗಿದೆ ಎಂದು ಪೊಲೀಸರು ವಿವರಿಸಿದ್ದಾರೆ.

    ಎರಡು ಫೋನ್ ನಂಬರ್ ಗಳ ನಡುವೆ 62 ಔಟ್ ಗೋಯಿಂಗ್ ಮತ್ತು 42 ಇನ್ ಕಮಿಂಗ್ ಕಾಲ್ ಗಳು ಬಂದಿದ್ದು, ಒಟ್ಟು 104 ಬಾರಿ ಸಂಪರ್ಕಸಿರುವುದು ಬಯಲಾಗಿದೆ. ಈ ಹಿನ್ನೆಲೆಯಲ್ಲಿ ಸಂತ್ರಸ್ತೆ ಹಾಗೂ ಆರೋಪಿ ನಡುವೆ ನಿರಂತರ ಸಂಪರ್ಕ ಇತ್ತು ಎಂಬುದನ್ನು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಕೊನೆ ಬಾರಿ ಮಗಳ ಮುಖ ತೋರಿಸಲಿಲ್ಲ: ಹತ್ರಾಸ್ ಸಂತ್ರಸ್ತೆ ತಾಯಿ

    ಸೆಪ್ಟೆಂಬರ್ 14ರಂದು ತನ್ನ ತಾಯಿಯೊಂದಿಗೆ ಹುಲ್ಲು ತರಲೆಂದು ಯುವತಿ ಜಮೀನಿಗೆ ತೆರಳಿದ್ದಳು. ಈ ವೇಳೆ ನಾಲ್ವರು ಕಾಮಪಿಶಾಚಿಗಳು ಆಕೆಯನ್ನು ಎಳೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದರು. ಅಲ್ಲದೇ ಆಕೆಯ ನಾಲಿಗೆಯನ್ನು ಕತ್ತರಿಸಿ, ಬೆನ್ನು ಮೂಳೆ, ಕತ್ತಿಗೆ ಗಂಭೀರವಾಗಿ ಹಾನಿ ಮಾಡಿದ್ದರು. ಕಾಮುಕರ ಅಟ್ಟಹಾಸಕ್ಕೆ ಗಂಭೀರವಾಗಿ ಗಾಯಗೊಂಡಿದ್ದ ಯುವತಿಯನ್ನು ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಪಡೆಯುತ್ತಿದ್ದಂತೆಯೇ ಘಟನೆ ನಡೆದು ಎರಡು ವಾರಗಳ ನಂತರ ಸೆ.29ರಂದು ಮೃತಪಟ್ಟಿದ್ದಳು.

    ಯುವತಿ ಸಾವನ್ನಪ್ಪಿದ ವಿಚಾರ ಸುದ್ದಿಯಾಗುತ್ತಿದ್ದಂತೆಯೇ ದೇಶದೆಲ್ಲೆಡೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಆರೋಪಿಗಳನ್ನು ನೇಣಿಗೇರಿಸುವಂತೆ ದೇಶದ ಮೂಲೆಮೂಲೆಯಿಂದಲೂ ಕೂಗು ಕೇಳಿ ಬಂದಿದೆ. ಈ ಮಧ್ಯೆ ಉತ್ತರಪ್ರದೇಶದ ಪೊಲೀಸರು ಯುವತಿಯ ಕುಟುಂಬಕ್ಕೆ ತಿಳಿಯದಂತೆ ಮೃತದೇಹವನ್ನು ಅಸ್ಪತ್ರೆಯಿಂದ ಶಿಫ್ಟ್ ಮಾಡಿದ್ದಾರೆ ಎಂದು ಸಹೋದರ ಗಂಭೀರವಾಗಿ ಆರೋಪ ಮಾಡಿದ್ದರು. ಯುವತಿಯ ತಂದೆ ಹಾಗೂ ಸಹೋದರ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ನಮಗೆ ಗೊತ್ತಾಗಂದೆ ಪೊಲೀಸರು ಕಪ್ಪು ಬಣ್ಣದ ಸ್ಕಾರ್ಪಿಯೋ ಕಾರಿನಲ್ಲಿ ಮೃತದೇಹವನ್ನು ಸಾಗಿಸಿದ್ದಾರೆ ಎಂದು ಕೂಡ ಸಹೋದರ ದೂರಿದ್ದರು. ಇದನ್ನೂ ಓದಿಹತ್ರಾಸ್ ಯುವತಿ ಮೇಲೆ ಅತ್ಯಾಚಾರವಾಗಿಲ್ಲ – ಶಾಕಿಂಗ್ ಹೇಳಿಕೆ ನೀಡಿದ ಐಜಿ

    ಇತ್ತ ಉತ್ತರಪ್ರದೇಶದ ಹತ್ರಾಸ್ ಗ್ರಾಮದಲ್ಲಿ ಯುವತಿಯ ಮೇಲೆ ಕಾಮುಕರ ಅಟ್ಟಹಾಸ ಮೆರೆದು ಸಾವಿಗೆ ಕಾರಣವಾಗಿರುವ ಕುರಿತು ದೇಶಾದ್ಯಂತ ಆಕ್ರೋಶ ಹೊರಹಾಕುತ್ತಿರುವ ಬೆನ್ನಲ್ಲೇ, ಯುವತಿ ಮೇಲೆ ಅತ್ಯಾಚಾರ ನಡೆದಿಲ್ಲ ಎಂದು ಆಲಿಘಢ ಐಜಿ ಪಿಯೂಷ್ ಮೊರ್ಡಿಯಾ ಶಾಕಿಂಗ್ ಹೇಳಿಕೆಯೊಂದನ್ನು ನೀಡಿದ್ದರು. ನಾಲ್ವರು ವ್ಯಕ್ತಿಗಳು ಕ್ರೂರವಾಗಿ ನಡೆದುಕೊಂಡಿದ್ದಾರೆ ಎಂದು ಆರೋಪಿಸಲ್ಪಟ್ಟ ಹತ್ರಾಸ್ ಯುವತಿಯ ಮೇಲೆ ಅತ್ಯಾಚಾರ ನಡೆದಿಲ್ಲ. ಸಾಮೂಹಿಕ ಅತ್ಯಾಚಾರವಾಗಿದೆ ಎಂಬುದರ ಬಗ್ಗೆ ವೈದ್ಯಕೀಯ ಪರೀಕ್ಷೆಯಲ್ಲಿ ಉಲ್ಲೇಖವಾಗಿಲ್ಲ ಎಂದು ತಿಳಿಸಿದ್ದರು.

  • ಯೋಗಿಯ ಯುಪಿಯಲ್ಲಿ ದಲಿತರು, ಅಲ್ಪಸಂಖ್ಯಾತರಿಗೆ ಹಿಂಸೆ: ಮಮತಾ ಬ್ಯಾನರ್ಜಿ

    ಯೋಗಿಯ ಯುಪಿಯಲ್ಲಿ ದಲಿತರು, ಅಲ್ಪಸಂಖ್ಯಾತರಿಗೆ ಹಿಂಸೆ: ಮಮತಾ ಬ್ಯಾನರ್ಜಿ

    – ಯುಪಿ ಪ್ರಕರಣ ಸೀತೆಯ ಅಗ್ನಿ ಪರೀಕ್ಷೆಯಂತಾಗಿದೆ

    ಕೋಲ್ಕತ್ತಾ: ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗುತ್ತಿದ್ದು, ಇದೀಗ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಿಡಿಕಾರಿದ್ದಾರೆ.

    ಈ ಕುರಿತು ಪಶ್ಚಿಮ ಬಂಗಾಳದ ಜಲ್ಪೈಗುರಿಯಲ್ಲಿ ಮಾತನಾಡಿರುವ ಅವರು, ಯುಪಿಯಲ್ಲಿ ಅತ್ಯಾಚಾರ ಸಂತ್ರಸ್ತೆಯ ಶವವನ್ನು ರಾತ್ರೋರಾತ್ರಿ ಸುಟ್ಟಿರುವುದು ಸೀತೆಯ ಅಗ್ನಿ ಪರೀಕ್ಷೆಯಂತಾಗಿದೆ. ಸೀತೆ ಅಗ್ನಿ ಪರೀಕ್ಷೆ ಎದುರಿಸಿದಂತೆ ಉತ್ತರ ಪ್ರದೇಶದಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿರುವ ಸಂತ್ರಸ್ತೆಯ ದೇಹವನ್ನು ಮಧ್ಯರಾತ್ರಿ ಸುಡುವ ಮೂಲಕ ಅಗ್ನಿ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಹರಿಹಾಯ್ದಿದ್ದಾರೆ.

    ಉತ್ತರ ಪ್ರದೇಶದ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಅವರು, ಸಂತ್ರಸ್ತೆ ಕೇವಲ ಅತ್ಯಾಚಾರಕ್ಕೆ ಒಳಗಾಗಿಲ್ಲ. ಬಳಿಕ ಅವಳ ದೇಹವನ್ನು ಸುಡಲಾಗಿದೆ. ಅಪರಾಧ ನಡೆದಿದ್ದರೆ ಪೊಲೀಸರು ತನಿಖೆ ನಡೆಸಬೇಕು. ಆದರೆ ಇದ್ಯಾವ ರೀತಿಯ ನಿಯಮ. ಪೊಲೀಸರು ಪ್ರಕರಣವನ್ನು ನಿರ್ವಹಿಸಿದ ರೀತಿಯಿಂದಲೇ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಯುವತಿಯ ತಾಯಿಗೂ ಸಹ ಬೆದರಿಕೆ ಹಾಕಲಾಗಿದ್ದು, ಮಗಳ ಚಿತೆಯಲ್ಲಿಯೇ ಅವರನ್ನೂ ಸುಡುವುದಾಗಿ ಹೆದರಿಸಿದ್ದಾರೆ ಎಂದು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಟ್ವೀಟ್ ಮಾಡುವ ಮೂಲಕವೂ ಅವರು ಆಕ್ರೋಶ ವ್ಯಕ್ತಪಡಿಸಿದ್ದು, ಇದೊಂದು ಅಸಹ್ಯಕರ ಘಟನೆಯಾಗಿದ್ದು, ಕುಟುಂಬಕ್ಕೆ ನಾನು ಸಂತಾಪ ಸೂಚಿಸುತ್ತೇನೆ. ಕುಟುಂಬಸ್ಥರನ್ನು ಹೊರಗಿಟ್ಟು ಪೊಲೀಸರು ಒತ್ತಾಯಪೂರ್ವಕವಾಗಿ ಅಂತ್ಯಸಂಸ್ಕಾರ ನೆರವೇರಿಸಿರುವುದು ತೀವ್ರ ನಾಚಿಕೆಗೇಡಿನ ಸಂಗತಿಯಾಗಿದೆ.

    ಸೆಪ್ಟೆಂಬರ್ 14ರಂದು 19 ವರ್ಷದ ದಲಿತ ಯುವತಿಯ ಮೇಲೆ ಮೇಲ್ಜಾತಿಯ ನಾಲ್ವರು ಪುರುಷರು ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದರು. ನಂತರ ಯುವತಿಯನ್ನು ಚಿಕಿತ್ಸೆಗಾಗಿ ಸಫ್ದರ್‍ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಯುವತಿ ಸಾವನ್ನಪ್ಪಿದ್ದಳು. ಬಳಿಕ ಪೊಲೀಸರು ಮೃತದೇಹವನ್ನು ಕುಟುಂಬಸ್ಥರಿಗೆ ನೀಡದೆ ರಾತ್ರೋ ರಾತ್ರಿ ಹತ್ರಾಸ್ ಗ್ರಾಮದಲ್ಲೇ ಅಂತ್ಯಸಂಸ್ಕಾರ ನೆರವೇರಿಸಿದ್ದರು. ಕುಟುಂಬಸ್ತರು ಎಷ್ಟೇ ಮನವಿ ಮಾಡಿದರೂ ಸಂತ್ಯ ಸಂಸ್ಕಾರ ಮಾಡಲು ಅನುಮತಿ ನೀಡಿರಲಿಲ್ಲ. ಈ ಪ್ರಕರಣದ ಕುರಿತು ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಹೀಗಾಗಿ ಮಮತಾ ಬ್ಯಾನರ್ಜಿ ಸಹ ಆಕ್ರೋಶ ವ್ಯಕ್ತಪಡಿಸಿದ್ದಾರೆ.