ಬೆಂಗಳೂರು: ಸಚಿವ ರಾಜಣ್ಣ (KN Rajanna) ಹನಿಟ್ರ‍್ಯಾಪ್ ಕೇಸ್ (Honeytrap Case) ಬಗ್ಗೆ ನನಗೇನು ಗೊತ್ತಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ತಿಳಿಸಿದ್ದಾರೆ.
ಸಚಿವ ರಾಜಣ್ಣ ಹನಿಟ್ರ‍್ಯಾಪ್ ಕೇಸ್ ನಲ್ಲಿ ಸಾಕ್ಷಿ ಆಧಾರ ಕೊರತೆಯಿಂದ ಕೇಸ್ ಕ್ಲೋಸ್ ಆಗಿರೋ ವಿಚಾರಕ್ಕೆ ಅವರು ಪ್ರತಿಕ್ರಿಯೆ ನೀಡಿದರು.
ರಾಜಣ್ಣ ಕೇಸ್ ಬಗ್ಗೆ ನನಗೇನು ಗೊತ್ತಿಲ್ಲ. ನಿಮ್ಮ ಬಾಯಿಂದನೇ ಇವೆಲ್ಲ ಕೇಳುತ್ತಿರೋದು. ನನಗೂ ಆ ಕೇಸ್‌ಗೂ ಏನು ಸಂಬಂಧವಿಲ್ಲ. ಯಾರು ದೂರು ಕೊಟ್ಟರು ಗೊತ್ತಿಲ್ಲ. ತನಿಖೆ ಆಗಿದ್ದು ನನಗೆ ಗೊತ್ತಿಲ್ಲ. ನನಗೇನು ಅದರ ಬಗ್ಗೆ ಗೊತ್ತಿಲ್ಲ ಎಂದರು.
ಬೆಂಗಳೂರು: ಸಚಿವ ಕೆ.ಎನ್ ರಾಜಣ್ಣ ಪುತ್ರನೂ ಆಗಿರುವ ಎಂಎಲ್‌ಸಿ ರಾಜೇಂದ್ರ (Rajendra Rajanna) ಹತ್ಯೆಗೆ ಸುಪಾರಿ ನೀಡಿದ್ದ ಪ್ರಕರಣದ ತನಿಖೆಯನ್ನು ಪೊಲೀಸರು (Tumakuru Police) ಚುರುಕುಗೊಳಿಸಿದ್ದಾರೆ. ಈ ನಡುವೆಯೇ ಸುಪಾರಿಗೆ ಸಂಚು ರೂಪಿಸಿದ್ದ ಸ್ಫೋಟಕ ಆಡಿಯೋ ʻಪಬ್ಲಿಕ್ ಟಿವಿʼಗೆ ಲಭ್ಯವಾಗಿದೆ.
ರಾಜೇಂದ್ರ ರಾಜಣ್ಣ ಅವರು, ತುಮಕೂರು ಎಸ್ಪಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಿ ಪೆನ್‌ಡ್ರೈವ್‌ನಲ್ಲಿ ನೀಡಿದ್ದ ಆಡಿಯೋ ಈಗ ʻಪಬ್ಲಿಕ್ ಟಿವಿʼಗೆ ಲಭ್ಯವಾಗಿದೆ. ಈ ಆಡಿಯೋದಲ್ಲಿ ಸುಪಾರಿ ಸಂಚಿನ ಇಂಚಿಂಚೂ ಮಾಹಿತಿ ಬಯಲಾಗಿದೆ. ತನ್ನ ಹತ್ಯೆಗೆ ಸುಪಾರಿ ನೀಡಿದ್ದ ವಿಚಾರ ರಾಜೇಂದ್ರ ರಾಜಣ್ಣ ಅವರಿಗೆ ತಿಳಿದಿದ್ದು ಸಹ ಇದೇ ಆಡಿಯೋದಿಂದ ಅನ್ನೋದು ಗೊತ್ತಾಗಿದೆ. ಇದನ್ನೂ ಓದಿ: ಸಚಿವ ರಾಜಣ್ಣ ಪುತ್ರನ ಹತ್ಯೆಗೆ ಯತ್ನ ಕೇಸ್ – 18 ನಿಮಿಷಗಳ ಸುಪಾರಿ ಆಡಿಯೋ FSLಗೆ
ಇದೇ ಆಡಿಯೋ ಆಧರಿಸಿ ರಾಜೇಂದ್ರ ಅವರು ದೂರು ದಾಖಲಿಸಿದ್ದಾರೆ. ಕಳೆದ ಡಿಸೆಂಬರ್‌ನಲ್ಲಿ ಪುಷ್ಪಾ ಹಾಗೂ ರಾಕಿ ಎನ್ನುವವರ ನಡುವೆ ಸಂಭಾಷಣೆ ನಡೆದಿತ್ತು. ಈ ಆಡಿಯೋನಲ್ಲಿ ಪ್ರಕರಣದ ಎ1 ಆರೋಪಿ ಸೋಮನ ಪ್ಲ್ಯಾನ್ ಬಗ್ಗೆ ಪುಷ್ಪಾ ಎನ್ನುವ ಮಹಿಳೆ ಇಂಚಿಂಚೂ ಮಾಹಿತಿಯನ್ನ ಬಿಚ್ಚಿಟ್ಟಿದ್ದಾಳೆ. ಇದನ್ನೂ ಓದಿ: ನನ್ನ ಕೊಲೆಗೆ 70 ಲಕ್ಷ ಸುಪಾರಿ ಕೊಡಲಾಗಿದೆ – ತುಮಕೂರು ಎಸ್ಪಿಗೆ ಸಚಿವ ರಾಜಣ್ಣ ಪುತ್ರ ದೂರು
ಆರೋಪಿ ಸೋಮ ರಾಜೇಂದ್ರರನ್ನ ಹತ್ಯೆ ಮಾಡಲು ಸುಪಾರಿ ಪಡೆದಿರುವುದಾಗಿ ಪುಷ್ಪಾಳ ಬಳಿ ಹೇಳಿಕೊಂಡಿದ್ದಾನೆ. ಆ ಬಳಿಕವೇ ಪುಷ್ಪಾ ಸುಪಾರಿ ಬಗ್ಗೆ ಹೆಚ್ಚಿನ ಮಾಹಿತಿ ಕಲೆಹಾಕಿದ್ದಳು. ಸೋಮನ ಜೊತೆಗಿದ್ದುಕೊಂಡೇ ಕೊಲೆ ಸಂಚಿನ ಮಾಹಿತಿ ಕಲೆಹಾಕಿದ್ದಳು, ಬಳಿಕ ಈ ವಿಚಾರವನ್ನ ರಾಜೇಂದ್ರ ಅವರಿಗೆ ತಿಳಿಸಲು ಪುಷ್ಪಾ ಮುಂದಾಗಿದ್ದಾಳೆ. ರಾಜೇಂದ್ರ ಅವರಿಗೆ ವಿಷಯ ತಿಳಿಸಲು ರಾಕಿ ಎನ್ನುವ ಹುಡುಗನ್ನ ಬಳಸಿಕೊಂಡಿದ್ದಾಳೆ. ಅದಕ್ಕಾಗಿ ಕೊಲೆ ಸಂಚಿನ ಬಗ್ಗೆ ಪುಷ್ಪ ಹೇಳಿದ್ದನ್ನ ರಾಕಿ ತನ್ನ ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದ. ಬಳಿಕ ರಾಜೇಂದ್ರ ಅವರಿಗೆ ಈ ಆಡಿಯೋವನ್ನ ತಲುಪಸಿಲಾಗಿತ್ತು. ಆಡಿಯೋ ಕೇಳಿದ ಎಂಎಲ್‌ಸಿ ಶಾಕ್ ಆಗಿದರು, ಕೂಡಲೇ ಅಲರ್ಟ್ ಆದರು. ಬಳಿಕ ತುಮಕೂರು ಎಸ್ಪಿ ಬಳಿ ದೂರು ದಾಖಲಿಸಿದ್ದಾರೆ.
ಸ್ಫೋಟಕ ಮಾಹಿತಿ ನೀಡಿದ ಪುಷ್ಪಾ:
ಎಂಎಲ್‌ಸಿ ರಾಜೇಂದ್ರ ಹತ್ಯೆಗೆ ಸುಪಾರಿ ನೀಡಿದ ವಿಚಾರದ ಬಗ್ಗೆ ಆಡಿಯೋನಲ್ಲಿ ಕೇಳಿಬಂದಿರುವ ಪುಷ್ಪಾ ಎಂಬ ಮಹಿಳೆ ಸ್ಪೋಟಕ ಮಾಹಿತಿ ಹಂಚಿಕೊಂಡಿರುವುದು ಬಯಲಾಗಿದೆ. ಕಳೆದ ನವೆಂಬರ್‌ನಲ್ಲಿ ರಾಜೇಂದ್ರ ಅವರ ಮಗಳ ಬರ್ತ್‌ಡೇ ಡೆಕೋರೇಷನ್‌ಗೆ ಜೈಪುರದ ಇಬ್ಬರು ಹುಡುಗರು ಬಂದಿದ್ದರು. ಆ ಇಬ್ಬರನ್ನೂ ಸೋಮ ಕಳುಹಿಸಿದ್ದ, ಆಗಲೇ ಹತ್ಯೆಗೆ ಯತ್ನ ನಡೆದಿತ್ತು ಅಂತ ಆಡಿಯೋನಲ್ಲಿ ಪುಷ್ಪಾ ಮಾಹಿತಿ ನೀಡಿದ್ದಾಳೆ. ಅಲ್ಲದೇ ಸೋಮನಿಗೆ 5 ಲಕ್ಷ ಹಣ ಬಂದಿರೋದು ಸತ್ಯ ಸತ್ಯ ಸತ್ಯ. ಪೊಲೀಸರು ಕರೆದುಕೊಂಡು ಹೋಗಿ ವಿಚಾರಣೆ ಮಾಡಿದ್ರೆ ಎಲ್ಲಾ ಗೊತ್ತಾಗುತ್ತೆ. ರಾಜೆಂದ್ರ ಅವ್ರ ಮುಂದೆ ನಾನೇ ಹೇಳ್ತೀನಿ, ನನ್ನ ಕರೆದುಕೊಂಡು ಹೋಗು ಅಂತ ರಾಕಿ ಎನ್ನುವವನೊಂದಿಗೆ ಪುಷ್ಪಾ ಹೇಳಿಕೊಂಡಿದ್ದಾಳೆ. ಜೊತೆಗೆ ಜೈಪುರದ ಮತ್ತೋರ್ವ ರೌಡಿಶೀಟರ್ ಪ್ರಸಿಯನ್ನೂ ಮರ್ಡರ್ ಮಾಡೋದಾಗಿ ಸೋಮ ಹೇಳಿದ್ದಾನೆ. ಅದಕ್ಕಾಗಿ ಬೆಂಗಳೂರಿನ ಕಲಾಸಿಪಾಳ್ಯದಿಂದ ಇಬ್ಬರು ತಮಿಳು ಹುಡುಗರನ್ನ ಸೋಮ ಕರೆಸಿಕೊಳ್ತಿದ್ದಾನೆ. ಜೈಲಿನಲ್ಲಿರುವ ಸ್ಟೀಫನ್ ಗುಂಡನನ್ನ ಪೆರೋಲ್ ಮೇಲೆ ಕರೆದುಕೊಂಡು ಬರಲು ಸೋಮ ಪ್ಲಾನ್ ಮಾಡಿದ್ದಾನೆ. ಅವನನ್ನ ಕರೆಸಿ ನೆಟ್‌ವರ್ಕ್ ಇಲ್ದೇ ಇರೋ ಜಾಗದಲ್ಲಿ ಇಡೋಕೆ ಮನೆ ಮಾಡ್ತಿದ್ದಾನೆ ಈ ಬಗ್ಗೆಯೂ ಆಡಿಯೋನಲ್ಲಿ ಪುಷ್ಪಾ ಎನ್ನುವ ಮಹಿಳೆ ಮಾಹಿತಿ ನೀಡಿದ್ದಾಳೆ. ಇದನ್ನೂ ಓದಿ: ಹನಿಟ್ರ್ಯಾಪ್ ಮಾಡಲು ಬಂದವರಿಗೆ ಕಪಾಳಕ್ಕೆ ಹೊಡೆದಿದ್ದು ನಿಜ – ವಿಷ ಕನ್ಯೆಯರ ರಹಸ್ಯ ಹೇಳಿದ ರಾಜಣ್ಣ
ಆಡಿಯೋ ಸಂಭಾಷಣೆಯಲ್ಲಿ ರಹಸ್ಯ ಸ್ಫೋಟ
ಪುಷ್ಪಾ: ಅಣ್ಣ ಏನಂತು..?
ರಾಕಿ: ಏನ್ ವಿಷಯ ಹೇಳಬೇಕು.. ಎತ್ತಾ ಅಂತಾ..
ಪುಷ್ಪಾ: ಸೋಮ ಈ ರೀತಿ ಎಲ್ಲಾ ಮಾಡ್ತಿದ್ದಾನೆ ಸಾರ್.. ಕಿವಿಗೆ ಬಿದ್ದಂತೆ.. ಆ ಹುಡುಗಿನೇ ಬಂದು ಹೇಳ್ತಾಳೆ ಸರ್.. ನಂಬಿಕೆ ಇಲ್ಲಾ ಅಂದ್ರೆ, ಅವಳ ಕಿವಿಗೆ ಬಿದ್ದಿರೋದನ್ನು ಹೇಳ್ತಾಳೆ ಸರ್ ಅನ್ನಿ.. ಸುಳ್ಳು ಪಳ್ಳು ಹೇಳಲ್ಲ… ಅವಳು ಇರೋದನ್ನು ಹೇಳ್ತಾಳೆ.. ಚಿಕ್ಕವರಿಂದ ನೋಡಿದ್ದೀವಿ ಹೇಳಿ ಅಂತಾ ಹೇಳಿ… ನಮಗೇನು ಆಗಬೇಕಿಲ್ಲ… ನಮಗೇನು ಆಸ್ತಿನೂ ಇದೆ… ಆ ವಯ್ಯಗೆ ಬಂದು ಹೇಳಿದ್ರೆ, ನಮಗೇನು ಕೊಡಲ್ಲ.. ಒಟ್ನಲ್ಲಿ ಈ ತರ ಮಾತನಾಡ್ಕೊಂಡಿರೋದು ಸತ್ಯ… ಅವನ ಮೇಲೆ ಒಂದು ಕಣ್ಣಿಡಿ ಸರ್.. ಪೊಲೀಸ್ ಅವರಿಗೆ ಹೇಳಿ.. ಅದರ ಮೇಲೆ ಅವನಿಷ್ಟ..
ರಾಕಿ: ಅಡ್ವಾನ್ಸ್ ಬಂದಿರೋದು ನಿಜಾನಾ..? ಪುಷ್ಪಾ: ಹೌದು ನಮ್ಮ ಅಮ್ಮನ ಮೇಲೆ ಆಣೆ ಬಂದಿದೆ.. 5 ಲಕ್ಷ ಎಲ್ಲಿಂದ ಬಂತು ಅಂತಾ ತನಿಖೆ ಆಗಲಿ..
ಪುಷ್ಪಾ: ಅಮಿತ್ ಮಾತ್ರ ಇರೋದು… ಎಲ್ಲಾ ಗೊತ್ತು, ಈ ನನ್ಮಂಗನ್ನ ಎತ್ತಾಕ್ಕೊಂಡು ಹೋದ್ರೆ ಎಲ್ಲಾ ಬಾಯಿ ಬಿಡ್ತಾನೆ… ರಾಕಿ: ಅವನು ಬಾಯಿ ಬಿಡಲ್ಲ..
ಪುಷ್ಪಾ: ಅವನ ಜೀವ ಹೋದ್ರೂ ಅವನು ಬಾಯಿ ಬಿಡಲ್ಲ. ಅದಂತೂ ಸತ್ಯ.. ಅವನಿಗೆ ಎಲ್ಲಾ ಗೊತ್ತು… ಅವನ ಬಾಸ್‌ಗೋಸ್ಕರ ಜೈಲಿಗೋದ್ರೂ ಇದ್ದುಬಿಡ್ತಿನಿ ಅಂತಾನೆ… ಇವನನ್ನು ಎತ್ತಿ ಬಿಟ್ಟರೆ, ನಮ್ಮ ಬಾಸ್ ಜೈಪುರದಲ್ಲಿ ದೊಡ್ಡವರು ಅಂದವ್ನೆ.. ಇದನ್ನು ನಾನು ಅಣ್ಣಂಗೆ ಹೇಳೇ ಹೇಳ್ತಿನಿ… ಹಿಂಗೇ ಅಂದ ಅಣ್ಣ ಅಂತಾ ಹೇಳ್ತಿನಿ ನಾನು.. ಇವರ ಮುಂದೆ ಕರೆದುಕೊಂಡು ಹೋಗಪ್ಪಾ ನಿಂಗ್ಯಾಕೆ ನಾನು ಹೇಳೇ ಹೇಳ್ತಿನಿ…
ಬೆಂಗಳೂರು: ಸಚಿವ ರಾಜಣ್ಣ ಪುತ್ರ ರಾಜೇಂದ್ರ (Rajendra Rajanna) ಹತ್ಯೆಗೆ ಯತ್ನ ಪ್ರಕರಣ ತನಿಖೆಯನ್ನು ಕ್ಯಾತಸಂದ್ರ ಪೊಲೀಸರು ಚುರುಕುಗೊಳಿಸಿದ್ದಾರೆ.
ಎಂಎಲ್‌ಸಿ ರಾಜೇಂದ್ರ ಅವರು ಆರೋಪ ಮಾಡಿದ ಹಾಗೆ 18 ನಿಮಿಷಗಳ ಆಡಿಯೋವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆಡಿಯೋದಲ್ಲಿ (Audio) ಇಬ್ಬರ ಮಾತಿನ ಸಂಭಾಷಣೆ ಇದ್ದು, ಆ ಸಂಭಾಷಣೆಯ ಬಗ್ಗೆ ಒಂದಿಷ್ಟು ಸ್ಪಷ್ಟನೆ ಸಿಗಬೇಕಿದೆ. ಈಗಾಗಲೇ ರಾಜೇಂದ್ರ ಅವರು ಆರೋಪ ಮಾಡಿದ ಹಾಗೇ ಸೋಮ ಮತ್ತು ಭರತ್ ಮಾತುಕತೆನಾ ಅಂತ ಪರಿಶೀಲನೆ ನಡೆಸ್ತಾ ಇದ್ದಾರೆ. ಇದರ ಜೊತೆಗೆ ಆಡಿಯೋವನ್ನ ಎಫ್‌ಎಸ್‌ಎಲ್‌ಗೆ ಕಳುಹಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ನನ್ನ ಕೊಲೆಗೆ 70 ಲಕ್ಷ ಸುಪಾರಿ ಕೊಡಲಾಗಿದೆ – ತುಮಕೂರು ಎಸ್ಪಿಗೆ ಸಚಿವ ರಾಜಣ್ಣ ಪುತ್ರ ದೂರು
ನನ್ನ ಕೊಲೆಗೆ 70 ಲಕ್ಷ ಸುಪಾರಿ ಕೊಡಲಾಗಿದೆ. ಅದರಲ್ಲಿ 5 ಲಕ್ಷ ಮುಂಗಡ ಪಾವತಿ ಮಾಡಿದ್ದಾರೆ. ಸೋಮ ಮತ್ತು ಭರತ್ ಅನ್ನೋರು ಇದರಲ್ಲಿದ್ದಾರೆ. ನನ್ನ ವಾಹನಕ್ಕೆ ಜಿಪಿಎಸ್ (GPS) ಅಳವಡಿಸಿ ಚಲನ ವಲನ ತಿಳಿಯಲು ಪ್ರಯತ್ನ ಪಟ್ಟಿದ್ದರು. ಹೀಗಾಗಿ ನನಗೆ ಹೆಚ್ಚಿನ ಭದ್ರತೆಗೆ ಮನವಿ ಮಾಡಿದ್ದೇನೆ. ಸುಪಾರಿ ಟೀಂ ನಲ್ಲಿ 20 ಜನ ಇದ್ದಾರೆ. 18 ನಿಮಿಷದ ಆಡಿಯೋ ಇದೆ ಎಂದು ರಾಜೇಂದ್ರ ರಾಜಣ್ಣ ಆರೋಪಿಸಿದ್ದರು. ಇದನ್ನೂ ಓದಿ: ತುಮಕೂರು ಜಿಲ್ಲಾ ಕಾಂಗ್ರೆಸ್‌ನಲ್ಲಿ ಶೀತಲ ಸಮರ; ಡಾ.ರಂಗನಾಥ್-ರಾಜಣ್ಣ ಕುಟುಂಬ ನಡುವೆ ವಾರ್
ಬೆಂಗಳೂರು: ಡಿಕೆ ಶಿವಕುಮಾರ್ ಜೊತೆ ಸೇರಿ ರಮೇಶ್ ಜಾರಕಿಹೊಳಿ ಅವರ ಸಿಡಿ ಮಾಡಿಸಿದ್ದೇ ವಿಜಯೇಂದ್ರ (BY Vijayendra) ಅಂತ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಹೊಸ ಬಾಂಬ್ ಸಿಡಿಸಿದ್ದಾರೆ.
ʻಪಬ್ಲಿಕ್ ಟಿವಿʼ ಜೊತೆಗೆ ಮಾತನಾಡಿದ ಅವರು, ಬಿಜೆಪಿಯಿಂದ ಉಚ್ಛಾಟನೆಗೊಂಡ ಬಳಿಕ ಮತ್ತೆ ಬಿಎಸ್‌ವೈ ಕುಟುಂಬದ ವಿರುದ್ಧ ಗುಡುಗಿದ್ದಾರೆ. ನಾನು ಮನೆಯಲ್ಲಿ ಸುಮ್ಮನೆ ಕೂರಲ್ಲ. ಬೀದರ್ ನಿಂದ ಚಾಮರಾಜನಗರ, ಕೋಲಾರದಿಂದ ಕೊಡಗಿನವರೆಗೆ ಪ್ರವಾಸ ಮಾಡ್ತೇನೆ. ಇವರ ವಿರುದ್ಧ ಹೋರಾಟ ನಿಲ್ಲಿಸಲ್ಲ, ಹಿಂದೂಗಳ ರಕ್ಷಣೆಗೆ ರಾಜ್ಯ ಪ್ರವಾಸ. ಅಪ್ಪಮಕ್ಕಳ ಕುಟುಂಬವನ್ನು ರಾಜಕೀಯದಿಂದ ದೂರ ಮಾಡ್ತೇನೆ ಶಪಥ ಮಾಡಿದ್ದಾರೆ. ಇದನ್ನೂ ಓದಿ: ರಾಜೇಂದ್ರ ಹತ್ಯೆಗೆ ಸುಪಾರಿ ಕೇಸ್ – ಪ್ರಭಾವಿಯನ್ನ ನೀವೇ ಹುಡುಕಿ, ನಿಮಗೆ ಸಿಕ್ಕೇ ಸಿಕ್ತಾರೆ: ಸತೀಶ್ ಜಾರಕಿಹೊಳಿ
ದೆಹಲಿಯಲ್ಲಿ ಇರುವ ನಮ್ಮ ಸಂಸದರು ಎಲ್ರೂ ವಿಜಯೇಂದ್ರ ವಿರುದ್ಧ ಇದ್ದಾರೆ, ವಿಜಯೇಂದ್ರನನ್ನ ತೆಗೀರಿ ಅಂತಿದ್ದಾರೆ. ರಮೇಶ್ ಜಾರಕಿಹೊಳಿ ಸಿಡಿ ಹಗರಣ ಮಾಡಿದ್ದೇ ವಿಜಯೇಂದ್ರ ಮತ್ತು ಡಿಕೆಶಿ (DK Shivakumar). ಡಿಕೆಶಿ ಜೊತೆ ಸೇರಿ ವಿಜಯೇಂದ್ರ ರಮೇಶ್ ಜಾರಕಿಹೊಳಿ ಸಿಡಿ ಮಾಡಿಸಿದ್ರು. ಈಗ ಎದ್ದಿರುವ ಹನಿಟ್ರ‍್ಯಾಪ್ ಹಗರಣದಲ್ಲೂ ಇದೇ ಟೀಮ್ ಇದೆ ಅಂತ ಬಾಂಬ್ ಸಿಡಿಸಿದ್ದಾರೆ. ಇದನ್ನೂ ಓದಿ: ಲಿಂಗಾಯತರು ಯಡಿಯೂರಪ್ಪ ಜೊತೆಗಿಲ್ಲ, ಜನರೇ ಹೊಸ ಪಕ್ಷ ಕಟ್ಟಲು ಸಲಹೆ ಕೊಡ್ತಿದ್ದಾರೆ – ಯತ್ನಾಳ್
ನನ್ನ ಉಚ್ಛಾಟನೆಗೆ ಒತ್ತಡ ಹಾಕಿದ್ದು ವಿಜಯೇಂದ್ರ:
ಮುಂದುವರಿದು ಮಾತನಾಡಿದ ಯತ್ನಾಳ್, ಯಡಿಯೂರಪ್ಪ, ಮಗ ವಿಜಯೇಂದ್ರ ಕೂಡಿ ನನ್ನ ಉಚ್ಚಾಟನೆಗೆ ಹೈಕಮಾಂಡ್ ಮೇಲೆ ಒತ್ತಡ ಹಾಕಿಸಿದ್ರು. ಉಚ್ಚಾಟನೆ ಮಾಡಿದ್ರೆ ಬಿಜೆಪಿ ಬಿಟ್ ಹೋಗ್ತಾರೆ ಅಂತ ಮಾಡಿಸಿದ್ದಾರೆ. ವೀರಶೈವ ಲಿಂಗಾಯತ ಸಮುದಾಯ ಯಡಿಯೂರಪ್ಪ, ವಿಜಯೇಂದ್ರ ಜೊತೆಯಿಲ್ಲ. ಮಹಾಭಾರತ, ರಾಮಾಯಣ ಕಾಲದಿಂದಲೂ ಈಥರದ ಅನ್ಯಾಯ ನಡೆದುಕೊಂಡು ಬರ್ತಿದೆ. ಆದ್ರೆ ನಾನು ಉಚ್ಛಾಟನೆ ಮರುಪರಿಶೀಲನೆಗೆ ಮನವಿ ಮಾಡಲ್ಲ, ನಮ್ಮ ತಂಡದವ್ರು ಮನವಿ ಮಾಡ್ತಾರೆ ಅಂತ ಹೇಳಿದ್ದಾರೆ.
ಈ ಹಿಂದೆ ಅನಂತಕುಮಾರ್ ಹೆಗಡೆ, ಈಶ್ವರಪ್ಪಗೂ ಇದೇ ಅನ್ಯಾಯ ಆಯ್ತು. ಯಡಿಯೂರಪ್ಪ ಚೇಲಾನನ್ನ ನಿಲ್ಲಿಸಿ, ಸಿ.ಟಿ ರವಿಯನ್ನ ಸೋಲಿಸಿದ್ರು. ಈಗ ಹಿಂದೂ ನಾಯಕರನ್ನು ತುಳಿಯುವ ಕೆಲಸ ಆಗ್ತಿದೆ. ಉಚ್ಛಾಟನೆ ಯಿಂದ ಮುಜುಗರ ಆಗಿಲ್ಲ, ಹಿನ್ನಡೆ ಆಗಿಲ್ಲ. ಇದಕ್ಕೆ ಕಾರಣಕರ್ತರಾದವರು ನಾಶ ಆಗ್ತಾರೆ. ಯಾರ ಮನವರಿಕೆಯೂ ನಾನು ಮಾಡಲ್ಲ ಅಂತ ಯತ್ನಾಳ್ ಕೆಂಡಾಮಂಡಲವಾಗಿದ್ದಾರೆ. ಇದನ್ನೂ ಓದಿ: ಉಚ್ಚಾಟಿತ ಶಾಸಕ ಯತ್ನಾಳ್ ರಕ್ಷಣೆಗೆ ಧಾವಿಸಿದ ಸಂಗಡಿಗರು; ಬೆಂಗಳೂರಲ್ಲಿ ಭಿನ್ನರಿಂದ ಯತ್ನಾಳ್ ಜತೆ ಹೈವೋಲ್ಟೇಜ್ ಸಭೆ
ತುಮಕೂರು: ತನ್ನ ಕೊಲೆಗೆ 70 ಲಕ್ಷ ರೂ.ಗೆ ಸುಪಾರಿ ಕೊಡಲಾಗಿದೆ ಎಂದು ಆರೋಪಿಸಿ ಸಚಿವ ಕೆ.ಎನ್ ರಾಜಣ್ಣ (KN Rajanna) ಪುತ್ರನೂ ಆಗಿರುವ ಎಂಎಲ್‌ಸಿ ರಾಜೇಂದ್ರ ರಾಜಣ್ಣ (Rajendra Rajanna) ಅವರು ತುಮಕೂರು ಎಸ್ಪಿಗೆ ದೂರು ಸಲ್ಲಿಸಿದ್ದಾರೆ.
ಮಧ್ಯಾಹ್ನ 12 ಗಂಟೆ ಸುಮಾರಿಗೆ ತುಮಕೂರು ಎಸ್ಪಿ ಕಚೇರಿಗೆ ತೆರಳಿದ ರಾಜೇಂದ್ರ ರಾಜಣ್ಣ ಅವರು ಎಸ್ಪಿ ಅಶೋಕ್ ಕುಮಾರ್ ಅವರಿಗೆ ಆಡಿಯೋ ಸಾಕ್ಷ್ಯದ ಸಹಿತ ಎರಡು ಪುಟಗಳ ದೂರು ನೀಡಿದ್ದಾರೆ. ತುಮಕೂರಿನ ಕಾತ್ಸಂದದ ರಜತಾತ್ರಿ ನಿವಾಸದಲ್ಲಿ ಕಳೆದ ನವೆಂಬರ್‌ನಲ್ಲಿ ನನ್ನ ಹತ್ಯೆಗೆ ಕೊಲೆಯತ್ನ ನಡೆದಿದೆ ಎಂದು ಆರೋಪಿಸಿ ದೂರು ನೀಡಿದ್ದಾರೆ. ಇದನ್ನೂ ಓದಿ: ನನ್ನ ಹತ್ಯೆಗೆ ಸುಪಾರಿ – ಹೊಸ ಬಾಂಬ್ ಸಿಡಿಸಿದ ಸಚಿವ ರಾಜಣ್ಣ ಪುತ್ರ
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊಲೆಗೆ 70 ಲಕ್ಷ ಸುಪಾರಿ ಕೊಡಲಾಗಿದೆ. ಅದರಲ್ಲಿ 5 ಲಕ್ಷ ಮುಂಗಡ ಪಾವತಿ ಮಾಡಿದ್ದಾರೆ. ಸೋಮ ಮತ್ತು ಭರತ್ ಅನ್ನೋರು ಇದರಲ್ಲಿದ್ದಾರೆ. ನನ್ನ ವಾಹನಕ್ಕೆ ಜಿಪಿಎಸ್ (GPS) ಅಳವಡಿಸಿ ಚಲನ ವಲನ ತಿಳಿಯಲು ಪ್ರಯತ್ನ ಪಟ್ಟಿದ್ದರು. ಹೀಗಾಗಿ ನನಗೆ ಹೆಚ್ಚಿನ ಭದ್ರತೆಗೆ ಮನವಿ ಮಾಡಿದ್ದೇನೆ. ಸುಪಾರಿ ಟೀಂ ನಲ್ಲಿ 20 ಜನ ಇದ್ದಾರೆ. 18 ನಿಮಿಷದ ಆಡಿಯೋ ಇದೆ ಎಂದು ರಾಜೇಂದ್ರ ರಾಜಣ್ಣ ಆರೋಪಿಸಿದ್ದಾರೆ. ಇದನ್ನೂ ಓದಿ: ಹನಿಟ್ರ್ಯಾಪ್ ಪ್ರಕರಣ ತನಿಖೆಗೆ ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾಗೊಳಿಸಿದ ಸುಪ್ರೀಂ
ಡಿಜಿ ಅವರ ಸಲಹೆ ಮೇರೆಗೆ ಇಂದು ಎಸ್ಪಿಗೆ ದೂರು ನೀಡಿದ್ದೇನೆ. ಹನಿಟ್ರ‍್ಯಾಪ್ ವಿಚಾರ ಎಲ್ಲೂ ಪ್ರಸ್ತಾಪ ಮಾಡಿಲ್ಲ. ನನಗೆ ಅಪರಿಚಿತರಿಂದ ಫೋನ್ ಕಾಲ್ ಮೆಸೆಜ್ ವೀಡಿಯೋ ಕಾಲ್ ಬರುತಿತ್ತು ಅಂತಾ ಅಷ್ಟೇ ಹೇಳಿದ್ದೆ. ಈಗ ನನ್ನ ಹತ್ಯೆಗೆ ಸುಪಾರಿ ಕೊಟ್ಟಿದ್ದರ ಬಗ್ಗೆ ದೂರು ನೀಡಿದ್ದೇನೆ, ಎಫ್‌ಐಆರ್ ಮಾಡುವಂತೆ ಕೇಳಿಕೊಂಡಿದ್ದೇನೆ. ಕ್ಯಾತಸಂದ್ರ ಠಾಣೆಯಲ್ಲಿ ಎಫ್‌ಐಆರ್ ಮಾಡುತ್ತೇನೆ ಎಂದಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹನಿಟ್ರ್ಯಾಪ್ ಪ್ರಕರಣ – ಡಿಜಿಗೆ ದೂರು ಕೊಡಲು ರಾಜಣ್ಣ ಪುತ್ರಗೆ ಸಿಎಂ ಸೂಚನೆ
ಮಗಳ ಹುಟ್ಟು ಹಬ್ಬದ ಸಂದರ್ಭದಲ್ಲಿ ಅಂದರೆ ಕಳೆದ ನವೆಂಬರ್ ತಿಂಗಳಲ್ಲಿ ಕೊಲೆ ಸಂಚು ರೂಪಿಸಲಾಗಿತ್ತು. ನನ್ನ ಕಾರಿಗೆ ಜಿಪಿಎಸ್ ಅಳವಡಿಸಲು ಪ್ಲಾನ್ ಮಾಡಿದ್ದರು. ಇಡೀ ರಾಜ್ಯದಲ್ಲಿ ನನ್ನ ಮೇಲೆ ಯಾರಿಗೂ ದ್ವೇಷ ಇಲ್ಲ. ನಾನೇನು ರಿಯಲ್ ಎಸ್ಟೇಟ್ ಮಾಡುತ್ತಿಲ್ಲ. ಯಾಕೆ ಸುಪಾರಿ ಕೊಟ್ಟರು ಗೊತ್ತಿಲ್ಲ? ಅದನ್ನು ತನಿಖೆ ಮಾಡುವಂತೆ ಹೇಳಿದ್ದೇನೆ. ಸೋಮ ಮತ್ತು ಭರತ್ ಅನ್ನುವವರ ಹೆಸರು ಆಡಿಯೋದಲ್ಲಿ ಇದೆ. ಅವರು ಯಾರು ಅಂತಾ ಗೊತ್ತಿಲ್ಲ. ಒಬ್ಬ ಲೇಡಿ ಮತ್ತು ಹುಡುಗ 18 ನಿಮಿಷ ಆಡಿಯೋದಲ್ಲಿ ಮಾತನಾಡುತ್ತಾರೆ. ಮಗಳ ಬರ್ತ್‌ಡೇ ಹಿಂದಿನ ದಿನ ಹತ್ಯೆ ಮಾಡಬೇಕು ಎಂದು ಪ್ಲಾನ್ ಮಾಡಿದ್ದರು. ಶಾಮಿಯಾನ ಮಾಲೀಕರು ಹೆಸರು ನಾನು ಹೇಳಲ್ಲ. ಮಾಧ್ಯಮದವರಿಂದ ಅವರಿಗೆ ಕಿರಿಕಿರಿ ಆಗಬಾರದು ಎಂಬ ಕಾರಣಕ್ಕೆ ನಾನು ಅವರ ಹೆಸರು ಹೇಳಲ್ಲ ಎಂದು ಹೇಳಿದ್ದಾರೆ.
ಮುಂದುವರಿದು.. ಹನಿಟ್ರ‍್ಯಾಪ್ ವಿಚಾರ ಸುಪಾರಿ ವಿಚಾರ ಬೇರೆ ಬೇರೆ. ಹನಿಟ್ರ‍್ಯಾಪ್ ವಿಚಾರ ಸಿಐಡಿ ತನಿಖೆ ಆರಂಭವಾಗಿದೆ. ಸಿಐಡಿ ಅಧಿಕಾರಿ ವಂಶಿಕೃಷ್ಣ ನೇತೃತ್ವದಲ್ಲಿ ನಡೀತಿದೆ. ಬೆಂಗಳೂರು ಭೂಗತ ಲೋಕದ ಕೈವಾಡ ಬಗ್ಗೆ ಗೊತ್ತಿಲ್ಲ. ನನಗೆ ಹೆಚ್ಚಿನ ಭದ್ರತೆ ಬೇಕು ಎಂದು ಕೇಳಿಕೊಂಡಿದ್ದೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಏ.10ರ ಒಳಗಡೆ ಯತ್ನಾಳ್ ಉಚ್ಚಾಟನೆ ಆದೇಶ ವಾಪಸ್ ಪಡೀರಿ : ಜಯಮೃತ್ಯುಂಜಯ ಸ್ವಾಮೀಜಿ ಡೆಡ್‌ಲೈನ್
ಬೆಂಗಳೂರು: ಹನಿಟ್ರ್ಯಾಪ್ ಪ್ರಕರಣಕ್ಕೆ (Honeytrap Case) ಸಂಬಂಧಿಸಿದಂತೆ ಕೊನೆಗೂ ಸಚಿವ ರಾಜಣ್ಣ ಪುತ್ರ ಡಿಜಿಪಿಗೆ ದೂರು ನೀಡಿದ್ದಾರೆ. ಯಾರ ಹೆಸರು, ಫೋನ್ ನಂಬರ್ ನೀಡದೇ ದೂರು ನೀಡಿದ್ದಾರೆ. ಈ ಬೆನ್ನಲ್ಲೇ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಹನಿಟ್ರ್ಯಾಪ್‌ಗೆ ಬಂದವರು ತಮ್ಮ ಹತ್ಯೆಗೆ ಯತ್ನಿಸಿದ್ರು ಅಂತ ಎಂಎಲ್‌ಸಿ ರಾಜೇಂದ್ರ ರಾಜಣ್ಣ (Rajendra Rajanna) ಹೊಸ ಬಾಂಬ್ ಸಿಡಿಸಿದರು.
ಮುಂದುವರಿದು… ನವೆಂಬರ್ 16ರಂದು ಮಗಳ ಹುಟ್ಟುಹಬ್ಬದ ದಿನ ಶಾಮಿಯಾನ ಹಾಕೋಕೆ ಸ್ವಲ್ಪ ಜನ ಬಂದಿದ್ರು. ಆ ಸಂದರ್ಭದಲ್ಲಿ ಹತ್ಯೆ ಮಾಡಲು ಪ್ರಯತ್ನ ಮಾಡಿದ್ರು ಎಂದು ಸೋಮ, ಭರತ್ ಇಬ್ಬರ ಹೆಸರನ್ನು ಉಲ್ಲೇಖ ಮಾಡಿದರು.
ರಾಜಣ್ಣ ಹನಿಟ್ರ‍್ಯಾಪ್ರಪ್ ಪ್ರಕರಣ ಸಿಐಡಿಗೆ ಹೋಗಿದೆ, ಮನೆಯ ಬಳಿ ಸಾಕ್ಷ್ಯಾಧಾರ ಕಲೆ ಹಾಕೋದಕ್ಕೆ ಪೊಲೀಸರು ಹೋಗಿದ್ದಾರೆ. ಜಯಮಹಲ್ ರಸ್ತೆಯ ಮನೆಯಲ್ಲಿ ಪರಿಶೀಲನೆ ಮಾಡ್ತಾ ಇದ್ದಾರೆ. ಮನೆ ಕೆಲಸದವರ ಹೇಳಿಕೆ ಪಡೆದಿದ್ದಾರೆ. ಈ ಪ್ರಕರಣದ ಹಿಂದಿರುವ ಮಹಾನಾಯಕ ಯಾರು ಅನ್ನೋದು ಯಾರು ಅನ್ನೋದು ಗೊತ್ತಿಲ್ಲ. ನಾನು ಯಾರ ಹೆಸರನ್ನು ಕೂಡ ಹೇಳಿಲ್ಲ ಎಂದು ಸ್ಪಷ್ಟಪಡಿಸಿದ್ರು. ಇದನ್ನೂ ಓದಿ: ಒಳಮೀಸಲಾತಿ ಮಧ್ಯಂತರ ವರದಿ ಸಲ್ಲಿಕೆ – 104 ಪುಟಗಳ ವರದಿ ಸಿಎಂಗೆ ಹಸ್ತಾಂತರ ಮಾಡಿದ ಆಯೋಗ
ಹೈಕಮಾಂಡ್ ಗಮನಕ್ಕೆ ತಾರದೇ ಯಾವುದೇ ತೀರ್ಮಾನ ಬೇಡ ಎಂದಿರುವ ಸಿಎಂ ಸಿದ್ದರಾಮಯ್ಯ (Siddaramaiah), ನಾಳೆ ಕ್ಯಾಬಿನೆಟ್ ಸಭೆಯಲ್ಲೂ ಸಂಪುಟ ಸಹೋದ್ಯೋಗಿಗಳ ಗಮನಕ್ಕೆ ತರಲು ಮುಂದಾಗಿದ್ದಾರೆ ಎನ್ನುವುದನ್ನು ಮೂಲಗಳು ತಿಳಿಸಿವೆ. ಇದನ್ನೂ ಓದಿ: ನನ್ನ ಮೇಲೆ ಕಲ್ಲೆಸೆದಿಲ್ಲ: ಸೋನು ನಿಗಮ್ ಸ್ಪಷ್ಟನೆ
– ಕರ್ನಾಟಕಕ್ಕೂ ನಿಮಗೂ ಏನು ಸಂಬಂಧ? – ಅರ್ಜಿದಾರರಿಗೆ ತೀವ್ರ ತರಾಟೆ
ನವದೆಹಲಿ/ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವರ ಮೇಲೆ ನಡೆದಿದೆ ಎನ್ನಲಾದ ಹನಿಟ್ರ್ಯಾಪ್ ಪ್ರಕರಣದ (Honeytrap Case) ಕುರಿತು ತನಿಖೆಗೆ ಆಗ್ರಹಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನ ಸುಪ್ರೀಂ ಕೋರ್ಟ್ (Supreme Court) ಇಂದು ವಜಾಗೊಳಿಸಿದೆ.
ನೀವು ಜಾರ್ಖಂಡ್ ಮೂಲದವರು, ಕರ್ನಾಟಕಕ್ಕೂ ನಿಮಗೂ ಏನು ಸಂಬಂಧ? ಪೊಲಿಟಿಕಲ್ ನಾನ್‌ಸೆನ್ಸ್‌ಗಳನ್ನು ವಿಚಾರಣೆ ನಡೆಸಲು ನಾವು ಇಲ್ಲಿ ಕೂತಿಲ್ಲ. ನ್ಯಾಯಾಧೀಶರು ಯಾಕೆ ಹನಿಟ್ರ‍್ಯಾಪ್‌ಗೆ ಒಳಗಾಗುತ್ತಾರೆ? ಅದನ್ನು ನ್ಯಾಯಾಧೀಶರು ನೋಡಿಕೊಳ್ತಾರೆ. ಇಂತಹ ಅರ್ಜಿ ವಿಚಾರಣೆ ನಡೆಸಿಕೊಂಡು ಕೂರಲು ನಮಗೆ ಸಾಧ್ಯವಿಲ್ಲ. ಸುಪ್ರೀಂ ಕೋರ್ಟ್‌ಗೆ ಮಾಡಲು ಸಾಕಷ್ಟು ಕೆಲಸ ಇದೆ ಎಂದು ಬಿನಯ್ ಕುಮಾರ್‌ರನ್ನ ತರಾಟೆಗೆ ತೆಗೆದುಕೊಂಡಿದೆ. ಇದನ್ನೂ ಓದಿ: Exclusive | ರನ್ಯಾ ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಮೊದಲು ಚಿನ್ನ ಸಾಗಿಸಿದ್ದು ದಕ್ಷಿಣಾ ಆಫ್ರಿಕಾದಿಂದ ದುಬೈಗೆ!
ಅರ್ಜಿದಾರರ ಮನವಿ ಏನು?
ಕರ್ನಾಟಕದಲ್ಲಿ ಹಿರಿಯ ಸಚಿವರು, ಶಾಸಕರು, ರಾಜಕೀಯ ಮುಖಂಡರು ಮತ್ತು ನ್ಯಾಯಮೂರ್ತಿಗಳು ಸೇರಿದಂತೆ 48 ಜನರನ್ನು ಗುರಿಯಾಗಿಟ್ಟುಕೊಂಡು ಹನಿಟ್ರ‍್ಯಾಪ್ ಪ್ರಕರಣ ನಡೆದಿದೆ. ಈ ಬಗ್ಗೆ ಸಚಿವರೇ ವಿಧಾನಸಭೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಹೀಗಾಗೀ ಈ ಬಗ್ಗೆ ಸಿಬಿಐ ಅಥಾವ ಹೈಕೋರ್ಟ್ ನ್ಯಾಯಧೀಶರ ನೇತೃತ್ವದಲ್ಲಿ ಎಸ್‌ಐಟಿ ತನಿಖೆಗೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಸುಪ್ರೀಂಗೆ ಮನವಿ ಮಾಡಿದ್ದರು. ಇದನ್ನೂ ಓದಿ: ಬಿಜೆಪಿಯಲ್ಲೇ ಹನಿಟ್ರ್ಯಾಪ್‌ಗಳು ನಡೆದಿವೆ – ಯತೀಂದ್ರ ಸಿದ್ದರಾಮಯ್ಯ ಬಾಂಬ್