Tag: ಹನುಮಾನ್ ವಿಗ್ರಹ

  • ರಾಂಚಿಯಲ್ಲಿ ಹನುಮಾನ್ ವಿಗ್ರಹ ಧ್ವಂಸ- ಪರಿಸ್ಥಿತಿ ಉದ್ವಿಗ್ನ

    ರಾಂಚಿಯಲ್ಲಿ ಹನುಮಾನ್ ವಿಗ್ರಹ ಧ್ವಂಸ- ಪರಿಸ್ಥಿತಿ ಉದ್ವಿಗ್ನ

    ರಾಂಚಿ: ಜಾರ್ಖಂಡ್‌ನ (Jharkhand) ರಾಂಚಿಯಲ್ಲಿರುವ ದೇವಾಲಯದಲ್ಲಿ ಕೆಲ ಸಮಾಜ ವಿರೋಧಿ ಶಕ್ತಿಗಳು ಹನುಮಾನ್ ವಿಗ್ರಹ (Lord Hanuman Idol) ವನ್ನು ಧ್ವಂಸಗೊಳಿಸಿದ್ದಾರೆ.

    ರಾಂಚಿಯ ಮುಖ್ಯರಸ್ತೆಯಲ್ಲಿರುವ ದೇವಾಲಯದಲ್ಲಿ ಬೃಹತ್ ಹನುಮನ ವಿಗ್ರಹವನ್ನು ಇರಿಸಲಾಗಿತ್ತು. ಇದೀಗ ಕೀಡಿಗೇಡಿಗಳಿಂದ ಕೃತ್ಯ ನಡೆದಿದ್ದು, ಸುತ್ತಮುತ್ತಲಿನ ಪ್ರದೇಶದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಇದನ್ನೂ ಓದಿ: RSS ಭಯೋತ್ಪಾದಕ ಚಟುವಟಿಕೆ ಮಾಡಿದ್ದರೆ ಸರ್ಕಾರ ಕ್ರಮ ಕೈಗೊಳ್ಳಲಿದೆ: ಎಂಟಿಬಿ ನಾಗರಾಜ್‌

    ಹನುಮಾನ್ ವಿಗ್ರಹದ ಕೈ ಕಾಲು, ತಲೆ ಹಾಗೂ ಮುಖದ ಭಾಗಕ್ಕೆ ಹಾನಿ ಮಾಡಲಾಗಿದೆ. ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು (Jharkhand Police) ಪ್ರಕರಣ ದಾಖಲಿಸಿ ಓರ್ವ ಆರೋಪಿಯನ್ನೂ ಬಂಧಿಸಿದ್ದಾರೆ. ಇದನ್ನೂ ಓದಿ: ರಾಜವರ್ಧನ್ ನಟನೆಯ ‘ಗಜರಾಮ’ನಿಗೆ ಕ್ಲ್ಯಾಪ್ ಮಾಡಿ, ಹಾರೈಸಿದ ಅಭಿಷೇಕ್ ಅಂಬರೀಶ್

    ಪರಿಸ್ಥಿತಿ ನಿಯಂತ್ರಣದಲ್ಲಿಡಲು ದೇಗುಲದ ಸುತ್ತ ಹಾಗೂ ರಾಂಚಿ ನಗರದಾದ್ಯಂತ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಜಾರ್ಖಂಡ್ ಪೊಲೀಸರು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • 2012ರಲ್ಲಿ ತಮಿಳುನಾಡಿನಲ್ಲಿ ಕಳುವಾಗಿದ್ದ 500 ವರ್ಷ ಹಳೆಯ ಹನುಮಾನ್ ವಿಗ್ರಹ ಭಾರತಕ್ಕೆ ವಾಪಸ್

    2012ರಲ್ಲಿ ತಮಿಳುನಾಡಿನಲ್ಲಿ ಕಳುವಾಗಿದ್ದ 500 ವರ್ಷ ಹಳೆಯ ಹನುಮಾನ್ ವಿಗ್ರಹ ಭಾರತಕ್ಕೆ ವಾಪಸ್

    ಚೆನ್ನೈ: ದಶಕದ ಹಿಂದೆ ತಮಿಳುನಾಡಿನ ಅರಿಯಾಲೂರಿನಿಂದ ಕದ್ದು ವಿದೇಶಕ್ಕೆ ಸಾಗಿಸಲಾಗಿದ್ದ ಹನುಮಂತನ ವಿಗ್ರಹವನ್ನು ಶೀಘ್ರದಲ್ಲೇ ಭಾರತಕ್ಕೆ ವಾಪಸ್ ತರಲಾಗುವುದು ಎಂದು ಕೇಂದ್ರ ಸಂಸ್ಕøತಿ ಸಚಿವ ಜಿ.ಕಿಶನ್ ರೆಡ್ಡಿ ಬುಧವಾರ ಹೇಳಿದ್ದಾರೆ.

    ವಿಜಯನಗರ ಸಾಮ್ರಾಜ್ಯ ಕಾಲದ 14-15ನೇ ಶತಮಾನದ ಹನುಮಂತನ ವಿಗ್ರಹವನ್ನು ಇತ್ತೀಚೆಗೆ ಆಸ್ಟ್ರೇಲಿಯಾದಲ್ಲಿ ಖಾಸಗಿ ಖರೀದಿದಾರರೊಬ್ಬರ ಸ್ವಾಧೀನದಲ್ಲಿ ಇದ್ದಿದ್ದನ್ನು ಪತ್ತೆ ಹಚ್ಚಲಾಗಿದೆ.

    ಈ ಬಗ್ಗೆ ನಿನ್ನೆ ಕೇಂದ್ರ ಸಚಿವ ರೆಡ್ಡಿ ಅವರು ಮಾತನಾಡಿ, ತಮಿಳುನಾಡಿನ ದೇವಸ್ಥಾನದಿಂದ ಕಳುವಾಗಿದ್ದ 500 ವರ್ಷ ಹಳೇ ಆಂಜನೇಯನ ವಿಗ್ರಹವನ್ನು ಭಾರತಕ್ಕೆ ವಾಪಸ್ ತರಲಾಗುವುದು. ಈಗಾಗಲೇ ಯುಎಸ್ ಹೋಮ್ ಲ್ಯಾಂಡ್ ಸೆಕ್ಯೂರಿಟಿ, ಈ ವಿಗ್ರಹವನ್ನು ಆಸ್ಟ್ರೇಲಿಯಾದಲ್ಲಿರುವ ಭಾರತೀಯ ರಾಯಭಾರಿ ಕಚೇರಿಗೆ ಹಸ್ತಾಂತರ ಮಾಡಿದೆ ಎಂದು ತಿಳಿಸಿದ್ದಾರೆ.

    ಅಂದಹಾಗೇ, ಈ ಆಂಜನೇಯನ ವಿಗ್ರಹವನ್ನು ಅರಿಯಲೂರಿನ ವೆಲ್ಲೂರು ಗ್ರಾಮದ ವರದರಾಜ ಪೆರುಮಾಳ್ ದೇಗುಲದಿಂದ ಶ್ರೀದೇವಿ ಮತ್ತು ಭೂದೇವಿ ವಿಗ್ರಹಗಳೊಂದಿಗೆ 2012ರ ಏಪ್ರಿಲ್ 9ರಂದು ಕಳುವು ಮಾಡಲಾಗಿತ್ತು ಎಂದು ಹೇಳಲಾಗಿದೆ. ಇದನ್ನೂ ಓದಿ: ಹರ್ಷನ ಹತ್ಯೆ- ಡೀಟೈಲ್ಸ್ ಎಲ್ಲ ಹೇಳೋಕೆ ಆಗಲ್ಲ: ಆರಗ ಜ್ಞಾನೇಂದ್ರ

    2014ರಲ್ಲಿ ಕ್ರಿಸ್ಟಿ ಹರಾಜು ಕಂಪನಿ ಈ ವಿಗ್ರಹವನ್ನು ಹರಾಜಿಗೆ ಇಟ್ಟಿತ್ತು. 37,500 ಡಾಲರ್ ಕೊಟ್ಟು ಖಾಸಗಿ ವ್ಯಕ್ತಿಯೊಬ್ಬರು ಖರೀದಿ ಮಾಡಿದ್ದರು. ಆದರೆ ಇತ್ತ ಭಾರತದಲ್ಲಿ ಕಳ್ಳತನವಾದ ವಿಗ್ರಹಗಳ ಬಗ್ಗೆ ತನಿಖೆಯೂ ನಡೆಯುತ್ತಿತ್ತು.

    ತಮಿಳುನಾಡಿನ ಪೊಲೀಸರ ತಂಡ ಈ ಪ್ರಕರಣದ ವಿಚಾರವಾಗಿ ಯುಎಸ್ ಹೋಮ್ ಲ್ಯಾಂಡ್ ಸೆಕ್ಯೂರಿಟಿಯನ್ನು ಸಂಪರ್ಕಿಸಿತ್ತು ಅಂತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆದರೆ ಆಸ್ಟ್ರೇಲಿಯಾದಲ್ಲಿ ಹರಾಜು ಕಂಪನಿಯವರಿಗಾಗಲಿ, ಅದನ್ನು ಖರೀದಿಸಿದ ವ್ಯಕ್ತಿಗಾಗಲಿ ಇದು ಕದ್ದ ವಿಗ್ರಹ ಎಂಬ ಬಗ್ಗೆ ಮಾಹಿತಿ ಇರಲಿಲ್ಲ ಎಂದು ಹೇಳಲಾಗಿದೆ. ಇದನ್ನೂ ಓದಿ: ಅಗ್ನಿ ಅವಘಡ – ಕಟ್ಟಡದಿಂದ ಹಾರಿ ಜೀವ ಉಳಿಸಿಕೊಂಡ ತಾಯಿ, ಮಗಳು

    ಇತ್ತೀಚಿನ ವರ್ಷಗಳಲ್ಲಿ ಹೀಗೆ ಹಲವು ವಿಗ್ರಹಗಳನ್ನು ಭಾರತಕ್ಕೆ ವಾಪಸ್ ತರಲಾಗಿದೆ. ಹಿಂದೆಲ್ಲ ಕಳುವಾಗಿ ವಿದೇಶಕ್ಕೆ ಸಾಗಿಸಲಾಗಿದ್ದ ದೇವರ ಮೂರ್ತಿಗಳು ಒಂದೊಂದೇ ದೇಶಕ್ಕೆ ವಾಪಸ್ ಬರುತ್ತಿವೆ.

    ಎರಡು ದಶಕಗಳ ಹಿಂದೆ ಬಿಹಾರದ ಕುಂಡಲ್‍ಪುರ ದೇವಸ್ಥಾನದಿಂದ ಕಳುವಾದ ಅವಲೋಕಿತೇಶ್ವರ ಪದ್ಮಪಾಣಿ (ಬುದ್ಧ) ವಿಗ್ರಹ ಇಟಲಿಯಲ್ಲಿ ಪತ್ತೆಯಾಗಿದೆ. ಮಿಲನ್‍ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಗೆ ಅದನ್ನು ನೀಡಲಾಗಿದ್ದು, ಕೆಲವೇ ದಿನಗಳಲ್ಲಿ ಭಾರತಕ್ಕೆ ಬರಲಿದೆ. ಈ ವಿಗ್ರಹ 8-12ನೇ ಶತಮಾನದ್ದು, 2000ನೇ ಇಸವಿಯಲ್ಲಿ ಕಳುವಾಗಿತ್ತು. ವಾರಾಣಸಿಯ ದೇವಸ್ಥಾನವೊಂದರಿಂದ 100 ವರ್ಷಗಳ ಹಿಂದೆ ಕಳುವಾಗಿದ್ದ, 18ನೇ ಶತಮಾನದ ದೇವಿ ಅನ್ನಪೂರ್ಣಾ ವಿಗ್ರಹವನ್ನು 2021ರ ಅಕ್ಟೋಬರ್‍ನಲ್ಲಿ ಕೆನಡಾದ ಒಟ್ಟಾವಾದಿಂದ ವಾಪಸ್ ತರಲಾಗಿತ್ತು.