Tag: ಹರಪ್ಪನಹಳ್ಳಿ

  • ವಿಜಯನಗರ| ಕಲುಷಿತ ನೀರು ಸೇವಿಸಿ ನವ ಜಾತ ಶಿಶು ಸೇರಿ ಐವರು ಸಾವು

    ವಿಜಯನಗರ| ಕಲುಷಿತ ನೀರು ಸೇವಿಸಿ ನವ ಜಾತ ಶಿಶು ಸೇರಿ ಐವರು ಸಾವು

    ವಿಜಯನಗರ: ಕಲುಷಿತ ನೀರು ಸೇವಿಸಿ ನವ ಜಾತ ಶಿಶು ಸೇರಿ ಐವರು ಸಾವನ್ನಪ್ಪಿದ್ದಾರೆ. ಶುದ್ಧ ನೀರು ಕೊಡದ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶಕ್ಕೆ ಒಳಗಾದ ಘಟನೆ ವಿಜಯನಗರ (Vijayanagara) ಜಿಲ್ಲೆಯ ಹರಪ್ಪನಹಳ್ಳಿ ತಾಲ್ಲೂಕಿನ ಟಿ ತುಂಬಿಗೇರೆ ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ಸುರೇಶ್(30), ಮಹಾಂತೇಶ್(45)ಗೌರಮ್ಮ(60), ಹನುಮಂತಪ್ಪ(38),8 ತಿಂಗಳ ಗಂಡು ಮಗು ಸಾವನ್ನಪ್ಪಿದವರು. ಗ್ರಾಮದ ಐವತ್ತಕ್ಕೂ ಹೆಚ್ಚು ಜನರು ಭೇದಿಯಿಂದ ಬಳಲುತ್ತಿದ್ದು, ಒಂದೇ ದಿನ ಇಬ್ಬರ ಸಾವಾಗಿದೆ. ಕಳೆದ ವಾರ ಮೂವರು ಸಾವನ್ನಪ್ಪಿದ್ದು, ಸರಣಿ ಸಾವಿನಿಂದ ಗ್ರಾಮಸ್ಥರು ಕಂಗೆಟ್ಟಿದ್ದಾರೆ. ಇದನ್ನೂ ಓದಿ: ಶಾಂತಿ ಮಾತುಕತೆ ಯಶಸ್ವಿ – 5 ವರ್ಷದ ಬಳಿಕ ಮೋದಿ-ಜಿನ್‌ಪಿಂಗ್‌ ದ್ವಿಪಕ್ಷೀಯ ಸಭೆ

    ವಾಂತಿ ಭೇದಿಯಿಂದ ನರಳಿ ಚಿಕಿತ್ಸೆ ಫಲಕಾರಿಯಾಗದೇ ಸಾವು ಎಂದು ಗ್ರಾಮಸ್ಥರ ಆರೋಪ ಮಾಡುತ್ತಿದ್ದಾರೆ. ಅಲ್ಲದೆ ಗರ್ಭಿಣಿ ನಿಂಗಮ್ಮ ಎನ್ನುವವರಿಗೆ ಕೂಡ ವಾಂತಿಭೇದಿ ಕಾಣಿಸಿಕೊಂಡಿದ್ದು, ಹೆರಿಗೆ ವೇಳೆ ಗಂಡು ಮಗು ಕೂಡ ಸಾವನ್ನಪ್ಪಿದೆ. ಇದಕ್ಕೆ ಗ್ರಾಮಕ್ಕೆ ಸರಬರಾಜು ಆಗುವ ನಲ್ಲಿಯಲ್ಲಿ ಕಲುಷಿತ ನೀರು ಬಂದು ವಾಂತಿ ಭೇದಿಯಾಗುತ್ತಿದೆ ಎಂದು ಗ್ರಾಮಸ್ಥರ ಆರೋಪ ಮಾಡಿದ್ದಾರೆ. ಇದನ್ನೂ ಓದಿ: THAAD ಎಂದರೇನು? ಇಸ್ರೇಲ್‌ಗೆ ಅಮೆರಿಕ ಇದನ್ನೂ ಏಕೆ ಕಳುಹಿಸಿದೆ?

    ಇಷ್ಟೇಲ್ಲ ಆದರೂ ಕೂಡ ಸ್ಥಳಕ್ಕೆ ಭೇಟಿ ನೀಡದೆ ನಿರ್ಲಕ್ಷ್ಯ ತೋರಿದ ಆರೋಗ್ಯ ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ವಿರುದ್ಧ ಜನ ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: ಬೆಂಗಳೂರು ಕಟ್ಟಡ ದುರಂತ- ಸಾವಿನ ಸಂಖ್ಯೆ ಐದಕ್ಕೆ ಏರಿಕೆ, ಓರ್ವ ಕಾರ್ಮಿಕನ ರಕ್ಷಣೆ

  • ಸಿದ್ದರಾಮಯ್ಯಗೆ ಬೆಂಬಲ ಸೂಚಿಸಿರುವ ಪಕ್ಷೇತರ ಅಭ್ಯರ್ಥಿ

    ಸಿದ್ದರಾಮಯ್ಯಗೆ ಬೆಂಬಲ ಸೂಚಿಸಿರುವ ಪಕ್ಷೇತರ ಅಭ್ಯರ್ಥಿ

    ಬೆಂಗಳೂರು: ವಿಜಯನಗರ (Vijayanagara) ಜಿಲ್ಲೆಯ ಹರಪನಹಳ್ಳಿ (Harapanahalli) ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಎಂಪಿ ಲತಾ ಮಲ್ಲಿಕಾರ್ಜುನ್ (MP Latha Mallikarjun) ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ (Siddaramaiah) ಬೆಂಬಲ ಸೂಚಿಸಿದ್ದಾರೆ.

    ರಾಜ್ಯ ವಿಧಾನಸಭಾ ಚುನಾವಣೆಗೆ (Election) ಕಾಂಗ್ರೆಸ್‌ನಿಂದ (Congress) ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಲತಾ ಮಲ್ಲಿಕಾರ್ಜುನ್ ಬಂಡಾಯವೆದ್ದು, ಹರಪನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಅಷ್ಟೇ ಅಲ್ಲದೇ ಅಲ್ಲಿನ ಹಾಲಿ ಶಾಸಕರಾಗಿದ್ದ ಬಿಜೆಪಿಯ ಜಿ.ಕರುಣಾಕರ ರೆಡ್ಡಿ ಅವರನ್ನು ಸೋಲಿಸಿ ಭರ್ಜರಿ ಗೆಲುವು ದಾಖಲಿಸಿದ್ದರು.

    ಇದೀಗ ಪತಿ ಮಲ್ಲಿಕಾರ್ಜುನ ಜೊತೆ ಸೇರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ. ಅಷ್ಟೇ ಅಲ್ಲದೇ ಕೆಲಕಾಲ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಸಿದ ಲತಾ ಮಲ್ಲಿಕಾರ್ಜುನ್, ಸಿದ್ದರಾಮಯ್ಯ ಅವರಿಗೆ ಬೆಂಬಲ ನೀಡಿದ್ದಾರೆ. ಇದನ್ನೂ ಓದಿ: ಆಟೋ ರಿಕ್ಷಾ, ಖಾಸಗಿ ಬಸ್ ಡಿಕ್ಕಿ – 6 ಮಹಿಳೆಯರು ಸಾವು, ನಾಲ್ವರಿಗೆ ಗಾಯ

    ಕಾಂಗ್ರೆಸ್‌ನ ಹಿರಿಯ ನಾಯಕ ಮಾಜಿ ಡಿಸಿಎಂ ಎಂಪಿ ಪ್ರಕಾಶ್ ಪುತ್ರಿಯಾಗಿರುವ ಎಂಪಿ ಲತಾ ಮಲ್ಲಿಕಾರ್ಜುನ್‌ಗೆ ಚುನಾವಣಾ ಫಲಿತಾಂಶ ಪ್ರಕಟವಾಗುವ ಮೊದಲೇ, ಸಿದ್ದರಾಮಯ್ಯ ಅವರು ಕರೆ ಮಾಡಿ ಮಾತನಾಡಿರುವ ವಿಚಾರ ಜಿಲ್ಲೆಯಲ್ಲಿ ಬಹಳ ಸದ್ದು ಮಾಡಿತ್ತು. ಇದನ್ನೂ ಓದಿ: ಮುಂದಿನ ಸಿಎಂ ಯಾರು? – ರಾತ್ರಿ 1:30ರವರೆಗೆ ನಡೆದಿದ್ದು ಏನು?

  • ರೈತರ ಮೇಲೆ ಮಾಜಿ ಸಚಿವ ಪರಮೇಶ್ವರ ನಾಯ್ಕ ಪುತ್ರನಿಂದ ಹಲ್ಲೆ

    ರೈತರ ಮೇಲೆ ಮಾಜಿ ಸಚಿವ ಪರಮೇಶ್ವರ ನಾಯ್ಕ ಪುತ್ರನಿಂದ ಹಲ್ಲೆ

    ದಾವಣಗೆರೆ: ಮಾಜಿ ಸಚಿವ ಪಿ.ಟಿ.ಪರಮೇಶ್ವರ ನಾಯ್ಕ ಅವರ ಪುತ್ರ ಹಾಗೂ ಬೆಂಬಲಿಗರು ರೈತರ ಮೇಲೆ ಹಲ್ಲೆ ನಡೆಸಿದ ಘಟನೆ ಬಳ್ಳಾರಿ ಜಿಲ್ಲೆ ಹರಪನಹಳ್ಳಿಯ ಹೊರವಲಯದಲ್ಲಿ ನಡೆದಿದೆ.

    ಕಲ್ಲು ಗಣಿಗಾರಿಕೆ ವಿಚಾರವಾಗಿ ಪ್ರಶ್ನಿಸಿದ ಹರಪನಹಳ್ಳಿಯ ರೈತರ ಮೇಲೆ ಮಾಜಿ ಸಚಿವರ ಪುತ್ರ ಭರತ್ ಹಾಗೂ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ. ಈ ದೃಶ್ಯವನ್ನು ಸ್ಥಳದಲ್ಲಿದ್ದ ವ್ಯಕ್ತಿಯೊಬ್ಬರು ತಮ್ಮ ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದಾರೆ. ಘಟನೆಯಲ್ಲಿ ನಾಲ್ವರಿಗೆ ಗಾಯಗಳಾಗಿದ್ದು, ಅವರನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

    ಕಲ್ಲು ಗಣಿಗಾರಿಕೆಯಿಂದ ತಮ್ಮ ಜಮೀನಿಗೆ ತೊಂದರೆ ಆಗುತ್ತಿದೆ. ಈ ಬಗ್ಗೆ ಹಲವು ಬಾರಿ ಸಂಬಂಧಪಟ್ಟವರಿಗೆ ದೂರು ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ನಮಗೆ ಧೂಳಿನಿಂದ ಭಾರೀ ಸಮಸ್ಯೆಯಾಗಿದೆ ಎಂದು ರೈತರು ಆರೋಪಿಸಿದ್ದರು. ಹೀಗಾಗಿ ರೈತರು ಉಪವಿಭಾಗಾಧಿಕಾರಿಗಳನ್ನು ಪರಿಶೀಲನೆಗೆ ಕರೆದುಕೊಂಡು ಬಂದಿದ್ದರು. ಈ ವೇಳೆ ಇದೇ ಮಾರ್ಗದಲ್ಲಿ ಪಿ.ಟಿ. ಪರಮೇಶ್ವರ ನಾಯ್ಕ್ ಕಾರಿನಲ್ಲಿ ಹೋಗುವಾಗ ಧೂಳು ಬಂದ ಕಾರಣ ರೈತರು ಆಕ್ಷೇಪಿಸಿದರು.

    ರೈತರ ಆಕ್ಷೇಪಣೆಯಿಂದ ಕೋಪಗೊಂಡ ಪರಮೇಶ್ವರ ನಾಯ್ಕ್ ಅವರ ಪುತ್ರ ಹಾಗೂ ಬೆಂಬಲಿಗರು ಕಾರಿನಿಂದ ಇಳಿದು ಬಂದು ಹಲ್ಲೆ ಮಾಡಿದ್ದಾರೆ. ತಕ್ಷಣವೇ ಕಾರಿನಿಂದ ಇಳಿದು ಬಂದ ಪರಮೇಶ್ಚರ ನಾಯ್ಕ ಗಲಾಟೆಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಈ ದೃಶ್ಯವನ್ನು ಸ್ಥಳದಲ್ಲಿದ್ದ ವ್ಯಕ್ತಿಯೊಬ್ಬರು ಸೆರೆ ಹಿಡಿದಿದ್ದಾರೆ.

    ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ರೈತರು ಹರಪನಹಳ್ಳಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಜಿಲ್ಲಾಸ್ಪತ್ರೆಗೆ ಸೇರಿಸಿದ್ದು, ಈಗ ಚೇತರಿಸಿಕೊಂಡಿದ್ದಾರೆ. ಈ ಸಂಬಂಧ ಹರಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

  • ಮಧ್ಯರಾತ್ರಿ ಬಳ್ಳಾರಿ ಜಿಲ್ಲೆಗೆ ಸೇರಿದ ಹರಪನಹಳ್ಳಿ ತಾಲೂಕು

    ಮಧ್ಯರಾತ್ರಿ ಬಳ್ಳಾರಿ ಜಿಲ್ಲೆಗೆ ಸೇರಿದ ಹರಪನಹಳ್ಳಿ ತಾಲೂಕು

    ದಾವಣಗೆರೆ: ಬಹುವರ್ಷಗಳ ಕಾಲ ನನೆಗುದಿಗೆ ಬಿದ್ದಿದ್ದ ದಾವಣಗೆರೆ ಜಿಲ್ಲೆಯ ಹರಪನಹಳ್ಳಿ ತಾಲೂಕು ಕೊನೆಗೂ ಬಳ್ಳಾರಿ ಜಿಲ್ಲೆಗೆ ಅಧಿಕೃತವಾಗಿ ಸೇರ್ಪಡೆಯಾಗಿದೆ.

    ಜಿಲ್ಲಾ ಪಂಚಾಯಿತಿ ಅಧಿಸೂಚನೆ ಹಾಗೂ ಗೆಜೆಟ್ ನೋಟೀಫಿಕೇಷನ್ ತಲುಪಿದ್ದು, ಮಧ್ಯರಾತ್ರಿ 12 ಗಂಟೆಗೆ ಹರಪನಹಳ್ಳಿ ತಾಲೂಕು ಅಧಿಕೃತವಾಗಿ ಬಳ್ಳಾರಿ ಜಿಲ್ಲೆಗೆ ಸೇರ್ಪಡೆಯಾಯ್ತು. 1997ರಿಂದ ದಾವಣಗೆರೆ ಜಿಲ್ಲೆಯ ಭಾಗವಾಗಿದ್ದ ಹರಪನಹಳ್ಳಿ ತಾಲೂಕು ಬಳ್ಳಾರಿ ಜಿಲ್ಲೆಗೆ ಸೇರ್ಪಡೆಯಾಗಬೇಕೆಂದು ಹೋರಾಟ ಸಹ ನಡೆಯುತ್ತಿತ್ತು.

    ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಹರಪನಹಳ್ಳಿ ತಾಲೂಕನ್ನು ಬಳ್ಳಾರಿ ಜಿಲ್ಲೆಗೆ ಸೇರ್ಪಡೆ ಮಾಡಿ ಆದೇಶ ಮಾಡಿತ್ತು. ಕೊನೆಗೂ ತಾಲೂಕು ಆಡಳಿತದ ಅಧಿಕೃತ ದಾಖಲೆ ಸಂಪೂರ್ಣ ಬಳ್ಳಾರಿಗೆ ಹಸ್ತಾಂತರ ಮಾಡಲಾಗಿದೆ ಎಂದು ದಾವಣಗೆರೆ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಮಾಹಿತಿ ನೀಡಿದ್ದಾರೆ.

    ಪ್ರೊ. ನಂಜುಡಪ್ಪ ವರದಿ ಪ್ರಕಾರ ಹರಪನಹಳ್ಳಿ ರಾಜ್ಯದ 3ನೇ ಅತಿ ಹಿಂದುಳಿದ ತಾಲೂಕು. ಬಳ್ಳಾರಿ ಜಿಲ್ಲೆಗೆ ಸೇರ್ಪಡೆಯಾಗಿದ್ದರಿಂದ 371(ಜೆ) ವಿಶೇಷ ಸ್ಥಾನಮಾನ ಈ ತಾಲೂಕಿನ ಜನರಿಗೆ ಲಭ್ಯವಾಗಲಿದೆ. ಈ ಮೊದಲು 1957 ರಿಂದ 1996ರ ವರೆಗೆ ಹರಪನಹಳ್ಳಿ ತಾಲೂಕು ಬಳ್ಳಾರಿ ಜಿಲ್ಲೆಯ ಅವಿಭಾಜ್ಯ ಅಂಗವಾಗಿತ್ತು. 1997ರಲ್ಲಿ ಮುಖ್ಯಮಂತ್ರಿಯಾಗಿದ್ದ ಜೆ.ಎಚ್.ಪಟೇಲ್ ರು ಬಳ್ಳಾರಿಯಿಂದ ಹರಪನಹಳ್ಳಿಯನ್ನು ಬೇರ್ಪಡಿಸಿ ದಾವಣಗೆರೆಗೆ ಸೇರಿಸಿದ್ದರು. ಇಂದು ಮತ್ತೆ ಹರಪ್ಪನಹಳ್ಳಿ ಬಳ್ಳಾರಿ ಜಿಲ್ಲೆಯ ಮಡಿಲು ಸೇರಿದೆ.

     

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕಾಲೇಜಿನಲ್ಲಿ ಜಾಗವಿಲ್ಲದೆ ಶಾಮಿಯಾನದಡಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು

    ಕಾಲೇಜಿನಲ್ಲಿ ಜಾಗವಿಲ್ಲದೆ ಶಾಮಿಯಾನದಡಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು

    ದಾವಣಗೆರೆ: ಜಿಲ್ಲೆಯ ಹರಪ್ಪನಹಳ್ಳಿಯಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಕೂರಲು ಜಾಗವಿಲ್ಲದೇ ಶಾಮಿಯಾನ ಖುರ್ಚಿ ಬಾಡಿಗೆಗೆ ತಂದು ಪರೀಕ್ಷೆ ಬರೆಸಲಾಗಿದೆ.

    ಹರಪ್ಪನಹಳ್ಳಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬಿಎ, ಬಿಕಾಂ, ಬಿಎಸ್ಸಿ, ಬಿಬಿಎಂ ವಿದ್ಯಾರ್ಥಿಗಳು ಶಾಮಿಯಾನದಡಿ ಪರೀಕ್ಷೆ ಬರೆಯುತ್ತಿದ್ದಾರೆ. ಕಾಲೇಜಿನಲ್ಲಿ ಎಲ್ಲಾ ವಿಭಾಗ ಸೇರಿ 1,394 ವಿದ್ಯಾರ್ಥಿಗಳಿದ್ದಾರೆ. ಆದರೆ ಕಾಲೇಜಿನಲ್ಲಿ ಕೇವಲ ಏಳು ಕೊಠಡಿಗಳಿವೆ. ಇದರಿಂದಾಗಿ ಪರೀಕ್ಷೆ ಬರೆಯಲು ಜಾಗವಿಲ್ಲದಂತಾಗಿದೆ. ಇದನ್ನು ಮನಗಂಡ ಉಪನ್ಯಾಸಕರು ಪ್ರತಿನಿತ್ಯ ಊಟದ ಟೇಬಲ್, ಚೇರ್, ಶಾಮಿಯಾನಕ್ಕೆ 7,660 ರೂಪಾಯಿ ಬಾಡಿಗೆ ಕೊಟ್ಟು ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಸುತ್ತಿದ್ದಾರೆ.

    ವಿದ್ಯಾರ್ಥಿಗಳು ಇಷ್ಟೆಲ್ಲಾ ಕಷ್ಟ ಪಡುತ್ತಿದ್ದರು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಇದರ ಬಗ್ಗೆ ಕ್ರಮ ಕೈಗೊಳ್ಳುತ್ತಿಲ್ಲ. ಎಷ್ಟೇ ಸಾರಿ ಕಾಲೇಜಿನ ಪರಿಸ್ಥಿತಿ ಕುರಿತು ತಿಳಿಸಿದರು ನಮಗೆ ಸ್ಪಂದಿಸುತ್ತಿಲ್ಲ ಎಂದು ಕಾಲೇಜಿನ ಉಪನ್ಯಾಸಕರು ಆರೋಪಿಸಿದ್ದಾರೆ.

    ಈ ಮಧ್ಯೆ ವಿದ್ಯಾರ್ಥಿಗಳು ಮಾತ್ರ ಶಾಮಿಯಾನದಡಿ ಕುಳಿತು ಮಳೆ ಬಂದ್ರೆ ಏನು ಗತಿ ಎನ್ನುವ ಭಯದಲ್ಲಿ ಪ್ರತಿನಿತ್ಯ ಪರೀಕ್ಷೆ ಬರೆಯುವಂತಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ದಾರಿ ಕಾಣದ ಗ್ರಾಮಕ್ಕೆ ಬೇಕಿದೆ ಬಸ್ ಸಂಚಾರಕ್ಕೆ ವ್ಯವಸ್ಥೆ

    ದಾರಿ ಕಾಣದ ಗ್ರಾಮಕ್ಕೆ ಬೇಕಿದೆ ಬಸ್ ಸಂಚಾರಕ್ಕೆ ವ್ಯವಸ್ಥೆ

    -ಪ್ರತಿನಿತ್ಯ 4 ಕಿ.ಮೀ. ಶಾಲೆಗೆ ನಡೆದುಕೊಂಡ ಹೋಗುವ ಮಕ್ಕಳು

    ದಾವಣಗೆರೆ: ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ನಾಗತಿಕಟ್ಟೆ ಗ್ರಾಮಕ್ಕೆ ಸರಿಯಾದ ರಸ್ತೆಗಳಿಲ್ಲ. ಗ್ರಾಮದಲ್ಲಿ 200ಕ್ಕೂ ಹೆಚ್ಚು ಮನೆಗಳಿದ್ದು, ಇಲ್ಲಿನ ಜನರು ರಸ್ತೆಗೆ ಟಾರ್ ನೋಡೇ ಇಲ್ಲವಂತೆ. ಗ್ರಾಮದಿಂದ ಬೇರೆಡೆಗೆ ಹೋಗಬೇಕು ಎಂದರೆ ಸಾಕು ಗ್ರಾಮಸ್ಥರು ಸರ್ಕಸ್ ಮಾಡಲೇಬೇಕು. ಯಾಕಂದ್ರೆ ಈ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳು ಸಂಪೂರ್ಣ ಗುಂಡಿಮಯವಾಗಿವೆ.

    ಗ್ರಾಮಸ್ಥರಿಗೆ ತುರ್ತು ಚಿಕಿತ್ಸೆಗೆ ಬೇಕು ಅಂದ್ರೂ ಅಂಬುಲೆನ್ಸ್ ಕೂಡ ಈ ರಸ್ತೆಯಲ್ಲಿ ಬರೋಕಾಗಲ್ಲ. ಅಂಬುಲೆನ್ಸ್ ಬಂದರೂ ಗ್ರಾಮದಿಂದ ಮೂರು ಕಿಲೋ ಮೀಟರ್ ದೂರದಲ್ಲಿ ನಿಲ್ಲುತ್ತದೆ. ರೋಗಿಗಳನ್ನು ಅಲ್ಲಿಗೆ ಕರೆದೊಯ್ದು ನಂತರ ಅಂಬುಲೆನ್ಸ್ ನಲ್ಲಿ ಕಳಿಸಬೇಕಾದ ಪರಿಸ್ಥಿತಿ. ಶಾಲಾ ಮಕ್ಕಳ ಕಷ್ಟ ದೇವರೇ ಬಲ್ಲ. ಗ್ರಾಮದಲ್ಲಿ ನಾಲ್ಕನೇ ತರಗತಿಯವೆರೆಗೆ ಮಾತ್ರ ಶಾಲೆ ಇದ್ದು, ನಂತರದ ವಿದ್ಯಾಭ್ಯಾಸಕ್ಕೆ ನಾಲ್ಕು ಕಿಲೋಮೀಟರ್ ದೂರ ಸಾಗಬೇಕು.

    ಕೆಲ ಪೋಷಕರು ಮಕ್ಕಳ ಪರಿಸ್ಥಿತಿಯನ್ನು ನೋಡಲಾಗದೆ, ಇತ್ತ ವಾಹನಗಳಲ್ಲಿ ಶಾಲೆಗೆ ಬಿಡಲು ಆರ್ಥಿಕ ಶಕ್ತಿ ಇಲ್ಲದೆ ಶಾಲೆಯನ್ನು ಬಿಡಿಸಿದ್ದಾರೆ. ಅಲ್ಲದೇ ಗುಂಡಿಮಯವಾಗಿರುವ ರಸ್ತೆಗಳನ್ನು ನೋಡಿ ಕೆ.ಎಸ್.ಆರ್.ಟಿ.ಸಿ ಬಸ್ ಓಡಿಸುತ್ತಿಲ್ಲ. ಜನಪ್ರತಿನಿಧಿಗಳಿಗೆ ಸಾಕಷ್ಟು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ನೊಂದ ಗ್ರಾಮಸ್ಥರು ದಾರಿ ಕಾಣದೆ ರಸ್ತೆ ಹಾಗು ಬಸ್ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಡಿ ಎಂದು ಬೆಳಕು ಕಾರ್ಯಕ್ರಮಕ್ಕೆ ಬಂದಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

    https://www.youtube.com/watch?v=t2aj8411S3E