ಡೆಹ್ರಾಡೂನ್: ಹರಿದ್ವಾರದ (Haridwar) ಮಾನಸ ದೇವಿ ದೇವಸ್ಥಾನದಲ್ಲಿ (Mansa Devi Temple) ಕಾಲ್ತುಳಿತ (Stampede) ಸಂಭವಿಸಿದ ಪರಿಣಾಮ 6 ಮಂದಿ ಭಕ್ತರು ಸಾವನ್ನಪ್ಪಿದ್ದಾರೆ.
ದೇವಸ್ಥಾನಕ್ಕೆ ಹೋಗುವ ಮೆಟ್ಟಿಲುಗಳ ಮೇಲೆ ಭಾರೀ ಜನಸಂದಣಿಯಿಂದ ಕಾಲ್ತುಳಿತ ಉಂಟಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಘಟನೆಯಲ್ಲಿ ಹಲವು ಭಕ್ತರು ಗಾಯಗೊಂಡಿದ್ದಾರೆ. ಇನ್ನೂ ಹಲವರು ಅಸ್ವಸ್ಥಗೊಂಡಿದ್ದಾರೆ.
#WATCH | Haridwar, Uttarakhand | The injured are being rushed to the hospital following a stampede at the Mansa Devi temple. 6 people died and several others got injured in the stampede. pic.twitter.com/ScUaYyq2Z3
ಡೆಹ್ರಾಡೂನ್ (ಹರಿದ್ವಾರ): ಪ್ರಪಂಚದಲ್ಲಿ ಕೆಟ್ಟ ಮಕ್ಕಳಿರುತ್ತಾರೆ, ಆದ್ರೆ ಕೆಟ್ಟ ತಾಯಿ ಇರುವುದಿಲ್ಲ ಎಂಬ ಮಾತಿಗೆ ಅಪ ಚಾರವೆಂಬಂತೆ, ಉತ್ತರಾಖಂಡದ ಹರಿದ್ವಾರದಲ್ಲಿ (Haridwar) ಬಿಜೆಪಿ ನಾಯಕಿ (BJP Women Leader) ನಡೆದುಕೊಂಡಿದ್ದಾಳೆ. ತನ್ನ ಬಾಯ್‌ಫ್ರೆಂಡ್ ಹಾಗೂ ಆತನ ಸ್ನೇಹಿತನಿಂದಲೇ ಸ್ವಂತ ಅಪ್ರಾಪ್ತ ಮಗಳ ಮೇಲೆಯೇ ಅತ್ಯಾಚಾರ ಮಾಡಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಹರಿದ್ವಾರದ ಬಿಜೆಪಿ ಮಹಿಳಾ ಮೋರ್ಚಾದ (BJP Mahila Morcha) ಮಾಜಿ ಅಧ್ಯಕ್ಷೆ ಅನಾಮಿಕಾ ಶರ್ಮಾ ತನ್ನ 13 ವರ್ಷದ ಮಗಳ ಮೇಲೆಯೇ ಅತ್ಯಾಚಾರ ಮಾಡಿಸಿದ್ದಾಳೆ. ಘಟನೆ ಸಂಬಂಧ ಅನಾಮಿಕಾ, ಆಕೆಯ ಬಾಯ್‌ಫ್ರೆಂಡ್ ಸುಮಿತ್ ಪತ್ವಾಲ್ ಮತ್ತು ಆತನ ಸ್ನೇಹಿತ ಶುಭಂನನ್ನ ಪೊಲೀಸರು (Haridwar Police) ಬಂಧಿಸಿದ್ದಾರೆ. ಪ್ರಕರಣ ಬೆಳಕಿಗೆ ಬಂದ ಬಳಿಕ ಬಿಜೆಪಿ ಆಕೆಯನ್ನ ಪಕ್ಷದಿಂದಲೇ ವಜಾ ಮಾಡಿದೆ. ಇದನ್ನೂ ಓದಿ: ಮೆಟ್ರೋ ನಿಲ್ದಾಣದ ಕೆಳಗೆ ಪೋಷಕರೊಟ್ಟಿಗೆ ಮಲಗಿದ್ದ 3 ವರ್ಷದ ಬಾಲಕಿ ಮೇಲೆ ಅತ್ಯಾಚಾರ
ಏನಿದು ಘಟನೆ?
ಅನಾಮಿಕಾ ಶರ್ಮಾ 2024ರ ವರೆಗೆ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆಯಾಗಿದ್ದಳು. ನಂತರ ಪಕ್ಷದ ಸದಸ್ಯೆ ಆಗಿ ಮುಂದುವರಿದಿದ್ದಳು. ಆಕೆ ತನ್ನ ಗಂಡನಿಂದ ಬೇರ್ಪಟ್ಟಿದ್ದಳು. ಆದ್ರೆ ಮಗಳು ಅಪ್ಪನೊಂದಿಗೆ ಉಳಿದುಕೊಂಡಿದ್ದಳು. ಅಪರೂಪಕ್ಕೆ ತಾಯಿ ಬಳಿ ಬರುತ್ತಿದ್ದಳು. ಈ ವೇಳೆ ಅನಾಮಿಕಾ, ಸುಮಿತ್‌ನ ಪ್ರೇಮ ಸಂಪಾದಿಸಿ ಆತನ ಹೋಟೆಲ್‌ನಲ್ಲಿಯೇ ಉಳಿದುಕೊಂಡಿದ್ದಳು. ಜನವರಿಯಿಂದ ಮಾರ್ಚ್ ವೇಳೆ ಹರಿದ್ವಾರ, ಬೃಂದಾವನ ಮತ್ತು ಆಗ್ರಾದಲ್ಲಿ ಹಲವು ಬಾರಿ ಮಗಳ ಮೇಲೆ ಸುಮಿತ್ ಹಾಗೂ ಆತನ ಸ್ನೇಹಿತ ಶುಭಂನಿಂದ ಅತ್ಯಾಚಾರ ಮಾಡಿಸಿದ್ದಳು. ಈ ವಿಷಯವನ್ನ ತಂದೆಗೆ ಹೇಳದಂತೆ ಬೆದರಿಕೆಯೂ ಹಾಕಿದ್ದಳು ಎಂದು ವರದಿಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: Stampede Case | ಸಿಎಂ ಸೂಚನೆ ಬೆನ್ನಲ್ಲೇ ನಾಲ್ವರು ಅರೆಸ್ಟ್, ಉಳಿದವರು ಎಸ್ಕೇಪ್
ಉತ್ತರಾಖಂಡ: ಚಾಲಕನ ನಿಯಂತ್ರಣ ತಪ್ಪಿ ಮದುವೆ ಬಸ್ 200 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದು 30 ಮಂದಿ ಮೃತಪಟ್ಟಿರುವ ಆಘಾತಕಾರಿ ಘಟನೆ ಉತ್ತರಾಖಂಡದ (Uttarakhand) ಪೌರಿ (Pauri) ಜಿಲ್ಲೆಯಲ್ಲಿ ನಡೆದಿದೆ.
ಶುಕ್ರವಾರ ರಾತ್ರಿ ಸುಮಾರು 8 ಗಂಟೆ ಘಟನೆ ನಡೆದಿದ್ದು, ಘಟನೆ ನಡೆದಾಗ ಬಸ್ಸಿನಲ್ಲಿ 50-55 ಮಂದಿ ಪ್ರಯಾಣಿಸುತ್ತಿದ್ದರು ಎಂದು ವರದಿಯಾಗಿದೆ. ಹರಿದ್ವಾರ (Haridwar) ಜಿಲ್ಲೆಯ ಲಾಲ್ಧಾಂಗ್‌ನಿಂದ ಪೌರಿಯ ಬಿರೋನ್‌ಖಾಲ್‌ಗೆ ಪ್ರಯಾಣಿಸುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ವಧುವಿನ ಮನೆಯಿಂದ ಎರಡು ಕಿ.ಮೀ. ದೂರದಲ್ಲಿ ಅಪಘಾತ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ: ಇಂಡಿಗೋ ಏರ್‌ಲೈನ್ಸ್‌ನಲ್ಲಿ ಸರ್ವರ್ ಸಮಸ್ಯೆ; ಚೆಕ್-ಇನ್, ಫ್ಲೈಟ್ ಕಾರ್ಯಾಚರಣೆಯಲ್ಲಿ ತೊಂದರೆ
ವಿಚಾರ ತಿಳಿದು ಸ್ಥಳಕ್ಕೆ ಸ್ಥಳೀಯ ಪೊಲೀಸರು ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪಡೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೃತದೇಹಗಳನ್ನು ಹೊರತೆಗೆಯುತ್ತಿರುವ ಅಧಿಕಾರಿಗಳು ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಂಭವವಿದೆ ಎಂದು ಹೇಳಿದ್ದಾರೆ. ಸ್ಥಳೀಯ ಶಾಸಕಿ ರಿತು ಖಂಡೂರಿ ಸ್ಥಳಕ್ಕೆ ಆಗಮಿಸಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಭೇಟಿ ಮಾಡಿದರು. ಇದನ್ನೂ ಓದಿ: ಮಂಜಿನ ನಗರಿ ಮಡಿಕೇರಿಯಲ್ಲಿ ಮಕ್ಕಳ ದಸರಾ ಸಂಭ್ರಮ
ಬೆಂಗಳೂರು: ಉತ್ತರ ಭಾರತದಲ್ಲಿ (North India) ನಡೆಯುವ ಗಂಗಾರತಿ (Gangarathi) ಮಾದರಿಯಲ್ಲಿಯೇ ರಾಜ್ಯದಲ್ಲಿ ಕಾವೇರಿ ಆರತಿ ನಡೆಸಲು ತಯಾರಿ ಆರಂಭವಾಗಿದೆ. ಸಂಬಂಧ ಅಧ್ಯಯನ ನಡೆಸಲು ಸಚಿವ ಚಲುವರಾಯಸ್ವಾಮಿ (Cheluvarayaswamy) ನೇತೃತ್ವದ ನಿಯೋಗ ಹರಿದ್ವಾರ ಮತ್ತು ವಾರಾಣಾಸಿಗೆ ತೆರೆಳಿದೆ. ನಿನ್ನೆ ಹರಿದ್ವಾರಕ್ಕೆ ತೆರಳಿರುವ ನಿಯೋಗ ವಿಶೇಷ ಗಂಗಾರತಿಯಲ್ಲಿ ಭಾಗಿಯಾಗಿ ಪೂಜೆ ನಡೆಸಿತು ಮತ್ತು ಆರತಿ ಮೇಲುಸ್ತುವಾರಿ ನೋಡಿಕೊಳ್ಳುವ ಹಿಂದೂ ಸಭಾ ಜೊತೆ ಸಭೆ ನಡೆಸಿದ್ದು, ಹಲವು ಅನುಮಾನಗಳಿಗೆ ಸ್ಪಷ್ಟನೆ ಪಡೆದುಕೊಂಡಿದೆ.
ಗಂಗೆಯಷ್ಟೇ ಪವಿತ್ರ ನದಿ ಕಾವೇರಿ (Kaveri) ಎಂಬ ನಿಟ್ಟಿನಲ್ಲಿ ಕಾವೇರಿ ಆರತಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಹಾಗಾಗಿ ಸಚಿವ ಚಲುವರಾಯಸ್ವಾಮಿ ನೇತೃತ್ವದ ನಿಯೋಗ ಕಾವೇರಿ ಆರತಿಯ ರೂಪುರೇಷೆ ತಯಾರಿಸಲಿದೆ. ಇದಕ್ಕಾಗಿ ನಿಯೋಗ ಹರಿದ್ವಾರ ಹಾಗೂ ವಾರಣಾಸಿಯಲ್ಲಿ ಅಧ್ಯಯನ ನಡೆಸಿ ವರದಿ ತಯಾರಿಸಲಿದ್ದು, ಇದರ ಭಾಗವಾಗಿ ಮೊದಲು ಹರಿದ್ವಾರಕ್ಕೆ ಭೇಟಿ ನೀಡಿತು. ಹರ್ ಕೀ ಪೌಡಿ ಘಾಟ್‌ನಲ್ಲಿ ನಡೆಯುವ ಆರತಿ ಕಾರ್ಯಕ್ರಮದಲ್ಲಿ ನಿಯೋಗ ಭಾಗಿಯಾಯಿತು. ಸಚಿವ ಚಲುವರಾಯಸ್ವಾಮಿ ಆದಿಯಾಗಿ ಎಲ್ಲ ಸದಸ್ಯರು ವಿಶೇಷ ಆರತಿ ಮಾಡಿ, ಧಾರ್ಮಿಕ ವಿಧಿ ವಿಧಾನಗಳನ್ನು ಪೂರೈಸಿದರು. ಬಳಿಕ ಆರತಿ ನಡೆಯುವ ರೀತಿ ರಿವಾಜುಗಳನ್ನು ಪರಿಶೀಲಿಸಿದರು.ಇದನ್ನೂ ಓದಿ: ‘ದಳಪತಿ 69’ ಅಸಲಿ ಸ್ಟೋರಿ ರಿವೀಲ್- ಕಮಲ್ ಹಾಸನ್‌ಗೆ ಹೇಳಿದ್ದ ಕಥೆಯಲ್ಲಿ ವಿಜಯ್?
ಬಳಿಕ ಆರತಿ ಮೇಲುಸ್ತುವಾರಿ ನೋಡಿಕೊಳ್ಳುವ ಹಿಂದೂ ಸಭಾ ಆಡಳಿತ ಸಮಿತಿ ಜೊತೆಗೆ ಮಾತುಕತೆ ನಡೆಸಿದ ನಿಯೋಗ ಕರ್ನಾಟಕ ಸರ್ಕಾರದ ಪ್ರಸ್ತಾವನೆ ಬಗ್ಗೆ ತಿಳಿಸಿದರು. ಇದಕ್ಕೆ ಖುಷಿ ವ್ಯಕ್ತಪಡಿಸಿದ ಆಡಳಿತ ಸಮಿತಿ ಕಾರ್ಯದರ್ಶಿ ತನ್ಮಯ ವಶಿಷ್ಠ, ಗಂಗಾರತಿ ರೀತಿಯಲ್ಲಿ ಕಾವೇರಿ ಆರತಿ ಮಾಡುವುದು ಖುಷಿಯ ಸಂಗತಿ ಎಂದರು.
ಗಂಗಾರತಿ ಬಳಿಕ ಮಾತನಾಡಿದ ಸಚಿವ ಚಲುವರಾಯಸ್ವಾಮಿ, ಗಂಗಾನದಿಯಂತೆ ಕಾವೇರಿ ನದಿ ಕೂಡಾ ಜೀವ ನದಿಯಾಗಿದೆ. ಅದಕ್ಕಾಗಿ ಇಲ್ಲಿಯೂ ಆರತಿ ಮಾಡಲು ನಿರ್ಧರಿಸಿದ್ದು, ಡಿಸಿಎಂ ಶಿ.ಕೆ ಶಿವಕುಮಾರ್ ನಿರ್ದೇಶನದ ಮೇರೆಗೆ ಈ ಬಗ್ಗೆ ನಮ್ಮ ಅಧಿಕಾರಿಗಳು ಜನಪ್ರತಿನಿಧಿಗಳೊಂದಿಗೆ ಅಧ್ಯಯನಕ್ಕೆ ಬಂದಿದ್ದೇವೆ. ಸಾಧ್ಯವಾದಷ್ಟು ಬೇಗ ಆರತಿ ಶುರು ಮಾಡಬೇಕು ಅಂದುಕೊಂಡಿದ್ದು, ದಸರಾದೊಳಗೆ ನಾವು ಶುರು ಮಾಡುವ ಪ್ರಯತ್ನ ಮಾಡಲಾಗುತ್ತಿದೆ. ಒಮ್ಮೆ ಆರತಿಯನ್ನು ಶುರು ಮಾಡಿದರೆ ನಿಲ್ಲಿಸುವ ಮಾತಿಲ್ಲ ಎಂದಿದ್ದಾರೆ.
ಇನ್ನು ಸಮಿತಿಯೂ ಶನಿವಾರ ವಾರಣಾಸಿಗೆ ತೆರಳಲಿದ್ದು, ಅಲ್ಲೂ ಗಂಗಾರತಿಯನ್ನು ನೋಡಿಕೊಂಡು ಬೆಂಗಳೂರಿಗೆ (Bengaluru) ವಾಪಸ್ ಬರಲಿದ್ದಾರೆ. ಬಳಿಕ ಈ ಬಗ್ಗೆ ವಿಸ್ತೃತ ವರದಿಯನ್ನು ಸರ್ಕಾರಕ್ಕೆ ನೀಡಲಿದೆ.ಇದನ್ನೂ ಓದಿ: ಬೆಳ್ತಂಗಡಿ: ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ
ನವದೆಹಲಿ: ಸರ್ಕಾರ ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ (WFI) ಮುಖ್ಯಸ್ಥ ಹಾಗೂ ಬಿಜೆಪಿ (BJP) ಸಂಸದ ಬ್ರಿಜ್ ಭೂಷಣ್ ಸಿಂಗ್ (Brij Bhushan Sharan Singh) ವಿರುದ್ಧ ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿರುವ ಹಿನ್ನೆಲೆ ಬೇಸತ್ತ ಕುಸ್ತಿಪಟುಗಳು (Wrestlers) ತಮ್ಮ ಪದಕಗಳನ್ನು (Medals) ಗಂಗಾ ನದಿಯಲ್ಲಿ (Ganga River) ವಿಸರ್ಜಿಸಲು ಮುಂದಾಗಿದ್ದರು. ಕುಸ್ತಿಪಟುಗಳ ಈ ನಡೆಯನ್ನು ಸದ್ಯ ತಡೆಯಲಾಗಿದ್ದು, ಸಿಂಗ್ ಬಂಧನಕ್ಕೆ 5 ದಿನಗಳ ಕಾಲಾವಕಾಶ ನೀಡಲು ಒಪ್ಪಿಕೊಂಡಿದ್ದಾರೆ.
ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪವನ್ನು ಹೊರಿಸಿ ಕಳೆದ ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳು ತಮ್ಮ ಪದಕಗಳನ್ನು ಸಂಜೆ 6 ಗಂಟೆಗೆ ಹರಿದ್ವಾರದ ಬಳಿ ಗಂಗಾ ನದಿಯಲ್ಲಿ ಎಸೆಯುವುದಾಗಿ ಪ್ರಕಟಿಸಿದ್ದರು. ಗಂಗೆಯಲ್ಲಿ ಪದಕಗಳನ್ನು ವಿಸರ್ಜಿಸಲು ಮುಂದಾದಾಗ ರೈತ ಹೋರಾಟಗಾರ ನರೇಶ್ ಟಿಕಾಯತ್ ಕುಸ್ತಿಪಟುಗಳ ಮೆಡಲ್‌ಗಳನ್ನು ಪಡೆದುಕೊಂಡಿದ್ದಾರೆ.
#WATCH | Naresh Tikait arrives in Haridwar where wrestlers have gathered to immerse their medals in river Ganga as a mark of protest against WFI chief and BJP MP Brij Bhushan Sharan Singh over sexual harassment allegations. He took medals from the wrestlers and sought five-day… pic.twitter.com/tDPHRXJq0T
ಬಳಿಕ ಕುಸ್ತಿಪಟುಗಳೊಂದಿಗೆ ಮಾತುಕತೆ ನಡೆಸಿದ ನರೇಶ್ ಟಿಕಾಯತ್ ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದರೆ. ಮುಂದಿನ 5 ದಿನಗಳೊಳಗೆ ಬ್ರಿಜ್ ಭೂಷಣ್ ಬಂಧನವಾಗದಿದ್ದರೆ ಮತ್ತೆ ಹರಿದ್ವಾರಕ್ಕೆ ಬಂದು ಪದಕಗಳನ್ನು ವಿಸರ್ಜಿಸುವುದಾಗಿ ಕುಸ್ತಿಪಟುಗಳು ಹೇಳಿದ್ದಾರೆ. ಇದನ್ನೂ ಓದಿ: ಬಿಜೆಪಿ Vs ಡಿಎಂಕೆ – ಬಿಜೆಪಿ ಕಾರ್ಯಕರ್ತ ಜಡೇಜಾ ಆಟದಿಂದ ಚೆನ್ನೈಗೆ ಜಯ ಎಂದ ಅಣ್ಣಾಮಲೈ
ಡೆಹ್ರಾಡೂನ್: ಸಾಧಿಸುವ ಛಲವೊಂದಿದ್ದರೆ ಸಾಕು ಅದಕ್ಕೆ ವಯಸ್ಸಿನ ಅಂತರ ಅಡ್ಡಿ ಬರುವುದಿಲ್ಲ. ಎನ್ನುವುದಕ್ಕೆ ಅನೇಕ ನಿದರ್ಶನಗಳು ಸಾಕ್ಷಿಯಾಗಿವೆ. ಹಾಗೆಯೇ ಉತ್ತರಾಖಂಡದ ಹರಿದ್ವಾರದಲ್ಲಿ 75 ವರ್ಷದ ವೃದ್ಧೆಯೊಬ್ಬರು ಸೇತುವೆಯ ಮೇಲಿನಿಂದ ಗಂಗಾನದಿಗೆ ಧುಮುಕಿ ಈಜುವ ಮೂಲಕ ಜನರನ್ನು ನಿಬ್ಬೆರಗಾಗಿಸಿದ್ದಾರೆ.
अम्मा की छलांग .. 😳😳
हरकी पैड़ी के पुल से गंगा नदी में छलांग लगाने वाली बुजुर्ग महिला बुजर्ग महिला पुल से गंगा में छलांग लगाकर आराम से तैरकर किनारे जाती हुई विडियो में दिख रही है। बुजुर्ग महिला की उम्र 70 साल के करीब की बताई जा रही है। 😳😳#haridwarpic.twitter.com/IY9bDp7DAb
ಹರಿದ್ವಾರದಲ್ಲಿ ಗಂಗಾನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆ ಮೇಲಿನಿಂದ ವೃದ್ಧೆಯೊಬ್ಬರು ತುಂಬಿ ಹರಿಯುತ್ತಿರುವ ಆಳವಾದ ಗಂಗಾನದಿಗೆ ಹಾರಿ ಈಜಿದ್ದಾರೆ. ತಾನು ಸೇತುವೆಗೆ ಧುಮುಕಲು ಹೊರಟಾಗ ಯಾರೂ ತನ್ನನ್ನು ಹಿಂಬಾಲಿಸದಂತೆ ನೋಡಿಕೊಂದ್ದಾರೆ. ಆದರೂ ಸೇತುವೆ ಮೇಲಿದ್ದವರೆ ಯಾರೋ ಈ ಘಟನೆಯನ್ನು ಸೆರೆ ಹಿಡಿದು, ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದು ವೀಡಿಯೋ ವೈರಲ್ ಆಗಿದೆ.
ಡೆಹ್ರಾಡೂನ್: ಮಗ ಮತ್ತು ಸೊಸೆ ಮೊಮ್ಮಗುವನ್ನು ನೀಡಲು ನಿರಾಕರಿಸಿದ್ದರಿಂದ ತಾನು ಮಾನಸಿಕ ಸಂಕಟವನ್ನು ಅನುಭವಿಸುತ್ತಿದ್ದು, ಇದಕ್ಕೆ ಪರಿಹಾರ ನೀಡುವಂತೆ ಮಹಿಳೆಯೊಬ್ಬಳು ಇದೇ ಮೊದಲ ಬಾರಿಗೆ ಹರಿದ್ವಾರದ ಸಿವಿಲ್ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.
ಸದ್ಯ ಈ ವಿಚಾರವಾಗಿ ಮಗ ಮತ್ತು ಸೊಸೆ ವಿರುದ್ಧ 5 ಕೋಟಿ ರೂ.ಗಳ ಮೊಕದ್ದಮೆ ಹೂಡಿ, ವಕೀಲ ಎ.ಕೆ. ಶ್ರೀವಾಸ್ತವ್ ಮೂಲಕ ಮಹಿಳೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ತನ್ನ ಮಗನ ವಿದ್ಯಾಭ್ಯಾಸಕ್ಕೆ ಸಾಕಷ್ಟು ಹಣ ಖರ್ಚು ಮಾಡಿ ಉತ್ತಮ ಪೈಲಟ್ ಮಾಡಿದ್ದೇನೆ. 2016ರಲ್ಲಿ ಭಾರೀ ಖರ್ಚು ಮಾಡಿ ತನ್ನ ಮಗನ ಮದುವೆಯನ್ನು ಅದ್ದೂರಿಯಾಗಿ ಮಾಡಿದ್ದೇನೆ. ಅಲ್ಲದೇ ನವದಂಪತಿಯನ್ನು ಹನಿಮೂನ್‍ಗೆ ನನ್ನ ಸ್ವಂತ ಹಣದಿಂದ ಥೈಲ್ಯಾಂಡ್‍ಗೆ ಕಳುಹಿಸಿದ್ದೇನೆ ಎಂದು ಮಹಿಳೆ ತನ್ನ ಅರ್ಜಿಯಲ್ಲಿ ತಿಳಿಸಿದ್ದಾರೆ.
ಮದುವೆಯ ನಂತರ ನನ್ನ ಸೊಸೆ ಮಗನನ್ನು ಹೈದರಾಬಾದ್‍ಗೆ ಶಿಫ್ಟ್ ಆಗೋಣಾ ಎಂದು ಒತ್ತಾಯಿಸಿದಳು. ಅಂದಿನಿಂದ ಮಗ, ಸೊಸೆ ನಮ್ಮೊಂದಿಗೆ ಮಾತನಾಡುತ್ತಿಲ್ಲ. ಅಲ್ಲದೇ ನನ್ನ ಸೊಸೆಯ ಕುಟುಂಬದ ಜವಾಬ್ದಾರಿಯನ್ನು ನನ್ನ ಮಗನ ಸಂಪೂರ್ಣ ಸಂಬಳದಲ್ಲಿ ನಡೆಸಲಾಗುತ್ತಿದೆ. ಪ್ರತಿ ನಿರ್ಧಾರ ತೆಗೆದುಕೊಳ್ಳಬೇಕಾದರೂ ಮಗ ಹೆಂಡತಿಯ ಮಾತನ್ನು ಕೇಳುತ್ತಾನೆ ಮತ್ತು ಆಕೆಯನ್ನೇ ಬೆಂಬಲಿಸುತ್ತಾನೆ ಎಂದು ಮೊಕದ್ದಮೆಯಲ್ಲಿ ಆರೋಪಿಸಲಾಗಿದೆ. ಇದನ್ನೂ ಓದಿ: ಅಂಧ ವ್ಯಕ್ತಿ ಮಗಳ ಕನಸ್ಸನ್ನು ಕೇಳಿ ಮೋದಿ ಭಾವುಕ – ವೀಡಿಯೋ ವೈರಲ್
ಬೆಂಗಳೂರು: ಬಳೆಪೇಟೆಯಲ್ಲಿರುವ ಅತೀ ಪುರಾತನ ದೇವಾಲಯ ಶ್ರೀ ಕಾಶಿ ವಿಶ್ವೇಶ್ವರಸ್ವಾಮಿ ದೇವಾಲಯ ಆವರಣದಲ್ಲಿ ಹರಿದ್ವಾರದಿಂದ ತಂದ ಗಂಗಾಜಲವನ್ನು 2 ಸಾವಿರ ಶಿವ ದೇವಾಲಯ ಅಭಿಷೇಕಕ್ಕೆ ಮತ್ತು ಲಕ್ಷಾಂತರ ಭಕ್ತರಿಗೆ ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಇದೇ ವೇಳೆ ಮಹರ್ಷಿ ಆನಂದ್ ಗುರೂಜಿಯವರು ಮಾತನಾಡಿ, ಸಕಲ ಸಂಕಷ್ಟಗಳ ನಿವಾರಣೆ ಶಿವಾನುಗ್ರಹ ಮುಖ್ಯ. ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಹರಿದ್ವಾರದಿಂದ ಗಂಗಾಜಲ ತರಿಸಿ, ಭಕ್ತರಿಗೆ ನೀಡಲಾಗುತ್ತಿದೆ. ಗಂಗಾ ಸ್ನಾನ ತುಂಗಾಪಾನ ಎನ್ನುವಂತೆ ಜನರು ಕಾಶಿಗೆ ಭೇಟಿ ನೀಡಬೇಕು. ರಾಜ್ಯದಲ್ಲಿ ಜಲಕ್ಷಾಮ ಬರದಿರಲಿ ಎಂದು ಗಂಗಾಪೂಜೆ, ಗಂಗಾರತಿ ಪೂಜೆ ನೆರವೆರಿಸಲಾಗಿದೆ. ಸರ್ವೇ ಜನಃ ಸುಖಿನೋ ಭವಂತು ಮಹಾಶಿವರಾತ್ರಿ ದಿನ ಶಿವನ ಧ್ಯಾನ ಮಾಡಿ ನಿಮ್ಮ ಸಂಕಷ್ಟಗಳು ನಿವಾರಣೆಯಾಗಲಿದೆ ಎಂದು ಹೇಳಿದರು. ಇದನ್ನೂ ಓದಿ: ಶಾಂತಿಯುತವಾಗಿ ಬಿಕ್ಕಟ್ಟು ಪರಿಹರಿಸಿಕೊಳ್ಳಿ: ಉಕ್ರೇನ್, ರಷ್ಯಾಗೆ ತಾಲಿಬಾನ್ ಸಲಹೆ
ಮಾಲೂರು ಕೃಷ್ಣಯ್ಯ ಶೆಟ್ಟಿರವರು ಮಾತನಾಡಿ, ನಾನು ಮುಜರಾಯಿ ಸಚಿವನಾಗಿದ್ದಾಗ 2008ರಿಂದ ರಾಜ್ಯದ ಜನತೆಗೆ ಕೊಟ್ಟ ಮಾತಿನ ಪ್ರಕಾರ ಪ್ರತಿ ವರ್ಷದಂತೆ ಈ ವರ್ಷವೂ ಸಹ ಕೂಡ ಹರಿದ್ವಾರದಿಂದ ಪವಿತ್ರ ಗಂಗಾಜಲವನ್ನು ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ರಾಜ್ಯದ 30 ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಗಂಗಾಜಲ ನೀಡಲಾಗುತ್ತದೆ. ಮುಜರಾಯಿ ಇಲಾಖೆಯವರು ಜಿಲ್ಲಾಧಿಕಾರಿಗಳಿಂದ ಗಂಗಾಜಲವನ್ನು ಸ್ವೀಕರಿಸಿ ಜಿಲ್ಲೆಯ ದೇವಾಲಯಗಳಿಗೆ ತಲುಪಿಸುತ್ತಾರೆ. ರಾಜ್ಯದ ಪುರಾತನ ಶಿವನ ದೇವಾಲಯಗಳಿಗೆ ಸರಿ ಸುಮಾರು 3,000 ದೇವಾಲಯಗಳಲ್ಲಿ ಶಿವನ ಮೂರ್ತಿಗೆ ಅಭಿಷೇಕ ಮತ್ತು ತೀರ್ಥ ವಿನಿಯೋಗಕ್ಕಾಗಿ ಎಲ್ಲಾ ಭಕ್ತಾದಿಗಳಿಗೆ ಪವಿತ್ರ ಗಂಗಾಜಲ ತಲುಪಿಸುವ ಉದ್ದೇಶದಿಂದ ಎಲ್ಲಾ ಜಿಲ್ಲೆಗಳಿಗೆ ಸುಮಾರು 28 ವಾಹನಗಳಲ್ಲಿ ಸರಬರಾಜು ಮಾಡಲಾಗುತ್ತದೆ. ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿರುವ ಶಿವಾಲಯಗಳಿಗೆ ಹಾಗೂ ಖಾಸಗಿ ಒಡೆತನದಲ್ಲಿರುವ ಶಿವನ ದೇವಸ್ಥಾನಗಳಿಗೆ ಸರಬರಾಜು ಮಾಡಲಾಗುತ್ತಿದೆ. ಹಿಂದೂವಾಗಿ ಹುಟ್ಟಿ, ಹಿಂದೂಗಳ ಸೇವೆ ಮಾಡುವ ಪುಣ್ಯ ನನ್ನದು ಎಂದರು.
ನವದೆಹಲಿ: ಭಾರತದ ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ರಾವತ್ ಅವರ ಪುತ್ರಿಯರಾದ ಕೃತಿಕಾ ಮತ್ತು ತಾರಿಣಿ ಅವರು ಇಂದು ಬೆಳಿಗ್ಗೆ ದೆಹಲಿ ಕಂಟೋನ್ಮೆಂಟ್‍ನ ಬ್ರಾರ್ ಸ್ಕ್ವೇರ್ ಸ್ಮಶಾನದಲ್ಲಿ ತಮ್ಮ ಪೋಷಕರ ಚಿತಾಭಸ್ಮವನ್ನು ಸ್ವೀಕರಿಸಿದರು.
ಶುಕ್ರವಾರ ಅಂತ್ಯಕ್ರಿಯೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಬಿಪಿನ್ ರಾವತ್ ಅವರ ಸೋದರ ಮಾವ ಯಶ್ ವರ್ಧನ್ ಸಿಂಗ್ ಅವರು, ನಾವು ಮುಂಜಾನೆ ಕಲಶದಲ್ಲಿ ಚಿತಾಭಸ್ಮವನ್ನು ತೆಗೆದುಕೊಂಡು ಹರಿದ್ವಾರಕ್ಕೆ ಹೋಗಿ ಪವಿತ್ರ ಗಂಗೆಯಲ್ಲಿ ಬಿಡುತ್ತೇವೆ ಮತ್ತು ಕೆಲವು ಧಾರ್ಮಿಕ ಕ್ರಿಯೆಗಳನ್ನು ನಡೆಸುವುದಾಗಿ ಹೇಳಿದ್ದಾರೆ.
Delhi: Kritika and Tarini, the daughters of #CDSGeneralBipinRawat and Madhulika Rawat collected the ashes of their parents from Brar Square crematorium, Delhi Cantonment this morning.
ಡಿಸೆಂಬರ್ 8 ರಂದು ತಮಿಳುನಾಡಿನ ಕೂನೂರಿನಲ್ಲಿ ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್ ಸೇರಿ 13 ಮಂದಿ ದುರ್ಮರಣಕ್ಕೀಡಾದರು. ಜನರಲ್ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ರಾವತ್ ಅವರನ್ನು ಶುಕ್ರವಾರ ದೆಹಲಿ ಕಂಟೋನ್ಮೆಂಟ್‍ನ ಬ್ರಾರ್ ಸ್ಕ್ವೇರ್ ಸ್ಮಶಾನದಲ್ಲಿ ಸಕಲ ಸೇನಾ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಯಿತು.
ಡೆಹ್ರಾಡೂನ್: ಕೋವಿಡ್ 2ನೇ ಅಲೆ ನಡುವೆ ಹರಿದ್ವಾರದಲ್ಲಿ ಕುಂಭಮೇಳಕ್ಕೆ ಜನಸಾಗರವೇ ಹರಿದು ಬರುತ್ತಿದೆ. ಜನರ ನಿಯಂತ್ರಣಕ್ಕೆ ಪೊಲೀಸರು ಹರಸಾಹಸ ಪಡುವ ಸ್ಥಿತಿ ನಿರ್ಮಾಣವಾಗಿದೆ.
ಪವಿತ್ರ ಸ್ನಾನಕ್ಕಾಗಿ ಸಾವಿರಾರು ಮಂದಿ ಹರಿದ್ವಾರಕ್ಕೆ ಬಂದಿದ್ದಾರೆ. ಈ ವೇಳೆ ಕೊರೊನಾ ನಿಯಮವಾದ ಸಾಮಾಜಿಕ ಅಂತರವನ್ನು ಗಾಳಿಗೆ ತೂರಿದ್ದಾರೆ. ಕುಂಭಸ್ನಾನಕ್ಕಾಗಿ ಬಂದ ಭಕ್ತರಲ್ಲಿ ಸಾಮಾಜಿಕ ಅಂತರ ಕಾಪಾಡಿ ಎಂದು ಹೇಳುವುದೂ ಕಷ್ಟ. ಅವರಿಗೆ ದಂಡ ವಿಧಿಸಲೂ ಸಾಧ್ಯವಾಗುತ್ತಿಲ್ಲ ಎಂದು ಪೊಲೀಸರು ಹೇಳಿದ್ದಾರೆ.
ನಾವು ಜನರಲ್ಲಿ ಕೊರೊನಾ ನಿಯಮ ಪಾಲಿಸುವಂತೆ ಕೇಳಿಕೊಳ್ಳುತ್ತಿದ್ದೇವೆ. ಆದರೆ ಜನರ ಗುಂಪಿನಲ್ಲಿ ನಿಯಮ ಉಲ್ಲಂಘನೆ ಮಾಡಿದವರಿಗೆ ದಂಡ ವಿಧಿಸಲು ಸಾಧ್ಯವಾಗುತ್ತಿಲ್ಲ. ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವುದು ಸಾಧ್ಯವಾಗುತ್ತಿಲ್ಲ ಎಂದು ಹರಿದ್ವಾರ ಕುಂಭ ಮೇಳದಲ್ಲಿ ಕರ್ತವ್ಯ ನಿರತರಾಗಿರುವ ಪೊಲೀಸ್ ಇನ್ಸ್‍ಪೆಕ್ಟರ್ ಜನರಲ್ ಸಂಜಯ್ ಗುಂಜ್ಯಾಲ್ ಹೇಳಿದ್ದಾರೆ.
Uttarakhand: Sadhus participate in the second ‘shahi snan’ of Maha Kumbh at Har Ki Pauri ghat in Haridwar pic.twitter.com/VMjd4h5Gcp
ಹರಿದ್ವಾರದ ಹರ್ ಕೀ ಪೌರಿಯಲ್ಲಿ ಗಂಗಾಸ್ನಾನಕ್ಕಾಗಿ ಸಾವಿರಾರು ಮಂದಿ ಬಂದು ಸೇರಿದ್ದಾರೆ. ಇಂದು ಬೆಳಗ್ಗೆ 7 ಗಂಟೆಯವರೆಗೆ ಮಾತ್ರ ಸಾಮಾನ್ಯ ಜನರಿಗೆ ಇಲ್ಲಿ ಪ್ರವೇಶವಿದ್ದು, ನಂತರ ಸಾಧುಗಳಿಗೆ ಕಾಯ್ದಿರಿಸಲಾಯಿತು.