Tag: ಹರಿಯಾಣ ವಿಧಾನಸಭಾ ಚುನಾವಣೆ

  • ಸತ್ಯಕ್ಕೆ ಜಯವಾಗಿದೆ: ಚೊಚ್ಚಲ ಚುನಾವಣೆಯಲ್ಲಿ ಜಯಭೇರಿ ಭಾರಿಸಿದ ಫೋಗಟ್ ಮಾತು

    ಸತ್ಯಕ್ಕೆ ಜಯವಾಗಿದೆ: ಚೊಚ್ಚಲ ಚುನಾವಣೆಯಲ್ಲಿ ಜಯಭೇರಿ ಭಾರಿಸಿದ ಫೋಗಟ್ ಮಾತು

    ನವದೆಹಲಿ: ʻಸತ್ಯಕ್ಕೆ ಜಯವಾಗಿದೆ’ ಎಂದು ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ತನ್ನ ಮೊದಲ ಗೆಲುವು ಸಾಧಿಸಿದ ಬಳಿಕ ವಿನೇಶ್ ಫೋಗಟ್ (Vinesh Phogat) ಪ್ರತಿಕ್ರಿಯೆ ನೀಡಿದರು.

    ಹರಿಯಾಣ (Hariyana) ಚುನಾವಣೆಯ ಜೂಲಾನಾ (Julana) ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಕುಸ್ತಿಪಟು ವಿನೇಶ್ ಫೋಗಟ್ 5 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಜಯಗಳಿಸಿದರು. ಒಲಿಂಪಿಕ್ಸ್‌ನಲ್ಲಿ ಅನರ್ಹಗೊಳ್ಳುವ ಮೂಲಕ ಸೋಲನ್ನು ಅನುಭವಿಸಿದ್ದರು. ಇದಾದ ಬಳಿಕ ಸೆ.4 ರಂದು ಕಾಂಗ್ರೆಸ್‌ಗೆ ಸೇರಿಕೊಂಡ ವಿನೇಶ್ ಇಂದು ಚುನಾವಣಾ ಕುಸ್ತಿಯಲ್ಲಿ ತನ್ನ ಚೊಚ್ಚಲ ಗೆಲುವನ್ನು ಸಾಧಿಸಿದ್ದಾರೆ.ಇದನ್ನೂ ಓದಿ: ಸೂರ್ಯನಿಗೆ ಬೇಕಿದೆ 39 ರನ್‌ – ವಿಶ್ವದಾಖಲೆ ಬರೆಯುವ ಸನಿಹದಲ್ಲಿ ಮಿಸ್ಟರ್‌ 360

    ಚೊಚ್ಚಲ ಗೆಲುವು ಕಂಡ ವಿನೇಶ್ ಮಾತನಾಡಿ, ನಾನು ಹೊಸ ಇನ್ನಿಂಗ್ಸ್ ಪ್ರಾರಂಭಿಸುತ್ತಿದ್ದೇನೆ. ನಾನು ನನ್ನ ಕ್ರೀಡಾ ಜೀವನದಲ್ಲಿ ಅನುಭವಿಸಿದ ನೋವನ್ನು ಬೇರೆ ಕ್ರೀಡಾಪಟುಗಳು ಅನುಭವಿಸುವುದು ಬೇಡ ಎಂದು ಬಯಸುತ್ತೇನೆ ಎಂದರು.

    ನನ್ನ ರಾಜಕೀಯ ಪ್ರವೇಶಕ್ಕೆ ಅನುವು ಮಾಡಿಕೊಟ್ಟ ಕಾಂಗ್ರೆಸ್ (Congress) ಪಕ್ಷಕ್ಕೆ ನಾನು ಧನ್ಯವಾದ ಅರ್ಪಿಸುತ್ತೇನೆ. ನಮ್ಮ ಸಮಯ ಸರಿಯಿಲ್ಲದೇ ಇರುವಾಗ ಮಾತ್ರ ನಮ್ಮ ಜೊತೆ ಯಾರು ನಿಂತಿದ್ದಾರೆ ಎಂದು ಗೊತ್ತಾಗುತ್ತದೆ. ಬಿಜೆಪಿ (BJP) ಪಕ್ಷವನ್ನು ಹೊರತುಪಡಿಸಿ ಇತರ ಎಲ್ಲಾ ಪಕ್ಷಗಳು ನನ್ನ ನೋವನ್ನು ಹಾಗೂ ನನ್ನ ಕಣ್ಣೀರನ್ನು ಅರ್ಥಮಾಡಿಕೊಂಡಿದ್ದವು ಎಂದರು.

    ವಿನೇಶ್ ಫೋಗಟ್ ಗೆಲುವು:
    ಅ.5 ರಂದು ನಡೆದ ಹರಿಯಾಣ ಚುನಾವಣೆಯ ಮತ ಎಣಿಕೆ ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಪ್ರಾರಂಭವಾಯಿತು.

    ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿನ ಇತ್ತೀಚಿನ ಟ್ರೆಂಡ್‌ಗಳ ಪ್ರಕಾರ, ಹರಿಯಾಣ ವಿಧಾನಸಭೆಯಲ್ಲಿ ಬಿಜೆಪಿ ಬಹುಮತದ ಅಂಕವನ್ನು ದಾಟಿ 48 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿತ್ತು. ಆದರೆ ಕಾಂಗ್ರೆಸ್ 37 ಸ್ಥಾನಗಳಲ್ಲಿದ್ದು, 11 ಸ್ಥಾನಗಳಿಂದ ಹಿನ್ನಡೆಯಲ್ಲಿತ್ತು. ಆದರೂ ಕೂಡ ಜೂಲಾನಾ ಕ್ಷೇತ್ರದಿಂದ ವಿನೇಶ್ ಫೋಗಟ್ ಗೆಲುವನ್ನು ಸಾಧಿಸಿದ್ದಾರೆ. ಹರಿಯಾಣದಲ್ಲಿ ಬಿಜೆಪಿಯು ಮೂರನೇ ಅವಧಿಗೆ ಸಿದ್ಧವಾಗಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಪುನರಾಗಮನವನ್ನು ಊಹಿಸಿದ ಎಕ್ಸಿಟ್ ಪೋಲ್‌ನ ಫಲಿತಾಂಶಗಳು ಸುಳ್ಳಾಗಿವೆ.

    ಬಿಜೆಪಿ ಅಭ್ಯರ್ಥಿ ಯೋಗೇಶ್ ಕುಮಾರ್ ಮತ್ತು ವಿನೇಶ್ ಫೋಗಟ್ ಮಧ್ಯೆ ನೇರಾನೇರ ಪೈಪೋಟಿ ಇತ್ತು. ಆರಂಭದ ಮತ ಎಣಿಕೆಯಲ್ಲಿ ವಿನೇಶ್ ಫೋಗಟ್ ಅವರಿಗೆ ಮುನ್ನಡೆ ಸಿಕ್ಕಿದರೆ ನಂತರ ಯೋಗೇಶ್ ಕುಮಾರ್ ಅವರಿಗೆ ಮುನ್ನಡೆ ಸಿಕ್ಕಿತ್ತು. ಅಂತಿಮ ಸುತ್ತುಗಳ ಮತ ಎಣಿಕೆಯಲ್ಲಿ ಕಾಂಗ್ರೆಸ್‌ಗೆ ಹೆಚ್ಚು ಮತಗಳು ಬಿದ್ದ ಪರಿಣಾಮ ವಿನೇಶ್ ಫೋಗಟ್ ಮೊದಲ ಚುನಾವಣೆಯಲ್ಲಿ ಗೆದ್ದು ವಿಧಾನಸಭೆ ಪ್ರವೇಶಿಸಿದ್ದಾರೆ.ಇದನ್ನೂ ಓದಿ: ಕಿರಿಯ ವೈದ್ಯರ ಪ್ರತಿಭಟನೆಗೆ ಬೆಂಬಲ – ಆರ್‌ಜಿ ಕರ್ ಆಸ್ಪತ್ರೆಯ 45ಕ್ಕೂ ಹೆಚ್ಚು ಹಿರಿಯ ವೈದ್ಯರಿಂದ ರಾಜೀನಾಮೆ

  • ಹರಿಯಾಣದಲ್ಲಿ ಬಿಜೆಪಿ ಧೂಳಿಪಟ ಆಗುತ್ತೆ ಅಂತ ವಿಪಕ್ಷಗಳು ಬೊಬ್ಬೆ ಹಾಕ್ತಿದ್ವು – ವಿಜಯೇಂದ್ರ

    ಹರಿಯಾಣದಲ್ಲಿ ಬಿಜೆಪಿ ಧೂಳಿಪಟ ಆಗುತ್ತೆ ಅಂತ ವಿಪಕ್ಷಗಳು ಬೊಬ್ಬೆ ಹಾಕ್ತಿದ್ವು – ವಿಜಯೇಂದ್ರ

    – ಮೋದಿ ಅವರ ಕೆಲಸ, ವರ್ಚಸ್ಸು ಗೆಲುವು ತರಲಿದೆ ಎಂದ ಆರ್.ಅಶೋಕ್

    ಬೆಂಗಳೂರು: ಹರಿಯಾಣದಲ್ಲಿ (Hariyana) ಬಿಜೆಪಿ (BJP) ಧೂಳಿಪಟ ಆಗುತ್ತದೆ ಎಂದು ವಿಪಕ್ಷಗಳು ಬೊಬ್ಬೆ ಹಾಕುತ್ತೀವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ಹೇಳಿದರು.

    ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹರಿಯಾಣದಲ್ಲಿ ಬಿಜೆಪಿ ಧೂಳಿಪಟ ಆಗುತ್ತದೆ ಎಂದು ವಿಪಕ್ಷಗಳು ಬೊಬ್ಬೆ ಹಾಕುತ್ತಿದ್ದವು. ಆದರೆ ಬಿಜೆಪಿ ಸತತವಾಗಿ ಮೂರನೇ ಬಾರಿಗೆ ಅಧಿಕಾರದತ್ತ ದಾಪುಗಾಲು ಇಡುತ್ತಿದೆ. 3ನೇ ಬಾರಿ ಬಿಜೆಪಿ ಅಧಿಕಾರದತ್ತ ಬರ್ತಿದೆ ಎನ್ನುವುದು ಸಂತೋಷದ ವಿಷಯವಾಗಿದೆ ಎಂದರು.

    ಚುನಾವಣಾ ಫಲಿತಾಂಶ ವಿಚಾರವಾಗಿ ವಿಪಕ್ಷ ನಾಯಕ ಆರ್.ಅಶೋಕ್ (R Ashok) ಮಾತನಾಡಿ, ಚುನಾವಣಾ ಫಲಿತಾಂಶ ಬಿಜೆಪಿ ಪರವಾಗಿ ಬರುತ್ತಿದೆ ಎನ್ನುವದು ಮೇಲ್ನೋಟಕ್ಕೆ ಕಂಡು ಬರ್ತಿದೆ. ಇದೇ ಮುಂದುವರೆದರೆ ಬಿಜೆಪಿ ಬಹುಮತ ಶತಸಿದ್ದ. ಸಮೀಕ್ಷೆ ಫಲಿತಾಂಶಕ್ಕೆ ಅಜಗಜಾಂತರ ವ್ಯತ್ಯಾಸ ಇದೆ. ಬಿಜೆಪಿ ಎರಡೂ ರಾಜ್ಯಗಳಲ್ಲಿ ಸರ್ಕಾರ ರಚನೆ ಮಾಡಬಹುದು. ಮೋದಿ ಅವರ ಕೆಲಸ, ವರ್ಚಸ್ಸು ಈ ಗೆಲುವು ತರಲಿದೆ. ಇದೇ ಟ್ರೆಂಡ್ ಇದ್ದರೆ ಬಿಜೆಪಿ ಗೆಲ್ಲಲಿದೆ ಎಂದು ಹೇಳಿದರು.ಇದನ್ನೂ ಓದಿ: Jammu Kashmir Results | ಅಧಿಕಾರದತ್ತ ಎನ್‌ಸಿ, ಕಾಂಗ್ರೆಸ್‌ ಮೈತ್ರಿ – ಬಿಜೆಪಿಗೆ ಹಿನ್ನಡೆ

    ಜಾತಿ ಜನಗಣತಿ ವಿಚಾರ:
    ವಿಜಯೇಂದ್ರ ಮಾತನಾಡಿ, ಇದು ನನ್ನ ವೈಯಕ್ತಿಕ ಅಭಿಪ್ರಾಯ ವರದಿ ಅವೈಜ್ಞಾನಿಕವಾಗಿ ಇದೆ. ಕಾಂಗ್ರೆಸ್ (Congress) ನಾಯಕರು ಸಹ ಇದೇ ಹೇಳಿದ್ದಾರೆ. ಬಿಜೆಪಿ ಸ್ಪಷ್ಟ ನಿಲುವನ್ನು ಹೊಂದಿದೆ. ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ, ಹಿಂದುಳಿದ ದಲಿತ ವರ್ಗಕ್ಕೂ ಸಾಮಾಜಿಕ ನ್ಯಾಯ ಸಿಗಬೇಕು. ಈಗ ಸಿದ್ದರಾಮಯ್ಯ ಅವರ ಕುರ್ಚಿ ಅಲ್ಲಾಡುತ್ತಿದೆ. ಅದಕ್ಕಾಗಿ ಈಗ ಜಾತಿಗಣತಿ ವಿಚಾರ ಮುನ್ನೆಲೆಗೆ ಬಂದಿದೆ. ಆದರೆ ಇದು ಅವೈಜ್ಞಾನಿಕ ಎಂದು ಶಾಮನೂರು ಹೇಳಿದ್ದಾರೆ. ಡಿಕೆಶಿ ಕೂಡ ಒಕ್ಕಲಿಗ ಸಮುದಾಯಕ್ಕೆ ಅನ್ಯಾಯ ಆಗುತ್ತದೆ ಎಂದಿದ್ದಾರೆ. ಖರ್ಗೆ ಹೇಳಿದ್ದನ್ನು ಎಲ್ಲರೂ ಗಮನಿಸಿದ್ದಾರೆ. ರಾಜ್ಯ ಸರ್ಕಾರಕ್ಕೆ ಜಾತಿಗಣತಿ ಮಾಡೋಕೆ ಅವಕಾಶ ಇಲ್ಲ. ವರದಿ ಜಾರಿಗೆ ಯಾಕೆ ಇಷ್ಟೊಂದು ಆತುರ? ಈ ಮೊದಲು ನೀವೇ ಅಧಿಕಾರದಲ್ಲಿ ಇದ್ದಾಗ ಯಾಕೆ ಬಿಡುಗಡೆ ಮಾಡಿಲ್ಲ. ಖರ್ಚಿಯಲ್ಲಿ ಸಿದ್ದರಾಮಯ್ಯ ಜಾಸ್ತಿ ದಿನ ಇರುವುದಿಲ್ಲ. ಆದರೆ ಅವರ ಮೊಂಡುತನ ಜಾಸ್ತಿ ದಿನ ನಡೆಯಲ್ಲ. ಹೀಗಾಗಿ ಇದೊಂದು ಬ್ರಹ್ಮಾಸ್ತ್ರ ಪ್ರಯೋಗಕ್ಕೆ ಮುಂದಾಗಿದ್ದಾರೆ ಎಂದರು.

    ಸಿಎಂ ಕುರ್ಚಿ ವಿಚಾರ:
    ಆರ್.ಅಶೋಕ್ ಮಾತನಾಡಿ, ಮುಡಾ ಹಗರಣ ಮುಚ್ಚಿ ಹಾಕಲು ಸಿದ್ದರಾಮಯ್ಯ (CM Siddaramaiah) ಇಲ್ಲಸಲ್ಲದ ಕಸರತ್ತು ನಡೆಸುತ್ತಿದ್ದಾರೆ. ಬಿಜೆಪಿಯವರನ್ನು ಟೀಕಿಸುವ ಮೊದಲು ನಿಮ್ಮ ಪಕ್ಷದಲ್ಲಿ ಏನಾಗುತ್ತಿದೆ ಎಂದು ನೋಡಿ. ನಿಮ್ಮ ಪಕ್ಷದಲ್ಲಿ ಸಿಎಂ ಆಗಲು ರನ್ನಿಂಗ್ ರೇಸ್ ನಡೆಯುತ್ತಿದೆ. ನಿತ್ಯ ಪ್ರತ್ಯೇಕ ಸಭೆಗಳನ್ನು ಮಾಡುತ್ತಿದ್ದಾರೆ. ಪರಸ್ಪರ ಸಭೆ ನಡೆಸಿ, ತಿಂಡಿ ಭಾಗ್ಯ ಮಾಡಿಕೊಂಡಿದ್ದಾರೆ. ಸಿಎಂ ಇಳಿಸಲು ಸಚಿವರು ಬ್ರೇಕ್‌ಫಾಸ್ಟ್ ಮೀಟಿಂಗ್, ಡಿನ್ನರ್ ಮೀಟಿಂಗ್‌ಗಳಲ್ಲಿ ಮುಳುಗಿದ್ದಾರೆ ಎಂದು ವ್ಯಂಗ್ಯವಾಡಿದರು.

    ನಿಮ್ಮ ಪಕ್ಷದಲ್ಲೇ ಒಡಕಿದೆ, ಅದನ್ನು ಸರಿ ಮಾಡದೇ ಬಿಜೆಪಿ, ಜೆಡಿಎಸ್ (JDS) ಮೇಲೆ ವಕ್ರದೃಷ್ಟಿ ಬೀರುತ್ತಿದ್ದಾರೆ. ಸಿಎಂ ಎಷ್ಟು ದಿನ ಅಧಿಕಾರದಲ್ಲಿ ಇರುತ್ತಾರೆ? ಸಿಎಂ ಇಳಿತಾರೆ ಎಂದು ನಿಮ್ಮ ಪಕ್ಷದಲ್ಲೇ ದೊಡ್ಡ ಗಾಳಿ ಸುದ್ದಿ ಹಬ್ಬಿದೆ. ಮಂತ್ರಿಗಳು ಜಿಲ್ಲಾ ಪ್ರವಾಸ ಮಾಡುತ್ತಿಲ್ಲ. ಈ ಸರ್ಕಾರ ತೊಲಗಲಿ ಎಂದು ಜನ ಕೂಡ ಬಯಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.ಇದನ್ನೂ ಓದಿ: ಚುನಾವಣಾ ಫಲಿತಾಂಶದಲ್ಲಿ ಹಿನ್ನಡೆ – ಆಯೋಗದ ವೆಬ್‌ಸೈಟ್‌ ದೂರಿದ ಕಾಂಗ್ರೆಸ್‌

  • ಹರಿಯಾಣದ ಎಲ್ಲ 90 ಕ್ಷೇತ್ರಗಳಲ್ಲೂ ಸ್ಪರ್ಧಿಸಲಿದೆ ಎಎಪಿ

    ಹರಿಯಾಣದ ಎಲ್ಲ 90 ಕ್ಷೇತ್ರಗಳಲ್ಲೂ ಸ್ಪರ್ಧಿಸಲಿದೆ ಎಎಪಿ

    ನವದೆಹಲಿ: ಅ.5ರಂದು ನಡೆಯಲಿರುವ ಹರಿಯಾಣ ವಿಧಾನಸಭಾ ಚುನಾವಣೆಗೆ (Haryana Assembly Election) ಆಮ್ ಆದ್ಮಿ ಪಕ್ಷ (Aam Aadmi Party) ಗುರುವಾರ ಮೂರು ಅಭ್ಯರ್ಥಿಗಳ ಏಳನೇ ಪಟ್ಟಿಯನ್ನು ಬಿಡುಗಡೆಗೊಳಿಸಿದೆ.

    ಬಿಡುಗಡೆಗೊಳಿಸಿದ ಪಟ್ಟಿಯ ಮೂಲಕ ರಾಜ್ಯದ ಎಲ್ಲಾ 90 ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ಘೋಷಿಸಿದೆ.ಇದನ್ನೂ ಓದಿ:ಆತ್ಮಹತ್ಯೆಗೂ ಮುನ್ನ ಮಗಳಿಗೆ ಕರೆ ಮಾಡಿ ಮಲೈಕಾ ತಂದೆ ಹೇಳಿದ್ದೇನು?

    ಆದರ್ಶಪಾಲ್ ಗುಜ್ಜರ್, ರಣಬೀರ್ ಸಿಂಗ್ ಲೋಹನ್, ರಬಿಯಾ ಕಿದ್ವಾಯಿ ಮೂವರನ್ನು ಒಳಗೊಂಡಿರುವ ಏಳನೇ ಪಟ್ಟಿಯನ್ನು ಇಂದು ಬಿಡುಗಡೆಗೊಳಿಸಿದೆ.

    ಅರವಿಂದ್ ಕೇಜ್ರಿವಾಲ್ (Arvind Kejrival) ನೇತೃತ್ವದ ಪಕ್ಷವು ಕಾಂಗ್ರೆಸ್ (Congress) ಮೈತ್ರಿ ವಿಫಲವಾದ ಬಳಿಕ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಕಾಂಗ್ರೆಸ್ ಜೊತೆ ಸೀಟು ಹಂಚಿಕೊಳ್ಳುವ ಮಾತನ್ನು ಈ ಮೂಲಕ ಕೈಬಿಟ್ಟಿದೆ ಎಂಬುವುದನ್ನು ಆಮ್ ಆದ್ಮಿ ಪಕ್ಷ ಸೂಚಿಸಿದೆ.ಇದನ್ನೂ ಓದಿ: ಅರ್ಜುನ ಅವಧೂತ ಗುರೂಜಿಯನ್ನು ಭೇಟಿಯಾದ ಧ್ರುವ ಸರ್ಜಾ

  • Haryana Poll | ಬಿಜೆಪಿಯಿಂದ 21 ಅಭ್ಯರ್ಥಿಗಳ 2ನೇ ಪಟ್ಟಿ ರಿಲೀಸ್‌ – ವಿನೇಶ್‌ ವಿರುದ್ಧ ಪ್ರಬಲ ಅಭ್ಯರ್ಥಿ ಅಖಾಡಕ್ಕೆ

    Haryana Poll | ಬಿಜೆಪಿಯಿಂದ 21 ಅಭ್ಯರ್ಥಿಗಳ 2ನೇ ಪಟ್ಟಿ ರಿಲೀಸ್‌ – ವಿನೇಶ್‌ ವಿರುದ್ಧ ಪ್ರಬಲ ಅಭ್ಯರ್ಥಿ ಅಖಾಡಕ್ಕೆ

    ಚಂಡೀಗಢ: ಹರಿಯಾಣ ವಿಧಾನಸಭೆ ಚುನಾವಣೆಗೆ (Haryana Elections) ಬಿಜೆಪಿಯು 21 ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದೆ.

    90 ಸದಸ್ಯ ಬಲದ ಹರಿಯಾಣ ವಿಧಾನಸಭೆಗೆ ಬಿಜೆಪಿ ಈವರೆಗೆ 87 ಅಭ್ಯರ್ಥಿಗಳನ್ನು (BJP Candidates) ಘೋಷಣೆ ಮಾಡಿದೆ. ಇತ್ತೀಚೆಗಷ್ಟೇ ಕಾಂಗ್ರೆಸ್‌ ಸೇರ್ಪಡೆಯಾದ ಕುಸ್ತಿಪಟು ವಿನೇಶ್‌ ಫೋಗಟ್‌ (Vinesh Phogat) ವಿರುದ್ಧ ಜುಲಾನಾ ಕ್ಷೇತ್ರದಿಂದ ಕ್ಯಾಪ್ಟನ್‌ ಯೋಗೇಶ್‌ ಬೈರಾಗಿ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ಇದನ್ನೂ ಓದಿ: Hit-and-Run Case | ಬಾರ್‌ನಿಂದ ಬಂದು ಹಲವು ಕಾರುಗಳಿಗೆ ಡಿಕ್ಕಿ – ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷನ ಪುತ್ರ ಪರಾರಿ

    67 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ, ಪಕ್ಷವು ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ (Nayab Singh Saini) ಅವರನ್ನು ಕರ್ನಾಲ್‌ನಿಂದ ಲಾಡ್ವಾ ಸ್ಥಾನಕ್ಕೆ ಕಣಕ್ಕಿಳಿಸಿದೆ. ಸೈನಿ ಅವರು 2019ರಿಂದ 2024ರ ಅವಧಿಯಲ್ಲಿ ಸಂಸದರಾಗಿ ಸೇವೆ ಸಲ್ಲಿಸಿದ್ದಾರೆ. ಅಲ್ಲದೇ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆಗಿರುವ ಓಂ ಪ್ರಕಾಶ್ ಧನಕರ್ ಅವರನ್ನು ಬದ್ಲಿ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ. ಜೊತೆಗೆ ಮಾಜಿ ರಾಜ್ಯ ಸಚಿವ ಅನಿಲ್ ವಿಜ್ ಅವರು ತಮ್ಮ ಸಾಂಪ್ರದಾಯಿಕ ಭದ್ರಕೋಟೆಯಾದ ಅಂಬಾಲಾ ಕ್ಯಾಂಟ್‌ನಿಂದ ಸ್ಪರ್ಧಿಸಲು ಸಿದ್ಧರಾಗಿದ್ದಾರೆ. ಇದನ್ನೂ ಓದಿ: ವಯನಾಡು ದುರಂತದ ಬಳಿಕ ಸರ್ಕಾರ ಅಲರ್ಟ್- ಕಾಫಿನಾಡಲ್ಲಿ 40 ಅನಧಿಕೃತ ಹೋಂ ಸ್ಟೇ, ರೆಸಾರ್ಟ್‌ಗಳಿಗೆ ನೋಟಿಸ್

    ಈ ಬಾರಿ ಅಧಿಕಾರದ ಗದ್ದುಗೆ ಹಿಡಿಯಲು ಪಣ ತೊಟ್ಟಿರುವ ಬಿಜೆಪಿ ಪಕ್ಷದ ನಿಷ್ಠಾವಂತರಿಗೆ ಟಿಕೆಟ್‌ ನೀಡಿದೆ. ಈ ಹಿಂದೆ ಜನನಾಯಕ್ ಜನತಾ ಪಾರ್ಟಿ (ಜೆಜೆಪಿ)ಯಲ್ಲಿದ್ದ ದೇವೆಂದರ್ ಸಿಂಗ್ ಸದ್ಯ ಬಿಜೆಪಿಯಿಂದ ಬಬ್ಲಿ ಕ್ಷೇತ್ರದ ಅಭ್ಯರ್ಥಿಯಾಗಿದ್ದಾರೆ. ಹರಿಯಾಣದ ಮಾಜಿ ಸಿಎಂ ಬನ್ಸಿ ಲಾಲ್ ಅವರ ಮೊಮ್ಮಗಳು ಶ್ರುತಿ ಚೌಧರಿ ತೋಷಮ್‌ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಬಿಜೆಪಿ ಸತತ ಹ್ಯಾಟ್ರಿಕ್‌ ಗೆಲುವಿನ ವಿಶ್ವಾಸದಲ್ಲಿದೆ. ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಕೇಸ್‌ – ಫಾಸ್ಟ್‌ ಟ್ರ್ಯಾಕ್‌ ಕೋರ್ಟ್‌ಗೆ ವರ್ಗಾಯಿಸಲು ಚಿಂತನೆ: ಬಿ.ದಯಾನಂದ್‌

    ಮುಂದಿನ ಅಕ್ಟೋಬರ್ 5 ರಂದು ವಿಧಾನಸಭಾ ಚುನಾವಣೆ ನಡೆಯಲಿದ್ದು, ಅಕ್ಟೋಬರ್ 8 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. ಇದನ್ನೂ ಓದಿ: ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ರಾಜ್ಯದಲ್ಲಿ ರದ್ದು ಮಾಡಿ- ಸಿಎಂಗೆ ಕುರುಬೂರು ಶಾಂತಕುಮಾರ್ ಮನವಿ 

  • ಹರಿಯಾಣದಲ್ಲಿ ಆಪ್‌-ಕಾಂಗ್ರೆಸ್‌ ಮೈತ್ರಿಗೆ ಬ್ರೇಕ್‌? – 20 ಎಎಪಿ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್‌

    ಹರಿಯಾಣದಲ್ಲಿ ಆಪ್‌-ಕಾಂಗ್ರೆಸ್‌ ಮೈತ್ರಿಗೆ ಬ್ರೇಕ್‌? – 20 ಎಎಪಿ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್‌

    ಚಂಡೀಗಢ: ಆಮ್‌ ಆದ್ಮಿ ಪಕ್ಷ (AAP) ಸೋಮವಾರ ಹರಿಯಾಣ ವಿಧಾನಸಭಾ ಚುನಾವಣೆಗೆ (Haryana Assembly Elections) 20 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.

    ಈ ಕುರಿತು ಮಾತನಾಡಿರುವ ಎಎಪಿ ಹರಿಯಾಣ ಘಟಕದ ಮುಖ್ಯಸ್ಥ ಸುಶೀಲ್ ಗುಪ್ತಾ (Sushil Gupta), ಕಾಂಗ್ರೆಸ್‌ ಸೀಟು ಹಂಚಿಕೆಯನ್ನು ಅಂತಿಮಗೊಳಿಸದೇ ಇದ್ದರೆ, ಎಲ್ಲಾ 90 ಕ್ಷೇತ್ರಗಳಿಗೆ ಎಎಪಿ ಪಕ್ಷದ ಅಭ್ಯರ್ಥಿಗಳನ್ನು ಘೋಷಿಸಲಾಗುವುದು ಎಂದು ಹೇಳಿದ್ದಾರೆ.

    ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್-ಎಎಪಿ ಮೈತ್ರಿ (AAP-Congress Alliance) ಕುರಿತು ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಗುಪ್ತಾ, ಆಮ್ ಆದ್ಮಿ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರೂ ಎಲ್ಲಾ 90 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಸಿದ್ದರಾಗಿದ್ದಾರೆ. ಕಾಂಗ್ರೆಸ್‌ ಸೀಟು ಹಂಚಿಕೆಯನ್ನು ಅಂತಿಮಗೊಳಿಸದೇ ಇದ್ದರೆ ಎಲ್ಲಾ 90 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

    ಉಭಯ ಪಕ್ಷಗಳ ನಡುವೆ ಮಾತುಕತೆ ಸ್ಥಗಿತಗೊಂಡಿದೆ. ಎಎಪಿ 10 ಕ್ಷೇತ್ರಗಳಿಗೆ ಬೇಡಿಕೆ ಇಟ್ಟರೆ, ಕಾಂಗ್ರೆಸ್ 5 ಕ್ಷೇತ್ರಗಳನ್ನು ಬಿಟ್ಟು ಕೊಡುವುದಾಗಿ ಹೇಳಿದೆ. ಈ ಕುರಿತು ಕಾಂಗ್ರೆಸ್ ಅಂತಿಮ ಪ್ರತಿಕ್ರಿಯೆಗಾಗಿ ಆಪ್ ಕಾಯುತ್ತಿದೆ. ಚುನಾವಣೆಗೆ ಬಹಳ ಕಡಿಮೆ ಸಮಯವಿದೆ. ಪ್ರತಿ ವಿಧಾನಸಭೆಯಲ್ಲೂ ಆಪ್‌ ಸಂಘಟನೆ ಬಲಿಷ್ಠವಾಗಿದ್ದು, ಪ್ರಾಮಾಣಿಕ ಮೈತ್ರಿಗಾಗಿ ತಾಳ್ಮೆಯಿಂದ ಕಾದಿದ್ದೇವೆ. ಆದರೆ, ಈವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಹೇಳಿದ್ದಾರೆ.

    90 ಸದಸ್ಯ ಬಲದ ಹರಿಯಾಣ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೆಪ್ಟೆಂಬರ್ 12 ಕೊನೆಯ ದಿನವಾಗಿದೆ. ಅಕ್ಟೋಬರ್ 5ರಂದು ಮತದಾನ ನಡೆಯಲಿದೆ. ಅಕ್ಟೋಬರ್ 8 ರಂದು ಫಲಿತಾಂಶ ಪ್ರಕಟವಾಗಲಿದೆ.

  • Haryana Polls Dates | ಹರಿಯಾಣ ಚುನಾವಣೆ ದಿನಾಂಕ ಬದಲು – ಅಕ್ಟೋಬರ್‌ 5ಕ್ಕೆ ಮತದಾನ

    Haryana Polls Dates | ಹರಿಯಾಣ ಚುನಾವಣೆ ದಿನಾಂಕ ಬದಲು – ಅಕ್ಟೋಬರ್‌ 5ಕ್ಕೆ ಮತದಾನ

    – ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯ ಮತ ಎಣಿಕೆ ದಿನಾಂಕವೂ ಬದಲು

    ನವದೆಹಲಿ: ಅಸೋಜ್ ಅಮವಾಸ್ಯೆ ಹಬ್ಬ ಆಚರಿಸುವ ಬಿಷ್ಣೋಯ್ ಸಮುದಾಯದ (Bishnoi community) ದೀರ್ಘಕಾಲದ ಸಂಪ್ರದಾಯವನ್ನು ಪರಿಗಣಿಸಿ ಭಾರತೀಯ ಚುನಾವಣಾ ಆಯೋಗವು (ECI) ಹರಿಯಾಣ ಹಾಗೂ ವಿಧಾನಸಭಾ ಚುನಾವಣೆಗಳ ದಿನಾಂಕದಲ್ಲಿ ಬದಲಾವಣೆ ಘೋಷಿಸಿದೆ.

    ಮುಂದಿನ ಅಕ್ಟೋಬರ್‌ 1 ರಂದು ನಡೆಯಬೇಕಿದ್ದ ಹದಿಯಾಣ ವಿಧಾನಸಭಾ ಚುನಾವಣಾ (Haryana Assembly polls) ದಿನಾಂಕವನ್ನು ಅಕ್ಟೋಬರ್‌ 5ಕ್ಕೆ ನಿಗದಿಪಡಿಸಿದೆ. ಇನ್ನೂ ಜಮ್ಮು ಮತ್ತು ಕಾಶ್ಮೀರ (Jammu and Kashmir) ಹಾಗೂ ಹರಿಯಾಣ ವಿಧಾನಸಭೆ ಚುನಾವಣೆಯ ಮತ ಎಣಿಕೆ ದಿನಾಂಕವನ್ನು ಅಕ್ಟೋಬರ್‌ 4ರ ಬದಲಿಗೆ ಅಕ್ಟೋಬರ್‌ 8ಕ್ಕೆ ಪರಿಷ್ಕರಿಸಿದೆ. ಇದನ್ನೂ ಓದಿ: ರೋಟಿ-ಸಬ್ಜಿಯಿಂದ ತೃಪ್ತಿಯಾಗ್ತಿಲ್ಲ, ಮೊಟ್ಟೆ ಊಟ ಕೊಡಿ; ಕೋಲ್ಕತ್ತಾ ವೈದ್ಯೆ ರೇಪ್‌ ಆರೋಪಿ ಡಿಮ್ಯಾಂಡ್‌

    ಈ ಮೂಲಕ ಚುನಾವಣಾ ಆಯೋಗವು ಗುರು ಜಾಂಬೇಶ್ವರನ ಸ್ಮರಣಾರ್ಥ ಅಸೋಜ್ ಅಮವಾಸ್ಯೆ ಹಬ್ಬ ಆಚರಿಸುವ ಬಿಷ್ಣೋಯ್ ಸಮುದಾಯದ ದೀರ್ಘಕಾಲದ ಸಂಪ್ರದಾಯವನ್ನು ಎತ್ತಿ ಹಿಡಿದಿದೆ. ಇದನ್ನೂ ಓದಿ: ಪಿಜಿಗೆ ನುಗ್ಗಿ ಯುವತಿಯ ಹತ್ಯೆ ಕೇಸ್‌ – ಕೋರಮಂಗಲ ಪೊಲೀಸರಿಂದ ಆರೋಪಿ ವಿರುದ್ಧ 1,200 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ

    ಪಂಜಾಬ್, ರಾಜಸ್ಥಾನ ಮತ್ತು ಹರಿಯಾಣದ ಹಲವಾರು ಕುಟುಂಬಗಳು ತಮ್ಮ ಗುರು ಜಾಂಬೇಶ್ವರನ ಸ್ಮರಣಾರ್ಥ ಅಸೋಜ್ ಅಮವಾಸ್ಯೆ ಹಬ್ಬವನ್ನು ಆಚರಿಸುತ್ತಾರೆ. ಈ ಹಬ್ಬದ ಆಚರಣೆಯಲ್ಲಿ ಪಾಲ್ಗೊಳ್ಳಲು ಹರಿಯಾಣದ ಬಿಷ್ಣೋಯ್ ಸಮುದಾಯದ ಜನ ರಾಜಸ್ಥಾನಕ್ಕೆ ಸಾಮೂಹಿಕವಾಗಿ ತೆರಳಲಿದ್ದಾರೆ. ಅಕ್ಟೋಬರ್‌ 2ರಂದು ಹಬ್ಬ ಇರುವುದರಿಂದ ಸಿರ್ಸಾ, ಫತೇಹಾಬಾದ್ ಮತ್ತು ಹಿಸಾರ್‌ನಲ್ಲಿ ವಾಸಿಸುವ ಸಾವಿರಾರು ಬಿಷ್ಣೋಯಿ ಕುಟುಂಬಗಳು ಅಕ್ಟೋಬರ್‌ 1ರಂದು (ನಿಗದಿಪಡಿಸಿದ್ದ ಮತದಾನದ ದಿನ) ರಾಜಸ್ಥಾನಕ್ಕೆ ಪ್ರಯಾಣಿಸಲಿವೆ.

    ಅಲ್ಲದೇ ಅದು ಶತಮಾನಗಳ ಸಂಪ್ರದಾಯ ಹಬ್ಬವಾಗಿರುವುದರಿಂದ ಅವರು ಮತದಾನವನ್ನೂ ನಿರಾಕರಿಸಲು ಮುಂದಾಗಿದ್ದಾರೆ. ಇದರಿಂದ ಮತದಾರರ ಭಾಗವಹಿಸುವಿಕೆಯನ್ನು ಕಡಿಮೆ ಮಾಡಬಹುದು. ಹಾಗಾಗಿ ಸಮುದಾಯಗಳ ಭಾವನೆ ಗೌರವಿಸುವ ಉದ್ದೇಶದಿಂದ ಚುನಾವಣಾ ಆಯೋಗ ಚುನಾವಣಾ ದಿನಾಂಕ ಬದಲಾವಣೆ ಮಾಡಿದೆ ಎಂದು ಆಯೋಗ ತಿಳಿಸಿದೆ. ಇದನ್ನೂ ಓದಿ: Paris Paralympics 2024 | ಭಾರತಕ್ಕೆ ಮತ್ತೊಂದು ಪದಕ – ಕಂಚಿಗೆ ರುಬಿನಾ ಶೂಟ್‌

  • ಲಂಡನ್‍ನಲ್ಲಿ ವಿದ್ಯಾಭ್ಯಾಸ, ಈಗ ಹರ್ಯಾಣ ಅಭಿವೃದ್ಧಿಗಾಗಿ ಬಿಜೆಪಿಯಿಂದ ಚುನಾವಣೆಗೆ ನಿಂತ ಮುಸ್ಲಿಂ ಮಹಿಳೆ

    ಲಂಡನ್‍ನಲ್ಲಿ ವಿದ್ಯಾಭ್ಯಾಸ, ಈಗ ಹರ್ಯಾಣ ಅಭಿವೃದ್ಧಿಗಾಗಿ ಬಿಜೆಪಿಯಿಂದ ಚುನಾವಣೆಗೆ ನಿಂತ ಮುಸ್ಲಿಂ ಮಹಿಳೆ

    ಚಂಡೀಗಢ: ಲಂಡನ್‍ನಲ್ಲಿ ಉನ್ನತ ಶಿಕ್ಷಣ ಮುಗಿಸಿ ಭಾರತಕ್ಕೆ ವಾಪಸ್ಸಾಗಿರುವ ಮುಸ್ಲಿಂ ಮಹಿಳೆ ಹರ್ಯಾಣ ಅಭಿವೃದ್ಧಿಗೆ ಪಣತೊಟ್ಟಿದ್ದು, ಮುಸ್ಲಿಂ ಪ್ರಾಬಲ್ಯವುಳ್ಳ ಮೇವತ್ ಜಿಲ್ಲೆಯ ಪುನ್ಹಾನ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.

    ನೌಕ್ಷಮ್ ಚೌಧರಿ(27) ಯಾವುದೇ ರಾಜಕೀಯ ಹಿನ್ನೆಲೆ ಹೊಂದಿರದೇ ಅಭಿವೃದ್ಧಿಯಲ್ಲಿ ಹಿಂದುಳಿದಿರುವ ಕ್ಷೇತ್ರವನ್ನು ಅಭಿವೃದ್ಧಿಗೊಳಿಸಲು ಚುನಾವಣಾ ಕಣಕ್ಕಿಳಿದಿದ್ದಾರೆ. ನೌಕ್ಷಮ್ ಅವರ ತಂದೆ ನಿವೃತ್ತ ನ್ಯಾಯಾಧೀಶರಾಗಿದ್ದು, ತಾಯಿ ಹರ್ಯಾಣ ತೆರಿಗೆ ಇಲಾಖೆಯಲ್ಲಿ ಹಿರಿಯ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ನೌಕ್ಷಮ್ ಅವರು ದೆಹಲಿ ವಿಶ್ವವಿದ್ಯಾಲಯದ ಪ್ರತಿಷ್ಠ ಮಿರಾಂಡಾ ಹೌಸ್ ಕಾಲೇಜಿನಲ್ಲಿ ಇತಿಹಾಸ ವಿಷಯ ಸಂಬಂಧ ಪದವಿ ಮುಗಿಸಿದ್ದಾರೆ. ಬಳಿಕ ಇಟಲಿಯಲ್ಲಿ ಲಕ್ಷುರಿ ಬ್ರ್ಯಾಂಡ್ ನಿರ್ವಹಣೆ ಹಾಗೂ ಲಂಡನ್‍ನಲ್ಲಿ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮಾಡಿದ್ದಾರೆ.

    ಕಳೆದ ಒಂದು ತಿಂಗಳ ಹಿಂದೆಯಷ್ಟೇ ನೌಕ್ಷಮ್ ಭಾರತಕ್ಕೆ ಹಿಂತಿರುಗಿದ್ದು, ಆಗಲೇ ಅ.21ಕ್ಕೆ ನಡೆಯಲಿರುವ ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಅದರಲ್ಲೂ ಮುಸ್ಲಿಂ ಸಮುದಾಯದ ಪ್ರಾಬಲ್ಯ ಹೊಂದಿರುವ ಪುನ್ಹಾನ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವುದು ವಿಶೇಷವಾಗಿದೆ. ಯಾಕೆಂದರೆ ಈ ಕ್ಷೇತ್ರದಲ್ಲಿ ಬಿಜೆಪಿಯ ಪ್ರಾಬಲ್ಯ ಕಡಿಮೆಯಿದೆ. ಆದರೂ ಒಂದು ಮಹಿಳೆ ಧೈರ್ಯದಿಂದ ಬಿಜೆಪಿಯಿಂದಲೇ ಟಿಕೆಟ್ ಪಡೆದು, ಕ್ಷೇತ್ರದ ಅಭಿವೃದ್ಧಿಗೆ ಕೆಲಸ ಮಾಡಲು ಇಚ್ಛಿಸಿರುವುದು ಎಲ್ಲರ ಗಮನ ಸೆಳೆದಿದೆ.

    2018ರ ನೀತಿ ಆಯೋಗದ ವರದಿ ಪ್ರಕಾರ, ಮೇವತ್ ಜಿಲ್ಲೆ ಭಾರತದಲ್ಲಿ ತೀವ್ರ ಹಿಂದುಳಿದ ಜಿಲ್ಲೆಯಾಗಿದೆ. ಯಾಕೆಂದರೆ ಇಲ್ಲಿ ರಸ್ತೆ, ಕಸ ವಿಲೇವಾರಿ ಹಾಗೂ ಇತರೆ ಮೂಲಭೂತ ಸೌಕರ್ಯವಿಲ್ಲ. ಅಲ್ಲದೆ ಇಲ್ಲಿನ ಮಹಿಳೆಯರು ಹಾಗೂ ಮಕ್ಕಳು ರಕ್ತಹೀನತೆಯಿಂದ ಬಳಲುತ್ತಿರುವ ಪ್ರಕರಣ ಹೆಚ್ಚಾಗಿದೆ. ಆದ್ದರಿಂದ ಈ ಜಿಲ್ಲೆಯನ್ನು ಅಭಿವೃದ್ಧಿಯಲ್ಲಿ ಹಿಂದುಳಿದ ಜಿಲ್ಲೆ ಎಂದು ಘೋಷಿಸಲಾಗಿದೆ.

    ಈ ಕ್ಷೇತ್ರವನ್ನು ಅಭಿವೃದ್ಧಿಗೊಳಿಸಿ, ಈ ಭಾಗದ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ನಿಟ್ಟಿನಲ್ಲಿ ನೌಕ್ಷಮ್ ಇಲ್ಲಿ ಚುನಾವಣೆಗೆ ನಿಂತಿರುವುದಾಗಿ ಹೇಳಿದ್ದಾರೆ. ಕ್ಷೇತ್ರವನ್ನು ಅಭಿವೃದ್ಧಿಗೊಳಿಸಲು ನಾನು ಇಲ್ಲಿ ಚುನಾವಣೆಗೆ ನಿಂತಿದ್ದೇನೆ. ಕೇಂದ್ರದಲ್ಲಿ ಹಾಗೂ ರಾಜ್ಯದಲ್ಲಿ ಒಂದೇ ಪಕ್ಷದ ಸರ್ಕಾರವಿದ್ದರೆ ಅಭಿವೃದ್ಧಿ ಕಾರ್ಯ ಬೇಗನೆ ಆಗುತ್ತದೆ. ಆದ್ದರಿಂದ ಈ ಬಾರಿ ಕ್ಷೇತ್ರದ ಜನ ಬಿಜೆಪಿಗೆ ಮತ ಹಾಕಿ ಗೆಲ್ಲಿಸುತ್ತಾರೆ ಎಂಬ ನಂಬಿಕೆ ಇದೆ. ನಾನು ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡಿ ಸಾಕಷ್ಟು ಹೆಸರು ಪಡೆದಿದ್ದೇನೆ. ವಿಶ್ವದ ಪ್ರತಿಷ್ಠಿತ ಬ್ರಾಂಡ್‍ಗಳಿಗೆ ನಾನು ಕೆಲಸ ಮಾಡಿದ್ದೇನೆ. ಆದರೆ ನನಗೆ ನನ್ನ ದೇಶ ಅಭಿವೃದ್ಧಿಗೊಳ್ಳಬೇಕು, ಹರ್ಯಾಣ ಅಭಿವೃದ್ಧಿಯಾಗಬೇಕು ಎಂಬ ಆಸೆ. ಆದ್ದರಿಂದ ಆದಾಯ ತರುವ ಕೆಲಸ ಬಿಟ್ಟು ಜನಸೇವೆ ಮಾಡಲು ಬಂದಿದ್ದೇನೆ ಎಂದು ನೌಕ್ಷಮ್ ತಿಳಿಸಿದ್ದಾರೆ.

    ನೌಕ್ಷಮ್ ಅವರಿಗೆ ಪ್ರತಿಸ್ಪರ್ಧಿಯಾಗಿ 2009ರಲ್ಲಿ ಪುನ್ಹಾನ ಕ್ಷೇತ್ರದಿಂದ ಸ್ಪರ್ಧಿಸಿ, ಗೆದ್ದಿದ್ದ ಕಾಂಗ್ರೆಸ್ ಅಭ್ಯರ್ಥಿ ಮೊಹಮದ್ ಲಿಯಾಸ್ ಚುನಾವಣೆಗೆ ನಿಂತಿದ್ದಾರೆ. ಈ ಹಿಂದೆ ಕ್ಷೇತ್ರದಲ್ಲಿ ಗೆದ್ದು ಬೆಂಬಲಿಗರನ್ನು ಹೊಂದಿರುವ ವಿಶ್ವಾಸದಿಂದ ಲಿಯಾಸ್ ಅವರು ನೌಕ್ಷಮ್ ಅವರ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡಿಲ್ಲ. ಕ್ಷೇತ್ರದಲ್ಲಿ ಬಿಜೆಪಿಗೆ ಬೆಂಬಲವಿಲ್ಲ. ಇಲ್ಲಿ ಕಾಂಗ್ರೆಸ್ ಬೆಂಬಲ ಹೆಚ್ಚಿದೆ. ಈ ಬಾರಿ ನಾವೇ ಗೆಲ್ಲುತ್ತೇವೆ ಎಂದು ಲಿಯಾಸ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.