Tag: ಹರಿಯಾಣ ಸರ್ಕಾರ

  • ವಿನೇಶ್‌ ಫೋಗಟ್‌ಗೆ 4 ಕೋಟಿ ರೂ. ಬಹುಮಾನ – ಬೆಳ್ಳಿ ಪದಕ ವಿಜೇತೆ ಮಾದರಿಯಲ್ಲಿ ಗೌರವಿಸಲು ಸಕಲ ಸಿದ್ಧತೆ

    ವಿನೇಶ್‌ ಫೋಗಟ್‌ಗೆ 4 ಕೋಟಿ ರೂ. ಬಹುಮಾನ – ಬೆಳ್ಳಿ ಪದಕ ವಿಜೇತೆ ಮಾದರಿಯಲ್ಲಿ ಗೌರವಿಸಲು ಸಕಲ ಸಿದ್ಧತೆ

    ಚಂಡೀಗಢ: ಪ್ಯಾರಿಸ್‌ ಒಲಿಂಪಿಕ್ಸ್‌ (Paris Olympics 2024) ಫೈನಲ್‌ ಪಂದ್ಯಕ್ಕೂ ಮುನ್ನವೇ ಅನರ್ಹಗೊಂಡು ಕುಸ್ತಿಗೆ ವಿದಾಯ ಹೇಳಿದ ವಿನೇಶ್‌ ಫೋಗಟ್‌ (Vinesh Phogat) ಅವರಿಗೆ ಹರಿಯಾಣ ಸರ್ಕಾರ 4 ಕೋಟಿ ರೂ. ಬಹುಮಾನ ಘೋಷಿಸಿದೆ. ಇದರೊಂದಿಗೆ ಒಲಿಂಪಿಕ್ಸ್‌ ಬೆಳ್ಳಿ ಪದಕ ವಿಜೇತೆ (Olympic Silver Medalist) ಮಾದರಿಯಲ್ಲೇ ಸ್ವಾಗತ ಕೋರಲು ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ.

    ಈ ಕುರಿತು ಎಕ್ಸ್‌ ಖಾತೆಯಲ್ಲಿ ಹರಿಯಾಣ ಸಿಎಂ ನಯಾಬ್‌ ಸಿಂಗ್‌ ಸೈನಿ (Nayab Singh Saini) ಮಾಹಿತಿ ಹಂಚಿಕೊಂಡಿದ್ದಾರೆ. ಒಲಿಂಪಿಕ್ಸ್‌ ಫ್ರೀಸ್ಟೈಲ್‌ ಕುಸ್ತಿ ವಿಭಾಗದಲ್ಲಿ ಫೈನಲ್‌ ತಲುಪಿ ಇತಿಹಾಸ ನಿರ್ಮಿಸಿದ ವಿನೇಶ್‌ ಫೋಗಟ್‌ ಅವರನ್ನು ತವರಿನಲ್ಲಿ ಬೆಳ್ಳಿ ಪದಕ ವಿಜೇತರಾಗಿ ಗೌರವಿಸಲಾಗುವುದು ಎಂದು ಅವರು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಅಮ್ಮಾ, ನನ್ನ ವಿರುದ್ಧ ಕುಸ್ತಿ ಗೆದ್ದಿದೆ, ನಾನು ಸೋತೆ ನನ್ನನ್ನು ಕ್ಷಮಿಸು: ನಿವೃತ್ತಿ ಘೋಷಿಸಿದ ವಿನೇಶ್‌ ಫೋಗಟ್‌

    ಹರಿಯಾಣದ ಧೈರ್ಯಶಾಲಿ ಮಗಳು ವಿನೇಶ್ ಫೋಗಟ್ ಒಲಿಂಪಿಕ್ಸ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿ ಫೈನಲ್‌ಗೆ ತಲುಪಿದ್ದರು. ಆದ್ರೆ ಕಾರಣಾಂತರದಿಂದ ಫೈನಲ್ ಪಂದ್ಯದಲ್ಲಿ ಸ್ಪರ್ಧಿಸಲು ಸಾಧ್ಯವಾಗಲಿಲ್ಲ. ಆದಾಗ್ಯೂ ಅವರು ನಮಗೆಲ್ಲ ಚಾಂಪಿಯನ್ ಆಗಿದ್ದಾರೆ. ಹಾಗಾಗಿ ಪದಕ ವಿಜೇತರಂತೆಯೇ ವಿನೇಶ್‌ರನ್ನ ಗೌರವಿಸುವ ನಿರ್ಧಾರವನ್ನ ನಮ್ಮ ಸರ್ಕಾರ ತೆಗೆದುಕೊಂಡಿದೆ. ಬೆಳ್ಳಿ ಪದಕ ವಿಜೇತರಿಗೆ ಸಮಾನವಾಗಿ ಗೌರವಿಸುತ್ತದೆ, ಜೊತೆಗೆ ಬೆಳ್ಳಿ ಪದಕ ವಿಜೇತರಿಗೆ ಸರ್ಕಾರ ನೀಡುವ ಪ್ರಶಸ್ತಿ ಮತ್ತು ಸೌಲಭ್ಯಗಳನ್ನೂ ಫೋಗಟ್ ಅವರಿಗೆ ಕೃತಜ್ಞತೆಯಿಂದ ನೀಡಲಾಗುತ್ತದೆ. ವಿನೇಶ್, ನಿಮ್ಮ ಬಗ್ಗೆ ನಮಗೆ ಹೆಮ್ಮೆ ಇದೆ ಎಂದು ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

    ಹರಿಯಾಣ ಸರ್ಕಾರದ ಕ್ರೀಡಾನೀತಿ ಏನು?
    ಕ್ರೀಡಾ ನೀತಿಯ ಪ್ರಕಾರ, ಹರಿಯಾಣ ಸರ್ಕಾರವು ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಚಿನ್ನದ ಪದಕ ವಿಜೇತರಿಗೆ 6 ಕೋಟಿ ರೂ., ಬೆಳ್ಳಿ ಪದಕ ವಿಜೇತರಿಗೆ 4 ಕೋಟಿ ರೂ. ಮತ್ತು ಕಂಚಿನ ಪದಕ ವಿಜೇತರಿಗೆ 2.5 ಕೋಟಿ ರೂ. ನೀಡಲಾಗುತ್ತದೆ. ವಿನೇಶ್‌ ಅವರು ಫೈನಲ್‌ ತಲುಪಿದ್ದ ಕಾರಣ ಸೋತಿದ್ದರೂ ಬೆಳ್ಳಿ ಪದಕ ಖಚಿತವಾಗುತ್ತಿತ್ತು. ಈ ಕಾರಣಕ್ಕಾಗಿಯೇ ವಿನೇಶ್‌ ಅವರನ್ನು ಬೆಳ್ಳಿ ಪದಕ ವಿಜೇತೆ ಸ್ಥಾನಮಾನ ನೀಡಿ ಗೌರವಿಸಲಾಗುತ್ತದೆ ಎಂದು ಸಿಎಂ ಹೇಳಿದ್ದಾರೆ. ಇದನ್ನೂ ಓದಿ: ಬಿಜೆಪಿ, ಎನ್‌ಡಿಎ ಸರ್ಕಾರ ಅಲ್ಪಸಂಖ್ಯಾತ ವಿರೋಧಿಗಳು – ವಕ್ಫ್ ಕಾಯ್ದೆ ತಿದ್ದುಪಡಿ ಮಸೂದೆ ಮಂಡನೆಗೆ ಸಿಎಂ ಆಕ್ಷೇಪ

    ವಿನೇಶ ಫೋಗಟ್‌ ನಿವೃತ್ತಿ ಘೋಷಣೆ:
    ಒಲಿಂಪಿಕ್ಸ್‌ನಲ್ಲಿ (Paris Olympics) ಪದಕದ ನಿರೀಕ್ಷೆಯಲ್ಲಿದ್ದಾಗಲೇ ಅನರ್ಹಗೊಂಡಿರುವ ಭಾರತೀಯ ಖ್ಯಾತ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ (Vinesh Phogat) ಬೇಸರದಿಂದಲೇ ಕುಸ್ತಿಗೆ ವಿದಾಯ ಹೇಳಿದ್ದಾರೆ. ಎಕ್ಸ್‌ ಖಾತೆಯಲ್ಲಿ ಭಾವುಕ ಸಾಲು ಬರೆದುಕೊಂಡು ನಿವೃತ್ತಿ ಘೋಷಿಸಿದರು. ಅಮ್ಮಾ, ನನ್ನ ವಿರುದ್ಧ ಕುಸ್ತಿ (Wrestling) ಗೆದ್ದಿದೆ, ನಾನು ಸೋತೆ, ಕ್ಷಮಿಸಿ. ನಿನ್ನ ಕನಸು, ನನ್ನ ಧೈರ್ಯ ಸಂಪೂರ್ಣ ಛಿದ್ರವಾಗಿದೆ, ಈಗ ಹೆಚ್ಚಿನ ಶಕ್ತಿ ಉಳಿದಿಲ್ಲ’ ಎಂದು ವಿನೇಶ್ ಫೋಗಟ್ ಬರೆದುಕೊಂಡಿದ್ದಾರೆ.

    ಫೋಗಟ್‌ ಅನರ್ಹಗೊಂಡಿದ್ದು ಏಕೆ?
    50 ಕೆಜಿ ಫ್ರಿಸ್ಟೈಲ್‌ ವಿಭಾಗದಲ್ಲಿ ಫೈನಲ್‌ ಪ್ರವೇಶಿಸಿದ್ದ ವಿನೇಶ್ ಫೋಗಟ್ ಈ ಬಾರಿ ಬಂಗಾರ ಗೆಲ್ಲಬಹುದು ಎಂದು ನಿರೀಕ್ಷೆ ಭಾರತೀಯರಿಗಿತ್ತು. ಪದಕ ಸುತ್ತಿನ ಪಂದ್ಯಕ್ಕೂ ಮುನ್ನ ದೇಹದ ತೂಕದಲ್ಲಿ ಕೇವಲ 100 ಗ್ರಾಂ ಅಧಿಕವಿದ್ದ ಕಾರಣದಿಂದ ಕುಸ್ತಿಪಟುವನ್ನು ಫೈನಲ್‌ನಿಂದ ಅನರ್ಹಗೊಳಿಸಲಾಯಿತು. ಇದಾದ ಒಂದು ದಿನದಲ್ಲೇ ವಿನೇಶ್ ಫೋಗಟ್ ನಿವೃತ್ತಿ ಘೋಷಣೆ ಮಾಡಿದ್ದಾರೆ. ಇದನ್ನೂ ಓದಿ: 1 ಕೆಜಿ ಜಾಸ್ತಿ ಎತ್ತಿದ್ದರೆ ಪದಕ – ಮೀರಾಬಾಯಿ ಚಾನುಗೆ ಕಂಚು ಜಸ್ಟ್‌ ಮಿಸ್‌! 

  • ಹರಿಯಾಣದಲ್ಲಿ ಬುಲ್ಡೋಜರ್ ಸೌಂಡ್ ಜೋರು – 3ನೇ ದಿನ 50-60 ಮಳಿಗೆಗಳು ಧ್ವಂಸ, 202 ಕೇಸ್ ದಾಖಲು

    ಹರಿಯಾಣದಲ್ಲಿ ಬುಲ್ಡೋಜರ್ ಸೌಂಡ್ ಜೋರು – 3ನೇ ದಿನ 50-60 ಮಳಿಗೆಗಳು ಧ್ವಂಸ, 202 ಕೇಸ್ ದಾಖಲು

    ಚಂಡೀಗಢ: ಕೋಮು ಸಂಘರ್ಷಕ್ಕೆ ಹರಿಯಾಣದಲ್ಲಿ (Haryan) ತತ್ತರಿಸಿದೆ. ನೂಹ್ ಮತ್ತು ಗುರುಗ್ರಾಮ್ ಜಿಲ್ಲೆಗಳು ಹೊತ್ತಿ ಉರಿಯುತ್ತಿದ್ದು, ಕರ್ಫ್ಯೂ ಲೆಕ್ಕಿಸದೇ ಉಭಯ ಕೋಮುಗಳು ಜನ ಬೀದಿಗಿಳಿದು ಹಿಂಸಾಚಾರದಲ್ಲಿ ತೊಡಗಿದ್ದಾರೆ. ಶನಿವಾರವೂ ಅಲ್ಲಲ್ಲಿ ಮಳಿಗೆಗಳಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ. ಈ ನಡುವೆ ಸತತ 3ನೇ ದಿನ ಹರಿಯಾಣದಲ್ಲಿ ಬುಲ್ಡೋಜರ್‌ (Bulldozer) ಕಾರ್ಯಾಚರಣೆ ನಡೆದಿದೆ.

    ಇನ್ನೂ ಹರಿಯಾಣದಲ್ಲಿ ನಡೆದ ಕೋಮು ಗಲಭೆ ಪ್ರಕರಣದ ಆರೋಪಿಗಳಿಗೆ ಅಲ್ಲಿನ ಸರ್ಕಾರ ಕೂಡ ಬುಲ್ಡೋಜರ್ ಶಾಕ್ ನೀಡಿದೆ. ಸತತ 3ನೇ ದಿನವೂ ಭರ್ಜರಿ ಕಾರ್ಯಾಚರಣೆ ಮುಂದುವರಿಸಿದೆ. ಹಿಂಸಾಚಾರಪೀಡಿತ ನೂಹ್‌ನಿಂದ ಸುಮಾರು 20 ಕಿಮೀ ದೂರದಲ್ಲಿರುವ ತೌರುದಲ್ಲಿ ವಾಸಿಸುತ್ತಿರುವ ವಲಸಿಗರ ಗುಡಿಸಲುಗಳನ್ನ ಬುಲ್ಡೋಜರ್ ಬಳಸಿ ಹರಿಯಾಣ ಸರ್ಕಾರ ಗುರುವಾರ ನೆಲಸಮಗೊಳಿಸಿದೆ. ಇದನ್ನೂ ಓದಿ: Chandrayaan-3: ಭೂಮಿಯಿಂದ ಹಾರಿದ 22 ದಿನಗಳ ಬಳಿಕ ಚಂದ್ರನ ಕಕ್ಷೆ ಸೇರಿದ ಚಂದ್ರಯಾನ-3 ನೌಕೆ

    ವಿವಿಧ ಸ್ಥಳಗಳಲ್ಲಿ ಕಾರ್ಯಾಚರಣೆ ಮುಂದುವರಿದಿದ್ದು, ಶನಿವಾರ 24 ಮೆಡಿಕಲ್ ಸ್ಟೋರ್‌ಗಳು ಸೇರಿದಂತೆ 50-60 ಮಳಿಗೆಗಳನ್ನ ಧ್ವಂಸಗೊಳಿಸಲಾಗಿದೆ. ಶುಕ್ರವಾರ ಸುಮಾರು ಒಂದು ಎಕರೆ ಜಮೀನಿನಲ್ಲಿ ಅಕ್ರಮ ವಲಸಿಗರು ನಿರ್ಮಿಸಿಕೊಂಡಿದ್ದ 250ಕ್ಕೂ ಅಧಿಕ ಗುಡಿಸಲುಗಳನ್ನ ಕೆಡವಲಾಗಿತ್ತು. ಇದನ್ನೂ ಓದಿ: ಹರಿಯಾಣ ಧಗಧಗ: ಅಕ್ರಮ ವಲಸಿಗರ 250 ಗುಡಿಸಲುಗಳು ನೆಲಸಮ, 41 ಕೇಸ್, 176 ಮಂದಿ ಅರೆಸ್ಟ್, 90 ಮಂದಿ ವಶಕ್ಕೆ

    ಇನ್ನೂ ಹರಿಯಾಣದಲ್ಲಿ ಈವರೆಗೆ ಒಟ್ಟು 102 ಕೇಸ್‌ಗಳು ದಾಖಲಾಗಿದ್ದು, 202 ಮಂದಿಯನ್ನ ಬಂಧಿಸಲಾಗಿದೆ. 80 ಮಂದಿಯನ್ನ ವಶಕ್ಕೆ ಪಡೆದಿದ್ದಾರೆ. ಘಟನೆ ಹಿಂದೆ ಯಾವುದೇ ಮಾಸ್ಟರ್ ಮೈಂಡಗ್ ಪತ್ತೆಯಾಗಿಲ್ಲ ಎಂದು ನುಹ್ ಜಿಲ್ಲೆಯ ಪೊಲೀಸರು ತಿಳಿಸಿದ್ದಾರೆ. ಹಿಂಸಾಚಾರ ಸಂಬಂಧ ಪರಸ್ಪರ ಕೆಸರೆರಚಾಟಗಳು ನಡೆಯುತ್ತಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹರಿಯಾಣ ಧಗಧಗ: ಅಕ್ರಮ ವಲಸಿಗರ 250 ಗುಡಿಸಲುಗಳು ನೆಲಸಮ, 41 ಕೇಸ್, 176 ಮಂದಿ ಅರೆಸ್ಟ್, 90 ಮಂದಿ ವಶಕ್ಕೆ

    ಹರಿಯಾಣ ಧಗಧಗ: ಅಕ್ರಮ ವಲಸಿಗರ 250 ಗುಡಿಸಲುಗಳು ನೆಲಸಮ, 41 ಕೇಸ್, 176 ಮಂದಿ ಅರೆಸ್ಟ್, 90 ಮಂದಿ ವಶಕ್ಕೆ

    ಚಂಡೀಗಢ: ಕೋಮು ಸಂಘರ್ಷಕ್ಕೆ ಹರಿಯಾಣದಲ್ಲಿ (Haryana) ತತ್ತರಿಸಿದೆ. ನಿನ್ನೆಯಿಂದ ನೂಹ್ ಮತ್ತು ಗುರುಗ್ರಾಮ್ ಜಿಲ್ಲೆಗಳು ಹೊತ್ತಿ ಉರಿಯುತ್ತಿವೆ. ಕರ್ಫ್ಯೂ ಲೆಕ್ಕಿಸದೇ ಉಭಯ ಕೋಮುಗಳು ಜನ ಬೀದಿಗಿಳಿದು ಹಿಂಸಾಚಾರದಲ್ಲಿ ತೊಡಗಿದ್ದಾರೆ. ಆಸ್ತಿ-ಪಾಸ್ತಿಗಳನ್ನೂ ಹಾನಿ ಮಾಡಿದ್ದಾರೆ.

    ಇನ್ನೂ ಹರಿಯಾಣದಲ್ಲಿ ನಡೆದ ಕೋಮುಗಲಭೆ ಪ್ರಕರಣದ ಆರೋಪಿಗಳಿಗೆ ಅಲ್ಲಿನ ಸರ್ಕಾರ ಕೂಡ ಬುಲ್ಡೋಜರ್ (Bulldozer) ಶಾಕ್ ನೀಡಿದೆ. ಹಿಂಸಾಚಾರಪೀಡಿತ ನೂಹ್‌ನಿಂದ ಸುಮಾರು 20 ಕಿಮೀ ದೂರದಲ್ಲಿರುವ ತೌರುದಲ್ಲಿ ವಾಸಿಸುತ್ತಿರುವ ವಲಸಿಗರ ಗುಡಿಸಲುಗಳನ್ನ ಬುಲ್ಡೋಜರ್ ಬಳಸಿ ಹರಿಯಾಣ ಸರ್ಕಾರ (Haryana Government) ಗುರುವಾರ ನೆಲಸಮಗೊಳಿಸಿದೆ. ಇದನ್ನೂ ಓದಿ: ಲೋಕಸಭೆ ಚುನಾವಣೆಗೆ ಕಾಂಗ್ರೆಸ್-ಬಿಜೆಪಿ ಭರ್ಜರಿ ತಯಾರಿ – ಶನಿವಾರ `ಕೈ’ನಾಯಕರ ಹೈವೋಲ್ಟೇಜ್ ಮೀಟಿಂಗ್

    ಸರ್ಕಾರಿ ಜಮೀನನ್ನು ಅತಿಕ್ರಮಿಸಿದ್ದಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಹರ್ಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ಅವರ ಆದೇಶದಂತೆ ಗಲಭೆಕೋರರು ವಾಸವಿರುವ ಮನೆಗಳನ್ನ ತೆರವುಗೊಳಿಸಲಾಗಿದೆ. ಬಾಂಗ್ಲಾದೇಶದಿಂದ ಬಂದ ಅಕ್ರಮವಾಗಿ ಮೊದಲು ಅಸ್ಸಾಂನಲ್ಲಿ ವಾಸವಿದ್ದರು. ಅವರೀಗ ನೂಹ್ ಜಿಲ್ಲೆಯ ತೌರು ಪಟ್ಟಣದ ಮಹಮ್ಮದಪುರ ರಸ್ತೆಯ ವಾರ್ಡ್ ನಂ.1 ಹರಿಯಾಣ ನಗರ ಪ್ರಾಧಿಕಾರಕ್ಕೆ ಸೇರಿದ ಜಾಗದಲ್ಲಿ ಅಕ್ರಮವಾಗಿ ಗುಡಿಸಲುಗಳನ್ನು ನಿರ್ಮಿಸಿಕೊಂಡಿದ್ದಾರೆ. ಇದನ್ನೂ ಓದಿ: ಫಾರಿನ್‍ನಿಂದ ಬಂದ ಹೆಚ್‍ಡಿಕೆಯಿಂದ ಮಿಡ್‍ನೈಟ್ ಬಾಂಬ್?: ಮೆಸ್‍ನಲ್ಲಿ ನಡೆದ ಸಭೆಯಲ್ಲಿ YST!

    ಸುಮಾರು ಒಂದು ಎಕರೆ ಜಮೀನಿನಲ್ಲಿ 250ಕ್ಕೂ ಅಧಿಕ ಗುಡಿಸಲುಗಳನ್ನ ನಿರ್ಮಿಸಿಕೊಂಡಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಅವರು ಇದೇ ಜಾಗದಲ್ಲಿ ವಾಸವಿದ್ದರು ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಬಿಗಿ ಭದ್ರತೆಯೊಂದಿಗೆ ಗುಡಿಸಲುಗಳನ್ನ ನೆಲಸಮಗೊಳಿಸಲಾಗಿದೆ.

    ಇನ್ನೂ ಗುರುಗ್ರಾಮದಲ್ಲಿ ಇವತ್ತೂ ಕೂಡ ಆಕ್ಷೇಪಾರ್ಹ ಘೋಷಣೆಗಳನ್ನು ಕೂಗುತ್ತಾ ರೆಸ್ಟೋರೆಂಟ್, ಅಂಗಡಿಗಳಿಗೆ ಬೆಂಕಿ ಹಚ್ಚಿದ್ದಾರೆ. ನಿನ್ನೆ ರಾತ್ರಿ ನಡೆದ ಘರ್ಷಣೆಯಲ್ಲಿ ಐವರು ಬಲಿ ಆಗಿದ್ದಾರೆ. ನಿನ್ನೆ ಮೆವಾತ್‌ನಲ್ಲಿ ವಿಹೆಚ್‌ಪಿ- ಬಜರಂಗದಳದ ಶೋಭಾಯಾತ್ರೆ ವೇಳೆ ನಡೆದ ಮತ ಘರ್ಷಣೆಯಲ್ಲಿ ಇಬ್ಬರು ಹೋಂಗಾರ್ಡ್ಗಳು ಸಾವನ್ನಪ್ಪಿದ್ರು. ರಾತ್ರಿ ಮತ್ತೆ ನಡೆದ ಘರ್ಷಣೆಯಲ್ಲಿ ಇನ್ನಿಬ್ಬರು ಬಲಿಯಾಗಿದ್ದಾರೆ.

    ಇನ್ನೂ ಹರಿಯಾಣದಲ್ಲಿ ಈವರೆಗೆ ಒಟ್ಟು 41 ಕೇಸ್‌ಗಳು ದಾಖಲಾಗಿದ್ದು, 176 ಮಂದಿಯನ್ನ ಬಂಧಿಸಲಾಗಿದೆ. 90 ಮಂದಿಯನ್ನ ವಶಕ್ಕೆ ಪಡೆದಿದ್ದಾರೆ. ಹಿಂಸಾಚಾರ ಸಂಬಂಧ ಪರಸ್ಪರ ಕೆಸರೆರಚಾಟಗಳು ನಡೆಯುತ್ತಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅಪಾರ್ಟ್ಮೆಂಟ್‌ನ ಮೇಲ್ಛಾವಣಿ ಕುಸಿತ – 2 ಸಾವು, 12 ಮಂದಿ ಸಿಲುಕಿರುವ ಭೀತಿ

    ಅಪಾರ್ಟ್ಮೆಂಟ್‌ನ ಮೇಲ್ಛಾವಣಿ ಕುಸಿತ – 2 ಸಾವು, 12 ಮಂದಿ ಸಿಲುಕಿರುವ ಭೀತಿ

    ಗುರ್‌ಗಾಂವ್: ಅಪಾರ್ಟ್ಮೆಂಟ್‌ನ ಮೇಲ್ಛಾವಣಿ ಕುಸಿದು ಇಬ್ಬರು ಸಾವನ್ನಪ್ಪಿ, 12 ಮಂದಿ ಸಿಲುಕಿಕೊಂಡಿರುವ ಘಟನೆ ಗುರುಗ್ರಾಮದ ಸೆಕ್ಟರ್ 109 ರಲ್ಲಿನ ಚಿಂಟೆಲ್ಸ್ ಪ್ಯಾರಾಡಿಸೊ ವಸತಿ ಸಂಕೀರ್ಣದಲ್ಲಿ ನಡೆದಿದೆ.

    ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಆರು ಮಂದಿ ಸಿಲುಕಿಕೊಂಡಿದ್ದಾರೆ ಎಂದು ವರದಿಯಾಗಿದೆ. ಪೊಲೀಸರು ಮತ್ತು ಇತರ ಜಿಲ್ಲಾ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ. ಇದನ್ನೂ ಓದಿ: 6 ವರ್ಷಗಳ ಕಾಲ ಕುತ್ತಿಗೆಯಲ್ಲಿ ಟೈರ್ ಸಿಕ್ಕಿಸಿಕೊಂಡಿದ್ದ ಮೊಸಳೆಗೆ ಕೊನೆಗೂ ಸಿಕ್ತು ಮುಕ್ತಿ!

    ಮೊದಲ ಮಾಹಿತಿ ಪ್ರಕಾರ, 17 ಅಂತಸ್ತಿನ ಕಟ್ಟಡದ 6 ಮಹಡಿಗಳು ಕುಸಿದಿವೆ. ಕಟ್ಟಡದಲ್ಲಿ ವಾಸವಾಗಿರುವ ಕೆಲವು ಕುಟುಂಬಗಳು ಕೂಡ ಸಿಕ್ಕಿಬಿದ್ದಿರುವ ಆತಂಕವಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆಗಳ ಹಲವು ತಂಡಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ಅಪಾರ್ಟ್ಮೆಂಟ್‌ನಲ್ಲಿರುವ 4 ಕುಟುಂಬಗಳು ಅವಶೇಷಗಳಡಿ ಸಿಲುಕಿವೆ ಎನ್ನಲಾಗಿತ್ತು. ಇದನ್ನೂ ಓದಿ: ಕೇಸರಿ ಶಾಲು, ಹಿಜಬ್ ಧರಿಸುವಂತಿಲ್ಲ : ಹೈಕೋರ್ಟ್ ಮಧ್ಯಂತರ ಆದೇಶದಲ್ಲಿ ಏನಿದೆ?

    ಗುರುಗ್ರಾಮ ಕಟ್ಟಡ ಕುಸಿತದ ಬಗ್ಗೆ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಪರಿಸ್ಥಿತಿಯನ್ನು ವೈಯಕ್ತಿಕವಾಗಿ ಗಮನಿಸುತ್ತಿದ್ದಾರೆ ಅಂತ ಹರಿಯಾಣ ಸರ್ಕಾರ ತಿಳಿಸಿದೆ.

    ಗುರುಗ್ರಾಮ ಸೆಕ್ಟರ್ 109 ರಲ್ಲಿ ಚಿಂಟೆಲ್ಸ್ ಪ್ಯಾರಾಡಿಸೊ ವಸತಿ ಸಂಕೀರ್ಣದ ಡಿ ಟವರ್‍ನ ಆರನೇ ಮಹಡಿಯ ಛಾವಣಿಯ ಒಂದು ಭಾಗವು ಕುಸಿದಿದೆ. ಆಡಳಿತ ಅಧಿಕಾರಿಗಳು, ಎನ್‍ಡಿಆರ್‍ಎಫ್, ಎಸ್‍ಡಿಆರ್‍ಎಫ್ ತಂಡಗಳು ಘಟನಾ ಸ್ಥಳದಲ್ಲಿಯೇ ಇದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದೆ.

  • ಹರಿಯಾಣ ಸರ್ಕಾರ 6 ಕೋಟಿ, ಆನಂದ್ ಮಹೀಂದ್ರ ಕಾರ್ ಗಿಫ್ಟ್- ಚಿನ್ನದ ನೀರಜ್‍ಗೆ ಭರ್ಜರಿ ಉಡುಗೊರೆ

    ಹರಿಯಾಣ ಸರ್ಕಾರ 6 ಕೋಟಿ, ಆನಂದ್ ಮಹೀಂದ್ರ ಕಾರ್ ಗಿಫ್ಟ್- ಚಿನ್ನದ ನೀರಜ್‍ಗೆ ಭರ್ಜರಿ ಉಡುಗೊರೆ

    ನವದೆಹಲಿ: ಟೋಕಿಯೋ ಒಲಿಂಪಿಕ್ಸ್ ನಲ್ಲಿ ಜಾವಲಿನ್ ಎಸೆತದಲ್ಲಿ ಚಿನ್ನದ ಪದಕಕ್ಕೆ ಮುತ್ತಿಟ್ಟ ನೀರಜ್ ಚೋಪ್ರಾಗೆ ಹರಿಯಾಣ ಸರ್ಕಾರ 6 ಕೋಟಿ ರೂ. ಹಾಗೂ ಮಹೀಂದ್ರ ಸಂಸ್ಥೆಯ ಮುಖ್ಯಸ್ಥ ಆನಂದ್ ಮಹೀಂದ್ರಾ ಅವರು ಬ್ರ್ಯಾಂಡ್ ನ್ಯೂ ಎಕ್ಸ್ ಯುವಿ 700 ಕಾರ್ ನ್ನು ಉಡುಗೊರೆಯಾಗಿ ನೀಡುವುದಾಗಿ ಘೊಷಿಸಿದ್ದಾರೆ.

    ನೀರಜ್ ಚೋಪ್ರಾ ಶನಿವಾರ ಟೋಕಿಯೋ ಒಲಿಂಪಿಕ್ಸ್ ನಲ್ಲಿ ಎರಡನೇ ಎಸೆತದಲ್ಲೇ 87.58 ಮೀಟರ್ ದೂರಕ್ಕೆ ಜಾವೆಲಿನ್ ಎಸೆಯುವ ಮೂಲಕ ಚಿನ್ನದ ಪದಕಕ್ಕೆ ಮುತ್ತಿಕ್ಕಿದ್ದಾರೆ. ಈ ಮೂಲಕ ಅಥ್ಲೆಟಿಕ್ ಲೋಕ ನಿಬ್ಬೆರಗಾಗುವಂತೆ ಮಾಡಿದ್ದಾರೆ. ಅಲ್ಲದೆ ಹೊಸ ದಾಖಲೆಯನ್ನು ಬರೆದಿದ್ದಾರೆ. ಹೀಗಾಗಿ ಸರ್ಕಾರಗಳು ಸೇರಿದಂತೆ ಹಲವರು ಅವರಿಗೆ ಉಡುಗೊರೆಗಳನ್ನು ಘೊಷಿಸುತ್ತಿದ್ದಾರೆ. ಇದನ್ನೂ ಓದಿ: ರೈತನ ಮಗ 23 ವರ್ಷದ ನೀರಜ್ ಚೋಪ್ರಾ ಚಿನ್ನದ ಸಾಧನೆ

    ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು 6 ಕೋಟಿ ರೂ.ಗಳ ನಗದು ಬಹುಮಾನವನ್ನು ಘೊಷಿಸಿದ್ದಾರೆ. ಇದರ ಬೆನ್ನಲ್ಲೇ ಆನಂದ್ ಮಹೀದ್ರಾ ಸಹ ಟ್ವೀಟ್ ಮಾಡುವ ಮೂಲಕ ನೀರಜ್‍ಗೆ ಹೊಸ ಎಸ್‍ಯುವಿ ಕಾರ್ ಗಿಫ್ಟ್ ಕೊಡುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಶತಕೋಟಿ ಭಾರತೀಯರ ಕನಸು ನನಸು – ಚಿನ್ನ ಗೆದ್ದ ನೀರಜ್

    ಬರೋಬ್ಬರಿ 6 ಕೋಟಿ ನಗದು ಬಹುಮಾನದ ಜೊತೆಗೆ ನಿಯಮದಂತೆ ಸರ್ಕಾರದಲ್ಲಿ ಉನ್ನತ ಮಟ್ಟದ ಕೆಲಸ ನೀಡುವುದಾಗಿ ಹರಿಯಾಣ ಸಿಎಂ ಘೊಷಿಸಿದ್ದಾರೆ. ಅಲ್ಲದೆ ಅಥ್ಲೆಟ್ಸ್‍ಗಳಿಗಾಗಿ ಪಂಚಕುಲದಲ್ಲಿ ಸೆಂಟರ್ ಆಫ್ ಎಕ್ಸೆಲೆನ್ಸ್ ಕಟ್ಟಡ ನಿರ್ಮಿಸುವುದಾಗಿ ತಿಳಿಸಿದ್ದಾರೆ. ಈ ಮೂಲಕ ನೀರಜ್‍ಗೆ ಗೌರವ ಸಲ್ಲಿಸಿದ್ದಾರೆ.